Tag: Karnataka HighCourt

  • ಸೆಕ್ಸ್ ನಡೆಸದಿರುವುದು ಹಿಂದೂ ವಿವಾಹ ಕಾಯ್ದೆ ಅಡಿ ಕ್ರೌರ್ಯ – IPC ಸೆಕ್ಷನ್ 498A ಅಡಿ ಅಲ್ಲ

    ಸೆಕ್ಸ್ ನಡೆಸದಿರುವುದು ಹಿಂದೂ ವಿವಾಹ ಕಾಯ್ದೆ ಅಡಿ ಕ್ರೌರ್ಯ – IPC ಸೆಕ್ಷನ್ 498A ಅಡಿ ಅಲ್ಲ

    ಬೆಂಗಳೂರು: ಪತಿಯಿಂದ ದೈಹಿಕ ಸಂಪರ್ಕ ನಿರಾಕರಿಸುವುದು ಹಿಂದೂ ವಿವಾಹ ಕಾಯ್ದೆ 1955ರ (Hindu Marriage Act 1955) ಅಡಿಯಲ್ಲಿ ಕ್ರೌರ್ಯವಾಗಿದೆ. ಆದ್ರೆ ಐಪಿಸಿ ಸೆಕ್ಷನ್ 498A (IPC Section) ಅಡಿಯಲ್ಲಿ ಇದು ಕ್ರೌರ್ಯವಲ್ಲ ಎಂದು ಕರ್ನಾಟಕ ಹೈಕೋರ್ಟ್ (Karnataka Highcourt) ಮಹತ್ವದ ತೀರ್ಪು ಪ್ರಕಟಿಸಿದೆ. ಈ ಮೂಲಕ ಪತಿ ಹಾಗೂ ಪೋಷಕರ ವಿರುದ್ಧ ಪತ್ನಿ ದಾಖಲಿಸಿದ ಕ್ರಿಮಿನಲ್ ಮೊಕದ್ದಮೆಯನ್ನ ವಜಾಗೊಳಿಸಿದೆ.

    ಐಪಿಸಿ ಸೆಕ್ಷನ್ 498ಎ ಮತ್ತು ವರದಕ್ಷಿಣೆ ನಿಷೇಧ ಕಾಯ್ದೆ-1961ರ (Dowry Prohibition Act) ಸೆಕ್ಷನ್ 4ರ ಅಡಿಯಲ್ಲಿ ಪತಿ ಹಾಗೂ ಪೋಷಕರ ವಿರುದ್ಧ ಆರೋಪ ಪಟ್ಟಿ ಸಲ್ಲಿಸಲಾಗಿತ್ತು. ಈ ಆರೋಪಪಟ್ಟಿಯನ್ನು ಪ್ರಶ್ನಿಸಿ ಪತಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಪೂರ್ಣಗೊಳಿಸಿದ ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಪತ್ನಿ ಸಲ್ಲಿಸಿದ ದೂರನ್ನೇ ವಜಾಗೊಳಿಸಿದೆ.

    ಪತಿ ಆಧ್ಯಾತ್ಮಿಕ ಸಾಧನೆಯತ್ತ ಮುಖ ಮಾಡಿದ್ದರು, ದೈಹಿಕ ಪ್ರೀತಿಗಿಂತ ಆತ್ಮಗಳ ಪ್ರೀತಿ ಮುಖ್ಯ ಎಂದು ನಂಬಿದ್ದರು. ಪತಿ ತನ್ನ ಹೆಂಡತಿಯೊಂದಿಗೆ ದೈಹಿಕ ಸಂಬಂಧ ಹೊಂದಲು ಎಂದಿಗೂ ಉದ್ದೇಶಿಸಿರಲಿಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಇದನ್ನೂ ಓದಿ: ಛತ್ತೀಸ್‌ಗಢದ ಮಾವಿನ ಮೇಳದಲ್ಲಿ ವಿಶ್ವದ ದುಬಾರಿ ಮಾವಿನ ಪ್ರದರ್ಶನ- ಕೆ.ಜಿಗೆ 2.70 ಲಕ್ಷ ರೂ.

    ಮಹಿಳೆಯೊಬ್ಬರು (Women) 2019ರ ಡಿ.18 ರಂದು ವ್ಯಕ್ತಿಯೊಬ್ಬರನ್ನ ವಿವಾಹವಾಗಿದ್ದರು. ವಿವಾಹವಾಗಿ 28 ದಿನ ಜೊತೆಯಲ್ಲಿದ್ದರು. ಇದಾದ ನಂತರ ಪತಿ ಆಧ್ಯಾತ್ಮಿಕ ಸಾಧನೆಯ ಕಡೆ ಮುಖ ಮಾಡಿದ್ದಾರೆ. ಅಲ್ಲದೇ ದೈಹಿಕ ಪ್ರೀತಿಗಿಂತ, ಆತ್ಮಗಳ ಪ್ರೀತಿ ಮುಖ್ಯವೆನ್ನುತ್ತಿದ್ದ ಪತಿ, ಅಧ್ಯಾತ್ಮಿಕ ಸಾಧಕಿಯೊಬ್ಬರ ಉಪನ್ಯಾಸ ವೀಕ್ಷಿಸುವಂತೆ ತನ್ನ ಪತ್ನಿಗೆ ಹೇಳುತ್ತಿದ್ದರು. ಪತಿಯ ನಡೆಯಿಂದ ಮನನೊಂದ ಪತ್ನಿ ದೈಹಿಕ ಸಂಬಂಧದಿಂದ ನಿರಾಸೆ ಹೊಂದಿ ಪತಿ ವಿರುದ್ಧ ದೂರು ದಾಖಲಿಸಿದ್ದಾರೆ.

    2020ರ ಫೆಬ್ರವರಿ 5ರಂದು ಸೆಕ್ಷನ್ 498A ಮತ್ತು ವರದಕ್ಷಿಣೆ ಕಾಯ್ದೆಯ ಅಡಿಯಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಹಿಂದೂ ವಿವಾಹ ಕಾಯ್ದೆ ಸೆಕ್ಷನ್-12(1)(A) ಅಡಿಯಲ್ಲಿ ಆಕೆ ಕೌಟುಂಬಿಕ ನ್ಯಾಯಾಲಯದಲ್ಲೂ ದಾವೆ ಹೂಡಿದ್ದರು. ಈ ಮದುವೆಯನ್ನು ರದ್ದುಗೊಳಿಸುವಂತೆ ಕೋರಿದ್ದರು. 2022ರ ನವೆಂಬರ್ 16 ರಂದು ಮದುವೆ ರದ್ದಾದ ನಂತರ ಪತಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ನಿರ್ಧರಿಸಿದರು. ಇದನ್ನೂ ಓದಿ: Odisha Train Tragedy – ವಿಚಾರಣೆ ಎದುರಿಸಿದ್ದ ಜ್ಯೂನಿಯರ್‌ ಎಂಜಿನಿಯರ್‌ ನಾಪತ್ತೆ

    ಈ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ ಈ ಕೇಸ್‌ನಲ್ಲಿ ಕ್ರಿಮಿನಲ್ ಪ್ರಕ್ರಿಯೆಗಳನ್ನು ಮುಂದುವರಿಸಲು ಅನುಮತಿಸಲಾಗುವುದಿಲ್ಲ. ಹಾಗೆ ಮಾಡಿದರೆ ಅದು ಕಾನೂನಿನ ಪ್ರಕ್ರಿಯೆಯ ದುರುಪಯೋಗವಾಗಿತ್ತದೆ ಎಂದು ಅಭಿಪ್ರಾಯಪಟ್ಟು ಪತಿ ವಿರುದ್ಧದ ಕಾನೂನು ಪ್ರಕ್ರಿಯೆಯನ್ನೇ ರದ್ದುಗೊಳಿಸಿದೆ.

  • ಮೇಕೆದಾಟು ಪಾದಯಾತ್ರೆ ವೇಳೆ ನಿಯಮ ಉಲ್ಲಂಘನೆ – ಕೇಸ್ ರದ್ದು ಮಾಡುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಡಿಕೆಶಿ

    ಮೇಕೆದಾಟು ಪಾದಯಾತ್ರೆ ವೇಳೆ ನಿಯಮ ಉಲ್ಲಂಘನೆ – ಕೇಸ್ ರದ್ದು ಮಾಡುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಡಿಕೆಶಿ

    ಬೆಂಗಳೂರು: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ನಡೆದ ಪಾದಯಾತ್ರೆ (Mekedatu Padayatra) ವೇಳೆ ಕೊರೊನಾ ನಿಯಮ ಉಲ್ಲಂಘನೆ ಮತ್ತು ಸರ್ಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದ ಮೇಲೆ ದಾಖಲಾಗಿದ್ದ ಪ್ರಕರಣಗಳನ್ನು ರದ್ದು ಮಾಡುವಂತೆ ಕೋರಿ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

    ತಮ್ಮ ವಿರುದ್ಧ ದಾಖಲಾಗಿರುವ 8 ಪ್ರಕರಣಗಳನ್ನು ರದ್ದುಮಾಡುವಂತೆ ಪ್ರತ್ಯೇಕವಾಗಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ, ಅರ್ಜಿಗಳಿಗೆ ಸಂಬಂಧಿಸಿದಂತೆ ಕಚೇರಿ ಆಕ್ಷೇಪಣೆಗಳನ್ನ ಸರಿಪಡಿಸುವಂತೆ ಸೂಚನೆ ನೀಡಿ ವಿಚಾರಣೆಯನ್ನ ಒಂದು ವಾರದ ಕಾಲ ಮುಂದೂಡಿದೆ. ಇದನ್ನೂ ಓದಿ: Karnataka Cabinet Expansion – ಪ್ರಮುಖ ಐದು ಖಾತೆಗಳಿಗೆ ಡಿಕೆ ಶಿವಕುಮಾರ್‌ ಪಟ್ಟು

    ಮೇಕೆದಾಟು ಪಾದಯಾತ್ರೆ ವೇಳೆ ಕೊರೊನಾ ನಿಯಮ ಉಲ್ಲಂಘನೆ, ಸರ್ಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ವಿವಿಧ ಠಾಣೆಗಳಲ್ಲಿ 8 ಕೇಸ್ ದಾಖಲಾಗಿದ್ದವು. ತಮ್ಮ ವಿರುದ್ಧ ದಾಖಲಾದ ಪ್ರಕರಣಗಳನ್ನ ರದ್ದು ಮಾಡುವಂತೆ ಡಿಕೆಶಿ ಹೈಕೋರ್ಟ್ (Karnataka Highcourt) ಮೆಟ್ಟಿಲೇರಿದ್ದರು. ಇದನ್ನೂ ಓದಿ: ಜೂನ್ ಯಾಕೆ? ನಾಳೆಯೇ ನಮ್ಮ ಮನೆ ಹತ್ರ ಬಂದು ಮಲ್ಕೊಳ್ಳಲಿ: ಪ್ರತಾಪ್ ಆರೋಪಕ್ಕೆ ಡಿಕೆಶಿ ವ್ಯಂಗ್ಯ

  • ಎಲೆಕ್ಷನ್ ಹೊತ್ತಿನಲ್ಲೇ ಡಿಕೆಶಿಗೆ ಶಾಕ್ – CBI ತನಿಖೆಗೆ ಕೋರ್ಟ್ ಅಸ್ತು

    ಎಲೆಕ್ಷನ್ ಹೊತ್ತಿನಲ್ಲೇ ಡಿಕೆಶಿಗೆ ಶಾಕ್ – CBI ತನಿಖೆಗೆ ಕೋರ್ಟ್ ಅಸ್ತು

    ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಈ ಹೊತ್ತಿನಲ್ಲೇ ಡಿಕೆಶಿಗೆ ಹೈಕೋರ್ಟ್ (Karnataka HighCourt) ಶಾಕ್ ನೀಡಿದೆ.

    ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸರ್ಕಾರದ ಆದೇಶ ಪ್ರಶ್ನಿಸಿ ಡಿ.ಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಇದನ್ನೂ ಓದಿ: ಅಕ್ರಮ ಆಸ್ತಿ ಗಳಿಕೆ ಕೇಸ್ – CBIನಿಂದ ಡಿಕೆಶಿಗೆ ಇನ್ನೂ ಒಂದು ವಾರ ರಿಲೀಫ್

    karnataka highcourt

    ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸರ್ಕಾರದ ಆದೇಶ ಪ್ರಶ್ನಿಸಿದ್ದ ಡಿಕೆಶಿ, ಸಿಬಿಐ ತನಿಖೆಗೆ (CBI Investigation) ವಹಿಸಿರುವ ಸರ್ಕಾರದ ಆದೇಶ ಸರಿಯಲ್ಲ ಎಂದು ಅರ್ಜಿ ಸಲ್ಲಿಸಿದ್ದರು. ಈ ಕುರಿತು ಪರ ವಿರೋಧ ವಾದ ಮಂಡಿಸಲಾಗಿತ್ತು. ವಾದ ವಿವಾದಗಳನ್ನು ಆಲಿಸಿದ ನಂತರ ನ್ಯಾಯಮೂರ್ತಿ ನಟರಾಜನ್ ಅವರಿದ್ದ ಏಕಸದಸ್ಯ ಪೀಠ ಅರ್ಜಿಯನ್ನು ವಜಾಗೊಳಿಸಿದೆ.

    2019 ರಲ್ಲಿ ಬಿ.ಎಸ್ ಯಡಿಯೂರಪ್ಪ ಸರ್ಕಾರ ಡಿಕೆಶಿ ವಿರುದ್ಧದ ತನಿಖೆಗೆ ಅನುಮತಿ ನೀಡಿತ್ತು. ಆಗ ರಾಜ್ಯ ಸರ್ಕಾರದ ಅನುಮತಿ ಮೇರೆಗೆ ಸಿಬಿಐ ಎಫ್‌ಐಆರ್ ದಾಖಲಿಸಿತ್ತು. ಈ ಪ್ರಕರಣದ ಆಧಾರದ ಮೇರೆಗೆ ನಟರಾಜನ್ ಅವರಿದ್ದ ಪೀಠ ಡಿಕೆಶಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಇದನ್ನೂ ಓದಿ: ಕಾಂಗ್ರೆಸ್‍ನಲ್ಲಿ ಮೊದಲೇ ಸಿಎಂ ಅಭ್ಯರ್ಥಿ ಘೋಷಣೆ ಮಾಡೋ ಸಂಸ್ಕೃತಿ ಇಲ್ಲ: ಸೋಮಣ್ಣಗೆ ಸಿದ್ದು ತಿರುಗೇಟು

    CBI 1

    ಏನಿದು ಅಕ್ರಮ ಆಸ್ತಿ ಗಳಿಕೆ ಕೇಸ್?
    ಈ ಹಿಂದೆ ಡಿಕೆಶಿ `ತಾನೊಬ್ಬ ಕೃಷಿಕ, ಕೃಷಿಯಿಂದಲೇ ನನಗೆ ಆದಾಯ ಬರುತ್ತಿದೆ’ ಎಂಬ ಹೇಳಿಕೆ ನೀಡಿದ ಬಳಿಕ ಆಸ್ತಿಯನ್ನು ಸಿಬಿಐ ಮೌಲ್ಯಮಾಪನ ಮಾಡಿತ್ತು. ಡಿಕೆಶಿಯ ಆದಾಯದ ಮೂಲ ಬೆನ್ನತ್ತಿದ್ದ ಸಿಬಿಐ, ಯಾವ ಬೆಳೆ ಬೆಳೆಯುತ್ತಾರೆ? ತೋಟದಿಂದ ಎಷ್ಟು ವರ್ಷದಿಂದ ಫಲ ಬರುತ್ತಿದೆ? ಎಷ್ಟು ಲಾಭ ಬರುತ್ತಿದೆ? ಎಷ್ಟು ವರ್ಷದಿಂದ ವಾಣಿಜ್ಯ ಬೆಳೆ ಬೆಳೆಯುತ್ತಿದ್ದಾರೆ? ಜಮೀನು ಖರೀದಿಸಿದ್ದು ಯಾವಾಗ ಎಂಬ ಬಗ್ಗೆ ದಾಖಲೆಗಳನ್ನು ವಶಕ್ಕೆ ಪಡೆದಿತ್ತು. ಅಷ್ಟೇ ಅಲ್ಲದೇ ಕೃಷಿ ಭೂಮಿಗೆ ಸಂಬಂಧಿಸಿದ ಕಳೆದ 10 ವರ್ಷದ ಪಹಣಿಯನ್ನು ಪಡೆಯಲಾಗಿತ್ತು.

  • ಏಪ್ರಿಲ್‌ 11ರ ವರೆಗೆ ಮಾಡಾಳ್‌ಗೆ ಜೈಲು – ಜೈಲಿನ ಪ್ರಕಾರವೇ ಊಟ

    ಏಪ್ರಿಲ್‌ 11ರ ವರೆಗೆ ಮಾಡಾಳ್‌ಗೆ ಜೈಲು – ಜೈಲಿನ ಪ್ರಕಾರವೇ ಊಟ

    ಬೆಂಗಳೂರು: ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ (BJP) ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ (Madal Virupakshappa) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಏಪ್ರಿಲ್‌ 11ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

    ಮಾಡಾಳ್‌ ವಿರೂಪಾಕ್ಷಪ್ಪನನ್ನ ಬಂಧಿಸಿದ ನಂತರ ಲೋಕಾಯುಕ್ತ ಪೊಲೀಸರು (Lokayukta Police) 5 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ಪಡೆದಿದ್ದರು. ಪೊಲೀಸ್‌ ಕಸ್ಟಡಿ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಶನಿವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಇದನ್ನೂ ಓದಿ: ಮಾಡಾಳ್‍ನ ಮೈಂಟೇನ್ ಮಾಡೋದೇ ‘ಲೋಕಾ’ಗೆ ಸವಾಲು- ರಾತ್ರಿಪೂರ್ತಿ ಕಣ್ಣೀರಿಡ್ತಿರೋ ಭ್ರಷ್ಟ ಮಾಡಾಳ್

    ಈ ವೇಳೆ ಮಾಡಾಳ್‌ ಪರ ವಕೀಲರು ಅವರಿಗೆ ಮನೆಯ ಊಟವನ್ನೇ ಒದಗಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಇದಕ್ಕೆ ಅನುಮತಿ ನೀಡದ ಕೋರ್ಟ್‌ (Court) ಜೈಲಿನ ಪ್ರಕಾರವೇ ಊಟ ನೀಡುವಂತೆ ಸೂಚಿಸಿದೆ. ಅಲ್ಲದೇ ಏಪ್ರಿಲ್ 6ಕ್ಕೆ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ್ದು, ಅಂದು ಆಕ್ಷೇಪಣೆ ಸಲ್ಲಿಸಲು ಲೋಕಾಯುಕ್ತ ಪೊಲೀಸರಿಗೆ ಕೋರ್ಟ್‌ ಸೂಚನೆ ನೀಡಿದೆ.

    ವಿಚಾರಣೆ ವೇಳೆ ಮಾಡಾಳ್‌ ವಿರೂಪಾಕ್ಷಪ್ಪ ಆರೋಗ್ಯ ಸಮಸ್ಯೆ ಬಗ್ಗೆ ನ್ಯಾಯಾಧೀಶರ ಮುಂದೆ ಹೇಳಿಕೊಂಡರು. ನಿನ್ನೆ ಆರೋಗ್ಯ ತಪಾಸಣೆ ನಡೆಸಿದ್ದಾರೆ ಅದರ ವರದಿ ನೋಡುವಂತೆಯೂ ಎಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಕೋರ್ಟ್‌ ಅನಾರೋಗ್ಯ ಸಮಸ್ಯೆ ಬಂದರೆ, ಜೈಲಿನಲ್ಲೇ ಆಸ್ಪತ್ರೆ ಇದೆ ಎಂದು ತಿಳಿಸಿತು. ಇದನ್ನೂ ಓದಿ: ಲೋಕಾಯುಕ್ತ ಕಚೇರಿಯಲ್ಲಿ ಕೋಟಿ ಕುಬೇರ ಮಾಡಾಳ್‍ ವಾಸ್ತವ್ಯ!

    ಕಳೆದ ಐದು ದಿನಗಳ ಹಿಂದೆಯಷ್ಟೇ ಬೆಂಗಳೂರಿಗೆ ಬರುವಾಗ ತುಮಕೂರಿನ ಕ್ಯಾತಸಂದ್ರ ಟೋಲ್‌ ಬಳಿ ಪೊಲೀಸರು ಬಂಧಿಸಿದ್ದರು. ಮರುದಿನ ಕೋರ್ಟ್‌ ವಿಚಾರಣೆಯ ವೇಳೆ ಲೋಕಾಯುಕ್ತ ಪರ ವಕೀಲರು ಜಾಮೀನು ಅರ್ಜಿಗೆ ಪ್ರಬಲವಾದ ಆಕ್ಷೇಪ ವ್ಯಕ್ತಪಡಿಸಿದ್ದರು. ಅಂತಿಮವಾಗಿ ಏಕಸದಸ್ಯ ಪೀಠ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು.

    ನಂತರ ಲೋಕಾಯುಕ್ತ ಪೊಲೀಸರು 10ದಿನ ಕಸ್ಟಡಿಗೆ ಕೇಳಿದ್ದರು. ಆದರೆ ಮಾಡಾಳ್ ಪರ ವಕೀಲರು ಆಕ್ಷೇಪಣೆ ವ್ಯಕ್ತಪಡಿಸಿದ್ದರು. ಈಗಾಗಲೇ ಸಾಕಷ್ಟು ಬಾರಿ ವಿಚಾರಣೆಗೆ ಬಂದಿದ್ದಾರೆ. ಈಗ ಮತ್ತೆ 10 ದಿನ ಅವಶ್ಯಕತೆ ಇಲ್ಲ ಎಂದು ವಾದ ಮಂಡಿಸಿದ್ದರು. 10 ದಿನ ಕಸ್ಟಡಿ ಅತ್ಯವಶ್ಯಕವಾಗಿದೆ. ಇದುವರೆಗೆ ವಿಚಾರಣೆಗೆ ಸಹಕರಿಸಿಲ್ಲ ಎಂದು ಲೋಕಾಯುಕ್ತ ಮರು ಮನವಿ ಮಾಡಿದ್ದರು. ಇಬ್ಬರ ವಾದ ಆಲಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 5 ದಿನ ಪೊಲೀಸ್ ಕಸ್ಟಡಿಗೆ ನೀಡಿತ್ತು.

  • ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಬಂಧನ

    ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಬಂಧನ

    ಬೆಂಗಳೂರು: ಮಾಡಾಳ್‌ ವಿರೂಪಾಕ್ಷಪ್ಪ (Madal Virupakshappa) ನಿರೀಕ್ಷಣಾ ಜಾಮೀನು (Anticipatory Bail) ಅರ್ಜಿ ವಜಾಗೊಂಡ ಕೆಲವೇ ಗಂಟೆಗಳಲ್ಲಿ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

    ಬೆಂಗಳೂರಿಗೆ ಬರುವಾಗ ತುಮಕೂರಿನ ಕ್ಯಾತಸಂದ್ರ ಟೋಲ್‌ ಬಳಿ ಪೊಲೀಸರು ಬಂಧಿಸಿದ್ದಾರೆ. ಸೋಮವಾರ ಹೈಕೋರ್ಟ್‌ (High Court) ವಿಚಾರಣೆಯ ವೇಳೆ ಲೋಕಾಯುಕ್ತ ಪರ ವಕೀಲರು ಜಾಮೀನು ಅರ್ಜಿಗೆ ಪ್ರಬಲವಾದ ಆಕ್ಷೇಪ ವ್ಯಕ್ತಪಡಿಸಿದ್ದರು. ಅಂತಿಮವಾಗಿ ಏಕಸದಸ್ಯ ಪೀಠ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು.

    ಕೆಎಸ್‌ಡಿಎಲ್ ಟೆಂಡರ್ (KSDL) ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ A1 ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಮಾರ್ಚ್‌ 7 ರಂದು ಹೈಕೋರ್ಟ್‌ ಮಧ್ಯಂತರ ಜಾಮೀನು ಮಜೂರು ಮಾಡಿತ್ತು. ಇದನ್ನೂ ಓದಿ: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಸುಪ್ರೀಂ ನೋಟಿಸ್

    ಪುತ್ರ ಪ್ರಶಾಂತ್‌ ಮಾಡಾಳ್‌ ಹಣದೊಂದಿಗೆ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿ ಬಿದ್ದ ಬಳಿಕ ನಾಪತ್ತೆಯಾಗಿದ್ದ ವಿರೂಪಾಕ್ಷಪ್ಪ ಜಾಮೀನು ಸಿಕ್ಕಿದ ಬೆನ್ನಲ್ಲೇ ಮನೆಗೆ ವಾಪಸ್‌ ಆಗಿದ್ದರು. ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಅಭಿಮಾನಿಗಳು ಜಯಘೋಷ ಹಾಕಿ ಸ್ವಾಗತಿಸಿದ್ದಕ್ಕೆ ಭಾರೀ ಟೀಕೆ ವ್ಯಕ್ತವಾಗಿತ್ತು. ಇದನ್ನೂ ಓದಿ: ಅದಾನಿ ಕಂಪನಿ ವಿರುದ್ಧ JPC ತನಿಖೆಗೆ ಆಗ್ರಹ – ಸಂಸತ್‌ನಲ್ಲಿ ಕಪ್ಪು ಬಟ್ಟೆ ಧರಿಸಿ ವಿಪಕ್ಷಗಳ ಪ್ರತಿಭಟನೆ

  • ಪಂಚಮಸಾಲಿ ಮೀಸಲಾತಿಗಿಲ್ಲ ಅಡ್ಡಿ – ಮಧ್ಯಂತರ ಆದೇಶ ತೆರವುಗೊಳಿಸಿದ ಹೈಕೋರ್ಟ್

    ಪಂಚಮಸಾಲಿ ಮೀಸಲಾತಿಗಿಲ್ಲ ಅಡ್ಡಿ – ಮಧ್ಯಂತರ ಆದೇಶ ತೆರವುಗೊಳಿಸಿದ ಹೈಕೋರ್ಟ್

    ಬೆಂಗಳೂರು: ಲಿಂಗಾಯತ ಪಂಚಮಸಾಲಿಗೆ (Panchamsali) 2C, 2D ಮೀಸಲಾತಿ ವಿಚಾರದಲ್ಲಿ ಸರ್ಕಾರಕ್ಕೆ ಬಿಗ್ ರಿಲೀಫ್ ಸಿಕ್ಕಿದೆ.

    ಈ ಹಿಂದೆ ಹೈಕೋರ್ಟ್ (Karnataka Highcourt) ಮುಖ್ಯ ನ್ಯಾಯಪೀಠ ನೀಡಿದ್ದ ಯಥಾಸ್ಥಿತಿ ಆದೇಶವನ್ನು ತೆರವುಗೊಳಿಸಿದೆ. ಪಂಚಮಸಾಲಿಗೆ 2A ಮೀಸಲಾತಿ ನೀಡದಂತೆ ಡಿ.ಜಿ ರಾಘವೇಂದ್ರ ಎಂಬವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಮುಖ್ಯ ನ್ಯಾಯಪೀಠ ಮಧ್ಯಂತರ ತಡೆ ನೀಡಿತ್ತು.

    ಈ ಸಂಬಂಧ ಗುರುವಾರ ಮತ್ತೆ ವಿಚಾರಣೆ ನಡೆಸಿದಾಗ, 2ಎ ಮೀಸಲಾತಿಯಲ್ಲಿ ಪರಿವರ್ತನೆ ಮಾಡುವುದಿಲ್ಲ ಎಂದು ಕೇಂದ್ರ ಸರ್ಕಾರದ ಸಾಲಿಸಿಟರ್ ಜನರಲ್ ಭರವಸೆ ನೀಡಿದರು. ಇದನ್ನೂ ಓದಿ: 2ಎ ಮೀಸಲಾತಿ ನೀಡಿ, ಕೊಟ್ಟಮಾತು ಉಳಿಸಿಕೊಳ್ಳಿ ಸಿಎಂ ಬೊಮ್ಮಾಯಿ: ಬಸವಜಯ ಮೃತ್ಯುಂಜಯ ಸ್ವಾಮೀಜಿ

    ಕೇಂದ್ರ ಸರ್ಕಾರದ ಭರವಸೆ ಹಿನ್ನೆಲೆಯಲ್ಲಿ ಮಧ್ಯಂತರ ಆದೇಶ ತೆರವು ಮಾಡಿದೆ. ಈ ಹಿನ್ನೆಲೆಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚಿಸಿದ್ದ ಆದೇಶ ತೆರವು ಮಾಡಿದೆ. ಇದರಿಂದಾಗಿ ಪಂಚಮಸಾಲಿಗೆ 2C, 2D ಮೀಸಲಾತಿ ಕಲ್ಪಿಸಲು ಯಾವುದೇ ಅಡ್ಡಿ ಇಲ್ಲದಂತೆ ಆಗಿದೆ. ಇದನ್ನೂ ಓದಿ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕಲ್ಪಿಸದಿದ್ದರೆ ಮತ್ತೆ ಹೋರಾಟ: ಜಯಮೃತ್ಯುಂಜಯ ಸ್ವಾಮೀಜಿ

    ಕೇಂದ್ರ ಸರ್ಕಾರಕ್ಕೆ ಲಿಖಿತ ಹೇಳಿಕೆ ಸಲ್ಲಿಸಲು ಸೂಚನೆ ನೀಡಿದ್ದು, 2A ಮೀಸಲಾತಿಯಲ್ಲಿ ಬದಲಾವಣೆ ಮಾಡದಂತೆ ಲಿಖಿತ ಹೇಳಿಕೆ ನೀಡಿತು. ಕೇಂದ್ರ ಸರ್ಕಾರ ನೀಡಿದ ಭರವಸೆಯಿಂದಾಗಿ ಮಧ್ಯಂತರ ಆದೇಶ ತೆರವು ಮಾಡಿದೆ. ಇದರೊಂದಿಗೆ ಯಾವುದೇ ಕ್ರಮ ಹೈಕೋರ್ಟ್ ಅಂತಿಮ ತೀರ್ಪಿಗೆ ಬದ್ಧವಾಗಿರಬೇಕು ಎಂದು ಸೂಚಿಸಿದೆ.

  • ಹಿಜಬ್ ಕುರಿತು ಶೀಘ್ರದಲ್ಲಿ ವಿಚಾರಣೆ – ಸಿಜೆಐ

    ಹಿಜಬ್ ಕುರಿತು ಶೀಘ್ರದಲ್ಲಿ ವಿಚಾರಣೆ – ಸಿಜೆಐ

    ನವದೆಹಲಿ: ಶಾಲಾ-ಕಾಲೇಜುಗಳ ತರಗತಿಗಳಲ್ಲಿ ಹಿಜಬ್ (Hijab) ನಿಷೇಧಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ತ್ರಿ ಸದಸ್ಯ ಪೀಠ ರಚಿಸಿ ಶೀಘ್ರದಲ್ಲೇ ವಿಚಾರಣೆ ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್ (Supreme Court) ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ (DY Chandrachud) ಭರವಸೆ ನೀಡಿದ್ದಾರೆ.

    Court

    ಪ್ರಕರಣ ವಿಚಾರಣೆ ನಡೆಸುವಂತೆ ಶುಕ್ರವಾರ ಷರಿಯತ್ ಸಮಿತಿ ಪರವಾಗಿ ವಕೀಲರು ಮನವಿ ಮಾಡಿದರು. ಪರೀಕ್ಷೆಗೆ ಐದು ದಿನಗಳಷ್ಟೆ ಬಾಕಿಯಿದೆ. ವಿದ್ಯಾರ್ಥಿನಿಯರು (Muslim Students) ಹಿಜಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡಬೇಕು. ಅದಕ್ಕಾಗಿ ಸಲ್ಲಿಸಿರುವ ಮಧ್ಯಂತರ ಅರ್ಜಿಯನ್ನು ಶೀಘ್ರದಲ್ಲೇ ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಕೇಂದ್ರ ಸರ್ಕಾರದ ಅಧಿಕಾರ ಕಿತ್ತುಕೊಂಡ ಸುಪ್ರೀಂ- ಚುನಾವಣಾ ಆಯುಕ್ತರ ನೇಮಕಕ್ಕೆ ಸಮಿತಿ ರಚನೆ

    ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ ಡಿ.ವೈ ಚಂದ್ರಚೂಡ್, ನೀವೂ ಕೊನೆ ಕ್ಷಣದಲ್ಲಿ ಬಂದು ಮನವಿ ಮಾಡಿದರೆ ಹೇಗೆ ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರ ನೀಡಿದ ವಕೀಲರು ಕಳೆದ 10 ದಿನಗಳಲ್ಲಿ ಎರಡು ಬಾರಿ ಈ ಬಗ್ಗೆ ಪ್ರಸ್ತಾಪಿಸಿದೆ. ಅದಾಗ್ಯೂ ನ್ಯಾಯಾಲಯ ಪೀಠವನ್ನು ರಚನೆ ಮಾಡಿಲ್ಲ ಎಂದರು. ಬಳಿಕ ಸಿಜೆಐ ಶೀಘ್ರದಲ್ಲಿ ತ್ರಿ ಸದಸ್ಯ ಪೀಠ ರಚಿಸಿ ವಿಚಾರಣೆ ನಡೆಸುವುದಾಗಿ ಹೇಳಿದರು. ಇದನ್ನೂ ಓದಿ: ಭಾರತ ಮಾತ್ರವಲ್ಲದೇ ವಿದೇಶದಲ್ಲೂ ಅಂಬಾನಿ, ಕುಟುಂಬಕ್ಕೆ z+ ಭದ್ರತೆ ನೀಡಿ: ಸುಪ್ರೀಂ

    SUPREME COURT

    ಕಳೆದ ವರ್ಷ ಅಕ್ಟೋಬರ್‌ನಲ್ಲಿ ಸುಪ್ರೀಂ ಕೋರ್ಟ್‌ನ (Supreme Court) ವಿಭಾಗೀಯ ಪೀಠವು, ಹಿಜಬ್ ಧರಿಸುವುದನ್ನ ನಿಷೇಧಿಸಲು ರಾಜ್ಯದ ಸರ್ಕಾರಿ ಕಾಲೇಜುಗಳಿಗೆ ಪರಿಣಾಮಕಾರಿಯಾಗಿ ಅಧಿಕಾರ ನೀಡಿ ಸರ್ಕಾರ ಆದೇಶಿಸಿತ್ತು. ಈ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ವಿಭಜಿತ ತೀರ್ಪು ನೀಡಿತ್ತು. ಇದಕ್ಕೂ ಮುನ್ನ ರಾಜ್ಯ ಹೈಕೋರ್ಟ್ (Karnataka Highcourt), ಸರ್ಕಾರದ ನಿರ್ಧಾರ ಪರ ತೀರ್ಪು ನೀಡಿತ್ತು.

  • ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್‌ಗೆ ಕೊರೊನಾ

    ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್‌ಗೆ ಕೊರೊನಾ

    ಬೆಂಗಳೂರು: ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ (Thawar Chand Gehlot) ಅವರಿಗೆ ಕೊರೊನಾ ಸೋಂಕು (Corona Infection) ದೃಢವಾಗಿದೆ.

    ಇಂದು ನಡೆಸಿದ ಕೊರೊನಾ ಮಾದರಿ ಪರೀಕ್ಷೆಯಲ್ಲಿ ಅವರಿಗೆ ಪಾಸಿಟಿವ್ ಬಂದಿದೆ. ಆದರೆ ಆರೋಗ್ಯ ಸ್ಥಿರವಾಗಿದ್ದು, ಯಾವುದೇ ಆತಂಕ ಪಡಬೇಕಿಲ್ಲ ಎಂದು ಆರೋಗ್ಯ ಇಲಾಖೆ (Health Department) ತಿಳಿಸಿದೆ. ಆದ್ದರಿಂದ ಅಕ್ಟೋಬರ್‌ 2ರಂದು ಗಾಂಧಿ ಜಯಂತಿಯಂದು ನಡೆಯುವ ಯಾವುದೇ ಕಾರ್ಯಕ್ರಮಗಳಲ್ಲೂ ಅವರು ಭಾಗವಹಿಸುವುದಿಲ್ಲ. ಇದನ್ನೂ ಓದಿ: PFI ಬ್ಯಾನ್ ಮಾಡಿದ್ದಕ್ಕೆ ಕಾಂಗ್ರೆಸ್‍ನ ಕೆಲವರು ಒಂದೇ ಕಣ್ಣಿನಲ್ಲಿ ಅಳುತ್ತಿದ್ದಾರೆ: ತೇಜಸ್ವಿ ಸೂರ್ಯ

    ರಾಜ್ಯಪಾಲರು ಇತ್ತೀಚೆಗೆ ಬೆಂಗಳೂರಿನ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. ನಿನ್ನೆಯೂ ರಾಜ್ಯದ ಹೈಕೋರ್ಟ್ (HighCourt) ಹೆಚ್ಚುವರಿ ನ್ಯಾಯಮೂರ್ತಿ ಆಗಿ ಮೊಹಮ್ಮದ್ ಗೌಸ್ ಶಕುರೆ ಕಮಾಲ್, ರಾಜೇಂದ್ರ ಬಾದಾಮಿಕರ್ ಹಾಗೂ ಖಾಜಿ ಜೈಬುನ್ನಿಸಾ ಮೊಹಿದ್ದೀನ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai), ಸಚಿವ ಗೋವಿಂದ ಕಾರಜೋಳ ಸಹ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

    Live Tv
    [brid partner=56869869 player=32851 video=960834 autoplay=true]

  • ಭಾರತ್ ಜೋಡೋ ಯಾತ್ರೆ ಹೊತ್ತಲ್ಲೇ ಡಿಕೆಶಿಗೆ CBI ಶಾಕ್ – ಆಸ್ತಿ ಮೌಲ್ಯಮಾಪನ

    ಭಾರತ್ ಜೋಡೋ ಯಾತ್ರೆ ಹೊತ್ತಲ್ಲೇ ಡಿಕೆಶಿಗೆ CBI ಶಾಕ್ – ಆಸ್ತಿ ಮೌಲ್ಯಮಾಪನ

    ಬೆಂಗಳೂರು: ರಾಜ್ಯದಲ್ಲಿ ರಾಹುಲ್ ಗಾಂಧಿ (Rahul Gandhi) ಅವರೊಂದಿಗೆ ಭಾರತ್ ಜೋಡೋ (Bharat Jodo Yatra) ಯಾತ್ರೆಗೆ ಸಜ್ಜಾಗುತ್ತಿರುವ ಹೊತ್ತಿನಲ್ಲೇ ಕೆಪಿಸಿಸಿ (KPCC) ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಅವರಿಗೆ ಸಿಬಿಐ (CBI) ಶಾಕ್ ನೀಡಿದೆ.

    ಸ್ಥಳೀಯ ಕಂದಾಯ ಅಧಿಕಾರಿಗಳೊಂದಿಗೆ ಬಂದಿದ್ದ ಸಿಬಿಐ (CBI) ಅಧಿಕಾರಿಗಳು ತಹಶಿಲ್ದಾರ್ ಸಮ್ಮುಖದಲ್ಲಿ ಡಿಕೆ ಶಿವಕುಮಾರ್ ಅವರ ಕನಕಪುರದಲ್ಲಿರುವ ಆಸ್ತಿಯನ್ನು ಸಂಪೂರ್ಣ ಮೌಲ್ಯಮಾಪನ ಮಾಡಿದ್ದಾರೆ. ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೂ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ರಕ್ಷಣಾ ಪಡೆಗಳ ಮುಖ್ಯಸ್ಥರಾಗಿ ಅನಿಲ್ ಚೌಹಾಣ್ ನೇಮಕ

    ಕನಕಪುರದ ಆಸ್ತಿ ಸಂಪೂರ್ಣ ಮೌಲ್ಯಮಾಪನ ಮಾಡಿದ ಸಿಬಿಐ ಅಧಿಕಾರಿಗಳು, ಡಿಕೆ ಶಿವಕುಮಾರ್, ಗೌರಮ್ಮ, ತಂದೆ ಕೆಂಪೇಗೌಡ, ಸಹೋದರ ಸುರೇಶ್, ಪತ್ನಿ ಉಷಾ, ಮಕ್ಕಳ ಹೆಸರಿನ ದಾಖಲಾತಿಗಳನ್ನು ಪಡೆದು ಪರಿಶೀಲಿಸಿದ್ದಾರೆ. ಬಳಿಕ ನಕಲು ಪ್ರತಿಗಳನ್ನು ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ – ಇಡಿ ವಿರುದ್ಧ ಡಿಕೆ ಶಿವಕುಮಾರ್‌ ಕಿಡಿ

    5 ವರ್ಷದಲ್ಲಿ 75 ಕೋಟಿಗೂ ಅಧಿಕ ಆಸ್ತಿಗಳಿಸಿರುವ ಸಂಬಂಧ ಡಿಕೆಶಿ ವಿರುದ್ಧ ಸಿಬಿಐ ಎಫ್‌ಐಆರ್ (FIR) ದಾಖಲಿಸಿತ್ತು. ತನ್ನ ಮೇಲಿನ ಪ್ರಕರಣವನ್ನು ರದ್ದು ಮಾಡುವಂತೆ ಡಿಕೆ ಶಿವಕುಮಾರ್ ಹೈಕೋರ್ಟ್ (Karnataka HighCourt) ಮೇಟ್ಟಿಲೇರಿದ್ದರು. ಇದರ ಬೆನ್ನಲ್ಲೇ ಸಿಬಿಐ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಸಿಬಿಐ ಪರ ವಕೀಲರು ಹೆಚ್ಚುವರಿ ಆಕ್ಷೇಪಣೆಗೆ ಕಾಲಾವಧಿ ಕೇಳಿದ ಅರ್ಜಿ ಸಲ್ಲಿಸಿದ್ದರು. ನಂತರ ಆಸ್ತಿ ಮೌಲ್ಯಮಾಪನ ಮಾಡಿ ಹೆಚ್ಚಿನ ಆಕ್ಷೇಪಣೆ ಸಲ್ಲಿಕೆಗೆ ಕಾಲಾವಕಾಶ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ಸಿಪಿಡಬ್ಲ್ಯೂಡಿ ಅಧಿಕಾರಿಗಳ ಜೊತೆ ತೆರಳಿ ಮೌಲ್ಯಮಾಪನ ಮಾಡಿದ್ದಾರೆ.

    ಇದು ದಾಳಿಯಲ್ಲ, ತನಿಖೆಯ ಬೆಳವಣಿಗೆ:
    ಇದು ದಾಳಿಯಲ್ಲ, ತನಿಖೆಯ ಒಂದು ಬೆಳವಣಿಗೆ. ಇಲ್ಲಿ ಆಸ್ತಿ ಮೌಲ್ಯಮಾಪನ ಮಾಡುತ್ತಾರೆ. ಆದಾಯ ಮೀರಿ ಆಸ್ತಿ ಗಳಿಕೆ ಹಿನ್ನೆಲೆ ಪ್ರಕರಣ ದಾಖಲಾಗಿರುವುದರಿಂದ ಇದರಲ್ಲಿ ಯಾವುದೇ ವಿಚಾರಣೆ ಇರೋದಿಲ್ಲ. ಅದರಂತೆ ಡಿಕೆಶಿ ಆದಾಯದ ಮೂಲಗಳಿಕೆ ವ್ಯತ್ಯಾಸ ಪತ್ತೆ ಮಾಡಲು ಆಸ್ತಿ ಮೌಲ್ಯಮಾಪನ ಮಾಡಲಾಗಿದೆ. ಮೌಲ್ಯಮಾಪನದ ಜೊತೆಗೆ ಲ್ಯಾಟ್ ಲಾಂಗ್ ಮಾಡಿದ ಸಿಬಿಐ ಅಧಿಕಾರಿಗಳು, ಶೀಘ್ರದಲ್ಲಿಯೇ ದೋಷಾರೋಪ ಸಲ್ಲಿಕೆ ಮಾಡಲು ಕ್ರಮ ಕೈಗೊಳ್ಳುತ್ತಾರೆ. 10-15 ದಿನದಲ್ಲಿ ಡಿಕೆಶಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಲಿದ್ದಾರೆ.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಿಕೆ ಶಿವಕುಮಾರ್, ಇಗ ತಾನೆ ನನಗೆ ಮನೆಯಿಂದ ಫೋನ್ ಬಂತು. ತಹಶಿಲ್ದಾರರನ್ನ ಕರೆದುಕೊಂಡು ಬಂದು ಸಿಬಿಐ ಅಧಿಕಾರಿಗಳು ಊರಿನ ಆಸ್ತಿಗಳನ್ನ ಪರಿಶೀಲನೆ ಮಾಡಿದ್ದಾರಂತೆ. ನಾನು ಎಲ್ಲಾ ದಾಖಲೆಗಳನ್ನ ಕೊಟ್ಟಿದ್ದೇನೆ. ಕನಕಪುರ ಮನೆ, ತೋಟದ ಮನೆ, ಎಲ್ಲಾ ಆಸ್ತಿಗಳನ್ನ ನೋಡ್ಕೊಂಡು ಹೋಗಿದ್ದಾರೆ. ಇಷ್ಟು ಮಾತ್ರ ಗೊತ್ತು. ಇದು ನಮ್ಮ ಹಣೆಬರಹ ಎಂದು ಹೇಳಿದ್ದಾರೆ.

    ಕೇಂದ್ರ ನಿಮ್ಮನ್ನ ಟಾರ್ಗೆಟ್ ಮಾಡುತ್ತಿದೆಯಾ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ, ಕೇಂದ್ರ ನಮ್ಮನ್ನ ಬಹಳ ಪ್ರೀತಿ ಮಾಡುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಹಿಜಬ್ ವಿದ್ಯಾರ್ಥಿನಿಯರ ಪ್ರತಿಭಟನೆ ಹಿಂದೆ PFI ಪಿತೂರಿ: ಸಾಲಿಸಿಟರ್ ಜನರಲ್ ಮೆಹ್ತಾ ವಾದ

    ಹಿಜಬ್ ವಿದ್ಯಾರ್ಥಿನಿಯರ ಪ್ರತಿಭಟನೆ ಹಿಂದೆ PFI ಪಿತೂರಿ: ಸಾಲಿಸಿಟರ್ ಜನರಲ್ ಮೆಹ್ತಾ ವಾದ

    ನವದೆಹಲಿ: ಪ್ರತಿಭಟನೆ (Protest) ಮಾಡುವ ಉದ್ದೇಶದಿಂದಲೇ ಹಿಜಬ್ (Hijab) ಹೋರಾಟವನ್ನು ರೂಪಿಸಲಾಯಿತು, ಹಿಜಬ್ ವಿವಾದದ ಹಿಂದೆ ದೊಡ್ಡ ಷಡ್ಯಂತ್ರವಿದ್ದು, ಪಿಎಫ್‌ಐ (PFI) ಕೂಡಾ ಇದರಲ್ಲಿ ಭಾಗಿಯಾಗಿದೆ ಎಂದು ಕೇಂದ್ರ ಸರ್ಕಾರದ (Central Givernment) ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ (Tushar Mehta) ಅರೋಪಿಸಿದ್ದಾರೆ.

    ಹಿಜಬ್ ನಿಷೇಧಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ (High Court) ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಗಳ ವಿಚಾರಣೆ ವೇಳೆ ಮೆಹ್ತಾ ವಾದ ಮಂಡಿಸಿದರು. ಇದನ್ನೂ ಓದಿ: ಶಾಲೆ ಟಾರ್ಗೆಟ್ ಮಾಡಿ ಸೇನೆಯಿಂದ ಗುಂಡಿನ ದಾಳಿ – 7 ಮಕ್ಕಳು ಸೇರಿ 13 ಮಂದಿ ಸಾವು

    ಕಳೆದ ಎಂಟು ದಿನಗಳಿಂದ ನ್ಯಾಯಮೂರ್ತಿ ಹೇಮಂತ್ ಗುಪ್ತಾ ನೇತೃತ್ವದ ದ್ವಿಸದಸ್ಯ ಪೀಠದ ಮುಂದೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿದ್ದರು. ಇಂದು ಎಲ್ಲ ವಕೀಲರ (Lowyer) ವಾದ ಅಂತ್ಯವಾದ ಹಿನ್ನೆಲೆಯಲ್ಲಿ ಸರ್ಕಾರದ ಪರ ಕೇಂದ್ರ ಸರ್ಕಾರದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಆರಂಭಿಸಿದರು. ಇದನ್ನೂ ಓದಿ: ಸ್ಟೇಟಸ್‍ನಲ್ಲಿ ಹಾಕಿದ್ದ ತಾಯಿ ಫೋಟೋ ದುರ್ಬಳಕೆ – ಕ್ಲಾಸ್‍ರೂಂನಲ್ಲಿ ಲೆಕ್ಚರರ್ ಎದುರೇ ಹೊಡೆದಾಡಿಕೊಂಡ ವಿದ್ಯಾರ್ಥಿಗಳು

    ಯಾವುದೇ ಧರ್ಮಾದ ಆಚರಣೆ ಇದ್ದರೂ, ಅದರ ಅನುಸರಣೆ ಮತ್ತು ಆಚರಣೆ ಕಾನೂನಿನ ಮಿತಿಯಲ್ಲಿದೆ. ರಾಜ್ಯ ಸರ್ಕಾರದ (Karnatak State Government) ಅದೇಶ ನಿರ್ದಿಷ್ಟ ಸಮುದಾಯದ, ನಿರ್ದಿಷ್ಟ ಉಡುಪು ಧರಿಸಲು ನಿಯಂತ್ರಣ ಹೇರುವುದಿಲ್ಲ, ಬದಲಿಗೆ ಸಮವಸ್ತ್ರದ ಅಗತ್ಯದ ಬಗ್ಗೆ ಸ್ಪಷ್ಟವಾಗಿ ತಿಳಿಸಿದೆ. ಆದರೆ ಹಿಜಬ್ (Hijab) ಧರಿಸುವ ಹೋರಾಟದ ಹಿಂದೆ ವ್ಯವಸ್ಥಿತ ಪಿತೂರಿ ನಡೆದಿದೆ ಎಂದು ಕೋರ್ಟ್ ಗೆ ತುಷಾರ್ ಮೆಹ್ತಾ ತಿಳಿಸಿದರು.

    ಹಿಜಬ್ ಪರ ಸಾಮಾಜಿಕ ಮಾಧ್ಯಮಗಳಲ್ಲಿ (Social Media) ಭಾರೀ ಪ್ರಚಾರ ಮಾಡಲಾಯ್ತು, ಹಿಜಬ್ ಧರಿಸಿ ಎಂದು ಒತ್ತಿ ಹೇಳಲಾಯಿತು, ಹಿಜಬ್ ಬೇಕು ಎನ್ನುವ ವಾದ ಹಠಾತ್ ಆಗಿ ಬಂದಿರುವುದಲ್ಲ, ಇದು ದುರುದ್ದೇಶದಿಂದ ವ್ಯವಸ್ಥಿತವಾಗಿ ಮಾಡಿರುವ ಕಾರ್ಯಾಚರಣೆಯಾಗಿದೆ. ಇದರಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಪಾತ್ರವೂ ಇದೆ. ಇದಕ್ಕೆ ಪೂರಕ ಸಾಕ್ಷ್ಯಗಳ ಕುರಿತು ನಾನು ಕೋರ್ಟ್ ಗೆ ದಾಖಲೆ ಸಲ್ಲಿಸಿದ್ದೇನೆ ಎಂದರು.

    ಮಕ್ಕಳು ಹಿಜಬ್ ಗಾಗಿ ಸ್ವಯಂ ಪ್ರೇರಣೆಯಿಂದ ಹೋರಾಟ ಮಾಡಿಲ್ಲ, ಅವರ ಮನವೊಲಿಸಿ ಈ ರೀತಿ ಮಾಡಲಾಯ್ತು, 2021ರ ತನಕ ಯಾವ ವಿದ್ಯಾರ್ಥಿನಿಯೂ (Students) ಕೂಡ ಹಿಜಬ್ ಧರಿಸುತ್ತಿರಲಿಲ್ಲ, ಅಥವಾ ಇಂಥದ್ದೊಂದು ಪ್ರಶ್ನೆಯೇ ಉದ್ಭವ ಆಗಿರಲಿಲ್ಲ, ಹಿಜಬ್ ನ ವಿರುದ್ಧ ಮತ್ತೊಂದು ಸಮುದಾಯದ ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿಕೊಂಡು ಶಾಲೆಗೆ ಬಂದರು ಈ ವೇಳೆ ಸರ್ಕಾರ ಹಿಜಬ್ ಗೆ ನಿಷೇಧ ಹೇರಿತು ಈ ಸಂದರ್ಭದಲ್ಲಿ ಸರ್ಕಾರದ ಆದೇಶದ ಬಳಿಕ ಈ ವಿವಾದ ಬುಗಿಲೆದ್ದಿತು ಎಂದು ವಾದಿಸಿದರು.

    Live Tv
    [brid partner=56869869 player=32851 video=960834 autoplay=true]