Tag: Karnataka govt

  • ರಾಜ್ಯದಲ್ಲಿ ಆರೋಗ್ಯ ಕವಚ 108 ಅನುಷ್ಠಾನಕ್ಕೆ ತಾಂತ್ರಿಕ ಸಮಿತಿ ರಚನೆ – ಅಂಬುಲೆನ್ಸ್‌ ಬಿಕ್ಕಟ್ಟಿಗೆ ಬೀಳುತ್ತೆ ಬ್ರೇಕ್‌

    ರಾಜ್ಯದಲ್ಲಿ ಆರೋಗ್ಯ ಕವಚ 108 ಅನುಷ್ಠಾನಕ್ಕೆ ತಾಂತ್ರಿಕ ಸಮಿತಿ ರಚನೆ – ಅಂಬುಲೆನ್ಸ್‌ ಬಿಕ್ಕಟ್ಟಿಗೆ ಬೀಳುತ್ತೆ ಬ್ರೇಕ್‌

    – GVK ಅಂಬುಲೆನ್ಸ್‌ ಸೇವೆಗೆ ಬಿಗ್ ಶಾಕ್

    ಬೆಂಗಳೂರು: ರಾಜ್ಯದಲ್ಲಿ ಉತ್ತಮ ಆರೋಗ್ಯ ಸೇವೆ ಒದಗಿಸಲು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ (Dinesh Gundu Rao) ಮುಂದಾಗಿದ್ದಾರೆ. ಅಂಬುಲೆನ್ಸ್‌ (Ambulance) ಬಿಕ್ಕಟ್ಟಿಗೆ ಬ್ರೇಕ್‌ ಹಾಕಲು ಮುಂದಾಗಿರುವ ಆರೋಗ್ಯ ಇಲಾಖೆಯು (Heath Department) ಆರೋಗ್ಯ ಕವಚ 108 ಅನುಷ್ಠಾನಕ್ಕೆ ತಾಂತ್ರಿಕ ಸಮಿತಿ ರಚಿಸಿದೆ.

    108 ಆರೋಗ್ಯ ಕವಚ, 104 ಆರೋಗ್ಯ ಸಹಾಯವಾಣಿ ಯೋಜನೆಗಳ ಉನ್ನತ್ತೀಕರಣ ಹಾಗೂ ಮಾರ್ಗದರ್ಶನಕ್ಕೆ ಸಮಿತಿ ರಚಿಸಲಾಗಿದೆ. ನಿಮ್ಹಾನ್ಸ್ ಪ್ರಭಾರ ನಿರ್ದೇಶಕರು ಹಾಗೂ ಐಐಐಟಿ ನಿರ್ದೇಶಕ ಡಾ.ಜಿ. ಗುರುರಾಜ್ ಅವರ ಅಧ್ಯಕ್ಷತೆಯಲ್ಲಿ ತಾಂತ್ರಿಕ ಸಮಿತಿ ರಚನೆ ಮಾಡಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್ ವಿರುದ್ಧ ಬಿಜೆಪಿ ಜಿಲ್ಲಾವಾರು ಪ್ರತಿಭಟನೆ – ಸರ್ಕಾರದ ಧೋರಣೆಗೆ ತೀವ್ರ ಖಂಡನೆ

    ಅಲ್ಲದೇ, ಆರೋಗ್ಯ ಸೇವೆಗಳ ಟೆಂಡರ್ ನ್ಯೂನತೆ ಲೋಪಗಳ ಅಧ್ಯಯನಕ್ಕೆ ಸರ್ಕಾರ ಮುಂದಾಗಿದೆ. ಟೆಂಡರ್ ನ್ಯೂನತೆ ಲೋಪಗಳ ಅಧ್ಯಯನ ನಡೆಸಲು ಹಾಗೂ ಸಲಹೆ ನೀಡಲು ತಜ್ಞರ ಸಲಹಾ ಸಮಿತಿ ರಚನೆ ಮಾಡಲಾಗಿದೆ. ಆ ಮೂಲಕ GVK ಅಂಬುಲೆನ್ಸ್ ಸೇವೆಗೆ ಬಿಗ್ ಶಾಕ್ ನೀಡಿದೆ.

    ಆರೋಗ್ಯ ಇಲಾಖೆಯ ಮೇಜರ್ ಸರ್ಜರಿಗೆ ಮುಂದಾಗಿರುವ ಸರ್ಕಾರ, ಹಳೆಯ ಸರ್ಕಾರದ GVK ಟೆಂಡರ್‌ಗೆ ಕೊಕ್ ಕೊಟ್ಟಿದೆ. ಆ ಮೂಲಕ ‘108’ ಅಂಬುಲೆನ್ಸ್ ಸೇವೆಯಲ್ಲಿ ಮಹತ್ವದ ಬದಲಾವಣೆಗೆ ಮುಂದಾಗಿದೆ. GVK ಸಂಸ್ಥೆಯ ವಿರುದ್ಧ ಸಾಲು ಸಾಲು ಆರೋಪ ಹಾಗೂ ದೂರು ಕೇಳಿಬಂದ ಹಿನ್ನೆಲೆ ಸರ್ಕಾರ ಜಿವಿಕೆ ಟೆಂಡರ್‌ಗೆ ಕೊಕ್ ಕೊಟ್ಟಿದೆ. ಇದನ್ನೂ ಓದಿ: ಪಿಎಸ್‍ಐ ಹಗರಣ ನ್ಯಾಯಾಂಗ ತನಿಖೆ ಕಾಂಗ್ರೆಸ್‍ನ ದ್ವೇಷದ ರಾಜಕಾರಣ: ಬೊಮ್ಮಾಯಿ

    ಕಳೆದ ಮೂರು ತಿಂಗಳ ಹಿಂದೆ ಆರೋಗ್ಯ ಕವಚ ಅಡಿಯಲ್ಲಿನ ‘108’ ಅಂಬುಲೆನ್ಸ್ ಸೇವೆಗೆ ಟೆಂಡರ್ ಕರೆಯಲಾಗಿತ್ತು. ಈ ಟೆಂಡರ್‌ನಲ್ಲಿಯೂ ಜಿವಿಕೆ ತೆರೆ ಹಿಂದಿನಿಂದ ಭಾಗವಹಿಸಿತ್ತು. ಆದರೆ ಈಗ ಟೆಂಡರ್ ಪ್ರಕ್ರಿಯೆಯನ್ನು ಸರ್ಕಾರ ಕೈಬಿಟ್ಟಿದೆ. ಟೆಂಡರ್ ಪ್ರಕ್ರಿಯೆ ಖರೀದಿಯಲ್ಲಿನ ವಿಧಾನ, ಟೆಂಡರ್ ಪ್ಲೋಟಿಂಗ್‌ನಲ್ಲಿನ ನ್ಯೂನತೆ, ಆಕ್ಷೇಪಣೆಗಳು, ತಾಂತ್ರಿಕ ದೋಷ ಪರಿಶೀಲಿಸಿ ಉತ್ತಮ ಸೇವೆ ನೀಡಲು ಈ ಸಮಿತಿ ರಚಿಸಿದೆ.

    ಉತ್ತಮ ಆರೋಗ್ಯ ಸೇವೆಗೆ ಯಾವ ರೀತಿಯ ಸೌಲಭ್ಯ? ಏನೆಲ್ಲ ತಂತ್ರಜ್ಞಾನ ಇರಬೇಕು? ಯಾವೆಲ್ಲ ಮಾರ್ಗಸೂಚಿ ಸೌಲಭ್ಯ ಅಳವಡಿಸಿಕೊಂಡಿರಬೇಕು? ಈ ಎಲ್ಲ ಮಾನದಂಡಗಳ ಆಧಾರದ ಮೇಲೆ ಸಲಹೆ ಹಾಗೂ ವರದಿ ನೀಡುವ ಕಾರ್ಯವನ್ನು ತಜ್ಞರ ಸಲಹಾ ಸಮಿತಿ ಮಾಡಲಿದೆ. ಐಐಐಟಿ ನಿರ್ದೇಶಕರು, ನಿಮ್ಹಾನ್ಸ್ ನಿರ್ದೇಶಕರು, ವಿಟಿಯು ಮಾಜಿ ಕುಲಪತಿಗಳು, ಕಾರ್ಮಿಕ ಇಲಾಖೆಯ ಆಯುಕ್ತರು, ಇಂಡಿಯನ್ ಇನ್‌ಸ್ಟಿಟ್ಯೂಟ್‌ ಆಫ್ ಸೈನ್ಸ್ (IISC ) ತಜ್ಞರನ್ನ ಸಮಿತಿ ಒಳಗೊಂಡಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಆಲ್ಕೋಹಾಲಾದರೇನು? ಹಾಲಾದರೇನು? ಖಜಾನೆ ತುಂಬಬೇಕಷ್ಟೇ – ಬೆಲೆ ಏರಿಕೆ ವಿರುದ್ಧ ಹೆಚ್‌ಡಿಕೆ ವಾಗ್ದಾಳಿ

    ಆಲ್ಕೋಹಾಲಾದರೇನು? ಹಾಲಾದರೇನು? ಖಜಾನೆ ತುಂಬಬೇಕಷ್ಟೇ – ಬೆಲೆ ಏರಿಕೆ ವಿರುದ್ಧ ಹೆಚ್‌ಡಿಕೆ ವಾಗ್ದಾಳಿ

    ಬೆಂಗಳೂರು: ಆಲ್ಕೋಹಾಲಾದರೇನು? ಹಾಲಾದರೇನು? ಖಜಾನೆ ತುಂಬಬೇಕಷ್ಟೇ. ಈಗ ಜನರ ಬದುಕೇ ಹಾಲಾಹಲವಾಗಿದೆ ಎಂದು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ (H.D. Kumaraswamy) ಕಿಡಿಕಾರಿದ್ದಾರೆ.

    ಟ್ವೀಟ್‌ ಮೂಲಕ ಬೆಲೆ ಏರಿಕೆ ಪ್ರಶ್ನಿಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಹೆಚ್‌ಡಿಕೆ, ಚುನಾವಣೆ ಪ್ರಣಾಳಿಕೆಯಲ್ಲಿ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ ಭರವಸೆ ಕೊಟ್ಟಿದ್ದವರು ಎರಡೇ ತಿಂಗಳಲ್ಲಿ ಅದನ್ನು ಮರೆತೇ ಹೋಗಿದ್ದಾರೆ. ಹಸುಗಳ ಹಿಂಡಿ, ಬೂಸಾ ಬೆಲೆ ಇಳಿಕೆಗೂ ಯಾವ ಗ್ಯಾರಂಟಿಯೂ ಇಲ್ಲ ಎಂದು ಚಾಟಿ ಬೀಸಿದ್ದಾರೆ. ಇದನ್ನೂ ಓದಿ: ಆ.1 ರಿಂದ ಹಾಲಿನ ದರ 3 ರೂ. ಹೆಚ್ಚಳ- ಯಾವುದಕ್ಕೆ ಎಷ್ಟು?

    ಟ್ವೀಟ್‌ನಲ್ಲಿ ಏನಿದೆ?
    ಆರಂಭದಲ್ಲಿಯೇ ವಿದ್ಯುತ್ ಶಾಕ್ ಕೊಟ್ಟಿದ್ದ ಸರ್ಕಾರ, ಗೃಹಜ್ಯೋತಿಯನ್ನು ಜನರ ಪಾಲಿಗೆ ಸುಡುಜ್ಯೋತಿ ಮಾಡಿತ್ತು. ಏರಿದ ಬೆಲೆಗಳನ್ನು ಕೆಳಗಿಳಿಸಲು ಕೈಲಾಗದ ಈ ಸರ್ಕಾರ, ವಿಧಾನ ಕಲಾಪ ಮುಗಿಯುತ್ತಿದ್ದಂತೆಯೇ ಜನತೆಗೆ ಹೊಸದಾಗಿ ಬೆಲೆ ಏರಿಕೆ ಗ್ಯಾರಂಟಿ, ಬೆಲೆಭಾಗ್ಯವನ್ನು ಕರುಣಿಸಿ ಕೈತೊಳೆದುಕೊಂಡಿದೆ.

    ಆಲ್ಕೊಹಾಲಿನ ಬೆಲೆ ಏರಿಸಿದ ನಂತರ ಕಾಂಗ್ರೆಸ್‌ ಸರ್ಕಾರ ಹಾಲಿನ ಬೆಲೆಯನ್ನೂ ಲೀಟರಿಗೆ ₹3 ಹೆಚ್ಚಿಸಿ ಶ್ರಮಜೀವಿಗಳ ಕಿಸೆಗೆ ಕನ್ನ ಕೊರೆದಿದೆ. ಒಂದು ಕೈಯ್ಯಲ್ಲಿ ಕೊಟ್ಟು, ಇನ್ನೊಂದು ಕೈಯ್ಯಲ್ಲಿ ಕಸಿದುಕೊಳ್ಳುತ್ತಿದೆ. ಸ್ವತಃ ತಾವೇ ಕಿವಿಯಲ್ಲಿ ಹೂವಿಟ್ಟುಕೊಂಡಿದ್ದ ಕಾಂಗ್ರೆಸ್ಸಿಗರು, ಜನರ ತಲೆಯ ಮೇಲೆ ಫ್ಲವರ್ ಪಾಟ್ ಇಡುತ್ತಿದ್ದಾರೆ.

    ಸದನ ಸಮಿತಿಯ ಕೊನೆ ಪ್ಯಾರಾ ಓದಿಕೊಳ್ಳಿ. ಸಮಿತಿ ಸಿಬಿಐ ತನಿಖೆಗೆ ಶಿಫಾರಸು ಮಾಡಿದೆ. ನಿಮಗೆ ಧೈರ್ಯವಿದ್ದರೆ ಸಿಬಿಐ ತನಿಖೆ ನಡೆಸಿ, ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸಿ. ನೂರಾ ಮೂವತ್ತೈದು ಸೀಟುಗಳ ಬಹುಮತ ಸರ್ಕಾರ ನಿಮ್ಮದಲ್ಲವೇ? ನುಡಿದಂತೆ ನಡೆಯುವ ಸರ್ಕಾರ ನಿಮ್ಮದಲ್ಲವೇ? ನೀವು ನುಡಿದಂತೆ ನಡೆಯುವ ಸಮಯ ಬಂದಿದೆ. ನಡೆದು ತೋರಿಸುವಿರಾ? ಇದನ್ನೂ ಓದಿ: ಮಹಾರಾಷ್ಟ್ರ ಭೂಕುಸಿತದಲ್ಲಿ ಪೋಷಕರನ್ನು ಕಳೆದುಕೊಂಡ ಮಕ್ಕಳನ್ನು ದತ್ತು ಪಡೆದ ಸಿಎಂ

    ತಾವು ಈಗ ಫುಲ್ ಬ್ಯುಸಿ, ನಾನು ಬಲ್ಲೆ. ಆದರೂ ಕೊಂಚ ಬಿಡುವು ಮಾಡಿಕೊಳ್ಳಿ. ಸದನ ಸಮಿತಿ ವರದಿಯ ಮೇಲೆ ಕಣ್ಣಾಡಿಸಿ. ದೇವೇಗೌಡರು ಸಿಎಂ ಆಗಿದ್ದ 1995ರ ಅಕ್ಟೋಬರ್, ನವೆಂಬರಿನಲ್ಲಿ ಈ ಯೋಜನೆಗೆ ಸಹಿ ಹಾಕುವ ವೇಳೆ ಇಂದಿನ ಮುಖ್ಯಮಂತ್ರಿಗಳೂ ಅಂದು ಹಣಕಾಸು ಸಚಿವರಾಗಿದ್ದರು. ಅವರಿಗೂ ಸತ್ಯ ಗೊತ್ತಿರುತ್ತದೆ. ಒಮ್ಮೆ ವಿಚಾರಿಸಲು ನಿಮಗೇನು ಸಮಸ್ಯೆ?

    ನೈಸ್ ಯೋಜನೆಗೆ ಹೆಚ್‌.ಡಿ. ದೇವೇಗೌಡ ಅವರೇ ಸಹಿ ಹಾಕಿದ್ದು ಎಂದು ಹೇಳುವ ಮೂಲಕ ತಾವು ಎಸಗಿದ ಅಕ್ರಮಕ್ಕೆ ತೇಪೆ ಹಚ್ಚಲು ಹೊರಟಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು. ಆದರೆ ಅದೇ ದೇವೇಗೌಡರ ಕಾಲದಲ್ಲಿ ಆಗಿದ್ದ ಮೂಲ ಒಪ್ಪಂದದ ಬಗ್ಗೆ ಅವರದ್ದು ಧ್ಯಾನಸ್ಥ ಮೌನ. ಯಾಕೆ ಎಂದು ಪ್ರಶ್ನಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪಿಎಸ್‌ಐ ನೇಮಕಾತಿ ಹಗರಣ – ನ್ಯಾಯಾಂಗ ತನಿಖೆಗೆ ಸರ್ಕಾರ ಆದೇಶ

    ಪಿಎಸ್‌ಐ ನೇಮಕಾತಿ ಹಗರಣ – ನ್ಯಾಯಾಂಗ ತನಿಖೆಗೆ ಸರ್ಕಾರ ಆದೇಶ

    ಬೆಂಗಳೂರು: ಕರ್ನಾಟಕ ಪಿಎಸ್‌ಐ ನೇಮಕಾತಿ (PSI Scam) ಹಗರಣ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಿ ರಾಜ್ಯ ಸರ್ಕಾರ (Karnataka Govt) ಆದೇಶ ಹೊರಡಿಸಿದೆ.

    ಅಕ್ರಮವನ್ನು ಗಂಭೀರವಾಗಿ ಪರಿಗಣಿಸಿದ್ದ ಸರ್ಕಾರ ನಿವೃತ್ತ ನ್ಯಾ. ವೀರಪ್ಪ ನೇತೃತ್ವದಲ್ಲಿ ತನಿಖೆಗೆ ಆದೇಶಿಸಲಾಗಿದೆ. ಪೊಲೀಸ್‌ ಇಲಾಖೆ ಹಾಗೂ ಸಿಐಡಿ ತನಿಖೆಗೆ ಸಹಕಾರ ನೀಡಬೇಕು ಎಂದು ಸೂಚಿಸಿದೆ. ಇದನ್ನೂ ಓದಿ: ಮಾಜಿ ಸಿಎಂ ಬಿಎಸ್‌ವೈಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ

    ಪ್ರಕರಣ ಏನು?
    2021ರ ಅಕ್ಟೋಬರ್‌ 3 ರಂದು ನಡೆದಿದ್ದ, 545 ಪಿಎಸ್‌ಐ ಹುದ್ದೆಗಳ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಯಲ್ಲಿ ವ್ಯಾಪಕ ಅಕ್ರಮ ನಡೆದಿತ್ತು. ಈ ಬಗ್ಗೆ ದೂರು ಕೇಳಿ ಬಂದಿದ್ದರಿಂದ ಸಿಐಡಿ ಇದರ ತನಿಖೆ ನಡೆಸಿ ಆರೋಪಿಗಳನ್ನು ದಸ್ತಗಿರಿ ಮಾಡಿ ಮೊಕದ್ದಮೆ ದಾಖಲಿಸಿತ್ತು.

    ಪ್ರಕರಣಕ್ಕೆ ಸಂಬಂಧಿಸಿದಂತೆ 52 ಆರೋಪಿಗಳು ಪರೀಕ್ಷೆಯಲ್ಲಿ ಅಕ್ರಮ ಎಸಗಿರುವ ಬಗ್ಗೆ ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಸಲಾಗಿತ್ತು. ಸ್ಪಷ್ಟನೆ ಪಡೆದ ನಂತರ ಈ ಎಲ್ಲ 52 ಅಭ್ಯರ್ಥಿಗಳನ್ನು ಪೊಲೀಸ್‌ ಇಲಾಖೆಯ ಯಾವುದೇ ನೇಮಕಾತಿ ಪರೀಕ್ಷೆಗಳಿಂದ ಶಾಶ್ವತವಾಗಿ ಡಿಬಾರ್‌ ಮಾಡಲಾಗಿದೆ. ಇದನ್ನೂ ಓದಿ: ವನ್ಯಜೀವಿಯಿಂದ ಜೀವಹಾನಿ – ಸ್ಥಳ ಭೇಟಿಗೆ ಈಶ್ವರ್ ಖಂಡ್ರೆ ಸೂಚನೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಾಹನ ಸವಾರರಿಗೆ ಮತ್ತೆ ಗುಡ್‌ ನ್ಯೂಸ್ – ಟ್ರಾಫಿಕ್ ಫೈನ್ ಡಿಸ್ಕೌಂಟ್ ಅವಧಿ ವಿಸ್ತರಿಸಿದ ಸರ್ಕಾರ

    ವಾಹನ ಸವಾರರಿಗೆ ಮತ್ತೆ ಗುಡ್‌ ನ್ಯೂಸ್ – ಟ್ರಾಫಿಕ್ ಫೈನ್ ಡಿಸ್ಕೌಂಟ್ ಅವಧಿ ವಿಸ್ತರಿಸಿದ ಸರ್ಕಾರ

    ಬೆಂಗಳೂರು: ರಾಜ್ಯ ಸರ್ಕಾರದಿಂದ ಮತ್ತೊಮ್ಮೆ ಟ್ರಾಫಿಕ್ ಫೈನ್ ಡಿಸ್ಕೌಂಟ್ (Traffic Fine) ಅವಧಿಯನ್ನ ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ. ಇ-ಚಲನ್‌ನಲ್ಲಿ ದಾಖಲಾಗಿರೊ ‍ಟ್ರಾಫಿಕ್ ಫೈನ್‌ಗೆ ಮತ್ತೆ 50% ಡಿಸ್ಕೌಂಟ್ ಘೋಷಣೆ ಮಾಡಲಾಗಿದ್ದು, ಸೆ.9 ರವರೆಗೆ ರಿಯಾಯಿತಿ ಅವಧಿ ಇರಲಿದೆ.

    ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ಪಾವತಿ ಮೇಲೆ ಘೋಷಿಸಿದ್ದ 50% ರಿಯಾಯಿತಿ ಸೌಲಭ್ಯದ ಅವಕಾಶವನ್ನು ಸರ್ಕಾರ ವಾಹನ ಸವಾರರಿಗೆ ಮತ್ತೆ ಕಲ್ಪಿಸಿದೆ. ಈ ಹಿಂದೆ ಎರಡು ಬಾರಿ ಟ್ರಾಫಿಕ್ ಫೈನ್ ಡಿಸ್ಕೌಂಟ್ ನೀಡಿದ್ದ ಸರ್ಕಾರಕ್ಕೆ ಬಾಕಿ ಉಳಿದಿದ್ದ ನೂರಾರು ಕೋಟಿ ಫೈನ್ ಬೊಕ್ಕಸ ಸೇರಿತ್ತು. ಇದನ್ನೂ ಓದಿ: Bengaluru Mysuru Expressway- ದ್ವಿಚಕ್ರ, ತ್ರಿಚಕ್ರ ವಾಹನ ನಿಷೇಧಿಸಿ: ಮರಿತಿಬ್ಬೇಗೌಡ

    ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರು, ರಸ್ತೆ ಸುರಕ್ಷತಾ ಕಮಿಷನರ್ ಜೊತೆ ಸಭೆ ನಡೆಸಿ ಟ್ರಾಫಿಕ್ ಫೈನ್ ಡಿಸ್ಕೌಂಟ್‌ಗೆ ಮತ್ತೊಮ್ಮೆ ಸಮಯ ವಿಸ್ತರಿಸುವಂತೆ ಹೇಳಿದ್ದರು. ಕೆಎಸ್‌ಎಲ್‌ಟಿಎ ಆದೇಶದ ಮೇರೆಗೆ ಸರ್ಕಾರ ಮತ್ತೆ ಡಿಸ್ಕೌಂಟ್ ಅವಧಿ ವಿಸ್ತರಣೆ ಮಾಡಿದೆ. ದಂಡ ಬಾಕಿ ಉಳಿಸಿಕೊಂಡಿರುವ ಸವಾರರು ಇದರ ಸದುಪಯೋಗಪಡಿಸಿಕೊಳ್ಳಬಹುದು ಎಂದು ತಿಳಿಸಿದೆ.

    ಕಾನೂನು ಸೇವೆಗಳ ಪ್ರಾಧಿಕಾರದ ಪ್ರಸ್ತಾವಕ್ಕೆ ಒಪ್ಪಿದ್ದ ರಾಜ್ಯ ಸರ್ಕಾರ, ರಿಯಾಯಿತಿ ಘೋಷಣೆ ಮಾಡಿತ್ತು. ಇದಕ್ಕೆ ಜನರಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ರಿಯಾಯಿತಿ ಸೌಲಭ್ಯದಿಂದಾಗಿ ದಂಡ ಪಾವತಿಸುವವರ ಸಂಖ್ಯೆ ಏರಿಕೆ ಆಗಿತ್ತು. ನೂರಾರು ಕೋಟಿ ಬೊಕ್ಕಸ ಸೇರಿತ್ತು. ಹೀಗಾಗಿ ಮತ್ತೆ ರಿಯಾಯಿತಿ ಸೌಲಭ್ಯವನ್ನು ರಾಜ್ಯ ಸರ್ಕಾರ ಕಲ್ಪಿಸಿದೆ. ಇದನ್ನೂ ಓದಿ: ಗೋಹತ್ಯೆ ನಿಷೇಧ ಕಾಯ್ದೆ – ಪರಿಷತ್‍ನಲ್ಲಿ ಕಾಂಗ್ರೆಸ್, ಬಿಜೆಪಿ ಜಟಾಪಟಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗ್ಯಾರಂಟಿ ಎಫೆಕ್ಟ್‌; ಮಕ್ಕಳ ಶೂ, ಸಾಕ್ಸ್‌ ಖರೀದಿ ಹಣಕ್ಕೂ ಕಾಂಗ್ರೆಸ್‌ ಸರ್ಕಾರ ಕತ್ತರಿ

    ಗ್ಯಾರಂಟಿ ಎಫೆಕ್ಟ್‌; ಮಕ್ಕಳ ಶೂ, ಸಾಕ್ಸ್‌ ಖರೀದಿ ಹಣಕ್ಕೂ ಕಾಂಗ್ರೆಸ್‌ ಸರ್ಕಾರ ಕತ್ತರಿ

    ಬೆಂಗಳೂರು: ಗ್ಯಾರಂಟಿ (Congress Guarantee) ಹೊಡೆತದ ಕಾರಣ ಕಾಂಗ್ರೆಸ್‌ ಸರ್ಕಾರ (Karnataka Govt) ಶಾಲಾ ಮಕ್ಕಳ ಹಣಕ್ಕೂ ಕತ್ತರಿ ಹಾಕಿದೆ. ಶೂ, ಸಾಕ್ಸ್‌ (Shoes And Socks) ಖರೀದಿ ಹಣವನ್ನು ರಾಜ್ಯ ಸರ್ಕಾರ ಕಡಿತ ಮಾಡಿ ಆದೇಶ ಹೊರಡಿಸಿದೆ.

    ಸರ್ಕಾರ ನೀಡಬೇಕಿದ್ದ ಒಟ್ಟು ಅನುದಾನದಲ್ಲಿ ಬರೋಬ್ಬರಿ 7 ಕೋಟಿ ಹಣ ಕಡಿತ ಮಾಡಿ ಶೂ, ಸಾಕ್ಸ್ ಖರೀದಿಗೆ ಆದೇಶ ಹೊರಡಿಸಿದೆ. 2022-23ನೇ ಸಾಲಿನಲ್ಲಿ ಬಿಜೆಪಿ ಸರ್ಕಾರ 1 ರಿಂದ 10 ನೇ ತರಗತಿ ಮಕ್ಕಳಿಗೆ 1 ಜೊತೆ ಶೂ, ಎರಡು ಜೊತೆ ಸಾಕ್ಸ್ ಖರೀದಿಗೆ 132 ಕೋಟಿ ಹಣ ಬಿಡುಗಡೆ ಮಾಡಿತ್ತು. 2023-24 ನೇ ಸಾಲಿಗೆ 125 ಕೋಟಿ ಹಣ ಬಿಡುಗಡೆ ಮಾಡಲಾಗಿದೆ. ಅಂದರೆ 7 ಕೋಟಿ ಹಣ ಕಡಿತ ಮಾಡಿ ಶಾಲೆಗಳಿಗೆ ಶೂ, ಸಾಕ್ಸ್ ಖರೀದಿ ಮಾಡುವಂತೆ ಸುತ್ತೋಲೆ ಹೊರಡಿಸಿದೆ. ಇದನ್ನೂ ಓದಿ: ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್

    ಬಿಜೆಪಿ ಅವಧಿಯಲ್ಲಿ ಶೂಗೆ ನಿಗದಿ ಮಾಡಿದ್ದ ದರವನ್ನೇ ಈ ವರ್ಷವೂ ಸರ್ಕಾರ ಫಿಕ್ಸ್ ಮಾಡಿದೆ. ಕಳೆದ ವರ್ಷದ ರೇಟ್‌ನಲ್ಲಿಯೇ ಶೂ, ಸಾಕ್ಸ್ ಖರೀದಿ ಮಾಡುವಂತೆ ಶಾಲೆಗಳಿಗೆ ಸೂಚನೆ ನೀಡಿದೆ. 2019-20ನೇ ಸಾಲಿನಲ್ಲಿ ಇದ್ದ ದರದಲ್ಲೇ 2023-24ನೇ ಸಾಲಿಗೂ ಶೂ ಖರೀದಿಗೆ ಸರ್ಕಾರದ ಆದೇಶಿಸಿದೆ.

    ಯಾವ ತರಗತಿಗೆ ಎಷ್ಟು ದರದ ಶೂ?
    1-5ನೇ ತರಗತಿ – 265 ರೂ.
    6-8 ನೇ ತರಗತಿ- 295 ರೂ.
    9-10 ನೇ ತರಗತಿ- 325 ರೂ.ನಲ್ಲಿ ಖರೀದಿ ಮಾಡಬೇಕು. ಇದನ್ನೂ ಓದಿ: ರಸ್ತೆಬದಿ ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಗೆ ಡೆಲಿವರಿ ಮಾಡಿಸಿದ ಸರ್ಕಾರಿ ವೈದ್ಯ

    ಕಡಿಮೆ ಹಣದಲ್ಲಿ ಗುಣಮಟ್ಟದ ಶೂ ಕೊಡಬೇಕು ಎಂದು ಎಲ್ಲಾ ಶಾಲೆಗಳಿಗೂ ಸರ್ಕಾರ ಸೂಚನೆ ನೀಡಿದೆ. ಸರ್ಕಾರ ನಿಗದಿ ಮಾಡಿರುವ ಹಣದಲ್ಲಿ ಹೆಸರಾಂತ ಕಂಪನಿಗಳ ಶೂ ಕೊಡಬೇಕು ಎಂದು ಅನುದಾನ ಕಡಿತ ಮಾಡಿ ತಿಳಿಸಿದೆ. ಶೂ ಖರೀದಿಗೆ ಹಣ ಸಾಕಾಗದೇ ಹೋದರೆ ಏನು ಮಾಡಬೇಕು ಎಂಬ ಬಗ್ಗೆಯೂ ಸರ್ಕಾರ ಸಲಹೆ ನೀಡಿದೆ.

    ಶಿಕ್ಷಕರು ಹಾಗೂ ಶಾಲಾ ಆಡಳಿತ ಮಂಡಳಿಗಳು ಅನಿವಾರ್ಯವಾಗಿ ಸಂಘ ಸಂಸ್ಥೆಗಳು, ದಾನಿಗಳ ಮೊರೆ ಹೋಗಬೇಕಾಗಿದೆ. ಸರ್ಕಾರದ ಆದೇಶದಿಂದ ಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು ಕಂಗಾಲಾಗಿದ್ದಾರೆ. ಇದನ್ನೂ ಓದಿ: ನನ್ನನ್ನು ಎದುರು ಹಾಕೊಂಡು ಯಾರೂ ಗೆಲ್ಲೋಕ್ಕಾಗಲ್ಲ- ಕೆ.ಎನ್.ರಾಜಣ್ಣ ದರ್ಪದ ಮಾತು ವೈರಲ್

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]

  • ಬಿಟ್ ಕಾಯಿನ್ ಹಗರಣ ಮರು ತನಿಖೆಗೆ ಇನ್ನೆರಡು ದಿನದಲ್ಲಿ ಆದೇಶ

    ಬಿಟ್ ಕಾಯಿನ್ ಹಗರಣ ಮರು ತನಿಖೆಗೆ ಇನ್ನೆರಡು ದಿನದಲ್ಲಿ ಆದೇಶ

    ಬೆಂಗಳೂರು: ಬಿಟ್ ಕಾಯಿನ್ (Bit Coin) ಹಗರಣಕ್ಕೆ ಮರುಜೀವ ಸಿಕ್ಕಂತಾಗಿದೆ. ಅಧಿಕೃತವಾಗಿ ಚಾಲನೆಗೆ ಬಂದಿದ್ದು, ಮರು ತನಿಖೆ ಬಗ್ಗೆ ಸರ್ಕಾರಕ್ಕೆ ಪತ್ರ ಬರೆದ ಡಿಜಿ&ಐಜಿ ಅಲೋಕ್ ಮೋಹನ್ ಪ್ರಕರಣದ ಸಾರಾಂಶ ತಿಳಿಸಿದ್ದಾರೆ. ಈ ಮೂಲಕ ಪ್ರಕರಣದ ಮರು ತನಿಖೆಗೆ ಮುಂದಾಗಿದೆ ಕಾಂಗ್ರೆಸ್ (Congress) ಸರ್ಕಾರ.

    ಪ್ರಕರಣದ ಮೊದಲ ಹಂತವಾಗಿ ನಗರ ಪೊಲೀಸ್ ಆಯುಕ್ತ ದಯಾನಂದ್ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದರು. ಬಳಿಕ ಅಲೋಕ್ ಮೋಹನ್ ಪತ್ರದ ಮೂಲಕ ಸರ್ಕಾರಕ್ಕೆ ಮಾಹಿತಿ ನೀಡಿದ್ದಾರೆ. ಇದಾದ ಬಳಿಕ ಸರ್ಕಾರ ನಿರ್ಧಾರ ತೆಗೆದುಕೊಳ್ಳಲಿದೆ. ಯಾವ ತನಿಖಾ ಸಂಸ್ಥೆಗೆ ತನಿಖೆಗೆ ನೀಡಬೇಕೆಂದು ತೀರ್ಮಾನ ಮಾಡಲಿರೋ ಸರ್ಕಾರ ಸಿಐಡಿಯಿಂದಲಾ? ಎಸ್‌ಐಟಿ ಇಂದಲಾ ತನಿಖೆ? ಎಂಬುದನ್ನು ಇನ್ನೆರಡು ದಿನಗಳಲ್ಲಿ ಸ್ಪಷ್ಟಪಡಿಸಲಿದೆ‌‌‌. ಇದನ್ನೂ ಓದಿ: ಬಿಜೆಪಿಯಲ್ಲಿ ತೀವ್ರಗೊಂಡ ಒಳಜಗಳ- ವೇದಿಕೆಯಲ್ಲಿಯೇ ಯತ್ನಾಳ್, ನಿರಾಣಿ ಪರಸ್ಪರ ಟಾಂಗ್

    ಕಾಟನ್ ಪೇಟೆಯಲ್ಲಿ ದಾಖಲಾಗಿದ್ದ ಬಿಟ್ ಕಾಯಿನ್ ಪ್ರಕರಣದಲ್ಲಿ ಈಗಾಗಲೇ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಲಾಗಿದೆ. ಮತ್ತೆ ತನಿಖೆ ಮಾಡಿಸಲು ಮುಂದಾದ ಸರ್ಕಾರ, ಬಿಜೆಪಿ ಕಾಲದ ಪ್ರಕರಣಕ್ಕೆ ಮರು ಜೀವದ ತೀರ್ಮಾನ ಮಾಡಿದೆ.

    ಬಿಟ್‌ ಕಾಯಿನ್‌ ಹಗರಣ ರಾಜ್ಯದಲ್ಲಿ ಕೋಲಾಹಲ ಎಬ್ಬಿಸಿತ್ತು. ಇದರಲ್ಲಿ ಕೆಲವು ಪ್ರಭಾವಿ ರಾಜಕಾರಣಿಗಳು ಹಾಗೂ ಅಧಿಕಾರಿಗಳು ಕೈ ಜೋಡಿಸಿದ್ದಾರೆ ಎಂಬ ವದಂತಿ ದಟ್ಟವಾಗಿತ್ತು. ಈ ಹಗರಣದ ಸೂತ್ರಧಾರ ಎನ್ನಲಾಗಿದ್ದ ಅಂತಾರಾಷ್ಟ್ರೀಯ ಹ್ಯಾಕರ್‌ ಶ್ರೀಕೃಷ್ಣ ಅಲಿಯಾಸ್‌ ಶ್ರೀಕಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದರು. ನಂತರ ಬಿಡುಗಡೆ ಮಾಡಿದ್ದರು. ಇದನ್ನೂ ಓದಿ: ಕೋಲಾರದ ರೆಸಾರ್ಟ್‌ನಲ್ಲಿ ಹೈಟೆಕ್ ವೇಶ್ಯಾವಾಟಿಕೆ – 14 ಜನರ ಬಂಧನ, 6 ಮಹಿಳೆಯರ ರಕ್ಷಣೆ

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]

  • ಬಜೆಟ್ ನಲ್ಲಿ ಪುನೀತ್ ರಾಜ್ ಕುಮಾರ್ ಮತ್ತು ಸಂಚಾರಿ ವಿಜಯ್ ಪ್ರಸ್ತಾಪ

    ಬಜೆಟ್ ನಲ್ಲಿ ಪುನೀತ್ ರಾಜ್ ಕುಮಾರ್ ಮತ್ತು ಸಂಚಾರಿ ವಿಜಯ್ ಪ್ರಸ್ತಾಪ

    ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ ಅವರ ಚೊಚ್ಚಲ ಬಜೆಟ್ ನಲ್ಲಿ ಪುನೀತ್ ರಾಜ್ ಕುಮಾರ್ ಮತ್ತು ಸಂಚಾರಿ ವಿಜಯ್ ಅವರನ್ನು ನೆನಪಿಸಿಕೊಳ್ಳಲಾಗಿದೆ. ಈ ಇಬ್ಬರು ಕಲಾವಿದರು ನಿಧನರಾದಾಗ ಸಾರ್ಥಕ ಕೆಲಸಗಳನ್ನು ಮಾಡಿದ್ದಾರೆ. ಹಾಗಾಗಿ ಇವರ ಆ ಸೇವೆಯನ್ನು ಪರಿಗಣಿಸಿ, ಸಾರ್ವಜನಿಕರಿಗೆ ಪ್ರೇರೇಪಿಸುವಂತಹ ಯೋಜನೆಯೊಂದನ್ನು ರೂಪಿಸಲಾಗುತ್ತಿದೆ. ಇದನ್ನೂ ಓದಿ : 125 ಸಿನಿಮಾಗಳಿಂದ 200 ಚಿತ್ರಗಳಿಗೆ ಸಬ್ಸಿಡಿ ಏರಿಕೆ: ಬಜೆಟ್‌ನಲ್ಲಿ ಸಿಎಂ ಬೊಮ್ಮಾಯಿ ಘೋಷಣೆ

    ರಾಷ್ಟ್ರ ಪ್ರಶಸ್ತಿ ವಿಜೇತ ನಟರಾದ ಪುನೀತ್ ರಾಜ್ ಕುಮಾರ್ ನಿಧನರಾದಾಗ ಅವರ ಕಣ್ಣುಗಳನ್ನು ದಾನ ಮಾಡಲಾಯಿತು. ಸಂಚಾರಿ ವಿಜಯ್ ನಿಧನರಾದಾಗ ಅವರ ಅಂಗಾಂಗ ದಾನ ಮಾಡಿದ್ದರು. ಹೀಗಾಗಿ ಮರಣಾನಂತರ ಅಂಗಾಂಗಗಳನ್ನು ದಾನ ಮಾಡುವಂತೆ ಸಾರ್ವಜನಿಕರನ್ನು ಪ್ರೇರೇಪಿಸಲು, ಇದಕ್ಕೆ ಪೂರಕವಾಗಿ ಈಗಾಗಲೇ ಬೆಂಗಳೂರಿನಲ್ಲಿರುವ  Institute of Gastroenterology and Organ Transplant ಸಂಸ್ಥೆಯನ್ನು ಲೋಕಾರ್ಪಣೆ ಮಾಡಿದ್ದು, ಪ್ರಸಕ್ತ ಸಾಲಿನಲ್ಲಿ ನಿಮ್ಹಾನ್ಸ್ ಮೂಲಕ ಅಂಗಾಂಗ ಮರುಪಡೆಯುವಿಕೆ ಕೇಂದ್ರವನ್ನು ಪ್ರಾರಂಭಿಸಲಾಗುವುದು ಎಂದು ಬಜೆಟ್ ನಲ್ಲಿ ಘೋಷಣೆ ಮಾಡಲಾಗಿದೆ. ಇದನ್ನೂ ಓದಿ : ಏಳು ತಿಂಗಳ ಗರ್ಭಿಣಿಗೆ ಇದೆಂಥ ಟಾರ್ಚರ್? : ಶಾಕ್ ನಲ್ಲಿ ನಟಿ ಸಂಜನಾ

    ಅಂಗಾಂಗ ಮರುಪಡೆಯುವಿಕೆಯ ರಾಯಭಾರಿಗಳಂತೆ ಒಂದು ರೀತಿಯಲ್ಲಿ ಪುನೀತ್ ರಾಜ್ ಕುಮಾರ್ ಮತ್ತು ಸಂಚಾರಿ ವಿಜಯ್ ಅವರ ಹೆಸರನ್ನು ಸರಕಾರ ಬಜೆಟ್ ನಲ್ಲಿ ಪ್ರಸ್ತಾಪಿಸಿದೆ.

  • ಬಲಿಪಾಡ್ಯಮಿ ದಿನ ದೇವಾಲಯಗಳಲ್ಲಿ ಗೋಪೂಜೆ ಕಡ್ಡಾಯ: ಧಾರ್ಮಿಕ ದತ್ತಿ ಇಲಾಖೆ

    ಬಲಿಪಾಡ್ಯಮಿ ದಿನ ದೇವಾಲಯಗಳಲ್ಲಿ ಗೋಪೂಜೆ ಕಡ್ಡಾಯ: ಧಾರ್ಮಿಕ ದತ್ತಿ ಇಲಾಖೆ

    ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿರುವ ಎಲ್ಲ ದೇವಾಲಯಗಳಲ್ಲಿ ಬಲಿಪಾಡ್ಯಮಿ ದಿನದಂದು ಗೋಪೂಜೆ ಮಾಡುವುದು ಕಡ್ಡಾಯ ಎಂದು ಧಾರ್ಮಿಕ ದತ್ತಿ ಇಲಾಖೆ ದೇವಾಲಯಗಳಿಗೆ ಸುತ್ತೋಲೆ ಹೊರಡಿಸಿದೆ.

    GOVU

    ಬಲಿಪಾಡ್ಯಮಿ ದಿನ ಸಂಜೆ 5.30ರಿಂದ 6.30ರ ಸಮಯದಲ್ಲಿ ರಾಜ್ಯದ ಎಲ್ಲ ಅಧಿಸೂಚಿತ ದೇವಾಲಯಗಳಲ್ಲಿ ಗೋವುಗಳಿಗೆ ಪೂಜೆ ಸಲ್ಲಿಸಬೇಕು ಎಂದು ಆದೇಶದಲ್ಲಿ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಕೆನಡಾ ರಕ್ಷಣಾ ಸಚಿವರಾಗಿ ಭಾರತ ಮೂಲದ ಅನಿತಾ ಆನಂದ್ ಆಯ್ಕೆ

    ಆ ದಿನ ಗೋವುಗಳನ್ನು ದೇವಾಲಯಕ್ಕೆ ಕರೆತಂದು ಸ್ನಾನ ಮಾಡಿಸಿ, ಅರಿಶಿಣ, ಕುಂಕುಮ, ಹೂಗಳಿಂದ ಅಲಂಕರಿಸಿ ಪೂಜೆ ಸಲ್ಲಿಸಬೇಕು. ನಂತರ ಅಕ್ಕಿ, ಬೆಲ್ಲ, ಬಾಳೆಹಣ್ಣು ಮತ್ತು ಸಿಹಿ ತಿನಿಸುಗಳ ಗೋಗ್ರಾಸಗಳನ್ನು ಹಸುಗಳಿಗೆ ನೀಡಿ ಆರಾಧಿಸಬೇಕು ಎಂದು ತಿಳಿಸಿದೆ. ಈ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಹೇಳಿದೆ.

    GOVU POOJA

    ಅನಾದಿಕಾಲದಿಂದಲೂ ನಮ್ಮ ಪೂರ್ವಿಕರು ಗೋವಿನ ಪೂಜೆ ಮಾಡುತ್ತಿದ್ದರು. ಇದು ನಮ್ಮ ಭಾರತೀಯ ಸಂಸ್ಕೃತಿಯಾಗಿದೆ. ಕರ್ನಾಟಕದಲ್ಲೂ ಹಿಂದಿನಿಂದಲೂ ಗೋಪೂಜೆ ಮಾಡುವ ಪದ್ಧತಿ ಇತ್ತು. ಆದರೆ ಆಧುನಿಕ ಕಾಲದಲ್ಲಿ ನಮ್ಮ ಜನತೆ ಸಂಸ್ಕೃತಿಯನ್ನು ಮರೆಯುತ್ತಿದ್ದಾರೆ. ಇದನ್ನೂ ಓದಿ: ಟೀಂ ಇಂಡಿಯಾ ಕೋಚ್ ಹುದ್ದೆಗೆ ದ್ರಾವಿಡ್ ಅಧಿಕೃತ ಅರ್ಜಿ ಸಲ್ಲಿಕೆ

    ಬಲಿಪಾಡ್ಯಮಿ ದಿನ ಗೋಪೂಜೆ ಮಾಡುವುದು ಶ್ರೇಷ್ಠ. ಈ ಪದ್ಧತಿಯನ್ನು ನಾಡಿನ ಜನತೆ ಮರೆಯಬಾರದು ಎಂದು ಧಾರ್ಮಿಕ ದತ್ತಿ ಇಲಾಖೆ ಹೊರಡಿಸಿರುವ ಆದೇಶದಲ್ಲಿ ತಿಳಿಸಿದೆ.

  • ಬೇರೆ ಯಾರ ಮಾತಿಗೂ ಕಿವಿಗೊಡಬೇಡಿ, ಮುಷ್ಕರ ಕೈಬಿಡಿ: ಸಚಿವ ಸುಧಾಕರ್

    ಬೇರೆ ಯಾರ ಮಾತಿಗೂ ಕಿವಿಗೊಡಬೇಡಿ, ಮುಷ್ಕರ ಕೈಬಿಡಿ: ಸಚಿವ ಸುಧಾಕರ್

    – ರಾಜ್ಯ ಸರ್ಕಾರ ಬೇಡಿಕೆಗೆ ಸ್ಪಂದಿಸಿರುವ ರೀತಿಯನ್ನು ಗಮನಿಸಿ

    ಬೆಂಗಳೂರು: ಸಾರಿಗೆ ನೌಕರರು ಯಾರದ್ದೋ ಮಾತಿಗೆ ಕಿವಿಗೊಡದೆ ರಾಜ್ಯ ಸರ್ಕಾರವು ಕೈಗೊಂಡಿರುವ ಕ್ರಮಗಳನ್ನು ಗಮನಿಸಬೇಕು. ಮುಷ್ಕರವನ್ನು ಕೈಬಿಡಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ನೌಕರರಿಗೆ ಮನವಿ ಮಾಡಿದ್ದಾರೆ.

    ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರವು ನೌಕರರಿಗಾಗಿ ಕೈಗೊಂಡಿರುವ ಕ್ರಮಗಳನ್ನು ಸಾರ್ವಜನಿಕರು ಕೂಡ ಗಮನಿಸಬೇಕು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ನಮ್ಮ ರಾಜ್ಯ ಸರ್ಕಾರವು ಸಾರಿಗೆ ನೌಕರರ 9 ಬೇಡಿಕೆಗಳಲ್ಲಿ 8 ಬೇಡಿಕೆಗಳನ್ನು ಈಗಾಗಲೇ ಈಡೇರಿಸಿದೆ. ಒಂದು ಬೇಡಿಕೆಯನ್ನು ಪರಿಶೀಲಿಸಲಾಗುತ್ತಿದೆ. ಸರ್ಕಾರ ಈ ರೀತಿ ನೌಕರರಿಗೆ ಸ್ಪಂದಿಸಿರುವುದನ್ನು ಗಮನಿಸಿ ಮುಷ್ಕರ ಕೈ ಬಿಡಬೇಕು ಎಂದು ಹೇಳಿದ್ದಾರೆ.

    ಸಾರಿಗೆ ಸಂಸ್ಥೆಯ ನೌಕರರು ಶ್ರಮಜೀವಿಗಳಾಗಿದ್ದು, ಸಾರ್ವಜನಿಕ ಸೇವೆಗಾಗಿ ಬಹಳ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸರ್ಕಾರ ಹಾಗೂ ನೌಕರರ ಪರಸ್ಪರ ಕೊಡುಕೊಳ್ಳುವಿಕೆಗಳಿಂದಾಗಿ ರಾಜ್ಯದ ಜನತೆಗೆ ಉತ್ತಮ ರಸ್ತೆ ಸಾರಿಗೆ ಸೇವೆ ಒದಗಿಸಲಾಗುತ್ತಿದೆ. ಕಾಲಕಾಲಕ್ಕೆ ಯಡಿಯೂರಪ್ಪನವರು ನೌಕರರ ಬೇಡಿಕೆಗಳಿಗೆ ಸ್ಪಂದಿಸಿದ್ದಾರೆ. ಕೋವಿಡ್ ನಿಂದಾಗಿ ಆರ್ಥಿಕ ಸಂಕಷ್ಟವಾದಾಗಲೂ ನೌಕರರು ಬದುಕು, ಅವರ ಕುಟುಂಬದ ಹಿತಕ್ಕಾಗಿ ಒಟ್ಟು 1,953.45 ಕೋಟಿ ರೂಪಾಯಿಗಳಷ್ಟು ವೇತನವನ್ನು ಪಾವತಿಸಲಾಗಿದೆ. ವೇತನ ಬಾಕಿ ಇಟ್ಟುಕೊಂಡು ನೌಕರರು ಸಂಕಷ್ಟಕ್ಕೆ ಸಿಲುಕಿಸುವಂತಹ ಯಾವುದೇ ಕೆಲಸವನ್ನು ಸರ್ಕಾರ ಮಾಡಿಲ್ಲ. ಸರ್ಕಾರದನೌಕರರ ಹಿತ ಕ್ರಮವನ್ನು ಪರಿಗಣಿಸಿ ನೌಕರರು ಮುಷ್ಕರ ಬಿಟ್ಟು, ನಾಗರಿಕ ಸ್ನೇಹಿ ಆಡಳಿತಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

    2020ರ ಡಿಸೆಂಬರ್‍ನಲ್ಲಿ ನೌಕರರು 4 ದಿನಗಳ ಕಾಲ ಮುಷ್ಕರ ಮಾಡಿದ್ದರು. ಆ ಸಮಯದಲ್ಲಿ 10 ಬೇಡಿಕೆಗಳಲ್ಲಿ, 9 ಬೇಡಿಕೆ ಈಡೇರಿಸುವುದಾಗಿ ಸರ್ಕಾರವು ಸಾರಿಗೆ ನೌಕರರಿಗೆ ಭರವಸೆ ನೀಡಿತ್ತು. ನಂತರ ಕೊಟ್ಟ ಮಾತಿನಂತೆಯೇ ನಡೆದುಕೊಂಡು ನಮ್ಮ ಸರ್ಕಾರ, 9 ಬೇಡಿಕೆಗಳಲ್ಲಿ 8 ಬೇಡಿಕೆಗಳನ್ನು ಈಡೇರಿಸಿದೆ. ಆದರೆ 6 ನೇ ವೇತನ ಆಯೋಗದ ಶಿಫಾರಸುಗಳನ್ನು ಪರಿಗಣಿಸುವಂತೆ ಕೋರಿದ ಬೇಡಿಕೆಯನ್ನು ಪರಿಶೀಲಿಸಲಾಗುತ್ತಿದೆ. ಈ ಬಗ್ಗೆ ಸರ್ಕಾರವು ಆರ್ಥಿಕ ಅಂಶಗಳನ್ನು ಪರಿಗಣಿಸಿ ತೀರ್ಮಾನಿಸಬೇಕಿದೆ. ಇದಕ್ಕಾಗಿ ಸಮಿತಿ ಕೂಡ ರಚನೆ ಮಾಡಿದ್ದು, ಈ ಸಮಿತಿಯು 6 ಸಭೆಗಳನ್ನು ನಡೆಸಿ ಚರ್ಚೆ ಮಾಡಿದೆ. ಇಷ್ಟೆಲ್ಲ ಕ್ರಮ ವಹಿಸಿದ ಬಳಿಕವೂ ನೌಕರರು ಮುಷ್ಕರ ನಡೆಸುವುದು ಸರಿಯಲ್ಲ. ಆದ್ದರಿಂದ ನೌಕರರು ಮುಷ್ಕರ ಬಿಟ್ಟು ಸರ್ಕಾರಕ್ಕೆ ಸಹಕರಿಸಬೇಕು ಎಂದು ಸಚಿವರು ಕೋರಿದ್ದಾರೆ.

  • ಬ್ರಾಹ್ಮಣ ಸಮುದಾಯವರಿಗೆ ಜಾತಿ ಪ್ರಮಾಣ ಪತ್ರ ನೀಡಲು ಆದೇಶ

    ಬ್ರಾಹ್ಮಣ ಸಮುದಾಯವರಿಗೆ ಜಾತಿ ಪ್ರಮಾಣ ಪತ್ರ ನೀಡಲು ಆದೇಶ

    ಬೆಂಗಳೂರು: ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಜಾತಿ ಹಾಗೂ ಆದಾಯ ಪ್ರಮಾಣ ಪತ್ರವನ್ನು ನೀಡಲು ರಾಜ್ಯ ಸರ್ಕಾರ ಆದೇಶ ಪ್ರಕಟಿಸಿದೆ.

    ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಶಿಕ್ಷಣ, ಉದ್ಯೋಗ, ಕೌಶಲ್ಯ ಅಭಿವೃದ್ಧಿ, ಸ್ವಯಂ ಉದ್ಯೋಗ ಹಾಗೂ ಇತರೇ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗುವಂತೆ ಜಾತಿ ಹಾಗೂ ಆದಾಯ ಪ್ರಮಾಣ ಪತ್ರವನ್ನು ನೀಡಲು ಸರ್ಕಾರಿ ಆದೇಶ ಹೊರಡಿಸುವ ಮೂಲಕ ನಮ್ಮ ಸರ್ಕಾರ ನುಡಿದಂತೆ ನಡೆದಿದೆ ಎಂದು ಉಪಮುಖ್ಯಮಂತ್ರಿಗಳಾದ ಗೋವಿಂದ ಎಂ ಕಾರಜೋಳ ಅವರು ತಿಳಿಸಿದ್ದಾರೆ.

     

    ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇ. 10 ರಷ್ಟು ಮೀಸಲಾತಿಯನ್ನು ಕಲ್ಪಿಸಿ ಆದೇಶ ಹೊರಡಿಸಿದೆ. ಆರ್ಥಿಕವಾಗಿ ಹಿಂದುಳಿದ ಎಲ್ಲಾ ಸಮುದಾಯದವರ ಶ್ರೇಯೋಭಿವೃದ್ಧಿಯ ಹಿತದೃಷ್ಠಿಯಿಂದ ಆದೇಶ ಹೊರಡಿಸಿತ್ತು. ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ನಮ್ಮ ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯದಲ್ಲಿ ಕೇಂದ್ರ ಸರ್ಕಾರದ ಈ ಆದೇಶದ ಅನುಷ್ಟಾನಕ್ಕಾಗಿ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ನೀಡಲು ಸರ್ಕಾರಿ ಆದೇಶ ಹೊರಡಿಸುವ ಮೂಲಕ ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ಆರ್ಥಿಕವಾಗಿ ಹಿಂದುಳಿದ ಎಲ್ಲಾ ವರ್ಗಗಳ ಕಲ್ಯಾಣ ನಮ್ಮ ಸರ್ಕಾರದ ಉದ್ದೇಶವಾಗಿದೆ ಎಂದು ತಿಳಿಸಿದರು.

    ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಶಿಕ್ಷಣ, ಕೌಶಲ್ಯ ಅಭಿವೃದ್ಧಿ, ಸ್ವಯಂ ಉದ್ಯೋಗ ಹಾಗೂ ಇತರೇ ಸೌಕರ್ಯಗಳನ್ನೊಳಗೊಂಡಂತೆ ಯೋಜನೆಗಳನ್ನು ಜಾರಿಗೊಳಿಸುವ ಉದ್ದೇಶಕ್ಕಾಗಿ ರಾಜ್ಯ ಸರ್ಕಾರವು ಬ್ರಾಹ್ಮಣ ಅಭಿವೃದ್ಧಿ ಮಂಡಳಿಯನ್ನು ಸ್ಥಾಪಿಸಿದೆ. ಆರ್ಥಿಕವಾಗಿ ಹಿಂದುಳಿದ ಅರ್ಹ ಬ್ರಾಹ್ಮಣರಿಗೆ ಸೂಕ್ತ ಜಾತಿ ಹಾಗೂ ಆದಾಯ ಪ್ರಮಾಣ ಪತ್ರವನ್ನು ನೀಡಲು ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಕಂದಾಯ ಇಲಾಖೆಯು ಆದೇಶ ಹೊರಡಿಸಿದೆ. ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ವಿವಿಧ ಯೋಜನೆಗಳಿಗೆ ಫಲಾನುಭವಿಗಳನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ಈ ಪ್ರಮಾಣ ಪತ್ರಗಳನ್ನು ಪರಿಗಣಿಸಲು ಅನುಮತಿ ನೀಡಲಾಗಿದೆ. ಅರ್ಹ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಡಿಸಿಎಂ ತಿಳಿಸಿದ್ದಾರೆ.