ಬೆಂಗಳೂರು: ಕೇಂದ್ರ ಸರ್ಕಾರದ ಗೃಹ ಇಲಾಖೆಯ ‘ರಾಜ ಭಾಷಾ ಸಮಿತಿ’ ಬೆಂಗಳೂರಿನ ತಾಜ್‌ವೆಸ್ಟ್ಎಂಡ್ ಹೋಟೆಲಿನಲ್ಲಿ ಗುರುವಾರ ಆಯೋಜಿಸಿದ್ದ ‘ಹಿಂದಿ ಪ್ರಚಾರ ಸಭೆ’ಗೆ ಕರ್ನಾಟಕ ರಕ್ಷಣಾ ವೇದಿಕೆ (Karnataka Rakshana Vedike) ಏಕಿಏಕಿ ದಾಳಿ ನಡೆಸಿದೆ.
ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡರ ಮಾರ್ಗದರ್ಶನದಲ್ಲಿ ನೂರಾರು ಕಾರ್ಯಕರ್ತರು ಪಂಚತಾರಾ ಹೋಟೆಲ್‌ನಲ್ಲಿ ಆರು ಮಂದಿ ಸಂಸತ್ ಸದಸ್ಯರ ಉಪಸ್ಥಿತಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತಪಡಿಸಿದರು. ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದನ್ನೂ ಓದಿ: ಹರಾಜು ಮೂಲಕ ಮದ್ಯದ ಅಂಗಡಿಗಳ ಹಂಚಿಕೆ ಪ್ರಕ್ರಿಯೆಗೆ ಶೀಘ್ರವೇ ಚಾಲನೆ: ಆರ್.ಬಿ.ತಿಮ್ಮಾಪುರ್
ಹಿಂದಿ ಭಾಷೆಯನ್ನು ಹಿಂದಿಯೇತರ ರಾಜ್ಯಗಳ ಮೇಲೆ ಹೇರಿಕೆ ಮಾಡುವ ಹಿನ್ನೆಲೆಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಬೆಳಗಾವಿ: ಕನ್ನಡ ಮಾತಾಡು ಎಂದಿದಕ್ಕೆ ಬಸ್ ಕಂಡಕ್ಟರ್ ಮೇಲೆ ನಡೆದ ಹಲ್ಲೆ ಇದೀಗ ಭಾಷಾ ವೈಷಮ್ಯಕ್ಕೆ ಕಾರಣವಾಗಿದೆ. ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ (Maharashtra) ಸಂಚರಿಸುವ ಬಸ್‌ಗಳನ್ನು (Karnatak Bus) ಅಲ್ಲಿನ ಮರಾಠಿ ಪುಂಡರು ಟಾರ್ಗೆಟ್ ಮಾಡುತ್ತಿದ್ದು ಉದ್ಧವ್ ಠಾಕ್ರೆ ಬಣದ ಶಿವಸೇನೆ (Shiv Sena) ಪುಂಡರು ಕರ್ನಾಟಕ ಬಸ್ಸುಗಳಿಗೆ ಮಸಿ ಬಳಿದಿದ್ದಾರೆ.
ಪುಣೆಯ ಸ್ವಾರಗೇಟ್ ಬಳಿ ಪುಂಡಾಟಿಕೆ ಮಾಡಿರುವ ವಿಡಿಯೋ ವೈರಲ್ ಆಗಿದೆ. ಫೆ.22 ರಂದು ರಾತ್ರಿ ಶಿವಸೇನೆ ಕಾರ್ಯಕರ್ತರು ಕರ್ನಾಟಕದ ಬಸ್‌ಗಳಿಗೆ ಮಸಿ ಬಳಿದು ಗೂಂಡಾ ವರ್ತನೆ ತೋರಿದ್ದಾರೆ. ನಡು ರಸ್ತೆಯಲ್ಲಿಯೇ ಬಲವಂತವಾಗಿ ಬಸ್ ನಿಲ್ಲಿಸಿ ಮಸಿ ಬಳಿದಿದ್ದಾರೆ. ಇದನ್ನೂ ಓದಿ: ಮರಾಠಿ ಪುಂಡರಿಂದ ಕಂಡಕ್ಟರ್ ಮೇಲೆ ಹಲ್ಲೆ – ಇಂದು ಬೆಳಗಾವಿಗೆ ರಾಮಲಿಂಗಾ ರೆಡ್ಡಿ ಭೇಟಿ
ಇನ್ನೂ ಮಂಗಳವಾರ ಬೆಳಗಾವಿಗೆ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣಗೌಡ ಸಹ ಆಗಮಿಸುತ್ತಿದ್ದಾರೆ. ಕನ್ನಡ ಮಾತಾಡು ಎಂದು ಹೇಳಿದ್ದಕ್ಕೆ ಬಸ್ ಕಂಡಕ್ಟರ್ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿರುವ ನಾರಾಯಣಗೌಡ ಚಲೋ ಪಂಥಬಾಳೆಕುಂದ್ರಿ ಕರೆ ನೀಡಿದ್ದಾರೆ. ಬೆಳಗಾವಿಯಿಂದ ಪಂಥಬಾಳೆಕುಂದ್ರಿಗೆ ಪ್ರತಿಭಟನಾ ರ‍್ಯಾಲಿ ಆಯೋಜನೆ ಮಾಡಿದ್ದು, ಕಂಡೆಕ್ಟರ್ ಮೇಲೆ ನೆಡದ ಹಲ್ಲೆಯನ್ನು ಖಂಡಿಸಿದ್ದಾರೆ. ಅಲ್ಲದೆ ನಾರಾಯಣಗೌಡ ಬರುತ್ತಿರುವ ಹಿನ್ನೆಲೆ ನೂರಾರು ಕಾರ್ಯಕರ್ತರು ಮಂಗಳವಾರದ ಪ್ರತಿಭಟನಾ ರ‍್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಬೆಳಗಾವಿ: ಕನ್ನಡ ಮಾತಾಡು ಎಂದಿದ್ದಕ್ಕೆ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ್ದಲ್ಲದೇ, ಪೋಕ್ಸೋ ಕೇಸ್ ದಾಖಲಿಸಿರುವ ಘಟನೆ ಈಗ ಎರಡು ರಾಜ್ಯಗಳ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ. ಈ ಹಿನ್ನೆಲೆ ಇಂದು ಬೆಳಗಾವಿಗೆ (Belagavi) ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಘಟನೆಯ ಮಾಹಿತಿ ಪಡೆಯಲಿದ್ದಾರೆ.
ಸದಾ ಗಡಿ ಹಾಗೂ ಭಾಷೆ ವಿಚಾರದಲ್ಲಿ ಒಂದಿಲ್ಲೊಂದು ಕಿರಿಕ್ ಮಾಡುತ್ತಿದ್ದ ಎಂಇಎಸ್ ಹಾಗೂ ಮರಾಠಿ ಪುಂಡರು ಕನ್ನಡ ಮಾತಾಡು ಎಂದಿದ್ದಕ್ಕೆ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ್ದಾರೆ. ಟಿಕೆಟ್ ಕೊಡುವ ವಿಚಾರಕ್ಕೆ ಶುರುವಾದ ಜಗಳ ಈಗ ಕರ್ನಾಟಕ, ಮಹಾರಾಷ್ಟ್ರ ಎರಡೂ ರಾಜ್ಯದ ನಡುವಿನ ಶಾಂತಿಗೆ ಭಂಗ ತರುತ್ತಿದೆ. ಕರ್ನಾಟಕದಲ್ಲಿ ಮಹಾರಾಷ್ಟ್ರ ಬಸ್ಸುಗಳಿಗೆ ಮಹಾರಾಷ್ಟ್ರದಲ್ಲಿ ಕರ್ನಾಟಕ ಬಸ್ಸುಗಳಿಗೆ ಮಸಿ ಬಳಿಯುವ ಕೆಲಸ ಆಗುತ್ತಿದೆ. ಹೀಗಾಗಿ ಕರ್ನಾಟಕದಿಂದ ಹೊರಡುವ ಬಸ್ಸುಗಳನ್ನು ಈಗಾಗಲೇ ಬಂದ್ ಮಾಡಲಾಗಿದೆ. ಇದನ್ನೂ ಓದಿ: ಉದಯಗಿರಿ ಗಲಭೆ ಕಿಚ್ಚು – ಇಂದು ಮಧ್ಯರಾತ್ರಿವರೆಗೆ ಮೈಸೂರಿನಲ್ಲಿ ನಿಷೇಧಾಜ್ಞೆ
ಇನ್ನು ಮಂಗಳವಾರ ಬೆಳಗಾವಿಗೆ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣಗೌಡ ಸಹ ಆಗಮಿಸುತ್ತಿದ್ದಾರೆ. ಕನ್ನಡ ಮಾತಾಡು ಎಂದು ಹೇಳಿದ್ದಕ್ಕೆ ಬಸ್ ಕಂಡಕ್ಟರ್ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿರುವ ನಾರಾಯಣಗೌಡ ಚಲೋ ಪಂಥಬಾಳೆಕುಂದ್ರಿ ಕರೆ ನೀಡಿದ್ದಾರೆ. ಬೆಳಗಾವಿಯಿಂದ ಪಂಥಬಾಳೆಕುಂದ್ರಿಗೆ ಪ್ರತಿಭಟನಾ ರ‍್ಯಾಲಿ ಆಯೋಜನೆ ಮಾಡಿದ್ದು, ಕಂಡೆಕ್ಟರ್ ಮೇಲೆ ನೆಡದ ಹಲ್ಲೆಯನ್ನು ಖಂಡಿಸಿದ್ದಾರೆ. ಅಲ್ಲದೆ ನಾರಾಯಣಗೌಡ ಬರುತ್ತಿರುವ ಹಿನ್ನೆಲೆ ನೂರಾರು ಕಾರ್ಯಕರ್ತರು ಮಂಗಳವಾರದ ಪ್ರತಿಭಟನಾ ರ‍್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇದನ್ನೂ ಓದಿ: ಶಹಬ್ಬಾಶ್ ಹುಡುಗ್ರಾ: ಪಾಕ್ ವಿರುದ್ಧ ಗೆದ್ದ ಟೀಂ ಇಂಡಿಯಾಗೆ ಡಿಕೆಶಿ ಅಭಿನಂದನೆ
ಈ ಮಧ್ಯೆ ಕನ್ನಡಿಗರ ಬಗ್ಗೆ ಅವಹೇಳನಕಾರಿ ಮಾತನಾಡಿದ್ದ ಎಂಇಎಸ್ ಮುಖಂಡ ಶುಭಂ ಶಳಕೆ ವಿರುದ್ಧ ದೂರು ದಾಖಲಾಗಿದೆ. ಕನ್ನಡಿಗರನ್ನು ಕೆರಳಿಸುವ ಭಾಷಾ ವೈಷಮ್ಯ ಹರಡುವ ಶಾಂತಿಗೆ ಭಂಗ ತರುವ ಕಲಂಗಳಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಒಟ್ಟಿನಲ್ಲಿ ಶಾಂತವಾಗಿದ್ದ ಬೆಳಗಾವಿ ಈಗ ಬಸ್ ಕಂಡಕ್ಟರ್ ಮೇಲಿನ ಹಲ್ಲೆಯಿಂದಾಗಿ ಮತ್ತೆ ಧಗಧಗಿಸುತ್ತಿದೆ. ಇದನ್ನೂ ಓದಿ: ಮಂತ್ರಾಲಯಕ್ಕೆ ಶಿವಣ್ಣ ಭೇಟಿ – ರಾಯರ ವೃಂದಾವನಕ್ಕೆ ವಿಶೇಷ ಪೂಜೆ
– ನಾಳೆಯೊಳಗೆ ನಾಮಫಲಕ ಹಾಕದಿದ್ದರೆ ನಾವೇ ತೆರವು ಮಾಡ್ತೀವಿ – ಅಂಗಡಿಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ಎಚ್ಚರಿಕೆ
ಬೆಂಗಳೂರು: ಕಡ್ಡಾಯ ಕನ್ನಡ ನಾಮಫಲಕ (Kannada Name Board) ಅಳವಡಿಕೆಗೆ ಇಂದು ಕೊನೆಯ ದಿನವಾಗಿದ್ದು, ಈ ಗಡುವನ್ನು ಒಂದು ದಿನ ವಿಸ್ತರಣೆ ಮಾಡಿ ಬಿಬಿಎಂಪಿ (BBMP) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ (Tushar Girinath) ಆದೇಶ ಹೊರಡಿಸಿದ್ದಾರೆ.
ಇಂದು ಕಡ್ಡಾಯ ಕನ್ನಡ ನಾಮಫಲಕ ಅಳವಡಿಕೆಗೆ ಗಡುವು ನೀಡಲಾಗಿತ್ತು. ಆದರೆ ಇದನ್ನು ಕಮೀಷನರ್ ಒಂದು ದಿನ ವಿಸ್ತರಣೆ ಮಾಡಿದ್ದಾರೆ. 3,000 ಅಂಗಡಿಗಳು ಇನ್ನೂ ಕನ್ನಡ ನಾಮಫಲಕ ಹಾಕಿಲ್ಲ. ನಾಳೆಯೊಳಗೆ (ಫೆ.29) ನಾಮಫಲಕ ಹಾಕದಿದ್ದರೆ ನಾವೇ ತೆರವು ಮಾಡುತ್ತೇವೆ. ಕೂಡಲೇ ನಾಮಫಲಕ ಬದಲಾಯಿಸಿ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಅಕ್ರಮ ಗಣಿಗಾರಿಕೆ ಕೇಸ್ – ಅಖಿಲೇಶ್ ಯಾದವ್‌ಗೆ ಸಿಬಿಐ ಸಮನ್ಸ್
ಕಡ್ಡಾಯ ಕನ್ನಡ ನಾಮಫಲಕ ಬಳಸದವರಿಗೆ ಮತ್ತೊಂದು ದಿನ ಅವಕಾಶ ನೀಡಲಾಗಿದೆ. ನಾಳೆ ಸಂಜೆಯವರೆಗೆ ನಾಮಫಲಕ ಬದಲಾವಣೆಗೆ ಅವಕಾಶ ನೀಡಿದ್ದು, ನಾಳೆಯೊಳಗೆ ಬದಲಾಯಿಸದಿದ್ದರೆ ಕಠಿಣ ಕ್ರಮದ ಎಚ್ಚರಿಕೆ ಕೊಡಲಾಗಿದೆ. ಈಗಾಗಲೇ 90% ರಷ್ಟು ನಾಮಫಲಕ ಬದಲಾಗಿದೆ. ಇನ್ನು ಉಳಿದಿರೋದು 3 ಸಾವಿರ ನಾಮಫಲಕ ಮಾತ್ರ. ಅವರು ನಾಳೆ ಸಂಜೆಯೊಳಗೆ ಬದಲಾಯಿಸಬೇಕು. ಕೆಲವು ಅಂತಾರಾಷ್ಟ್ರೀಯ ಕಂಪನಿಗಳು ಹಾಗೂ ಎಸ್‌ಬಿಐ, ಕೆನರಾ ಬ್ಯಾಂಕ್ ಮನವಿ ಕೊಟ್ಟಿವೆ. ನಾಮಫಲಕ ಅಳವಡಿಕೆಗೆ ಮತ್ತಷ್ಟು ಗಡುವು ಕೇಳಿದ್ದಾರೆ. ಈ ಬಗ್ಗೆ ನಾಳೆ ಸಂಜೆ ತೀರ್ಮಾನ ಮಾಡುತ್ತೇವೆ ಎಂದು ತುಷಾರ್ ಗಿರಿನಾಥ್ ತಿಳಿಸಿದ್ದಾರೆ. ಇದನ್ನೂ ಓದಿ: ಮೋದಿ ಸರ್ಕಾರದಲ್ಲಿ ವಿದೇಶದಲ್ಲಿ ನೆಲೆಸಿರೋ ಭಾರತೀಯರಿಗೂ ರಕ್ಷಣೆ ಸಿಕ್ತಿದೆ: ಜೈಶಂಕರ್ ಶ್ಲಾಘನೆ
ಇನ್ನು ಈ ಕುರಿತು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣಗೌಡ ಮಾತನಾಡಿದ್ದು, ರಾಜ್ಯ ಸರ್ಕಾರ ಸುಗ್ರಿವಾಜ್ಞೆ ಮೂಲಕ ಬಿಬಿಎಂಪಿ ಹಾಗೂ ಸರ್ಕಾರ ನಾಮಫಲಕ ಜಾರಿಗೊಳಿಸಲು ಇವತ್ತಿನವರೆಗೂ ಗಡುವು ಕೇಳಿತ್ತು. ಒಟ್ಟು 50,216ಗಳಲ್ಲಿ 40,600 ಉದ್ಯಮಿಗಳಿಗೆ ನೋಟಿಸ್ ಕೊಟ್ಟಿದ್ದೇವೆ. 3,600 ಉದ್ಯಮಿಗಳು ಕನ್ನಡ ನಾಮಫಲಕ ಹಾಕಿಕೊಳ್ಳಬೇಕು. ಒಂದು ವೇಳೆ ನಾಳೆಯೊಳಗೆ ಕನ್ನಡ ನಾಮಫಲಕ ಜಾರಿಯಾಗದಿದ್ದರೆ ಅವರ ಲೈಸನ್ಸ್ ರದ್ದು ಮಾಡಲಾಗುವುದು ಎಂದು ಬಿಬಿಎಂಪಿ ಕಮೀಷನರ್ ಹೇಳಿದ್ದಾರೆ. 100% ಕನ್ನಡೀಕರಣ ಆಗದಿದ್ದರೇ ಮತ್ತೆ ಬೀದಿಗೆ ಇಳಿಯುತ್ತೇವೆ ಎಂದರು. ಇದನ್ನೂ ಓದಿ: ಲೋಕಸಭಾ ಚುನಾವಣೆಗೂ ಮುನ್ನ I.N.D.I.A ಒಕ್ಕೂಟದಲ್ಲಿ ಒಡಕು – ಚೂರನ್ನು ಮತ್ತೆ ಜೋಡಿಸುತ್ತಾ ಕಾಂಗ್ರೆಸ್?
ಇದು ಬೆಂಗಳೂರಿಗೆ ಮಾತ್ರ ಸೀಮಿತವಾಗಬಾರದು. ರಾಜ್ಯದ ಎಲ್ಲಾ ಜಿಲ್ಲೆ, ತಾಲೂಕು ಕೇಂದ್ರಗಳಲ್ಲಿ ಕನ್ನಡ ನಾಮಫಲಕಗಳು ಇರಬೇಕು. ಇಲ್ಲದಿದ್ದರೆ ಎಲ್ಲಾ ಜಿಲ್ಲೆಗಳಲ್ಲಿ ಕರವೇ ಕಾರ್ಯಕರ್ತರು ಬೀದಿಗಿಳಿಯುತ್ತಾರೆ. ಬೆಂಗಳೂರಲ್ಲಿ 3,500-4,000 ಉದ್ಯಮಿಗಳು ಕನ್ನಡ ಬಳಸದೇ ಇರೋರು ನಾಮಫಲಕದಲ್ಲಿ 60% ಕನ್ನಡ ನಾಮಫಲಕ ಹಾಕಬೇಕು. ನುಡಿದಂತೆ ನಡೆಯದಿದ್ದರೇ, ಕನ್ನಡ ಬಳಸದೇ ಇದ್ದರೇ ಮತ್ತೆ ಬೆಂಗಳೂರಲ್ಲಿ ಕರವೇ ಕಾರ್ಯಕರ್ತರು ಬೀದಿಗೆ ಇಳಿಯುತ್ತೇವೆ. ನಾಮಫಲಕ ಹಾಕದೇ ಇರೋರ ಮೇಲೆ ಮಾರ್ಚ್ 1 ರವರೆಗೂ ಬಿಬಿಎಂಪಿ ಯಾವ ಕ್ರಮ ಕೈಗೊಳ್ಳುತ್ತದೆ ಎಂದು ಕಾದುನೋಡುತ್ತೇವೆ. ಬಿಬಿಎಂಪಿಯಿಂದ ಯಾವುದೇ ಕ್ರಮ ಆಗದಿದ್ದರೇ ಮತ್ತೆ ಮಾರ್ಚ್ 5 ರಂದು ಬೀದಿಗಿಳಿಯುತ್ತೇವೆ. ಮಾರ್ಚ್ 5 ರಂದು ಬಿಬಿಎಂಪಿ ವಿರುದ್ಧ ಕರವೇ ಪ್ರೊಟೆಸ್ಟ್ ಮಾಡುವುದಾಗಿ ನಾರಾಯಣ ಗೌಡರು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಹಿಮಾಚಲ ಪ್ರದೇಶ: 15 ಬಿಜೆಪಿ ಶಾಸಕರ ಅಮಾನತುಗೊಳಿಸಿದ ಸ್ಪೀಕರ್
ಚಿಕ್ಕಬಳ್ಳಾಪುರ: ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ (Narayana Gowda) ಸೇರಿದಂತೆ 36 ಮಂದಿಗೆ ಜಾಮೀನು ಮಂಜೂರಾಗಿದೆ. ದೇವನಹಳ್ಳಿಯ 5ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
ಅನ್ಯ ಭಾಷೆಯ ನಾಮಫಲಕಗಳನ್ನು ಧ್ವಂಸಗೊಳಿಸಿ ಪ್ರತಿಭಟನೆ ಮಾಡಿದ ಪ್ರಕರಣದಲ್ಲಿ ಕರವೇ ಅಧ್ಯಕ್ಷ ನಾರಾಯಣಗೌಡ ಸೇರಿ ಅನೇಕರನ್ನು ಬಂಧಿಸಲಾಗಿತ್ತು. ಇದನ್ನು ಖಂಡಿಸಿ ಕನ್ನಡಪರ ಹೋರಾಟಗಾರರು ಪ್ರತಿಭಟನೆ ನಡೆಸಿದ್ದರು.
ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಜಾಮೀನು ಅರ್ಜಿ ವಿಚಾರಣೆ ಇಂದು (ಶನಿವಾರ) ದೇವನಹಳ್ಳಿಯ 5ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಲಯಾದಲ್ಲಿ ನಡೆಯಿತು. ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರಾದ ಬಿರಾದರ್ ದೇವೆಂದ್ರಪ್ಪ ಅವರು ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಜೈಲು ಸೇರಿದ್ದ 15 ಕರವೇ ಕಾರ್ಯಕರ್ತರು ಬಿಡುಗಡೆ
ಬೆಂಗಳೂರು: ಬೆಂಗಳೂರಿನ (Bengaluru) ಪ್ರತಿಷ್ಠಿತ ಮಾಲ್‌ಗಳಲ್ಲಿ ಒಂದಾದ ಮಾಲ್ ಆಫ್ ಏಷ್ಯಾ (Mall Of Asia) ಮುಂದಿನ 15 ದಿನಗಳ ಕಾಲ ಬಂದ್ ಆಗಲಿದೆ. ಅಲ್ಲದೇ ಮಾಲ್ ಆಫ್ ಏಷ್ಯಾ ಬಳಿ ಸೆಕ್ಷನ್ 144 (Section 144) ಜಾರಿಗೊಳಿಸಲಾಗಿದೆ.
ಮಾಲ್ ಆಫ್ ಏಷ್ಯಾ ಮೇಲೆ ಕರವೇ (Karnataka Rakshana Vedike) ಕಾರ್ಯಕರ್ತರ ಮುತ್ತಿಗೆ ಹಿನ್ನೆಲೆ ಭಾನುವಾರದಿಂದ 15 ದಿನಗಳವರೆಗೆ ಮಾಲ್ ಅನ್ನು ಮುಚ್ಚಲಾಗುತ್ತದೆ. ಮಾತ್ರವಲ್ಲದೇ ಮುಂಜಾಗ್ರತಾ ಕ್ರಮವಾಗಿ 144 ಸೆಕ್ಷನ್ ಅನ್ನು ಜಾರಿ ಮಾಡಿ ಆದೇಶ ನೀಡಲಾಗಿದೆ. ಇತ್ತೀಚಿಗಷ್ಟೆ ಬೆಂಗಳೂರಿನಾದ್ಯಂತ ಕರವೇ ಕಾರ್ಯಕರ್ತರು ಕನ್ನಡ ನಾಮಫಲಕ (Kannada Nameboard) ಹಾಕುವಂತೆ ಹೋರಾಟ ಮಾಡಿದ್ದರು. ಇದನ್ನೂ ಓದಿ: ವಿಕ್ರಂ ಸಿಂಹ ಬಂಧನದಿಂದ ನಿಸರ್ಗದ ಶೋಕಕ್ಕೆ ನ್ಯಾಯ ಸಿಕ್ಕಂತಾಗಿದೆ – ಕಾಂಗ್ರೆಸ್ ಟ್ವೀಟ್
ನಾಮಫಲಕದಲ್ಲಿ ಕನ್ನಡ ಬಳಕೆಗೆ ಒತ್ತಾಯಿಸಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಪ್ರತಿಭಟನೆ ವೇಳೆ ಮಾಲ್ ಆಫ್ ಏಷ್ಯಾಕ್ಕೆ ದಾಳಿ ನಡೆಸಿದ್ದರು. ಈ ವೇಳೆ ನಾಮಫಲಕ ಒಡೆದು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಸಂಬಂಧ ಕೊಡಿಗೇಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಮುಂಜಾಗ್ರತೆ ಹಿನ್ನೆಲೆ 144 ಸೆಕ್ಷನ್ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ. ಆದೇಶದ ಪ್ರಕಾರ 5ಕ್ಕಿಂತ ಹೆಚ್ಚು ಜನ ಸೇರೋ ಹಾಗಿಲ್ಲ. ಮಾಲ್ ಆಫ್ ಏಷ್ಯಾ ಅಕ್ಟೋಬರ್‌ನಲ್ಲಿ ಓಪನ್ ಆಗಿತ್ತು. ಇದನ್ನೂ ಓದಿ: ನಿಗಮ ಮಂಡಳಿ ನೇಮಕದಲ್ಲಿ ಶಾಸಕರ ಸಂಖ್ಯೆಯಷ್ಟೇ ಕಾರ್ಯಕರ್ತರಿಗೂ ಸ್ಥಾನಮಾನ: ಡಿಕೆಶಿ
ಬೆಂಗಳೂರು: ನಾರಾಯಣಗೌಡ (KaRaVe Narayana Gowda) ಸೇರಿದಂತೆ ಬಂಧಿಸಲಾಗಿರುವ ಕರವೇ ಮುಖಂಡರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ (Karnataka Rakshana Vedike) ನಾರಾಯಣಗೌಡ ಬಣದಿಂದ ಕರವೇ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಅಶ್ವಿನಿಗೌಡ ನೇತೃತ್ವದ ನಿಯೋಗ ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಅವರಿಗೆ ಮನವಿ ಸಲ್ಲಿಸಿದ್ದಾರೆ.
ಸದಾಶಿವನಗರದ ನಿವಾಸದಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಗಿದೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಶ್ವಿನಿಗೌಡ ಅವರು, ಹೋರಾಟಗಾರರ ಮೇಲೆ ಸುಳ್ಳು ಮೊಕದ್ದಮೆ ಹಾಕಿ ಜೈಲಿಗೆ ಕಳುಹಿಸಲಾಗಿದೆ. ಹೋರಾಟಗಾರರ ಮನೆಗೆ ಪೊಲೀಸರು ನುಗ್ಗಿ ಬೆದರಿಕೆ ಹಾಕುತ್ತಿದ್ದಾರೆ. ಕೂಡಲೇ ಪೊಲೀಸರ ದಬ್ಬಾಳಿಕೆ ನಿಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ನೀರಿನ ಅಭಾವ, ಕಬ್ಬಿಣ ಉತ್ಪಾದನೆಗೆ ಪೆಟ್ಟು – ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿ ಕಾರ್ಮಿಕರು
ನಾರಾಯಣಗೌಡರನ್ನು ಎ1 ಆರೋಪಿಯನ್ನಾಗಿ ಮಾಡಿ ಬಂಧನ ಮಾಡಲಾಗಿದೆ. 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕರವೇ ಹಿತೈಷಿಗಳಾದ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಪತ್ರ ಕೊಟ್ಟಿದ್ದೇವೆ. ನಾರಾಯಣಗೌಡ್ರನ್ನು ಆದಷ್ಟು ಬೇಗ ಬಿಡುಗಡೆ ಮಾಡಬೇಕು ಎಂದು ಒತ್ತಾಯ ಮಾಡಿದ್ದೇವೆ. ಅವರಿಗೆ ಆರೋಗ್ಯ ಸಮಸ್ಯೆ ಇರುವುದರಿಂದ ಚಿಕಿತ್ಸೆ ಕೊಡಿಸಬೇಕು. ಜಾಮೀನು ಕೊಡಿಸುವ ಪ್ರಯತ್ನವನ್ನು ಮಾಡುತ್ತಿದ್ದೇವೆ. ವಕೀಲರ ಬಳಿ ಚರ್ಚೆ ಮಾಡಿದ್ದೇವೆ. ಕಾನೂನಾತ್ಮಕ ಚೌಕಟ್ಟಿನಲ್ಲಿ ಹೋರಾಟ ಮಾಡುತ್ತಿದ್ದೇವೆ. ಅವರನ್ನು ಹೊರಗೆ ಕರೆದುಕೊಂಡು ಬರುವ ಪ್ರಯತ್ನ ಸತತವಾಗಿ ನಡೆಯುತ್ತಿದೆ. ಕೇಸ್ ಕೈಬಿಡುವ ವಿಚಾರದ ಬಗ್ಗೆ ನಾವು ಮಾತನಾಡುವುದಿಲ್ಲ. ಬಂಧನ ಆಗಿರುವವರು ಬಿಡುಗಡೆಯಾಗಬೇಕು, ಆ ಬಳಿಕ ನಾವು ಮಾತನಾಡುತ್ತೇವೆ ಎಂದು ಡಿಸಿಎಂ ಹೇಳಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಕನ್ನಡ ಹೋರಾಟಗಾರರ ಕೇಸ್‍ನ್ನ ಪಾವಸ್ ಪಡೆಯುತ್ತೇವೆ ಎಂದು ಪ್ರತಿ ಸರ್ಕಾರ ಹೇಳಿಕೊಂಡು ಬಂದಿವೆ. ಅದನ್ನು ಎಷ್ಟರ ಮಟ್ಟಿಗೆ ನಂಬಬೇಕು ಎಂಬುದು ಗೊತ್ತಿಲ್ಲ. ಕನ್ನಡಿಗರ ಮೇಲೆ ಹಾಕಿರುವ ಕೇಸ್‍ನ್ನು ವಾಪಸ್ ಪಡೆಯಬೇಕು ಎಂದು ಡಿಸಿಎಂ ಬಳಿ ಹೇಳಿದ್ದೇವೆ. ಜೊತೆಗೆ ನಾರಾಯಣಗೌಡರಿಗೆ ಜೈಲಿನಲ್ಲಿ ಒಳ್ಳೆಯ ಚಿಕಿತ್ಸೆ ಕೊಡಿಸಬೇಕು ಎಂದಿದ್ದಾರೆ.
ಹೋರಾಟಗಾರರಿಂದ ಸಾರ್ವಜನಿಕರ ಆಸ್ತಿ ಹಾನಿ ಎಂದು ಹೇಳುತ್ತಿದ್ದಾರೆ. ಅಲ್ಲಿ ಹಾಕಿರುವ ನಾಮಫಲಕಗಳು ಇಂಗ್ಲಿಷ್‍ನಲ್ಲಿ ಇದ್ದವು, ಬಿಬಿಎಂಪಿ ಆದೇಶದ ಪ್ರಕಾರ ನೋಡಿದರೆ ಅದು ಸಾರ್ವಜನಿಕ ಆಸ್ತಿಯಲ್ಲ. ನಾಮಫಲಕಗಳಲ್ಲಿ ಕನ್ನಡವೇ ಇಲ್ಲ, ಅದನ್ನು ಹೇಗೆ ಅಧಿಕೃತ ಎಂದು ಘೋಷಣೆ ಮಾಡುತ್ತೀರಾ? ಅದು ಅಧಿಕೃತ ಅಲ್ಲ ಎಂದ ಮೇಲೆ ಅದು ಸಾರ್ವಜನಿಕ ಆಸ್ತಿ ಹೇಗಾಗುತ್ತದೆ? ಬಿಬಿಎಂಪಿ ಅಧಿಕಾರಿಗಳು ಇದನ್ನು ನೋಡಬೇಕಿತ್ತು. ಎಲ್ಲಿ 60% ಕನ್ನಡ ಬೋರ್ಡ್ ಇರಲ್ವೋ ಅದನ್ನು ತೆಗೆಯುವ ಕೆಲಸ ಮಾಡಬೇಕಾಗಿತ್ತು. ಬಿಬಿಎಂಪಿ ಅಧಿಕಾರಿಗಳು ಲೈಸೆನ್ಸ್ ರದ್ದು ಮಾಡಬೇಕಿತ್ತು. ಅದನ್ನ ಮಾಡಲಿಲ್ಲ, ಪೊಲೀಸರು ನಮ್ಮ ಮೇಲೆ ಕೇಸ್ ಹಾಕೋದಲ್ಲ, ಬಿಬಿಎಂಪಿ ಅಧಿಕಾರಿಗಳ ಮೇಲೆ ಕೇಸ್ ಹಾಕಿ ಒಳಗಡೆ ಕಳಿಸಬೇಕು. ಅಧಿಕಾರಿಗಳು ಮಾಡಬೇಕಾದ ಕೆಲಸ ನಾವು ಮಾಡಿದ್ದೇವೆ. ನಾವು ಬಹಳ ಶಾಂತಿಯುತವಾಗಿ ಹೋರಾಟ ಮಾಡುತ್ತಿದ್ದೆವು. ನಮ್ಮ ಹೋರಾಟವನ್ನು ಹತ್ತಿಕುವಂತಹ ಕೆಲಸವನ್ನು ಪೊಲೀಸರೇ ಮಾಡಿದ್ದಾರೆ. ಸಿವಿಲ್ ಡ್ರೆಸ್‍ನಲ್ಲಿ ಬಂದು ಕಾರ್ಯಕರ್ತರ ಜೊತೆ ಕಾರ್ಯಕರ್ತರಾಗಿ ನಿಂತು ಪ್ರಚೋದನೆ ಮಾಡುವ ಕೆಲಸ ಮಾಡಿದ್ದಾರೆ. ಇದೆಲ್ಲ ದಾಖಲೆಗಳು ನಮ್ಮ ಬಳಿ ಇವೆ ಎಂದಿದ್ದಾರೆ.
ಇಷ್ಟು ವರ್ಷಗಳ ಹೋರಾಟಗಳಲ್ಲಿ ಎಲ್ಲಾ ತರದ ಕೇಸ್‍ಗಳು ಎಲ್ಲಾ ಸರ್ಕಾರಗಳನ್ನೂ ನೋಡಿದ್ದೇವೆ. ಪೊಲೀಸರ ಮೇಲೆ ದಾಳಿ ಮಾಡಿ ದಬ್ಬಾಳಿಕೆ ಮಾಡಿದ್ವಿ, ಕಲ್ಲೆಸೆದ್ವಿ ಅನ್ನೋದಕ್ಕೆ ದಾಖಲೆ ಕೊಡಲಿ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಅತಿಥಿ ಉಪನ್ಯಾಸಕರಿಗೆ 5 ಸಾವಿರ ವೇತನ ಹೆಚ್ಚಳ: ಸಚಿವ ಸುಧಾಕರ್
ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆ (Karnataka Rakshana Vedike) ಅಧ್ಯಕ್ಷ ನಾರಾಯಣಗೌಡ ಸೇರಿದಂತೆ ಕನ್ನಡ ಹೋರಾಟಗಾರರನ್ನು ಜೈಲಿಗೆ ಹಾಕಿರುವುದು ದುಃಖವಾಗಿದೆ. ಕನ್ನಡ ಹೋರಾಟಗಾರನ್ನು ನಾವು ಬೆಂಬಲಿಸಬೇಕು. ಸರ್ಕಾರ ಸರಿಯಾಗಿ ಕಾನೂನು ಅನುಷ್ಠಾನ ಮಾಡದಿರುವುದಕ್ಕೆ ಕನ್ನಡಪರ ಸಂಘಟನೆಗಳು ಹೋರಾಟದ ಹಾದಿ ಹಿಡಿಯಬೇಕಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ ಏರ್ಪಡಿಸಿದ್ದ ರಾಷ್ಟ್ರಕವಿ ಕುವೆಂಪು (Kuvempu) ಅವರ ನವೀಕೃತ ಸಭಾಂಗಣ ಹಾಗೂ ಕುವೆಂಪು ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಾನು ಸಿಎಂ ಆಗಿದ್ದಾಗ ಸುಮಾರು ಎರಡು ಸಾವಿರ ಕನ್ನಡ ಹೋರಾಟಗಾರರ ಪ್ರಕರಣಗಳನ್ನು ವಾಪಸ್ ಪಡೆದಿದ್ದೆವು. ನಾಮಫಲಕಗಳಲ್ಲಿ ಕಡ್ಡಾಯ ಕನ್ನಡ ಅನುಷ್ಠಾನ ಮಾಡದಿರುವುದರಿಂದ ಈ ಪರಿಸ್ಥಿತಿ ಬಂದಿದೆ. ಆಡಳಿತಗಾರರಿಗೆ ಸೂಕ್ಷ್ಮತೆ ಇರಬೇಕು ಎಂದಿದ್ದಾರೆ. ಇದನ್ನೂ ಓದಿ: ಬಿಹಾರ ಸಿಎಂ ನಿತೀಶ್‌ಕುಮಾರ್‌ಗೆ ಜೆಡಿಯು ಸಾರಥ್ಯ
ನಾವು ಕನ್ನಡದ ಅನುಷ್ಠಾನಕ್ಕಾಗಿ ವಿಧೇಯಕ ಜಾರಿಗೊಳಿಸಿದ್ದೆವು. ಸ್ವಾತಂತ್ರ್ಯ ಬಂದು 75 ವರ್ಷಗಳಾಗಿದ್ದು, ಕನ್ನಡನಾಡಿನಲ್ಲಿ ಕನ್ನಡದ ಅನುಷ್ಠಾನಕ್ಕಾಗಿ ಕಾನೂನು ಮಾಡುವ ಅನಿವಾರ್ಯತೆ ಬಂದಿರುವುದು ಬೇಸರದ ಸಂಗತಿ. ಈಗ ಕಾನೂನೂ ಮಾಡದಿದ್ದರೆ ನಮ್ಮ ಮಕ್ಕಳಿಗೆ ಕಷ್ಟವಾಗಲಿದೆ. ಈಗಲೂ ಕಾನೂನು ಅನುಷ್ಠಾನ ಮಾಡದಿದ್ದರೆ ಅದು ದುರ್ದೈವ. ಕನ್ನಡ ಅನುಷ್ಠಾನ ಆಗದಿದ್ದರಿಂದ ಕನ್ನಡ ಹೋರಾಟಗಾರರು ಪ್ರತಿಭಟನೆ ಮಾಡುತ್ತಿದ್ದಾರೆ. ಯಾವ ನಾಡಿನಲ್ಲಿ ಕಾನೂನು ಅನುಷ್ಠಾನ ಮಾಡುವ ವ್ಯವಸ್ಥೆ ಇರುತ್ತದೆಯೋ ಅಲ್ಲಿ ಈ ರೀತಿಯ ಪ್ರತಿಭಟನೆಗಳು ನಡೆಯುವುದಿಲ್ಲ. ಯಾವ ನಾಡಿನಲ್ಲಿ ಕಾನೂನು ಅನುಷ್ಠಾನ ಮಾಡುವುದಿಲ್ಲವೋ ಈ ರೀತಿಯ ಘಟನೆಗಳು ನಡೆಯುತ್ತವೆ ಎಂದು ಅವರು ಹೇಳಿದ್ದಾರೆ.
ಕನ್ನಡದ ಉಳಿವಿಗೆ ಕನ್ನಡ ಸಾಹಿತ್ಯ ಪರಿಷತ್ತು (Kannada Sahitya Parishat) ಸಾಕಷ್ಟು ಶ್ರಮ ಹಾಕಿದೆ. ನಾನು ಸಿಎಂ ಆಗಿದ್ದಾಗ ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ವಿಕೃತಗೊಳಿಸುವ ಪ್ರಯತ್ನ ಮಾಡಿದ್ದರು. ಬಳಿಕ ನನ್ನ ಅವಧಿಯಲ್ಲಿ ಸುವರ್ಣಸೌಧದ ಮುಂದೆ ಸಂಗೊಳ್ಳಿ ರಾಯಣ್ಣ, ಕಿತ್ತೂರು ರಾಣಿ ಚೆನ್ನಮ್ಮ, ಅಂಬೇಡ್ಕರ್ ಹಾಗೂ ಗಾಂಧಿಯವರ ಪ್ರತಿಮೆ ನಿಲ್ಲಿಸುವ ಕೆಲಸ ಮಾಡಿದ್ದೇನೆ ಎಂದರು.
ಕನ್ನಡ ನಿತ್ಯ ನಿರಂತರವಾಗಿರಬೇಕು ಎಂದರೆ ಕನ್ನಡಿಗರು ಜಾಗೃತರಾಗಿರಬೇಕು. ಜಗತ್ತು ಬದಲಾಗುತ್ತಿದ್ದು, ಸವಾಲುಗಳನ್ನು ಎದುರಿಸಲು ನಮ್ಮ ಮಕ್ಕಳನ್ನು ಸಿದ್ಧಪಡಿಸಬೇಕಿದೆ. ಇಲ್ಲಿ ಐಟಿ ಬಿಟಿ ಯಾಕೆ ಅಭಿವೃದ್ಧಿಯಾಗಿದೆ ಎಂದರೆ, ಇಲ್ಲಿನ ಮಕ್ಕಳು ಜ್ಞಾನವಂತರಿದ್ದಾರೆ. ಸಾಧನೆ ಮಾಡಿದ್ದಾರೆ. ಅದೇ ಕಾರಣಕ್ಕೆ ಐಟಿ ಬಿಟಿಯವರು ಇಲ್ಲಿಗೆ ಬಂದಿದ್ದಾರೆ ಎಂದು ಹೇಳಿದ್ದಾರೆ.
ಕುವೆಂಪು ವಿಶ್ವಮಾನವ: ಕುವೆಂಪು ಅವರದ್ದು ಅಪರೂಪದ ವ್ಯಕ್ತಿತ್ವ, ಅವರು ಒಂದು ರೀತಿಯಲ್ಲಿ ಯುಗಪುರುಷರು. ಅವರನ್ನು ಆಳವಾಗಿ ನೋಡಿದಾಗ ಅತ್ಯಂತ ಮಾನವೀಯ ಗುಣಗಳಿರುವ ವ್ಯಕ್ತಿಯಾಗಿದ್ದಾರೆ. ವಿಸ್ತಾರವಾಗಿ ನೋಡಿದಾಗ ವಿಶ್ವ ಮಾನವರಾಗಿ ಕಾಣುತ್ತಾರೆ. ತಮ್ಮ ವಿಚಾರಧಾರೆಗಾಗಿ ಜಗತ್ತನ್ನು ಎದುರು ಹಾಕಿಕೊಳ್ಳುವ ಸ್ವಭಾವ ಅವರಲ್ಲಿತ್ತು. ಅವರು ಯಾವತ್ತೂ ಮುಲಾಜಿಗೆ ಬಿದ್ದು ಸಾಹಿತ್ಯ ರಚನೆ ಮಾಡಿಲ್ಲ ಎಂದಿದ್ದಾರೆ.
ಕರ್ನಾಟಕದ ಏಕೀಕರಣ ಆಗಬೇಕು ಎಂದು ಉತ್ತರ ಕರ್ನಾಟಕ ಭಾಗದಲ್ಲಿ ಹೋರಾಟ ನಡೆಯುತ್ತಿದ್ದಾಗ, ದಕ್ಷಿಣ ಭಾಗದಲ್ಲಿ ಆಕ್ಷೇಪ ವ್ಯಕ್ತವಾಗಿತ್ತು. ಈ ಸಮಯದಲ್ಲಿ ಕನ್ನಡದ ಮನಸ್ಸುಗಳು ಒಂದಾಗಬೇಕು ಎಂದು ಕುವೆಂಪು ಅವರು ಮೊದಲು ನಿಲುವು ತೆಗೆದುಕೊಂಡಿದ್ದರು. ಅವರು ಆ ಕಾಲದಲ್ಲಿ ಏಕೀಕರಣಕ್ಕೆ ಒತ್ತು ಕೊಟ್ಟವರು. ಕುವೆಂಪು ಅವರ ನಿಲುವನ್ನು ಎಲ್ಲರೂ ಒಪ್ಪಿಕೊಂಡರು. ಈಗ ಕನ್ನಡದ ಮನಸ್ಸುಗಳು ಒಂದಾಗಿವೆ. ಒಂದಾಗುವ ಸಾಹಿತ್ಯವನ್ನೂ ರಚಿಸಿದ್ದಾರೆ. ಅದಕ್ಕಾಗಿ ಕುವೆಂಪು ಬಹಳ ಶ್ರೇಷ್ಠರಾಗಿದ್ದಾರೆ. ವೈಚಾರಿಕತೆಯನ್ನು ಬಹಳ ಸರಳವಾಗಿ ಯೋಚಿಸುವ ಗುಣ ಸಹ ಅವರಲ್ಲಿತ್ತು. ಎಲ್ಲವನ್ನೂ ಸ್ವೀಕರಿಸುವ ಗುಣ ಅವರಿಗೆ ಇದ್ದಿದ್ದರಿಂದ ಅವರು ವಿಶ್ವ ಮಾನವರಾಗಲು ಸಾಧ್ಯವಾಯಿತು ಎಂದು ಹೇಳಿದ್ದಾರೆ.
ಕುವೆಂಪು ಅವರು ಜಗಜ್ಯೋತಿ ಬಸವಣ್ಣನವರ ವಿಚಾರಗಳನ್ನು ವೈಚಾರಿಕವಾಗಿ ವಿಮರ್ಶೆ ಮಾಡಿದ್ದಾರೆ. ಎಲ್ಲಿ ನೋಡಿದರೂ ಅವರ ಚಿಂತನೆ ಮತ್ತು ಸಾಹಿತ್ಯ ಇದೆ. ಹೀಗಾಗಿ ಈಗಲೂ ಕುವೆಂಪು ಜೀವಂತವಾಗಿದ್ದಾರೆ. ಅವರ ಸಾಹಿತ್ಯದಲ್ಲಿ ಎಲ್ಲದಕ್ಕೂ ಪರಿಹಾರ ಇದೆ ಎಂದಿದ್ದಾರೆ.
ಬೆಂಗಳೂರು: ನಾರಾಯಣಗೌಡರನ್ನು (Narayana Gowda) ಸರಿಯಾಗಿ ನಡೆಸಿಕೊಳ್ಳೋದು ಅಂದರೆ ಹೇಗೆ? ಪೊಲೀಸರು ಹೇಗೆ ನಡೆಸಿಕೊಳ್ಳಬೇಕು ಎಂದು ಅವರನ್ನೇ ಕೇಳುತ್ತೇನೆ ಹೇಳಲಿ. ಹೀಗೆ ಕಾನೂನು ಕೈಗೆತ್ತಿಕೊಂಡರೆ ಸುಮ್ಮನೆ ಇರೋದಕ್ಕೆ ಆಗುತ್ತಾ? ಪ್ರತಿಭಟನೆಗೆ ಅರ್ಧಗಂಟೆ ಸಮಯ ಕೊಡಬಹುದು. ಆದರೆ ರಸ್ತೆಯಲ್ಲಿ ಇದ್ದರೆ ಏನು ಮಾಡಬಹುದು ಎಂದು ಕರವೇ (Karnataka Rakshana Vedike) ನಾರಾಯಣಗೌಡ ವಿರುದ್ಧ ಗೃಹ ಸಚಿವ ಪರಮೇಶ್ವರ್ (G Parameshwar) ಗರಂ ಆಗಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ (Bengaluru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರವೇ ಹೋರಾಟಗಾರರು ಬಲವಂತವಾಗಿ ಬೋರ್ಡ್ ತೆಗೆಯೋದು, ಒಡೆದು ಹಾಕುವುದು ಮಾಡಿದ್ದಾರೆ. ಪೊಲೀಸರು ಸುಮ್ಮನೆ ಇರೋದಕ್ಕೆ ಆಗಲ್ಲ. ಕರವೇ ಹೋರಾಟಗಾರರು ಸಾರ್ವಜನಿಕರಿಗೆ ಧಕ್ಕೆ ತರುವ ಕೆಲಸ ಮಾಡಬಾರದಾಗಿತ್ತು. ಅದಕ್ಕೆ ಪೊಲೀಸರು ಸುಮ್ಮನೆ ಇರಲು ಆಗಲ್ಲ. ಕನ್ನಡ ನಾಮಫಲಕ ಕಡ್ಡಾಯ ಮಾಡೋದಕ್ಕೆ ಬಿಬಿಎಂಪಿಯವರು ಫೆಬ್ರವರಿ 28ರ ಗಡುವು ನೀಡಿದ್ದಾರೆ. ಸ್ವಲ್ಪ ಸಂಯಮ ಇರಬೇಕಲ್ವಾ? ಕಾನೂನಿನ ಉಲ್ಲಂಘನೆ ಮಾಡಿದರೆ ಸುಮ್ಮನಿರೋಕೆ ಆಗಲ್ಲ. ಇದನ್ನು ಸರ್ಕಾರ ಸಹಿಸಲ್ಲ ಎಂದು ಎಚ್ಚರಿಕೆ ಕೊಟ್ಟರು. ಇದನ್ನೂ ಓದಿ: ಆರ್‌ಎಸ್‌ಎಸ್‌ಗೂ ರಾಮಮಂದಿರಕ್ಕೂ ಏನೂ ಸಂಬಂಧವಿಲ್ಲ: ಡಿಕೆಶಿ
ನಾವು ಯಾರ ಪರವೂ ಇಲ್ಲ, ವಿರೋಧವೂ ಇಲ್ಲ. ಕಾನೂನನ್ನು ಯಾರೇ ಉಲ್ಲಂಘಿಸಿದ್ದರೂ ಸುಮ್ಮನಿರಲ್ಲ. ಸಾರ್ವಜನಿಕರಿಗೆ ತೊಂದರೆ ಆಗುತ್ತಿದ್ದರೆ ಪೊಲೀಸರು ಸುಮ್ಮನೆ ಕೂರಬೇಕಾ? ಇಡೀ ವಿಶ್ವಕ್ಕೆ ಬೆಂಗಳೂರು ಮಾದರಿ ನಗರ. ವಿಶ್ವದಿಂದ ಜನ ಬರುತ್ತಾರೆ. ಅವರಿಗೆಲ್ಲ ಏನು ಸಂದೇಶ ಕೊಟ್ಟ ಹಾಗೆ ಆಗುತ್ತದೆ? ಅದಕ್ಕೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಸರ್ಕಾರದ ಗಮನಕ್ಕೆ ತರಬೇಕು, ಬಿಬಿಎಂಪಿ ಗಮನಕ್ಕೆ ತರಬೇಕಿತ್ತು. ಪ್ರತಿಭಟನೆ ಕಾನೂನಿನ ಅಡಿಯಲ್ಲಿ ಮಾಡಬೇಕಿತ್ತು. ಸಾರ್ವಜನಿಕ ಆಸ್ತಿಪಾಸ್ತಿ ನಷ್ಟ ಆಗುವುದನ್ನು ನೋಡಿಕೊಂಡು ಸುಮ್ಮನೆ ಕೂರಬೇಕು ಅಂದರೆ ಆಗಲ್ಲ. ಮಾಲ್‌ಗಳ ಮುಂದೆ ಹೋಗಿ ಗಲಾಟೆ ಮಾಡಿದರೆ ಅವರು ರಕ್ಷಣೆ ನೀಡಿ ಎಂದು ಕೇಳುತ್ತಾರೆ, ಅದಕ್ಕೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಯತ್ನಾಳ್ ವಿರುದ್ಧ ಹೈಕಮಾಂಡ್‌ಗೆ ದೂರು – ಬಿಜೆಪಿ ಸಭೆಯ ನಿರ್ಣಯಗಳೇನು?
ಕನ್ನಡ (Kannada) ರಕ್ಷಣೆ ವಿಚಾರದಲ್ಲಿ ಕನ್ನಡದ ಪರವಾಗಿ ಸರ್ಕಾರ ನಿಂತಿದೆ. ಕನ್ನಡದಲ್ಲಿ ಆಡಳಿತ ತೀರ್ಮಾನ ಮಾಡಿದ್ದೇವೆ, ಅನುಷ್ಠಾನ ಮಾಡುತ್ತಿದ್ದೇವೆ. ಕನ್ನಡ ನಾಮಫಲಕ ಹಾಕುವ ಬಗ್ಗೆ ಟ್ರೇಡ್ ಲೈಸೆನ್ಸ್ ಕೊಡುವಾಗಲೂ ಸರ್ಕಾರ ಸೂಚನೆ ಕೊಡುತ್ತಿದೆ. ಈ ನಡುವೆ ಕರವೇ ಕನ್ನಡ ನಾಮಫಲಕ ಹಾಕಬೇಕು ಎಂದು ಒತ್ತಾಯಪೂರ್ವಕವಾಗಿ ಕಾನೂನು ಕೈಗೆತ್ತಿಕೊಂಡಿದ್ದಾರೆ. ಇದು ಅವಶ್ಯಕತೆ ಇರಲಿಲ್ಲ. ಹಾಗಾಗಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದು ಕರವೇ ಕಾರ್ಯಕರ್ತರ ಬಂಧನವನ್ನು ಸಮರ್ಥನೆ ಮಾಡಿಕೊಂಡರು. ಇದನ್ನೂ ಓದಿ: ಚುನಾವಣಾ ರಣತಂತ್ರದ ಮಾರ್ಗಸೂಚಿ ಬಗ್ಗೆ ಚರ್ಚೆಯಾಗಿದೆ: ಸಿ.ಟಿ.ರವಿ
ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆ (Karnataka Rakshana Vedike) ಹೋರಾಟಕ್ಕೆ ನಮ್ಮ ಬೆಂಬಲ ಇದೆ. ಆದರೆ ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು. ಆಸ್ತಿ ಪಾಸ್ತಿ ನಾಶ ಮಾಡಬಾರದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ (Shivaraj Tangadagi) ಕರವೇ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.
ವಿಕಾಸಸೌಧದಲ್ಲಿ ಮಾತನಾಡಿದ ಅವರು, ಕರವೇ ಹೋರಾಟಕ್ಕೆ ನಾನು ಬೆಂಬಲ ಮಾಡುತ್ತೇನೆ. ಆದರೆ ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು. ರಾಜ್ಯದಲ್ಲಿ ಕನ್ನಡ ನಾಮಫಲಕ (Kannada Nameboard) ಅಳವಡಿಕೆಗೆ ಕಾನೂನು ಜಾರಿ ಮಾಡುತ್ತಿದ್ದೇವೆ. ಸರೋಜಿನಿ ಮಹಿಷಿ ವರದಿ ಬಗ್ಗೆ ಎರಡು ಸದನದಲ್ಲಿ ಚರ್ಚೆ ಆಗಿ ಒಪ್ಪಿಗೆಯೂ ಸಿಕ್ಕಿದೆ. ಈಗ ರೂಲ್ಸ್ ಆಗಬೇಕು. ರೂಲ್ಸ್ ಮಾಡಲು 3 ಸಭೆ ಆಗಿದೆ. ಕಠಿಣ ರೂಲ್ಸ್ ಫ್ರೇಮ್ ಮಾಡುತ್ತೇವೆ. ಜನವರಿ ಮೊದಲ ಅಥವಾ ಎರಡನೇ ವಾರದಲ್ಲಿ ಮತ್ತೊಂದು ಸಭೆ ಮಾಡಿ ಕಾನೂನು ಜಾರಿಗೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು. ಇದನ್ನೂ ಓದಿ: ಜಾತಿಗಣತಿ ವರದಿ ಲೀಕ್ ಆಗಿಲ್ಲ- ವಿರೋಧ ಮಾಡೋರು ವರದಿ ಓದಲಿ: ಶಿವರಾಜ್ ತಂಗಡಗಿ
ನಾರಾಯಣಗೌಡರಿಗೆ ನಾನು ಬೆಂಬಲ ಕೊಡುತ್ತೇನೆ. ಆದರೆ ಬೇರೆಯವರಿಗೆ ತೊಂದರೆ ಕೊಡೋದು ಬೇಡ. ಅನ್ಯಭಾಷೆಯವರಿಗೆ ಗೌರವ ಕೊಡೋಣ. ಅವರಿಗೆ ಕನ್ನಡ ಕಲಿಸೋಣ. ಸಿಎಂ ಯಾವುದೇ ಬೋರ್ಡ್‌ನಲ್ಲಿ 60% ಕನ್ನಡ ಇರಬೇಕು ಎಂದು ಹೇಳಿದ್ದಾರೆ. 60% ಕಡ್ಡಾಯವಾಗಿ ಕನ್ನಡ ಬೋರ್ಡ್ ಹಾಕಬೇಕು. ಇದಕ್ಕಾಗಿ ಕಾನೂನು ತರುತ್ತಿದ್ದೇವೆ. ಬೆಳಗಾವಿ ಅಧಿವೇಶನದಿಂದ ಸಭೆ ಮಾಡೋದು ತಡವಾಯಿತು. ಆದಷ್ಟು ಬೇಗ ಕಾನೂನು ಮಾಡುತ್ತೇವೆ. ಕೇವಲ ರೂಲ್ಸ್ ಮಾಡೋದಲ್ಲ. ಇದರ ಜಾರಿಗೆ ಟಾಸ್ಕ್ ಫೋರ್ಸ್ ರಚನೆ ಮಾಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಕನ್ನಡ ಪರ ಹೋರಾಟಗಾರರ ಮೇಲಿನ ಕೇಸು ವಾಪಸ್ ಪಡೆಯಿರಿ: ಬಿ.ಕೆ.ಹರಿಪ್ರಸಾದ್
ಕೆಲ ಶಾಲೆಗಳಲ್ಲಿ ಕನ್ನಡವೇ ಕಲಿಸಲ್ಲ. ಕಾನೂನು ಮಾನಿಟರ್ ಮಾಡಲು ಟಾಸ್ಕ್ ಫೋರ್ಸ್ ರಚನೆ ಮಾಡುತ್ತೇವೆ. ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ ಜೊತೆಗೂಡಿ ಕೆಲಸ ಮಾಡುತ್ತೇವೆ. ಕೇವಲ ಫೈನ್ ಹಾಕೋದಲ್ಲ, ಕನ್ನಡದಲ್ಲಿ ಬೋರ್ಡ್ ಹಾಕದೇ ಹೋದರೆ ಅಂಗಡಿ ಲೈಸೆನ್ಸ್ ಕ್ಯಾನ್ಸಲ್ ಮಾಡೋ ನಿಯಮ ಜಾರಿ ಮಾಡುತ್ತೇವೆ. ಶಾಲೆಗಳಲ್ಲಿ ಕನ್ನಡ ಕಲಿಸದೇ ಹೋದರೆ ಶಾಲೆಯ ಮಾನ್ಯತೆ ರದ್ದು ಕಾನೂನು ತರುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಕಾಂತರಾಜು ವರದಿ ಜಾರಿಗೆ ಒತ್ತಾಯಿಸಿ ಬೃಹತ್ ಮಟ್ಟದ ಅಹಿಂದಾ ಸಮಾವೇಶಕ್ಕೆ ಮುಹೂರ್ತ ಫಿಕ್ಸ್
ಕನ್ನಡ ಪರ ಸಂಘಟನೆಗಳಿಗೆ ಮನವಿ ಮಾಡುತ್ತೇನೆ. ಹೋರಾಟ ಮಾಡಲಿ. ಆದರೆ ಬೇರೆಯವರಿಗೆ ತೊಂದರೆ ಕೊಡಬಾರದು. ಕಾನೂನು ಮಾಡಲು ಸಿದ್ಧತೆ ಆಗುತ್ತಿದೆ. ಸಂಘಟನೆಗಳ ಆಶಯದಂತೆ ಕಾನೂನು ಜಾರಿ ಮಾಡುತ್ತೇವೆ. ಹೀಗಾಗಿ ಯಾರೂ ಕಾನೂನು ಕೈಗೆ ಎತ್ತಿಕೊಳ್ಳುವುದು ಬೇಡ. ನಮ್ಮ ರಾಜ್ಯಕ್ಕೆ ಬರುವವರನ್ನು ಪ್ರೀತಿ ವಿಶ್ವಾಸದಿಂದ ನೋಡಿ. ನಮ್ಮ ಸರ್ಕಾರ ಕನ್ನಡದ ಪರ ಇದೆ. ನೆಲ, ಜಲ, ಭಾಷೆಯ ವಿಚಾರದಲ್ಲಿ ನಾವು ರಾಜೀ ಆಗೋ ಮಾತೇ ಇಲ್ಲ ಎಂದರು. ಇದನ್ನೂ ಓದಿ: ಸೋಮಾರಿ ಸಿದ್ದ ಪದ ಬಳಸಿದ್ದು ಸಿದ್ದರಾಮಯ್ಯರಿಗೆ ಅಲ್ಲ: ಪ್ರತಾಪ್ ಸಿಂಹ ಸ್ಪಷ್ಟನೆ