Tag: Karnataka Ratna

  • ರೆಬೆಲ್ ಸ್ಟಾರ್ ಅಂಬರೀಶ್‌ಗೂ `ಕರ್ನಾಟಕ ರತ್ನ’ ನೀಡುವಂತೆ ಮನವಿ

    ರೆಬೆಲ್ ಸ್ಟಾರ್ ಅಂಬರೀಶ್‌ಗೂ `ಕರ್ನಾಟಕ ರತ್ನ’ ನೀಡುವಂತೆ ಮನವಿ

    ಸಿನಿಮಾ ಹಾಗೂ ರಾಜಕೀಯದಲ್ಲಿ ಅಜಾತಶತ್ರುವಾಗಿ ಬೆಳೆದು ಅಪಾರ ಅಭಿಮಾನಿಗಳನ್ನು ಗಳಿಸಿರುವ ನಟ ರೆಬೆಲ್ ಸ್ಟಾರ್ ಅಂಬರೀಶ್ (Ambareesh) ಅವರಿಗೂ `ಕರ್ನಾಟಕ ರತ್ನ’ (Karnataka Ratna) ಪುರಸ್ಕಾರ ನೀಡುವಂತೆ ಅಭಿಮಾನಿಗಳು ಹಾಗೂ ಹಿರಿಯ ನಟಿ ತಾರಾ (Actress Tara) ಮನವಿ ಮಾಡಿದ್ದಾರೆ.

    ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಅವರನ್ನ ಭೇಟಿಯಾಗಿ ನಟಿ ತಾರಾ ಅನುರಾಧ ಮನವಿ ಪತ್ರ ಕೊಟ್ಟಿದ್ದಾರೆ. ಸಿನಿಮಾ ಕ್ಷೇತ್ರದಲ್ಲಿ ಜನಪ್ರಿಯತೆ ಗಳಿಸಿದ್ದಲ್ಲದೇ ಕಲಿಯುಗದ ಕರ್ಣ ಎಂದು ಕರೆಸಿಕೊಳ್ಳುವ ಜನಮೆಚ್ಚಿದ ಕಲಾವಿದ ಅಂಬರೀಶ್. ಚಿತ್ರರಂಗಕ್ಕೆ ಹಿರಿಯಣ್ಣನಂತಿದ್ದರು, ರಾಜಕೀಯದಲ್ಲಿದ್ದರೂ ಪಕ್ಷಗಳ ಬೇದಭಾವವಿಲ್ಲದೆ ಸರ್ವರಿಗೂ ಇಷ್ಟವಾಗುವ ಸಜ್ಜನ ರಾಜಕಾರಣಿಯಾಗಿದ್ದರು.

    ಸಾಮಾಜಿಕ ಸೇವೆಯಲ್ಲಿ ಹೆಸರು ಮಾಡಿರುವ ಈ ಕಲಾವಿದನಿಗೆ ತಕ್ಕ ಗೌರವ ಕೊಡಿ ಎಂದು ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಕೇಳಿಕೊಂಡಿದ್ದರು. ಇತ್ತೀಚೆಗೆ ಡಾ.ವಿಷ್ಣುವರ್ಧನ್ ಹಾಗೂ ಬಿ.ಸರೋಜಾದೇವಿಯವರಿಗೆ ಸರ್ಕಾರ `ಕರ್ನಾಟಕ ರತ್ನ’ ಪ್ರಶಸ್ತಿಯನ್ನು ಘೋಷಣೆ ಮಾಡಿತ್ತು.

    ಇದರ ಬೆನ್ನಲ್ಲೇ ಮರಣೋತ್ತರ `ಕರ್ನಾಟಕ ರತ್ನ’ ಗೌರವವನ್ನ ರೆಬೆಲ್ ಸ್ಟಾರ್ ಅಂಬರೀಶ್‌ಗೂ ಕೊಡುವಂತೆ ಒತ್ತಾಯ ಕೇಳಿಬಂದಿದೆ. ಅಭಿಮಾನಿಗಳು ಹಾಗೂ ಚಿತ್ರರಂಗದ ಪರವಾಗಿ ಹಿರಿಯ ನಟಿ ತಾರಾ ಅನುರಾಧ, ಡಿಸಿಎಂ ಬಳಿ ಮನವಿ ಮಾಡಿದ್ದಾರೆ. ಈ ಸಂಬಂಧ ಸರ್ಕಾರ ಯಾವ ನಿರ್ಧಾರಕ್ಕೆ ಬರಲಿದೆ ಅನ್ನೋದನ್ನ ಕಾದು ನೋಡಬೇಕಿದೆ.

  • ಸಾಹಸಸಿಂಹ ವಿಷ್ಣುವರ್ಧನ್‌ಗೆ ʻಕರ್ನಾಟಕ ರತ್ನʼ..?

    ಸಾಹಸಸಿಂಹ ವಿಷ್ಣುವರ್ಧನ್‌ಗೆ ʻಕರ್ನಾಟಕ ರತ್ನʼ..?

    ಅಭಿಮಾನಿಗಳ ಆರಾಧ್ಯ ದೈವ, ಸಾಹಸಸಿಂಹ ಬಿರುದಾಂಕಿತ ನಟ ದಿ. ಡಾ.ವಿಷ್ಣುವರ್ಧನ್‌ರಿಗೆ (Vishnuvardhan) ಮರಣೋತ್ತರ ʻಕರ್ನಾಟಕ ರತ್ನʼ ಪ್ರಶಸ್ತಿ (Karnataka Ratna Award) ನೀಡಬೇಕೆಂಬ ಒತ್ತಾಯ ಹೆಚ್ಚಾಗಿದೆ. ಬಹುಶಃ ನಾಳೆ (ಸೆ.4) ಈ ಕುರಿತು ಸರ್ಕಾರ ತೀರ್ಮಾನಿಸಿ, ನಾಳೆಯೇ ಘೋಷಣೆ ಮಾಡುವ ಸಾಧ್ಯತೆ ಇದೆ.

    ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿರುವ ವಿಷ್ಣುವರ್ಧನ್, ನಾಡು, ನುಡಿ, ಕಲೆಗೆ ಅಪಾರ ಸೇವೆ ಸಲ್ಲಿಸಿದ್ದಾರೆ. ಈ ಕಲಾವಿದನಿಗೆ ಗೌರವ ಸೂಚಕವಾಗಿ ʻಕರ್ನಾಟಕ ರತ್ನʼ ಪ್ರಶಸ್ತಿ ನೀಡುವಂತೆ ಹಿಂದಿನಿಂದಲೂ ಒತ್ತಾಯ ಕೇಳಿ ಬರುತ್ತಿತ್ತು. ಇದೀಗ ಭಾರತಿ ವಿಷ್ಣುವರ್ಧನ್ (Bharathi Vishnuvardhan) ಹಾಗೂ ಅಳಿಯ ಅನಿರುದ್ಧ ಜಟ್ಕರ್‌ ಬುಧವಾರ ಮುಖ್ಯಮಂತ್ರಿ ಸಿದ್ಧರಾಮಯ್ಯರನ್ನ ಭೇಟಿಮಾಡಿ ಅಭಿಮಾನ್ ಸ್ಡುಡಿಯೋ ಜಾಗದ ವಿಚಾರ ಪ್ರಸ್ತಾಪಿಸಿದ್ದಾರೆ.

    ಇದೇ ಸಂದರ್ಭದಲ್ಲಿ ಅಭಿಮಾನಿಗಳು ಹಾಗೂ ಕನ್ನಡ ಚಿತ್ರರಂಗದ ತಾರೆಯರ ಒತ್ತಾಯದ ಮೇರೆಗೆ ವಿಷ್ಣುವರ್ಧನ್ ಅವರಿಗೆ ಮರಣೋತ್ತರ ʻಕರ್ನಾಟಕ ರತ್ನʼ ಕೊಡುವ ವಿಚಾರವನ್ನ ಸರ್ಕಾರ ಭಾರತಿಯವರ ಗಮನಕ್ಕೆ ತಂದಿದೆ ಎನ್ನಲಾಗುತ್ತಿದೆ. ಇದನ್ನೂ ಓದಿ: ರಸ್ತೆಯಲ್ಲಿ ಅಡುಗೆ ಮಾಡಿ ಖುಷಿಪಟ್ಟ ನಾಗಾರ್ಜುನ ಸೊಸೆ 

    ಒಂದು ದಿನದ ಹಿಂದಷ್ಟೇ ಮಾಜಿ ಸಚಿವೆ ಜಯಮಾಲಾ, ಹಿರಿಯ ನಟಿ ಶ್ರುತಿ, ನಟಿ ಮಾಳವಿಕಾ ಅವಿನಾಶ್‌ ಸೇರಿ ಅನೇಕರು ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಿ ವಿಷ್ಣುವರ್ಧನ್‌ ಅವರಿಗೆ ʻಕರ್ನಾಟಕ ರತ್ನʼ ಪ್ರಶಸ್ತಿ ನೀಡುವಂತೆ ಮನವಿ ಮಾಡಿದ್ದರು. ಇದೇ ತಿಂಗಳು ಸೆ. 18ರಂದು ವಿಷ್ಣುವರ್ಧನ್ ಅವರ 75ನೇ ವರ್ಷದ ಹುಟ್ಟುಹಬ್ಬವಿದೆ. ಈ ಶುಭ ಸಂದರ್ಭದಲ್ಲಿ ಕರ್ನಾಟಕ ಸರ್ಕಾರ ವಿಷ್ಣುವರ್ಧನ್‌ ಅವರಿಗೆ ಪ್ರಶಸ್ತಿ ಘೋಷಿಸುವ ಸಾಧ್ಯತೆ ಇದೆ. ಇದನ್ನೂ ಓದಿ: ಬಿಗ್‌ ಬಾಸ್‌ ಪ್ರೋಮೋ ರಿಲೀಸ್‌ – ಸ್ಪರ್ಧಿಗಳ ಬಗ್ಗೆ ಮಾಹಿತಿಯೂ ಔಟ್‌

    ನಟ ಅನಿರುದ್ಧ ಹೇಳಿದ್ದೇನು?
    ಸಿಎಂ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ನಟ ಅನಿರುದ್ಧ (Aniruddha Jatkar), ಅಭಿಮಾನ್ ಸ್ಟುಡಿಯೋದಲ್ಲಿರುವ 19 ಗುಂಟೆ ಜಾಗಕ್ಕಾಗಿ ಮನವಿ ಮಾಡಿದ್ದೇವೆ. ಆ ಜಾಗದಲ್ಲಿ ಮಂಟಪ ನಿರ್ಮಿಸಲು ಅನುಮತಿ ಕೊಡಿ ಎಂದು ಕೇಳಿದ್ದೇವೆ. ಹಿಂದೆ ಅಲ್ಲಿ ಮಂಟಪವನ್ನು ನಾವು ಕಟ್ಟಿದ್ವಿ. ಈಗಲೂ ಜಾಗ ಕೊಟ್ಟರೆ ನಾವೇ ಮಂಟಪ ಕಟ್ಟಿಕೊಳ್ತೇವೆ. ಸಿಎಂ ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಸೆಪ್ಟೆಂಬರ್ 18ರ ಒಳಗೆ ಜಾಗಕ್ಕೆ ಅನುಮತಿ ಸಿಗೋ ಸಾಧ್ಯತೆಯಿದೆ. ಅಲ್ಲದೇ ನಾಳೆಯ ಕ್ಯಾಬಿನೆಟ್‌ನಲ್ಲಿ ʻಕರ್ನಾಟಕ ರತ್ನʼದ ಬಗ್ಗೆ ಸಿಎಂ ಚರ್ಚೆ ಮಾಡೋದಾಗಿ ಹೇಳಿದ್ದಾರೆ. ನಾಳೆಯೇ ಘೋಷಣೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ದಿ.ಡಾ.ವಿಷ್ಣುವರ್ಧನ್, ಸರೋಜಾದೇವಿಯವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆಗೆ ನಟಿಯರ ಮನವಿ

  • ನಟ ವಿಷ್ಣುವರ್ಧನ್‌ರಿಗೆ ಮರಣೋತ್ತರ ಕರ್ನಾಟಕ ರತ್ನ ನೀಡಿ: ಸಿಎಂಗೆ ಅನಿರುದ್ಧ ಮನವಿ

    ನಟ ವಿಷ್ಣುವರ್ಧನ್‌ರಿಗೆ ಮರಣೋತ್ತರ ಕರ್ನಾಟಕ ರತ್ನ ನೀಡಿ: ಸಿಎಂಗೆ ಅನಿರುದ್ಧ ಮನವಿ

    ಟ ಸಾಹಸಸಿಂಹ ವಿಷ್ಣುವರ್ಧನ್‌ರಿಗೆ (Vishnuvardhan) ಮರಣೋತ್ತರ ಕರ್ನಾಟಕ ರತ್ನ ನೀಡುವಂತೆ ವಿಷ್ಣುವರ್ಧನ್ ಅಳಿಯ ಅನಿರುದ್ಧ (Aniruddha Jatkar), ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದರು. ಕಾವೇರಿ ನಿವಾಸದಲ್ಲಿ ಸಿಎಂ ಭೇಟಿಯಾಗಿ ಅನಿರುದ್ಧ ಮನವಿ ಸಲ್ಲಿಸಿದರು.

    ಸಿಎಂ ಭೇಟಿ ಬಳಿಕ ಮಾತನಾಡಿ, ಸಿಎಂ ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಿದೆ. ಹಿಂದೆಯೂ ಸಕಾರಾತ್ಮಕವಾಗಿ ಸ್ಪಂದಿಸಿದ್ದರು. ಇವತ್ತು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಸಚಿವ ಸಂಪುಟದಲ್ಲಿ ಚರ್ಚೆ ಮಾಡುತ್ತೇನೆ ಎಂದು ಸಿಎಂ ಹೇಳಿದ್ದಾರೆ. ಚರ್ಚೆ ಮಾಡಿ ತೀರ್ಮಾನ ಮಾಡ್ತೇವೆ ಎಂದು ಹೇಳಿದ್ದಾರೆ ಅಂತ ತಿಳಿಸಿದರು. ಇದನ್ನೂ ಓದಿ: ವಿಷ್ಣು ಸಮಾಧಿ ನೆಲಸಮ, ಅಭಿಮಾನ್‌ ಸ್ಟುಡಿಯೋದ ಅವ್ಯವಹಾರ: ವಿಷ್ಣು ಫ್ಯಾನ್ಸ್ ಗರಂ

    ವಿಷ್ಣುವರ್ಧನ್‌ಗೆ ಕರ್ನಾಟಕ ರತ್ನ ಕೊಡಿ ಎಂದು ಕೇಳುವುದು ಎಂದರೆ ತಪ್ಪು ಆಗುತ್ತದೆ. ಕರ್ನಾಟಕ ರತ್ನ ಪ್ರಶಸ್ತಿಗೆ ವಿಷ್ಣುವರ್ಧನ್ ಅವರು ಅರ್ಹರು. ಹಾಗಾಗಿ, ಕೇಳುವ ಬದಲಾಗಿ ನೆನಪು ಮಾಡುತ್ತೇನೆ. ಈ ಬಾರಿಯೂ ನೆನಪು ಮಾಡಿದ್ದೇನೆ‌‌ ಎಂದು ಹೇಳಿದರು.

    ವಿಷ್ಣುವರ್ಧನ್ ಸಮಾಧಿ ಧ್ವಂಸ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಇದರ ಬಗ್ಗೆ ಈಗಾಗಲೇ ಸರ್ಕಾರದ ಮತ್ತು ಸಿಎಂ ಗಮನಕ್ಕಿದೆ. ಹಿಂದೆ ನಾವು ಕೇಳಿದ ಹಾಗೆ ಕರ್ನಾಟಕ ಸರ್ಕಾರ ಅಪ್ಪ ಅವರ ಸ್ಮಾರಕ ಮಾಡಿದ್ದಾರೆ. ಈಗಾಗಲೇ ಸರ್ಕಾರ ಐದು ಎಕರೆ ಜಮೀನಿನಲ್ಲಿ ಸ್ಮಾರಕ ಮಾಡಿದೆ. ಮೊನ್ನೆ ಸಮಾಧಿ ಧ್ವಂಸ ಮಾಡಿರುವ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಹೇಳಿಕೆ ನೀಡಿದ್ದೇನೆ. ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ ಸರ್ಕಾರ ಮಾಡಿದೆ. ಹೀಗಾಗಿ, ಬೆಂಗಳೂರಿನಲ್ಲಿಯೂ ಸ್ಮಾರಕ ಬೇಕು ಅನ್ನೋದು ತಪ್ಪಾಗುತ್ತದೆ ಎಂದರು. ಇದನ್ನೂ ಓದಿ: ಡಾ. ವಿಷ್ಣು ಅಭಿಮಾನ ಸ್ಮಾರಕ – ಪುತ್ಥಳಿ ನಿರ್ಮಾಣಕ್ಕೆ ಚಾಲನೆ

    ವಿಷ್ಣು ಸ್ಮಾರಕ ಇರೋದನ್ನ ಧ್ವಂಸ ಮಾಡಿದ್ದು ದುರಂತ. ಅಲ್ಲಿಯೇ ಅವರ ಅಂತ್ಯಕ್ರಿಯೆ ಆಗಿರೋದ್ರಿಂದ ಅದಕ್ಕೆ ಆದ್ಯತೆ ಪ್ರಾಮುಖ್ಯತೆ ಇದೆ. ಬಾಲಣ್ಣ ಅವರ ಜಾಗದಲ್ಲಿಯೂ ನಾವು ಸ್ಮಾರಕ ಬೇಕು ಅನ್ನೋದು ತಪ್ಪಾಗುತ್ತದೆ. ರಾಜ್ಯ ಸರ್ಕಾರ ಆ ಜಾಗ ಖರೀದಿ ಮಾಡುತ್ತದೆಯಾ ನೋಡಬೇಕು. ಒಂದು ದುರಂತದ ಘಟನೆಯಾಗಿದೆ. ಆ ಜಮೀನು ಬಾಲಣ್ಣ ಕುಟುಂಬಕ್ಕೆ ಸೇರಿದೆ. ಬಾಲಣ್ಣ ಕುಟುಂಬದ ಬಳಿಯೂ ಕೂಡ ಅಭಿಮಾನಿಗಳಿಗಾಗಿ 10 ಗುಂಟೆ ಜಾಗ ಕೇಳಿದ್ದೆ. ಸರ್ಕಾರ ಇದನ್ನು ಏನು ಮಾಡುತ್ತದೆ ಗೊತ್ತಿಲ್ಲ. ನಾವು ಕುಟುಂಬದವರಾಗಿ ಮತ್ತೆ ಮತ್ತೆ ಕೇಳೋದು ತಪ್ಪಾಗುತ್ತದೆ. ನಾವು ಕೇಳಿದ ಹಾಗೆ ಮೈಸೂರಿನಲ್ಲಿ ಸ್ಮಾರಕವಾಗಿದೆ. ಮತ್ತೆ ಇಲ್ಲಿಯೂ ಮಾಡಿ ಎನ್ನೋದರಲ್ಲಿ ಅರ್ಥ ಇಲ್ಲ. ಬಾಲಣ್ಣ ಕುಟುಂಬ ಮನಸು ಮಾಡಿ ಮತ್ತೆ ಸ್ಮಾರಕ ಕಟ್ಟೋಕೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು.

  • ಡಾ.ಮಂಜುನಾಥ್‌ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಿಸಿ: ಸಿಎಂಗೆ ಆರ್‌.ಅಶೋಕ್‌ ಮನವಿ

    ಡಾ.ಮಂಜುನಾಥ್‌ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಿಸಿ: ಸಿಎಂಗೆ ಆರ್‌.ಅಶೋಕ್‌ ಮನವಿ

    ಬೆಂಗಳೂರು: ಬಡವರ ಪಾಲಿನ ಆಶಾಕಿರಣ ಡಾ.ಸಿ.ಎನ್.ಮಂಜುನಾಥ್‌ (CN Manjunath) ಅವರಿಗೆ ಕರ್ನಾಟಕ ರತ್ನ (Karnataka Ratna) ಪ್ರಶಸ್ತಿ ಘೋಷಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ವಿಪಕ್ಷ ನಾಯಕ ಆರ್‌.ಅಶೋಕ್‌ (R Ashok) ಮನವಿ ಮಾಡಿದ್ದಾರೆ.

    ಜಯದೇವ ಆಸ್ಪತ್ರೆ (Jayadeva Hospital) ನಿರ್ದೇಶಕರಾಗಿ ಸೇವೆ ಸಲ್ಲಿಸಿರುವ ಮಂಜುನಾಥ್‌ ಅವರು ಇಂದು (ಬುಧವಾರ) ನಿವೃತ್ತರಾಗಲಿದ್ದಾರೆ. ಅವರ ಸಾಧನೆ ಸ್ಮರಿಸಿರುವ ಆರ್‌.ಅಶೋಕ್‌ ಸೋಷಿಯಲ್‌ ಮೀಡಿಯಾದ ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಹಾಕಿದ್ದಾರೆ.

     

    ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರಾಗಿ 16 ವರ್ಷಗಳ ಕಾಲ ಸೇವೆ ಸಲ್ಲಿಸಿ ಇಂದು ನಿವೃತ್ತರಾಗುತ್ತಿರುವ ನಾಡಿನ ಪ್ರಖ್ಯಾತ ವೈದ್ಯರಾದ ಡಾ.ಸಿ.ಎನ್.ಮಂಜುನಾಥ್ ಅವರ ನಿವೃತ್ತಿ ಜೀವನ ಸುಖಕರವಾಗಿರಲೆಂದು ಮನಸಾರೆ ಶುಭ ಹಾರೈಸುತ್ತೇನೆ ಎಂದಿದ್ದಾರೆ.

    ಬಡರೋಗಿಗಳ ಪಾಲಿನ ಆಶಾಕಿರಣವಾಗಿ “ಟ್ರೀಟ್ಮೆಂಟ್ ಫಸ್ಟ್, ಪೇಮೆಂಟ್ ನೆಕ್ಸ್ಟ್” ಎಂಬ ಪರಿಕಲ್ಪನೆಯನ್ನಿಟ್ಟುಕೊಂಡು ಸಾವಿರಾರು ಬಡ ರೋಗಿಗಳಿಗೆ ಚಿಕಿತ್ಸೆ ಕೊಟ್ಟ ಡಾ.ಮಂಜುನಾಥ್ ಅವರು ಬಡವರ ಪಾಲಿನ ಧನ್ವಂತರಿ ಅಂದರೆ ಅತಿಶಯೋಕ್ತಿಯಲ್ಲ ಎಂದು ಹೇಳಿದ್ದಾರೆ.

    ಸರ್ಕಾರಿ ಆಸ್ಪತ್ರೆ ಎಂದರೆ ಮೂಗು ಮುರಿಯುವ ಕಾಲದಲ್ಲಿ ಯಾವುದೇ ಖಾಸಗಿ ಕಾರ್ಪೊರೇಟ್ ಆಸ್ಪತ್ರೆಗೆ ಕಡಿಮೆ ಇಲ್ಲದಂತೆ ಬಡವರಿಗೆ ಕೈಗೆಟಕುವ ದರದಲ್ಲಿ ಉತ್ಕೃಷ್ಟ ಆರೋಗ್ಯ ಸೇವೆ ನೀಡುವ ಮಟ್ಟಕ್ಕೆ ಒಂದು ಸರ್ಕಾರಿ ಸಂಸ್ಥೆಯನ್ನು ಕಟ್ಟಿಬೆಳೆಸಿದ ಅನನ್ಯ ಸಾಧನೆ ಮಾಡಿದ ಡಾ.ಸಿ.ಎನ್.ಮಂಜುನಾಥ್ ಅವರು ಕರ್ನಾಟಕದ ಹೆಮ್ಮೆಯ ಸುಪುತ್ರ. ಡಾ.ಸಿ.ಎನ್.ಮಂಜುನಾಥ್ ಅವರ ಸಾಧನೆಯನ್ನು ಗುರುತಿಸಿ, ಗೌರವಿಸಲು ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

  • ವಿಷ್ಣುವರ್ಧನ್ ಗೆ ‘ಕರ್ನಾಟಕ ರತ್ನ’: ಭರವಸೆ ನೀಡಿದ ಸಿಎಂ ಬೊಮ್ಮಾಯಿ

    ವಿಷ್ಣುವರ್ಧನ್ ಗೆ ‘ಕರ್ನಾಟಕ ರತ್ನ’: ಭರವಸೆ ನೀಡಿದ ಸಿಎಂ ಬೊಮ್ಮಾಯಿ

    ನ್ನಡದ ಹೆಸರಾಂತ ನಟ ವಿಷ್ಣುವರ್ಧನ್ (Vishnuvardhan) ಈ ನಾಡಿಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಹಾಗಾಗಿ ಅವರ ಅಭಿಮಾನಿಗಳು ವಿಷ್ಣುವರ್ಧನ್ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡುವಂತೆ ಒತ್ತಾಯ ಮಾಡಿದ್ದಾರೆ. ಅಭಿಮಾನಿಗಳ ಭಾವನೆಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತೇವೆ. ಮುಂದಿನ ದಿನಗಳಲ್ಲಿ ಕರ್ನಾಟಕ ರತ್ನ (Karnataka Ratna) ನೀಡುವ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಭರವಸೆ ನೀಡಿದ್ದಾರೆ.

    ಇಂದು ಮೈಸೂರಿನಲ್ಲಿ ನಡೆದ ವಿಷ್ಣು ಸ್ಮಾರಕ ಉದ್ಘಾಟನೆ ವೇಳೆ ಮಾತನಾಡಿದ ಸಿಎಂ, ‘ವಿಷ್ಣುವರ್ಧನ್ ಅವರ ಕಲೆ, ಸಾಹಸ, ಚಿತ್ರರಂಗದಲ್ಲಿ ಮಾಡಿರೋ ಸಾಧನೆ ಕಣ್ಣ ಮುಂದೆ ಇದೆ. ನಾನು ಒಬ್ಬ ವಿಷ್ಣುವರ್ಧನ್ ಅಭಿಮಾನಿಯಾಗಿ ಇಲ್ಲಿ ಬಂದಿದ್ದೇನೆ. 70 ರ ದಶಕದಲ್ಲಿ ನಾಗರಹಾವಿನ ಹೊಸ ನಾಯಕ, ಅವ್ರ ಚಿತ್ರ ಬಂದಿತ್ತು. ಮೊದಲ ಸಲಾ ನೋಡಿದವ್ರು ಖಂಡಿತವಾಗಿ ವಿಷ್ಣುವರ್ಧನ್ ಫ್ಯಾನ್ ಆಗ್ತಾ ಇದ್ದರು. ನಾಗರಹಾವು ಚಿತ್ರದ ಮೂಲಕ ನಾಡಿನ ಜನಮನ ಗೆದ್ದವರು ಡಾ. ವಿಷ್ಣುವರ್ಧನ್. ಎಲ್ಲಾ ರೀತಿಯ ಪಾತ್ರಗಳನ್ನು ಮಾಡಿ ಸಾಹಸ ಸಿಂಹನಾಗಿ ಕರ್ನಾಟಕದಲ್ಲಿ ಮೆರೆದವರು’ ಎಂದು ಕೊಂಡಾಡಿದರು. ಕರ್ನಾಟಕ ರತ್ನ ಕುರಿತು ಪ್ರಸ್ತಾಪ ಮಾಡಿದರು. ಇದನ್ನೂ ಓದಿ: ನಟ ನಂದಮೂರಿ ತಾರಕರತ್ನ ಸ್ಥಿತಿ ಗಂಭೀರ : ಮಾಜಿ ಸಿಎಂ ಚಂದ್ರಬಾಬು ನಾಯ್ಡು ಭೇಟಿ

    ನಿನ್ನೆಯಷ್ಟೇ ಡಾ.ವಿಷ್ಣುಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ (Veerakaputra Srinivas), ಸರಕಾರದ ವಿರುದ್ಧ ಹರಿಹಾಯ್ದಿದ್ದರು. ಬೇರೆ ನಟರಿಗೆ ಕೊಡುವ ಗೌರವವನ್ನು ವಿಷ್ಣುವರ್ಧನ್ ಅವರಿಗೆ ಯಾಕೆ ಕೊಡುತ್ತಿಲ್ಲವೆಂದು ಖಾರವಾಗಿಯೇ ಪ್ರಶ್ನೆ ಮಾಡಿದ್ದರು. ಅಲ್ಲದೇ, ಕರ್ನಾಟಕ ರತ್ನ ಪ್ರಶಸ್ತಿಯನ್ನು ಘೋಷಿಸುವಂತೆ ಆಗ್ರಹಿಸಿದ್ದರು. ವೀರಕಪುತ್ರ ಶ್ರೀನಿವಾಸ್ ಅವರ ಬೇಡಿಕೆಗೆ ಸ್ಪಂದಿಸಿರುವ ಸಿಎಂ, ಮುಂದಿನ ದಿನಗಳಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುವ ಮಾತುಗಳನ್ನು ಆಡಿದ್ದಾರೆ.

    ಸತತ ಹದಿಮೂರು ವರ್ಷಗಳ ನಂತರ ಡಾ.ವಿಷ್ಣುವರ್ಧನ್ ಸ್ಮಾರಕ ಉದ್ಘಾಟನೆಯಾಗುತ್ತಿದೆ. ಕೋಟ್ಯಂತರ ಅಭಿಮಾನಿಗಳು ಹಾಗೂ ಕುಟುಂಬದ ಬಹು ದೊಡ್ಡ ಕನಸಾಗಿದ್ದ ವಿಷ್ಣು ಸ್ಮಾರಕ ನಾಳೆ ಲೋಕಾರ್ಪಣೆಯಾಗುತ್ತಿದೆ. ಈ ಬಗ್ಗೆ ವಿಷ್ಣು ಅಭಿಮಾನಿಗಳ ಪರವಾಗಿ ಡಾ.ವಿಷ್ಣು ಸೇನಾ ಸಮಿತಿ ರಾಜ್ಯಾಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ಪತ್ರಿಕಾಗೋಷ್ಠಿ ನಡೆಸಿ ಸರ್ಕಾರದ ನಡೆ ಬಗ್ಗೆ ಬೇಸರ ವ್ಯಕ್ತಪಡಿಸಿದ್ದರು. ಜೊತೆಗೆ ಒಂದಿಷ್ಟು ಬೇಡಿಕೆಯನ್ನೂ ಅವರು ಸರ್ಕಾರದ ಮುಂದಿಟ್ಟಿದ್ದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನಟ ವಿಷ್ಣುವರ್ಧನ್ ಅವರಿಗೆ ‘ಕರ್ನಾಟಕ ರತ್ನ’ ಘೋಷಿಸಿ : ಸೇನಾನಿ ವೀರಕಪುತ್ರ ಶ್ರೀನಿವಾಸ್ ಆಗ್ರಹ

    ನಟ ವಿಷ್ಣುವರ್ಧನ್ ಅವರಿಗೆ ‘ಕರ್ನಾಟಕ ರತ್ನ’ ಘೋಷಿಸಿ : ಸೇನಾನಿ ವೀರಕಪುತ್ರ ಶ್ರೀನಿವಾಸ್ ಆಗ್ರಹ

    ತತ ಹದಿಮೂರು ವರ್ಷಗಳ ನಂತರ ಡಾ.ವಿಷ್ಣುವರ್ಧನ್ (Vishnuvardhan) ಸ್ಮಾರಕ ಉದ್ಘಾಟನೆಯಾಗುತ್ತಿದೆ.  ಕೋಟ್ಯಂತರ ಅಭಿಮಾನಿಗಳು ಹಾಗೂ ಕುಟುಂಬದ ಬಹು ದೊಡ್ಡ ಕನಸಾಗಿದ್ದ ವಿಷ್ಣು ಸ್ಮಾರಕ ನಾಳೆ ಲೋಕಾರ್ಪಣೆಯಾಗುತ್ತಿದೆ. ಈ ಬಗ್ಗೆ ವಿಷ್ಣು ಅಭಿಮಾನಿಗಳ ಪರವಾಗಿ ಡಾ.ವಿಷ್ಣು ಸೇನಾ ಸಮಿತಿ ರಾಜ್ಯಾಧ್ಯಕ್ಷ ವೀರಕಪುತ್ರ ಶ್ರೀನಿವಾಸ್ (Veerakaputra Srinivas) ಪತ್ರಿಕಾಗೋಷ್ಠಿ ನಡೆಸಿ ಸರ್ಕಾರದ ನಡೆ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಜೊತೆಗೆ ಒಂದಿಷ್ಟು ಬೇಡಿಕೆಯನ್ನೂ ಅವರು  ಸರ್ಕಾರದ ಮುಂದಿಟ್ಟಿದ್ದಾರೆ.

    ಡಾ ವಿಷ್ಣುವರ್ಧನ್ ಸ್ಮಾರಕ 13 ವರ್ಷಗಳ ನಂತರ ಲೋಕಾರ್ಪಣೆ ಆಗುತ್ತಿದೆ. ಸ್ಮಾರಕಕ್ಕಾಗಿ ನಮ್ಮ ಹೋರಾಟ, ನೋವು, ಕಾಯುವಿಕೆ ಲೆಕ್ಕಕ್ಕೆ ಇಡದಷ್ಟು. ಕುಟುಂಬದವರು ಇದಕ್ಕಾಗಿ ಸಾಕಷ್ಟು ಹೋರಾಟ ನಡೆಸಿ ಅವರಿಂದಾಗಿಯೇ ಸ್ಮಾರಕ ಮೈಸೂರಿನಲ್ಲಿ ಆಗಿದೆ. ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ (Basavaraja Bommai) ಆಗಮಿಸುತ್ತಿದ್ದಾರೆ. ಚಿತ್ರರಂಗದವರನ್ನು ಕೂಡ ಕಾರ್ಯಕ್ರಮಕ್ಕೆ ಆಹ್ವಾನಿಸುವ ಕೆಲಸ ನಡೆಯುತ್ತಿದೆ. ನಟ ಸುದೀಪ್ ಅವರು ಫೆಬ್ರವರಿಯಲ್ಲಿ ಸ್ಮಾರಕಕ್ಕೆ ಭೇಟಿ ನೀಡುವುದಾಗಿ ತಿಳಿಸಿದ್ದಾರೆ. ಯಶ್ ಅವರಿಗೆ ಆಹ್ವಾನ ನೀಡಬೇಕಿದೆ ಎಂದು ವೀರಕಪುತ್ರ ಶ್ರೀನಿವಾಸ್ ತಿಳಿಸಿದ್ದಾರೆ. ಇದನ್ನೂ ಓದಿ: ವಿಷ್ಣುವರ್ಧನ್ ಪರಭಾಷಾ ನಟರಾ?: ಫಿಲ್ಮ್ ಚೇಂಬರ್ ವಿರುದ್ಧ ವೀರಕಪುತ್ರ ಶ್ರೀನಿವಾಸ್ ಆಕ್ರೋಶ

    ಚಿತ್ರರಂಗದ ಮೇರು ನಟ, ಪಂಚಭಾಷೆ ತಾರೆಯಾಗಿದ್ದ ವಿಷ್ಣು ಸ್ಮಾರಕ ಉದ್ಘಾಟನೆಗೆ ಅವರ ಗೆಳೆಯರಾದ ಅಕ್ಷಯ್ ಕುಮಾರ್, ಚಿರಂಜೀವಿ, ಮೋಹನ್ ಲಾಲ್, ರಜನಿಕಾಂತ್ ಸೇರಿದಂತೆ ಹಲವರನ್ನು ಸರ್ಕಾರ ಆಹ್ವಾನಿಸುತ್ತದೆ ಎಂದು ಅಂದುಕೊಂಡಿದ್ದೆವು. ಆದ್ರೆ ಆ ಕೆಲಸ ಆಗಿಲ್ಲ. ಅಭಿಮಾನಿಗಳಾಗಿ ನಮಗೆ ಇದು ಬೇಸರ ತರಿಸಿದೆ. ಬೇರೆ ನಟರ ಕಾರ್ಯಕ್ರಮಗಳಿಗೆ ನೀಡುವ ಮನ್ನಣೆಯನ್ನು ಸರ್ಕಾರ ವಿಷ್ಣು ಅವರ ಸ್ಮಾರಕ ಉದ್ಘಾಟನೆ ವಿಚಾರದಲ್ಲಿ ನೀಡುತ್ತಿಲ್ಲ.

    ಚಿತ್ರರಂಗದ ಹಿರಿಯ, ಕಿರಿಯ ಹಾಗೂ ಸ್ಟಾರ್ ನಟರುಗಳ್ಯಾರು ಕೂಡ ಸ್ಮಾರಕದ ಕುರಿತಾಗಿ ಮಾತನಾಡುತ್ತಿಲ್ಲ. ಸ್ಮಾರಕ ಉದ್ಘಾಟನೆ ವೇಳೆ ಸರ್ಕಾರ ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ (Karnataka Ratna) ಪ್ರಶಸ್ತಿ ಘೋಷಿಸಬೇಕು ಜೊತೆಗೆ ಅವರ ಪುಣ್ಯಭೂಮಿ ಅಭಿವೃದ್ದಿಗೆ ಅಭಿಮಾನಿಗಳಿಗೆ ಅವಕಾಶ ಮಾಡಿಕೊಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದ ಹೋರಾಟ ನಡೆಸೋದಾಗಿ ವೀರಕಪುತ್ರ ಶ್ರೀನಿವಾಸ್ ಇದೇ ವೇಳೆ ತಿಳಿಸಿದರು.

    ಸ್ಮಾರಕ ಉದ್ಘಾಟನೆಯಾಗುವ ದಿನ ಮೈಸೂರಿನಿಂದ ಸ್ಮಾರಕದವರೆಗೆ ರೈಲ್ವೆ ನಿಲ್ದಾಣ ಹಾಗೂ ಬಸ್ ನಿಲ್ದಾಣದಿಂದ ವಿಶೇಷ ಬಸ್ ವ್ಯವಸ್ಥೆ ಮಾಡಿಸಬೇಕು. ಬೆಂಗಳೂರಿನಿಂದ ಸ್ಮಾರಕದವರೆಗೆ 700 ವಾಹನಗಳ ಬೃಹತ್ ಜಾಥಾ ಹಮ್ಮಿಕೊಂಡಿರುವುದರಿಂದ ಅಭಿಮಾನಿಗಳಿಗೆ ಅನುಕೂಲವಾಗುವಂತೆ ಅಗತ್ಯವಿದ್ದ ಕಡೆ ಟ್ರಾಫಿಕ್ ಕ್ಲಿಯರೆನ್ಸ್ ಗೆ ಆದೇಶಿಸಬೇಕು ಎಂದು ಹಲವು ಬೇಡಿಕೆಯನ್ನು ವಿಷ್ಣು ಅಭಿಮಾನಿಗಳ ಪರವಾಗಿ ವೀರಕಪುತ್ರ ಶ್ರೀನಿವಾಸ್ ಸರ್ಕಾರದ ಮುಂದಿಟ್ಟಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಟಿಕೆಟ್ ದರ ಇಳಿಕೆ – `ಗಂಧದಗುಡಿ’ ಚಿತ್ರ ವೀಕ್ಷಿಸುವ ಪ್ರೇಕ್ಷಕರಿಗೆ ಬಂಪರ್ ಆಫರ್

    ಟಿಕೆಟ್ ದರ ಇಳಿಕೆ – `ಗಂಧದಗುಡಿ’ ಚಿತ್ರ ವೀಕ್ಷಿಸುವ ಪ್ರೇಕ್ಷಕರಿಗೆ ಬಂಪರ್ ಆಫರ್

    ರ್ನಾಟಕ ರತ್ನ (Karnataka Ratna Award) ಡಾ.ಪುನೀತ್ ರಾಜ್ ಕುಮಾರ್ (Puneeth Rajkumar) ಕನಸಿನ `ಗಂಧದಗುಡಿ’ ರಿಲೀಸ್ ಒಂದು ವಾರದಲ್ಲೇ ರಾಜ್ಯಾದ್ಯಂತ ಭರ್ಜರಿ ಪ್ರದರ್ಶನ ಕಾಣ್ತಿದೆ. ನೂರಾರು ಚಿತ್ರಮಂದಿರಗಳಲ್ಲಿ (Cinema Theatre,) ಬಿಡುಗಡೆ ಆಗಿದ್ದ, ಡಾಕ್ಯುಮೆಂಟರಿ ಸಿನಿಮಾಗೆ ಅಪ್ಪು ಅಭಿಮಾನಿಗಳಿಂದ ಭರ್ಜರಿ ರೆಸ್ಪಾನ್ಸ್ ಬರ್ತಿದೆ. ವೀಕೆಂಡ್ ರಜೆಗಳೂ ಚಿತ್ರಕ್ಕೆ ಸಾಥ್ ನೀಡಿದ್ದು ಅಭಿಮಾನಿಗಳು ಚಿತ್ರ ಮಂದಿರದತ್ತ ಬರುತ್ತಿದ್ದಾರೆ.

    ಈ ಸಿನಿಮಾಗೆ 2 ಕೋಟಿ ಖರ್ಚು ಮಾಡಲಾಗಿದೆ ಎಂದು ಹೇಳಲಾಗಿದೆ. ಆದರೆ ಸಿನಿ ಪಂಡಿತರ ಲೆಕ್ಕಾಚಾರದಲ್ಲಿ ಈಗಾಗಲೇ ಗಂಧದಗುಡಿ (Gandhadagudi) 25 ಕೋಟಿಗೂ ಅಧಿಕ ಕಲೆಕ್ಷನ್ ಬಾಚಿಕೊಂಡಿದೆ. ಇದೀಗ ರಾಜ್ಯಾದ್ಯಂತ ಪ್ರತಿಯೊಬ್ಬರೂ ಸಿನಿಮಾ (Cinema) ವೀಕ್ಷಣೆ ಮಾಡಲಿ ಹಾಗೂ ಪರಿಸರ ಜಾಗೃತಿ ಅಳವಡಿಸಿಕೊಳ್ಳಲಿ ಅನ್ನೋ ಕಾರಣಕ್ಕೆ ಟಿಕೆಟ್ ದರದಲ್ಲಿ ಭಾರೀ ರಿಯಾಯಿತಿ ನೀಡಲಾಗಿದೆ. ಇದನ್ನೂ ಓದಿ: ‘ಗಂಧದ ಗುಡಿ’ ರಿಲೀಸ್ ಆಗಿ ಒಂದು ವಾರ: ಬಾಕ್ಸ್ ಆಫೀಸ್ ಗಳಿಕೆ ಎಷ್ಟು?

    ಈ ಕುರಿತು ಪ್ರಕಟಣೆ ಹೊರಡಿಸಿರುವ ಅಶ್ವಿನಿ ಪುನೀತ್ ರಾಜ್‌ಕುಮಾರ್ (Ashwini Puneet Rajkumar), ಗಂಧದಗುಡಿ ಅಪ್ಪು ರವರ ಒಂದು ಕನಸು ಕರ್ನಾಟಕದ ವನ್ಯ ಸಂಪತ್ತು ಹಾಗೂ ಪ್ರಕೃತಿ ಸೌಂದರ್ಯವನ್ನು ಕನ್ನಡಿಗರಿಗೆ ಪರಿಚಯಿಸುವ ಅವರ ಹಂಬಲ ಈ ಸಿನಿಮಾ ರೂಪಗೊಳ್ಳಲು ಕಾರಣ. ಅಪ್ಪು ಅವರ ಉದ್ದೇಶ ಈ ಸಿನಿಮಾ ಎಲ್ಲ ಕನ್ನಡಿಗರು ನೋಡಬೇಕೆಂಬುದು, ಅದರಲ್ಲೂ ಮಕ್ಕಳು ನೋಡಬೇಕು ಎಂಬುದಾಗಿದೆ. ಈ ಸಲುವಾಗಿ ನಾನು ಹಾಗೂ ಚಿತ್ರ ತಂಡ ಎಲ್ಲರೊಡನೆ ಚರ್ಚಿಸಿ ವಿತರಕರ ಹಾಗೂ ಪ್ರದರ್ಶಕರ ಸಹಕಾರದೊಂದಿಗೆ ನಮ್ಮ ಚಿತ್ರ `ಗಂಧದಗುಡಿ’ಯನ್ನು ನವೆಂಬರ್ 7 ರಿಂದ 10ರ ವರೆಗೆ ಸಿಂಗಲ್ ಸ್ಕ್ರೀನ್ ಥೀಯೇಟರ್ ಗಳಲ್ಲಿ 756 ರೂ.ಗಳಿಗೆ ಹಾಗೂ ಮಲ್ಟಿಪ್ಲೆಕ್ಸ್‌ ಗಳಲ್ಲಿ (Mulitiplex) 112 ರೂ.ಗಳಿಗೆ ಕರ್ನಾಟಕ ರಾಜ್ಯಾದ್ಯಂತ ದಿನದ ಎಲ್ಲಾ ಆಟಗಳು ಪ್ರದರ್ಶನ ಮಾಡಬೇಕೆಂದು ನಿರ್ಧಾರ ಮಾಡಿದ್ದೇವೆ. ನಮ್ಮ ಮಕ್ಕಳ ನಾಳೆಗಳಿಗಾಗಿ ಕಾಡನ್ನು ಸಂರಕ್ಷಿಸೋಣ, ಗಂಧದಗುಡಿ ಯನ್ನು ತೋರಿಸೋಣ ಎಂದು ಕರೆ ಕೊಟ್ಟಿದ್ದಾರೆ. ಇದನ್ನೂ ಓದಿ: ಚಿಲ್ಲರೆ, ಮಾನಗೆಟ್ಟವನೇ ಎಂದು ರೂಪೇಶ್ ರಾಜಣ್ಣಗೆ ಸಂಬರ್ಗಿ ಕ್ಲಾಸ್

    ಗಂಧದಗುಡಿ ಸಿನಿಮಾವನ್ನು ಜಗತ್ತಿಗೆ ತೋರಿಸುವ ಹಂಬಲ ದಿ. ಪುನೀತ್ ಅವರಿಗಿತ್ತು. ಅವರ ಕನಸನ್ನು ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಈಡೇರಿಸುತ್ತಿದ್ದು, ಚಿತ್ರವನ್ನು ಎಲ್ಲರಿಗೂ ತೋರಿಸಲು ಹಲವು ಕಾರ್ಯಕ್ರಮಗಳನ್ನೂ ರೂಪಿಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ‘ಕರ್ನಾಟಕ ರತ್ನ’ ಪ್ರಶಸ್ತಿ ಕಾರ್ಯಕ್ರಮ ಅವ್ಯವಸ್ಥೆ ಬಗ್ಗೆ ಡಿ.ಕೆ.ಶಿವಕುಮಾರ್ ಆಕ್ರೋಶ

    ‘ಕರ್ನಾಟಕ ರತ್ನ’ ಪ್ರಶಸ್ತಿ ಕಾರ್ಯಕ್ರಮ ಅವ್ಯವಸ್ಥೆ ಬಗ್ಗೆ ಡಿ.ಕೆ.ಶಿವಕುಮಾರ್ ಆಕ್ರೋಶ

    ನಿನ್ನೆಯಷ್ಟೇ ನಡೆದ ಕರ್ನಾಟಕ ರತ್ನ (Karnataka Ratna) ಪ್ರಶಸ್ತಿ ಪ್ರದಾನ ಸಮಾರಂಭ ಅವ್ಯವಸ್ಥೆ ಕುರಿತು ಕಾಂಗ್ರೆಸ್ ಪಕ್ಷದ ಮುಖಂಡ ಡಿ.ಕೆ. ಶಿವಕುಮಾರ್ (DK Shivakumar) ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಸುಸಜ್ಜಿತ ವೇದಿಕೆಯಲ್ಲಿ ಆ ಕಾರ್ಯಕ್ರಮ ನಡೆಯಲಿಲ್ಲವಲ್ಲ ಎಂದು ಸರಕಾರಕ್ಕೆ ವ್ಯಂಗ್ಯವಾಡಿದ್ದಾರೆ. ‘ನಿನ್ನೆ ಯಾಕೆ ಸ್ಟೇಜ್ ಹಾಗಾಯ್ತು, ಸ್ಟೇಜ್ ಕಥೆ ಏನಾಯ್ತು ಎಂದು ಪ್ರಶ್ನೆ ಮಾಡಿರುವ  ಅವರು, ಸ್ಟೇಜ್ ಆರ್ಗನೈಸೆಷನ್ ಬಗ್ಗೆ ಕಿಡಿಕಾರಿದ್ದಾರೆ.

    ‘ವೆರಿ ಸಾರಿ ಫಾರ್ ಸ್ಟೇಜ್ ಆರ್ಗನೈಸೆಷನ್. ನಿನ್ನೆ ಆದ ಅವ್ಯವಸ್ಥೆ ಬಗ್ಗೆ ನೀವೇ ವಿಶ್ಲೇಷಣೆ ಮಾಡಿ, ಬಳಿಕ ನಾವು ಮಾತಾಡ್ತೇವೆ’ ಎಂದು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ್ದಾರೆ. ‘ಕರ್ನಾಟಕ ರತ್ನ ರಾಜಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿದ ಕಾಲದಲ್ಲಿ ನಾನೂ ಇದ್ದೆ. ಎಂತಹ ಕಾರ್ಯಕ್ರಮ ಅದ’ ಎಂದು ಡಾ.ರಾಜ್ ಕುಮಾರ್ ಅವರಿಗೆ ಅದ್ಧೂರಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಿದ್ದನ್ನು ಡಿ.ಕೆ. ಶಿವಕುಮಾರ್ ನೆನಪಿಸಿಕೊಂಡಿದ್ದಾರೆ. ಇದನ್ನೂ ಓದಿ:ಅನುಪಮಾ ಗೌಡ ವಿರುದ್ಧ ಸಿಡಿದೆದ್ದ ರೂಪೇಶ್‌ ರಾಜಣ್ಣ

    ಪುನೀತ್ ರಾಜ್ ಕುಮಾರ್ (Puneeth Rajkumar) ಅವರಿಗೆ ನಿನ್ನೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಕಾರ್ಯಕ್ರವನ್ನು ಕರ್ನಾಟಕ ಸರಕಾರ ಬೆಂಗಳೂರಿನ ವಿಧಾನ ಸೌಧದ ಮುಂದೆ ಆಯೋಜಿಸಲಾಗಿತ್ತು. ಮಳೆಯ ಕಾರಣದಿಂದಾಗಿ ತರಾತುರಿಯಲ್ಲೇ ಕಾರ್ಯಕ್ರಮವನ್ನು ಮುಗಿಸಲಾಯಿತು. ಈ ಭಾವನಾತ್ಮಕ ಕಾರ್ಯಕ್ರಮವನ್ನು ಕಣ್ತುಂಬಿಕೊಳ್ಳಲು ಅಪ್ಪು ಅಭಿಮಾನಿಗಳು ಆಗಮಿಸಿದ್ದರು. ಆದರೆ, ಅವರು ಮಳೆಯಲ್ಲಿ ನೆನೆಯುವಂತಾಯಿತು. ಪುನೀತ್ ಕುಟುಂಬಕ್ಕೆ ಮತ್ತು ಗಣ್ಯರು ಕುಳಿತುಕೊಳ್ಳುವ ಜಾಗದಲ್ಲೂ ಸರಿಯಾದ ವ್ಯವಸ್ಥೆ ಇರಲಿಲ್ಲ. ಹಾಗಾಗಿ ತರಾತುರಿಯಲ್ಲೇ ಕಾರ್ಯಕ್ರಮ ಮುಗಿಸಬೇಕಾಗಿ ಬಂತು.

    Live Tv
    [brid partner=56869869 player=32851 video=960834 autoplay=true]

  • ಅಪ್ಪು ಮೇಲಿನ ಜ್ಯೂನಿಯರ್ ಎನ್.ಟಿ.ಆರ್ ಅಭಿಮಾನಕ್ಕೆ ಪುನೀತ್ ಫ್ಯಾನ್ಸ್ ಮೆಚ್ಚುಗೆ

    ಅಪ್ಪು ಮೇಲಿನ ಜ್ಯೂನಿಯರ್ ಎನ್.ಟಿ.ಆರ್ ಅಭಿಮಾನಕ್ಕೆ ಪುನೀತ್ ಫ್ಯಾನ್ಸ್ ಮೆಚ್ಚುಗೆ

    ಪುನೀತ್ ರಾಜ್ ಕುಮಾರ್ (Puneeth Rajkumar) ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಅಪ್ಪು ಗೆಳೆಯ ಜ್ಯೂನಿಯರ್ ಎನ್.ಟಿ.ಆರ್ ಅತಿಥಿಯಾಗಿ ಆಗಮಿಸಿದ್ದರು. ಈ ಸಂದರ್ಭದಲ್ಲಿ ಅಪ್ಪು (Appu) ಬಗ್ಗೆ ಜ್ಯೂನಿಯರ್ (Jr. NTR) ಮನದಾಳದ ಮಾತುಗಳನ್ನು ಆಡಿದರು. ನಾನೊಬ್ಬ ಸ್ಟಾರ್ ಆಗಿ ಇಲ್ಲಿಗೆ ಬಂದಿಲ್ಲ, ಕೇವಲ ಅಪ್ಪು ಸ್ನೇಹಿತನಾಗಿ ಇಲ್ಲಿದ್ದೇನೆ ಎಂದು ತಿಳಿಸಿದರು. ಅಲ್ಲದೇ, ಬಹುತೇಕ ಕನ್ನಡದಲ್ಲೇ ಅಪ್ಪು ಬಗ್ಗೆ ಮಾತನಾಡಿದರು. ಈ ನಡೆ ಅಪ್ಪು ಅಭಿಮಾನಿಗಳಲ್ಲಿ ಸಂಭ್ರಮ ಹೆಚ್ಚಿಸಿದೆ, ಅಪ್ಪು ಫ್ಯಾನ್ಸ್ ಜ್ಯೂನಿಯರ್ ಮಾತಿಗೆ ಫಿದಾ ಆಗಿದ್ದಾರೆ.

    ವ್ಯಕ್ತಿತ್ವ ಎನ್ನುವುದು ವ್ಯಕ್ತಿಯ ಸಂಪಾದನೆ. ವ್ಯಕ್ತಿತ್ವದಿಂದ, ನಗುವಿನಿಂದ, ಅಹಂಕಾರವಿಲ್ಲದೇ ಯಾರಾದರೂ ಈ ರಾಜ್ಯದ ಸಕಲ ಹೃದಯವನ್ನು ಗೆದ್ದಿದ್ದಾರೆ ಅಂದರೆ, ಅದು ಪುನೀತ್ ರಾಜ್ ಕುಮಾರ್ ಎಂದು ಅಪ್ಪುನನ್ನು ಗುಣಗಾನ ಮಾಡಿದರು ಗೆಳೆಯ, ತೆಲುಗಿನ ಖ್ಯಾತ ನಟ ಜ್ಯೂನಿಯರ್ ಎನ್.ಟಿ.ಆರ್. ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳನ್ನು ಹೇಳುತ್ತಾ, ಅವರು ಕನ್ನಡದಲ್ಲೇ ಮಾತು ಶುರು ಮಾಡಿದರು.  ಇದನ್ನೂ ಓದಿ:ಅಪ್ಪುಗೆ ‘ಕರ್ನಾಟಕ ರತ್ನ’ ಪ್ರದಾನ: ಅತಿಥಿಯಾಗಿ ಬೆಂಗಳೂರಿಗೆ ಬಂದ ಜ್ಯೂನಿಯರ್ ಎನ್.ಟಿ.ಆರ್

    ನಿನ್ನೆ ಬೆಂಗಳೂರಿನಲ್ಲಿ ನಡೆದ ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ (Karnataka Ratna) ಪ್ರದಾನ ಸಮಾರಂಭದ ಅತಿಥಿಯಾಗಿ ಭಾಗಿಯಾಗಿದ್ದ ಜ್ಯೂನಿಯರ್ ಎನ್.ಟಿ.ಆರ್ ‘ಪುನೀತ್ ಒಬ್ಬ ಸೂಪರ್ ಸ್ಟಾರ್, ಗ್ರೇಟ್ ಸ್ಟಾರ್, ಅದ್ಭುತ ಪತಿ, ಹೃದಯ ಶ್ರೀಮಂತ. ಅವರ ನಗುವಿನಲ್ಲಿದ್ದ ಶ್ರೀಮಂತಿಕೆ ನಾವು ಎಲ್ಲಿ ಹುಡುಕೋನ? ಅವರು ನಗುವಿನ ಒಡೆಯರಾಗಿದ್ದರು’ ಎಂದು ಗೆಳೆಯನ ಕುರಿತು ಮಾತನಾಡಿದರು.

    ಪುನೀತ್ ರಾಜ್ ಕುಮಾರ್ ಅವರಿಗೆ ಸಿಕ್ಕಿರುವುದು ಕರ್ನಾಟಕ ರತ್ನ, ಆದರೆ, ಯಾರೂ ತಪ್ಪಾಗಿ ಭಾವಿಸಬಾರದು. ನನ್ನ ಪ್ರಕಾರ ಕರ್ನಾಟಕ ರತ್ನದ ಅರ್ಥನೇ ಪುನೀತ್ ರಾಜ್ ಕುಮಾರ್. ನಾನು ಇಲ್ಲಿಗೆ ಬಂದಿದ್ದು, ಹೆಮ್ಮೆಯ ಗೆಳೆಯನಾಗಿ. ಅವನಿಗಾಗಿ ನಾನು ಇಲ್ಲಿ ನಿಂತಿದ್ದೇನೆ. ಈ ಗೆಳೆತನ ಯಾವಾಗಲೂ ನನ್ನ ಹೃದಯದಲ್ಲಿ ಇರುತ್ತದೆ ಎಂದು ಮಾತು ಮುಗಿಸಿದರು ಜ್ಯೂನಿಯರ್ ಎನ್.ಟಿ.ಆರ್.

    ಕರ್ನಾಟಕ ರತ್ನ ಪ್ರಶಸ್ತಿ ಪ್ರಾರಂಭವಾದಾಗ ಮೊದಲ ಪ್ರಶಸ್ತಿಯನ್ನು ರಾಷ್ಟ್ರಕವಿ ಕುವೆಂಪು ಮತ್ತು ಡಾ.ರಾಜ್ ಕುಮಾರ್ ಅವರಿಗೆ ದೊರೆತಿತ್ತು. ಮೂವತ್ತು ವರ್ಷಗಳ ನಂತರ ಮತ್ತೆ ಸಿನಿಮಾ ರಂಗಕ್ಕೆ ಅದರಲ್ಲೂ ಡಾ.ರಾಜ್ ಕುಟುಂಬಕ್ಕೆ ಈ ಗೌರವ ದೊರೆತಿದೆ. ಹಾಗಾಗಿಯೇ ಡಾ.ರಾಜ್ ಕುಟುಂಬದ ಅನೇಕ ಸದಸ್ಯರು ಈ ಸಮಾರಂಭದಲ್ಲಿ ಹಾಜರಿದ್ದರು. ಡಾ.ರಾಜ್ ಕುಮಾರ್ ಅವರ ಅಷ್ಟೂ ಮಕ್ಕಳು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದು ವಿಶೇಷ.

    Live Tv
    [brid partner=56869869 player=32851 video=960834 autoplay=true]

  • ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ಅಪ್ಪುಗೆ ಅರ್ಪಿಸಿದ ಪುನೀತ್ ಪತ್ನಿ ಅಶ್ವಿನಿ

    ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ಅಪ್ಪುಗೆ ಅರ್ಪಿಸಿದ ಪುನೀತ್ ಪತ್ನಿ ಅಶ್ವಿನಿ

    ನಿನ್ನೆಯಷ್ಟೇ ಪುನೀತ್ ರಾಜ್ ಕುಮಾರ್ (Puneeth Rajkumar) ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ಮರಣೋತ್ತರವಾಗಿ ನೀಡಲಾಯಿತು. ಪುನೀತ್ ಪತ್ನಿ ಅಶ್ವಿನಿ ಅವರು ಈ ಪ್ರಶಸ್ತಿಯನ್ನು ಸ್ವೀಕರಿಸಿ, ಸರಕಾರಕ್ಕೆ ಧನ್ಯವಾಗಳನ್ನು ತಿಳಿಸಿದರು. ಮಳೆಯ ನಡುವೆಯೂ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಪ್ರಶಸ್ತಿ ಪ್ರದಾನ ಮಾಡಿದರೆ, ತಮಿಳು ನಟ ರಜನಿಕಾಂತ್, ತೆಲುಗು ನಟ ಜ್ಯೂನಿಯರ್ ಎನ್.ಟಿ.ಆರ್, ನಟ ಶಿವರಾಜ್ ಕುಮಾರ್, ಸುಧಾಮೂರ್ತಿ ಸೇರಿದಂತೆ ಹಲವು ಗಣ್ಯರು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು.

    ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ನಂತರ ಮನೆಗೆ ಆಗಮಿಸಿದ ಪುನೀತ್ ಪತ್ನಿ ಅಶ್ವಿನಿ (Ashwini Rajkumar) ಹಾಗೂ ಪುತ್ರಿ ಪ್ರಶಸ್ತಿಯ ಮೆಡಲ್ ಅನ್ನು ಪುನೀತ್ ಅವರ ಫೋಟೋಗೆ ಅರ್ಪಿಸಿದರು. ಈ ಮೂಲಕ ಕರ್ನಾಟಕ ರತ್ನ ಪ್ರಶಸ್ತಿಯನ್ನು ಅಪ್ಪುಗೆ ತಲುಪಿಸಿದ್ದು ಭಾವುಕ ಕ್ಷಣಕ್ಕೆ ಸಾಕ್ಷಿ ಆಯಿತು. ಪುನೀತ್ ಅವರ ಫೋಟೋ ಮೇಲೆಯೆ ಅವರ ತಂದೆ ಮತ್ತು ತಾಯಿಯ ಫೋಟೋ ಕೂಡ ಇದ್ದ ಕಾರಣಕ್ಕಾಗಿ ಇಬ್ಬರು ಕರ್ನಾಟಕ ರತ್ನಗಳಿಗೆ ಒಂದು ರೀತಿಯಲ್ಲಿ ಗೌರವ ಸೂಚಿಸುವ ಕ್ಷಣವೂ ಅದಾಗಿತ್ತು. ಸಿನಿಮಾ ರಂಗ ಮತ್ತು ಸಮಾಜ ಸೇವೆಯನ್ನು ಪರಿಗಣಿಸಿ ಪುನೀತ್ ಅವರಿಗೆ ಈ ಪ್ರಶಸ್ತಿಯನ್ನು ನೀಡಿದ್ದು, ಸಿನಿಮಾ ರಂಗದಿಂದ ಇಂಥದ್ದೊಂದು ಗೌರವಕ್ಕೆ ಪಾತ್ರರಾದ ಎರಡನೇ ಗಣ್ಯವ್ಯಕ್ತಿ ಇವರಾಗಿದ್ದಾರೆ. ಇದನ್ನೂ ಓದಿ:ಅಪ್ಪುಗೆ ‘ಕರ್ನಾಟಕ ರತ್ನ’ ಪ್ರದಾನ: ಅತಿಥಿಯಾಗಿ ಬೆಂಗಳೂರಿಗೆ ಬಂದ ಜ್ಯೂನಿಯರ್ ಎನ್.ಟಿ.ಆರ್

    ಕರ್ನಾಟಕ ರತ್ನ ಪ್ರಶಸ್ತಿ ಪ್ರಾರಂಭವಾದಾಗ ಮೊದಲ ಪ್ರಶಸ್ತಿಯನ್ನು ರಾಷ್ಟ್ರಕವಿ ಕುವೆಂಪು ಮತ್ತು ಡಾ.ರಾಜ್ ಕುಮಾರ್ ಅವರಿಗೆ ದೊರೆತಿತ್ತು. ಮೂವತ್ತು ವರ್ಷಗಳ ನಂತರ ಮತ್ತೆ ಸಿನಿಮಾ ರಂಗಕ್ಕೆ ಅದರಲ್ಲೂ ಡಾ.ರಾಜ್ ಕುಟುಂಬಕ್ಕೆ ಈ ಗೌರವ ದೊರೆತಿದೆ. ಹಾಗಾಗಿಯೇ ಡಾ.ರಾಜ್ ಕುಟುಂಬದ ಅನೇಕ ಸದಸ್ಯರು ಈ ಸಮಾರಂಭದಲ್ಲಿ ಹಾಜರಿದ್ದರು. ಡಾ.ರಾಜ್ ಕುಮಾರ್ ಅವರ ಅಷ್ಟೂ ಮಕ್ಕಳು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದು ವಿಶೇಷ.

    ಈ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಪುನೀತ್ ಅವರ ನೆಚ್ಚಿನ ನಟರಾಗಿದ್ದ ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ (Rajinikanth) , ಹಾಗೂ ಗೆಳೆಯ ಮತ್ತು ತೆಲುಗಿನ ಖ್ಯಾತ ನಟ ಜ್ಯೂನಿಯರ್ ಎನ್.ಟಿ.ಆರ್ (Jr.NTR), ಸುಧಾಮೂರ್ತಿ ಅವರು ಅತಿಥಿಗಳಾಗಿ ಆಗಮಿಸಿದ್ದರು. ಸಚಿವರಾದ ವಿ.ಸುನೀಲ್ ಕುಮಾರ್, ಆರ್.ಅಶೋಕ್, ಮುನಿರತ್ನ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಪ್ರಶಸ್ತಿ ಪ್ರದಾನಕ್ಕೂ ಮುನ್ನ ಕನ್ನಡದ ಖ್ಯಾತ ಗಾಯಕ ವಿಜಯ ಪ್ರಕಾಶ್ ಮತ್ತು ತಂಡದಿಂದ ಕನ್ನಡದ ಗೀತೆಗಳು ಮತ್ತು ಪುನೀತ್ ರಾಜ್ ಕುಮಾರ್ ನಟನೆಯ ಹಾಡುಗಳನ್ನು ಹೇಳಲಾಯಿತು. ಪುನೀತ್ ಹಾಡಿದ ಹಾಡುಗಳಿಗೂ ಕಲಾವಿದರು ದನಿಯಾಗಿದ್ದು ವಿಶೇಷವಾಗಿತ್ತು.

    Live Tv
    [brid partner=56869869 player=32851 video=960834 autoplay=true]