ಬೆಂಗಳೂರು: ವಕ್ಫ್ (Waqf) ನೀಡಿದ್ದ ನೋಟಿಸ್ ವಿಚಾರಕ್ಕೆ ಹಾವೇರಿಯಲ್ಲಿ (Haveri) ರೈತ ಆತ್ಮಹತ್ಯೆ ಮಾಡಿಕೊಂಡಿದ್ದ ಎಂದು ಟ್ವೀಟ್ ಮಾಡಿದ್ದಕ್ಕೆ ಸಂಸದ ತೇಜಸ್ವಿ ಸೂರ್ಯ (Tejasvi Surya) ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದು ಮಾಡಿ ಆದೇಶ ಹೊರಡಿಸಿದೆ.
ತಮ್ಮ ವಿರುದ್ಧದ ಪ್ರಕರಣ ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್‌ಗೆ ಸಂಸದ ತೇಜಸ್ವಿ ಸೂರ್ಯ ಮೇಲ್ಮನವಿ ಸಲ್ಲಿಸಿದ್ದರು. ಕಳೆದ ವಾರ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾ.ನಾಗಪ್ರಸನ್ನ ಏಕಸದಸ್ಯ ಪೀಠವು ಆದೇಶ ಕಾಯ್ದಿರಿಸಿತ್ತು. ಗುರುವಾರ ತೀರ್ಪು ನೀಡಿದ್ದು, ಸಂಸದರ ಮೇಲಿನ ಸುಳ್ಳು ಸುದ್ದಿ ಹರಡುವಿಕೆ ಪ್ರಕರಣವನ್ನು ರದ್ದು ಮಾಡಿದೆ. ಇದನ್ನೂ ಓದಿ: 2ಎ ಮೀಸಲಾತಿಗಾಗಿ ಪಂಚಮಸಾಲಿಗಳ ಒತ್ತಾಯ ಸಂವಿಧಾನ ವಿರೋಧಿ: ಸಿಎಂ
ಹಾವೇರಿಯಲ್ಲಿ ರೈತ ಆತ್ಮಹತ್ಯೆ ಮಾಡಿಕೊಂಡ ವಿಚಾರಕ್ಕೆ ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದರು. ವಕ್ಫ್ ವಿಚಾರಕ್ಕೆ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಆರೋಪಿಸಿದ್ದರು. ಅದಾದ ಕೆಲವೇ ಹೊತ್ತಲ್ಲಿ ಟ್ವೀಟ್ ಡಿಲೀಟ್ ಮಾಡಿ ಕ್ಷಮಾಪಣೆ ಕೋರಿದ್ದರು.
ಸಂಸದರು ಸುಳ್ಳು ಸುದ್ದಿ ಹರಡಿದ್ದಾರೆಂದು ಹಾವೇರಿ ಸೆನ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿತ್ತು. ಎಫ್‌ಐಆರ್ ಪ್ರಶ್ನಿಸಿ ತೇಜಸ್ವಿ ಸೂರ್ಯ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದನ್ನೂ ಓದಿ: ಹಿಂದೂ ಪದ ವಿವಾದ – ಸಚಿವ ಸತೀಶ್ ಜಾರಕಿಹೊಳಿಗೆ ಬಿಗ್ ರಿಲೀಫ್
ಬೆಂಗಳೂರು: ಹಿಂದೂ ಪದ ವಿವಾದಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು ಹೈಕೋರ್ಟ್ (Karnataka High Court) ವಜಾಗೊಳಿಸಿದೆ.
‘ಹಿಂದೂ (Hindu) ಎನ್ನುವುದು ಭಾರತೀಯ ಪದವಲ್ಲ. ಅದು ಪರ್ಷಿಯನ್ ನೆಲಕ್ಕೆ ಸೇರಿದ್ದು, ಅದೊಂದು ಅಶ್ಲೀಲ ಪದ’ ಎಂದು ಕಾರ್ಯಕ್ರಮವೊಂದರಲ್ಲಿ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದರು. ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದ ಸಂಬಂಧ ಲೋಕೋಪಯೋಗಿ ಸಚಿವ ಜಾರಕಿಹೊಳಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿತ್ತು. ಇದನ್ನೂ ಓದಿ: 2024-25ರಲ್ಲಿ 1.4 ಲಕ್ಷ ಕೋಟಿ ಸಾಲ ಮಾಡಿದ್ದೇವೆ, ಬೇರೆ ರಾಜ್ಯಗಳಿಗಿಂತ ನಮ್ಮದು ಕಡಿಮೆ: ಸಿದ್ದರಾಮಯ್ಯ
ಐಪಿಸಿ ಸೆಕ್ಷನ್‌ಗಳಾದ 153 (ಗಲಭೆಗೆ ಪ್ರಚೋದನೆ) ಮತ್ತು 500ರ (ಬೇರೊಬ್ಬರಿಗೆ ಅವಮಾನ ಮಾಡುವುದು) ಅಡಿ ಮೊಕದ್ದಮೆ ದಾಖಲಾಗಿತ್ತು. ಮೊಕದ್ದಮೆ ರದ್ದು ಕೋರಿದ್ದ ಸತೀಶ್ ಜಾರಕಿಹೊಳಿ, ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.
– ಕೋರ್ಟ್‌ಗೆ ದರ್ಶನ್ ಪರ ವಕೀಲ ಸಿ.ವಿ ನಾಗೇಶ್ ಹೇಳಿದ್ದೇನು?
ಬೆಂಗಳೂರು: ಕೊಲೆ ಆರೋಪಿ ದರ್ಶನ್‌ಗೆ ಹೈಕೋರ್ಟ್ (Karnataka Highcourt) ನೀಡಿದ್ದ 6 ವಾರಗಳ ಮಧ್ಯಂತರ ಜಾಮೀನು ಅವಧಿ ಇದೇ ಡಿ.11ಕ್ಕೆ ಮುಕ್ತಾಯವಾಗಲಿದೆ. ಆದ್ರೆ ಅದೇ ದಿನ ದರ್ಶನ್ ಶಸ್ತ್ರ ಚಿಕಿತ್ಸೆಗೆ ವೈದ್ಯರು ತಯಾರಿ ಮಾಡಿಕೊಂಡಿದ್ದಾರೆ ಎಂಬ ಸ್ಫೋಟಕ ವಿಚಾರ ಬೆಳಕಿಗೆ ಬಂದಿದೆ. ಡಿಸೆಂಬರ್ 11ರಂದು ದರ್ಶನ್ ಶಸ್ತ್ರಚಿಕಿತ್ಸೆಗೆ (Surgery For Darshan) ವೈದ್ಯರು ದಿನಾಂಕ ನಿಗಡಿಪಡಿಸಿದ್ದಾರೆ ಎಂದು ಹಿರಿಯ ವಕೀಲ ಸಿ.ವಿ ನಾಗೇಶ್ (CV Nagesh) ಅವರು ಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ.
ವಾದ-ಪ್ರತಿವಾದಗಳನ್ನು ಆಲಿಸಿದ ಬಳಿಕ ರೆಗ್ಯೂಲರ್ ಬೇಲ್ ಆದೇಶವನ್ನು ಕೋರ್ಟ್ ಕಾಯ್ದಿರಿಸಿದೆ. ಅಲ್ಲದೇ ಮುಂದಿನ ಆದೇಶದವರೆಗೆ ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಣೆ ಮಾಡಿದೆ. ಇದರಿಂದ ಆರೋಪಿ ದರ್ಶನ್‌ಗೆ ರಿಲೀಫ್ ಸಿಕ್ಕಂತಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರದ ಆರೋಪಿ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಿತು. ಎಸ್‌ಪಿಪಿ ಪ್ರಸನ್ನಕುಮಾರ್ (SPP Prasannakumar) ಅವರು ಮಧ್ಯಂತರ ಜಾಮೀನು ರದ್ದುಗೊಳಿಸುವಂತೆ ಆಕ್ಷೇಪಣಾ ವಾದ ಮಂಡಿಸಿದರು. ಬಳಿಕ ಇದಕ್ಕೆ ಪ್ರತಿವಾದ ಮಂಡಿಸಿದ ಹಿರಿಯ ವಕೀಲ ಸಿ.ವಿ ನಾಗೇಶ್, ಹಲವು ವಿಚಾರಗಳನ್ನು ಕೋರ್ಟ್ ಗಮನಕ್ಕೆ ತಂದರು. ಇದೇ ವೇಳೆ ದರ್ಶನ್‌ಗೆ ನೀಡಲಾಗಿರುವ ಮಧ್ಯಂತರ ಜಾಮೀನು ಅವಧಿಯನ್ನ ವಿಸ್ತರಣೆ ಮಾಡುವಂತೆ ಮನವಿ ಮಾಡಿದರು.
ಬಳ್ಳಾರಿಯ ವೈದ್ಯರ (Ballari Doctors) ವರದಿಯ ಮೇಲೆ ಜಾಮೀನು ಸಿಕ್ಕಿತ್ತು. ಬಿಜಿಎಸ್ ಆಸ್ಪತ್ರೆಯಲ್ಲಿ ಬಳ್ಳಾರಿ ವೈದ್ಯರ ವರದಿ ಒಪ್ಪಿಕೊಂಡರು, ಆಪರೇಷನ್ ಅವಶ್ಯಕತೆ ಇದೆ ಅಂತ ಹೇಳಿದ್ರು. ಡಾಕ್ಟರ್ ಹೇಳಿದ ಹಾಗೇ ನಾವು ಆಪರೇಷನ್ ಮಾಡಿಸಬೇಕು, ನಾವು ಹೇಳಿದಾಗ ಅಪರೇಷನ್ ಮಾಡಿಸೋದಕ್ಕೆ ಆಗೋದಿಲ್ಲ. ಮೂರು ವಾರ ಆಯ್ತು, ನಾಲ್ಕು ಅಯ್ತು ಅಂತ ಅಪರೇಷನ್ ಮಾಡಿಸಿ ಅನ್ನೋದಕ್ಕೆ ಆಗೋಲ್ಲ ಅಂತ ವಾದಿಸಿದರು. ಈ ವೇಳೆ ನೀವು ದಿನಾಂಕ ನಿಗದಿ ಆಗಿದೆ ಅಂದಿದ್ದೀರಿ ಅಲ್ವಾ? ಅಂತ ಜಡ್ಜ್ ಪ್ರಶ್ನೆ ಮಾಡಿದರು. ಇದಕ್ಕೆ ಉತ್ತರಿಸಿದ ಸಿ.ವಿ ನಾಗೇಶ್, ಹೌದು ಮುಂದೆ ಹೇಳ್ತೀನಿ ಯಾವಾಗ ಅಂತ ಎಂದರು.
ದರ್ಶನ್ ಹೋಗಿ 4 ವಾರ ಆಯ್ತು ಆಪರೇಷನ್ ಮಾಡಿ ಅಂತ ಪಟ್ಟು ಹಿಡಿಯೋದಕ್ಕೆ ಆಗೋಲ್ಲ. ಟೈಂ ಮುಗಿಯುತ್ತಾ ಇದೆ ಅಂತ ಒತ್ತಡ ಮಾಡೋಕೆ ಆಗೋಲ್ಲ, ನ.11-21ನೇ ತಾರೀಖು ನೀಡಿದ ವರದಿಯಲ್ಲಿ ಬಿಪಿ ವ್ಯತ್ಯಾಸ ಇದೆ ಅಂತ, ಡಿಸೆಂಬರ್ 5 ರಂದು ಮತ್ತೊಂದು ವರದಿ ನೀಡಲಾಗಿದೆ. ದರ್ಶನ್‌ಗೆ ಸ್ಟಿರಾಯ್ಡ್ ಇಂಜೆಕ್ಷನ್ ನೀಡಲಾಗುತ್ತಿದೆ ಎಂದು ತಿಳಿಸಿದರು.
ಜನರಲ್ ಅನಸ್ತೇಷಿಯಾ ನೀಡಲು ತಯಾರಿ ಮಾಡಿಕೊಳ್ಳಲು ದೇಹ ಸಮತೋಲನಕ್ಕೆ ತೆಗೆದುಕೊಳ್ಳುಲಾಗುತ್ತೆ. ಪಿಸಿಯೋಥೆರಪಿ ಮತ್ತು ವ್ಯಾಯಾಮ ಮಾಡಲಾಗುತ್ತಿದೆ, ಡಿ.11 ರಂದು ಶಸ್ತ್ರಚಿಕಿತ್ಸೆ ಮಾಡಿಸಲು ತಯಾರಿ ಮಾಡಲಾಗಿದೆ, ಹೀಗಾಗಿ ದರ್ಶನ್ ಯಾವುದೇ ಮಧ್ಯಂತರ ಆದೇಶ ಉಲ್ಲಂಘನೆ ಮಾಡಿಲ್ಲ, ದಯಮಾಡಿ ಇದನ್ನು ಕೋರ್ಟ್ ಪರಿಗಣನೆಗೆ ತೆಗೆದುಕೊಳ್ಳಬೇಕು ಎಂದು ಕೋರ್ಟ್‌ಗೆ ಮನವಿ ಮಾಡಿದರು.
ಇದೇ ವೇಳೆ ರೆಗ್ಯೂಲರ್ ಬೇಲ್‌ಗೂ ಎಸ್‌ಪಿಪಿ ಆಕ್ಷೇಪ ವಾದಕ್ಕೆ ಪ್ರತಿವಾದ ಮಂಡಿಸಿದ ಸಿ.ವಿ ನಾಗೇಶ್, ರೇಣುಕಾಸ್ವಾಮಿ ದೇಹದ ಮೇಲೆ 39 ರಕ್ತದ ಕಲೆಗಳು ಇವೆ ಎಂದು ಹೇಳ್ತಾ ಇದ್ದಾರೆ. ಆದ್ರೆ ಬ್ಲೋಡಿಂಗ್ ಇಂಜುರಿ ಇದ್ದದ್ದು ಒಂದೇ ಒಂದು.. ರೇಣುಕಾಸ್ವಾಮಿ ಮೃತದೇಹದಲ್ಲಿ 2.5 ಸೆಂಟಿ ಮೀಟರ್ ಗಾಯ ಮಾತ್ರ ಪತ್ತೆಯಾಗಿದೆ. ಮರಣೋತ್ತರ ಪರೀಕ್ಷಾ ವರದಿಯನ್ನು ಪ್ರಾಸಿಕ್ಯೂಷನ್ ಜೊತೆ ಸೇರಿ ವೈದ್ಯರು ತಿರುಚಿದ್ದಾರೆ. ಪ್ರತಿ ಹಂತದಲ್ಲಿ ಕೂಡ ಪ್ರಾಸಿಕ್ಯೂಷನ್ ಸುಳ್ಳು ಹೇಳುತ್ತಾ ಬರುತ್ತಾ ಇದೆ? ಪ್ರತ್ಯಕ್ಷದರ್ಶಿಗಳ ಹೇಳಿಕೆ ದಾಖಲು ಮಾಡೋದ್ರಿಂದ ಹಿಡಿದು ಮಹಜರು ಮಾಡುವ ತನಕ ಸುಳ್ಳು ಹೇಳಿದೆ ಎಂದು ಪ್ರಬಲ ವಾದ ಮಂಡಿಸಿದರು.
ವಾದ ಪ್ರತಿವಾದಗಳನ್ನು ಆಲಿಸಿದ ಬಳಿಕ ದರ್ಶನ್ ಸೇರಿ 7 ಜನರ ಜಾಮೀನು ಆದೇಶವನ್ನು ಕೋರ್ಟ್ ಕಾಯ್ದಿರಿಸಿದೆ. ಅಲ್ಲದೇ ರೆಗ್ಯೂಲರ್ ಬೇಲ್ ಸಿಗುವವರೆಗೆ ಮಧ್ಯಂತರ ಜಾಮೀಜು ಅವಧಿಯನ್ನ ವಿಸ್ತರಣೆ ಮಾಡಿದೆ.
ಬೆಂಗಳೂರು: ಭೋವಿ ನಿಗಮದಲ್ಲಿ ನಡೆದ ಅಕ್ರಮ (Bhovi Corporation Scam) ತನಿಖೆ ಎದುರಿಸಿದ್ದ ವಕೀಲೆ ಹಾಗೂ ಉದ್ಯಮಿ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸಲು ಎಸ್‌ಐಟಿ (SIT) ರಚಿಸಿ ಕರ್ನಾಟಕ ಹೈಕೋರ್ಟ್‌ನ ಏಕಸದಸ್ಯ ಪೀಠ ಆದೇಶಿಸಿದೆ.
ಅಲ್ಲದೇ ಮೂರು ತಿಂಗಳಲ್ಲಿ ವಿಚಾರಣೆ ಮುಗಿಸಿ ವರದಿ ನೀಡುವಂತೆ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ ಸೂಚನೆ ನೀಡಿದೆ. ಒಟ್ಟಾರೆ ಮೂವರು ಐಪಿಎಸ್ ಅಧಿಕಾರಿಗಳನ್ನು (ಸಿಬಿಐ ಎಸ್ಪಿ ವಿನಾಯಕ್ ವರ್ಮ, ಐಪಿಎಸ್ ಅಕ್ಷಯ್ ಮಜ್ಲಿ, ಎಸ್ಪಿ ನಿಶಾ ಜೇಮ್ಸ್) ಎಸ್‌ಐಟಿ ಹೊಂದಿರಲಿದೆ. ಈ ಪೈಕಿ ಇಬ್ಬರು ಎಸ್ಪಿಗಳಿದ್ದಾರೆ. ಇದನ್ನೂ ಓದಿ: ಸಚಿವರ ಕಾರ್ಯವೈಖರಿ ಬಗ್ಗೆ ಹೈಕಮಾಂಡ್ ರಿಪೋರ್ಟ್ ಕೇಳಿದೆ: ಡಾ. ಎಂ.ಸಿ.ಸುಧಾಕರ್
ಏನಿದು ಪ್ರಕರಣ?
ಭೋವಿ ನಿಗಮ ಅಕ್ರಮ ಸಂಬಂಧ ಜೀವಾರನ್ನು ಸಿಐಡಿ ವಿಚಾರಣೆಗೆ ಒಳಪಡಿಸಿತ್ತು. ಆದರೆ ಕಿರುಕುಳದ ಆರೋಪ ಮಾಡಿ ಜೀವಾ ಆತ್ಮಹತ್ಯೆ ಮಾಡಿಕೊಂಡಿದ್ದರು. ಭೋವಿ ನಿಗಮದಲ್ಲಿ ಒಟ್ಟು 34 ಕೋಟಿ ರೂ. ಅಕ್ರಮ ಹಣ ವರ್ಗಾವಣೆಯಾಗಿದೆ. ಇದರಲ್ಲಿ ಜೀವಾ ಮಾಲೀಕತ್ವದ ಸಂಸ್ಥೆ ಅನ್ನಿಕಾ ಎಂಟರ್‌ಪ್ರೆಸಸ್‌ಗೆ 7.16 ಕೋಟಿ ರೂ., ಅವರ ಸಹೋದರಿ ಹೆಸರಲ್ಲಿರುವ ಹರ್ನಿತಾ ಕ್ರಿಯೇಷನ್ಸ್‌ಗೆ 3.79 ಕೋಟಿ ರೂ. ವರ್ಗಾವಣೆ ಆಗಿತ್ತು. ಇನ್ನುಳಿದ ಹಣ ಮಾಜಿ ಎಂಡಿಗಳ ಆಪ್ತರ ಪಾಲುದಾರಿಕೆಯ ಸಂಸ್ಥೆಗಳಿಗೆ ವರ್ಗವಾಗಿತ್ತು. ಈ ಪ್ರಕರಣದ ಬಗ್ಗೆ ಆಂತರಿಕ ತನಿಖೆ ನಡೆಸಲು ಗೃಹ ಇಲಾಖೆ ಮುಂದಾಗಿತ್ತು.
ಸಿಐಡಿ ಅಧಿಕಾರಿಗಳ ವಿರುದ್ಧ ಪ್ರಕರಣ:
ಜೀವಾ ಅವರ ಕಿರಿಯ ಸಹೋದರಿ ಸಂಗೀತಾ ಅವರು ನೀಡಿದ ದೂರಿನಲ್ಲಿ ವಿಚಾರಣೆ ನೆಪದಲ್ಲಿ ಸಿಐಡಿ ಅಧಿಕಾರಿಗಳು ತನ್ನ ಅಕ್ಕ ಜೀವಾಗೆ ಅವಮಾನ ಮಾಡಿದ್ದಾರೆ. ಅಂತೆಯೇ ಹಣಕ್ಕೆ ಬೇಡಿಕೆ ಇರಿಸಿದ್ದಾರೆ ಎಂದು ಆರೋಪಿಸಿದ್ದರು. ಈ ದೂರಿನಮೇರೆಗೆ ಬನಶಂಕರಿ ಠಾಣೆ ಪೊಲೀಸರು ಸಿಐಡಿ ಅಧಿಕಾರಿಗಳ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿ ತನಿಖೆ ಕೈಗೊಂಡಿದ್ದರು. ಇದನ್ನೂ ಓದಿ: ಮೋಹಕ ತಾರೆ ಫ್ಯಾನ್ಸ್‌ಗೆ ಗುಡ್ ನ್ಯೂಸ್- ಉಪೇಂದ್ರ ಜೊತೆ ‘ರಕ್ತ ಕಾಶ್ಮೀರ’ದ ಕಥೆ ಹೇಳಲು ಸಜ್ಜಾದ ರಮ್ಯಾ
11 ಪುಟಗಳ ಡೆತ್ ನೋಟ್?:
ಆತ್ಮಹತ್ಯೆಗೂ ಮುನ್ನ ಮಹಿಳಾ ಉದ್ಯಮಿ ಜೀವಾ 11 ಪುಟಗಳ ಮರಣಪತ್ರ ಬರೆದಿದ್ದಾರೆ. ಅದರಲ್ಲಿ ಭೋವಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಸಂಬಂಧ ಸಿಐಡಿ ಅಧಿಕಾರಿಗಳ ವಿಚಾರಣೆ ವಿಚಾರ ಪ್ರಸ್ತಾಪಿಸಿದ್ದಾರೆ. ಸಿಐಡಿ ವಿಚಾರಣೆಯಿಂದ ನನಗೆ ಅವಮಾನವಾಗಿದ್ದು, ಮಾನಸಿಕವಾಗಿ ನೊಂದಿದ್ದೇನೆ. ಎಂದು ಉಲ್ಲೇಖಿಸಿದ್ದಾರೆ ಎಂದು ತಿಳಿದುಬಂದಿದೆ. ಅಂತೆಯೆ ನನಗೆ ಅವಿವಾಹಿತ ತಂಗಿ ಇರುವುದರಿಂದ ನನ್ನ ಆತ್ಮಹತ್ಯೆ ಸುದ್ದಿಗೆ ಹೆಚ್ಚು ಪ್ರಚಾರ ನೀಡದಂತೆಯೂ ಜೀವಾ ಮರಣಪತ್ರದಲ್ಲಿ ಮನವಿ ಮಾಡಿದ್ದಾರೆ ಎಂದು ಅಧಿಕಾರಿ ಮೂಲಗಳಿಂದ ತಿಳಿದುಬಂದಿತ್ತು.
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ (Darshan) ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ದರ್ಶನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಫೋಟೋ ಸಹ ʻಪಬ್ಲಿಕ್ ಟಿವಿʼಗೆ (Public TV) ಲಭ್ಯವಾಗಿದೆ.
6 ವಾರಗಳ ಕಾಲ ಮಧ್ಯಂತರ ಜಾಮೀನು ಪಡೆದಿರುವ ದರ್ಶನ್ ಕಳೆದ 4 ವಾರಗಳಿಂದ ಬಿಜಿಎಸ್ ಆಸ್ಪತ್ರೆಯಲ್ಲಿ (BGS Hospital) ಪಿಸಿಯೋಥೆರಪಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ. ಮತ್ತೊಂದೆಡೆ ರೆಗ್ಯೂಲರ್ ಬೇಲ್‌ಗೆ ಅರ್ಜಿ ಸಲ್ಲಿಸಿದ್ದು, ಅದರ ವಿಚಾರಣೆ ಕೋರ್ಟ್‌ನಲ್ಲಿ ನಡೆಯುತ್ತಿದೆ. ಸೋಮವಾರ (ಡಿ.3) ವಿಚಾರಣೆ ಮುಂದುವರಿಯಲಿದೆ, ಈ ನಡುವೆ ದರ್ಶನ್ ಅವರು ಚಿಕಿತ್ಸೆ ಪಡೆಯುತ್ತಿರುವ ಫೋಟೋ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ: ಕರುನಾಡಿಗೂ ತಟ್ಟಿದ ಚಂಡಮಾರುತದ ಬಿಸಿ – ಈ ಜಿಲ್ಲೆಗಳಲ್ಲಿಂದು ಶಾಲಾ, ಕಾಲೇಜುಗಳಿಗೆ ರಜೆ
ತುರ್ತು ಚಿಕಿತ್ಸೆಗಾಗಿಯೇ ಹೈಕೋರ್ಟ್ ನಟ ದರ್ಶನ್‌ಗೆ 6 ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಚಿಕಿತ್ಸೆಗಾಗಿಯೇ ದರ್ಶನ್ ಬೆಂಗಳೂರಿಗೆ ಬಂದು 32 ದಿನಗಳು ಮುಗಿದು ಹೋಗಿವೆ. ಇನ್ನೂ 9 ದಿನಗಳು ಕಳೆದರೆ ಮತ್ತೆ ದರ್ಶನ್ ಜೈಲಿಗೆ ವಾಪಸ್ಸಾಗಬೇಕು. ಅಷ್ಟರಲ್ಲಿ ರೆಗ್ಯೂಲರ್ ಬೇಲ್ ಸಿಕ್ಕರೆ ದರ್ಶನ್ ಸೇಫ್ ಅಂತ ಹೇಳಲಾಗ್ತಿದೆ.
ಸದ್ಯಕ್ಕೆ ದರ್ಶನ್‌ಗೆ ಇನ್ನೂ ಶಸ್ತ್ರಚಿಕಿತ್ಸೆ ಆಗಿಲ್ಲ. ಕಾರಣ, ಅವರು ರಕ್ತದೊತ್ತಡದಿಂದ ಬಳಲ್ತಾ ಇದ್ದಾರಂತೆ. ಬಿಪಿ ಕಂಟ್ರೋಲ್‌ಗೆ ಬಾರದೇ ಇರೋ ಕಾರಣದಿಂದಾಗಿ ಇನ್ನೂ ಸರ್ಜರಿ ಮಾಡಲಾಗಿಲ್ಲವಂತೆ. ಹಾಗಂತ ಸರ್ಜರಿ ಆಗೋದೇ ಇಲ್ಲವಾ? ಈವರೆಗೂ ಅದು ಕಷ್ಟ ಕಷ್ಟ ಅಂತ ನಂಬಲಾಗಿತ್ತು. ಸರ್ಜರಿಗೆ ದರ್ಶನ್ ಮನಸು ಮಾಡದೇ ಇರೋ ಕಾರಣದಿಂದಾಗಿ, ಈ ಬಗ್ಗೆ ಅನುಮಾನ ವ್ಯಕ್ತವಾಗಿತ್ತು. ಈಗ ದರ್ಶನ್ ಸರ್ಜರಿಗೆ ಒಪ್ಪಿಕೊಂಡಿದ್ದಾರೆ ಅನ್ನೋ ಸುದ್ದಿ ಹರಿದಾಡ್ತಾ ಇದೆ. ಸರ್ಜರಿ ಆಗದೇ ಇದ್ದರೆ, ಡಬಲ್ ಸಂಕಷ್ಟ ಎದುರಾಗೋ ಕಾರಣದಿಂದಾಗಿ ಸರ್ಜರಿ ಮಾಡಿಸಿಕೊಳ್ಳೋಕೆ ಒಪ್ಪಿದ್ದಾರೆ ಎಂದು ಹೇಳಲಾಗ್ತಿದೆ. ಇದನ್ನೂ ಓದಿ: ದರ್ಶನ್ ಸರ್ಜರಿಗೆ ತರಾತುರಿಯಲ್ಲಿ ಪ್ಲ್ಯಾನ್ – ಜಾಮೀನು ಅವಧಿ ಉಳಿದಿರೋದು 11 ದಿನ ಮಾತ್ರ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ನಿವೇಶನ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ನಲ್ಲಿ ಮಹತ್ವದ ವಿಚಾರಣೆ ನಡೆಯಲಿದೆ.
ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಲು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಕೋರಿದ್ದರು. ಕಳೆದ ವಿಚಾರಣೆಯಲ್ಲಿ ಲೋಕಾಯುಕ್ತ ತನಿಖೆಗೆ ಹೈಕೋರ್ಟ್ ಸೂಚಿಸಿತ್ತು. ಅಲ್ಲದೇ, ತನಿಖಾ ಪ್ರಗತಿ ವರದಿಯನ್ನು ನೀಡುವಂತೆ ಹೈಕೋರ್ಟ್ ಸೂಚನೆ ನೀಡಿತ್ತು.
ಇಂದು ಹೈಕೋರ್ಟ್ಗೆ ತನಿಖಾ ವರದಿಯ ಬಗ್ಗೆ ಮಾಹಿತಿ ನೀಡಲಿದ್ದಾರೆ. ಪ್ರಕರಣದ ನಾಲ್ವರು ಪ್ರಮುಖ ಆರೋಪಿಗಳ ವಿಚಾರಣೆಯನ್ನು ಲೋಕಾಯುಕ್ತ ನಡೆಸಿದೆ. ಸಿದ್ದರಾಮಯ್ಯ, ಪಾರ್ವತಿ, ಮಲ್ಲಿಕಾರ್ಜುನ ಸ್ವಾಮಿ, ದೇವರಾಜು ವಿಚಾರಣೆ ಆಗಿದೆ.
ಪ್ರಕರಣದಲ್ಲಿ ಅಧಿಕಾರಿಗಳಾದ ಕುಮಾರ್ ನಾಯ್ಕ್, ನಟೇಶ್ ಮತ್ತು ಪಾಲಾಯ್ಯ ವಿಚಾರಣೆ ಆಗಿದೆ. ಬಳಿಕ ಸಾಕ್ಷಿಗಳಿಂದ ಹೇಳಿಕೆಯನ್ನು ಕೂಡ ದಾಖಲಾಗಿದೆ
ಬೆಂಗಳೂರು: ವಿವಾಹಿತ ಮುಸ್ಲಿಂ ದಂಪತಿಗೆ ವಿವಾಹ ನೋಂದಣಿ ಪ್ರಮಾಣ ಪತ್ರ ನೀಡುವ ಅಧಿಕಾರವನ್ನು ರಾಜ್ಯ ವಕ್ಫ್ ಮಂಡಳಿಗೆ ನೀಡಿದ್ದ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.
ಸರ್ಕಾರದ ಆದೇಶವನ್ನು ಅಮಾನತಿನಲ್ಲಿರಿಸಿ ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ. ಸರ್ಕಾರದ ಆದೇಶವನ್ನು ಜ.7 ರ ವರೆಗೆ ಅಮಾನತು ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಅಲ್ಲದೇ, ರಾಜ್ಯ ಸರ್ಕಾರ ಮತ್ತು ವಕ್ಫ್ ಮಂಡಳಿಗೆ ಕೋರ್ಟ್‌ನಿಂದ ನೋಟಿಸ್ ಜಾರಿ ಮಾಡಲಾಗಿದೆ.
ವಕ್ಫ್ ಕಾಯಿದೆ 1995 ಕ್ಕೆ ವಿರುದ್ಧವಾಗಿದೆ ಎಂದು ಅಲಂ ಪಾಷ ಅವರು ಪಿಎಎಲ್ ಹಾಕಿದ್ದರು. ಮುಖ್ಯ ನ್ಯಾಯಮೂರ್ತಿ ಎನ್.ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ ಅರವಿಂದ್ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿತ್ತು.
ಚಿಕ್ಕಬಳ್ಳಾಪುರ: ಅದು ಸರ್ಕಾರಿ ಕಚೇರಿ ಅದ್ರಲ್ಲೂ ಎಸಿ ಕಚೇರಿ (AC Office), ಎಸಿ ಸೇರಿದಂತೆ ಅಧಿಕಾರಿ ಸಿಬ್ಬಂದಿ ಎಂದಿನಂತೆ ತಮ್ಮ ಕರ್ತವ್ಯಕ್ಕೆ ಹಾಜರಾಗಿ ತಮ್ಮ ಚೇರ್ ಗಳಲ್ಲಿ ಕೂತು ಬೆಳ್ಳಂಬೆಳಗ್ಗೆ ತಮ್ಮ ಕೆಲಸ ಕಾರ್ಯ ನಿರ್ವಹಿಸುತ್ತಿದ್ರು… ಆದ್ರೆ ಆ ಕಚೇರಿಗೆ ಬಂದ 10 ಮಂದಿ ಎಸಿ ಕೂತಿದ್ದ ಚೇರ್ ಸೇರಿದಂತೆ ಅಧಿಕಾರಿ ಸಿಬ್ಬಂದಿ ಕೂತಿದ್ದ ಚೇರ್‌ಗಳನ್ನೇ ಹೊತ್ತೊಯಿದ್ದರು… ಅಂದಹಾಗೆ ಇಂತಹ ಘಟನೆ ನಡೆದಿದ್ದು ಚಿಕ್ಕಬಳ್ಳಾಪುರ (Chikkaballapura) ಎಸಿ ಕಚೇರಿಯಲ್ಲಿ.
ಯಾಕೆ ಅಂದ್ರೆ 2011 ರಲ್ಲಿ ಬಾಗೇಪಲ್ಲಿ ಪಟ್ಟಣದ ಮುಖ್ಯರಸ್ತೆಯಾದ ಡಿವಿಜಿ ರಸ್ತೆಯನ್ನ ಅಗಲೀಕರಣ ಮಾಡಲಾಗಿತ್ತು. ಹಾಗಾಗಿ ಅಂದು ನೂರಾರು ಮಂದಿ ಮುಖ್ಯರಸ್ತೆಯಲ್ಲಿದ್ದ ಅಂಗಡಿಗಳನ್ನ ಜಾಗಗಳನ್ನ ಕಳೆದುಕೊಂಡಿದ್ರು. ಆದ್ರೆ ಸರ್ಕಾರ ಅಂದು ಭೂ ಸ್ವಾಧೀನ ಮಾಡಿಕೊಂಡ ಜಾಗಕ್ಕೆ ಅಡಿಗೆ 240 ರೂ. ಪರಿಹಾರ ನೀಡಿ ಕೈತೊಳೆದುಕೊಂಡಿತ್ತು. ಆದ್ರೆ ಈ ಪರಿಹಾರದ ಹಣ ನಮಗೆ ಸಾಕಾಗಲ್ಲ ಅಂತ ನೂರಾರು ಮಂದಿ ನ್ಯಾಯಾಲಯದ ಮೆಟ್ಟಿಲೇರಿದ್ರು. ಈಗ ನ್ಯಾಯಾಲಯ ಅಂದು ನೀಡಿದ್ದ 240 ರೂ. ಬದಲು ಅಡಿಗೆ 890 ರೂ. ಪರಿಹಾರ ನೀಡುವಂತೆ ಎಸಿಯವರಿಗೆ ಆದೇಶ ಮಾಡಿತ್ತು. ಆದ್ರೆ ಆದೇಶ ನೀಡಿ 2 ತಿಂಗಳು ಕಳೆದಿದ್ದರೂ ಪರಿಹಾರ ನೀಡದ ಹಿನ್ನೆಲೆಯಲ್ಲಿ ಇಂದು ನ್ಯಾಯಾಲಯದ ಆದೇಶದ ಮೇರೆಗೆ ಎಸಿ ಕಚೇರಿ ಪಿಠೋಪಕರಣ ಜಪ್ತಿ ಮಾಡಲಾಯಿತು. ಇದನ್ನೂ ಓದಿ: ಅಮೆರಿಕದಲ್ಲಿ 10 ಶತಕೋಟಿ ಡಾಲರ್ ಹೂಡಿಕೆಗೆ ಬದ್ಧ, 15,000 ಉದ್ಯೋಗ ಸೃಷ್ಟಿ ಗುರಿ: ಅದಾನಿ
ಇನ್ನೂ ಎಸಿ ಕಚೇರಿಗೆ ಆಗಮಿಸಿದ ನ್ಯಾಯಾಲಯದ ದಾವೆ ಹೂಡಿದ್ದ ಶ್ರೀನಿವಾಸ್ ರೆಡ್ಡಿ, ಸತೀಶ್ ಬಾಬು, ನರಸಿಂಹನಾಯಡು, ಸೇರಿದಂತೆ 10ಕ್ಕೂ ಹೆಚ್ಚು ಮಂದಿ ಕೂಲಿಯಾಳುಗಳ ಸಮೇತ ಆಗಮಿಸಿ ಎಸಿ ಕಚೇರಿಯಲ್ಲಿ ಕೈಗೆ ಸಿಕ್ಕ ಸಿಕ್ಕ ಚೇರ್, ಟೇಬಲ್ ಕಂಪ್ಯೂಟರ್ ಸೇರಿದಂತೆ ಪಿಠೋಪಕರಣಗಳನ್ನ ಎತ್ತೊಯ್ದರು, ಇದ್ರಿಂದ ಇರುಸು ಮುರಾಸಾದ ಎಸಿ ಅಶ್ವಿನ್ ಕೂರಲು ಚೇರ್ ಇಲ್ಲದೆ ಪ್ರತ್ಯೇಕ ಕೊಠಡಿ ಸೇರಿದ್ರೆ ಇತ್ತ ಅಧಿಕಾರಿ ಸಿಬ್ಬಂದಿ ನಿಂತಲ್ಲೇ ನಿಲ್ಲುವಂತಾಯಿತು. ಇದನ್ನೂ ಓದಿ: ಉದ್ಧವ್ ಠಾಕ್ರೆ ಬ್ಯಾಗ್ ಗದ್ದಲದ ನಡುವೆ ಮಹಾರಾಷ್ಟ್ರದಲ್ಲಿ ಏಕನಾಥ್ ಶಿಂಧೆ ಹೆಲಿಕಾಪ್ಟರ್ ತಪಾಸಣೆ
ಇನ್ನೂ ಎರಡು ತಿಂಗಳ ಹಿಂದೆಯೇ ನ್ಯಾಯಾಲಯ ಆದೇಶ ಮಾಡಿದ್ರೂ ಎಸಿಯವರು ಪರಿಹಾರ ನೀಡಿಲ್ಲ, ಹೀಗಾಗಿ ಪಿಠೋಪಕರಣ ಜಪ್ತಿ ಮಾಡಲಾಗಿದ್ರೆ ಕೊನೆಗೆ ಮತ್ತೆ ಎಸಿಯವರು ಎರಡು ತಿಂಗಳು ಕಾಲಾವಕಾಶ ಗಡುವು ನೀಡುವಂತೆ ಮನವಿ ಮಾಡಿಕೊಂಡಿರೋದ್ರಿಂದ ಪುನಃ ಚೇರ್ ಹಾಗೂ ಪಿಠೋಪಕರಣ ವಾಪಾಸ್ ನೀಡಲಾಗಿದೆ. ಜಾಗ ಕಳೆದುಕೊಂಡವರು ಪರಿಹಾರಕ್ಕಾಗಿ ಎಸಿ ಕಚೇರಿ ಪಿಠೋಪಕರಣಗಳು ಸೇರಿದಂತೆ ಸ್ವತಃ ಎಸಿಯವರ ಚೇರನ್ನೇ ಹೊತ್ತೊಯ್ದದ್ದರಿಂದ ಸಾರ್ವಜನಿಕರ ಎದುರು ಸ್ವತಃ ಎಸಿ ಹಾಗೂ ಸರ್ಕಾರಿ ಅಧಿಕಾರಿಗಳು ಮುಜುಗರಕ್ಕೊಳಗಾಗಿ ನಗೆಪಾಟೀಲಿಗೀಡಾದರು.
ನವದೆಹಲಿ: ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಜೈಲು ಸೇರಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಲು ನಿರಾಕರಿಸಿದೆ.
ಕಳೆದ ಅಕ್ಟೋಬರ್ 21ರಂದು ಪ್ರಜ್ವಲ್ ರೇವಣ್ಣ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ (Karnataka Highcourt) ವಜಾಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ (Supreme Court) ಮೇಲ್ಮನವಿ ಸಲ್ಲಿಸಿದ್ದರು. ಈ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್‌ನ ನ್ಯಾ.ಬೇಲಾ ಎಂ ತ್ರಿವೇದಿ ನೇತೃತ್ವದ ದ್ವಿ ಸದಸ್ಯ ಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ನ್ಯಾಯಾಲಯ, ಆರೋಪಿಯ ವಿರುದ್ಧ ಇನ್ನೂ ಹಲವು ದೂರುಗಳಿವೆ. ಇಷ್ಟು ಮಾತ್ರವಲ್ಲದೇ ಆರೋಪಿಯೂ ಸಾಕಷ್ಟು ಪ್ರಭಾವಶಾಲಿಯಾಗಿರುವ ಹಿನ್ನಲೆ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ. ಈ ವೇಳೆ ನಾನು 6 ತಿಂಗಳ ನಂತರ ಅರ್ಜಿ ಸಲ್ಲಿಸಬಹುದೇ? ಎಂದು ವಕೀಲ ರೋಹಟಗಿ ವಿನಂತಿಸಿದರು ಇದಕ್ಕೆ ನಾವು ಏನನ್ನೂ ಹೇಳುವುದಿಲ್ಲ ಎಂದು ನ್ಯಾಯಮೂರ್ತಿ ತ್ರಿವೇದಿ ಪ್ರತಿಕ್ರಿಯಿಸಿದರು.
ಈ ಹಿಂದೆ ಸಂಸದನಾಗಿದ್ದೆ, ಮತ್ತೊಮ್ಮೆ ಆಯ್ಕೆ ಬಯಸಿ ಸಂಸದ ಸ್ಥಾನಕ್ಕೆ ಸ್ಪರ್ಧಿಸಿದ್ದೆ, ಚುನಾವಣೆ ವೇಳೆ ಹೊರ ಬಂದ ಈ ಪ್ರಕರಣದಿಂದ ನಾನು ಸೋತಿದ್ದೇನೆ. ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಅಪರಾಧವನ್ನು ದೂರಿನಲ್ಲಿ ಉಲ್ಲೇಖಿಸದ ಕಾರಣ ಜಾಮೀನು ನೀಡಬೇಕು ಎಂದು ಪ್ರಜ್ವಲ್ ಪರ ರೋಹಟಗಿ ಮನವಿ ಮಾಡಿದ್ದರು.
ಪ್ರಜ್ವಲ್ ರೇವಣ್ಣ (Prajwal Revanna) ತಂದೆ ಹಾಗೂ ಮಾಜಿ ಸಚಿವ ಹೆಚ್.ಡಿ.ರೇವಣ್ಣ (H.D.Revanna) ವಿರುದ್ಧ ಕಳೆದ ಏಪ್ರಿಲ್ 28ರಂದು ರೇವಣ್ಣ ಅವರ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಸಂತ್ರಸ್ತೆ ದೂರು ದಾಖಲಿಸಿದ್ದರು. ಹೊಳೆನರಸೀಪುರ (Holenarasipura) ನಗರ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ದೂರು ದಾಖಲಾಗಿತ್ತು. ಎಫ್‌ಐಆರ್‌ನಲ್ಲಿ ಹೆಚ್.ಡಿ.ರೇವಣ್ಣ ಎ1 ಮತ್ತು ಪ್ರಜ್ವಲ್ ರೇವಣ್ಣ ಎ2 ಆರೋಪಿಯಾಗಿದ್ದಾರೆ. 354 A, 354 D, 509 ಅಡಿ ಪ್ರಕರಣ ದಾಖಲಾಗಿತ್ತು. 2015 ರಲ್ಲಿ ಹೆಚ್.ಡಿ.ರೇವಣ್ಣ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಸಂತ್ರಸ್ತೆ ದೂರು ನೀಡಿದ್ದರು. ತಂದೆ ಮತ್ತು ಮಗನ ವಿರುದ್ಧ ಸಂತ್ರಸ್ತೆ ಗಂಭೀರ ಆರೋಪಗಳನ್ನು ಮಾಡಿದ್ದರು.