ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್ (Darshan), ಪವಿತ್ರಾಗೌಡ ಸೇರಿ ಇತರ ಆರೋಪಿಗಳಿಗೆ ಹೈಕೋರ್ಟ್ ನೀಡಿರುವ ಜಾಮೀನು ರದ್ದಾಗುತ್ತಾ ಅಥವಾ ಮುಂದುವರೆಯುತ್ತಾ ಎಂಬುದು ನಾಳೆ (ಜು.22) ತೀರ್ಮಾನವಾಗಲಿದೆ. ಸರ್ಕಾರದ ಪರ ವಿಚಾರಣೆ ಕೇಳಿರುವ ಸುಪ್ರಿಂ ಕೋರ್ಟ್ (Supreme Court) ನಾಳೆ ದರ್ಶನ್ ಸೇರಿ 7 ಆರೋಪಿಗಳ ಪರ ವಾದ ಆಲಿಸಲಿದೆ. ಇದನ್ನೂ ಓದಿ: ಬಿಕ್ಲು ಶಿವ ಕೊಲೆ ಕೇಸ್‌ಗೆ ಟ್ವಿಸ್ಟ್ – ಪ್ರಮುಖ ಆರೋಪಿಯಿಂದ ನಟಿ ರಚಿತಾ ರಾಮ್‌ಗೆ ಭರ್ಜರಿ ಗಿಫ್ಟ್
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್, ಪವಿತ್ರಾಗೌಡ (Pavithra Gowda) ಹಾಗೂ ಇತರೆ ಆರೋಪಿಗಳ ಜಾಮೀನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿ ವಿಚಾರಣೆಯು ಸುಪ್ರೀಂ ಕೋರ್ಟ್‌ನಲ್ಲಿ ಮಂಗಳವಾರ ಮುಂದುವರಿಯಲಿದೆ. ನ್ಯಾ.ಜೆ ಬಿ ಪಾರ್ದಿವಾಲಾ ನೇತೃತ್ವದ ದ್ವಿಸದಸ್ಯ ಪೀಠವು ವಿಚಾರಣೆ ಮುಂದುವರಿಸಲಿದೆ. ರಾಜ್ಯ ಸರ್ಕಾರ ಪರ ವಕೀಲರ ವಾದ ಆಲಿಸಿ, ದಾಖಲೆಗಳನ್ನು ಸ್ವೀಕರಿಸಿರುವ ಪೀಠ, ನಾಳೆ ಆರೋಪಿಗಳ ಪರ ವಕೀಲರ ವಾದ ಮಂಡನೆಯನ್ನು ಕೇಳಲಿದ್ದು, ಬಳಿಕ ಅಂತಿಮ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ. ಇದನ್ನೂ ಓದಿ: SBI ಬ್ಯಾಂಕ್‌ಗೆ 8 ಕೋಟಿ ವಂಚನೆ – 20 ವರ್ಷದಿಂದ ಸಿಗದವರು ಇಮೇಜ್ ಸರ್ಚ್ ಅನಾಲಿಟಿಕ್ಸ್ ಸಾಫ್ಟ್‌ವೇರ್‌ನಿಂದ ಸಿಬಿಐಗೆ ಲಾಕ್
ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ ಸರ್ಕಾರ, ಪೊಲೀಸ್ ಇಲಾಖೆ ಪರವಾಗಿ ಹಿರಿಯ ವಕೀಲ ಸಿದ್ಧಾರ್ಥ ಲೂಥ್ರಾ ವಾದ ಮಂಡಿಸಿದ್ದು, ನಟ ದರ್ಶನ್ ಪರವಾಗಿ ಹಿರಿಯ ನ್ಯಾಯವಾದಿ ಅಭಿಷೇಕ್ ಮನು ಸಿಂಘ್ವಿ ನಿಯೋಜಿಸಲಾಗಿತ್ತು. ಆದರೆ ಅಭಿಷೇಕ್ ಮನು ಸಿಂಘ್ವಿ ಸದ್ಯ ಕರ್ನಾಟಕದ ಹೈಕೋರ್ಟ್‌ನಲ್ಲಿ ಸಿದ್ದರಾಮಯ್ಯ ಹಾಗೂ ಕರ್ನಾಟಕ ಸರ್ಕಾರದ ಪರ ವಾದ ಮಂಡನೆ ಮಾಡುತ್ತಿದ್ದಾರೆ. ಅವರೇ ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ ಸರ್ಕಾರ ವಿರುದ್ಧ ವಾದ ಮಾಡುವುದು ಸೂಕ್ತವಲ್ಲ ಎಂಬ ಕಾರಣಕ್ಕೆ ದರ್ಶನ್ ಈಗ ಹಿರಿಯ ವಕೀಲ ಕಪಿಲ್ ಸಿಬಲ್ ಅವರನ್ನು ನೇಮಿಸಿಕೊಂಡಿದ್ದು ಮಂಗಳವಾರ ಸಿಬಲ್ ವಾದ ಮಂಡಿಸಲಿದ್ದಾರೆ. ಇದಾದ ಬಳಿಕ ಉಳಿದ ಆರೋಪಿಗಳ ಪರ ವಕೀಲರು ವಾದ ಮಂಡಿಸಲಿದ್ದಾರೆ.
ಇನ್ನು ಕಳೆದ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಹೈಕೋರ್ಟ್ ತೀರ್ಪಿನ ಬಗ್ಗೆ ಬೇಸರ ವ್ಯಕ್ತಪಡಿಸಿತ್ತು. ರಾಜ್ಯ ಸರ್ಕಾರ ಸಲ್ಲಿಸಿರುವ ದಾಖಲೆಗಳನ್ನು ಪರಿಶೀಲಿಸಿದ್ದೇವೆ. ಹೈಕೋರ್ಟ್ ಆದೇಶದಲ್ಲಿ ಚಡಪಡಿಕೆ ಎದ್ದು ಕಾಣುತ್ತಿದೆ. ಜಾಮೀನು ನೀಡಲು ಹೇಗಾದ್ರೂ ಒಂದು ಅಂಶ ಸಿಗಲಿ ಎನ್ನುವ ಚಡಪಡಿಕೆ ಕಾಣುತ್ತಿದೆ, ಹೈಕೋರ್ಟ್ ಸೂಕ್ತವಾಗಿ ತನ್ನ ವಿವೇಚನೆ ಬಳಸಿಲ್ಲ ಎಂದು ನ್ಯಾ.ಪಾರ್ದಿವಾಲ ಅಭಿಪ್ರಾಯಪಟ್ಟಿದ್ದರು.
ಮಂಗಳವಾರ ವಾದ ಆಲಿಸಿದ ಬಳಿಕ ಸುಪ್ರೀಂ ಕೋರ್ಟ್ ನಾಳೆಯೇ ಆದೇಶ ನೀಡುವ ಸಾಧ್ಯತೆ ಇದೆ. ಹೀಗಾಗೀ ಕೊಲೆ ಕೇಸ್‌ನ ಆರೋಪಿ ಎ1 ಪವಿತ್ರಾ, ಎ2 ದರ್ಶನ್ ಮತ್ತೆ ಜೈಲಿಗೆ ಹೋಗ್ತಾರಾ ಅಥವಾ ಸೇಫ್ ಆಗ್ತಾರಾ ಅಂತ ಗೊತ್ತಾಗಲಿದೆ.
ಬೆಂಗಳೂರು: ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ (Shalini Rajneesh) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪ ಪ್ರಕರಣದಲ್ಲಿ ಬಿಜೆಪಿ ಎಂಎಲ್‌ಸಿ ರವಿಕುಮಾರ್ (BJP MLC Ravikumar) ಅವರಿಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್ ಸಿಕ್ಕಿದೆ.
ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕ್ರೈಂ ನಂ.66/2025 ಸಂಖ್ಯೆಯ ಎಫ್‌ಐಆರ್ ರದ್ದು ಮಾಡುವಂತೆ ರವಿಕುಮಾರ್ ಸಲ್ಲಿಸಿದ್ದ ಅರ್ಜಿ ನ್ಯಾ.ಎಸ್.ಆರ್ ಕೃಷ್ಣಕುಮಾರ್ ಪೀಠದಲ್ಲಿ ವಿಚಾರಣೆ ನಡೆಯಿತು. ರವಿಕುಮಾರ್ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿ, ಎಂಎಲ್‌ಸಿ ರವಿಕುಮಾರ್ ಅವರು ವಿಧಾನಸೌಧ ಬಳಿ ಪ್ರತಿಭಟನೆ ವೇಳೆ ಮಾತನಾಡಿದ್ದಾರೆ ಎನ್ನಲಾಗಿದೆ. ಟಿವಿಯಲ್ಲಿ ಮಾತನಾಡಿದ್ದಾರೆ ಎಂದು ದೂರುದಾರರು ವಿಧಾನಸೌಧ ಠಾಣೆಗೆ ದೂರು ನೀಡಿದ್ದಾರೆ. ಮುಖ್ಯ ಕಾರ್ಯದರ್ಶಿ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ ಎಂದು ರವಿಕುಮಾರ್ ಮೆಚ್ಚುಗೆ ಸೂಚಿಸಿದ್ದಾರೆ. ಇದು ರಾಜಕೀಯ ದುರುದ್ದೇಶದ ಪ್ರಕರಣವಾಗಿದ್ದು, ಪೀಠಕ್ಕೆ ರವಿಕುಮಾರ್ ಏನು ಮಾತನಾಡಿದ್ದಾರೆ ಎಂಬುದರ ವಿಡಿಯೊವನ್ನು ಟ್ಯಾಬ್ ಮೂಲಕ ತೋರಿಸಿದ್ರು. ಇದನ್ನೂ ಓದಿ: ದೆಹಲಿ ಸರ್ಕಾರದಿಂದ ಯೂಟರ್ನ್ – ಅವಧಿ ಮೀರಿದ ವಾಹನಗಳಿಗೆ ಹೇರಿದ್ದ ಇಂಧನ ನಿಷೇಧ ಆದೇಶ ವಾಪಸ್
ಎಸ್‌ಪಿಪಿ ಬೆಳ್ಳಿಯಪ್ಪ ಪ್ರತಿವಾದ ಮಂಡಿಸಿ ರವಿಕುಮರ್ 2ನೇ ಬಾರಿ ಹೀಗೆ ಮಾತನಾಡ್ತಿದ್ದಾರೆ. ಈ ಹಿಂದೆ ಮಹಿಳಾ ಜಿಲ್ಲಾಧಿಕಾರಿಯೊಬ್ಬರನ್ನ ಪಾಕಿಸ್ತಾನದ ಸಹೋದರಿ ಅಂದಿದ್ರು. ನಾವು ಇಲ್ಲಿ ಡಿಸೈಡ್ ಮಾಡೋದಕ್ಕೆ ಬರೋದಿಲ್ಲ, ತನಿಖೆ ಆಗಲಿ, ಎಫ್‌ಐಆರ್ ಆಗಿ 24 ಗಂಟೆ ಕಳೆದಿಲ್ಲ ಆಗಲೇ ಕೋರ್ಟ್‌ಗೆ ಬಂದಿದ್ದಾರೆ. ವಿಕ್ಟಿಮ್ ಮುಖ್ಯ ಕಾರ್ಯದರ್ಶಿ ಅವರ ಹೇಳಿಕೆ ದಾಖಲಿಸಬೇಕಿದೆ. ಮಾಧ್ಯಮಗಳ ಹೇಳಿಕೆಯನ್ನೂ ದಾಖಲಾಸಲಾಗುತ್ತೆ, ಇದೊಂದು ಏಳು ವರ್ಷಗಳವರೆಗಿನ ಸಜೆಯುಳ್ಳ ಕೇಸ್ ಆಗಿದ್ದು, ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿ ಇಲ್ಲಿ ರಕ್ಷಣೆ ಕೋರೋದು ಸರಿಯಿಲ್ಲ. ಐಎಎಸ್ ಅಧಿಕಾರಿಗಳು ಇವ್ರ ವಿರುದ್ಧ ಪ್ರತಿಭಟಿಸ್ತಿದ್ದಾರೆ ಅಂತ ವಾದ ಮಂಡಿಸಿದ್ರು.
ರಾಜಕಾರಣಿಗಳು ಬಳಸುವ ಭಾಷೆ ಕೆಳಮಟ್ಟಕ್ಕಿಳಿದಿದೆ ಅಂತ ಅಭಿಪ್ರಾಯ ಪಟ್ಟ ನ್ಯಾಯಾಧೀಶರು, ಜುಲೈ 8ರ ವರೆಗೆ ಬಂಧಿಸದಂತೆ, ತನಿಖೆಗೆ ಸಹಕಾರ ನೀಡುವಂತೆ ಆದೇಶ ನೀಡಿದ್ರು. ಇನ್ನು ಸಂಜೆ ವೇಳೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ್ ಭಟ್, ಎಂಎಲ್‌ಸಿ ರವಿಕುಮಾರ್‌ಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದಾರೆ. ಬಂಧನ ಭೀತಿಯಲ್ಲಿದ್ದ ರವಿಕುಮಾರ್‌ಗೆ ಎರಡೂ ಕೋರ್ಟ್ ಗಳ ಆದೇಶ ನಿರಾಳತೆ ತಂದಿದೆ. ಇದನ್ನೂ ಓದಿ: Custodial Death Case | ದೇಹದ ಮೇಲೆ 44 ಗಾಯದ ಗುರುತು, ಮೆದುಳಿನಲ್ಲಿ ರಕ್ತಸ್ರಾವ – ಮರಣೋತ್ತರ ಪರೀಕ್ಷಾ ವರದಿ ಔಟ್
‘ತಮಿಳು ಭಾಷೆಯಿಂದ ಕನ್ನಡ ಹುಟ್ಟಿದ್ದು’ ಎಂದು ಹೇಳಿಕೆ ನೀಡಿಲ್ಲದೇ ತಪ್ಪೇ ಮಾಡಿಲ್ಲ, ಕ್ಷಮೆಯೂ ಕೇಳಲ್ಲ ಎಂದು ಪಟ್ಟು ಹಿಡಿರೋ ನಟ ಕಮಲ್ ಹಾಸನ್‌ಗೆ (Kamal Haasan) ತಕ್ಕ ಪಾಠ ಕಲಿಸಲು ಕನ್ನಡಪರ ಸಂಘಟನೆ ಮುಂದಾಗಿದೆ. ಇದರಿಂದ ಜೂನ್ 5ರಂದು ರಿಲೀಸ್‌ಗೆ ಸಜ್ಜಾಗಿರುವ ‘ಥಗ್ ಲೈಫ್’ (Thug Life) ಚಿತ್ರದ ಪ್ರದರ್ಶನಕ್ಕೆ ಬ್ಯಾನ್ ಬಿಸಿ ತಟ್ಟಿದೆ. ಈ ನಡುವೆ ಚಿತ್ರಕ್ಕೆ ಅಡ್ಡಿಪಡಿದಂತೆ ನಟ ಕಮಲ್ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಹೌದು. ʻಥಗ್ ಲೈಫ್ʼ ಚಿತ್ರ ಪ್ರದರ್ಶನಕ್ಕೆ ಅವಕಾಶ ಮಾಡಿಕೊಡುವಂತೆ ತಮ್ಮ ಒಡೆತನದ ರಾಜಕಮಲ್ ಫಿಲ್ಮ್ ಇಂಟರ್ನ್ಯಾಷನಲ್ ಸಂಸ್ಥೆಯ ಸಿಇಒ ಮೂಲಕ ಕಮಲ್ ಹಾಸನ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಇದನ್ನೂ ಓದಿ: ಕಮಲ್ ಹಾಸನ್‌ಗೆ ಕನ್ನಡದ ಪುಸ್ತಕ ನೀಡಿದ ರಂಜನಿ ರಾಘವನ್
ಚಲನಚಿತ್ರ ಪ್ರದರ್ಶನಕ್ಕೆ ಸೂಕ್ತ ಭದ್ರತೆ ಒದಗಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು, ನಗರ ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡಬೇಕೆಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ. ಅರ್ಜಿ ಸಲ್ಲಿಕೆಯಾಗಿದ್ದು, ಮೇಲ್ವಿಚಾರಣೆ ಬಾಕಿಯಿದೆ. ಆದ್ರೆ ಈ ಬಗ್ಗೆ ಕಮಲ್ ಹಾಸನ್ ಎಲ್ಲಿಯೂ ಅಧಿಕೃತವಾಗಿ ಹೇಳಿಕೆ ನೀಡಿಲ್ಲ.
ಇನ್ನೂ ಕಮಲ್ ಹಾಸನ್ ವಿರುದ್ಧ ಬಿಜೆಪಿಗರು ಕಿಡಿಕಾರಿದ್ರೆ, ಡಿಸಿಎಂ ಡಿಕೆ ಮಾತ್ರ ಸೌಹಾರ್ದಯುತವಾಗಿ ಬಾಳ್ಬೇಕು ಅಂತಿದ್ದಾರೆ. ಈ ಮಧ್ಯೆ, ಫಿಲ್ಮ್ ಚೇಂಬರ್‌ಗೆ ಶಿವರಾಮೇಗೌಡ ಬಣದ ಹೋರಾಟಗಾರರು ಮುತ್ತಿಗೆ ಯತ್ನ ನಡೆಸಿದ್ರು. ಇದನ್ನೂ ಓದಿ: I’m Loving It – ಕೊನೆಗೂ ಬ್ರೇಕಪ್ ಬಗ್ಗೆ ಮೌನಮುರಿದ ಸಿಡ್ನಿ ಸ್ವೀನಿ!
ಬೆಂಗಳೂರು: ಭೋವಿ ನಿಗಮದಲ್ಲಿ (Bhovi Corporation) ನಡೆದ ಅಕ್ರಮದ ತನಿಖೆ ಎದುರಿಸಿದ್ದ ವಕೀಲೆ ಹಾಗೂ ಉದ್ಯಮಿ ಜೀವಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 90 ದಿನಗಳ ಕಾಲ ತನಿಖೆ ನಡೆಸಿದ್ದ ವಿಶೇಷ ತನಿಖಾ ತಂಡ (SIT) 2,300 ಪುಟಗಳ ಅಂತಿಮ ವರದಿಯನ್ನು ಹೈಕೋರ್ಟ್‌ಗೆ (Highcourt) ಸಲ್ಲಿಸಿದೆ.
ಕೋರ್ಟ್‌ಗೆ ಸಲ್ಲಿಸಿದ ಅಂತಿಮ ವರದಿಯಲ್ಲಿ ಮೃತ ಜೀವಾ (Lawyer Jeeva) ಡೆತ್ ನೋಟ್‌ನಲ್ಲಿದ್ದ ಬಹುತೇಕ ಆರೋಪಗಳು ಸಾಬೀತಾಗಿದೆ. ಅಲ್ಲದೇ ಡಿವೈಎಸ್‌ಪಿ ಕನಕಲಕ್ಷ್ಮಿ ಅವರು ಕಿರುಕುಳ ನೀಡಿರುವುದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ ಇದೆಲ್ಲರ ದಾಖಲೆಗಳನ್ನು ಕೋರ್ಟ್‌ಗೆ ಸಲ್ಲಿಸಲಾಗಿದೆ. ಅಲ್ಲದೇ ವಿಧಿವಿಜ್ಞಾನ ಪ್ರಯೋಗಾಲಯ ವರದಿಗಳು, ಮರಣೋತ್ತರ ಪರೀಕ್ಷಾ ವರದಿ, ಡೆತ್‌ನೋಟ್ ಫಾರೆನ್ಸಿಕ್ ರಿಪೋರ್ಟ್‌ಗಳನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸಲು ಮೂವರು ಐಪಿಎಸ್ ಅಧಿಕಾರಿಗಳನ್ನೊಳಗೊಂಡ ಎಸ್‌ಐಟಿ ತಂಡವನ್ನ ರಚಿಸಲಾಗಿತ್ತು. ಇದರಲ್ಲಿ ಸಿಸಿಬಿ ಡಿಸಿಪಿ ಹಕಾಯ್ ಅಕ್ಷಯ್ ಮಚೀಂದ್ರ, ಎಸ್ಪಿ ನಿಶಾ ಜೇಮ್ಸ್, ಸಿಬಿಐ ಎಸ್ಪಿ ವಿನಾಯಕ್ ವರ್ಮ ಅವರನ್ನೊಳಗೊಂಡ ಎಸ್‌ಐಟಿ ತಂಡ 90 ದಿನಗಳ ಕಾಲ ಸುದೀರ್ಘ ತನಿಖೆ ನಡೆಸಿತ್ತು. ಸದ್ಯ ತನಿಖೆ ಪೂರ್ಣಗೊಳಿಸಿರುವ ತಂಡ ಹೈಕೋರ್ಟ್‌ಗೆ ಅಂತಿಮ ವರದಿ ಸಲ್ಲಿಸಿದೆ.
ಏನಿದು ಪ್ರಕರಣ?
ಭೋವಿ ನಿಗಮ ಅಕ್ರಮ ಸಂಬಂಧ ಜೀವಾರನ್ನು ಸಿಐಡಿ ವಿಚಾರಣೆಗೆ ಒಳಪಡಿಸಿತ್ತು. ಆದರೆ ಕಿರುಕುಳದ ಆರೋಪ ಮಾಡಿ ಜೀವಾ ಆತ್ಮಹತ್ಯೆ ಮಾಡಿಕೊಂಡಿದ್ದರು. ಭೋವಿ ನಿಗಮದಲ್ಲಿ ಒಟ್ಟು 34 ಕೋಟಿ ರೂ. ಅಕ್ರಮ ಹಣ ವರ್ಗಾವಣೆಯಾಗಿದೆ. ಇದರಲ್ಲಿ ಜೀವಾ ಮಾಲೀಕತ್ವದ ಸಂಸ್ಥೆ ಅನ್ನಿಕಾ ಎಂಟರ್‌ಪ್ರೆಸಸ್‌ಗೆ 7.16 ಕೋಟಿ ರೂ., ಅವರ ಸಹೋದರಿ ಹೆಸರಲ್ಲಿರುವ ಹರ್ನಿತಾ ಕ್ರಿಯೇಷನ್ಸ್‌ಗೆ 3.79 ಕೋಟಿ ರೂ. ವರ್ಗಾವಣೆ ಆಗಿತ್ತು. ಇನ್ನುಳಿದ ಹಣ ಮಾಜಿ ಎಂಡಿಗಳ ಆಪ್ತರ ಪಾಲುದಾರಿಕೆಯ ಸಂಸ್ಥೆಗಳಿಗೆ ವರ್ಗವಾಗಿತ್ತು. ಈ ಪ್ರಕರಣದ ಬಗ್ಗೆ ಆಂತರಿಕ ತನಿಖೆ ನಡೆಸಲು ಗೃಹ ಇಲಾಖೆ ಮುಂದಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನೋಟಿಸ್ ಕೊಡದೇ ತಮ್ಮನ್ನ ವಿಚಾರಣೆಗೆ ಕರೆದು ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಜೀವಾ ಆರೋಪಿಸಿ ಬನಶಂಕರಿಯಲ್ಲಿರುವ ತಮ್ಮ ಮನೆಯಲ್ಲಿ ಜೀವಾ ಆತ್ಮಹತ್ಯೆಗೆ ಶರಣಾಗಿದ್ದರು.
ಸಿಐಡಿ ಅಧಿಕಾರಿಗಳ ವಿರುದ್ಧ ಪ್ರಕರಣ:
ಜೀವಾ ಅವರ ಕಿರಿಯ ಸಹೋದರಿ ಸಂಗೀತಾ ಅವರು ನೀಡಿದ ದೂರಿನಲ್ಲಿ ವಿಚಾರಣೆ ನೆಪದಲ್ಲಿ ಸಿಐಡಿ ಅಧಿಕಾರಿಗಳು ತನ್ನ ಅಕ್ಕ ಜೀವಾಗೆ ಅವಮಾನ ಮಾಡಿದ್ದಾರೆ. ಅಂತೆಯೇ ಹಣಕ್ಕೆ ಬೇಡಿಕೆ ಇರಿಸಿದ್ದಾರೆ ಎಂದು ಆರೋಪಿಸಿದ್ದರು. ಈ ದೂರಿನಮೇರೆಗೆ ಬನಶಂಕರಿ ಠಾಣೆ ಪೊಲೀಸರು ಸಿಐಡಿ ಅಧಿಕಾರಿಗಳ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿ ತನಿಖೆ ಕೈಗೊಂಡಿದ್ದರು.
ಅಲ್ಲದೇ ಜೀವಾ ಆತ್ಮಹತ್ಯೆಗೂ ಮುನ್ನ ಮಹಿಳಾ ಉದ್ಯಮಿ ಜೀವಾ 13 ಪುಟಗಳ ಮರಣಪತ್ರ ಬರೆದಿದ್ದರು. ಅದರಲ್ಲಿ ಭೋವಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಸಂಬಂಧ ಸಿಐಡಿ ಅಧಿಕಾರಿಗಳ ವಿಚಾರಣೆ ವಿಚಾರ ಪ್ರಸ್ತಾಪಿಸಿದ್ದರು. ಸಿಐಡಿ ವಿಚಾರಣೆಯಿಂದ ನನಗೆ ಅವಮಾನವಾಗಿದ್ದು, ಮಾನಸಿಕವಾಗಿ ನೊಂದಿದ್ದೇನೆ. ಎಂದು ಉಲ್ಲೇಖಿಸಿದ್ದರು. ಅಂತೆಯೆ ನನಗೆ ಅವಿವಾಹಿತ ತಂಗಿ ಇರುವುದರಿಂದ ನನ್ನ ಆತ್ಮಹತ್ಯೆ ಸುದ್ದಿಗೆ ಹೆಚ್ಚು ಪ್ರಚಾರ ನೀಡದಂತೆಯೂ ಜೀವಾ ಮರಣಪತ್ರದಲ್ಲಿ ಮನವಿ ಮಾಡಿದ್ದರು ಎಂದು ಅಧಿಕಾರಿ ಮೂಲಗಳಿಂದ ತಿಳಿದುಬಂದಿತ್ತು.
ನವದೆಹಲಿ: ಚಿತ್ರದುರ್ಗದ (Chitradurga) ರೇಣುಕಾಸ್ವಾಮಿ ಕೊಲೆ (Renukaswamy Case) ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ 7 ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ (Supreme Court) ಸಲ್ಲಿಸಿದ್ದ ಅರ್ಜಿ ವಿಚಾರಣೆ ನಾಳೆ (ಏ.2) ನಡೆಯಲಿದೆ.
ಜಾಮೀನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ಮಾ.18ಕ್ಕೆ ನಡೆಯಬೇಕಿತ್ತು. ವಿಚಾರಣೆಗೆ ಪಟ್ಟಿಯಾಗದ ಹಿನ್ನೆಲೆ ದರ್ಶನ್ ಪ್ರಕರಣದಲ್ಲಿನ ರಾಜ್ಯದ ವಿಶೇಷ ವಕೀಲ ಅನಿಲ್ ನಿಶಾನಿ ಅರ್ಜಿ ವಿಚಾರಣೆ ನಡೆಸುವಂತೆ ಪ್ರಸ್ತಾಪಿಸಿದ್ದರು. ಇದಕ್ಕೆ ಉತ್ತರಿಸಿದ ಕೋರ್ಟ್ ಏ.2 ರಂದು ವಿಚಾರಣೆ ನಡೆಸಲಾಗುವುದು ಎಂದು ಹೇಳಿತ್ತು.
ಮಾ.18ಕ್ಕೂ ಮುನ್ನ ನಡೆದ ವಿಚಾರಣೆಯಲ್ಲಿ ಅರ್ಜಿ ವಿಚಾರಣೆಗೆ ಒಪ್ಪಿಕೊಂಡಿದ್ದ ಸುಪ್ರೀಂಕೋರ್ಟ್ ನಟ ದರ್ಶನ್ ಸೇರಿದಂತೆ ಇತರೆ ಆರೋಪಿಗಳಿಗೆ ನೋಟಿಸ್ ಜಾರಿ ಮಾಡಿತ್ತು. ಹೈಕೋರ್ಟ್‌ನಲ್ಲಿ ಗೆಲುವು ಪಡೆದಂತೆ ಸುಪ್ರೀಂಕೋರ್ಟ್‌ನಲ್ಲಿಯೂ ಗೆಲುವು ಪಡೆಯಲು ಖ್ಯಾತ ಹಿರಿಯ ವಕೀಲ ಕಪಿಲ್ ಸಿಬಲ್ ಅವರನ್ನು ದರ್ಶನ್ ಕುಟುಂಬದವರು ನೇಮಿಸಿಕೊಂಡಿದ್ದಾರೆ ಹಾಗೂ ಹೈಕೋರ್ಟ್‌ನಲ್ಲಿ ನಡೆದ ವಾದ ಪ್ರತಿವಾದದ ಎಲ್ಲ ದಾಖಲೆ ನೀಡಲಾಗಿದೆ ಎನ್ನಲಾಗಿತ್ತು. ಆದರೆ ಈ ಬಗ್ಗೆ ಸದ್ಯಕ್ಕೆ ಯಾವುದೇ ಬೆಳವಣಿಗೆ ಕಂಡು ಬಂದಿಲ್ಲ.
ನಟ ದರ್ಶನ್ 131 ದಿನಗಳ ಜೈಲುವಾಸದ ನಂತರ ವೈದ್ಯಕೀಯ ಕಾರಣಗಳನ್ನು ಉಲ್ಲೇಖಿಸಿ ಅ.30 ರಂದು ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ನಂತರ ಹೈಕೋರ್ಟ್ ಡಿ.13 ರಂದು ದರ್ಶನ್ ಮತ್ತು ಪ್ರಮುಖ ಆರೋಪಿ ಪವಿತ್ರ ಗೌಡ ಸೇರಿದಂತೆ ಇತರ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿತ್ತು.ಇದನ್ನೂ ಓದಿ:ಗ್ಯಾರಂಟಿ ಸರ್ಕಾರದಿಂದ ಶಾಕ್ – ಡೀಸೆಲ್ ದರ 2 ರೂ. ಏರಿಕೆ
ಬೆಂಗಳೂರು: ವಕ್ಫ್ ನೋಟಿಸ್ ನೀಡಿದ ಕಾರಣ ಹಾವೇರಿಯ ರೈತ (Haveri Farmer) ರುದ್ರಪ್ಪ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೋಸ್ಟ್ ಹಾಕಿದ್ದ ಸಂಸದ ತೇಜಸ್ವಿ ಸೂರ್ಯ (Tejasvi Surya) ವಿರುದ್ಧ ಹಾವೇರಿ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಹಿದ್ದ ಎಫ್‌ಐಆರ್‌ಗೆ ಹೈಕೋರ್ಟ್ (Karnataka Highcourt) ತಡೆ ನೀಡಿದೆ.
ಏನಿದು ಪ್ರಕರಣ?
ಪಹಣಿಯಲ್ಲಿ ವಕ್ಫ್ (Waqf) ಎಂದು ನಮೂದಾದ ಹಿನ್ನೆಲೆ ರೈತ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತೇಜಸ್ವಿ ಸೂರ್ಯ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದರು. ಇದೀಗ ಸಾಲಬಾಧೆಗೆ ನೊಂದು ರೈತ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸ್ ಇಲಾಖೆ ಹಾಗೂ ಹಾವೇರಿ ಜಿಲ್ಲಾಡಳಿತ ಸ್ಪಷ್ಟನೆ ನೀಡಿದೆ. ಈ ಕಾರಣಕ್ಕೆ ತೇಜಸ್ವಿ ಸೂರ್ಯ ಅವರು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಹಾವೇರಿ ಸೆನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಇದನ್ನೂ ಓದಿ: ‘108’ ಸಿಬ್ಬಂದಿಗೆ ಸರ್ಕಾರದಿಂದ ವೇತನ ಬಾಕಿ ಉಳಿಸಿಕೊಂಡಿಲ್ಲ: ದಿನೇಶ್ ಗುಂಡೂರಾವ್
ಮೃತ ರೈತ ರುದ್ರಪ್ಪನ ಕುಟುಂಬಸ್ಥರು ಹುಬ್ಬಳ್ಳಿಯಲ್ಲಿ (Hubballi) ವಕ್ಫ್ ಕಾಯಿದೆ ತಿದ್ದುಪಡಿ ಜಂಟಿ ಸದನ ಸಮಿತಿಗೆ ವಕ್ಫ್ ಬೋರ್ಡ್‌ನಿಂದ ಅನ್ಯಾಯ ಆಗಿರೋದಾಗಿ ದೂರು ನೀಡಿದ್ದರು. ಆದರೆ ವಕ್ಫ್ ಎಂದು ನಮೂದಾಗಿದ್ದಕ್ಕೆ ರೈತ ಆತ್ಮಹತ್ಯೆ ಮಾಡಿಕೊಂಡಿಲ್ಲ ಎಂದು ಪೊಲೀಸರು ಹಾಗೂ ಜಿಲ್ಲಾಡಳಿತ ಈಗ ಸ್ಪಷ್ಟನೆ ನೀಡಿತ್ತು. ಇದನ್ನೂ ಓದಿ: ಬಿಡಿಎ ಭರ್ಜರಿ ಬೇಟೆ – ನಾಗರಬಾವಿ ಬಡಾವಣೆಯಲ್ಲಿ 60 ಕೋಟಿ ಮೌಲ್ಯದ ಆಸ್ತಿ ಜಪ್ತಿ
ಪ್ರಜ್ವಲ್ ರೇವಣ್ಣ (Prajwal Revanna) ತಂದೆ ಹಾಗೂ ಮಾಜಿ ಸಚಿವ ಹೆಚ್.ಡಿ.ರೇವಣ್ಣ (H.D.Revanna) ವಿರುದ್ಧ ಕಳೆದ ಏಪ್ರಿಲ್ 28ರಂದು ರೇವಣ್ಣ ಅವರ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಸಂತ್ರಸ್ತೆ ದೂರು ದಾಖಲಿಸಿದ್ದರು. ಹೊಳೆನರಸೀಪುರ (Holenarasipura) ನಗರ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ದೂರು ದಾಖಲಾಗಿತ್ತು. ಎಫ್‌ಐಆರ್‌ನಲ್ಲಿ ಹೆಚ್.ಡಿ.ರೇವಣ್ಣ ಎ1 ಮತ್ತು ಪ್ರಜ್ವಲ್ ರೇವಣ್ಣ ಎ2 ಆರೋಪಿಯಾಗಿದ್ದಾರೆ. 354 A, 354 D, 509 ಅಡಿ ಪ್ರಕರಣ ದಾಖಲಾಗಿತ್ತು. 2015 ರಲ್ಲಿ ಹೆಚ್.ಡಿ.ರೇವಣ್ಣ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಸಂತ್ರಸ್ತೆ ದೂರು ನೀಡಿದ್ದರು. ತಂದೆ ಮತ್ತು ಮಗನ ವಿರುದ್ಧ ಸಂತ್ರಸ್ತೆ ಗಂಭೀರ ಆರೋಪಗಳನ್ನು ಮಾಡಿದ್ದರು.
ಚಿಕ್ಕಬಳ್ಳಾಪುರ: ಸಂಸದ ಸುಧಾಕರ್ ಸಚಿವರಾಗಿದ್ದಾಗ, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋಚಿಮುಲ್ (Kochimul) ವಿಭಜನೆ ಮಾಡಿ ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ಸ್ಥಾಪಿಸಿದ್ದ ಆದೇಶವನ್ನ ಮರುಸ್ಥಾಪನೆ ಮಾಡುವಂತೆ ಹೈಕೋರ್ಟ್ ತೀರ್ಪು ನೀಡಿದೆ. ಇದು ಕೋಲಾರ ಮತ್ತು ಚಿಕ್ಕಳ್ಳಾಪುರ ಜಿಲ್ಲೆಯ ರೈತರ (Chikkaballapura Farmers) ಹೋರಾಟಕ್ಕೆ ಸಂದ ಜಯವಾಗಿದೆ ಎಂದು ಸಂಸದ ಡಾ.ಕೆ ಸುಧಾಕರ್ ತಿಳಿಸಿದ್ದಾರೆ. ಇದನ್ನೂ ಓದಿ: ಕೊನೆಗೂ ಅಲ್ಪಸಂಖ್ಯಾತ ಅಭ್ಯರ್ಥಿಗೆ ಶಿಗ್ಗಾಂವಿ ಟಿಕೆಟ್ ನೀಡಿದ ಕಾಂಗ್ರೆಸ್
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಂಸದ ಸುಧಾಕರ್ (Dr. K Sudhakar), ಆಡಳಿತಾತ್ಮಕ ದೃಷ್ಟಿಯಿಂದ ಚಿಕ್ಕಬಳ್ಳಾಪುರ ಜಿಲ್ಲೆಯ ರೈತರ ಹಿತಾಸಕ್ತಿ ಕಾಪಾಡಲು ಪ್ರತ್ಯೇಕ ಹಾಲು ಒಕ್ಕೂಟ ಅಗತ್ಯವಿದೆ ಎಂದು ಹೋರಾಟ ಮಾಡಿ, ಅಂದಿನ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಹಾಗೂ ಸಂಪುಟದ ಸದಸ್ಯರನ್ನು ಮನವೊಲಿಸಿ ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ತರುವಲ್ಲಿ ಯಶಸ್ವಿಯಾಗಿದ್ದೆ. ಆದರೆ ಕಾಂಗ್ರೆಸ್ ಸರ್ಕಾರ ಬಂದ ತಕ್ಷಣ ದ್ವೇಷದ ರಾಜಕಾರಣಕ್ಕಾಗಿ, ನನ್ನ ಮೇಲಿನ ಸೇಡಿಗಾಗಿ ಬಿಜೆಪಿ ಸರ್ಕಾರದ (BJP Government) ಆದೇಶವನ್ನು ಏಕಾಏಕಿ ರದ್ದು ಮಾಡಿ ಜಿಲ್ಲೆಯ ರೈತರ ಹಕ್ಕು ಕಸಿದುಕೊಳ್ಳುವ ಪಾಪದ ಕೆಲಸ ಮಾಡಿತ್ತು ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ 16.17 ಕೋಟಿ ಆಸ್ತಿ ಒಡೆಯ; ಆದ್ರೂ ಸ್ವಂತ ಕಾರು ಇಲ್ಲ!
‘ಬೆಟ್ಟ ಅಗೆದು ಇಲಿ ಹಿಡಿದರು’ ಎನ್ನುವ ಹಾಗೆ ರಾಜಕೀಯ ಸ್ವಾರ್ಥಕ್ಕಾಗಿ, ದ್ವೇಷ ರಾಜಕಾರಣಕ್ಕಾಗಿ 17 ತಿಂಗಳ ಹಿಂದೆ ಪ್ರತ್ಯೇಕ ಹಾಲು ಒಕ್ಕೂಟ ರಚನೆಯ ಅದೇಶವನ್ನ ರದ್ದು ಮಾಡಿದ್ದ ಕಾಂಗ್ರೆಸ್ ಸರ್ಕಾರ ಈಗ ನ್ಯಾಯಾಲಯದಲ್ಲಿ ಹಿಂದಿನ ಬಿಜೆಪಿ ಸರ್ಕಾರ ಕೋಚಿಮುಲ್ ಹಾಲು ಒಕ್ಕೂಟವನ್ನು ವಿಭಜನೆ ಮಾಡಿದ್ದ ಆದೇಶವೇ ಸರಿ ಇದೆ ಎಂದು ಒಪ್ಪಿಕೊಂಡಿದೆ. ಕಾಂಗ್ರೆಸ್ ಸರ್ಕಾರದ ಈ ದ್ವಂದ್ವ ನೀತಿಯಿಂದ, ಎಡಬಿಡಂಗಿ ನಡೆಯಿಂದ 17 ತಿಂಗಳು ಅನಗತ್ಯವಾಗಿ ವ್ಯರ್ಥವಾಗಿದೆ. ಕೆಲವೇ ಕೆಲವು ನಾಯಕರ ಸ್ವಾರ್ಥ ರಾಜಕಾರಣಕ್ಕೆ 17 ತಿಂಗಳ ಕಾಲ ಜಿಲ್ಲೆಯ ಅಭಿವೃದ್ಧಿ ಕುಂಠಿತವಾಗಿದೆ ಎಂದು ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಇಂಡಿಗೋ, ಏರ್ ಇಂಡಿಯಾ, ಸ್ಪೈಸ್‌ಜೆಟ್ ಸೇರಿ ಮತ್ತೆ 95 ವಿಮಾನಗಳಿಗೆ ಬಾಂಬ್ ಬೆದರಿಕೆ ಕರೆ
ರೈತರಿಗಾದ ಈ ನಷ್ಟಕ್ಕೆ ಯಾರು ಹೊಣೆ? ಇಂದಿನ ಕೋರ್ಟ್ ತೀರ್ಪು ಕಾಂಗ್ರೆಸ್ ನಾಯಕರಿಗೆ ಕಪಾಳ ಮೋಕ್ಷ ಮಾಡಿದ್ದು, ಇನ್ನು ಮುಂದಾದರೂ ಜಿಲ್ಲೆಯ ಕಾಂಗ್ರೆಸ್ ನಾಯಕರು ಅಭಿವೃದ್ಧಿಯ ವಿಷಯದಲ್ಲಿ ರಾಜಕೀಯ ಮಾಡದೆ ಜನಪರವಾಗಿ ಕೆಲಸ ಮಾಡಲಿ ಎಂದು ಆಶಿಸುತ್ತೇನೆ. ಮಾತೆತ್ತಿದರೆ ಸಂವಿಧಾನ, ಪ್ರಜಾಪ್ರಭುತ್ವದ ಬಗ್ಗೆ ಉದ್ದುದ್ದ ಭಾಷಣ, ನೀತಿ ಪಾಠ ಹೇಳುವ ಕಾಂಗ್ರೆಸ್ ನಾಯಕರು ಕೋಚಿಮುಲ್ ಆಡಳಿತ ಮಂಡಳಿಯ ಅವಧಿಯು 2024ರ ಮೇ 12ಕ್ಕೆ ಮುಕ್ತಾಯವಾಗಿದ್ದರೂ ಇನ್ನೂ ಚುನಾವಣೆ ನಡೆಸಿಲ್ಲ. ಈ ಬಗ್ಗೆ ಹೈಕೋರ್ಟ್‍ನಲ್ಲಿ ಹೂಡಲಾಗಿದ್ದ ದಾವೆಗೆ ಕೋರ್ಟ್ ತೀರ್ಪು ನೀಡಿದ್ದು, ಆಡಳಿತ ಮಂಡಳಿ ರಚನೆಗಾಗಿ 90 ದಿನಗಳ ಒಳಗಾಗಿ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳಿಸಬೇಕೆಂದು ಜುಲೈ 17ರಂದು ಹೈಕೋರ್ಟ್ ಆದೇಶಿಸಿತ್ತು. ಅಕ್ರಮ ನೇಮಕಾತಿ, ಭ್ರಷ್ಟಾಚಾರದ ಮೂಲಕ ರೈತರ ಹಣ ಲೂಟಿ ಮಾಡಲು ಚುನಾವಣೆ ನಡೆಸದೇ ಅಧಿಕಾರಕ್ಕೆ ಅಂಟಿಕೊಂಡಿರುವ ಕಾಂಗ್ರೆಸ್ ನಾಯಕರು, ಈ ಕೂಡಲೇ ಹಾಲು ಒಕ್ಕೂಟದ ವಿಭಜನೆಯ ಪ್ರಕ್ರಿಯೆ ಆರಂಭಿಸಿ ಚುನಾವಣೆ ನಡೆಸಬೇಕು ಎಂದು ಆಗ್ರಹಿಸುತ್ತೇನೆ ಎಂದಿದ್ದಾರೆ.
– ವ್ಯಾವಹಾರಕ್ಕಿಟ್ಟಿದ್ದ 37 ಲಕ್ಷ ಹಣವನ್ನ ಕೊಲೆಗೆ ಇಟ್ಟಿದ್ದ ಹಣ ಅಂದಿದ್ದಾರೆ ಪೊಲೀಸರು; ವಕೀಲರು
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿಗೆ ಚಿತ್ರಹಿಂಸೆ ಕೊಟ್ಟು ಕೊಂದ ಆರೋಪದಲ್ಲಿ ನಟ ದರ್ಶನ್‌ಗೆ ಜೈಲುವಾಸ ಮುಂದುವರಿದಿದೆ. ಬೆಂಗಳೂರಿನ ಸೆಷನ್ಸ್ ಕೋರ್ಟ್ ವಿಚಾರಣೆಯನ್ನು ಅ.8ರ ಮಂಗಳವಾರ ಮಧ್ಯಾಹ್ನ 12:30ಕ್ಕೆ ಮುಂದೂಡಿದೆ.
ದರ್ಶನ್ ವ್ಯಾವಹಾರಿಕ ಇಟ್ಟಿದ್ದ್ 37 ಲಕ್ಷ ಹಣವನ್ನು ಸೀಜ್ ಮಾಡಿ, ಕೊಲೆಗೆ ಇಟ್ಟಿದ್ದ ಹಣ ಅಂತ ಪೊಲೀಸರು ಹೇಳಿದ್ದಾರೆ. ಚಿಕ್ಕಣ್ಣ, ಚೇತನ್, ನವೀನ್ ಹೇಳಿಕೆ ದಾಖಲಿಸಿದ್ದಾರೆ. ಆದರೆ, ಚಿಕ್ಕಣ್ಣರನ್ನ ಸ್ಟೋನಿಬ್ರೂಕ್‌ಗೆ ಊಟಕ್ಕೆ ಕರೆದಿದ್ರು. ಪ್ರಕರಣದಲ್ಲಿ 6 ಮಂದಿ ಐ ವಿಟ್ನೆಸ್‌ಗಳಿದ್ದಾರೆ. 6 ಜನರ ಹೇಳಿಕೆಯಲ್ಲೂ ವ್ಯತ್ಯಾಸ ಕಂಡುಬಂದಿದೆ. ಇದನ್ನೂ ಓದಿ: ನಮ್ಮ ಮೆಟ್ರೋದಿಂದ ಮತ್ತೊಂದು ಗುಡ್‌ನ್ಯೂಸ್ – ಹೊಸ ವರ್ಷದಿಂದ್ಲೇ ಎಲೆಕ್ಟ್ರಾನಿಕ್ ಸಿಟಿಗೆ ಮೆಟ್ರೋ ರೈಲು!
ಕೇಸ್ ಪ್ರಗತಿಯನ್ನ ಡೈರಿಯಲ್ಲಿ ಉಲ್ಲೇಖ ಮಾಡೋದು ಕಡ್ಡಾಯ. ಆದರೆ, ಪೊಲೀಸರು ಕೋರ್ಟ್ಗೆ ಸಲ್ಲಿಸಿಲ್ಲ ಅಂತ ವಾದಿಸಿದ್ದಾರೆ. ಇದಕ್ಕೆ ಎಸ್‌ಪಿಪಿ ಪ್ರಸನ್ನ ಕುಮಾರ್ ಆಕ್ಷೇಪಿಸಿದ್ದಾರೆ. ಅಲ್ಲದೆ, ಪ್ರತಿವಾದಕ್ಕೆ ಮನವಿ ಮಾಡಿದ್ದಾರೆ. ಹಾಗಾಗಿ, ಮಂಗಳವಾರಕ್ಕೆ ವಿಚಾರಣೆಯನ್ನು ಜಡ್ಜ್ ಮುಂದೂಡಿದ್ದಾರೆ. ಅತ್ತ, ಜೈಲಿನಲ್ಲಿ ದರ್ಶನ್ ಬೇಲ್ ಟೆನ್ಷನ್‌ನಲ್ಲಿದ್ದಾರೆ. ಪವಿತ್ರಗೌಡಗೌಡ ಬೇಲ್ ಅರ್ಜಿಯೂ ಮಂಗಳವಾರವೇ ವಿಚಾರಣೆಗೆ ಬರಲಿದೆ. ಇದನ್ನೂ ಓದಿ: Bengaluru Rains | ಎಲೆಕ್ಟ್ರಾನಿಕ್ ಸಿಟಿ ಮತ್ತೆ ಜಲಾವೃತ – ಸಣ್ಣ ಮಳೆಗೆ ತತ್ತರಿಸಿದ ಐಟಿಬಿಟಿ ಮಂದಿ
– ಇಡೀ ಪ್ರಕರಣ ಕಪೋಲಕಲ್ಪಿತ ಸ್ಟೋರಿ; ನೀರಿನ ಬಾಟಲಿಯನ್ನೇ ಸಾಕ್ಷಿ ಅಂದಿದ್ದಾರೆ
– ಕೋರ್ಟ್‌ನಲ್ಲಿ ಹಿರಿಯ ವಕೀಲ ಸಿ.ವಿ ನಾಗೇಶ್ ಅಬ್ಬರ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್ (Darshan) ಜಾಮೀನು ಅರ್ಜಿ ವಿಚಾರಣೆ ಶನಿವಾರಕ್ಕೆ ಮುಂದೂಡಲಾಗಿದೆ. ಇವತ್ತು ಸಿಸಿಹೆಚ್ 57ನೇ ನ್ಯಾಯಾಲಯದಲ್ಲಿ ನಡೆದ ಜಾಮೀನು ಅರ್ಜಿ ವಿಚಾರಣೆ ವೇಳೆ ದರ್ಶನ ಪರ ಹಿರಿಯ ವಕೀಲ ಸಿ.ವಿ ನಾಗೇಶ್ (Advocate CV Nagesh) ವಾದ ಮಂಡಿಸಿದ್ರು.
ಈ ವೇಳೆ ಈ ಪ್ರಕರಣದ ತನಿಖೆ (Investigation) ತುಂಬಾ ಕೆಟ್ಟದ್ದಾಗಿ ನಡೆದಿದೆ. ಸುಪ್ರೀಂ ಕೋರ್ಟ್‌ನ 2 ತೀರ್ಪು ಉಲ್ಲೇಖಿಸಿ, ಇಡೀ ಪ್ರಕರಣ ಕಪೋಲಕಲ್ಪಿತ ಕಥೆ. ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಸಾಕ್ಷ್ಯಗಳನ್ನು ತನಿಖಾಧಿಕಾರಿಯೇ ಸೃಷ್ಟಿಸಿದ್ದಾರೆ ಎಂದು ಪ್ರಬಲ ವಾದ ಮಂಡಿಸಿದರು. ಇದನ್ನೂ ಓದಿ: ದರ್ಶನ್‌ಗೆ ಇವತ್ತೂ ಸಿಗಲಿಲ್ಲ ಬೇಲ್ – ಜಾಮೀನು ಅರ್ಜಿ ವಿಚಾರಣೆ ಶನಿವಾರಕ್ಕೆ ಮುಂದೂಡಿಕೆ
ವಾದ ಆರಂಭಿಸುತ್ತಿದ್ದಂತೆ ಮೊದಲು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖವಾಗಿರುವ ಅಂಶಗಳನ್ನು ನ್ಯಾಯಾಲಯದ ಗಮನಕ್ಕೆ ತಂದರು. ವಿಚಾರಣೆ ಸಂದರ್ಭದಲ್ಲಿ ಮಾಧ್ಯಮಗಳು ಟ್ರಯಲ್ ಮಾಡಿದ್ದಾವೆ. ಸ್ವಇಚ್ಚಾ ಹೇಳಿಕೆ, ಫೋಸ್ಟ್ ಮಾರ್ಟ್ಂ ರಿಪೋರ್ಟ್, ಐ ವಿಟ್ನೆಸ್ ಅನ್ನು ಬಿತ್ತರ ಮಾಡಿವೆ. ತನಿಖೆಯ ಪ್ರತೀ ಹಂತದಲ್ಲೂ ಕೂಡ ಟ್ರಯಲ್ ಮಾಡಿದ್ದಾವೆ. ಜೀವಾವಧಿ ಅಥವಾ ಸಮನಾಂತರ ಶಿಕ್ಷೆ ಹೊಂದಿರೋ ಪ್ರಕರಣ ಇದು ಇದನ್ನು ವಿಧಿಸೋದು ಬಾಕಿ ಇದೆ. ಇನ್ನೂ ಕೋರ್ಟ್ ಯಾವುದೇ ತೀರ್ಮಾನಕ್ಕೆ ಬಂದಿಲ್ಲ ಎಂದು ಹೇಳಿದರು.
ಎಸ್‌ಪಿಪಿ (SPP) ಅತ್ಯುತ್ತಮ ತನಿಖೆ ಅಂತ ಕೋರ್ಟ್‌ಗೆ ಹೇಳಿದ್ದಾರೆ. ಆದರೆ ಇದು ನನ್ನ ಪ್ರಕಾರ ತುಂಬಾ ಕೆಟ್ಟದಾದ ತನಿಖೆ ಎನ್ನುತ್ತಾ ಸುಪ್ರೀಂ ಕೋರ್ಟ್ನ ಎರಡು ತೀರ್ಪುಗಳ ಉಲ್ಲೇಖಿಸಿ ವಾದ ಮಂಡಿಸಿದರು. ಈ ವೇಳೆ ತೀರ್ಪಿನ ಪ್ರತಿಯನ್ನು ಎಸ್‌ಪಿಪಿ ಕೇಳಿದರು. ಅದಕ್ಕೆ ಗರಂ ಆದ ಸಿ.ವಿ ನಾಗೇಶ್, ನಾನು ಕೆಲಸ ಮಾಡಿ ತಂದಿರೋ ತೀರ್ಪು ಇದು. ನಾನು ನಿಮಗೆ ಪ್ರತಿ ಕೊಡೋಲ್ಲ, ಪ್ರಸನ್ನ ನೀವೇ ಹುಡುಕಿ ಎಂದರು. ಇದನ್ನೂ ಓದಿ: ದಸರಾ ಉದ್ಘಾಟನೆ ವೇದಿಕೆ ರಾಜಕೀಯವಾಗಿ ಬಳಸಿದ ಸಿಎಂ; ಜಿಟಿಡಿ ಹೇಳಿಕೆ ಸಿಎಂ ಓಲೈಕೆಗಾಗಿ – ಛಲವಾದಿ ನಾರಾಯಣಸ್ವಾಮಿ
ರೇಣುಕಾ ಮುಖ ನಾಯಿ ಕಚ್ಚಿ ತಿಂದಿದೆ.
ಮೀಡಿಯಾದಲ್ಲಿ ದಿನಾ ಟ್ರಯಲ್ ಮಾಡಿ ಪ್ರಚಾರ ನೀಡುತ್ತಾ ಇದ್ದಾರೆ. ಮೀಡಿಯಾದಲ್ಲಿ ಆರೋಪಿಗಳ ಸ್ವ ಇಚ್ಛಾ ಹೇಳಿಕೆ ಬಂದಿದೆ. ಅಲ್ಲದೇ ಮೃತ ದೇಹದ ಫೋಟೋ ತೋರಿಸಿದ್ದಾರೆ. ಆತನ ಮುಖವನ್ನು ನಾಯಿ ತಿಂದಿದೆ, ಅಂತ ವೈದ್ಯರು ಸ್ಪಷ್ಟ ಪಡಿಸಿದ್ದಾರೆ. ಆದರೆ ಮಾಧ್ಯಮದಲ್ಲಿ ಇದನ್ನೇ ಕ್ರೌರ್ಯ ಅಂತ ಹೇಳಿದ್ರು. ಹಲ್ಲೆ ಎಂದು ಬಿಂಬಿಸಿ ಸುದ್ದಿ ಸಹ ಮಾಡಿವೆ. ನಾಯಿ ಕಚ್ಚಿ ಅವನ ಮುಖ ತಿಂದಿದೆ. ಇದೆನ್ನೆಲ್ಲಾ ಪರಿಗಣಿಸಿ ಕೋರ್ಟ್ ತನಿಖಾಧಿಕಾರಿಗೆ ತರಾಟೆ ತೆಗೆದುಕೊಳ್ಳಬೇಕು ಎಂದು ವಾದಿಸಿದರು.
ನೀರಿನ ಬಾಟಲ್ ಅನ್ನು ಸಾಕ್ಷಿ ಅಂದಿದ್ದಾರೆ:
ಪ್ರಕರಣದಲ್ಲಿ ಎಲ್ಲಾ ರಿಕವರಿ ಸುಳ್ಳು ರಿಕವರಿ ಆಗಿದೆ. ಎಲ್ಲಾ ಸಾಕ್ಷ್ಯಗಳನ್ನು ತನಿಖಾಧಿಕಾರಿಯೇ ಸೃಷ್ಟಿ ಮಾಡಿದ್ದಾರೆ. ಮರದ ಕೊಂಬೆಗಳು, ಹಗ್ಗದ ತುಂಡುಗಳನ್ನು ರಿಕವರಿ ಎಂದು ತೋರಿಸಿದ್ದಾರೆ. ನೀರಿನ ಬಾಟಲ್ ಅನ್ನು ಸಾಕ್ಷಿ ಅಂದಿದ್ದಾರೆ. 12-6 ರಲ್ಲಿ ಇದೆಲ್ಲವನ್ನೂ ತಮ್ಮ ವಶಕ್ಕೆ ಪಡೆದಿದ್ದಾರೆ. ಆದರೆ 9 ಜೂನ್ ಅಲ್ಲಿಯೇ ಪೊಲೀಸರ ವಶದಲ್ಲಿ ಇತ್ತು. ಈ ವಸ್ತುಗಳನ್ನು ವಶಕ್ಕೆ ಪಡೆದಿರೋದಾಗಿ ಪೊಲೀಸರು ದೋಷಾರೋಪ ಪಟ್ಟಿಯಲ್ಲಿ ಹೇಳಿದ್ದಾರೆ. ಇಲ್ಲಿ ದಿನಾಂಕಗಳ ವ್ಯತ್ಯಾಸ ಕಂಡುಬಂದಿದೆ ಎಂದು ಹೇಳಿದರು.
ಸ್ವಇಚ್ಚಾ ಹೇಳಿಕೆಯಲ್ಲಿ ಚಪ್ಪಲಿ, ಪೊಲೀಸರಿಗೆ ಸಿಕ್ಕಿದ್ದು ಶೂ:
ಅಲ್ಲದೇ ದರ್ಶನ್ ಸ್ವಇಚ್ಚಾ ಹೇಳಿಕೆಯಲ್ಲಿ ಚಪ್ಪಲಿ ಅಂತ ಇದೆ. ಅದರೆ ಪೊಲೀಸರು ವಶಕ್ಕೆ ಪಡೆದಿರೋದು ಶೂ. ಸ್ವ-ಇಚ್ಛಾ ಹೇಳಿಕೆಯನ್ನ ಬದಲಾಯಿಸಲಾಗಿದೆ. ದರ್ಶನ್ ಘಟನೆ ವೇಳೆ ಧರಿಸಿದ್ದ ಬಟ್ಟೆ, ಚಪ್ಪಲಿಗಳನ್ನ ಮನೆಯಲ್ಲಿ ಇಟ್ಟಿರುವುದಾಗಿ ತಿಳಿಸಿದ್ದು, ಮನೆಗೆ ಬಂದರೆ ತೋರಿಸುವುದಾಗಿ ಹೇಳಿದ್ದಾರೆ. ಆದ್ರೆ, ಮನೆಯಲ್ಲಿ ಶೂಗಳು ಹೇಗಾದವು? ಇಷ್ಟೇಲ್ಲಾ ಆದ್ಮೇಲೆ ಹೇಳಿಕೆ ಬದಲಿಸಿದ್ದಾರೆ. ಮೊದಲು ಹೇಳಿಕೆ ಕೊಟ್ಟಾಗ ಚಪ್ಪಲಿ ಚಪ್ಪಲಿ ಅಂದಿದ್ದಾರೆ. ಕೊನೆಗೆ ಅದನ್ನೇ ಶೂ ಎಂದು ಹೇಳಿಕೆ ಬದಲಿಸಿದ್ದಾರೆ ಎಂದು ವಾದ ಮಂಡನೆ ಮಾಡಿದರು.
ರಕ್ತದ ಕಲೆ ಬಿಟ್ಟು ಉಳಿದೆಲ್ಲ ಕಡೆ ತೊಳೆದಿದ್ದರಂತೆ:
ಪೊಲೀಸರು ಮೊದಲ ಬಾರಿಗೆ ಹೋದಾಗ ರಕ್ತದ ಕಲೆ ಇತ್ತು ಎನ್ನಲಾದ ಬಟ್ಟೆ ಸಿಕ್ಕಿಲ್ಲ. ಆಮೇಲೆ ಅದೇ ಬಟ್ಟೆಯನ್ನು ಶರ್ಫ್ ಹಾಕಿ ತೊಳೆದಿದ್ದಾರೆ ಎಂದು ಹೇಳಿಕೆ ದಾಖಲಿಸಲಾಗಿದೆ. ರಕ್ತದ ಕಲೆ ಇರೋ ಜಾಗ ಬಿಟ್ಟು, ಇನ್ನೆಲ್ಲಾ ಕಡೆ ಬಟ್ಟೆ ತೊಳೆದಿದ್ದರು ಅನ್ಸುತ್ತೆ. ಅದಕ್ಕೆ ರಕ್ತದ ಕಲೆ ಸಿಕ್ಕಿದೆ ಎಂದು ವ್ಯಂಗ್ಯವಾಡಿದರು. ಟೀ ಶರ್ಟ್ ಮತ್ತು ಜೀನ್ಸ್ ಪ್ಯಾಂಟ್ ಶರ್ಫ್ ಹಾಕಿ ತೊಳೆದು ಒಣಗಿಸಲಾಗಿತ್ತು. ಶನಿವಾರ ಕೊಲೆ ಆಗಿದೆ – ಭಾನುವಾರ ಬಟ್ಟೆ ಇಟ್ಟಿದ್ದಾರೆ. ಸೋಮವಾರ ಸುಶೀಲಮ್ಮ ತೊಳೆದು ಒಣಗಿ ಹಾಕಿದ್ದಾರೆ. ಇಷ್ಟೇಲ್ಲಾ ಉತ್ತಮವಾಗಿ ತೊಳೆದ್ರೂ ಕೂಡ ರಕ್ತದ ಕಲೆ ಸಿಕ್ಕಿದೆ ಅಂತೆ ಎಂದು ಹಾಸ್ಯಮಾಡಿದರು. ಇದನ್ನೂ ಓದಿ: ಶ್ರೀರಂಗಪಟ್ಟಣ ದಸರಾ | ಜಂಬೂಸವಾರಿ ವೇಳೆ ಬೆದರಿ ಓಡಿದ ಹಿರಣ್ಯ ಆನೆ – ತಪ್ಪಿದ ಭಾರೀ ಅನಾಹುತ
ದರ್ಶನ್ ಪರ ವಾದದ ಮುಖ್ಯಾಂಶಗಳು
* ರೇಣುಕಾಗೆ ದರ್ಶನ್ ಹೊಡೆದಿರೋದ್ದಲ್ಲ.. ನಾಯಿ ಮುಖವನ್ನು ತಿಂದಿದೆ
* ಜೂ.8ಕ್ಕೆ ಕೊಲೆ ಆಗಿದೆ; 9ಕ್ಕೆ ಸ್ಪಾಟ್‌ಗೆ ಹೋಗಿದ್ದಾರೆ
* ಜೂನ್ 12ಕ್ಕೆ ಸೀಜ್ ಮಾಡಿಕೊಂಡಿಕೊಂಡಿದ್ದಾರೆ
* ಜೂ 9ಕ್ಕೆ ಗೊತ್ತಾದ್ರೂ ಏನ್ ಮಾಡುತ್ತಿದ್ದರು..?
* ತಡವಾಗಿ ಪೊಲೀಸರಿಂದ ಪಂಚನಾಮೆ.. ಪಿಎಸ್‌ಐ ಏಕೆ ಸುಮ್ಮನಿದ್ರು….?
* ಟಾರ್ಚ್ ಹಿಡಿದುಕೊಂಡು ಹೋಗಿ ಸೀಜ್
* 164 ಅಡಿ ಸೆಕ್ಯೂರಿಟಿ ಹೇಳಿಕೆ ದಾಖಲಿಸಿದ್ದಾರೆ.. ಸೆಕ್ಯೂರಿಟಿ ಗಾರ್ಡ್‌ಗೆ ಕನ್ನಡ ಬರಲ್ಲ
* ರೇಣುಕಾ ಶೂನಲ್ಲಿ ರಕ್ತದ ಕಲೆಗಳು ಇಲ್ಲ
* ಜೂ.14ಕ್ಕೆ ದರ್ಶನ್ ಶೂಗಳು ವಶಪಡಿಸಿಕೊಂಡಿದ್ದಾರೆ
* ಸಾಕ್ಷಿಗಳನ್ನು ಹುಡುಕಲು ಮ್ಯಾಜಿಕ್ ಶೋ ಮಾಡಿದ್ದಾರೆ
* ದರ್ಶನ್ ಸ್ವಇಚ್ಛಾ ಹೇಳಿಕೆಯಲ್ಲಿ ಚಪ್ಪಲಿ ಅಂದಿದ್ದಾರೆ.. ಮನೆಗೆ ಬಂದಾಗ ಶೂ ಆಗಿದ್ದೇಗೆ…?
* ರಕ್ತದ ಕಲೆಯ ಬಟ್ಟೆ ವಶ ಅಂತ ಹೇಳಲಾಗಿದೆ
* ಶನಿವಾರ ಕೊಲೆ ಆಗಿದೆ, ಭಾನುವಾರ ಇಟ್ಟಿದ್ದಾರೆ.. ಸೋಮವಾರ ಒಗೆದು ಹಾಕಿದ್ದಾರೆ…!
* ಬಟ್ಟೆ ಒಗೆದವರ ಸ್ವ ಇಚ್ಛಾ ಹೇಳಿಕೆಯೇ ಇದೆ
* ಇಷ್ಟೆಲ್ಲಾ ಆದ್ರೂ ರಕ್ತದ ಕಲೆ ಸಿಕ್ಕಿದ್ದೇಗೆ…?