Tag: Karnataka Mahila Congress president

  • ಹೈಕಮಾಂಡ್‍ನಿಂದ ಲಕ್ಷ್ಮೀ ಹೆಬ್ಬಾಳ್ಕರ್ ತಲೆದಂಡ!

    ಹೈಕಮಾಂಡ್‍ನಿಂದ ಲಕ್ಷ್ಮೀ ಹೆಬ್ಬಾಳ್ಕರ್ ತಲೆದಂಡ!

    – ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆಯಾಗಿ ಪುಷ್ಪಾ ಅಮರನಾಥ್ ನೇಮಕ

    ಬೆಂಗಳೂರು: ರಾಜ್ಯ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಸ್ಥಾನದಿಂದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಕೆಳಗಿಳಿಸಿ, ಪುಷ್ಪಾ ಅಮರನಾಥ್ ಅವರನ್ನು ನೇಮಕ ಮಾಡಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆದೇಶ ಹೊರಡಿಸಿದ್ದಾರೆ.

    ಇಷ್ಟು ದಿನ ತೆರೆ ಮರೆಯಲ್ಲಿ ನಡೆಯುತ್ತಿದ್ದ ಪ್ರಯತ್ನಕ್ಕೆ ಈಗ ಅಧಿಕೃತವಾಗಿ ತೆರೆ ಬಿದ್ದಿದೆ. ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಅಧ್ಯಕ್ಷ ಪಟ್ಟದಿಂದ ಕೆಳಗಿಳಿಸುವಂತೆ ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಶಾಸಕ ಸತೀಶ್ ಜಾರಕಿಹೊಳಿ ಸಹೋದರರು ಬೇಡಿಕೆ ಇಟ್ಟಿದ್ದರು. ಈಗ ಹೈ ಕಮಾಂಡ್ ಈ ಬೇಡಿಕೆಗೆ ಅಸ್ತು ಅಂದಿದೆ ಎನ್ನುವ ವಿಶ್ಲೇಷಣೆ ಕೇಳಿ ಬಂದಿದೆ.

    ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಕೆಳಗಡೆ ಇಳಿಸುವ ವಿಚಾರ ಚರ್ಚೆ ಆಗುತ್ತಿದ್ದಂತೆ ಅಧ್ಯಕ್ಷೆ ಸ್ಥಾನಕ್ಕೆ ಕಾಂಗ್ರೆಸ್ ನಲ್ಲಿ ಲಾಬಿ ಜೋರಾಗಿತ್ತು. ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಶ್ಮಿತಾ ದೇವ್ ರಾಜ್ಯದ 12 ಜನ ಮಹಿಳಾ ನಾಯಕಿಯರನ್ನು ಕರೆದು ಸಂದರ್ಶನ ನಡೆಸಿದ್ದರು. ಇದಾದ ಕೆಲವೇ ದಿನಗಳ ನಂತರ 9 ಮಹಿಳಾ ಕಾಂಗ್ರೆಸ್ ಮುಖಂಡರನ್ನು ದೆಹಲಿಗೆ ಕರೆದು ಸಂದರ್ಶನ ನಡೆಸಿದ್ದರು. ಈ ಎಲ್ಲ ಪ್ರಕ್ರಿಯೆ ಮೂಲಕ ಪುಷ್ಪಾ ಅಮರನಾಥ್ ಅವರನ್ನು ಆಯ್ಕೆ ಮಾಡಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv