Tag: Karnataka Elections 2023

  • ಅಮಿತ್ ಶಾ, ವಿ.ಸೋಮಣ್ಣ ವಿರುದ್ಧ ಪೊಲೀಸರಿಗೆ ‘ಕೈ’ ನಾಯಕರ ದೂರು

    ಅಮಿತ್ ಶಾ, ವಿ.ಸೋಮಣ್ಣ ವಿರುದ್ಧ ಪೊಲೀಸರಿಗೆ ‘ಕೈ’ ನಾಯಕರ ದೂರು

    ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹಾಗೂ ಸಚಿವ ವಿ.ಸೋಮಣ್ಣ ವಿರುದ್ಧ ಕಾಂಗ್ರೆಸ್ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಗುರುವಾರ ದೂರು ದಾಖಲಿಸಿದೆ.

    ಚುನಾವಣಾ (Elections) ಪ್ರಚಾರದ ವೇಳೆ ಕರ್ನಾಟಕದಲ್ಲಿ ಕಾಂಗ್ರೆಸ್ (Congress) ಆಡಳಿತಕ್ಕೆ ಬಂದರೆ ಗಲಭೆಗಳು ಹಾಗೂ ಘರ್ಷಣೆಗಳು ನಡೆಯಲಿವೆ ಎಂದು ಮತದಾರರನ್ನು ಬೆದರಿಸಿದ್ದಾರೆ. ಬಿಜೆಪಿ ಹತಾಷೆಯಿಂದ ಇಂತಹ ಹೇಳಿಕೆಗಳನ್ನು ನೀಡುತ್ತಿದೆ. ಇಲ್ಲ ಸಲ್ಲದ ಹೇಳಿಕೆ ನೀಡಿರುವ ಅಮಿತ್ ಶಾ ಅವರನ್ನು ಬಂಧಿಸಬೇಕು ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ (Surjewala) ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಚುನಾವಣೆಗೆ ಅಣಿಗೊಳಿಸಲು ಮೋದಿ ರಣತಂತ್ರ – 50 ಲಕ್ಷ ಬಿಜೆಪಿ ಕಾರ್ಯಕರ್ತರೊಂದಿಗೆ ಸಂವಾದ

    Amith

    ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ಪ್ರತಿಕ್ರಿಯಿಸಿ, ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟವಾಗಿದೆ. ಇಲ್ಲಿನ ಜನ ಶಾಂತಿ ಪ್ರಿಯರಾಗಿದ್ದಾರೆ. ಆದರೆ ಅಮಿತ್ ಶಾ, ಗಲಭೆ ನಡೆಯಲಿದೆ ಎಂದು ಬೆದರಿಕೆ ಒಡ್ಡುತ್ತಾರೆ. ಸಾಮಾನ್ಯ ಜನ ಈ ಹೇಳಿಕೆ ನೀಡಿದ್ದರೆ ಇಷ್ಟರಲ್ಲೇ ಅವರ ಬಂಧನವಾಗುತ್ತಿತ್ತು. ಶಾ ಹೇಳಿಕೆಗೆ ಆಯೋಗ ಸೂಕ್ತ ಕ್ರಮ ಕೈಗೊಳ್ಳಬೇಕು. ಚುನಾವಣಾ ಆಯೋಗ, ಶಾ ಅವರಿಗೆ ಪ್ರಚಾರಕ್ಕೆ ಬಾರದಂತೆ ನಿರ್ಬಂಧ ಹೇರಬೇಕು ಎಂದು ದೆಹಲಿ ಚುನಾವಣಾ ಆಯೋಗಕ್ಕೆ ದೂರು ನೀಡಿ ಒತ್ತಾಯಿಸಿದ್ದಾರೆ.

    ಸಚಿವ ವಿ.ಸೋಮಣ್ಣ ಚಾಮರಾಜನಗರ ಜೆಡಿಎಸ್ ಅಭ್ಯರ್ಥಿಗೆ ಬೆದರಿಕೆ ಹಾಗೂ ಆಮಿಷವೊಡ್ಡಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗ ಹಾಗೂ ಪೊಲೀಸರು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಕಾಂಗ್ರೆಸ್ ಮುಖಂಡರು ಹರಿಹಾಯ್ದಿದ್ದಾರೆ.

    ಏ.25 ರಂದು ಅಮಿತ್ ಶಾ ಚುನಾವಣಾ ಪ್ರಚಾರದ ವೇಳೆ ಕರ್ನಾಟಕದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದರೆ ಗಲಭೆ ನಡೆಯಲಿದೆ ಎಂದಿದ್ದರು. ಇದನ್ನೂ ಓದಿ: ಟ್ರ್ಯಾಕ್ಟರ್‌ಗೆ ಮಾರುತಿ ಕಾರು ಚಕ್ರ ಹಾಕಿದ್ರೆ ಸರಿಯಾಗಿ ಓಡುತ್ತಾ? – ‘ಡಬಲ್ ಎಂಜಿನ್ ಸರ್ಕಾರ’ ಮುಖ್ಯ ಎಂದ ಮೋದಿ

  • ಸುಪ್ರೀಂ ಆದೇಶ ಗೊತ್ತಿದ್ದರೂ ಹೈಕಮಾಂಡ್ ನಿಮಗೆ ಅಲ್ಲಿ ಟಿಕೆಟ್ ನೀಡಿದ್ಯಾ – ವಿನಯ್ ಕುಲಕರ್ಣಿ ಪರ ವಕೀಲರಿಗೆ ಹೈಕೋರ್ಟ್ ಚಾಟಿ

    ಸುಪ್ರೀಂ ಆದೇಶ ಗೊತ್ತಿದ್ದರೂ ಹೈಕಮಾಂಡ್ ನಿಮಗೆ ಅಲ್ಲಿ ಟಿಕೆಟ್ ನೀಡಿದ್ಯಾ – ವಿನಯ್ ಕುಲಕರ್ಣಿ ಪರ ವಕೀಲರಿಗೆ ಹೈಕೋರ್ಟ್ ಚಾಟಿ

    ಬೆಂಗಳೂರು: ಧಾರವಾಡಕ್ಕೆ (Dharwad) ಪ್ರವೇಶ ನೀಡಬಾರದು ಎಂಬ ಸುಪ್ರೀಂ ಕೋರ್ಟ್ (Supreme Court) ಆದೇಶ ಗೊತ್ತಿದ್ದರೂ ಹೈಕಮಾಂಡ್ ಅಲ್ಲಿಂದ ಚುನಾವಣೆಗೆ (Election) ಸ್ಪರ್ಧಿಸುವಂತೆ ನಿಮ್ಮ ಕಕ್ಷಿದಾರರಿಗೆ ಟಿಕೆಟ್ ಕೊಟ್ಟಿದ್ಯಾ ಎಂದು ವಿನಯ್ ಕುಲಕರ್ಣಿ (Vinay Kulkarni) ಪರ ವಕೀಲರಿಗೆ ಹೈಕೋರ್ಟ್ (High Court) ಪ್ರಶ್ನಿಸಿ ಚಾಟಿ ಬೀಸಿದೆ.

    ಧಾರವಾಡ ಪ್ರವೇಶಕ್ಕೆ ನಿರಾಕರಿಸಿದ ಜನಪ್ರತಿನಿಧಿಗಳ ಕೋರ್ಟ್ ಆದೇಶವನ್ನು ಪ್ರಶ್ನಿಸಿ ವಿನಯ್ ಕುಲಕರ್ಣಿ ಹೈಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಜಾಗೊಳಿಸಿದ ಕೋರ್ಟ್ ಧಾರವಾಡ ಪ್ರವೇಶಿಸದಂತೆ ಸೂಚಿಸಿದೆ. ಇದನ್ನೂ ಓದಿ: ಕಾಂಗ್ರೆಸ್‌ನ 224 ಅಭ್ಯರ್ಥಿಗಳ ನಾಮಪತ್ರ ತಿರಸ್ಕರಿಸಿ: ಕರಂದ್ಲಾಜೆ ದೂರು

    ವಿನಯ್ ಕುಲಕರ್ಣಿ ಕಾಂಗ್ರೆಸ್ ಟಿಕೆಟ್ ಪಡೆದಿದ್ದು ಧಾರವಾಡದಿಂದ ಚುನಾವಣೆಗೆ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದಾರೆ. ಆದರೆ ಪ್ರಕರಣವೊಂದರಲ್ಲಿ ಆರೋಪಿಯಾಗಿರುವ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಧಾರವಾಡ ಪ್ರವೇಶಿಸದಂತೆ ಈ ಹಿಂದೆ ಆದೇಶ ನೀಡಿತ್ತು. ಈಗ ಚುನಾವಣಾ ಪ್ರಚಾರಕ್ಕೆ ಅನುಕೂಲವಾಗುವಂತೆ ಧಾರವಾಡಕ್ಕೆ ಪ್ರವೇಶಿಸಲು ಅವಕಾಶ ನೀಡಬೇಕು ಎಂದು ಹೈಕೋರ್ಟ್‍ಗೆ ಮನವಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸುವ ವೇಳೆ ಕೋರ್ಟ್ ಕುಲಕರ್ಣಿ ಪರ ವಕೀಲರನ್ನು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡಿದೆ.

    karnataka highcourt

    ಧಾರವಾಡದ ಬಿಜೆಪಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದ ಆರೋಪಿಯಾಗಿರುವ ಕುಲಕರ್ಣಿ ಧಾರವಾಡ ಪ್ರವೇಶಕ್ಕೆ ಅನುಮತಿ ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಏ.15 ರಂದು ವಿನಯ್ ಕುಲಕರ್ಣಿ ಅವರ ಅರ್ಜಿಯ ವಿಚಾರಣೆಯನ್ನು ಪೂರ್ಣ ಮಾಡಿದ್ದ ಕೋರ್ಟ್ ಏಪ್ರಿಲ್ 18 ರಂದು ಧಾರವಾಡ ಪ್ರವೇಶಿಸದಂತೆ ಆದೇಶ ನೀಡಿತ್ತು.

    ಯೋಗೇಶ್ ಗೌಡ ಪ್ರಕರಣದ 120 ಸಾಕ್ಷಿಗಳ ಪೈಕಿ 90 ಮಂದಿ ಧಾರವಾಡದವರೇ ಆಗಿದ್ದಾರೆ. ವಿನಯ್ ಕುಲಕರ್ಣಿಗೆ ಕ್ಷೇತ್ರಕ್ಕೆ ಪ್ರವೇಶ ನೀಡಿದರೆ ಆದೇಶ ದುರುಪಯೋಗವಾಗಬಹುದು. ಮುಂದೆ ವಿಚಾರಣೆಗೆ ಸಮಸ್ಯೆಯಾಗಬಹುದು. ಸಾಕ್ಷಿಗಳಿಗೆ ಬೆದರಿಕೆ ಹಾಕುವ ಸಾಧ್ಯತೆಯಿದೆ. ಯಾವುದೇ ಕಾರಣಕ್ಕೂ ಪ್ರವೇಶಕ್ಕೆ ಅನುಮತಿ ನೀಡಬಾರದು ಎಂದು ಸಿಬಿಐ ಪರ ವಕೀಲರು ಬಲವಾದ ವಾದ ಮಂಡಿಸಿದ್ದರು.

    ಸುಪ್ರೀಂ ಷರತ್ತು
    ಯೋಗೇಶ್ ಗೌಡ ಕೊಲೆ ಪ್ರಕರಣದ ಆರೋಪಿಯಾಗಿರುವ ವಿನಯ್ ಕುಲಕರ್ಣಿಯನ್ನು ಸಿಬಿಐ ಬಂಧಿಸಿತ್ತು. ಜಾಮೀನು ಮಂಜೂರು ಮಾಡುವಾಗ ಧಾರವಾಡ ಪ್ರವೇಶಿಸದಂತೆ ಸುಪ್ರೀಂ ಕೋರ್ಟ್ ಷರತ್ತು ವಿಧಿಸಿತ್ತು. ಆದರೆ ಅನಿವಾರ್ಯ ಇದ್ದಾಗ ಮಾತ್ರ ಧಾರವಾಡ ಪ್ರವೇಶಕ್ಕೆ ಅನುಮತಿ ನೀಡಿತ್ತು. ಆದರೆ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದ್ದ ಕಾರಣ ವಿನಯ್ ಕುಲಕರ್ಣಿ ಅರ್ಜಿ ಸಲ್ಲಿಸಿ ಪ್ರವೇಶಕ್ಕೆ ಮನವಿ ಮಾಡಿದ್ದರು. ಇದನ್ನೂ ಓದಿ: ಹಿರಿಯೂರಲ್ಲಿ ಡಿಕೆಶಿ ಆಪ್ತ ಸುಧಾಕರ್, ಬಿಎಸ್‌ವೈ ದತ್ತು ಪುತ್ರಿ ಪೂರ್ಣಿಮಾ ಮಧ್ಯೆ ಜಟಾಪಟಿ

  • ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಬಾವುಟ ಹಾರಿಸ್ತೇವೆ, ದಶಪಥ ಹೆದ್ದಾರಿ ದೊಡ್ಡ ಶಕ್ತಿ – ಪ್ರತಾಪ್ ಸಿಂಹ

    ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಬಾವುಟ ಹಾರಿಸ್ತೇವೆ, ದಶಪಥ ಹೆದ್ದಾರಿ ದೊಡ್ಡ ಶಕ್ತಿ – ಪ್ರತಾಪ್ ಸಿಂಹ

    ಮೈಸೂರು: ಹಳೆ ಮೈಸೂರು (Old Mysuru) ಭಾಗಕ್ಕೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ (Bengaluru Mysuru Expressway) ನಮಗೆ ದೊಡ್ಡ ಶಕ್ತಿಯಾಗಿದೆ. ಅದಕ್ಕಾಗಿ ಮಂಡ್ಯದಲ್ಲೇ (Mandya) ಅದರ ಉದ್ಘಾಟನೆ ನೆರವೇರಿಸಿದ್ದೇವೆ ಎಂದು ಸಂಸದ ಪ್ರತಾಪ್ ಸಿಂಹ (Pratap Simha) ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಬಾವುಟ ಹಾರಿಸುತ್ತೇವೆ. ಹಳೆ ಮೈಸೂರು ಭಾಗಕ್ಕೆ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ದೊಡ್ಡ ಶಕ್ತಿಯಾಗಿದೆ. ಅದಕ್ಕಾಗಿಯೇ ಪ್ರತಿ ಪಕ್ಷಗಳಿಂದ ಅಷ್ಟೊಂದು ಅಪಸ್ವರ ಕೇಳಿಬರುತ್ತಿದೆ. ಇದರೊಂದಿಗೆ ನರೇಂದ್ರ ಮೋದಿ (Narendra Modi) ಅವರ ಜಲಜೀವನ್ ಮಿಷನ್, ಕಿಸಾನ್ ಸಮ್ಮಾನ್ ಯೋಜನೆಗಳು ನಮ್ಮ ಪಕ್ಷಕ್ಕೆ ಬಲ ತುಂಬಿವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: Mood Of Karnataka – `ಪಬ್ಲಿಕ್’ ಸರ್ವೆಯಲ್ಲಿ ಕರ್ನಾಟಕ ಕುರುಕ್ಷೇತ್ರ ಅತಂತ್ರ

    ಮಂಡ್ಯದಲ್ಲಿ ಈ ಬಾರಿ ಬಿಜೆಪಿ ಧ್ವಜ (BJP Flag) ಹಾರಬೇಕು ಅನ್ನೋ ಕಾರಣಕ್ಕೆ ಎಕ್ಸ್‌ಪ್ರೆಸ್‌ವೇ ಅಲ್ಲಿಯೇ ಉದ್ಘಾಟಿಸಿದ್ದೇವೆ. ಮೈಸೂರು, ಮಂಡ್ಯ, ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಗಳಿಂದ ಹಳೆ ಮೈಸೂರು ಭಾಗದಲ್ಲಿ 15 ಸ್ಥಾನಗಳನ್ನು ಗೆಲ್ಲುವ ಗುರಿಯಿದೆ. ಕನಿಷ್ಠ 10 ಸ್ಥಾನಗಳನ್ನು ಈ ಭಾಗದಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂದು ಶಪಥ ಮಾಡಿದ್ದಾರೆ. ಇದನ್ನೂ ಓದಿ: Mood Of Karnataka – ಮಲೆನಾಡು, ಮಧ್ಯ ಕರ್ನಾಟಕದಲ್ಲಿ ಹಿನ್ನಡೆಯಾದರೂ ಬಿಜೆಪಿಯೇ ದೊಡ್ಡ ಪಕ್ಷ

    ಇದೇ ವೇಳೆ ವರುಣಾ ಕ್ಷೇತ್ರದಲ್ಲಿ ವಿಜಯೇಂದ್ರ ಸ್ಪರ್ಧೆ ವಿಚಾರಕ್ಕೆ ಪ್ರತಿಕ್ರಿಯಿಸಿ, ರಾಜ್ಯದ ನಾಯಕರು ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತಾರೆ. ಬಿ.ಎಸ್ ಯಡಿಯೂರಪ್ಪ ಅವರಿಗೆ ಈ ಬಗ್ಗೆ ಹೆಚ್ಚಿನ ಮಾಹಿತಿ ಇರುತ್ತೆ. ಯಾರೇ ಅಭ್ಯರ್ಥಿಯಾಗಿ ಕಣಕ್ಕಿಳಿದರೂ ನಾನು ಪಕ್ಷದ ಕಾರ್ಯಕರ್ತನಾಗಿ, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ದುಡಿಯುತ್ತೇನೆ ಎಂದು ನುಡಿದಿದ್ದಾರೆ.

  • ರಾಜ್ಯಕ್ಕೆ ಇಬ್ಬರು ಸಿಎಂಗಳನ್ನ ಕೊಟ್ಟ ಹೆಗ್ಗಳಿಕೆ ಶಿಗ್ಗಾಂವಿ ಕ್ಷೇತ್ರದ್ದು

    ರಾಜ್ಯಕ್ಕೆ ಇಬ್ಬರು ಸಿಎಂಗಳನ್ನ ಕೊಟ್ಟ ಹೆಗ್ಗಳಿಕೆ ಶಿಗ್ಗಾಂವಿ ಕ್ಷೇತ್ರದ್ದು

    ಹಾವೇರಿ: ರಾಜ್ಯದ ಮುಖ್ಯಮಂತ್ರಿಯಾಗಿ ಚುಕ್ಕಾಣಿ ಹಿಡಿಯುವುದು ಸುಲಭದ ಮಾತಲ್ಲ. ಅದರಲ್ಲೂ ಇತ್ತೀಚೆಗೆ ಸಿ.ಎಂ ಅಭ್ಯರ್ಥಿಗಳಿಗೆ ಪೈಪೋಟಿ ಹೆಚ್ಚಾಗಿದೆ. ಪ್ರಾದೇಶಿಕ ಹಾಗೂ ರಾಷ್ಟ್ರೀಯ ಪಕ್ಷಗಳು ಸೇರಿ, ಪ್ರತಿ ಪಕ್ಷದಲ್ಲೂ ಪ್ರಮುಖರು ಸಿಎಂ ಆಗುವ ಇಂಗಿತ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಶಿಗ್ಗಾಂವಿ (Shiggaavi) ಸವಣೂರು ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜ್ ಬೊಮ್ಮಾಯಿ (Basavaraj Bommai) ಅವರಿಗೆ ಅದು ಬಯಸದೇ ಬಂದ ಭಾಗ್ಯವಾಗಿದೆ. ಏಕೆಂದರೆ ಈವರೆಗೆ ಈ ಕ್ಷೇತ್ರ ಇಬ್ಬರು ಮುಖ್ಯಮಂತ್ರಿಗಳನ್ನ ರಾಜ್ಯಕ್ಕೆ ಕೊಟ್ಟಿದೆ. ಮೊದಲಿಗೆ ಎಸ್. ನಿಜಲಿಂಗಪ್ಪ (1962-1968) (S Nijalingappa) ಅವರ ನಂತರ ಬಸವರಾಜ್ ಬೊಮ್ಮಾಯಿ.

    ಬೊಮ್ಮಾಯಿಗೆ ಬಯಸದೆ ಬಂದ ಭಾಗ್ಯ: ಬಸವರಾಜ್ ಬೊಮ್ಮಾಯಿ ಶಿಗ್ಗಾಂವಿ ಸವಣೂರು ವಿಧಾನಸಭಾ ಕ್ಷೇತ್ರದಿಂದ ಹ್ಯಾಟ್ರಿಕ್ ಗೆಲುವು ಸಾಧಿಸಿದ ನಾಯಕ ಎನಿಸಿಕೊಂಡಿದ್ದಾರೆ.

    2008ರಲ್ಲಿ ಶಿಗ್ಗಾಂವಿ-ಸವಣೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದು ಗೆದ್ದು ವಿಧಾನಸಭೆ ಪ್ರವೇಶಿಸಿದ್ದರು. ಇದಕ್ಕೂ ಮುನ್ನ ವಿಧಾನಪರಿಷತ್ ಸದಸ್ಯನಾದ ಅನುಭವವಿತ್ತು. ಅದರಲ್ಲೂ 2006-2007ರಲ್ಲಿ ಬಿಜೆಪಿ ಮತ್ತು ಜೆಡಿಎಸ್ (JDS) ಮೈತ್ರಿ ಸರ್ಕಾರ ಅಧಿಕಾರದಲ್ಲಿದ್ದಾಗ ಜಲಸಂಪನ್ಮೂಲ ಸಚಿವರಾಗಿ ಅಧಿಕಾರ ನಡೆಸಿದ್ದರು. ಈ ವೇಳೆ ರಾಜಕೀಯ ನಾಯಕನಾಗಿ ಸಾಕಷ್ಟು ಅನುಭವ ಪಡೆದುಕೊಂಡಿದ್ದರು. ಜೊತೆಗೆ ಸಾಕಷ್ಟು ಯೋಜನೆಗಳನ್ನೂ ಜಾರಿಗೆ ತಂದಿದ್ದರು. ನಂತರ 2013 ರಲ್ಲಿ ಕೆಜೆಪಿ-ಬಿಜೆಪಿ ಗದ್ದಲದ ನಡುವೆಯೂ ಬಿಜೆಪಿಯಿಂದ ಕಣಕ್ಕಿಳಿದು 2ನೇ ಬಾರಿಗೆ ಶಾಸಕರಾಗಿ ಆಯ್ಕೆಯಾದರು.

    2018ರಲ್ಲಿ 3ನೇ ಬಾರಿಗೆ ಗೆದ್ದು ಶಿಗ್ಗಾಂವಿ ಸವಣೂರು ಕ್ಷೇತ್ರದಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸುವ ಮೂಲಕ ಇತಿಹಾಸ ಸೃಷ್ಟಿಸಿದರು. ಯಡಿಯೂರಪ್ಪ ಅವರ ಪಕ್ಕಾ ಶಿಷ್ಯನಾಗಿ ರಾಜಕೀಯ ಪ್ರಾವೀಣ್ಯತೆ ಪಡೆದುಕೊಂಡರು. 2018ರಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಒಂದೂವರೆ ವರ್ಷಗಳ ಕಾಲ ಮುಂದುವರಿದಿತ್ತು. ಆದರೆ ಆಪರೇಷನ್ ಕಮಲದಿಂದಾಗಿ ಕಾಂಗ್ರೆಸ್, ಜೆಡಿಎಸ್‌ನ 17 ಶಾಸಕರು ಪಕ್ಷ ತೊರೆದು ಬಿಜೆಪಿ ಸೇರ್ಪಡೆಗೊಂಡರು. ಇದರಿಂದ ಸಮ್ಮಿಶ್ರ ಸರ್ಕಾರ ಆಡಳಿತ ಪತನಗೊಂಡಿತು. ನಂತರ ಬಹುಮತದೊಂದಿಗೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಯಡಿಯೂರಪ್ಪ (BS Yediyurappa) ಮುಖ್ಯಮಂತ್ರಿಯಾದರು. ಬೊಮ್ಮಾಯಿ ಗೃಹಖಾತೆ ಸಚಿವರಾದರು.

    ಯಡಿಯೂರಪ್ಪ ಅವರ ರಾಜೀನಾಮೆ ನಂತರ ಬಿಜೆಪಿಯಲ್ಲಿ ಮುಖ್ಯಮಂತ್ರಿಯಾಗಲು ಹಲವು ನಾಯಕರು ನಾ ಮುಂದು, ತಾ ಮುಂದು ಅಂತಾ ಸ್ಪರ್ಧೆಗಿಳಿದಿದ್ದರು. ಆದರೆ ಹೈಕಮಾಂಡ್ ಮತ್ತು ಯಡಿಯೂರಪ್ಪ ಕೃಪಾಕಟಾಕ್ಷದಿಂದ ಬಸವರಾಜ ಬೊಮ್ಮಾಯಿ ಸಿಎಂ ಆದರು. ಮುರುಗೇಶ್‌ ನಿರಾಣಿ, ಅರವಿಂದ ಬೆಲ್ಲದ್ ಸೇರಿ ಹಲವು ಶಾಸಕರು ಸಿ.ಎಂ ರೇಸ್ ನಲ್ಲಿದ್ದರು. ಎಲ್ಲರನ್ನ ತಿರಸ್ಕಾರ ಮಾಡಿದ ಹೈಕಮಾಂಡ್ ಹಾಗೂ ಯಡಿಯೂರಪ್ಪ ಬಸವರಾಜ್ ಬೊಮ್ಮಾಯಿ ಅವರನ್ನ ಸಿಎಂ ಮಾಡಿದರು. ಆ ಮೂಲಕ ಶಿಗ್ಗಾಂವಿ ಸವಣೂರು ವಿಧಾನಸಭಾ ಕ್ಷೇತ್ರದಿಂದ 2ನೇ ಮುಖ್ಯಮಂತ್ರಿಯಾಗಿ ಆಧಿಕಾರ ನಡೆಸುತ್ತಿದ್ದಾರೆ.

    ಮೊದಲ ಸಿಎಂ ಯಾರು?
    1967ರ ಚುನಾವಣೆಯಲ್ಲಿ ಈ ಕ್ಷೇತ್ರದಿಂದ ಏಕೀಕೃತ ಕರ್ನಾಟಕದ ಮೊದಲ ಸಿಎಂ ಎಸ್.ನಿಜಲಿಂಗಪ್ಪ ಅವಿರೋಧವಾಗಿ ಆಯ್ಕೆಯಾಗಿ ಮತ್ತೂಂದು ಅವಧಿಗೆ ಮುಖ್ಯಮಂತ್ರಿಯಾಗಿದ್ದರು. ಅಲ್ಲದೆ ಕರ್ನಾಟಕದಲ್ಲಿ ಸಿಎಂ ಆಗಿ 5 ವರ್ಷ ಅಧಿಕಾರ ಪೂರೈಸಿದ ಮುಖ್ಯಮಂತ್ರಿಗಳಲ್ಲಿ ಒಬ್ಬರಾಗಿದ್ದಾರೆ.

    ಇದು ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿರುವ ಕ್ಷೇತ್ರವಾಗಿದೆ. ಕಾಂಗ್ರೆಸ್ ಹೆಚ್ಚಿನ ಅವಧಿಗೆ ಆ ಸಮುದಾಯದವರಿಗೇ ಅವಕಾಶ ಕೊಟ್ಟಿದೆ. ಇಲ್ಲಿನ ಮತದಾರರು 8 ಬಾರಿ ಕಾಂಗ್ರೆಸ್, ಎರಡು ಬಾರಿ ಪಕ್ಷೇತರರು, ಒಂದು ಬಾರಿ ಜೆಡಿಎಸ್ ಹಾಗೂ 3 ಬಾರಿ ಬಿಜೆಪಿಗೆ ಮಣೆ ಹಾಕಿದ್ದಾರೆ. ನದಾಫ ಮೊಹಮ್ಮದ್ ಖಾಸೀಂಸಾಬ ಮರ್ಧಾನಸಾಬ ಅವರು 1972, 1978, 1983ರಲ್ಲಿ ಸತತವಾಗಿ 3 ಬಾರಿ ಆಯ್ಕೆಯಾಗಿ ಹ್ಯಾಟ್ರಿಕ್ ಸಾಧಿಸಿದ್ದರು. 1985ರ ಚುನಾವಣೆಯಲ್ಲಿ ಖಾಸೀಂಸಾಬ ಅವರನ್ನು ಪಕ್ಷೇತರ ಅಭ್ಯರ್ಥಿ ಎನ್.ವಿ ಪಾಟೀಲ್ ಸೋಲಿಸಿದ್ದು ದಾಖಲೆಯಾಗಿದೆ. ಖಾಶೀಂಸಾಬ ನಂತರ ಎಂ.ಸಿ ಕುನ್ನೂರ ಎರಡು ಬಾರಿ ಹಾಗೂ ಹಾಲಿ ಶಾಸಕ ಬಸವರಾಜ ಬೊಮ್ಮಾಯಿಯವರು 2008, 2013 ಹಾಗೂ 2018 ರಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸುವ ಮೂಲಕ ಈಗ ಸಿಎಂ ರಾಜ್ಯಭಾರ ಮಾಡುತ್ತಿದ್ದಾರೆ.

    ಎಸ್. ನಿಜಲಿಂಗಪ್ಪ ಅವರು ಶಿಗ್ಗಾಂವಿ ಕ್ಷೇತ್ರದಿಂದ ಅವಿರೋಧ ಆಯ್ಕೆಯಾಗಿ ಮುಖ್ಯಮಂತ್ರಿಯಾಗಿ 5 ವರ್ಷ ಅಧಿಕಾರ ಮಾಡಿದ್ದಾರೆ. ಆದರೆ ಸಿಎಂ ಬೊಮ್ಮಾಯಿ ಅವರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಬಿಜೆಪಿ ಹೈಕಮಾಂಡ್ ಕೃಪಾಕಟಾಕ್ಷದಿಂದ ಸಿಎಂ ಆಗಿ ರಾಜ್ಯಭಾರ ಮಾಡುತ್ತಿದ್ದಾರೆ. ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳನ್ನ ನೀಡಿದ ಹೆಗ್ಗಳಿಕೆಗೆ ಪಾತ್ರವಾಗಿದೆ.

  • ದೇವೇಗೌಡರ ಆಸೆ ಪೂರೈಸಲು ಸಾಹಸಕ್ಕೆ ಕೈ ಹಾಕಿದ್ದೇನೆ – ಹೆಚ್‌ಡಿಕೆ ಶಪಥ

    ದೇವೇಗೌಡರ ಆಸೆ ಪೂರೈಸಲು ಸಾಹಸಕ್ಕೆ ಕೈ ಹಾಕಿದ್ದೇನೆ – ಹೆಚ್‌ಡಿಕೆ ಶಪಥ

    ಹಾಸನ: ಹೆಚ್.ಡಿ ದೇವೇಗೌಡರ (HD Devegowda) ಆಸೆ ಪೂರೈಸಲು ನಾನು ಈ ಬಾರಿ ಸಾಹಸಕ್ಕೆ ಕೈಹಾಕಿದ್ದೇನೆ. ಹಾಸನ (Hassan) ಜಿಲ್ಲೆಯಲ್ಲಿ 7ಕ್ಕೆ ಏಳು ಸ್ಥಾನವನ್ನೂ ಗೆದ್ದು ಅವರ ಆಸೆ ಪೂರೈಸುತ್ತೇನೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಶಪಥ ಮಾಡಿದ್ದಾರೆ.

    ಹಾಸನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇವೇಗೌಡರ 60 ವರ್ಷದ ರಾಜಕೀಯ ಜೀವನದಲ್ಲಿ ಈ ನಾಡಿಗೆ ಏನೇನೊ ಮಾಡಬೇಕೆಂಬ ಕನಸು ಕಂಡಿದ್ದರು. ಆದ್ರೆ ಅವರಿಗೆ ಸಿಕ್ಕಿದ ಅವಧಿ ಕಡಿಮೆ. 11 ತಿಂಗಳು ಪ್ರಧಾನಿ (Prime Minister), 2 ವರ್ಷ ರಾಜ್ಯದಲ್ಲಿ ಸಿಎಂ, 3 ವರ್ಷ ಸಚಿವರಾಗಿದ್ದರು. ಅವರು ಅಂದುಕೊಂಡಿದ್ದನ್ನ ಮಾಡೋಕೆ ಆಗಲಿಲ್ಲ. ಅವರ ಆಸೆ ಪೂರೈಸಲು ನಾನು ಈಗ ಸಾಹಸಕ್ಕೆ ಕೈ ಹಾಕಿದ್ದೇನೆ ಎಂದು ಹೇಳಿದ್ದಾರೆ.

    ನಿಮ್ಮ ಕಣ್ಣೆದುರೇ ನಿಮ್ಮ ಆಸೆಯಂತೆ ಜನರ ಬದುಕು ಕಟ್ಟೋ ಸರ್ಕಾರ ಬರುತ್ತೆ. ಅದನ್ನು ನೋಡಲು ನೀವು ಇರಬೇಕು ಎಂದು ತಂದೆಯಿಂದ ವಚನ ಪಡೆದುಕೊಂಡಿದ್ದೇನೆ. ದೇವರಿಗೂ ಇದೇ ಪ್ರಾರ್ಥನೆ ಮಾಡುತ್ತಿದ್ದೇನೆ. ನಾನು ಕಂಡ ಕನಸನ್ನ ನನ್ನ ಮಕ್ಕಳು ನನಸು ಮಾಡಿದ್ದಾರೆ ಎಂದು ಅವರ ಮನಃ ತೃಪ್ತಿಯಾಗಬೇಕು ತಿಳಿಸಿದ್ದಾರೆ.

    ನಮ್ಮ ಭದ್ರಕೋಟೆಯನ್ನ ಛಿದ್ರ ಮಾಡುತ್ತೇವೆ ಅಂತಾ ಕೆಲವರು ಹೊರಟಿದ್ದಾರೆ. ದೇವೇಗೌಡರು ಬೆಳೆಸಿರುವ ಲಕ್ಷಾಂತರ ಕಾರ್ಯಕರ್ತರ ಶಕ್ತಿ ಇರೋವರೆಗೂ ಈ ಪಕ್ಷಕ್ಕೆ ಯಾರೂ ಏನು ಮಾಡಲು ಸಾಧ್ಯವಿಲ್ಲ ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಹೇಗೆ ಬಲಿ ಹಾಕಬೇಕೆಂದು ಗೊತ್ತಿದೆ – ಟ್ರಾನ್ಸ್‌ಫಾರ್ಮರ್ ಬದಲಿಸದ ಅಧಿಕಾರಿಗೆ ಹೆಚ್.ಡಿ.ರೇವಣ್ಣ ಕ್ಲಾಸ್

    `ಹಣ ಇದೆ ಅಂತಾ ಪಂಚರತ್ನ ಯಾತ್ರೆ ಮಾಡ್ತಿದ್ದಾರೆ’ ಎಂಬ ಸಿದ್ದರಾಮಯ್ಯ (Siddaramaiah) ಹೇಳಿಕೆಗೆ ತಿರುಗೇಟು ನೀಡಿದ ಹೆಚ್‌ಡಿಕೆ, 40 ಸೀಟ್ ಒಬ್ಬನೇ ಏಕಾಂಗಿಯಾಗಿ ಗೆದ್ದಿರುವುದು ಕಡಿಮೆಯೇ? ಅವರಿದ್ದಾಗ ಎಷ್ಟು ಜನ ನಾಯಕರಿದ್ದರು? 58 ಸೀಟ್ ಗೆಲ್ಲಬೇಕಾದ್ರೆ ಯರ‍್ಯಾರ ಕೊಡುಗೆ ಎಷ್ಟು? ಅದೆಲ್ಲಾ ಹೇಳಬೇಕಲ್ವಾ? ಎಂದು ಸವಾಲ್ ಹಾಕಿದ್ದಾರೆ. ಇದನ್ನೂ ಓದಿ: ನೂರಾರು ಮತದಾರರಿಗೆ ಬಿಜೆಪಿಯಿಂದ ಬಾಡೂಟ, ಗಿಫ್ಟ್ – ಕಂಠಪೂರ್ತಿ ಕುಡಿದು ಎಲ್ಲೆಂದರಲ್ಲಿ ಮಲಗಿದ ಜನ

    ಈ ಯಾತ್ರೆ ಆರಂಭಿಸಿದಾಗ ನನ್ನ ಬಳಿ ಹಣ ಇರಲಿಲ್ಲ, ಮುಂದಿನ ಚುನಾವಣೆ ನಡೆಸಲು ಈ ಕ್ಷಣದವರೆಗೂ ನನ್ನ ಹತ್ರ ಹಣ ಇಲ್ಲ. ಹಾಸನ ಕ್ಷೇತ್ರದಲ್ಲೂ ಸದ್ಯದಲ್ಲೇ ಪಂಚರತ್ನ ಯಾತ್ರೆ ಮಾಡುತ್ತೇವೆ. ಈ ಬಗ್ಗೆ ನಾನು, ರೇವಣ್ಣ ತೀರ್ಮಾನ ಮಾಡ್ತೀವಿ. ಪಂಚರತ್ನ ಯಾತ್ರೆಯ ಯೋಜನೆಗಳು ಅನುಷ್ಠಾನಕ್ಕೆ ಬರಬೇಕಾದರೆ 123 ಸ್ಥಾನ ಗೆಲ್ಲಬೇಕು. ಹಾಸನದಲ್ಲಿ 7ಕ್ಕೆ ಏಳೂ ಸ್ಥಾನ ಗೆಲ್ಲಬೇಕು. ಅದನ್ನು ಹೊರತುಪಡಿಸಿ ಬೇರೆ ಚರ್ಚೆ ಅನಗತ್ಯ ಎಂದು ತಿಳಿಸಿದ್ದಾರೆ.

  • ಟಿಕೆಟ್ ಕೇಳುವ ಹಕ್ಕು ಭವಾನಿಗೂ ಇದೆ, ಪ್ರತಿಯೊಬ್ಬ JDS  ಕಾರ್ಯಕರ್ತನಿಗೂ ಇದೆ – ಇಬ್ರಾಹಿಂ

    ಟಿಕೆಟ್ ಕೇಳುವ ಹಕ್ಕು ಭವಾನಿಗೂ ಇದೆ, ಪ್ರತಿಯೊಬ್ಬ JDS ಕಾರ್ಯಕರ್ತನಿಗೂ ಇದೆ – ಇಬ್ರಾಹಿಂ

    ಹಾಸನ: ಇಲ್ಲಿನ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ (JDS) ಟಿಕೆಟ್ ಕೇಳುವ ಹಕ್ಕು ಭವಾನಿ (Bhvavani Revanna), ಸ್ವರೂಪ್ ಸೇರಿದಂತೆ ಪ್ರತಿಯೊಬ್ಬ ಕಾರ್ಯಕರ್ತನಿಗೂ ಇದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ (CM Ibrahim) ಹೇಳಿದ್ದಾರೆ.

    ಹಾಸನ (Hassan) ಜಿಲ್ಲೆ ಬೇಲೂರು ಪಟ್ಟಣದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಟಿಕೆಟ್ ಯಾರಿಗೆ ಕೊಡಬೇಕು ಎನ್ನುವುದನ್ನು ಪಕ್ಷ ತೀರ್ಮಾನ ಮಾಡುತ್ತೆ ಎಂದಿದ್ದಾರೆ. ಜೊತೆಗೆ ಕಳೆದ ಭಾನುವಾರ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (HD KumaraSwamy) ಸಭೆ ಕರೆದೇ ಇಲ್ಲ ಎಂದು ಇಬ್ರಾಹಿಂ ಉಲ್ಟಾ ಹೊಡೆದಿದ್ದಾರೆ. ಇದನ್ನೂ ಓದಿ: ಪಾನ್‌ಕಾರ್ಡ್ ಅಪ್ಡೇಟ್ ಮಾಡ್ಬೇಕು ಅಂತಾ ಕರೆ – ಲಿಂಕ್ ಒತ್ತಿದ ಪೊಲೀಸಪ್ಪನ 73 ಸಾವಿರ ಗುಳುಂ!

    ಹೆಚ್.ಡಿ ರೇವಣ್ಣ (HD Revanna), ಹೆಚ್.ಡಿ ಕುಮಾರಸ್ವಾಮಿ, ಬಾಲಕೃಷ್ಣ, ರಮೇಶ್ ಈ ನಾಲ್ಕು ಜನ ಸಹೋದರರ ನಡುವೆ ಭಿನ್ನಾಭಿಪ್ರಾಯ ಬರುತ್ತೆ ಅಂತಾ ಯಾರಾದ್ರೂ ತಿಳಿದುಕೊಂಡಿದ್ದರೆ ಅದು ತಪ್ಪು ಕಲ್ಪನೆ. ಆ ನಾಲ್ಕು ಮಂದಿ ಯಾವತ್ತಿದ್ದರೂ ಒಂದೇ. ಅವರು ಹೇಗಿದ್ದಾರೆ ಅನ್ನೋದನ್ನ ಕಳೆದ 50 ವರ್ಷಗಳಿಂದಲೂ ನೋಡಿಕೊಂಡು ಬಂದಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: `ಸೀತಾ ರಾಮಂ’ ನಾಯಕಿಗೆ ಮದುವೆ ಪ್ರಪೋಸಲ್‌, ಖಡಕ್‌ ಉತ್ತರ ಕೊಟ್ಟ ನಟಿ

  • ಟಿಕೆಟ್ ಕೋಲಾಹಲ- ಹಾಸನ ಜೆಡಿಎಸ್‍ನಲ್ಲಿ ಪಕ್ಷಾಂತರ ಪರ್ವ

    ಟಿಕೆಟ್ ಕೋಲಾಹಲ- ಹಾಸನ ಜೆಡಿಎಸ್‍ನಲ್ಲಿ ಪಕ್ಷಾಂತರ ಪರ್ವ

    ಹಾಸನ: ವಿಧಾನಸಭಾ ಚುನಾವಣೆ (Vidhanasabha Elections 2023) ಸಮೀಪಿಸುತ್ತಿರುವಂತೆಯೇ ಟಿಕೆಟ್ ಆಕಾಂಕ್ಷಿಗಳು ಮತ್ತು ಈಗಾಗಲೇ ಟಿಕೆಟ್ ಖಾತ್ರಿಯಾಗಿರುವವರು ಪ್ರಚಾರ ಬಿರುಸುಗೊಳಿಸುವ ಮೂಲಕ ಮತ ಬೇಟೆಯಲ್ಲಿ ತೊಡಗಿದ್ದಾರೆ. ಮತ್ತೊಂದೆಡೆ ಪಕ್ಷಾಂತರ ಪರ್ವ ಸಹ ಜೋರಾಗಿದೆ. ಹಾಸನ ಜಿಲ್ಲೆಯ ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ವಿಚಾರದಿಂದ ಗೊಂದಲಕ್ಕೀಡಾದ ಕಾರ್ಯಕರ್ತರು ಜೆಡಿಎಸ್ (JDS) ಪಕ್ಷ ತೊರೆಯಲು ಮುಂದಾಗಿದ್ದಾರೆ.

    ಹಾಸನ ಜಿಲ್ಲೆಯ ಜೆಡಿಎಸ್‍ನಲ್ಲಿ ದಿನಕ್ಕೊಂದು ಬೆಳವಣಿಗೆಯಾಗುತ್ತಲೇ ಇದೆ. ಕೆಲ ದಿನಗಳ ಹಿಂದಷ್ಟೇ ಮಾಜಿ ಸಚಿವ ಎ.ಮಂಜು (A Manju) ಜೆಡಿಎಸ್ ಸೇರುವುದು ಪಕ್ಕಾ ಆಗಿದೆ. ಅದಾದ ಮೇಲೆ ಶಾಸಕ ಎ.ಟಿ.ರಾಮಸ್ವಾಮಿ (A T Ramaswamy) ಜೆಡಿಎಸ್ ನಾಯಕರ ವಿರುದ್ಧ ಕಿಡಿಕಾರಿದ್ದರು. ಇದರ ನಡುವೆ ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡ (Shivalinge Gowda)ಜೆಡಿಎಸ್ ತೊರೆದು ಕಾಂಗ್ರೆಸ್ (Congress) ಸೇರಲು ಕೆಲವೇ ದಿನಗಳು ಬಾಕಿ ಇವೆ. ಮತ್ತೊಂದೆಡೆ ಅರಕಲಗೂಡು ಕ್ಷೇತ್ರದ ಹಾಲಿ ಶಾಸಕ ಎ.ಟಿ ರಾಮಸ್ವಾಮಿ ಬಿಜೆಪಿ ಸೇರುತ್ತಾರೋ ಇಲ್ಲವೇ ಕಾಂಗ್ರೆಸ್‍ನತ್ತ ಮುಖ ಮಾಡುತ್ತಾರೋ ಅನ್ನೋದು ಕೂತುಹಲ ಕೆರಳಿಸಿದೆ.

    ಹಾಸನ ಜಿಲ್ಲೆಯ ಹೈಕಮಾಂಡ್ ಹಾಗೂ ಮಾಜಿ ಸಚಿವ ಎಚ್.ಡಿ.ರೇವಣ್ಣ (HD Revanna) ಕ್ಷೇತ್ರದಲ್ಲೇ ಜೆಡಿಎಸ್ ಕಾರ್ಯಕರ್ತರು ಬಿಗ್ ಶಾಕ್ ನೀಡಿದ್ದಾರೆ. ಹೊಳೆನರಸೀಪುರ ಪುರಸಭೆ ಮಾಜಿ ಅಧ್ಯಕ್ಷ ಪುಟ್ಟರಾಜು, ಮಾಜಿ ಸದಸ್ಯ ಗಂಗಾಧರ್ ಹಾಗೂ ಬೆಂಬಲಿಗರು ಕಾಂಗ್ರೆಸ್‍ನತ್ತ ಮುಖಮಾಡಿದ್ದಾರೆ ಎನ್ನಲಾಗ್ತಿದೆ. ಕಾಂಗ್ರೆಸ್ ಜಿಲ್ಲಾ ಉಸ್ತುವಾರಿ ಹಾಗೂ ಸಂಸದ ಡಿ.ಕೆ.ಸುರೇಶ್ (DK Suresh) ಸಮ್ಮುಖದಲ್ಲಿ ಇಂದು ಕಾಂಗ್ರೆಸ್ ಸೇರಲಿದ್ದಾರೆ ಎಂದು ಹೇಳಲಾಗುತ್ತಿದೆ. ಇವರಲ್ಲದೆ ಹಾಲಿ ಕೆಲ ಪುರಸಭೆ ಸದಸ್ಯರು ಜೆಡಿಎಸ್ ತೊರೆದು ಕೈ ಹಿಡಿಯಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದು ಜೆಡಿಎಸ್ ನಾಯಕರನ್ನು ನಿದ್ದೆಗೆಡೆಸಿದೆ. ರೇವಣ್ಣ ಅವರ ಸಂಪೂರ್ಣ ಹಿಡಿತದಲ್ಲಿರುವ ಹೊಳೆನರಸೀಪುರದಲ್ಲೇ ಜೆಡಿಎಸ್ ಕಾರ್ಯಕರ್ತರು ಪಕ್ಷ ತೊರೆಯುತ್ತಿರುವುದು ಭಾರೀ ಬಿರುಗಾಳಿಯೇ ಎಬ್ಬಿಸಿದಂತಾಗಿದೆ. ಇದನ್ನೂ ಓದಿ: 2 ಬಾರಿ ಆಪರೇಷನ್ ಆದ್ರೂ ಆರೋಗ್ಯ ಲೆಕ್ಕಿಸದೇ ಪಕ್ಷಕ್ಕಾಗಿ ಹೋರಾಟ: ರೇವಣ್ಣ ಭಾವುಕ

    ಅರಸೀಕೆರೆ ವಿಧಾನಸಭಾ ಕ್ಷೇತ್ರ (Araseekere Vidhanasabha Constituency) ದಲ್ಲಿ ಸತತವಾಗಿ ಮೂರು ಬಾರಿ ಜೆಡಿಎಸ್‍ನಿಂದ ಆಯ್ಕೆಯಾಗಿರುವ ಶಾಸಕ ಕೆ.ಎಂ.ಶಿವಲಿಂಗೇಗೌಡ ಕಾಂಗ್ರೆಸ್ ಪಕ್ಷ ಸೇರುವುದು ಬಹುತೇಕ ಖಚಿತವಾಗಿದೆ. ಇವರಿಗೆ ಟಕ್ಕರ್ ಕೊಡಲು ಜೆಡಿಎಸ್ ನಾಯಕರು ಮುಂದಾಗಿದ್ದಾರೆ. ಮೊದಲ ಹಂತವಾಗಿ ಫೆ.9 ರಂದು ಅರಸೀಕೆರೆ ಪಟ್ಟಣದಲ್ಲಿ ಜೆಡಿಎಸ್ ಕಚೇರಿ ಉದ್ಘಾಟನೆ ಮಾಡುತ್ತಿದ್ದಾರೆ. ಫೆ.12 ರವರೆಗೆ ಶಿವಲಿಂಗೇಗೌಡರಿಗೆ ತಮ್ಮ ನಿರ್ಧಾರ ತಿಳಿಸಲು ಗಡುವು ನೀಡಿರುವ ದಳಪತಿಗಳು ಕಾದು ನೋಡುವ ತಂತ್ರಕ್ಕೆ ಮುಂದಾಗಿದ್ದಾರೆ. ಮಾಜಿ ಸಚಿವ ಎಚ್.ಡಿ.ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ, ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ (Suraj Revanna) ಸೇರಿ ಚುನಾಯಿತ, ಪರಾಜಿತ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಈ ಬಗ್ಗೆ ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಸ್.ಲಿಂಗೇಶ್ ಅಧಿಕೃತವಾಗಿ ಪ್ರಕಟಣೆ ಹೊರಡಿಸಿದ್ದಾರೆ.

    ಪಕ್ಷಾಂತರ ಅಬ್ಬರ ಒಂದೆಡೆಯಾದರೆ, ಹಾಸನ ವಿಧಾನಸಭಾ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿ ಹೆಚ್.ಪಿ.ಸ್ವರೂಪ್ ಪ್ರಕಾಶ್ ತಮ್ಮ ಪ್ರಚಾರ ಬಿರುಸುಗೊಳಿಸಿದ್ದಾರೆ. ಇದೇ ಕ್ಷೇತ್ರದ ಮೇಲೆ ಕಣ್ಣಿಟ್ಟಿರುವ ಭವಾನಿ ರೇವಣ್ಣ (Bhavani Revanna) ಫುಲ್ ಸೈಲೆಂಟ್ ಆಗಿದ್ದಾರೆ. ಹೀಗಾಗಿ ಅವರ ನಡೆ ಇನ್ನೂ ನಿಗೂಢವಾಗಿದೆ. ಒಟ್ಟಿನಲ್ಲಿ ಚುನಾವಣೆ ಸಮೀಸುತ್ತಿರುವಾಗಲೇ ಜೆಡಿಎಸ್‍ನಲ್ಲಿ ದಿನಕ್ಕೊಂದು ಬೆಳವಣಿಗೆಯಾಗುತ್ತಿದ್ದು, ಜೆಡಿಎಸ್ ಕಾರ್ಯಕರ್ತರು ಗೊಂದಲಕ್ಕೀಡಾಗಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಬಿಟ್ಟು ತೆನೆ ಹೊತ್ತ ಎ.ಮಂಜು – ರೇವಣ್ಣ ವಿರುದ್ಧ ಎ.ಟಿ ರಾಮಸ್ವಾಮಿ ಬೇಸರದ ಮಾತು

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಬಳ್ಳಾರಿ ಎಲೆಕ್ಷನ್ ಬಡಿದಾಟಕ್ಕೆ ಮೆಗಾ ಟ್ವಿಸ್ಟ್- ಸೋಮಶೇಖರ್ ರೆಡ್ಡಿ ವಿರುದ್ಧ ಅತ್ತಿಗೆ ಅರುಣಾ ಲಕ್ಷ್ಮಿ ಕಣಕ್ಕೆ

    ಬಳ್ಳಾರಿ ಎಲೆಕ್ಷನ್ ಬಡಿದಾಟಕ್ಕೆ ಮೆಗಾ ಟ್ವಿಸ್ಟ್- ಸೋಮಶೇಖರ್ ರೆಡ್ಡಿ ವಿರುದ್ಧ ಅತ್ತಿಗೆ ಅರುಣಾ ಲಕ್ಷ್ಮಿ ಕಣಕ್ಕೆ

    ಬಳ್ಳಾರಿ: ರಾಜ್ಯ ರಾಜಕೀಯದಲ್ಲೀಗ ಅಣ್ತಮ್ಮಾಸ್ ಬಹಳ ಸದ್ದು ಮಾಡುತ್ತಿದ್ದಾರೆ. ಟಿಕೆಟ್ ವಿಚಾರದಲ್ಲಿ ಕುಮಾರಸ್ವಾಮಿ (HD Kumaraswamy) ಯ ಮಾತು ಮೀರಲ್ಲ ಅಂತ ಅಣ್ಣ ರೇವಣ್ಣ ಘೋಷಿಸಿದ್ರೆ, ಇತ್ತ ಡಿಕೆ (DK Shivakumar) ವಿರುದ್ಧ ಜಾರಕಿಹೊಳಿ (Ramesh Jarakiholi) ಬ್ರದರ್ಸ್ ಒಂದಾಗಿದ್ದಾರೆ. ಇದರ ಬೆನ್ನಲ್ಲೇ ಸಹೋದರ ಸೋಮಶೇಖರ್ ರೆಡ್ಡಿ ವಿರುದ್ಧವೇ ಜನಾರ್ದನ ರೆಡ್ಡಿ ತೊಡೆತಟ್ಟಿದ್ದಾರೆ. ಬಳ್ಳಾರಿ ನಗರದಲ್ಲಿ ಸೋಮಶೇಖರ್ ರೆಡ್ಡಿ‌ (Somashekhar Reddy) ಎದುರು ಪತ್ನಿ ಅರುಣಾ ಲಕ್ಷ್ಮಿ (Aruna Laxmi) ಯನ್ನು ಕಣಕ್ಕಿಳಿಸಲಿದ್ದಾರೆ.

    ಹೌದು. ಗಣಿ ಧೂಳಿನ ಜೊತೆ ರಾಜ್ಯ ರಾಜಕಾರಣದಲ್ಲೂ ಪ್ರಖ್ಯಾತಿ ಹಾಗೂ ಕುಖ್ಯಾತಿ ಹೊಂದಿರುವ ಜಿಲ್ಲೆ ಬಳ್ಳಾರಿ. ಇಂತಹ ಬಳ್ಳಾರಿಯಲ್ಲಿ ರಾಮ-ಲಕ್ಷ್ಮಣರಂತಿದ್ದ ಅಣ್ಣ, ತಮ್ಮನ ಮಧ್ಯೆಯೇ ಅಧಿಕಾರಕ್ಕಾಗಿ ಯುದ್ಧ ಆರಂಭವಾಗಿದೆ. ಬಳ್ಳಾರಿ ನಗರದ ಬಿಜೆಪಿ ಶಾಸಕ, ಸಹೋದರ ಸೋಮಶೇಖರ್ ರೆಡ್ಡಿ ವಿರುದ್ಧವೇ ರಣಕಹಳೆ ಮೊಳಗಿಸಿದ್ದಾರೆ ಗಾಲಿ ಜನಾರ್ದನ ರೆಡ್ಡಿ. ಅಣ್ಣನ ಸೋಲಿಸಲು ಪತ್ನಿಯನ್ನು ಕಣಕ್ಕಿಳಿಸಿದ್ದಾರೆ. ಸೋಮಶೇಖರ ರೆಡ್ಡಿ ವಿರುದ್ಧ ಜನಾರ್ದನ ರೆಡ್ಡಿ‌ (Janardhan Reddy) ಹೆಂಡತಿ ಅರುಣಾ ಲಕ್ಷ್ಮಿ ಸೆಣಸಲಿದ್ದಾರೆ. ಇದನ್ನೂ ಓದಿ: ಜನಾರ್ದನ ರೆಡ್ಡಿ ಚಲನವಲನದ ಮೇಲೆ ಗುಪ್ತಚರ ಇಲಾಖೆ ಕಣ್ಣು

    ಬಿಜೆಪಿಗೆ ಸೆಡ್ಡು ಹೊಡೆದು ಕರ್ನಾಟಕ ರಾಜ್ಯ ಪ್ರಗತಿ ಪಕ್ಷ ಸ್ಥಾಪಿಸಿರುವ ಜನಾರ್ದನ ರೆಡ್ಡಿ, ಕಲ್ಯಾಣ ಕರ್ನಾಟಕ ಟಾರ್ಗೆಟ್ ಮಾಡಿಕೊಂಡಿದ್ದಾರೆ. ತಮ್ಮ ಹೊಸ ಪಕ್ಷ ಹುಟ್ಟು ಹಾಕಿದ್ದರೂ ಅಣ್ಣ ಸೋಮಶೇಖರ ರೆಡ್ಡಿ ಬಿಜೆಪಿಯಲ್ಲೇ ಇದ್ದಾರೆ. ಇಂಥ ಸಂದರ್ಭದಲ್ಲೇ ಅಣ್ಣನ ವಿರುದ್ಧವೇ ಯುದ್ಧ ಸಾರಿದ್ದಾರೆ ಗಾಲಿ ರೆಡ್ಡಿ. ತಮ್ಮ ಹಾಗೂ ತಮ್ಮನ ಹೆಂಡತಿಯ ಚಾಲೆಂಜ್ ಅನ್ನು ಸೋಮಶೇಖರ್ ರೆಡ್ಡಿ ಸ್ವೀಕರಿಸಿದ್ದಾರೆ.

    ಅಣ್ಣನ ಹಣಿಯಲು ತಮ್ಮನ ಸ್ಕೆಚ್: ಬಳ್ಳಾರಿ ಜನ ಇದು ಯಾಕೋ ನಂಬಲಾಗುತ್ತಿಲ್ಲ ಅನ್ನುತ್ತಿದ್ದಾರೆ. ಕಾಂಗ್ರೆಸ್ ವೋಟ್ ಒಡೆಯಲು ಜನಾರ್ದನ ರೆಡ್ಡಿ ಹೂಡಿದ ತಂತ್ರವಾ ಇದು ಅಂತ ಮಾತಾಡಿಕೊಳ್ತಿದ್ದಾರೆ. ಈ ರೀತಿ ಹತ್ತು ಹಲವು ರಾಜಕೀಯ ಲೆಕ್ಕಾಚಾರ ಹಾಕುತ್ತಿದ್ದಾರೆ. ಒಂದು ವೇಳೆ ಅಣ್ಣನ ಸೋಲಿಸಲೆಂದೇ ಪತ್ನಿಯನ್ನು ಕಣಕ್ಕಿಳಿಸಿದ್ದೇ ಆದರೆ, ಬಳ್ಳಾರಿ ಅಖಾಡ ಇನ್ನಷ್ಟು ರಂಗೇರೋದಂತೂ ಗ್ಯಾರೆಂಟಿ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನಾನು ಮತ್ತು ಡಿಕೆ ಶಿವಕುಮಾರ್ ಅಣ್ಣ-ತಮ್ಮಂದಿರಂತೆ ಇದ್ದೆವು

    ನಾನು ಮತ್ತು ಡಿಕೆ ಶಿವಕುಮಾರ್ ಅಣ್ಣ-ತಮ್ಮಂದಿರಂತೆ ಇದ್ದೆವು

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • Mr. ಡಿಕೆಶಿ ರಾಜಕಾರಣದಲ್ಲಿ ಇರಲು ನಾಲಾಯಕ್

    Mr. ಡಿಕೆಶಿ ರಾಜಕಾರಣದಲ್ಲಿ ಇರಲು ನಾಲಾಯಕ್

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k