Tag: Karnataka Reservoir

  • ಜಲಾಶಯ ನಿರ್ವಹಣೆಗೆ ಕೇಂದ್ರ ಸಮಿತಿ ಸಲಹೆ ಧಿಕ್ಕರಿಸಿದೆ ರಾಜ್ಯ ಸರ್ಕಾರ: ಜೋಶಿ ಆರೋಪ

    ಜಲಾಶಯ ನಿರ್ವಹಣೆಗೆ ಕೇಂದ್ರ ಸಮಿತಿ ಸಲಹೆ ಧಿಕ್ಕರಿಸಿದೆ ರಾಜ್ಯ ಸರ್ಕಾರ: ಜೋಶಿ ಆರೋಪ

    – ರಾಜ್ಯದ ಜಲಾಶಯಗಳ ವ್ಯವಸ್ಥಿತ ನಿರ್ವಹಣೆಯನ್ನು ಗಂಭೀರವಾಗಿ ಪರಿಗಣಿಸಲು ಸಲಹೆ

    ಹುಬ್ಬಳ್ಳಿ: ಜಲಾಶಯಗಳ (Reservoir)  ಸಮರ್ಪಕ ನಿರ್ವಹಣೆಗೆ ಕೇಂದ್ರ ಸಮಿತಿ ನೀಡಿದ ಸಲಹೆಗಳನ್ನು ರಾಜ್ಯ ಸರ್ಕಾರ ಧಿಕ್ಕರಿಸಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ (Pralhad Joshi) ಆರೋಪಿಸಿದ್ದಾರೆ.

    ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ (Crest Gate) ಬಿರುಕು ಬಿಟ್ಟು ಆತಂಕ ಸೃಷ್ಟಿಸಿರುವ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವರು, ಜಲಾಶಯಗಳ ನಿರ್ವಹಣೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಟ್ರೈನಿ ವೈದ್ಯೆ ಹತ್ಯೆ ಪ್ರಕರಣ: ಆರೋಪಿಯ ಹೊಡೆತಕ್ಕೆ ಕನ್ನಡಕ ಒಡೆದು ಬಿದ್ದ ಗಾಜಿನಿಂದ ಕಣ್ಣಲ್ಲಿ ರಕ್ತ!

    ಬೇಸಿಗೆಯಲ್ಲಿ ಜಲಾಶಯ ಖಾಲಿ ಇದ್ದಾಗಲೆ ನಿರ್ವಹಣೆ ಕಾರ್ಯ ಕೈಗೊಳ್ಳಬೇಕಿತ್ತು. ಆದರೆ, ರಾಜ್ಯ ಸರ್ಕಾರ ಉದಾಸೀನ ತೋರಿದೆ. ಈಗದರ ಪರಿಣಾಮ ಎದುರಿಸುವಂತಾಗಿದೆ. ಕಳೆದ ಆರು ತಿಂಗಳ ಕಾಲ ಜಲಾಶಯ ಖಾಲಿ ಆಗಿತ್ತು. ರಾಜ್ಯ ಸರ್ಕಾರ ಆಗಲೇ ಸಮರ್ಪಕ ನಿರ್ವಹಣೆ ಕೈಗೊಳ್ಳಬೇಕಿತ್ತು. ಆದ್ರೆ ಅದನ್ನ ಮಾಡಲಿಲ್ಲ, ಕೇಂದ್ರ ಸರ್ಕಾರದ ಸಲಹೆಗಳನ್ನೂ ಪಾಲಿಸದೇ ಧಿಕ್ಕರಿಸಿತು. ಸರ್ಕಾರ ಮತ್ತು ನಿರ್ವಹಣೆ ಹೊಣೆ ಹೊತ್ತವರ ತೀವ್ರ ನಿರ್ಲಕ್ಷ ತೋರಿದ್ದರಿಂದಲೇ ಈ ಅವಘಡ ಸಂಭವಿಸಿದೆ ಎಂದು ಜೋಶಿ ಆರೋಪಿಸಿದ್ದಾರೆ.

    ರಸ್ತೆ ರಿಪೇರಿಗೂ ಹಣವಿಲ್ಲ:
    ರಾಜ್ಯ ಸರ್ಕಾರದ ಬಳಿ ರಸ್ತೆ ರಿಪೇರಿಗೂ ಹಣವಿಲ್ಲ. ಇನ್ನು ಸಮಾನಾಂತರ ಜಲಾಶಯ ಹೇಗೆ ನಿರ್ಮಾಣ ಮಾಡುತ್ತಾರೆ? ಎಂದು ಸಚಿವ ಜೋಶಿ ಪ್ರಶ್ನಿಸಿದ್ದಾರೆ.

    ಬೇಕಾಬಿಟ್ಟಿ ಆಡಳಿತ, ಭ್ರಷ್ಟಾಚಾರದ ಫಲವಾಗಿ ರಾಜ್ಯ ಸರ್ಕಾರ ದಿವಾಳಿಯಾಗಿದೆ. ಹಾಗಾಗಿ ಜಲಾಶಯಗಳ ವ್ಯವಸ್ಥಿತ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದೆ ಎಂದು ಆರೋಪಿಸಿದ್ದಾರೆ.

    10 ಸಾವಿರ ಕೋಟಿ ಎಲ್ಲಿ?
    ಹಿಂದೆ ಸಿದ್ದರಾಮಯ್ಯ (Siddaramaiah) ಅವರೇ ಮುಖ್ಯಮಂತ್ರಿ ಆಗಿದ್ದಾಗ ಜಲಾಶಯಗಳ ನಿರ್ವಹಣೆಗೆ ಪ್ರತಿ ವರ್ಷ 10,000 ಕೋಟಿ ವೆಚ್ಚ ಮಾಡುವುದಾಗಿ ಹೇಳಿದ್ದರು. ಆದರೆ, ಪ್ರತಿ ವರ್ಷವಲ್ಲ ಆಡಳಿತದ 5 ವರ್ಷವೂ ಹತ್ತು ಸಾವಿರ ಕೋಟಿ ಖರ್ಚು ಮಾಡಲಿಲ್ಲ ಎಂದು ಹೇಳಿದ್ದಾರೆ.

    ರಾಜ್ಯ ಸರ್ಕಾರ ಇನ್ನಾದರೂ ತುಂಗಭದ್ರಾ ಡ್ಯಾಂ ಸೇರಿದಂತೆ ರಾಜ್ಯದ ಎಲ್ಲಾ ಜಲಾಶಯಗಳ ನಿರ್ವಹಣೆಗೆ ಗಮನ ಹರಿಸಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: Tumkur | ವಯಸ್ಸಾಗ್ತಿದೆ ಅಂತ ಆತುರಪಟ್ರೆ ಮಕ್ಮೇಲ್‌ ಟೋಪಿ – 3 ವರ್ಷದಲ್ಲಿ 5 ಮದ್ವೆಯಾಗಿದ್ದ ಐನಾತಿ ಮಹಿಳೆ ಅರೆಸ್ಟ್

    ರೈತರಿಗೆ ಅನುಕೂಲ ಕಲ್ಪಿಸಲಿ:
    ರಾಜ್ಯ ಸರ್ಕಾರ ಕೂಡಲೇ ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಸರಿಪಡಿಸಲು ಮುಂದಾಗಬೇಕು. ಈ ಮೂಲಕ ರೈತರಿಗೆ ಬೆಳೆ ಬೆಳೆಯಲು ಅನುಕೂಲ ಮಾಡಿಕೊಡಬೇಕು ಎಂದು ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ.‌

  • ರಾಜ್ಯದ ಜಲಾಶಯಗಳಲ್ಲಿ 536 ಟಿಎಂಸಿ ನೀರು ಸಂಗ್ರಹ – ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆ

    ರಾಜ್ಯದ ಜಲಾಶಯಗಳಲ್ಲಿ 536 ಟಿಎಂಸಿ ನೀರು ಸಂಗ್ರಹ – ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆ

    ಬೆಂಗಳೂರು: ರಾಜ್ಯದ ಎಲ್ಲ ಜಲಾಶಯಗಳಿಂದ (Reservoir) ಒಟ್ಟು 536 ಟಿಎಂಸಿ ನೀರು ಸಂಗ್ರಹವಾಗಿದೆ. ಯಾವ ನದಿ ಅಪಾಯಕಾರಿಯಾಗಿದೆ? ಎಲ್ಲೆಲ್ಲಿ ಅನಾಹುತಗಳು ಆಗಬಹುದು ಎಂಬುದರ ಬಗ್ಗೆ ಗಮನ ಇಟ್ಟಿದ್ದೇವೆ ಅಂತ ಕಂದಾಯ ಇಲಾಖೆ ಸಚಿವ ಕೃಷ್ಣಬೈರೇಗೌಡ (Krishna Byregowda) ಹೇಳಿದ್ದಾರೆ.

    ವಿಧಾನಸಭೆಯಲ್ಲಿ ನಡೆದ ಅತಿವೃಷ್ಟಿ ಹಾನಿ ಚರ್ಚೆಗೆ ಸಂಬಂಧಪಟ್ಟಂತೆ ಉತ್ತರ ಕೊಟ್ಟ ಕೃಷ್ಣಬೈರೇಗೌಡ, ಕೆಆರ್‌ಎಸ್‌ಗೆ (KRS) 44.617 ಕ್ಯುಸೆಕ್‌ ನೀರು ಹರಿದು ಬರುತ್ತಿದೆ, ಆಲಮಟ್ಟಿ ಜಲಾಶಯಕ್ಕೆ 40.478 ಕ್ಯುಸೆಕ್‌ ನೀರಿನ ಒಳಹರಿಯುವು ಇದೆ. ಹಾಗಾಗಿ ಎಲ್ಲ ಕಡೆ ಅಗತ್ಯ ಕ್ರಮ ತೆಗೆದುಕೊಳ್ಳಲಾಗ್ತಿದೆ ಅಂತ ಹೇಳಿದ್ದಾರೆ. ಇದನ್ನೂ ಓದಿ: ಬೆಂಗಳೂರು-ಮಂಗಳೂರು ನಡುವೆ ಹೆಚ್ಚುವರಿ ರೈಲು ಆರಂಭ – ಸಂಸದ ಬ್ರಿಜೇಶ್‌ ಚೌಟ ಮನವಿಗೆ ತಕ್ಷಣವೇ ಸ್ಪಂದಿಸಿದ ರೈಲ್ವೆ ಇಲಾಖೆ

    2,225 ಗ್ರಾಮಗಳನ್ನ ಮಳೆಹಾನಿ ಪ್ರದೇಶಗಳೆಂದು ಗುರುತಿಸಿದ್ದೇವೆ. 2.38 ಲಕ್ಷ ಜನ ತೊಂದರೆಗೆ ಸಿಕ್ಕಿಕೊಳ್ಳಬಹುದೆಂದು ಗುರುತಿಸಿದ್ದೇವೆ. ಮಳೆಹಾನಿ ಪೀಡಿತ ಆಗುವ ಎಲ್ಲ ಗ್ರಾಮ ಪಂಚಾಯಿತಿಗಳಿಗೆ ಟಾಸ್ಕ್‌ಫೋರ್ಸ್‌ ರಚನೆ ಮಾಡಿದ್ದು, ಮುಂಜಾಗ್ರತಾ ಕ್ರಮ ತೆಗೆದುಕೊಂಡಿದ್ದೇವೆ ಅಂತ ಸ್ಪಷ್ಟಪಡಿಸಿದರು. ಇದನ್ನೂ ಓದಿ: PublicTV Explainer: ಬಜೆಟ್‌ ಎಂದರೇನು? ಆಯವ್ಯಯದ ಬಗ್ಗೆ ನಿಮಗೆಷ್ಟು ಗೊತ್ತು?

    ಸರ್ಕಾರ ಜನರ ಜೊತೆ ಇದೆ, ಎಲ್ಲ ಸಮಸ್ಯೆಗಳನ್ನೂ ಪರಿಹಾರ ಮಾಡುತ್ತೇವೆ. ಸೋಮವಾರ ಸಂಪುಟ ಸಭೆ ಇದೆ, ಸಭೆಯಲ್ಲೂ ಮಳೆಹಾನಿ ಚರ್ಚೆ ಮಾಡಿ ಪರಿಹಾರ ಕೊಡುತ್ತೇವೆ. ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆ ಆಗುತ್ತೆ ಎಂಬ ಮುನ್ಸೂಚನೆ ಜನವರಿಯಲ್ಲೇ ಇತ್ತು. ಜೂನ್ 1 ರಿಂದ ಇಲ್ಲಿ ತನಕ ವಾಡಿಕೆ ಮಳೆ 365 ಮಿಲಿಮೀಟರ್ ಇರಬೇಕಿತ್ತು, ಆದ್ರೆ 447 ಮಿಲಿ ಮೀಟರ್ ಮಳೆ ಆಗಿದೆ. ಕರಾವಳಿ, ಮಲೆನಾಡಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಆಗಿದೆ ಅಂತ ಮಾಹಿತಿ ನೀಡಿದರು. ಇದನ್ನೂ ಓದಿ: ಬಿಜೆಪಿ ಅವಧಿಯಲ್ಲಿ 21 ಹಗರಣ ನಡೆದಿದೆ – ಹಗರಣಗಳ ಪಟ್ಟಿ ಬಿಡುಗಡೆ ಮಾಡಿದ ಸಿಎಂ

    29 ಆರೈಕೆ ಕೇಂದ್ರಗಳನ್ನ ಸ್ಥಾಪಿಸಲಾಗಿದೆ, 2,331 ಸಂತ್ರಸ್ಥರಿಗೆ ಊಟ, ವಸತಿ, ಉಪಹಾರ ಕೊಡುತ್ತಿದ್ದೇವೆ. ಎಲ್ಲ ಜಿಲ್ಲಾಧಿಕಾರಿಗಳ ಖಾತೆಗೆ 777 ಕೋಟಿ ರೂ. ಹಣ ಬಿಡುಗಡೆ ಮಾಡಿದ್ದೇವೆ. ಹಣ ಖರ್ಚಾದ ಕೂಡಲೇ ಮತ್ತೆ ಹಣ ಬಿಡುಗಡೆ ಮಾಡುತ್ತೇವೆ, ಹಣದ ಕೊರತೆ ಇಲ್ಲ. ಕೇಂದ್ರ ಸರ್ಕಾರದ ನಿಯಮಾವಳಿ ಪ್ರಕಾರ ಪರಿಹಾರ ಕೊಡಲು ಸೂಚಿಸಿದ್ದೇವೆ. 5 ಎನ್‌ಡಿಆರ್‌ಎಫ್ ತುಕಡಿಗಳನ್ನ ಮಳೆಹಾನಿ ಜಿಲ್ಲೆಗಳಿಗೆ ನಿಯೋಜಿಸಲಾಗಿದೆ ಎಂದು ವಿವರಿಸಿದರು. ಇದನ್ನೂ ಓದಿ: ಗುಡ್‌ನ್ಯೂಸ್‌ ಕೊಟ್ಟ ʻಕಾಟೇರʼ ನಿದೇರ್ಶಕ; ತರುಣ್‌ ಸುಧೀರ್‌ – ಸೋನಲ್‌ ಮದುವೆ ಡೇಟ್‌ ಫಿಕ್ಸ್‌