ಬೆಂಗಳೂರು: ವಿಧಾನಸಭೆಯಲ್ಲಿ ಅಂಗೀಕಾರಗೊಂಡ ರೂಪದಲ್ಲಿ ಇಂದು ವಿಧಾನ ಪರಿಷತ್‌ನಲ್ಲಿ (Karnataka Legislative Council ಸಚಿವ ಕೃಷ್ಣ ಬೈರೇಗೌಡ ಅವರು ಮಂಡಿಸಿದ ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ-2025ಕ್ಕೆ ಅನುಮೋದನೆ ಸಿಕ್ಕಿದೆ.
ಕಳೆದ ವಿಧಾನ ಮಂಡಲ ಅಧಿವೇಶನದ ಸಂದರ್ಭದಲ್ಲೇ ಬಸವನ ಬಾಗೇವಾಡಿ ಅಭಿವೃದ್ದಿ ಪ್ರಾಧಿಕಾರದಲ್ಲಿ (Basavana Bagewadi Development Authority) ಸ್ಥಳೀಯ ವಿಧಾನ ಪರಿಷತ್ ಸದಸ್ಯರಿಗೂ ಸ್ಥಾನ ನೀಡಬೇಕು ಎಂದು ಸ್ವತಃ ಪರಿಷತ್ ಸಭಾಪತಿಗಳಾದ ಬಸವರಾಜ್ ಹೊರಟ್ಟಿ ಅವರು ಒತ್ತಾಯಿಸಿದ್ದರು. ಆ ಸಂದರ್ಭದಲ್ಲಿ ಸಚಿವ ಕೃಷ್ಣ ಬೈರೇಗೌಡ ಅವರೂ ಸಹ ಸಭಾಪತಿಗಳ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದರು. ಇದನ್ನೂ ಓದಿ: ನಮಸ್ತೇ ಸದಾ ವತ್ಸಲೇ ಎಂದು ಆರ್‌ಎಸ್‌ಎಸ್ ಗೀತೆ ಹಾಡಿದ ಡಿಕೆಶಿ – ಕಾಲೆಳೆದ ಬಿಜೆಪಿ ನಾಯಕರು
ತಿದ್ದುಪಡಿ ವಿಧೇಯಕದ ಪ್ರಸ್ತಾವನೆ ವೇಳೆ ಮಾತನಾಡಿದ ಶಿವಕುಮಾರ್ ಅವರು, ಈ ವಿಧೇಯಕದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಸಂವಿಧಾನದ 74ನೇ ತಿದ್ದುಪಡಿ ಅಡಿಯಲ್ಲಿ ಬರುವ ಪಾಲಿಕೆಗಳ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂಬ ಅಂಶವನ್ನು ಸ್ಪಷ್ಟಪಡಿಸಲಾಗಿದೆ. ಭವಿಷ್ಯದಲ್ಲಿ ಯಾವುದೇ ಗೊಂದಲಕ್ಕೆ ಅವಕಾಶ ನೀಡಬಾರದು ಎಂಬ ಉದ್ದೇಶದಿಂದ ಈ ತಿದ್ದುಪಡಿಯಲ್ಲಿ ಜಿಬಿಎ ಪಾಲಿಕೆಗಳ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂಬ ಸ್ಪಷ್ಟನೆ ನೀಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಗದ್ದಲದ ನಡುವೆ ಮುಂಗಾರು ಅಧಿವೇಶನ ಅಂತ್ಯ – ಲೋಕಸಭೆ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ
ಸದಸ್ಯರಾದ ಗೋವಿಂದರಾಜು, ಟಿ.ಎ ಶರವಣ, ಹೆಚ್.ಎಸ್ ಗೋಪಿನಾಥ್ ಅವರು ಕೋರಿದ ಸ್ಪಷ್ಟನೆಗೆ ಉತ್ತರ ನೀಡಿದ ಸಚಿವರು, ನಾವು ಅನೇಕ ಬಾರಿ ನೋಡಿರುವಂತೆ ರಾಜ್ಯ ಸರ್ಕಾರ ಒಂದು ಪಕ್ಷ ಅಧಿಕಾರದಲ್ಲಿದ್ದರೆ, ಪಾಲಿಕೆಯಲ್ಲಿ ಮತ್ತೊಂದು ಪಕ್ಷ ಅಧಿಕಾರದಲ್ಲಿರುತ್ತದೆ. ಇಂತಹ ಸಂದರ್ಭದಲ್ಲಿ ಸಂವಿಧಾನದ 74ನೇ ತಿದ್ದುಪಡಿಗೆ ಧಕ್ಕೆಯಾಗದಂತೆ ಹಾಗೂ ರಾಜ್ಯ ಸರ್ಕಾರ ಪಾಲಿಕೆಗಳನ್ನು ನಿಯಂತ್ರಿಸುವಂತಾಗದಂತೆ ಎಚ್ಚರಿಕೆ ವಹಿಸಲು ಈ ತಿದ್ದುಪಡಿ ತರಲಾಗಿದೆ ಎಂದರು.
ಕೆಲವು ಶಾಸಕರು ಜನಸಂಖ್ಯೆ ಹಾಗೂ ವಾರ್ಡ್ ರಚನೆ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಈಗ ನಾವು ಬಳಸಿರುವುದು 2011ರ ಜನಗಣತಿ. ಆಗ ಒಂದು ವಾರ್ಡ್ನಲ್ಲಿ 18 ಸಾವಿರ ಜನಸಂಖ್ಯೆ ಇದ್ದರೆ ಈಗಿನ ಪರಿಸ್ಥಿತಿಯಲ್ಲಿ 30 ಸಾವಿರದಷ್ಟು ಇರಲಿದೆ. ಮುಂದೆ ಹೊಸ ಪ್ರದೇಶಗಳನ್ನು ಪಾಲಿಕೆ ವ್ಯಾಪ್ತಿಯಲ್ಲಿ ಒಳಪಡಿಸುವ ಸಂದರ್ಭದಲ್ಲಿ ನಿಮ್ಮ ಪಕ್ಷದ ಶಾಸಕರ ಅಭಿಪ್ರಾಯವನ್ನು ಸಂಗ್ರಹಿಸಲಾಗುವುದು. ಈ ವಿಚಾರವನ್ನು ಬೇರೆ ರೂಪದಲ್ಲಿ ಚರ್ಚೆಗೆ ಪ್ರಸ್ತಾವನೆ ನೀಡಿ, ಆಗ ಈ ವಿಚಾರವಾಗಿ ನಿಮಗಿರುವ ಅನುಮಾನಗಳಿಗೆ ಸಂಪೂರ್ಣವಾಗಿ ವಿವರಣೆ ನೀಡುತ್ತೇನೆ. ಈಗ ಈ ವಿಧೇಯಕ ಅಂಗೀಕಾರ ಮಾಡಿಕೊಡಿ ಎಂದು ತಿಳಿಸಿದರು.
ಬೆಂಗಳೂರು: ನಿಗದಿ ಪಡಿಸಿ ಸಮಯದಲ್ಲಿ ಕಲಬುರಗಿಯಲ್ಲಿ (Kalaburagi) ಜವಳಿ ಪಾರ್ಕ್ ನಿರ್ಮಾಣ ಆಗುತ್ತದೆ ಅಂತ ಜವಳಿ ಸಚಿವ ಶಿವಾನಂದ ಪಾಟೀಲ್ (Shivanand Patil) ತಿಳಿಸಿದ್ದಾರೆ.
ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್‌ನ ಜಗದೇವ್ ಗುತ್ತೇದಾರ್ ಪ್ರಶ್ನೆ ಕೇಳಿದ್ದರು. ಕಲಬುರಗಿಯಲ್ಲಿ ಜವಳಿ ಪಾರ್ಕ್ (Textile Park) ಯಾವಾಗ ಪ್ರಾರಂಭ ಮಾಡ್ತೀರಾ? ಪಾರ್ಕ್ಗೆ 1 ಸಾವಿರ ಎಕ್ರೆ ವಶಪಡಿಸಿಕೊಳ್ಳಲಾಗಿದೆ. ಇದರಿಂದ ರೈತರು ಬೇರೆ ರಾಜ್ಯಕ್ಕೆ ವಲಸೆ ಹೋಗ್ತಿದ್ದಾರೆ. ಇದನ್ನ ಸರ್ಕಾರ ತಡೆಯಬೇಕು ಎಂದಿದ್ದಾರೆ. ಇದನ್ನೂ ಓದಿ: ಮತಗಳ್ಳತನ ಆರೋಪ; ಆಯೋಗದ ಕ್ರಮವನ್ನು ಸದನ ಖಂಡಿಸಬೇಕು: ಬಿ.ಕೆ ಹರಿಪ್ರಸಾದ್
ಇದಕ್ಕೆ ಸಚಿವ ಶಿವಾನಂದ ಪಾಟೀಲ್ ಉತ್ತರ ನೀಡಿ, ಪಿಎಂ ಮಿತ್ರ ಪಾರ್ಕ್ ದೇಶದಲ್ಲಿ 7 ಕಡೆ ಅನುಮತಿ ಕೊಡಲಾಗಿದೆ. ಕರ್ನಾಟಕಕ್ಕೆ ಇದು ಸಿಕ್ಕಿರೋದು ಸುದೈವ. ಪಿಎಂ ಮಿತ್ರ ಪಾರ್ಕ್ ಮಾಡೋಕೆ ಸುಮಾರು 7ರಿಂದ 10 ವರ್ಷ ಬೇಕು. ಈ ಪಾರ್ಕ್ ಮಾಡಲು 3 ಸಾವಿರ ಎಕ್ರೆ ಬೇಕು. ಈಗ 1 ಸಾವಿರ ಭೂಮಿ ವಶಪಡಿಸಿಕೊಳ್ಳಲಾಗಿದೆ. ಈ ಜವಳಿ ಪಾರ್ಕ್ ಬಂದರೆ 1 ಲಕ್ಷ ಉದ್ಯೋಗ ಸಿಗಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬಾಗಲಕೋಟೆಯ ತೋಟಗಾರಿಕೆ ವಿವಿ ಮುಚ್ಚೋದಿಲ್ಲ- ಚೆಲುವರಾಯಸ್ವಾಮಿ
ಕೇಂದ್ರದ ಜೊತೆ ಒಪ್ಪಂದ ಮಾಡಿಕೊಳ್ಳಲಾಗಿದೆ. ನಮ್ಮ ಸರ್ಕಾರದಿಂದ ಜವಳಿ ಪಾರ್ಕ್ಗೆ 390 ಕೋಟಿ ರೂ. ಹಣ ಮೀಸಲು ಇಡಲಾಗಿದೆ. ಕೇಂದ್ರದ ಹಣ ಸಹಾಯದಿಂದ ಕಾಲಕ್ಕೆ ಸರಿಯಾಗಿ ಪಾರ್ಕ್ ನಿರ್ಮಾಣದ ಕೆಲಸ ಆಗಲಿದೆ. ರೈತರು ಗುಳೆ ಹೋಗೊದನ್ನ ತಡೆಯಲು ಕ್ರಮವಹಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಬೆಂಗಳೂರು: ಮತಗಳ್ಳತನ ವಿಚಾರ ವಿಧಾನ ಪರಿಷತ್‌ನಲ್ಲೂ ಪ್ರತಿಧ್ವನಿಸಿತು. ಕಾಂಗ್ರೆಸ್ ಸದಸ್ಯ ಬಿ.ಕೆ ಹರಿಪ್ರಸಾದ್ (B K Hariprasad) ವಿಧಾನ ಪರಿಷತ್ ಕಲಾಪದ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪ ಮಾಡಿದರು.
ಎಲೆಕ್ಟ್ರಾನಿಕ್ ವೋಟಿಂಗ್ ಮಷಿನ್‌ನ (ಇವಿಎಂ) ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡು ಮತಕಳವು ಮಾಡಲಾಗುತ್ತಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿದ್ದು. ಪಾರದರ್ಶಕ ಚುನಾವಣಾ ವ್ಯವಸ್ಥೆ ಜಾರಿಗೆ ತರುವ ಮೂಲಕ ಈ ಅಕ್ರಮವನ್ನು ತಡೆಗಟ್ಟಬೇಕು. ಹೀಗೆಂದು ವೋಟ್ ಫಾರ್ ಡೆಮಾಕ್ರಸಿ ಸಂಸ್ಥೆಯ ಸದಸ್ಯರೊಂದಿಗೆ ಎದ್ದೇಳು ಕರ್ನಾಟಕ ಸಂಘಟನೆ ಆಯೋಜಿಸಿದ್ದ ದುಂಡುಮೇಜಿನ ಸಂವಾದದಲ್ಲಿ ಮೂಡಿಬಂದ ಅಭಿಪ್ರಾಯ. ಇದನ್ನೂ ಓದಿ: ಬಾಗಲಕೋಟೆಯ ತೋಟಗಾರಿಕೆ ವಿವಿ ಮುಚ್ಚೋದಿಲ್ಲ- ಚೆಲುವರಾಯಸ್ವಾಮಿ
2024ರಲ್ಲಿ ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣಾ ನಡೆದಾಗ ಸಂಜೆ 5 ಗಂಟೆಗೆ 58.22% ರಷ್ಟು ಮತದಾನವಾಗಿತ್ತು. ಆದರೆ 66.05% ರಷ್ಟು ಮತದಾನವಾಗಿದೆ ಎಂದು ಮಧ್ಯರಾತ್ರಿ ಘೋಷಿಸಲಾಯಿತು. ಹೆಚ್ಚುವರಿಯಾಗಿ 48 ಲಕ್ಷ ಮತಗಳು ಎಲ್ಲಿಂದ ಸೇರ್ಪಡೆಯಾದವು ಎನ್ನುವುದು ಸಂವಾದದಲ್ಲಿ ಕಂಡುಬಂದ ಪ್ರಶ್ನೆಯಾಗಿರುತ್ತದೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಬುರುಡೆ ಕೇಸ್| ಯಾರದ್ದೋ ಫೋಟೋ ತೋರಿಸಿ ಪುತ್ರಿ ಎಂದು ಸುಳ್ಳು ಹೇಳಿದ ಸುಜಾತ ಭಟ್!
ಅಲ್ಲಿ ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿಗಳು 3 ಸಾವಿರದ ಮತಗಳ ಅಂತರದಿಂದ 25 ಕ್ಷೇತ್ರಗಳಲ್ಲಿ ಗೆದ್ದಿದ್ದಾರೆ. 5 ಸಾವಿರ ಮತಗಳ ಅಂತರದಿಂದ 39 ಕ್ಷೇತ್ರಗಳಲ್ಲಿ 10 ಸಾವಿರ ಮತಗಳ ಅಂತರದಿಂದ 69 ಕ್ಷೇತ್ರಗಳಲ್ಲಿ ರಾತ್ರೋರಾತ್ರಿ ಗೆಲವು ಪಡೆದಿರುವುದನ್ನು ಪ್ರತಿಪಾದಿಸಿರುತ್ತಾರೆ. ಲೋಕಸಭೆ ಚುನಾವಣೆಗೆ ಹೋಲಿಸಿದರೆ, ವಿಧಾನಸಭೆ ಚುನಾವಣೆ ಸಂದರ್ಭದಲ್ಲಿನ ಮತದಾರರ ಸಂಖ್ಯೆ ಹೆಚ್ಚಳದ ಬಗ್ಗೆ ಚುನಾವಣಾಧಿಕಾರಿಗಳು ಉತ್ತರಿಸಿಲ್ಲವೆಂದು ಅಭಿಪ್ರಾಯ ವ್ಯಕ್ತಪಡಿಸಿರುತ್ತಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹಾಸನ | ಧಾರಾಕಾರ ಮಳೆಗೆ ಶಾಲೆಯ ಗೋಡೆ ಕುಸಿತ – ರಜೆಯಿಂದಾಗಿ ತಪ್ಪಿದ ಅನಾಹುತ
ಇದೇ ರೀತಿ ಮುಂಬರುವ ಬಿಹಾರದ ಚುನಾವಣೆಯಲ್ಲಿ ನಡೆಯಲಿದೆ ಎನ್ನುವ ಆತಂಕ ಎದುರಾಗಿದೆ. ಬಿಜೆಪಿ ಮತ್ತು ಅದರ ಮೈತ್ರಿಯನ್ನು ಬೆಂಬಲಿಸದ ಸಮುದಾಯಗಳ ಮತದಾರರನ್ನೇ ಮತದಾರರ ಪಟ್ಟಿಯಿಂದ ಬಿಜೆಪಿ ತೆಗೆದುಹಾಕುತ್ತಿದೆ ಎಂದು ಆರೋಪಿಸಿರುತ್ತಾರೆ. ಚುನಾವಣಾ ಆಯೋಗದ ಕ್ರಮವನ್ನು ಸದನ ಖಂಡಿಸಬೇಕು. ಈ ಸಂಬಂಧ ಸರ್ಕಾರ ನಿರ್ಣಯ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಕಳುಹಿಸಬೇಕೆಂದು ಸಿಎಂ ಸಿದ್ದರಾಮಯ್ಯ ಅವರನ್ನು ಒತ್ತಾಯಿಸುತ್ತೇನೆ ಎಂದಿದ್ದಾರೆ.
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬಂದ ಎರಡು ವರ್ಷಗಳಿಂದ ವಸತಿ ಇಲಾಖೆಯಲ್ಲಿ ಒಂದೇ ಒಂದು ಮನೆ ಬಡವರಿಗೆ ಕೊಟ್ಟಿಲ್ಲ ಎಂದು ಸರ್ಕಾರದ ವಿರುದ್ಧವೇ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಅನಿಲ್ ಕುಮಾರ್ (Anil Kumar) ಅಸಮಾಧಾನ ಹೊರಹಾಕಿದರು.ಇದನ್ನೂ ಓದಿ: ‘ಮಾಣಿಕ್ಯ’ ನಟಿಯ ಬರ್ತ್‌ಡೇ ಸಂಭ್ರಮದಲ್ಲಿ ಸುದೀಪ್ ಪತ್ನಿ, ಮಗಳು ಭಾಗಿ
ಕಲಾಪದಲ್ಲಿ ಪ್ರಶ್ನೆ ಕೇಳಿದ ಅವರು, ನಮ್ಮ ಸರ್ಕಾರ ಬಂದಾಗಿನಿಂದ ಒಂದೇ ಒಂದು ಮನೆ ಕೊಟ್ಟಿಲ್ಲ. ಕೇಂದ್ರದ ಯೋಜನೆಯ 26 ಸಾವಿರ ಮನೆ ನಿರ್ಮಾಣದಲ್ಲಿ 4 ಮನೆ ಕೆಲಸ ಮಾತ್ರ ನಡೆಯುತ್ತಿದೆ. ಉಳಿದ ಮನೆ ನಿರ್ಮಾಣ ಆಗಿಲ್ಲ. ಕೂಡಲೇ ಬಡವರಿಗೆ ಮನೆ ಕೊಡಬೇಕು. ಮನೆ ಕಟ್ಟಲು ಸರ್ಕಾರ ಕೊಡುವ ಸಹಾಯ ಧನ 1.5 ಲಕ್ಷದಿಂದ 5 ಲಕ್ಷ ರೂ.ಗೆ ಹೆಚ್ಚಿಸಬೇಕು ಎಂದು ವಸತಿ ಇಲಾಖೆಗೆ ಆಗ್ರಹಿಸಿದರು.
ಇದಕ್ಕೆ ಸಚಿವ ಜಮೀರ್ ಅಹ್ಮದ್ ಉತ್ತರ ನೀಡಿ, ಈ ಬಾರಿ ಅಧಿಕಾರಕ್ಕೆ ಬಂದ ಮೇಲೆ ನಾವು ಹೊಸ ಮನೆ ಕೊಡಲು ಆಗಲಿಲ್ಲ. ಏಕೆಂದರೆ ಹಿಂದಿನ ಸರ್ಕಾರದಲ್ಲಿ ಬಾಕಿಯಿದ್ದ ಮನೆ ಪೂರ್ಣ ಮಾಡುವ ಕೆಲಸ ಮಾಡಿದ್ದೇವೆ. ಹೊಸ ಮನೆ ನಿರ್ಮಾಣಕ್ಕೆ 2024-25ರ ಬಜೆಟ್‌ನಲ್ಲಿ ಹಣ ಕೊಟ್ಟಿರಲಿಲ್ಲ. ಈ ಬಾರಿ ಬಜೆಟ್‌ನಲ್ಲಿ ಹೊಸ ಮನೆ ನಿರ್ಮಾಣಕ್ಕೆ ಹಣ ಬಿಡುಗಡೆ ಸಿಎಂಗೆ ಮನವಿ ಮಾಡಿದ್ದೇನೆ. ಮನೆ ಕಟ್ಟಲು ಸಹಾಯ ಧನ 1.5 ಲಕ್ಷದಿಂದ 3 ಲಕ್ಷ ರೂ.ಗೆ ಹೆಚ್ಚಿಸಲು ಮನವಿ ಮಾಡಿದ್ದೇನೆ. ಪ್ರತಿ ವರ್ಷ 3 ಲಕ್ಷ ಮನೆ ಕಟ್ಟುವ ಟಾರ್ಗೆಟ್ ಕೊಡುತ್ತಿದ್ದರು. ಈ ಬಾರಿ ಟಾರ್ಗೆಟ್ ಕಡಿಮೆ ಮಾಡಲು ಮನವಿ ಮಾಡಿದ್ದೇನೆ ಎಂದು ವಿವರಿಸಿದರು.ಇದನ್ನೂ ಓದಿ: ಹಿಂದಿ ವಿರೋಧಿ ಪ್ರತಿಜ್ಞೆ ವೇಳೆ ಮಹಿಳೆಯ ಕೈ ಬಳೆ ಎಳೆದ ಡಿಎಂಕೆ ಕೌನ್ಸಿಲರ್
ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ಎಂಜಿ ಮೂಳೆ, ಕಾಂಗ್ರೆಸ್‌ನ ಉಮಾಶ್ರೀ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವ ವೆಂಕಟೇಶ್, ಹಾಲು ಉತ್ಪಾದಕರಿಗೆ 656.07 ಕೋಟಿ ರೂ. ಪ್ರೋತ್ಸಾಹ ಧನ ಬಾಕಿ ಉಳಿದುಕೊಂಡಿದೆ. 9,04,547 ಫಲಾನುಭವಿಗಳಿಗೆ ಬಾಕಿ ಹಣ ಕೊಡಬೇಕಾಗಿದೆ. ಇದರಲ್ಲಿ ಸಾಮಾನ್ಯ ವರ್ಗಕ್ಕೆ 613.58 ಕೋಟಿ ರೂ., ಪರಿಶಿಷ್ಟ ಜಾತಿಯವರಿಗೆ 18.29 ಕೋಟಿ ರೂ. ಹಾಗೂ ಪರಿಶಿಷ್ಟ ಪಂಗಡಕ್ಕೆ 24.20 ಕೋಟಿ ರೂ. ಬಾಕಿಯಿದೆ ಎಂದು ಮಾಹಿತಿ ನೀಡಿದರು.
ಬಾಕಿ ಹಣ ಬಿಡುಗಡೆಗೆ ಆರ್ಥಿಕ ಇಲಾಖೆಗೆ ಕೇಳಿದ್ದೇವೆ. ಆರ್ಥಿಕ ಇಲಾಖೆ ಬಿಡುಗಡೆ ಮಾಡಿದ ಕೂಡಲೇ ಬಾಕಿ ಹಣ ಬಿಡುಗಡೆ ಮಾಡ್ತೀವಿ. ಹಾಲಿನ ಉತ್ಪಾದನೆ ಜಾಸ್ತಿ ಆಗಿದೆ. ಬಜೆಟ್ ಅಲೋಕೇಷನ್ ಅದರಂತೆ ಕೊಡ್ತಿಲ್ಲ. ಹೀಗಾಗಿ ಬಾಕಿ ಉಳಿದಿದೆ. ಸಿಎಂ ಅವರಿಗೆ ಬಾಕಿ ಹಣ ಬಿಡುಗಡೆಗೆ ಮನವಿ ಮಾಡಿದ್ದೇನೆ. ಆದಷ್ಟು ಶೀಘ್ರವೇ ಬಾಕಿ ಹಣ ಬಿಡುಗಡೆ ಮಾಡುತ್ತೇವೆ. ಇನ್ನೂ ಹಾಲಿನ ದರ ಏರಿಕೆಗೆ ರೈತರ ಬೇಡಿಕೆಯಿದ್ದು, 10 ರೂ. ಜಾಸ್ತಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಹಾಲಿನ ದರ ಏರಿಕೆ ಮಾಡೇ ಮಾಡ್ತೀವಿ. ಎಷ್ಟು ಅಂತ ಸಿಎಂ ಜೊತೆ ಚರ್ಚೆ ಮಾಡಿ ತೀರ್ಮಾನ ಮಾಡ್ತೀವಿ ಎಂದು ವಿವರಿಸಿದರು.ಇದನ್ನೂ ಓದಿ: ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ ಮರು ಜಾರಿ ಮಾಡಿ: ಯತೀಂದ್ರ
ಬೆಂಗಳೂರು: ರಾಜ್ಯದಲ್ಲಿ ಮೈಸೂರು, ಮಂಡ್ಯ, ಕಾರವಾರ, ಶಿವಮೊಗ್ಗ, ತುಮಕೂರಿನಲ್ಲಿ ಹೊಸದಾಗಿ ಕ್ಯಾನ್ಸರ್ ಆಸ್ಪತ್ರೆಗಳ ಸ್ಥಾಪನೆ ಮಾಡುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ತಿಳಿಸಿದರು.
ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ನಾಗರಾಜ್ ಪ್ರಶ್ನೆ ಕೇಳಿ, ಕ್ಯಾನ್ಸರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಎಪಿಎಲ್ ಕಾರ್ಡ್ದಾರರಿಗೆ 50% ರಿಯಾಯಿತಿ ಕೊಡಿ. ಈಗ ಇರುವ 30% ಬದಲಾಗಿ 50% ರಿಯಾಯಿತಿ ಕೊಡಬೇಕು. ಬೆಳಗಾವಿಯಲ್ಲಿ ಒಂದು ಕ್ಯಾನ್ಸರ್ ಆಸ್ಪತ್ರೆ ಪ್ರಾರಂಭ ಮಾಡಬೇಕು ಎಂದು ಒತ್ತಾಯ ಮಾಡಿದರು.ಇದನ್ನೂ ಓದಿ: ಕೇಂದ್ರದ ವಿರುದ್ಧ ಸುಳ್ಳು ಮಾಹಿತಿ: ಸಿಎಂ ವಿರುದ್ದ ವಿಶ್ವನಾಥ್ ಕೆಂಡಾಮಂಡಲ
ಇದಕ್ಕೆ ಶರಣ ಪ್ರಕಾಶ್ ಪಾಟೀಲ್ ಪ್ರತಿಕ್ರಿಯಿಸಿ, ರಾಜ್ಯದಲ್ಲಿ 80% ಇರುವ ಬಿಪಿಎಲ್ ಕಾರ್ಡ್ದಾರರಿಗೆ ಉಚಿತ ಚಿಕಿತ್ಸೆ ಇದೆ. ನಮ್ಮ ಸರ್ಕಾರಿ ಆಸ್ಪತ್ರೆಗಳ ಚಿಕಿತ್ಸೆಗೆ ಕಡಿಮೆ ಹಣ ಇದೆ. ಎಪಿಎಲ್ ಕಾರ್ಡ್ದಾರರಿಗೆ 50% ರಿಯಾಯಿತಿ ಕೊಡುವ ಬಗ್ಗೆ ಆರ್ಥಿಕ ಇಲಾಖೆ ಜೊತೆ ಚರ್ಚೆ ಮಾಡುತ್ತೇವೆ. ಬೆಳಗಾವಿಯಲ್ಲಿ ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆಗೆ ನಿರ್ಧಾರ ಆಗಿದೆ. ಬೆಳಗಾವಿ ಮೆಡಿಕಲ್ ಕಾಲೇಜು ಆವರಣದಲ್ಲಿ ನಮಗೆ ಜಾಗ ಸಿಗುತ್ತಿಲ್ಲ. ಹೀಗಾಗಿ ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಮಾತುಕತೆ ಮಾಡಿ ಸ್ಥಳದ ಬಗ್ಗೆ ಅಂತಿಮ ತೀರ್ಮಾನ ಮಾಡುತ್ತೇವೆ ಎಂದರು.
ನಮ್ಮ ಸರ್ಕಾರ ಬಡವರ ಪರ ಇರುವ ಸರ್ಕಾರ. ಹೀಗಾಗಿ ರಾಜ್ಯದ ಹಲವು ಜಿಲ್ಲೆಯಲ್ಲಿ ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆ ಮಾಡಲಾಗುತ್ತಿದೆ. ಕಾರವಾರ, ಮಂಡ್ಯ, ಶಿವಮೊಗ್ಗ, ಮೈಸೂರು, ತುಮಕೂರಿನಲ್ಲಿ ಹೊಸದಾಗಿ ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆ ಮಾಡಲಾಗುತ್ತಿದೆ ಎಂದು ತಿಳಿಸಿದರು.ಇದನ್ನೂ ಓದಿ: ಆರೋಗ್ಯ ಇಲಾಖೆಯಲ್ಲಿ ಖಾಲಿ ಇರೋ ಹುದ್ದೆ ಭರ್ತಿಗೆ ಕ್ರಮ: ದಿನೇಶ್ ಗುಂಡೂರಾವ್
– ತಾಯಿ, ಮಗುವಿನ ಆರೋಗ್ಯದ ಹಿತದೃಷ್ಟಿಯಿಂದ ಸಿಸೇರಿಯನ್ ಹೆರಿಗೆಗಳಿಗೆ ನಿಯಂತ್ರಣ ಅಗತ್ಯ – ಭ್ರೂಣ ಹತ್ಯೆ ವಿರುದ್ಧ ಡಿಕಾಯ್ ಆಪರೇಷನ್‌ಗಳ ಮೂಲಕ 46 ಜನರ ಬಂಧನ
ಬೆಳಗಾವಿ: ರಾಜ್ಯದಲ್ಲಿ ಸಿಸೇರಿಯನ್ ಹೆರಿಗೆಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಮುಂದಿನ ತಿಂಗಳು ನೂತನ ಕಾರ್ಯಕ್ರಮ ಜಾರಿಗೊಳಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಹೇಳಿದ್ದಾರೆ.
ರಾಜ್ಯದಲ್ಲಿ ಪ್ರತಿ ವರ್ಷ ಸಿಸೇರಿಯನ್ ಹೆರಿಗೆ ಪ್ರಮಾಣ ಹೆಚ್ಚಾಗುತ್ತಿದೆ. 2021-2022ರಲ್ಲಿ 35% ಇದ್ದ ಸಿಸೇರಿಯನ್ ಪ್ರಮಾಣ, 2022-23ಕ್ಕೆ 38%ಕ್ಕೆ ಏರಿಕೆಯಾಗಿತ್ತು. ಪ್ರಸ್ತುತ ರಾಜ್ಯದಲ್ಲಿ ಸಿಸೇರಿಯನ್ ಹೆರಿಗೆ ಪ್ರಮಾಣ 46% ಇದೆ. ವಿಶೇಷವಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಶೇ.61ರಷ್ಟು ಸಿಸೇರಿಯನ್ ಹೆರಿಗೆ ಮಾಡಲಾಗುತ್ತಿದೆ. ಸಿಸೇರಿಯನ್‌ಗಳಿಂದ ಹೆಚ್ಚು ಆದಾಯ ಬರುತ್ತದೆ ಮತ್ತು ಸುಲಭವಾಗಿ ಸಿಸೇರಿಯನ್ ಮಾಡಬಹುದು ಎಂಬ ಕಾರಣಕ್ಕೆ ಖಾಸಗಿ ಆಸ್ಪತ್ರೆಗಳು ಸಿಸೇರಿಯನ್ ಹೆರಿಗೆಗಳನ್ನೇ ಹೆಚ್ಚು ಮಾಡುತ್ತಿದ್ದಾರೆ. ತಾಯಿ ಮತ್ತು ಮಗುವಿನ ಆರೋಗ್ಯ ದೃಷ್ಟಿಯಿಂದ ಇದಕ್ಕೆ ಕಡಿವಾಣ ಹಾಕುವುದು ಅತ್ಯಗತ್ಯವಾಗಿದೆ. ಈ ನಿಟ್ಟಿನಲ್ಲಿ ಮಹಿಳೆಯರನ್ನ ಸಹಜ ಹೆರಿಗೆ ಮಾಡಿಸಿಕೊಳ್ಳಲು ಮಾನಸಿಕವಾಗಿ ಸಜ್ಜುಗೊಳಿಸಿಬೇಕಿದೆ. ಇದಕ್ಕಾಗಿ ನೂತನ ಕಾರ್ಯಕ್ರಮ ಜಾರಿಗೊಳಿಸುತ್ತಿರುವುದಾಗಿ ಸದನಕ್ಕೆ ತಿಳಿಸಿದರು.
ಭ್ರೂಣ ಹತ್ಯೆ ವಿರುದ್ಧ ಯಶಸ್ವಿ ಡಿಕಾಯ್ ಆಪರೇಷನ್:
ರಾಜ್ಯದಲ್ಲಿ 2023-24ರಿಂದ ಇಲ್ಲಿಯವರೆಗೆ ಭ್ರೂಣ ಹತ್ಯೆಗೆ ಸಂಬಂಧಿಸಿದಂತೆ 8 ಪ್ರಕರಣ ದಾಖಲಿಸಿ 46 ಜನರನ್ನು ಬಂಧಿಸಲಾಗಿದೆ ಎಂದು ಇದೇ ವೇಳೆ ಸದನದಲ್ಲಿ ಮಾಹಿತಿ ನೀಡಿದರು. ರಾಜ್ಯದಲ್ಲಿ ಸ್ಕ್ಯಾನಿಂಗ್ ಸೆಂಟರ್ ಮತ್ತು ಆಸ್ಪತ್ರೆಗಳ ಮೇಲೆ ತಪಾಸಣೆಗಳನ್ನು ಜಾಸ್ತಿ ಮಾಡಿರುವುದರಿಂದ ಹೆಚ್ಚಿನ ಸಂಖ್ಯೆಯ ಭ್ರೂಣ ಹತ್ಯೆ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಅಲ್ಲದೇ ಡಿಕಾಯ್ ಆಪರೇಷನ್‌ಗಳ ಯಶಸ್ವಿ ಕಾರ್ಯಾಚರಣೆಗಳನ್ನ ನಡೆಸಿ ಭ್ರೂಣೆ ಹತ್ಯೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ರಾಜ್ಯದಲ್ಲಿ ಪ್ರತಿ ವರ್ಷ ಸಿಸೇರಿಯನ್ ಹೆರಿಗೆ ಪ್ರಮಾಣ ಹೆಚ್ಚಾಗುತ್ತಿದೆ. 2021-2022 ರಲ್ಲಿ 35% ಇದ್ದ ಸಿಸೇರಿಯನ್ ಪ್ರಮಾಣ, 2022-23 ಕ್ಕೆ 38%ಕ್ಕೆ ಏರಿಕೆಯಾಯಿತು. ಪ್ರಸ್ತುತ ರಾಜ್ಯದಲ್ಲಿ ಸಿಸೇರಿಯನ್ ಹೆರಿಗೆ ಪ್ರಮಾಣ 46% ಇದೆ. ತಾಯಿ ಮತ್ತು ಮಗುವಿನ ಆರೋಗ್ಯದ ದೃಷ್ಟಿಯಿಂದ ಸಿಸೇರಿಯನ್ ಹೆರಿಗೆಗೆ ನಿಯಂತ್ರಣ ಹೇರಬೇಕಿದೆ. ಈ… pic.twitter.com/AibFqsVQ5l
ರಾಜ್ಯದಲ್ಲಿ ಭ್ರೂಣ ಹತ್ಯೆ ತಡೆಯಲು ಸರ್ಕಾರವು ಪಿ.ಸಿ&ಪಿ.ಎನ್.ಡಿ.ಟಿ. ಕಾಯ್ದೆಯಡಿ ಬರುವ ಎಲ್ಲಾ ಶಾಸನಬದ್ದ ಸಮಿತಿಗಳನ್ನು ರಾಜ್ಯ ಮತ್ತು ಜಿಲ್ಲೆಗಳಲ್ಲಿ ರಚನೆ ಮಾಡಲಾಗಿದೆ. 2018 ರಿಂದ ರಾಜ್ಯದಲ್ಲಿ ‘ಬಾಲಿಕಾ’ ಆನ್ಲೈನ್ ಸಾಪ್ಟ್ವೇರ್ ಮುಖಾಂತರ ಎಲ್ಲಾ ಸ್ಕ್ಯಾನಿಂಗ್ ಸೆಂಟರ್‌ಗಳನ್ನು ಕಡ್ಡಾಯವಾಗಿ ನೋಂದಣಿ ಮತ್ತು ನವೀಕರಣ ನಡೆಸಲಾಗುತ್ತಿದೆ.ಇದನ್ನೂ ಓದಿ: ಬಿಜಿಎಸ್ ಆಸ್ಪತ್ರೆಯಿಂದ ಕೋರ್ಟ್‌ಗೆ ಆಗಮಿಸಿದ ದರ್ಶನ್
ರಾಜ್ಯ ಮಟ್ಟದಲ್ಲಿ ಶೇ.100ರಷ್ಟು ಗರ್ಭಿಣಿಯರ ನೋಂದಣಿ ಪ್ರಕ್ರಿಯೆಯು ಚಾಲ್ತಿಯಲ್ಲಿದ್ದು, ಗ್ರಾಮ ಮಟ್ಟದಲ್ಲಿ ಜನನ ಸಮಯದ ಲಿಂಗಾನುಪಾತದ ದತ್ತಾಂಶಗಳನ್ನು ಮಾಹಿತಿ ತಂತ್ರಜ್ಞಾನದ ಮುಖಾಂತರ ಮೇಲ್ವಿಚಾರಣೆ ಮಾಡಲು ಕಲ್ಪಿಸಲಾಗುತ್ತಿದೆ. ರಾಜ್ಯದಲ್ಲಿ ಇದುವರೆಗೂ ಪಿ.ಸಿ&ಪಿ.ಎನ್.ಡಿ.ಟಿ. ಕಾಯ್ದೆಯನ್ನು ಉಲ್ಲಂಘಿಸಿರುವ ಸ್ಕ್ಯಾನಿಂಗ್ ಸೆಂಟರ್/ಮಾಲೀಕರು/ವೈದ್ಯರ ವಿರುದ್ಧ ಒಟ್ಟು 136 ಪ್ರಕರಣಗಳನ್ನು ನ್ಯಾಯಾಲಯದಲ್ಲಿ ದಾವೆ ಹೂಡಲಾಗಿದ್ದು, 74 ಪ್ರಕರಣಗಳು ದಂಡ ವಿಧಿಸಿ ಖುಲಾಸೆಗೊಂಡಿವೆ ಹಾಗೂ 65 ಪ್ರಕರಣಗಳು ನ್ಯಾಯಾಲಯದಲ್ಲಿ ವಿವಿಧ ಹಂತದಲ್ಲಿ ಬಾಕಿಯಿರುತ್ತದೆ ಎಂದು ತಿಳಿಸಿದರು.
ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆ ಮಾಡುವಂತಹ ಸ್ಕ್ಯಾನಿಂಗ್ ಸೆಂಟರ್, ಆಸ್ಪತ್ರೆ, ವೈದ್ಯರು, ದಲ್ಲಾಳಿಗಳು, ಗರ್ಭಿಣಿಯರ ಸಂಬಂಧಿಕರ ವಿರುದ್ಧ ಮಾಹಿತಿ ನೀಡಿ, ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲು ಸಹಕರಿಸುವ ಮಾಹಿತಿದಾರರಿಗೆ ಕರ್ನಾಟಕ ಸರ್ಕಾರದಿಂದ ನೀಡುತ್ತಿದ್ದ ಬಹುಮಾನವನ್ನು 50 ಸಾವಿರದಿಂದ 1 ಲಕ್ಷದವರೆಗೆ ಹೆಚ್ಚಿಸಲಾಗಿದೆ. ಪಿ.ಸಿ. & ಪಿ.ಎನ್.ಡಿ.ಟಿ. ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಆಯುಕ್ತರ ಅಧ್ಯಕ್ಷತೆಯಲ್ಲಿ ರಾಜ್ಯ ಕಾರ್ಯಪಡೆಯನ್ನು ರಚಿಸಲಾಗಿದ್ದು, ರಾಜ್ಯ ಮಟ್ಟದಿಂದ ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಮಂಡ್ಯ, ಕೋಲಾರ ಜಿಲ್ಲೆಗಳಲ್ಲಿ ಗುಪ್ತ ಕಾರ್ಯಾಚರಣೆ ನಡೆಸಲಾಗಿದೆ ಎಂದರು.
ಹೆಣ್ಣು ಭ್ರೂಣ ಹತ್ಯೆ ಮಾಡದಂತೆ ರಾಜ್ಯಾದ್ಯಂತ ಜನಜಾಗೃತಿ ಹಾಗೂ ಅರಿವು ಮೂಡಿಸುವಂತಹ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ವಿವರಿಸಿದರು.ಇದನ್ನೂ ಓದಿ: ಬೆಜೆಪಿ ರೆಬೆಲ್ ತಂಡದಿಂದ ಫಡ್ನವಿಸ್ ಭೇಟಿ
ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಅಪರ ಕಾರ್ಯದರ್ಶಿಗಳಾಗಿ ಕಾರ್ಯನಿರ್ವಹಿಸುತ್ತಿರುವ ಎಸ್. ನಿರ್ಮಲಾ ಅವರಿಗೆ ಹೊಸದಾಗಿ ಸೃಜನೆಯಾಗಿರುವ ಕಾರ್ಯದರ್ಶಿ-2 ಹುದ್ದೆಗೆ ಬಡ್ತಿ ನೀಡಿ ಸರ್ಕಾರ ಆದೇಶಿಸಿದೆ.
ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದ (Karnataka Legislative Council) ಅಧಿಕಾರಿ ಮತ್ತು ನೌಕರರ ನೇಮಕಾತಿ ಹಾಗೂ ಸೇವಾ ಷರತ್ತುಗಳು) ನಿಯಮಗಳು, 2021ರ ನಿಯಮ 6(i)ರ ಪ್ರಕಾರ ಮಾನ್ಯ ವಿಶೇಷ ಮಂಡಳಿಗೆ ಪ್ರದತ್ತವಾಗಿರುವ ಅಧಿಕಾರದ ರೀತ್ಯಾ ಹಾಗೂ ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದ (ಅಧಿಕಾರಿ ಮತ್ತು ನೌಕರರ ನೇಮಕಾತಿ ಹಾಗೂ ಸೇವಾ ಷರತ್ತುಗಳು)ನಿಯಮಗಳು, 2024ರ (2ನೇ ತಿದ್ದುಪಡಿ) ಅನ್ವಯ ಅಪರ ಕಾರ್ಯದರ್ಶಿ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಸ್.ನಿರ್ಮಲಾ ಇವರನ್ನು ಹೊಸದಾಗಿ ಸೃಜನೆಯಾಗಿರುವ ಕಾರ್ಯದರ್ಶಿ-2 ಹುದ್ದೆಗೆ ಸ್ಥಾನಕ್ಕೆ ಬಡ್ತಿ ನೀಡಿ ನೇಮಕ ಮಾಡಲಾಗಿದೆ ಎಂದು ವಿಧಾನ ಪರಿಷತ್ ಕಾರ್ಯದರ್ಶಿ ಕೆ.ಆರ್.ಮಹಾಲಕ್ಷ್ಮೀ ಅವರು ತಿಳಿಸಿದ್ದಾರೆ.
ಬೆಂಗಳೂರು: ವಿಧಾನ ಪರಿಷತ್ (Karnataka Legislative Council) ಚುನಾವಣೆಗೆ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಮರಿತಿಬ್ಬೇಗೌಡ (Maritibbegowda) ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ.
ಅದಾದ ಬಳಿಕ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ್ದರು. ಅಲ್ಲದೇ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದರು. ಬಳಿಕ ಅವರು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದರು.
ಪರಿಷತ್ ಚುನಾವಣೆಗೆ ಬಿಜೆಪಿ ಐದು ಸ್ಥಾನಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಒಂದು ಸ್ಥಾನವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿದ್ದು, ಮೈತ್ರಿ ಮುಂದುವರಿಸುವುದಾಗಿ ತಿಳಿಸಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ಕಳೆದ ಐದು ದಿನದಲ್ಲಿ ಧರೆಗುರುಳಿದ 271 ಮರ