Tag: Karnataka Goverment

  • ಇನ್ಮುಂದೆ ಸರ್ಕಾರಿ ಕಚೇರಿಗಳಲ್ಲಿ ಫೋಟೋ, ವೀಡಿಯೋ ಮಾಡುವಂತಿಲ್ಲ

    ಇನ್ಮುಂದೆ ಸರ್ಕಾರಿ ಕಚೇರಿಗಳಲ್ಲಿ ಫೋಟೋ, ವೀಡಿಯೋ ಮಾಡುವಂತಿಲ್ಲ

    ಬೆಂಗಳೂರು: ಇನ್ನುಮುಂದೆ ಸರ್ಕಾರಿ ಕಚೇರಿಗಳಲ್ಲಿ ಅನುಮತಿಯಿಲ್ಲದೇ ಖಾಸಗಿ ವ್ಯಕ್ತಿಗಳು ಫೋಟೋ, ವಿಡಿಯೋ ಮಾಡುವಂತಿಲ್ಲ ಎಂದು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

    ಈ ಕುರಿತು ರಾಜ್ಯ ಸರ್ಕಾರದ ಪರವಾಗಿ ಅಧೀನ ಕಾರ್ಯದರ್ಶಿ ಕೆ.ವೆಂಕಟೇಶ್ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: 44 ಕಿಮೀ ಸುತ್ತಾಡಿ ಕಾರಿನಲ್ಲಿಯೇ ಹುಡುಗಿ ಮೇಲೆ ಸಾಮೂಹಿಕ ಅತ್ಯಾಚಾರ – ಮೂವರು ಅರೆಸ್ಟ್

    ಆದೇಶ ಪ್ರತಿಯಲ್ಲಿ ಏನಿದೆ?
    ರಾಜ್ಯಾದ್ಯಂತ ಎಲ್ಲ ಜಿಲ್ಲೆ, ತಾಲ್ಲೂಕು ಹಾಗೂ ರಾಜ್ಯಮಟ್ಟದಲ್ಲಿ ವಿವಿಧ ಇಲಾಖೆಗಳು ಕಾರ್ಯ ನಿರ್ವಹಿಸುತ್ತಿವೆ. ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕರು ಅವರವರ ಕೆಲಸ ಕಾರ್ಯಗಳ ನಿಮಿತ್ತ ಅಲ್ಲಿಗೆ ಆಗಮಿಸುವುದು ಸರ್ವೇ ಸಾಮಾನ್ಯ. ಆದರೆ ಕೆಲ ಖಾಸಗಿ ವ್ಯಕ್ತಿಗಳು ಸರ್ಕಾರಿ ಕಚೇರಿಗಳಿಗೆ ಕಚೇರಿ ವೇಳೆಯಲ್ಲಿ ಬಂದು ಫೋಟೋ, ವೀಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡುತ್ತಿದ್ದಾರೆ. ಇದರಿಂದ ಇಲಾಖೆ ಹಾಗೂ ಸರ್ಕಾರದ ಘನತೆಗೆ ಕುಂದುಂಟಾಗುತ್ತಿದೆ. ಅದರಲ್ಲೂ ವಿಶೇಷವಾಗಿ ಮಹಿಳಾ ನೌಕರರಿಗೆ ಸಮಸ್ಯೆಯಾಗುತ್ತಿದೆ. ಆದ್ದರಿಂದ ರಾಜ್ಯ ಸರ್ಕಾರವು ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ ಹಾಗೂ ವೀಡಿಯೋ ತೆಗೆಯುವುದನ್ನು ನಿಷೇಧಿಸುವಂತೆ ಅಧಿಕೃತವಾಗಿ ಆದೇಶ ಹೊರಡಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಬಿಜೆಪಿ ನಾಯಕರು ಜಾತಿ ಸಮಾವೇಶ ಮಾಡುತ್ತಿರುವುದು ರಾಜಕೀಯ ಷಡ್ಯಂತ್ರವೇ – ಸಿದ್ದರಾಮಯ್ಯ ಪ್ರಶ್ನೆ

    ಬಿಜೆಪಿ ನಾಯಕರು ಜಾತಿ ಸಮಾವೇಶ ಮಾಡುತ್ತಿರುವುದು ರಾಜಕೀಯ ಷಡ್ಯಂತ್ರವೇ – ಸಿದ್ದರಾಮಯ್ಯ ಪ್ರಶ್ನೆ

    ಬೆಂಗಳೂರು: ನಾವೆಲ್ಲ ಒಂದು ಎಂದು ಹೇಳಿ ಹಿಂದೂ ಸಮಾವೇಶ ಮಾಡುತ್ತಿದ್ದ ಬಿಜೆಪಿ ನಾಯಕರು ಈಗ ಸಾಲುಸಾಲಾಗಿ ನಿಂತು ಮೀಸಲಾತಿಗಾಗಿ ಕೂಗೆಬ್ಬಿಸಿರುವುದು ಪ್ರಾಮಾಣಿಕ ಜ್ಞಾನೋದಯವೇ? ಅಥವಾ ಸಾಮಾಜಿಕ ನ್ಯಾಯದ ಹೋರಾಟದ ದಿಕ್ಕುತಪ್ಪಿಸುವ ಇನ್ನೊಂದು ರಾಜಕೀಯ ಷಡ್ಯಂತ್ರವೇ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

    ಮೀಸಲಾತಿ ಪರ ಬಿಜೆಪಿ ನಾಯಕರು ಸಮಾವೇಶ ಮಾಡುತ್ತಿದ್ದಂತೆ ಸಿದ್ದರಾಮಯ್ಯ ಸರಣಿ ಟ್ವೀಟ್‌ ಮಾಡಿ ಕೇಂದ್ರ ಮತ್ತು ಬಿಜೆಪಿ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

    ಟ್ವೀಟ್‌ನಲ್ಲಿ ಏನಿದೆ?
    ಮೀಸಲಾತಿಯನ್ನು ವಿರೋಧಿಸುತ್ತಲೇ ಬಂದಿರುವ ಬಿಜೆಪಿ ನಾಯಕರು ಸಾಲುಸಾಲಾಗಿ ನಿಂತು ಮೀಸಲಾತಿಗಾಗಿ ಕೂಗೆಬ್ಬಿಸಿರುವುದು ಪ್ರಾಮಾಣಿಕ ಜ್ಞಾನೋದಯವೇ? ಸಾಮಾಜಿಕ ನ್ಯಾಯದ ಹೋರಾಟದ ದಿಕ್ಕುತಪ್ಪಿಸುವ ಇನ್ನೊಂದು ರಾಜಕೀಯ ಷಡ್ಯಂತ್ರವೇ?

    ಮಂಡಲ್ ವರದಿಯನ್ನು ವಿರೋಧಿಸಿ ಮೈಗೆ ಬೆಂಕಿಹಚ್ಚಿಕೊಂಡವರು ಯಾರು? ಉನ್ನತ ಶಿಕ್ಷಣದಲ್ಲಿ ಮೀಸಲಾತಿಯನ್ನು ವಿರೋಧಿಸಿ ಬೀದಿಗಿಳಿದವರು ಯಾರು? ಸ್ಥಳೀಯ ಸಂಸ್ಥೆಗಳಲ್ಲಿನ ಮೀಸಲಾತಿಯನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದ ರಾಮಾ ಜೋಯಿಸ್ ಯಾವ ಪಕ್ಷದವರು? ಉತ್ತರಿಸುವಿರಾ

    ಜಾತಿಯಿಂದಲೇ ನರಕ, ಧರ್ಮದಿಂದಲೇ ಸ್ವರ್ಗ, ನಾವೆಲ್ಲ ಹಿಂದೂ, ನಾವೆಲ್ಲ ಒಂದು ಎಂದು ಹಿಂದೂ ಸಮಾಜೋತ್ಸವ ನಡೆಸುತ್ತಿದ್ದ ಸಂಘ ಪರಿವಾರ ಈಗ ಯಾಕೆ ಜಾತಿ ಸಮಾವೇಶಗಳಿಗೆ ಪ್ರಾಯೋಜಕತ್ವ ನೀಡುತ್ತಿದೆ? ಯಾರಾದರೂ ಉತ್ತರಿಸುವಿರಾ?

    ಮೀಸಲಾತಿಯನ್ನು ನೇರವಾಗಿ ವಿರೋಧಿಸಲಿಕ್ಕಾಗದ ಸಂಘ ಪರಿವಾರದ ನಾಯಕರು ವಿವಾದ ಸೃಷ್ಟಿಸಿ, ಸಮುದಾಯಗಳನ್ನು ಪರಸ್ಪರ ಕಾದಾಟಕ್ಕಿಳಿಸಿ ಸಾಮಾಜಿಕ ನ್ಯಾಯದ ಹೋರಾಟದ ಹಾದಿ ತಪ್ಪಿಸುವ ಕುಟಿಲ ಕಾರಸ್ಥಾನಕ್ಕೆ ಅಮಾಯಕ ಜನತೆ ಬಲಿಯಾಗಬಾರದು.

    ರಾಜ್ಯದಲ್ಲಿ ಆಡಳಿತ ಪಕ್ಷದವರೇ ಮೀಸಲಾತಿಗಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿರುವುದು ಯಾರ ವಿರುದ್ಧ? ಮರೆತುಬಿಟ್ಟಿದ್ದರೆ ನೆನಪಿಸಬಯಸುತ್ತೇನೆ. ಕೇಂದ್ರ ಮತ್ತು ರಾಜ್ಯದಲ್ಲಿರುವುದು ಭಾರತೀಯ ಜನತಾ ಪಕ್ಷದ ಸರ್ಕಾರ. ಅಲ್ಲಿನ ಪ್ರಧಾನಿ ಮೋದಿ ಮತ್ತು ಇಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ

    ಈಗಿನ ಮೀಸಲಾತಿ ಬದಲಾವಣೆ-ಹೆಚ್ಚಳದ ಬೇಡಿಕೆಗೆ ತಮಿಳುನಾಡಿನ ಮಾದರಿಯಲ್ಲಿ ಕರ್ನಾಟಕದ ಮೀಸಲಾತಿಯನ್ನು ಶೇ.73ಕ್ಕೆ ಹೆಚ್ಚಿಸಬೇಕೆಂದು ಕಾಂಗ್ರೆಸ್ ಸರ್ಕಾರವೇ ಮಾಡಿರುವ ಕಾನೂನು ಮಾತ್ರ ಪರಿಹಾರ. ಅದರ ಅನುಷ್ಠಾನ ಕೇಂದ್ರದ ಬಿಜೆಪಿ ಸರ್ಕಾರದ ಕೈಯಲ್ಲಿದೆ.

     

    ಮೀಸಲಾತಿ ಹೆಚ್ಚಳಕ್ಕಾಗಿ ಆಧಾರ ಕೋರುತ್ತಿರುವ ನ್ಯಾಯಾಲಯಕ್ಕೆ ಕರ್ನಾಟಕದಲ್ಲಿ ನಡೆದಿರುವ ಸಾಮಾಜಿಕ-ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯೇ ಉತ್ತರ. ರಾಜ್ಯ ಬಿಜೆಪಿ ಸರ್ಕಾರ ಮೀಸಲಾತಿ ಹೆಚ್ಚಳದ ಪರವಾಗಿದ್ದರೆ ಮೊದಲು ನಡೆಸಿದ್ದ ಈ ಸಮೀಕ್ಷೆಯನ್ನು ಸ್ವೀಕರಿಸಿ, ಶಿಫಾರಸುಗಳನ್ನು ಅನುಷ್ಠಾನಗೊಳಿಸಬೇಕು.