Tag: Karnataka Government

  • ಈಶ್ವರಪ್ಪ ರಾಜೀನಾಮೆ ಪಡೆದು ತಿಪ್ಪೆ ಸಾರಿಸುವುದಲ್ಲ, ಬಂಧಿಸಿ ಜೈಲಿಗಟ್ಟಬೇಕು: ಕಾಂಗ್ರೆಸ್‌

    ಈಶ್ವರಪ್ಪ ರಾಜೀನಾಮೆ ಪಡೆದು ತಿಪ್ಪೆ ಸಾರಿಸುವುದಲ್ಲ, ಬಂಧಿಸಿ ಜೈಲಿಗಟ್ಟಬೇಕು: ಕಾಂಗ್ರೆಸ್‌

    ಬೆಂಗಳೂರು: ಬರೀ ಈಶ್ವರಪ್ಪನವರ ರಾಜೀನಾಮೆ ಪಡೆದು ತಿಪ್ಪೆ ಸಾರಿಸುವುದಲ್ಲ, ಬಂಧಿಸಿ ಜೈಲಿಗಟ್ಟಬೇಕು ಎಂದು ಸರ್ಕಾರವನ್ನು ರಾಜ್ಯ ಕಾಂಗ್ರೆಸ್‌ ಒತ್ತಾಯಿಸಿದೆ.

    ಈಶ್ವರಪ್ಪ ವಿರುದ್ಧ ಸರಣಿ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ಈಶ್ವರಪ್ಪ ಅವರನ್ನು ಜೈಲಿಗಟ್ಟಬೇಕು. ಭ್ರಷ್ಟಾಚಾರ ನಿಗ್ರಹದ ಪ್ರಕರಣ ದಾಖಲಾಗಬೇಕು. ಇದ್ಯಾವುದನ್ನೂ ಮಾಡದೆ ಸರ್ಕಾರ ರಕ್ಷಣೆಗೆ ನಿಂತರೆ ಹಿಂದೂ ಕಾರ್ಯಕರ್ತ ಸಂತೋಷ್ ಪಾಟೀಲ್‌ಗೆ ಅವಮಾನಿಸಿದಂತೆ. ದೇಶದ ಕಾನೂನಿನ ಮೇಲಿನ ಜನರ ನಂಬಿಕೆಯನ್ನು ಅಪಹಾಸ್ಯ ಮಾಡಿದಂತಾಗುತ್ತದೆ ಎಂದು ಎಚ್ಚರಿಸಿದೆ.

    ಟ್ವೀಟ್‌ನಲ್ಲೇನಿದೆ?
    ಮೊನ್ನೆ, ನೂರಕ್ಕೆ ನೂರು ರಾಜೀನಾಮೆ ಕೊಡುವುದಿಲ್ಲ. ನಿನ್ನೆ, ರಾಜೀನಾಮೆ ನೀಡುತ್ತೇನೆ ಎಂಬುದು ಈಶ್ವರಪ್ಪ ಅವರ ಸದಾರಮೆ ನಾಟಕದ ಡೈಲಾಗ್‌ಗಳು. ಕೇವಲ ರಾಜೀನಾಮೆಯ ಮೂಲಕ ಪ್ರಕರಣವನ್ನು ತಿಳಿಗೊಳಿಸುವ ಹುನ್ನಾರವಿದು. ರಾಜೀನಾಮೆಯಷ್ಟೇ ಸಾಲದು ಭ್ರಷ್ಟಾಚಾರ, ಕೊಲೆ ಎರಡೂ ಪ್ರಕರಣಗಳಲ್ಲಿ ಬಂಧನವಾಗಲೇಬೇಕು.

    ಸಂತೋಷ್ ಮಾಡಿದ ಕಾಮಗಾರಿಗೆ ಕಾರ್ಯಾದೇಶವೇ ಇರಲಿಲ್ಲ, ಸರ್ಕಾರಕ್ಕೂ ಕಾಮಗಾರಿಗೂ ಸಂಬಂಧವೇ ಇಲ್ಲ ಎನ್ನುತ್ತಿದ್ದರು ಬಿಜೆಪಿಗರು. ಆದರೆ ಈಗ ಮುರುಗೇಶ್ ನಿರಾಣಿ ಸಂಪೂರ್ಣ ಮೊತ್ತವನ್ನು ಬಿಡುಗಡೆ ಮಾಡಿಸುತ್ತೇವೆ ಎನ್ನುವ ಮೂಲಕ ತಪ್ಪನ್ನು ಒಪ್ಪಿಕೊಳ್ಳತೊಡಗಿದ್ದಾರೆ. ಅಂದರೆ ಇಷ್ಟು ದಿನ ಈಶ್ವರಪ್ಪ ತಡೆಹಿಡಿದಿದ್ದರು ಎಂದಾಯಿತು.

    ರಾಜೀನಾಮೆ ಘೋಷಣೆ ಮಾಡಿ ಅಧಿಕೃತವಾಗಿ ನೀಡಲು ಸಾಕಷ್ಟು ಸಮಯ ತೆಗೆದುಕೊಂಡ ಈಶ್ವರಪ್ಪ ತರಾತುರಿಯಲ್ಲಿ 29 ಪಿಡಿಓಗಳನ್ನು ವರ್ಗಾವಣೆ ಮಾಡಿದ್ದಾರೆ. ಈ ತರಾತುರಿಯ ವರ್ಗಾವಣೆಯಲ್ಲಿ ಎಷ್ಟು ಪರ್ಸೆಂಟ್ ಹಗರಣವಿದೆ? ಇನ್ನುಳಿದ ಗುತ್ತಿಗೆದಾರರಿಂದ ಬಾಕಿಯಿದ್ದ 40 ಪರ್ಸೆಂಟ್‌ ವಸೂಲಿಗಾಗಿಯೇ ಇಷ್ಟು ಸಮಯ ತಗೆದುಕೊಂಡಿದ್ದಾ ಎಂದು ಸರ್ಕಾರವನ್ನು ಕಾಂಗ್ರೆಸ್‌ ಪ್ರಶ್ನಿಸಿದೆ.

     

  • ಹಿಜಬ್‌ ವಿಚಾರದಲ್ಲಿ ಕರ್ನಾಟಕ ಸರ್ಕಾರದ ನಡೆಗೆ ತೆಲಂಗಾಣ ಸಿಎಂ ಅಸಮಾಧಾನ

    ಹಿಜಬ್‌ ವಿಚಾರದಲ್ಲಿ ಕರ್ನಾಟಕ ಸರ್ಕಾರದ ನಡೆಗೆ ತೆಲಂಗಾಣ ಸಿಎಂ ಅಸಮಾಧಾನ

    ಹೈದರಾಬಾದ್: ಹಿಜಬ್‌ ವಿವಾದದಲ್ಲಿ ಕರ್ನಾಟಕ ಸರ್ಕಾರದ ನಡೆಗೆ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ರಾಜ್ಯ ವಿಧಾನಸಭೆಯಲ್ಲಿ ಹಿಜಬ್‌ ವಿವಾದ ಕುರಿತು ಮಾತನಾಡಿದ ಅವರು, ಯಾರು ಏನು ಧರಿಸುತ್ತಾರೆ ಎಂಬುದಕ್ಕೂ ಸರ್ಕಾರಕ್ಕೂ ಏನು ಸಂಬಂಧ? ಹಿಜಬ್ ವಿವಾದ ಏಕೆ? ವಾತಾವರಣ ಬಿಗಡಾಯಿಸುವಂತೆ ಏಕೆ ಮಾಡುತ್ತಿದ್ದೀರಿ ಎಂದು ಕರ್ನಾಟಕ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಮಹಿಳೆಯರು ಎಲ್ಲಿ, ಏನು ಬೇಕಾದರೂ ಧರಿಸಬಹುದು, ಆದರೆ…: ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ

    ಇತ್ತೀಚಿನ ದಿನಗಳಲ್ಲಿ ಕೇಂದ್ರ ಬಿಜೆಪಿ ಆಡಳಿತದ ಬಗ್ಗೆ ತೆಲಂಗಾಣ ಸಿಎಂ ವ್ಯಾಪಕ ಟೀಕೆಯನ್ನು ವ್ಯಕ್ತಪಡಿಸಿದ್ದಾರೆ. ಅಂತೆಯೇ ಕರ್ನಾಟಕ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧವೂ ಹರಿಹಾಯ್ದಿದ್ದಾರೆ. ಹಿಜಬ್‌ ವಿವಾದದಲ್ಲಿ ಕರ್ನಾಟಕ ಸರ್ಕಾರದ ನಡೆಗೆ ಬೇಸರ ವ್ಯಕ್ತಪಡಿಸಿದ್ದಾರೆ.

    ಶಿಕ್ಷಣ ಸಂಸ್ಥೆಯೊಂದರಲ್ಲಿ ಶುರುವಾರ ಹಿಜಬ್‌ ವಿವಾದ ಹೈಕೋರ್ಟ್‌ ಮೆಟ್ಟಿಲೇರಿತ್ತು. 11 ದಿನಗಳ ವಾದ-ಪ್ರತಿವಾದವನ್ನು ಆಲಿಸಿದ ಕರ್ನಾಟಕ ಹೈಕೋರ್ಟ್‌ ಇಂದು ತೀರ್ಪು ಪ್ರಕಟಿಸಿತು. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಬ್‌ ಧರಿಸುವಂತಿಲ್ಲ ಎಂದು ಕೋರ್ಟ್‌ ತೀರ್ಪು ನೀಡಿದೆ. ಕೋರ್ಟ್‌ ತೀರ್ಪಿನ ವಿಚಾರವಾಗಿ ಪರ-ವಿರೋಧದ ಚರ್ಚೆ ಹುಟ್ಟುಕೊಂಡಿದೆ. ಇದನ್ನೂ ಓದಿ: ಹಿಜಬ್ ವಿಚಾರವನ್ನ ಅನಗತ್ಯವಾಗಿ ವಿವಾದ ಮಾಡದೆ ಸ್ವಾಗತಿಸಬೇಕು: ಬಿಎಸ್‍ವೈ

  • ಉಕ್ರೇನ್‍ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ರಕ್ಷಣೆಗೆ ರಾಜ್ಯ ಸರ್ಕಾರದಿಂದ ವೆಬ್ ಪೋರ್ಟಲ್ ಪ್ರಾರಂಭ

    ಉಕ್ರೇನ್‍ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ರಕ್ಷಣೆಗೆ ರಾಜ್ಯ ಸರ್ಕಾರದಿಂದ ವೆಬ್ ಪೋರ್ಟಲ್ ಪ್ರಾರಂಭ

    ವಾಷಿಂಗ್ಟನ್: ರಷ್ಯಾ ದಾಳಿಯಿಂದ ನಲುಗಿರುವ ಉಕ್ರೇನ್‍ನಲ್ಲಿ ಕನ್ನಡಿಗರ ರಕ್ಷಣೆಗಾಗಿ ರಾಜ್ಯ ಸರ್ಕಾರ  ವೆಬ್ ಪೋರ್ಟಲ್ ಪ್ರಾರಂಭ ಮಾಡಿದೆ.

    ಉಕ್ರೇನ್‍ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಮಾಹಿತಿ ಸಂಗ್ರಹಕ್ಕೆ ಸರ್ಕಾರ ವೆಬ್ ಫೋರ್ಟಲ್ ಪ್ರಾರಂಭಿಸಿದೆ.  http://ukraine.karnataka.tech/stranded ಈ ವೆಬ್ ಪೋರ್ಟಲ್ ಮೂಲಕ ಮಾಹಿತಿಗಳನ್ನ ಅಪ್ ಲೋಡ್ ಮಾಡಬಹುದಾಗಿದೆ.

    ಉಕ್ರೇನ್‍ನಲ್ಲಿರುವ ಕನ್ನಡಿಗರ ರಕ್ಷಣೆ ವಿಚಾರವಾಗಿ ಮಾತನಾಡಿದ ನೋಡಲ್ ಅಧಿಕಾರಿ ಮನೋಜ್ ರಾಜನ್, ಸಿಎಂ ಸೂಚನೆ ಮೇರೆಗೆ ಕೇಂದ್ರ ಸರ್ಕಾರದ ಜೊತೆ ನಿರಂತರ ಸಂಪರ್ಕದಲ್ಲಿದ್ದೇವೆ. ನಿನ್ನೆ ರಾತ್ರಿಯಿಂದ ನಾವು ಕೆಲಸ ಮಾಡುತ್ತಿದ್ದೇವೆ. 27 ಜಿಲ್ಲೆಗಳ 281 ಕನ್ನಡಿಗರು ರಿಪೋರ್ಟ್ ಆಗಿದ್ದಾರೆ. ಅವರು ನಮಗೆ ಮಾಹಿತಿ ನೀಡಿದ್ದಾರೆ. ಆ ಮಾಹಿತಿಯನ್ನು ನಾವು ಕೇಂದ್ರ ಮತ್ತು ಉಕ್ರೇನ್ ರಾಯಭಾರಿ ಕಚೇರಿಗೂ ಮಾಹಿತಿ ನೀಡಿದ್ದೇವೆ ಎಂದಿದ್ದಾರೆ.

    ಬೆಳಗಿನ ಜಾವ 6 ಗಂಟೆಯಲ್ಲಿ ನಡೆದಿರೋ ದಾಳಿಯ ಕುರಿತಾಗಿ ವಿದ್ಯಾರ್ಥಿಗಳ ಮಾಹಿತಿ ಪಡೆಯಲು ಆ್ಯಪ್ ಪ್ರಾರಂಭ ಮಾಡಿದ್ದೇವೆ. ಈ ಆ್ಯಪ್‌ನಲ್ಲಿ ವಿದ್ಯಾರ್ಥಿಗಳು ಮಾಹಿತಿ ಕೊಡಬಹುದು. ವಿದ್ಯಾರ್ಥಿಗಳು ಮಾಹಿತಿ ಅಪ್ ಲೋಡಬೇಕು. ಮೊಬೈಲ್ ಆ್ಯಪ್‌ನಲ್ಲಿ ಮಾಹಿತಿ ಕೊಟ್ಟ ಬಳಿಕ ಅವರ ಮಾಹಿತಿ ಕೇಂದ್ರ ಸರ್ಕಾರ ಮತ್ತು ಉಕ್ರೇನ್ ರಾಯಭಾರಿ ಕಚೇರಿಗೆ ಕೊಡುತ್ತೇವೆ. ವಿದ್ಯಾರ್ಥಿಗಳ ರಕ್ಷಣೆಗಾಗಿ ನಾವು ಕ್ರಮವಹಿಸಿದ್ದೇವೆ. ಪೋಷಕರು ಆತಂಕ ಪಡುವುದು ಬೇಡ. ನಾವು ಎಲ್ಲಾ ರೀತಿಯ ಕ್ರಮ ತೆಗೆದುಕೊಂಡಿದ್ದೇವೆ. ವಿದ್ಯಾರ್ಥಿಗಳು ವೆಬ್ ಫೋರ್ಟ್‍ನಲ್ಲಿ ಸರಳವಾಗಿ ಮಾಹಿತಿ ನೀಡಲು ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ವೈದ್ಯ ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳು ಉಕ್ರೇನ್, ರಷ್ಯಾಗೇ ಹೆಚ್ಚಾಗಿ ಯಾಕೆ ಹೋಗ್ತಾರೆ ಗೊತ್ತಾ?

    ಈವರೆಗೆ 281 ಜನ ನಮಗೆ ಉಕ್ರೇನ್ ನಿಂದ ಮಾಹಿತಿ ನೀಡಿದ್ದಾರೆ. 27 ಜಿಲ್ಲೆಗಳ ವಿದ್ಯಾರ್ಥಿಗಳು ಇದರಲ್ಲಿ ಇದ್ದಾರೆ. ಎಷ್ಟು ವಿದ್ಯಾರ್ಥಿಗಳು ಉಕ್ರೇನ್‍ನಲ್ಲಿ ಇದ್ದಾರೆ ಅನ್ನೋ ಮಾಹಿತಿ ಇಲ್ಲ. ಆದರೆ ಎಲ್ಲಾ ವಿದ್ಯಾರ್ಥಿಗಳು ಮೆಡಿಕಲ್ ಎಜುಕೇಶನ್‍ಗೆ ಹೋಗಿದ್ದಾರೆ. 19, 20, 21 ವರ್ಷದವರು ಹೆಚ್ಚಾಗಿ ಇದ್ದಾರೆ. ನಮ್ಮ ಜೊತೆ ಅಲ್ಲಿ ಇರೋರು ಕಾಲ್ ಮಾಡಿ ಮಾತಾಡಿದ್ದಾರೆ. ಅವರಿಗೆ ಧೈರ್ಯ ತುಂಬುವ ಕೆಲಸ ಮಾಡ್ತಿದ್ದೇವೆ. ಈವರೆಗೂ ಯಾವುದೇ ಸಾವು ನೋವು ರಿಪೋರ್ಟ್ ಅಗಿಲ್ಲ. ವಿದ್ಯಾರ್ಥಿಗಳ ಮಾಹಿತಿ ಉಕ್ರೇನ್ ರಾಯಭಾರಿ ಕಚೇರಿಗೆ ಮತ್ತು ಕೇಂದ್ರ ಸರ್ಕಾರಕ್ಕೆ ಕೊಡೋದು ನಮ್ಮ ಮೊದಲ ಆದ್ಯತೆ. ಅಲ್ಲಿನ ವಿದ್ಯಾರ್ಥಿಗಳಿಗೆ ಅಗತ್ಯ ಊಟದ ವ್ಯವಸ್ಥೆ, ಇನ್ನಿತರ ಸೌಕರ್ಯ ಒದಗಿಸೋದು ನಮ್ಮ ಆದ್ಯತೆ ಎಂದು ನೋಡಲ್ ಅಧಿಕಾರಿ ಮನೋಜ್ ರಾಜನ್ ಹೇಳಿದ್ದಾರೆ. ಇದನ್ನೂ ಓದಿ:  ರಷ್ಯಾ ದಾಳಿಯಿಂದ ರಕ್ಷಿಸಿಕೊಳ್ಳಲು ಭೂಗತ ಹ್ಯಾಕರ್‌ಗೆ ಉಕ್ರೇನ್ ಕರೆ!

    ಉಕ್ರೇನ್‍ನಲ್ಲಿ ಸಿಲುಕಿರುವ ಕರ್ನಾಟಕದ ವಿದ್ಯಾರ್ಥಿಗಳನ್ನು ಕರೆತರುವ ವಿಚಾರ ವಿದೇಶಾಂಗ ಸಚಿವ ಜೈಶಂಕರ್ ಜೊತೆ ಮಾತನಾಡಿದ್ದೇನೆ. ವಿದ್ಯಾರ್ಥಿಗಳ ಸುರಕ್ಷತೆಗೆ ಸಂಪೂರ್ಣ ಭರವಸೆ ನೀಡಿದ್ದಾರೆ ಎಂದು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಟ್ವೀಟ್ ಮಾಡಿದ್ದಾರೆ.

  • ಬೆಂಗಳೂರು ನಗರಕ್ಕೆ ಸಿಎಂ ಸೇರಿ ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ಪ್ರಕಟ – ಯಾರಿಗೆ ಯಾವ ಜಿಲ್ಲೆ?

    ಬೆಂಗಳೂರು ನಗರಕ್ಕೆ ಸಿಎಂ ಸೇರಿ ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ಪ್ರಕಟ – ಯಾರಿಗೆ ಯಾವ ಜಿಲ್ಲೆ?

    ಬೆಂಗಳೂರು: ರಾಜ್ಯದ 30 ಜಿಲ್ಲೆಗಳಿಗೆ ನೂತನ ಕೋವಿಡ್ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

    ಯಾರಿಗೆ ಯಾವ ಜಿಲ್ಲೆ?
    ಬಸವರಾಜ ಬೊಮ್ಮಾಯಿ – ಬೆಂಗಳೂರು ನಗರ
    ಗೋವಿಂದ ಎಂ.ಕಾರಜೋಳ – ಬೆಳಗಾವಿ
    ಕೆ.ಎಸ್‌.ಈಶ್ವರಪ್ಪ – ಚಿಕ್ಕಮಗಳೂರು
    ಬಿ.ಶ್ರೀರಾಮುಲು – ಬಳ್ಳಾರಿ
    ವಿ.ಸೋಮಣ್ಣ – ಚಾಮರಾಜನಗರ
    ಉಮೇಶ್‌ ಕತ್ತಿ – ವಿಜಯಪುರ
    ಎಸ್.ಅಂಗಾರ – ಉಡುಪಿ
    ಆರಗ ಜ್ಞಾನೇಂದ್ರ – ತುಮಕೂರು
    ಡಾ. ಸಿ.ಎನ್.ಅಶ್ವತ್ಥ ನಾರಾಯಣ – ರಾಮನಗರ
    ಸಿ.ಸಿ.ಪಾಟೀಲ್‌ – ಬಾಗಲಕೋಟೆ
    ಆನಂದ್‌ ಸಿಂಗ್‌ – ಕೊಪ್ಪಳ
    ಕೋಟಾ ಶ್ರೀನಿವಾಸ ಪೂಜಾರಿ – ಉತ್ತರ ಕನ್ನಡ
    ಪ್ರಭು ಚವ್ಹಾಣ್‌ – ಯಾದಗಿರಿ
    ಮುರುಗೇಶ್‌ ನಿರಾಣಿ – ಕಲಬುರಗಿ
    ಶಿವರಾಮ್‌ ಹೆಬ್ಬಾರ್‌ – ಹಾವೇರಿ
    ಎಸ್‌.ಟಿ.ಸೋಮಶೇಖರ್‌ – ಮೈಸೂರು
    ಬಿ.ಸಿ.ಪಾಟೀಲ್‌ – ಚಿತ್ರದುರ್ಗ/ಗದಗ
    ಬಿ.ಎ.ಬಸವರಾಜ್‌ – ದಾವಣಗೆರೆ
    ಡಾ. ಕೆ.ಸುಧಾಕರ್‌ – ಬೆಂಗಳೂರು ಗ್ರಾಮಾಂತರ
    ಕೆ.ಗೋಪಾಲಯ್ಯ – ಹಾಸನ/ಮಂಡ್ಯ
    ಶಶಿಕಲಾ ಜೊಲ್ಲೆ – ವಿಜಯನಗರ
    ಎಂಟಿಬಿ ನಾಗರಾಜು – ಚಿಕ್ಕಬಳ್ಳಾಪುರ
    ಕೆ.ಸಿ.ನಾರಾಯಣಗೌಡ – ಶಿವಮೊಗ್ಗ
    ಬಿ.ಸಿ.ನಾಗೇಶ್‌ – ಕೊಡಗು
    ವಿ.ಸುನೀಲ್‌ ಕುಮಾರ್‌ – ದಕ್ಷಿಣ ಕನ್ನಡ
    ಹಾಲಪ್ಪ ಆಚಾರ್‌ – ಧಾರವಾಡ
    ಶಂಕರ್‌ ಬಿ.ಪಾಟೀಲ್‌ ಮುನೇನಕೊಪ್ಪ – ರಾಯಚೂರು/ಬೀದರ್‌
    ಮುನಿರತ್ನ – ಕೋಲಾರ

  • ರಾಜ್ಯದ ಜನತೆಗೆ ಏಕಕಾಲದಲ್ಲಿ ಮೂರು ಶಾಕ್ – ಹಾಲು, ವಿದ್ಯುತ್, ಸಾರಿಗೆ ಸೇರಿ ಬೆಂಗ್ಳೂರಿಗರಿಗೆ ನೀರಿನ ದರ ಏರಿಕೆ?

    ರಾಜ್ಯದ ಜನತೆಗೆ ಏಕಕಾಲದಲ್ಲಿ ಮೂರು ಶಾಕ್ – ಹಾಲು, ವಿದ್ಯುತ್, ಸಾರಿಗೆ ಸೇರಿ ಬೆಂಗ್ಳೂರಿಗರಿಗೆ ನೀರಿನ ದರ ಏರಿಕೆ?

    ಬೆಂಗಳೂರು: ಹಣದುಬ್ಬರದಿಂದಾಗಿ ಎಲ್ಲಾ ಅಗತ್ಯ ವಸ್ತುಗಳು ಹಾಗೂ ಬೆಲೆಗಳು ನಿರಂತರವಾಗಿ ಏರಿಕೆ ಕಾಣುತ್ತಿವೆ. ಪೆಟ್ರೋಲ್, ಡೀಸೆಲ್, ಅಡುಗೆ ಎಣ್ಣೆ, ಬೇಳೆ ಕಳು, ತರಕಾರಿ ಬೆಲೆಗಳು ದಿನೇ ದಿನೇ ಹೆಚ್ಚುತ್ತಲೇ ಇವೆ. ಇದು ಸಾಲದು ಅಂತಾ ಶೀಘ್ರವೇ ರಾಜ್ಯದ ಜನತೆಗೆ ಏಕಕಾಲದಲ್ಲಿ ಮೂರು ಶಾಕ್ ಎದುರಾಗಲಿವೆ.

    ಹಾಲು, ವಿದ್ಯುತ್ ದರ, ಸಾರಿಗೆ ದರ ಹೆಚ್ಚಳದ ಜೊತೆ ಜೊತೆಗೆ, ಬೆಂಗಳೂರಿನ ಮಂದಿಗೆ ಹೆಚ್ಚುವರಿ ನೀರಿನ ದರ ಹೆಚ್ಚಿಸಲು ಜಲಮಂಡಳಿ ಪ್ಲಾನ್ ಮಾಡಿದೆ. ಈಗಾಗಲೇ ಆಯಾ ಇಲಾಖೆಗಳು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿವೆ. ರಾಜ್ಯ ಸರ್ಕಾರ ಇದಕ್ಕೆ ಒಪ್ಪಿಗೆ ಕೊಡುವುದು ಬಾಕಿ ಇದೆ. ಇದನ್ನೂ ಓದಿ: ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆ ಶಾಕ್?

    ಆದರೆ ದರ ಹೆಚ್ಚಳಕ್ಕೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದೆ. ಜನರ ಮೇಲೆ ಈಗ ತೆರಿಗೆ ಹಾಕೋದು ಸರಿಯಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ದರ ಹೆಚ್ಚಳಕ್ಕೆ ಮೊದಲು ಜನರಿಗೆ ಆದಾಯ ಬರುವಂತೆ ಸರ್ಕಾರ ಮಾಡಲಿ ಅಂತಾ ಡಿಕೆ ಶಿವಕುಮಾರ್ ಒತ್ತಾಯಿಸಿದ್ದಾರೆ. ಈ ಬೆನ್ನಲ್ಲೇ ಸ್ಪಷ್ಟನೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ಸದ್ಯಕ್ಕೆ ದರ ಹೆಚ್ಚಳದ ಬಗ್ಗೆ ಯಾವುದೇ ತೀರ್ಮಾನಗಳು ಆಗಿಲ್ಲ. ದರ ಹೆಚ್ಚಳದ ಪ್ರಸ್ತಾವನೆಗಳು ಬರುವುದು ಸಹಜ ಆದ್ರೆ ಸರ್ಕಾರ ಅವಸರದ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ನಲ್ಲೇ ದ್ವಂದ್ವ – ನೈಟ್ ಕರ್ಫ್ಯೂ ಬಗ್ಗೆ ಡಿಕೆಶಿ, ಸಿದ್ದು ಭಿನ್ನ ಅಭಿಪ್ರಾಯ

  • ರಾಜ್ಯ ಸರ್ಕಾರದ ವಿರುದ್ಧ ಜನಾಂದೋಲನ ಯಾತ್ರೆ: ಎಸ್.ಆರ್.ಹಿರೇಮಠ

    ರಾಜ್ಯ ಸರ್ಕಾರದ ವಿರುದ್ಧ ಜನಾಂದೋಲನ ಯಾತ್ರೆ: ಎಸ್.ಆರ್.ಹಿರೇಮಠ

    ರಾಯಚೂರು: ಕೇಂದ್ರ ಸರ್ಕಾರ ಹಿಂಪಡೆದಂತೆ ರಾಜ್ಯ ಸರ್ಕಾರ ಕೂಡ ಕೃಷಿ ಕಾಯ್ದೆ ಹಿಂಪಡೆಯಬೇಕು. ಸರ್ಕಾರಕ್ಕೆ ಚುರುಕು ಮುಟ್ಟಿಸುವ ನಿಟ್ಟಿನಲ್ಲಿ ಫೆಬ್ರವರಿಯಲ್ಲಿ ಜನಾಂದೋಲ ಯಾತ್ರೆ ನಡೆಸುವುದಾಗಿ ಸಾಮಾಜಿಕ ಕಾರ್ಯಕರ್ತ ಎಸ್.ಆರ್‌.ಹಿರೇಮಠ ಹೇಳಿದ್ದಾರೆ.

    ರಾಯಚೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಬೇಕು. ಎಪಿಎಂಸಿ ತಿದ್ದುಪಡಿ ಕಾಯ್ದೆ, ಗೋ ಹತ್ಯೆ ನಿಷೇಧ ಕಾಯ್ದೆ ಹಾಗೂ ಕೃಷಿ ಕಾಯ್ದೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಸೋಂಕು ಕಡಿಮೆ ಇದ್ದಾಗ ಕರ್ಫ್ಯೂ ವಿಧಿಸಿ, ಹೆಚ್ಚಾದಾಗ ಕರ್ಫ್ಯೂ ಹಿಂಪಡೆದಿದ್ದಾರೆ: ಇದನ್ನೂ ಒದಿ: ಚಾಮುಂಡೇಶ್ವರಿಯಿಂದ ಓಡಿಸಲಾಗಿದೆ, ಬಾದಾಮಿಯಿಂದ ಓಡಿಸುವುದು ಬಾಕಿ ಇದೆ: ಸಿದ್ದು ವಿರುದ್ಧ ಹೆಚ್‌ಡಿಕೆ ವಾಗ್ದಾಳಿ

    ಈ ಮೂರು ವಿಚಾರಗಳನ್ನು ಸರ್ಕಾರಕ್ಕೆ ಮುಟ್ಟಿಸುವ ನಿಟ್ಟಿನಲ್ಲಿ ಯಾತ್ರೆ ನಡೆಸಲಾಗುವುದು. ಮುಂದಿನ ತಿಂಗಳು ಬಸವಕಲ್ಯಾಣದಿಂದ ಬೆಂಗಳೂರು, ಮಲೆಮಹದೇಶ್ವರದಿಂದ ಬೆಂಗಳೂರಿಗೆ ಯಾತ್ರೆ ನಡೆಸುವುದಾಗಿ ತಿಳಿಸಿದ್ದಾರೆ.

    ಕೇಂದ್ರದ ಮೂರು ಕೃಷಿ ಕಾಯ್ದೆಗಳನ್ನು ಹಿಂಪೆಡೆಯುವಂತೆ ದೆಹಲಿ ಗಡಿ ಭಾಗಗಳಲ್ಲಿ ರೈತ ಸಂಘಟನೆಗಳು ಸತತ ಒಂದು ವರ್ಷ ಪ್ರತಿಭಟನೆ ನಡೆಸಿದವು. ರೈತರ ಪ್ರತಿಭಟನೆಗೆ ಮಣಿದ ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ಹಿಂಪಡೆಯಿತು. ಪ್ರತಿಭಟನೆ ಹಿಂಪಡೆದ ರೈತರು, ಕೇಂದ್ರ ಮುಂದೆ ಮತ್ತಷ್ಟು ಬೇಡಿಕೆಗಳನ್ನಿಟ್ಟಿದ್ದಾರೆ.

  • ತುರ್ತು ಚಿಕಿತ್ಸೆ ಹೊರತುಪಡಿಸಿ ಇತರೆ ರೋಗಿಗಳು ಆಸ್ಪತ್ರೆಗೆ ಬರುವಂತಿಲ್ಲ: ಸರ್ಕಾರ ಸೂಚನೆ

    ತುರ್ತು ಚಿಕಿತ್ಸೆ ಹೊರತುಪಡಿಸಿ ಇತರೆ ರೋಗಿಗಳು ಆಸ್ಪತ್ರೆಗೆ ಬರುವಂತಿಲ್ಲ: ಸರ್ಕಾರ ಸೂಚನೆ

    ಬೆಂಗಳೂರು: ತುರ್ತು ಚಿಕಿತ್ಸೆ ಅಗತ್ಯವಿರುವವರು ಹೊರತುಪಡಿಸಿ ಇತರೆ ರೋಗಿಗಳು ಆಸ್ಪತ್ರೆಗಳಿಗೆ ಭೇಟಿ ನೀಡದಂತೆ ಸರ್ಕಾರ ಸೂಚನೆ ನೀಡಿದೆ.

    ಹೊರರೋಗಿಗಳು, ತಪಾಸಣೆಗಾಗಿ ಆಸ್ಪತ್ರೆಗೆ ಹೋಗುವವರು, ದಂತ ಚಿಕಿತ್ಸೆ ಪಡೆಯುವವರು ಸೇರಿದಂತೆ ಇನ್ನಿತರ ರೋಗಿಗಳು ಎರಡು ವಾರಗಳ ಕಾಲ ಆಸ್ಪತ್ರೆಗಳಿಗೆ ಭೇಟಿ ನೀಡದಂತೆ ಸರ್ಕಾರ ತಿಳಿಸಿದೆ. ಇದನ್ನೂ ಓದಿ: ಇಂದು 32,793 ಕೇಸ್ – ಬೆಂಗಳೂರಿನಲ್ಲಿ 129 ಸಾವಿರ ಸಕ್ರಿಯ ಪ್ರಕರಣ

    ಆಸ್ಪತ್ರೆಗಳಲ್ಲಿ ಜನಸಂದಣಿ ನಿಯಂತ್ರಿಸುವ ಸಲುವಾಗಿ ಈ ಆದೇಶ ಹೊರಡಿಸಲಾಗಿದೆ. ಕೋವಿಡ್ ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದಿಂದ ಎಚ್ಚರಿಕೆಯ ಸೂಚನೆ ರವಾನೆಯಾಗಿದೆ.

    ಕೋವಿಡ್‌ ಮೂರನೇ ಅಲೆ ಎಲ್ಲೆಡೆ ವ್ಯಾಪಕವಾಗಿ ಹರಡುತ್ತಿದೆ. ಆಸ್ಪತ್ರೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹೊರರೋಗಿಗಳು ಜಮಾಯಿಸುತ್ತಿದ್ದಾರೆ. ಇದರಿಂದ ಸೋಂಕು ಮತ್ತಷ್ಟು ಹರಡಬಹುದು. ಅಲ್ಲದೇ ಕೋವಿಡ್‌ನಿಂದ ಗಂಭೀರ ಸ್ವರೂಪದಲ್ಲಿರುವವರಿಗೆ ಚಿಕಿತ್ಸೆ ನೀಡಲು ತೊಂದರೆಯಾಗಬಹುದು ಎಂಬ ಕಾರಣಕ್ಕೆ ಸರ್ಕಾರ ಈ ಆದೇಶ ಹೊರಡಿಸಿದೆ. ಇದನ್ನೂ ಓದಿ: ಒಂದೇ ರೆಸಾರ್ಟ್‌ನಲ್ಲಿ 30ಕ್ಕೂ ಹೆಚ್ಚು ಕೋವಿಡ್ ಪ್ರಕರಣ ದೃಢ – ರೆಸಾರ್ಟ್ ಮುಚ್ಚದೆ ಎಂದಿನಂತೆ ಕಾರ್ಯ

  • ಕುರಿ ಕಾಯೋ ತೋಳ ಸಂಬಳ ಬೇಡ ಎಂದಂತೆ ಸರ್ಕಾರದ ವರ್ತನೆ: ಸಿದ್ದು ಟೀಕೆ

    ಕುರಿ ಕಾಯೋ ತೋಳ ಸಂಬಳ ಬೇಡ ಎಂದಂತೆ ಸರ್ಕಾರದ ವರ್ತನೆ: ಸಿದ್ದು ಟೀಕೆ

    ಚಿಕ್ಕಮಗಳೂರು: ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವರಿಂದ ಹಿಡಿದು ಅಧಿಕಾರಿಗಳವರೆಗೂ ಶೇ. 40 ಕಮಿಷನ್‌ ಪಡೆಯುತ್ತಿದ್ದಾರೆ ಎಂಬ ಆರೋಪ ಪ್ರಕರಣ ತನಿಖೆ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕುರಿ ಕಾಯೋ ತೋಳ ತನಗೆ ಸಂಬಳ ಬೇಡ ಎಂದಂತೆ ಅಧಿಕಾರಿಗಳ ಮೂಲಕ ತನಿಖೆಗೆ ಸರ್ಕಾರ ಆದೇಶಿಸಿದೆ ಎಂದು ಟೀಕಿಸಿದ್ದಾರೆ.

    ಚಿಕ್ಕಮಗಳೂರಿನಲ್ಲಿ ಇಂದು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಸಿದ್ದರಾಮಯ್ಯ ಅವರು, ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಗುತ್ತಿಗೆದಾರರ ಸಂಘ ಪ್ರಧಾನಿಯವರಿಗೆ ಪತ್ರ ಬರೆದು ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದೆ. ಈ ಬಗ್ಗೆ ತನಿಖೆ ನಡೆಸಲು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಒಂದು ಆಯೋಗ ರಚಿಸಬೇಕು. ನಮ್ಮ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ ಆಗಿದ್ದರೆ, ಆ ಬಗ್ಗೆ ಕೂಡ ತನಿಖೆ ನಡೆಸಲಿ. ಆದರೆ ಸರ್ಕಾರಕ್ಕೆ ಧಮ್ ಇಲ್ಲ. ಕುರಿ ಕಾಯೋ ತೋಳ ಸಂಬಳ ಬೇಡ ಎಂದಂತೆ ಅಧಿಕಾರಿಗಳ ಮೂಲಕ ತನಿಖೆಗೆ ಆದೇಶಿಸಲಾಗಿದೆ ಎಂದು ಕುಟುಕಿದ್ದಾರೆ. ಇದನ್ನೂ ಓದಿ: ಗೋ ಕಳ್ಳರಿಗೆ ಸಹಾಯ ಮಾಡಿದ್ದ ಪೊಲೀಸರ ಬಗ್ಗೆಯಷ್ಟೇ ಮಾತನಾಡಿದ್ದೇನೆ: ಆರಗ ಜ್ಞಾನೇಂದ್ರ

    ಬಿಜೆಪಿಯವರು ಜನ ಸ್ವರಾಜ್ಯ ಯಾತ್ರೆ ಆರಂಭಿಸಿದ್ದಾರೆ.‌ ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಕಿ ಇದ್ದರೂ ಅವರು ಸ್ಥಳೀಯ ಸಂಸ್ಥೆಗಳ ಬಲವರ್ಧನೆ ಮಾಡಲಿಲ್ಲ. ಅಧಿಕಾರ ವಿಕೇಂದ್ರೀಕರಣದಲ್ಲಿ ಬಿಜೆಪಿಯವರಿಗೆ ನಂಬಿಕೆ ಇಲ್ಲ. ಆ ವ್ಯವಸ್ಥೆಯಲ್ಲಿ ಪ್ರಾಮಾಣಿಕವಾಗಿ ಕೆಲಸವನ್ನೂ ಮಾಡಲಿಲ್ಲ. ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ನಂಬಿಕೆ ಇದ್ದಿದ್ದರೆ, ಜಿಲ್ಲಾ ಹಾಗೂ ತಾಲೂಕು ಪಂಚಾಯತಿ ಚುನಾವಣೆ ಮುಂದೂಡುತ್ತಿರಲಿಲ್ಲ. ಚುನಾವಣೆ ಮುಂದೂಡಲು ಒಂದು ಕಾನೂನು ಬೇರೆ ತಂದಿದ್ದಾರೆ. ಚುನಾವಣೆ ನಡೆಸುವ ವಿಚಾರದಲ್ಲಿ ಬಿಜೆಪಿಯವರಿಗೆ ಬದ್ಧತೆ ಇಲ್ಲ ವಾಗ್ದಾಳಿ ನಡೆಸಿದ್ದಾರೆ.

    ಮೋದಿಯವರು ಪ್ರಧಾನಿಯಾಗಿ ಎಂಟು ವರ್ಷಗಳಾದರೂ ಸ್ಥಳೀಯ ಸಂಸ್ಥೆಗಳಿಗೆ ಹಣಕಾಸು ಶಕ್ತಿ ತುಂಬಲಿಲ್ಲ. ಯಾವುದೇ ಕಾರ್ಯಕ್ರಮವ ರೂಪಿಸಲಿಲ್ಲ. ಸಾಮಾಜಿಕ ನ್ಯಾಯ ಮತ್ತು ಅಧಿಕಾರ ವಿಕೇಂದ್ರೀಕರಣಕ್ಕೆ ವಿರುದ್ಧವಾಗಿರುವ ಬಿಜೆಪಿಯವರಿಗೆ ಜನ ಸ್ವರಾಜ್ಯ ಯಾತ್ರೆ ನಡೆಸಲು ನೈತಿಕ ಹಕ್ಕಿಲ್ಲ. ಪಂಚಾಯತ್‌ ರಾಜ್ ವ್ಯವಸ್ಥೆ, ಸಾಮಾಜಿಕ ನ್ಯಾಯದ ಬಗ್ಗೆ ಒಂದು ದಿನವೂ ಬಿಜೆಪಿ ನಾಯಕರು ಮಾತಾಡಿಲ್ಲ. ಅವರಿಗೆ ಆ ಕುರಿತು ಬದ್ಧತೆಯೇ ಇಲ್ಲ. ಇಂಥವರು ಗೆದ್ದು ಬಂದರೆ ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಗೆ ಏನೂ ಕೆಲಸ ಮಾಡುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಚಿಕ್ಕಮಗಳೂರು ಕ್ಷೇತ್ರದಿಂದ ಕಳೆದ ಬಾರಿ ವಿಧಾನ ಪರಿಷತ್‌ಗೆ ಆಯ್ಕೆಯಾಗಿ ಹೋದ ಪ್ರಾಣೇಶ್ ಒಂದು ದಿನವೂ ಪಂಚಾಯತ್ ರಾಜ್ ವ್ಯವಸ್ಥೆ ಕುರಿತು ಮಾತಾಡಿಲ್ಲ. ಯಾವುದೇ ಪಂಚಾಯತಿಗೆ ಹೋಗಿಲ್ಲ. ಸ್ಥಳೀಯ ಸಂಸ್ಥೆಗಳಿಗೆ ಶಕ್ತಿ ಕೊಟ್ಟಿದ್ದರೆ ಅದು ಕಾಂಗ್ರೆಸ್. ರಾಜೀವ್ ಗಾಂಧಿಯವರು ಪಂಚಾಯತ್ ರಾಜ್ ಕಾಯಿದೆಗೆ ತಿದ್ದುಪಡಿ ತಂದರು. ನರಸಿಂಹರಾವ್ ಅವರು ಅದನ್ನು ಜಾರಿಗೊಳಿಸಿದರು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಾಯಕರಿಗೆ ಗತಿ ಇಲ್ಲ, ಅಭ್ಯರ್ಥಿಗಳಿಗಂತೂ ದಟ್ಟ ದಾರಿದ್ರ್ಯ- ಕಾಂಗ್ರೆಸ್ ವಿರುದ್ಧ ಹೆಚ್‍ಡಿಕೆ ಕಿಡಿ

    ರಾಜ್ಯ ಬಿಜೆಪಿ ಸರ್ಕಾರ ಮೂರೂವರೆ ವರ್ಷದಲ್ಲಿ ಬಡವರಿಗೆ ಒಂದೇ ಒಂದು ಮನೆ ಕೊಟ್ಟಿಲ್ಲ. ಕೊಟ್ಟಿದ್ದರೆ ಸಿ.ಟಿ.ರವಿ ಹೇಳಲಿ. ನಮ್ಮ ಅವಧಿಯಲ್ಲಿ‌ ಮಂಜೂರಾದ ಮನೆಗಳಿಗೆ ಎರಡನೇ ಕಂತಿನ ಅನುಸಾನ ಕೊಡದೆ ಲಾಕ್ ಮಾಡಿದರು. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ದರ ಏರಿಕೆ ವಿಚಾರದಲ್ಲಿ ಮೋದಿಯವರು ಜನರ ದಾರಿ ತಪ್ಪಿಸುತ್ತಿದ್ದಾರೆ. ಅವರು ಸತ್ಯ ಹೇಳಬೇಕು ಎಂದಿದ್ದಾರೆ.

    ಕೇಂದ್ರ ಸರ್ಕಾರ ಜಾರಿಗೆ ತಂದ ಕೃಷಿ ಕಾಯಿದೆಗಳನ್ನು ವಿರೋಧಿಸಿ ನಡೆದ ಹೋರಾಟದಲ್ಲಿ 700 ರೈತರು ಸತ್ತರು. ಇದಕ್ಕೆ ಯಾರು ಜವಾಬ್ದಾರಿ? ಕಾಯಿದೆ ಜಾರಿಗೆ ತರದೇ ಹೋಗಿದ್ದರೆ ರೈತರು ಹೋರಾಟ ನಡೆಸಿ ಪ್ರಾಣ ಕಳೆದುಕೊಳ್ಳುತ್ತಿರಲಿಲ್ಲ. ರೈತರ ಸಾವಿಗೆ ಕೇಂದ್ರ ಸರ್ಕಾರ, ಮೋದಿ ಜವಾಬ್ದಾರಿ. ಐದು ರಾಜ್ಯಗಳ ಚುನಾವಣೆಯಲ್ಲಿ ಸೋತ ಬಳಿಕ ಕೇಂದ್ರ ಸರ್ಕಾರಕ್ಕೆ ಜ್ಞಾನೋದಯ ಆಗಿದೆ. ಮುಂಬರುವ ವಿಧಾನಸಭೆ ಚುನಾವಣೆಗಳಲ್ಲಿ ಸೋಲುವ ಭಯದಿಂದ. ಚರ್ಚೆ ಇಲ್ಲದೆ ಸಂಸತ್ತಿನಲ್ಲಿ ಕಾಯಿದೆ ವಾಪಸ್ ಪಡೆದಿದ್ದಾರೆ. ಬಿಜೆಪಿ ರೈತ ಮತ್ತು ಜನ ವಿರೋಧಿ ಪಕ್ಷ. ಹೀಗಾಗಿ ವಿಧಾನ ಪರಿಷತ್ ಚುನಾವಣೆಯಲ್ಲಿ ಮತ ಕೇಳಲು ನೈತಿಕತೆ ಇಲ್ಲ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಪ್ರಧಾನಿಯನ್ನು ಭೇಟಿ ಮಾಡಿದ ತಕ್ಷಣ ಬಿಜೆಪಿಗೆ ಹೋಗುತ್ತೇವೆ ಎಂದಲ್ಲ: ಎಚ್‌.ಡಿ.ದೇವೇಗೌಡ

    ಮಳೆಯಿಂದಾಗಿ ಬೆಂಗಳೂರಿನ ರಸ್ತೆಗಳು ಹಾಳಾಗಿವೆ. ಈವರೆಗೆ ಒಂದು ಗುಂಡಿ ಮುಚ್ವಿಲ್ಲ, ಅತಿವೃಷ್ಟಿಯಿಂದ ಬೆಳೆ ಕಳೆದುಕೊಂಡವರಿಗೆ ಪರಿಹಾರ ಕೊಟ್ಟಿಲ್ಲ. ಈವರೆಗೆ ಬೆಳೆ ಹಾನಿ ಕುರಿತು ಸಮೀಕ್ಷೆ ಮಾಡಿಲ್ಲ ಎಂದು ಸರ್ಕಾರದ ವಿರುದ್ಧ ಗರಂ ಆಗಿದ್ದಾರೆ.

    ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ 15 ಸ್ಥಾನ ಗೆಲ್ಲುವ ವಿಶ್ವಾಸವಿದೆ. ಚಿಕ್ಕಮಗಳೂರು ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಗಾಯತ್ರಿ ಶಾಂತೇಗೌಡರ ಗೆಲುವು ಖಚಿತ ಎಂದು ಆಶಯ ವ್ಯಕ್ತಪಡಿಸಿದ್ದಾರೆ.

  • ಪಾಲಿಕೆ ಮೇಲಿನ ಕನ್ನಡ ಧ್ವಜವನ್ನು ತೆಗೆಯಿರಿ – ಭಾಷಾ ವಿಷಬೀಜ ಬಿತ್ತಲು MES ಯತ್ನ

    ಪಾಲಿಕೆ ಮೇಲಿನ ಕನ್ನಡ ಧ್ವಜವನ್ನು ತೆಗೆಯಿರಿ – ಭಾಷಾ ವಿಷಬೀಜ ಬಿತ್ತಲು MES ಯತ್ನ

    -ಕರ್ನಾಟಕ ಸರ್ಕಾರ ನಾಲಾಯಕ್ ಸರ್ಕಾರ
    -ಕುಂದಾನಗರಿಯಲ್ಲಿ ಮತ್ತೆ ಪುಂಡಾಟಿಕೆ

    ಬೆಳಗಾವಿ: ಕರ್ನಾಟಕ ರಾಜ್ಯೋತ್ಸವ ಸಮೀಪಿಸುತ್ತಿದ್ದಂತೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಎಂಇಎಸ್ ಮತ್ತೆ ಭಾಷಾ ವಿಷಬೀಜ ಬಿತ್ತಲು ಯತ್ನಿಸಿಸುತ್ತಿದೆ.

    ಇಂದು ಬೆಳಗಾವಿ ನಗರದ ಸಂಭಾಜಿ ವೃತ್ತದಲ್ಲಿ ಜಮಾವಣೆಗೊಂಡ ಎಂಇಎಸ್ ಕಾರ್ಯಕರ್ತರು ಪೊಲೀಸರ ಬ್ಯಾರಿಕೇಡ ತಳ್ಳಿ ಗುಂಡಾವರ್ತನೆ ನಡೆಸಿದ್ದಾರೆ. ಈ ವೇಳೆ ಪೊಲೀಸರು ಕೈಯಲ್ಲಿ ಲಾಠಿ ಹಿಡಿಯುತ್ತಿದಂತೆ ಓಡಿ ಹೋಗಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ಎಂಇಎಸ್ ಕಿಡಿಗೇಡಿಗಳು ಕರ್ನಾಟಕ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪುಂಡಾಟ ಮೆರೆದಿದ್ದಾರೆ. ಇದನ್ನೂ ಓದಿ: ಬೇರೆ ಮನೆ ಮಾಡಲು ಒಪ್ಪದ ಪತಿ -ಕಂದನನ್ನು ನೀರಿನಲ್ಲಿ ಮುಳುಗಿಸಿ ಕೊಂದ ತಾಯಿ

    ಬೆಳಗಾವಿಯ ನಾಮ ಫಲಕಗಳಲ್ಲಿ ಕನ್ನಡ ಹಾಗೂ ಇಂಗ್ಲಿಷ್ ಜೊತೆಗೆ ಮರಾಠಿ ಭಾಷೆ ಬಳಕೆ ಮಾಡಬೇಕು. ಪಾಲಿಕೆ ಮೇಲಿನ ಕನ್ನಡ ಧ್ವಜವನ್ನು ತೆಗೆಯಬೇಕು. ಇಲ್ಲವೇ ಪಾಲಿಕೆ ಮೇಲೆ ಭಗವಾಧ್ವಜ ಹಾರಿಸಲು ಅವಕಾಶ ಮಾಡಿಕೊಡಬೇಕು. ಎಂದು ಮರಾಠಿ ಭಾಷಾ ಅಲ್ಪಸಂಖ್ಯಾಂತರ ಹಕ್ಕೋತಾಯ ಮಧ್ಯವರ್ತಿ ಕುರಿತಂತೆ ಮಹಾರಾಷ್ಟ್ರ ಏಕೀಕರಣ ಸಮಿತಿ ಪ್ರತಿಭಟನೆ ನಡೆಸಿದೆ.

    ಈ ಕುರಿತಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲು ಹೊರಟಿದ್ದ ಎಂಇಎಸ್ ನಾಯಕರನ್ನು ಪೊಲೀಸರು ತಡೆದು ನಿಲ್ಲಿಸಿದರು. ಈ ವೇಳೆ ನಡು ರಸ್ತೆಯಲ್ಲಿಯೇ ಕುಳಿತು ಎಂಇಎಸ್ ಪ್ರತಿಭಟನೆ ನಡೆಸಲು ಪ್ರಾರಂಭಿಸಿತ್ತು. ಸ್ಥಳಕ್ಕೆ ಮನವಿ ಸ್ವೀಕರಿಸಲು ಆಗಮಿಸಿದ ಅಪರ ಜಿಲ್ಲಾಧಿಕಾರಿ ಅಶೋಕ್ ದಡಗುಂಟಿಯವರ ಸಮ್ಮುಖದಲ್ಲಿ ಕರ್ನಾಟಕ ಸರ್ಕಾರ ನಾಲಾಯಕ್ ಸರ್ಕಾರ ಎಂದು ಘೋಷಣೆ ಕೂಗಿ ಪುಂಡಾಟಿಕೆ ಮೆರೆದಿದೆ. ಇದನ್ನೂ ಓದಿ: ಇಸ್ರೇಲ್‍ನಲ್ಲೇ ನನ್ನ ಪ್ರಾಣ ಹೋಗ್ಬೇಕಿತ್ತು: ಹೆಚ್‍ಡಿಕೆ

  • ಗಣೇಶೋತ್ಸವ ಆಚರಣೆ ಆದೇಶಕ್ಕೆ ಸುಧಾಕರ್ ವಿರೋಧ

    ಗಣೇಶೋತ್ಸವ ಆಚರಣೆ ಆದೇಶಕ್ಕೆ ಸುಧಾಕರ್ ವಿರೋಧ

    ಚೆಕ್ಕಬಳ್ಳಾಪುರ: ಸಾರ್ವಜನಿಕ ಗಣೇಶೋತ್ಸವ ಸಂಬಂಧ ಆದೇಶ ಮಾಡದೆ ಇರೋದು ಒಳ್ಳೆಯದು. ಕೋವಿಡ್-19 ನಿಯಂತ್ರಣ ಮಾಡೋದು ಸರ್ಕಾರದ ಜವಾಬ್ದಾರಿಯಾಗಿರುವುದರಿಂದಾಗಿ ಗಣೇಶೋತ್ಸವ ಸರಳವಾಗಿ ಆಚರಿಸಿ ಎಂದು ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅಭಿಪ್ರಾಯಪಟ್ಟಿದ್ದಾರೆ.

    ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿಯಿಂದ ಸಿಎಂ ನೇತೃತ್ವದ ಸಭೆಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಭಾಗಿಯಾಗಿ ಮಾತನಾಡಿದ ಅವರು, ಗಣೇಶ ಚತುರ್ಥಿ ಹಾಗೂ ನಾಳೆಯಿಂದ 6ನೇ ತರಗತಿ ಶಾಲೆಯನ್ನು ಆರಂಭ ಹಿನ್ನೆಲೆ ಸಭೆ ಕರೆಯಲಾಗಿತ್ತು. ಸಾರ್ವಜನಿಕ ಗಣೇಶೋತ್ಸವ ಆಚರಣೆಯ ಜವಾಬ್ದಾರಿಯನ್ನು ಆಯಾ ಜಿಲ್ಲೆಯ ಹಾಗೂ ಬೆಂಗಳೂರಿನಲ್ಲಿ ಬಿಬಿಎಂಪಿ ಹಾಗೂ ಪೊಲೀಸರ ಹೊಣೆಗೆ ಹೊರಿಸಲಾಗಿದೆ. ಕೋವಿಡ್ ನಿಯಂತ್ರಣ ಮಾಡೋದು ಸರ್ಕಾರದ ಜವಾಬ್ದಾರಿಯಾಗಿದೆ. ಗಣೇಶೋತ್ಸವ ಸರಳವಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದರು.   ಇದನ್ನೂ ಓದಿ: ಗಣೇಶೋತ್ಸವಕ್ಕೆ 5 ದಿನ ಅವಕಾಶ ಕೊಟ್ಟ ಸರ್ಕಾರ

    ಗರಿಷ್ಠ 5 ದಿನಗಳು ಮಾತ್ರ ಗಣೇಶ ಉತ್ಸವ ಮಾಡಲು ಅನುಮತಿ ನೀಡಲಾಗಿದೆ. 4 ಅಡಿಗಿಂತಲೂ ಹೆಚ್ಚು ಎತ್ತರದ ಗಣೇಶ ಮೂರ್ತಿ ಸ್ಥಾಪಿಸಲು ಅನುಮತಿ ಇಲ್ಲ. ನಗರ ಪ್ರದೇಶದಲ್ಲಿ ವಾರ್ಡ್‍ಗೆ ಒಂದು ಗಣೇಶ ಮೂರ್ತಿ ಸ್ಥಾಪನೆಗೆ ಅವಕಾಶ ಕಲ್ಪಿಸಲಾಗಿದೆ. ಗ್ರಾಮಾಂತರ ಪ್ರದೇಶಗಳಲ್ಲಿ ಗಣೇಶ ಮೂರ್ತಿ ಸ್ಥಾಪನೆಗೆ ಇನ್ನೂ ಯಾವ ತೀರ್ಮಾನ ತೆಗೆದುಕೊಂಡಿಲ್ಲ. ಉತ್ಸವದಲ್ಲಿ ಸಾರ್ವಜನಿಕ ಮನರಂಜನೆಗೆ ಹಾಗೂ ಮೆರವಣಿಗೆಗೆ ಅವಕಾಶ ಇಲ್ಲ. ವಿಸರ್ಜನೆ ವೇಳೆ ಕನಿಷ್ಠ ಜನ ಸೇರಲು ಅವಕಾಶ ನೀಡಲಾಗಿದ್ದು, ಹೆಚ್ಚು ಜನ ಸೇರುವ ಹಾಗಿಲ್ಲ ಎಂದರು.

    ಸರಳ ದಸರಾ ರೀತಿಯೇ ಸರಳ ಗಣೇಶೋತ್ಸವ ಆಚರಣೆಗೆ ತೀರ್ಮಾನ. ಮನರಂಜನೆ ಸಾಂಸ್ಕೃತಿಕ ಕಾರ್ಯಕ್ರಮಗಗಳಿಗೆ ಅನುಮತಿ ಇಲ್ಲ. ಅದಲ್ಲದೆ ಸಂಘಟಕರು ಹಾಗೂ ಸಮಿತಿಯವರಿಗೆ ಕೊರೊನಾ ವ್ಯಾಕ್ಸಿನ್ ಹಾಗೂ ಟೆಸ್ಟಿಂಗ್ ಕಡ್ಡಾಯ ಮಾಡಲಾಗಿದೆ. ಸಭೆಯಲ್ಲಿ ನರ್ಸಿಂಗ್ ಕಾಲೇಜುಗಳಲ್ಲಿ ಕೊರೊನಾ ಉಲ್ಬಣ ಬಗ್ಗೆ ಚರ್ಚೆ ಮಾಡಲಾಗಿದೆ ಎಂದರು. ಇದನ್ನೂ ಓದಿ: ಷರತ್ತುಬದ್ಧ ನಿಯಮಗಳೊಂದಿಗೆ ಗಣೇಶೋತ್ಸವಕ್ಕೆ ಅನುಮತಿ