Tag: Karnataka High Court

  • PSI Scam: ಪಿಎಸ್‌ಐ ಮರುಪರೀಕ್ಷೆಗೆ ಹೈಕೋರ್ಟ್‌ ಆದೇಶ – ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿ ವಜಾ

    PSI Scam: ಪಿಎಸ್‌ಐ ಮರುಪರೀಕ್ಷೆಗೆ ಹೈಕೋರ್ಟ್‌ ಆದೇಶ – ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿ ವಜಾ

    ಬೆಂಗಳೂರು: ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ (PSI Recruitment Scam) ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್‌ (Karnataka High Court) ಸರ್ಕಾರದ ಆದೇಶ ಎತ್ತಿ ಹಿಡಿದಿದೆ. ಸರ್ಕಾರದ ಆದೇಶ ಪ್ರಶ್ನಿಸಿ ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್‌, ಪಿಎಸ್‌ಐ ಮರು ಪರೀಕ್ಷೆ ನಡೆಸುವಂತೆ ಆದೇಶ ಹೊರಡಿಸಿದೆ.

    ಅಕ್ರಮದ ಕಾರಣಕ್ಕೆ ಪರೀಕ್ಷೆ ರದ್ದು ಮಾಡಿ ಹೊಸದಾಗಿ ಪರೀಕ್ಷೆ ನಡೆಸಲು ಸರ್ಕಾರ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಹಲವು ಅಭ್ಯರ್ಥಿಗಳು ಹೈಕೋರ್ಟ್‌ ಮೊರೆ ಹೋಗಿದ್ದರು. ಇಂದು ನ್ಯಾ. ದಿನೇಶ್ ಕುಮಾರ್, ನ್ಯಾ. ಶಿವಶಂಕರೇಗೌಡ ಅವರಿದ್ದ ವಿಭಾಗೀಯ ಪೀಠ ಅರ್ಜಿ ವಿಚಾರಣೆ ನಡೆಸಿ ತೀರ್ಪು ಪ್ರಕಟಿಸಿದೆ. ಇದನ್ನೂ ಓದಿ: ಪಿಎಸ್‌ಐ ನೇಮಕಾತಿ ಹಗರಣ – ನ್ಯಾಯಾಂಗ ತನಿಖೆಗೆ ಸರ್ಕಾರ ಆದೇಶ

    ಅಕ್ರಮದಲ್ಲಿ ಭಾಗಿಯಾಗದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶಕ್ಕೆ ಅರ್ಜಿದಾರರು ಮನವಿ ಮಾಡಿದ್ದರು. ವಾದ ಪ್ರತಿವಾದ ಆಲಿಸಿದ ಹೈಕೋರ್ಟ್‌, ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿದೆ. ಮರು ಪರೀಕ್ಷೆ ನಡೆಸುವಂತೆ ಹೈಕೋರ್ಟ್‌ ಆದೇಶ ಹೊರಡಿಸಿತು. ಸ್ವತಂತ್ರ ಸಂಸ್ಥೆಯಿಂದ ಪರೀಕ್ಷೆ ನಡೆಸುವಂತೆ ಕೋರ್ಟ್‌ ಸೂಚನೆ ನೀಡಿದೆ. ಕೋರ್ಟ್‌ ತೀರ್ಪಿನಿಂದ ಅಭ್ಯರ್ಥಿಗಳಿಗೆ ನಿರಾಸೆಯಾಗಿದೆ.

    ಪ್ರಕರಣ ಏನು?
    ಕಳೆದ ಬಿಜೆಪಿ (BJP) ಸರ್ಕಾರದ ಅವಧಿಯಲ್ಲಿ ನಡೆದ ಪಿಎಸ್‍ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಆರೋಪ ಕೇಳಿಬಂದಿತ್ತು. ಬಳಿಕ ತನಿಖೆಯ ವೇಳೆ ಪರೀಕ್ಷಾ ಕೇಂದ್ರಗಳನ್ನು ಬುಕ್ ಮಾಡಿಕೊಂಡು ಅಕ್ರಮ ಎಸಗಿರುವುದು ಬೆಳಕಿಗೆ ಬಂದಿತ್ತು. ಈ ಸಂಬಂಧ ಆಡಿಯೋ ಸಹ ವೈರಲ್ ಆಗಿತ್ತು. ಇದಾದ ಬಳಿಕ ಈ ನೇಮಕಾತಿಯನ್ನು ರದ್ದು ಮಾಡಲಾಗಿತ್ತು. ಅಲ್ಲದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ಬಂಧಿಸಿ ವಿಚಾರಣೆ ನಡೆಸಲಾಗಿತ್ತು. ಇದನ್ನೂ ಓದಿ: ಪಿಎಸ್‍ಐ ಹಗರಣ – ಎಡಿಜಿಪಿ ಅಮೃತ್ ಪೌಲ್‌ಗೆ ಮತ್ತೊಂದು ಸಂಕಷ್ಟ

    ಭಾರೀ ಸಂಖ್ಯೆಯಲ್ಲಿ ಅಕ್ರಮ ಎಸಗಿದ ಹಿನ್ನೆಲೆಯಲ್ಲಿ ಸರ್ಕಾರ ಪಿಎಸ್‌ಐ ಲಿಖಿತ ಪರೀಕ್ಷೆಯನ್ನೇ ರದ್ದು ಮಾಡಿ ಹೊಸದಾಗಿ ಪರೀಕ್ಷೆ ನಡೆಸಲು ಸರ್ಕಾರ ಅದೇಶ ಪ್ರಕಟಿಸಿತ್ತು. ಸರ್ಕಾರ ಹೊಸದಾಗಿ ಪರೀಕ್ಷೆ ನಡೆಸಲು ಆದೇಶ ಹೊರಡಿಸಿದ್ದನ್ನು ಪ್ರಶ್ನಿಸಿ ಹಲವು ಅಭ್ಯರ್ಥಿಗಳು ಹೈಕೋರ್ಟ್‌ ಮೊರೆ ಹೋಗಿದ್ದರು.

  • ಕಳ್ಳನ ಹೆಂಡ್ತಿ ಯಾವತ್ತಿದ್ರೂ ಡ್ಯಾಶ್ ಡ್ಯಾಶ್ – ಸಿ.ಟಿ ರವಿ ಹೀಗ್ಯಾಕಂದ್ರು?

    ಕಳ್ಳನ ಹೆಂಡ್ತಿ ಯಾವತ್ತಿದ್ರೂ ಡ್ಯಾಶ್ ಡ್ಯಾಶ್ – ಸಿ.ಟಿ ರವಿ ಹೀಗ್ಯಾಕಂದ್ರು?

    ಚಿಕ್ಕಮಗಳೂರು: `ಹಾಲಿಂದು ಹಾಲಿಗೆ, ನೀರಿಂದು ನೀರಿಗೆ’, `ಉಪ್ಪು ತಿಂದವನು ನೀರು ಕುಡಿಯಬೇಕು’, `ಊರಿಗೆ ಬಂದೋಳು ನೀರಿಗೆ ಬರಲ್ವಾʼ, ʻಕಳ್ಳನ ಹೆಂಡ್ತಿ ಯಾವತ್ತಿದ್ರು ಡ್ಯಾಶ್ ಡ್ಯಾಶ್ʼ ಎಂದು ಮಾಜಿ ಸಚಿವ ಸಿ.ಟಿ ರವಿ (CT Ravi), ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಅವರ ಹೆಸರೇಳದೆ ಗಾದೆ ಮೂಲಕ ತಿವಿದಿದ್ದಾರೆ.

    ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿರುವ ಹೈಕೋರ್ಟ್ (Highcourt), ಸಿಬಿಐ ತನಿಖೆಗೆ ಗ್ರೀನ್ ಸಿಗ್ನಲ್ ಕೊಟ್ಟಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಿ.ಟಿ ರವಿ ಅವರು, ಡಿಕೆಶಿ ಹೆಸರು ಹೇಳದೆಯೇ ಗಾದೆಯ ಮೂಲಕ ಕುಟುಕಿದ್ದಾರೆ. ಇದನ್ನೂ  ಓದಿ: ಅನುಕಂಪವನ್ನು ನಮ್ಮ ದೇಶದಲ್ಲಿ ಹೇಗೆ ಬೇಕಾದ್ರು ಉಪಯೋಗ ಮಾಡಿಕೊಳ್ತಾರೆ: ಡಿಕೆಶಿಗೆ ಕುಮಾರಸ್ವಾಮಿ ಠಕ್ಕರ್

    ಗಾದೆಗಳು ಸುಮ್ನೆ ಹುಟ್ಟುತ್ತವಾ? ಗಾದೆಗೆ ತಲತಲಾಂತರದ ಸತ್ಯ ಇರುತ್ತೆ. ತಪ್ಪು ಮಾಡಿದವನಿಗೆ ಶಿಕ್ಷೆ ಆಗಬೇಕು. ಆದ್ರೆ, ಪ್ರಮಾಣಿಕರಿಗೆ ಯಾವುದೇ ತೊಂದರೆ ಆಗಬಾರದು ಎಂದಿದ್ದಾರೆ. ಯಾರೇ ಅಕ್ರಮ ಮಾಡಿದರೂ ಅದು ಇಂದಲ್ಲ ನಾಳೆ ಬಯಲಿಗೆ ಬರಲೇಬೇಕು. ಸತ್ಯವನ್ನ ಮಣ್ಣುಮಾಡೋಕಾಗಲ್ಲ, ಕೆಲ ಕಾಲ ಮುಚ್ಚಿಡಬಹುದು ಅಷ್ಟೆ. ಆದರೆ ಹೊರಬರೋದು ಸತ್ಯ. ತಪ್ಪು ಮಾಡಿರೋರು ಯಾರೇ ಆಗಿರಬಹುದು. ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ  ಓದಿ: ಡಿಕೆಶಿ ಅರ್ಜಿ ವಜಾಗೊಂಡಿದ್ದು ಯಾಕೆ? ಹೈಕೋರ್ಟ್‌ ನೀಡಿದ ಕಾರಣ ಏನು?

    ಇಲ್ಲಿ ಕಾನೂನಿಗಿಂತ ಅತೀಥರಾದವರು ಯಾರಾದರೂ ಇದ್ದಾರಾ? ನನ್ನನ್ನು ಸೇರಿದಂತೆ ಸಿಎಂ, ಡಿಸಿಎಂ, ಪ್ರಧಾನಿ ಯಾರೂ ಕಾನೂನಿಗೆ ಅತೀಥರಲ್ಲ. ಯಾರಾದ್ರೂ ನಾವು ಕಾನೂನಿಗಿಂತ ದೊಡ್ಡವರು ಅಂದುಕೊಂಡಿದ್ದರೆ ಅದಕ್ಕೆ ಸಂವಿಧಾನ ಅವಕಾಶ ನೀಡಲ್ಲ. ಅಂಬೇಡ್ಕರ್ ಕಾನೂನಿನ ದೃಷ್ಟಿಯಿಂದ ಎಲ್ಲರೂ ಸಮಾನರು ಎಂದಿದ್ದಾರೆ. ಇವರಿಗೆ ಕಾನೂನು ಅನ್ವಯ ಆಗಲ್ಲ. ಏನೂ ಮಾಡಿದ್ರೂ ನಡೆಯುತ್ತೆ ಅನ್ನೋ ವ್ಯವಸ್ಥೆ ನಮ್ಮ ದೇಶದಲ್ಲಿ ಇಲ್ಲ. ಯಾರೇ ತಪ್ಪು ಮಾಡಿದ್ದರೂ ಶಿಕ್ಷೆ ಆಗಬೇಕು. ಇವರು ತಪ್ಪು ಮಾಡಿದ್ದಾರೆಂದು ಹೇಳುವ ಅಧಿಕಾರ ನನಗೆ ಇಲ್ಲ, ನ್ಯಾಯಾಲಯಕ್ಕೆ ಇದೆ ಎಂದು ಡಿಕೆಶಿ ಹೆಸರೇಳದೆ ಪರೋಕ್ಷವಾಗಿ ಗಾದೆಗಳ ಮೂಲಕ ಡಿಕೆಶಿ ವಿರುದ್ಧ ವ್ಯಂಗ್ಯವಾಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪ್ರಜ್ವಲ್‌ ರೇವಣ್ಣಗೆ ರಿಲೀಫ್‌ – ಕರ್ನಾಟಕ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಮಧ್ಯಂತರ ತಡೆ

    ಪ್ರಜ್ವಲ್‌ ರೇವಣ್ಣಗೆ ರಿಲೀಫ್‌ – ಕರ್ನಾಟಕ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಮಧ್ಯಂತರ ತಡೆ

    ನವದೆಹಲಿ: ಚುನಾವಣೆಯಲ್ಲಿ ಅಕ್ರಮ ಎಸಗಿದ ಆರೋಪಕ್ಕೆ ಸಂಬಂಧಿಸಿ ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಕರ್ನಾಟಕ ಹೈಕೋರ್ಟ್‌ (Karnataka High Court) ಹೊರಡಿಸಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್‌ (Supreme Court) ಮಧ್ಯಂತರ ತಡೆ ನೀಡಿದೆ. ಇದರಿಂದ ಪ್ರಜ್ವಲ್‌ ರೇವಣ್ಣಗೆ ತಾತ್ಕಾಲಿಕ ರಿಲೀಫ್‌ ಸಿಕ್ಕಿದೆ.

    ಲೋಕಸಭೆಗೆ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್‌ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಪ್ರಜ್ವಲ್‌ ರೇವಣ್ಣ (Prajwal Revanna) ಸುಪ್ರೀಂ ಮೊರೆ ಹೋಗಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಸಿಜೆಐ ಡಿ.ವೈ.ಚಂದ್ರಚೂಡ್‌ ಅವರಿದ್ದ ಪೀಠವು, ಹೈಕೋರ್ಟ್‌ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ. ಇದನ್ನೂ ಓದಿ: ಎಲ್ಲರೂ ನನ್ನನ್ನ 2ನೇ ದೇವರಾಜ ಅರಸು ಅಂತಾರೆ: ಸಿದ್ದರಾಮಯ್ಯ

    ಅಲ್ಲದೇ ಸಂಸತ್‌ ಕಲಾಪಕ್ಕೆ ಹಾಜರಾಗಲು ಅವಕಾಶ ನೀಡಿದೆ. ಆದರೆ ಸಂಸತ್‌ನಿಂದ ಬರುವ ಭತ್ಯೆ ಬಳಕೆ ಮಾಡದಂತೆ ಸುಪ್ರೀಂ ಕೋರ್ಟ್‌ ಸೂಚನೆ ನೀಡಿದೆ.

    ಮಧ್ಯಂತರ ತಡೆಯಿಂದ ಪ್ರಜ್ವಲ್‌ ರೇವಣ್ಣಗೆ ಚುನಾವಣಾ ಸ್ಪರ್ಧೆ ದಾರಿ ಸುಗಮವಾದಂತಾಗಿದೆ. ಹೆಚ್‌.ಡಿ.ರೇವಣ್ಣ ಪ್ರಕರಣವನ್ನು ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಲು ಸುಪ್ರೀಂ ಸೂಚನೆ ನೀಡಿದೆ. ಇದನ್ನೂ ಓದಿ: ಕರ್ನಾಟಕ ಸರ್ಕಾರಕ್ಕೆ ಮತ್ತೆ ಕಾವೇರಿ ಶಾಕ್ – ತ.ನಾಡಿಗೆ ಪ್ರತಿದಿನ 5,000 ಕ್ಯೂಸೆಕ್ ನೀರು ಹರಿಸಲು ಆದೇಶ

    ಹಾಸನ ಕ್ಷೇತ್ರದಿಂದ ಸಂಸದರಾಗಿ ಪ್ರಜ್ವಲ್‌ ರೇವಣ್ಣ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಿ ಸೆ.1 ರಂದು ಕರ್ನಾಟಕ ಹೈಕೋರ್ಟ್‌ ತೀರ್ಪು ನೀಡಿತ್ತು. ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವವರೆಗೆ ತಡೆಯಾಜ್ಞೆ ನೀಡುವಂತೆ ಕೋರಿ ಪ್ರಜ್ವಲ್‌ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನೂ ಹೈಕೋರ್ಟ್‌ ವಜಾಗೊಳಿಸಿತ್ತು. ನಂತರ ಪ್ರಜ್ವಲ್‌ ಅವರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್‌ ರಿಲೀಫ್‌

    ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್‌ ರಿಲೀಫ್‌

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಹೈಕೋರ್ಟ್‌ ರಿಲೀಫ್‌ ನೀಡಿದೆ. ಹೈಗ್ರೌಂಡ್ಸ್‌ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ಹೈಕೋರ್ಟ್‌ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ.

    ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ ಗುತ್ತಿಗೆದಾರ ಸಂತೋಷ್‌, ಸರ್ಕಾರದ ವಿರುದ್ಧ 40% ಕಮಿಷನ್‌ ಆರೋಪ ಹೊರಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಿನ ಸಚಿವರಾಗಿದ್ದ ಈಶ್ವರಪ್ಪ‌ ರಾಜೀನಾಮೆಗೆ ಒತ್ತಾಯಿಸಿ ಸಿಎಂ (ಬಸವರಾಜ ಬೊಮ್ಮಾಯಿ ಅವಧಿ) ಮನೆಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ನಾಯಕರು ತೆರಳಿದ್ದರು. ಈ ಸಂಬಂಧ ಹೈಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ: ಜಮೀರ್ ಅಹಮ್ಮದ್ ಮುಂದೆ ಕಣ್ಣೀರು ಹಾಕಿದ ಗುಡಿಸಲು ವಾಸಿಗಳು

    ನ್ಯಾಯಾಲಯಕ್ಕೆ ಈ ಬಗ್ಗೆ ಹೈಗ್ರೌಂಡ್ಸ್ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಿದ್ದರು. ಇದನ್ನ ಸಿದ್ದರಾಮಯ್ಯ ಪರ ವಕೀಲರು ಹೈಕೋರ್ಟ್‌ನಲ್ಲಿ ‌ಪ್ರಶ್ನೆ ಮಾಡಿದ್ದರು. ಸದ್ಯ ಹೈಕೋರ್ಟ್‌ನಿಂದ ಪ್ರಕರಣಕ್ಕೆ ಸಂಬಂಧಿಸಿ ಮಧ್ಯಂತರ ತಡೆ ಸಿಕ್ಕಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಸಿಂಧು ಆದೇಶಕ್ಕೆ ಮಧ್ಯಂತರ ತಡೆ ಕೋರಿ ಹೈಕೋರ್ಟ್‌ಗೆ ಪ್ರಜ್ವಲ್‌ ರೇವಣ್ಣ ಅರ್ಜಿ

    ಅಸಿಂಧು ಆದೇಶಕ್ಕೆ ಮಧ್ಯಂತರ ತಡೆ ಕೋರಿ ಹೈಕೋರ್ಟ್‌ಗೆ ಪ್ರಜ್ವಲ್‌ ರೇವಣ್ಣ ಅರ್ಜಿ

    ಬೆಂಗಳೂರು: ಚುನಾವಣೆಯಲ್ಲಿ ಅಕ್ರಮ ಎಸಗಿದ ಆರೋಪಕ್ಕೆ ಸಂಬಂಧಿಸಿ ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಹೊರಡಿಸಿರುವ ಆದೇಶಕ್ಕೆ ಮಧ್ಯಂತರ ತಡೆ ನೀಡುವಂತೆ ಕೋರಿ ಹೈಕೋರ್ಟ್‌ಗೆ (Karnataka High Court) ಪ್ರಜ್ವಲ್‌ ರೇವಣ್ಣ (Prajwal Revanna) ಮನವಿ ಸಲ್ಲಿಸಿದ್ದಾರೆ.

    ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವ ವರೆಗೂ, ಪಿಎಂ ಸ್ಥಾನದಿಂದ ಅಸಿಂಧು ಆದೇಶಕ್ಕೆ ಮಧ್ಯಂತರ ತಡೆ ನೀಡುವಂತೆ ಕೋರಿ ಹೈಕೋರ್ಟ್‌ಗೆ ಪ್ರಜ್ವಲ್‌ ರೇವಣ್ಣ ಅರ್ಜಿ ಸಲ್ಲಿಸಿದ್ದಾರೆ. ಇದನ್ನೂ ಓದಿ: ನಾಮಪತ್ರದಲ್ಲಿ ಸುಳ್ಳು ಮಾಹಿತಿ – ಸಂಸದ ಸ್ಥಾನದಿಂದ ಪ್ರಜ್ವಲ್‌ ರೇವಣ್ಣ ಅನರ್ಹ

    karnataka highcourt

    ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ಒದಗಿಸಿದ್ದ ಆರೋಪಗಳು ಸಾಬೀತಾಗಿರುವ ಹಿನ್ನೆಲೆಯಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್‌ ಸದಸ್ಯ ಪ್ರಜ್ವಲ್‌ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಹೈಕೋರ್ಟ್‌ ತೀರ್ಪು ನೀಡಿತ್ತು.

    ಲೋಕಸಭೆಗೆ 2019ರ ಏಪ್ರಿಲ್‌ 18 ರಂದು ಚುನಾವಣೆ ನಡೆಯಿತು. ಮೇ 23 ರಂದು ಫಲಿತಾಂಶ ಪ್ರಕಟವಾಗಿತ್ತು. ಪ್ರಜ್ವಲ್‌ ರೇವಣ್ಣ ಹಾಸನ ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದರು. ಪ್ರಜ್ವಲ್‌ ರೇವಣ್ಣ ಗೆಲುವಿನ ಬಗ್ಗೆ ಬಿಜೆಪಿಗೆ ಸೇರಿದ್ದ ಜಿ.ದೇವರಾಜೇಗೌಡ 2019 ರಲ್ಲಿ ಪ್ರತ್ಯೇಕ ಚುನಾವಣಾ ತಕರಾರು ಅರ್ಜಿಗಳನ್ನು ಸಲ್ಲಿಸಿದ್ದರು. ಇದನ್ನೂ ಓದಿ: ಪ್ರಜ್ವಲ್‌ ಜೊತೆ ರೇವಣ್ಣ, ಎ ಮಂಜು ಅನರ್ಹರಾಗುತ್ತಾರೆ: ಪ್ರಮೀಳಾ ನೇಸರ್ಗಿ

    ಪ್ರಜ್ವಲ್‌ ರೇವಣ್ಣ ಅವರು ಚುನಾವಣೆಯಲ್ಲಿ ಅಕ್ರಮ ನಡೆಸಿ ಗೆಲುವು ಸಾಧಿಸಿದ್ದಾರೆ. ಅವರ ಸದಸ್ಯತ್ವವನ್ನು ಅನೂರ್ಜಿತಗೊಳಿಸಬೇಕು ಎಂದು ಕೋರಿ ದೇವರಾಜೇಗೌಡ ಅರ್ಜಿ ಸಲ್ಲಿಸಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಂಸದ ಸ್ಥಾನದಿಂದ ಪುತ್ರ ಅನರ್ಹತೆ ಬೆನ್ನಲ್ಲೇ ಶಾಸಕ ಹೆಚ್‌.ಡಿ.ರೇವಣ್ಣಗೆ ಹೈಕೋರ್ಟ್‌ ಸಮನ್ಸ್‌

    ಸಂಸದ ಸ್ಥಾನದಿಂದ ಪುತ್ರ ಅನರ್ಹತೆ ಬೆನ್ನಲ್ಲೇ ಶಾಸಕ ಹೆಚ್‌.ಡಿ.ರೇವಣ್ಣಗೆ ಹೈಕೋರ್ಟ್‌ ಸಮನ್ಸ್‌

    ಬೆಂಗಳೂರು: ಸಂಸದ ಸ್ಥಾನದಿಂದ ಪುತ್ರ ಪ್ರಜ್ವಲ್‌ ರೇವಣ್ಣ (Prajwal Revanna) ಅನರ್ಹತೆ ಬೆನ್ನಲ್ಲೇ ಶಾಸಕ ಹೆಚ್‌.ಡಿ. ರೇವಣ್ಣ (H.D.Revanna) ಅವರಿಗೆ ಹೈಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ.

    ಶಾಸಕ ಅಸಿಂಧು ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ನಡೆಸಿದೆ. ವಿಧಾನಸಭಾ ಕಾರ್ಯದರ್ಶಿ ಮೂಲಕ ಸಮನ್ಸ್ ನೀಡಿದೆ. ಹೈಕೋರ್ಟ್‌ ಏಕಸದಸ್ಯ ಪೀಠದಿಂದ ಈ ಆದೇಶ ಬಂದಿದೆ. ಇದನ್ನೂ ಓದಿ: ನಾಮಪತ್ರದಲ್ಲಿ ಸುಳ್ಳು ಮಾಹಿತಿ – ಸಂಸದ ಸ್ಥಾನದಿಂದ ಪ್ರಜ್ವಲ್‌ ರೇವಣ್ಣ ಅನರ್ಹ

    ಚುನಾವಣಾ ಅಕ್ರಮ ವಿಚಾರವಾಗಿ ವಕೀಲ ದೇವರಾಜೇಗೌಡ ಅರ್ಜಿ ಸಲ್ಲಿಸಿದ್ದರು. ರೇವಣ್ಣ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸಿ ದೇವರಾಜೇಗೌಡ ಪರಾಜಿತಗೊಂಡಿದ್ದರು. ರೇವಣ್ಣ ಸೇರಿದಂತೆ ಪ್ರಕರಣಕ್ಕೆ ಸಂಬಂಧಪಟ್ಟ ಎಲ್ಲರಿಗೂ ಹೈಕೋರ್ಟ್‌ ಸಮನ್ಸ್ ಜಾರಿ ಮಾಡಿದೆ.

    ಚುನಾವಣಾ ನಾಮಪತ್ರದಲ್ಲಿ ಸುಳ್ಳು ಮಾಹಿತಿ ನೀಡಿದ ಆರೋಪದಡಿ ಹಾಸನ ಸಂಸದ ಸ್ಥಾನದಿಂದ ಪ್ರಜ್ವಲ್‌ ರೇವಣ್ಣ ಅವರನ್ನು ಹೈಕೋರ್ಟ್‌ ಈಚೆಗೆ ಅನರ್ಹಗೊಳಿಸಿ ಆದೇಶ ಹೊರಡಿಸಿತ್ತು. ಈ ಪ್ರಕರಣದ ಬೆನ್ನಲ್ಲೇ ಈಗ ಪ್ರಜ್ವಲ್‌ ತಂದೆ ಹೆಚ್‌.ಡಿ. ರೇವಣ್ಣ ಅವರಿಗೆ ಸಮನ್ಸ್‌ ನೀಡಿದೆ. ಇದನ್ನೂ ಓದಿ: ಸನಾತನ ಧರ್ಮ ರೋಗ ಹರಡುವ ಸೊಳ್ಳೆಯಲ್ಲ – ಉದಯನಿಧಿ ಇನ್ನೂ ಬಚ್ಚ ಎಂದ ಮುತಾಲಿಕ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅನಧಿಕೃತ ಫ್ಲೆಕ್ಸ್‌ ತೆಗೆಯಲು ಶುಭ ಘಳಿಗೆಗೆ ಕಾಯ್ತಿದ್ದೀರಾ? – ಬಿಬಿಎಂಪಿಗೆ ಹೈಕೋರ್ಟ್ ತರಾಟೆ

    ಅನಧಿಕೃತ ಫ್ಲೆಕ್ಸ್‌ ತೆಗೆಯಲು ಶುಭ ಘಳಿಗೆಗೆ ಕಾಯ್ತಿದ್ದೀರಾ? – ಬಿಬಿಎಂಪಿಗೆ ಹೈಕೋರ್ಟ್ ತರಾಟೆ

    – ಅನಧಿಕೃತ ಫ್ಲೆಕ್ಸ್‌ ಕಂಡರೆ ತಲಾ 50,000 ರೂ. ದಂಡ ಹಾಕುವಂತೆ ಸೂಚನೆ

    ಬೆಂಗಳೂರು: ರಾಜಧಾನಿಯಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ ತಡೆಗೆ ವಿಫಲವಾಗಿದೆ ಎಂದು ಕ್ರಮ ಕೈಗೊಳ್ಳದ ಬಿಬಿಎಂಪಿ (BBMP), ರಾಜ್ಯ ಸರ್ಕಾರವನ್ನು ಹೈಕೋರ್ಟ್ (Karnataka High Court) ತರಾಟೆ ತೆಗೆದುಕೊಂಡಿದೆ.

    ಪ್ರಸನ್ನ ಬಿ. ವರಾಳೆ, ನ್ಯಾ. ಎಂ.ಜಿ.ಎಸ್. ಕಮಲ್ ಅವರಿದ್ದ ಪೀಠವು, ಅನಧಿಕೃತ ಜಾಹೀರಾತು ಹಾವಳಿ ತಡೆಯಲು ಪಂಚವಾರ್ಷಿಕ ಯೋಜನೆ ಬೇಕೇ? ಫ್ಲೆಕ್ಸ್ ತೆರವಿಗೆ ಶುಭ ಮುಹೂರ್ತಕ್ಕಾಗಿ ಕಾಯುತ್ತಿದ್ದೀರಾ? ಚುನಾವಣೆ ವೇಳೆ 60,000 ಅನಧಿಕೃತ ಫ್ಲೆಕ್ಸ್, ಬ್ಯಾನರ್ ಅಳವಡಿಸಲಾಗಿದೆ. ಆದರೆ ಕೇವಲ 134 ದೂರು ಪರಿಗಣಿಸಿ 40 ಎಫ್‌ಐಆರ್ ದಾಖಲಿಸಲಾಗಿದೆ. ಉಳಿದ ಪ್ರಕರಣಗಳು ಏನಾಯ್ತು ಎಂದು ಗರಂ ಆಗಿದೆ. ಇದನ್ನೂ ಓದಿ: ಆರಗ ಜ್ಞಾನೇಂದ್ರ ಅವರನ್ನು ನಿಮ್ಹಾನ್ಸ್‌ಗೆ ಕಳಿಸೋಣ: ಶಿವಕುಮಾರ್

    ಫ್ಲೆಕ್ಸ್ ಅಳವಡಿಸಿದ ರಾಜಕೀಯ ಪಕ್ಷಗಳ ಪದಾಧಿಕಾರಿಗಳ ಮೇಲೆ ಕ್ರಮ ಯಾಕೆ ತೆಗೆದುಕೊಳ್ಳುತ್ತಿಲ್ಲ. ಬೆಂಗಳೂರು ಸುಂದರವಾಗಿರುವುದು ಸರ್ಕಾರಕ್ಕೆ ಬೇಕಿಲ್ಲವೇ? ನಗರದ ತುಂಬೆಲ್ಲಾ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ ಇರಬೇಕೆಂದು ಸರ್ಕಾರದ ಅಪೇಕ್ಷೆಯೇ ಎಂದು ಹೈಕೋರ್ಟ್ ಬೇಸರ ವ್ಯಕ್ತಪಡಿಸಿದೆ.

    ಬ್ರ್ಯಾಂಡ್ ಬೆಂಗಳೂರಿಗೆ ಫ್ಲೆಕ್ಸ್, ಬ್ಯಾನರ್‌ಗಳಿಂದ ಕಳಂಕ. ಬೆಂಗಳೂರಿನ ಬಗ್ಗೆ ಹೂಡಿಕೆದಾರರಿಗೆ ಎಂತಹ ಚಿತ್ರಣ ನೀಡುತ್ತಿದ್ದೀರಿ? ಬೆಂಗಳೂರಿನ ಸ್ಥಿತಿ ಸುಧಾರಿಸದಿದ್ದರೆ ಹೂಡಿಕೆ ಹೇಗೆ ತರುತ್ತೀರಿ? ಬೆಂಗಳೂರನ್ನು ಅದರ ಅದೃಷ್ಟಕ್ಕೇ ಬಿಡಲಾಗಿದೆ. ಇದು ಅಚ್ಚರಿ, ಆಘಾತಕಾರಿ ಹಾಗೂ ಆತ್ಮಸಾಕ್ಷಿ ಕಲಕುವಂಥದ್ದಾಗಿದೆ. ಬಿಬಿಎಂಪಿ ಅಸಹಾಯಕತೆಯಿಂದ ಕೈ ಎತ್ತಿದೆ. ನೀವೇನು ಮಾಡುತ್ತಿದ್ದೀರ ಎಂದು ರಾಜ್ಯ ಸರ್ಕಾರಕ್ಕೆ ಸಿಜೆ ಪ್ರಸನ್ನ ಬಿ. ವರಾಳೆ ತರಾಟೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ವೀರೇಂದ್ರ ಹೆಗ್ಗಡೆಯವರಿಗೆ ಮಾನಸಿಕ ಹಿಂಸೆ ನೀಡಲಾಗ್ತಿದೆ: ಜೈನಮುನಿ ಗುಣದರನಂದಿ ಶ್ರೀ

    ಇನ್ಮುಂದೆ ಒಂದೇ ಒಂದು ಅನಧಿಕೃತ ಫ್ಲೆಕ್ಸ್ ಕಂಡರೂ ತಲಾ 50 ಸಾವಿರ ರೂ. ದಂಡ ವಿಧಿಸಬೇಕು. ಬಿಬಿಎಂಪಿ, ರಾಜ್ಯ ಸರ್ಕಾರ ತಲಾ 50 ಸಾವಿರ ರೂ. ಠೇವಣಿ ಇಡಬೇಕು. ಫ್ಲೆಕ್ಸ್ ಮೂಲಕ ಶುಭಾಶಯ ಕೋರುವವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು. ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಬೆಂಗಳೂರಿನ ಆಡಳಿತದ ಹೊಣೆ ಹೊತ್ತವರು ಈ ಬಗ್ಗೆ ಗಮನಹರಿಸಬೇಕು ಎಂದು ಬಿಬಿಎಂಪಿ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ವಾರ್ನಿಂಗ್ ಮಾಡಿದೆ. ಮೂರು ವಾರಗಳಲ್ಲಿ ಕ್ರಮ ಕೈಗೊಂಡ ವರದಿ ಸಲ್ಲಿಕೆಗೆ ಹೈಕೋರ್ಟ್‌ ತಾಕೀತು ಮಾಡಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಿಎಂ ಸಿದ್ದರಾಮಯ್ಯ ಶಾಸಕತ್ವ ಅಸಿಂಧು ಕೋರಿ ಅರ್ಜಿ – ಜು.28 ಕ್ಕೆ ಹೈಕೋರ್ಟ್‌ನಿಂದ ವಿಚಾರಣೆ

    ಸಿಎಂ ಸಿದ್ದರಾಮಯ್ಯ ಶಾಸಕತ್ವ ಅಸಿಂಧು ಕೋರಿ ಅರ್ಜಿ – ಜು.28 ಕ್ಕೆ ಹೈಕೋರ್ಟ್‌ನಿಂದ ವಿಚಾರಣೆ

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಶಾಸಕತ್ವ ಅಸಿಂಧುಗೊಳಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆಯನ್ನು ಇದೇ ಜುಲೈ 28 ರಂದು ಕರ್ನಾಟಕ ಹೈಕೋರ್ಟ್‌ (Karnataka High Court) ವಿಚಾರಣೆ ನಡೆಸಲಿದೆ.

    ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ ಪಕ್ಷ ಗ್ಯಾರಂಟಿ (Congress Guarantee) ಯೋಜನೆಗಳಿಂದ ಮತದಾರರಿಗೆ ಆಮಿಷ ಒಡ್ಡಿತ್ತು. ಪ್ರಜಾಪ್ರತಿನಿಧಿ ಕಾಯ್ದೆ ಸೆ.123(1) ಪ್ರಕಾರ ಆಮಿಷ ಒಡ್ಡುವಂತಿಲ್ಲ. ಮತದಾರರಿಗೆ ಗ್ಯಾರಂಟಿ‌ ಕಾರ್ಡ್ ವಿತರಿಸಿ ಆಮಿಷ ಒಡ್ಡಲಾಗಿದೆ. ಹೀಗಾಗಿ ಸಿದ್ದರಾಮಯ್ಯ ಆಯ್ಕೆ ಅಸಿಂಧುಗೊಳಿಸುವಂತೆ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು. ಇದನ್ನೂ ಓದಿ: ನಾಳೆ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

    ಸಿದ್ದರಾಮಯ್ಯ ಅವರು ಸಂವಿಧಾನದ ನಿಬಂಧನೆ, ಜನತಾ ಪ್ರಾತಿನಿಧ್ಯ ಕಾಯ್ದೆಯ ನಿಯಮಗಳು ಮತ್ತು ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

    ಕೆ.ಎಂ.ಶಂಕರ ಎಂಬವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಕಚೇರಿ ಆಕ್ಷೇಪಣೆಗಳನ್ನು ಸರಿಪಡಿಸುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಅಲ್ಲದೇ ವಿಚಾರಣೆಯನ್ನು ಜುಲೈ 28 ಕ್ಕೆ ಮುಂದೂಡಿದೆ. ಇದನ್ನೂ ಓದಿ: ಸರ್ಕಾರದ ಕಾನೂನು ಬಾಹಿರ ಚಟುವಟಿಕೆ ವಿರುದ್ಧ ನಾನು ಬೊಮ್ಮಾಯಿ ಒಟ್ಟಾಗಿ ಹೋರಾಟ ಮಾಡ್ತೀವಿ: ಹೆಚ್‌ಡಿಕೆ ಶಪಥ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೇಂದ್ರದ ಆದೇಶವನ್ನು ಪಾಲಿಸಿ – ಟ್ವಿಟ್ಟರ್‌ ಅರ್ಜಿ ವಜಾ, 50 ಲಕ್ಷ ದಂಡ

    ಕೇಂದ್ರದ ಆದೇಶವನ್ನು ಪಾಲಿಸಿ – ಟ್ವಿಟ್ಟರ್‌ ಅರ್ಜಿ ವಜಾ, 50 ಲಕ್ಷ ದಂಡ

    ಬೆಂಗಳೂರು: ಟ್ವಿಟ್ಟರ್‌ (Twitter) ವಿರುದ್ಧದ ಜಟಾಪಟಿಯಲ್ಲಿ ಕೇಂದ್ರ ಸರ್ಕಾರಕ್ಕೆ (Indian Government) ಗೆಲುವು ಸಿಕ್ಕಿದೆ. ಕೇಂದ್ರ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಟ್ವಿಟ್ಟರ್‌ ಕಂಪನಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ (Karnataka High Court) ವಜಾಗೊಳಿಸಿ 50 ಲಕ್ಷ ರೂ. ದಂಡ ವಿಧಿಸಿದೆ.

    45 ದಿನಗಳ ಒಳಗೆ ರಾಜ್ಯ ಕಾನೂನು ಸೇವಾ ಪ್ರಾಧಿಕಾರಕ್ಕೆ ಟ್ವಿಟ್ಟರ್‌ ದಂಡದ ಮೊತ್ತವನ್ನು ಪಾವತಿಸಬೇಕು ನ್ಯಾ. ಕೃಷ್ಣ ಎಸ್ ದೀಕ್ಷಿತ್ ನೇತೃತ್ವದ ಏಕಸದಸ್ಯ ಪೀಠ ಆದೇಶಿಸಿದೆ. ಒಂದು ವೇಳೆ ಪಾಲಿಸಲು ವಿಫಲವಾದರೆ 45 ದಿನಗಳ ಬಳಿಕ ಪ್ರತಿದಿನ ಹೆಚ್ಚುವರಿಯಾಗಿ 5 ಸಾವಿರ ರೂ. ಪಾವತಿಸಬೇಕು ಎಂದು ಹೈಕೋರ್ಟ್‌ ತನ್ನ ಆದೇಶದಲ್ಲಿ ಉಲ್ಲೇಖಿಸಿದೆ.

    ನಿಮಗೆ ನೋಟಿಸ್ ನೀಡಲಾಗಿತ್ತು. ಆದರೆ ನೀವು ಸರಿಯಾಗಿ ಪಾಲಿಸಲಿಲ್ಲ. ನಿಯಮಗಳನ್ನು ಸರಿಯಾಗಿ ಪಾಲಿಸದಿದ್ದರೇ 7 ವರ್ಷಗಳ ಜೈಲು ಶಿಕ್ಷೆ ಮತ್ತು ಅನಿಯಮಿತ ದಂಡವನ್ನು ವಿಧಿಸಲಾಗುತ್ತದೆ. ನೀವು ನಿಯಮಾನುಸಾರಗಳನ್ನು ಪಾಲಿಸದೇ ಇರುವುದಕ್ಕೆ ಹಾಗೂ ವಿಳಂಬಗೊಳಿಸಿದ್ದಕ್ಕೆ ಯಾವುದೇ ಸ್ಪಷ್ಟ ಕಾರಣಗಳನ್ನು ತಿಳಿಸಿಲ್ಲ. ಈಗಾಗಲೇ ಒಂದು ವರ್ಷಕ್ಕಿಂತ ಹೆಚ್ಚು ವಿಳಂಬವಾಗಿದೆ. ಆದರೇ ಈಗ ಇದ್ದಕ್ಕಿದ್ದಂತೆ ಪಾಲಿಸುತ್ತೇವೆ ಎಂದು ನ್ಯಾಯಾಲಯಕ್ಕೆ ಬಂದಿದ್ದೀರಿ. ನೀವು ರೈತರಲ್ಲ ನೀವು ಮಿಲಿಯನ್ ಡಾಲರ್ ಕಂಪನಿಯ ಮಾಲೀಕರು ಎಂದು ಕೋರ್ಟ್‌ ತನ್ನ ಆದೇಶದಲ್ಲಿ ಹೇಳಿದೆ.  ಇದನ್ನೂ ಓದಿ: ಟ್ವಿಟ್ಟರ್‌ ಕಾನೂನು ಪಾಲನೆ ಮಾಡದೇ ನಿರಂತರ ಉಲ್ಲಂಘನೆ ಮಾಡುತ್ತಿತ್ತು: ರಾಜೀವ್‌ ಚಂದ್ರಶೇಖರ್‌

    2021ರ ಫೆಬ್ರವರಿಯಿಂದ 2022ರ ಫೆಬ್ರವರಿಯ ನಡುವೆ 39 ಯುಆರ್‌ಎಲ್‌ಗಳನ್ನು ತೆಗೆದು ಹಾಕುವಂತೆ ಕೇಂದ್ರ ಸರ್ಕಾರ ಟ್ವಿಟರ್‌ಗೆ ನಿರ್ದೇಶಿಸಿತ್ತು. ಒಟ್ಟು 1,474 ಖಾತೆಗಳು ಮತ್ತು 175 ಟ್ವೀಟ್‌ಗಳ ಪೈಕಿ 39 ಯುಆರ್‌ಎಲ್‌ಗಳನ್ನು ನಿರ್ಬಂಧಿಸಿರುವ ಆದೇಶವನ್ನು ಮಾತ್ರ ಟ್ವಿಟ್ಟರ್‌ ಹೈಕೋರ್ಟ್ ಅರ್ಜಿಯಲ್ಲಿ ಪ್ರಶ್ನಿಸಿತ್ತು. ಸುದೀರ್ಘ ವಿಚಾರಣೆ ನಡಿಸಿದ್ದ ಹೈಕೋರ್ಟ್‌ ಏಪ್ರಿಲ್‌ 21ರಂದು ಕೊನೆಯ ವಿಚಾರಣೆ ನಡೆಸಿ ತೀರ್ಪನ್ನು ಕಾಯ್ದಿರಿಸಿತ್ತು.

    ಏನಿದು ಪ್ರಕರಣ?
    ಸ್ವತಂತ್ರ ಸಿಖ್ ದೇಶವನ್ನು ಬೆಂಬಲಿಸುವ ಖಾತೆಗಳು, ರೈತರ ಪ್ರತಿಭಟನೆ ಕುರಿತಾಗಿ ಸುಳ್ಳು ಮಾಹಿತಿ ಹರಡುವ ಪೋಸ್ಟ್‌ಗಳು ಹಾಗೂ ಕೋವಿಡ್ 19 ಸಾಂಕ್ರಾಮಿಕವನ್ನು ಸರ್ಕಾರ ನಿರ್ವಹಣೆ ಮಾಡಿರುವ ರೀತಿಯನ್ನು ಟೀಕಿಸುವ ಟ್ವೀಟ್‌ಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ 2021-22ರ ಅವಧಿಯಲ್ಲಿ ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವಾಲಯ ಟ್ವಿಟ್ಟರ್‌ಗೆ ಆದೇಶಿಸಿತ್ತು.

    ಈ ಸಂದರ್ಭದಲ್ಲಿ ಟ್ವಿಟ್ಟರ್‌ ಆಡಳಿತವನ್ನು ಜಾಕ್‌ ಡಾರ್ಸಿ ನೇತೃತ್ವದ ತಂಡ ನೋಡಿಕೊಳ್ಳುತ್ತಿತ್ತು. ಐಟಿ ಸಚಿವಾಲಯದ ಆದೇಶಕ್ಕೆ ಟ್ವಿಟ್ಟರ್‌ ಕಂಪನಿ ಸರಿಯಾಗಿ ಸ್ಪಂದನೆ ನೀಡಿರಲಿಲ್ಲ. ಈ ಕಾರಣಕ್ಕೆ ನಮ್ಮ ಆದೇಶಗಳನ್ನು ಸರಿಯಾಗಿ ಪಾಲಿಸದೆ ಇದ್ದರೆ ಕ್ರಿಮಿನಲ್ ಪ್ರಕ್ರಿಯೆ ಎದುರಿಸಬೇಕಾಗುತ್ತದೆ. ಯಾವುದೇ ಕಂಪನಿ ಭಾರತದಲ್ಲಿ ಕಾರ್ಯನಿರ್ವಹಿಸುವಾಗ ನಮ್ಮ ದೇಶದ ಕಾನೂನನ್ನು ಪಾಲಿಸಬೇಕು ಎಂದು ಎಚ್ಚರಿಕೆ ನೀಡಿತ್ತು.

     

    ದೇಶದಲ್ಲಿ 2.4 ಕೋಟಿ ಟ್ವಿಟ್ಟರ್ ಬಳಕೆದಾರರಿದ್ದಾರೆ. ಕೆಲವು ರಾಜಕೀಯ ವಿಷಯಗಳು ರಾಜಕೀಯ ಪಕ್ಷಗಳ ಅಧಿಕೃತ ಖಾತೆಗಳಿಂದ ಪೋಸ್ಟ್ ಆಗಿರುವುದಕ್ಕೆ ಸಂಬಂಧಿಸಿವೆ. ಇವುಗಳನ್ನು ಬ್ಲಾಕ್ ಮಾಡುವುದು ಅಭಿವ್ಯಕ್ತಿ ಸ್ವಾತಂತ್ರ‍್ಯವನ್ನು ಉಲ್ಲಂಘಿಸಿದಂತೆ ಆಗುತ್ತದೆ. ಭಾರತದ ಐಟಿ ಕಾಯ್ದೆಯ ಪ್ರಕ್ರಿಯಾ ಅಗತ್ಯಗಳಿಗೆ ಒಳಪಡದ ಕಾರಣ ಕೆಲವು ಆದೇಶಗಳು ನ್ಯಾಯಾಂಗದ ಪರಾಮರ್ಶೆಗೆ ಒಳಪಡಬೇಕು ಎಂದು ಹೇಳಿ ಹೈಕೋರ್ಟ್‌ ಕೇಂದ್ರ ಸರ್ಕಾರದ ಆದೇಶವನ್ನು ಪ್ರಶ್ನಿಸಿತ್ತು.

    ರೈತರ ಹೋರಾಟದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದ 1,300 ಟ್ವಿಟ್ಟರ್‌ ಖಾತೆಗಳನ್ನು ತೆಗೆದು ಹಾಕಬೇಕೆಂದು ಕೇಂದ್ರ ಸರ್ಕಾರ ಟ್ವಿಟ್ಟರ್‌ಗೆ ಸೂಚಿಸಿತ್ತು. ಹೀಗಿದ್ದರೂ ಟ್ವಿಟ್ಟರ್‌ 500 ಖಾತೆಗಳನ್ನು ಮಾತ್ರ ಭಾರತದಲ್ಲಿ ನಿರ್ಬಂಧ ಹೇರಿತ್ತು. ಭಾರತ ಸರ್ಕಾರದ ಆದೇಶವನ್ನು ಟ್ವಿಟ್ಟರ್‌ ಪಾಲಿಸದ್ದಕ್ಕೆ ಭಾರೀ ಟೀಕೆ ವ್ಯಕ್ತವಾಗಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಮತ್ತೆ ಬಿಗ್ ರಿಲೀಫ್

    ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಮತ್ತೆ ಬಿಗ್ ರಿಲೀಫ್

    ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ (DK Shivakumar) ಮತ್ತೆ ಬಿಗ್ ರಿಲೀಫ್ ಸಿಕ್ಕಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (CBI) ತನಿಖೆಗೆ ಹೈಕೋರ್ಟ್ ನೀಡಿದ್ದ ಮಧ್ಯಂತರ ತಡೆಯಾಜ್ಞೆ ಮತ್ತೆ ವಿಸ್ತರಣೆಯಾಗಿದೆ.

    ಪ್ರಕರಣದ ಫೈಲ್ ಸಿಜೆ ಅಂಗಳಕ್ಕೆ ಹೋಗಿದೆ. ಈ ಹಿಂದೆ ನ್ಯಾ.ನಟರಾಜನ್ ಪೀಠದಲ್ಲಿ ವಿಚಾರಣೆ ನಡೆದಿತ್ತು. ಇದೀಗ ನ್ಯಾ.ಎಂ.ನಾಗಪ್ರಸನ್ನ ಅವರ ಪೀಠಕ್ಕೆ ವರ್ಗಾವಣೆ ಆಗಿದೆ. ಹೀಗಾಗಿ ಯಾವ ಪೀಠದಲ್ಲಿ ವಿಚಾರಣೆ ಮುಂದುವರಿಸಬೇಕು ಎಂದು ಸಿಜೆ ನಿರ್ಧಾರ ಮಾಡಲಿದ್ದಾರೆ. ಪ್ರಕರಣ ಫೈಲ್ ರಿಜಿಸ್ಟ್ರಾರ್‌ಗೆ ನ್ಯಾ.ನಾಗಪ್ರಸನ್ನ ಅವರು ಕಳುಹಿಸಿದ್ದಾರೆ. ಮುಂದಿನ ವಿಚಾರಣೆವರೆಗೂ ಮಧ್ಯಂತರ ತಡೆಯಾಜ್ಞೆ ಮುಂದುವರೆಸಿ ಕೋರ್ಟ್ ಆದೇಶ ಹೊರಡಿಸಿದೆ. ಇದನ್ನೂ ಓದಿ: ಪುತ್ತೂರುನಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್‍ಗೆ ದಂತದಿಂದ ತಿವಿದ ಕಾಡಾನೆ!

    ಸಿಬಿಐ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆ ಈಗ ವಿಸ್ತರಣೆಯಾಗಿದೆ. ನ್ಯಾ.ಎಂ.ನಾಗಪ್ರಸನ್ನ ಅವರ ಪೀಠದಲ್ಲಿ ವಿಚಾರಣೆ ನಡೆಯಲಿದೆ. ಹೈಕೋರ್ಟ್ ಏಕಸದಸ್ಯ ಪೀಠದಿಂದ ಮಧ್ಯಂತರ ತಡೆಯಾಜ್ಞೆ ವಿಸ್ತರಣೆಯಾಗಿದೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ತಡೆ ತೆರವು ಮಾಡಿ ತನಿಖೆಗೆ ಅವಕಾಶ ಕೊಡಬೇಕು ಎಂದು ಸಿಬಿಐ ಮೇಲ್ಮನವಿ ಸಲ್ಲಿಸಿತ್ತು. ಸಿಬಿಐ ತನಿಖೆಗೆ ಡಿ.ಕೆ.ಶಿವಕುಮಾರ್ ಕೋರ್ಟ್ನಿಂದ ತಡೆ ಪಡೆದಿದ್ದರು. ಕೋರ್ಟ್ ರಜಾ ದಿನಗಳ ಬಳಿಕ ಮತ್ತೆ ಅರ್ಜಿ ವಿಚಾರಣೆಯಾಗಲಿದೆ. ಇದನ್ನೂ: ಮುಸ್ಲಿಂ ಮಹಿಳೆಯರು ‘ಬೇಬಿ ಫ್ಯಾಕ್ಟರಿ’ ಎಂದು ಪೋಸ್ಟ್ ಹಾಕಿದ RSS ಕಾರ್ಯಕರ್ತ ಅರೆಸ್ಟ್