Tag: Karnataka Government

  • ಸರ್ಕಾರದ ಒಳ ಮೀಸಲಾತಿ ವಿರುದ್ಧ ಹೋರಾಟ: ಸಿ.ಎಸ್‌.ದ್ವಾರಕನಾಥ್‌

    ಸರ್ಕಾರದ ಒಳ ಮೀಸಲಾತಿ ವಿರುದ್ಧ ಹೋರಾಟ: ಸಿ.ಎಸ್‌.ದ್ವಾರಕನಾಥ್‌

    ಬೆಂಗಳೂರು: ಒಳ ಮೀಸಲಾತಿ (Internal Reservation) ವರ್ಗೀಕರಣದಲ್ಲಿ 89 ಸಮುದಾಯಗಳಿಗೆ ಅನ್ಯಾಯವಾಗಿದೆ. ಕೂಡಲೇ ಇದನ್ನ ಹಿಂಪಡೆಯಬೇಕು. ಇಲ್ಲದಿದ್ದರೆ ಸರ್ಕಾರದ ವಿರುದ್ಧ ಕಾನೂನು ಹೋರಾಟ ನಡೆಸಲಾಗುವುದು ಎಂದು ಅಲೆಮಾರಿ ಬುಡಕಟ್ಟು ಮಹಾಸಭಾ ಅಧ್ಯಕ್ಷ ಸಿ.ಎಸ್.ದ್ವಾರಕನಾಥ್ (C.S.Dwarakanath) ತಿಳಿಸಿದ್ದಾರೆ.

    ಅಲೆಮಾರಿ ಬುಡಕಟ್ಟು ಮಹಾಸಭಾದಿಂದ ಮಂಗಳವಾರ ಸುದ್ದಿಗೋಷ್ಠಿ ನಡೆಸಲಾಯಿತು. ಈ ವೇಳೆ ಮಾತನಾಡಿದ ದ್ವಾರಕನಾಥ್‌, ಬಿಜೆಪಿ ಸರ್ಕಾರ ಸಂಪುಟ ಸಭೆಯಲ್ಲಿ ಪರಿಶಿಷ್ಟ ಜಾತಿ ಪಟ್ಟಿಯಲ್ಲಿ ಒಳ ಮೀಸಲಾತಿ ಜಾರಿಗೊಳಿಸಿದೆ. ಗ್ರೂಪ್ 1 ರಲ್ಲಿ 6 ಪರ್ಸೆಂಟ್ ಮೀಸಲಾತಿಯನ್ನು ಮಾದಿಗ ಸಮುದಾಯ ಸೇರಿ ಇನ್ನಿತರ ಸಮುದಾಯಕ್ಕೆ ನೀಡಲಾಗಿದೆ. ಗ್ರೂಪ್ 2 ರಲ್ಲಿ, 5.5 ಪರ್ಸೆಂಟ್ ಮೀಸಲಾತಿಯನ್ನು ಹೊಲೆಯ ಸಂಬಂಧಿಸಿದ ಜಾತಿಗಳಿಗೆ ನೀಡಲಾಗಿದೆ. ಸ್ಪಶ್ಯ ಜಾತಿಗಳಿಗೆ 4.5 ಪರ್ಸೆಂಟ್ ಮೀಸಲಾತಿ ಕಲ್ಪಿಸಲಾಗಿದೆ. ಇದನ್ನು ಹೊರತುಪಡಿಸಿ 89 ಜಾತಿಗಳಿಗೆ ಕೇವಲ 1 ಪರ್ಸೆಂಟ್ ಮೀಸಲಾತಿ ನೀಡಲಾಗಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ರಾಜ್ಯ ನಾಯಕರು ತಂದ ಪಟ್ಟಿ ನೋಡಿ ಮೋದಿ ಕೆಂಡ : ಬಿಜೆಪಿ ಸಭೆಯಲ್ಲಿ ಏನಾಯ್ತು?

    89 ಜಾತಿಯಲ್ಲಿ ಹೊಲೆಯ, ಮಾದಿಗ ಸಂಬಂಧಿತ ಜಾತಿಗಳಿವೆ. ಈ 89 ಸಮುದಾಯಗಳು ಬಹಳ ವಿಚಿತ್ರವಾಗಿರೋ ಸಮುದಾಯ. ಆದಿ ಅಂಧ್ರ, ಬೈರ, ಬಾಕೋಡ, ಬತ್ತಡ, ಬಂಡಿ ಈ ರೀತಿಯಾಗಿ ಹಲವಾರು ಸಮುದಾಯಗಳಿವೆ. ಈ ಹಿಂದೆ ಹೊಲಯ ಹಾಗೂ‌ ಮಾದಿಗ ಸಮುದಾಯದ ಜೊತೆ ಮೀಸಲಾತಿ ಹಂಚಿಕೆ ಆಗಿತ್ತು. ಈಗ ಅವುಗಳನ್ನ ಬೇರ್ಪಡಿಸಿ ಅನ್ಯಾಯ ಮಾಡಲಾಗಿದೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

    ಯಾವುದೇ ವರದಿ, ಸಂಶೋಧನೆಯ ಬಗ್ಗೆ ಸರ್ಕಾರ ಗಮನಹರಿಸಿಲ್ಲ. ಜನಸಂಖ್ಯೆ ಆಧಾರದಲ್ಲಿ ಮೀಸಲಾತಿ ನೀಡಿದ್ರೆ, ಸರ್ಕಾರ ಅದರ ಸಂಪೂರ್ಣ ಡೇಟಾ ನೀಡಲಿ. ಯಾವುದೇ ಚರ್ಚೆ ಇಲ್ಲದೆ ಕೆಲ ಸಚಿವರೇ ಇದರ ಜವಬ್ದಾರಿ ಹೊತ್ತು ಘೋಷಣೆ ಮಾಡಿದ್ದಾರೆ. ಗೋವಿಂದ ಕಾರಜೋಳ, ಸುಧಾಕರ್, ಪ್ರಭು ಚೌಹಾಣ್, ಮಾಧುಸ್ವಾಮಿ ಇವರೇ ಅಂತಾರಾಷ್ಟ್ರೀಯ ತಜ್ಞರಾಗಿದ್ದಾರೆ. 89 ಸಮುದಾಯವನ್ನು ಒಂದೇ ಕಡೆ ಹಾಕಲಾಗಿದೆ. ಅವರ ಶಿಕ್ಷಣ, ಸಾಮಾಜಿಕ, ಆರ್ಥಿಕ, ಸ್ಥಿತಿಗತಿ ಬಗ್ಗೆ ಅರಿವಿಲ್ಲದೇ ಈ ರೀತಿ ಮಾಡಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಹಾಸನದಲ್ಲಿ ಭವಾನಿ ರೇವಣ್ಣ ಸ್ಪರ್ಧೆ ಮಾಡಿದರೆ ಯಾವುದೇ ಕಾರಣಕ್ಕೂ ಗೆಲ್ಲಲ್ಲ: HDK

    ಭಂಗಿ‌ ಸಮುದಾಯ, ಬುಡಗ ಜಂಗಮ‌ ಸಮುದಾಯ ಕೂಡ 89 ಸಮುದಾಯದ ಪಟ್ಟಿಗೆ ಸೇರಿದೆ. 89 ಸಮುದಾಯಗಳಿಗೆ 1 ಪರ್ಸೆಂಟ್ ಮೀಸಲಾತಿ ನೀಡಿದ್ದಾರೆ. ಸರ್ಕಾರಕ್ಕೆ ಮಾನವೀಯತೆ ಅನ್ನೋದು ಇದೆಯಾ? ಕೂಡಲೇ ಇದನ್ನ ಹಿಂಪಡೆಯಬೇಕು. ಇಲ್ಲದಿದ್ದರೆ ಸರ್ಕಾರದ ವಿರುದ್ಧ ಕಾನೂನು ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದ್ದಾರೆ.

  • ಸಾರಿಗೆ ನೌಕರರ ವೇತನ ಶೇ.15ರಷ್ಟು ಹೆಚ್ಚಿಸಿ ಸರ್ಕಾರ ಆದೇಶ

    ಸಾರಿಗೆ ನೌಕರರ ವೇತನ ಶೇ.15ರಷ್ಟು ಹೆಚ್ಚಿಸಿ ಸರ್ಕಾರ ಆದೇಶ

    ಬೆಂಗಳೂರು: ಸಾರಿಗೆ ನಿಗಮಗಳ ನೌಕರರ (Transport Employees) ವೇತನವನ್ನು ಶೇ.15 ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ (Karnataka Government) ಅಧಿಕೃತ ಆದೇಶ ಹೊರಡಿಸಿದೆ.

    ಸಾರಿಗೆ ನೌಕರರ ಮುಷ್ಕರದ ಮೊದಲೇ ವೇತನ ಹೆಚ್ಚಿಸಿದೆ. ಮಾರ್ಚ್ 1 ರಿಂದ ಅನ್ವಯ ಆಗುವಂತೆ ವೇತನ ಹೆಚ್ಚಳ ಮಾಡಿದ ಸರ್ಕಾರ‌ ಆದೇಶಿಸಿದೆ. ಇದನ್ನೂ ಓದಿ: ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ಭವಿಷ್ಯ- ಆದೇಶ ಕಾಯ್ದಿರಿಸಿದ ಹೈಕೋರ್ಟ್

    ನಾಲ್ಕೂ ನಿಗಮಗಳ (ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಕಲ್ಯಾಣ ಕರ್ನಾಟಕ ಸಾರಿಗೆ, ವಾಯುವ್ಯ ಕರ್ನಾಟಕ ಸಾರಿಗೆ) ಸಾರಿಗೆ ನೌಕರರಿಗೆ ವೇತನ ಹೆಚ್ಚಿಸಲಾಗಿದೆ.

    ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಾರಿಗೆ ನೌಕರರು ಮಾ.21ರಿಂದ ಮುಷ್ಕರಕ್ಕೆ ಕರೆ ನೀಡಿದ್ದರು. ಇದರ ಬೆನ್ನಲ್ಲೇ ಶೇ.15ರಷ್ಟು ವೇತನ ಹೆಚ್ಚಿಸುವುದಾಗಿ ಸರ್ಕಾರ ತಿಳಿಸಿತ್ತು. ಅದರಂತೆ ವೇತನ ಹೆಚ್ಚಳ ಮಾಡಿದೆ. ಆದರೆ ಮೂಲ ವೇತನದಲ್ಲಿ ಶೇ.25ರಷ್ಟು ಹೆಚ್ಚಳ ಮಾಡಬೇಕು ಎಂಬುದು ಸಾರಿಗೆ ನೌಕರರ ಬೇಡಿಕೆಯಾಗಿದೆ. ಇದನ್ನೂ ಓದಿ: ಅಕಾಡೆಮಿ ಪ್ರಶಸ್ತಿ ವಿಜೇತರಿಗೆ ವರದಿಗಾರರ ಕೂಟ ಅಭಿನಂದನೆ

  • ಮಾ.1 ರಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸರ್ಕಾರಿ ನೌಕರರ ಕರೆ

    ಮಾ.1 ರಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸರ್ಕಾರಿ ನೌಕರರ ಕರೆ

    ಬೆಂಗಳೂರು: 7ನೇ ವೇತನ ಆಯೋಗ (7th Pay Commission) ಜಾರಿ ವಿಚಾರವಾಗಿ ಸರ್ಕಾರದ ನಡೆಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ (KSGEA) ತೀವ್ರ ಅಸಮಾಧಾನ ಹೊರಹಾಕಿದೆ. ಸಂಘದ ಬೇಡಿಕೆ ಈಡೇರಿಸದಿದ್ದರೆ ಮಾ.1 ರಿಂದ ರಾಜ್ಯಾದ್ಯಂತ ಅನಿರ್ಧಿಷ್ಟಾವಧಿ ಮುಷ್ಕರ ಕೈಗೊಳ್ಳುವುದಾಗಿ ಕರೆ ನೀಡಿದೆ.

    ರಾಜ್ಯ ಬಜೆಟ್‌ ಮಂಡನೆ ವೇಳೆ ಏಳನೇ ವೇತನ ಆಯೋಗ ಜಾರಿ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಪ್ರಸ್ತಾಪಿಸದಿರುವುದಕ್ಕೆ ನೌಕರರ ಸಂಘ ಸರ್ಕಾರದ ವಿರುದ್ಧ ಕಿಡಿಕಾರಿದೆ. ಈ ಹಿನ್ನೆಲೆಯಲ್ಲಿ ಸಂಘವು ಮಂಗಳವಾರ ತುರ್ತು ಕಾರ್ಯಕಾರಿಣಿ ಸಭೆ ಕರೆದು ಕೆಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದೆ. ಇದನ್ನೂ ಓದಿ: ಸಿದ್ದರಾಮಯ್ಯ ನಮ್ಮ ನಾಯಕ, ರಾಜ್ಯಕ್ಕೆ ಅನ್ನದಾತ – ಡಿಕೆಶಿ ಗುಣಗಾನ

    ಸಂಘದ ಬೇಡಿಕೆಗಳೇನು?
    ಏಳನೇ ವೇತನ ಆಯೋಗದ ಮಧ್ಯಂತರ ವರದಿ ಪಡೆದು 40% ಫಿಟ್ಮೆಂಟ್‌ನ್ನು ದಿನಾಂಕ 1.07.2022 ರಿಂದ ಜಾರಿಗೆ ತರುವುದು, ರಾಜಸ್ತಾನ, ಛತ್ತೀಸಗಢ, ಜಾರ್ಖಂಡ್, ಪಂಜಾಬ್ ಹಾಗೂ ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಎನ್‌ಪಿಎಸ್ ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ ಜಾರಿಗೆ ತಂದಿರುವಂತೆಯೇ ಕರ್ನಾಟಕ ರಾಜ್ಯದಲ್ಲಿಯೂ ಮಾಡಬೇಕು ಎಂದು ಬೇಡಿಕೆಯಿಟ್ಟಿದೆ.

    ಈ ಎರಡು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಏಳು ದಿನಗಳ ಕಾಲಾವಕಾಶ ನೀಡಲಾಗುವುದು. ಬೇಡಿಕೆ ಈಡೇರಿಸದಿದ್ದರೆ ಮಾ.1 ರಿಂದ ರಾಜ್ಯದ ಎಲ್ಲಾ ಸರ್ಕಾರಿ ನೌಕರರು, ನಿಗಮ ಮತ್ತು ಮಂಡಳಿಗಳು ಅನುದಾನಿತ ಸಂಸ್ಥೆಯ ಎಲ್ಲ ನೌಕರರು ಅನಿರ್ದಿಷ್ಟಾವಧಿ ವರೆಗೆ ಕರ್ತವ್ಯಕ್ಕೆ ಗೈರು ಹಾಜರಾಗುವುದರ ಮೂಲಕ ಮುಷ್ಕರ ಮಾಡಲಾಗುವುದು ಎಂದು ಸಂಘವು ತಿಳಿಸಿದೆ. ಇದನ್ನೂ ಓದಿ: ರಾಜ್ಯಾದ್ಯಂತ ಬಿಜೆಪಿ ಡಬಲ್ ಎಂಜಿನ್ ಸರ್ಕಾರಗಳ ಸಾಧನೆ ಸಾರಲಿವೆ `ಪ್ರಗತಿ ರಥ’ – ಎಸ್.ವಿ. ರಾಘವೇಂದ್ರ

    ಮಾ.1 ರಿಂದ ಅನಿರ್ಧಿಷ್ಟಾವಧಿ ವರೆಗೆ ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮುಂದಾಗಿದೆ. ಇಂದು ಜರುಗಿದ ಕಾರ್ಯಕಾರಿಣಿ ಸಭೆಯಲ್ಲಿ ಮೇಲಿನ ತೀರ್ಮಾನ ಕೈಗೊಳ್ಳಲಾಗಿದೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕೇಂದ್ರ, ರಾಜ್ಯ ಸರ್ಕಾರಗಳ ಕಾಯ್ದೆ-ಕಾನೂನು ಕನ್ನಡ ಭಾಷೆಯಲ್ಲೇ ಲಭ್ಯ; 74 ಅಧಿನಿಯಮಗಳ ಕನ್ನಡ ಆವೃತ್ತಿ ಲೋಕಾರ್ಪಣೆ

    ಕೇಂದ್ರ, ರಾಜ್ಯ ಸರ್ಕಾರಗಳ ಕಾಯ್ದೆ-ಕಾನೂನು ಕನ್ನಡ ಭಾಷೆಯಲ್ಲೇ ಲಭ್ಯ; 74 ಅಧಿನಿಯಮಗಳ ಕನ್ನಡ ಆವೃತ್ತಿ ಲೋಕಾರ್ಪಣೆ

    ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾಯ್ದೆ ಮತ್ತು ಕಾನೂನುಗಳು ಜನಸಾಮಾನ್ಯರಿಗೆ ಸ್ಥಳೀಯ ಭಾಷೆಯಲ್ಲಿ ಒದಗಿಸುವ ಮೂಲಕ ಕಾನೂನಿನ ಅರಿವು ಮೂಡಿಸುವ ನಿಟ್ಟಿನಲ್ಲಿ ಸಿದ್ಧಪಡಿಸಲಾದ 42 ಕೇಂದ್ರ ಅಧಿನಿಯಮಗಳು ಹಾಗೂ 32 ರಾಜ್ಯ ಅಧಿನಿಯಮಗಳ ಕನ್ನಡ ಆವೃತ್ತಿಗಳನ್ನು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ (J.C.Madhuswamy) ಲೋಕಾರ್ಪಣೆ ಮಾಡಿದರು.

    ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆ, ರಾಜಭಾಷಾ (ವಿಧಾಯೀ) ಆಯೋಗ ಹಾಗೂ ಭಾಷಾಂತರ ನಿರ್ದೇಶನಾಲಯದಿಂದ ಈ ಅಧಿನಿಯಮಗಳ ಕನ್ನಡ ಆವೃತ್ತಿ ಸಿದ್ಧಪಡಿಸಲಾಗಿದೆ. ಇದನ್ನೂ ಓದಿ: ಯತೀಂದ್ರ ಸಿದ್ದರಾಮಯ್ಯಗೆ ವರುಣಾ ಟಿಕೆಟ್‌ – ಡಿಕೆಶಿ ಘೋಷಣೆ

    ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಜೆ.ಸಿ.ಮಾಧುಸ್ವಾಮಿ, ಕಾನೂನಿನ ಮುಂದೆ ಎಲ್ಲರೂ ಸಮಾನರು. ಕಾನೂನಿನ ಅನುಷ್ಠಾನ ಮತ್ತು ಪಾಲನೆ ಮಾಡಬೇಕಾದರೇ ಅದರ ಅರಿವು ಬಹಳ ಮುಖ್ಯ. ಈ ಹಿನ್ನೆಲೆಯಲ್ಲಿ ಜನಸಾಮಾನ್ಯರಿಗೆ ಸ್ಥಳೀಯ ಭಾಷೆಯಲ್ಲಿ ಒದಗಿಸಿ ಅರ್ಥೈಸುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯದ ಅಧಿನಿಯಮಗಳನ್ನು ಕನ್ನಡಕ್ಕೆ ಭಾಷಾಂತರಗೊಳಿಸಲಾಗಿದೆ ಎಂದರು.

    ಜನಸಾಮಾನ್ಯರಿಗೆ ತಮ್ಮ ಸ್ಥಳೀಯ ಭಾಷೆಗಳಲ್ಲಿ ಕಾನೂನುಗಳನ್ನು ತಿಳಿದುಕೊಳ್ಳಲು ಹಾಗೂ ನ್ಯಾಯಾಲಯಗಳಲ್ಲಿ, ನ್ಯಾಯಾಧೀಕರಣಗಳಲ್ಲಿ ಸರ್ಕಾರದ ಕಚೇರಿಗಳಲ್ಲಿ ಕನ್ನಡದ ಬಳಕೆಯನ್ನು ಸುಗಮಗೊಳಿಸಲು ಈ ಅಧಿನಿಯಮಗಳು ತುಂಬಾ ಸಹಕಾರಿಯಾಗಲಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಧಿನಿಯಮಗಳನ್ನು ಭಾಷಾಂತರಿಸುವ ಕೆಲಸ ವ್ಯಾಪಕವಾಗಿ ಆಗಬೇಕಿದೆ ತಿಳಿಸಿದರು. ಇದನ್ನೂ ಓದಿ: ರಾಜ್ಯದಲ್ಲಿ ಸರ್ಕಾರ ಸತ್ತುಹೋಗಿದೆ ಅನ್ನೋದಕ್ಕೆ ಅಧಿಕಾರಿಗಳ ಬೀದಿ ರಂಪ ಸಾಕ್ಷಿ – ಸುರ್ಜೆವಾಲಾ

    ಕೇಂದ್ರ ಮತ್ತು ರಾಜ್ಯದ ಅಧಿನಿಯಮಗಳನ್ನು ಭಾಷಾಂತರಿಸುವುದಕ್ಕೆ ಕರ್ನಾಟಕದಲ್ಲಿ ವಿಶೇಷ ಒತ್ತು ನೀಡಲಾಗಿದ್ದು, ಕೇಂದ್ರ ಸರ್ಕಾರವೇ ಶ್ಲಾಘಿಸಿದೆ. ಜನರು ಕಾಯ್ದೆ, ಕಾನೂನುಗಳನ್ನು ಹೆಚ್ಚೆಚ್ಚು ತಿಳಿದುಕೊಂಡಲ್ಲಿ ಅವುಗಳ ಪರಿಣಾಮಕಾರಿ ಅನುಷ್ಠಾನ ಮಾಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.

    ಕರ್ನಾಟಕದ ನ್ಯಾಯಾಲಯಗಳಲ್ಲಿ ಕನ್ನಡದ ತೀರ್ಪುಗಳು ಹೊರಬರಲು ಹಾಗೂ ಆಡಳಿತ ವ್ಯವಹಾರಗಳಲ್ಲಿ ಮತ್ತು ಮೊಕದ್ದಮೆಗಳಿಗೆ ಸಂಬಂಧಿಸಿದ ಪ್ರಕ್ರಿಯೆಯಲ್ಲೂ ಕೂಡ ಕನ್ನಡದ ಬಳಕೆ ಸಮರ್ಪಕವಾಗಿ ಆಗಬೇಕಾಗಿದೆ ಎಂದರು. ಇದನ್ನೂ ಓದಿ: ಸೈಬರ್ ಪ್ರಕರಣ ತಡೆಯಲು ಕಠಿಣ ಕ್ರಮ: ಆರಗ ಜ್ಞಾನೇಂದ್ರ

    ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು ಹಾಗೂ ರಾಜಭಾಷಾ(ವಿಧಾಯೀ) ಆಯೋಗದ ಅಧ್ಯಕ್ಷರಾದ ಜಿ.ಶ್ರೀಧರ್ ಮಾತನಾಡಿ, ರಾಜಭಾಷಾ ಆಯೋಗವು ಇಲ್ಲಿಯವರೆಗೆ 371 ಕೇಂದ್ರ ಮತ್ತು 219 ರಾಜ್ಯ ಅಧಿನಿಯಮಗಳನ್ನು ಕನ್ನಡ ಭಾಷೆಗೆ ಭಾಷಾಂತರಿಸಿ ಪ್ರಕಟಿಸಿದೆ. ಭಾರತ ಸಂವಿಧಾನವನ್ನು ದೇಶದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಸ್ಥಳೀಯ ಭಾಷೆಯಲ್ಲಿ ಭಾಷಾಂತರಿಸಿ ಜನಸಾಮಾನ್ಯರಿಗೆ ತಲುಪಿಸಿದ ಕೀರ್ತಿ ನಮ್ಮ ಆಯೋಗಕ್ಕೆ ಸಲ್ಲುತ್ತದೆ ಎಂದು ಹೇಳಿದರು.

    ದೇಶದ ಪ್ರಮುಖ ಕಾನೂನುಗಳಾದ ಭಾರತ ದಂಡ ಸಂಹಿತೆ, ದಂಡ ಪ್ರಕ್ರಿಯಾ ಸಂಹಿತೆ ಹಾಗೂ ಭಾರತ ಸಾಕ್ಷ್ಯ ಅಧಿನಿಯಮಗಳನ್ನು ಕನ್ನಡ ಭಾಷೆಗೆ ಭಾಷಾಂತರಿಸಿ ದ್ವಿಭಾಷೆಯಲ್ಲಿ ಪ್ರಕಟಿಸಲಾಗಿದೆ. ಪರಿಷ್ಕೃತ ಇಂಗ್ಲಿಷ್ ಕನ್ನಡ ಕಾನೂನು ಪದಕೋಶ ಇತ್ತೀಚೆಗೆ ಬಿಡುಗಡೆ ಮಾಡಲಾಗಿದ್ದು, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ತರಿಸಿಕೊಂಡು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ರೀತಿಯ ಕೆಲಸ ಎಲ್ಲ ರಾಜ್ಯಗಳಲ್ಲಾಗಿದ್ದರೆ ಸ್ಥಳೀಯ ಭಾಷೆಯಲ್ಲಿ ನ್ಯಾಯಾಲಯ ತೀರ್ಪುಗಳನ್ನು ಪ್ರಕಟಿಸಲು ಸಹಾಯಕವಾಗುತ್ತದೆ ಎಂದು ಪ್ರಶಂಸೆ ವ್ಯಕ್ತಪಡಿಸಿದ್ದನ್ನು ಇದೇ ಸಂದರ್ಭದಲ್ಲಿ ತಿಳಿಸಿದರು.

    ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವ ಸಿ.ಎನ್.ಅಶ್ವತ್ ನಾರಾಯಣ, ಶಾಸಕ ದಿನಕರಶೆಟ್ಟಿ, ಭಾಷಾಂತರ ನಿರ್ದೇಶನಾಲಯದ ನಿರ್ದೇಶಕ ಎಂ.ವೆಂಕಟೇಶ, ರಾಜಭಾಷಾ(ವಿಧಾಯೀ) ಆಯೋಗದ ಸದಸ್ಯರು ಇದ್ದರು.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸರ್ಕಾರಕ್ಕೆ ಡೆಡ್‍ಲೈನ್ ನೀಡಿದ ಸಾರಿಗೆ ನೌಕರರ ಒಕ್ಕೂಟ

    ಸರ್ಕಾರಕ್ಕೆ ಡೆಡ್‍ಲೈನ್ ನೀಡಿದ ಸಾರಿಗೆ ನೌಕರರ ಒಕ್ಕೂಟ

    ಬೆಂಗಳೂರು: ರಾಜ್ಯದಲ್ಲಿ ಸದ್ಯಕ್ಕೆ ಸಾರಿಗೆ ಸಿಬ್ಬಂದಿ (Transport Staff) ಮತ್ತು ಸರ್ಕಾರದ ನಡುವಿನ ತಿಕ್ಕಾಟ ಮುಗಿಯುವ ಹಾಗೆ ಕಾಣುತ್ತಿಲ್ಲ. ಸರ್ಕಾರದ (Government) ವಿರುದ್ಧ ಮತ್ತೆ ಸಮರ ಸಾರಿರುವ ಸಾರಿಗೆ ನೌಕರರು ಸಾರಿಗೆ ಇಲಾಖೆ ಮುಂದೆ ಮಾಡು ಇಲ್ಲವೇ ಮಡಿ ಆಯ್ಕೆ ಇಟ್ಟಿದ್ದಾರೆ.

    ಚುನಾವಣಾ (Election) ಹೊತ್ತಲ್ಲೇ ಮತ್ತೆ ಸಾರಿಗೆ ನೌಕರರು ಸರ್ಕಾರಕ್ಕೆ ಬಿಸಿ ತುಪ್ಪವಾಗಿ ಪರಿಣಮಿಸಿದ್ದಾರೆ. ಕಳೆದ ತಿಂಗಳಷ್ಟೇ ಸರ್ಕಾರವನ್ನು ಎಚ್ಚರಿಸುವ ನಿಟ್ಟಿನಲ್ಲಿ ಪ್ರತಿಭಟನೆಗೆ ಕರೆ ನೀಡಿದ್ದ ಸಾರಿಗೆ ನೌಕರರ ಒಕ್ಕೂಟ, ಈಗ ಮತ್ತೊಮ್ಮೆ ತಮ್ಮ ಬೇಡಿಕೆ ಈಡೇರಿಕೆಗೆ ಡೆಡ್ ಲೈನ್ (Deadline) ನೀಡಿದೆ. ಇದನ್ನೂ ಓದಿ: BBMP ವ್ಯಾಪ್ತಿಯಲ್ಲಿ ಅಧಿಕಾರಿಗಳ ಅಕ್ರಮ – 969 ಕೋಟಿ ರೂ. ಬೃಹತ್ ಅವ್ಯವಹಾರ ಬೆನ್ನತ್ತಿದ ED

    ಫೆಬ್ರವರಿ ಅಂತ್ಯದೊಳಗೆ ತಮ್ಮ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಿದಿದ್ದರೆ ಮತ್ತೊಮ್ಮೆ ರಸ್ತೆಗೆ ಇಳಿದು ಪ್ರತಿಭಟನೆ ಮಾಡುವ ಎಚ್ಚರಿಕೆ ನೀಡಿದ್ದಾರೆ. ಸರ್ಕಾರದ ಮುಂದೆ ನೌಕರರ ಒಕ್ಕೂಟ ಎರಡು ಆಯ್ಕೆಗಳನ್ನು ಮುಂದಿಟ್ಟಿದೆ. ಒಂದು ತಮ್ಮ ಬೇಡಿಕೆಗಳಿಗೆ ಒಪ್ಪಬೇಕು. ಎರಡನೇಯದು ಸರ್ಕಾರ ಬೇಡಿಕೆಗೆ ಒಪ್ಪದಿದ್ದರೆ ಪ್ರತಿಭಟನೆಯನ್ನು ಎದುರಿಸುವಂತೆ ಎಚ್ಚರಿಕೆ ನೀಡಿದ್ದಾರೆ. ಇದೇ ತಿಂಗಳು ಆರಂಭವಾಗುವ ವಿಧಾನಸಭಾ ಕಲಾಪದಲ್ಲಿ ಈ ಎಲ್ಲಾ ವಿಚಾರಗಳನ್ನು ಚರ್ಚೆ ಮಾಡಿ, ತೀರ್ಮಾನ ಪ್ರಕಟಿಸುವಂತೆ ಆಗ್ರಹ ಮಾಡಿದ್ದು, ಈ ತಿಂಗಳೇ ಸರ್ಕಾರಕ್ಕೆ ಡೆಡ್‌ಲೈನ್‌ ಅಂತಾ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: Union Budget 2023ː ಕರ್ನಾಟಕಕ್ಕೆ ಬಂಪರ್ ಕೊಡುಗೆ – ರೈಲ್ವೆಗೆ ದಾಖಲೆಯ 7,561 ಕೋಟಿ ಅನುದಾನ

    ಸದ್ಯ ಸಾರಿಗೆ ನೌಕರರ ಈ ಬಾರಿಯ ಪಟ್ಟು ಸರ್ಕಾರಕ್ಕೆ ಬಿಸಿ ತುಪ್ಪವಾಗಿಯೇ ಪರಿಣಮಿಸುವ ಸಾಧ್ಯತೆ ಹೆಚ್ಚಿದೆ. ಕಾರಣ ಚುನಾವಣೆ ಸಂದರ್ಭದಲ್ಲಿ ಮತ್ತೊಮ್ಮೆ ಬಸ್ (Bus) ಸಂಚಾರ ಸ್ಥಗಿತಗೊಳಿಸಿ ಸಮರ ಸಾರಿದ್ರೆ ಸಾರ್ವಜನಿಕರಿಗೆ ಬಹಳ ತೊಂದರೆಯಾಗುವ ಸಾಧ್ಯತೆ ಇದ್ದು, ಚುನಾವಣೆ ಕೆಲಸಗಳಿಗೂ ತಡೆಯಾಗಬಹುದು. ಅಲ್ಲದೆ ಸರ್ಕಾರದ ಮೇಲೂ ಚುನಾವಣೆ ವೇಳೆ ಪರಿಣಾಮ ಬೀರಲಿದೆ. ಹಾಗಾಗಿ ಸದ್ಯ ಸರ್ಕಾರ ಕೂಡ ಈ ಬಗ್ಗೆ ಗಂಭೀರ ಚಿಂತನೆ ಮಾಡಬೇಕಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸರ್ಕಾರ ನಿಗದಿಪಡಿಸಿದ ದರಕ್ಕೆ ಓಲಾ, ಉಬರ್ ಆಕ್ಷೇಪ – ಅಧಿಸೂಚನೆಗೆ ಹೈಕೋರ್ಟ್‌ ತಡೆ

    ಸರ್ಕಾರ ನಿಗದಿಪಡಿಸಿದ ದರಕ್ಕೆ ಓಲಾ, ಉಬರ್ ಆಕ್ಷೇಪ – ಅಧಿಸೂಚನೆಗೆ ಹೈಕೋರ್ಟ್‌ ತಡೆ

    ಬೆಂಗಳೂರು: ಕರ್ನಾಟಕ ಸರ್ಕಾರ(Karnataka Government) ನಿಗದಿ ಮಾಡಿದ ಆಟೋ ದರಕ್ಕೆ ಓಲಾ, ಉಬರ್(Ola, Uber) ಸಂಸ್ಥೆಗಳು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ, ಸರ್ಕಾರದ ಅಧಿಸೂಚನೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

    ಕಳೆದ ವರ್ಷ ನವೆಂಬರ್ 25ರಂದು ಓಲಾ, ಉಬರ್ ಮೊದಲಾದ ಅಗ್ರಿಗೇಟರ್ ಆಟೋ ಸೇವೆಗಳ ದರ ನಿಯಂತ್ರಿಸಲು ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಪ್ರಾದೇಶಿಕ ಸಾರಿಗೆ ಪ್ರಾಧಿಕಾರಿಗಳು ನಿಗದಿಪಡಿಸಿರುವ ದರಗಳ ಮೇಲೆ ಹೆಚ್ಚುವರಿಯಾಗಿ ಶೇ. 5ರಷ್ಟು ಸೇವಾ ಶುಲ್ಕ ಮತ್ತು ಜಿಎಸ್‍ಟಿ ವಿಧಿಸಬಹುದು ಎಂದು ಆದೇಶ ನೀಡಿತ್ತು. ಇದನ್ನೂ ಓದಿ: 1,337 ಕೋಟಿ ಪೈಕಿ ಶೇ.10 ರಷ್ಟು ದಂಡವನ್ನು ಠೇವಣಿ ಇಡಿ – ಗೂಗಲ್‌ಗೆ NCALT ಆದೇಶ

    ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಓಲಾ, ಉಬರ್ ಸಂಸ್ಥೆಗಳು, ಸರ್ಕಾರದ ಆದೇಶ ರದ್ದು ಮಾಡಲು ಆದೇಶಿಸುವಂತೆ ಕೋರಿ ಹೈಕೋರ್ಟ್ ಮೊರೆ ಹೋಗಿದ್ದವು. ಈ ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್, ಈ ಅರ್ಜಿಗಳು ಇತ್ಯರ್ಥವಾಗುವವರೆಗೆ ಸರ್ಕಾರದ ಅಧಿಸೂಚನೆಗೆ ತಡೆ ನೀಡಿ ವಿಚಾರಣೆಯನ್ನು ಜನವರಿ 12ಕ್ಕೆ ಮುಂದೂಡಿತು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • BPL ಪಡಿತರದಾರರಿಗೆ 5 ಕೆಜಿ ಜೊತೆ 1 ಕೆಜಿ ಹೆಚ್ಚುವರಿ ಅಕ್ಕಿ ವಿತರಣೆ – ಸರ್ಕಾರ ಆದೇಶ

    BPL ಪಡಿತರದಾರರಿಗೆ 5 ಕೆಜಿ ಜೊತೆ 1 ಕೆಜಿ ಹೆಚ್ಚುವರಿ ಅಕ್ಕಿ ವಿತರಣೆ – ಸರ್ಕಾರ ಆದೇಶ

    ಬೆಂಗಳೂರು: ಬಿಪಿಎಲ್‌ ಪಡಿತರದಾರರಿಗೆ (BPL Card) ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಫಲಾನುಭವಿಗಳಿಗೆ ಈವರೆಗೆ ವಿತರಿಸುತ್ತಿದ್ದ 5 ಕೆಜಿ ಜೊತೆಗೆ 1 ಕೆಜಿ ಹೆಚ್ಚುವರಿಯಾಗಿ ಅಕ್ಕಿ (Ration) ವಿತರಣೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

    ಆದ್ಯತಾ ಪಡಿತರ ಚೀಟಿಗಳ (ಬಿಪಿಎಲ್‌) ಪ್ರತಿ ಫಲಾನುಭವಿಗಳಿಗೆ ಪ್ರತಿ ತಿಂಗಳು ತಲಾ 5 ಕೆಜಿ ಅಕ್ಕಿ ವಿತರಿಸಲಾಗುತ್ತಿತ್ತು. ಈಗ 1 ಕೆಜಿ ಹೆಚ್ಚುವರಿ ಸೇರಿದಂತೆ ಒಟ್ಟು 6 ಕೆಜಿ ಅಕ್ಕಿ ವಿತರಿಸಲಾಗುವುದು. ಜನವರಿ 1ರಿಂದಲೇ ಈ ಆದೇಶ ಜಾರಿಗೊಂಡಿದೆ ಎಂದು ಸರ್ಕಾರ ತಿಳಿಸಿದೆ. ಇದನ್ನೂ ಓದಿ: ಲಾರಿ ಟೈರ್‌ ಸ್ಫೋಟಿಸಿ ಚಾಲಕ ಸ್ಥಳದಲ್ಲೇ ಸಾವು

    ರಾಜ್ಯದಲ್ಲಿರುವ ಆದ್ಯತಾ ಪಡಿತರ ಚೀತಿಗಳ ಪ್ರತಿ ಫಲಾನುಭವಿಗಳಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸಲಾಗುತ್ತಿರುವ 5 ಕೆಜಿ ಆಹಾರ ಧಾನ್ಯದೊಂದಿಗೆ ಹೆಚ್ಚುವರಿಯಾಗಿ ಪ್ರತಿ ತಿಂಗಳು 1 ಕೆಜಿ ಅಕ್ಕಿಯನ್ನು ವಿತರಿಸಲು ಸರ್ಕಾರ ಆದೇಶಿಸಿದೆ.

    ಚುನಾವಣೆ ಸಮೀಪದಲ್ಲಿರುವ ಹೊತ್ತಿನಲ್ಲೇ ಸರ್ಕಾರ ಈ ಆದೇಶ ಹೊರಡಿಸಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು‌ ಸಮಾವೇಶವೊಂದರಲ್ಲಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಪಡಿತರದಾರರಿಗೆ 10 ಕೆಜಿ ಅಕ್ಕಿ ವಿತರಿಸಲಾಗುವುದು ಎಂದು ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಸರ್ಕಾರ ಸದ್ಯ ನೀಡುತ್ತಿರುವ ಪಡಿತರ ಜೊತೆಗೆ 1 ಕೆಜಿ ಹೆಚ್ಚುವರಿ ಅಕ್ಕಿ ನೀಡುವುದಾಗಿ ತಿಳಿಸಿದೆ. ಇದನ್ನೂ ಓದಿ: ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ವೃದ್ಧೆಯನ್ನು ಹೆಗಲ ಮೇಲೆ ಹೊತ್ತು ತಂದ ವ್ಯಕ್ತಿ!

    Live Tv
    [brid partner=56869869 player=32851 video=960834 autoplay=true]

  • ಕಬ್ಬಿನ ಉಪ ಉತ್ಪನ್ನ ಲಾಭಾಂಶ ರೈತರಿಗೆ; ಪ್ರತಿ ಮೆಟ್ರಿಕ್ ಟನ್‌ಗೆ 50 ರೂ. ಹೆಚ್ಚುವರಿ ಪಾವತಿ – ಸರ್ಕಾರ ಆದೇಶ

    ಕಬ್ಬಿನ ಉಪ ಉತ್ಪನ್ನ ಲಾಭಾಂಶ ರೈತರಿಗೆ; ಪ್ರತಿ ಮೆಟ್ರಿಕ್ ಟನ್‌ಗೆ 50 ರೂ. ಹೆಚ್ಚುವರಿ ಪಾವತಿ – ಸರ್ಕಾರ ಆದೇಶ

    ಬೆಂಗಳೂರು: ಕಬ್ಬಿನ ಉಪ ಉತ್ಪನ್ನವಾದ (Cane Byproducts) ಎಥೆನಾಲ್‌ ಲಾಭಾಂಶವನ್ನು ರೈತರಿಗೆ ನೀಡುವ ಸಂಬಂಧ ಸರ್ಕಾರ ಈಚೆಗೆ ನಿರ್ಧಾರ ಕೈಗೊಂಡಿತ್ತು. ಅದರಂತೆ ಇಂದು ಆದೇಶ ಹೊರಡಿಸಿದ್ದು, ಪ್ರತಿ ಮೆಟ್ರಿಕ್ ಟನ್‌ಗೆ 50 ರೂ. ಹೆಚ್ಚುವರಿಯಾಗಿ ಪಾವತಿಸುವ ಸಂಬಂಧ ಸರ್ಕಾರ (Karnataka Government) ತಿಳಿಸಿದೆ.

    ಕಬ್ಬಿನ ಉಪ ಉತ್ಪನ್ನಗಳ ಲಾಭಾಂಶ ಬೇಕು ಎಂದು ಆಗ್ರಹಿಸಿ ರೈತರು ಹೋರಾಟ ನಡೆಸುತ್ತಿದ್ದರು. ಸಕ್ಕರೆ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ (Shankar Patil Munenakoppa) ಅವರು ಡಿ.5ರಂದು ನಡೆದ ಕಬ್ಬು ನಿಯಂತ್ರಣ ಮಂಡಳಿಯ ಸಭೆಯಲ್ಲಿ ಪ್ರತಿ ಮೆಟ್ರಿಕ್ ಟನ್‌ಗೆ 50 ರೂ. ಹೆಚ್ಚುವರಿಯಾಗಿ ಪಾವತಿಸುವ ಘೋಷಣೆ ಮಾಡಿದ್ದು, ಅದೇ ಪ್ರಕಾರವಾಗಿ ಆದೇಶ ಹೊರಡಿಸಲಾಗಿದೆ. ಇದನ್ನೂ ಓದಿ: ಸೈನಿಕರ ಕಲ್ಯಾಣ, ಸೇನೆಯ ಸಬಲೀಕರಣಕ್ಕೆ ಸರ್ಕಾರ ಬದ್ಧ: ಗೆಹ್ಲೋಟ್

    ಕರ್ನಾಟಕ ಕಬ್ಬು ಅಧಿನಿಯಮ 2013 ಹಾಗೂ ತಿದ್ದುಪಡಿ ಅಧಿನಿಯಮ, 2014ರ ಕಲಂ 4(ಎ)ರಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಎಥನಾಲ್‌ ಉತ್ಪಾದಿಸುವ ರಾಜ್ಯದ ಸಕ್ಕರೆ ಕಾರ್ಖಾನೆಗಳು ಕಬ್ಬು ಸರಬರಾಜು ಮಾಡಿದ ರೈತರಿಗೆ ಮೊದಲ ಕಂತಿನಲ್ಲಿ ಕೇಂದ್ರ ಸರ್ಕಾರವು 2022-23ನೇ ಸಾಲಿಗೆ ನಿಗದಿಪಡಿಸಿರುವ ನ್ಯಾಯಯುತ ಮತ್ತು ಲಾಭದಾಯಕ ಬೆಲೆಯ ಜೊತೆಗೆ ಪ್ರತಿ ಮೆಟ್ರಿಕ್‌ ಟನ್‌ವೊಂದಕ್ಕೆ 50 ರೂ. ಹೆಚ್ಚುವರಿಯಾಗಿ ಪಾವತಿಸಲು ಅಧಿಸೂಚನೆಯಲ್ಲಿ ಆದೇಶಿಸಿದೆ.

    2022-23ನೇ ಸಾಲಿನಲ್ಲಿ ಕಬ್ಬು ನುರಿಸುವ ಹಂಗಾಮು ಮುಗಿದ ನಂತರ ವಾಸ್ತವಿಕವಾಗಿ ಸಕ್ಕರೆ, ಎಥೆನಾಲ್‌ ಮತ್ತು ಇತರೆ ಉಪ ಉತ್ಪನ್ನಗಳ ಮಾರಾಟದಿಂದ ಬರುವ ಅಂತಿಮ ಆದಾಯವನ್ನು ಹಂಚಿಕೆ ಸೂತ್ರದ ಪ್ರಕಾರ ಪರಿಗಣಿಸಿ ಅಂತಿಮ ಕಬ್ಬಿನ ದರ ನಿರ್ಧರಿಸಲಾಗುವುದು. ಇದನ್ನೂ ಓದಿ: ‘ಸಿದ್ರಮುಲ್ಲಾ ಖಾನ್’ ಎಂದು ಕರೆದರೆ ಖುಷಿ ಪಡುವೆ: ಸಿದ್ದರಾಮಯ್ಯ

    Live Tv
    [brid partner=56869869 player=32851 video=960834 autoplay=true]

  • ಆನೆ ಹಾವಳಿ ತಪ್ಪಿಸಲು ಟಾಸ್ಕ್ ಫೋರ್ಸ್ ರಚನೆ – ಅತಿ ಹೆಚ್ಚು ಆನೆ ಹೊಂದಿರುವ ಜಿಲ್ಲೆಯನ್ನೇ ಕೈಬಿಟ್ಟ ಸರ್ಕಾರ

    ಆನೆ ಹಾವಳಿ ತಪ್ಪಿಸಲು ಟಾಸ್ಕ್ ಫೋರ್ಸ್ ರಚನೆ – ಅತಿ ಹೆಚ್ಚು ಆನೆ ಹೊಂದಿರುವ ಜಿಲ್ಲೆಯನ್ನೇ ಕೈಬಿಟ್ಟ ಸರ್ಕಾರ

    ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಾನವ ವನ್ಯಜೀವಿ ಸಂಘರ್ಷ ಹೆಚ್ಚಾಗುತ್ತಿದೆ. ಅದರಲ್ಲೂ ಆನೆ ಹಾವಳಿ ಕೂಡ ಹೆಚ್ಚಾಗಿದೆ. ಇದನ್ನ ಪರಿಹರಿಸಲು ಸರ್ಕಾರ ಅಧಿಕಾರಿಗಳ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಿದೆ.‌ ಆದರೆ ಅತಿ ಹೆಚ್ಚು ಆನೆಗಳಿರುವ ಚಾಮರಾಜನಗರ (Chamarajanagar) ಜಿಲ್ಲೆಯನ್ನೇ ಟಾಸ್ಕ್ ಫೋರ್ಸ್‌ನಿಂದ ಕೈಬಿಟ್ಟಿದೆ.

    ಚಾಮರಾಜನಗರ ಶೇ.50% ರಷ್ಟು ಅರಣ್ಯದಿಂದಲೇ ಕೂಡಿರುವ ಜಿಲ್ಲೆ.‌ ಅದರಲ್ಲೂ ಸುಮಾರು 2 ಸಾವಿರಕ್ಕೂ ಹೆಚ್ಚು ಆನೆಗಳು ಜಿಲ್ಲೆ ಕಾಡಿನಲ್ಲಿ ವಾಸಿಸುತ್ತಿವೆ. ಇದರಿಂದಾಗಿ ಜಿಲ್ಲೆಯಲ್ಲಿ‌ ನಿರಂತರವಾಗಿ ವನ್ಯಜೀವಿ ಮಾನವ ಸಂಘರ್ಷ ಉಂಟಾಗುತ್ತಿದೆ. ಅದರಲ್ಲೂ ಆನೆಗಳ ಹಾವಳಿಯಿಂದ ಅನೇಕರು ಜೀವ ಕಳೆದುಕೊಂಡಿದ್ದಾರೆ. ಇದೇ ರೀತಿಯ ಸಮಸ್ಯೆ ಬೇರೆ ಜಿಲ್ಲೆಗಳಲ್ಲೂ ಇದೆ. ಇದನ್ನ ಮನಗಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು, ಪರಿಹಾರ ಮಾಡುವ ನಿಟ್ಟಿನಲ್ಲಿ ವಿಶೇಷ ಕಾರ್ಯಪಡೆಯನ್ನ ರಚನೆ ಮಾಡಿದ್ದಾರೆ. ಇದನ್ನೂ ಓದಿ: ಸಿದ್ದು ಪ್ರವಾಸದ ಬಳಿಕ ಕೋಲಾರ ಕ್ಷೇತ್ರದಲ್ಲಿ ಚುರುಕಾದ ಬಿಜೆಪಿ

    ಕಾರ್ಯಪಡೆಯಲ್ಲಿ ಮೈಸೂರು, ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆ ಒಳಗೊಂಡಿದೆ. ಆದರೆ ಸರ್ಕಾರ ಈ ಟಾಸ್ಕ್ ಫೋರ್ಸ್‌ನಲ್ಲಿ ಚಾಮರಾಜನಗರ ಜಿಲ್ಲೆಯನ್ನೇ ಕೈಬಿಟ್ಟಿದೆ. ಇದರಿಂದ ಜಿಲ್ಲೆಯ ಶಾಸಕರು ಈ ಬಗ್ಗೆ ಅಸಮಾಧಾನ ಹೊರಹಾಕುತ್ತಿದ್ದಾರೆ. ಪ್ರಮುಖವಾಗಿ ಚಾಮರಾಜನಗರ ಜಿಲ್ಲೆಯ ಹನೂರು ಮಹದೇಶ್ವರ ಬೆಟ್ಟದ ಭಾಗದಲ್ಲಿ ಸಾಕಷ್ಟು ಆನೆ ಹಾವಳಿ ಇದೆ. ಆನೆ ಹಾವಳಿಯಿಂದ ಜೀವ ಹಾನಿ, ಜಮೀನಿನಲ್ಲಿ ಬೆಳೆಯಾನಿಯಂತಹ ಪ್ರಕರಣಗಳು ನಿರಂತರವಾಗಿ ವರದಿಯಾಗುತ್ತಿವೆ. ‌ಹಾನಿ ಸಮಸ್ಯೆ ಇರುವ ಕಾರಣ ರೇಡಿಯೋ ಕಾಲರ್‌ಗಳನ್ನು ಮಹದೇಶ್ವರ ಬೆಟ್ಟ ಭಾಗದಲ್ಲಿ ಆನೆಗಳಿಗೆ ಹಾಕಲಾಗಿದೆ.‌ ಇಷ್ಟೊಂದು ಸಮಸ್ಯೆ ಇದ್ದರೂ ಸರ್ಕಾರ ಜಿಲ್ಲೆಯನ್ನ ಟಾಸ್ಕ್ ಫೋರ್ಸ್‌ನಿಂದ ಕೈಬಿಟ್ಟಿರುವುದಕ್ಕೆ ಶಾಸಕರು ಅಸಮಾಧಾನ ಹೊರಹಾಕಿದ್ದಾರೆ.

    ಅಷ್ಟೇ ಅಲ್ಲದೇ ಟಾಸ್ಕ್‌ ಫೋರ್ಸ್‌ನಲ್ಲಿರುವ ಅಧಿಕಾರಿಗಳ ಬಗ್ಗೆಯು ವನ್ಯಜೀವಿ ತಜ್ಞರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಸದ್ಯ ಎಂಟು ಜನರ ಕಾರ್ಯಪಡೆಯಲ್ಲಿರುವ ಅಧಿಕಾರಿಗಳಿಗೆ ಆನೆ-ಮಾನವ ಸಂಘರ್ಷ ತಡೆಗಟ್ಟಬೇಕಾದ ಅನುಭವವೇ ಇಲ್ಲವಂತೆ. ಇಲ್ಲಿರುವ ಅರ್ಧಕ್ಕಿಂತ ಹೆಚ್ಚು ಅಧಿಕಾರಿಗಳು ಸಾಮಾಜಿಕ ಅರಣ್ಯದಲ್ಲಿ ಕೆಲಸ ಮಾಡಿರುವ ಅನುಭವ ಇದೆ. ಆದರೆ ಸಂಘರ್ಷ ತಡೆಗಟ್ಟಲು ಏನು ಮಾಡಬೇಕು ಎಂಬ ಅನುಭವ ಇಲ್ಲ. ಟಾಸ್ಕ್ ಫೋರ್ಸ್‌ ಮಾಡಿರುವುದು ಒಳ್ಳೆಯ ನಿರ್ಧಾರ‌. ಆದರೆ ಅದನ್ನ ಸರಿಯಾಗಿ ಮಾಡಿದರೆ ಒಳ್ಳೆಯದಾಗುತ್ತೆ ಅನ್ನೋ ಅಭಿಪ್ರಾಯ ಕೇಳಿಬರುತ್ತಿದೆ. ಇದನ್ನೂ ಓದಿ: ಒಕ್ಕಲಿಗ ಸಮುದಾಯಕ್ಕಿರುವ 4% ಮೀಸಲಾತಿಯನ್ನು 12% ಅಥವಾ 15%ಕ್ಕೆ ಏರಿಸಿ – ಸರ್ಕಾರಕ್ಕೆ ಡೆಡ್‌ಲೈನ್

    ಸರ್ಕಾರ ಜನರ ಒಳಿತಿಗೆ ಒಂದೊಂದೇ ಯೋಜನೆ ರೂಪಿಸುತ್ತಿದೆ. ಒಂದು ಕಡೆ ಸಮಸ್ಯೆ ಎದುರಿಸುತ್ತಿರುವವರಿಗೆ ಪರಿಹಾರ ಸಿಗುತ್ತಿಲ್ಲ ಎನ್ನುವ ಕೂಗಿದೆ. ಯೋಜನೆಯನ್ನೇ ಸರಿಯಾಗಿ ಕಾರ್ಯರೂಪಕ್ಕೆ ತರುತ್ತಿಲ್ಲ ಅನ್ನೋದು ಇಂತಹ ತಪ್ಪುಗಳಿಂದಲೇ ಸಾಬೀತಾಗುತ್ತಿದೆ. ಸರ್ಕಾರ ಈಗಲಾದರೂ ಎಚ್ಚೆತ್ತುಕೊಂಡು ಟಾಸ್ಕ್ ಫೋರ್ಸ್‌ನಲ್ಲಿ ಚಾಮರಾಜನಗರಕ್ಕೂ ಸ್ಥಾನ ಕಲ್ಪಿಸಲಿ ಎಂದು ಶಾಸಕರು ಒತ್ತಾಯಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಜನರ ಮುಂದೆ ಏಕೆ ರಾಜಕೀಯವಾಗಿ ಬೆತ್ತಲಾಗ್ತೀರಿ – ಕಾಂಗ್ರೆಸ್‌ಗೆ ಸುಧಾಕರ್ ತಿರುಗೇಟು

    ಜನರ ಮುಂದೆ ಏಕೆ ರಾಜಕೀಯವಾಗಿ ಬೆತ್ತಲಾಗ್ತೀರಿ – ಕಾಂಗ್ರೆಸ್‌ಗೆ ಸುಧಾಕರ್ ತಿರುಗೇಟು

    ಚಿಕ್ಕಬಳ್ಳಾಪುರ: ಕ್ಷುಲ್ಲಕ ಕಾರಣಳಿಗಾಗಿ ಜನರ ಮುಂದೆ ಹೋಗಿ ಏಕೆ ರಾಜಕೀಯವಾಗಿ (Politics) ಬೆತ್ತಲಾಗುತ್ತೀರಿ? ಸರ್ಕಾರ (Government) ಯಾವುದನ್ನೂ ಮುಚ್ಚಿಡುವ ಪ್ರಶ್ನೆಯೇ ಇಲ್ಲ. ಬಿಜೆಪಿ (BJP) ಇತಿಹಾಸದಲ್ಲೇ ರಾಜಕೀಯ ಹುನ್ನಾರ ಮಾಡಿಲ್ಲ ಎಂದು ಸಚಿವ ಸುಧಾಕರ್ (K Sudhakar) ಕಾಂಗ್ರೆಸ್‌ಗೆ ತಿರುಗೇಟು ನೀಡಿದ್ದಾರೆ.

    ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮತದಾರರ ಗುರುತಿನ ಚೀಟಿಯಲ್ಲಿ ಬಿಜೆಪಿ (BJP) ಅವ್ಯವಹಾರ ನಡೆಸಿದೆ ಎಂಬ ಕಾಂಗ್ರೆಸ್ (Congress) ಆರೋಪಕ್ಕೆ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಸಿಎಂ, ಕಮಿಷನರ್ ಅನುಮತಿ ಇಲ್ಲದೆ ಮಾಡಲು ಆಗುತ್ತಾ?- ನ್ಯಾಯಾಂಗ ತನಿಖೆಗೆ ಸಿದ್ದರಾಮಯ್ಯ ಆಗ್ರಹ

    ಕಾಂಗ್ರೆಸ್ ನವರಿಗೆ ಚುನಾವಣೆ (Election) ಹತ್ತಿರ ಆಗ್ತಿದಂತೆ ಸುಳ್ಳು ಅಪಾದನೆ ಮಾಡೋದು ಕರಗತ ಮಾಡಿಕೊಂಡಿದ್ದಾರೆ. 130 ಕೋಟಿ ಖರ್ಚು ಮಾಡಿ ಜಾತಿ ಸಮೀಕ್ಷೆ (Caste Survey) ನಡೆಸಿದ್ರಲ್ಲಾ, ಆಗ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಎಲ್ಲ ಮಾಹಿತಿ ಹಂಚಿಕೆ ಮಾಡಲಿಲ್ವಾ? ಆದರೂ ಏಕೆ ಅಧಿಕೃತವಾಗಿ ಜಾತಿ ಸಮೀಕ್ಷೆ ರಿಪೋರ್ಟ್ ಹೊರಗೆ ತರಲಿಲ್ಲ. ಇದರ ಹೊಣೆಗಾರಿಕೆ ಕಾಂಗ್ರೆಸ್‌ನವರು ಹೊರ್ತಾರಾ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಕುಡಿದು ತೂರಾಡುತ್ತಾ ಮಧ್ಯದ ಬೆರಳು ತೋರಿಸಿದ ನಟಿ ಆಶಿಕಾ: ವಿಡಿಯೋ ಇದೆ

    ಸರ್ಕಾರದ ಖಜಾನೆಯಿಂದ 130 ಕೋಟಿ ಖರ್ಚು ಮಾಡಿ ಕಾಂತರಾಜು ಅಧ್ಯಕ್ಷತೆಯಲ್ಲಿ ಜಾತಿ ಸಮೀಕ್ಷೆ ಮಾಡಿಸಿದ್ರು. ಅದನ್ನ ಅಧಿಕೃತವಾಗಿ ಸ್ವೀಕಾರ ಮಾಡಲಿಲ್ಲ. ಬೇಕಾದ ಕಾಂಗ್ರೆಸ್ ಕ್ಯಾಂಡಿಡೇಟ್ ಗಳಿಗೆ ಮಾಹಿತಿ ಸೋರಿಕೆ ಮಾಡಿದ್ರು. ಇನ್ನೂ ಚುನಾವಣಾ ಆಯೋಗ ಮತದಾರರ ಸಮೀಕ್ಷಗೆ ಕೊಡೋದು ಸ್ಥಳೀಯವಾಗಿ ನಡೆದುಕೊಂಡು ಬಂದಿದೆ. ಒಂದು ವೇಳೆ ಎನ್‌ಜಿಒಗಳು ಕಾನೂನು ಮೀರಿ ನಡೆದುಕೊಂಡ್ರೆ ಆ ಸಂಸ್ಥೆ ಮೇಲೆ ಕಾನೂನು ಕ್ರಮ ಆಗುತ್ತದೆ. ಇದನ್ನ ಸರಳವಾಗಿ ಸ್ಪಷ್ಟವಾಗಿ ಸಿಎಂ ಹೇಳಿದ್ದಾರೆ. ಸಿಎಂ ಯಾಕೆ ರಾಜೀನಾಮೆ ಕೊಡಬೇಕು? ಸಿಎಂ ಹೇಳಿದ್ರಾ ಎನ್‌ಜಿಒಗೆ (NGO) ಕೊಡೋಕೆ? ಹಾಗಿದ್ರೆ ವಿರೋಧ ಪಕ್ಷದವರು ಎಷ್ಟು ಸಲ ರಾಜೀನಾಮೆ ಕೊಡಬೇಕಿತ್ತು. ಜಾತಿ ಸಮೀಕ್ಷೆ ಸೋರಿಕೆ ಮಾಡಿರೋದು ಬಹುದೊಡ್ಡ ಅಪರಾಧ. ಯಾವುದಾದರೂ ತಾರ್ಕಿಕ ವಿಷಯದ ಮೂಲಕ ಚರ್ಚೆಗೆ ಬನ್ನಿ ಸವಾಲ್ ಹಾಕಿದ್ದಾರೆ.

    Live Tv
    [brid partner=56869869 player=32851 video=960834 autoplay=true]