Tag: Karnataka High Court

  • ಈ ಶೋಗೆ ಮಾತ್ರ ಅರ್ಜಿ ಸಲ್ಲಿಸಿದ್ದು ಯಾಕೆ? – ಮೋದಿ ರೋಡ್ ಶೋಗೆ ಹೈಕೋರ್ಟ್ ಗ್ರೀನ್ ಸಿಗ್ನಲ್: ವಾದ, ಪ್ರತಿವಾದ ಹೇಗಿತ್ತು?

    ಈ ಶೋಗೆ ಮಾತ್ರ ಅರ್ಜಿ ಸಲ್ಲಿಸಿದ್ದು ಯಾಕೆ? – ಮೋದಿ ರೋಡ್ ಶೋಗೆ ಹೈಕೋರ್ಟ್ ಗ್ರೀನ್ ಸಿಗ್ನಲ್: ವಾದ, ಪ್ರತಿವಾದ ಹೇಗಿತ್ತು?

    ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ( Karnataka Assembly Election) ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ (Bengaluru) ಶನಿವಾರ ಮತ್ತು ಭಾನುವಾರ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ 36 ಕಿ.ಮೀ ರೋಡ್ ಶೋ ತಡೆ ನೀಡಲು ಹೈಕೋರ್ಟ್ (Karnataka High Court) ಶುಕ್ರವಾರ ನಿರಾಕರಿಸಿದೆ.

    ನ್ಯಾಯಮೂರ್ತಿಗಳಾದ ಕೃಷ್ಣ ಎಸ್. ದೀಕ್ಷಿತ್ ಹಾಗೂ ವಿಜಯಕುಮಾರ್ ಎ. ಪಾಟೀಲ್ ಅವರ ಪೀಠವು ವಿಚಾರಣೆ ನಡೆಸಿ ರೋಡ್ ಶೋಗೆ ತಡೆಗೆ ಸಲ್ಲಿಸಿದ್ದ ಅರ್ಜಿಯನ್ನು ಇತ್ಯರ್ಥ ಮಾಡಿದರು. ಇದನ್ನೂ ಓದಿ: ಇವಿಎಂ ಖರೀದಿಯಲ್ಲಿ ಅಕ್ರಮ ಆರೋಪ – ಚುನಾವಣಾ ಆಯೋಗದ ವಿರುದ್ಧದ ಪಿಐಎಲ್ ವಜಾಗೊಳಿಸಿದ ಸುಪ್ರೀಂ

    ವಿಚಾರಣೆಯ ಸಂದರ್ಭದಲ್ಲಿ, ಭಾರತದಲ್ಲಿ ಚುನಾವಣೆಗಳನ್ನು ಹಬ್ಬದ ಆಚರಣೆಗಳೆಂದು ಪರಿಗಣಿಸಲಾಗಿದೆ. ಅಲ್ಲದೇ 1952 ರ ಮೊದಲ ಸಾರ್ವತ್ರಿಕ ಚುನಾವಣೆಯಿಂದಲೇ ರ‍್ಯಾಲಿ ನಡೆಸಲಾಗಿದೆ. ಇದಲ್ಲದೆ, ಕೇರಳ ಮತ್ತು ಕಲ್ಕತ್ತಾ ಹೈಕೋರ್ಟ್‍ಗಳು ಚುನಾವಣಾ ರ‍್ಯಾಲಿಗೆ ಅವಕಾಶ ನೀಡಿರುವುದನ್ನು ನಾವಿಲ್ಲಿ ಗಮನಿಸಬಹುದು ಎಂದು ನ್ಯಾಯಾಲಯ ಅಭಿಪ್ರಾಯ ವ್ಯಕ್ತಪಡಿಸಿತು.

    ನ್ಯಾಯಾಲಯದ ಪ್ರಶ್ನೆ:
    ಏಪ್ರಿಲ್‍ನಿಂದ ರೋಡ್ ಶೋಗಳು ನಡೆಯುತ್ತಿವೆ. ಆದರೆ ಈ ರೋಡ್ ಶೋಗೆ ಮಾತ್ರ ಯಾಕೆ ಪಿಎಎಲ್ (PIL) ಹಾಕಿದ್ದೀರಿ? ನಾಳೆ ರೋಡ್ ಶೋ ಇರುವಾಗ ಇಂದು ಅರ್ಜಿ ಸಲ್ಲಿಸಿದ್ದು ಯಾಕೆ? ಚುನಾವಣಾ ಆಯೋಗ ರೋಡ್ ಶೋ ಬಗ್ಗೆ ಏನಾದ್ರೂ ಮಾರ್ಗಸೂಚಿ ನೀಡಿದೆಯೇ ಎಂದು ಅರ್ಜಿದಾರರನ್ನು ಪ್ರಶ್ನಿಸಿತು.

    ನೀಟ್ ಪರೀಕ್ಷೆಗೆ ಯಾವುದೇ ತೊಂದರೆಯಾಗದಂತೆ ಕಾರ್ಯ ನಿರ್ವಹಿಸಬೇಕು. ರ‍್ಯಾಲಿಯಿಂದ ಜನರಿಗೆ ಸಮಸ್ಯೆಯಾಗದಂತೆ, ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಬೇಕು ಎಂದು ಕೋರ್ಟ್ ಪೊಲೀಸರಿಗೆ ಸೂಚನೆ ನೀಡಿದೆ. ಯಾವುದೇ ಅಹಿತಕರ ಘಟನೆ ನಡೆದಲ್ಲಿ ಸಂಘಟಕರು ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿದ್ದರೂ ಅವರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ನ್ಯಾಯಾಲಯ ಎಚ್ಚರಿಕೆ ನೀಡಿದೆ.

    ಪೊಲೀಸ್ ಕಮಿಷನರ್ ಹೇಳಿದ್ದೇನು?
    ರ್ಯಾಲಿ ಇದ್ದಾಗ ಸಾರ್ವಜನಿಕರಿಗೆ ಹಿಂದಿನ ದಿನವೇ ಮಾಹಿತಿ ನೀಡುತ್ತಿದ್ದೇವೆ. ಮಾಹಿತಿ ನೀಡಲು ಸಾಮಾಜಿಕ ಜಾಲತಾಣ ಬಳಕೆ ಮಾಡುತ್ತಿದ್ದೇವೆ. ಅಹಿತಕರ ಘಟನೆ ನಡೆಯದಂತೆ ಕ್ರಮಕೈಗೊಂಡಿದ್ದೇವೆ. ವಿದ್ಯಾರ್ಥಿಗಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಿದ್ದೇವೆ. ಅಂಬುಲೆನ್ಸ್ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ಪೊಲೀಸ್ ಕಮೀಷನರ್ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು.

    ಅರ್ಜಿದಾರರ ವಾದ ಏನಿತ್ತು?
    ಬೆಂಗಳೂರಿನಲ್ಲಿ ರೋಡ್ ಶೋ ನಡೆಸುವ ರಾಜಕೀಯ ಮುಖಂಡರು ಸಮಯವನ್ನು 5 ಗಂಟೆಗಳವರೆಗೆ ವಿಸ್ತರಿಸುತ್ತಿದ್ದಾರೆ. ಇದರಿಂದಾಗಿ ಸಾರ್ವಜನಿಕರಿಗೆ ಹೆಚ್ಚಿನ ತೊಂದರೆಯಾಗುತ್ತಿದೆ. ಮೋದಿಯವರ ರೋಡ್ ಶೋಗೆ ಬೆಂಗಳೂರಿನ ಪ್ರಮುಖ ವಾಣಿಜ್ಯ ರಸ್ತೆಗಳಲ್ಲಿ 10 ಲಕ್ಷ ಪಕ್ಷದ ಬೆಂಬಲಿಗರು ಸೇರಲಿದ್ದು ಸಾರ್ವಜನಿಕರ ಓಡಾಟಕ್ಕೆ ಅಡಚಣೆಯಾಗಲಿದೆ. ವ್ಯಾಪಾರಿಗಳಿಗೆ ತೊಂದರೆಯಾಗಲಿದೆ. ಅಂಬುಲೆನ್ಸ್ ಸಂಚಾರಕ್ಕೆ ತೊಂದೆಯಾಗಲಿದೆ. ಮೇ 13 ರಂದು ಗೆದ್ದರೆ ಮತ ಎಣಿಕೆಯ ನಂತರವೂ ರೋಡ್ ಶೋಗಳಿಗೆ ರಾಜಕೀಯ ಪಕ್ಷಗಳು ಯೋಚಿಸಿವೆ. ಹೀಗಿದ್ದರೂ, ರೋಡ್ ಶೋಗಳ ದುಷ್ಪರಿಣಾಮಗಳನ್ನು ತಡೆಯಲು ಬೆಂಗಳೂರು ಪೊಲೀಸರು ಯಾವುದೇ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು ಅರ್ಜಿದಾರರಾದ ವಕೀಲ ಅಮೃತೇಶ್ ವಾದಿಸಿದ್ದರು.

    ರಾಜ್ಯ ಸರ್ಕಾರದ ವಾದ ಏನಿತ್ತು?
    ರಾಜ್ಯದ ಪರ ವಾದ ಮಂಡಿಸಿದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಅವರು, ಚುನಾವಣಾ ಪ್ರಚಾರದ ಉದ್ದೇಶಕ್ಕಾಗಿ ಚುನಾವಣಾ ರ‍್ಯಾಲಿಗಳನ್ನು ಬಹಳ ಹಿಂದಿನಿಂದಲೂ ನಡೆಸಲಾಗುತ್ತಿದೆ. ಇದುವರೆಗೆ ಯಾವುದೇ ಅಹಿತಕರ ಘಟನೆ ವರದಿಯಾಗಿಲ್ಲ. ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿದಂತೆ, ಇಲ್ಲಿಯ ವರೆಗೂ 2,517 ರ್ಯಾಲಿಗಳನ್ನು ಯಾವುದೇ ಅಹಿತಕರ ಘಟನೆ ವರದಿಯಾಗದಂತೆ ನಡೆದಿವೆ. ಈ ಪೈಕಿ 371 ಬೆಂಗಳೂರಿನಲ್ಲಿ ನಡೆದಿವೆ ಎಂದು ವಾದಿಸಿದರು.

    ಚುನಾವಣಾ ಪ್ರಕ್ರಿಯೆಯಲ್ಲಿ ರ‍್ಯಾಲಿಗಳನ್ನು ನಡೆಸುವ ಹಕ್ಕು ಭಾರತೀಯ ಸಂವಿಧಾನದ 19 ನೇ ವಿಧಿಯ ಅಡಿಯಲ್ಲಿ ಖಾತ್ರಿಪಡಿಸಲಾದ ಭಾಷಣ, ಸಭೆ ಮತ್ತು ಚಳುವಳಿಯ ಹಕ್ಕುಗಳನ್ನು ಹೊಂದಿದೆ ಎಂದು ಅವರು ಕೋರ್ಟ್ ಗಮನಕ್ಕೆ ತಂದರು. ಇದನ್ನೂ ಓದಿ: ಕಾಂಗ್ರೆಸ್‍ದು 85 ಪರ್ಸೆಂಟ್ ಕಮಿಷನ್ ಸರ್ಕಾರ ಆಗಿತ್ತು: ನರೇಂದ್ರ ಮೋದಿ

  • 5, 8ನೇ ತರಗತಿ ಬೋರ್ಡ್‌ ಪರೀಕ್ಷೆಗೆ ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌

    5, 8ನೇ ತರಗತಿ ಬೋರ್ಡ್‌ ಪರೀಕ್ಷೆಗೆ ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌

    ಬೆಂಗಳೂರು: 5 ಮತ್ತು 8ನೇ ತರಗತಿ ಬೋರ್ಡ್‌ ಪರೀಕ್ಷೆ ನಡೆಸಲು ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌ ಕೊಟ್ಟಿದೆ. 10 ದಿನಗಳ ಬಳಿಕ ಪರೀಕ್ಷೆ ನಡೆಸುವಂತೆ ಆದೇಶ ಹೊರಡಿಸಿದೆ. ಆ ಮೂಲಕ ಪೋಷಕರ ಗೊಂದಲಕ್ಕೂ ತೆರೆ ಎಳೆದಿದೆ.

    ಬೋರ್ಡ್‌ ಪರೀಕ್ಷೆ ರದ್ದುಪಡಿಸಿ ಹೈಕೋರ್ಟ್‌ ಏಕಸದಸ್ಯ ಪೀಠ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಏಕಸದಸ್ಯ ಪೀಠದ ಆದೇಶಕ್ಕೆ ವಿಭಾಗೀಯ ಪೀಠ ತಡೆಯಾಜ್ಞೆ ನೀಡಿದ್ದು, ಬೋರ್ಡ್‌ ಪರೀಕ್ಷೆ ನಡೆಸಲು ಆದೇಶ ಹೊರಡಿಸಿದೆ.

    10 ದಿನದ ಬಳಿಕ ಪರೀಕ್ಷೆ ನಡೆಸಬೇಕು. ಮಾ.27 ನೇ ತಾರೀಖಿನಿಂದ ಪರೀಕ್ಷೆ ಪ್ರಾರಂಭಿಸಬೇಕು. ಆದರೆ ಯಾವುದೇ ವಿದ್ಯಾರ್ಥಿಗಳನ್ನು ಫೇಲ್ ಮಾಡುವಂತಿಲ್ಲ ಎಂದು ಸೂಚಿಸಿದೆ.

    ನ್ಯಾ.ನರೇಂದರ್ ಹಾಗೂ ನ್ಯಾ. ಅಶೋಕ್ ಕಿಣಗಿ ಅವರಿದ್ದ ಪೀಠವು ಅರ್ಜಿ ವಿಚಾರಣೆ ನಡೆಸಿ ಈ ಆದೇಶ ಹೊರಡಿಸಿದೆ. ಕುಸ್ಮಾ ಪರವಾಗಿ ವಕೀಲ ಕೆ.ವಿ.ಧನಂಜಯ ಹಾಗೂ ಸರ್ಕಾರದ ಪರವಾಗಿ ಎಎಜಿ ಧ್ಯಾನ್‌ಚಿನ್ನಪ್ಪ ವಾದ ಮಂಡಿಸಿದರು.

    ಇದೇ ಮಾ.13 ರಿಂದ ಆರಂಭವಾಗಬೇಕಿದ್ದ 5, 8ನೇ ತರಗತಿಯ ಬೋರ್ಡ್‌ ಪರೀಕ್ಷೆ ರದ್ದುಪಡಿಸಿ ಹೈಕೋರ್ಟ್‌ ಏಕಸದಸ್ಯ ಪೀಠ ಆದೇಶ ಹೊರಡಿಸಿತ್ತು. ಎಂದಿನಂತೆ ಸಾಮಾನ್ಯ ವಾರ್ಷಿಕ ಪರೀಕ್ಷೆ ನಡೆಸಬೇಕು. ಶಾಲಾ ಮಟ್ಟದಲ್ಲೇ ಮೌಲ್ಯಮಾಪನ ಮಾಡಬೇಕು ಎಂದು ಸೂಚಿಸಿತ್ತು. ಇದನ್ನು ಪ್ರಶ್ನಿಸಿ ಸರ್ಕಾರ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು.

  • 5, 8ನೇ ತರಗತಿಯ ಬೋರ್ಡ್‌ ಪರೀಕ್ಷೆ ರದ್ದು – ಹೈಕೋರ್ಟ್‌ ಆದೇಶ

    5, 8ನೇ ತರಗತಿಯ ಬೋರ್ಡ್‌ ಪರೀಕ್ಷೆ ರದ್ದು – ಹೈಕೋರ್ಟ್‌ ಆದೇಶ

    ಬೆಂಗಳೂರು: ಇದೇ ಮಾ.13 ರಿಂದ ಆರಂಭವಾಗಬೇಕಿದ್ದ 5, 8ನೇ ತರಗತಿಯ (5 and 8th class) ಬೋರ್ಡ್‌ ಪರೀಕ್ಷೆ ರದ್ದುಪಡಿಸಿ ಹೈಕೋರ್ಟ್‌ (Karnataka High Court) ಆದೇಶ ಹೊರಡಿಸಿದೆ. ಎಂದಿನಂತೆ ಸಾಮಾನ್ಯ ವಾರ್ಷಿಕ ಪರೀಕ್ಷೆ ನಡೆಸಬೇಕು. ಶಾಲಾ ಮಟ್ಟದಲ್ಲೇ ಮೌಲ್ಯಮಾಪನ ಮಾಡಬೇಕು ಎಂದು ಸೂಚಿಸಿದೆ.

    ಹೈಕೋರ್ಟ್‌ ನ್ಯಾ. ಪ್ರದೀಪ್‌ ಸಿಂಗ್‌ ಯೆರೂರ್‌ ಅವರ ನೇತೃತ್ವದ ಏಕಸದಸ್ಯ ಪೀಠವು ಶುಕ್ರವಾರ ಈ ಆದೇಶ ಹೊರಡಿಸಿದೆ. ನಿಯಮಗಳಿಗನುಸಾರ ಮುಂದಿನ ಶೈಕ್ಷಣಿಕ ವರ್ಷದಿಂದ ಬೋರ್ಡ್‌ ಪರೀಕ್ಷೆ ನಡೆಸಬಹುದು ಎಂದು ಹೈಕೋರ್ಟ್‌ ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಸುಮಲತಾ ಈಗ ಬಿಜೆಪಿ ಸೇರಲು ಸಾಧ್ಯವಿಲ್ಲ ಯಾಕೆ? ಸಂವಿಧಾನದ 10ನೇ ಶೆಡ್ಯೂಲ್‌ನಲ್ಲಿ ಏನಿದೆ?

    karnataka highcourt

    5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಈ ವರ್ಷದಿಂದಲೇ ಶಾಲಾ ಮಟ್ಟದ ಮೌಲ್ಯಮಾಪನಕ್ಕೆ ಬದಲಾಗಿ ರಾಜ್ಯ ಮಟ್ಟದ ಮಂಡಳಿ ಪರೀಕ್ಷೆ ನಡೆಸುವ ರಾಜ್ಯ ಶಿಕ್ಷಣ ಇಲಾಖೆಯ ನಿರ್ಧಾರಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ.

    ಆದೇಶ ಈ ವರ್ಷಕ್ಕೆ ಮಾತ್ರ ಅನ್ವಯ. ಈ ವರ್ಷ ಮಾತ್ರ ಬೋರ್ಡ್ ಎಕ್ಸಾಂ ರದ್ದುಪಡಿಸಲಾಗಿದೆ. ಮುಂದಿನ ವರ್ಷ ಎಲ್ಲಾ ನಿಯಮಗಳನ್ನ ಪಾಲಿಸಿ. ಪೋಷಕರ ಅಭಿಪ್ರಾಯವನ್ನು ಪಡೆದು, ರಾಜ್ಯ ಸರ್ಕಾರದೊಂದಿಗೆ ಚರ್ಚಿಸಿ ಅಂತಿಮವಾಗಿ ನಿರ್ಧರಿಸಿ ಎಂದು ಶಿಕ್ಷಣ ಇಲಾಖೆಗೆ ಹೈಕೋರ್ಟ್ ಸೂಚನೆ ನೀಡಿದೆ. ಇದನ್ನೂ ಓದಿ: ಊರಲ್ಲಿರೋ ಮಕ್ಕಳೆಲ್ಲಾ ನನ್ನವೇ ಅಂದ್ರೆ ಕಾಲಲ್ಲಿರೋದು ಕೈಗೆ ತಗೋತಾರೆ – ಸಿ.ಟಿ ರವಿ ಕಿಡಿ

    2022-23ನೇ ಶೈಕ್ಷಣಿಕ ಸಾಲಿನಲ್ಲಿ 5 ಮತ್ತು 8ನೇ ತರಗತಿಗೆ ವಿದ್ಯಾರ್ಥಿಗಳ ಶೈಕ್ಷಣಿಕ ಮೌಲ್ಯಮಾಪನ ವಿಧಾನವನ್ನು ಬದಲಿಸುವ ಕುರಿತಂತೆ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಸಂಘವು ತಕರಾರು ಅರ್ಜಿ ಸಲ್ಲಿಸಿತ್ತು. 5, 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್‌ ಪರೀಕ್ಷೆ ನಡೆಸದಂತೆ ಕ್ರಮವಹಿಸಲು ಕರ್ನಾಟಕ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಸಂಘದ (ರುಪ್ಸಾ) ಅಧ್ಯಕ್ಷರು ಮೇಲ್ಮನವಿ ಸಲ್ಲಿಸಿದ್ದರು.

    ಫೆ.23 ರಂದು ವಿಚಾರಣೆ ನಡೆಸಿದ್ದ ಪೀಠವು ಸರ್ಕಾರದ ನಿರ್ಧಾರಕ್ಕೆ ಮಧ್ಯಂತರ ತಡೆ ನೀಡಲು ನಿರಾಕರಿಸಿತ್ತು. ಹೀಗಾಗಿ ವಿಭಾಗೀಯ ಪೀಠಕ್ಕೆ ರುಪ್ಸಾ ಮೇಲ್ಮನವಿ ಸಲ್ಲಿಸಿತ್ತು.

    ಶೈಕ್ಷಣಿಕ ವರ್ಷದ ಅಂತ್ಯದಲ್ಲಿ ಮೌಲ್ಯಮಾಪನ ಬದಲಾವಣೆಗೆ ಸರ್ಕಾರ ಕೈಗೊಂಡಿರುವ ನಿರ್ಣಯವು ವಿದ್ಯಾರ್ಥಿಗಳ ಮತ್ತು ಶಿಕ್ಷಕರ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ಸಂಘವು ಮೇಲ್ಮನವಿಯಲ್ಲಿ ತಿಳಿಸಿತ್ತು. ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಕರ್ನಾಟಕದ ಬೆಳವಣಿಗೆಗೆ ಪೂರಕ – ಮೋದಿ ಬಣ್ಣನೆ

    ಮೇಲ್ಮನವಿಯನ್ನು ವಿಚಾರಣೆಗೆ ಪರಿಗಣಿಸಿದ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್‌ ಎಸ್.ಕಿಣಗಿ ಅವರಿದ್ದ ವಿಭಾಗೀಯ ಪೀಠವು ತುರ್ತಾಗಿ ಅರ್ಜಿ ಇತ್ಯರ್ಥಪಡಿಸಿ ಎಂದು ಸೂಚಿಸಿತ್ತು. ಅದರಂತೆ ಏಕಸದಸ್ಯ ಪೀಠವು ಈ ತೀರ್ಪು ನೀಡಿದೆ.

  • ಮಾಡಾಳ್ ವಿರೂಪಾಕ್ಷಪ್ಪಗೆ ರಿಲೀಫ್ – ಹೈಕೋರ್ಟ್‌ನಿಂದ ನಿರೀಕ್ಷಣಾ ಜಾಮೀನು ಮಂಜೂರು

    ಮಾಡಾಳ್ ವಿರೂಪಾಕ್ಷಪ್ಪಗೆ ರಿಲೀಫ್ – ಹೈಕೋರ್ಟ್‌ನಿಂದ ನಿರೀಕ್ಷಣಾ ಜಾಮೀನು ಮಂಜೂರು

    ಬೆಂಗಳೂರು: ಕೆಎಸ್‌ಡಿಎಲ್ ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ರಿಲೀಫ್ ಸಿಕ್ಕಿದೆ. ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್, ವಿರೂಪಾಕ್ಷಪ್ಪಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

    ಪ್ರಕರಣದ ತುರ್ತು ವಿಚಾರಣೆ ನಡೆಸಿ ನಿರೀಕ್ಷಣಾ ಜಾಮೀನು ನೀಡಬೇಕು ಎಂದು ಸೋಮವಾರ ಹೈಕೋರ್ಟ್‌ಗೆ ವಿರೂಪಾಕ್ಷಪ್ಪ ಮನವಿ ಮಾಡಿಕೊಂಡಿದ್ದರು. ತಕ್ಷಣ ವಿಚಾರಣೆ ನಡೆಸಲು ಒಪ್ಪದ ಕೋರ್ಟ್ ಮಂಗಳವಾರಕ್ಕೆ ಮುಂದೂಡಿತ್ತು. ಅದರಂತೆ ಇಂದು ಹೈಕೋರ್ಟ್‌ನ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಕೆ.ನಟರಾಜನ್ ಅರ್ಜಿ ವಿಚಾರಣೆ ನಡೆಸಿದರು. ವಿರೂಪಾಕ್ಷಪ್ಪ ಪರವಾಗಿ ವಕೀಲ ಸಂದೀಪ್ ಪಾಟೀಲ್ ವಾದ ಮಂಡಿಸಿದರು. ಮಧ್ಯಂತರ ನಿರೀಕ್ಷಣಾ ಜಾಮೀನಿಗಾಗಿ ಮನವಿ ಮಾಡಿದರು.

    5 ಲಕ್ಷ ರೂ. ಮೊತ್ತದ ವೈಯಕ್ತಿಕ ಬಾಂಡ್ ಹಾಗೂ ಇಬ್ಬರ ಭದ್ರತೆಯ ಷರತ್ತುಗಳೊಂದಿಗೆ ಜಾಮೀನು ಮಂಜೂರು ಮಾಡಿತು. ಅಲ್ಲದೇ ಇದೇ 17ಕ್ಕೆ ವಿಚಾರಣೆಯನ್ನು ಮುಂದೂಡಿದೆ.

    48 ಗಂಟೆಗಳ ಒಳಗೆ ತನಿಖಾಧಿಕಾರಿ ಮುಂದೆ ವಿಚಾರಣೆಗೆ ಹಾಜರಾಗಲು ಹೈಕೋರ್ಟ್ ಸೂಚಿಸಿದೆ. ಹೀಗಾಗಿ ವಿರೂಪಾಕ್ಷಪ್ಪ ಗುರುವಾರ ತನಿಖಾಧಿಕಾರಿ ಮುಂದೆ ವಿಚಾರಣೆಗೆ ಹಾಜರಾಗಬೇಕಿದೆ.

  • ಅಕ್ರಮ ಆಸ್ತಿ ಗಳಿಕೆ ಕೇಸ್ – CBIನಿಂದ ಡಿಕೆಶಿಗೆ ಇನ್ನೂ ಒಂದು ವಾರ ರಿಲೀಫ್

    ಅಕ್ರಮ ಆಸ್ತಿ ಗಳಿಕೆ ಕೇಸ್ – CBIನಿಂದ ಡಿಕೆಶಿಗೆ ಇನ್ನೂ ಒಂದು ವಾರ ರಿಲೀಫ್

    ಬೆಂಗಳೂರು: ಕೆಪಿಸಿಸಿ (KPCC) ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಕೋರ್ಟ್ (Karnataka High Court) ತಡೆಯಾಜ್ಞೆ ನೀಡಿದ್ದು, ಇನ್ನೂ ಒಂದು ವಾರ ರಿಲೀಫ್ ಕೊಟ್ಟಿದೆ.

    ಡಿಕೆಶಿ ವಿರುದ್ಧ ಸಿಬಿಐ (CBI) ನಡೆಸುತ್ತಿದ್ದ ತನಿಖೆಗೆ ಈ ಹಿಂದೆ ಕೋರ್ಟ್ ತಡೆ ನೀಡಿತ್ತು. ಅಲ್ಲದೇ ಫೆಬ್ರವರಿ 24ಕ್ಕೆ ಸಿಬಿಐಗೆ ತನಿಖಾ ಪ್ರಗತಿ ವರದಿ ನೀಡುವಂತೆ ಸೂಚಿಸಿತ್ತು. ಈ ಸಂಬಂಧ ಶುಕ್ರವಾರ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಡಿಕೆಶಿಗೆ ಇನ್ನೂ ಒಂದು ವಾರ ಬಿಡುವು ನೀಡಿದೆ. ಇದನ್ನೂ ಓದಿ: ಡಿಕೆಶಿಗೆ ಮತ್ತೆ ಶಾಕ್ – ಸಿಬಿಐ ಬೆನ್ನಲ್ಲೇ ಫೀಲ್ಡಿಗೆ ಇಳಿದ ಇಡಿ

    karnataka highcourt

    ಸಿಬಿಐ ಪರ ವಕೀಲರು ತನಿಖಾ ಪ್ರಗತಿ ವರದಿ ಸಲ್ಲಿಸಿದ ಬಳಿಕ ಮಾರ್ಚ್ 3ಕ್ಕೆ ವಿಚಾರಣೆ ಮುಂದೂಡಿತು. ಈ ವೇಳೆ ಮಧ್ಯಂತರ ತಡೆ ಆದೇಶದಲ್ಲಿ ಮಾರ್ಪಾಡು ಮಾಡುವಂತೆ ಸಿಬಿಐ ಮನವಿ ಮಾಡಿತು. ಅದಕ್ಕೆ ಅನುಮತಿ ಕೊಡದ ಹೈಕೋರ್ಟ್ (Karnataka High Court) ಮುಂದಿನ ವಿಚಾರಣೆ (ಮಾ.3) ತನಕ ಯಥಾಸ್ಥಿತಿಯಲ್ಲಿ ಮುಂದುವರಿಯುವಂತೆ ಸೂಚಿಸಿತು. ಇದನ್ನೂ ಓದಿ: ಡಿಕೆಶಿ ಮನವಿ ಪುರಸ್ಕಾರ – ಸಿಬಿಐ ವಿಚಾರಣೆಯಿಂದ ವಿನಾಯಿತಿ

    CBI 1

    ಈ ಹಿಂದೆ ಡಿಕೆಶಿ `ತಾನೊಬ್ಬ ಕೃಷಿಕ, ಕೃಷಿಯಿಂದಲೇ ನನಗೆ ಆದಾಯ ಬರುತ್ತಿದೆ’ ಎಂಬ ಹೇಳಿಕೆ ನೀಡಿದ ಬಳಿಕ ಆಸ್ತಿಯನ್ನು ಸಿಬಿಐ ಮೌಲ್ಯಮಾಪನ ಮಾಡಿತ್ತು. ಡಿಕೆಶಿಯ ಆದಾಯದ ಮೂಲವನ್ನು ಬೆನ್ನತ್ತಿದ್ದ ಸಿಬಿಐ, ಯಾವ ಬೆಳೆ ಬೆಳೆಯುತ್ತಾರೆ? ತೋಟದಿಂದ ಎಷ್ಟು ವರ್ಷದಿಂದ ಫಲ ಬರುತ್ತಿದೆ? ಎಷ್ಟು ಲಾಭ ಬರುತ್ತಿದೆ? ಎಷ್ಟು ವರ್ಷದಿಂದ ವಾಣಿಜ್ಯ ಬೆಳೆ ಬೆಳೆಯುತ್ತಿದ್ದಾರೆ? ಜಮೀನು ಖರೀದಿಸಿದ್ದು ಯಾವಾಗ ಎಂಬ ಬಗ್ಗೆ ದಾಖಲೆಗಳನ್ನು ವಶಕ್ಕೆ ಪಡೆದಿತ್ತು. ಅಷ್ಟೇ ಅಲ್ಲದೇ ಕೃಷಿ ಭೂಮಿಗೆ ಸಂಬಂಧಿಸಿದ ಕಳೆದ 10 ವರ್ಷದ ಪಹಣಿಯನ್ನು ಪಡೆಯಲಾಗಿತ್ತು.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದು ಪಡಿಸಿದ ಹೈಕೋರ್ಟ್

    ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದು ಪಡಿಸಿದ ಹೈಕೋರ್ಟ್

    ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ (Primary School Teachers) ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದು ಮಾಡಿ ಹೈಕೋರ್ಟ್ (Karnataka High Court) ಏಕಸದಸ್ಯ ಪೀಠ ಮಹತ್ವದ ಆದೇಶ ನೀಡಿದೆ.

    ನೇಮಕಾತಿ (Selection) ಮಾಡುವಾಗ ಕೆಲವೊಂದು ಕಾನೂನು ಬಾಹಿರ ಚಟುವಟಿಕೆಗಳನ್ನು ತೆಗೆದುಕೊಂಡಿದ್ದಾರೆ ಎಂದು ನೂರಾರು ಅಭ್ಯರ್ಥಿಗಳು ರಿಟ್ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ನ್ಯಾ.ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ಪತಿಯ ಜಾತಿ, ಆದಾಯ ಪ್ರಮಾಣಪತ್ರ ಪರಿಗಣನೆ ಮಾಡಲಾಗಿದೆ. ತಂದೆಯ ಜಾತಿ, ಆದಾಯ ಪ್ರಮಾಣಪತ್ರ ಪರಿಗಣಿಸಬೇಕು ಅದನ್ನು ಪರಿಪಾಲನೆ ಮಾಡಿಲ್ಲ. ಶಿಕ್ಷಣ ಇಲಾಖೆಯ ನಿಯಮ ಕಾನೂನುಬಾಹಿರವೆಂದು ಅಭ್ಯರ್ಥಿಗಳ ಪರ ಹಿರಿಯ ವಕೀಲ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದರು. ಇದನ್ನೂ ಓದಿ: ಸರ್ಜಾಪುರ ಸುಲಿಗೆ ಪ್ರಕರಣದ ಮತ್ತೊಂದು ವೀಡಿಯೋ ಬಹಿರಂಗ – ಡಿಕ್ಕಿ ಹೊಡೆದು ಬಾನೆಟ್ ಏರಿದ ಕಿಡಿಗೇಡಿ

    ಸರ್ಕಾರದ ಕ್ರಮ ಸರಿಯಾಗಿಲ್ಲವೆಂದು ಶಿಕ್ಷಣ ಇಲಾಖೆಯ ಆಯ್ಕೆಪಟ್ಟಿ ರದ್ದುಪಡಿಸಿ ಹೈಕೋರ್ಟ್ ಮಹತ್ವದ ಆದೇಶ ನೀಡಿದ್ದು, ಅಭ್ಯರ್ಥಿ ತಂದೆಯ ಜಾತಿ, ಆದಾಯ ಪ್ರಮಾಣಪತ್ರ ಪರಿಗಣಿಸಿ ಹೊಸದಾಗಿ ಆಯ್ಕೆ ಪಟ್ಟಿ ಪ್ರಕಟಿಸಲು ಶಿಕ್ಷಣ ಇಲಾಖೆಗೆ ಸೂಚನೆ ನೀಡಿದೆ. ಇದನ್ನೂ ಓದಿ: ಮುರುಘಾ ಶ್ರೀ ವಿರುದ್ಧ ಷಡ್ಯಂತ್ರ ಪ್ರಕರಣ – ಹೈಕೋರ್ಟ್ ಎಂಟ್ರಿ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮೆಟ್ರೋ ಪಿಲ್ಲರ್‌ ಕುಸಿದು ತಾಯಿ, ಮಗು ಸಾವು ಕೇಸ್ – ಹೈಕೋರ್ಟ್‌ನಿಂದ ಸ್ವಯಂಪ್ರೇರಿತ ಪ್ರಕರಣ ದಾಖಲು

    ಮೆಟ್ರೋ ಪಿಲ್ಲರ್‌ ಕುಸಿದು ತಾಯಿ, ಮಗು ಸಾವು ಕೇಸ್ – ಹೈಕೋರ್ಟ್‌ನಿಂದ ಸ್ವಯಂಪ್ರೇರಿತ ಪ್ರಕರಣ ದಾಖಲು

    ಬೆಂಗಳೂರು: ಮೆಟ್ರೋ ಪಿಲ್ಲರ್‌ ಕುಸಿದು (Bengaluru Metro Pillar Collapse) ತಾಯಿ, ಮಗು ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ (Karnataka High Court) ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ಆ ಮೂಲಕ ರಾಜ್ಯ ಸರ್ಕಾರ, ಬಿಎಂಆರ್‌ಸಿಎಲ್‌ಗೆ (BMRCL) ಕೋರ್ಟ್‌ ಮಾಸ್ಟರ್‌ ಸ್ಟ್ರೋಕ್‌ ಕೊಟ್ಟಿದೆ.

    ಮಾಧ್ಯಮಗಳ ಸುದ್ದಿ ಆಧರಿಸಿ ಹೈಕೋರ್ಟ್‌ ಸ್ವಯಂಪ್ರೇರಿತ ಕೇಸ್‌ ದಾಖಲಿಸಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ಯಾವೆಲ್ಲಾ ಮುಂಜಾಗ್ರತೆ ಕ್ರಮ ಕೈಗೊಳ್ಳಲಾಗಿದೆ? ಮುಂಜಾಗ್ರತಾ ಕ್ರಮದ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆಯೇ ಎಂಬ ಬಗ್ಗೆ ರಿಟ್‌ ಅರ್ಜಿ ಸಲ್ಲಿಸಲು ರಿಜಿಸ್ಟರ್‌ ಜನರಲ್‌ಗೆ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಮೆಟ್ರೋ ದುರಂತ: ತನಿಖೆ ನಡೆಸಿ ವರದಿ ಸಲ್ಲಿಸಿಲು ಐಐಎಸ್‍ಸಿಗೆ ಮನವಿ – ಮತ್ತಷ್ಟು ಅಧಿಕಾರಿಗಳ ತಲೆದಂಡ ಸಾಧ್ಯತೆ

    karnataka highcourt

    ಘಟನೆಯೇನು?: ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿದು ತಾಯಿ, ಮಗು ಸಾವನ್ನಪ್ಪಿದ ದಾರುಣ ಘಟನೆ ಬೆಂಗಳೂರಿನ (Bengaluru) ನಾಗವಾರ ರಿಂಗ್ ರಸ್ತೆಯ ಹೆಚ್‍ಬಿಆರ್ ಲೇಔಟ್‍ನಲ್ಲಿ ನಡೆದಿತ್ತು. ಬೆಳಗ್ಗೆ 10:30ರ ಸುಮಾರಿನಲ್ಲಿ ಗದಗ ಮೂಲದ ಸಿವಿಲ್ ಎಂಜಿನಿಯರ್ ಲೋಹಿತ್, ಪತ್ನಿ ಮತ್ತು ಇಬ್ಬರು ಅವಳಿ ಮಕ್ಕಳ ಸಮೇತ ಮನೆಯಿಂದ ಹೊರಟಿದ್ದರು. ಪತ್ನಿಯನ್ನು ಕೆಲಸಕ್ಕೆ, ಇಬ್ಬರು ಮಕ್ಕಳನ್ನು ಡೇ ಕೇರ್‌ನಲ್ಲಿ ಬಿಡಲು ಮಾನ್ಯತಾ ಟೆಕ್‍ಪಾರ್ಕ್ ಕಡೆ ಲೋಹಿತ್ ತೆರಳುತ್ತಿದ್ದಾಗ ಹೆಣ್ಣೂರು ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ದಿಢೀರ್ ಎಂದು ಕುಸಿದಿತ್ತು.

    ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಬಿಎಂಆರ್‌ಸಿಎಲ್‌ನಿಂದ 20 ಲಕ್ಷ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 10 ಲಕ್ಷ ರೂ. ಪರಿಹಾರ ಘೋಷಿಸಿದರು. ಅಲ್ಲದೇ ಮೆಟ್ರೋ ಅಧಿಕಾರಿಗಳ ನಿರ್ಲಕ್ಷ್ಯದಿಂದ ನಿರ್ಮಾಣ ಹಂತದಲ್ಲಿರುವ ಮೆಟ್ರೋ ಪಿಲ್ಲರ್ ಕುಸಿದಿದೆ ಎಂಬ ಆರೋಪ ಕೇಳಿಬಂದಿದ್ದರಿಂದ ಮೂವರು ಎಂಜಿನಿಯರ್‌ಗಳನ್ನು ಅಮಾನತು ಮಾಡಲಾಯಿತು. ಜೊತೆಗೆ ಗುತ್ತಿಗೆದಾರರ ವಿರುದ್ಧ ಕ್ರಿಮಿನಲ್‌ ದಾಖಲಿಸುವಂತೆ ಸಿಎಂ ಸೂಚನೆ ನೀಡಿದ್ದರು. ಇದನ್ನೂ ಓದಿ: ಡೆಡ್ಲಿ ಮೆಟ್ರೋಗೆ ಇಬ್ಬರು ಬಲಿ – ಪಿಲ್ಲರ್ ದುರಂತಕ್ಕೆ ಕಾರಣಗಳೇನು?

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • PFI ಬ್ಯಾನ್ – ಕೇಂದ್ರದ ಆದೇಶ ಪ್ರಶ್ನಿಸಿದ್ದ ಅರ್ಜಿ ವಜಾ

    PFI ಬ್ಯಾನ್ – ಕೇಂದ್ರದ ಆದೇಶ ಪ್ರಶ್ನಿಸಿದ್ದ ಅರ್ಜಿ ವಜಾ

    ಬೆಂಗಳೂರು: ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (UAPA) ಅಡಿಯಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಸಂಘಟನೆಯ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ (Karnataka HighCourt) ವಜಾಗೊಳಿಸಿದೆ.

    ಅರ್ಜಿವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದ್ದ ಹೈಕೋರ್ಟ್ ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠ ಇಂದು ತೀರ್ಪು ಪ್ರಕಟಿಸಿದೆ. ಇದನ್ನೂ ಓದಿ: ಪಿಎಫ್ಐ ಬ್ಯಾನ್‌ – ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

    ಕರ್ನಾಟಕದ ಪಿಎಫ್‌ಐ (PFI) ಅಧ್ಯಕ್ಷ ನಾಸಿರ್ ಅಲಿ ನಿಷೇಧವನ್ನು ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಸಿದ್ದರು. ಕೇಂದ್ರ ಸರ್ಕಾರ (Central Government) ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಿದೆ. ಕಾನೂನುಬಾಹಿರ ಸಂಘಟನೆ ಎನ್ನಲು ಕಾರಣ ನೀಡಿಲ್ಲ. ತಕ್ಷಣ ನಿಷೇಧಕ್ಕೆ ಕಾರಣ ನೀಡಬೇಕಿತ್ತು. ವಾದಮಂಡನೆಗೆ ಕಾಲಾವಕಾಶ ನೀಡದೇ ಬ್ಯಾನ್ ಮಾಡಲಾಗಿದೆ. ಯುಎಪಿಎ ಕಾಯ್ದೆಗೆ ವಿರುದ್ಧವಾಗಿ ಆದೇಶ ಹೊರಡಿಸಲಾಗಿದೆ ಎಂದು ಅರ್ಜಿದಾರರ ಪರ ಹಿರಿಯ ವಕೀಲ ಜಯಕುಮಾರ್ ಎಸ್ ಪಾಟೀಲ್ ವಾದ ಮಂಡಿಸಿದ್ದರು. ಇದನ್ನೂ ಓದಿ: ಪಾಕಿಸ್ತಾನದಲ್ಲಿ ಆತ್ಮಹತ್ಯಾ ಸ್ಫೋಟ – ಪೊಲೀಸ್, ಮಗು ಸಾವು, 24 ಮಂದಿಗೆ ಗಾಯ

    ಕೇಂದ್ರ ಸರ್ಕಾರದ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದ್ದರು. ಪಿಎಫ್‌ಐ ಸಂಘಟನೆಯಿಂದ ದೇಶವಿರೋಧಿ ಚಟುವಟಿಕೆ ನಡೆಯುತ್ತಿದ್ದು, ದೇಶದಲ್ಲಿ ಹಿಂಸಾತ್ಮಕ ಕೃತ್ಯಗಳನ್ನು ಸಂಘಟನೆಯ ಕಾರ್ಯಕರ್ತರು ಎಸಗುತ್ತಿದ್ದಾರೆ. ಸಂಘಟನೆಯ ಸದಸ್ಯರಿಂದ ಭೀತಿಯ ವಾತಾವರಣ ಸೃಷ್ಟಿಯಾಗಿದೆ. ಹೀಗಾಗಿ ಸಕಾರಣವಾಗಿಯೇ ಪಿಎಫ್‌ಐ ನಿರ್ಬಂಧಿಸಲಾಗಿದೆ ಎಂದು ಕೇಂದ್ರದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದರು.

    ಹೈಕೋರ್ಟ್ ನ.28ಕ್ಕೆ ವಿಚಾರಣೆಯನ್ನು ಪೂರ್ಣಗೊಳಿಸಿ ತೀರ್ಪನ್ನು ಕಾಯ್ದಿರಿಸಿತ್ತು.

    Live Tv
    [brid partner=56869869 player=32851 video=960834 autoplay=true]

  • BBMP ಕಾಮಗಾರಿಗಳ ಬಗ್ಗೆ ನಂಬಿಕೆಯಿಲ್ಲ – ರಸ್ತೆ ಗುಂಡಿಗಳ ವಿಚಾರವಾಗಿ ಹೈಕೋರ್ಟ್ ತರಾಟೆ

    BBMP ಕಾಮಗಾರಿಗಳ ಬಗ್ಗೆ ನಂಬಿಕೆಯಿಲ್ಲ – ರಸ್ತೆ ಗುಂಡಿಗಳ ವಿಚಾರವಾಗಿ ಹೈಕೋರ್ಟ್ ತರಾಟೆ

    ಬೆಂಗಳೂರು: ರಸ್ತೆ ಗುಂಡಿಗಳ (Potholes) ವಿಚಾರವಾಗಿ ಬಿಬಿಎಂಪಿಯನ್ನು (BBMP) ಮತ್ತೊಮ್ಮೆ ಹೈಕೋರ್ಟ್ (High Court) ತರಾಟೆಗೆ ತೆಗೆದುಕೊಂಡಿದೆ.

    ಕೋರ್ಟ್ ಆದೇಶಗಳು ಕೇವಲ ಆದೇಶಕ್ಕೆ ಮಾತ್ರ ಸೀಮಿತ ಆಗಿವೆ. ಆರು ವರ್ಷಗಳಿಂದ ಬೆಂಗಳೂರಿನ (Bengaluru) ರಸ್ತೆಗಳು ದುಸ್ಥಿತಿಯಲ್ಲಿಯೇ ಇವೆ. ರಸ್ತೆ ಗುಂಡಿಗಳಿಗೆ ಬಲಿಯಾಗುವವರ ಸಂಖ್ಯೆ ಹೆಚ್ಚಿದೆ. ಆದರೂ ಬಿಬಿಎಂಪಿ (BBMP) ತಲೆಕೆಡಿಸಿಕೊಳ್ಳುತ್ತಿಲ್ಲ. ಕಳಪೆ ಕಾಮಗಾರಿಗಳು ನಡೆಯುತ್ತಿವೆ. ಬಿಬಿಎಂಪಿ ಅಧಿಕಾರಿಗಳನ್ನು ನಂಬಲು ನಾವು ಸಿದ್ಧ ಇಲ್ಲ. 3ನೇ ಸಂಸ್ಥೆಯಿಂದ ಕಾಮಗಾರಿ ದೃಢೀಕರಣದ ಅಗತ್ಯವಿದೆ. ಗುಣಮಟ್ಟ ಪರಿಶೀಲನೆಗೆ ಒಂದು ವಾರದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮುಖ್ಯ ಎಂಜಿನಿಯರ್, ಹಿರಿಯ ಎಂಜಿನಿಯರ್‌ಗಳನ್ನು ನಿಯೋಜನೆ ಮಾಡಬೇಕು ಎಂದು ಬಿಬಿಎಂಪಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ. ಇದನ್ನೂ ಓದಿ: ಬಾಲಕೃಷ್ಣ ಕಾರಿನ ಮೇಲೆ ಕಲ್ಲು ತೂರಾಟ – ಅಶ್ವಥ್ ನಾರಾಯಣ ಸಂಬಂಧಿ ಕಾರಣ ಎಂದ ಮಾಜಿ ಶಾಸಕ

    BBMP

    ಎನ್‍ಹೆಚ್‍ಎಐ (NHAI) ಎಂಜಿನಿಯರ್‌ಗಳಿಗೆ ಬಿಬಿಎಂಪಿ ಎಲ್ಲಾ ರೀತಿಯ ಸಹಕಾರ ಕೊಡಬೇಕು. ಗುಣಮಟ್ಟ ಪರಿಶೀಲನಾ ವರದಿಯನ್ನು ಹೈಕೋರ್ಟ್‍ಗೆ ಎನ್‍ಹೆಚ್‍ಎಐ ನೀಡಬೇಕು. ಬಿಬಿಎಂಪಿ ಅಧಿಕಾರಿಗಳ ಕರ್ತವ್ಯ ಲೋಪದ ಬಗ್ಗೆ ವರದಿ ಮಾಡಬೇಕು. ಸಲಹೆಗಳನ್ನು ಕೂಡ ವರದಿ ರೂಪದಲ್ಲಿ ನೀಡಬಹುದು ಎಂದು ಎನ್‍ಹೆಚ್‍ಎಐಗೆ ಹೈಕೋರ್ಟ್ ತಿಳಿಸಿದೆ. ಮುಂದಿನ ವಿಚಾರಣೆ ಡಿಸೆಂಬರ್ 7ಕ್ಕೆ ನಡೆಯಲಿದೆ. ಈ ಮಧ್ಯೆ, ಬಿಬಿಎಂಪಿ ಮುಖ್ಯ ಆಯುಕ್ತರು ರಸ್ತೆ ಗುಂಡಿ ಮುಚ್ಚಲು ನೀಡಿದ್ದ ಗಡುವನ್ನು ನವೆಂಬರ್ 5 ರಿಂದ ನವೆಂಬರ್ 10ಕ್ಕೆ ವಿಸ್ತರಣೆ ಮಾಡಿದ್ದಾರೆ. ಇನ್ನೂ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಕಾರಣ, ಹೂಡಿಕೆದಾರರಿಗೆ ಗುಂಡಿ ದರ್ಶನ ತಪ್ಪಿಸಲು ಅರಮನೆ ಮೈದಾನದ ಸುತ್ತಮುತ್ತಲ ರಸ್ತೆಗಳಿಗೆ ರಾತ್ರೋರಾತ್ರಿ ಡಾಂಬರೀಕರಣದ ಭಾಗ್ಯ ಕರುಣಿಸಲಾಗಿದೆ. ಜಯಮಹಲ್ ರಸ್ತೆಗೆ ಡಾಂಬರು ಹಾಕಲಾಗಿದೆ. ಆದ್ರೆ, ಪಕ್ಕದ ರಸ್ತೆಗಳ ಗುಂಡಿಗಳನ್ನು ಹಾಗೆಯೇ ಬಿಡಲಾಗಿದೆ. ಇದನ್ನೂ ಓದಿ: ಗೆಹ್ಲೋಟ್‌ ಹೊಗಳಿದ ಮೋದಿ – ಲಘುವಾಗಿ ಪರಿಗಣಿಸಬಾರದು ಎಂದು ಎಚ್ಚರಿಸಿದ ಪೈಲಟ್‌

    Live Tv
    [brid partner=56869869 player=32851 video=960834 autoplay=true]

  • ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಬ್‌ ನಿಷೇಧ ಮುಂದುವರಿಕೆ – ಸಚಿವ ಬಿ.ಸಿ.ನಾಗೇಶ್

    ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಬ್‌ ನಿಷೇಧ ಮುಂದುವರಿಕೆ – ಸಚಿವ ಬಿ.ಸಿ.ನಾಗೇಶ್

    ಬೆಂಗಳೂರು: ರಾಜ್ಯದ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಬ್‌ (Hijab) ನಿಷೇಧ ಮುಂದುವರಿಯಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ (B.C.Nagesh) ತಿಳಿಸಿದ್ದಾರೆ.

    ಹಿಜಬ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ (Karnataka High Court) ಆದೇಶ ಕುರಿತು ಇಂದು ಸುಪ್ರೀಂ ಕೋರ್ಟ್‌ (Supreme Court) ದ್ವಿಸದಸ್ಯ ಪೀಠ ಭಿನ್ನ ತೀರ್ಪು ನೀಡಿತು. ಈ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ಸುಪ್ರೀಂ ಕೋರ್ಟ್‌ ತೀರ್ಪನ್ನು ನಾವು ಸ್ವಾಗತಿಸುತ್ತೇವೆ. ವಿಶ್ವದಾದ್ಯಂತ ಹಿಜಬ್‌, ಬುರ್ಕಾ ಧರಿಸುವುದನ್ನು ವಿರೋಧಿಸಿ ಮಹಿಳೆಯರು ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲಿ ನಾವು ನ್ಯಾಯಾಲಯದಿಂದ ಉತ್ತಮ ತೀರ್ಪು ನಿರೀಕ್ಷಿಸಿದ್ದೆವು. ಸುಪ್ರೀಂ ಕೋರ್ಟ್‌ನಿಂದ ಭಿನ್ನ ತೀರ್ಪು ಬಂದಿರುವ ಕಾರಣ, ಕರ್ನಾಟಕ ಹೈಕೋರ್ಟ್ ಆದೇಶವು ಯಥಾಸ್ಥಿತಿ ಮುಂದುವರಿಯಲಿದೆ. ಹೀಗಾಗಿ ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧವೂ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಹಿಜಬ್‌ ಕೇಸ್‌- ಸುಪ್ರೀಂನಿಂದ ಭಿನ್ನ ತೀರ್ಪು ಪ್ರಕಟ

    ಅವರು ಯಾವಾಗಲೂ ಈ ಸಮಾಜವನ್ನು ಒಡೆಯಲು ಬಯಸುತ್ತಾರೆ. ಸಮಾಜವನ್ನು ಒಡೆಯಲು ಹಿಜಬ್ ಬಳಸುತ್ತಿದ್ದಾರೆ ಎಂದು ಶಿಕ್ಷಣ ಸಂಸ್ಥೆಗಳಲ್ಲಿ ಹಿಜಬ್ ಧರಿಸುವುದನ್ನು ಬೆಂಬಲಿಸುವ ಸಂಘಟನೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಹಿಜಬ್‌ ವಿಚಾರವಾಗಿ ಕಾಂಗ್ರೆಸ್‌ ನಿಲುವು ಕುರಿತು ಪ್ರತಿಕ್ರಿಯಿಸಿ, ಕಾಂಗ್ರೆಸ್‌ ಅಭಿವೃದ್ಧಿ ವಿಚಾರಗಳನ್ನು ಮುಂದಿಟ್ಟುಕೊಂಡು ಎಂದಿಗೂ ಚುನಾವಣೆ ಎದುರಿಸಿಲ್ಲ. ಜನರ ಧಾರ್ಮಿಕ ಭಾವನೆಗಳನ್ನು ಕೇಂದ್ರವಾಗಿಟ್ಟುಕೊಂಡು ಚುನಾವಣೆಗೆ ಇಳಿಯುತ್ತದೆ ಎಂದು ಟೀಕಾಪ್ರಹಾರ ನಡೆಸಿದ್ದಾರೆ.‌ ಇದನ್ನೂ ಓದಿ: ಹಿಜಬ್‌ ಆಯ್ಕೆಯ ವಿಷಯ: ನ್ಯಾ.ಹೇಮಂತ್ ಗುಪ್ತಾ, ನ್ಯಾ. ಧುಲಿಯಾ ಆದೇಶದಲ್ಲಿ ಏನಿದೆ?

    Live Tv
    [brid partner=56869869 player=32851 video=960834 autoplay=true]