Tag: Karnataka Government

  • ನನಗೆ ಸಿಎಂ ಆಗೋ ಎಲ್ಲಾ ಅರ್ಹತೆಯಿದೆ: ಉಮೇಶ್ ಕತ್ತಿ

    ನನಗೆ ಸಿಎಂ ಆಗೋ ಎಲ್ಲಾ ಅರ್ಹತೆಯಿದೆ: ಉಮೇಶ್ ಕತ್ತಿ

    ಮೈಸೂರು: ನನಗೆ ಸಿಎಂ ಆಗುವ ಎಲ್ಲಾ ಅರ್ಹತೆಯಿದೆ. ಹಣೆ ಬರಹದಲ್ಲಿ ಬರೆದಿದ್ದರೆ ನಾನೂ ಸಿಎಂ ಆಗ್ತೇನೆ ಎಂದು ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.

    ಮೈಸೂರಿನಲ್ಲಿಂದು ಪ್ರತ್ಯೇಕ ರಾಜ್ಯದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಭಿವೃದ್ಧಿ ದೃಷ್ಟಿಯಿಂದ ನಾನು ಪ್ರತ್ಯೇಕ ರಾಜ್ಯ ಕೇಳುತ್ತಿದ್ದೇನೆ ಹೊರತು ಬೇರೆ ಉದ್ದೇಶ ಇಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ: ಸೆಪ್ಟೆಂಬರ್‌ವರೆಗೂ ಉಚಿತ ಪಡಿತರ ಯೋಜನೆಯನ್ನು ವಿಸ್ತರಿಸಿದ ದೆಹಲಿ ಸರ್ಕಾರ

    ಇರುವ 224 ಶಾಸಕರಲ್ಲಿ ನಾನೇ ಹಿರಿಯ ಶಾಸಕ. ನನಗೆ ಸಿಎಂ ಆಗಿವ ಎಲ್ಲಾ ಅರ್ಹತೆ ಇದೆ. ನಾನು ಸಿಎಂ ಆಗಬೇಕಾದರೆ ಅಖಂಡ ಕರ್ನಾಟಕದ ಸಿಎಂ ಆಗುತ್ತೇನೆ. ಆದರೆ ಸಿಎಂ ಸ್ಥಾನಕ್ಕಾಗಿ ಪ್ರತ್ಯೇಕ ರಾಜ್ಯ ಕೇಳುತ್ತಿಲ್ಲ. ಪ್ರತ್ಯೇಕ ರಾಜ್ಯವಾದರೂ ನಾವು ಕನ್ನಡಿಗರೇ, ಆಂಧ್ರ, ತೆಲಂಗಾಣ ರೀತಿಯಲ್ಲೇ ನಮ್ಮದೂ ಪ್ರತ್ಯೇಕವಾಗಲಿ ಎಂದು ಬಯಸಿದ್ದೇನೆ ಅಷ್ಟೇ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಆಕೆಯ ಮೇಲೆ ಪದೇ-ಪದೇ ಅತ್ಯಾಚಾರ ಮಾಡಿದ್ರು, ನರಮಾಂಸ ತಿನ್ನುವಂತೆ ಒತ್ತಾಯಿಸಿದ್ರು!

    ನಮ್ಮ ಜನರ ದೃಷ್ಟಿಯಿಂದ ನಾನೇ ಹಿರಿಯನಾಗಿ ಧ್ವನಿ ಎತ್ತಿದ್ದೇನೆ. ಹೈಕಮಾಂಡ್ ಮಟ್ಟದಲ್ಲೂ ಹೊಸ ರಾಜ್ಯಗಳ ರಚನೆ ಬಗ್ಗೆ ಚಿಂತನೆ ನಡೆದಿದೆ ಎಂಬುದು ನನ್ನ ಅನಿಸಿಕೆ. ನಾನು ಮಾತನಾಡಿದರೆ ಆ ವಿಚಾರ ಕೇಂದ್ರದ ಮಟ್ಟಕ್ಕೂ ಹೋಗುತ್ತದೆ. ಆದ್ದರಿಂದಲೇ ಪ್ರತ್ಯೇಕ ರಾಜ್ಯದ ಬಗ್ಗೆ ಮಾತನಾಡುತ್ತಿದ್ದೇನೆ ಎಂದು ಹೇಳಿದ್ದಾರೆ.

    bjP

    ಬೆಂಗಳೂರಿನಲ್ಲಿ ಲಾ ಅಂಡ್ ಆರ್ಡರ್ ಎಲ್ಲಿದೆ?
    ಇದೇ ವೇಳೆ ಸ್ವಪಕ್ಷೀಯ ಸರ್ಕಾರದ ಆಡಳಿತವನ್ನೇ ಪ್ರಶ್ನಿಸಿದ ಉಮೇಶ್ ಕತ್ತಿ, ದೊಡ್ಡ ರಾಜ್ಯಗಳಾದಾಗ ಇಂತಹ ಸಮಸ್ಯೆಗಳು ಇದ್ದೇ ಇರುತ್ತವೆ. ಇದೇ ಕಾರಣಕ್ಕೆ ನಾವು ರಾಜ್ಯ ಇಬ್ಬಾಗ ಆಗಬೇಕೆಂದು ಕೇಳುತ್ತಿದ್ದೇನೆ. ಜಲಾಶಯಗಳ ನೀರಿನ ಬಳಕೆ, ಗಡಿ ಸಮಸ್ಯೆಗಳ ನಿವಾರಣೆ ಇದರ ದೃಷ್ಟಿಯಿಂದ ಚಿಕ್ಕ ರಾಜ್ಯಗಳು ಆಗಬೇಕು. ಅತಿ ಹೆಚ್ಚು ಜನಸಂಖ್ಯೆ ಇದ್ದಾಗ ಯಾವ ಸಮಸ್ಯೆಗಳೂ ಬಗೆಹರಿಯುವುದಿಲ್ಲ ಎಂದು ಕುಟುಕಿದ್ದಾರೆ.

    ಪ್ರತಿ ಜಿಲ್ಲೆಗಳಿಗೂ ಮೃಗಾಲಯ?
    ರಾಜ್ಯದಲ್ಲಿ ಪ್ರತಿ ಜಿಲ್ಲೆಯಲ್ಲೂ ಮೃಗಾಲಯಗಳನ್ನು ಸ್ಥಾಪಿಸುವ ಚಿಂತನೆ ನಡೆಸಿದ್ದೇವೆ. ಇದಕ್ಕಾಗಿ ಎಲ್ಲ ಜಿಲ್ಲೆಗಳಲ್ಲೂ ಸೂಕ್ತ ಸ್ಥಳವನ್ನು ಗುರುತು ಮಾಡುತ್ತಿದ್ದೇವೆ. ರಾಜ್ಯದ ಈ ಪ್ರಸ್ತಾಪವನ್ನು ಕೇಂದ್ರಕ್ಕೆ ಕಳುಹಿಸುತ್ತೇವೆ. ಕೇಂದ್ರದ ಅನುಮತಿ ಬಂದ ಮೇಲೆಯೇ ಈ ಕಾರ್ಯ ಶುರುವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

    Live Tv

  • ಮಠಗಳು ರಾಜಕೀಯ ಮಾಡಬಾರದು, ಮಾಡಿಸಬೇಕು: ಶ್ರೀ ನಿರಂಜನಾನಂದಪುರಿ ಸ್ವಾಮೀಜಿ

    ಮಠಗಳು ರಾಜಕೀಯ ಮಾಡಬಾರದು, ಮಾಡಿಸಬೇಕು: ಶ್ರೀ ನಿರಂಜನಾನಂದಪುರಿ ಸ್ವಾಮೀಜಿ

    ದಾವಣಗೆರೆ: ಮಠಗಳು ರಾಜಕೀಯ ಮಾಡಬಾರದು, ರಾಜಕೀಯ ಮಾಡಿಸಬೇಕು ಎಂದು ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ಹೇಳಿದ್ದಾರೆ.

    ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಬೆಳ್ಳೋಡಿ ಕನಕ ಗುರು ಪೀಠದಲ್ಲಿಂದು `ಮಠಗಳು ರಾಜಕೀಯ ಕೇಂದ್ರಗಳಾಗಿ ಪರಿಣಮಿಸಿವೆ’ ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ: FASTag ನಿಂದ ಹಣ ಕದಿಯುತ್ತಾರೆ – ಫೇಕ್‌ ವೀಡಿಯೋ ಶೇರ್‌ ಮಾಡಬೇಡಿ

    ಮಠಗಳು ರಾಜಕೀಯ ಮಾಡಬಾರದು, ಮಾಡಿಸಬೇಕು. ಮಠಗಳಿಗೆ ಪಕ್ಷದ ವರಿಷ್ಠರು ಭೇಟಿ ನೀಡುವುದು ಅವರ ವೈಯಕ್ತಿಕ. ನಾವು ಮಠಕ್ಕೆ ಬರುವುದು ಬೇಡ ಎನ್ನಲಾಗುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

    ಪಠ್ಯಪುಸ್ತಕ ಗೊಂದಲ ಸರಿಪಡಿಸಿ: ರಾಜ್ಯದಲ್ಲಿ ಪಠ್ಯಪುಸ್ತಕ ವಿಚಾರದಲ್ಲಿ ಗೊಂದಲ ಸೃಷ್ಟಿಯಾಗಿದೆ. ನಿಮ್ಮ ಉದ್ಧಟತನಗಳು ಕಾರ್ಯವೈಖರಿಗಳು ಹೀಗೇ ಮುಂದುವರಿದರೆ ಬಹಳ ಕಷ್ಟ ಅನುಭವಿಸಬೇಕಾಗುತ್ತದೆ. ಮುಂದಿನ ದಿನಗಳಲ್ಲಿ ಅದರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಇಂದು ರಾತ್ರಿ 9:30 ರಿಂದ ಬೆಳಗ್ಗೆ 7 ಗಂಟೆ ವರೆಗೂ ನೇರಳೆ ಮಾರ್ಗದ ಮೆಟ್ರೋ ಸೇವೆ ಸ್ಥಗಿತ

    ಶಿಕ್ಷಣ ಯಾವುದೇ ಜಾತಿಗೆ ಸೀಮಿತವಾಗಬಾರದು. ಕುವೆಂಪು, ಬಸವಣ್ಣ, ಕನಕದಾಸರು ಸೇರಿದಂತೆ ಹಲವು ಮಹನೀಯರ ಜೀವನದ ಸತ್ಯಾಂಶಗಳ ಚರಿತ್ರೆಯನ್ನು ಜನರಿಗೆ ತಿಳಿಸುವ ಕೆಲಸ ಮಾಡಬೇಕು. ಪಠ್ಯದಲ್ಲಿ ಕೆಲ ಅಂಶಗಳನ್ನು ಮುಚ್ಚಿಟ್ಟು, ಇಲ್ಲಸಲ್ಲದ ಅಂಶಗಳನ್ನು ಸೇರಿಸಿ ಜನರಿಗೆ ತೋರಿಸುವುದು ಅಕ್ಷಮ್ಯ ಅಪರಾಧ. ಸರಿಪಡಿಸದೇ ಇದ್ದರೆ ಬೃಹತ್ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

    ಕುರುಬ ಸಮಾಜಕ್ಕೆ ಎಸ್‌ಟಿ ಮೀಸಲಾತಿ ವಿಚಾರವಾಗಿ ಮಾತನಾಡಿದ ಶ್ರೀಗಳು, ಎಲ್ಲ ಸಂಶೋಧನೆ ನಡೆದು ಸರ್ಕಾರಕ್ಕೆ ಇನ್ನು ಕೆಲವೇ ದಿನಗಳಲ್ಲಿ ವರದಿ ಬರಲಿದೆ. ನಮ್ಮ ಹೋರಾಟ ಶುರುವಾದಾಗಿನಿಂದ ಒಂದು ದಿನವೂ ನಾವು ನೆಮ್ಮದಿಯಿಂದ ಇಲ್ಲ. ಪ್ರತಿದಿನ ಕೆಲಸ ಮಾಡುತ್ತಿದ್ದೇವೆ. ಬುಡಕಟ್ಟು ಸಂಶೋಧನಾ ಕೇಂದ್ರದಿಂದ ಸಮಗ್ರವಾದ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ. ಒಂದು ತಿಂಗಳಲ್ಲಿ ಸಂಶೋಧನಾ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

    Live Tv

  • ಸಾರ್ವಜನಿಕ ಶಿಕ್ಷಣ ಇಲಾಖೆಗೆ ಮರುನಾಮಕರಣ – ರಾಜ್ಯ ಸರ್ಕಾರ ಅಧಿಕೃತ ಆದೇಶ

    ಸಾರ್ವಜನಿಕ ಶಿಕ್ಷಣ ಇಲಾಖೆಗೆ ಮರುನಾಮಕರಣ – ರಾಜ್ಯ ಸರ್ಕಾರ ಅಧಿಕೃತ ಆದೇಶ

    ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆ ಹೆಸರು ಮರುನಾಮಕರಣ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

    ಸಾರ್ವಜನಿಕ ಶಿಕ್ಷಣ ಇಲಾಖೆ ಹೆಸರನ್ನು `ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ’ ಅಂತ ಹೆಸರು ಮರುನಾಮಕರಣ ಮಾಡಲಾಗಿದೆ. ಈ ಕುರಿತು ರಾಜ್ಯ ಸರ್ಕಾರ ಅಧಿಕೃತ ಆದೇಶವನ್ನೂ ಹೊರಡಿಸಿದೆ. ಇದನ್ನೂ ಓದಿ: ವಿದ್ಯಾಪೀಠ 5ನೇ ಆವೃತ್ತಿಗೆ ಅದ್ಧೂರಿ ಚಾಲನೆ- ಮೊದಲ ದಿನವೇ ವಿದ್ಯಾರ್ಥಿಗಳು, ಪೋಷಕರ ಸಾಗರ

    ಪ್ರಾಥಮಿಕ ಶಿಕ್ಷಣ ಮತ್ತು ಪ್ರೌಢ ಶಿಕ್ಷಣ ಇಲಾಖೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಅಂತ ಕರೆಯಲಾಗುತ್ತಿತ್ತು. ಬ್ರಿಟಿಷರ ಕಾಲದಲ್ಲಿ ಈ ಹೆಸರು ಇಡಲಾಗಿತ್ತು. ಅಂದಿನಿಂದಲೂ ಇದೇ ಹೆಸರು ಬಳಕೆಯಲ್ಲಿತ್ತು. ಈಗ ಇಲಾಖೆಗೆ ಹೆಸರು ಮರುನಾಮಕರಣ ಮಾಡಲಾಗಿದೆ. ಇದನ್ನೂ ಓದಿ: ವಿದ್ಯಾಪೀಠಕ್ಕೆ ಇಂದು ಚಾಲನೆ – 3 ದಿನಗಳ ಶೈಕ್ಷಣಿಕ ಮೇಳಕ್ಕೆ ಬನ್ನಿ

    ಅನೇಕ ರಾಜ್ಯಗಳಲ್ಲಿ `ಶಾಲಾ ಶಿಕ್ಷಣ’ ಎಂದೇ ಕರೆಯಲಾಗುತ್ತಿದೆ. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ `ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ’ ಎಂದು ಮರುನಾಮಕರಣ ಮಾಡಿ ಆದೇಶ ಹೊರಡಿಸಿದೆ.

    Live Tv

  • ರಾಜ್ಯದಲ್ಲಿ ಕೋವಿಡ್‌ ಮತ್ತೆ ಏರಿಕೆ; ಸರ್ಕಾರದಿಂದ ಪರಿಷ್ಕೃತ Guidelines ಪ್ರಕಟ – ಮಾರ್ಗಸೂಚಿಯಲ್ಲೇನಿದೆ?

    ರಾಜ್ಯದಲ್ಲಿ ಕೋವಿಡ್‌ ಮತ್ತೆ ಏರಿಕೆ; ಸರ್ಕಾರದಿಂದ ಪರಿಷ್ಕೃತ Guidelines ಪ್ರಕಟ – ಮಾರ್ಗಸೂಚಿಯಲ್ಲೇನಿದೆ?

    ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಮತ್ತೆ ಏರುಗತಿಯಲ್ಲಿ ಸಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ಪರಿಷ್ಕೃತ ಮಾರ್ಗಸೂಚಿ ಪ್ರಕಟವಾಗಿದೆ. ಸರ್ಕಾರ ಪ್ರಕಟ ಮಾಡಿರೋ ಮಾರ್ಗಸೂಚಿಯಲ್ಲಿ ಏನಿದೆ? ಜನ ಏನು ಮಾಡಬೇಕು ಎಂಬುದಕ್ಕೆ ಇಲ್ಲಿದೆ ಮಾಹಿತಿ.

    ಪರಿಷ್ಕೃತ ಮಾರ್ಗಸೂಚಿಯಲ್ಲಿ ಏನಿದೆ?
    ಅಂತಾರಾಷ್ಟ್ರೀಯ ಪ್ರಯಾಣಿಕರ ಮೇಲೆ ನಿಗಾ ಇಡಬೇಕು. ಹೊರ ದೇಶದಿಂದ ಬರುವವರಿಗೆ ರ‍್ಯಾಂಡಮ್ ಸ್ಕ್ರೀನಿಂಗ್ ಮಾಡಬೇಕು ಮತ್ತು ಆರ್‌ಟಿ-ಪಿಸಿಆರ್‌ ಪರೀಕ್ಷೆ ಕಡ್ಡಾಯವಾಗಿದೆ. ಪಾಸಿಟಿವ್ ಆದ ಎಲ್ಲಾ ಸ್ವಾಬ್‌ಗಳನ್ನು ಜಿನೋಮ್‌ ಸೀಕ್ವೆನ್ಸಿಂಗ್‌ಗಾಗಿ ರವಾನೆ ಮಾಡಬೇಕು. ಇದನ್ನೂ ಓದಿ: ಕಾಂಗ್ರೆಸ್‍ ನಾಯಕರಿಂದ ರಾಜಭವನ ಚಲೋ

    ಪಾಸಿಟಿವ್ ಆಗಿದ್ರೆ ಅಥವಾ ರಿಪೋರ್ಟ್ ಬರುವವದಿದ್ದರೆ, ವ್ಯಕ್ತಿಯನ್ನ ಕ್ವಾರಂಟೈನ್ ಮಾಡಬೇಕು. ಕ್ವಾರಂಟೈನ್ ಅವಧಿ ಮುಗಿಯುವವರೆಗೂ ವೈದ್ಯರು ನಿಗಾ ಇಡಬೇಕು. ಎಲ್ಲಾ ಐಎಲ್‌ಐ ಸ್ಯಾರಿ ಕೇಸ್‌ಗಳ ಡೇಟಾವನ್ನು ಐಡಿಎಸ್‌ನಲ್ಲಿ ಅಪ್ಲೋಡ್ ಮಾಡಬೇಕು. ಆಸ್ಪತ್ರೆಗಳಿಗೆ ಐಎಲ್‌ಐ ಕೇಸ್‌ಗಳು ದಾಖಲಾದರೆ ಆರ್‌ಟಿ-ಪಿಸಿಆರ್ ಟೆಸ್ಟ್ ಮಾಡಬೇಕು.

    ಜಿನೋಮ್‌ ಸೀಕ್ವೆನ್ಸಿಂಗ್‌ಗೆ ಸ್ವಾಬ್ ರವಾನೆ ಮಾಡಲು ಮಾರ್ಗಸೂಚಿ
    ಕ್ಲಸ್ಟರ್‌ಗಳಲ್ಲಿ ಪಾಸಿಟಿವ್ ಬಂದ ಸ್ವಾಬ್‌ಗಳನ್ನು ಕಡ್ಡಾಯವಾಗಿ ಜಿನೋಮ್‌ ಸೀಕ್ವೆನ್ಸಿಂಗ್‌ಗೆ ಕಳಿಸಬೇಕು. ಬೆಂಗಳೂರು ಮತ್ತು ಇತರೆ ಜಿಲ್ಲೆಗಳಲ್ಲಿ ನಡೆಯುವ ಟೆಸ್ಟಿಂಗ್ ಕೇಂದ್ರಗಳಿಂದ ಆಯ್ದಾ ಸ್ವಾಬ್‌ಗಳನ್ನ ಜಿನೋಮ್‌ ಸೀಕ್ವೆನ್ಸಿಂಗ್‌ಗೆ ರವಾನೆ ಮಾಡಬೇಕು. ಇದನ್ನೂ ಓದಿ: ಕಾಂಗ್ರೆಸ್ ಹೋರಾಟದಿಂದ ಕೋವಿಡ್ ಹೆಚ್ಚಾದ್ರೆ ಅವರೇ ಹೊಣೆ: ಸಚಿವ ಸುಧಾಕರ್

    ಸಮುದಾಯ ಮಟ್ಟದಲ್ಲಿ ಕೇಸ್ ಬ್ರೇಕ್ ಥ್ರೂ ಆಗಿದ್ದರೆ ಅಲ್ಲಿ ಸ್ಯಾಂಪಲ್ ಅನ್ನು ಜಿನೋಮ್‌ ಸೀಕ್ವೆನ್ಸಿಂಗ್‌ಗಾಗಿ ರವಾನೆ ಮಾಡಬೇಕು. ಅಂತಾರಾಷ್ಟ್ರೀಯ ಪ್ರಯಾಣಿಕರ ಸ್ಯಾಂಪಲ್ ಅನ್ನು ಕಡ್ಡಾಯವಾಗಿ ಜಿನೋಮ್‌ ಸೀಕ್ವೆನ್ಸಿಂಗ್‌ಗೆ ರವಾನೆ ಮಾಡಬೇಕು ಎಂದು ಪರಿಷ್ಕೃತ ಮಾರ್ಗಸೂಚಿಯಲ್ಲಿ ಪ್ರಕಟಿಸಿದೆ.

    6 ರಿಂದ 14 ವರ್ಷದ ಮಕ್ಕಳಿಗೆ ಸೆರೋ ಸರ್ವೆ
    ಎಲ್ಲಾ ಜಿಲ್ಲೆಗಳಲ್ಲಿ ಅಧಿಕಾರಿಗಳು ತಂಡ ರಚನೆ ಮಾಡಿಕೊಂಡು ಸೆರೋ ಸರ್ವೆ ಮಾಡಲು ಸೂಚನೆ ನೀಡಲಾಗಿದೆ. 6 ರಿಂದ 14 ವರ್ಷದ ಮಕ್ಕಳಿಗೆ ರೋಗನಿರೋಧಕ ಶಕ್ತಿ ಹೇಗಿದೆ. ಈಗಾಗಲೇ ಕೋವಿಡ್ ಬಂದು ಹೋಗಿದೆಯಾ ಹೇಗೆ ಅಂತಾ ಸೆರೋ ಸರ್ವೆ ಮಾಡಲು ಸರ್ಕಾರ ನಿರ್ಧರಿಸಿದ್ದು, ನಿಗದಿತ ಸಮಯದಲ್ಲಿ ಸೆರೋ ಸರ್ವೆ ಮಾಡಲು ಸೂಚನೆ ನೀಡಿದೆ.

    Live Tv

  • ಪಠ್ಯಪುಸ್ತಕ ವಿವಾದ – ಬರಗೂರು, ಚಕ್ರತೀರ್ಥ ಸಮಿತಿಯ ಪಠ್ಯಗಳನ್ನು ʼಪಬ್ಲಿಕ್‌ʼ ಮುಂದಿಟ್ಟ ಸರ್ಕಾರ

    ಪಠ್ಯಪುಸ್ತಕ ವಿವಾದ – ಬರಗೂರು, ಚಕ್ರತೀರ್ಥ ಸಮಿತಿಯ ಪಠ್ಯಗಳನ್ನು ʼಪಬ್ಲಿಕ್‌ʼ ಮುಂದಿಟ್ಟ ಸರ್ಕಾರ

    ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣೆ ವಿವಾದದ ಹಿನ್ನೆಲೆ ಬರಗೂರು ರಾಮಚಂದ್ರಪ್ಪ ಹಾಗೂ ರೋಹಿತ್‌ ಚಕ್ರತೀರ್ಥ ಸಮಿತಿಯ ಪಠ್ಯಗಳನ್ನು ಪಬ್ಲಿಕ್‌ ಡೊಮೈನ್‌ಗೆ ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.

    2015-16 ನೇ ಸಾಲಿ‌ನ ಡಾ‌. ಮುಡಂಬಡಿತ್ತಾಯ ಸಮಿತಿ ಪಠ್ಯ ಮತ್ತು 2017- 18ನೇ ಸಾಲಿನ ಬರಗೂರು ರಾಮಚಂದ್ರಪ್ಪ ಸಮಿತಿ ಪರಿಷ್ಕರಣೆ ಪಠ್ಯಗಳನ್ನು ಕರ್ನಾಟಕ ಪಠ್ಯಪುಸ್ತಕ ಸೊಸೈಟಿ ವೆಬ್‌ಸೈಟ್‌ ktbs.kar.nic.in  ಬಿಡುಗಡೆ ಮಾಡಲಾಗಿದೆ. ರೋಹಿತ್ ಚಕ್ರತೀರ್ಥ ಸಮಿತಿಯ ಪಠ್ಯಪುಸ್ತಕಗಳನ್ನು ಸಹ ವೆಬ್‌ಸೈಟ್‌ಗೆ ಸರ್ಕಾರ ರಿಲೀಸ್‌ ಮಾಡಿದೆ.    

    ಯಾರ ಕಾಲದಲ್ಲಿ ಯಾರ‍್ಯಾರ ಪಠ್ಯ ಕೈ ಬಿಡಲಾಗಿತ್ತು ಅನ್ನೋ ಬಗ್ಗೆ ಸಾರ್ವಜನಿಕರೇ ಮಾಹಿತಿ ಪಡೆಯಬಹುದು. ಬರಗೂರು ರಾಮಚಂದ್ರಪ್ಪ ಸಮಿತಿ ಯಾವ ಯಾವ ಮಹನೀಯರ ಪಠ್ಯ ಕೈ ಬಿಟ್ಟಿತ್ತು ಅನ್ನೋ ಬಗ್ಗೆಯೂ ಮಾಹಿತಿ ಇದೆ.

    ಪಠ್ಯದಲ್ಲಿ ಏನೇ ಲೋಪ ಇದ್ದರೂ ಸಾರ್ವಜನಿಕರು ಸಲಹೆಗಳನ್ನು ನೀಡಬಹುದು. ಸಾರ್ವಜನಿಕ ಸಲಹೆ ಮೇರೆಗೆ ಸರ್ಕಾರ ಪಠ್ಯ ಪರಿಷ್ಕರಣೆ ಮಾಡಲಿದೆ. ಇದನ್ನೂ ಓದಿ: ಸ್ಟಾಲಿನ್‌ ರಾಜಕೀಯ ಸ್ಟಂಟ್‌ ಮಾಡುತ್ತಿದ್ದಾರೆ: ತಮಿಳುನಾಡು ಸಿಎಂ ವಿರುದ್ಧ ಬೊಮ್ಮಾಯಿ ಕಿಡಿ

    ಪಠ್ಯಪುಸ್ತಕ ಪರಿಷ್ಕರಣೆಗೆ ರೋಹಿತ್‌ ಚಕ್ರತೀರ್ಥ ನೇತೃತ್ವದಲ್ಲಿ ಸಮಿತಿ ರಚಿಸಿದ್ದಕ್ಕೆ ರಾಜ್ಯದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಯಿತು. ಪಠ್ಯದಲ್ಲಿ ಕುವೆಂಪು, ಡಾ.ಬಿ.ಆರ್.ಅಂಬೇಡ್ಕರ್‌ ಅವರಿಗೆ ಅಪಮಾನ ಮಾಡಲಾಗಿದೆ. ಹಿಂದೂಪರ ಧೋರಣೆಗಳನ್ನು ಉದ್ದೇಶಪೂರ್ವಕವಾಗಿ ಪಠ್ಯದಲ್ಲಿ ಅಳವಡಿಸಲಾಗಿದೆ ಎಂದು ಗಂಭೀರ ಆರೋಪಗಳು ಕೇಳಿಬಂದಿದ್ದವು. ಅನೇಕ ಹಿರಿಯ ಸಾಹಿತಿಗಳು ಪಠ್ಯದಿಂದ ತಮ್ಮ ಪಾಠ, ಪದ್ಯಗಳನ್ನು ಕೈಬಿಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದರು.

  • ದೌರ್ಜನ್ಯದಿಂದ ಮೃತಪಟ್ಟ ಎಸ್ಸಿ-ಎಸ್ಟಿ ಕುಟುಂಬ ಸದಸ್ಯರಿಗೂ ಇನ್ಮುಂದೆ ಸರ್ಕಾರಿ ನೌಕರಿ

    ದೌರ್ಜನ್ಯದಿಂದ ಮೃತಪಟ್ಟ ಎಸ್ಸಿ-ಎಸ್ಟಿ ಕುಟುಂಬ ಸದಸ್ಯರಿಗೂ ಇನ್ಮುಂದೆ ಸರ್ಕಾರಿ ನೌಕರಿ

    ಬೆಂಗಳೂರು: ಇನ್ಮುಂದೆ ದೌರ್ಜನ್ಯದಿಂದ ಮೃತಪಟ್ಟ ಎಸ್ಸಿ-ಎಸ್ಟಿಗೆ ಸೇರಿದ ಕುಟುಂಬ ಸದಸ್ಯರಿಗೂ ಸರ್ಕಾರಿ ನೌಕರಿ ನೀಡುವಂತೆ ರಾಜ್ಯ ಸರ್ಕಾರ ಮಹತ್ವದ ಆದೇಶ ನೀಡಿದೆ.

    PRSS RELEASE

    ಇತ್ತೀಚೆಗಷ್ಟೇ ಕ್ಯಾಬಿನೆಟ್ ನಲ್ಲಿ ಅನುಮೋದನೆ ಪಡೆದಿದ್ದ ನಿಯಮವನ್ನು ಅನುಷ್ಠಾನಗೊಳಿಸುವಂತೆ ಆದೇಶಿಸಿದೆ. ಇದನ್ನೂ ಓದಿ: ಸುನೀಲ್ ಸಂಕ್, ಪ್ರಕಾಶ್ ಹುಕ್ಕೇರಿ ಗೆಲ್ಲುವ ವಿಶ್ವಾಸವಿದೆ: ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ

    ಮೃತರ ಕುಟುಂಬದ ಸದಸ್ಯರೊಬ್ಬರಿಗೆ ಅನುಕಂಪ ಆಧಾರದಲ್ಲಿ ಉದ್ಯೋಗ ನೀಡುವಂತೆ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಇದನ್ನೂ ಓದಿ: ಕ್ರಿಕೆಟ್ ಬ್ಯಾಟ್‍ನಿಂದ ಹೊಡೆದ ಪತ್ನಿ – ಕೋರ್ಟ್ ಮೊರೆ ಹೋದ ಪತಿ

  • ಜನರ ದುಡ್ಡಲ್ಲಿ ಜನಪ್ರತಿನಿಧಿಗಳ ಜಾತ್ರೆ – ಕಡಿಮೆ ದರದ ಪ್ಲಾನ್ ಇದ್ದರೂ ಸಾವಿರಾರು ರೂ. ಫೋನ್ ಬಿಲ್!

    ಜನರ ದುಡ್ಡಲ್ಲಿ ಜನಪ್ರತಿನಿಧಿಗಳ ಜಾತ್ರೆ – ಕಡಿಮೆ ದರದ ಪ್ಲಾನ್ ಇದ್ದರೂ ಸಾವಿರಾರು ರೂ. ಫೋನ್ ಬಿಲ್!

    ಬೆಂಗಳೂರು: ಕಡಿಮೆ ಬೆಲೆಗೆ ಡಾಟಾ ಪ್ಯಾಕ್, ಅನ್‌ಲಿಮಿಟೆಡ್ ಕಾಲ್, ಮೆಸೇಜ್ ಪ್ಯಾಕ್ ಇದ್ರೂ, ಹೆಚ್ಚು ಖರ್ಚಿನ ಫೋನ್ ಬಿಲ್ ತೋರಿಸಿ ಶಾಸಕರು ಹಣ ವಸೂಲಿಗೆ ನಿಂತಿದ್ದಾರೆ. ಜನರ ತೆರಿಗೆ ಹಣವನ್ನು ನುಂಗಿ ನೀರು ಕುಡಿಯುತ್ತಿದ್ದಾರೆ.

    ಶಾಸಕರ ಮನೆ, ಕಾರು, ಫೋನ್ ಎಲ್ಲದ್ದಕ್ಕೂ ಜನರ ತೆರಿಗೆ ಹಣವೇ ಬೇಕು. ಜನರ ಹಣವನ್ನು ಶಾಸಕರು ಬೇಕಾಬಿಟ್ಟಿ ಖರ್ಚು ಮಾಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಪ್ರತಿ ತಿಂಗಳು ಲಕ್ಷ ಲಕ್ಷ ವೇತನ, ಭತ್ಯೆ ಪಡೆಯುತ್ತಾರೆ. ತಿಂಗಳಿಗೆ ಒಬ್ಬ ಶಾಸಕನಿಗೆ ಬರೋಬ್ಬರಿ 2.05 ಲಕ್ಷ ವೇತನ ಭತ್ಯೆ ಸಿಗುತ್ತದೆ. ಆದರೂ ಅನಗತ್ಯ ಖರ್ಚಿನ ಮೂಲಕ ತೆರಿಗೆ ಹಣವನ್ನು ಪೋಲು ಮಾಡುತ್ತಿದ್ದಾರೆ. ಇದನ್ನೂ ಓದಿ: ಎಸ್‍ಬಿಐನಲ್ಲಿ 10 ಸಾವಿರಕ್ಕೂ ಹೆಚ್ಚು ಹಣ ಡ್ರಾ ಮಾಡಲು OTP ಅಪ್ಲೈ

    VIDHAN SHOUDHA

    ಶಾಸಕರು ತಿಂಗಳಿಗೆ ದೂರವಾಣಿ ವೆಚ್ಚವಾಗಿ 20 ಸಾವಿರ ಪಡೆಯುತ್ತಿದ್ದಾರೆ. ಉಚಿತ ಕರೆ, ಕಡಿಮೆ ಬೆಲೆಗೆ ಡಾಟಾ ಸಿಕ್ಕರೂ ದೂರವಾಣಿ ವೆಚ್ಚ ಅಂತ ವರ್ಷಕ್ಕೆ 2.40 ಲಕ್ಷ ಪಡೆಯುತ್ತಿದ್ದಾರೆ. ವರ್ಷಕ್ಕೆ 2-3 ಸಾವಿರ ಖರ್ಚು ಮಾಡಿದರೆ ಉಚಿತ ಕರೆ, ಡಾಟಾ ಪ್ಯಾಕ್, ಮೆಸೇಜ್ ಪ್ಯಾಕ್ ಸಿಗುತ್ತೆ. ಹೀಗಿರುವಾಗ ತಿಂಗಳಿಗೆ 20 ಸಾವಿರ ಲೆಕ್ಕ ಕೊಟ್ಟು ಹಣ ಪಡೆಯುತ್ತಿರುವುದು ಎಷ್ಟು ಸರಿ ಎಂದು ಜನ ಸಾಮನ್ಯರು ಪ್ರಶ್ನೆ ಮಾಡುತ್ತಿದ್ದಾರೆ.

    ಟೆಲಿಫೋನ್ ಬಿಲ್‌ನಲ್ಲಿ ನಮ್ಮ ಶಾಸಕರು ಶ್ರೀಮಂತರಾಗಿದ್ದಾರೆ. 3ಜಿ, 4ಜಿ, ಉಚಿತ ಕರೆಗಳ ಪ್ಲ್ಯಾನ್ ಬಂದ್ರೂ ಫೋನ್ ಬಿಲ್ ಹೆಸರಲ್ಲಿ ಸಾವಿರಾರು ರೂಪಾಯಿ ವಸೂಲಿ ಮಾಡುತ್ತಿದ್ದಾರೆ. ತಿಂಗಳಿಗೆ ದೂರವಾಣಿ ವೆಚ್ಚ 20 ಸಾವಿರ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಕೆನಡಾ ಸಂಸತ್ತಿನಲ್ಲಿ ಕನ್ನಡದಲ್ಲೇ ಮಾತನಾಡಿದ ಕನ್ನಡಿಗ ಸಂಸದ ಚಂದ್ರ ಆರ್ಯ

    ಶಾಸಕರು ತಿಂಗಳಿಗೆ ಪಡೆಯುತ್ತಿರುವ ವೇತನ ಮತ್ತು ಭತ್ಯೆ ವಿವರ ಹೀಗಿದೆ. ವೇತನ 40,000 ರೂ. ಹಾಗೂ ಕ್ಷೇತ್ರ ಭತ್ಯೆ- 60,000 ರೂ., ಚುನಾವಣೆ ಕ್ಷೇತ್ರದ ಪ್ರಯಾಣ ಭತ್ಯೆ- 60,000, ಆಪ್ತ ಸಹಾಯ ಮತ್ತು ಕೊಠಡಿ ಸೇವಕನ ವೇತನ- 20,000 ರೂ., ಅಂಚೆ ವೆಚ್ಚ- 5,000 ರೂ. ಪಡೆಯುತ್ತಿದ್ದಾರೆ. ದೂರವಾಣಿ ವೆಚ್ಚ- 20,000 ರೂ., ಒಟ್ಟು ಮೊತ್ತ- 2,05,000 ರೂ. ತೆಗೆದುಕೊಳ್ಳುತ್ತಿದ್ದಾರೆ.

    ವರ್ಷಕ್ಕೆ ಯಾವ ಯಾವ ಕಂಪನಿಯ ಪ್ಲ್ಯಾನ್‌ಗಳು ಹೇಗಿವೆ. ಇಲ್ಲಿದೆ ನೋಡಿ ವಿವರ.
    ಏರ್‌ಟೆಲ್ – 3,359 ರೂ.
    * ವ್ಯಾಲಿಡಿಟಿ ಒಂದು ವರ್ಷ
    * ಅನ್ ಲಿಮಿಟೆಡ್ ಲೋಕಲ್, ಎಸ್‌ಟಿಡಿ ಕಾಲ್
    * ದಿನಕ್ಕೆ 2.5 ಜಿಬಿ ಹೈ ಸ್ಪೀಡ್ 4ಜಿ ಡಾಟಾ
    * ದಿನಕ್ಕೆ 100 ಎಸ್.ಎಂ.ಎಸ್. ಫ್ರೀ

    ಜಿಯೋ ನೆಟ್‌ವರ್ಕ್ – 4,199 ರೂ.
    * ವ್ಯಾಲಿಡಿಟಿ ಒಂದು ವರ್ಷ.
    * ಅನ್ ಲಿಮಿಟೆಡ್ ಲೋಕಲ್, ಎಸ್‌ಟಿಡಿ ಕಾಲ್
    * ದಿನಕ್ಕೆ 3 ಜಿಬಿ ಹೈ ಸ್ಪೀಡ್ 4ಜಿ ಡಾಟಾ
    * ದಿನಕ್ಕೆ 100 ಎಸ್.ಎಂ.ಎಸ್. ಫ್ರೀ
    * ಹಾಟ್ ಸ್ಟಾರ್ ಉಚಿತ ಸಬ್‌ಸ್ಕ್ರೈಬ್

    ಐಡಿಯಾ-ವೋಡೋಫೋನ್ – 3,099 ರೂ.
    * ವ್ಯಾಲಿಡಿಟಿ ಒಂದು ವರ್ಷ
    * ಅನ್ ಲಿಮಿಟೆಡ್ ಲೋಕಲ್, ಎಸ್‌ಟಿಡಿ ಕಾಲ್
    * ದಿನಕ್ಕೆ 2 ಜಿಬಿ ಹೈ ಸ್ಪೀಡ್ 4ಜಿ ಡಾಟಾ
    * ದಿನಕ್ಕೆ 100 ಎಸ್.ಎಂ.ಎಸ್. ಫ್ರೀ
    * ಹಾಟ್ ಸ್ಟಾರ್ ಉಚಿತ ಸಬ್‌ಸ್ಕ್ರೈಬ್‌

    ಬಿ.ಎಸ್.ಎನ್.ಎಲ್ – 2,999 ರೂ.
    * 455 ದಿನ ವ್ಯಾಲಿಡಿಟಿ
    * ಅನ್ ಲಿಮಿಟೆಡ್ ಲೋಕಲ್, ಎಸ್‌ಟಿಡಿ ಕಾಲ್
    * ದಿನಕ್ಕೆ 3 ಜಿಬಿ ಹೈ ಸ್ಪೀಡ್ 3ಜಿ ಡಾಟಾ
    * ದಿನಕ್ಕೆ 100 ಎಸ್.ಎಂ.ಎಸ್. ಫ್ರೀ

  • ಸರ್ಕಾರಕ್ಕೆ ಸವಾಲು ಹಾಕುತ್ತೇನೆ, ತಾಕತ್ತಿದ್ರೆ ನನ್ನನ್ನು ಅರೆಸ್ಟ್ ಮಾಡಲಿ: ಪ್ರಿಯಾಂಕ್ ಖರ್ಗೆ

    ಸರ್ಕಾರಕ್ಕೆ ಸವಾಲು ಹಾಕುತ್ತೇನೆ, ತಾಕತ್ತಿದ್ರೆ ನನ್ನನ್ನು ಅರೆಸ್ಟ್ ಮಾಡಲಿ: ಪ್ರಿಯಾಂಕ್ ಖರ್ಗೆ

    ಬೆಂಗಳೂರು: ಸರ್ಕಾರಕ್ಕೆ ತಾಕತ್ತಿದ್ದರೆ ಪಿಎಸ್‌ಐ ಅಕ್ರಮ ಪ್ರಕರಣದಲ್ಲಿ ನನ್ನನ್ನು ಬಂಧಿಸಲಿ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ.

    ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, ನನಗೆ ಸಿಐಡಿಯಿಂದ ಮೂರನೆ ನೋಟಿಸ್ ಬಂದಿದೆ. ಇದು ಹಾಸ್ಯಾಸ್ಪದವಾಗಿದೆ. ಮೂರಲ್ಲ ನೂರು ನೋಟಿಸ್ ಕೊಟ್ಟರೂ ನಾನು ಹೆದರಲ್ಲ. ಸರ್ಕಾರಕ್ಕೆ ನನ್ನ ಬಗ್ಗೆ ಇರುವ ಆಸಕ್ತಿಯನ್ನು ತನಿಖೆ ಬಗ್ಗೆ ತೋರಿಸಿದರೆ ಇನ್ನಷ್ಟು ಸತ್ಯ ಹೊರ ಬರಲಿದೆ. ಸರ್ಕಾರಕ್ಕೆ ತಾಕತ್ತಿದ್ದರೆ ನನ್ನನ್ನು ಅರೆಸ್ಟ್ ಮಾಡಲಿ ಎಂದು ಗುಡುಗಿದ್ದಾರೆ. ಇದನ್ನೂ ಓದಿ: ಗೌರವ್‌ ಗುಪ್ತ ಎತ್ತಂಗಡಿ – ತುಷಾರ್ ಗಿರಿನಾಥ್ ಬಿಬಿಎಂಪಿ ಮುಖ್ಯ ಆಯುಕ್ತರಾಗಿ ವರ್ಗ

    ನಿಯಮ 91 ರ ಅಡಿಯಲ್ಲಿ ನನಗೆ ನೋಟಿಸ್ ಕೊಟ್ಟಿದ್ದರು. ಅದಕ್ಕೆ ಸೂಕ್ತವಾದ ದಾಖಲೆಯನ್ನು ನಾನು ಕೊಟ್ಟಿದ್ದೇನೆ. ಬಿಜೆಪಿ ನಾಯಕರು ಮೊದಲು ಸೆಕ್ಷನ್ 91 ಅಂದರೆ ಏನು ಅಂತ ತಿಳಿದುಕೊಳ್ಳುವುದು ಒಳ್ಳೆಯದು. ಈಗ ಏನು ಮಾಡಬೇಕು ಅನ್ನೋದನ್ನು ನಮ್ಮ ಪಕ್ಷದ ವರಿಷ್ಠರ ಜೊತೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇನೆ‌. ಸರ್ಕಾರದ ಈ ನೋಟಿಸ್‌ಗೆಲ್ಲ ಹೆದರಲ್ಲ. ಅವರ ಪಕ್ಷದ ಸಚಿವರು ಹಾಗೂ ಪರಿಷತ್ ಸದಸ್ಯರು ಮೊದಲೇ ಪತ್ರ ಬರೆದಿದ್ದರು. ಅವರಿಗೆ ಯಾಕೆ ನೋಟಿಸ್ ಕೊಟ್ಟಿಲ್ಲ ಎಂದು ಪ್ರಶ್ನಿಸಿದ್ದಾರೆ.

    ಬಳಿಕ ಕೆಪಿಸಿಸಿ‌ ಅಧ್ಯಕ್ಷ‌ ಡಿ.ಕೆ.ಶಿವಕುಮಾರ್ ಭೇಟಿ ಮಾಡಿದ ಶಾಸಕ ಪ್ರಿಯಾಂಕ್ ಖರ್ಗೆ‌, ಸಿಐಡಿ ಮೂರನೆ ನೋಟಿಸ್ ನೀಡಿದ ಬಗ್ಗೆ ಚರ್ಚೆ ನಡೆಸಿದ್ದಾರೆ. ಸಿಐಡಿ ನೋಟಿಸ್‌ಗೆ ಖುದ್ದು ಹಾಜರಾಗಬೇಕೆ ಅಥವಾ ಬೇಡವೆ ಎಂಬುದರ ಬಗ್ಗೆ ಡಿಕೆಶಿ ಜೊತೆ ಚರ್ಚೆ ನಡೆಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಈಗ ಒಡೆದ ಮನೆ ಒಂದಷ್ಟು ಬಣ ವಲಸೆರಾಮಯ್ಯರಿಗೆ ಜೈಕಾರ ಹಾಕುತ್ತಿದೆ: ಬಿಜೆಪಿ ವ್ಯಂಗ್ಯ

    ಆನಂತರ ಮಾತನಾಡಿದ ಅವರು, ಪಕ್ಷದ ಅಧ್ಯಕ್ಷರ ಜೊತೆ ನೋಟಿಸ್ ಬಗ್ಗೆ ಮಾತನಾಡಿದ್ದೇನೆ. ಸಿಎಲ್‌ಪಿ ನಾಯಕರ ಜೊತೆಯೂ ಮಾತನಾಡುತ್ತೇನೆ. ಕಾನೂನು ಪ್ರಕಾರ ಹೇಗೆ ನಡೆದುಕೊಳ್ಳಬೇಕೋ ಹಾಗೆ ನಡೆದುಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.

  • ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ – ಮರುಪರೀಕ್ಷೆಗೆ ಸರ್ಕಾರ ತೀರ್ಮಾನ

    ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ – ಮರುಪರೀಕ್ಷೆಗೆ ಸರ್ಕಾರ ತೀರ್ಮಾನ

    ಬೆಂಗಳೂರು: 545 ಪಿಎಸ್‌ಐ ಹುದ್ದೆಗಳ ಅಕ್ರಮ ನೇಮಕಾತಿಗೆ ಸಂಬಂಧಿಸಿದಂತೆ ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡಿದ್ದು, ಈ ಸಂಬಂಧ ನಡೆಸಲಾಗಿದ್ದ ಪರೀಕ್ಷೆಯನ್ನು ರದ್ದುಗೊಳಿಸಿ ಮರು ಪರೀಕ್ಷೆ ನಡೆಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

    ವಿಕಾಸಸೌಧದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಆರಗ ಜ್ಞಾನೇಂದ್ರ, ಈ ಹಿಂದೆ ಪರೀಕ್ಷೆ ಬರೆದಿದ್ದ ಎಲ್ಲಾ 54,289 ಪರೀಕ್ಷಾರ್ಥಿಗಳು ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ಪಡೆಯಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಉತ್ತರ ಪತ್ರಿಕೆ ಬಂದೋಬಸ್ತ್‌ನಲ್ಲಿದ್ದ ಪೊಲೀಸ್ ಸಿಬ್ಬಂದಿ ಆತ್ಮಹತ್ಯೆ

    ಇದೇ ವೇಳೆ, ಸಿಐಡಿಯಿಂದ ಬಂಧಿತರಾದ ಅಭ್ಯರ್ಥಿಗಳನ್ನು ಮರು ಪರೀಕ್ಷೆಯಿಂದ ಹೊರಗಿಡಲಾಗುವುದು. ಮರು ಪರೀಕ್ಷೆಯ ದಿನಾಂಕವನ್ನು ಶೀಘ್ರದಲ್ಲೇ ನಿಗದಿಗೊಳಿಸಲಾಗುವುದು ಎಂದು ಗೃಹ ಸಚಿವರು ತಿಳಿಸಿದ್ದಾರೆ.

    ಮರು ಪರೀಕ್ಷೆ ನಿರ್ಧಾರದಿಂದ, ಅಕ್ರಮವಾಗಿ ನೇಮಕಾತಿ ಪಡೆದವರ ಜಾಗಕ್ಕೆ ಪ್ರತಿಭಾವಂತ ಹಾಗೂ ಪ್ರಾಮಾಣಿಕ ಅಭ್ಯರ್ಥಿಗಳಿಗೆ ಅವಕಾಶ ದೊರಕಲಿದೆ. ಪರೀಕ್ಷಾ ಅಕ್ರಮಗಳು ಒಂದಕ್ಕಿಂತ ಹೆಚ್ಚು ಕೇಂದ್ರಗಳಲ್ಲಿ ನಡೆದಿದೆ ಎಂಬ ಬಗ್ಗೆಯೂ ಅನುಮಾನಗಳಿದ್ದು, ಮರು ಪರೀಕ್ಷೆ ನಡೆಸುವ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಅಮಿತ್ ಶಾ, ಬೊಮ್ಮಾಯಿ ಜೊತೆ ಸಂಪುಟ ಪುನಾರಚನೆ, ಸಮಾಲೋಚನೆ

    ಮುಂದಿನ ದಿನಗಳಲ್ಲಿ ಇಂಥಹ ಅಕ್ರಮಗಳು ನಡೆಯದಂತೆ ತಡೆಯಲು ಕಠಿಣ ಕಾನೂನುಗಳನ್ನು ಜಾರಿಗೆ ತರುವ ಬಗ್ಗೆಯೂ ಅಲೋಚಿಸಲಾಗುವುದು ಎಂದಿದ್ದಾರೆ. ಮಾಧ್ಯಮಗೋಷ್ಠಿಯಲ್ಲಿ ರಾಜ್ಯ ಪೊಲೀಸ್ ಇಲಾಖೆ ಮುಖ್ಯಸ್ಥ ಪ್ರವೀಣ್ ಸೂದ್ ಹಾಗೂ ರಾಜ್ಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರು ಉಪಸ್ಥಿತರಿದ್ದರು.

    ಆದರೆ ಸರ್ಕಾರದ ಈ ಕ್ರಮಕ್ಕೆ ಕೆಲ ಅಭ್ಯರ್ಥಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ನಾನು ಪ್ರಮಾಣಿಕವಾಗಿ ಪರೀಕ್ಷೆ ಬರೆದು ಆಯ್ಕೆಯಾಗಿದ್ದೇವೆ. ಪರೀಕ್ಷೆಗಾಗಿ ತುಂಬಾ ಶ್ರಮವಹಿಸಿದ್ದೇವೆ. ಯಾರೋ ಮಾಡಿದ ತಪ್ಪಿಗೆ ನಾವೂ ಶಿಕ್ಷೆ ಅನುಭವಿಸುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

  • ಕೊರೊನಾ 4ನೇ ಅಲೆ ಕಂಟ್ರೋಲ್‌ಗೆ ತಜ್ಞರ ವರದಿ ಕೇಳಿದ ಸರ್ಕಾರ

    ಕೊರೊನಾ 4ನೇ ಅಲೆ ಕಂಟ್ರೋಲ್‌ಗೆ ತಜ್ಞರ ವರದಿ ಕೇಳಿದ ಸರ್ಕಾರ

    ಬೆಂಗಳೂರು: ಕೊರೊನಾ 4ನೇ ಅಲೆಯ ಭೀತಿ ರಾಜ್ಯದಲ್ಲಿ ಪ್ರಾರಂಭವಾಗಿದೆ. ನಿಧಾನಗತಿಯಲ್ಲಿ ಕೊರೊನಾ ಕೇಸ್ ಹೆಚ್ಚಳ ಆಗುತ್ತಿದೆ. ಕೊರೊನಾ 4ನೇ ಅಲೆಯ ಭೀತಿಯ ಹಿನ್ನೆಲೆಯಲ್ಲಿ ಎಚ್ಚೆತ್ತಿರುವ ಸರ್ಕಾರ, ನಾಲ್ಕನೇ ಅಲೆ ತಡೆಗೆ ತಾಂತ್ರಿಕ ಸಲಹಾ ಸಮಿತಿಯಿಂದ ವರದಿ ನೀಡುವಂತೆ ಸೂಚನೆ ನೀಡಿದೆ.

    ನಿನ್ನೆಯಷ್ಟೆ ದೇಶದ ಪ್ರಧಾನಿ ನರೇಂದ್ರ ಮೋದಿಯವರ ಜೊತೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆದಿತ್ತು. ಸಭೆಯಲ್ಲಿ ಅನಗತ್ಯವಾಗಿ ಯಾವುದೇ ನಿರ್ಬಂಧ ಹಾಕಬೇಡಿ ಅಂತ ಪ್ರಧಾನಿಗಳು ಸೂಚನೆ ನೀಡಿದ್ದರು. ಟೆಸ್ಟಿಂಗ್, ಟ್ರೇಸಿಂಗ್, ಟ್ರಿಟ್‌ಮೆಂಟ್ ಸೂತ್ರ ಅನುಷ್ಠಾನ ಮಾಡಿ ಅಂತ ಸಲಹೆ ಕೊಟ್ಟಿದ್ದರು. ಪ್ರಧಾನಿಗಳ ಸಲಹೆ ಮೇರೆಗೆ ರಾಜ್ಯ ಸರ್ಕಾರವೂ ಕೂಡಾ ಯಾವುದೇ ಟಫ್ ರೂಲ್ಸ್ ಜಾರಿ ಮಾಡದೇ ಕೆಲವೊಂದು ನಿರ್ಧಾರಗಳನ್ನ ಮಾತ್ರ ಘೋಷಣೆ ಮಾಡಿದೆ. ಇದನ್ನೂ ಓದಿ: 24 ಗಂಟೆಯಲ್ಲಿ 3,303 ಮಂದಿಗೆ ಸೋಂಕು – ಹೆಚ್ಚಿದ ಪಾಸಿಟಿವಿಟಿ ದರ

    VIDHAN SHOUDHA

    ಮಾಸ್ಕ್ ಕಡ್ಡಾಯ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಕೆಲ ಪ್ರಾರಂಭಿಕ ನಿಯಮಗಳನ್ನು ಸರ್ಕಾರ ಜಾರಿ ಮಾಡಿದೆ. ಅದನ್ನ ಹೊರತುಪಡಿಸಿ ಕೆಲವು ಕ್ರಮಗಳನ್ನು ಸರ್ಕಾರ ಜಾರಿ ಮಾಡಿದೆ.

    ರಾಜ್ಯದಲ್ಲಿ ಜೂನ್ ವೇಳೆಗೆ 4ನೇ ಅಲೆ ಬರುವ ನಿರೀಕ್ಷೆ ಇದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಸರ್ಕಾರ ಸಿದ್ದವಾಗಿದೆ. ಈ ಹಿನ್ನೆಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ವರದಿ ನೀಡುವಂತೆ ತಾಂತ್ರಿಕ ಸಲಹಾ ಸಮಿತಿಗೆ ಸರ್ಕಾರ ಸೂಚನೆ ನೀಡಿದೆ. ರಾಜ್ಯಕ್ಕೆ 4ನೇ ಅಲೆ ವೈಜ್ಞಾನಿಕವಾಗಿ ಯಾವಾಗ ಪ್ರಾರಂಭ ಆಗಬಹುದು. ನಾಲ್ಕನೇ ಅಲೆ ಅಂತ್ಯ ಯಾವಾಗ ಆಗಬಹುದು? ಅನ್ನೋ ಮಾಹಿತಿ ನೀಡಲು ತಜ್ಞರಿಗೆ ಮನವಿ ಮಾಡಲಾಗಿದೆ. 4ನೇ ಅಲೆಯ ತೀವ್ರತೆ ಹೇಗೆ ಇರಲಿದೆ? ಬೇರೆ ಬೇರೆ ದೇಶಗಳು, ರಾಜ್ಯಗಳ ವರದಿ ಪರಾಮರ್ಶಿಸಿ ವರದಿ ನೀಡುವಂತೆ ಸರ್ಕಾರ ಸೂಚನೆ ನೀಡಿದೆ. ಇದನ್ನೂ ಓದಿ: ಬೇಸಿಗೆಯಲ್ಲಿ ಕುಡಿಯಲು ಮಾತ್ರ ನೀರು ಕೊಡ್ತೀವಿ, ಬೆಳೆಗಳಿಗೆ ಕೊಡಲು ಆಗಲ್ಲ: ಗೋವಿಂದ್ ಕಾರಜೋಳ

    COVID HIKE 2

    4ನೇ ಅಲೆ ನಿಯಂತ್ರಣಕ್ಕೆ ಪ್ರಾರಂಭಿಕ ಹಂತಗಳಲ್ಲಿ ಯಾವ ನಿಯಮಗಳನ್ನ ಅನುಷ್ಠಾನ ಮಾಡಬೇಕು. ಸಾವು-ನೋವು, ಕೋವಿಡ್ ಹರಡುವಿಕೆಯ ವೇಗ, ಚಿಕಿತ್ಸಾ ವಿಧಾನಗಳ ಬಗ್ಗೆ ವರದಿ ನೀಡುವಂತೆ ಸೂಚನೆ ನೀಡಲಾಗಿದೆ. 4ನೇ ಅಲೆ ಯಾವ ವಯೋಮಾನದವರ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ. ಅದನ್ನ ನಿಯಂತ್ರಣ ಮಾಡೋದು ಹೇಗೆ? ಅಂತರರಾಜ್ಯ ಗಡಿಗಳು, ಅಂತರರಾಷ್ಟ್ರೀಯ ಪ್ರಯಾಣಿಕರಿಗೆ ಯಾವ ನಿಯಮ ಜಾರಿ ಮಾಡಬೇಕು. ಬೆಂಗಳೂರಿನಲ್ಲಿ ಕೊರೊ‌ನಾ ಹಾಟ್‌ಸ್ಪಾಟ್ ತಡೆಗೆ ಯಾವ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಜಿಲ್ಲೆಗಳಲ್ಲಿ ಕೊರೊನಾ ನಿಯಂತ್ರಣಕ್ಕೆ ಮೊದಲ ಹಂತದ ನಿಯಮಗಳು ಹೇಗೆ ಜಾರಿ ಮಾಡಬೇಕು. ಮಾಲ್, ಮಾರುಕಟ್ಟೆ, ಸಮಾರಂಭಗಳು, ಜಾತ್ರೆ, ಹಬ್ಬಗಳು, ಪ್ರಾರ್ಥನಾ ಮಂದಿರಗಳು, ಸಿನಿಮಾ ಹಾಲ್‌ಗಳು, ಕ್ರೀಡಾ ಸಂಕೀರ್ಣಗಳಲ್ಲಿ ಯಾವ ನಿಯಮ ಜಾರಿ ಮಾಡಬೇಕು ಅನ್ನೋ ಮಾಹಿತಿಯನ್ನು ಸರ್ಕಾರ ಕೇಳಿದೆ.

    ಹೊಟೇಲ್, ಬಾರ್, ಪಬ್, ದೇವಾಲಯ, ಮಸೀದಿ, ಚರ್ಚ್, ಪ್ರಾರ್ಥನಾ ಮಂದಿರಗಳಿಗೆ ಯಾವ ನಿಯಮ ಜಾರಿ ಮಾಡಬೇಕು. ಸಾರ್ವಜನಿಕ ಸಾರಿಗೆಗಳಲ್ಲಿ ಯಾವ ನಿಯಮಗಳು ಜಾರಿ ಮಾಡಬೇಕು ಅನ್ನೋ ಮಾಹಿತಿ. ಶಾಲಾ-ಕಾಲೇಜುಗಳಲ್ಲಿ ಕೊರೊನಾ ಕಂಟ್ರೋಲ್‌ಗೆ ಯಾವ ನಿಯಮ ಅನುಷ್ಠಾನ ಮಾಡಬೇಕು ಅನ್ನೋ ವರದಿ ಕೊಡುವಂತೆ ತಜ್ಞರಿಗೆ ಸರ್ಕಾರದ ಸೂಚನೆ‌ ನೀಡಿದೆ.