Tag: Karnataka govt

  • ಬರ ಪರಿಹಾರ; ಕರ್ನಾಟಕ ಸರ್ಕಾರದಿಂದ ಸಲ್ಲಿಸಿದ್ದ ಅರ್ಜಿ ಇಂದು ಸುಪ್ರೀಂನಲ್ಲಿ ವಿಚಾರಣೆ

    ಬರ ಪರಿಹಾರ; ಕರ್ನಾಟಕ ಸರ್ಕಾರದಿಂದ ಸಲ್ಲಿಸಿದ್ದ ಅರ್ಜಿ ಇಂದು ಸುಪ್ರೀಂನಲ್ಲಿ ವಿಚಾರಣೆ

    ನವದೆಹಲಿ: ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ (NDRF) ಅಡಿಯಲ್ಲಿ ರಾಜ್ಯಕ್ಕೆ 18,171 ಕೋಟಿ ರೂ. ಬರ ಪರಿಹಾರ ಕೋರಿ ಕರ್ನಾಟಕ ಸರ್ಕಾರ ಅರ್ಜಿ ಸಲ್ಲಿಸಿದ್ದು, ಇಂದು (ಸೋಮವಾರ) ಸುಪ್ರೀಂ ಕೋರ್ಟ್‌ನಲ್ಲಿ (Supreme Court) ವಿಚಾರಣೆ ನಡೆಯಲಿದೆ. ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ನೇತೃತ್ವದ ಪೀಠವು ಅರ್ಜಿ ವಿಚಾರಣೆ ನಡೆಸಲಿದೆ. ಇದನ್ನೂ ಓದಿ: ಬರ ಪರಿಹಾರ; ಕೇಂದ್ರ V/S ಕರ್ನಾಟಕ ಸರ್ಕಾರ – ರಾಜ್ಯ ‘ಸುಪ್ರೀಂ’ ಮೆಟ್ಟಿಲೇರಿದ್ಯಾಕೆ?

    ಬರದ ಪ್ರಮಾಣ ಎಷ್ಟಿದೆ?
    ರಾಜ್ಯವು ಕೇಂದ್ರ ಸರ್ಕಾರಕ್ಕೆ (Karnataka govt) ಸಲ್ಲಿಸಿದ ವರದಿ ಪ್ರಕಾರ, 236 ತಾಲೂಕುಗಳ ಪೈಕಿ 223 ತಾಲೂಕುಗಳು ಬರಪೀಡಿತ ಎಂದು ಘೋಷಿಸಲಾಗಿದೆ. ಬರ ಪರಿಣಾಮದಿಂದಾಗಿ 48 ಲಕ್ಷ ಹೆಕ್ಟೇರ್ ಭೂಮಿಯಲ್ಲಿ ಬೆಳೆ (ಕೃಷಿ ಹಾಗೂ ತೋಟಗಾರಿಕಾ ಬೆಳೆ) ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. 2023ರ ಅಕ್ಟೋಬರ್‌ನಲ್ಲಿ ನಷ್ಟ ಪರಿಶೀಲಿಸಲು ಅಂತರ-ಸಚಿವಾಲಯದ ಕೇಂದ್ರ ತಂಡ (ಐಎಂಸಿಟಿ) ಸಹ ರಾಜ್ಯಕ್ಕೆ ಭೇಟಿ ನೀಡಿತ್ತು. ಕಳೆದ ವರ್ಷ ಮುಂಗಾರು ಹಂಗಾಮಿನಲ್ಲಿ (ಜೂನ್) ಮಳೆಯ ಕೊರತೆ ಶೇ.56 ರಷ್ಟಿತ್ತು. ಅಂದರೆ 122 ವರ್ಷಗಳ ಬಳಿಕ ಈ ಪ್ರಮಾಣದ ಕೊರತೆ ಎದುರಾಗಿದೆ. ಜೊತೆಗೆ ಆಗಸ್ಟ್ ತಿಂಗಳಲ್ಲಿ ಶೇ.73 ಮಳೆ ಕೊರತೆ ಉಂಟಾಗಿದೆ.

    ಅಷ್ಟೇ ಅಲ್ಲ ಕಳೆದ ವರ್ಷದ ಮಾನ್ಸೂನ್ ಸಮಯದಲ್ಲಿಯೂ ಕರ್ನಾಟಕದಲ್ಲಿ ಸಾಮಾನ್ಯಕ್ಕಿಂತ 18% ಕಡಿಮೆ ಮಳೆಯಾಗಿದೆ. 2015ರ ಬಳಿಕ ಈ ಪ್ರಮಾಣದಲ್ಲಿ ಕಡಿಮೆ ಮಳೆ ಬಿದ್ದಿದೆ. ಮುಂಗಾರು ನಂತರದ ಅವಧಿಯು ಸಹ ರಾಜ್ಯಕ್ಕೆ ಹೆಚ್ಚಿನ ಮಳೆಯನ್ನು ತರಲಿಲ್ಲ ಎಂದು ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಇದನ್ನೂ ಓದಿ: ರಾಜ್ಯ ಸರ್ಕಾರ ಸುಳ್ಳು ಹೇಳ್ತಿದೆ, ಬರ ಪರಿಹಾರವನ್ನ ನ್ಯಾಯಾಲಯವೇ ತೀರ್ಮಾನಿಸಲಿ: ನಿರ್ಮಲಾ ಸೀತಾರಾಮನ್

    ಬರ ಪರಿಹಾರ ನೀಡುವಂತೆ ರಾಜ್ಯ ಸರ್ಕಾರದಿಂದ ಮೂರು ಬಾರಿ ಪತ್ರ ಬರೆದಿದ್ದರು, ಖುದ್ದು ಭೇಟಿ ಮಾಡಿ ಮನವಿ ಮಾಡಿದ್ದರೂ, ಕೇಂದ್ರ ಸರ್ಕಾರ ಪರಿಹಾರ ಬಿಡುಗೆ ಮಾಡುವ ಮನಸ್ಸು ಮಾಡಿಲ್ಲ. ಆದ್ದರಿಂದ ಪರಿಹಾರ ಬಿಡುಗಡೆಗೆ ಕಟ್ಟಿನಿಟ್ಟಿನ ಸೂಚನೆ ನೀಡುವಂತೆ ಕರ್ನಾಟಕ ಸರ್ಕಾರ ಅರ್ಜಿಯಲ್ಲಿ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದೆ. ಇದನ್ನೂ ಓದಿ: ಇವಿಎಂ ಜೊತೆಗೆ ವಿವಿಪ್ಯಾಟ್ ಮತ ಎಣಿಕೆಗೆ ಆಗ್ರಹ – ವಿಚಾರಣೆಗೆ ಒಪ್ಪಿದ ಸುಪ್ರೀಂ

  • ಬರ ಪರಿಹಾರ; ಕೇಂದ್ರ V/S ಕರ್ನಾಟಕ ಸರ್ಕಾರ – ರಾಜ್ಯ ‘ಸುಪ್ರೀಂ’ ಮೆಟ್ಟಿಲೇರಿದ್ಯಾಕೆ?

    ಬರ ಪರಿಹಾರ; ಕೇಂದ್ರ V/S ಕರ್ನಾಟಕ ಸರ್ಕಾರ – ರಾಜ್ಯ ‘ಸುಪ್ರೀಂ’ ಮೆಟ್ಟಿಲೇರಿದ್ಯಾಕೆ?

    ಲೋಕಸಭಾ ಚುನಾವಣೆ ಹೊತ್ತಲ್ಲಿ ಕೇಂದ್ರದ ವಿರುದ್ಧ ರಾಜ್ಯ ಸರ್ಕಾರ ‘ಬರ ಪರಿಹಾರ’ ಅಸ್ತ್ರ ಪ್ರಯೋಗಿಸಿದೆ. ಮುಂಗಾರು ಕೊರತೆಯಿಂದಾಗಿ ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿದೆ. ನೀರಿಗೂ ಹಾಹಾಕಾರ ಶುರುವಾಗಿದೆ. ಡೋಲಾಯಮಾನ ಪರಿಸ್ಥಿತಿ ಬಗ್ಗೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವರಿಕೆ ಮಾಡಿತು. ಆದರೆ ಕೇಂದ್ರದಿಂದ ಸೂಕ್ತ ಸ್ಪಂದನೆ ಸಿಗಲಿಲ್ಲ ಎಂದು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕಾನೂನು ಹೋರಾಟಕ್ಕೆ ಮುಂದಾಗಿದೆ. ಬರ ಪರಿಹಾರಕ್ಕಾಗಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ (ರಿಟ್ ಅರ್ಜಿ) ಮೊರೆ ಹೋಗಿದೆ. ಈ ಬೆಳವಣಿಗೆ ರಾಜ್ಯದ ಆಡಳಿತ ಮತ್ತು ವಿಪಕ್ಷಗಳ ನಡುವಿನ ಜಟಾಪಟಿಗೆ ಕಾರಣವಾಗಿದೆ.

    ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ (ಎನ್‌ಡಿಆರ್‌ಎಫ್) ಅಡಿಯಲ್ಲಿ ರಾಜ್ಯಕ್ಕೆ 18,171 ಕೋಟಿ ರೂ. ಬರ ಪರಿಹಾರ ಬರಬೇಕಿದೆ. ಪರಿಹಾರವನ್ನು ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ನಿದೇರ್ಶನ ನೀಡಬೇಕು ಎಂದು ಕೋರಿ ಕರ್ನಾಟಕ ಸರ್ಕಾರವು ಸುಪ್ರೀಂ ಕೋರ್ಟ್ ಮೊರೆ ಹೋಗಿದೆ.

    ಕೇಂದ್ರಕ್ಕೆ ಕಾನೂನು ಸವಾಲು!
    ಬಿರು ಬೇಸಿಗೆಯಿಂದ ರಾಜ್ಯದಲ್ಲಿ ಒಣ ಹವೆ ಹೆಚ್ಚಾಗಿದೆ. ವಿವಿಧ ಜಿಲ್ಲೆಗಳು ಈಗಾಗಲೇ ನೀರಿನ ಕೊರತೆ ಎದುರಿಸುತ್ತಿವೆ. ಈ ಕುರಿತು ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ರಾಜ್ಯಕ್ಕೆ ಬೇರೆ ದಾರಿಯಿಲ್ಲ. ಎನ್‌ಡಿಆರ್‌ಎಫ್ ಅಡಿಯಲ್ಲಿ ಹಕ್ಕು ಪಡೆಯಲು ಸರ್ಕಾರ ಕಳೆದ 5 ತಿಂಗಳಿಂದ ಕಾಯುತ್ತಿದೆ ಎಂದು ತಿಳಿಸಿದ್ದಾರೆ. ಪರಿಹಾರಕ್ಕಾಗಿ ಕೇಂದ್ರಕ್ಕೆ ಕಾನೂನು ಸವಾಲು ಹಾಕಿರುವ ರಾಜ್ಯ ಸರ್ಕಾರವನ್ನು ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ತರಾಟೆಗೆ ತೆಗೆದುಕೊಂಡಿವೆ.

    ಆರ್ಥಿಕ ಕಾರಣಗಳಿಗಾಗಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದ ನಡುವೆ ಜಟಾಪಟಿ ನಡೆಯುತ್ತಿದೆ. ಕಳೆದ ತಿಂಗಳು ತೆರಿಗೆ ಮತ್ತು ಇತರೆ ಅನುದಾನ ಹಂಚಿಕೆಗಳಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿ ಕೇಂದ್ರದ ವಿರುದ್ಧ ಸಿಎಂ ಮತ್ತು ಅವರ ಸಚಿವ ಸಂಪುಟ ‘ದೆಹಲಿ ಚಲೋ’ ನಡೆಸಿತ್ತು.

    ಪ್ರಸ್ತುತ ಕರ್ನಾಟಕದಲ್ಲಿ ಬರ ಮತ್ತು ನೀರಿನ ಕೊರತೆ ಪ್ರಮಾಣ ಎಷ್ಟಿದೆ?
    ರಾಜ್ಯವು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ ವರದಿ ಪ್ರಕಾರ, 236 ರ ಪೈಕಿ 223 ತಾಲೂಕುಗಳು ಬರಪೀಡಿತ ಎಂದು ಘೋಷಿಸಲಾಗಿದೆ. ಬರ ಪರಿಣಾಮದಿಂದಾಗಿ 48 ಲಕ್ಷ ಹೆಕ್ಟೇರ್ ಭೂಮಿಯಲ್ಲಿ ಬೆಳೆ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. 2023 ರ ಅಕ್ಟೋಬರ್‌ನಲ್ಲಿ ನಷ್ಟ ಪರಿಶೀಲಿಸಲು ಅಂತರ-ಸಚಿವಾಲಯದ ಕೇಂದ್ರ ತಂಡ (ಐಎಂಸಿಟಿ) ಸಹ ರಾಜ್ಯಕ್ಕೆ ಭೇಟಿ ನೀಡಿತ್ತು. ಕಳೆದ ವರ್ಷ ಮುಂಗಾರು ಹಂಗಾಮಿನಲ್ಲಿ (ಜೂನ್) ಮಳೆಯ ಕೊರತೆ ಶೇ.56 ರಷ್ಟಿತ್ತು. ಅಂದರೆ 122 ವರ್ಷಗಳ ಬಳಿಕ ಈ ಪ್ರಮಾಣದ ಕೊರತೆ ಎದುರಾಗಿದೆ. ಜೊತೆಗೆ ಆಗಸ್ಟ್ ತಿಂಗಳಲ್ಲಿ ಶೇ.73 ಮಳೆ ಕೊರತೆ ಉಂಟಾಗಿದೆ.

    ಕಳೆದ ವರ್ಷದ ಮಾನ್ಸೂನ್ ಸಮಯದಲ್ಲಿ ಕರ್ನಾಟಕದಲ್ಲಿ ಸಾಮಾನ್ಯಕ್ಕಿಂತ ಶೇ.18 ರಷ್ಟು ಕಡಿಮೆ ಮಳೆಯಾಗಿದೆ. 2015 ರ ಬಳಿಕ ಈ ಪ್ರಮಾಣದಲ್ಲಿ ಕಡಿಮೆ ಮಳೆ ಬಿದ್ದಿದೆ. ಮುಂಗಾರು ನಂತರದ ಅವಧಿಯು ಸಹ ರಾಜ್ಯಕ್ಕೆ ಹೆಚ್ಚಿನ ಮಳೆಯನ್ನು ತರಲಿಲ್ಲ.

    ಕರ್ನಾಟಕ ಎಷ್ಟು ಪರಿಹಾರ ಕೇಳಿದೆ?
    ರಾಜ್ಯವು ಬರಗಾಲದಿಂದ 35,162.05 ಕೋಟಿ ರೂ. ಬೆಳೆ ನಷ್ಟವನ್ನು ಅಂದಾಜಿಸಿದೆ. ಎನ್‌ಡಿಆರ್‌ಎಫ್ ಅಡಿಯಲ್ಲಿ ಕೇಂದ್ರದಿAದ 18,171 ಕೋಟಿ ರೂ. ಪರಿಹಾರ ಕೇಳಿದೆ. ಇದರಲ್ಲಿ ಬೆಳೆ ನಷ್ಟದ ಇನ್‌ಪುಟ್ ಸಬ್ಸಿಡಿಗೆ 4,663.12 ಕೋಟಿ ರೂ., ಜೀವನೋಪಾಯಕ್ಕೆ ತೊಂದರೆಯಾದ ಕುಟುಂಬಗಳಿಗೆ ಅನಪೇಕ್ಷಿತ ಪರಿಹಾರಕ್ಕಾಗಿ 12,577.9 ಕೋಟಿ ರೂ., ಕುಡಿಯುವ ನೀರಿನ ಕೊರತೆಯನ್ನು ಪರಿಹರಿಸಲು 566.78 ಕೋಟಿ ರೂ., ಜಾನುವಾರುಗಳ ಆರೈಕೆಗಾಗಿ 363.68 ಕೋಟಿ ರೂ. ಸೇರಿದೆ.

    ರಾಜ್ಯದ 33 ಲಕ್ಷ ರೈತರಿಗೆ ಮಧ್ಯಂತರ ಪರಿಹಾರವಾಗಿ ಪ್ರತಿ ವ್ಯಕ್ತಿಗೆ 2,000 ರೂ.ನಂತೆ ಕರ್ನಾಟಕ ಸರ್ಕಾರ ತನ್ನ ಖಜಾನೆಯಿಂದ 650 ಕೋಟಿ ರೂ. ಬಿಡುಗಡೆ ಮಾಡಿದೆ. ಜೊತೆಗೆ ಮೇವಿಗೆ 450 ಕೋಟಿ ಹಾಗೂ ಕುಡಿಯುವ ನೀರಿಗೆ 870 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಪರಿಹಾರ ಕುರಿತು ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಬೆಳೆ ನಷ್ಟದ ಇನ್‌ಪುಟ್ ಸಬ್ಸಿಡಿಗಾಗಿ ಕೇಳಿರುವ 4,663 ಕೋಟಿ ರೂ. ಅನ್ನು ನಿಯಮಾನುಸಾರ ವಿಳಂಬವಿಲ್ಲದೇ ಬಿಡುಗಡೆ ಮಾಡಬೇಕಿತ್ತು. ಆದರೂ ಐದು ತಿಂಗಳು ಕಳೆದರೂ ರಾಜ್ಯಕ್ಕೆ ಯಾವುದೇ ಹಣ ಬಂದಿಲ್ಲ ಎಂದು ತಿಳಿಸಿದ್ದಾರೆ.

    ರಿಟ್ ಅರ್ಜಿ ಏನು ಹೇಳುತ್ತೆ?
    ವಿಪತ್ತು ನಿರ್ವಹಣಾ ಕಾಯ್ದೆ 2005 ರ ಅಡಿಯಲ್ಲಿ ರಾಜ್ಯಕ್ಕೆ ತನ್ನ ಬಾಧ್ಯತೆಯಾಗಿರುವ ಹಣಕಾಸಿನ ನೆರವನ್ನು ಕೇಂದ್ರವು ನೀಡಬೇಕು. ಕರ್ನಾಟಕ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯು ಸಂವಿಧಾನದ 32ನೇ ವಿಧಿಯ ಅಡಿಯಲ್ಲಿ ಪರಿಹಾರ ಕೋರುತ್ತದೆ. ಇದು ಸಾಂವಿಧಾನಿಕ ಪರಿಹಾರಕ್ಕೆ ಸಂಬಂಧಿಸಿದೆ. ನಾಗರಿಕರು ತಮ್ಮ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಲಾಗಿದೆ ಎಂದೆನಿಸಿದರೆ ಅವರು, ಸುಪ್ರೀಂ ಕೋರ್ಟ್ ಅನ್ನು ಸಂಪರ್ಕಿಸಬಹುದು.

    ಐಎಂಸಿಟಿ ವರದಿಯ ಮೇಲೆ ಕಾರ್ಯನಿರ್ವಹಿಸಲು ಮತ್ತು ಹಣಕಾಸಿನ ನೆರವನ್ನು ಒದಗಿಸಲು ಅಂತಿಮ ನಿರ್ಧಾರ ತೆಗೆದುಕೊಳ್ಳುವಲ್ಲಿ ವಿಳಂಬವಾಗಿದೆ. ಭಾರತದ ಸಂವಿಧಾನದ 14 ಮತ್ತು 21 ನೇ ವಿಧಿಗಳ ಅಡಿಯಲ್ಲಿ ಅದರ ನಾಗರಿಕರಿಗೆ ಖಾತರಿಪಡಿಸಿದ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಕರ್ನಾಟಕ ಸರ್ಕಾರ ವಾದಿಸಿದೆ.

    ಭಾರತದ ರಾಜ್ಯಗಳಿಗೆ ವಿಪತ್ತು ಪರಿಹಾರ ನಿಯೋಜನೆ ಹೇಗೆ?
    ರಾಜ್ಯಗಳು ರಾಜ್ಯ ವಿಪತ್ತು ಪರಿಹಾರ ನಿಧಿಗಳನ್ನು ಹೊಂದಿವೆ. ಕೇಂದ್ರವು 75% ನಿಧಿಯನ್ನು (ಹಿಮಾಲಯ ಮತ್ತು ಈಶಾನ್ಯ ರಾಜ್ಯಗಳಿಗೆ 90%) ಮತ್ತು ರಾಜ್ಯಗಳು ಉಳಿದ ಹಣವನ್ನು ನೀಡುತ್ತವೆ. ಒಟ್ಟು ಮೊತ್ತವನ್ನು ಬಜೆಟ್ ಹಂಚಿಕೆಯ ಭಾಗವಾಗಿ ನಿರ್ಧರಿಸಲಾಗುತ್ತದೆ. ಕೇಂದ್ರವು ನಿಯತಕಾಲಿಕವಾಗಿ ಬಿಡುಗಡೆ ಮಾಡುತ್ತದೆ.

    ಕೇಂದ್ರದ ನೆರವು ಅಗತ್ಯವಿದ್ದರಾ ರಾಜ್ಯ ಏನು ಮಾಡಬೇಕು?
    ರಾಜ್ಯಕ್ಕೆ ಕೇಂದ್ರದ ನೆರವು ಅಗತ್ಯವಿದ್ದರೆ, ಅದು ಕೆಲವು ಕಾರ್ಯವಿಧಾನಗಳನ್ನು ಅನುಸರಿಸಬೇಕು.
    1) ಜ್ಞಾಪಕ ಪತ್ರದಲ್ಲಿ ಹಾನಿಯ ಪ್ರಮಾಣವನ್ನು ವಿವರಿಸಬೇಕು. ನಂತರ ಅದನ್ನು ಸಲ್ಲಿಸಬೇಕು.
    2) ಇದನ್ನು ಕೇಂದ್ರವು ಒಪ್ಪಿಕೊಂಡರೆ, ಐಎಂಸಿಟಿ ಸ್ಥಳ ಪರಿಶೀಲನೆ ಕೈಗೊಂಡು ಹಾನಿಯ ಸಮೀಕ್ಷೆ ನಡೆಸುತ್ತದೆ.
    3) ರಾಷ್ಟ್ರೀಯ ಕಾರ್ಯಕಾರಿ ತಂಡವು ಐಎಂಸಿಟಿ ವರದಿಯನ್ನು ವಿಶ್ಲೇಷಿಸುತ್ತದೆ.
    4) ಅದರ ಶಿಫಾರಸುಗಳ ಆಧಾರದ ಮೇಲೆ ಉನ್ನತಮಟ್ಟದ ಸಮಿತಿಯು ತಕ್ಷಣದ ಪರಿಹಾರ ಬಿಡುಗಡೆಯನ್ನು ಅನುಮೋದಿಸುತ್ತದೆ.

    ರಾಜ್ಯ ಸರ್ಕಾರ ಸುಪ್ರೀಂ ಮೊರೆ ಹೋಗಿದ್ಯಾಕೆ?
    2023ರ ಸೆಪ್ಟೆಂಬರ್ ಮತ್ತು ನವೆಂಬರ್ ಸಂದರ್ಭದಲ್ಲಿ 3 ಜ್ಞಾಪಕ ಪತ್ರಗಳೊಂದಿಗೆ ರಾಜ್ಯ ಸರ್ಕಾರ ಕೇಂದ್ರವನ್ನು ಸಂಪರ್ಕಿಸಿತು. ಡಿ.19 ರಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಡಿ.20 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ನಂತರವೂ ಯಾವುದೇ ಫಲ ಸಿಗಲಿಲ್ಲ. ಈಗ ಕರ್ನಾಟಕ ಸಿಎಂ ಸಿದ್ದರಾಮಯ್ಯ ಕಾನೂನು ಮಾರ್ಗ ಹಿಡಿದಿದ್ದಾರೆ. ರಾಜ್ಯಕ್ಕೆ ಒಂದು ಪೈಸೆ ಕೂಡ ಬಿಡುಗಡೆಯಾಗಿಲ್ಲ ಎಂದು ಆರೋಪಿಸಿದ್ದಾರೆ.

    ವಿಪಕ್ಷಗಳು ಏನು ಹೇಳುತ್ತಿವೆ?
    ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ರಾಜಕೀಯ ಮಾಡಲು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಅಸಮಾಧಾನ ಹೊರಹಾಕಿದ್ದಾರೆ. ಬಿಜೆಪಿಯೊಂದಿಗಿನ ಮೈತ್ರಿಯ ಭಾಗವಾಗಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಕೂಡ ರಾಜ್ಯ ಸರ್ಕಾರದ ನಡೆಗೆ (ದೆಹಲಿ ಚಲೋ ಪ್ರತಿಭಟನೆ) ಟೀಕೆ ವ್ಯಕ್ತಪಡಿಸಿದ್ದಾರೆ.

  • ರಾಜ್ಯದಲ್ಲಿ ಆ್ಯಪ್ ಆಧಾರಿತ ಬೈಕ್ ಟ್ಯಾಕ್ಸಿ ಸೇವೆ ರದ್ದು

    ರಾಜ್ಯದಲ್ಲಿ ಆ್ಯಪ್ ಆಧಾರಿತ ಬೈಕ್ ಟ್ಯಾಕ್ಸಿ ಸೇವೆ ರದ್ದು

    ಬೆಂಗಳೂರು: ರಾಜ್ಯದಲ್ಲಿ ಆ್ಯಪ್ ಆಧಾರಿತ ಬೈಕ್ ಟ್ಯಾಕ್ಸಿ (Bike Taxi) ಬಾಡಿಗೆ ಯೋಜನೆ ರದ್ದುಗೊಳಿಸಿ ಸಾರಿಗೆ ಇಲಾಖೆ (Transport Department) ಆದೇಶ ಹೊರಡಿಸಿದೆ.

    ಬೆಂಗಳೂರಿನಲ್ಲಿ (Bengaluru) ಎಲೆಕ್ಟ್ರಿಕ್ ಬೈಕ್‌, ಸೇರಿದಂತೆ ಬೈಕ್ ಟ್ಯಾಕ್ಸಿ ಸೇವೆ ರದ್ದುಗೊಳಿಸಿದ್ದರಿಂದ ಓಲಾ, ಉಬರ್, ರ‍್ಯಾಪಿಡೋಗಳಿಗೆ ತೀವ್ರ ಹಿನ್ನಡೆಯಾಗಿದೆ. ಇದನ್ನೂ ಓದಿ: PublicTV Explainer: ಬೆಂಗಳೂರಿಗೆ ಬಂತು ಮೊದಲ ಚಾಲಕ ರಹಿತ ಮೆಟ್ರೋ ರೈಲು – ವಿಶೇಷತೆಗಳು ನಿಮಗೆಷ್ಟು ಗೊತ್ತು?

    ಸಾರ್ವಜನಿಕ ಸಾರಿಗೆಗಾಗಿ ಹಾಗೂ ಸ್ವಯಂ ಉದ್ಯೋಗಾವಕಾಶ ಕೊಡುವ ಉದ್ದೇಶದಿಂದ 2021 ರಲ್ಲಿ ಕರ್ನಾಟಕ ವಿದ್ಯುತ್ ಬೈಕ್ ಟ್ಯಾಕ್ಸಿ ಯೋಜನೆ ಜಾರಿ ಮಾಡಲಾಗಿತ್ತು. ಈಗಾಗಲೇ ಓಲಾ, ಉಬರ್, ರ‍್ಯಾಪಿಡೋದಿಂದ ಬೈಕ್ ಸೇವೆ ಇತ್ತು.

    ಆದರೆ ಮೋಟಾರು ವಾಹನ ಕಾಯ್ದೆ ನಿಯಮ ಉಲ್ಲಂಘನೆ ಮಾಡಿದ್ದಕ್ಕೆ ದ್ವಿಚಕ್ರ ವಾಹನ ಸಾರಿಗೆ ಸೇವೆ ರದ್ದು ಮಾಡಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ. ಮಹಿಳೆಯರಿಗೂ ಅಸುರಕ್ಷತೆಯ ದೃಷ್ಟಿಯಿಂದ ಈ ಸೇವೆಯನ್ನು ರದ್ದು ಮಾಡಿ ಸಾರಿಗೆ ಇಲಾಖೆ ಅಧಿಸೂಚನೆ ಹೊರಡಿಸಿದೆ. ಇದನ್ನೂ ಓದಿ: ನಟಿ ಲಕ್ಷ್ಮಿ ಮೇಲೆ ಆಕ್ಸಿಡೆಂಟ್ ಮಾಡಿ ಯುವತಿ ಜೊತೆ ರಂಪಾಟ ಮಾಡಿದ ಆರೋಪ

  • ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಗಿಫ್ಟ್ – ತುಟ್ಟಿ ಭತ್ಯೆ ಶೇ. 3.75 ಹೆಚ್ಚಳ

    ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಗಿಫ್ಟ್ – ತುಟ್ಟಿ ಭತ್ಯೆ ಶೇ. 3.75 ಹೆಚ್ಚಳ

    ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌ ಸಿಕ್ಕಿದೆ. ತುಟ್ಟಿ ಭತ್ಯೆಯನ್ನು (Dearness Allowance) ಶೇ. 3.75 ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

    ಈ ಮೂಲಕ ಸರ್ಕಾರಿ ನೌಕರರ ತುಟ್ಟಿ ಭತ್ಯೆ 38.75% ಗೆ ಏರಿಕೆಯಾಗಿದೆ. ಇದನ್ನೂ ಓದಿ: ನಕಲಿ ವೋಟರ್ ಐಡಿ ಪ್ರಕರಣ; ಸಚಿವ ಭೈರತಿ ಸುರೇಶ್ ರಾಜೀನಾಮೆ ಕೊಡಬೇಕು: ರವಿಕುಮಾರ್

    UGC/ AICTE/ ICAR ವೇತನ ಶ್ರೇಣಿಗಳ ಬೋಧಕ ಸಿಬ್ಬಂದಿ ಹಾಗೂ NJPC ವೇತನ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳ ತುಟ್ಟಿ ಭತ್ಯೆಯನ್ಬು ಶೇ. 4 ರಷ್ಟು ಹೆಚ್ಚಿಸಿ (ಶೇ. 46 ಕ್ಕೆ ಪರಿಷ್ಕರಿಸಿ) ಸರ್ಕಾರ ಆದೇಶ ಹೊರಡಿಸಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅತ್ತಿಬೆಲೆ ಪಟಾಕಿ ದುರಂತ; ಮ್ಯಾಜಿಸ್ಟ್ರಿಯಲ್‌ ವಿಚಾರಣೆಗೆ ಸರ್ಕಾರ ಆದೇಶ

    ಅತ್ತಿಬೆಲೆ ಪಟಾಕಿ ದುರಂತ; ಮ್ಯಾಜಿಸ್ಟ್ರಿಯಲ್‌ ವಿಚಾರಣೆಗೆ ಸರ್ಕಾರ ಆದೇಶ

    ಬೆಂಗಳೂರು: ಅತ್ತಿಬೆಲೆ ಪಟಾಕಿ ದುರಂತದಲ್ಲಿ (Attibele Fire Incident) 16 ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರಿಯಲ್ ವಿಚಾರಣೆಗೆ (Magisterial Inquiry) ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

    ಹಿರಿಯ ಐಎಎಸ್ ಅಧಿಕಾರಿ ಹಾಗೂ ಬೆಂಗಳೂರು (Bengaluru) ಪ್ರಾದೇಶಿಕ ಆಯುಕ್ತ ಆದಿತ್ಯ ಅಮಲನ್ ಬಿಸ್ವಾಸ್ ನೇತೃತ್ವದಲ್ಲಿ ಮ್ಯಾಜಿಸ್ಟ್ರಿಯಲ್ ವಿಚಾರಣೆ ನಡೆಯಲಿದೆ. 3 ತಿಂಗಳಲ್ಲಿ ವರದಿ ನೀಡಲು ಗಡುವು ನೀಡಲಾಗಿದೆ. ಇದನ್ನೂ ಓದಿ: ಅತ್ತಿಬೆಲೆ ಪಟಾಕಿ ದುರಂತದಲ್ಲಿ ಗಾಯಗೊಂಡಿದ್ದ ಯುವಕ ದುರ್ಮರಣ- ಸಾವಿನ ಸಂಖ್ಯೆ 16ಕ್ಕೆ ಏರಿಕೆ

    ಏನಿದು ಪ್ರಕರಣ?
    ರಾಜಧಾನಿ ಬೆಂಗಳೂರಿನ ಹೊರವಲಯದ ಅತ್ತಿಬೆಲೆಯಲ್ಲಿ ಪಟಾಕಿ ಗೋದಾಮಿನಲ್ಲಿ ಈಚೆಗೆ ಸಂಭವಿಸಿದ ಬೆಂಕಿ ದುರಂತದಲ್ಲಿ 16 ಮಂದಿ ಕಾರ್ಮಿಕರು ದಾರುಣ ಸಾವಿಗೀಡಾಗಿದ್ದರು.

    ತಮಿಳುನಾಡಿನ ಶಿವಕಾಶಿಯಿಂದ ಬಂದ ಲಾರಿಯಿಂದ ಪಟಾಕಿಗಳನ್ನು ಗೋದಾಮಿನಲ್ಲಿ ದಾಸ್ತಾನು ಮಾಡುತ್ತಿದ್ದಾಗ ಏಕಾಏಕಿ ಬೆಂಕಿ ಹೊತ್ತಿಕೊಂಡಿತು. ತಕ್ಷಣ ಎಲ್ಲ ದಿಕ್ಕುಗಳಲ್ಲೂ ಪಟಾಕಿಗಳು ಸಿಡಿಯಲು ಆರಂಭಿಸಿದ ಕಾರಣ ಬೆಂಕಿ ನಂದಿಸಲು ಸಾಧ್ಯವಾಗಲಿಲ್ಲ. ದುರಂತದಲ್ಲಿ 16 ಮಂದಿ ಕಾರ್ಮಿಕರು ತಮ್ಮ ಪ್ರಾಣ ಕಳೆದುಕೊಂಡರು. ಇದನ್ನೂ ಓದಿ: ಅತ್ತಿಬೆಲೆ ಪಟಾಕಿ ದುರಂತ- ನಾಲ್ವರು ಅಧಿಕಾರಿಗಳ ಅಮಾನತು

    ಅವಘಡದಲ್ಲಿ ಸುಮಾರು 5 ಕೋಟಿ ರೂ. ಮೌಲ್ಯದ ಪಟಾಕಿ ಭಸ್ಮವಾಗಿವೆ ಎಂದು ಅಂದಾಜಿಸಲಾಗಿದೆ. ಲಾರಿ, ಸರಕು ಸಾಗಣೆ ವಾಹನ, ನಾಲ್ಕು ದ್ವಿಚಕ್ರ ವಾಹನಗಳು ಸುಟ್ಟು ಕರಕಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಅಂಗಡಿ ಮಾಲೀಕ ಮತ್ತು ಆತನ ಮಗನನ್ನು ಬಂಧಿಸಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತಮಿಳುನಾಡಿಗೆ ನೀರು ಬಿಡುಗಡೆ – ಕೆಆರ್‌ಎಸ್‌ ಡ್ಯಾಂ ನೀರಿನ ಮಟ್ಟ 106 ಅಡಿಗೆ ಕುಸಿತ

    ತಮಿಳುನಾಡಿಗೆ ನೀರು ಬಿಡುಗಡೆ – ಕೆಆರ್‌ಎಸ್‌ ಡ್ಯಾಂ ನೀರಿನ ಮಟ್ಟ 106 ಅಡಿಗೆ ಕುಸಿತ

    ಮಂಡ್ಯ: ಕೆಆರ್‌ಎಸ್‌ (KRS) ಡ್ಯಾಂನಿಂದ ತಮಿಳುನಾಡಿಗೆ ನಿರಂತರವಾಗಿ ನೀರು ಬಿಡುತ್ತಿರುವ ಹಿನ್ನೆಲೆಯಲ್ಲಿ ದಿನೇ ದಿನೇ ನೀರಿನ ಮಟ್ಟ ಕುಸಿಯುತ್ತಿದೆ. ಸದ್ಯ ಕೆಆರ್‌ಎಸ್‌ ಡ್ಯಾಂನ ನೀರಿನ ಮಟ್ಟ 106 ಅಡಿಗೆ ಕುಸಿದಿದೆ.

    ಪ್ರತಿ ದಿನ ತಮಿಳುನಾಡಿಗೆ (Tamil Nadu) ನೀರಿನ ಪ್ರಮಾಣದಲ್ಲಿ ಹೆಚ್ಚಳ ಮಾಡಲಾಗಿದೆ. ಮಂಡ್ಯ ರೈತರ ಹೋರಾಟಕ್ಕೆ ರಾಜ್ಯ ಸರ್ಕಾರ ಕ್ಯಾರೆ ಎನ್ನುತ್ತಿಲ್ಲ. ಇಂದು ಡ್ಯಾಂನಿಂದ ತಮಿಳುನಾಡಿಗೆ 12,776 ಕ್ಯೂಸೆಕ್ ನೀರು ಬಿಡಲಾಗಿದೆ. ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನು ಖಂಡಿಸಿ ರೈತರು ಪ್ರತಿಭಟಿಸುತ್ತಿದ್ದರೂ ಸರ್ಕಾರ ತಲೆಕೆಡಿಸಿಕೊಂಡಿಲ್ಲ. ಇದನ್ನೂ ಓದಿ: KRSನಿಂದ ತಮಿಳುನಾಡಿಗೆ ಗುರುವಾರವೂ ಭಾರೀ ಪ್ರಮಾಣದ ನೀರು – ಇಂದು ರೈತಸಂಘ ಪ್ರತಿಭಟನೆ

    124.80 ಅಡಿ ಗರಿಷ್ಠ ಮಟ್ಟದ ಡ್ಯಾಂನಲ್ಲಿ ಸದ್ಯ 106.68 ಅಡಿ ನೀರು ಸಂಗ್ರಹವಾಗಿದೆ. 49.452 ಟಿಎಂಸಿ ಸಾಮರ್ಥ್ಯದ ಡ್ಯಾಂನಲ್ಲಿ ಕೇವಲ 28.515 ಟಿಎಂಸಿ ನೀರು ಇದೆ. ಸರ್ಕಾರದ ಕ್ರಮವನ್ನು ಖಂಡಿಸಿ ಮಂಡ್ಯ ಬಂದ್‌ಗೆ ಈಗಾಗಲೇ ಬಿಜೆಪಿ ಕರೆ ಕೊಟ್ಟಿದೆ.

    ಕೆಆರ್‌ಎಸ್ ಡ್ಯಾಂನ ಇಂದಿನ ನೀರಿನ ಮಟ್ಟ
    ಗರಿಷ್ಠ ಮಟ್ಟ – 124.80 ಅಡಿಗಳು
    ಇಂದಿನ ಮಟ್ಟ – 106.68 ಅಡಿಗಳು
    ಗರಿಷ್ಠ ಸಾಂದ್ರತೆ – 49.452 ಟಿಎಂಸಿ
    ಇಂದಿನ ಸಾಂದ್ರತೆ – 28.515 ಟಿಎಂಸಿ
    ಒಳಹರಿವು – 4878 ಕ್ಯೂಸೆಕ್
    ಹೊರಹರಿವು – 15,373 ಕ್ಯೂಸೆಕ್ ಇದನ್ನೂ ಓದಿ: ಸುಪ್ರೀಂ ಕೋರ್ಟ್ ಆದೇಶಕ್ಕೂ ಮುನ್ನ ಕೆಆರ್‌ಎಸ್‌ನಿಂದ ತಮಿಳುನಾಡಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾಜ್ಯದಲ್ಲಿ ಬರ ಘೋಷಣೆ ನಿಯಮ ಸಡಿಲಿಸುವಂತೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಪತ್ರ

    ರಾಜ್ಯದಲ್ಲಿ ಬರ ಘೋಷಣೆ ನಿಯಮ ಸಡಿಲಿಸುವಂತೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಪತ್ರ

    ಬೆಂಗಳೂರು: ರಾಜ್ಯದಲ್ಲಿ ಬರ (Karnataka Drought) ಘೋಷಣೆ ಮಾಡುವ ಸಂಬಂಧ‌ ನಿಯಮಗಳನ್ನು ಸಡಿಲಿಸುವಂತೆ ಕೋರಿ ರಾಜ್ಯ ಸರ್ಕಾರವು (Karnataka Govt) ಕೇಂದ್ರಕ್ಕೆ ಪತ್ರ ಬರೆದಿದೆ.

    ಮಳೆ ಕೊರತೆಯಿಂದ ಹಲವು ತಾಲ್ಲೂಕುಗಳಲ್ಲಿ ಬರ ಪರಿಸ್ಥಿತಿ ಇದೆ. ಆದರೆ ಈ ತಾಲ್ಲೂಕುಗಳ ಬರ ಘೋಷಣೆಗೆ ಈಗಿರುವ ನಿಯಮಗಳು ಅಡ್ಡಿಯಾಗಿವೆ. ಹಾಗಾಗಿ ಬರ ಘೋಷಣೆಯ ಮಾನದಂಡಗಳನ್ನು ಬದಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಕೇಂದ್ರ ಸರ್ಕಾರವನ್ನು ಪತ್ರದಲ್ಲಿ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಮುಸ್ಲಿಮರಿಗಷ್ಟೇ ಗಂಡಸ್ತನ ಮೀಸೆ ಇರೋದಲ್ಲ, ಹಿಂದೂ ಹುಡುಗರಿಗೂ ಇದೆ: ಸ್ವಾಮೀಜಿಯಿಂದ ವಿವಾದಾತ್ಮಕ ಹೇಳಿಕೆ

    ಕೇಂದ್ರದ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್‌ರಿಗೆ ಬರೆದಿರುವ ಈ ಪತ್ರದಲ್ಲಿ, ಈಗಿನ ನಿಯಮಗಳ ಪ್ರಕಾರ ರಾಜ್ಯದಲ್ಲಿ ಬರಪೀಡಿತ ಪ್ರದೇಶಗಳ ಘೋಷಣೆ ಮಾಡಿದರೆ ರೈತರು ಬೆಳೆ ವೈಫಲ್ಯದ ಸಂದರ್ಭದಲ್ಲಿ ಇನ್‌ಪುಟ್ ಸಬ್ಸಿಡಿಗಳನ್ನು ಕಳೆದುಕೊಳ್ಳುತ್ತಾರೆ. ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸುವುದಕ್ಕೆ ಕೇಂದ್ರ ಸರ್ಕಾರವು ಕೆಲವು ಕಠಿಣ ಮಾನದಂಡ ವಿಧಿಸಿದೆ. ಶೇ.60ರಷ್ಟು ಮಳೆ ಕೊರತೆ ಇರಬೇಕು. ಮೂರು ವಾರ ಮಳೆ ಇರಬಾರದೆಂಬ ನಿಯಮವಿದೆ. ಈಗ ಎಲ್ಲೂ ಶೇ.60 ಮಳೆ ಕೊರತೆ ಆಗಿಲ್ಲ. ಹೀಗಾಗಿ ಮಾನದಂಡ ಮರುಪರಿಶೀಲನೆಗೆ ಸಂಬಂಧಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ.

    ಪ್ರಸ್ತುತ ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯಾಗಿದೆ. ಕರ್ನಾಟಕದಲ್ಲಿ 336 ಮಿ.ಮೀ ಸಾಮಾನ್ಯ ಮಳೆಯಾಗಬೇಕಿತ್ತು. ಆದರೆ 234 ಮಿ.ಮೀ ಮಳೆ ಬಿದ್ದಿದೆ. ದುರ್ಬಲ ಮಾನ್ಸೂನ್‌ನಿಂದ ಜೂನ್‌ನಲ್ಲಿ ಶೇ.56ರಷ್ಟು ಮಳೆ ಕೊರತೆಯಾಗಿದೆ. ರಾಜ್ಯದ ಹಲವಾರು ತಾಲ್ಲೂಕುಗಳಲ್ಲಿ ಬರಗಾಲದ ಪರಿಸ್ಥಿತಿ ಇದೆ. ಆದರೆ ಬರ ಘೋಷಿಸಲು ಈಗ ಇರುವ ನಿಯಮಾವಳಿಗಳಂತೆ ಆಗುತ್ತಿಲ್ಲ. ಹಾಗಾಗಿ, ಬರ ಘೋಷಣೆಯ ಮಾನದಂಡಗಳನ್ನು ಬದಲಿಸಲು ಮಧ್ಯಪ್ರವೇಶಿಸಬೇಕು ಎಂದು ಅವರು ಕೇಂದ್ರದ ಕೃಷಿ ಸಚಿವರನ್ನು ಪತ್ರದಲ್ಲಿ ಒತ್ತಾಯಿಸಿದ್ದಾರೆ. ಕೇಂದ್ರ ಸರ್ಕಾರದ ಮಾನದಂಡಗಳನ್ನು ಬಿಗಿ ಮಾಡಿರುವುದರಿಂದ ರಾಜ್ಯದ ಕೈ ಕಟ್ಟಿ ಹಾಕಿದಂತಾಗಿದೆ ಎಂದು ಪತ್ರದಲ್ಲಿ ವಿವರಿದ್ದಾರೆ. ಇದನ್ನೂ ಓದಿ: ನಾನು ಕಾಂಗ್ರೆಸ್‌ ಕಾರ್ಯಕರ್ತನಾಗಿ ಮೇಲೆ ಬಂದವನು, JDS ಕಚೇರಿಯಲ್ಲೇ ಕಾಂಗ್ರೆಸ್ ನನ್ನ ತಾಯಿ ಅಂದಿದ್ದೇನೆ: ವಿಶ್ವನಾಥ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಡಿಜಿ-ಐಜಿಪಿಯಾಗಿ ಅಲೋಕ್‌ ಮೋಹನ್‌ ನೇಮಕ

    ಡಿಜಿ-ಐಜಿಪಿಯಾಗಿ ಅಲೋಕ್‌ ಮೋಹನ್‌ ನೇಮಕ

    ಬೆಂಗಳೂರು: ಕರ್ನಾಟಕ ಪೊಲೀಸ್‌ ಮಹಾನಿರ್ದೇಶಕರಾಗಿ ಅಲೋಕ್‌ ಮೋಹನ್‌ (Alok Mohan) ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

    ಕೆಲ ತಿಂಗಳ ಹಿಂದೆ ಕರ್ನಾಟಕದ ಡಿಜಿ-ಐಜಿಪಿಯಾಗಿದ್ದ ಪ್ರವೀಣ್‌ ಸೂದ್‌ ಅವರು ಸಿಬಿಐ ನಿರ್ದೇಶಕರಾಗಿ ನೇಮಕಗೊಂಡಿದ್ದರು. ಅವರಿಂದ ತೆರವಾಗಿದ್ದ ಸ್ಥಾನಕ್ಕೆ ಅಲೋಕ್‌ ಮೋಹನ್‌ ಅವರನ್ನು ನಿಯೋಜಿಸಲಾಗಿತ್ತು. ಇದನ್ನೂ ಓದಿ: ಮುಂದಿನ ಜನ್ಮದಲ್ಲೂ ಅಂತಹ ತಮ್ಮ ಬೇಡ- ಡಿಕೆಶಿಗೆ ಹೆಚ್‍ಡಿಕೆ ಟಾಂಗ್

    ಪ್ರವೀಣ್ ಸೂದ್‌ ನಿರ್ಗಮನದ ಬಳಿಕ ಡಿಜಿ-ಐಜಿಪಿಯಾಗಿ (DG-IGP) ಅಲೋಕ್‌ ಮೋಹನ್‌ ಅವರಿಗೆ ಹೆಚ್ಚುವರಿ ಹೊಣೆ ನೀಡಲಾಗಿತ್ತು. ಈಗ ಆ ಸ್ಥಾನಕ್ಕೆ ಅವರನ್ನೇ ನೇಮಿಸಿ ಸರ್ಕಾರ ಆದೇಶಿಸಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅನಧಿಕೃತ ಫ್ಲೆಕ್ಸ್‌ ತೆಗೆಯಲು ಶುಭ ಘಳಿಗೆಗೆ ಕಾಯ್ತಿದ್ದೀರಾ? – ಬಿಬಿಎಂಪಿಗೆ ಹೈಕೋರ್ಟ್ ತರಾಟೆ

    ಅನಧಿಕೃತ ಫ್ಲೆಕ್ಸ್‌ ತೆಗೆಯಲು ಶುಭ ಘಳಿಗೆಗೆ ಕಾಯ್ತಿದ್ದೀರಾ? – ಬಿಬಿಎಂಪಿಗೆ ಹೈಕೋರ್ಟ್ ತರಾಟೆ

    – ಅನಧಿಕೃತ ಫ್ಲೆಕ್ಸ್‌ ಕಂಡರೆ ತಲಾ 50,000 ರೂ. ದಂಡ ಹಾಕುವಂತೆ ಸೂಚನೆ

    ಬೆಂಗಳೂರು: ರಾಜಧಾನಿಯಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ ತಡೆಗೆ ವಿಫಲವಾಗಿದೆ ಎಂದು ಕ್ರಮ ಕೈಗೊಳ್ಳದ ಬಿಬಿಎಂಪಿ (BBMP), ರಾಜ್ಯ ಸರ್ಕಾರವನ್ನು ಹೈಕೋರ್ಟ್ (Karnataka High Court) ತರಾಟೆ ತೆಗೆದುಕೊಂಡಿದೆ.

    ಪ್ರಸನ್ನ ಬಿ. ವರಾಳೆ, ನ್ಯಾ. ಎಂ.ಜಿ.ಎಸ್. ಕಮಲ್ ಅವರಿದ್ದ ಪೀಠವು, ಅನಧಿಕೃತ ಜಾಹೀರಾತು ಹಾವಳಿ ತಡೆಯಲು ಪಂಚವಾರ್ಷಿಕ ಯೋಜನೆ ಬೇಕೇ? ಫ್ಲೆಕ್ಸ್ ತೆರವಿಗೆ ಶುಭ ಮುಹೂರ್ತಕ್ಕಾಗಿ ಕಾಯುತ್ತಿದ್ದೀರಾ? ಚುನಾವಣೆ ವೇಳೆ 60,000 ಅನಧಿಕೃತ ಫ್ಲೆಕ್ಸ್, ಬ್ಯಾನರ್ ಅಳವಡಿಸಲಾಗಿದೆ. ಆದರೆ ಕೇವಲ 134 ದೂರು ಪರಿಗಣಿಸಿ 40 ಎಫ್‌ಐಆರ್ ದಾಖಲಿಸಲಾಗಿದೆ. ಉಳಿದ ಪ್ರಕರಣಗಳು ಏನಾಯ್ತು ಎಂದು ಗರಂ ಆಗಿದೆ. ಇದನ್ನೂ ಓದಿ: ಆರಗ ಜ್ಞಾನೇಂದ್ರ ಅವರನ್ನು ನಿಮ್ಹಾನ್ಸ್‌ಗೆ ಕಳಿಸೋಣ: ಶಿವಕುಮಾರ್

    ಫ್ಲೆಕ್ಸ್ ಅಳವಡಿಸಿದ ರಾಜಕೀಯ ಪಕ್ಷಗಳ ಪದಾಧಿಕಾರಿಗಳ ಮೇಲೆ ಕ್ರಮ ಯಾಕೆ ತೆಗೆದುಕೊಳ್ಳುತ್ತಿಲ್ಲ. ಬೆಂಗಳೂರು ಸುಂದರವಾಗಿರುವುದು ಸರ್ಕಾರಕ್ಕೆ ಬೇಕಿಲ್ಲವೇ? ನಗರದ ತುಂಬೆಲ್ಲಾ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ ಇರಬೇಕೆಂದು ಸರ್ಕಾರದ ಅಪೇಕ್ಷೆಯೇ ಎಂದು ಹೈಕೋರ್ಟ್ ಬೇಸರ ವ್ಯಕ್ತಪಡಿಸಿದೆ.

    ಬ್ರ್ಯಾಂಡ್ ಬೆಂಗಳೂರಿಗೆ ಫ್ಲೆಕ್ಸ್, ಬ್ಯಾನರ್‌ಗಳಿಂದ ಕಳಂಕ. ಬೆಂಗಳೂರಿನ ಬಗ್ಗೆ ಹೂಡಿಕೆದಾರರಿಗೆ ಎಂತಹ ಚಿತ್ರಣ ನೀಡುತ್ತಿದ್ದೀರಿ? ಬೆಂಗಳೂರಿನ ಸ್ಥಿತಿ ಸುಧಾರಿಸದಿದ್ದರೆ ಹೂಡಿಕೆ ಹೇಗೆ ತರುತ್ತೀರಿ? ಬೆಂಗಳೂರನ್ನು ಅದರ ಅದೃಷ್ಟಕ್ಕೇ ಬಿಡಲಾಗಿದೆ. ಇದು ಅಚ್ಚರಿ, ಆಘಾತಕಾರಿ ಹಾಗೂ ಆತ್ಮಸಾಕ್ಷಿ ಕಲಕುವಂಥದ್ದಾಗಿದೆ. ಬಿಬಿಎಂಪಿ ಅಸಹಾಯಕತೆಯಿಂದ ಕೈ ಎತ್ತಿದೆ. ನೀವೇನು ಮಾಡುತ್ತಿದ್ದೀರ ಎಂದು ರಾಜ್ಯ ಸರ್ಕಾರಕ್ಕೆ ಸಿಜೆ ಪ್ರಸನ್ನ ಬಿ. ವರಾಳೆ ತರಾಟೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ವೀರೇಂದ್ರ ಹೆಗ್ಗಡೆಯವರಿಗೆ ಮಾನಸಿಕ ಹಿಂಸೆ ನೀಡಲಾಗ್ತಿದೆ: ಜೈನಮುನಿ ಗುಣದರನಂದಿ ಶ್ರೀ

    ಇನ್ಮುಂದೆ ಒಂದೇ ಒಂದು ಅನಧಿಕೃತ ಫ್ಲೆಕ್ಸ್ ಕಂಡರೂ ತಲಾ 50 ಸಾವಿರ ರೂ. ದಂಡ ವಿಧಿಸಬೇಕು. ಬಿಬಿಎಂಪಿ, ರಾಜ್ಯ ಸರ್ಕಾರ ತಲಾ 50 ಸಾವಿರ ರೂ. ಠೇವಣಿ ಇಡಬೇಕು. ಫ್ಲೆಕ್ಸ್ ಮೂಲಕ ಶುಭಾಶಯ ಕೋರುವವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು. ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಬೆಂಗಳೂರಿನ ಆಡಳಿತದ ಹೊಣೆ ಹೊತ್ತವರು ಈ ಬಗ್ಗೆ ಗಮನಹರಿಸಬೇಕು ಎಂದು ಬಿಬಿಎಂಪಿ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ವಾರ್ನಿಂಗ್ ಮಾಡಿದೆ. ಮೂರು ವಾರಗಳಲ್ಲಿ ಕ್ರಮ ಕೈಗೊಂಡ ವರದಿ ಸಲ್ಲಿಕೆಗೆ ಹೈಕೋರ್ಟ್‌ ತಾಕೀತು ಮಾಡಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗೃಹಲಕ್ಷ್ಮಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್‌ – ಒಂದು ವಾರದಲ್ಲಿ 70 ಲಕ್ಷಕ್ಕೂ ಹೆಚ್ಚು ಮಂದಿ ನೋಂದಣಿ

    ಗೃಹಲಕ್ಷ್ಮಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್‌ – ಒಂದು ವಾರದಲ್ಲಿ 70 ಲಕ್ಷಕ್ಕೂ ಹೆಚ್ಚು ಮಂದಿ ನೋಂದಣಿ

    – ಇನ್ಮುಂದೆ ಎಸ್‌ಎಂಎಸ್‌ ಬಾರದಿದ್ದರೂ ಕೇಂದ್ರಕ್ಕೆ ಹೋಗಿ ಹೆಸರು ನೋಂದಾಯಿಸಲು ಅವಕಾಶ

    ಬೆಂಗಳೂರು: ಗೃಹಲಕ್ಷ್ಮಿ ಯೋಜನೆಗೆ (Gruhalakshmi Scheme) ಮಹಿಳೆಯರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಯೋಜನೆಗೆ ಅಧಿಕೃತ ಚಾಲನೆ ಸಿಕ್ಕ ಬಳಿಕ ಒಂದು ವಾರದಲ್ಲೇ 70 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳು ಹೆಸರು ನೋಂದಾಯಿಸಿದ್ದಾರೆ.

    ಆರಂಭದಲ್ಲಿ ಫಲಾನುಭವಿಗಳು ತಮ್ಮ ಮೊಬೈಲ್‌ಗೆ ಸಂದೇಶ ಬಂದ ನಂತರ ನೋಂದಣಿ ಕೇಂದ್ರಗಳಿಗೆ ಹೋಗಿ ನೋಂದಾಯಿಸಿಕೊಳ್ಳಬೇಕಿತ್ತು. ಈಗ ನೋಂದಣಿ ಪ್ರಕ್ರಿಯೆಯನ್ನು ಮತ್ತಷ್ಟು ಸುಲಭಗೊಳಿಸಲಾಗಿದೆ. ಮೊಬೈಲ್‌ಗೆ ಮೆಸೇಜ್‌ ಬರದೇ ಇದ್ದರೂ ಅರ್ಹ ಫಲಾನುಭವಿಗಳು ಇನ್ಮುಂದೆ ಅಗತ್ಯ ದಾಖಲೆಗಳೊಂದಿಗೆ ಹತ್ತಿರದ ನೋಂದಣಿ ಕೇಂದ್ರದಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಇದನ್ನೂ ಓದಿ: ಉಡುಪಿ ಹೆಸರಿನಲ್ಲಿ ಹರಿದಾಡುತ್ತಿರುವ ಎಲ್ಲಾ ವಿಡಿಯೋಗಳು ಸುಳ್ಳು: ಖುಷ್ಬು ಸುಂದರ್

    ಇದುವರೆಗೂ ಮೆಸೇಜ್ ಬಂದರಷ್ಟೇ ಬೆಂಗಳೂರು ಒನ್, ಗ್ರಾಮ ಒನ್‌ಗಳಲ್ಲಿ ಅರ್ಜಿ ಸಲ್ಲಿಸಬೇಕಿತ್ತು. ಆದರೆ SMS ಲಭಿಸದೇ ಇದ್ದರೂ ದಾಖಲಾತಿಯೊಂದಿಗೆ ನೇರವಾಗಿ ಹೋಗಿ ಅರ್ಜಿ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಸಚಿವಾಲಯ ತಿಳಿಸಿದೆ.

    ಈ ನಡುವೆ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಳ್ಳಲು ಕೆಲವು ಕೇಂದ್ರಗಳಲ್ಲಿ ಹಣ ಪಡೆಯುತ್ತಿದ್ದ ಬಗ್ಗೆ ದೂರು ಬಂದಿತ್ತು. ಗೃಹಲಕ್ಷ್ಮಿ ನೋಂದಣಿಗೆ ಹಣ ಪಡೆದರೆ ಅಂತಹವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವ ಎಚ್ಚರಿಕೆಯನ್ನು ಸರ್ಕಾರ ನೀಡಿದೆ. ಇದನ್ನೂ ಓದಿ: ಶಿಕ್ಷಣ ಸಚಿವರ ವಿರುದ್ಧ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರ ಪ್ರತಿಭಟನೆ

    ನೋಂದಣಿಗೆ ಹಣ ಪಡೆದಲ್ಲಿ ಸಮೀಪದ ಪೊಲೀಸ್ ಠಾಣೆ ಅಥವಾ 112 ಸಂಖ್ಯೆಗೆ ಕರೆ ಮಾಡಿ ದೂರು ನೀಡುವಂತೆ ಇಲಾಖೆಯಿಂದ ಜನರಲ್ಲಿ ಮನವಿ ಮಾಡಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]