Tag: Karnataka Government

  • ಸಿನಿಮಾ ಟಿಕೆಟ್, OTT ಸಬ್‌ಸ್ಕ್ರಿಪ್ಶನ್ ಮೇಲೆ ಸೆಸ್‌ ವಿಧಿಸಲು ತೀರ್ಮಾನ – ಫಿಲ್ಮ್‌ ಚೇಂಬರ್‌ ಅಸಮಾಧಾನ

    ಸಿನಿಮಾ ಟಿಕೆಟ್, OTT ಸಬ್‌ಸ್ಕ್ರಿಪ್ಶನ್ ಮೇಲೆ ಸೆಸ್‌ ವಿಧಿಸಲು ತೀರ್ಮಾನ – ಫಿಲ್ಮ್‌ ಚೇಂಬರ್‌ ಅಸಮಾಧಾನ

    – ಹೆಚ್ಚುವರಿ ಸೆಸ್ ತೆಗೆಯುವಂತೆ ಸಿಎಂಗೆ ಮನವಿ

    ಬೆಂಗಳೂರು: ಸಿನಿಮಾ ಟಿಕೆಟ್‌ & ಒಟಿಟಿ ವೇದಿಕೆಗಳ ಸಬ್‌ಸ್ಕ್ರಿಪ್ಷನ್‌ ಶುಲ್ಕಗಳ ಮೇಲೆ ಸೆಸ್‌ (Cess) ವಿಧಿಸಲು ರಾಜ್ಯ ಸರ್ಕಾರ (Karnataka Government) ಮುಂದಾಗಿರುವುದಕ್ಕೆ ಫಿಲ್ಮ್ ಚೇಂಬರ್ ಅಸಮಾಧಾನ ವ್ಯಕ್ತಪಡಿಸಿದೆ. ಅಲ್ಲದೇ ಬಿಲ್‌ ಪುನರ್‌ ಪರಿಶೀಲಿಸುವಂತೆ ಮನವಿ ಮಾಡಿರುವುದಾಗಿ ಚೇಂಬರ್ ಅಧ್ಯಕ್ಷ ಎನ್.ಎಂ ಸುರೇಶ್ (NM Suresh) ತಿಳಿಸಿದ್ದಾರೆ.

    ಈ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎನ್.ಎಂ ಸುರೇಶ್ ಅವರು, ಕಾರ್ಮಿಕ ಕಲ್ಯಾಣ ನಿಧಿಗೋಸ್ಕರ ಸರ್ಕಾರ ಸಿನಿಮಾ ಟಿಕೆಟ್‌ & ಒಟಿಟಿ ವೇದಿಕೆಗಳ ಸಬ್‌ಸ್ಕ್ರಿಪ್ಷನ್‌ ಶುಲ್ಕಗಳ ಮೇಲೆ ಹೆಚ್ಚುವರಿ ಸೆಸ್ ವಿಧಿಸಲು ಸರ್ಕಾರ ತೀರ್ಮಾನ ಮಾಡಿದೆ. ಇದರಿಂದ ನಿರ್ಮಾಪಕರಿಗೆ ಹೊರೆಯಾಗುತ್ತೆ. ಸದ್ಯ ಚಿತ್ರರಂಗ ಸಂಕಷ್ಟದಲ್ಲಿದೆ. ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನ ಭೇಟಿಯಾಗಿ ಮನವಿ ಸಹ ಕೊಟ್ಟಿದ್ದೇವೆ. ಹೆಚ್ಚುವರಿ 2% ತೆರೆಗೆ ವಿಧಿಸದಂತೆ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. ಪುನರ್ ಪರಿಶೀಲನೆ ಮಾಡಿ ಸರ್ಕಾರ ಹೆಚ್ಚುವರಿ ಸೆಸ್ ತೆಗೆದು ಹಾಕುವಂತೆ ಸಿಎಂ ಅವ್ರಿಗೂ ಮನವಿ ಮಾಡಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪುನೀತ್ ಕೆರೆಹಳ್ಳಿ ಮೇಲೆ ಪೊಲೀಸರ ದೌರ್ಜನ್ಯ ಆರೋಪ – ಹಿಂದೂ ಸಂಘಟನೆಗಳ ಒಕ್ಕೂಟದಿಂದ ಕಮಿಷನರ್‌ಗೆ ದೂರು

    ಏನಿದು ಬಿಲ್‌?
    ಸಿನಿಮಾ ಟಿಕೆಟ್‌ & ಒಟಿಟಿ ವೇದಿಕೆಗಳ ಸಬ್‌ಸ್ಕ್ರಿಪ್ಷನ್‌ ಶುಲ್ಕಗಳ ಮೇಲೆ ಸೆಸ್‌ ವಿಧಿಸಲು ರಾಜ್ಯ ಸರ್ಕಾರ ಯೋಜಿಸಿದೆ. ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ವಿಧೇಯಕ-2024 ಮಂಡಿಸಲಾಗಿದೆ. ಶೇ.1 ಮೀರದಂತೆ ಶೇ.2 ಕ್ಕಿಂತ ಕಡಿಮೆಯಾಗದಂತೆ ಸೆಸ್‌ ವಿಧಿಸಲು ಸರ್ಕಾರ ಮುಂದಾಗಿದ್ದು, ಇದರಿಂದ ಸಿನಿಮಾ, ಸಾಂಸ್ಕೃತಿಕ ಕಲಾವಿದರಿಗೆ ಅನುಕೂಲವಾಗುವ ರೀತಿ ತೆರಿಗೆ ಸಂಗ್ರಹ ನಡೆಯಲಿದೆ ಎಂದು ಹೇಳಲಾಗಿದೆ. ಸಿನಿ, ಸಾಂಸ್ಕೃತಿಕ ಕಾರ್ಯಕರ್ತರ ಕ್ಷೇಮಾಭಿವೃದ್ಧಿಗೆ ಮಂಡಳಿ ಸ್ಥಾಪನೆ ಮಾಡಿ. ರಾಜ್ಯದಲ್ಲಿ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರಿಗೆ ಸಾಮಾಜಿಕ ಭದ್ರತೆ ಒದಗಿಸಲು ಅವಕಾಶ ಮಾಡಿಕೊಡುವ ವಿಧೇಯಕ ಇದಾಗಿದೆ. ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ ನೋಂದಣಿ, ಕ್ಷೇಮಾಭಿವೃದ್ಧಿ ನಿಧಿಗಾಗಿ ಸಿನಿಮಾ ಟಿಕೆಟ್ ಮೇಲೆ ಉಪ ಕರ ವಿಧಿಸುವುದು ವಿಧೇಯಕದಲ್ಲಿ ಪ್ರಸ್ತಾಪಿಸಲಾಗಿದೆ ಎಂದು ಉನ್ನದ ಮೂಲಗಳು ತಿಳಿಸಿವೆ. ಇದನ್ನೂ ಓದಿ: ನಾಯಿ ಸ್ವಲ್ಪ ಟಚ್‌ ಆದ್ರೂ ಮಸೀದಿಯೊಳಕ್ಕೆ ಹೋಗಲ್ಲ, ಅಂತಹದ್ದರಲ್ಲಿ ಮಾಂಸ ತರೋಕಾಗುತ್ತಾ? – ಅಬ್ದುಲ್‌ ರಜಾಕ್‌

    ವಿಧೇಯಕದ ಉದ್ದೇಶವೇನು?
    ಕಲಾವಿದರಿಗೆ ಒಳಿತು ಮಾಡುವುದೇ ಈ ಮಸೂದೆಯ ಉದ್ದೇಶ ಎಂದು ಹೇಳಲಾಗುತ್ತಿದೆ. ಕಲಾವಿದ, ತಂತ್ರಜ್ಞ, ನಿರ್ಮಾಪಕರು ಹೀಗೆ ನಾನಾ ವಿಭಾಗಗಳಲ್ಲಿ ಕೆಲಸ ಮಾಡುವವರು ಈ ನಿಧಿಯ ಭಾಗವಾಗಿರಲಿದ್ದಾರೆ. ಇದರ ಜೊತೆಗೆ ಮುಂದಿನ ದಿನಗಳಲ್ಲಿ ರಂಗಭೂಮಿಯಲ್ಲಿದ್ದವರಿಗೂ ಕೂಡ ಈ ಪ್ರಯೋಜನ ಸಿಗುವಂತೆ ಮಾಡುವ ಆಶಯ ಹೊಂದಿದೆ. ಸರ್ಕಾರವು ರಾಜ್ಯದಲ್ಲಿನ ಸಿನಿಮಾ, ಸಾಂಸ್ಕೃತಿಕ ಕಾರ್ಯಕರ್ತರಿಗೆ ಅನುಕೂಲವಾಗುವ ರೀತಿಯಲ್ಲಿ ‘ಕರ್ನಾಟಕ ಸಿನಿ, ಸಾಂಸ್ಕೃತಿಕ ಕಾರ್ಯಕರ್ತರ ಸಾಮಾಜಿಕ ಭದ್ರತೆ & ಕಲ್ಯಾಣ ನಿಧಿ ಹೆಸರಿನಲ್ಲಿ ನಿಧಿ ಸ್ಥಾಪಿಸಲು ವಿಧೇಯಕವನ್ನು ಪ್ರಸ್ತಾಪಿಸಲಾಗಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: Paris Olympics 2024: ಭಾರತದ ಮನು ಭಾಕರ್‌ ಫೈನಲ್‌ಗೆ ಎಂಟ್ರಿ – 20 ವರ್ಷಗಳ ಬಳಿಕ ವಿಶೇಷ ಸಾಧನೆ!

  • ಜುಲೈ ತಿಂಗಳು ಸಂತೃಪ್ತಿಯಾಗಿದೆ – ಆಗಸ್ಟ್‌ನಲ್ಲಿ 45 ಟಿಎಂಸಿ ನೀರು ಹರಿಸುವಂತೆ ತಮಿಳುನಾಡು ಒತ್ತಾಯ

    ಜುಲೈ ತಿಂಗಳು ಸಂತೃಪ್ತಿಯಾಗಿದೆ – ಆಗಸ್ಟ್‌ನಲ್ಲಿ 45 ಟಿಎಂಸಿ ನೀರು ಹರಿಸುವಂತೆ ತಮಿಳುನಾಡು ಒತ್ತಾಯ

    ನವದೆಹಲಿ: ಕಾವೇರಿ ಅಚ್ಚುಕಟ್ಟು ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು ತಮಿಳುನಾಡಿಗೆ (TamilNadu) ಸಮರ್ಪಕ ನೀರು ಹರಿದು ಹೋಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಯಾವುದೇ ಆದೇಶ ನೀಡದೇ ಸಭೆಯನ್ನು ಮುಂದೂಡಿದೆ.

    ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಸಂಬಂಧ ಜುಲೈ 14ರಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ನಡೆದಿತ್ತು.

    ಬುಧವಾರ ದೆಹಲಿಯಲ್ಲಿ ಸಭೆ ನಡೆಸಿದ ಪ್ರಾಧಿಕಾರ, ಎರಡು ರಾಜ್ಯಗಳಿಂದ ಮಾಹಿತಿ ಕಲೆ ಹಾಕಿತು. ಸುಪ್ರೀಂ ಕೋರ್ಟ್ (Supreme Court) ಆದೇಶದಂತೆ ಜುಲೈ ಮತ್ತು ಆಗಸ್ಟ್‌ನಲ್ಲಿ ನೀರು ಹರಿಸಬೇಕು, ಜುಲೈ ತಿಂಗಳ ನೀರಿನ ಪಾಲು ಸಂತೃಪ್ತಿಯಾಗಿದೆ ಎಂದು ಹೇಳಿ ಆಗಸ್ಟ್ ತಿಂಗಳ 45 ಟಿಎಂಸಿ ನೀರು ಹರಿಸಲು ತಮಿಳುನಾಡು ಒತ್ತಾಯಿಸಿದೆ. ಇದನ್ನೂ ಓದಿ: ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿ – ಕಾವೇರಿ ಕೊಳ್ಳದ ಜನರಿಗೆ ಪ್ರವಾಹದ ಆತಂಕ

    ಜೂನ್ 1 ರಿಂದ ಜುಲೈ 22 ವರೆಗೂ ಕರ್ನಾಟಕದ 4 ಜಲಾಶಯಗಳ ಒಳಹರಿವು 118.245 ಟಿಎಂಸಿಯಷ್ಟಿದೆ. ಆದರೆ, ಇದೇ ಅವಧಿಯಲ್ಲಿ 30 ವರ್ಷಗಳ ಸರಾಸರಿ (1989-90 ರಿಂದ 2018-19) ಒಳಹರಿವು 98.679 ಟಿಎಂಸಿ ಇದೆ. ಕಾವೇರಿ ನೀರು ನಿಯಂತ್ರಣ ಸಮಿತಿ ತನ್ನ 99ನೇ ಸಭೆಯಲ್ಲಿ ಬಿಳಿಗುಂಡ್ಲುವಿನಲ್ಲಿ ಕರ್ನಾಟಕವು ಜುಲೈ 31ರ ವರೆಗೆ ಪ್ರತಿದಿನ 1 ಟಿಎಂಸಿಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ನಿರ್ಧರಿಸಿತು. ಅಂತೆಯೇ ನೀರು ಹರಿಸಿದೆ. ಬಿಳಿಗುಂಡ್ಲುವಿನಲ್ಲಿ ಖಾತ್ರಿಪಡಿಸಬೇಕಾದ ಹರಿವನ್ನು ನಿರ್ಧರಿಸುವಾಗ ತಮಿಳುನಾಡಿನ ಮೂರು ಜಲಾಶಯಗಳಲ್ಲಿನ ಕ್ಯಾರಿಓವರ್ ಶೇಖರಣೆ ಮತ್ತು ಇಡೀ ಕಾವೇರಿ ಜಲಾನಯನ ಪ್ರದೇಶದಲ್ಲಿನ ಜಲವಿಜ್ಞಾನದ ಸ್ಥಿತಿಯನ್ನು ಗಣನೆಗೆ ತೆಗೆದುಕೊಳ್ಳಬೇಕಾಗುತ್ತದೆ ಎಂದು ಕರ್ನಾಟಕ ಹೇಳಿತು.

    ಸದ್ಯ ನೀರಿನ ಹರಿವು ಸುಗಮವಾಗಿರುವ ಹಿನ್ನೆಲೆಯಲ್ಲಿ ಯಾವುದೇ ಆದೇಶ ನೀಡುವುದಿಲ್ಲ, ಸುಪ್ರೀಂ ಕೋರ್ಟ್ ಆದೇಶದ ಅನ್ವಯ ನೀರು ಬಿಡಿ. ಜುಲೈ 30 ರಂದು ಕಾವೇರಿ ನೀರು ನಿರ್ವಹಣಾ ಸಮಿತಿ ಸಭೆ ನಡೆಸಿ, ತಮಿಳುನಾಡಿಗೆ ನೀಡಬೇಕಾದ ನೀರಿನ ಪ್ರಮಾಣದ ಬಗ್ಗೆ ಮತ್ತೊಮ್ಮೆ ಸಮಾಲೋಚನೆ ನಡೆಸಲಾಗುವುದು ಎಂದು ಸಿಡಬ್ಲ್ಯೂಆರ್‌ಸಿ ಹೇಳಿದೆ. ಇದನ್ನೂ ಓದಿ: ಯಾವ ರಾಜ್ಯವನ್ನೂ ಕಡೆಗಣಿಸಿಲ್ಲ, ಪ್ರತಿಪಕ್ಷಗಳ ಪ್ರತಿಭಟನೆ ದುರುದ್ದೇಶಪೂರ್ವಕ: ನಿರ್ಮಲಾ ಸೀತಾರಾಮನ್

    ಜುಲೈ 14ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಸರ್ವಪಕ್ಷಗಳ ಸಭೆಯಲ್ಲಿ ತಮಿಳುನಾಡಿಗೆ ಪ್ರತಿನಿತ್ಯ 1 ಟಿಎಂಸಿ ನೀರಿಗೆ ಬದಲಾಗಿ, ಜುಲೈ 31ರ ವರೆಗೆ 8 ಸಾವಿರ ಕ್ಯುಸೆಕ್‌ ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಗಿತ್ತು. ಇದನ್ನೂ ಓದಿ: ತಮಿಳುನಾಡಿಗೆ ಕಾವೇರಿ – ನಿತ್ಯ 8 ಸಾವಿರ ಕ್ಯುಸೆಕ್‌ ನೀರು ಹರಿಸಲು ಸರ್ಕಾರ ನಿರ್ಧಾರ: ಸಿಎಂ

  • ಸಿನಿಮಾ ಟಿಕೆಟ್, ಒಟಿಟಿ ಸಬ್‌ಸ್ಕ್ರಿಪ್ಶನ್ ಮೇಲೆ ಸೆಸ್‌ ವಿಧಿಸಲು ರಾಜ್ಯ ಸರ್ಕಾರ ಪ್ಲ್ಯಾನ್‌!

    ಸಿನಿಮಾ ಟಿಕೆಟ್, ಒಟಿಟಿ ಸಬ್‌ಸ್ಕ್ರಿಪ್ಶನ್ ಮೇಲೆ ಸೆಸ್‌ ವಿಧಿಸಲು ರಾಜ್ಯ ಸರ್ಕಾರ ಪ್ಲ್ಯಾನ್‌!

    ಬೆಂಗಳೂರು: ಸಿನಿಮಾ ಟಿಕೆಟ್‌ & ಒಟಿಟಿ ವೇದಿಕೆಗಳ ಸಬ್‌ಸ್ಕ್ರಿಪ್ಷನ್‌ ಶುಲ್ಕಗಳ ಮೇಲೆ ಸೆಸ್‌ (Cess) ವಿಧಿಸಲು ರಾಜ್ಯ ಸರ್ಕಾರ (Karnataka Government) ಯೋಜಿಸಿದೆ. ಈ ಸಂಬಂಧ ವಿಧಾನಸಭೆಯಲ್ಲಿ (Assembly) ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ವಿಧೇಯಕ-2024 ಮಂಡಿಸಲಾಗಿದೆ. ಶೇ.1 ಮೀರದಂತೆ ಶೇ.2 ಕ್ಕಿಂತ ಕಡಿಮೆಯಾಗದಂತೆ ಸೆಸ್‌ ವಿಧಿಸಲು ಸರ್ಕಾರ ಮುಂದಾಗಿದ್ದು, ಇದರಿಂದ ಸಿನಿಮಾ, ಸಾಂಸ್ಕೃತಿಕ ಕಲಾವಿದರಿಗೆ ಅನುಕೂಲವಾಗುವ ರೀತಿ ತೆರಿಗೆ ಸಂಗ್ರಹ ನಡೆಯಲಿದೆ ಎಂದು ಹೇಳಲಾಗಿದೆ.

    ಸಾಂದರ್ಭಿಕ ಚಿತ್ರ

    ಸಿನಿ, ಸಾಂಸ್ಕೃತಿಕ ಕಾರ್ಯಕರ್ತರ ಕ್ಷೇಮಾಭಿವೃದ್ಧಿಗೆ ಮಂಡಳಿ ಸ್ಥಾಪನೆ ಮಾಡಿ. ರಾಜ್ಯದಲ್ಲಿ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರಿಗೆ ಸಾಮಾಜಿಕ ಭದ್ರತೆ ಒದಗಿಸಲು ಅವಕಾಶ ಮಾಡಿಕೊಡುವ ವಿಧೇಯಕ ಇದಾಗಿದೆ. ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ ನೋಂದಣಿ, ಕ್ಷೇಮಾಭಿವೃದ್ಧಿ ನಿಧಿಗಾಗಿ ಸಿನಿಮಾ ಟಿಕೆಟ್ ಮೇಲೆ ಉಪ ಕರ ವಿಧಿಸುವುದು ವಿಧೇಯಕದಲ್ಲಿ ಪ್ರಸ್ತಾಪಿಸಲಾಗಿದೆ ಎಂದು ಉನ್ನದ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಬಾಂಗ್ಲಾದಲ್ಲಿ ಭುಗಿಲೆದ್ದ ಹಿಂಸಾಚಾರಕ್ಕೆ 115 ಮಂದಿ ಬಲಿ – 1,000ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ತವರಿಗೆ ವಾಪಸ್‌

    ವಿಧೇಯಕದ ಉದ್ದೇಶವೇನು?
    ಕಲಾವಿದರಿಗೆ ಒಳಿತು ಮಾಡುವುದೇ ಈ ಮಸೂದೆಯ ಉದ್ದೇಶ ಎಂದು ಹೇಳಲಾಗುತ್ತಿದೆ. ಕಲಾವಿದ, ತಂತ್ರಜ್ಞ, ನಿರ್ಮಾಪಕರು ಹೀಗೆ ನಾನಾ ವಿಭಾಗಗಳಲ್ಲಿ ಕೆಲಸ ಮಾಡುವವರು ಈ ನಿಧಿಯ ಭಾಗವಾಗಿರಲಿದ್ದಾರೆ. ಇದರ ಜೊತೆಗೆ ಮುಂದಿನ ದಿನಗಳಲ್ಲಿ ರಂಗಭೂಮಿಯಲ್ಲಿದ್ದವರಿಗೂ ಕೂಡ ಈ ಪ್ರಯೋಜನ ಸಿಗುವಂತೆ ಮಾಡುವ ಆಶಯ ಹೊಂದಿದೆ. ಸರ್ಕಾರವು ರಾಜ್ಯದಲ್ಲಿನ ಸಿನಿಮಾ, ಸಾಂಸ್ಕೃತಿಕ ಕಾರ್ಯಕರ್ತರಿಗೆ ಅನುಕೂಲವಾಗುವ ರೀತಿಯಲ್ಲಿ ‘ಕರ್ನಾಟಕ ಸಿನಿ, ಸಾಂಸ್ಕೃತಿಕ ಕಾರ್ಯಕರ್ತರ ಸಾಮಾಜಿಕ ಭದ್ರತೆ & ಕಲ್ಯಾಣ ನಿಧಿ ಹೆಸರಿನಲ್ಲಿ ನಿಧಿ ಸ್ಥಾಪಿಸಲು ವಿಧೇಯಕವನ್ನು ಪ್ರಸ್ತಾಪಿಸಲಾಗಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: NEET-UG ಪ್ರಶ್ನೆಪತ್ರಿಕೆ ಸೋರಿಕೆ ಕೇಸ್‌ – ಮಾಸ್ಟರ್‌ ಮೈಂಡ್‌, ಇಬ್ಬರು ಎಂಬಿಬಿಎಸ್‌ ವಿದ್ಯಾರ್ಥಿಗಳು ಅರೆಸ್ಟ್‌

    ಎಷ್ಟು ಸೆಸ್ ವಿಧಿಸಲಾಗುತ್ತದೆ?
    ಸದ್ಯ ಲಭ್ಯವಿರುವ ಮಾಹಿತಿಗಳ ಪ್ರಕಾರ, ಸರ್ಕಾರವು ಸೂಚಿಸುವ ದರಗಳಲ್ಲಿ ಸೆಸ್‌ ವಿಧಿಸಲಾಗುವುದು. ಸಿನಿಮಾ ಟಿಕೆಟ್ ಹಾಗೂ ಚಂದಾದಾರಿಕೆ ಶುಲ್ಕಗಳು ಜೊತೆಗೆ ಸಂಬಂಧಿತ ಸಂಸ್ಥೆಗಳಿಂದ ಬರುವ ಎಲ್ಲ ಆದಾಯದ ಮೇಲೆ ಶೇ.2ಕ್ಕಿಂತ ಮೀರದಂತೆ ಜೊತೆಗೆ ಶೇ.1ಕ್ಕಿಂತ ಕಡಿಮೆಯಾಗದಂತೆ ಸೆಸ್‌ ವಿಧಿಸಲಾಗುವುದು ಎನ್ನಲಾಗಿದೆ. ಇದನ್ನೂ ಓದಿ: Karnataka Rain Alert: ಕೆಆರ್‌ಎಸ್‌ ಡ್ಯಾಂ ಭರ್ತಿಗೆ 4 ಅಡಿಯಷ್ಟೇ ಬಾಕಿ; ಮಳೆ ಆರ್ಭಟಕ್ಕೆ ಹಲವೆಡೆ ಅವಾಂತರ – ಎಲ್ಲೆಲ್ಲಿ ಏನಾಗಿದೆ?

  • ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್‌; ಆ.7ರಿಂದ 7ನೇ ವೇತನ ಆಯೋಗದ ಶೀಫಾರಸ್ಸು ಜಾರಿ – ಜು.16ರಂದು ಅಧಿಕೃತ ಪ್ರಕಟ ಸಾಧ್ಯತೆ!

    ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್‌; ಆ.7ರಿಂದ 7ನೇ ವೇತನ ಆಯೋಗದ ಶೀಫಾರಸ್ಸು ಜಾರಿ – ಜು.16ರಂದು ಅಧಿಕೃತ ಪ್ರಕಟ ಸಾಧ್ಯತೆ!

    ಬೆಂಗಳೂರು: ಆಗಸ್ಟ್ 1 ರಿಂದ 7ನೇ ವೇತನ ಆಯೋಗದ (7th Pay Commission) ಶಿಫಾರಸ್ಸು ಜಾರಿಗೆ ಸರ್ಕಾರ (Karnataka Government) ತೀರ್ಮಾನಿಸಿದೆ.

    ಮಾ.16 ರಂದು ಸುಧಾಕರ್ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ವರದಿಯನ್ನು ಸಿಎಂ ಸಿದ್ದರಾಮಯ್ಯ (Siddaramaiah) ಸ್ವೀಕಾರ ಮಾಡಿದ್ದರು. ಬಳಿಕ ವೇತನ ಆಯೋಗದ ಶಿಫಾರಸು ಜಾರಿ ಬಗ್ಗೆ ಹಣಕಾಸು ಇಲಾಖೆಯಿಂದ ಹಣದ ಹೊಂದಾಣಿಕೆ ಕುರಿತು ಮಾಹಿತಿ ಕೇಳಲಾಗಿತ್ತು. ಇದೀಗ ಹಣಕಾಸು ಇಲಾಖೆಯ ವರದಿ ಬಳಿಕ ಸರ್ಕಾರ ತೀರ್ಮಾನ ಕೈಗೊಂಡಿದೆ. ಇದನ್ನೂ ಓದಿ: ಮುಡಾ, ವಾಲ್ಮೀಕಿ ನಿಗಮದ ಹಗರಣ ತಾರ್ಕಿಕ ಅಂತ್ಯಕ್ಕೆ ಒಯ್ಯುತ್ತೇವೆ: ವಿಜಯೇಂದ್ರ

    ಆಯೋಗದ ಶಿಫಾರಸು ಜಾರಿಗೊಳಿಸುವ ತೀರ್ಮಾನವನ್ನ ಸಂಪುಟ ಸಭೆಯಲ್ಲಿ ಸಿಎಂ ಪ್ರಕಟಿಸಿದ್ದಾರೆ. 27.5% ವೇತನ ಹೆಚ್ಚಳಕ್ಕೆ ಶಿಫಾರಸ್ಸು ವೇತನ ಆಯೋಗ ಶಿಫಾರಸು ಮಾಡಿತ್ತು. 27% ವೇತನ ಹೆಚ್ಚಳ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

    ಮಂಗಳವಾರ (ಜು.16) ಸದನದಲ್ಲಿ ಸಿಎಂ ಸಿದ್ದರಾಮಯ್ಯ ಅಧಿಕೃತವಾಗಿ ಈ ಬಗ್ಗೆ ಪ್ರಕಟ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಕಟಾಕಟ್‌ ಅಂತ ದಲಿತರ ಹಣ ಲೂಟಿಯಾಗಿದೆ, ಇದು ಕರ್ನಾಟಕ ಇತಿಹಾಸಕ್ಕೆ ಕಪ್ಪು ಚುಕ್ಕೆ: ಗುಡುಗಿದ ಅಶೋಕ್‌

  • ಗ್ಯಾರಂಟಿಗಳ ಭಾರದಿಂದ ಕಂಗೆಟ್ಟ ಸರ್ಕಾರ -ಆಪರೇಷನ್ ಬಿಪಿಎಲ್ ಕಾರ್ಡ್‌ಗೆ ಪ್ಲಾನ್!

    ಗ್ಯಾರಂಟಿಗಳ ಭಾರದಿಂದ ಕಂಗೆಟ್ಟ ಸರ್ಕಾರ -ಆಪರೇಷನ್ ಬಿಪಿಎಲ್ ಕಾರ್ಡ್‌ಗೆ ಪ್ಲಾನ್!

    – ಅನರ್ಹ ಫಲಾನುಭವಿಗಳ ಪತ್ತೆಗೆ ಆಹಾರ ಇಲಾಖೆ ಸಜ್ಜು

    ಬೆಂಗಳೂರು: ಗ್ಯಾರಂಟಿಗಳ (Congress Guarantee) ಆರ್ಥಿಕ ಭಾರದಿಂದ ಕುಸಿದಂತಿರುವ ರಾಜ್ಯ ಸರ್ಕಾರ ಈಗ ರಿಯಲ್ ಆಪರೇಷನ್‌ಗೆ ಕೈ ಹಾಕಿದಂತೆ ಕಾಣುತ್ತಿದೆ. ರಾಜ್ಯದ 80% ರಷ್ಟು ಜನರ ಬಳಿ ಬಿಪಿಎಲ್ ಕಾರ್ಡ್ (BPL Card) ಇದ್ದು ಕೂಡಲೇ ಅನರ್ಹರನ್ನು ಪತ್ತೆ ಹಚ್ಚಿ ಎಂದು ರಾಜ್ಯ ಸರ್ಕಾರ (Karnataka Government) ಆದೇಶ ಪ್ರಕಟಿಸಿದೆ.

    ಈ ಬೆನ್ನಲ್ಲೇ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಅನರ್ಹ ಫಲಾಭವಿಗಳನ್ನು ಪತ್ತೆ ಹಚ್ಚಲು ತಯಾರಿ ನಡೆಸಿದೆ. ಅಂದಾಜು 20 ಲಕ್ಷ ಬಿಪಿಎಲ್ ಕಾರ್ಡ್ ರದ್ದಾಗಬಹುದು ಎಂದು ಹೇಳಲಾಗ್ತಿದೆ. ಇದನ್ನೂ ಓದಿ: ವಾಲ್ಮೀಕಿ ನಿಗಮ ಗೋಲ್ಮಾಲ್‌ಗೆ ಸ್ಪೋಟಕಆಡಿಯೋ ಸಾಕ್ಷ್ಯ – ನಾಗೇಂದ್ರ ಕಡೆಯವರಿಂದಲೇ ಅಕ್ರಮ ಆರೋಪ

    ರಾಜ್ಯದಲ್ಲಿ ಸದ್ಯದ 1.27 ಕೋಟಿ ಬಿಪಿಎಲ್ ಕಾರ್ಡ್‌ಗಳಿದ್ದು 4.36 ಕೋಟಿ ಮಂದಿ ಬಿಪಿಎಲ್ ಕಾರ್ಡ್ ಮೂಲಕ ಸರ್ಕಾರದ ಸವಲತ್ತುಗಳನ್ನು ಪಡೆಯುತ್ತಿದ್ದಾರೆ. ಇದು ಸಾಲದೆಂಬಂತೆ ಹೊಸದಾಗಿ ಬಿಪಿಎಲ್ ಕಾರ್ಡ್‌ಗೆ 3 ಲಕ್ಷ ಮಂದಿ ಅರ್ಜಿ ಸಲ್ಲಿಸಿದ್ದಾರೆ.

    ಇದೀಗ ಅನರ್ಹ, ಅಕ್ರಮ ಫಲಾನುಭವಿಗಳನ್ನು ಪತ್ತೆ ಹಚ್ಚಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನಾಲ್ಕು ಬೇರೆ ಇಲಾಖೆಗಳ ಸಹಕಾರ ಪಡೆಯಲು ಮುಂದಾಗಿದೆ. ಕಾರ್ಡ್‌ದಾರರ ಹೆಸರಲ್ಲಿ ವಾಹನ ಇವೆಯಾ ಎಂಬುದನ್ನು ಪತ್ತೆ ಹಚ್ಚಲು ಸಾರಿಗೆ ಇಲಾಖೆ, ಜಮೀನು ಎಷ್ಟಿದೆ ಎಂಬುದನ್ನು ತಿಳಿಯಲು ಕಂದಾಯ ಇಲಾಖೆ, ತೆರಿಗೆ ಪಾವತಿದಾರರಾ ಎಂಬುದನ್ನು ಪತ್ತೆ ಹಚ್ಚಲು ಐಟಿ ಇಲಾಖೆಯ ನೆರವು ಪಡೆಯಲು ಆಹಾರ ಇಲಾಖೆ ಸಜ್ಜಾಗುತ್ತಿದೆ. ಇದನ್ನೂ ಓದಿ: ಜೈಲಿನ ಊಟದಿಂದ ಫುಡ್ ಪಾಯಿಸನ್ ಆಗ್ತಿದೆ – ಮನೆ ಊಟ ಬೇಕೆಂದು ಹೈಕೋರ್ಟ್‌ಗೆ ದರ್ಶನ್ ಅರ್ಜಿ

    ಯಾರ ಕಾರ್ಡ್ ರದ್ದಾಗಬಹುದು?
    ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷ ರೂ. ಮೀರಿದಲ್ಲಿ, ಆದಾಯ ತೆರಿಗೆ ಪಾವತಿ ಮಾಡಿದ್ದರೆ, ನಿಗದಿಗಿಂತ ಹೆಚ್ಚು ಜಮೀನು ಹೊಂದಿದ್ದರೆ, ನಗರಗಳಲ್ಲಿ 1000 ಚದರಡಿಯ ಪಕ್ಕಾ ಮನೆ ಇದ್ದಲ್ಲಿ, ಪ್ರತಿ ತಿಂಗಳು 150 ಯೂನಿಟ್‌ಗಿಂತ ಹೆಚ್ಚು ವಿದ್ಯುತ್ ಬಳಕೆ ಮಾಡಿದಲ್ಲಿ, ವೈಟ್ ಬೋರ್ಡ್‌ 4 ಚಕ್ರದ ವಾಹನ ಇದ್ದು ಬಿಪಿಎಲ್‌ ಕಾರ್ಡ್‌ ಮಾಡಿಸಿದವರ ಕಾರ್ಡ್‌ ರದ್ದಾಗಲಿದೆ.

  • ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಿಸಿದ ಕೇಂದ್ರ

    ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಿಸಿದ ಕೇಂದ್ರ

    ನವದೆಹಲಿ: ಕೇಂದ್ರ ಸರ್ಕಾರ ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ (Drought Relief Funds) ಘೋಷಣೆ ಮಾಡಿದೆ. ಕರ್ನಾಟಕ ಮಾತ್ರವಲ್ಲದೆ ತಮಿಳುನಾಡಿಗೆ ಚಂಡಮಾರುತ ಹಾಗೂ ಪ್ರವಾಹ ಪರಿಹಾರವೆಂದು 275 ಕೋಟಿ ರೂ. ನೀಡಿದೆ.

    ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ರಾಜ್ಯ ಸರ್ಕಾರ  (Karnataka Government) ಕೇಂದ್ರಕ್ಕೆ ಬರ ಪರಿಹಾರಕ್ಕಾಗಿ 18,174 ಕೋಟಿ ರೂ. ಹಣದ ಬೇಡಿಕೆ ಇಟ್ಟಿತ್ತು. ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಿರದ ಹಿನ್ನೆಲೆ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‍ನ (Supreme Court of India) ಮೊರೆ ಹೋಗಿತ್ತು. ಬಳಿಕ ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಸುಪ್ರೀಂಕೋರ್ಟ್‍ಗೆ ಹೇಳಿತ್ತು. ಅದರಂತೆ ಇದೀಗ ಕೇಂದ್ರ ಸರ್ಕರ ಬರ ಪರಿಹಾರ ಘೋಷಣೆ ಮಾಡಿದೆ. ಇದನ್ನೂ ಓದಿ: ಬರ ಪರಿಹಾರ ಬಿಡುಗಡೆಗೆ ಈ ವಾರದಲ್ಲಿ ಕ್ರಮ – ಸುಪ್ರೀಂಗೆ ಕೇಂದ್ರ ಸರ್ಕಾರದ ಭರವಸೆ

    ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್‍ಗೆ ಸಲ್ಲಿಸಿದ್ದ ಅರ್ಜಿಯನ್ನು ಏಪ್ರಿಲ್ 22 ರಂದು ನ್ಯಾ.ಬಿ.ಆರ್ ಗವಾಯಿ ನೇತೃತ್ವದ ದ್ವಿ ಸದಸ್ಯ ಪೀಠ ವಿಚಾರಣೆ ನಡೆಸಿತ್ತು. ವಿಚಾರಣೆ ಆರಂಭವಾಗುತ್ತಿದ್ದಂತೆ ಕೇಂದ್ರ ಸರ್ಕಾರವನ್ನು ಪ್ರತಿನಿಧಿಸಿದ ಅಟಾರ್ನಿ ಜನರಲ್ ಆರ್.ವೆಂಕಟರಮಣಿ, ಚುನಾವಣಾ ಆಯೋಗದ ಜೊತೆಗೆ ಈ ಬಗ್ಗೆ ಚರ್ಚಿಸಲಾಗಿದ್ದು, ಬರ ಪರಿಹಾರ ಬಿಡುಗಡೆಗೆ ಆಯೋಗ ಅನುಮತಿ ನೀಡಿದೆ. ಹೀಗಾಗಿ ಈ ವಾರದೊಳಗೆ ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದರು.

    ಕೇಂದ್ರ ಸರ್ಕಾರ ಭರವಸೆ ನೀಡಿರುವ ಬೆನ್ನಲ್ಲೇ ಮಧ್ಯಪ್ರವೇಶ ಮಾಡಿದ ನ್ಯಾ.ಬಿ.ಆರ್ ಗವಾಯಿ, ಒಕ್ಕೂಟ ವ್ಯವಸ್ಥೆಯಲ್ಲಿ ಇಂತಹ ವಿಷಯಗಳನ್ನು ಸೌರ್ಹಾದಯುತವಾಗಿ ಬಗೆಹರಿಸಿಕೊಳ್ಳಬೇಕು. ಸುಪ್ರೀಂಕೋರ್ಟ್ ತನಕ ಈ ಪ್ರಕರಣ ಬರಬಾರದು ಎಂದು ಕೇಂದ್ರ ಸರ್ಕಾರಕ್ಕೆ ಸೂಚಿಸಿದ್ದರು. ಬಳಿಕ ಅರ್ಜಿ ವಿಚಾರಣೆಯನ್ನು ಕೋರ್ಟ್ ಏ.29ಕ್ಕೆ ಮುಂದೂಡಿತ್ತು.

    ಕೇಂದ್ರ, ರಾಜ್ಯಕ್ಕೆ ಗೃಹ ಇಲಾಖೆ ಷರತ್ತು

    ಕೇಂದ್ರದಿಂದ ಕರ್ನಾಟಕಕ್ಕೆ ಬರ ಪರಿಹಾರ ಬಿಡುಗಡೆಯಾದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಇಲಾಖೆ, ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಕೆಲವು ಷರತ್ತುಗಳನ್ನು ವಿಧಿಸಿದೆ. ಲೋಕಸಭಾ ಚುನಾವಣೆ ನೀತಿ ಸಂಹಿತೆ ಹಿನ್ನಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಅನ್ವಯವಾಗುವಂತೆ ಷರತ್ತನ್ನು ವಿಧಿಸಲಾಗಿದೆ.

    ಬರ ಪರಿಹಾರ ಬಿಡುಗಡೆಯನ್ನು ರಾಜಕೀಯವಾಗಿ ಬಳಸಿಕೊಳ್ಳುವಂತಿಲ್ಲ. ಈ ಬಗ್ಗೆ ಮಾಧ್ಯಮಗಳಲ್ಲಿ ಜಾಹೀರಾತು ನೀಡುವಂತಿಲ್ಲ. ರಾಜಕೀಯ ಭಾಷಣಗಳಲ್ಲೂ ಈ ಬಗ್ಗೆ ಉಲ್ಲೇಖಿಸುವಂತಿಲ್ಲ. ಬರ ಪರಿಹಾರದ ವಿಚಾರವಾಗಿ ಸುದ್ದಿಗೋಷ್ಠಿಯನ್ನು ನಡೆಸುವಂತಿಲ್ಲ. ಬರ ಪರಿಹಾರದ ಹಣವನ್ನು ಬದಲಿ ಕಾರ್ಯಗಳಿಗೆ ಬಳಸಿಕೊಳ್ಳುವಂತಿಲ್ಲ ಹಾಗೂ ನೀತಿ ಸಂಹಿತೆ ನಡುವೆ ಹೊಸ ಕಾರ್ಯಗಳನ್ನು ಮಾಡುವಂತಿಲ್ಲ ಎಂದು ಇಲಾಖೆ ಎಚ್ಚರಿಸಿದೆ. ಇದನ್ನೂ ಓದಿ: ರಾಜ್ಯದ ಅತಿದೊಡ್ಡ ಶೈಕ್ಷಣಿಕ ಮೇಳ ಪಬ್ಲಿಕ್‌ ಟಿವಿ ವಿದ್ಯಾಪೀಠಕ್ಕೆ ಚಾಲನೆ

  • ನಾಮಫಲಕಗಳಲ್ಲಿ ಶೇ.60 ಕನ್ನಡ ಕಡ್ಡಾಯಗೊಳಿಸಿ ನೀಡಿದ್ದ ಗಡುವು 2 ವಾರ ವಿಸ್ತರಣೆ

    ನಾಮಫಲಕಗಳಲ್ಲಿ ಶೇ.60 ಕನ್ನಡ ಕಡ್ಡಾಯಗೊಳಿಸಿ ನೀಡಿದ್ದ ಗಡುವು 2 ವಾರ ವಿಸ್ತರಣೆ

    ಬೆಂಗಳೂರು: ನಗರದ ಅಂಗಡಿ ಮುಂಗಟ್ಟುಗಳು, ವಾಣಿಜ್ಯ ಮಳಿಗೆಗಳಲ್ಲಿ ಕನ್ನಡ ನಾಮಫಲಕ (Kannada) ಅಳವಡಿಕೆಗೆ ನಿಗದಿ ಪಡಿಸಿದ್ದ ಗಡುವನ್ನು ವಿಸ್ತರಿಸಲಾಗಿದೆ.

    ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಹಾಕಿರುವ ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar), ಬೆಂಗಳೂರಿನ ಎಲ್ಲಾ ಅಂಗಡಿ ಮುಂಗಟ್ಟುಗಳು, ವಾಣಿಜ್ಯ ಮಳಿಗೆಗಳು ಮೊದಲಾದ ಕಡೆ ಶೇ.60 ರಷ್ಟು ಕನ್ನಡ ನಾಮಫಲಕಗಳನ್ನು ಅಳವಡಿಸಲು ಹೆಚ್ಚಿನ ಸಮಯ ಬೇಕೆಂಬುದನ್ನು ಪರಿಗಣಿಸಿ, ಈಗಾಗಲೇ ನೀಡಲಾಗಿದ್ದ ಗಡುವನ್ನು 2 ವಾರಗಳ ಕಾಲ ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪಶುಸಂಗೋಪನಾ ಇಲಾಖೆಯ 2 ಎಕರೆ ಜಮೀನು ಅಲ್ಪಸಂಖ್ಯಾತರಿಗೆ – ಸರ್ಕಾರದ ನಡೆಗೆ ವಿರೋಧ

    ಕನ್ನಡ ನಾಡಿನಲ್ಲಿ ಕನ್ನಡವೇ ಸಾರ್ವಭೌಮ, ಹಾಗಾಗಿ ನಮ್ಮ ಹೃದಯದ ಭಾಷೆಯನ್ನು ಎತ್ತಿಹಿಡಿಯುವುದು ಅತಿ ಮುಖ್ಯ. 2 ವಾರಗಳ ನಂತರ ಎಲ್ಲರೂ ಕಾನೂನು ಪಾಲನೆ ಮಾಡುತ್ತಾರೆ ಎಂದು ನಿರೀಕ್ಷಿಸಿದ್ದೇನೆ ಎಂದಿದ್ದಾರೆ.

    ಬಿಬಿಎಂಪಿ ವ್ಯಾಪ್ತಿಯಲ್ಲಿ ಕೇವಲ 3 ಸಾವಿರ ಉದ್ದಿಮೆದಾರರು ಮಾತ್ರ 60% ನಿಯಮ ಪಾಲಿಸಬೇಕಿದೆ. ಬೆಂಗಳೂರಿನಲ್ಲಿ 55,178 ಉದ್ದಿಮೆದಾರರಿಗೆ ನೋಟಿಸ್ ನೀಡಲಾಗಿದೆ. 60% ಕನ್ನಡ ನಿಯಮ ಉಲ್ಲಂಘನೆ ಮಾಡಿರುವ 55,178 ಉದ್ದಿಮೆದಾರರಿಗೆ ನೋಟಿಸ್ ಹೋಗಿದೆ. ಇದನ್ನೂ ಓದಿ: ಚಲನಚಿತ್ರ ಅಕಾಡೆಮಿಗೆ ನಟ, ಸಂಗೀತ ನಿರ್ದೇಶಕ ಸಾಧು ಕೋಕಿಲಾ ಅಧ್ಯಕ್ಷರಾಗಿ ನೇಮಕ

    ನೋಟಿಸ್ ನೀಡಿದ ಬಳಿಕ ಈ ಉದ್ದಿಮೆದಾರರು 60% ಕನ್ನಡ ನಾಮಫಲಕ ಅಳವಡಿಸಿದ್ದಾರೆ. ನೋಟಿಸ್ ನೀಡಿದ ಬಳಿಕವೂ 60% ನಿಯಮ ಅನುಸರಿಸದ 3,044 ಉದ್ದಿಮೆದಾರರು ಇದ್ದಾರೆ. ಅವರ ವಿರುದ್ಧ ಸರ್ಕಾರ ಶಿಸ್ತುಕ್ರಮಕೈಗೊಳ್ಳುವ ಎಚ್ಚರಿಕೆ ನೀಡಿದೆ.

  • ಕರ್ನಾಟಕದ GSTಯ ಒಂದು ಪೈಸೆಯೂ ಬಾಕಿ ಉಳಿಸಿಕೊಂಡಿಲ್ಲ – ನಿರ್ಮಲಾ ಸೀತಾರಾಮನ್

    ಕರ್ನಾಟಕದ GSTಯ ಒಂದು ಪೈಸೆಯೂ ಬಾಕಿ ಉಳಿಸಿಕೊಂಡಿಲ್ಲ – ನಿರ್ಮಲಾ ಸೀತಾರಾಮನ್

    ನವದೆಹಲಿ: ಕರ್ನಾಟಕದ ಜಿಎಸ್‌ಟಿಯ ಒಂದು ಪೈಸೆಯನ್ನೂ ಕೇಂದ್ರ ಸರ್ಕಾರ ಬಾಕಿ ಉಳಿಸಿಕೊಂಡಿಲ್ಲ ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಸ್ಪಷ್ಟನೆ ನೀಡಿದ್ದಾರೆ.

    ದೆಹಲಿಯಲ್ಲಿಂದು (Delhi) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕಕ್ಕೆ ಕಡಿಮೆ ತೆರಿಗೆ ಹಂಚಿಕೆ ಮಾಡಲಾಗಿದೆ ಎಂಬ ಕಾಂಗ್ರೆಸ್ (Congress) ಆರೋಪಕ್ಕೆ ಸ್ಪಷ್ಟನೆ ನೀಡಿದ್ದಾರೆ. ಕರ್ನಾಟಕದ ಜಿಎಸ್‌ಟಿಯ ಒಂದು ಪೈಸೆಯೂ ಬಾಕಿ ಉಳಿಸಿಕೊಂಡಿಲ್ಲ. ಕರ್ನಾಟಕದ ಜನತೆ ಈ ಬಗ್ಗೆ ಪ್ರಶ್ನೆ ಮಾಡುತ್ತಿಲ್ಲ. ತೆರಿಗೆ ಕಟ್ಟುತ್ತಿರುವುದಕ್ಕೆ ಕನ್ನಡಿಗರು ಹೆಮ್ಮೆ ಪಡುತ್ತಿದ್ದಾರೆ ಅಷ್ಟೇ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ 40 ಸ್ಥಾನಗಳನ್ನಾದರೂ ಉಳಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ: ಮೋದಿ ವ್ಯಂಗ್ಯ

    ಕರ್ನಾಟಕ ಸರ್ಕಾರ (Karnataka Government) ಮಾತನಾಡುತ್ತಿರುವ ಭಾಷೆ ಜನವಿರೋಧಿಯಾಗಿದೆ, ಕುಟುಂಬವಾದದಲ್ಲೇ ಮುಳುಗಿರುವ ಕಾಂಗ್ರೆಸ್ ಭಾಷೆ ದೇಶವನ್ನು ದಾರಿ ತಪ್ಪಿಸುತ್ತಿದೆ. ಕರ್ನಾಟಕಕ್ಕೆ ಕೇಂದ್ರ ತಾರತಮ್ಯ ಮಾಡಿದೆ ಎಂಬುದು ತಪ್ಪು. ಕಾಂಗ್ರೆಸ್ ನಾಯಕರ ಹೇಳಿಕೆ ಕುಚೇಷ್ಟೆಯಿಂದ ಕೂಡಿದೆ. ವಾಸ್ತವಾಂಶಗಳನ್ನ ಮುಚ್ಚಿಟ್ಟು ವಿತ್ತೀಯ ಹಕ್ಕುಗಳ ಬಗ್ಗೆ ತಪ್ಪು ಮಾಹಿತಿ ಕೊಡುತ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ICC ಟೆಸ್ಟ್‌ ರ‍್ಯಾಂಕಿಂಗ್‌ನಲ್ಲಿ ನಂ.1 ಪಟ್ಟ – ಹೊಸ ಇತಿಹಾಸ ನಿರ್ಮಿಸಿದ ಬೂಮ್‌ ಬೂಮ್‌ ಬುಮ್ರಾ

    ಕರ್ನಾಟಕ 1,29,854 ಕೋಟಿ ರೂ. ಸ್ವೀಕರಿಸಿದೆ:
    15ನೇ ಹಣಕಾಸು ಆಯೋಗದ (Finance Commission) ಅವಧಿಯಲ್ಲಿ ರಾಜ್ಯಕ್ಕೆ ಆದ ಲಾಭಗಳನ್ನು ಉಲ್ಲೇಖಿಸಿಲ್ಲ. ಕೆಲವು ಕಾಲ್ಪನಿಕ ನಷ್ಟಗಳನ್ನು ಮಾತ್ರ ಹೇಳುತ್ತಿದ್ದಾರೆ. ಕೇಂದ್ರ ಹಂಚುವ ಪ್ರತಿ ರಾಜ್ಯದ ಪಾಲು ಆಯೋಗದಿಂದ ಆಯೋಗಕ್ಕೆ ವ್ಯತ್ಯಾಸವಾಗುತ್ತದೆ. ರಾಜ್ಯಗಳ ಮೇಲೆ ಬೀರುವ ಎಲ್ಲಾ ಅಂಶಗಳನ್ನು ಪರಿಗಣಿಸಿ ಆಯೋಗ ಶಿಫಾರಸ್ಸುಗಳನ್ನು ಮಾಡುತ್ತದೆ. 14ನೇ ಆಯೋಗದ 5 ವರ್ಷಗಳ ನಿಗದಿತ ಅವಧಿಯಲ್ಲಿ ಕರ್ನಾಟಕವು 1,51,309 ಕೋಟಿ ರೂ.ಗಳ ತೆರಿಗೆ ಹಂಚಿಕೆ ಪಡೆದಿದೆ. ಪ್ರಸ್ತುತ 15ನೇ ಹಣಕಾಸು ಅವಧಿಯ ಮೊದಲ 4 ವರ್ಷಗಳಲ್ಲಿ, ಅಂದರೆ 2024ರ ಮಾರ್ಚ್ ವೇಳೆಗೆ ಕರ್ನಾಟಕವು 1,29,854 ಕೋಟಿ ರೂ.ಗಳನ್ನು ಸ್ವೀಕರಿಸಿದೆ. ಇದಲ್ಲದೇ ಕೇಂದ್ರ ಸರ್ಕಾರ ಮಧ್ಯಂತರ ಬಜೆಟ್‌ನಲ್ಲಿ 44,485 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ಯೋಜಿಸಿದೆ. ಇದರಿಂದ ಕರ್ನಾಟಕ ಸರ್ಕಾರ 2024-25 ಹಣಕಾಸು ವರ್ಷ ಸೇರಿ 5 ವರ್ಷಗಳಲ್ಲಿ ಒಟ್ಟು 1,74,339 ಕೋಟಿ ರೂ.ಗಳನ್ನು ಪಡೆದಂತಾಗಲಿದೆ ಎಂದು ಮಾಹಿತಿಯನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ.

    ಕರ್ನಾಟಕ ಸರ್ಕಾರ 14ನೇ ಆಯೋಗದ ಅವಧಿಗಿಂತ 15ನೇ ಆಯೋಗದ ಅವಧಿಯ ಮೊದಲ 5 ವರ್ಷಗಳಲ್ಲಿ ಗಣನೀಯವಾಗಿ ಹೆಚ್ಚು ಹಣವನ್ನು ಪಡೆದುಕೊಂಡಿದೆ. ಆದ್ರೆ ಕಾಂಗ್ರೆಸ್ ಸರ್ಕಾರದ ನಷ್ಟವಾಗಿದೆ ಎಂಬ ಸುಳ್ಳು ಹೇಳಿಕೆಯನ್ನು ನೀಡುತ್ತಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ರಾಜಕೀಯ ಸ್ವಾರ್ಥಕ್ಕಾಗಿ ದೇಶ ಒಡೆಯುವ ಮಾತು, ರಾಷ್ಟ್ರವೆಂದರೆ ಕೇವಲ ಒಂದು ತುಂಡು ಭೂಮಿ ಅಲ್ಲ: ಡಿಕೆ ಸುರೇಶ್‌ ಹೇಳಿಕೆ ವಿರುದ್ಧ ಮೋದಿ ಕಿಡಿ

    6,280 ಕೋಟಿ ರೂ. ಬಡ್ಡಿ ರಹಿತ ಸಾಲ ನೀಡಿದ್ದೇವೆ:
    15ನೇ ಹಣಕಾಸು ಆಯೋಗದ ಶಿಫಾರಸಿನ ಮೇರೆಗೆ ಕೇರಳ ರಾಜ್ಯ ಸಹ ಕೇಂದ್ರದಿಂದ ಅನುದಾನ ಪಡೆದುಕೊಂಡಿದೆ. ಅದೇ ರೀತಿ ಬಿಜೆಪಿ ಆಡಳಿತ ರಾಜ್ಯಗಳಾದ ಉತ್ತರ ಪ್ರದೇಶ, ಮಧ್ಯಪ್ರದೇಶ, ಗುಜರಾತ್ ಮತ್ತು ಬಿಹಾರ ಯಾವುದೇ ರಾಜ್ಯಗಳಲ್ಲೂ ಅನುದಾನ ಕೊರತೆ ಕಂಡುಬಂದಿಲ್ಲ. ಏಕೆಂದರೆ ಕೇಂದ್ರ ಸರ್ಕಾರ ಯಾವುದೇ ರಾಜ್ಯಕ್ಕೂ ತಾರತಮ್ಯ ಮಾಡಿಲ್ಲ. 50 ವರ್ಷಗಳ ಬಡ್ಡಿ ರಹಿತ ಸಾಲವನ್ನು ಕಲ್ಪಿಸುವ ಯೋಜನೆಯನ್ನೂ ಕೇಂದ್ರ ತಂದಿದೆ. ಹಾಗಾಗಿಯೇ ಕರ್ನಾಟಕ ಸರ್ಕಾರಕ್ಕೆ ಕೇಂದ್ರ 6,280 ಕೋಟಿ ರೂ.ಗಳಷ್ಟು ಬಡ್ಡಿ ರಹಿತ ಸಾಲ ನೀಡಿದೆ. 15ನೇ ಹಣಕಾಸು ಅವಧಿಯಲ್ಲಿ ಇದುವರೆಗಿನ ವಿಪತ್ತು ನಿರ್ವಹಣೆಗೆ 6,196 ಕೋಟಿ ಕೇಂದ್ರದಿಂದ ಪಡೆದುಕೊಂಡಿದೆ ಎಂದು ವಿವರಿಸಿದ್ದಾರೆ.

    ಬರ ಪರಿಹಾರಕ್ಕೆ 6,196 ಕೋಟಿ ರೂ. ಕೊಟ್ಟಿದ್ದೇವೆ:
    ಬರಪರಿಹಾರಕ್ಕೆ ಪ್ರಾಕೃತಿಕ ವಿಕೋಪ ನಿಧಿ ಅಡಿಯಲ್ಲಿ 6,196 ಕೋಟಿ ರೂ. ಕರ್ನಾಟಕ ಸರ್ಕಾರ ಪಡೆದಿದೆ. ಇಲ್ಲಿಯವರೆಗೆ ಒಟ್ಟು 12,476 ರೂ. ಕರ್ನಾಟಕಕ್ಕೆ ನೀಡಲಾಗಿದೆ. ಆದ್ರೆ ಕಾಂಗ್ರೆಸ್ ಮಾತ್ರ ಒಂದೇ ಒಂದು ರೂಪಾಯಿ ನೀಡಿಲ್ಲ ಎಂದು ಪ್ರಕಟಣೆ ಬಿಡುಗಡೆ ಮಾಡಿದೆ. ತೆರಿಗೆ ನೀಡಿಲ್ಲ ಎಂದು ಜಾಹೀರಾತು ನೀಡಲು ಕೋಟ್ಯಾಂತರ ರೂಪಾಯಿ ಖರ್ಚು ಮಾಡಿದೆ. ವಿಶೇಷ ಅನುದಾನ ನೀಡಲು ಹಣಕಾಸು ಆಯೋಗ ಶಿಫಾರಸು ಮಾಡಿಲ್ಲ. ಆದಾಗ್ಯೂ ಕರ್ನಾಟಕ ಸರ್ಕಾರ ಅನುದಾನವೇ ನೀಡಿಲ್ಲ ಎಂದು ಸುಳ್ಳು ಬಿತ್ತರಿಸಿದೆ ಎಂದು ಕೆಂಡಕಾರಿದ್ದಾರೆ.

  • ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ 324 ಕೋಟಿ ಅನುದಾನ ಬಿಡುಗಡೆ – ಯಾವ ಜಿಲ್ಲೆಗೆ ಎಷ್ಟು?

    ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ 324 ಕೋಟಿ ಅನುದಾನ ಬಿಡುಗಡೆ – ಯಾವ ಜಿಲ್ಲೆಗೆ ಎಷ್ಟು?

    – ರಾಜ್ಯದಲ್ಲಿ ಕಳೆದ 125 ವರ್ಷಗಳಲ್ಲಿ ಅತಿ ಕಡಿಮೆ ಮಳೆ ದಾಖಲು

    ಬೆಂಗಳೂರು: ಕೇಂದ್ರ ಸರ್ಕಾರದ ವಿರುದ್ದ ಬರ ಪರಿಹಾರಕ್ಕೆ (Drought Relief) ಅನುದಾನ ಬಿಡುಗಡೆ ಮಾಡಿಲ್ಲ ಅಂತ ಆರೋಪ ಮಾಡುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಬರ ಪರಿಹಾರಕ್ಕೆ ಅನುದಾನ ಬಿಡುಗಡೆ ಮಾಡಿದೆ. SDRF ಅಡಿ ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

    31 ಜಿಲ್ಲೆಗಳಿಗೆ 324 ಕೋಟಿ ರೂ. ಅನುದಾನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಈ ಬಾರಿ 235 ತಾಲೂಕುಗಳ ಪೈಕಿ 216 ತಾಲೂಕುಗಳು ಬರ ಪೀಡಿತ ಅಂತ ರಾಜ್ಯ ಸರ್ಕಾರ (Karnataka Govt) ಘೋಷಣೆ ಮಾಡಿತ್ತು. ಅಲ್ಲದೆ, ಕೇಂದ್ರ ಸರ್ಕಾರಕ್ಕೆ ಬರ ಪರಿಹಾರಕ್ಕೆ ಅಂತ 17 ಸಾವಿರ ಕೋಟಿ ರೂ. ಪರಿಹಾರ ಕೇಳಿದೆ. ಈವರೆಗೂ ಕೇಂದ್ರ ಸರ್ಕಾರ ಒಂದೂ ರೂಪಾಯಿ ಅನುದಾನ ಬಿಡುಗಡೆ ಮಾಡಿಲ್ಲ ಅಂತ ಸಿಎಂ ಹಾದಿಯಾಗಿ ಸಚಿವರು ಕೇಂದ್ರದ ವಿರುದ್ದ ವಾಗ್ದಾಳಿ ನಡೆಸಿದ್ದರು. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಬರ ಪರಿಹಾರಕ್ಕೆ ಅಂತ 324 ಕೋಟಿ ರೂ. ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ. ಇದನ್ನೂ ಓದಿ: ನಾನು ಯಾವತ್ತೂ ಮಂಡ್ಯ ಬಿಡಲ್ಲ, ರಕ್ತದಲ್ಲಿ ಬರೆದು ಕೊಡಬೇಕಾ: ಸುಮಲತಾ ಪ್ರಶ್ನೆ

    ಯಾವ ಜಿಲ್ಲೆಗೆ ಎಷ್ಟು ಅನುದಾನ?
    ಬೆಂಗಳೂರು ನಗರ- 7.50 ಕೋಟಿ.
    ಬೆಂಗಳೂರು ಗ್ರಾಮಾಂತರ- 6 ಕೋಟಿ.
    ರಾಮನಗರ-7.50 ಕೋಟಿ.
    ಕೋಲಾರ – 9 ಕೋಟಿ.
    ಚಿಕ್ಕಬಳ್ಳಾಪುರ- 9 ಕೋಟಿ.
    ತುಮಕೂರು-15 ಕೋಟಿ.
    ಚಿತ್ರದುರ್ಗ- 9 ಕೋಟಿ.
    ದಾವಣಗೆರೆ- 9 ಕೋಟಿ.
    ಚಾಮರಾಜನಗರ-7.50 ಕೋಟಿ
    ಮೈಸೂರು – 13.50 ಕೋಟಿ.
    ಮಂಡ್ಯ- 10.50 ಕೋಟಿ.
    ಬಳ್ಳಾರಿ- 7.50 ಕೋಟಿ.
    ಕೊಪ್ಪಳ- 10.50 ಕೋಟಿ.
    ರಾಯಚೂರು- 9 ಕೋಟಿ.
    ಕಲಬುರ್ಗಿ- 16.50 ಕೋಟಿ.
    ಬೀದರ್- 4.50 ಕೋಟಿ.
    ಬೆಳಗಾವಿ- 22.50 ಕೋಟಿ.
    ಬಾಗಲಕೋಟೆ- 13.50 ಕೋಟಿ.
    ವಿಜಯಪುರ- 18 ಕೋಟಿ.
    ಗದಗ-10.50 ಕೋಟಿ.
    ಹಾವೇರಿ-12 ಕೋಟಿ.
    ಧಾರವಾಡ-12 ಕೋಟಿ.
    ಶಿವಮೊಗ್ಗ-10.50 ಕೋಟಿ.
    ಹಾಸನ- 12 ಕೋಟಿ.
    ಚಿಕ್ಕಮಗಳೂರು-12 ಕೋಟಿ.
    ಕೊಡಗು-7.50 ಕೋಟಿ.
    ದಕ್ಷಿಣ ಕನ್ನಡ- 3 ಕೋಟಿ.
    ಉಡುಪಿ- 4.50 ಕೋಟಿ.
    ಉತ್ತರ ಕನ್ನಡ-16.50 ಕೋಟಿ.
    ಯಾದಗಿರಿ-9 ಕೋಟಿ.
    ವಿಜಯನಗರ-9 ಕೋಟಿ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಈ ಬಾರಿ ಸರಳ ದಸರಾ: ಹೆಚ್‌.ಸಿ ಮಹದೇವಪ್ಪ

    ಈ ಬಾರಿ ಸರಳ ದಸರಾ: ಹೆಚ್‌.ಸಿ ಮಹದೇವಪ್ಪ

    ಮೈಸೂರು: ರಾಜ್ಯಾದ್ಯಂತ ಮಳೆಯ ಕೊರತೆ ಉಂಟಾಗಿ ಬರ ವ್ಯಾಪಿಸಿರುವ ಹಿನ್ನೆಲೆಯಲ್ಲಿ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು (Mysuru Dasara 2023) ಈ ಬಾರಿ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹೆಚ್‌.ಸಿ ಮಹದೇವಪ್ಪ (HC Mahadevappa) ತಿಳಿಸಿದ್ದಾರೆ.

    ಈ ಕುರಿತು ಟ್ವಿಟ್ಟರ್‌ (X) ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ರಾಜ್ಯದಲ್ಲಿ ಮಳೆಯ (Rain) ಪ್ರಮಾಣ ಕಡಿಮೆಯಾಗಿರುವುದರಿಂದ ರೈತಾಪಿ (Farmers) ವರ್ಗವು ಸಂಕಷ್ಟದಲ್ಲಿದೆ. ಆದ್ದರಿಂದ ಈ ಬಾರಿ ಸರಳ ಮತ್ತು ಅರ್ಥಪೂರ್ಣ ದಸರಾ ಆಚರಿಸಿಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ದಸರಾ ಮಹೋತ್ಸವ ಉದ್ಘಾಟಿಸಲಿದ್ದಾರೆ. ಇದನ್ನೂ ಓದಿ: ನಾಡದೇವಿ ಚಾಮುಂಡೇಶ್ವರಿ ಹಬ್ಬಕ್ಕೆ ದಿನಗಣನೆ – ಮೈಸೂರು ದಸರಾಕ್ಕೆ ಬಹಿಷ್ಕಾರ ಹಾಕಿದ ಮಾವುತ ಕಾವಾಡಿಗಳು

    2021ರಲ್ಲಿ ಕೋವಿಡ್‌ ಕಾರಣದಿಂದಾಗಿ ಸರಳ ದಸರಾ ಆಚರಿಸಲಾಗಿತ್ತು. ಜಂಬೂ ಸವಾರಿ ಮೆರವಣಿಗೆ ನಡೆದರೂ ಅರಮನೆ ಆವರಣಕ್ಕೆ ಮಾತ್ರ ಸೀಮಿತಗೊಳಿಸಲಾಗಿತ್ತು. ಕಳೆದ ವರ್ಷ ಅದ್ಧೂರಿ ದಸರಾ ಆಚರಣೆ ಮಾಡಲಾಗಿತ್ತು, ಆದರೆ ಈ ಬಾರಿ ಮಳೆ ಕೊರತೆಯಿಂದಾಗಿ ಬರ ವ್ಯಾಪಿಸಿರುವುದರಿಂದ ಸರಳ ದಸರಾ ಆಚರಣೆಗೆ ಸರ್ಕಾರ ನಿರ್ಧರಿಸಿದೆ. ಇದನ್ನೂ ಓದಿ: ಮೈಸೂರು ದಸರಾದಲ್ಲಿ ವಿಶೇಷ ಏರ್ ಶೋ ನಡೆಸಲು ಸಿಎಂ ಮನವಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]