Tag: Karnataka Government

  • ದೇವಸ್ಥಾನಗಳ ಕಾಮಗಾರಿಗಳಿಗೆ ಬ್ರೇಕ್‌ – ವಿರೋಧ ವ್ಯಕ್ತವಾಗುತ್ತಿದ್ದಂತೆ ಸುತ್ತೋಲೆ ವಾಪಸ್‌

    ದೇವಸ್ಥಾನಗಳ ಕಾಮಗಾರಿಗಳಿಗೆ ಬ್ರೇಕ್‌ – ವಿರೋಧ ವ್ಯಕ್ತವಾಗುತ್ತಿದ್ದಂತೆ ಸುತ್ತೋಲೆ ವಾಪಸ್‌

    ಬೆಂಗಳೂರು: ದೇವಸ್ಥಾನಗಳ (Temple) ಅಭಿವೃದ್ಧಿಗೆ ಬಿಡುಗಡೆ ಮಾಡಿದ ಅನುದಾನಕ್ಕೆ ಬ್ರೇಕ್‌ ಹಾಕಿದ್ದ ರಾಜ್ಯ ಸರ್ಕಾರ (Karnataka Government) ಈಗ ಸುತ್ತೋಲೆಯನ್ನು ಹಿಂದಕ್ಕೆ ಪಡೆದಿದೆ.

    ಈ ಸಂಬಂಧ ಪಬ್ಲಿಕ್ ಟಿವಿಗೆ ಹೇಳಿಕೆ ನೀಡಿದ ಮುಜರಾಯಿ ಇಲಾಖೆ ಆಯುಕ್ತ ಬಸವರಾಜೇಂದ್ರ, ಸಚಿವರ ಗಮನಕ್ಕೆ ಬಾರದೇ ಈ ಆದೇಶ ಪ್ರಕಟಿಸಲಾಗಿತ್ತು. ಈಗ ಆದೇಶವನ್ನು ಹಿಂದಕ್ಕೆ ಪಡೆಯುತ್ತಿದ್ದೇವೆ ಎಂದು ತಿಳಿಸಿದರು.

    ಜಿಲ್ಲೆಯಾದ್ಯಾಂತ ಮುಜರಾಯಿ ವ್ಯಾಪ್ತಿಯ ಕಾಮಗಾರಿಗಳು ನಡೆಯುತ್ತಿತ್ತು. ಈ ಕಾಮಗಾರಿ ಮಾಡಲು 50% ಅನುದಾನವನ್ನು ಬಿಡುಗಡೆ ಮಾಡಿ ತಡೆ ಹಿಡಿಯಲಾಗಿತ್ತು. ನಮ್ಮ ವ್ಯಾಪ್ತಿಯಲ್ಲಿ ನಾವು ಆದೇಶ ಹೊರಡಿಸಿದ್ದೆವು. ಈಗ ಮತ್ತೊಂದು ಆದೇಶವನ್ನು ಪ್ರಕಟಿಸಿದ್ದೇವೆ ಎಂದು ತಿಳಿಸಿದರು.  ಇದನ್ನೂ ಓದಿ: ಬಿಜೆಪಿ ಅವಧಿಯಲ್ಲಿ ದೇಗುಲಗಳಿಗೆ ರಿಲೀಸ್ ಮಾಡಿದ್ದ ಅನುದಾನಕ್ಕೆ ಬ್ರೇಕ್

     

    ಆಗಸ್ಟ್ 14 ರಂದು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಆದೇಶ ಹೊರಡಿಸಿದ್ದ ಮುಜರಾಯಿ ಇಲಾಖೆ (Muzrai Department) ದೇವಾಲಯದ ಅಭಿವೃದ್ಧಿ ಮತ್ತು ಜೀರ್ಣೋದ್ಧಾರಕ್ಕೆ ಮಂಜೂರಾದ ಹಣದಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನು ನಡೆಸದಂತೆ ಉಲ್ಲೇಖಿಸಿತ್ತು.

    ಈ ಹಿಂದಿನ ಸುತ್ತೋಲೆಯಲ್ಲಿ  ಏನಿತ್ತು?
    1. ಸರ್ಕಾರದಿಂದ ದೇವಾಲಯಗಳ ಅಭಿವೃದ್ಧಿ ಜೀರ್ಣೋದ್ಧಾರಕ್ಕಾಗಿ ಸಾಮಾನ್ಯ ಯೋಜನೆಯಡಿ ಅನುದಾನ ಮಂಜೂರಾಗಿದ್ದು ಕಾಮಗಾರಿಗಳನ್ನ ಪ್ರಾರಂಭಿಸಿದೆ ಇರುವ ಸಂಸ್ಥೆಗಳಿಗೆ ಮುಂದಿನ ನಿರ್ದೇಶನದ ವರೆಗೂ ಹಣ ಬಿಡುಗಡೆ ಮಾಡಬಾರದು.

    2.2022-23ನೇ ಸಾಲಿನಲ್ಲಿ ಸಾಮಾನ್ಯ ಯೋಜನೆ ಅಡಿ ಮಂಜೂರಾಗಿರುವ ಅನುದಾನದ ಪೈಕಿ ಈಗಾಗಲೇ 50% ರಷ್ಟು ಹಣ ಬಿಡುಗಡೆಯಾಗಿ ಆಡಳಿತಾತ್ಮಕ ಮಂಜೂರಾತಿ ನೀಡಿದ್ದು ಹಣ ಬಿಡುಗಡೆ ಮಾಡದಿದ್ದಲ್ಲಿ ಸದರಿ ಕಾಮಗಾರಿಗೆ ಹಣವನ್ನ ಬಿಡುಗಡೆ ಮಾಡಬಾರದು ಹಾಗೂ ಪ್ರಾರಂಭಿಸಿದೇ ಇದ್ದಲ್ಲಿ ಕಾಮಗಾರಿಯನ್ನು ಪ್ರಾರಂಭಿಸತಕ್ಕದ್ದಲ್ಲ.

    3. ಆಡಳಿತಾತ್ಮಕ ಮಂಜೂರಾತಿಗೆ ಪ್ರಸ್ತಾವನೆ ಸ್ವೀಕೃತವಾಗಿದ್ದಲ್ಲಿ ಆಡಳಿತಾತ್ಮಕ ಮಂಜೂರಾತಿಯನ್ನು ಮುಂದಿನ ನಿರ್ದೇಶನವರೆಗೂ ತಡೆಹಿಡಿಯುವುದು.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಿಟ್ ಕಾಯಿನ್ ಹಗರಣ ಮರುತನಿಖೆಗೆ ಎಸ್‍ಐಟಿ ರಚನೆ – ನಾಳೆಯಿಂದಲೇ ತನಿಖೆಗೆ ಮರುಜೀವ

    ಬಿಟ್ ಕಾಯಿನ್ ಹಗರಣ ಮರುತನಿಖೆಗೆ ಎಸ್‍ಐಟಿ ರಚನೆ – ನಾಳೆಯಿಂದಲೇ ತನಿಖೆಗೆ ಮರುಜೀವ

    ಬೆಂಗಳೂರು: ಬಿಜೆಪಿ ಕಾಲದ ಬಿಟ್ ಕಾಯಿನ್ ಹಗರಣದ (Bitcoin Scam) ವಿರುದ್ಧ ಮರು ತನಿಖೆ ನಡೆಸುವಂತೆ ಸರ್ಕಾರ ಆದೇಶ (Karnataka Government) ಹೊರಡಿಸಿದೆ. ತನಿಖೆಗೆ ಎಸ್‍ಐಟಿ (SIT ) ರಚನೆ ಮಾಡಲಾಗಿದ್ದು, ತನಿಖೆ ಮಂಗಳವಾರದಿಂದಲೇ ಪ್ರಾರಂಭಗೊಳ್ಳಲಿದೆ.

    ಸಿಐಡಿ ಎಡಿಜಿಪಿ ಮನೀಶ್ ಕರ್ಬೀಕರ್ ನೇತೃತ್ವದಲ್ಲಿ ಈಗಾಗಲೇ ಎಸ್‍ಐಟಿಯನ್ನು ರಚನೆ ಮಾಡಲಾಗಿದೆ. ಸಿಐಡಿ ಸೈಬರ್ ಸೆಲ್‍ನ ಎಸ್ಪಿ ಶರತ್ ಪ್ರಕರಣದ ತನಿಖಾಧಿಕಾರಿ ಆಗಿ ಕಾರ್ಯ ನಿರ್ವಹಿಸಲಿದ್ದಾರೆ. ಈ ಬಿಟ್ ಕಾಯಿನ್ ಹಗರಣವನ್ನು ಈ ಹಿಂದೆ ಸಿಸಿಬಿ ತನಿಖೆ ಮಾಡಿತ್ತು. ಆಗ ತನಿಖೆಯಲ್ಲಿ ಹಗರಣ ನಡೆದಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು. ರಾಜಕಾರಣಿಗಳು ಹಣ ತನಿಖೆಯ ದಾರಿ ತಪ್ಪಿಸಿದ್ದಾರೆ ಎನ್ನಲಾಗಿತ್ತು. ಇದನ್ನೂ ಓದಿ: ನಿಗದಿಗಿಂತ ಚುನಾವಣೆಯಲ್ಲಿ ಅಧಿಕ ವೆಚ್ಚ – ಇಬ್ಬರೂ ಬಿಜೆಪಿ ನಾಯಕರಿಗೆ ನೋಟಿಸ್

    ಈ ಬಗ್ಗೆ ಸಿಐಡಿ ಡಿಜಿ ಸಲೀಂ ಅಧಿಕಾರಿಗಳ ಜೊತೆ ಸೋಮವಾರ ಸಭೆ ನಡೆಸಿದ್ದಾರೆ. ಎಸ್‍ಐಟಿ ಮುಖ್ಯಸ್ಥ ಮನೀಷ್ ಕರ್ಬೀಕರ್ ಜೊತೆ ಮಾತುಕತೆ ನಡೆಸಿದ ಅವರು, ತನಿಖೆಯ ರೂಪುರೇಷೆ, ಫೈಲ್ ವರ್ಗಾವಣೆ, ಕೆಳ ಹಂತದಲ್ಲಿ ಯಾವೆಲ್ಲ ಅಧಿಕಾರಿಗಳು ಟೀಂನಲ್ಲಿ ಇರಬೇಕು ಎಂಬುದನ್ನು ಚರ್ಚಿಸಿದ್ದಾರೆ. ಈ ಹಿಂದಿನ ತನಿಖೆಯಲ್ಲಿ ಸಿಸಿಬಿಯಿಂದ ಚಾರ್ಜ್‍ಶೀಟ್ ಸಲ್ಲಿಕೆಯಾಗಿದೆ. ಇದರಿಂದಾಗಿ ಎಸ್‍ಐಟಿ ತನಿಖೆ ನಡೆಸಲು ಕೋರ್ಟ್‍ನಿಂದ ಅನುಮತಿ ಪಡೆಯಬೇಕಿದೆ. ಈ ಬಗ್ಗೆ ಸಿದ್ಧತೆ ನಡೆಸಲಾಗಿದೆ.

    ಸಿಸಿಬಿಯಿಂದ ಫೈಲ್‍ಗಳ ವರ್ಗಾವಣೆ ಕೋರಿ ಪತ್ರ ಬರೆಯುವಂತೆ ಸಹ ಸೂಚಿಸಲಾಗಿದೆ. ಸಿಸಿಬಿಯ ತನಿಖಾ ಫೈಲ್ ಎಸ್‍ಐಟಿ ಕೈ ಸೇರಿದ ಬಳಿಕ ಮಂಗಳವಾರ ಅಥವಾ ಬುಧವಾರದಿಂದ ಅಧಿಕೃತವಾಗಿ ಎಸ್‍ಐಟಿ ತನಿಖೆ ಆರಂಭಿಸಲಿದೆ. ಇದನ್ನೂ ಓದಿ: ಮಂಗಳೂರಿನ ಶ್ವಾನ ಪ್ರೇಮಿ ರಜನಿ ಶೆಟ್ಟಿ ಮೇಲೆ ಹಲ್ಲೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅನ್ನಭಾಗ್ಯಕ್ಕೆ ಮತ್ತಷ್ಟು ಸಂಕಷ್ಟ- ರಾಜ್ಯಗಳು ಹೇಳಿದ್ದೇನು?

    ಅನ್ನಭಾಗ್ಯಕ್ಕೆ ಮತ್ತಷ್ಟು ಸಂಕಷ್ಟ- ರಾಜ್ಯಗಳು ಹೇಳಿದ್ದೇನು?

    ಬೆಂಗಳೂರು: ಒಂದು ಕಡೆಯಲ್ಲಿ ಅನ್ನಭಾಗ್ಯದ (Anna Bhagya) ಅಕ್ಕಿಗೆ (Rice) ಕೇಂದ್ರದ ಬಾಗಿಲು ಬಹುತೇಕ ಬಂದ್ ಆಗಿದ್ದರೆ ಇನ್ನೊಂದು ಕಡೆ ರಾಜ್ಯಗಳಿಂದಲೂ ನಿರೀಕ್ಷಿಸಿದ ಭರವಸೆ ಸಿಕ್ಕಿಲ್ಲ.

    ಛತ್ತೀಸ್‍ಗಢ (Chhattisgarh) ಅಕ್ಕಿ ಕೊಡುವ ಭರವಸೆ ನೀಡಿದರೂ ಎಷ್ಟು ಪ್ರಮಾಣ ಎಂದು ಖಚಿತ ಪಡಿಸಿಲ್ಲ. ಅಲ್ಲದೇ ಛತ್ತೀಸ್‌ಗಢದಿಂದ ಅಕ್ಕಿ ಕೊಳ್ಳುವುದು ದುಬಾರಿಯಾಗಿದೆ. ಒಂದು ವೇಳೇ ಖರೀದಿಸಿದರೂ ಸಾಗಾಣಿಕಾ ವೆಚ್ಚವೂ ಹೆಚ್ಚಾಗುತ್ತದೆ.

    ಪಂಜಾಬ್ (Punjab) 1.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ನೀಡುವ ಭರವಸೆ ನೀಡಿದೆ. ಆಂಧ್ರಪ್ರದೇಶ (Andhra Pradesh) ಅಕ್ಕಿ ನೀಡುವ ಭರವಸೆ ನೀಡಿದರೂ ಕೆಜಿಗೆ 42 ರೂ. ದರ ನಿಗದಿ ಎಂದಿದೆ. ತೆಲಂಗಾಣ ಮತ್ತು ತಮಿಳುನಾಡಿನ ಅಕ್ಕಿ ನಿರೀಕ್ಷೆಯಲ್ಲಿ ಇದ್ದ ರಾಜ್ಯ ಸರ್ಕಾರಕ್ಕೆ ಖಚಿತ ಭರವಸೆ ಸಿಕ್ಕಿಲ್ಲ ಎನ್ನಲಾಗಿದೆ.

    ಒಟ್ಟಾರೆ ಅನ್ನ ಭಾಗ್ಯದ ಅಕ್ಕಿಗಾಗಿ ರಾಜ್ಯಗಳ ಮೊರೆ ಹೋದ ರಾಜ್ಯ ಸರ್ಕಾರಕ್ಕೆ ಬೇಡಿಕೆಯಷ್ಟು ಅಕ್ಕಿಯ ಭರವಸೆ ಇನ್ನೂ ಸಿಕ್ಕಿಲ್ಲ. ಇದನ್ನೂ ಓದಿ: ಅನ್ನಭಾಗ್ಯ ಅಕ್ಕಿಗೆ ಕೇಂದ್ರದ ಬಾಗಿಲು ಬಂದ್ – ಸರ್ಕಾರದ ಮುಂದಿರುವ ಆಯ್ಕೆಗಳೇನು?

     

    ಶುಕ್ರವಾರ ಕೇಂದ್ರ ಆಹಾರ ಸಚಿವ ಪಿಯೂಶ್‌ ಗೋಯಲ್‌ (Piyush Goyal) ಅವರನ್ನು ರಾಜ್ಯದ ಆಹಾರ ಸಚಿವ ಮುನಿಯಪ್ಪ (Muniyappa) ಭೇಟಿ ಮಾಡಿದ್ದರು. ಭೇಟಿ ಬಳಿಕ ಪ್ರತಿಕ್ರಿಯಿಸಿದ ಮುನಿಯಪ್ಪ, ಪಿಯೂಷ್ ಗೋಯಲ್ ಅಕ್ಕಿ ನೀಡಲು ಸಾಧ್ಯವಿಲ್ಲ ಎಂದು ಹೇಳಿದರು. ಇದು ರಾಜಕೀಯ ದುರುದ್ದೇಶದ ನಿಲುವು. ಸ್ಟಾಕ್ ಇದ್ದರೂ ಕೊಡುವುದಿಲ್ಲ ಎನ್ನುವುದು ಎಷ್ಟು ಸರಿ? ನಾವು ಅಕ್ಕಿಯನ್ನು ಕೊಡುತ್ತೇವೆ. ಕೇಂದ್ರದ ಏಜೆನ್ಸಿಗಳ ಮೂಲಕ ಅಕ್ಕಿ ಕೊಳ್ಳುವ ಪ್ರಯತ್ನ ನಡೆಯುತ್ತಿದೆ. ಈ ವಾರದಲ್ಲಿ ತೀರ್ಮಾನ ಆಗಲಿದೆ ಎಂದು ತಿಳಿಸಿದರು.

  • ಅನ್ನಭಾಗ್ಯ ಅಕ್ಕಿಗೆ ಕೇಂದ್ರದ ಬಾಗಿಲು ಬಂದ್ – ಸರ್ಕಾರದ ಮುಂದಿರುವ ಆಯ್ಕೆಗಳೇನು?

    ಅನ್ನಭಾಗ್ಯ ಅಕ್ಕಿಗೆ ಕೇಂದ್ರದ ಬಾಗಿಲು ಬಂದ್ – ಸರ್ಕಾರದ ಮುಂದಿರುವ ಆಯ್ಕೆಗಳೇನು?

    ಬೆಂಗಳೂರು: ಕರ್ನಾಟಕ ಸರ್ಕಾರಕ್ಕೆ (Karnataka Government) ಮತ್ತೆ ಅಕ್ಕಿ ಸಮಸ್ಯೆ ಬಿಗಡಾಯಿಸಿದೆ. ಅಕ್ಕಿ ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಖಡಕ್ ಉತ್ತರ ನೀಡಿದ್ದರಿಂದ ರಾಜ್ಯಕ್ಕೆ ಅಕ್ಕಿ ಟೆನ್ಶನ್ ಮತ್ತಷ್ಟು ಗಂಭೀರವಾಗಿದೆ.

    ಸದ್ಯ ಸರ್ಕಾರಕ್ಕೆ ಇರುವ ಕೊನೆ ದಾರಿ ಕೇಂದ್ರ 3 ಸಂಸ್ಥೆಗಳು ಮಾತ್ರ. ಭಾರತ ಸರ್ಕಾರದ ಅಧೀನದ ನ್ಯಾಷನಲ್ ಕೋ-ಆಪರೇಟಿವ್ ಕನ್ಸೂಮರ್ಸ್ ಫೆಡರೇಷನ್‌ (NCCF), ನ್ಯಾಷನಲ್ ಅಗ್ರಿಕಲ್ಬರಲ್ ಕೋ-ಆಪರೇಟಿವ್ ಮಾರ್ಕೆಟಿಂಗ್ ಫೆಡರೇಷನ್‌ (NAFED) ಹಾಗೂ ಕೇಂದ್ರೀಯ ಭಂಡಾರದಿಂದ (Kendriya Bhandar) ಅಕ್ಕಿ ಪಡೆಯಲು ದರಪಟ್ಟಿ ಕೇಳಲಾಗಿದೆ.

     

    ಎನ್‍ಸಿಸಿಎಫ್, ನಾಫೆಡ್, ಕೇಂದ್ರೀಯ ಭಂಡಾರದಿಂದ ಅಕ್ಕಿ ಬಂದರೆ ಕರ್ನಾಟಕ ಸರ್ಕಾರ ಪಾರಾಗುತ್ತದೆ. ಇಲ್ಲ ಅಂದರೆ ಅಕ್ಕಿಗೆ ಸಂಗ್ರಹಕ್ಕೆ ಮುಕ್ತ ಮಾರುಕಟ್ಟೆಯ ಮೊರೆ ಹೋಗಬೇಕಾದ ಅನಿವಾರ್ಯತೆ ನಿರ್ಮಾಣ ಆಗುತ್ತದೆ. ಈಗಾಗಲೇ ಒಂದು ಸಂಸ್ಥೆ ಕೊಟೇಶನ್ ಕೊಟ್ಟಿರುವ ಬಗ್ಗೆ ಮಾಹಿತಿ ಇದೆ. ಯಾವ ಸಂಸ್ಥೆ, ಎಷ್ಟು ಕೊಟೇಶನ್ ಅಂತ ಮಾಹಿತಿಯನ್ನು ಮಾತ್ರ ಆಹಾರ ಸಚಿವರು ನೀಡಿಲ್ಲ.  ಇದನ್ನೂ ಓದಿ: ಪಾಟ್ನಾದಲ್ಲಿ ವಿಪಕ್ಷ ನಾಯಕರ ಸಭೆ – ಮೋದಿ ಸರ್ಕಾರ ಗದ್ದುಗೆಯಿಂದಿಳಿಸಲು 15 ಪಕ್ಷಗಳ ಮಹತ್ವದ ಚರ್ಚೆ

    ಮುಂದಿರುವ ಆಯ್ಕೆಯೇನು?
    ಎನ್‍ಸಿಸಿಎಫ್, ನಾಫೆಡ್, ಕೇಂದ್ರೀಯ ಭಂಡಾರ ಸಂಸ್ಥೆಗಳೇ ಕೊನೆ ಆಯ್ಕೆ. ಈಗಾಗಲೇ ಒಂದು ಸಂಸ್ಥೆ ಕೊಟೇಶನ್ ಕೊಟ್ಟಿರುವ ಬಗ್ಗೆ ಸಚಿವರ ಮಾಹಿತಿ ನೀಡಿದ್ದಾರೆ. ಕೊಟೇಶನ್ ವಿವರದ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡಿ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ.

    ಸರ್ಕಾರಕ್ಕೆ ಒಪ್ಪಿಗೆ ಆಗದೇ ಇದ್ದರೆ ಉಳಿದ 2 ಸಂಸ್ಥೆಗಳ ಕೊಟೇಶನ್‍ಗೆ ಕಾಯಬೇಕು. ಆ ಎರಡು ಸಂಸ್ಥೆಗಳ ಕೊಟೇಶನ್ ಸರ್ಕಾರಕ್ಕೆ ಒಪ್ಪಿಗೆ ಆದರೆ ಅಕ್ಕಿ ಖರೀದಿ ಮಾಡುತ್ತದೆ. ಆ 2 ಸಂಸ್ಥೆಗಳ ಕೊಟೇಶನ್ ಒಪ್ಪದೇ ಇದ್ದರೆ ಮುಕ್ತ ಮಾರುಕಟ್ಟೆಯಲ್ಲಿ ಖರೀದಿಸಬೇಕಾಗುತ್ತದೆ.

     

  • ಕೋಮು ಸಂಘರ್ಷದಲ್ಲಿ ಬಲಿಯಾದ ನಾಲ್ವರ ಕುಟುಂಬಕ್ಕೆ ತಲಾ 25 ಲಕ್ಷ ರೂ. ಪರಿಹಾರ ಘೋಷಣೆ

    ಕೋಮು ಸಂಘರ್ಷದಲ್ಲಿ ಬಲಿಯಾದ ನಾಲ್ವರ ಕುಟುಂಬಕ್ಕೆ ತಲಾ 25 ಲಕ್ಷ ರೂ. ಪರಿಹಾರ ಘೋಷಣೆ

    ಬೆಂಗಳೂರು: ಕರಾವಳಿಯಲ್ಲಿ ಕೋಮು ದ್ವೇಷಕ್ಕೆ (Communial Murder) ಬಲಿಯಾದ ನಾಲ್ಕು ಜನರ ಕುಟುಂಬಕ್ಕೆ ಕರ್ನಾಟಕ ಸರ್ಕಾರ (Karnataka Government) ತಲಾ 25 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ.

    ದುಷ್ಕರ್ಮಿಗಳಿಂದ ಹತ್ಯೆಗೀಡಾದ ಮಸೂದ್, ಫಾಝಿಲ್, ಜಲೀಲ್ ಹಾಗೂ ದೀಪಕ್ ರಾವ್ ಕುಟುಂಬಕ್ಕೆ ಸರ್ಕಾರ ಈ ಪರಿಹಾರವನ್ನು ಘೋಷಿಸಿದೆ. ಇದನ್ನೂ ಓದಿ: ಊರಿಗೆ ಹೋಗೋಣವೆಂದು ಕರ್ಕೊಂಡು ಬಂದು ಮಕ್ಕಳೆದುರೇ ದಾರಿ ಮಧ್ಯೆ ಪತ್ನಿಯನ್ನ ಹೊಡೆದು ಕೊಂದ!

    ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ನಾಲ್ವರು ಹತ್ಯೆಗೀಡಾಗಿದ್ದರು. ಈ ನಾಲ್ವರ ಕುಟುಂಬಗಳಿಗೆ ಪರಿಹಾರ ಘೋಷಣೆ ಆಗಿರಲಿಲ್ಲ. ಈಗ ಈ ಕುಟುಂಬಗಳಿಗೆ ಸಿಎಂ ಪರಿಹಾರ ನಿಧಿಯಿಂದ  (Chief Minister Relief Fund) ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿ ಸರ್ಕಾರ ಆದೇಶ ಹೊರಡಿಸಿದೆ.

    2022ರ ಜುಲೈ 19ರಂದು ಬೆಳ್ಳಾರೆಯ ಮಸೂದ್, 28ರಂದು ಮಂಗಳಪೇಟೆಯ ಮುಹಮ್ಮದ್ ಫಾಝಿಲ್, 2022ರ ಡಿಸೆಂಬರ್ 24ರಂದು ಅಬ್ದುಲ್ ಜಲೀಲ್, 2018ರ ಜನವರಿ 3 ರಂದು ದೀಪಕ್ ರಾವ್ ಹತ್ಯೆಯಾಗಿತ್ತು. ಈ ಮಧ್ಯೆ ಹಂತಕರಿಂದ ಹತ್ಯೆಗಾಗಿದ್ದ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಆಗಿನ ಸರ್ಕಾರ ಪರಿಹಾರ ಘೋಷಣೆ ಮಾಡಿತ್ತು.

    2018ರ ಚುನಾವಣೆಯ ಪ್ರಚಾರ ಕಾರ್ಯ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಕರಾವಳಿಗೆ ಆಗಮಿಸಿದ್ದ ಗೃಹ ಸಚಿವ ಅಮಿತ್ ಶಾ ಅವರು ಅಂದು ಕೊಲೆಯಾಗಿದ್ದ ದೀಪಕ್ ರಾವ್ ಮನೆಗೆ ಭೇಟಿ ಕೊಟ್ಟು ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದರು. ಈ ವೇಳೆ ಗೃಹ ಸಚಿವರಿಗೆ ಬಿಜೆಪಿ ನಾಯಕರು ಸಾಥ್ ನೀಡಿದ್ದರು. ಇದನ್ನೂ ಓದಿ: ವಿಸ್ಕಿ ಬಾಟ್ಲಿಯಲ್ಲಿ 13 ಕೋಟಿ ರೂ. ಮೌಲ್ಯದ ಕೊಕೇನ್- ಕೀನ್ಯಾ ಮಹಿಳೆ ಅರೆಸ್ಟ್

  • ಅಧಿಕಾರಿಗಳ ಸಭೆಯಲ್ಲಿ ಸುರ್ಜೇವಾಲ ಭಾಗಿ ವಿವಾದ : ಕಾಂಗ್ರೆಸ್ ವಿರುದ್ಧ ಫೀಲ್ಡಿಗಿಳಿದ ವಿಪಕ್ಷಗಳು

    ಅಧಿಕಾರಿಗಳ ಸಭೆಯಲ್ಲಿ ಸುರ್ಜೇವಾಲ ಭಾಗಿ ವಿವಾದ : ಕಾಂಗ್ರೆಸ್ ವಿರುದ್ಧ ಫೀಲ್ಡಿಗಿಳಿದ ವಿಪಕ್ಷಗಳು

    -ಕಾಂಗ್ರೆಸ್ ವಿರುದ್ಧ ರಾಜ್ಯಪಾಲರಿಗೆ ಬಿಜೆಪಿ ದೂರು
    -ಹೆಚ್ಡಿಕೆ ತೀಕ್ಷ್ಣ ವಾಗ್ದಾಳಿ

    ಬೆಂಗಳೂರು: ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಭೆಯಲ್ಲಿ ಕಾಂಗ್ರೆಸ್ (Congress) ಉಸ್ತುವಾರಿ ರಣದೀಪ್ ಸುರ್ಜೇವಾಲ (Randeep Surjewala) ಪಾಲ್ಗೊಂಡ ವಿಚಾರವಾಗಿ ಬಿಜೆಪಿ (BJP) ರಾಜಭವನದ ಕದ ತಟ್ಟಿದೆ.

    ಈ ವಿವಾದ ಸೃಷ್ಟಿಯಾಗುತ್ತಿದ್ದಂತೆ ಕೈ ನಾಯಕರು ಒಬ್ಬೊಬ್ಬರು ಒಂದೊಂದು ಸ್ಪಷ್ಟನೆ ಕೊಡುತ್ತಿದ್ದಾರೆ. ವಿಪಕ್ಷಗಳು ಈ ವಿಚಾರವಾಗಿ ಕಾಂಗ್ರೆಸ್ ವಿರುದ್ಧ ಸಿಡಿದೆದ್ದಿದ್ದಾರೆ. ಅಲ್ಲದೇ ಸಾರ್ವಜನಿಕವಾಗಿಯೂ ಈ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಇದನ್ನೂ ಓದಿ: ಬಿಟ್ ಕಾಯಿನ್ ಹಗರಣ ತನಿಖೆ ಪುನಾರಂಭ ಮಾಡ್ತೀವಿ: ಜಿ.ಪರಮೇಶ್ವರ್

    ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದೇ ತಿಂಗಳಲ್ಲಿ ಗಂಭೀರ ವಿವಾದವೊಂದನ್ನು ಈ ಮೂಲಕ ಮೈಮೇಲೆ ಎಳೆದುಕೊಂಡಿದೆ. ಮಂಗಳವಾರ ಸುರ್ಜೇವಾಲಾ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡಿದ್ದರು. ಈ ವಿಚಾರ ಬಿಜೆಪಿ, ಜೆಡಿಎಸ್‍ಗೆ ಈಗ ಭರ್ಜರಿ ಆಹಾರವಾಗಿದೆ. ಸರ್ಕಾರದ ಸಭೆಯಲ್ಲಿ ಸುರ್ಜೇವಾಲ ಭಾಗವಹಿಸಿರುವುದೇಕೆ? ಇದು ಹೈಕಮಾಂಡ್ ಹಂಗಿನ ಸರ್ಕಾರವೇ ಎಂದು ಕಾಂಗ್ರೆಸ್‍ನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ರಾಜ್ಯ ಸರ್ಕಾರಕ್ಕಾಗಲಿ, ಬಿಬಿಎಂಪಿಗಾಗಲಿ ಯಾವುದೇ ರೀತಿಯ ಅಧಿಕೃತ ಸಂಬಂಧವಿರದ ಸುರ್ಜೇವಾಲ ಅವರಿಗೆ ಬಿಬಿಎಂಪಿ (BBMP) ಉನ್ನತ ಅಧಿಕಾರಿಗಳೊಂದಿಗೆ ಏನು ಕೆಲಸ ಎಂದು ವಿಪಕ್ಷಗಳು ಹರಿಹಾಯ್ದಿವೆ.

    ಈ ಬಗ್ಗೆ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ (H.D.Kumaraswamy), ರಾಜ್ಯ ಸರ್ಕಾರ ಹೈಕಮಾಂಡ್ ಹಂಗಿನ ಸರ್ಕಾರವಾಗಿದೆ. ರಾಜ್ಯ ಸರ್ಕಾರಕ್ಕೆ ಸಂಬಂಧವಿಲ್ಲದ ದೆಹಲಿಯ ಪ್ರತಿನಿಧಿ ಅಧಿಕಾರಗಳ ಜೊತೆ ಸಭೆ ಮಾಡಿದ್ದಾರೆ. ಇದನ್ನ ನೋಡಿದರೆ ಉಪಮುಖ್ಯಮಂತ್ರಿಗಳು ಎಷ್ಟು ಸುಳ್ಳು ಹೇಳಿದ್ದಾರೆ ಎಂದು ಗೊತ್ತಾಗುತ್ತದೆ. ನಾಡಿನ ಜನತೆಯ ಮುಂದೆ ಅವರ ನಾಟಕೀಯವಾದ ಮಾತುಗಳಿಗೆ ಇದು ಒಂದು ಸಾಕ್ಷಿಯಾಗಿದೆ. ಎಷ್ಟು ದಿನ ಈ ರೀತಿಯ ಸುಳ್ಳುಗಳನ್ನು ಹೇಳಿಕೊಂಡು ಬದುಕುತ್ತೀರಾ ಎಂದು ಆಕ್ರೋಶ ಹೊರಹಾಕಿದ್ದಾರೆ.

    ನಮ್ಮ ರಾಜ್ಯದ ಜನರ ಮತವನ್ನು ನಿಮ್ಮ ದೆಹಲಿ ಹೈಕಮಾಂಡ್‍ಗೆ ಗುಲಾಮರಾಗಿ ಇಟ್ಟುಕೊಂಡಿದ್ದೀರಾ? ಅಧಿಕಾರಿಗಳಿಗೆ, ಮಂತ್ರಿಗಳಿಗೆ ಸುರ್ಜೇವಾಲ ಏನು ಸೂಚನೆ ಕೊಟ್ಟಿದ್ದಾರೆ ಎಂಬುದು ಗೊತ್ತಿದೆ. ಜನ ಮತ ಹಾಕಿರುವುದು ನಿಮಗೋ ಅಥವಾ ಕಾಂಗ್ರೆಸ್ ಹೈಕಮಾಂಡ್‍ಗೋ? ಸರ್ಕಾರದ ತಿರ್ಮಾನಗಳನ್ನ ಯಾರೋ ಬೀದಿಯಲ್ಲಿ ಹೋಗುವವರ ಜೊತೆ ಮೀಟಿಂಗ್ ಮಾಡುವುದನ್ನ ನೋಡಿದರೆ ರಾಜ್ಯ ಎಂತಹ ದುರ್ಗತಿಗೆ ಬಂದಿದೆ ಎನ್ನುವುದನ್ನು ಜನ ಅರ್ಥ ಮಾಡಿಕೊಳ್ಳಬೇಕು ಎಂದು ಆಕ್ರೋಶ ಹೊರಹಾಕಿದ್ದಾರೆ.

    ಈ ಬಗ್ಗೆ ಬಿಜೆಪಿ ನಾಯಕರು ವಾಗ್ದಾಳಿ ನಡೆಸಿ, ಕಾಂಗ್ರೆಸ್ ಪಕ್ಷದಿಂದ ಅಧಿಕಾರ ದುರ್ಬಳಕೆ ಆಗಿದೆ. ನಾವು ಈ ಸಂಬಂಧ ರಾಜ್ಯಪಾಲರಿಗೆ ದೂರು ನೀಡಿದ್ದೇವೆ. ರಾಜ್ಯಪಾಲರು ಕಾಂಗ್ರೆಸ್ ಕಿವಿ ಹಿಂಡುವ ಕೆಲಸ ಮಾಡಬೇಕು. ಖಾಸಗಿ ಹೋಟೆಲ್‍ನಲ್ಲಿ ಬಿಬಿಎಂಪಿ ಅಧಿಕಾರಿಗಳ ಜೊತೆ ಸುರ್ಜೇವಾಲ ಅವರ ಸಭೆ ಉದ್ದೇಶ ಏನೆಂಬುದು ಗೊತ್ತಿಲ್ಲ. ಸರ್ಕಾರದ ಸಭೆಯಲ್ಲಿ ಪಕ್ಷದ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಬಾರದು. ಇದರಲ್ಲಿ ಕಾನೂನು ಉಲ್ಲಂಘನೆಯಾಗಿದೆ. ಕಾಂಗ್ರೆಸ್‍ಗೆ ಕಾನೂನು ಉಲ್ಲಂಘನೆ ಮಾಡುವುದೇ ಕೆಲಸ. ಈ ಬಗ್ಗೆ ಕ್ರಮ ಆಗಬೇಕು ಅಂತ ಒತ್ತಾಯಿಸಿದ್ದಾರೆ.

    ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ನಡೆದಿರುವುದು ಅಧಿಕೃತ ಸಭೆಯಲ್ಲ. ಬೆಂಗಳೂರು ನಗರಕ್ಕೆ ಸಂಬಂಧಿಸಿದಂತೆ ಕರೆದಿದ್ದ ಸಭೆಯಲ್ಲಿ ಬಿಬಿಎಂಪಿ ಚುನಾವಣೆ ಬಗ್ಗೆಯೂ ಮಾತನಾಡಿದ್ದಾರೆ. ಹೆಬ್ಬಾಳ ಫ್ಲೈಓವರ್ ನೋಡಲು ಹೊರಟಿದ್ದ ವೇಳೆ ಅಲ್ಲಿಗೆ ಬಂದಿದ್ದರು. ಈ ವೇಳೆ ಉಪಮುಖ್ಯಮಂತ್ರಿಗಳು ಶಾಸಕರನ್ನು ಭೇಟಿ ಮಾಡಿದ್ದು, ಕಾನೂನು ಅಭಿಪ್ರಾಯ ಪಡೆಯಲು ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದರು. ಕುಮಾರಸ್ವಾಮಿಯವರು ಸುಮ್ಮನೆ ಆರೋಪ ಮಾಡುತ್ತಾರೆ ಎಂದು ಕುಟುಕಿದ್ದಾರೆ.

    ಡಿಸಿಎಂ ಡಿ.ಕೆ ಶಿವಕುಮಾರ್ ಅವರು ನಡೆಸಿದ ಸಭೆಗೆ ರಣದೀಪ್ ಸಿಂಗ್ ಸುರ್ಜೇವಾಲ ಬಂದಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಪ್ರತಾಪ್ ಸಿಂಹ ಎಳಸು, ರಾಜಕೀಯ ಪ್ರಬುದ್ಧತೆಯಿಲ್ಲ : ಸಿದ್ದರಾಮಯ್ಯ ವಾಗ್ದಾಳಿ

  • ಉಸ್ತುವಾರಿ ಸಚಿವರ ಪಟ್ಟಿ ರಿಲೀಸ್‌ – ನಿಮ್ಮ ಜಿಲ್ಲೆಯ ಉಸ್ತುವಾರಿ ಯಾರಿಗೆ?

    ಉಸ್ತುವಾರಿ ಸಚಿವರ ಪಟ್ಟಿ ರಿಲೀಸ್‌ – ನಿಮ್ಮ ಜಿಲ್ಲೆಯ ಉಸ್ತುವಾರಿ ಯಾರಿಗೆ?

    ಬೆಂಗಳೂರು: ವಿವಿಧ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ನೇಮಕ ಮಾಡಲಾಗಿದ್ದು, ಬೆಂಗಳೂರು ನಗರ ಉಸ್ತುವಾರಿಯನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಹಿಸಿಕೊಂಡಿದ್ದಾರೆ.

    ಯಾವ ಜಿಲ್ಲೆಗೆ ಯಾರು ಉಸ್ತುವಾರಿ?
    ಡಿ.ಕೆ.ಶಿವಕುಮಾರ್‌ – ಬೆಂಗಳೂರು ನಗರ
    ಡಾ. ಜಿ.ಪರಮೇಶ್ವರ – ತುಮಕೂರು
    ಹೆಚ್‌.ಕೆ.ಪಾಟೀಲ – ಗದಗ
    ಕೆ.ಹೆಚ್‌.ಮುನಿಯಪ್ಪ – ಬೆಂಗಳೂರು ಗ್ರಾಮಾಂತರ
    ರಾಮಲಿಂಗಾ ರೆಡ್ಡಿ – ರಾಮನಗರ
    ಕೆ.ಜೆ.ಜಾರ್ಜ್‌ – ಚಿಕ್ಕಮಗಳೂರು
    ಎಂ.ಬಿ.ಪಾಟೀಲ – ವಿಜಯಪುರ
    ದಿನೇಶ್‌ ಗುಂಡೂರಾವ್‌ – ದಕ್ಷಿಣ ಕನ್ನಡ
    ಹೆಚ್‌.ಸಿ.ಮಹಾದೇವಪ್ಪ – ಮೈಸೂರು
    ಸತೀಶ್‌ ಜಾರಕಿಹೊಳಿ – ಬೆಳಗಾವಿ
    ಪ್ರಿಯಾಂಕ್‌ ಖರ್ಗೆ – ಕಲಬುರಗಿ
    ಶಿವಾನಂದ ಪಾಟೀಲ – ಹಾವೇರಿ
    ಜಮೀರ್‌ ಅಹ್ಮದ್‌ – ವಿಜಯನಗರ
    ಶರಣ ಬಸಪ್ಪ ದರ್ಶನಾಪುರ್‌ – ಯಾದಗಿರಿ
    ಈಶ್ವರ್‌ ಖಂಡ್ರೆ – ಬೀದರ್‌
    ಎನ್.ಚಲುವರಾಯಸ್ವಾಮಿ – ಮಂಡ್ಯ
    ಎಸ್.ಎಸ್‌.ಮಲ್ಲಿಕಾರ್ಜುನ – ದಾವಣಗೆರೆ
    ಸಂತೋಷ್‌ ಲಾಡ್‌ – ಧಾರವಾಡ
    ಶರಣ ಪ್ರಕಾಶ್‌ ಪಾಟೀಲ್‌ – ರಾಯಚೂರು
    ಆರ್‌.ಬಿ.ತಿಮ್ಮಾಪೂರ – ಬಾಗಲಕೋಟೆ
    ಕೆ.ವೆಂಕಟೇಶ್‌ – ಚಾಮರಾಜನಗರ
    ತಂಗಡಗಿ ಶಿವರಾಜ್‌ ಸಂಗಪ್ಪ – ಕೊಪ್ಪಳ
    ಡಿ.ಸುಧಾಕರ್‌ – ಚಿತ್ರದುರ್ಗ
    ಬಿ.ನಾಗೇಂದ್ರ – ಬಳ್ಳಾರಿ
    ಕೆ.ಎನ್.ರಾಜಣ್ಣ – ಹಾಸನ
    ಬಿ.ಎಸ್‌.ಸುರೇಶ್‌ – ಕೋಲಾರ
    ಲಕ್ಷ್ಮಿ ಹೆಬ್ಬಾಳ್ಕರ್‌ – ಉಡುಪಿ
    ಮಂಕಾಳ್‌ ವೈದ್ಯ – ಉತ್ತರ ಕನ್ನಡ
    ಮಧು ಬಂಗಾರಪ್ಪ – ಶಿವಮೊಗ್ಗ
    ಡಾ. ಎಂ.ಸಿ.ಸುಧಾಕರ್‌ – ಚಿಕ್ಕಬಳ್ಳಾಪುರ
    ಎನ್.ಎಸ್‌.ಭೋಸರಾಜು – ಕೊಡಗು

  • ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ 4% ಹೆಚ್ಚಳ

    ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ 4% ಹೆಚ್ಚಳ

    ಬೆಂಗಳೂರು: ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ (Karnataka Government) ಸಿಹಿ ಸುದ್ದಿ ನೀಡಿದೆ.

    ತುಟ್ಟಿ ಭತ್ಯೆಯನ್ನು (Dearness Allowance) 4% ಹೆಚ್ಚಿಸಿ ಸರ್ಕಾರ ಆದೇಶ ಪ್ರಕಟಿಸಿದೆ. ಜನವರಿಯಿಂದ ಪೂರ್ವಾನ್ವಯವಾಗುವಂತೆ ಇದು ಜಾರಿಯಾಗಲಿದೆ. ಇದನ್ನೂ ಓದಿ: ಉಡುಪಿ, ದ.ಕ, ಶಿವಮೊಗ್ಗದಲ್ಲಿ ಖಾಸಗಿ ಬಸ್‌ಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಿ: ಸುನಿಲ್ ಕುಮಾರ್

    ಇಲ್ಲಿಯವರೆಗೆ 31% ತುಟ್ಟಿ ಭತ್ಯೆ ಇತ್ತು. ಈಗ ಇದು 35% ಏರಿಕೆಯಾಗಿದೆ.

  • ಮುಸ್ಲಿಂ ಮೀಸಲಾತಿ ರದ್ದು ಪ್ರಕರಣ – ರಾಜಕೀಯ ಹೇಳಿಕೆಗಳಿಗೆ ಸುಪ್ರೀಂ ಕಿಡಿ

    – ವಿಚಾರಣೆ ಜುಲೈ 25ಕ್ಕೆ ಮುಂದೂಡಿಕೆ

    ನವದೆಹಲಿ: ಮುಸ್ಲಿಮರಿಗೆ ನೀಡಲಾಗಿದ್ದ 4% ಒಬಿಸಿ (OBC) ಮೀಸಲಾತಿ (Reservation) ರದ್ದು ಪಡಿಸಿರುವ ಸರ್ಕಾರದ ಆದೇಶದ ಕುರಿತು ರಾಜಕೀಯ ಹೇಳಿಕೆಗಳನ್ನು ಸುಪ್ರೀಂ ಕೋರ್ಟ್ (Supreme Court) ಗಂಭೀರವಾಗಿ ಪರಿಗಣಿಸಿದೆ. ನ್ಯಾಯಾಲಯದ ವಿಚಾರಣೆಯಲ್ಲಿರುವ ಪ್ರಕರಣ ಕುರಿತು ಮಾತನಾಡುವಾಗ ಜಾಗೃತೆವಹಿಸಬೇಕು ಎಂದು ಕೋರ್ಟ್ ಎಚ್ಚರಿಕೆ ನೀಡಿದೆ.

    ಮುಸ್ಲಿಂ ಮೀಸಲಾತಿಯನ್ನು ರದ್ದುಗೊಳಿಸಿದ ಕರ್ನಾಟಕ ಸರ್ಕಾರ (Karnataka Government)  ಆದೇಶವನ್ನು ನ್ಯಾ. ಕೆಎಂ ಜೋಸೆಫ್‌, ಬಿವಿ ನಾಗರತ್ನ, ಅಹ್ಸಾನುದ್ದೀನ್ ಅಮಾನುಲ್ಲಾ ಅವರಿದ್ದ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿತು.

    ಈ ವೇಳೆ ನ್ಯಾಯಾಂಗದ ವಿಷಯಗಳ ಬಗ್ಗೆ ಸಾರ್ವಜನಿಕ ಹೇಳಿಕೆಗಳನ್ನು ನೀಡಬಾರದು. ರಾಜಕೀಯಕ್ಕೂ ಅದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ನ್ಯಾಯಾಲಯ ತರಾಟೆಗೆ ತೆಗೆದುಕೊಂಡಿದೆ. ಅಲ್ಲದೇ ಅರ್ಜಿ ವಿಚಾರಣೆಯನ್ನು ಜುಲೈ 25ಕ್ಕೆ ಮುಂದೂಡಿದೆ. ಇದನ್ನೂ ಓದಿ:  ಮುಸ್ಲಿಂ ಮೀಸಲಾತಿ ರದ್ದು ವಿಚಾರ- ಸುಪ್ರೀಂನಲ್ಲಿ ಇಂದು ವಿಚಾರಣೆ

    ಅರ್ಜಿದಾರರ ಪರ ವಕೀಲ ದುಶ್ಯಂತ್ ದವೆ,  ಪ್ರತಿ ದಿನ  ಗೃಹ ಸಚಿವ (Home Minister) ಅಮಿತ್ ಶಾ (Amit Shah) ಅವರು ಮೀಸಲಾತಿ ರದ್ದುಗೊಳಿಸಿದ್ದರ ಬಗ್ಗೆ ಹೆಮ್ಮೆಯಿಂದ  ಮಾತನಾಡುತ್ತಿದ್ದಾರೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು.

    ಈ ವೇಳೆ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ, ಧರ್ಮದ ಆಧಾರದಲ್ಲಿ ನೀಡುವ ಮೀಸಲಾತಿಯನ್ನು ಯಾರು ವಿರೋಧಿಸುತ್ತಾರೋ ಅವರು ಸಮರ್ಥಿಸಿಕೊಳ್ಳುತ್ತಾರೆ ಎಂದು ವಾದಿಸಿದರು.  ಈ ವೇಳೆ ನ್ಯಾಯಮೂರ್ತಿ ಬಿವಿ ನಾಗರತ್ನ, ಪ್ರಕರಣ ನ್ಯಾಯಾಲಯದಲ್ಲಿರುವಾಗ ಸರ್ಕಾರದ ವ್ಯಕ್ತಿಗಳು ಯಾವುದೇ ಹೇಳಿಕೆ ನೀಡಬಾರದು.  ಮಾತನಾಡುವಾಗ ಜಾಗೃತೆವಹಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

    ಸೆಂಟ್ರಲ್ ಮುಸ್ಲಿಂ ಅಸೋಸಿಯೇಷನ್ ಪರವಾಗಿ ಹಿರಿಯ ವಕೀಲ ಪ್ರೊ.ರವಿವರ್ಮ ಕುಮಾರ್ ಅವರು ಮೀಸಲಾತಿ ರದ್ದಿಗೆ ಸಂಬಂಧಿಸಿದ ಭಾಷಣಗಳ ಸುದ್ದಿಯನ್ನು ಪ್ರಕಟಿಸದಂತೆ ಮಾಧ್ಯಮಗಳನ್ನು ನಿರ್ಬಂಧಿಸುವಂತೆ ಮನವಿ ಮಾಡಿದರು. ಆದರ ಮನವಿಯನ್ನು ಪೀಠ ಪುರಸ್ಕರಿಸಲಿಲ್ಲ.

    ಅರ್ಜಿ ವಿಚಾರಣೆಯನ್ನು ಜುಲೈ 25ಕ್ಕೆ ಮುಂದೂಡಿದ ಕೋರ್ಟ್‌  ಮುಂದಿನ ಆದೇಶದವರೆಗೂ ಹಳೆಯ ಮೀಸಲಾತಿಯನ್ನು ಮುಂದುವರಿಸುವಂತೆ ಆದೇಶಿಸಿದೆ. ಇದನ್ನೂ ಓದಿ: ಐಎಎಸ್ ಅಧಿಕಾರಿ ಕೊಲೆ ಅಪರಾಧಿ ರಿಲೀಸ್ – ಬಿಹಾರ ಸರ್ಕಾರಕ್ಕೆ ಸುಪ್ರೀಂ ನೋಟಿಸ್

  • ಮುಸ್ಲಿಂ ಮೀಸಲಾತಿ ರದ್ದು ಆದೇಶಕ್ಕೆ ತಡೆ – ಮೇ 9 ರವರೆಗೆ ಜಾರಿ ಬೇಡವೆಂದು ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ನಿರ್ದೇಶನ

    ಮುಸ್ಲಿಂ ಮೀಸಲಾತಿ ರದ್ದು ಆದೇಶಕ್ಕೆ ತಡೆ – ಮೇ 9 ರವರೆಗೆ ಜಾರಿ ಬೇಡವೆಂದು ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ನಿರ್ದೇಶನ

    ನವದೆಹಲಿ: ಕರ್ನಾಟಕದಲ್ಲಿ ಮುಸ್ಲಿಮರ ಮೀಸಲಾತಿ (Karnataka Muslim Reservation) ರದ್ದುಗೊಳಿಸಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್‌ (Supreme Court) ತಡೆಯಾಜ್ಞೆ ನೀಡಿದೆ. ಮೇ 9 ರವರೆಗೆ ಈ ಆದೇಶವನ್ನು ಜಾರಿಗೊಳಿಸದಂತೆ ಕರ್ನಾಟಕ ಸರ್ಕಾರಕ್ಕೆ (Karnataka Government) ಸುಪ್ರೀಂ ಕೋರ್ಟ್‌ ಹೇಳಿದೆ.

    2ಬಿ ಅಡಿ ಮುಸ್ಲಿಮರಿಗಿದ್ದ ಶೇ.4 ರಷ್ಟು ಮೀಸಲಾತಿಯನ್ನು ರಾಜ್ಯ ಸರ್ಕಾರ ರದ್ದು ಮಾಡಿತ್ತು. ಮುಸ್ಲಿಮರ ಮೀಸಲಾತಿ ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ನಡೆಸುತ್ತಿದೆ. ನ್ಯಾ. ಕೆ.ಎಂ. ಜೋಸೆಫ್‌ ನೇತೃತ್ವದ ದ್ವಿಸದಸ್ಯ ಪೀಠ ಅರ್ಜಿ ವಿಚಾರಣೆ ನಡೆಸಿದ್ದು, ಮೇ 9 ಕ್ಕೆ ವಿಚಾರಣೆಯನ್ನು ಮುಂದೂಡಿದೆ. ಅಲ್ಲಿಯವರೆಗೂ ಮೀಸಲಾತಿ ಜಾರಿಗೆ ನ್ಯಾಯಾಲಯ ತಡೆ ನೀಡಿದೆ. ಇದನ್ನೂ ಓದಿ: ಯೋಗಿ ಆದಿತ್ಯನಾಥ್‌ಗೆ ಜೀವ ಬೆದರಿಕೆ – ಪ್ರಕರಣ ದಾಖಲು

    ಅಫಿಡವಿಟ್‌ ಸಿದ್ಧವಾಗಿದೆ. ಆದರೆ ಸಾಂವಿಧಾನಿಕ ಪೀಠದ ವಿಚಾರಣೆಯಲ್ಲಿದ್ದೇನೆ. ಹೀಗಾಗಿ ವಿಚಾರಣೆ ಮುಂದೂಡಬೇಕು ಎಂದು ರಾಜ್ಯ ಸರ್ಕಾರದ ಪರ ವಕೀಲರು ಮನವಿ ಮಾಡಿದ್ದರು. ಆದರೆ ಇದಕ್ಕೆ ಅರ್ಜಿದಾರ ಪರ ವಕೀಲರು ವಿರೋಧ ವ್ಯಕ್ತಪಡಿಸಿದ್ದರು. ಅರ್ಜಿದಾರ ಪರ ವಕೀಲರಾದ ದುಷ್ಯಂತ್‌ ದವೆ, ಇದು ಅತ್ಯಂತ ಮಹತ್ವದ ಪ್ರಕರಣ. ವಿಚಾರಣೆ ಮುಂದೂಡಬಾರದು ಎಂದು ಕೋರ್ಟ್‌ಗೆ ಮನವಿ ಮಾಡಿದ್ದರು.

    ಪೀಠವು, ವಾದ ಪ್ರತಿವಾದ ಆಲಿಸಿದ ಬಳಿಕ ಮೇ 9 ಕ್ಕೆ ವಿಚಾರಣೆ ಮುಂದೂಡಿದೆ. ಅರ್ಜಿ ವಿಚಾರಣೆಗೆ ಮುಂದೂಡಿಕೆ ಆಕ್ಷೇಪ ಹಿನ್ನಲೆ ಹಳೆ ಆದೇಶ ಮುಂದುವರಿಸುವುದಾಗಿ ಕೋರ್ಟ್‌ ಹೇಳಿದೆ. ಇದನ್ನೂ ಓದಿ: ಬಿಎಸ್‌ವೈ ಭೇಟಿ ಮಾಡಿದ ಬಿಎಲ್ ಸಂತೋಷ್ – ಕುತೂಹಲ ಮೂಡಿಸಿದ ನಾಯಕರ ಭೇಟಿ