ಬೆಂಗಳೂರು: ರೇಣುಕಾಸ್ವಾಮಿ (Renukaswamy Case) ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ (Darshan) ಹಾಗೂ ಪವಿತ್ರಾ ಗೌಡರ ಜಾಮೀನು ಅರ್ಜಿ ವಿಚಾರಣೆಯನ್ನು ಅಕ್ಟೋಬರ್ 5ಕ್ಕೆ ಮುಂದೂಡಿ ಸಿಸಿಹೆಚ್ 57ನೇ ನ್ಯಾಯಾಲಯವು ಆದೇಶ ಹೊರಡಿಸಿದೆ.
ಕೊಲೆ ಪ್ರಕರಣದ ಆರೋಪಿಗಳಾದ ಎ2 ದರ್ಶನ್ ಹಾಗೂ ಎ1 ಪವಿತ್ರಾ ಗೌಡ ಅವರ ಜಾಮೀನು ಅರ್ಜಿ ವಿಚಾರಣೆಯು 57ನೇ ಸೆಷನ್ ಕೋರ್ಟ್‌ನಲ್ಲಿ ನಡೆಯಿತು. ಇದೇ ವೇಳೆ ಪವಿತ್ರಾಗೌಡ ಅವರ ಜಾಮೀನು ಅರ್ಜಿಯನ್ನೂ ಕೋರ್ಟ್ ಮುಂದೂಡಿತು. ದರ್ಶನ್ ಪರವಾಗಿ ಹಿರಿಯ ವಕೀಲ ಸಿ.ವಿ ನಾಗೇಶ್ ಪ್ರಬಲ ವಾದ ಮಂಡಿಸಿದರು. ಇದನ್ನೂ ಓದಿ: ಶ್ರೀರಂಗಪಟ್ಟಣ ದಸರಾ | ಜಂಬೂಸವಾರಿ ವೇಳೆ ಬೆದರಿ ಓಡಿದ ಹಿರಣ್ಯ ಆನೆ – ತಪ್ಪಿದ ಭಾರೀ ಅನಾಹುತ
ಕೊನೆಯಲ್ಲಿ ರಿಕವರಿ ಮತ್ತು ಸ್ವಇಚ್ಚಾ ಹೇಳಿಕೆಯ ಸಂದೇಹ & ವ್ಯತ್ಯಾಸಗಳ ಬಗ್ಗೆ ಸಿ.ವಿ ನಾಗೇಶ್ ವಾದ ಮಂಡಿಸಿದರು. ಇಲ್ಲಿ ಪೊಲೀಸ್ ರಿಕವರಿ ಸ್ವೀಕರಿಸುವಂತಹದ್ದು ಅಲ್ಲ, ಹೇಳಿಕೆಯೂ ಸಹ ಸ್ವಿಕರಿಸುವಂತಹದ್ದಲ್ಲ. ಇಲ್ಲಿ ಸಮಾನ್ಯ ನಿಯಮವನ್ನು ಪೊಲೀಸರು ಅನುಸರಿಸಬೇಕು. ಸಾಕ್ಷಿಯೂ ಪ್ಲಾಂಟೆಂಡ್ ಸಾಕ್ಷಿಯಾಗಿದೆ. 37 ಲಕ್ಷ ಹಣವನ್ನು ಸೀಜ್ ಮಾಡಿದ್ದಾರೆ. ಸಾಕ್ಷಿಗಳ ಕೊಂಡುಕೊಳ್ಳಲು ಹಣ ಬೇಕು ಎಂದಿದ್ದಾರೆ ಎಂದು ಹೇಳಿ ನಾಳೆಗೆ ವಾದ ಮುಂದುವರಿಸುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಸಿಎಂ ಪರ ಜಿಟಿಡಿ ಬ್ಯಾಟಿಂಗ್ | ಕಳ್ಳರು ಕಳ್ಳರು ಒಂದಾಗಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ವ್ಯಂಗ್ಯ
ಸೋನಿಪತ್: ಹರಿಯಾಣ ವಿಧಾನಸಭಾ ಚುನಾವಣೆ ಪ್ರಚಾರದಲ್ಲಿ ಕರ್ನಾಟಕದ ಮುಡಾ ಪ್ರಕರಣದ (MUDA Scam) ಪ್ರಸ್ತಾಪವಾಗಿದೆ. ಸೋನಿಪತ್‌ನಲ್ಲಿ ನಡೆದ ಪ್ರಚಾರದಲ್ಲಿ ಮುಡಾ ವಿಚಾರವನ್ನು ಪ್ರಸ್ತಾಪಿಸಿದ ಪ್ರಧಾನಿ ನರೇಂದ್ರ ಮೋದಿ (Narendra Modi), ಸಿಎಂ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್ ತನಿಖೆಗೆ ಆದೇಶಿಸಿದೆ, ಅವರ ವಿರುದ್ಧ ತನಿಖೆಯಾಗಲೇಬೇಕು ಎಂದು ಒತ್ತಾಯಿಸಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ (Government Of Karnataka) ಅಧಿಕಾರಕ್ಕೆ ಬಂದು 2 ವರ್ಷ ಆಗಿದೆ. ಅಲ್ಲಿ ಯಾವ ಪರಿಸ್ಥಿತಿ ನಿರ್ಮಾಣವಾಗಿದೆ ನೋಡಿ. ಖುದ್ದು ಅಲ್ಲಿಯ ಮುಖ್ಯಮಂತ್ರಿ ವಿರುದ್ಧ ಭೂ ಹಗರಣದ ಆರೋಪ ಕೇಳಿ ಬಂದಿದೆ, ಹೈಕೋರ್ಟ್ ಚಾಟೀ ಬೀಸಿ ತನಿಖೆಗೆ ಆದೇಶಿಸಿದೆ ಎಂದು ತಿವಿದಿದ್ದಾರೆ. ಇದನ್ನೂ ಓದಿ: MUDA Scam: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಜೆಡಿಎಸ್ ಪ್ರತಿಭಟನೆ
ಕರ್ನಾಟಕ ಸಿಎಂ ವಿರುದ್ಧ ಭೂ ಹಗರಣ ಆರೋಪ ಕೇಳಿ ಬಂದು, ಅದರ ತನಿಖೆ ಶುರುವಾಗುತ್ತಿದ್ದಂತೆಯೇ ಹೈಕೋರ್ಟ್‌ಗೆ ಹೋಗಿದ್ದರು. ಹೈಕೋರ್ಟ್ ಕೂಡ ಅವರಿಗೆ ಛಾಟಿ ಬೀಸಿದೆ. ಮಂಗಳವಾರ ಹೈಕೋರ್ಟ್ ತನಿಖೆಗೆ ಆದೇಶ ಮಾಡಿದೆ. ಸಿದ್ದರಾಮಯ್ಯ ವಿರುದ್ಧ ತನಿಖೆ ಆಗಲೇಬೇಕು. ಹೀಗೆ ಭ್ರಷ್ಟಾಚಾರ ಮಾಡಿದವರಿಗೆ ಹರಿಯಾಣದಲ್ಲಿ ಅವಕಾಶ ಕೊಡ್ತಿರಾ? ಎಂದು ಮೋದಿ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ರಾಜೀನಾಮೆ ಪಡೆದರೆ ಇಡೀ ದಕ್ಷಿಣ ಭಾರತ ಹೊತ್ತಿ ಉರಿಯುತ್ತೆ: ಅಹಿಂದ ರಾಜ್ಯಾಧ್ಯಕ್ಷ
ಬೆಂಗಳೂರು: ಒಂದೆಡೆ ಬಾಕಿ ಕೇಸ್‌ಗಳ ಇತ್ಯರ್ಥಕ್ಕೆ ರಾಜ್ಯಪಾಲರಿಗೆ ಸಲಹೆ ಕೊಟ್ಟಿರೋ ಸರ್ಕಾರ ಇನ್ನೊಂದೆಡೆ, ಪೋಕ್ಸೋ ಕೇಸಲ್ಲಿ ಯಡಿಯೂರಪ್ಪ (BS Yediyurappa) ಬಂಧಿಸಿದಂತೆ ನೀಡಿರೋ ಮಧ್ಯಂತರ ರಕ್ಷಣೆ ತೆರವು ಕೋರಿ ಹೈಕೋರ್ಟ್ ಮೆಟ್ಟಿಲೇರಿದೆ.
ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರನ್ನು ಬಂಧಿಸದಂತೆ ನೀಡಿದ್ದ ಆದೇಶ ತೆರವು ಕೋರಿ ಸಿಐಡಿ ಎಸ್‌ಪಿಪಿ ಎಸ್‌ಪಿಪಿ ಅಶೋಕ್ ನಾಯ್ಕ್ ಅವರಿಂದ ಹೈಕೋರ್ಟ್ಗೆ (Karnataka Highcourt) ಅರ್ಜಿ ಸಲ್ಲಿಕೆಯಾಗಿದೆ. ಈ ಅರ್ಜಿಯನ್ನು ಇಂದು (ಆಗಸ್ಟ್ 22) ಕೈಗೆತ್ತಿಕೊಂಡ ನ್ಯಾ.ನಾಗಪ್ರಸನ್ನ ಅವರಿದ್ದ ಪೀಠ ಬಿಎಸ್‌ವೈ ಪರ ವಕೀಲರ (BSY Advocate) ಮನವಿ ಮೇರೆಗೆ ವಿಚಾರಣೆಯನ್ನು ಆಗಸ್ಟ್ 30ಕ್ಕೆ ಮುಂದೂಡಿದೆ. ಇದರಿಂದ ಯಡಿಯೂರಪ್ಪ ಮತ್ತೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ. ಇದನ್ನೂ ಓದಿ: ಗಾಳಿಯೊಂದಕ್ಕೆ ಟ್ಯಾಕ್ಸ್ ಹಾಕಿಬಿಟ್ರೆ ಔರಂಗಜೇಬನ ಅಪ್ಪಂದಿರು ಅಂತ ತೋರ್ಸಕ್ಕೆ ಬೇರೇನೂ ಬೇಡ: ಸಿ.ಟಿ ರವಿ ಲೇವಡಿ
ಜಡ್ಜ್ ಹೇಳಿದ್ದೇನು?
ಈ ಅರ್ಜಿ ಲಿಸ್ಟ್ ಆಗಬೇಕಿತ್ತು. ಆದರೆ ತಾಂತ್ರಿಕ ಕಾರಣದಿಂದ ಇಂದು ಲಿಸ್ಟ್ ಆಗಿಲ್ಲ. ಮಧ್ಯಾಹ್ನ 2.30ಕ್ಕೆ ವಕೀಲರು ಮನವಿ ಮಾಡಿದ್ರು. ಎಫ್‌ಐಆರ್‌ಗೆ ಮಧ್ಯಂತರ ತಡೆಯಾಜ್ಞೆ ಇದೆ. ಅದಕ್ಕೆ ನೀವು ಚಾರ್ಜ್ ಶೀಟ್ ವಜಾಕ್ಕೆ ಕೇಳಲು ಆಗಲ್ಲ. FIR ಅರ್ಜಿ ರದ್ದು ಮಾಡುವ ಅರ್ಜಿ ವಾಪಸ್ ತೆಗೆದುಕೊಂಡು, ಚಾರ್ಜ್ ಶೀಟ್ ವಜಾಗೊಳಿಸಸಲು 482ಎ ಅಡಿ ಬೇರೆ ಅರ್ಜಿ ಸಲ್ಲಿಸಿ ಎಂದರು. ಇದನ್ನೂ ಓದಿ: ಮಂತ್ರಾಲಯದಲ್ಲಿ ಅದ್ದೂರಿಯಾಗಿ ನಡೆದ ಮಹಾರಥೋತ್ಸವ: ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಭಾಗಿ
ಈ ಮಧ್ಯೆ, ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣದ ತನಿಖೆಯನ್ನು ಲೋಕಾಯುಕ್ತ ಚುರುಕುಗೊಳಿಸಿದೆ. ಸಮನ್ಸ್ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಗುರುವಾರ ಲೋಕಾಯುಕ್ತ ಕಚೇರಿಗೆ ತೆರಳಿ 2ಗಂಟೆ ವಿಚಾರಣೆ ಎದುರಿಸಿದ್ದಾರೆ. ಲೋಕಾಯುಕ್ತ ಮಧ್ಯಾಹ್ನ 2 ಗಂಟೆಗೆ ಶುರುವಾದ ವಿಚಾರಣೆ ಸಂಜೆ ನಾಲ್ಕು ಗಂಟೆಯವರೆಗೂ ನಡೀತು. ಬಳಿಕ ಮಾತಾಡಿದ ಡಿಸಿಎಂ, ಇವರಿಗಿಂತ ಸಿಬಿಐನವರೇ ಪರವಾಗಿಲ್ಲ. ಒಂದು ದಿನವೂ ಕರೆದಿರಲಿಲ್ಲ. ಏನನ್ನೂ ಕೇಳಿರಲಿಲ್ಲ, ಆದ್ರೆ, ಇವರು ಈಗಲೇ ಹಿಂಸೆ ಕೊಡೋಕೆ ಶುರು ಮಾಡಿದ್ದಾರೆ ಅಂತಾ ಅಸಮಾಧಾನ ವ್ಯಕ್ತಪಡಿಸಿದ್ರು. ಅಂದ ಹಾಗೇ, ಈ ಪ್ರಕರಣದ ತನಿಖೆ ನಡೆಸಲು ಸಿಬಿಐಗೆ ನೀಡಿದ್ದ ಅನುಮತಿಯನ್ನು ರಾಜ್ಯ ಸರ್ಕಾರ ಕಳೆದ ವರ್ಷ ಹಿಂಪಡೆದು, ಲೋಕಾಯುಕ್ತಕ್ಕೆ ವಹಿಸಿತ್ತು. ನಂತ್ರ ಡಿಕೆ ಶಿವಕುಮಾರ್ ವಿರುದ್ಧ ಲೋಕಾಯುಕ್ತ ಸಂಸ್ಥೆ ಎಫ್‌ಐಆರ್ ದಾಖಲಿಸಿತ್ತು. ಇದನ್ನೂ ಓದಿ: ನಿಮ್ಮೊಂದಿಗೆ ನಾವಿದ್ದೇವೆ.. ಸಿಎಂಗೆ ಶಾಸಕರ ಬಲ; ರಾಷ್ಟ್ರಪತಿಗಳ ಮುಂದೆ 135 ಶಾಸಕರಿಂದ ಪೆರೇಡ್‌ಗೆ ಸಂಪುಟ ನಿರ್ಧಾರ
ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ:
ರಾಜ್ಯಪಾಲರ ವಿರುದ್ಧ ಕೈ ನಾಯಕರ ನಿಂದನೆ ಖಂಡಿಸಿ ಹಾಗೂ ಸಿಎಂ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರು, ಮಂಡ್ಯ, ಮೈಸೂರು, ಮಂಗಳೂರು, ಹೀಗೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೀತು. ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಕಾಂಗ್ರೆಸ್ ವಿರುದ್ಧ ಕೇಸರಿ ಪಡೆ ಧಿಕ್ಕಾರ ಸ್ವರ ಮೊಳಗಿಸಿತು. ಅಶಾಂತಿ ಸೃಷ್ಟಿಸ್ತೀವಿ, ಬಾಂಗ್ಲಾ ಪರಿಸ್ಥಿತಿ ಸೃಷ್ಟಿಸ್ತೀವಿ ಅನ್ನೋರ ಮೇಲೆ ಕ್ರಮ ಏಕಿಲ್ಲ? ಎಂದು ಬಿಜೆಪಿಗರು ಪ್ರಶ್ನೆ ಮಾಡಿದ್ರು. ರಾಜ್ಯಪಾಲರನ್ನು ನಿಂದಿಸೋರನ್ನು ಗಡಿಪಾರು ಮಾಡ್ಬೇಕು ಎಂದು ಆಗ್ರಹಿಸಿದ್ರು. ನಿಮಗೆ ತಾಕತ್ ಇದ್ರೆ ರಾಜಭವನಕ್ಕೆ ನುಗ್ಗಿ, ನಿಮಗೆ ತಾಕತ್ ಇದ್ರೆ ಮುಡಾ ಪ್ರಕರಣವನ್ನ ಸಿಬಿಐಗೆ ನೀಡಿ ಎಂದು ಸವಾಲ್ ಮೇಲೆ ಸವಾಲ್ ಹಾಕಿದ್ರು. ಸಿಎಂ ಸಿದ್ದರಾಮಯ್ಯ ಕ್ಷಣ ಕ್ಷಣಕ್ಕೂ ಸುಳ್ಳು ಹೇಳ್ತಾರೆ. ಮೊದಲು ನಾನು ಸೈಟ್ ಕೇಳಿಲ್ಲ ಅಂದ್ರು. ಈಗ ವೈಟ್ನರ್ ವಿಚಾರ ಕೇಳಿದ್ರೆ ಗೊತ್ತಿಲ್ಲ ಅಂತಾರೆ. ಯಾರನ್ನು ಜೈಲಿಗೆ ಹಾಕಬೇಕು ಅಂತಲೂ ಪ್ರಶ್ನೆ ಮಾಡಿದರು.
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Case) ಆರೋಪಿಗಳಾದ ದರ್ಶನ್ ಅಂಡ್ ಗ್ಯಾಂಗ್‌ನ (Darshan And Gang) ನ್ಯಾಯಾಂಗ ಬಂಧನದ ಕಸ್ಟಡಿ ಇಂದಿಗೆ (ಗುರುವಾರ) ಅಂತ್ಯವಾಗಲಿದೆ.
ಗುರುವಾರ (ಆ.1) ಪ್ರಕರಣದ ಎಲ್ಲಾ ಆರೋಪಿಗಳನ್ನ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರು ಪಡಿಸಲಿದ್ದು SIT ಪೊಲೀಸರು (Kamakshipalya Police), ಮತ್ತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ಕೋರ್ಟ್‌ಗೆ (Karnataka Highcourt) ಮನವಿ ಮಾಡಲು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.
ಪರಪ್ಪನ ಅಗ್ರಹಾರ ಜೈಲಿನಿಂದ 13 ಮಂದಿ ಆರೋಪಿಗಳು, ತುಮಕೂರು ಜೈಲಿನಿಂದ 4 ಆರೋಪಿಗಳನ್ನ ಹಾಜರು ಪಡಿಸಲು ಸಿದ್ಧತೆ ನಡೆದಿದೆ. ರೇಣುಕಾಸ್ವಾಮಿ ಕೊಲೆ ಸಂಬಂಧ ನಟ ದರ್ಶನ್, ಪವಿತ್ರಾಗೌಡ, ಪವನ್, ಪ್ರದೂಷ್, ವಿನಯ್, ದೀಪಕ್ ಸೇರಿ 17 ಮಂದಿ ಅರೆಸ್ಟ್ ಆಗಿದ್ದು ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಪುನಃ ನ್ಯಾಯಾಂಗ ಬಂಧನ ವಿಸ್ತರಣೆಗೆ ಮನವಿ ಮಾಡಲು ರಿಮ್ಯಾಂಡ್ ಅರ್ಜಿಯನ್ನೂ ತಯಾರು ಮಾಡಿಕೊಂಡಿದ್ದಾರೆ.
ನ್ಯಾಯಾಂಗ ಬಂಧನ ವಿಸ್ತರಣೆಗೆ 10ಕ್ಕೂ ಹೆಚ್ಚು ಅಂಶಗಳ ರಿಮ್ಯಾಂಡ್ ಅಪ್ಲಿಕೇಷನ್ ತಯಾರಿ ಮಾಡಲಾಗಿದ್ದು, ಕಾಮಾಕ್ಷಿಪಾಳ್ಯ ಪೊಲೀಸರು ಕೋರ್ಟ್‌ಗೆ ರಿಮ್ಯಾಂಡ್ ಅಪ್ಲಿಕೇಷನ್ ಸಲ್ಲಿಕೆಮಾಡಲಿದ್ದಾರೆ.
ರಿಮ್ಯಾಂಡ್ ಅರ್ಜಿಯ ಪ್ರಮುಖ ಅಂಶಗಳೇನು?
1) ಪ್ರಕರಣದ ಎ1 ರಿಂದ ಎ17 ಆರೋಪಿಗಳು ಅಪಹರಣ, ಕೊಲೆ, ಒಳ ಸಂಚು, ಮತ್ತು ಸಾಕ್ಷಿನಾಶದಲ್ಲಿ ಭಾಗಿ.
2) ಆರೋಪಿಗಳು ಕೃತ್ಯಕ್ಕೆ ಬಳಸಿದ್ದ ವಾಹನಗಳು ಬೇರೆಯವರ ಹೆಸರಿನಲ್ಲಿದ್ದು, ಮಾಲೀಕರನ್ನ ಪತ್ತೆ ಮಾಡಿ ಹೇಳಿಕೆ ದಾಖಲಿಸುವುದು.
3) ಆರೋಪಿಗಳು ಭೌತಿಕ ಮತ್ತು ತಾಂತ್ರಿಕ ಮತ್ತು ವೈಜ್ಞಾನಿಕ ಸಾಕ್ಷ್ಯಗಳನ್ನ ನಾಶಪಡಿಸಿರುವುದು ತನಿಖೆಯಲ್ಲಿ ಪತ್ತೆ.
4) ಆರೋಪಿಗಳು ಬೇರೆಯವರ ಹೆಸರಿನಲ್ಲಿ ಸಿಮ್ ಖರೀದಿ, ಸಿಮ್ ನೊಂದಣೆಯಾದ ವ್ಯಕ್ತಿಗಳ ಮಾಹಿತಿಯನ್ನು ಸಂಗ್ರಹಿಸಿ ವಿಚಾರಣೆ.
5) ತನಿಖಾ ಕಾಲದಲ್ಲಿ ಸಿಕ್ಕ ತಾಂತ್ರಿಕ ಮತ್ತು ವೈಜ್ಞಾನಿಕ ಸಾಕ್ಷ್ಯಾಧಾರಗಳನ್ನ ತಜ್ಞರ ಪರಿಶೀಲನೆಗೆ ಕಳುಹಿಸಿದ್ದು, ವರದಿ ಸಂಗ್ರಹಿಸುವುದು.
6) ಮೊಬೈಲ್ ಹಾಗೂ ಸಾಕ್ಷಿಗಳ ಮೊಬೈಲ್ ಫೋನ್ ಹೈದರಾಬಾದ್ ಸಿಎಫ್‌ಎಸ್‌ಎಲ್‌ಗೆ ಕಳುಹಿಸಿದ್ದು, ವರದಿಯನ್ನು ಪಡೆದುಕೊಳ್ಳುವುದು.
7) ಡಿವಿಆರ್‌ನಲ್ಲಿನ ದತ್ತಾಂಶವನ್ನು ಸಂಗ್ರಹಿಸಿದ ನಂತರ ಪರಿಶೀಲನೆ, ಎಫ್ಎಸ್ಎಲ್‌ಗೆ ಕಳುಹಿಸಿ ವರದಿಯನ್ನ ಪಡೆಯುವುದು.
8) ಪ್ರಕರಣದ ವೇಳೆ ಆರೋಪಿಗಳು ಸಂಪರ್ಕಿಸಿದ ಹಲವು ಸಾಕ್ಷಿದಾರರನ್ನ ವಿಚಾರಣೆ ಮಾಡಿ ಹೇಳಿಕೆ ಪಡೆಯುವುದು.
9) ಪ್ರತ್ಯಕ್ಷ ಹಾಗೂ ಪರೋಕ್ಷ ಸಾಕ್ಷಿದಾರರನ್ನ ವಿಚಾರಣೆ ಮಾಡಿ ಹೇಳಿಕೆಗಳನ್ನು ಹಾಗೂ CrPC ಸೆಕ್ಷನ್ 164 ಅಡಿ ಹೇಳಿಕೆಗಳನ್ನು ಪಡೆದುಕೊಳ್ಳವುದು.
10) ಪ್ರಕರಣದ ಸಾಕ್ಷಿದಾರರನ್ನ ಸಾಕ್ಷಿ ನುಡಿಯದಂತೆ ಬೆದರಿಕೆ ಹಾಕುವ ಮತ್ತು ವ್ಯವಸ್ಥಿತ ರೀತಿಯನ್ನು ಸಾಕ್ಷ್ಯನಾಶ ಪಡಿಸುವ ಸಾಧ್ಯತೆ
ಬೆಂಗಳೂರು: ಕೆ.ಆರ್ ನಗರ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಹೆಚ್.ಡಿ ರೇವಣ್ಣ ಪತ್ನಿ ಭವಾನಿಯವರ ಮಧ್ಯಂತರ ಜಾಮೀನು ಅವಧಿಯನ್ನು ಹೈಕೋರ್ಟ್ ವಿಸ್ತರಣೆ ಮಾಡಿದೆ. ಮುಂದಿನ ಆದೇಶದವರೆಗೆ ಜಾಮೀನು ವಿಸ್ತರಣೆಗೊಂಡಿದೆ. ಈ ಮೂಲಕ ಭವಾನಿ ರೇವಣ್ಣ ಅವರ ಮಧ್ಯಂತರ ಜಾಮೀನು ರದ್ದು ಕೋರಿ ಎಸ್‌ಐಟಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ
ಕೋರ್ಟ್‌ನಲ್ಲಿ ವಾದ-ಪ್ರತಿವಾದ ಹೇಗಿತ್ತು?
ಭವಾನಿ ರೇವಣ್ಣ ಅವರ ಮಧ್ಯಂತರ ಜಾಮೀನು ಅವಧಿಯನ್ನು ರದ್ದುಗೊಳಿಸುವಂತೆ ಕೋರಿ ಎಸ್‌ಐಟಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ. ಕೃಷ್ಣದೀಕ್ಷಿತ್ ಅವರಿದ್ದ ಪೀಠ ವಿಚಾರಣೆ ನಡೆಸಿತು. ಭವಾನಿ ರೇವಣ್ಣ ಅವರಿಗೆ ನೀಡಿದ್ದ ಮಧ್ಯಂತರ ಜಾಮೀನು ಅವಧಿಯನ್ನು ವಜಾಗೊಳಿಸುವಂತೆ ಎಸ್‌ಐಟಿ ಪರ ವಕೀಲರು ರದ್ದು ಮಾಡುವಂತೆ ಮನವಿ ಮಾಡಿದ್ದರು.
ಭವಾನಿ ಅವರು ಸರಿಯಾಗಿ ವಿಚಾರಣೆಗೆ ಸಹಕಾರ ನೀಡುತ್ತಿಲ್ಲ, ಸುಳ್ಳು ಮಾಹಿತಿ ನೀಡುತ್ತಾ ಇದ್ದಾರೆ. ನಮ್ಮ ಬಳಿ ಇರುವ ಸಾಕ್ಷ್ಯಗಳನ್ನು ಒಪ್ಪುತ್ತಿಲ್ಲ. ರಿಲೀಫ್ ಸಿಕ್ಕಿದ್ದನ್ನ ದುರುಪಯೋಗ ಮಾಡಿಕೊಳ್ತಾ ಇದ್ದಾರೆ ಎಂದು ಎಸ್‌ಐಟಿ ಪರ ವಕೀಲರಾದ ಜಗದೀಶ್ ವಾದ ಮಂಡನೆ ಮಾಡಿದರು. ಈ ವೇಳೆ ನ್ಯಾಯಪೀಠ ಕೆಲಹೊತ್ತು ವಿಚಾರಣೆ ಮುಂದೂಡಿತ್ತು.
ಪುನಃ ವಿಚಾರಣೆ ಆರಂಭಗೊಂಡ ನಂತರ ಎಸ್‌ಐಟಿ ಪರ ರವಿಕುಮಾರ್ ವರ್ಮ ವಾದ ಮಂಡಿಸಿದರು. ಭವಾನಿ ವಿಚಾರಣೆಗೆ ಸಹಕರಿಸುತ್ತಿಲ್ಲ, ಭವಾನಿ ಅವರ ಮಗನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಗಂಡನ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ಇದೆ. ಇಬ್ಬರೂ ಮೊಬೈಲ್ ಅನ್ನು ಕೊಡುತ್ತಿಲ್ಲ. ತನಿಖೆಗೆ ಸಹಕಾರವನ್ನೂ ನೀಡುತ್ತಿಲ್ಲ ಎಂದು ವಾದಿಸಿದರು. ಈ ವೇಳೆ ಜಡ್ಜ್ ಭವಾನಿ ಅವರಿಗೆ ಎಷ್ಟು ಪ್ರಶ್ನೆ ಕೇಳಿದ್ದೀರಿ? ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ವಕೀಲರು 30 ಪ್ರಶ್ನೆ ಕೇಳಿದ್ರೆ 2ಕ್ಕೆ ಉತ್ತರ ನೀಡಿದ್ದಾರೆ ಎಂದು ತಿಳಿಸಿದರು.
ಮುಂದುವರಿದು, ಭವಾನಿ ಅವರ ಬಂಧನ ಅನಿವಾರ್ಯತೆ ಇದೆ. ಆಕೆಯಿಂದ ಮೊಬೈಲ್ ಮತ್ತು ಸಿಮ್ ಕಾರ್ಡ್ಗಳನ್ನು ವಶಕ್ಕೆ ಪಡೆಯಬೇಕು. ಸಿಮ್‌ಕಾರ್ಡ್ಗಳು ಆಕೆ ಸಾಕಷ್ಟು ಬದಲು ಮಾಡಿದ್ದಾರೆ. ಭವಾನಿಗೆ ನೋಟಿಸ್ ನೀಡಿದರೂ ವಿಚಾರಣೆಗೆ ಹಾಜರಾಗಿಲ್ಲ ವಿಚಾರಣೆಗೆ ಹಾಜರಾಗದೇ ಇದ್ದಾಗ ನೋಟಿಸ್ ಮೇಲೆ ವಾರೆಂಟ್ ಪಡೆಯಲಾಗಿದೆ. ಅರೆಸ್ಟ್ ವಾರೆಂಟ್ ಆಕೆಯ ವಿರುದ್ಧ ಇದೆ ಎಂದು ವಾದಿಸಿದರು.
ನಂತರ ನ್ಯಾ. ದೀಕ್ಷಿತ್, ಸಂತ್ರಸ್ತರಿಗೆ ಸಂಬಂಧಿಸಿದ್ದು ಎನ್ನಲಾದ ಪೆನ್‌ಡ್ರೈವ್ ವಿಡಿಯೊಗಳು ದೇಶಾದ್ಯಂತ ಓಡಾಡಿವೆ. ಅವರ ಗತಿ ಏನಾಗಬೇಕು? ಸಂತ್ರಸ್ತೆಯ ಮರ್ಯಾದೆ ಹಾಳಾಗಿದೆ, ಸರ್ಕಾರ ಇದರ ಬಗ್ಗೆ ಯಾಕೆ ಮುತುವರ್ಜಿ ವಹಿಸಿದೆ? ಎಂದು ಮರು ಪ್ರಶ್ನೆ ಮಾಡಿದರು. ಇದಕ್ಕೆ ವಕೀಲರು, 40 ಸಾವಿರ ಪೆನ್‌ಡ್ರೈವ್ ಅನ್ನು ಮನೆ ಮನೆಗೆ ಹೋಗಿ ಹಂಚಿದ್ದಾರೆ, ಪೆನ್‌ಡ್ರೈವ್ ಹಂಚಿದವರನ್ನ ಅರೆಸ್ಟ್ ಮಾಡಿದ್ದೀವಿ ಎಂದು ಕೋರ್ಟ್‌ಗೆ ತಿಳಿಸಿದರು. ವಾದ ಪ್ರತಿವಾದಗಳನ್ನು ಆಲಿಸಿದ ಕೋರ್ಟ್ ಎಸ್‌ಐಟಿ ಅರ್ಜಿಯನ್ನು ವಜಾಗೊಳಿಸಿ, ಮುಂದಿನ ಆದೇಶದ ವರೆಗೆ ಮಧ್ಯಂತರ ಜಾಮೀನು ಅವಧಿ ವಿಸ್ತರಣೆ ಮಾಡಿ ಆದೇಶಿಸಿತು.
ಬೆಂಗಳೂರು: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿದ್ದ ಪೋಕ್ಸೋ ಕೇಸ್‌ನಲ್ಲಿ (POCSO Case) ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ (BS Yediyurappa) ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಯಾಗಿದ್ದು, ಯಾವುದೇ ಕ್ಷಣದಲ್ಲಿ ಬಂಧಿಸುವ ಸಾಧ್ಯೆತೆಯಿದೆ ಎಂದು ಸಿಐಡಿ ಅಧಿಕಾರಿ ಮೂಲಗಳು ತಿಳಿಸಿವೆ.
ಕೋರ್ಟ್‌ನಲ್ಲಿ ವಾದ ಪ್ರತಿವಾದ ಹೇಗಿತ್ತು?: ಸಿಐಡಿ (CID) ಪರ ವಾದ ಮಂಡಿಸಿದ್ದ ಎಸ್‌ಪಿಪಿ ಅಶೋಕ್ ನಾಯಕ್, ನ್ಯಾಯಾಧೀಶರ ಮುಂದೆ ದೂರಿನ ಸಾರಾಂಶವನ್ನು ಓದಿದರು. ಅಲ್ಲದೇ ಯಡಿಯೂರಪ್ಪ ಅವರು ದೆಹಲಿಯಲ್ಲಿ ಇರುವುದಾಗಿ ಹೇಳಿದ್ದು, ಜೂನ್ 17 ರಂದು ವಿಚಾರಣೆ ಬರುತ್ತೀನಿ ಅಂತ ಹೇಳಿರೋದು ಪ್ರಾಮಾಣಿಕ ಹೇಳಿಕೆ ಅಲ್ಲ. ಅವರ ಲೋಕೇಷನ್ ಪತ್ತೆ ಆಗುತ್ತಿಲ್ಲ, ಇಂತಹ ಸಂದರ್ಭದಲ್ಲಿ ತನಿಖಾಧಿಕಾರಿಯಾಗಿ ಅರೆಸ್ಟ್ ಮಾಡುವ ಕ್ರಮ ಮಾಡಲೇಬೇಕಾಗಿದೆ ಎಂದು ಹೇಳಿದ್ದಾರೆ.
ವಿಕ್ಟೀಮ್ಸ್ ಅನ್ನು ಖರೀದಿ ಮಾಡೋದಕ್ಕೆ ಪ್ರಯತ್ನ ಮಾಡುತ್ತಿದ್ದಾರೆ. ಆರೋಪಿ ಬಾರಿ ಪ್ರಭಾವಿಯಾಗಿದ್ದಾರೆ. ಎರಡು ಬಾರಿ ಸಿಎಂ ಆಗಿದ್ದವರು, ಅವರ ಮಗ ಪಕ್ಷವೊಂದರ ರಾಜ್ಯಾಧ್ಯಕ್ಷರಾಗಿದ್ದು, ಶಾಸಕರೂ ಆಗಿದ್ದಾರೆ. ಇನ್ನೋಬ್ಬ ಮಗ ಎಂಪಿ ಇಷ್ಟೇಲ್ಲಾ ಪ್ರಭಾವ ಇರುವ ವ್ಯಕ್ತಿಯನ್ನು ಪತ್ತೆ ಹಚ್ಚೋದು ಕಷ್ಟ. ಈಗಾಗಲೇ ಅವರ ಲೊಕೇಷನ್ ಪತ್ತೆಯಾಗ್ತಾ ಇಲ್ಲ ಎಂದು ವಾದ ಮಂಡಿಸಿದರು. ಬಳಿಕ ಇಷ್ಟೆಲ್ಲ ಆಧಾರ ಇದ್ದರೂ ಯಾಕೆ ಅವರನ್ನ ಕೂಡಲೇ ಬಂಧನ ಮಾಡಿಲ್ಲ ಎಂದು ನ್ಯಾಯಾಧೀಶರಿಂದ ಎಸ್‌ಪಿಪಿಗೆ ಪ್ರಶ್ನೆ ಮಾಡಿದರು. ಆಗ ಸಾಕ್ಷ್ಯಗಳನ್ನು ಸಂಗ್ರಹ ಮಾಡಲಾಗುತ್ತಿತ್ತು ಎಂದು ಎಸ್‌ಪಿಪಿ ಉತ್ತರಿಸಿದರು. ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಕೇಸ್: ತಪ್ಪಿತಸ್ಥರಿಗೆ ಶಿಕ್ಷೆಯಾಗೋವರೆಗೂ ಪ್ರಾಮಾಣಿಕ ತನಿಖೆ ನಡೆಸಬೇಕು: ಬೊಮ್ಮಾಯಿ
ಇದೀಗ ಸಾಕ್ಷ್ಯ ನಾಶ ಮತ್ತು ಹಣದ ಆಮಿಷದ ಸಾಕ್ಷ್ಯಗಳನ್ನು ಸಮಗ್ರವಾಗಿ ಸಂಗ್ರಹಿಸಲಾಗಿದೆ. ಹೀಗಾಗಿ ಅರೆಸ್ಟ್ ವಾರೆಂಟ್ ಕೊಡಬೇಕು ಎಂದು ವಾದಿಸಿದರು. ವಾದ ಪ್ರತಿವಾದಗಳನ್ನು ಆಲಿಸಿದ ಬಳಿಕ ಕೋರ್ಟ್ ಜಾಮೀನು ರಹಿತ ಬಂಧನ ವಾರಂಟ್ ಜಾರಿಗೆ ಆದೇಶಿಸಿತು.
ಏನಿದು ಕೇಸ್?
ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಕಳೆದ ಮಾರ್ಚ್ 14ರಂದು ನೀಡಲಾಗಿದ್ದ ದೂರಿನ ಅನ್ವಯ ಪೋಕ್ಸೋ ಪ್ರಕರಣ ದಾಖಲಿಸಲಾಗಿತ್ತು. ಕಳೆದ ಫೆಬ್ರವರಿಯಲ್ಲಿ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿತ್ತು. ಈ ಸಂಬAಧ ಸಂತ್ರಸ್ತೆಯ ತಾಯಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ವಿರುದ್ಧ ಪೋಕ್ಸೊ ಮತ್ತು 354 (ಎ) ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಬಳಿಕ ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ಹಸ್ತಾಂತರಿಸಿತ್ತು. ಪ್ರಕರಣ ಕೈಗೆತ್ತಿಕೊಂಡಿರುವ ಸಿಐಡಿ ತನಿಖಾಧಿಕಾರಿಗಳು ನೋಟಿಸ್ ಜಾರಿಗೊಳಿಸಿದ್ದಾರೆ. 41(ಒ) ಸಿಆರ್‌ಪಿಸಿ ಅಡಿಯಲ್ಲಿ ನೋಟಿಸ್ ಜಾರಿಗೊಳಿಸಲಾಗಿದೆ. ಈ ನಡುವೆ ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ರದ್ದು ಕೋರಿ ಯಡಿಯೂರಪ್ಪ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಬೆನ್ನಲ್ಲೇ ಸರ್ಕಾರದ ವಿಶೇಷ ಅಭಿಯೋಜಕರಾಗಿ ಅಶೋಕ್ ನಾಯ್ಕ್ ಅವರನ್ನ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.
ಶಿವಮೊಗ್ಗ: ಸಿಬಿಐ ತನಿಖೆಗೆ ವಹಿಸಿರುವ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಅವರ ಪ್ರಕರಣವನ್ನು ಸಚಿವ ಸಂಪುಟ ಹಿಂಪಡೆಯುವ ನಿರ್ಧಾರ ಮಾಡಿರುವುದು ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಮಾನ. ಕಳ್ಳ ಯಾವತ್ತಿದ್ದರೂ ಕಳ್ಳನೇ. ಸಿದ್ದರಾಮಯ್ಯ ರಾಜಕೀಯ ಜೀವನದಲ್ಲಿ ಇದೊಂದು ಕಪ್ಪು ಚುಕ್ಕೆ. ಡಿಕೆಶಿ ಸಲುವಾಗಿ ಸಿದ್ದರಾಮಯ್ಯ ಕಪ್ಪು ಚುಕ್ಕೆ ಅಂಟಿಸಿಕೊಂಡಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ (KS Eshwarappa) ಕಿಡಿ ಕಾರಿದ್ದಾರೆ.
ಮಹತ್ವದ ಬೆಳವಣಿಗೆಯಲ್ಲಿ ಹಿಂದಿನ ಬಿಜೆಪಿ ಸರ್ಕಾರವು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ವಿರುದ್ಧ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ (CBI Investigation) ವಹಿಸಿದ್ದ ನಿರ್ಧಾರವನ್ನು ಹಿಂಪಡೆಯಲು ಗುರುವಾರ (ನ.23) ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಈಶ್ವರಪ್ಪ ಮಾತನಾಡಿದ್ದಾರೆ. ಇದನ್ನೂ ಓದಿ: ಸೂರ್ಯ ಬೆಂಕಿ ಆಟ- ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ರೋಚಕ ಗೆಲುವು
ಡಿಕೆಶಿ ವಿರುದ್ಧದ ಸಿಬಿಐ (CBI Case) ಕೇಸನ್ನು ಸಚಿವ ಸಂಪುಟ ವಾಪಸ್ ತಗೊಂಡಿರೋದು ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಮಾನ. ಕಳ್ಳ ಯಾವತ್ತಿದ್ದರೂ ಕಳ್ಳನೇ, 135 ಸೀಟ್ ಬಂದಿದೆ ಅಂತ ಮಾಡಬಾರದ್ದನ್ನೆಲ್ಲಾ ಮಾಡ್ತಿದ್ದಾರೆ. 23 ಕೋಟಿ ಇದ್ದ ವರಮಾನ 163 ಕೋಟಿಗೆ ಹೆಚ್ಚಳವಾಗಿದೆ. ಯಡಿಯೂರಪ್ಪ (BS Yediyurappa) ಸಿಎಂ ಆಗಿದ್ದಾಗ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಕೊಟ್ಟಿದ್ದರು. ಡಿಕೆಶಿ ನ್ಯಾಯಾಲಯಕ್ಕೆ ಹೋದರೂ ಅಲ್ಲಿ ತಿರಸ್ಕಾರವಾಯ್ತು. ಇದು ಇಡೀ ದೇಶಕ್ಕೆ ಗೊತ್ತು. ಸಿಬಿಐ ತನಿಖೆ ಅಂತಿಮ ಹಂತಕ್ಕೆ ಬಂದಿರುವಾಗ ಈ ರೀತಿ ಮಾಡೋದು ಸರಿಯಲ್ಲ. ಕೇಡಿ ಸಿದ್ದು ಸಚಿವ ಸಂಪುಟ ಕಳ್ಳರ ಗುಂಪಾಗಿದೆ, ಕೇಡಿ ಸಿದ್ದು ಅವರ ದರೋಡೆಕೋರರ ತಂಡ ದುರುಪಯೋಗ ಮಾಡಿಕೊಂಡಿದೆ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.
ಸಚಿವ ಕೆ.ಜೆ ಜಾರ್ಜ್ ಮೇಲೆ ಆಪಾದನೆ ಬಂದಾಗ ರಾಜೀನಾಮೆ ಕೊಟ್ಟು ನಂತರ ಸಚಿವ ಸಂಪುಟಕ್ಕೆ ಸೇರಿದರು. ನನ್ನ ಮೇಲೆ ಆಪಾದನೆ ಬಂತು ನಾನು ರಾಜೀನಾಮೆ ಕೊಟ್ಟೆ. ಸುಪ್ರೀಂ ಕೋರ್ಟ್ ತಜ್ಞರು ಹೇಳ್ತಿದ್ದಾರೆ ಸಿಬಿಐಗೆ ತನಿಖೆಗೆ ವಹಿಸಲು ಅನುಮತಿ ಇದೆ, ಆದ್ರೆ ಹಿಂಪಡೆಯಲು ಅನುಮತಿ ಬೇಕಿಲ್ಲ. ಸಿದ್ದರಾಮಯ್ಯ ಅವರಿಗೆ ಈ ವಿಷಯ ಗೊತ್ತಿಲ್ವಾ. ಡಿಕೆಶಿ ಕೇಸನ್ನ ವಾಪಸ್ ಪಡೆಯಬೇಕು ಅಂತಾ ಸಚಿವ ಸಂಪುಟ ಸಭೆಗೆ ಹೋಗಿಲ್ಲ. ಇದು ದೇಶದಲ್ಲೇ ದೊಡ್ಡ ಅಪರಾಧ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: T20 ಕದನಕ್ಕೆ ವಿಶ್ವಕಪ್ ದಾಖಲೆ ಉಡೀಸ್ – ಏಕಕಾಲಕ್ಕೆ ಕರ್ನಾಟಕದ ಜನಸಂಖ್ಯೆಗಿಂತಲೂ ಅಧಿಕ ಮಂದಿ ವೀಕ್ಷಣೆ
ಸಚಿವ ಸಂಪುಟ ದುರ್ಬಳಕೆ ಮಾಡಿಕೊಳ್ಳುತ್ತಿರುವ ಮೊದಲ ವ್ಯಕ್ತಿ ಡಿಕೆಶಿ, ನಮಗೂ ಮುಂದೆ ಇಂತಹ ಸ್ಥಿತಿ ಬರಬಹುದು ಅಂತ ಅವರ ಕೇಂದ್ರದ ನಾಯಕರು ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಒಪ್ಪಿಕೊಂಡಿರಬಹುದು. ಸಿದ್ದರಾಮಯ್ಯ ಅವರಿಗೆ ಖುರ್ಚಿ ಮುಖ್ಯವೇ ಹೊರತು ನ್ಯಾಯವಲ್ಲ. ಸಂವಿಧಾನದ ಬಗ್ಗೆ ಉದ್ದುದ್ದ ಭಾಷಣ ಮಾಡುವ ನಾಯಕರಿಗೆ ಇದು ಗೊತ್ತಿಲ್ಲವೇ? ಕಾಂಗ್ರೆಸ್ ನಾಯಕರಿಗೆ ನಾಚಿಕೆ ಆಗಬೇಕು ಎಂದು ಆಕ್ರೋಶ ಹೊರಹಾಕಿದ್ದಾರೆ.
ಕಾಂಗ್ರೆಸ್ ಸರ್ಕಾರ ಗೂಂಡಾಗಳಿಗೆ ರಕ್ಷಣೆ ಕೊಡುವ ಸರ್ಕಾರವಾಗಿದೆ. ಕರ್ನಾಟಕದ ಗ್ಯಾರಂಟಿ ಯೋಜನೆಯಲ್ಲಿ ಮೋಸ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ. ಮುಂದಿನ ಚುನಾವಣೆಯಲ್ಲಿ ಜನ ಬುದ್ಧಿ ಕಲಿಸುತ್ತಾರೆ. ಸಚಿವ ಸಂಪುಟಕ್ಕೆ ಬೆಲೆ ಇಲ್ಲ ಅಂತಾ ಇವರು ತೀರ್ಮಾನ ಮಾಡಿದ್ರು. ಸಂವಿಧಾನಕ್ಕೆ ಬೆಲೆ ಇದೆ ಅಲ್ಲಿ ಸರಿಯಾದ ತೀರ್ಪು ಬರುತ್ತದೆ, ಸಿಬಿಐ ತನಿಖೆಯಿಂದ ಡಿಕೆಶಿ ಕೇಸನ್ನು ಹಿಂಪಡೆಯುವ ನಿರ್ಧಾರವನ್ನು ಕೈಬಿಡಬೇಕು. ಸಿಬಿಐ ತಪ್ಪಿತಸ್ಥನಲ್ಲ ಅಂದ್ರೆ ಡಿಕೆಶಿ ಡಿಸಿಎಂ ಅಲ್ಲ ಸಿಎಂ ಬೇಕಾದರೂ ಆಗಲಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮೆಗಾ ರಿಯಾಲಿಟಿ ಚೆಕ್‍ಗೆ ಭರ್ಜರಿ ಇಂಪ್ಯಾಕ್ಟ್- PUBLiC TVಗೆ ಸಾರ್ವಜನಿಕರು ಧನ್ಯವಾದ
ಇದೇ ವೇಳೆ ಜಾತಿಗಣತಿ ವರದಿ ಜಾರಿ ವಿಚಾರ ಕುರಿತು ಮಾತನಾಡಿ, 9 ವರ್ಷಗಳ ಹಿಂದೆ ಸಿದ್ದರಾಮಯ್ಯ ಜಾತಿ ಗಣತಿ ವರದಿ ಬಿಡುಗಡೆ ಮಾಡ್ತೀನಿ ಅಂದ್ರು ಮಾಡಲಿಲ್ಲ. ಆಗ ಮಾಡಿದ್ದರೆ ಈ ಸಮಸ್ಯೆ ಬರುತ್ತಿರಲಿಲ್ಲ. ಮೂಲ ಪ್ರತಿ ಕಳೆದಿದೆ ಅಂತಾ ಸಿಎಂ ಹೇಳ್ತಾರೆ, ಮೂಲ ಪ್ರತಿ ಕಳೆದಿಲ್ಲ ಅಂತಾ ಪರಮೇಶ್ವರ್ ಹೇಳ್ತಾರೆ. ಆಗ ಜಾತಿಜನಗಣತಿ ವರದಿ ಬಿಡುಗಡೆ ಮಾಡಿದ್ದರೇ ಜಾತಿ ಜಾತಿ ನಡುವೆ ಸಂಘರ್ಷ ಆಗ್ತಿರಲಿಲ್ಲ. ಜಾತಿ ಜನಗಣತಿಯ ಸಂಘರ್ಷಕ್ಕೆ ಸಿಎಂ ಸಿದ್ದರಾಮಯ್ಯ ಕಾರಣ ಎಂದು ದೂರಿದ್ದಾರೆ.
ಸಿದ್ದರಾಮಯ್ಯ ಹಿಂದುಳಿದವರಿಗೆ ದಲಿತರಿಗೆ ದ್ರೋಹ ಮಾಡ್ತಿದ್ದಾರೆ. ಡಿಕೆಶಿ ಅರ್ಧ ಆಯಸ್ಸು ಕೋರ್ಟಿಗೆ ಅಲೆಯುತ್ತಿದ್ದಾರೆ. ಸಚಿವ ಸಂಪುಟದ ಪಾವಿತ್ರ‍್ಯತೆ ಹಾಳು ಮಾಡ್ತಿದ್ದಾರೆ. ತನಿಖೆ ಮುಂದುವರಿದರೆ ನೂರಕ್ಕೆ ನೂರರಷ್ಟು ಡಿಕೆಶಿ ವಿರುದ್ದವಾಗಿ ತೀರ್ಪು ಬರಲಿದೆ. ಡಿಕೆಶಿ ಜೈಲಿಗೆ ಹೋಗ್ತಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ. ಇದರಿಂದ ತಪ್ಪಿಸಿಕೊಳ್ಳಲು ಈ ರೀತಿ ಮಾಡ್ತಿದ್ದಾರೆ. ಸಿದ್ದರಾಮಯ್ಯ ರಾಜಕೀಯ ಜೀವನದಲ್ಲಿ ಇದೊಂದು ಕಪ್ಪು ಚುಕ್ಕೆ. ಡಿಕೆಶಿ ಸಲುವಾಗಿ ಸಿದ್ದರಾಮಯ್ಯ ಕಪ್ಪು ಚುಕ್ಕೆ ಅಂಟಿಸಿಕೊಂಡಿದ್ದಾರೆ ಎಂದು ಕೆಂಡಕಾರಿದ್ದಾರೆ.
ಬೆಂಗಳೂರು: ಲೋಕಸಭೆ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇರುವಾಗ ಜೆಡಿಎಸ್‌ಗೆ ಬಿಗ್ ಶಾಕ್ ತಗುಲಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಸಲ್ಲಿಸಿದ ಅಫಿಡವಿಟ್‌ನಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ಕಾರಣಕ್ಕೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಂಸತ್ ಸದಸ್ಯತ್ವವನ್ನು ಹೈಕೋರ್ಟ್ ರದ್ದುಗೊಳಿಸಿದೆ.
ಆದ್ದರಿಂದ ಪ್ರಜ್ವಲ್ ರೇವಣ್ಣ ಅವರ ಮುಂದಿನ ನಡೆ ಏನು ಎಂಬುದು ಕುತೂಹಲ ಕೆರಳಿಸಿದೆ. ಪ್ರಜ್ವಲ್ ರೇವಣ್ಣ ಅವರಿಗೆ ಒಂದು ತಿಂಗಳು ಕಾಲವಕಾಶವಿದ್ದು, ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಅರ್ಜಿ ಸಲ್ಲಿಸಬಹುದಾಗಿದೆ. ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ನಿಂದ ತಡೆ ತರಬಹುದು. ಒಂದು ವೇಳೆ ತಡೆಯಾಜ್ಞೆ ನೀಡದಿದ್ದರೆ ಆಯ್ಕೆ ಅಸಿಂಧು ಆಗಲಿದೆ. ಇದನ್ನೂ ಓದಿ: Exclusive: ಅನರ್ಹಗೊಂಡ ಬಳಿಕ ಫಸ್ಟ್ ರಿಯಾಕ್ಷನ್ – ಇದೆಲ್ಲ ದೇವರ ಪರೀಕ್ಷೆ ಎಂದ ಪ್ರಜ್ವಲ್ ರೇವಣ್ಣ
ಪ್ರಜ್ವಲ್ ಮೇಲಿನ ಆರೋಪಗಳೇನು?
ನೆಲಮಂಗಲ ಬಳಿಯ 265 ಎಕರೆ ಜಮೀನು ಘೋಷಣೆ ಮಾಡಿಲ್ಲ. ಬೇನಾಮಿ ಆಸ್ತಿ ಹೊಂದಿದ್ದಾರೆ, ಆದಾಯ ಮುಚ್ಚಿಟ್ಟಿದ್ದಾರೆ. ಚುನಾವಣೆಯಲ್ಲಿ ಗೆಲ್ಲಲು ಅಕ್ರಮ ಮತದಾನ ಮಾಡಿಸಿದ್ದಾರೆ. ಬೂತ್‌ನಲ್ಲಿ ಕುಳಿತು ಮತ ಹಾಕಿಸಿದ್ದಾರೆ ಎಂದು ಆರೋಪಿಸಿ ಅರ್ಜಿದಾರರು ಹೈಕೋರ್ಟ್ ಮೊರೆ ಹೋಗಿದ್ದರು. ಈ ಅರ್ಜಿಯನ್ನು ಸುದೀರ್ಘ 4 ವರ್ಷ ವಿಚಾರಣೆ ನಡೆಸಿದ ಹೈಕೋರ್ಟ್ ಈಗ ತೀರ್ಪು ನೀಡಿದೆ. ಈ ಬಗ್ಗೆ ಶಾಸಕ ಎ ಎಂಜು ಮತ್ತು ದೇವರಾಜೇಗೌಡ ಸಂತಸ ವ್ಯಕ್ತಪಡಿಸಿದ್ದಾರೆ. ಯಾರು ಸುಳ್ಳು ಮಾಹಿತಿ ಕೊಡಬಾರದು ಎಂದಿದ್ದಾರೆ. ಕಾನೂನಿಗೆ ತಲೆಬಾಗೋದಾಗಿ ಪ್ರಜ್ವಲ್ ರೇವಣ್ಣ ಮತ್ತು ಶಾಸಕ ಹೆಚ್.ಡಿ ರೇವಣ್ಣ ಅಭಿಪ್ರಾಯಪಟ್ಟಿದ್ದಾರೆ. ಇದೀಗ ಅನರ್ಹ ಸಂಸದ ಪ್ರಜ್ವಲ್ ರೇವಣ್ಣ ಮುಂದಿನ ಕಾನೂನು ಹೋರಾಟಕ್ಕೆ ಆಣಿಯಾಗ್ತಿದ್ದಾರೆ.
ಲೋಕಸಮರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಪರಾಜಿತರಾಗಿದ್ದ ಹಾಲಿ ಜೆಡಿಎಸ್ ಶಾಸಕ ಎ ಮಂಜು ಮತ್ತು ದೇವರಾಜೇಗೌಡ ಅರ್ಜಿಯನ್ನ ನ್ಯಾ.ನಟರಾಜನ್ ಪೀಠ ಭಾಗಶಃ ಪುರಸ್ಕರಿಸಿದೆ. ಮೇಲ್ಮನವಿಗೆ ತಿಂಗಳ ಸಮಯ ನೀಡಿದೆ. ಇನ್ನು ಪ್ರಜ್ವಲ್ ಚುನಾವಣಾ ಅಕ್ರಮದಲ್ಲಿ ಭಾಗಿಯಾಗಿರುವ ಕಾರಣ ತನ್ನನ್ನು ವಿಜೇತರನ್ನಾಗಿ ಘೋಷಿಸಬೇಕು ಎಂಬ ಎ.ಮಂಜು ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿದೆ. ಇದನ್ನೂ ಓದಿ: ಹೆಚ್.ಡಿ. ರೇವಣ್ಣ ಕುಟುಂಬವನ್ನ ರಾಜಕೀಯದಿಂದ ಶಾಶ್ವತವಾಗಿ ತೆಗೆಯುವುದೇ ನನ್ನ ಗುರಿ: ದೂರುದಾರ ದೇವರಾಜೇಗೌಡ
ಅಲ್ಲದೇ, ಚುನಾವಣಾ ಅಕ್ರಮದಲ್ಲಿ ಭಾಗಿಯಾದ ಆರೋಪದ ಮೇಲೆ ಹೆಚ್.ಡಿ ರೇವಣ್ಣ, ಎಂಎಲ್‌ಸಿ ಸೂರಜ್ ರೇವಣ್ಣ, ದೂರುದಾರ ಎ ಮಂಜುಗೆ ನೋಟಿಸ್ ಜಾರಿ ಮಾಡಿದೆ. ಪ್ರಜ್ವಲ್ ರೇವಣ್ಣ ಚುನಾವಣಾ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆ.
ಕೋರ್ಟ್ ತೀರ್ಪಿನ ಬಗ್ಗೆ ಮಧ್ಯಾಹ್ನ ಗೊತ್ತಾಯ್ತು, ಕೋರ್ಟ್ ತೀರ್ಪಿಗೆ ಎಲ್ಲರೂ ತಲೆ ಬಾಗಲೇಬೇಕು. ಹಾಗಾಗಿ ಮುಂದೇನು ಮಾಡಬೇಕು ಎಂದು ನನ್ನ ತಂದೆ ಹಾಗೂ ದೇವೇಗೌಡರ (HD Devegowda) ಜೊತೆ ಚರ್ಚೆ ಮಾಡುತ್ತೇನೆ. ಹಲವು ಕಾರಣ ನೀಡಿ ದೂರು ನೀಡಲಾಗಿತ್ತು ಹಾಗಾಗಿ ಯಾವ ಆಧಾರದಲ್ಲಿ ತೀರ್ಪು ಬಂದಿದೆ ನೋಡಬೇಕಾಗುತ್ತೆ. ಈ ಬಗ್ಗೆ ವಕೀಲರ ಜೊತೆಗೂ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ. ಕಾನೂನಾತ್ಮಕವಾಗಿ ಏನು ಮಾಡಬೇಕೋ ಮಾಡೇ ಮಾಡ್ತೇವೆ ಎಂದು ಹೇಳಿದ್ದಾರೆ.
ಮುಂದಿನ 6 ವರ್ಷ ಚುನಾವಣೆಗೆ ನಿಲ್ಲುವ ಹಾಗಿಲ್ಲ ಎಂಬ ಚರ್ಚೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಇಂತಹ ಆದೇಶ ಎಲ್ಲಿ ಬಂದಿದೆ? ಕೇವಲ ಸದಸ್ಯತ್ವ ಅಸಿಂಧುಗೊಳಿಸಲಾಗಿದೆ ಅಷ್ಟೇ. ಮುಂದೆ ಎಲ್ಲೆಲ್ಲಿ ಹೋಗಿ ವಕೀಲರ ಭೇಟಿ ಮಾಡಬೇಕೊ ಮಾಡ್ತಿವಿ. 6 ವರ್ಷ ನಿಲ್ಲುವ ಹಾಗಿಲ್ಲ ಎಂದು ಎಲ್ಲಿ ಹೇಳಿದ್ದಾರೆ? ಇದೆಲ್ಲವೂ ಊಹಾಪೋಹ. ವಕೀಲರೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ. ಇದೆಲ್ಲಾ ದೇವರ ಪರೀಕ್ಷೆ ಅಷ್ಟೇ, ಮುಂದೆ ಏನೇನಾಗುತ್ತೆ ನೋಡೋಣ ಯಾಕೆ ತಲೆಕೆಡಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.
ಹೈಕೋರ್ಟ್ ತೀರ್ಪಿನಲ್ಲಿ ಏನಿದೆ ಎಂಬುದನ್ನ ನಮ್ಮ ವಕೀಲರು ಹಾಗೂ ನಮ್ಮ ವರಿಷ್ಠರು ದೇವೇಗೌಡರು ಮತ್ತು ರೇವಣ್ಣ ಅವರೊಂದಿಗೆ ಇಂದು ಚರ್ಚೆ ಮಾಡಿ ಮುಂದಿನ ಕಾನೂನು ಹೋರಾಟಕ್ಕೆ ತೀರ್ಮಾನ ಮಾಡುತ್ತೇವೆ. ಈ ತಿರ್ಪೀನಿಂದ ನಾನು ಕ್ಷೇತ್ರದಲ್ಲಿ ಎಂದಿನಂತೆ ಕೆಲಸ ಮಾಡಬಹುದು. ಬೆಂಬಲಿಗರು, ಕ್ಷೇತ್ರದ ಜನರು ಅತಂಕ ಪಡುವ ಅವಶ್ಯಕತೆಯಿಲ್ಲ. ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುತ್ತೇವೆ ಎಂದು ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರು: ತಮ್ಮ ವಿರುದ್ಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹೂಡಿದ್ದ ಮಾನಹಾನಿ ಕೇಸ್ ರದ್ದುಗೊಳಿಸುವಂತೆ ಕೋರಿದ್ದ ಡಿ. ರೂಪಾ ಮೌದ್ಗಿಲ್ (Roopa Moudgil) ಅವರ ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿದೆ.
ಐಪಿಎಸ್ ಅಧಿಕಾರಿ ಡಿ. ರೂಪಾ ವಿರುದ್ಧ ರೋಹಿಣಿ ಸಿಂಧೂರಿ ಅವರು ದಾಖಲಿಸಿದ್ದ ಮಾನಹಾನಿ ಪ್ರಕರಣದ ಅರ್ಜಿಯನ್ನು ಹೈಕೋರ್ಟ್ ಸೋಮವಾರ (ಆ.21) ವಿಚಾರಣೆಗೆ ಕೈಗೆತ್ತಿಕೊಂಡಿತ್ತು. ಆದರೆ ಪ್ರಕರಣ ರದ್ದು ಕೋರಿದ್ದ ಡಿ.ರೂಪಾ ಮೌದ್ಗಿಲ್ ಅರ್ಜಿ ವಜಾಗೊಳಿಸಿದೆ. ಈ ಮೂಲಕ ಹೈಕೋರ್ಟ್ ನಲ್ಲಿ ರೂಪಾ ಮೌದ್ಗಿಲ್ ಗೆ ಹಿನ್ನಡೆ ಉಂಟಾಗಿದ್ದು, ಮತ್ತೆ ಸಂಕಷ್ಟ ಎದುರಾಗಿದೆ. ಮಾನನಷ್ಟ ಮೊಕದ್ದಮೆ ರದ್ದುಪಡಿಸಲು ಹೈಕೋರ್ಟ್ ನಕಾರ ಮಾಡಿದೆ.
ಪ್ರಕರಣದ ಹಿನ್ನೆಲೆ ಏನು?
ರೂಪಾ ಮೌದ್ಗಿಲ್ ಅವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ನನ್ನ ವಿರುದ್ಧ ಕೀಳು ಅಭಿರುಚಿಯಿಂದ ಕೂಡಿದ ಆರೋಪ ಮಾಡಿದ್ದಾರೆ. ವಿದ್ಯುನ್ಮಾನ ಮಾಧ್ಯಮದಲ್ಲೂ ಹೇಳಿಕೆ ನೀಡಿದ್ದಾರೆ. ಆ ಆರೋಪಗಳು ನನ್ನ ವ್ಯಕ್ತಿತ್ವಕ್ಕೆ ಧಕ್ಕೆ ಉಂಟು ಮಾಡುವಂತಿವೆ. ನನ್ನ ತೇಜೋವಧೆ ಮಾಡುವ ದುರದ್ದೇಶದಿಂದಲೇ ರೂಪ ಈ ಕೃತ್ಯ ಎಸಗಿದೆ. ಅದು ನನ್ನ ಖಾಸಗಿ, ಸಾಮಾಜಿಕ ಮತ್ತು ವೃತ್ತಿ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರಿ, ಮಾನಸಿಕ ಯಾತನೆ ಉಂಟು ಮಾಡಿವೆ ಎಂದು ಆರೋಪಿಸಿ ರೋಹಿಣಿ ಸಿಂಧೂರಿ (Rohini Sindhuri) ಅವರು ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಕೋರ್ಟ್ ರೂಪಾ ಅವರಿಗೆ ಸಮನ್ಸ್ ಜಾರಿಗೊಳಿಸಿತ್ತು, ಆ ನಂತರ ಕೋರ್ಟ್‌ಗೆ ಹಾಜರಾಗಿ ರೂಪಾ ಜಾಮೀನು ಪಡೆದಿದ್ದರು. ಇದನ್ನೂ ಓದಿ: ಇಬ್ಬರು ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ- ಐಪಿಎಸ್ ರೂಪಾ, ಐಎಎಸ್ ರೋಹಿಣಿ ಸಿಂಧೂರಿ ವರ್ಗಾವಣೆ
ಏನಿದು ವಿವಾದ?
ಸೋಷಿಯಲ್ ಮೀಡಿಯಾ ಮತ್ತು ಮಾಧ್ಯಮಗಳ ಮೂಲಕ ಐಎಎಸ್ ಅಧಿಕಾರಿ (IAS Officer) ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಅವರು ಬಹಿರಂಗವಾಗಿ ಕಿತ್ತಾಟಕ್ಕೆ ಇಳಿದಿದ್ದರು. ರೋಹಿಣಿ ವಿರುದ್ಧ ರೂಪಾ ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಆರೋಪ ಮಾಡಿದ್ದರು. ಬಳಿಕ ಇಬ್ಬರ ನಡುವೆ ಕಿತ್ತಾಟ ಜೋರಾಗಿತ್ತು. ಮುನೀಶ್ ಮೌದ್ಗಿಲ್ ಹೆಸರನ್ನೂ ರೂಪಾ ಆರೋಪಗಳಲ್ಲಿ ಉಲ್ಲೇಖಿಸಿದ್ದರು. ಅಧಿಕಾರಿಗಳು ಹೀಗೆ ಬಹಿರಂಗವಾಗಿ ಕಿತ್ತಾಡಬಾರದು ಎಂದು ಹಿರಿಯ ಅಧಿಕಾರಿಗಳು, ಸಚಿವರು ಸಲಹೆ ನೀಡಿದರೂ ಪ್ರಯೋಜನವಾಗಲಿಲ್ಲ. ಕೊನೆಗೆ ಇಬ್ಬರಿಗೂ ಯಾವುದೇ ಹುದ್ದೆ ತೋರಿಸದೇ ವರ್ಗಾವಣೆ ಮಾಡಲಾಗಿತ್ತು. ಇದನ್ನೂ ಓದಿ: ಡಿ.ರೂಪಾ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ರೋಹಿಣಿ