ಬೆಂಗಳೂರು: ಬಂದ್‌ಗೆ ಮುಂದಾಗಿದ್ದ ಸಾರಿಗೆ ಸಂಘಟನೆಗಳಿಗೆ ಶಾಕ್ ಎದುರಾಗಿದೆ. ಪ್ರತಿಭಟನೆ ನಿಷೇಧಿಸಿ ಕಾರ್ಮಿಕ ಇಲಾಖೆ ಎಸ್ಮಾ (ESMA) ಜಾರಿ ಮಾಡಿದೆ.
ಮುಷ್ಕರ ನಡೆಸದಂತೆ ನೌಕರರಿಗೆ ತಾಕೀತು ಮಾಡಲಾಗಿದೆ. ಆ.5 ರಂದು ಬಸ್ ನಿಲ್ಲಿಸಿ ಪ್ರತಿಭಟಿಸಲು ಸಾರಿಗೆ ಸಂಘಟನೆಗಳು ಮುಂದಾಗಿದ್ದವು. ಜನಸಾಮಾನ್ಯರಿಗೆ ಸಾರಿಗೆ ಸೇವೆ ಓದಗಿಸೋದು ಅಗತ್ಯ ಸೇವೆ. ಈ ಹಿನ್ನೆಲೆ ಕರ್ನಾಟಕ ಅಗತ್ಯ ಸೇವಾ ನಿರ್ವಹಣಾ ಕಾಯಿದೆ 2013 ರಡಿ ಎಸ್ಮಾ ಜಾರಿ ಮಾಡಲಾಗಿದೆ. ಇದನ್ನೂ ಓದಿ: ಚಾಮುಂಡಿ ಬೆಟ್ಟಕ್ಕೆ ಬಂದು ದೇವಿ ದರ್ಶನ ಪಡೆದ ಸಿಎಂ ಪತ್ನಿ, ಸೊಸೆ
ಇಂದಿನಿಂದ 6 ತಿಂಗಳು ನೌಕರರು ಯಾವುದೇ ಮುಷ್ಕರದಲ್ಲಿ ಭಾಗಿಯಾಗದಂತೆ ಎಸ್ಮಾ ಜಾರಿಗೊಳಿಸಲಾಗಿದೆ. ಜು.1 ರಿಂದ ಡಿ.31 ರ ವರೆಗೆ ನಿಗಮದಲ್ಲಿ ಮುಷ್ಕರ ನಿರ್ಬಂಧಿಸಿ ಕೆಎಸ್‌ಆರ್‌ಟಿಸಿ ಕಾರ್ಮಿಕ ಇಲಾಖೆ ಅಧಿಸೂಚನೆ ಹೊರಡಿಸಲಾಗಿದೆ.
ಬೆಂಗಳೂರು: ಮಲ್ಟಿಪ್ಲೆಕ್ಸ್ (Multiplex) ಸೇರಿದಂತೆ ಎಲ್ಲ ಚಿತ್ರಮಂದಿರಗಳಲ್ಲಿ ಏಕರೂಪ ದರ ಜಾರಿ ಸಂಬಂಧ ರಾಜ್ಯ ಸರ್ಕಾರ ಕರಡು ಅಧಿಸೂಚನೆ ಹೊರಡಿಸಿದೆ. ಅಧಿಸೂಚನೆ ಪ್ರಕಟವಾದ 15 ದಿನಗಳ ಒಳಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿದೆ.
ಕರ್ನಾಟಕ ಸಿನೆಮಾಸ್ (ನಿಯಂತ್ರಣ) ನಿಯಮಗಳನ್ನು ತಿದ್ದುಪಡಿ ಮಾಡಲು, ಕಾಯ್ದೆ 1964, 1964 (ಕರ್ನಾಟಕ ಕಾಯ್ದೆ 23) ಅಧಿಕೃತ ಗೆಜೆಟ್‌ನಲ್ಲಿ ಪ್ರಕಟವಾದ ದಿನಾಂಕದಿಂದ 15 ದಿನಗಳ ನಂತರ ಈ ಕರಡನ್ನು ಗಣನೆಗೆ ತೆಗೆದುಕೊಳ್ಳಲಾಗುವುದು ಸರ್ಕಾರ ತಿಳಿಸಿದೆ.
ಮೇಲೆ ನಿರ್ದಿಷ್ಟಪಡಿಸಿದ ಅವಧಿ ಮುಗಿಯುವ ಮೊದಲು ಈ ಕರಡಿಗೆ ಸಂಬಂಧಿಸಿದಂತೆ ಯಾವುದೇ ಆಕ್ಷೇಪಣೆ ಮತ್ತು ಸಲಹೆಯನ್ನು ರಾಜ್ಯ ಸರ್ಕಾರವು ಪರಿಗಣಿಸುತ್ತದೆ. ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ತಿಳಿಸಬಹುದು. ಇದನ್ನೂ ಓದಿ: ಮಂತ್ರಾಲಯದಲ್ಲಿ ರಾಯರ ದರ್ಶನ ಪಡೆದ ಸಚಿವ ರಾಮಲಿಂಗಾರೆಡ್ಡಿ
-ಶೂ ಮೇಲೆ `ಬೂಟ್ ಪೇ’ ಎಂದು ಬರೆದು `ಕ್ಯೂಆರ್ ಸ್ಕ್ಯಾನ್ʼ ಪೋಸ್ಟರ್ ಅಂಟಿಸಿ ಬಿಜೆಪಿ ಟಕ್ಕರ್
ಬೆಂಗಳೂರು: ಶಾಲಾ ಮಕ್ಕಳ ಶೂ-ಸಾಕ್ಸ್‌ಗಾಗಿ ದಾನಿಗಳ ಮೊರೆಹೋದ ರಾಜ್ಯ ಸರ್ಕಾರದ (State Govt) ವಿರುದ್ಧ ಬಿಜೆಪಿ (BJP) ಹೊಸ ಕ್ಯಾಂಪೇನ್ ಆರಂಭಿಸಿದೆ.
ಜಗತ್ತಿನಲ್ಲಿ ಸೂರ್ಯ-ಚಂದ್ರರಿರುವುದು ಎಷ್ಟು ಸತ್ಯವೋ ಕರ್ನಾಟಕದಲ್ಲಿ @INCKarnataka ಸರ್ಕಾರ ದಿವಾಳಿಯಾಗಿರುವುದು ಸಹ ಅಷ್ಟೇ ಸತ್ಯ!! ಲಾಟರಿ ಸಿಎಂ @siddaramaiah ಅವರು ಮೇಜು ಕುಟ್ಟಿ ತಮ್ಮ ಸರ್ಕಾರ ದಿವಾಳಿಯಾಗಿಲ್ಲ ಎಂದು ಬಡಾಯಿ ಕೊಚ್ಚಿಕೊಂಡರೂ, ಸರ್ಕಾರದ ಆರ್ಥಿಕ ಸ್ಥಿತಿಗತಿಗಳ ಬಗ್ಗೆ ಮಾತ್ರ ಶ್ವೇತ ಪತ್ರ ಹೊರಡಿಸಲು ಮಾತ್ರ ಅವರು… pic.twitter.com/qiaGxkqAiL
ಸಂಪೂರ್ಣ ದಿವಾಳಿಯಾಗಿರುವ ಕಾಂಗ್ರೆಸ್ ಸರ್ಕಾರದಲ್ಲಿ ಶಾಲಾ ಮಕ್ಕಳಿಗೆ ಶೂ ನೀಡಲು ಸಹ ಹಣವಿಲ್ಲ. ಹೀಗಾಗಿ ಶಾಲಾ ಮಕ್ಕಳಿಗೆ ಶೂ ದಾನ ಮಾಡಲು ಬೂಟ್ ಪೇ ಸ್ಕ್ಯಾನ್ ಮಾಡಿ ಅಂತ ಟ್ವೀಟ್‌ನಲ್ಲಿ ಸರ್ಕಾರಕ್ಕೆ ಬಿಜೆಪಿ ಮುಖಭಂಗ ಮಾಡಿದೆ.
ಸಂಪೂರ್ಣ ದಿವಾಳಿಯಾಗಿರುವ @INCKarnataka ಸರ್ಕಾರದಲ್ಲಿ ಶಾಲಾ ಮಕ್ಕಳಿಗೆ ಶೂ ನೀಡಲು ಸಹ ಹಣವಿಲ್ಲ!!
ಮಕ್ಕಳ ಶೂ-ಸಾಕ್ಸ್ ಖರೀದಿಗೆ ಬಿಡುಗಡೆಯಾಗಿದ್ದ 111.88 ಕೋಟಿ ರೂ. ಅನುದಾನ ಯಾವ ರಾಜ್ಯದ ಕಾಂಗ್ರೆಸ್ ಚುನಾವಣಾ ಫಂಡ್‌ಗೆ ಬಳಕೆ ಆಯ್ತಾ? ಹಣ ಬಿಡುಗಡೆಯಾದರೂ ದಾನಿಗಳನ್ನು ಹುಡುಕುತ್ತಿದ್ದರೆ ಅನುದಾನ ಯಾರ ಜೇಬು ಸೇರಿರಬಹುದು? ಅಂತ ಬಿಜೆಪಿ ಪ್ರಶ್ನಿಸಿದೆ.ಇದನ್ನೂ ಓದಿ: 15 ಏಷ್ಯನ್ ರಾಷ್ಟ್ರಗಳ ಎದುರು ವಿಜಯಪುರದ ಇತಿಹಾಸ ಅನಾವರಣಗೊಳಿಸಿದ ಡಿಸಿ
– ಜನವಿರೋಧಿ ರಾಜ್ಯ ಸರ್ಕಾರಕ್ಕೆ ಮುಖಭಂಗ, ಸಾಮಾನ್ಯ ಜನತೆಗೆ ಸಂದ ಜಯ: ಸಂಸದ ತೇಜಸ್ವಿ ಸೂರ್ಯ
ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಜನೌಷಧಿ ಕೇಂದ್ರಗಳನ್ನು (Jan Aushadhi Center) ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ (High Court) ತಾತ್ಕಾಲಿಕ ತಡೆ ನೀಡಿದೆ. ಸಂಸದ ತೇಜಸ್ವಿ ಸೂರ್ಯ ಅವರ ಕಚೇರಿ & ಇತರರು ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿರುವ ಕೋರ್ಟ್, ಮುಂದಿನ ವಿಚಾರಣೆವರೆಗೂ ಕೇಂದ್ರಗಳನ್ನು ಸ್ಥಗಿತಗೊಳಿಸದಂತೆ ಮಧ್ಯಂತರ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು, ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧಿ ಕೇಂದ್ರಗಳನ್ನು ಮುಚ್ಚಲು ಆದೇಶ ಹೊರಡಿಸಿತ್ತು. ಈ ನಿರ್ಧಾರವು ರಾಜ್ಯಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ವಿಶೇಷವಾಗಿ ಬಡವರು ಮತ್ತು ಮಧ್ಯಮ ವರ್ಗದವರಿಗೆ ಕಡಿಮೆ ಬೆಲೆಯಲ್ಲಿ ಗುಣಮಟ್ಟದ ಔಷಧಿಗಳನ್ನು ಒದಗಿಸುತ್ತಿದ್ದ ಈ ಕೇಂದ್ರಗಳು ಸ್ಥಗಿತಗೊಂಡರೆ, ಜನಸಾಮಾನ್ಯರಿಗೆ ತೀವ್ರ ತೊಂದರೆಯಾಗಲಿದೆ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಮಾರಾಟ ಸರಿಯಲ್ಲ – ಜನೌಷಧಿ ಕೇಂದ್ರಗಳ ಸ್ಥಗಿತದ ಹಿಂದೆ ರಾಜಕೀಯ ಉದ್ದೇಶವಿಲ್ಲ – ಗುಂಡೂರಾವ್
ಸರ್ಕಾರದ ಆದೇಶವನ್ನು ಪ್ರಶ್ನಿಸಿ, ಸಂಸದ ತೇಜಸ್ವಿ ಸೂರ್ಯ ಮತ್ತು ಹಲವು ಜನೌಷಧಿ ಕೇಂದ್ರಗಳ ಮಾಲೀಕರು ನ್ಯಾಯಾಲಯದ ಮೊರೆ ಹೋಗಿದ್ದರು. ಈ ತಡೆಯಾಜ್ಞೆಯಿಂದಾಗಿ ಸಾರ್ವಜನಿಕರಿಗೆ ಕಡಿಮೆ ದರದಲ್ಲಿ ಔಷಧಿಗಳು ಲಭ್ಯವಾಗುವ ಸೌಲಭ್ಯ ಮುಂದುವರೆಯಲಿದ್ದು, ಜನಸಾಮಾನ್ಯರಿಗೆ ತಾತ್ಕಾಲಿಕವಾಗಿ ನಿರಾಳವಾಗಿದೆ.
ನ್ಯಾಯಾಲಯದ ಕ್ರಮವನ್ನು ಸ್ವಾಗತಿಸಿರುವ ಸಂಸದ ತೇಜಸ್ವಿ ಸೂರ್ಯ, ಕೇಂದ್ರ ಸರ್ಕಾರದ ಜನಪರ ಕಾರ್ಯಗಳನ್ನು ವಿರೋಧಿಸುವ ಏಕೈಕ ಉದ್ದೇಶದಿಂದ ರಾಜ್ಯದ ಸಾರ್ವಜನಿಕರಿಗೆ ಸಂಕಷ್ಟ ನೀಗಿಸುವುದಕ್ಕಾಗಿ ಕೇಂದ್ರ ಸರ್ಕಾರದ ವಿರುದ್ಧ ವ್ಯತಿರಿಕ್ತ ಅಭಿಪ್ರಾಯ ರೂಪಿಸುವ ಕಾರಣದಿಂದ ಕಾಂಗ್ರೆಸ್ ಸರ್ಕಾರ ಜನೌಷಧಿ ಕೇಂದ್ರಗಳನ್ನು ಮುಚ್ಚುವ ನಿರ್ಧಾರಕ್ಕೆ ಬಂದಿದ್ದು, ಅದರ ಜನವಿರೋಧಿ ನೀತಿಯನ್ನು ವ್ಯಕ್ತಪಡಿಸುತ್ತದೆ. ನ್ಯಾಯಾಲಯದ ಕ್ರಮವು ರಾಜ್ಯ ಸರ್ಕಾರಕ್ಕೆ ದೊಡ್ಡ ಮುಖಭಂಗವಾಗಿದ್ದು, ಜನವಿರೋಧಿ ಕ್ರಮಗಳಿಗೆ ತಡೆ ನೀಡುವ ವಿಕೃತ ಮನೋಭಾವಕ್ಕೆ ಚಾಟಿ ಏಟು ಕೊಟ್ಟಂತಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಜನೌಷಧಿ ಕೇಂದ್ರಗಳ ಪುನರಾರಂಭಕ್ಕೆ ಸಂಸದ ಕಾರಜೋಳ ಆಗ್ರಹ
ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಪರಿಯೋಜನೆ (PMBJP) ಅಡಿಯಲ್ಲಿ ಜನೌಷಧಿ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಕಡಿಮೆ ಬೆಲೆಯಲ್ಲಿ ಗುಣಮಟ್ಟದ ಜೆನೆರಿಕ್ ಔಷಧಿಗಳನ್ನು ಒದಗಿಸುವ ಗುರಿ ಹೊಂದಿದೆ. ಕರ್ನಾಟಕದಲ್ಲಿ ನೂರಾರು ಜನೌಷಧಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಸಾವಿರಾರು ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಅನುಕೂಲ ಕಲ್ಪಿಸಿವೆ.
– ಕನ್ನಡದಲ್ಲಿ ಬರುವ ಅರ್ಜಿ, ಪತ್ರಗಳಿಗೆ ಕನ್ನಡದಲ್ಲೇ ಉತ್ತರಿಸಿ.. ನಾಮಫಲಕ ಕನ್ನಡದಲ್ಲೇ ಪ್ರದರ್ಶಿಸಿ ಎಂದು ಸೂಚನೆ
ಬೆಂಗಳೂರು: ಸರ್ಕಾರದ ಎಲ್ಲಾ ಇಲಾಖೆಗಳು ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿ ಕಡ್ಡಾಯವಾಗಿ ಕನ್ನಡ (Kannada) ಬಳಸಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮಹತ್ವದ ಆದೇಶ ಹೊರಡಿಸಿದ್ದಾರೆ.
ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆಯಾಗಿ ಇರಬೇಕೆಂದು ಕರ್ನಾಟಕ ರಾಜ್ಯ ಭಾಷಾ ಅಧಿನಿಯಮ 1963ರಲ್ಲಿ ತಿಳಿಸಲಾಗಿದೆ. ಕನ್ನಡದಲ್ಲಿ ಬರುವ ಅರ್ಜಿ ಮತ್ತು ಪತ್ರಗಳಿಗೆ ಕಡ್ಡಾಯವಾಗಿ ಕನ್ನಡದಲ್ಲಿಯೇ ಉತ್ತರಿಸಬೇಕು. ಸರ್ಕಾರಿ ಕಚೇರಿಗಳ ನಾಮಫಲಕಗಳನ್ನು ಕನ್ನಡದಲ್ಲಿಯೇ ಪ್ರದರ್ಶಿಸಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ವಾರಕ್ಕೆ 3 ದಿನ ಕಾವೇರಿ ಆರತಿ – 10,000 ಆಸನಗಳ ವ್ಯವಸ್ಥೆ, 70% ಉಚಿತ, 30% ಟಿಕೆಟ್: ಡಿಕೆಶಿ
ವಿಧಾನ ಮಂಡಲದ ಕಾರ್ಯಕಲಾಪಗಳು, ಪತ್ರ ವ್ಯವಹಾರ, ಗಮನಸೆಳೆಯುವ ಸೂಚನೆ ಇತ್ಯಾದಿಗಳು ಕಡ್ಡಾಯವಾಗಿ ಕನ್ನಡದಲ್ಲಿಯೇ ಸಲ್ಲಿಸಬೇಕು. ನೇಮಕಾತಿ, ವರ್ಗಾವಣೆ ಮತ್ತು ರಜೆ ಮಂಜೂರಾತಿ ಇತರ ಎಲ್ಲಾ ಸರ್ಕಾರದ ಆದೇಶಗಳನ್ನು ಕನ್ನಡದಲ್ಲಿ ಹೊರಡಿಸಲು ಸ್ಪಷ್ಟ ಸೂಚನೆ ನೀಡಿದ್ದಾರೆ.
ಕಚೇರಿಗಳಿಗೆ ಒದಗಿಸಿರುವ ಆಂಗ್ಲ ಭಾಷಾ ನಮೂನೆ, ದಾಖಲೆ ಪುಸ್ತಕ ಮುಂತಾದವುಗಳನ್ನು ಕನ್ನಡದಲ್ಲಿ ಭರ್ತಿ ಮಾಡಬೇಕು. ಆಂತರಿಕ ಪತ್ರ ವ್ಯವಹಾರ, ಕಡತದ ಟಿಪ್ಪಣಿ ಕನ್ನಡದಲ್ಲಿಯೇ ಇರಬೇಕು. ಸಭಾ ಸೂಚನೆ, ಕಾರ್ಯಸೂಚಿ, ಸಂಕ್ಷಿಪ್ತ ಟಿಪ್ಪಣಿ ಹಾಗೂ ನಡಾವಳಿಗಳನ್ನು ಕನ್ನಡದಲ್ಲಿ ತಯಾರಿಸಿರಬೇಕು. ಈ ಮೂಲಕ ಸರ್ಕಾರದ ಭಾಷಾ ನೀತಿಯನ್ನು ಯಶಸ್ವಿಯಾಗಿ ಕಾರ್ಯರೂಪಕ್ಕೆ ತರಬೇಕು ಎಂದು ನಿರ್ದೇಶನ ನೀಡಿದ್ದಾರೆ. ಇದನ್ನೂ ಓದಿ: ಬಹಿರಂಗ ಹೇಳಿಕೆ ನೀಡುವ ಶಾಸಕರೇ ಹುಷಾರ್! ಕಾಂಗ್ರೆಸ್ ಹೈಕಮಾಂಡ್ ವಾರ್ನಿಂಗ್ ಕಾಲ್?
ಕೇಂದ್ರ ಸರ್ಕಾರ, ಹೊರ ರಾಜ್ಯಗಳು ಮತ್ತು ನ್ಯಾಯಾಲಯಗಳ ಪತ್ರ ವ್ಯವಹಾರಗಳನ್ನು ಹೊರತುಪಡಿಸಿ, ಉಳಿದೆಲ್ಲಾ ಪತ್ರ ವ್ಯವಹಾರಗಳು ಕಡ್ಡಾಯವಾಗಿ ಕನ್ನಡದಲ್ಲಿಯೇ ಇರುವಂತೆ ತಾಕೀತು ಮಾಡಿದ್ದಾರೆ.
ಸರ್ಕಾರಿ ಪತ್ರ ವ್ಯವಹಾರಗಳಲ್ಲಿ ಕಡತದ ಟಿಪ್ಪಣಿಗಳು ಕನ್ನಡದಲ್ಲಿಲ್ಲದ ಬಗ್ಗೆ ಗಮನಿಸಿದ್ದ ಸಿಎಂ ಗರಂ ಆಗಿದ್ದರು. ಕಡತದಲ್ಲಿನ ಟಿಪ್ಪಣಿ ಮತ್ತು ಪತ್ರ ವ್ಯವಹಾರಗಳು ಕನ್ನಡದಲ್ಲಿ ಬಾರದಿದ್ದ ಪಕ್ಷದಲ್ಲಿ ಅಂತಹ ಕಡತಗಳನ್ನು ಹಿಂದಿರುಗಿಸಿ ಸೂಕ್ತ ಸಮಜಾಯಿಷಿ ಪಡೆಯಲು ಸಿಎಂ ನಿರ್ದೇಶನ ಕೊಟ್ಟಿದ್ದರು. ಸರ್ಕಾರ/ನಿಗಮ/ಮಂಡಳಿ/ಸ್ಥಳೀಯ ಸಂಸ್ಥೆಗಳ/ವಿಶ್ವವಿದ್ಯಾಲಯಗಳ/ ಅನುದಾನಿತ ಸಂಘ-ಸಂಸ್ಥೆಗಳ ಎಲ್ಲಾ ಅಧಿಕಾರಿ/ನೌಕರರು ಕಟ್ಟುನಿಟ್ಟಾಗಿ ಕನ್ನಡ ಬಳಕೆ ಜಾರಿಗೊಳಿಸಬೇಕು ಸೂಚನೆ ನೀಡಿದ್ದರು. ಹೀಗಾಗಿ, ಈ ಸೂಚನೆಗಳನ್ನು ಉಲ್ಲಂಘಿಸಿದವರ ವಿರುದ್ಧ ವೈಯಕ್ತಿಕವಾಗಿ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸರ್ಕಾರದಿಂದ ಎಚ್ಚರಿಕೆ ನೀಡಲಾಗಿದೆ.
– ಕೇಂದ್ರದಿಂದ ನಮಗೆ 11,495 ಕೋಟಿ ರೂ. ನಷ್ಟವಾಗಿದೆ; ಸಿಎಂ
ರಾಯಚೂರು: ಸಿಎಂ ಅನುದಾನ ಅಂತ ಬಜೆಟ್‌ನಲ್ಲಿ ಇಲ್ಲ, ನಾವು ಗ್ರ‍್ಯಾಂಟ್ ಕೊಡುವುದೆಲ್ಲಾ ವಿಶೇಷ ಅನುದಾನ ಅಂತಿರುತ್ತದೆ. ಅವರು ಹೇಳುತ್ತಾರೆ, ಶಾಸಕ ರಾಜು ಕಾಗೆಯನ್ನ (Raju Kage) ಕರೆದು ಮಾತನಾಡ್ತಿನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹೇಳಿದರು.
ಜಿಲ್ಲೆಯ ಯರಗೇರಾದಲ್ಲಿ ಸರ್ಕಾರದ ವಿರುದ್ಧ ಮತ್ತೊಬ್ಬ ಕಾಂಗ್ರೆಸ್ (Congress) ಶಾಸಕ ರಾಜು ಕಾಗೆ ಆಕ್ರೋಶ ವ್ಯಕ್ತಪಡಿಸಿರುವ ವಿಚಾರವಾಗಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅನುದಾನದ ವರ್ಕ್ ಆರ್ಡರ್ ಸಿಗುತ್ತಿಲ್ಲ ಎಂದು ಎರಡು ದಿನದಲ್ಲಿ ರಾಜೀನಾಮೆ ನೀಡಿದ್ದರೂ ಅಚ್ಚರಿಯಿಲ್ಲ ಎಂದಿದ್ದಾರೆ. ಅವರು ಹೇಳುತ್ತಾರೆ, ಅವರಿಗೇನು? ಸಿಎಂ ಅನುದಾನ ಅಂತಾ ಇದೀಯಾ? ರಾಜು ಕಾಗೆಯನ್ನು ಕರೆದು ಮಾತಾಡುತ್ತೇನೆ ಎಂದರು.ಇದನ್ನೂ ಓದಿ: ಭಾರತದ ವಾಯುಸೀಮೆಯನ್ನು ಅಮೆರಿಕ ಬಳಸಿ ಇರಾನ್ ಮೇಲೆ ದಾಳಿ ಮಾಡಿತ್ತಾ? – ಉತ್ತರ ನೀಡಿದ ಪಿಐಬಿ
ಇನ್ನೂ ವಸತಿ ಸಚಿವರ ರಾಜೀನಾಮೆಗೆ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಆಗ್ರಹ ವಿಚಾರಕ್ಕೆ ಪ್ರತಿಕ್ರಿಯಿಸಿ, ಅದು ನನಗೆ ಗೊತ್ತಿಲ್ಲ. ಯಾವ ಸನ್ನಿವೇಶದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಅದರ ಬಗ್ಗೆ ಮಾತನಾಡುತ್ತೇನೆ ಎಂದು ತಿಳಿಸಿದರು. ಇದೇ ವೇಳೆ ರಾಯಚೂರಿನಲ್ಲಿ ಆಯೋಜಿಸಿರುವ ಕಾರ್ಯಕ್ರಮಕ್ಕೆ ಬಿ.ಆರ್ ಪಾಟೀಲ್ (BR Patil) ಅವರನ್ನ ಸಿಎಂ ಕರೆದರೂ ಬಂದಿಲ್ಲ ಎನ್ನುವ ವಿಚಾರವಾಗಿ ಮಾತನಾಡಿದ ಅವರು, ನಾನು ಅವರನ್ನು ಇಲ್ಲಿಗೆ ಕರೆದಿದ್ದೆ, ಆದರೆ ಅವರು ಆಯೋಜಕರು ನನ್ನನ್ನು ಕರೆದಿಲ್ಲ ಬರಲ್ಲ ಎಂದರು. ಜೂ.25ಕ್ಕೆ ಭೇಟಿ ಮಾಡುತ್ತೇನೆ ಎಂದಿದ್ದಾರೆ ಎಂದು ಹೇಳಿದರು.
ಸಚಿವ ಹೆಚ್‌ಕೆ ಪಾಟೀಲ್ (HK Patil) ಪತ್ರ ಬರೆದ ವಿಚಾರವಾಗಿ ಮಾತನಾಡಿದ ಅವರು, ಅದು ನಮ್ಮ ಕಾಲದಲ್ಲಿ ನಡೆದಿಲ್ಲ. ವಿಶೇಷ ಕೋರ್ಟ್ ಮಾಡಿ ತ್ವರಿತಗತಿಯಲ್ಲಿ ಇತ್ಯರ್ಥ ಮಾಡಿ ಎಂದಿದ್ದಾರೆ. ಅಕ್ರಮ ಗಣಿಗಾರಿಗೆ ನಡೆಯುತ್ತಿರುವುದಕ್ಕಾಗಿ ಪಾದಯಾತ್ರೆ ಮಾಡಿದ್ದಾರೆ. ಲೋಕಾಯುಕ್ತ ಸಂತೋಷ ಹೆಗಡೆ ವರದಿ ಆಧರಿಸಿ ನಾನು ಅಸೆಂಬ್ಲಿ ಅಲ್ಲಿ ಪ್ರಸ್ತಾಪಿಸಿದ್ದೆ. ಆದರೆ ಅಂದಿನ ಸರ್ಕಾರದಿಂದ ಸರಿಯಾದ ಉತ್ತರ ಬರಲಿಲ್ಲ. ಹೀಗಾಗಿ ನಡೆದುಕೊಂಡೇ ಬರುತ್ತೇನೆ ಅಂತ ಬಳ್ಳಾರಿಗೆ ಪಾದಯಾತ್ರೆ ಮಾಡಿದ್ದೆವು ಎಂದರು.
ದೆಹಲಿಗೆ ತೆರಳಿ ರಾಷ್ಟ್ರಪತಿ ಹಾಗೂ ಪ್ರಧಾನಿಯನ್ನ ಭೇಟಿ ಮಾಡಬೇಕು ಅಂದುಕೊಂಡಿದ್ದೀನಿ. 16ನೇ ಹಣಕಾಸಿನ ಸಂಬಂಧ ಬಿಲ್‌ಗಳು ಬಾಕಿಯಿವೆ. ಅವುಗಳ ಬಗ್ಗೆ ಮಾತನಾಡಲು ನಾಳೆ ರಾಷ್ಟ್ರಪತಿ ಸಮಯ ಕೊಟ್ಟಿದ್ದಾರೆ ಎಂದು ತಿಳಿಸಿದರು.
ರಾಜ್ಯಕ್ಕೆ ಪ್ರಹ್ಲಾದ್ ಜೋಶಿ (Prahlad Joshi) ಏನೆಲ್ಲಾ ಮಾಡಿದ್ದಾರಂತೆ? ಅವರನ್ನು ಪವರ್ ಫುಲ್ ಅಂತಾರೆ, ಪ್ರಧಾನಿಗೆ ಬಹಳ ಹತ್ತಿರವಿದ್ದಾರೆ. 15ನೇ ಹಣಕಾಸಿನಲ್ಲಿ 5,435 ಕೋಟಿ ರೂ. ವಿಶೇಷ ಅನುದಾನ ಶಿಫಾರಸು ಮಾಡಿದ್ದರು. ಶಿಫಾರಸು ಮಾಡಿ ಆಮೇಲೆ ಏನು ಮಾಡಿದರು? ಕರ್ನಾಟಕದ ಬಗ್ಗೆ ಮಾತನಾಡಲು ಅವರಿಗೆ ಯಾವ ನೈತಿಕ ಹಕ್ಕಿದೆ? ಬಿಜೆಪಿಯ ಒಬ್ಬ ಸಂಸದನಾದರೂ ಮಾತನಾಡಿದ್ದಾರಾ? 11,495 ಕೋಟಿ ರೂ. ನಮಗೆ ನಷ್ಟವಾಗಿದೆ. 14 ರಿಂದ 15ನೇ ಹಣಕಾಸು ಯೋಜನೆಗೆ ಲೆಕ್ಕ ಹಾಕಿದರೆ, ರಾಜ್ಯಕ್ಕೆ 89 ಸಾವಿರ ಕೋಟಿ ರೂ. ನಷ್ಟವಾಗಿದೆ ಎಂದು ಜೋಶಿ ವಿರುದ್ಧ ಕಿಡಿಕಾರಿದರು.ಇದನ್ನೂ ಓದಿ: ಸರ್ದಾರ್ ಜಿ 3 ಸಿನಿಮಾ ವಿರುದ್ಧ ಭುಗಿಲೆದ್ದ ಆಕ್ರೋಶ
ಬೆಂಗಳೂರು: ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ ಸರ್ಕಾರದಿಂದ ಆದ ಹತ್ಯಾಕಾಂಡ. ಇದಕ್ಕೆ ಸರ್ಕಾರವೇ ಹೊಣೆ. ಸಿಎಂ, ಡಿಸಿಎಂ, ಗೃಹ ಸಚಿವರು ರಾಜೀನಾಮೆ ಕೊಡಬೇಕು ಎಂದು ಜೆಡಿಎಸ್ MLC ಶರವಣ (T.A.Sharavana) ಆಗ್ರಹಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಆಡಳಿತ ಕುಸಿದಿದೆ. ಅರಾಜಕತೆ ತಾಂಡವ ಆಡ್ತಿದೆ. ಯಾವ ರೀತಿ ಆಡಳಿತ ನಡೆಯುತ್ತಿದೆ ಅಂತ ಚಿನ್ನಸ್ವಾಮಿ ಘಟನೆಯಿಂದ ಗೊತ್ತಾಗಿದೆ. 11 ಜನರ ಸಾವಾಗಿದೆ. ಅಷ್ಟು ಬೇಗ ಯಾಕೆ ಕಾರ್ಯಕ್ರಮ ಮಾಡಬೇಕಿತ್ತು. ಭಾರತ ಚಾಂಪಿಯನ್ಸ್ ಟ್ರೋಫಿ ಗೆದ್ದಾಗಲೂ ಸಮಯ ತಗೊಂಡು ಕಾರ್ಯಕ್ರಮ ಮಾಡಿದ್ರು. ಸಿಎಂ, ಡಿಸಿಎಂ, ಗೃಹ ಸಚಿವರು ಇದಕ್ಕೆ ಹೊಣೆ. ಡಿಸಿಎಂ ಡಿಕೆ ಶಿವಕುಮಾರ್ ಜನರಿಗೆ ಆಹ್ವಾನ ಮಾಡಿದ್ರು. ಯಾಕೆ ಆಹ್ವಾನ ಕೊಟ್ರಿ. ವಿಧಾನಸೌಧದಲ್ಲಿ ಕಾರ್ಯಕ್ರಮ ಬೇಡ ಅಂತ ಪೊಲೀಸರು ಪತ್ರ ಬರೆದಿದ್ದರು. ಯಾಕೆ ಕಾರ್ಯಕ್ರಮ ಮಾಡಿದ್ರಿ. ಜನಕ್ಕೆ ಬನ್ನಿ ಅಂದ್ರಿ, ಕಪ್‌ಗೆ ಮುತ್ತು ಕೊಟ್ಟವರು ಡಿಕೆಶಿ. ಪರಮೇಶ್ವರ್ ಅನುಭವ ಇರೋ ಮಂತ್ರಿ. ನಿಮಗೂ ಮಾಹಿತಿ ಇಲ್ಲ ಅಂತೀರಾ. ಹಾಗಾದ್ರೆ ನೀವು ಈ ಜಾಗದಲ್ಲಿ ಇರೋದಕ್ಕೆ ಏನು ನೈತಿಕತೆ ಇದೆ. ಸಿಎಂ ವೈಫಲ್ಯ ಅಂತ ಒಪ್ಪಿದ್ದಾರೆ. ಅವರು ಕೂಡ ರಾಜೀನಾಮೆ ಕೊಡಬೇಕು ಎಂದರು. ಇದನ್ನೂ ಓದಿ: ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ; ತನಿಖಾ ಆಯೋಗದ ಮುಂದೆ ಮಾಹಿತಿ ಕೊಡ್ತೀವಿ – ಪರಮೇಶ್ವರ್
ಡಿಸಿಎಂ ಅವರು ಜನರು ಸತ್ತಿದ್ದಾರೆ ಅಂತ ಗೊತ್ತಿದ್ದರೂ ಸೆಲೆಬ್ರೇಷನ್‌ನಲ್ಲಿ ಭಾಗಿಯಾಗಿದ್ರು. ಹತ್ಯಾಕಾಂಡ ಈ ರಾಜ್ಯದಲ್ಲಿ ನಡೆದಿದೆ. ಇದಕ್ಕೆ ಸರ್ಕಾರ ಹೊಣೆ. 25 ಲಕ್ಷ ಕೊಟ್ಟರೂ ಸತ್ತವರು ವಾಪಸ್ ಬರೊಲ್ಲ. ಇದನ್ನ ಪ್ರಶ್ನೆ ಮಾಡಿದ್ರೆ ಕುಂಭಮೇಳದ ಬಗ್ಗೆ ಮಾತಾಡ್ತಾರೆ ಕಾಂಗ್ರೆಸ್‌ನವರು. ನಮ್ಮ ರಾಜ್ಯದಲ್ಲಿ ಇಂತಹ ದುರಾಡಳಿತ ನಡೆಯುತ್ತಿದೆ. ಕರ್ನಾಟಕದ ಇತಿಹಾಸದಲ್ಲಿ ಇದು ಮರೆಯಲಾಗದ ಘಟನೆ. ಕಾಂಗ್ರೆಸ್ ಹೈಕಮಾಂಡ್ ಇದರ ಬಗ್ಗೆ ಮಾತಾಡಬೇಕು. ರಾಹುಲ್ ಗಾಂಧಿ ಈ ಬಗ್ಗೆ ಮಾತಾಡಬೇಕು. ರಾಜ್ಯದಲ್ಲಿ ಸರ್ಕಾರದ ವ್ಯವಸ್ಥೆ ಸರಿಯಾಗಿ ನಡೆಯುತ್ತಿಲ್ಲ. ಸಿಎಂ ಹಿಡಿತದಲ್ಲಿ ಆಡಳಿತ ವ್ಯವಸ್ಥೆ ಇಲ್ಲ. ಎರಡು ಬಾರಿ ಸಿಎಂ ಆದವರಿಂದ ಆಡಳಿತ ನಿಯಂತ್ರಣ ತಪ್ಪಿದೆ. ನಿಮಗೆ ಕಾರ್ಯಕ್ರಮದ ಬಗ್ಗೆ ಮಾಹಿತಿ ಇಲ್ಲ ಅಂದರೆ ಈ ಸ್ಥಾನದಲ್ಲಿ ಇರಲು ಸಾಧ್ಯವಿಲ್ಲ. ರಾಜ್ಯದಲ್ಲಿ ತುಘಲಕ್ ಸರ್ಕಾರ ನಡೆಯುತ್ತಿದೆ. ಸಿಎಂ, ಡಿಸಿಎಂ, ಗೃಹ ಸಚಿವರಿಗೆ ಆಡಳಿತ ಮಾಡಲು ಆಗದೇ ಹೋದ್ರೆ ರಾಜೀನಾಮೆ ಕೊಟ್ಟು ಹೋಗಬೇಕು ಎಂದು ಕಿಡಿಕಾರಿದರು.
ಸರ್ಕಾರ ಅನುಮತಿ ಕೊಟ್ಟಿಲ್ಲ ಅಂದರೆ ಡಿಸಿಎಂ ಡಿಕೆ ಶಿವಕುಮಾರ್ ಯಾಕೆ ಹೋದ್ರು. ಕಪ್‌ಗೆ ಮುತ್ತು ಕೊಟ್ರು. ಮಕ್ಕಳು, ಮೊಮ್ಮಕ್ಕಳನ್ನ ಯಾಕೆ ಕರೆದುಕೊಂಡು ಹೋಗಿದ್ರಿ. ಇದು ವಿಜಯೋತ್ಸವ ಅಲ್ಲ. ಮರಣೋತ್ಸವ ಆಗಿದೆ. ನಾವೆಲ್ಲರು ತಲೆ ತಗ್ಗಿಸೋ ಕೆಲಸ ಆಗಿದೆ. ಸತ್ತವರ ಕುಟುಂಬ ನೋವು ಗೊತ್ತಿದೆಯಾ? ಕುನ್ಹಾ ನೇತೃತ್ವದ ತನಿಖೆ ಆಗ್ತಿದೆ, ಆಗಲಿ. ಪ್ರಾಮಾಣಿಕ ಅಧಿಕಾರಿಗಳನ್ನ ಅಮಾನತು ಮಾಡಿದ್ದೀರಾ? ಯಾಕೆ ಅಮಾನತು ಮಾಡಿದ್ರಿ? ತೆಲಂಗಾಣದಲ್ಲಿ ಅಲ್ಲು ಅರ್ಜುನ್‌ರನ್ನ ಬಂಧನ ಮಾಡ್ತಾರೆ. ನಮ್ಮಲ್ಲಿ ಯಾಕೆ ಇದು ಆಗಲಿಲ್ಲ. ನಿಮಗೆ ಶಿಕ್ಷೆ ಇಲ್ಲವಾ? ಸಿದ್ದರಾಮಯ್ಯ ಅವರು ನನಗೇನು ಗೊತ್ತಿಲ್ಲ ಅಂತ ಮುಂದುವರಿಸಿಕೊಂಡು ಹೋಗ್ತಿದ್ದಾರೆ. ಈ ಸರ್ಕಾರ ಈ ರಾಜ್ಯವನ್ನು ಬಿಟ್ಟು ಹೋಗಬೇಕು. ಸಿಎಂ, ಡಿಸಿಎಂ, ಗೃಹ ಸಚಿವರು ರಾಜೀನಾಮೆ ಕೊಡಬೇಕು. ಜನರು ಇದನ್ನೇ ಬಯಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದು ನೀಚ ಸರ್ಕಾರ. ನೀವು ಮಾಡಿದ ತಪ್ಪಿಗೆ ಬಲಿಯಾಗಬೇಕು. ಕಾಂಗ್ರೆಸ್ ಹೈಕಮಾಂಡ್ ಯಾರನ್ನ ಬಲಿ ಕೊಡುತ್ತದೆಯೋ ನೋಡೋಣ ಎಂದರು. ಇದನ್ನೂ ಓದಿ: ನೀವು ರಾಜ್ಯದ ಮುಖ್ಯಮಂತ್ರಿಗಳೋ or ವಿಧಾನಸೌಧ ಮೆಟ್ಟಿಲುಗಳ ಮುಖ್ಯಮಂತ್ರಿಗಳೋ: ಸಿದ್ದರಾಮಯ್ಯಗೆ ಹೆಚ್‌ಡಿಕೆ ಟಾಂಗ್
ಬೆಂಗಳೂರು: ದಿನೇ ದಿನೇ ಕೊರೊನಾ ಪಾಸಿಟಿವ್ (Covid Positive) ದರ ದುಪ್ಪಟ್ಟು ಏರಿಕೆಯಾಗುತ್ತಿದ್ದು, ಇದೀಗ ಗಾಂಧಿನಗರದ (Gandhi Nagar) ಒಬ್ಬರಲ್ಲಿ ಕೊರೊನಾ (Corona) ಕಾಣಿಸಿಕೊಂಡಿದೆ.
ಗಾಂಧಿನಗರದ 46 ವರ್ಷದ ವ್ಯಕ್ತಿಯಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲದಿದ್ದರೂ ಕೋವಿಡ್ ಕಾಣಿಸಿಕೊಂಡಿದ್ದು, ಹೇಗೆ ಬಂತು ಎನ್ನುವುದನ್ನು ಪತ್ತೆ ಹಚ್ಚುತ್ತಿದ್ದಾರೆ. ಸದ್ಯ ಹೋಂ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ – ಕಾರಿನ ಮೇಲೆ ಬಿತ್ತು ಬೃಹತ್ ಮರ, ನಾಲ್ವರು ಪಾರು
ರಾಜ್ಯದಲ್ಲಿ ಇದೀಗ ಕೊರೊನಾ ಟೆಸ್ಟಿಂಗ್ ಆರಂಭಿಸಲಾಗಿದ್ದು, ದಿನಗಳೆದಂತೆ ಪಾಸಿಟಿವ್ ದರ ಜಾಸ್ತಿಯಾಗುತ್ತಲಿದೆ. ಸೋಮವಾರ 191 ಜನರಿಗೆ ಟೆಸ್ಟ್ ಮಾಡಲಾಗಿದ್ದು, 37 ಜನರಿಗೆ ಪಾಸಿಟಿವ್ ಆಗಿದೆ. ಜೊತೆಗೆ 171 ಜನರಿಗೆ RT-PCR ಟೆಸ್ಟ್ ಮಾಡಲಾಗಿದೆ.
ಮೇ 25ರಂದು ನಡೆಸಿದ ಕೋವಿಡ್ ಟೆಸ್ಟ್‌ನಲ್ಲಿ ಪಾಸಿಟಿವ್ ದರ 8.65% ಇತ್ತು. ಮೇ 26ರಂದು ನಡೆಸಿದ ಟೆಸ್ಟ್‌ನಲ್ಲಿ ಪಾಸಿಟಿವ್ ದರ 19.37%ಗೆ ಏರಿಕೆ ಆಗಿದೆ. ಇನ್ನೂ ಈ ಕುರಿತು ಸೋಮವಾರ ಸರ್ಕಾರ ನಡೆಸಿದ ಸಭೆಯಲ್ಲಿ ಯಾವುದೇ ರೀತಿಯ ಆತುರದ ನಿರ್ಧಾರ ಕೈಗೊಳ್ಳುವುದು ಬೇಡ ಎಂದಿದೆ. ಜೊತೆಗೆ ನಗರದ ಮಾಲ್‌ಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸುವ ಕುರಿತು ಇಂದು ತೀರ್ಮಾನಿಸುವ ಸಾಧ್ಯತೆಯಿದೆ.
ನವದೆಹಲಿ: ಬೆಂಗಳೂರು ಅರಮನೆ ಮೈದಾನದ (Palace Ground) 15 ಎಕ್ರೆ ಸ್ವಾಧೀನಕ್ಕೆ ಸಂಬಂಧಿಸಿದಂತೆ ಮೈಸೂರು ರಾಜಮನೆತನದ ಕಾನೂನುಬದ್ಧ ಉತ್ತರಾಧಿಕಾರಿಗಳಿಗೆ ವರ್ಗಾವಣೆ ಮಾಡಬಹುದಾದ ಅಭಿವೃದ್ಧಿ ಹಕ್ಕುಗಳ (TDR) ಪ್ರಮಾಣಪತ್ರಗಳನ್ನು ನೀಡುವಂತೆ ಸುಪ್ರೀಂ ಕೋರ್ಟ್ (Supreme Court) ನೀಡಿದ ಆದೇಶದ ವಿರುದ್ಧ ರಾಜ್ಯ ಸರ್ಕಾರ ಮರುಪರಿಶೀಲನಾ ಅರ್ಜಿ ಸಲ್ಲಿಸಿದೆ.
ಮರುಪರಿಶೀಲನಾ ಅರ್ಜಿ ವಿಚಾರಣೆ ನಡೆಸುವಂತೆ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಮತ್ತು ನ್ಯಾಯಮೂರ್ತಿ ಆಗಸ್ಟೀನ್ ಜಾರ್ಜ್ ಮಸಿಹ್ ಅವರನ್ನೊಳಗೊಂಡ ಪೀಠಕ್ಕೆ ಮನವಿ ಮಾಡಲಾಯಿತು. ಈ ವೇಳೆ ರಾಜ್ಯ ಸರ್ಕಾರದ ಪರವಾಗಿ ಹಾಜರಿದ್ದ ಹಿರಿಯ ವಕೀಲ ಕಪಿಲ್ ಸಿಬಲ್ ಅವರನ್ನು ಪ್ರಶ್ನಿಸಿದ ಪೀಠ, ಮತ್ತೊಂದು ಪೀಠವು ನೀಡಿದ ಆದೇಶವನ್ನು ನಾವು ಹೇಗೆ ಪರಿಶೀಲಿಸಬಹುದು ಎಂದು ಕೇಳಿದೆ. ಇದನ್ನೂ ಓದಿ: ಮಂಡ್ಯ | ಟ್ರಾಫಿಕ್ ಪೊಲೀಸರ ಯಡವಟ್ಟಿನಿಂದ ಪ್ರಾಣಬಿಟ್ಟ ಮಗು – ಮೂವರು ASI ಸಸ್ಪೆಂಡ್
ಇದಕ್ಕೆ ಉತ್ತರಿಸಿದ ಹಿರಿಯ ವಕೀಲ ಸಿಬಲ್, ಕರ್ನಾಟಕ ಪಟ್ಟಣ ಮತ್ತು ದೇಶ ಯೋಜನಾ ಕಾಯ್ದೆಗೆ 2004ರ ತಿದ್ದುಪಡಿಯ ಮೂಲಕ ಪರಿಚಯಿಸಲಾದ ಟಿಡಿಆರ್ ನಿಬಂಧನೆಯನ್ನು 1996ರಲ್ಲಿ ಬೆಂಗಳೂರು ಅರಮನೆ (ಸ್ವಾಧೀನ ಮತ್ತು ವರ್ಗಾವಣೆ) ಕಾಯ್ದೆಯಡಿ ಸ್ವಾಧೀನಪಡಿಸಿಕೊಂಡ ಭೂಮಿಗೆ ಪೂರ್ವಾನ್ವಯವಾಗಿ ಅನ್ವಯಿಸಲಾಗುವುದಿಲ್ಲ ಎಂದು ಹೇಳಿದರು.
ಟಿಡಿಆರ್ ನಿಬಂಧನೆ ಇರುವ ಮೊದಲೇ 15 ಎಕ್ರೆಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ ಮತ್ತು ಪರಿಹಾರವನ್ನು ಈಗಾಗಲೇ ಮೂಲ ಕಾಯ್ದೆಯಡಿಯಲ್ಲಿ ಇತ್ಯರ್ಥಪಡಿಸಲಾಗಿದೆ ಎಂದು ಅವರು ತಿಳಿಸಿದರು. ಇದನ್ನೂ ಓದಿ: ಮಹಾ ಮಳೆಗೆ ಮುಂಬೈ ಮೆಟ್ರೋ ಸ್ಟೇಷನ್ ಸಂಪೂರ್ಣ ಜಲಾವೃತ
ಈ ಸ್ವಾಧೀನವು 1996ರ ಕಾನೂನಿನ ಅಡಿಯಲ್ಲಿ ನಡೆದಿದ್ದು, 11 ಕೋಟಿ ರೂ.ಗಳ ಪರಿಹಾರವನ್ನು ನಿಗದಿಪಡಿಸಲಾಗಿದೆ. ಆ ಸಮಯದಲ್ಲಿ ಟಿಡಿಆರ್ ಪರಿಕಲ್ಪನೆ ಅಸ್ತಿತ್ವದಲ್ಲಿರಲಿಲ್ಲ. ಟಿಡಿಆರ್‌ಗೆ ಅವಕಾಶ ನೀಡುವ ಸೆಕ್ಷನ್ 14 ಬಿ ಅನ್ನು 2004ರಲ್ಲಿ ಮಾತ್ರ ಪರಿಚಯಿಸಲಾಯಿತು. ಭೂಮಾಲೀಕರು ಸ್ವಯಂಪ್ರೇರಣೆಯಿಂದ ತಮ್ಮ ಭೂಮಿಯನ್ನು ಬಿಟ್ಟುಕೊಡುವಲ್ಲಿ ಮಾತ್ರ ಅನ್ವಯಿಸುತ್ತದೆ. ರಾಜ್ಯವು ಅದನ್ನು ಕಡ್ಡಾಯವಾಗಿ ಸ್ವಾಧೀನಪಡಿಸಿಕೊಳ್ಳುವಲ್ಲಿ ಅಲ್ಲ ಎಂದು ಅವರು ಹೇಳಿದರು.
ಈ ವಿವಾದವು 1997ರ ಹಿಂದಿನದು. ರಾಜಮನೆತನವು 1996ರ ಕಾಯ್ದೆಯ ಸಿಂಧುತ್ವವನ್ನು ಉನ್ನತ ನ್ಯಾಯಾಲಯದಲ್ಲಿ ಪ್ರಶ್ನಿಸಿದಾಗ, ಅರ್ಜಿ ಇನ್ನೂ ಬಾಕಿ ಇದೆ ಎಂದ ಸಿಬಲ್, ನ್ಯಾಯಾಂಗ ನಿಂದನೆಯ ತೀರ್ಪಿನ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಸೆಕ್ಷನ್ 14 ಬಿ ಅಡಿಯಲ್ಲಿ ಅವರ ಕಾನೂನು ಆಕ್ಷೇಪಣೆಗಳನ್ನು ಪರಿಹರಿಸಲು ಪೀಠ ವಿಫಲವಾಗಿದೆ ಎಂದು ವಾದಿಸಿದರು. ಇದನ್ನೂ ಓದಿ: ಮುಂಬೈನಲ್ಲಿ 107 ವರ್ಷದ ದಾಖಲೆ ಮುರಿದ ಮಳೆ – 75 ವರ್ಷದಲ್ಲಿ ಮೊದಲ ಬಾರಿಗೆ ಅವಧಿ ಪೂರ್ವ ಮುಂಗಾರು
ಪ್ರಸ್ತುತ ಪೀಠವು ಸಮನ್ವಯ ಪೀಠವು ನೀಡಿದ ಆದೇಶದ ಮೇಲೆ ಮೇಲ್ಮನವಿ ಸಲ್ಲಿಸಬಹುದೇ ಎಂದು ಪ್ರಶ್ನಿಸಿತು. ರಾಜ್ಯ ಸರ್ಕಾರವು ಹಿಂದಿನ ಆದೇಶವನ್ನು ರದ್ದುಗೊಳಿಸಲು ಪ್ರಯತ್ನಿಸುತ್ತಿಲ್ಲ. ಆದರೆ ಅದನ್ನು ಖಚಿತಪಡಿಸಿಕೊಳ್ಳಲು ಮಾತ್ರ ಪ್ರಯತ್ನಿಸುತ್ತಿದೆ ಎಂದು ಸಿಬಲ್ ಸ್ಪಷ್ಟಪಡಿಸಿದರು. ಇದನ್ನೂ ಓದಿ: 6 ಗನ್‌ಮ್ಯಾನ್‌ಗಳೊಂದಿಗೆ ಪಾಕ್ ಬೀದಿಯಲ್ಲಿ ಜ್ಯೋತಿ ಸುತ್ತಾಟ- ಸ್ಫೋಟಕ ವಿಡಿಯೋ ಔಟ್
ಮೇ 22ರಂದು, ನ್ಯಾಯಮೂರ್ತಿಗಳಾದ ಎಂ.ಎಂ ಸುಂದರೇಶ್ ಮತ್ತು ಅರವಿಂದ್ ಕುಮಾರ್ ಅವರನ್ನೊಳಗೊಂಡ ಮತ್ತೊಂದು ಪೀಠವು ನ್ಯಾಯಾಂಗ ನಿಂದನೆ ವಿಚಾರಣೆಯಲ್ಲಿ ರಾಜಮನೆತನದ ಉತ್ತರಾಧಿಕಾರಿಗಳಿಗೆ 3,011 ಕೋಟಿ ರೂ. ಮೌಲ್ಯದ ಟಿಡಿಆರ್ ಪ್ರಮಾಣಪತ್ರಗಳನ್ನು ನೀಡುವಂತೆ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.
2025-26ನೇ ಸಾಲಿನಲ್ಲಿ ಪೂರ್ವ ನಿಗದಿಯಂತೆ ಶಾಲಾ ಶೈಕ್ಷಣಿಕ ಚಟುವಟಿಕೆಗಳನ್ನು ಪ್ರಾರಂಭಿಸಿ ನಿರ್ವಹಣೆ ಮಾಡಬೇಕಾಗಿದೆ. ಶಾಲಾ ಪ್ರಾರಂಭದ ದಿನವೇ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಖಾಯಂ ಶಿಕ್ಷಕರ ನೇಮಕವಾಗುವವರೆಗೆ ಅಥವಾ ಶೈಕ್ಷಣಿಕ ಅಂತ್ಯದ ವರೆಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಣಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.