Tag: Karnataka High Court

  • ಮುಡಾ ಹಗರಣ ಸಿಬಿಐ ತನಿಖೆಗೆ ವಹಿಸಲು ಮನವಿ – ನ.26 ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್‌

    ಮುಡಾ ಹಗರಣ ಸಿಬಿಐ ತನಿಖೆಗೆ ವಹಿಸಲು ಮನವಿ – ನ.26 ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್‌

    – ಸಿಎಂ ಸಿದ್ದರಾಮಯ್ಯ ಸೇರಿ ಹಲವರಿಗೆ ಹೈಕೋರ್ಟ್‌ ನೋಟಿಸ್‌

    ಬೆಂಗಳೂರು: ಮುಡಾ ಸೈಟ್‌ ಹಗರಣ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ ಮುಂದೂಡಿದೆ. ಅಲ್ಲದೇ, ಈ ಸಂಬಂಧ ಸಿಎಂ ಸಿದ್ದರಾಮಯ್ಯ ಹಾಗೂ ಇತರರಿಗೆ ಕೋರ್ಟ್‌ ನೋಟಿಸ್‌ ನೀಡಿದೆ.

    ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ಅರ್ಜಿಯ ಮೇರೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಲೋಕಾಯುಕ್ತ ಪೊಲೀಸರಿಗೆ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ.

    ನ.25 ರವರೆಗೆ ನಡೆಸುವ ತನಿಖೆಯ ವಿವರಗಳನ್ನು ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಹೈಕೋರ್ಟ್ ಸೂಚಿಸಿದ್ದು, ಅರ್ಜಿಯ ಮುಂದಿನ ವಿಚಾರಣೆಯನ್ನು ನ.26ಕ್ಕೆ ಮುಂದೂಡಿದೆ.

  • ಆರ್‌.ಆರ್‌ ನಗರ ದರ್ಶನ್ ನಿವಾಸದ ಬಳಿ ಪೊಲೀಸರ ಬಿಗಿ ಭದ್ರತೆ – ನಾಳೆ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ

    ಆರ್‌.ಆರ್‌ ನಗರ ದರ್ಶನ್ ನಿವಾಸದ ಬಳಿ ಪೊಲೀಸರ ಬಿಗಿ ಭದ್ರತೆ – ನಾಳೆ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ

    ಬೆಂಗಳೂರು: ಕೊಲೆ ಆರೋಪಿ ನಟ ದರ್ಶನ್‌ಗೆ (Darshan) ಮಧ್ಯಂತರ ಜಾಮೀನು ಸಿಕ್ಕಿದ್ರೂ ನೆಮ್ಮದಿಯಿಂದ ಇರವುದಕ್ಕೆ ಸಾಧ್ಯವಾದಂತೆ ಕಾಣುತ್ತಿಲ್ಲ. ಕಾರಣ ದರ್ಶನ್ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ದರ್ಶನ್‌ನ ಪ್ರತಿಯೊಂದು ಚಲನವಲನದ ಮೇಲೆ ಪೊಲೀಸರು (Bengaluru RR Nagar Police) ತೀವ್ರ ನಿಗಾ ವಹಿಸಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.

    ಸದ್ಯ ಬೆಂಗಳೂರಿನ ಹೊಸಕೆರೆಹಳ್ಳಿ ನಿವಾಸದಲ್ಲಿ ಬೀಡುಬಿಟ್ಟಿರುವ ನಟ ದರ್ಶನ್‌ ಇಂದು ಮಗ ವಿನೀಶ್‌ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು, ನಾಳೆ (ಅ.31) ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಹೊಸ ಬಟ್ಟೆ ಧರಿಸಿ ಜೈಲಿಂದ ಹೊರಬಂದ ದರ್ಶನ್; ಬಳ್ಳಾರಿ ಜೈಲಿನ ಹೊರಗೆ ‘ಅಭಿಮಾನದ ಹೊಳೆ’

    ದರ್ಶನ್‌ ಬೀಡುಬಿಟ್ಟಿರುವ ಆರ್‌.ಆರ್‌ ನಗರದ ನಿವಾಸದ ಬಳಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುನ್ನೆಚ್ಚರಿಕೆ ವಹಿಸಿದ್ದಾರೆ. ದರ್ಶನ್‌ ಮನೆ ಸಂಪರ್ಕಿಸುವ ಎರಡೂ ಕಡೆಯ ರಸ್ತೆಗಳಲ್ಲಿ ಬ್ಯಾರಿಕೇಡ್‌ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಮನೆಯ ಬಳಿ ದರ್ಶನ್‌ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಸಾಧ್ಯತೆ ಇರುವುದರಿಂದ ಬಿಗಿ ಬಂದೋಬಸ್ತ್‌ ವ್ಯವಸ್ಥೆ ಮಾಡಲಾಗಿದೆ. ಆರ್.ಆರ್ ನಗರ ದರ್ಶನ್ ಮನೆ ಬಳಿ 2 ಕೆಎಸ್‌ಆರ್‌ಪಿ ತುಕಡಿ, ಆರ್.ಆರ್ ನಗರ ಪೊಲೀಸರು ಸೇರಿದಂತೆ 55ಕ್ಕೂ ಹೆಚ್ಚು ಪೊಲೀಸರನ್ನ ಭದ್ರತೆಗೆ ನಿಯೋಜಿಸಲಾಗಿದೆ.

    ಪೊಲೀಸರ ಹದ್ದಿನ ಕಣ್ಣು:
    ಕೊಲೆ ಆರೋಪಿ ದರ್ಶನ್‌ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಮಧ್ಯಂತರ ಜಾಮೀನು ನೀಡಿರುವ ಹೈಕೋರ್ಟ್, ಹತ್ತು ಹಲವು ಷರತ್ತುಗಳನ್ನ ವಿಧಿಸಿ ಮಧ್ಯಂತರ ಜಾಮೀನು ನೀಡಲಾಗಿದೆ. ಹಾಗಾಗಿ ಆರೋಪಿ ದರ್ಶನ್‌ಗೆ ಕೋರ್ಟ್ ವಿಧಿಸಿರುವ ಒಂದೇ ಒಂದು ಷರತ್ತು ಉಲ್ಲಂಘನೆ ಮಾಡಿದರೂ ಅಥವಾ ಮಾಡುತ್ತಿದ್ದಾರೆ ಅನ್ನೋದು ಗೋತ್ತಾದರೂ ಕೂಡಲೆ ಪೊಲೀಸರು ಕೋರ್ಟ್ ಗಮನಕ್ಕೆ ತಂದು ದರ್ಶನ್‌ಗೆ ಕೊಟ್ಟಿರುವಂತಹ ಮಧ್ಯಂತರ ಜಾಮೀನು ರದ್ದು ಮಾಡಿಸಿ ಜೈಲಿಗೆ ಕಳಿಸಿ ಕೊಡುವ ಸಾಧ್ಯತೆಯಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

    ಈ ನಡುವೆ ದರ್ಶನ್ ಚಿಕಿತ್ಸೆ ಹೊರತು ಪಡಿಸಿದಂತೆ ಸಾಕ್ಷಿದಾರರ ಮೇಲೆ ಒತ್ತಡ ಹಾಕುವ ಪ್ರಯತ್ನ ಮಾಡಿದ್ರೆ ಸಂಕಷ್ಟದಲ್ಲಿ ತಗಲಾಕಿಕೊಳ್ಳೊದು ಪಕ್ಕಾ. ಆದ್ದರಿಂದ ದರ್ಶನ್ ಚಿಕಿತ್ಸೆಗಷ್ಟೇ ಸಿಮಿತವಾಗಿದ್ದುಕೊಂಡು ಹೋದರೆ 45 ದಿನ ಮಧ್ಯಂತರ ಜಾಮೀನು ಅವದಿಯ ಒಳಗೆ ಚಿಕಿತ್ಸೆ ಮುಗಿಸಿಕೊಳ್ಳಬಹುದು ಇಲ್ಲದೇ ಹೊದ್ರೆ ಮತ್ತೆ ಬಳ್ಳಾರಿ ಜೈಲೇ ಗತಿಯಾಗುವುದು ಖಚಿತವಾಗಿದೆ. ಇದನ್ನೂ ಓದಿ: Darshan Case File | ಜೂನ್‌ 8 ರಿಂದ ಅ.30ರ ವರೆಗೆ ಏನೆಲ್ಲಾ ಆಯ್ತು? 

  • Darshan Case File | ಜೂನ್‌ 8 ರಿಂದ ಅ.30ರ ವರೆಗೆ ಏನೆಲ್ಲಾ ಆಯ್ತು?

    Darshan Case File | ಜೂನ್‌ 8 ರಿಂದ ಅ.30ರ ವರೆಗೆ ಏನೆಲ್ಲಾ ಆಯ್ತು?

    ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ಬಂಧನಕ್ಕೆ ಒಳಗಾಗಿದ್ದ ಆರೋಪಿ ನಟ ದರ್ಶನ್‌ಗೆ (Darshan) 140 ದಿನಗಳ ಬಳಿಕ ಹೈಕೋರ್ಟ್‌ 6 ವಾರಗಳ ಕಾಲ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.‌ ಕಳೆದ ಜೂನ್‌ 8ರಂದು ರೇಣುಕಾಸ್ವಾಮಿ ಅಪಹರಣ ಪ್ರಕರಣ ಬೆಳಕಿಗೆ ಬಂದನಂತರ ಈವರೆಗೆ ಏನೇನಾಯ್ತು ಅನ್ನೋ ಡಿಟೇಲ್ಸ್‌ ಇಲ್ಲಿದೆ…

    1. ಜೂನ್‌ 8: ರೇಣುಕಾಸ್ವಾಮಿ ಅಪಹರಣ ಆರೋಪ

    2. ಜೂನ್‌ 8: ರೇಣುಕಾಸ್ವಾಮಿ ಹತ್ಯೆ

    3. ಜೂನ್‌ 9: ರೇಣುಕಾಸ್ವಾಮಿ ಶವ ಪತ್ತೆ

    4. ಜೂನ್‌ 10: ನಾಲ್ವರು ಆರೋಪಿಗಳು ಶರಣಾಗತಿ

    5. ಜೂನ್‌ 11: ದರ್ಶನ್‌, ಪವಿತ್ರಾಗೌಡ ಬಂಧನ

    6. ಜೂನ್‌ 22: ಪರಪ್ಪನ ಅಗ್ರಹಾರ ಜೈಲಿಗೆ ದರ್ಶನ್‌ & ಗ್ಯಾಂಗ್‌

    7. ಆಗಸ್ಟ್‌ 29: ಬಳ್ಳಾರಿ ಜೈಲಿಗೆ ದರ್ಶನ್‌

    8. ಅಕ್ಟೋಬರ್‌ 15: ಸೆಷನ್‌ ಕೋರ್ಟ್‌ನಲ್ಲಿ ದರ್ಶನ್‌ ಜಾಮೀನು ಅರ್ಜಿ ತಿರಸ್ಕೃತ

    9. ಅಕ್ಟೋಬರ್‌ 30: ಹೈಕೋರ್ಟ್‌ನಿಂದ ದರ್ಶನ್‌ಗೆ 6 ವಾರಗಳ ಷರತ್ತುಬದ್ಧ ಜಾಮೀನು ಮಂಜೂರು

  • ದರ್ಶನ್‌ಗೆ ಜಾಮೀನು – ಪಾಸ್‌ಪೋರ್ಟ್‌ ಒಪ್ಪಿಸುವಂತೆ ಕೋರ್ಟ್‌ ಸೂಚಿಸಿದ್ದೇಕೆ?

    ದರ್ಶನ್‌ಗೆ ಜಾಮೀನು – ಪಾಸ್‌ಪೋರ್ಟ್‌ ಒಪ್ಪಿಸುವಂತೆ ಕೋರ್ಟ್‌ ಸೂಚಿಸಿದ್ದೇಕೆ?

    ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಆರೋಪಿ ನಟ ದರ್ಶನ್‌ಗೆ‌ (Darshan) ಗಿಫ್ಟ್‌ ಸಿಕ್ಕಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ದರ್ಶನ್‌ಗೆ ಬರೋಬ್ಬರಿ 140 ದಿನಗಳ ಬಳಿಕ ಕರ್ನಾಟಕ ಹೈಕೋರ್ಟ್‌ (Karnataka High Court) ಜಾಮೀನು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಈ ವೇಳೆ ಹಲವು ಷರತ್ತುಗಳನ್ನೂ ವಿಧಿಸಿದೆ

    ಪಾಸ್‌ಪೋರ್ಟ್‌ ಸರೆಂಡರ್‌ ಮಾಡುವಂತೆ ಹೇಳಿದ್ದು ಏಕೆ?
    ದರ್ಶನ್‌ಗೆ‌ 6 ವಾರಗಳ ಕಾಲ ಮೆಡಿಕಲ್‌ ಬೇಲ್‌ (Medical Bail) ಮಂಜೂರು ಮಾಡಿರುವ ಕೋರ್ಟ್‌ ಪಾಸ್‌ಪೋರ್ಟ್‌ ಸರೆಂಡರ್‌ ಮಾಡುವಂತೆ ಸೂಚಿಸಿದೆ. ಚಿಕಿತ್ಸೆಯನ್ನು ಎಲ್ಲಿ ಪಡೆಯಬೇಕು ಎಂದು ಕೋರ್ಟ್‌ ನಿರ್ದಿಷ್ಟವಾಗಿ ಸೂಚಿಸಿಲ್ಲ. ಇದನ್ನೂ ಓದಿ: 5 ತಿಂಗಳ ಬಳಿಕ ದರ್ಶನ್ ರಿಲೀಸ್ – ಹೈಕೋರ್ಟ್‌ನಿಂದ 6 ವಾರಗಳ ಜಾಮೀನು ಮಂಜೂರು

    ಜಾಮೀನು ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ವಿದೇಶದಲ್ಲಿ ಚಿಕಿತ್ಸೆ ಪಡೆಯುವ ಸಾಧ್ಯತೆ ಇರುವ ಕಾರಣ ಒಂದು ವೇಳೆ ಜಾಮೀನು ಮಂಜೂರು ಮಾಡಿದರೂ ಪಾಸ್‌ಪೋರ್ಟ್‌ ನ್ಯಾಯಾಲಯಕ್ಕೆ ಒಪ್ಪಿಸಬೇಕೆಂದು ಎಸ್‌ಪಿಪಿ ಪ್ರಸನ್ನ ಕುಮಾರ್‌ (SPP Prasannakumar) ಮನವಿ ಮಾಡಿದ್ದರು. ಈ ಮನವಿಗೆ ಕೋರ್ಟ್‌ ಸ್ಪಂದಿಸಿ ಪಾಸ್‌ಪೋರ್ಟ್‌ ಅನ್ನು ತನಗೆ ಒಪ್ಪಿಸುವಂತೆ ಷರತ್ತು ವಿಧಿಸಿದೆ. ಅಷ್ಟೇ ಅಲ್ಲದೇ ಆಸ್ಪತೆಗೆ ದಾಖಲಾಗುತ್ತಿದ್ದಂತೆ 1 ವಾರದೊಳಗೆ ಪ್ರಾಥಮಿಕ ವೈದ್ಯಕೀಯ ವರದಿ ಸಲ್ಲಿಸಬೇಕು ಎಂದು ಸೂಚಿಸಿದೆ.

    ದರ್ಶನ್‌ ಪರ ವಕೀಲರು ಹೇಳಿದ್ದೇನು?
    ದರ್ಶನ್‌ ಜಾಮೀನು ವಿಚಾರ ಕುರಿತು ಮಾತನಾಡಿರುವ ದರ್ಶನ್ ಪರ ವಕೀಲ ಸುನೀಲ್, ದರ್ಶನ್‌ ಅವರಿಗೆ ಬೆನ್ನುಮೂಳೆ ಶಸ್ತ್ರಚಿಕಿತ್ಸೆ ಆಗಬೇಕು ಅನ್ನೋ ವಾದವನ್ನು ಸಿ.ವಿ ನಾಗೇಶ್‌ ಕೋರ್ಟ್‌ ಮುಂದಿಟ್ಟರು. ಏಕೆಂದರೆ L5 ಮತ್ತು S1 ನರದಲ್ಲಿ ದರ್ಶನ್‌ಗೆ ಸಮಸ್ಯೆ ಇದೆ. 2022-23ರಿಂದಲೂ ಈ ಸಮಸ್ಯೆ ಇತ್ತು. ಆದ್ದರಿಂದ ಅದೇ ವಾದದಲ್ಲಿ ನಾವು ಮುಂದುವರಿದ್ವಿ. ಅದಕ್ಕೆ ಕೋರ್ಟ್‌ ಬಳ್ಳಾರಿ ಜೈಲರ್‌ ಅವರಿಂದ ವೈದ್ಯಕೀಯ ವರದಿಗಳನ್ನ ಕೇಳಿತ್ತು. ಸೀಲ್ಡ್‌ ಕವರ್‌ನಲ್ಲಿ ವೈದ್ಯಕೀಯ ವರದಿ ಸ್ವೀಕರಿಸಿದ ನಂತರ ಇಂದು 6 ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಆಸ್ಪತ್ರೆಗೆ ದಾಖಲದ ಮೊದಲ ವಾರದ ಪ್ರಾಥಮಿಕ ವೈದ್ಯಕೀಯ ವರದಿಯನ್ನ ಸಲ್ಲಿಕೆ ಮಾಡುವಂತೆ ಸೂಚಿಸಿದೆ. ನಾವೂ ಒಪ್ಪಿದ್ದೇವೆ, ಜೊತೆಗೆ ಪಾಸ್‌ಪೋರ್ಟ್‌ ರದ್ದು ಮಾಡುವಂತೆ ಸೂಚಿಸಿದೆ. ಕೋರ್ಟ್‌ನ ಷರತ್ತುಗಳನ್ನ ಫುಲ್‌ಫಿಲ್‌ ಮಾಡುತ್ತೇವೆ ಎಂದಿದ್ದಾರೆ.

    ಹೈಕೋರ್ಟ್‌ ದೃಢೀಕೃತ ಆದೇಶ ಕೊಟ್ಟ ನಂತರ ಸೆಷನ್ಸ್‌ ನ್ಯಾಯಾಲಯದಲ್ಲಿ ಅಡ್ವಾನ್ಸ್‌ಮೆಂಟ್‌ ಅಪ್ಲಿಕೇಷನ್‌ ಹಾಕಬೇಕು. ಸೆಷನ್‌ ಕೋರ್ಟ್‌ ಅರ್ಜಿಯನ್ನು ಸ್ವೀಕಾರ ಮಾಡಬೇಕು. ಆ ಬಳಿಕ ಶೂರಿಟಿ ದಾಖಲಾತಿ ನೀಡಿ, ಪಾಸ್‌ಪೋರ್ಟ್‌ ಸರೆಂಡರ್‌ ಮಾಡಿದ ನಂತರವೇ ದರ್ಶನ್‌ ರಿಲೀಸ್‌ ಆಗಲಿದ್ದಾರೆ. ಇದನ್ನೂ ಓದಿ: ದರ್ಶನ್‌ಗೆ ಜಾಮೀನು ಸಿಗುತ್ತಿದ್ದಂತೆ ಕಾಮಾಕ್ಯ ದೇವಿಗೆ ಧನ್ಯವಾದ ತಿಳಿಸಿದ ವಿಜಯಲಕ್ಷ್ಮಿ

    ಮೈಸೂರು ಅಪೋಲೋ ಆಸ್ಪತ್ರೆಯಲ್ಲಿ ದರ್ಶನ್‌ ರೆಗ್ಯುಲರ್‌ ಟ್ರೀಟ್ಮೆಂಟ್‌ ಪಡೆಯುತ್ತಿದ್ದರು. ಅವರು ರಿಲೀಸ್‌ ಆದ ಬಳಿಕ ಕುಟುಂಬದೊಂದಿಗೆ ಚರ್ಚೆ ಮಾಡಿ ಅವರಿಷ್ಟದ ಆಸ್ಪತ್ರೆಗೆ ದಾಖಲು ಮಾಡುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.

  • ಸಿದ್ದರಾಮಯ್ಯನವರು ಕೂಡಲೇ ಮುಡಾ ಪ್ರಕರಣವನ್ನ ಸಿಬಿಐಗೆ ವಹಿಸಬೇಕು: ವಿಜಯೇಂದ್ರ ಆಗ್ರಹ

    ಸಿದ್ದರಾಮಯ್ಯನವರು ಕೂಡಲೇ ಮುಡಾ ಪ್ರಕರಣವನ್ನ ಸಿಬಿಐಗೆ ವಹಿಸಬೇಕು: ವಿಜಯೇಂದ್ರ ಆಗ್ರಹ

    – ಸಿದ್ದರಾಮಯ್ಯ ಬೆತ್ತಲಾಗಿದ್ದಾರೆ ಎಂದು ಶಾಸಕ ಲೇವಡಿ
    – ನಾಳೆ ಬಿಜೆಪಿ ಶಾಸಕರು, ಸಂಸದರಿಂದ ಪ್ರತಿಭಟನೆ

    ಬೆಂಗಳೂರು: ಮುಡಾ ಪ್ರಕರಣ (MUDA Case) ಬಗ್ಗೆ ಇಡೀ ದೇಶ ಮಾತನಾಡುತ್ತಿದೆ. ಸಿಎಂ ಸಿದ್ದರಾಮಯ್ಯ ಬೆತ್ತಲಾಗಿದ್ದಾರೆ. ಭ್ರಷ್ಟಾಚಾರ ರಹಿತ ಆಡಳಿತ ಕೊಡ್ತೀವಿ ಅಂತ ಅಧಿಕಾರಕ್ಕೆ ಬಂದು, ಒಂದೇ ವರ್ಷದಲ್ಲಿ ಇಷ್ಟೆಲ್ಲ ಭ್ರಷ್ಟಾಚಾರ ಮಾಡಿ ಸಿಕ್ಕಿಬಿದ್ದಿದ್ದಾರೆ. ಸಿಎಂ ಅಧಿಕಾರದಲ್ಲಿರುವಾಗ ಲೋಕಾಯುಕ್ತ ಪ್ರಾಮಾಣಿಕ ತನಿಖೆ ನಡೆಸಲು ಸಾಧ್ಯವೇ? ಆದ್ದರಿಂದ ಕೂಡಲೇ ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಶಾಸಕರೂ ಆಗಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ಆಗ್ರಹಿಸಿದ್ದಾರೆ.

    ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ರಾಜ್ಯ ಹೈಕೋರ್ಟ್ (Karnataka High Court) ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆದೇಶವನ್ನು ಪ್ರಶ್ನಿಸಿ ಸಿಎಂ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾಗೊಳಿಸಿತ್ತು. ಇದಾದ ಬೆನ್ನಲ್ಲೇ ಬುಧವಾರ ಜನಪ್ರತಿನಿಧಿಗಳ ನ್ಯಾಯಾಲಯ ಮೈಸೂರು ಲೋಕಾಯುಕ್ತ ಪೊಲೀಸರಿಂದ (Mysuru Lokayukta Police) ತನಿಖೆಗೆ ಆದೇಶ ನೀಡಿತು. ಈ ಕುರಿತು ರಾಜ್ಯ ಬಿಜೆಪಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ರಾಜೀನಾಮೆ ಪಡೆದರೆ ಇಡೀ ದಕ್ಷಿಣ ಭಾರತ ಹೊತ್ತಿ ಉರಿಯುತ್ತೆ: ಅಹಿಂದ ರಾಜ್ಯಾಧ್ಯಕ್ಷ

    ಹೈಕೋರ್ಟ್‌ನಿಂದ ತೀರ್ಪು ಹೊರಬಂದಿದ್ದರೂ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡಲ್ಲ ಅಂದಿದ್ದಾರೆ. ಆರೋಪಗಳು ಬಂದಿದ್ದರೂ ಏಕೆ ರಾಜೀನಾಮೆ ಕೊಡಬೇಕು ಅಂದಿದ್ದಾರೆ. ಈ ಹಿಂದೆ ಯಡಿಯೂರಪ್ಪ ಅವರ ಮೇಲೆ ಆರೋಪ ಕೇಳಿಬಂದಾಗ ಸಿದ್ದರಾಮಯ್ಯ ವಿಪಕ್ಷ ನಾಯಕ ಆಗಿದ್ರು, ಆಗ ಏನು ಹೇಳಿದ್ರು ಅಂತ ನೆನಪಿಸಿಕೊಳ್ಳಲಿ ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: MUDA Scam| ಸಿಎಂ ವಿರುದ್ಧ ಲೋಕಾಯುಕ್ತ ತನಿಖೆಗೆ ಕೋರ್ಟ್‌ ಆದೇಶ

    ರಾಜೀನಾಮೆ ಕೊಟ್ಟು ತನಿಖೆಗೆ ಸಹಕರಿಸಲಿ:
    ಬಿಜೆಪಿಯು ಇಂತಹ ಭ್ರಷ್ಟ ಸರ್ಕಾರ, ಭ್ರಷ್ಟ ಸಿಎಂ ವಿರುದ್ಧ ನಿರಂತರ ಹೋರಾಟ ಮಾಡ್ಕೊಂಡು ಬಂದಿದೆ, ಪಾದಯಾತ್ರೆ ನಡೆಸಿದೆ. ಇದರ ಪರಿಣಾಮ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟರು. ಹೈಕೋರ್ಟ್ ಸಹ ತನಿಖೆ ನಡೆಸಿ ಅಂದಿದೆ. ಈಗ ಜನಪ್ರತಿನಿಧಿಗಳ ಕೋರ್ಟ್ ಸಹ ತನಿಖೆ ಮಾಡಲು ಮೈಸೂರು ಲೋಕಾಯುಕ್ತ ಪೊಲೀಸರಿಗೆ ಸೂಚನೆ ಕೊಟ್ಟಿದೆ. ಯಾವ ನಾಯಕನ ವಿರುದ್ಧ ತನಿಖೆಗೆ ಆದೇಶ ಆಗಿದೆಯೋ ಆ ವ್ಯಕ್ತಿ ರಾಜ್ಯದ ಸಿಎಂ. ಇಂಥ ಸಂದರ್ಭದಲ್ಲಿ ಪಾರದರ್ಶಕ ತನಿಖೆ ನಡೆಯುವುದು ಅನುಮಾನ. ಹಾಗಾಗಿ ಕೋರ್ಟ್ ತೀರ್ಪುಗಳನ್ನು ಒಪ್ಪಿಕೊಂಡು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಲಿ. ರಾಜೀನಾಮೆ ಕೊಟ್ಟು ಸಿದ್ದರಾಮಯ್ಯ ತನಿಖೆಗೆ ಸಹಕರಿಸಲಿ ಎಂದು ಒತ್ತಾಯಿಸಿದ್ದಾರೆ.

    ಲೋಕಾಯುಕ್ತದಿಂದ ಪ್ರಾಮಾಣಿಕ ತನಿಖೆ ಸಾಧ್ಯವೇ?
    ಸಿಎಂ ವಿರುದ್ಧವೇ ಆರೋಪ ಕೇಳಿಬಂದಾಗ ಲೋಕಾಯುಕ್ತ ಪೊಲೀಸರಿಂದ ಪ್ರಾಮಾಣಿಕ ತನಿಖೆ ಮಾಡಲು ಸಾಧ್ಯವೇ? ಲೋಕಾಯುಕ್ತ ಪೊಲೀಸರಿಂದ ನ್ಯಾಯಬದ್ಧ ತನಿಖೆ ಅಸಾಧ್ಯ. ಕೋರ್ಟ್ ಆದೇಶ ಮಾಡಿರಬಹುದು, ಆದರೆ ತನಿಖೆ ಪಾರದರ್ಶಕ ಆಗುತ್ತಾ? ಹೀಗಾಗಿ ಸಿದ್ದರಾಮಯ್ಯ ಅವರು ಸಿಬಿಐಗೆ ಮುಡಾ ಪ್ರಕರಣ ವಹಿಸಬೇಕು. ಸ್ವತಂತ್ರ ತನಿಖಾ ಸಂಸ್ಥೆಯಿಂದಲೇ ಮುಡಾ ಪ್ರಕರಣ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ತನಿಖೆ ಎದುರಿಸಲು ಸಿದ್ಧನಿದ್ದೇನೆ: ಕೋರ್ಟ್ ಆದೇಶಕ್ಕೆ ಸಿಎಂ ಪ್ರತಿಕ್ರಿಯೆ

    ಭ್ರಷ್ಟಾಚಾರಕ್ಕೆ ಸಾಥ್ ಕೊಡ್ತಿದ್ದಾರೆ ಎಂದರ್ಥವೇ?
    ಸಿದ್ದರಾಮಯ್ಯನವರು ನನ್ನ ಜೊತೆ ಪಕ್ಷ ಇದೆ, ಶಾಸಕರು ಇದ್ದಾರೆ ಅಂತಿದ್ದಾರೆ. ಅದು ನಿಜವಾದ್ರೆ ಭ್ರಷ್ಟಾಚಾರಕ್ಕೆ ಅವರ ಪಕ್ಷದವರು ಸಾಥ್ ಕೊಡ್ತಿದ್ದಾರೆ ಎಂದು ಅರ್ಥವೇ? ಸಿದ್ದರಾಮಯ್ಯ ತಡಮಾಡದೇ ಸಿಬಿಐ ತನಿಖೆಗೆ ಆದೇಶ ಮಾಡಬೇಕು. ತಕ್ಷಣ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೇನಾಮೆ ಕೊಡಬೇಕು. ಅದಕ್ಕಾಗಿ ಗುರುವಾರ (ಸೆ.26) ಬಿಜೆಪಿ ಶಾಸಕರು, ಸಂಸದರು ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದಿದ್ದಾರೆ.

    ಯಡಿಯೂರಪ್ಪ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಸದ್ಯ ಪ್ರಿಯಾಂಕ್ ಖರ್ಗೆ ಸಿಎಂ ಆಗೋ ಕನಸು ಕಾಣ್ತಿದ್ದಾರೆ. ಅವರ ಮಾತಿಗೆ ಅಷ್ಟೊಂದು ಆದ್ಯತೆ ಯಾಕೆ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ವಿರುದ್ಧ ತನಿಖೆಯಾಗಬೇಕು – ಹರಿಯಾಣ ವಿಧಾನಸಭಾ ಚುನಾವಣೆ ಪ್ರಚಾರದಲ್ಲಿ ಮೋದಿ ಆಗ್ರಹ

  • ಪ್ರಾಸಿಕ್ಯೂಷನ್‌ ಆದೇಶ ಎತ್ತಿ ಹಿಡಿದ ಹೈಕೋರ್ಟ್‌; ಸುಪ್ರೀಂ ಕೋರ್ಟ್‌ಗೆ ಹೋಗಲು ತಯಾರಿದ್ದೇವೆ – ಪ್ರಿಯಾಂಕ್‌ ಖರ್ಗೆ

    ಪ್ರಾಸಿಕ್ಯೂಷನ್‌ ಆದೇಶ ಎತ್ತಿ ಹಿಡಿದ ಹೈಕೋರ್ಟ್‌; ಸುಪ್ರೀಂ ಕೋರ್ಟ್‌ಗೆ ಹೋಗಲು ತಯಾರಿದ್ದೇವೆ – ಪ್ರಿಯಾಂಕ್‌ ಖರ್ಗೆ

    – ಹೆಣದ ಮೇಲೆ ಹಣ ಮಾಡೋರಿಗೆ ರಾಜೀನಾಮೆ ಕೇಳುವ ನೈತಿಕತೆ ಇದೆಯೇ ಎಂದ ಸಚಿವ

    ನವದೆಹಲಿ: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ – MUDA) ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಹಿನ್ನಡೆಯಾಗಿದ್ದು ತನಿಖೆಗೆ ಹೈಕೋರ್ಟ್‌ (High Court) ಗ್ರೀನ್‌ ಸಿಗ್ನಲ್‌ ನೀಡಿದೆ. ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಆದೇಶವನ್ನು ಎತ್ತಿ ಹಿಡಿದ ಹೈಕೋರ್ಟ್‌ ಸಿದ್ದರಾಮಯ್ಯ (CM Siddaramaiah) ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ವಜಾಗೊಳಿಸಿದೆ. ಈ ಬೆನ್ನಲ್ಲೇ ಕಾಂಗ್ರೆಸ್‌-ಬಿಜೆಪಿ ನಾಯಕರ ನಡುವೆ ರಾಜಕೀಯ ಜಟಾಪಟಿ ಶುರುವಾಗಿದೆ.

    ರಾಜ್ಯ ಹೈಕೋರ್ಟ್‌ ತೀರ್ಪಿನ ಕುರಿತು ದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿರುವ ಸಚಿವ ಪ್ರಿಯಾಂಕ್‌ ಖರ್ಗೆ (Priyank Kharge), ಇದು ನಿರೀಕ್ಷಿತ, ತನಿಖಾ ಸಂಸ್ಥೆಗಳಿಂದ ಸಾಧ್ಯವಾಗದ ಕಾರಣ, ರಾಜ್ಯಪಾಲರ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ತಿದ್ದಾರೆ. ಮೋದಿ, ಅಮಿತ್ ಶಾ, ರಾಜ್ಯಪಾಲರು ಎಲ್ಲರೂ ಅವರ ಬಳಿಕ ಇರಬಹುದು. ನಮ್ಮ ಬಳಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದ ಇದೆ. ವೈಯುಕ್ತಿಕವಾಗಿ ಆಶ್ಚರ್ಯವಾಗಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು, ಕೊಡದಿದ್ದರೆ ರಾಷ್ಟ್ರಮಟ್ಟದಲ್ಲಿ ಹೋರಾಟ ಗ್ಯಾರಂಟಿ: ಛಲವಾದಿ

    ಈ ಹಿಂದೆ ಬೇರೆ ಬೇರೆ ರಾಜ್ಯಗಳಲ್ಲಿ ಏನೇಲ್ಲ ಆಗಿದೆ? ದೆಹಲಿ, ಜಾರ್ಖಂಡ್ ಕೇಸ್‌ನಲ್ಲಿ ಏನಾಯಿತು? ಸುಪ್ರೀಂ ಕೋರ್ಟ್ ಛೀಮಾರಿ ಹಾಕಿಲ್ವಾ? ಇವರಿಗೆ ರಾಜೀನಾಮೆ ಕೇಳುವ ನೈತಿಕತೆ ಇದಿಯಾ? ಆಪರೇಷನ್ ಕಮಲ, ಹೆಣದ ಮೇಲೆ, ಕಸದ ಮೇಲೆ ಹಣ ಮಾಡೊದು ಇವರು. ದಲಿತರ ಮೇಲೆ ದೌರ್ಜನ್ಯ ಮಾಡುವುದು ಇವರು ಎಂದು ತಿವಿದಿದ್ದಾರೆ. ಇದನ್ನೂ ಓದಿ: ಬೆಂಗಳೂರು- ಮೈಸೂರು ಪಾದಯಾತ್ರೆ, ಹೋರಾಟಕ್ಕೆ ಮೊದಲ ಜಯ – ಗೌರವಯುತವಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಿ: ವಿಜಯೇಂದ್ರ

    ವಿಜಯೇಂದ್ರ ಮೊದಲು ರಾಜೀನಾಮೆ ನೀಡಬೇಕಾಗುತ್ತದೆ. ಅವರ ತಂದೆ ಮೇಲೆ ಪೋಕ್ಸೋ ಕೇಸ್ ಇದೆ. ಅವರು ರಾಜೀನಾಮೆ ಕೊಡಬೇಕು. ತನಿಖಾ ಸಂಸ್ಥೆಗಳು ಸಿಎಂ ಸಿದ್ದರಾಮಯ್ಯ ಹೆಸರು ಹೇಳುವಂತೆ ಒತ್ತಾಯ ಮಾಡಿಲ್ವಾ? ನಾವು ಎರಡು ನ್ಯಾಯಲಯಕ್ಕೆ ಹೋಗಲು ತಯಾರಿದ್ದೇವೆ? ಸುಪ್ರೀಂ ಕೋರ್ಟ್ ಮತ್ತು ಜನತಾ ನ್ಯಾಯಾಲಯಕ್ಕೆ ಹೋಗಲು ತಯಾರಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಿಎಂ ಸಲ್ಲಿಸಿದ್ದ ರಿಟ್‌ ಅರ್ಜಿ ವಜಾ – ರಾಜ್ಯಪಾಲರ ಪ್ರಾಸಿಕ್ಯೂಷನ್‌ ಆದೇಶ ಎತ್ತಿಹಿಡಿದ ಹೈಕೋರ್ಟ್‌

  • ಬೆಂಗಳೂರು- ಮೈಸೂರು ಪಾದಯಾತ್ರೆ, ಹೋರಾಟಕ್ಕೆ ಮೊದಲ ಜಯ – ಗೌರವಯುತವಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಿ: ವಿಜಯೇಂದ್ರ

    ಬೆಂಗಳೂರು- ಮೈಸೂರು ಪಾದಯಾತ್ರೆ, ಹೋರಾಟಕ್ಕೆ ಮೊದಲ ಜಯ – ಗೌರವಯುತವಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಿ: ವಿಜಯೇಂದ್ರ

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ರಾಜ್ಯ ಹೈಕೋರ್ಟಿನ ತೀರ್ಪನ್ನು ಗೌರವಿಸಿ ಗೌರವಯುತವಾಗಿ ಸಿಎಂ ಸ್ಥಾನಕ್ಕೆ ಕೂಡಲೇ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (BY Vijayendra) ಅವರು ಆಗ್ರಹಿಸಿದರು.

    ಬಿಜೆಪಿ ರಾಜ್ಯ ಕಾರ್ಯಾಲಯ (BJP Office) ಜಗನ್ನಾಥ ಭವನದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಅವಕಾಶ ಕೊಟ್ಟಿದ್ದ ಮಾನ್ಯ ರಾಜ್ಯಪಾಲರ ಕ್ರಮವನ್ನು ರಾಜ್ಯ ಹೈಕೋರ್ಟ್ (Karnataka Highcourt) ಎತ್ತಿ ಹಿಡಿದಿದೆ. ಸಿದ್ದರಾಮಯ್ಯನವರ ಅರ್ಜಿಯನ್ನು ವಜಾ ಮಾಡಿದ್ದಾರೆ. ಕಾನೂನಿನ ಎದುರು ಎಲ್ಲರೂ ಒಂದೇ ಎಂದು ಹೈಕೋರ್ಟ್ ತಿಳಿಸಿದೆ ಎಂದು ವಿಜಯೇಂದ್ರ ವಿಶ್ಲೇಷಿಸಿದರು. ಇದನ್ನೂ ಓದಿ: ಸಿಎಂ ಸಲ್ಲಿಸಿದ್ದ ರಿಟ್‌ ಅರ್ಜಿ ವಜಾ – ರಾಜ್ಯಪಾಲರ ಪ್ರಾಸಿಕ್ಯೂಷನ್‌ ಆದೇಶ ಎತ್ತಿಹಿಡಿದ ಹೈಕೋರ್ಟ್‌

    ಹೈಕೋರ್ಟ್‍ನಲ್ಲಿ ಸುದೀರ್ಘ ವಾದ, ಪ್ರತಿವಾದದ ಬಳಿಕ ಈ ತೀರ್ಪು ಹೊರಬಿದ್ದಿದೆ. ಗೌರವಾನ್ವಿತ ರಾಜ್ಯಪಾಲರು ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂಶನ್‍ಗೆ ಅನುಮತಿ ಕೊಟ್ಟಿದ್ದರು. ಕಾಂಗ್ರೆಸ್ಸಿಗರು ಗೌರವಾನ್ವಿತ ರಾಜ್ಯಪಾಲರು, ರಾಜಭವನವನ್ನು ಕೇಂದ್ರದ ಏಜೆಂಟ್ ಎಂದು ಆಕ್ಷೇಪಿಸಿದ್ದರು ಎಂದು ಟೀಕಿಸಿದರು. ಇದನ್ನೂ ಓದಿ: ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು, ಕೊಡದಿದ್ದರೆ ರಾಷ್ಟ್ರಮಟ್ಟದಲ್ಲಿ ಹೋರಾಟ ಗ್ಯಾರಂಟಿ: ಛಲವಾದಿ

    ಕಳೆದ ಕೆಲವು ತಿಂಗಳಿನಿಂದ ಬಿಜೆಪಿ ಭ್ರಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ ನಿರಂತರ ಹೋರಾಟ ನಡೆಸಿತ್ತು. ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರದ ವಿರುದ್ಧ ನಿರಂತರ ಹೋರಾಟ ಮಾಡಿದ್ದೆವು. ನಂತರ ಸ್ವತಃ ಸಿಎಂ ಕುಟುಂಬವೇ ಫಲಾನುಭವಿಗಳಾಗಿರುವ ಮೈಸೂರಿನ ಮುಡಾ ಹಗರಣ ವಿರುದ್ಧ ಹೋರಾಟ ಹಮ್ಮಿಕೊಂಡಿದ್ದೆವು. ಬೆಂಗಳೂರು- ಮೈಸೂರು ಪಾದಯಾತ್ರೆಯನ್ನು ನಡೆಸಿ ಬಿಜೆಪಿ- ಜೆಡಿಎಸ್ ಒಟ್ಟಾಗಿ ಯಶಸ್ವಿ ಹೋರಾಟ ಮಾಡಿದ್ದಾಗಿ ವಿಜಯೇಂದ್ರ ವಿವರಿಸಿದರು. ಇದನ್ನೂ ಓದಿ: ತಿರುಪತಿ ಲಡ್ಡಿನಲ್ಲಿ ಪ್ರಾಣಿ ಕೊಬ್ಬು ಮಿಶ್ರಣ ಆರೋಪ – ಸರ್ಕಾರಕ್ಕೆ 40 ಪುಟಗಳ ವರದಿ ಸಲ್ಲಿಸಿದ ಟಿಟಿಡಿ

    ಗೌರವಾನ್ವಿತ ರಾಜ್ಯಪಾಲರಿಗೆ ಅನೇಕ RTI ಕಾರ್ಯಕರ್ತರು ಖಾಸಗಿ ದೂರು ನೀಡಿದ್ದರು. ಸೂಕ್ತ ತನಿಖೆ ನಡೆಸಲು ಒತ್ತಾಯಿಸಿದ್ದರು ಎಂದು ಅವರು ತಿಳಿಸಿದರು. ಭ್ರಷ್ಟಾಚಾರ ರಹಿತ ಆಡಳಿತ ನೀಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದರು ಎಂದ ಅವರು, ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಭ್ರಷ್ಟಾಚಾರದ ಕಳಂಕ ಹೊತ್ತ ಸಿದ್ದರಾಮಯ್ಯನವರು ಕೂಡಲೇ ರಾಜೀನಾಮೆ ಕೊಡಬೇಕೆಂದು ಒತ್ತಾಯಿಸಿದರು. ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುವ ವಿಶ್ವಾಸ ಇದೆ. ಅವರು ಕೂಡಲೇ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕಾಗುತ್ತದೆ ಎಂದು ಪ್ರಶ್ನೆಗೆ ಉತ್ತರಿಸಿದರು.

    ಮುಡಾ ವಿಚಾರದಲ್ಲಿ ತಮ್ಮ ಪಾತ್ರ ಇಲ್ಲ ಎಂದು ಮುಖ್ಯಮಂತ್ರಿಗಳು ಹೇಳಿದ್ದರು. ಬಳಿಕ ರಾಜಭವನ, ರಾಜ್ಯಪಾಲರ ವಿರುದ್ಧ ತೇಜೋವಧೆ ಮಾಡಿದ್ದರು. ಈಗ ಹೈಕೋರ್ಟ್ ಸ್ಪಷ್ಟ ಮಾತುಗಳಲ್ಲಿ ಹೇಳಿದೆ. ಆದ್ದರಿಂದ ಸಿಎಂ ರಾಜೀನಾಮೆ ಕೊಡಲೇಬೇಕು ಎಂದು ಆಗ್ರಹವನ್ನು ಮುಂದಿಟ್ಟರು. ನಮ್ಮ ಹೋರಾಟಕ್ಕೆ ಮೊದಲ ಹಂತದ ಜಯ ಸಿಕ್ಕಿದೆ ಎಂದೂ ಅವರು ಪ್ರಶ್ನೆಗೆ ಉತ್ತರ ಕೊಟ್ಟರು. ಪಕ್ಷದ ಮುಂದಿನ ನಡೆಯ ಕುರಿತು ಪ್ರಮುಖರು, ಹಿರಿಯರ ಜೊತೆ ಚರ್ಚಿಸಿ ನಿರ್ಧರಿಸುತ್ತೇವೆ ಎಂದು ವಿಜಯೇಂದ್ರ ಉತ್ತರ ನೀಡಿದರು.

  • ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು, ಕೊಡದಿದ್ದರೆ ರಾಷ್ಟ್ರಮಟ್ಟದಲ್ಲಿ ಹೋರಾಟ ಗ್ಯಾರಂಟಿ: ಛಲವಾದಿ

    ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು, ಕೊಡದಿದ್ದರೆ ರಾಷ್ಟ್ರಮಟ್ಟದಲ್ಲಿ ಹೋರಾಟ ಗ್ಯಾರಂಟಿ: ಛಲವಾದಿ

    – ಉಪ್ಪು ತಿಂದವರು ನೀರು ಕುಡಿಯಲೇಬೇಕು
    – ದೇಶದ ಕಾನೂನು ಎಷ್ಟು ಗಟ್ಟಿ ಅನೋದು ಕೋರ್ಟ್‌ ಆದೇಶದಿಂದ ಖಾತ್ರಿಯಾಗಿದೆ

    ಮೈಸೂರು: ಸಿಎಂ ಸಿದ್ದರಾಮಯ್ಯ (ChalavadiNarayanaswamy) ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ಕಾಂಗ್ರೆಸ್ ಹೈಕಮಾಂಡ್ ಅವರ ಪರ ಇದ್ದರೂ ಈ ಸ್ಥಾನದಲ್ಲಿ ಮುಂದುವರಿಯಲು ಬರಲ್ಲ‌. ರಾಜೀನಾಮೆ ಕೊಡದಿದ್ದರೆ ರಾಜ್ಯದಲ್ಲಿ ಮಾತ್ರವಲ್ಲ. ರಾಷ್ಟ್ರಮಟ್ಟದಲ್ಲಿ ಹೋರಾಟ ಮಾಡ್ತೀವಿ ಅಂತ ವಿಧಾನ ಪರಿಷತ್‌ನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ (Chalavadi Narayanaswamy) ಗುಡುಗಿದರು.

    ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ – MUDA) ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ (CM Siddaramaiah) ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಈ ದೇಶದ ಕಾನೂನು ಎಷ್ಟು ಗಟ್ಟಿಯಾಗಿದೆ ಅನೋದು ಕೋರ್ಟ್‌ ಇಂದಿನ ಆದೇಶದಿಂದ ಖಾತ್ರಿಯಾಗಿದೆ. ಉಪ್ಪು ತಿಂದವರು ನೀರು ಕುಡಿಯಲೇಬೇಕು ಅನ್ನೋದು ಸಹ ಇದರಿಂದ ಜನ ಅರ್ಥಮಾಡಿಕೊಂಡಿದ್ದಾರೆ. ಈ ದೇಶದ ಕಾನೂನನ್ನು ಧಿಕ್ಕರಿಸಿ ಮಾಡುವ ಯಾವುದೇ ಪ್ರಯತ್ನಗಳು ಸಹ ಸಾಂದರ್ಭಿಕವಾಗಿ ತತಕ್ಷಣಕ್ಕೆ ಅವರಿಗೆ ಒಳ್ಳೆಯದಾಗಬಹುದು. ಆದ್ರೆ ದೀರ್ಘಕಾಲವಾಗಿ ಇರಲ್ಲ. ಕಾನೂನನ್ನು ಮುರಿಯುವವರಿಗೆ, ವಿರೋಧಿಸುವವರಿಗೆ ನ್ಯಾಯ ಸಿಗ್ಲಲ ಅನ್ನೋದನ್ನ ಹೈಕೋರ್ಟ್‌ ಆದೇಶ ಎತ್ತಿಹಿಡಿದಿದೆ ಎಂದು ಹೇಳಿದರು.

    ಮುಂದುವರಿದು… ಸಿಎಂ ಕುಟುಂಬವೇ ಇಂತಹ ಅವ್ಯವಹಾರದಲ್ಲಿ ತೊಡಗಿರುವುದು ಇದೇ ಮೊದಲು. ಸಿದ್ದರಾಮಯ್ಯ ಅವರು 2 ಬಾರಿ ಡಿಸಿಎಂ ಆಗಿದ್ದವರು, ವಿಪಕ್ಷ ನಾಯಕರಾಗಿದ್ದವರು. 2ನೇ ಬಾರಿಗೆ ಮುಖ್ಯಮಂತ್ರಿ ಸಹ ಆಗಿದ್ದಾರೆ. ಅವರು ತಮ್ಮದೇ ಅಲ್ಲದ ಮುಡಾದ ಭೂಮಿಗೆ ಪರಿಹಾರ ಕೇಳಿದ್ದು ತಪ್ಪು, ಇದರ ವಿರುದ್ಧ ಬೆಂಗಳೂರಿನ ಮೈಸೂರಿನ ವರೆಗೆ ಬಿಜೆಪಿ ದೊಡ್ಡ ಹೋರಾಟ ಬಯಲಿಗೆಳೆಯುವ ಕೆಲಸ ಮಾಡಿದೆ ಎಂದು ಶ್ಲಾಘಿಸಿದರು.

    ರಾಜ್ಯಪಾಲರು ತನಿಖೆಗೆ ಒಪ್ಪಿಗೆ ಕೊಟ್ಟದ್ದು ಸರಿಯಿದೆ. ಸಿಎಂ ಇವತ್ತೇ ರಾಜೀನಾಮೆ ಕೊಡ್ತಾರೆ ಅನ್ನಿಸುತ್ತೆ. ಅವರು ಅರವಿಂದ್‌ ಕೇಜ್ರಿವಾಲ್‌ರನ್ನ ನಿದರ್ಶನವಾಗಿಟ್ಟುಕೊಳ್ಳಕ್ಕೆ ಸಾಧ್ಯವಿಲ್ಲ. ಏಕೆಂದರೆ ದೆಹಲಿ ಕೇಂದ್ರಾಡಳಿತ ಪ್ರದೇಶ, ಅಲ್ಲಿ ಸರ್ಕಾರ ಇದ್ದರೂ ಕೆಲವು ವ್ಯವಸ್ಥೆಗಳು ಕೇಂದ್ರಾಡಳಿತದಲ್ಲಿದೆ ಎಂದು ವಿವರಿಸಿದರು.

    ನಿಮ್ಮ ಹೈಕಮಾಂಡ್‌ ಸಪೋರ್ಟ್‌ ನಿಮಗಿದ್ದರೆ, ಸಿಎಂ ಮಾಡಬಹುದು ಅಷ್ಟೇ. ನ್ಯಾಯಾಲಯದಿಂದ ಪಾರು ಮಾಡೋಕೆ ಆಗಲ್ಲ. ಅವರಿಗೆ ನ್ಯಾಯಾಲಯ, ವ್ಯವಸ್ಥೆ, ಅಂಬೇಡ್ಕರ್‌, ಸಂವಿಧಾನದ ಬಗ್ಗೆ ಗೌರವ ಇದ್ದರೇ ರಾಜೀನಾಮೆ ಕೊಟ್ಟೇ ಕೊಡ್ತಾರೆ ಎಂದು ನುಡಿದರು.

    ಕಾಂಗ್ರೆಸ್‌ ಕಾಲದಲ್ಲೂ ಬೇಕಾದಷ್ಟು ಗೌರ್ನರ್‌ ಬಂದು ಹೋಗಿದ್ದಾರೆ. ಆಗ ಅವರನ್ನ ಕಂಟ್ರೋಲ್‌ ಮಾಡುತ್ತಿದ್ದದ್ದು ಯಾರು? ಈಗ ರಾಜ್ಯಪಾಲರನ್ನು ಬಿಜೆಪಿಯವರು ಕಂಟ್ರೋಲ್‌ ಮಾಡ್ತಿದ್ದಾರೆ ಅನ್ನೋದು ಆರೋಪವಾದ್ರೆ, ನ್ಯಾಯಾಲಯವನ್ನ ಯಾರು ಕಂಟ್ರೋಲ್‌ ಮಾಡ್ತಾರೆ? ನ್ಯಾಯಾಲಯವನ್ನ ಕಂಟ್ರೋಲ್‌ ಮಾಡಲು ಸಾಧ್ಯವೇ ಎಂದು ತಿರುಗೇಟು ನೀಡಿದರು.

  • ಸಿಎಂ ಸಲ್ಲಿಸಿದ್ದ ರಿಟ್‌ ಅರ್ಜಿ ವಜಾ – ರಾಜ್ಯಪಾಲರ ಪ್ರಾಸಿಕ್ಯೂಷನ್‌ ಆದೇಶ ಎತ್ತಿಹಿಡಿದ ಹೈಕೋರ್ಟ್‌

    ಸಿಎಂ ಸಲ್ಲಿಸಿದ್ದ ರಿಟ್‌ ಅರ್ಜಿ ವಜಾ – ರಾಜ್ಯಪಾಲರ ಪ್ರಾಸಿಕ್ಯೂಷನ್‌ ಆದೇಶ ಎತ್ತಿಹಿಡಿದ ಹೈಕೋರ್ಟ್‌

    ಬೆಂಗಳೂರು: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ – MUDA) ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಹಿನ್ನಡೆಯಾಗಿದ್ದು ತನಿಖೆಗೆ ಹೈಕೋರ್ಟ್‌ (High Court) ಗ್ರೀನ್‌ ಸಿಗ್ನಲ್‌ ನೀಡಿದೆ.

    ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಆದೇಶವನ್ನು ಎತ್ತಿ ಹಿಡಿದ ಹೈಕೋರ್ಟ್‌ ಸಿದ್ದರಾಮಯ್ಯ (CM Siddaramaiah) ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು  ವಜಾಗೊಳಿಸಿದೆ.

    ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರ ಪ್ರಾಸಿಕ್ಯೂಷನ್‌ಗೆ ನೀಡಿದ ಆದೇಶ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ (CM Siddaramaiah) ಸಲ್ಲಿಸಿದ್ದ ರಿಟ್ ಅರ್ಜಿಯ ತೀರ್ಪನ್ನು ನ್ಯಾ.ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠ ಮಂಗಳವಾರ ಪ್ರಕಟಿಸಿತು. ಭ್ರಷ್ಟಾಚಾರ ನಿಯಂತ್ರಣಾ ಕಾಯಿದೆ ಸೆಕ್ಷನ್ 17ಎ ಅಡಿ  ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ನೀಡಿದ ಆದೇಶ ಸರಿ ಎಂದು ಆದೇಶದಲ್ಲಿ ಕೋರ್ಟ್‌ ತಿಳಿಸಿದೆ.

    ಭ್ರಷ್ಟಾಚಾರ ತಡೆ ಕಾಯ್ದೆ ಸೆಕ್ಷನ್ 17 ಎ ಅಡಿ ಖಾಸಗಿ ದೂರುದಾರರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಬಹುದು. ರಾಜ್ಯಪಾಲರು ದೂರಿನ ಎಲ್ಲಾ ಅಂಶಗಳನ್ನು ಪರಿಶೀಲಿಸಿ ದಾಖಲೆಗಳನ್ನು ಅಧ್ಯಯನ ಮಾಡಿಯೇ ಅನುಮತಿ ನೀಡಿದ್ದಾರೆ. ಹೀಗಾಗಿ ರಾಜ್ಯಪಾಲರ ಆದೇಶ ಸಮರ್ಪಕವಾಗಿದೆ ಎಂದು ರಾಜ್ಯಪಾಲರ ನಿರ್ಧಾರವನ್ನು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಿಚಾರಣೆ ವೇಳೆ ಸಮರ್ಥಿಸಿಕೊಂಡಿದ್ದರು.

    ಕೋರ್ಟ್‌ ತೀರ್ಪಿನ ಸಾರಾಂಶ ಮಾತ್ರ ಈಗ ಲಭ್ಯವಾಗಿದ್ದು ಮಧ್ಯಾಹ್ನ 2:30ಕ್ಕೆ  ಆದೇಶದ ಪ್ರತಿ ಹೈಕೋರ್ಟ್‌ ವೆಬ್‌ಸೈಟ್‌ನಲ್ಲಿ ಅಪ್ಲೋಡ್‌ ಆಗಲಿದೆ. ಇದನ್ನೂ ಓದಿ: MUDA Scam | ಸಿದ್ದರಾಮಯ್ಯಗೆ ಉರುಳಾದ 14 ಸೈಟ್‌ – ಏನಿದು ಹಗರಣ? ಬೆಳಕಿಗೆ ಬಂದಿದ್ದು ಹೇಗೆ?

    ಮುಡಾದಲ್ಲಿ ಪ್ರಭಾವ ಬಳಸಿ ಭಾರೀ ಹಗರಣ ಮಾಡಿದ್ದಾರೆ ಎಂದು ಆರೋಪಿಸಿ  ಮೈಸೂರು ಮೂಲದ ಸ್ನೇಹಮಯಿ ಕೃಷ್ಣ, ಮಡಿಕೇರಿಯ ಟಿಜೆ ಅಬ್ರಹಾಂ ಹಾಗೂ ಪ್ರದೀಪ್‌ ಅವರು  ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಮನವಿ ಮಾಡಿದ್ದರು. ಈ ಮೂರೂ ಅರ್ಜಿಗಳನ್ನು ಒಟ್ಟಿಗೆ ಸೇರಿಸಿ ಆಗಸ್ಟ್‌ 17 ರಂದು ಪ್ರಾಸಿಕ್ಯೂಷನ್‌ಗೆ  ರಾಜ್ಯಪಾಲರು ಅನುಮತಿ ನೀಡಿದ್ದರು.

    ಸಿಎಂ ಮುಂದಿರುವ ಆಯ್ಕೆ ಏನು?
    – ಹೈಕೋರ್ಟ್ ಆದೇಶ ಪ್ರಶ್ನೆ ಮಾಡಿ ಸುಪ್ರೀಂ ಕೋರ್ಟ್‌ಗೆ ಹೋಗುವ ಸಾಧ್ಯತೆಯಿದೆ. ಈಗಾಗಲೇ ಸಿಎಂ ಕಾನೂನು ಪರಿಣಿತರ ಜೊತೆ ಚರ್ಚೆ ನಡೆಸಿದ್ದಾರೆ.
    – ಹೈಕೋರ್ಟ್ ತೀರ್ಪು ಹಿನ್ನೆಲೆ ನೈತಿಕತೆಯಿಂದ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದು ಅಥವಾ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡದೇ ತನಿಖೆ ಎದುರಿಸುವುದು.
    – ಹೈಕಮಾಂಡ್ ಸಿಎಂ ಸ್ಥಾನದಿಂದ ಇಳಿಯಬೇಕು  ಎಂಬ ಒತ್ತಡ ಹಾಕಿದರೆ  ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ, ತಾವು ಹೇಳಿದವರನ್ನ ಸಿಎಂ ಮಾಡಬಹುದು.
    – ತನಿಖೆ ಮುಗಿದ ಬಳಿಕ ಮತ್ತೆ ಸಿಎಂ ಸ್ಥಾನವನ್ನು ಏರುವುದು.

  • ಸಿಎಂ ಪಾಲಿಗೆ ಇಂದು ಬಿಗ್ ಡೇ – ಮುಡಾ ಕೇಸಲ್ಲಿ ತನಿಖೆಯೋ? ಸೇಫೋ?; ಹೈಕೋರ್ಟ್ ತೀರ್ಪಿನತ್ತ ಎಲ್ಲರ ಚಿತ್ತ..!

    ಸಿಎಂ ಪಾಲಿಗೆ ಇಂದು ಬಿಗ್ ಡೇ – ಮುಡಾ ಕೇಸಲ್ಲಿ ತನಿಖೆಯೋ? ಸೇಫೋ?; ಹೈಕೋರ್ಟ್ ತೀರ್ಪಿನತ್ತ ಎಲ್ಲರ ಚಿತ್ತ..!

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah)  ಅವರ ಪಾಲಿಗಿಂದು ಬಿಗ್ ಡೇ.. ಕಾರಣ, ಮುಡಾ ಕೇಸಲ್ಲಿ ತಮ್ಮ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ (Karnataka High Court) ಇಂದು ಮಧ್ಯಾಹ್ನ 12 ಗಂಟೆಗೆ ತೀರ್ಪು ಪ್ರಕಟಿಸಲಿದೆ. ಈ ವಿಚಾರದಲ್ಲಿ ಹೈಕೋರ್ಟ್ ನೀಡುವ ತೀರ್ಪಿನತ್ತ ಎಲ್ಲರ ಚಿತ್ತ ನೆಟ್ಟಿದೆ.

    ಒಂದೊಮ್ಮೆ ತೀರ್ಪು ಸಿಎಂ ಸಿದ್ದರಾಮಯ್ಯ ಪರವಾಗಿ ಬಂದ್ರೆ ಅವರ ಕುರ್ಚಿ ಸೇಫ್ ಆಗಲಿದೆ. ಇಲ್ಲದಿದ್ದರೆ ಸಿದ್ದರಾಮಯ್ಯ ರಾಜಕೀಯವಾಗಿ ಸಂಕಷ್ಟಕ್ಕೆ ಈಡಾಗಬಹುದು ಎಂಬ ವಿಶ್ಲೇಷಣೆ ಕೇಳಿಬರ್ತಿದೆ. ಯಾವುದಕ್ಕೂ ಇರಲಿ ಎಂದು, ತೀರ್ಪು ಬಂದ ಕೂಡಲೇ ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿದೆ ಎನ್ನಲಾಗಿದೆ. ಇದನ್ನೂ ಓದಿ: ನಿಮ್ಮ ಕೈಯಲ್ಲಿರೋ ಸ್ಮಾರ್ಟ್‌ಫೋನ್‌ ಹ್ಯಾಕ್‌ ಮಾಡಿ ಸ್ಫೋಟಿಲು ಸಾಧ್ಯವೇ? ಹ್ಯಾಕಿಂಗ್‌ ತಪ್ಪಿಸಲು ಏನು ಮಾಡ್ಬೇಕು?

    ಮತ್ತೊಂದು ಕಡೆ ವಿಪಕ್ಷಗಳು ಕೂಡ ಸುಮ್ಮನಿಲ್ಲ.. ಹೈಕೋರ್ಟ್ ತೀರ್ಪು ಬಳಿಕ ರಾಜ್ಯದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆಗಳ ನಿರೀಕ್ಷೆಯಲ್ಲಿ ಬಿಜೆಪಿ-ಜೆಡಿಎಸ್ ಪಕ್ಷಗಳಿವೆ. ಮುಂದಿನ ಲೆಕ್ಕಾಚಾರಗಳನ್ನು ಹಾಕಿಕೊಂಡೇ ದೋಸ್ತಿಗಳು ಮುಂದೇನು ಮಾಡಬೇಕೆಂದು ರಣತಂತ್ರ ರೂಪಿಸ್ತಿವೆ. ಕೋರ್ಟ್ ತೀರ್ಪು ಸಿದ್ದರಾಮಯ್ಯ ವಿರುದ್ಧ ಬಂದರೆ ನಿರಂತರ ಹೋರಾಟದ ಮೂಲಕ ರಾಜೀನಾಮೆಗೆ ಒತ್ತಡ ಸೃಷ್ಟಿಸುವ ಲೆಕ್ಕಾಚಾರದಲ್ಲಿದೆ. ಇದನ್ನೂ ಓದಿ: ಮೈಸೂರಿನಲ್ಲಿ ಮಹಿಷ ದಸರಾ ಫೈಟ್ – ಈ ಬಾರಿ `ಮಹಿಷ ಮಂಡಲೋತ್ಸವ’!

    ವಿಚಾರಣೆ ವೇಳೆ ಸಿಎಂ ಪರ ವಾದ ಏನು?
    * ದೂರುದಾರರು ಸೆಕ್ಷನ್ 17ಎ ಅಡಿ ಅನುಮತಿ ಪಡೆಯಲು ಸಾಧ್ಯವಿಲ್ಲ (ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ)
    * ಇದನ್ನು ಪರಿಶೀಲಿಸುವ ಅಧಿಕಾರ ರಾಜ್ಯಪಾಲರಿಗೆ ಇರುವುದಿಲ್ಲ
    * ರಾಜ್ಯಪಾಲರು ವಿವೇಚನೆ ಬಳಸಿಲ್ಲ; ಸಹಜ ನ್ಯಾಯದ ಪ್ರಕ್ರಿಯೆ ಪಾಲಿಸಿಲ್ಲ
    * ಅಬ್ರಹಾಂಗೆ ಅರ್ಜಿ ಹಿಂಪಡೆಯಲು ಸೂಚಿಸಬೇಕು.. ದಂಡ ವಿಧಿಸಬೇಕು
    * ಈ ಪ್ರಕರಣದ ಹಿಂದೆ ರಾಜಕೀಯ ದುರುದ್ದೇಶ ಇದೆ.

    ವಿಚಾರಣೆ ವೇಳೆ ರಾಜ್ಯಪಾಲರ ಪರ ವಾದ ಏನು?
    * ಪತ್ನಿಯ ತಪ್ಪಿನಲ್ಲಿ ಪತಿಯ ಪಾತ್ರ ಇದೆ
    * ರಾಜ್ಯಪಾಲರು ವಿವೇಚನೆ ಬಳಸಿ ಅನುಮತಿ ನೀಡಿದ್ದಾರೆ
    * ಕ್ಯಾಬಿನೆಟ್ ಸಂಪೂರ್ಣವಾಗಿ ತನ್ನ ವಿವೇಚನೆ ಬಳಸಿಲ್ಲ
    * 17ಎ ಅನುಮತಿ ನೀಡುವ ಅಧಿಕಾರ ರಾಜ್ಯಪಾಲರಿಗೆ ಇದೆ

    ವಿಚಾರಣೆ ವೇಳೆ ದೂರುದಾರರ ಪರ ವಾದ ಏನು?
    * ಮೇಲ್ನೋಟಕ್ಕೆ ಅಕ್ರಮ ನಡೆದಿದೆ ಅಂತ ರಾಜ್ಯಪಾಲರು ಉಲ್ಲೇಖಿಸಿದ್ದಾರೆ
    * ಸೆ.17ಎ ಅಡಿ ಖಾಸಗಿ ದೂರುದಾರರು ಅನುಮತಿ ಪಡೆಯಬಹುದು
    * ಕ್ಯಾಬಿನೆಟ್ ಸಭೆ ಒತ್ತಾಯದ ಮೂಲಕ ಆಗಿರಬಹುದು
    * ಡೆವಲಪ್ ಆಗಿರೋ ಲೇಔಟನ್ನು ಕೃಷಿ ಭೂಮಿ ಮಾಡಿದ್ದಾರೆ
    * ಭೂಸ್ವಾಧೀನಕ್ಕೆ ಪರಿಹಾರ ನೀಡಿದರೂ ಮಾಲೀಕರು ಪಡೆದಿಲ್ಲ
    * 2006ರಲ್ಲಿ ಆ ಜಮೀನಿನ ಬೆಲೆ 6 ಲಕ್ಷ.. ಈಗ 55 ಕೋಟಿ ಅಂದ್ರೆ ಹೇಗೆ?