Tag: Karnataka Rains

  • ಮಳೆಯಿಂದ ಜೀವಕಳೆ, ಕಬಿನಿ ಡ್ಯಾಂ ಭರ್ತಿಗೆ ಎರಡೇ ಅಡಿ ಬಾಕಿ – ಯಾವ್ಯಾವ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ?

    ಮಳೆಯಿಂದ ಜೀವಕಳೆ, ಕಬಿನಿ ಡ್ಯಾಂ ಭರ್ತಿಗೆ ಎರಡೇ ಅಡಿ ಬಾಕಿ – ಯಾವ್ಯಾವ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ?

    ಬೆಂಗಳೂರು: ಮಳೆಯ ಅಬ್ಬರ ಹೆಚ್ಚಾಗಿದ್ದು, ರಾಜ್ಯಾದ್ಯಂತ ಇರುವ ಜಲಾಶಯಗಳಿಗೆ ಜೀವಕಳೆ ಬಂದಿದೆ. ಪ್ರಮುಖ ಜಲಾಶಯಗಳಿಗೆ ನೀರಿನ ಒಳಹರಿವು ಹೆಚ್ಚಾಗಿದ್ದು, ತುಂಬಿ ತುಳುಕುತ್ತಿವೆ. ಮಂಡ್ಯದ ಕೆಆರ್‌ಎಸ್‌ (KRS Reservoir) ಮಟ್ಟ 103.90 ಅಡಿ ಭರ್ತಿಯಾಗಿದ್ದು, ಕಬಿನಿ ಜಲಾಶಯದಲ್ಲಿ (Kabini Reservoir) 2,282.68 ಅಡಿಗಳಷ್ಟು ನೀರು ಭರ್ತಿಯಾಗಿದೆ. 2,284 ಅಡಿ ನೀರು ಸಂಗ್ರಹ ಸಾಮರ್ಥ್ಯದ ಡ್ಯಾಂ ಭರ್ತಿಗೆ ಇನ್ನೆರಡು ಅಡಿಯಷ್ಟೇ ಬಾಕಿಯಿದೆ. ಹಾಗಾದ್ರೆ ರಾಜ್ಯಾದ್ಯಂತ ಪ್ರಮುಖ ಜಲಾಶಯಗಳ ಇಂದಿನ ಮಟ್ಟ ಹೇಗಿದೆ ಎಂಬುದನ್ನು ನೋಡೋಣ…

    ಯಾವ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ?
    ಕೆಆರ್‌ಎಸ್ ಜಲಾಶಯ
    ಗರಿಷ್ಠ ಮಟ್ಟ – 124.80 ಅಡಿ.
    ಇಂದಿನ ಮಟ್ಟ – 103.90 ಅಡಿ.
    ಗರಿಷ್ಠ ಸಾಮರ್ಥ್ಯ – 49.452 ಟಿಎಂಸಿ
    ಇಂದಿನ ಸಾಮರ್ಥ್ಯ – 26.023 ಟಿಎಂಸಿ
    ಒಳ ಹರಿವು – 5,666 ಕ್ಯೂಸೆಕ್
    ಹೊರ ಹರಿವು – 581 ಕ್ಯೂಸೆಕ್

    ಕಬಿನಿ ಜಲಾಶಯ
    ಗರಿಷ್ಟ ಮಟ್ಟ : 2284 ( 19.52 ಟಿಎಂಸಿ)
    ಇಂದಿನ ಮಟ್ಟ : 2282.68 ( 18.52ಟಿಎಂಸಿ)
    ಹೊರ ಹರಿವು : 4667 ಕ್ಯೂಸೆಕ್.
    ಒಳ ಹರಿವು : 6453 ಕ್ಯೂಸೆಕ್

    ಆಲಮಟ್ಟಿ ಲಾಲಬಾಹ್ದೂರ ಶಾಸ್ತ್ರಿ ಜಲಾಶಯ
    ಗರಿಷ್ಠ ಮಟ್ಟ – 519.60 ಅಡಿ
    ಇಂದಿನ ಮಟ್ಟ – 516.51 ಅಡಿ
    ಗರಿಷ್ಠ ಸಾಂದ್ರತೆ – 123.081 ಟಿಎಂಸಿ
    ಇಂದಿನ ಸಾಂದ್ರತೆ – 78.618 ಟಿಎಂಸಿ
    ಒಳ ಹರಿವು – 84.645 ಕ್ಯೂಸೆಕ್
    ಹೊರ ಹರಿವು – 430 ಕ್ಯೂಸೆಕ್

    ಹೇಮಾವತಿ ಜಲಾಶಯದ
    ಗರಿಷ್ಠ ಮಟ್ಟ – 2922.00 ಅಡಿ
    ಇಂದಿನ ಮಟ್ಟ – 2899.30 ಅಡಿ
    ಒಳಹರಿವು – 6767 ಕ್ಯೂಸೆಕ್
    ಹೊರಹರಿವು – 250 ಕ್ಯೂಸೆಕ್
    ಸಂಗ್ರಹ ಸಾಮರ್ಥ್ಯ – 37.103 ಟಿಎಂಸಿ
    ಸದ್ಯ ಜಲಾಶಯದಲ್ಲಿರುವ ನೀರು – 19.369 ಟಿಎಂಸಿ

    ಹಾರಂಗಿ ಜಲಾಶಯದ
    ಗರಿಷ್ಠ ಮಟ್ಟ – 2,859 ಅಡಿ
    ಇಂದಿನ ಮಟ್ಟ – 2,850.03 ಅಡಿ
    ಇಂದಿನ ನೀರಿನ ಒಳಹರಿವು – 2,377 ಕ್ಯುಸೆಕ್
    ಹೊರ ಹರಿವು ನದಿಗೆ – 466 ಕ್ಯುಸೆಕ್
    ಒಟ್ಟು ಸಾಂದ್ರತೆ – 8.5 ಟಿಎಂಸಿ
    ಇಂದಿನ ಸಾಂದ್ರತೆ – 5.92 ಟಿಎಂಸಿ

    ತುಂಗಭದ್ರಾ ಜಲಾಶಯ
    ಗರಿಷ್ಠ ಮಟ್ಟ – 1,633 ಅಡಿ
    ಇಂದಿನ ಮಟ್ಟ – 1,602.67ಅಡಿ
    ಗರಿಷ್ಠ ಸಾಂದ್ರತೆ – 105.788 ಟಿಎಂಸಿ
    ಇಂದಿನ ಸಾಂದ್ರತೆ – 25.173 ಟಿಎಂಸಿ
    ಒಳ ಹರಿವು – 20,285 ಕ್ಯೂಸೆಕ್
    ಹೊರ ಹರಿವು – 199 ಕ್ಯೂಸೆಕ್

  • ಬೆಂಗಳೂರು ಕೂಲ್‌ ಕೂಲ್‌- ಇಂದು ಸಾಧಾರಣ ಮಳೆ ಸಾಧ್ಯತೆ

    ಬೆಂಗಳೂರು ಕೂಲ್‌ ಕೂಲ್‌- ಇಂದು ಸಾಧಾರಣ ಮಳೆ ಸಾಧ್ಯತೆ

    – ಸೋಮವಾರ ರಾಜ್ಯದಲ್ಲಿ ಎಲ್ಲೆಲ್ಲಿ ಎಷ್ಟು ಮಳೆ?

    ಬೆಂಗಳೂರು: ರಾಜಧಾನಿಯಲ್ಲಿ ಮುಂಗಾರು ಚುರುಕು ಪಡೆದುಕೊಂಡಿದ್ದು, ಕಳೆದ ಎರಡು-ಮೂರು ದಿನಗಳಲ್ಲಿ ತಂಪಾದ ವಾತಾವರಣ ಇದೆ. ಕೂಲ್‌ ವೆದರ್‌ ಜೊತೆಗೆ ಸಾಧಾರಣ ಮಳೆಯಾಗುತ್ತಿದೆ.

    ಮುಂದಿನ ನಾಲ್ಕು ದಿನ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಮಿಂಚು, ಗಾಳಿ ಸಹಿತ ಭಾರೀ ಮಳೆಯಾಗಲಿದೆ. ಉತ್ತರ ಒಳನಾಡು, ದಕ್ಷಿಣ ಒಳನಾಡು ಜಿಲ್ಲೆಗಳಿಗೂ ಮಳೆ ಅಲರ್ಟ್ ಇದೆ. ಇದನ್ನೂ ಓದಿ: KRS ಡ್ಯಾಂನಿಂದ ನಾಲೆಗಳಿಗೆ ನೀರು ಬಿಡುಗಡೆ ಮುಂದೂಡಿಕೆ

    ಬೆಂಗಳೂರಿನಲ್ಲಿ ಮೂರ್ನಾಲ್ಕು ದಿನ ಮೋಡ ಕವಿದ ವಾತವರಣ ಮುಂದುವರಿದಿದೆ. ನಗರದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಜಿಲ್ಲೆಗಳಲ್ಲಿ ಇಂದು ಮಳೆ ಎಚ್ಚರಿಕೆ ನೀಡಲಾಗಿದೆ. 30-40 ಕಿಮೀ ವೇಗದಲ್ಲಿ ಗಾಳಿ ಸಹಿತ ಮಳೆಯಾಗಲಿದೆ. ಗರಿಷ್ಠ- 27°ಸಿ , ಕನಿಷ್ಠ 21° ತಾಪಮಾನವಿರಲಿದೆ.

    ನಿನ್ನೆ ಬೆಂಗಳೂರಿನಾದ್ಯಂತ ಭಾರೀ ಮಳೆಯಾಗಿತ್ತು. ನಗರದ ಯಲಹಂಕ ಹಾಗೂ ದಾಸರಹಳ್ಳಿಯಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಇಂದು ಕೂಡ ನಗರದಲ್ಲಿ ಮಳೆ ಸಾಧ್ಯತೆ ಇದೆ. ಜುಲೈ 12ರ ವರೆಗೆ ನಗರದಲ್ಲಿ ಮಳೆ ಮುನ್ಸೂಚನೆ ನೀಡಲಾಗಿದೆ. ಇದನ್ನೂ ಓದಿ: Karnataka Rain Alert: ಬೆಂಗ್ಳೂರಲ್ಲಿ ಬಿಟ್ಟೂಬಿಡದ ಮಳೆ – ಬೋಟ್‌ಗಳಲ್ಲಿ ಜನ, ಸಾಕುಪ್ರಾಣಿಗಳ ರಕ್ಷಣೆ; ಎಲ್ಲೆಲ್ಲಿ ಏನಾಯ್ತು?

    ನಿನ್ನೆ ಎಲ್ಲೆಲ್ಲಿ ಎಷ್ಟೆಷ್ಟು ಮಳೆ?
    ಯಲಹಂಕ : 22.40 mm
    ದಾಸರಹಳ್ಳಿ : 22.25 mm
    ಪಶ್ಚಿಮ ವಲಯ : 15.81 mm
    ಪೂರ್ವ ವಲಯ : 11.50 mm
    ಉತ್ತರ ವಲಯ : 10.74 mm
    ಮಹಾದೇವಪುರ : 8.55 mm
    ಬೊಮ್ಮನಹಳ್ಳಿ : 7.04 mm
    ದಕ್ಷಿಣ ವಲಯ : 6.90 mm

    ರಾಜ್ಯದಲ್ಲಿ ನಿನ್ನೆ ಎಲ್ಲೆಲ್ಲಿ ಎಷ್ಟೆಷ್ಟು ಮಳೆ?
    ಬಜ್ಪೆ (ಮಂಗಳೂರು) : 98.9 mm
    ಪಣಂಬೂರು (ಮಂಗಳೂರು) : 64.7 mm
    ಕಾರವಾರ : 8.6 mm
    ಶಿರಾಲಿ : 20.0 mm
    ಹೊನ್ನಾವರ : 41.0 mm
    ಬೆಳಗಾವಿ : 5.0 mm
    ಗದಗ : 8.6 mm
    ಧಾರವಾಡ : 1.8 mm
    ವಿಜಯಪುರ : 13.4 mm
    ಕಲಬುರಗಿ : 22.0 mm
    ಚಿತ್ರದುರ್ಗ : 3.4 mm
    ಬೆಂಗಳೂರು : 22.3 mm
    ಬೆಂಗಳೂರು KIA : 4.5 mm
    ಬೆಂಗಳೂರು HAL : 10.3 mm
    ಮಂಡ್ಯ : 1.0 mm
    ದೊಡ್ಡಬಳ್ಳಾಪುರ : 2.5 mm
    ಮೂಡಿಗೆರೆ : 13.5 mm
    ದಾವಣಗೆರೆ : 3.5 mm
    ಹಾಸನ : 1.0 mm
    ಗೋಣಿಕೊಪ್ಪಲು : 8.0 mm
    ಗಂಗಾವತಿ : 6.5 mm
    ಆಗುಂಬೆ : 55.5 mm
    ಔರಾದ್ : 6.5 mm
    ಮಂಗಳೂರು : 31.0 mm
    ಚಾಮರಾಜನಗರ : 2.5 mm
    ರಾಮನಗರ : 0.5 mm

  • ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ – ಕುಂದಾಪುರ, ಬ್ರಹ್ಮಾವರ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

    ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ – ಕುಂದಾಪುರ, ಬ್ರಹ್ಮಾವರ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

    ಉಡುಪಿ: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ (Heavy Rain) ಹೆಚ್ಚಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣ ಆಗಿದೆ. ಈ ಹಿನ್ನೆಲೆಯಲ್ಲಿ ಉಡುಪಿ (Udupi) ಜಿಲ್ಲೆಯ ಎರಡು ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

    ಉಡುಪಿ ಜಿಲ್ಲೆಯ ಕುಂದಾಪುರ (Kundapura), ಬ್ರಹ್ಮಾವರ (Brahmavara) ತಾಲೂಕಿನಲ್ಲಿ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಪೂರ್ವ ವಿಭಾಗಕ್ಕೆ ರಜೆ (Holiday For School) ಘೋಷಿಸಲಾಗಿದೆ. ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೊಮಾ, ಎಂಜಿನಿಯರಿಂಗ್, ಐಟಿಐ ವಿದ್ಯಾಸಂಸ್ಥೆಗಳು ಎಂದಿನಂತೆ ನಡೆಯಲಿವೆ. ಅಲ್ಲದೇ ಉಡುಪಿ, ಬೈಂದೂರು, ಕಾಪು, ಕಾರ್ಕಳ, ಹೆಬ್ರಿಯಲ್ಲಿ ಶಾಲಾ, ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ಸಂಬಂಧಪಟ್ಟ ಅಧಿಕಾರಿಗಳು ತಿಳಿಸಿದ್ದಾರೆ.

    ಪ್ರವಾಹ ಪರಿಸ್ಥಿತಿ ನಿರ್ಮಾಣ:
    ಮಳೆಯ ಆರ್ಭಟ ಹೆಚ್ಚಿದ ಹಿನ್ನೆಲೆಯಲ್ಲಿ ಅಂಕೋಲದ ಸೇರಿ ವಿವಿಧೆಡೆ ಮಳೆಗೆ ಮನೆ, ಸೇತುವೆ, ರಸ್ತೆಗಳು ಜಲಾವೃತವಾಗಿದೆ. ಹೊನ್ನಾವರದ ವರ್ನಕ್ಕೇರಿ ಬಳಿ ಹೆದ್ದಾರಿ ಮೇಲೆ ಗುಡ್ಡ ಕುಸಿದಿದ್ದು, ಸಂಚಾರಕ್ಕೆ ಅಡಚಣೆಯಾಗಿದೆ. ಹೊನ್ನಾವರದ ಗುಂಡಬಾಳ ನದಿ ಉಕ್ಕಿ ಹರಿದು, 50 ಮನೆಗಳಿಗೆ ನೀರು ನುಗ್ಗಿದೆ.

    ಮಳೆ ನೀರಿನೊಂದಿಗೆ ತೇಲಿಬಂತು ಹೆಬ್ಬಾವು:
    ಕದಂಬ ನೌಕಾನೆಲೆಯ ಕಾಂಪೌಂಡ್, ಅವೈಜ್ಞಾನಿಕ ಹೆದ್ದಾರಿ ಕಾಮಗಾರಿ ಕಾರಣ ಆರಗಾ ಗ್ರಾಮ ಜಲಾವೃತದ ಭೀತಿ ಎದುರಿಸ್ತಿದೆ. ಜನರ ರಕ್ಷಣೆಗೆ ಎನ್‌ಡಿಆರ್‌ಎಫ್, ಬೋಟ್ ನಿಯೋಜಿಸಲಾಗಿದೆ. ಈ ನಡುವೆ ಕಾರವಾರದ ಸೋನಾರವಾಡದಲ್ಲಿ ಮಳೆಯ ನೀರಿನೊಂದಿಗೆ 12 ಅಡಿ ಉದ್ದದ ಹೆಬ್ಬಾವು ಮನೆಯೊಳಕ್ಕೆ ತೇಲಿಬಂದ ದೃಶ್ಯವೂ ಕಂಡುಬಂದಿದೆ.

    ಇನ್ನು, ಉಡುಪಿಯಲ್ಲಿ ಸೌಪರ್ಣಿಕಾ ನದಿ ಮೈದುಂಬಿದೆ. ಬೈಂದೂರು ತಾಲೂಕಿನ ನಾವುಂದ ಬಡಾಕೆರೆ ಜಲಾವೃತವಾಗಿದೆ. 100ಕ್ಕೂ ಅಧಿಕ ಮನೆಗಳಿಗೆ ನೀರು ನುಗ್ಗಿದೆ. ಮಂಗಳೂರಿನ ಕೆತ್ತಿಕ್ಕಲ್‌ನಲ್ಲಿ ಗುಡ್ಡ ಕುಸಿಯುತ್ತಿದೆ. ಮಣ್ಣಿನ ದಿಬ್ಬ ರಸ್ತೆ ಮೇಲೆ ಬೀಳುವ ಆತಂಕ ಎದುರಾಗಿದೆ. ಪಶ್ಚಿಮಘಟ್ಟ ಪ್ರದೇಶದಲ್ಲಿಯೂ ಮಳೆ ಅಬ್ಬರಿಸುತ್ತಿದೆ. ಬೆಳಗಾವಿಯ ಸಪ್ತ ನದಿಗಳಿಗೆ ಜೀವ ಕಳೆ ಬಂದಿದೆ. ಗೋಕಾಕ್ ಫಾಲ್ಸ್‌ನಲ್ಲಿ ಜಲವೈಭವ ಕಂಡುಬರುತ್ತಿದೆ. ಬೆಳಗಾವಿ-ಸಾವಗಾಂವ ಜಿಲ್ಲಾ ಮುಖ್ಯರಸ್ತೆ ಬಿರುಕು ಬಿಟ್ಟಿರುವುದು ಕಂಡುಬಂದಿದೆ.

  • ರಾಜ್ಯದ ಹವಾಮಾನ ವರದಿ: 09-06-2024

    ರಾಜ್ಯದ ಹವಾಮಾನ ವರದಿ: 09-06-2024

    ದಿನದಿಂದ ದಿನಕ್ಕೆ ರಾಜ್ಯಾದ್ಯಂತ ಮುಂಗಾರು ಚುರುಕು ಪಡೆಯುತ್ತಿದ್ದು, ಇಂದಿನಿಂದ ಜೂನ್ 12ರ ವರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

    ಕಳೆದೊಂದು ವಾರದಿಂದ ರಾಜ್ಯದ ಎಲ್ಲಾ ಭಾಗದಲ್ಲೂ ಅಬ್ಬರದ ಮಳೆಯಾಗುತ್ತಿದೆ. ಇದೀಗ ಇಲಾಖೆ ನೀಡಿರುವ ಎಚ್ಚರಿಕೆಯ ಹಿನ್ನೆಲೆಯಲ್ಲಿ ರಾಜ್ಯದ ಕೆಲ ಜಿಲ್ಲೆಗಳಿಗೆ ಅಲರ್ಟ್‌ಗಳನ್ನು ಘೋಷಣೆ ಮಾಡಲಾಗಿದೆ. ಒಟ್ಟು 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿ ಎಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕಲಬುರಗಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 27-21
    ಮಂಗಳೂರು: 27-24
    ಶಿವಮೊಗ್ಗ: 26-22
    ಬೆಳಗಾವಿ: 23-21
    ಮೈಸೂರು: 28-22

    ಮಂಡ್ಯ: 29-22
    ಮಡಿಕೇರಿ: 27-17
    ರಾಮನಗರ: 29-22
    ಹಾಸನ: 25-20
    ಚಾಮರಾಜನಗರ: 29-22
    ಚಿಕ್ಕಬಳ್ಳಾಪುರ: 28-21

    ಕೋಲಾರ: 29-22
    ತುಮಕೂರು: 28-21
    ಉಡುಪಿ: 27-24
    ಕಾರವಾರ: 27-26
    ಚಿಕ್ಕಮಗಳೂರು: 23-19
    ದಾವಣಗೆರೆ: 27-22

    ಹುಬ್ಬಳ್ಳಿ: 24-22
    ಚಿತ್ರದುರ್ಗ: 27-21
    ಹಾವೇರಿ: 26-22
    ಬಳ್ಳಾರಿ: 29-23
    ಗದಗ: 25-22
    ಕೊಪ್ಪಳ: 27-23

    ರಾಯಚೂರು: 29-23
    ಯಾದಗಿರಿ: 29-24
    ವಿಜಯಪುರ: 26-22
    ಬೀದರ್: 29-23
    ಕಲಬುರಗಿ: 30-23
    ಬಾಗಲಕೋಟೆ: 26-23

  • ರಾಜ್ಯದ ಹವಾಮಾನ ವರದಿ: 01-06-2024

    ರಾಜ್ಯದ ಹವಾಮಾನ ವರದಿ: 01-06-2024

    ಬೆಂಗಳೂರು: ರಾಜ್ಯಕ್ಕೆ ಮುಂಗಾರು ಮಳೆ ಪ್ರವೇಶದ ಲಕ್ಷಣಗಳು ಗೋಚರಿಸುತ್ತಿದ್ದು, ಕೆಲವೆಡೆ ಮಳೆಯಾಗುತ್ತಿದೆ. ಇಂದು ಸಹ ರಾಜ್ಯದ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ವರದಿ ಮಾಡಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 33-23
    ಮಂಗಳೂರು: 31-27
    ಶಿವಮೊಗ್ಗ: 32-23
    ಬೆಳಗಾವಿ: 34-23
    ಮೈಸೂರು: 33-22

    ಮಂಡ್ಯ: 34-23
    ಮಡಿಕೇರಿ: 26-20
    ರಾಮನಗರ: 34-23
    ಹಾಸನ: 29-22
    ಚಾಮರಾಜನಗರ: 33-23
    ಚಿಕ್ಕಬಳ್ಳಾಪುರ: 34-23

    ಕೋಲಾರ: 34-24
    ತುಮಕೂರು: 33-23
    ಉಡುಪಿ: 29-26
    ಕಾರವಾರ: 32-27
    ಚಿಕ್ಕಮಗಳೂರು: 28-21
    ದಾವಣಗೆರೆ: 35-24

    ಹುಬ್ಬಳ್ಳಿ: 34-23
    ಚಿತ್ರದುರ್ಗ: 34-23
    ಹಾವೇರಿ: 34-24
    ಬಳ್ಳಾರಿ: 29-26
    ಗದಗ: 36-24
    ಕೊಪ್ಪಳ: 37-25

    ರಾಯಚೂರು: 40-28
    ಯಾದಗಿರಿ: 40-28
    ವಿಜಯಪುರ: 39-25
    ಬೀದರ್: 39-27
    ಕಲಬುರಗಿ: 40-28
    ಬಾಗಲಕೋಟೆ: 32-22

  • ರಾಜ್ಯದ ಹವಾಮಾನ ವರದಿ: 31-05-2024

    ರಾಜ್ಯದ ಹವಾಮಾನ ವರದಿ: 31-05-2024

    ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಆರಂಭದ ಲಕ್ಷಣಗಳು ಗೋಚರಿಸುತ್ತಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ಮೋಡ ಕವಿದ ವಾತಾವರಣವಿದೆ. ಅಲ್ಲದೇ ಕೆಲವೆಡೆ ಮಳೆಯಾಗುತ್ತಿದೆ. ಇಂದು ಸಹ ರಾಜ್ಯದ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ವರದಿ ಮಾಡಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 33-23
    ಮಂಗಳೂರು: 31-27
    ಶಿವಮೊಗ್ಗ: 32-23
    ಬೆಳಗಾವಿ: 34-23
    ಮೈಸೂರು: 33-22

    ಮಂಡ್ಯ: 34-23
    ಮಡಿಕೇರಿ: 26-20
    ರಾಮನಗರ: 34-23
    ಹಾಸನ: 29-22
    ಚಾಮರಾಜನಗರ: 33-23
    ಚಿಕ್ಕಬಳ್ಳಾಪುರ: 34-23

    ಕೋಲಾರ: 34-24
    ತುಮಕೂರು: 33-23
    ಉಡುಪಿ: 29-26
    ಕಾರವಾರ: 32-27
    ಚಿಕ್ಕಮಗಳೂರು: 28-21
    ದಾವಣಗೆರೆ: 35-24

    ಹುಬ್ಬಳ್ಳಿ: 34-23
    ಚಿತ್ರದುರ್ಗ: 34-23
    ಹಾವೇರಿ: 34-24
    ಬಳ್ಳಾರಿ: 29-26
    ಗದಗ: 36-24
    ಕೊಪ್ಪಳ: 37-25

    ರಾಯಚೂರು: 40-28
    ಯಾದಗಿರಿ: 40-28
    ವಿಜಯಪುರ: 39-25
    ಬೀದರ್: 39-27
    ಕಲಬುರಗಿ: 40-28
    ಬಾಗಲಕೋಟೆ: 32-22

  • ರಾಜ್ಯದ ಹವಾಮಾನ ವರದಿ: 30-05-2024

    ರಾಜ್ಯದ ಹವಾಮಾನ ವರದಿ: 30-05-2024

    ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಪೂರ್ವ ಮುಂಗಾರುಮಳೆ ಅಬ್ಬರಿಸುತ್ತಿದೆ. ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ವಿವಿಧೆಡೆ ಮಳೆಯಾಲಿದೆ ಎಂದು ಬೆಂಗಳೂರು ಹವಾಮಾನ ಇಲಾಖೆ ತಿಳಿಸಿದೆ.

    ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

    ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೀದರ್, ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆ ಹೆಚ್ಚಾಗುವ ಸಾಧ್ಯತೆ ಇದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 41 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 32-22
    ಮಂಗಳೂರು: 29-26
    ಶಿವಮೊಗ್ಗ: 31-23
    ಬೆಳಗಾವಿ: 33-23
    ಮೈಸೂರು: 32-22

    ಮಂಡ್ಯ: 33-23
    ಮಡಿಕೇರಿ: 24-28
    ರಾಮನಗರ: 33-23
    ಹಾಸನ: 29-21
    ಚಾಮರಾಜನಗರ: 33-23
    ಚಿಕ್ಕಬಳ್ಳಾಪುರ: 34-23

    ಕೋಲಾರ: 34-24
    ತುಮಕೂರು: 33-23
    ಉಡುಪಿ: 29-26
    ಕಾರವಾರ: 32-27
    ಚಿಕ್ಕಮಗಳೂರು: 28-21
    ದಾವಣಗೆರೆ: 35-24

    ಹುಬ್ಬಳ್ಳಿ: 34-23
    ಚಿತ್ರದುರ್ಗ: 34-23
    ಹಾವೇರಿ: 34-24
    ಬಳ್ಳಾರಿ: 29-26
    ಗದಗ: 36-24
    ಕೊಪ್ಪಳ: 37-25

    ರಾಯಚೂರು: 40-28
    ಯಾದಗಿರಿ: 40-28
    ವಿಜಯಪುರ: 39-25
    ಬೀದರ್: 39-27
    ಕಲಬುರಗಿ: 40-28
    ಬಾಗಲಕೋಟೆ: 32-22

  • ರಾಜ್ಯದ ಹವಾಮಾನ ವರದಿ: 24-05-2024

    ರಾಜ್ಯದ ಹವಾಮಾನ ವರದಿ: 24-05-2024

    ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಪೂರ್ವ ಮುಂಗಾರುಮಳೆ ಅಬ್ಬರಿಸುತ್ತಿದೆ. ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ವಿವಿಧೆಡೆ ಮಳೆಯಾಲಿದೆ ಎಂದು ಬೆಂಗಳೂರು ಹವಾಮಾನ ಇಲಾಖೆ ಕೇಂದ್ರದ ಮುಖ್ಯಸ್ಥರಾದ ಡಾ.ರಾಜವೇಲ್ ಮಾಣಿಕ್ಕಂ ತಿಳಿಸಿದ್ದಾರೆ.

    ರಾಜದಲ್ಲಿ ಹವಾಮಾನ ವಾತಾವರಣ ಹೇಗಿರಲಿದೆ?
    ಮೇ 24: ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಹಲವೆಡೆ ಗುಡುಗು ಸಹಿತ ಗಾಳಿ ಸಹಿತ (ಗಂಟೆಗೆ 40-50 ಕಿ.ಮೀ) ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳು.
    * ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
    * ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (30-40 kmph) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
    * ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರ್ಗಿ, ವಿಜಯಪುರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (30-40 kmph) ಹಗುರ ಮಳೆಯಾಗುವ ಸಾಧ್ಯತೆಯಿದೆ.
    * ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

    ಮೇ 25: ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
    * ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (30-40 ಕಿಮೀ) ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
    * ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (30-40 ಕಿಮೀ) ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
    * ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರ ಮಳೆ / ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
    * ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಲವೆಡೆ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
    * ಬೀದರ್, ಕಲಬುರ್ಗಿ, ಕೊಪ್ಪಳ, ಬಳ್ಳಾರಿ ಜಿಲ್ಲೆಯಲ್ಲಿ ಒಣ ಹವೆ ಹೆಚ್ಚಾಗುವ ಸಾಧ್ಯತೆ ಇದೆ.

    ಮೇ 26: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
    •ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಕೊಡಗು, ರಾಮನಗರ, ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
    * ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮೈಸೂರು, ಕೋಲಾರ, ಮಂಡ್ಯ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರ ಮಳೆ / ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
    * ರಾಯಚೂರು, ಯಾದಗಿರಿ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
    * ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ.
    * ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಜಿಲ್ಲೆಯ ಪ್ರತ್ಯೇಕ ಸ್ಥಳಗಳಲ್ಲಿ ಹಗುರ ಮಳೆ / ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
    * ಬೀದರ್, ಕಲಬುರ್ಗಿ, ಬಾಗಲಕೋಟೆ, ಕಲಬುರ್ಗಿ ಜಿಲ್ಲೆಯಲ್ಲಿ ಒಣ ಹವೆ ಹೆಚ್ಚಾಗುವ ಸಾಧ್ಯತೆ ಇದೆ.

    ಮೇ 27: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
    * ಕೊಡಗು ಜಿಲ್ಲೆಯ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ.
    * ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ.
    * ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಯ ಪ್ರತ್ಯೇಕ ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.
    * ಬಾಗಲಕೋಟೆ, ಬೀದರ್, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆ ಹೆಚ್ಚಾಗುವ ಸಾಧ್ಯತೆ ಇದೆ.

    ಮೇ 28: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
    * ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ರಾಮನಗರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
    * ಉತ್ತರ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಂಭವವಿದೆ.
    * ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರು, ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.
    * ಬಾಗಲಕೋಟೆ, ಬೀದರ್, ಗದಗ, ಕಲಬುರ್ಗಿ, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆ ಹೆಚ್ಚಾಗುವ ಸಾಧ್ಯತೆ ಇದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕಲಬುರಗಿಯಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 30-21
    ಮಂಗಳೂರು: 30-26
    ಶಿವಮೊಗ್ಗ: 32-23
    ಬೆಳಗಾವಿ: 32-23
    ಮೈಸೂರು: 29-22

    ಮಂಡ್ಯ: 31-22
    ಮಡಿಕೇರಿ: 24-18
    ರಾಮನಗರ: 31-23
    ಹಾಸನ: 29-21
    ಚಾಮರಾಜನಗರ: 29-22
    ಚಿಕ್ಕಬಳ್ಳಾಪುರ: 32-22

    ಕೋಲಾರ: 32-23
    ತುಮಕೂರು: 32-22
    ಉಡುಪಿ: 31-26
    ಕಾರವಾರ: 32-28
    ಚಿಕ್ಕಮಗಳೂರು: 28-21
    ದಾವಣಗೆರೆ: 34-24

    ಹುಬ್ಬಳ್ಳಿ: 34-24
    ಚಿತ್ರದುರ್ಗ: 33-23
    ಹಾವೇರಿ: 34-24
    ಬಳ್ಳಾರಿ: 37-26
    ಗದಗ: 34-24
    ಕೊಪ್ಪಳ: 35-25

    ರಾಯಚೂರು: 39-27
    ಯಾದಗಿರಿ: 39-28
    ವಿಜಯಪುರ: 39-26
    ಬೀದರ್: 38-28
    ಕಲಬುರಗಿ: 39-28
    ಬಾಗಲಕೋಟೆ: 38-26

  • ರಾಜ್ಯದ ಹಲವು ಭಾಗಗಳಲ್ಲಿ ಗಾಳಿ ಸಹಿತ ಭಾರೀ ಮಳೆ

    ರಾಜ್ಯದ ಹಲವು ಭಾಗಗಳಲ್ಲಿ ಗಾಳಿ ಸಹಿತ ಭಾರೀ ಮಳೆ

    ಬೆಂಗಳೂರು: ರಾಜ್ಯದ ಚಾಮರಾಜನಗರ, ಮಂಗಳೂರು, ಹಾಸನ (Hassan), ಹಾವೇರಿ ಸೇರಿದಂತೆ ವಿವಿಧ ಭಾಗಗಳಲ್ಲಿ ಭಾರೀ (Rain) ಮಳೆಯಾಗಿದೆ. ಮಳೆಯ ಪರಿಣಾಮದಿಂದ ರೈತರು ಒಂದೆಡೆ ಸಂಭ್ರಮ ಪಟ್ಟರೆ ಇನ್ನೊಂದೆಡೆ ಕೆಲವರು ಬೆಳೆ ಹಾನಿ ಹಾಗೂ ಕೆಲವು ಅವಾಂತರಗಳಿಂದ ಸಣ್ಣಪುಟ್ಟ ತೊಂದರೆ ಅನುಭವಿಸಿದ್ದಾರೆ.

    ಚಾಮರಾಜನಗರದ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗಿದೆ. ಇದರ ಪರಿಣಾಮ ಹೆಬ್ಬಸೂರು ಗ್ರಾಮದ ಮಂಜುನಾಥ್ ಎಂಬವರಿಗೆ ಸೇರಿದ ಬಾಳೆ ಬೆಳೆ ನೆಲಕಚ್ಚಿದ್ದು, ಲಕ್ಷಾಂತರ ರೂ. ನಷ್ಟ ಅನುಭವಿಸಿದ್ದು, ಸೂಕ್ತ ಪರಿಹಾರ ಒದಗಿಸುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

    ಹಾಸನ ಜಿಲ್ಲೆಯ ವಿವಿಧೆಡೆ ಭಾರೀ ಗಾಳಿ, ಗುಡುಗು- ಸಿಡಿಲು ಸಹಿತ ಮಳೆಯಾಗಿದೆ. ಬಿರುಗಾಳಿಗೆ ಬೇಲೂರಿನ ಗುಣಿಕೆರೆ ಬೀದಿಯಲ್ಲಿ ಕೇಶವಮೂರ್ತಿ ಎಂಬವರ ಮನೆಯ ಮೇಲೆ ಬೃಹತ್ ಮರವೊಂದು ಉರುಳಿ ಬಿದ್ದಿದೆ. ಪರಿಣಾಮ ಗೃಹಪಯೋಗಿ ವಸ್ತುಗಳು ಜಖಂ ಆಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಸ್ಥಳಕ್ಕೆ ಪುರಸಭೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಧಾರವಾಡದಲ್ಲಿ ಗಾಳಿ ಸಹಿತ ಧಾರಾಕಾರವಾಗಿ ಮಳೆಯಾಗಿದೆ. ಪರಿಣಾಮ ನಗರದ ಹಲವೆಡೆ ಮರಗಳು ಧರೆಗೆ ಉರುಳಿವೆ. ಕಳೆದ ಒಂದು ಗಂಟೆಯಿಂದ ಮಳೆ ಮುಂದುವರಿಯುತ್ತಿದೆ. ಹುಬ್ಬಳ್ಳಿಯಲ್ಲೂ ಮಳೆಯಾಗುತ್ತಿದೆ. ನಗರದ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು ವಾಹನ ಸವಾರರು ಪರದಾಡುತ್ತಿದ್ದಾರೆ.

    ಚಿಕ್ಕಮಗಳೂರು ನಗರ, ಜಯಪುರ, ಮೂಡಿಗೆರೆ, ಎನ್.ಆರ್.ಪುರ, ಕೊಪ್ಪ ಭಾಗಗಳಲ್ಲಿಯೂ ವರುಣ ಅಬ್ಬರಿಸಿದ್ದಾನೆ. ಕಳೆದ ಒಂದು ಗಂಟೆಯಿಂದ ಮಳೆ ಸುರಿಯುತ್ತಿದ್ದು, ಹಲವೆಡೆ ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು, ಗ್ರಾಮೀಣ ಭಾಗಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಮಳೆಯಿಂದ ರೈತರು, ಅಡಿಕೆ, ಕಾಫಿ-ಮೆಣಸು ಬೆಳೆಗಾರರ ಮೊಗದಲ್ಲಿ ಸಂತಸ ಮನೆಮಾಡಿದೆ.

    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಗಾಳಿ, ಗುಡುಗು ಸಹಿತ ಮಳೆಯಾಗಿದೆ. ಈ ವೇಳೆ ಬಿಸಿಲಿನ ಬೇಗೆಯಿಂದ ಬಳಲಿದ್ದ ಭಕ್ತರು ಮಳೆಯನ್ನು ಸಂಭ್ರಮಿಸಿದ್ದಾರೆ.

  • ಬೇಸಿಗೆ ಮಳೆ ಅಬ್ಬರ; ಕಲಬುರಗಿಯಲ್ಲಿ ಸಿಡಿಲಿಗೆ ಬಾಲಕ ಬಲಿ, ಕೊಚ್ಚಿಹೋದ ಬೈಕ್‌ಗಳು

    ಬೇಸಿಗೆ ಮಳೆ ಅಬ್ಬರ; ಕಲಬುರಗಿಯಲ್ಲಿ ಸಿಡಿಲಿಗೆ ಬಾಲಕ ಬಲಿ, ಕೊಚ್ಚಿಹೋದ ಬೈಕ್‌ಗಳು

    – ಚಾಮರಾಜನಗರ, ಶಿವಮೊಗ್ಗ, ಭಟ್ಕಳದಲ್ಲಿ ಅವಾಂತರ

    ಬೆಂಗಳೂರು: ರಾಜ್ಯದ ವಿವಿಧೆಡೆ ಬೇಸಿಗೆ ಮಳೆಯ ಅಬ್ಬರ, ಅವಾಂತರ ಮುಂದುವರೆದಿದೆ. ಕಲಬುರಗಿಯಲ್ಲಿ (Kalaburagi) ಬಿಸಿಲಿನ ಬೇಗೆಗೆ ತತ್ತರಿಸಿದ್ದ ಜನರಿಗೆ ಮಳೆ ತಂಪೆರೆದಿದೆ. ಹಳ್ಳಕೊಳ್ಳಗಳು ತುಂಬಿ ಹರಿದಿವೆ. ಬೈಕ್ ಸವಾರರು, ಪಾದಚಾರಿಗಳು ಮಳೆಯಲ್ಲಿ ನೆನೆದು ಪುಳಕಿತರಾಗಿದ್ದಾರೆ. ಹಲವೆಡೆ ಮಳೆ ಅವಾಂತರವಾಗಿದ್ದು, ಸಾವು-ನೋವು ಸಂಭವಿಸಿದೆ.

    ಕಲಬುರಗಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಮಳೆ ಅಬ್ಬರಿಸಿದೆ. ಆಳಂದ ತಾಲೂಕಿನ ನರೋಣಾ ಗ್ರಾಮದಲ್ಲಿ ಸಿಡಿಲು ಬಡಿದು ಬಾಲಕ ಸಾವನ್ನಪ್ಪಿದ್ದಾನೆ. ಜಮೀನಿನಿಂದ ಎತ್ತಿನ ಬಂಡಿಯಲ್ಲಿ ಮನೆಗೆ ವಾಪಾಸ್ ಬರುತ್ತಿದ್ದಾಗ ಸಿಡಿಲು ಬಡಿದು ಮಹೇಶ್ ಎಂಬಾತ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಇಂದು, ನಾಳೆ ರಾಜ್ಯದಲ್ಲಿ ಗುಡುಗು-ಮಿಂಚು ಸಹಿತ ಮಳೆ ಮುನ್ಸೂಚನೆ

    ಅಕಾಲಿಕ ಗಾಳಿ ಮಳೆಗೆ ಆಳಂದ ತಾಲ್ಲೂಕಿನಲ್ಲಿ ನಾನಾ ಅವಾಂತರ ಸೃಷ್ಟಿಯಾಗಿದೆ. ಒಂದೂ ಗಂಟೆಗೂ ಹೆಚ್ಚು ಕಾಲ ಸುರಿದ ಭಾರೀ ಗಾಳಿ ಸಹಿತ ಮಳೆಗೆ ಬೈಕ್‌ಗಳು ಕೊಚ್ಚಿ ಹೋಗಿವೆ. ಆಳಂದ ತಾಲ್ಲೂಕಿನ ಹಲವೆಡೆ ಹಳ್ಳ-ಕೊಳ್ಳಗಳು ತುಂಬಿ ಹರಿದು ಅವಾಂತರ ಸೃಷ್ಟಿಯಾಗಿದೆ.

    ಕಲಬುರಗಿಯ ಖಜೂರಿ ಬಳಿ ಭಾರೀ ಗಾಳಿಗೆ ಲಾರಿ ಪಲ್ಟಿಯಾಗಿದೆ. ಗಾಳಿಯ ರಭಸಕ್ಕೆ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ. ಇನ್ನು ಬಿರುಗಾಳಿ ಸಹಿತ ಮಳೆಗೆ ನೂರಾರು ಮರಗಳು ಧರೆಗುರುಳಿ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಇದನ್ನೂ ಓದಿ: ದುಬೈ: ಮಳೆ ಸಂಕಷ್ಟದಲ್ಲಿ ಸಿಲುಕಿದವರ ನೆರವಿಗೆ ಕನ್ನಡಿಗಾಸ್ ಹೆಲ್ಪ್‌ಲೈನ್ ತಂಡ!

    ವಿಜಯನಗರದ ಕೊಟ್ಟೂರಿನಲ್ಲಿ ಮನೆ ಛಾವಣಿ ಕುಸಿದು ಮಹಿಳೆ ಮೃತಪಟ್ಟಿದ್ದಾರೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಭಾಗದಲ್ಲೂ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗಿದೆ. ಭಾರೀ ಮಳೆ ಗಾಳಿಗೆ ಜಕ್ಕಳ್ಳಿ ಗ್ರಾಮದಲ್ಲಿ ಮನೆಯ ಮೇಲ್ಛಾವಣಿ ಹಾರಿಹೋಗಿದೆ. ಹಾಸನದ ಸಕಲೇಶಪುರದಲ್ಲಿ ಭಾರೀ ಮಳೆ ಕಾರಣ ಮರ ಉರುಳಿ ಮನೆ ಜಖಂ ಆಗಿದೆ.

    ಬೀದರ್‌ನಲ್ಲಿ ಬಿದ್ದ ಮಳೆಗೆ ರಸ್ತೆಗಳೆಲ್ಲ ಕೆರೆಯಂತಾಗಿದ್ದವು. ರಸ್ತೆಗೆ ಮರಗಳು, ವಿದ್ಯುತ್ ಕಂಬಗಳು ಉರುಳಿವೆ. ಹಲವು ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಇನ್ನು ಶಿವಮೊಗ್ಗದ ರಿಪ್ಪನ್ ಪೇಟೆಯಲ್ಲಿ ಭಾರೀ ಮಳೆಯಿಂದಾಗಿ ಮನೆ ಕುಸಿದುಬಿದ್ದಿದೆ. ಹೊನ್ನಾಳಿಯಲ್ಲಿ ಅಕಾಲಿಕ ಮಳೆಗೆ ತೋಟಗಾರಿಕಾ ಬೆಳೆಗಳು ನಾಶವಾಗಿವೆ. ಶಿವಮೊಗ್ಗದಲ್ಲಿ ಶ್ವಾನವೊಂದು ಮಳೆಯಲ್ಲಿ ಕುಣಿದು ಕುಪ್ಪಳಿಸಿದ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಇದನ್ನೂ ಓದಿ: 7 ಲಕ್ಷ ರೂ. ವರೆಗೆ ತೆರಿಗೆ ಕಟ್ಟುವಂತಿಲ್ಲ – 10 ವರ್ಷಗಳ ಸಾಧನೆ ಬಣ್ಣಿಸಿದ ಮೋದಿ

    ಉತ್ತರ ಕನ್ನಡ ಜಿಲ್ಲೆಯಲ್ಲಿ ಗಾಳಿ ಜೊತೆ ಗುಡುಗು ಸಹಿತ ಮಳೆ ಸುರಿದಿದೆ. ಭಟ್ಕಳದಲ್ಲಿ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆಯಾಗಿದೆ. ಬೋಟ್‌ನಲ್ಲಿದ್ದ ನಾಲ್ಕು ಜನ ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ.