Tag: Karnataka State Budget 2025

  • ಬಜೆಟ್‌ನಲ್ಲಿ ವಿಜಯಪುರಕ್ಕೆ ಬಂಪರ್ – ಬಹುನಿರೀಕ್ಷಿತ ವಿಮಾನ ನಿಲ್ದಾಣ ಈ ವರ್ಷದಿಂದ ಕಾರ್ಯಾರಂಭ

    ಬಜೆಟ್‌ನಲ್ಲಿ ವಿಜಯಪುರಕ್ಕೆ ಬಂಪರ್ – ಬಹುನಿರೀಕ್ಷಿತ ವಿಮಾನ ನಿಲ್ದಾಣ ಈ ವರ್ಷದಿಂದ ಕಾರ್ಯಾರಂಭ

    ವಿಜಯಪುರ: 2025-26ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ವಿಜಯಪುರಕ್ಕೆ (Vijayapura) ಬಂಪರ್ ಗಿಫ್ಟ್ ನೀಡಲಾಗಿದ್ದು, ಜಿಲ್ಲೆಯ ಬಹುನಿರೀಕ್ಷಿತ ವಿಮಾನ ನಿಲ್ದಾಣ ಈ ವರ್ಷದಿಂದ ಕಾರ್ಯಾರಂಭಿಸಲಿದೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಪಿಕಪ್ ಪಲ್ಟಿ – 18 ಮಂದಿಗೆ ಗಾಯ

    ದಾಖಲೆಯ 16ನೇ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯನವರು, ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನಲ್ಲಿ ಕೃಷಿ ಸಂಶೋಧನಾ ಕೇಂದ್ರ ಸ್ಥಾಪನೆ ಮಾಡಲಾಗುವುದು. ಜಿಲ್ಲೆಯ ಜೀವನದಿ ಕೃಷ್ಣಾ ಮೇಲ್ದಂಡೆ ಯೋಜನೆ ಹಂತದ 3 ಅಡಿ ಮುಳುಗಡೆಯಾಗುವ ಜಮೀನುಗಳನ್ನು ಒಪ್ಪಂದ ತೀರ್ಪಿನ ಮುಖಾಂತರ ಒಂದೇ ಹಂತದಲ್ಲಿ ಭೂಸ್ವಾಧೀನಪಡಿಸಿ, ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

    ಜಿಲ್ಲೆಯ ಬಹುನಿರೀಕ್ಷಿತ ವಿಮಾನ ನಿಲ್ದಾಣ ಈ ವರ್ಷದಿಂದ ಕಾರ್ಯಾರಂಭಿಸಲಿದೆ. ಜೊತೆಗೆ ವಿಜಯಪುರದ ತಿಡಗುಂದಿಯಲ್ಲಿ ಪ್ಲಗ್ ಮತ್ತು ಪ್ಲೇ ಸೌಲಭ್ಯವಿರುವ ಪ್ಲಾö್ಯಟ್‌ನಲ್ಲಿ ಕಾರ್ಖಾನೆ ಸ್ಥಾಪನೆಗೆ ಅಸ್ತು ಎನ್ನಲಾಗಿದೆ.ಇದನ್ನೂ ಓದಿ: ನಾನು ನಿಮ್ಮ ಹಾಗೆ ಆಗಬೇಕು ಎಂದ ವಿದ್ಯಾರ್ಥಿನಿಯನ್ನು ತಮ್ಮ ಕುರ್ಚಿಯಲ್ಲಿ ಕೂರಿಸಿದ ಉ.ಕನ್ನಡ ಜಿಲ್ಲಾಧಿಕಾರಿ

  • ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಬಜೆಟ್‌ನಲ್ಲಿ ಒತ್ತು ನೀಡಲಾಗಿದೆ – ಈಶ್ವರ ಖಂಡ್ರೆ

    ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಬಜೆಟ್‌ನಲ್ಲಿ ಒತ್ತು ನೀಡಲಾಗಿದೆ – ಈಶ್ವರ ಖಂಡ್ರೆ

    -ನುಡಿದಂತೆ ನಡೆಯುವ ನಮ್ಮ ಸರ್ಕಾರದ ಬದ್ಧತೆ ಸಾಬೀತುಪಡಿಸಿದ ಬಜೆಟ್

    ಬೀದರ್: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ಈ ಸಾಲಿನ ಬಜೆಟ್‌ನಲ್ಲಿ 5 ಸಾವಿರ ಕೋಟಿ ರೂ. ಯೋಜನೆ ರೂಪಿಸಲು ಅವಕಾಶ ನೀಡಲಾಗಿದ್ದು, ಇದು ನುಡಿದಂತೆ ನಡೆಯುವ ನಮ್ಮ ಸರ್ಕಾರದ ಬದ್ಧತೆಯನ್ನು ಸಾಬೀತು ಪಡೆಸುತ್ತದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ (Eshwar Khandre) ಶ್ಲಾಘಿಸಿದ್ದಾರೆ.ಇದನ್ನೂ ಓದಿ: ಚಿಕ್ಕಬಳ್ಳಾಪುರ ಜಿಲ್ಲೆಗೆ ಬಜೆಟ್‌ನಲ್ಲಿ ಸಿಕ್ಕಿದ್ದೇನು? ಮಿಸ್ ಆಗಿದ್ದು ಏನು..?

    ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ 5,367 ಶಿಕ್ಷಕರ ಹುದ್ದೆಗಳ ಭರ್ತಿಯೂ ಶಿಕ್ಷಕರ ಕೊರತೆಯನ್ನು ನಿವಾರಿಸಲಿದೆ. ತೊಗರಿ ಬೆಳೆಗೆ 450 ರೂ. ಪ್ರೋತ್ಸಾಹ ಧನ ಹೆಚ್ಚಿಸಿದ್ದು, ನಮ್ಮ ಭಾಗದ ರೈತರ ಪಾಲಿಗೆ ಆಶಾಕಿರಣವಾಗಿದೆ ಎಂದರು.

    ಕಲ್ಯಾಣ ಕರ್ನಾಟಕವು ಸಂಪೂರ್ಣ ಆರೋಗ್ಯ ಅಭಿವೃದ್ಧಿ ಯೋಜನೆಯಡಿ, ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲು ಹಾಗೂ ಕಲ್ಯಾಣ ಕರ್ನಾಟಕ ಭಾಗದ ಆರೋಗ್ಯ ಸೂಚ್ಯಂಕ ವೃದ್ಧಿಸುವ ಉದ್ದೇಶವನ್ನು ಹೊಂದಿದೆ. ಒಟ್ಟು 873 ಕೋಟಿ ರೂ. ವೆಚ್ಚದಲ್ಲಿ ಆರೋಗ್ಯ ವ್ಯವಸ್ಥೆ ಬಲಪಡಿಸುವ ಮತ್ತು ಬೀದರ್ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಕ್ಯಾನ್ಸರ್ ಪತ್ತೆ ವಿಭಾಗ ಆರಂಭಿಸುತ್ತಿರುವ ನಿರ್ಧಾರ ಸ್ವಾಗತಾರ್ಹ ಎಂದು ತಿಳಿಸಿದರು.ಇದನ್ನೂ ಓದಿ: ಫ್ಯಾನ್ಸ್ ಜೊತೆ ಬರ್ತ್‌ಡೇ ಆಚರಿಸಿದ ರಾಧಿಕಾ ಪಂಡಿತ್

     

  • ಜನಪರವಾದ ಅತ್ಯುತ್ತಮ ದಾಖಲೆಯ ಬಜೆಟ್ – ಕೆ.ಹೆಚ್ ಮುನಿಯಪ್ಪ

    ಜನಪರವಾದ ಅತ್ಯುತ್ತಮ ದಾಖಲೆಯ ಬಜೆಟ್ – ಕೆ.ಹೆಚ್ ಮುನಿಯಪ್ಪ

    ಬೆಂಗಳೂರು: ಈ ಬಾರಿಯ ಬಜೆಟ್ ಜನಪರವಾಗಿದ್ದು, ಸಿಎಂ ತಮ್ಮ ದಾಖಲೆಯ ಬಜೆಟ್‌ನ್ನು ಬಡವರು ಹಾಗೂ ಶ್ರಮಿಕರ ಪರವಾಗಿ ಮಂಡಿಸಿದ್ದಾರೆ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ (KH Muniyappa) ಬಣ್ಣಿಸಿದ್ದಾರೆ.

    ಸಿಎಂ ಸಿದ್ದರಾಮಯ್ಯನವರು (CM Siddaramaiah) ಇಂದು ದಾಖಲೆಯ 16ನೇ ಬಜೆಟ್ ಮಂಡಿಸಿದ್ದು, ಇದು ಜನಪರವಾದ ಬಜೆಟ್ ಆಗಿದೆ. ಈ ಬಾರಿಯ ಬಜೆಟ್ ಬಡವರ ಹಾಗೂ ಶ್ರಮಿಕರ ಪರವಾಗಿದ್ದು, ಸರ್ವತೋಮುಖ ಅಭಿವೃದ್ಧಿಗಾಗಿ ನೀಡಲಾಗಿದೆ. ಬಸವಣ್ಣನವರ ತತ್ವ ಆದರ್ಶಗಳೊಂದಿಗೆ, ಮಹಾತ್ಮ ಗಾಂಧಿಜೀಯವರು ಕಂಡಂತಹ ಕನಸನ್ನು ನಮ್ಮ ಸರ್ಕಾರ ಈಡೇರಿಸುತ್ತಿದೆ. ಸಿಎಂ ಐತಿಹಾಸಿಕ ದಾಖಲೆಯ ಬಜೆಟ್ ಮಂಡಿಸಿದ್ದು, ಅವರಿಗೆ ಭಗವಂತ ಉತ್ತಮ ಆರೋಗ್ಯ ಭಾಗ್ಯವನ್ನು ಕರುಣಿಸಲಿ ಎಂದರು.ಇದನ್ನೂ ಓದಿ: ಈ ವರ್ಷ ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಅನುದಾನ

    ರಾಜ್ಯದ ಬಡವರ ಹಸಿವು ನೀಗಿಸುವ ಉದ್ದೇಶದಿಂದ ಆರಂಭಿಸಲಾದ ಅನ್ನಭಾಗ್ಯ ಯೋಜನೆಯಡಿ ಇದುವರೆಗೂ ಹೆಚ್ಚುವರಿ 5 ಕೆ.ಜಿ ಆಹಾರ ಧಾನ್ಯಕ್ಕೆ ಪರ್ಯಾಯವಾಗಿ ಸಹಾಯಧನ ನೀಡಲಾಗುತ್ತಿತ್ತು. ಇದೀಗ ಸಹಾಯಧನದ ಬದಲಾಗಿ 5 ಕೆ.ಜಿ ಅಕ್ಕಿಯನ್ನು ವಿತರಿಸಲಾಗುವುದು. ಇದರಿಂದ 4.21 ಕೋಟಿ ಫಲಾನುಭವಿಗೆ ಹೆಚ್ಚುವರಿ ಅಕ್ಕಿ ಲಭ್ಯವಾಗಲಿದೆ ಎಂದು ಹೇಳಿದರು.

    ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಇನ್ನಷ್ಟು ಸುಧಾರಿಸಲು ತಂತ್ರಜ್ಞಾನವನ್ನು ಗರಿಷ್ಠ ಬಳಕೆ ಮಾಡಲಾಗುವುದು. ಇದಕ್ಕಾಗಿ ಒಟ್ಟಾರೆ 5 ಕೋಟಿ ರೂ. ವೆಚ್ಚದಲ್ಲಿ ಸಗಟು ಗೋಧಾಮುಗಳಿಗೆ ಸಿಸಿಟಿವಿ ಅಳವಡಿಕೆ, ಜಿಪಿಎಸ್ ಆಧಾರಿತ ವಾಹನ ಟ್ರ್ಯಾಕಿಂಗ್ ವ್ಯವಸ್ಥೆ ಮತ್ತು ಕಮಾಂಡ್ ಕಂಟ್ರೋಲ್ ಸೆಂಟರ್ ಸ್ಥಾಪಿಸಲಾಗುವುದು.

    80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಮಾತ್ರ ಇರುವ ಮನೆಗಳಿಗೆ ಆಹಾರ ಧಾನ್ಯಗಳನ್ನು ತಲುಪಿಸಲು ಹಿಂದಿನ ವರ್ಷ ಅನ್ನ-ಸುವಿಧಾ ಯೋಜನೆ ಜಾರಿಗೊಳಿಸಲಾಗಿದೆ. ಈ ಯೋಜನೆಯಡಿ 2 ಲಕ್ಷ ಫಲಾನುಭವಿಗಳನ್ನು ಗುರುತಿಸಲಾಗಿದ್ದು, 75 ವಯಸ್ಸಿನ ಮೇಲ್ಪಟ್ಟ ಹಿರಿಯ ನಾಗರಿಕರು ಮಾತ್ರ ಇರುವ ಮನೆಗಳಿಗೂ ಈ ಸೇವೆ ವಿಸ್ತರುಸಲಾಗುವುದು. ಇದರಿಂದ 3.30 ಲಕ್ಷ ಫಲಾನುಭವಿಗಳಿಗೆ ಅನುಕೂಲವಾಗಲಿದೆ.

    ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಸಮರ್ಪಕವಾಗಿ ನಿಗಾವಹಿಸಲು ಸಾಧ್ಯವಾಗುವಂತೆ ನ್ಯಾಯಬೆಲೆ ಅಂಗಡಿಗಳಲ್ಲಿ ಎಲೆಕ್ಟ್ರಾನಿಕ್ ತೂಕದ ಯಂತ್ರ ಮತ್ತು ಪಾಯಿಂಟ್ ಆಫ್ ಸೇಲ್ ಸಿಸ್ಟಮ್‌ಗಳನ್ನು ಸಾರ್ವಜನಿಕ ವಿತರಣಾ ಪದ್ಧತಿಯನ್ನು ಐಟಿ ವ್ಯವಸ್ಥಯೊಂದಿಗೆ ಸಂಯೋಜಿಸಲಾಗುವುದು.

    ಅನ್ನಭಾಗ್ಯ ಯೋಜನೆಯ ಸಗಟು ಲಾಭಾಂಶ ಪ್ರತಿ ಕ್ವಿಂಟಾಲ್ 35 ರೂ.ಗಳಿಂದ 45 ರೂ.ಗಳಿಗೆ ಹೆಚ್ಚಳ ಮಾಡಲಾಗಿದೆ.ಇದನ್ನೂ ಓದಿ: Women’s Day | ಈ ಬಾರಿಯ ಥೀಮ್‌ – ಆಕ್ಸಲರೇಟ್‌ ಆಕ್ಷನ್‌ ಎಂದರೇನು?

  • ಕೋಲಾರ ಜಿಲ್ಲೆಗೆ ಮೆಡಿಕಲ್ ಕಾಲೇಜು – `ಕೈ’ ಮುಖಂಡರ ಸಂಭ್ರಮಾಚರಣೆ

    ಕೋಲಾರ ಜಿಲ್ಲೆಗೆ ಮೆಡಿಕಲ್ ಕಾಲೇಜು – `ಕೈ’ ಮುಖಂಡರ ಸಂಭ್ರಮಾಚರಣೆ

    ಕೋಲಾರ: ದಾಖಲೆಯ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಜಿಲ್ಲೆಗೆ ಬಂಪರ್ ಕೊಡುಗೆಗಳನ್ನು ನೀಡಿದ್ದಾರೆ ಎಂದು ಕೋಲಾರದಲ್ಲಿ (Kolar) ಕಾಂಗ್ರೆಸ್ (Congress) ಮುಖಂಡರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

    ನಗರದ ಹೊಸ ಬಸ್ ನಿಲ್ದಾಣ ವೃತ್ತದಲ್ಲಿ ನೂರಾರು ಕಾಂಗ್ರೆಸ್ ಮುಖಂಡರು ಸಂಭ್ರಮಾಚರಣೆ ಮಾಡಿದರು. ಬಜೆಟ್‌ನಲ್ಲಿ ಕೋಲಾರಕ್ಕೆ ಮೆಡಿಕಲ್ ಕಾಲೇಜು, ಕೆಜಿಎಫ್‌ನಲ್ಲಿ ಹೈಟೆಕ್ ಕೃಷಿ ಮಾರುಕಟ್ಟೆ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ಅಲ್ಲದೇ ರಸ್ತೆ ಅಭಿವೃದ್ದಿಗೆ 300 ಕೋಟಿ ರೂ., ಎತ್ತಿನಹೊಳೆ ಯೋಜನೆಗೆ 556 ಕೋಟಿ ರೂ. ನೀಡಿರುವ ಸಿಎಂಗೆ ಅಭಿನಂದನೆ ಸಲ್ಲಿಸಿದರು. ಇದನ್ನೂ ಓದಿ: ‘ಭಗವಂತ ಕೇಸರಿ’ ನಿರ್ದೇಶಕನ ಸಿನಿಮಾಗೆ ಮೆಗಾಸ್ಟಾರ್ ಚಿರಂಜೀವಿ ಗ್ರೀನ್ ಸಿಗ್ನಲ್

    ಕೋಲಾರಕ್ಕೆ ಯಾವುದೇ ಅನುದಾನ ನೀಡಿಲ್ಲ, ಯಾವುದೇ ಅಭಿವೃದ್ಧಿ ಮಾಡಿಲ್ಲ ಎನ್ನುವ ವಿರೋಧಿಗಳೇ ಇತ್ತ ನೋಡಿ ಎಂದು ವಿರೋಧ ಪಕ್ಷಗಳಿಗೆ ಕಾಂಗ್ರೆಸ್ ನಾಯಕರು ಸಂಭ್ರಮಾಚರಣೆ ಮಾಡುವ ಮೂಲಕ ಟಾಂಗ್ ನೀಡಿದರು. ಸಿದ್ದರಾಮಯ್ಯ ಅವರಿಗೆ ಜಯವಾಗಲಿ ಎಂದು ಘೋಷಣೆ ಕೂಗಿ, ಬಜೆಟ್‌ನಲ್ಲಿ ಹೆಚ್ಚು ಯೋಜನೆಗಳನ್ನ ತಂದುಕೊಟ್ಟ ಜಿಲ್ಲೆಯ ಸಚಿವರಿಗೆ, ಶಾಸಕರಿಗೆ ಕೃತಜ್ಞತೆ ಸಲ್ಲಿಸಿದರು. ಇದನ್ನೂ ಓದಿ: ಏಪ್ರಿಲ್‌ನಲ್ಲಿ ಪ್ರಧಾನಿ ಮೋದಿ ಶ್ರೀಲಂಕಾ ಭೇಟಿ ಸಾಧ್ಯತೆ

  • ಪುತ್ತೂರಿಗೆ ಮೆಡಿಕಲ್ ಕಾಲೇಜು: ಬಜೆಟ್‌ನಲ್ಲಿ ವೈದ್ಯಕೀಯ, ಶಿಕ್ಷಣ ಕ್ಷೇತ್ರಕ್ಕೆ ಸಿಕ್ಕ ಕೊಡುಗೆಗಳೇನು?

    ಪುತ್ತೂರಿಗೆ ಮೆಡಿಕಲ್ ಕಾಲೇಜು: ಬಜೆಟ್‌ನಲ್ಲಿ ವೈದ್ಯಕೀಯ, ಶಿಕ್ಷಣ ಕ್ಷೇತ್ರಕ್ಕೆ ಸಿಕ್ಕ ಕೊಡುಗೆಗಳೇನು?

    ಬೆಂಗಳೂರು: ದಾಖಲೆಯ ಬಜೆಟ್ ಮಂಡಿಸಿದ 16 ನೇ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಶಿಕ್ಷಣ ಹಾಗೂ ವೈದ್ಯಕೀಯ ಕ್ಷೇತ್ರಕ್ಕೆ ಅನೇಕ ಕೊಡುಗೆಯನ್ನು ನೀಡಿದ್ದಾರೆ. ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪನೆ ಹಾಗೂ 100 ಹಾಸಿಗೆ ಸಾಮರ್ಥ್ಯದ ತಾಲ್ಲೂಕು ಆಸ್ಪತ್ರೆಯನ್ನು ಉನ್ನತೀಕರಿಸಲು ಕ್ರಮವಹಿಸಲಾಗುವುದು. ಚಿತ್ರದುರ್ಗದ ಮೊಳಕಾಲ್ಮೂರಿನಲ್ಲಿ 200 ಹಾಗೂ ಕೊಡಗಿಗೆ 400 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಗಳನ್ನು ಸ್ಥಾಪನೆ ಬಗ್ಗೆ ಘೋಷಿಸಿದ್ದಾರೆ.

    ವೈದ್ಯಕ್ಷೀಯ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಏನೆಲ್ಲಾ ಸಿಕ್ಕಿವೆ?
    ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಈಗಿರುವ 100 ಹಾಸಿಗೆ ಸಾಮರ್ಥ್ಯದ ತಾಲ್ಲೂಕು ಆಸ್ಪತ್ರೆಯನ್ನು ಉನ್ನತೀಕರಿಸಲು ಪ್ರಸಕ್ತ ವರ್ಷದಲ್ಲಿ ಕ್ರಮವಹಿಸಲಾಗುವುದು. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರಿನಲ್ಲಿ 200 ಹಾಸಿಗೆ ಹಾಗೂ ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ 400 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಗಳನ್ನು ಸ್ಥಾಪಿಸಲಾಗುವುದು. ಮೈಸೂರು ಜಿಲ್ಲೆಯ ತಗಡೂರು ಸಮುದಾಯ ಆರೋಗ್ಯ ಕೇಂದ್ರವನ್ನು 100 ಹಾಸಿಗೆ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲಾಗುತ್ತದೆ. ಇದನ್ನೂ ಓದಿ: ಚಿತ್ರರಂಗ ಕೇಳಿದ್ದೆಲ್ಲಾ ಸಿಎಂ ಕೊಡುತ್ತಲೇ ಬಂದಿದ್ದಾರೆ: ನರಸಿಂಹಲು

    ಹೆಚ್ಚಿನ ದುರಸ್ತಿ ಅಗತ್ಯವಿರುವ ಜಿಲ್ಲಾ ಆಸ್ಪತ್ರೆ ಮತ್ತು ತಾಲ್ಲೂಕು ಆಸ್ಪತ್ರೆಗಳನ್ನು 183 ಕೋಟಿ ರೂ. ವೆಚ್ಚದಲ್ಲಿ ಹಂತ ಹಂತವಾಗಿ ದುರಸ್ತಿಗೊಳಿಸಲಾಗುವುದು. ಕಲ್ಯಾಣ ಕರ್ನಾಟಕ ಸಂಪೂರ್ಣ ಆರೋಗ್ಯ ಅಭಿವೃದ್ಧಿ ಯೋಜನೆಯಡಿ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಒದಗಿಸಲು ಹಾಗೂ ಕಲ್ಯಾಣ ಕರ್ನಾಟಕ ಭಾಗದ ಆರೋಗ್ಯ ಸೂಚ್ಯಂಕವನ್ನು ವೃದ್ಧಿಸಲು ಒಟ್ಟು 873 ಕೋಟಿ ರೂ. ವೆಚ್ಚದಲ್ಲಿ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಲು ವಿವಿಧ ಕಾರ್ಯಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗುವುದು. ಇದನ್ನೂ ಓದಿ: ಹಾಲಿನ ದರ 5 ರೂ. ಹೆಚ್ಚಳಕ್ಕೆ ಚಿಂತನೆ: ಭೀಮಾನಾಯ್ಕ್

    ಶಿಕ್ಷಣ ಕ್ಷೇತ್ರ:
    ಪೂರ್ವ ಪ್ರಾಥಮಿಕದಿಂದ ಪದವಿ ಪೂರ್ವ ಹಂತದವರೆಗೂ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ನೀಡಲು ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಪ್ರಾರಂಭಿಸಲಾಗಿರುವ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ವಿಸ್ತರಿಸಲು ಉದ್ದೇಶಿಸಿದೆ. ಏಷಿಯನ್ ಡೆವಲಪ್‌ಮೆಂಟ್ ಬ್ಯಾಂಕ್ ನೆರವಿನೊಂದಿಗೆ 2,500 ಕೋಟಿ ರೂ. ವೆಚ್ಚದಲ್ಲಿ 500 ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲಾಗುವುದು. ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಿಸುವ ನಿಟ್ಟಿನಲ್ಲಿ ಪ್ರಸ್ತುತ 53 ಲಕ್ಷ ಮಕ್ಕಳಿಗೆ ವಾರದಲ್ಲಿ ಎರಡು ದಿನ ವಿತರಿಸಲಾಗುತ್ತಿರುವ ಮೊಟ್ಟೆ, ಬಾಳೆಹಣ್ಣನ್ನು ಅಜೀಮ್ ಪ್ರೇಮ್‌ಜಿ ಫೌಂಡೇಶನ್ ಸಹಯೋಗದೊಂದಿಗೆ 1,500 ಕೋಟಿ ರೂ. ವೆಚ್ಚದಲ್ಲಿ ವಾರದಲ್ಲಿ ಆರು ದಿನಕ್ಕೆ ವಿಸ್ತರಿಸಲಾಗಿದೆ. ಇದನ್ನೂ ಓದಿ: ಮೈಸೂರಲ್ಲಿ ವಿಶ್ವದರ್ಜೆಯ ಫಿಲ್ಮ್ ಸಿಟಿ ನಿರ್ಮಾಣಕ್ಕೆ 500 ಕೋಟಿ ಮೀಸಲು – ತವರು ಜಿಲ್ಲೆಗೆ ಸಿಎಂ ಭರ್ಜರಿ ಗಿಫ್ಟ್

    ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರು ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಗೌರವಧನವನ್ನು ತಲಾ 2,000 ರೂ. ಹೆಚ್ಚಿಸಲಾಗುವುದು. ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ತಯಾರಿಸುವ ಸಿಬ್ಬಂದಿಗೆ ನೀಡುತ್ತಿರುವ ಮಾಸಿಕ ಗೌರವಧನವನ್ನು ತಲಾ 1,000 ರೂ. ಹೆಚ್ಚಿಸಲಾಗುವುದು. ಇದನ್ನೂ ಓದಿ: ಸರ್ಕಾರಿ ಗುತ್ತಿಗೆ, ಖರೀದಿಯಲ್ಲಿ ಮುಸ್ಲಿಮರಿಗೆ ಮೀಸಲಾತಿ – ಇದು ಹಣಕಾಸು ತಜ್ಞರ ಒಡೆದಾಳುವ ಆರ್ಥಿಕತೆ: ಸುನಿಲ್‌ ಕುಮಾರ್‌ ಕಿಡಿ

    ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಇಂಜಿನಿಯರಿಂಗ್ ಕಾಲೇಜುಗಳು ಮತ್ತು ಪಾಲಿಟೆಕ್ನಿಕ್‌ಗಳಲ್ಲಿ ಖಾಲಿಯಿರುವ 2,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮವಹಿಸಲಾಗುವುದು. ರಾಜ್ಯದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಸಂಸ್ಥೆಗಳು ಹಾಗೂ ಪದವಿ ಕಾಲೇಜುಗಳಿಗೆ ಒಟ್ಟಾರೆ 275 ಕೋಟಿ ರೂ. ವೆಚ್ಚದಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲಾಗುವುದು. ಇದನ್ನೂ ಓದಿ: ಪತ್ರಕರ್ತರಿಗೆ ‘ಮಾಧ್ಯಮ ಸಂಜೀವಿನಿ’ ಯೋಜನೆ – 5 ಲಕ್ಷ ರೂ. ನಗದು ರಹಿತ ಚಿಕಿತ್ಸೆ

    ಹೊಸದಾಗಿ ಪ್ರಾರಂಭಿಸಲಾದ ಪಾಲಿಟೆಕ್ನಿಕ್ ಹಾಗೂ ಇಂಜಿನಿಯರಿಂಗ್ ಕಾಲೇಜುಗಳಿಗೆ 10 ಕೋಟಿ ರೂ. ವೆಚ್ಚದಲ್ಲಿ ಪೀಠೋಪಕರಣಗಳು, ಉಪಕರಣಗಳು, ಕಂಪ್ಯೂಟರ್‌ಗಳು ಹಾಗೂ ಪುಸ್ತಕಗಳನ್ನು ಒದಗಿಸಲಾಗುವುದು. ಕೆಕೆಆರ್‌ಡಿಬಿ ವತಿಯಿಂದ 23,000 ವಿದ್ಯಾರ್ಥಿಗಳಿಗೆ ವಿಶೇಷ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳನ್ನು 10 ಕೋಟಿ ರೂ. ವೆಚ್ಚದಲ್ಲಿ ಹಮ್ಮಿಕೊಳ್ಳಲಾಗುವುದು. ಪ್ರೊ. ನಂಜುಂಡ ಸ್ವಾಮಿ ಸಂಶೋಧನಾ ಪೀಠವನ್ನು ಮೈಸೂರು ವಿಶ್ವವಿದ್ಯಾಲಯದಲ್ಲಿ ಪ್ರಾರಂಭಿಸಲಾಗುವುದು ಎಂದು ಬಜೆಟ್‌ನಲ್ಲಿ ಘೋಷಿಸಿದ್ದಾರೆ.

  • ಚಿತ್ರರಂಗ ಕೇಳಿದ್ದೆಲ್ಲಾ ಸಿಎಂ ಕೊಡುತ್ತಲೇ ಬಂದಿದ್ದಾರೆ: ನರಸಿಂಹಲು

    ಚಿತ್ರರಂಗ ಕೇಳಿದ್ದೆಲ್ಲಾ ಸಿಎಂ ಕೊಡುತ್ತಲೇ ಬಂದಿದ್ದಾರೆ: ನರಸಿಂಹಲು

    ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಗಳಿಗೆ ನನ್ನ ಧನ್ಯವಾದಗಳು. ಚಿತ್ರರಂಗದ ಮೇಲೆ ಅವರಿಗೆ ಪ್ರೀತಿಯಿದೆ. ಅವರು ಕೇಳಿದ್ದೆಲ್ಲಾ ಕೊಡುತ್ತಲೇ ಬಂದಿದ್ದಾರೆ ಎಂದು ಫಿಲ್ಮ್ ಚೇಂಬರ್ ಅಧ್ಯಕ್ಷ ನರಸಿಂಹಲು (Narasimhalu) ಕೃತಜ್ಞತೆ ಸಲ್ಲಿಸಿದರು.

    ಚಿತ್ರಮಂದಿರ ಹಾಗೂ ಮಲ್ಟಿಪ್ಲೆಕ್ಸ್‌ಗಳಲ್ಲಿ ಏಕರೂಪ ಟಿಕೆಟ್ ದರ ನಿಗದಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, 2 ಬಾರಿ ಸಿಎಂ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದೆವು. ಬಜೆಟ್‌ನಲ್ಲಿ ಅನೌನ್ಸ್ ಮಾಡಿದ್ದಾರೆ. ತುಂಬಾ ಸಂತೋಷವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಹಾಲಿನ ದರ 5 ರೂ. ಹೆಚ್ಚಳಕ್ಕೆ ಚಿಂತನೆ: ಭೀಮಾನಾಯ್ಕ್

    1000 ರಿಂದ 1500 ರೂ. ಟಿಕೆಟ್ ದರ ಇದ್ದಾಗ ಸಾಮಾನ್ಯ ಜನ ಹೋಗಲು ಸಾಧ್ಯವಾಗುತ್ತಿರಲಿಲ್ಲ. ಸಿಂಗಲ್ ಸ್ಕ್ರೀನ್‌ ಹಾಗೂ ಮಲ್ಟಿಪ್ಲೆಕ್ಸ್‌ಗಳಲ್ಲಿ ಒಂದೇ ರೇಟ್ ಆದರೆ ಎಲ್ಲರಿಗೂ ನ್ಯಾಯ ಒದಗಿಸಿದಂತಾಗುತ್ತದೆ. ಏಕರೂಪ ಟಿಕೆಟ್ ದರ ನೆರೆ ರಾಜ್ಯಗಳಲ್ಲಿ ಈ ಮೊದಲೇ ಇತ್ತು. ನಮ್ಮ ರಾಜ್ಯದಲ್ಲಿ ಈಗ ಜಾರಿಗೆ ಬರುತ್ತಿದೆ. ಮೈಸೂರಿನಲ್ಲಿ ಫಿಲ್ಮ್ ಸಿಟಿ ಅನೌನ್ಸ್ ಮಾಡಿದ್ದಾರೆ. ಇಡೀ ಚಿತ್ರರಂಗ ಸಿಎಂಗೆ ಅಭಿನಂದನೆ ಸಲ್ಲಿಸುತ್ತದೆ ಎಂದರು. ಇದನ್ನೂ ಓದಿ: ಮೈಸೂರಲ್ಲಿ ವಿಶ್ವದರ್ಜೆಯ ಫಿಲ್ಮ್ ಸಿಟಿ ನಿರ್ಮಾಣಕ್ಕೆ 500 ಕೋಟಿ ಮೀಸಲು – ತವರು ಜಿಲ್ಲೆಗೆ ಸಿಎಂ ಭರ್ಜರಿ ಗಿಫ್ಟ್

    ರಾಜ್ಯದಲ್ಲಿರುವ ಎಲ್ಲಾ ಮಲ್ಟಿಪ್ಲೆಕ್ಸ್ ಹಾಗೂ ಚಿತ್ರಮಂದಿರಗಳಲ್ಲಿ ಪ್ರದರ್ಶಿಸಲಾಗುವ ಪ್ರತಿ ಪ್ರದರ್ಶನಕ್ಕೆ ಟಿಕೆಟ್ ದರ 200 ರೂ.ಗಳಿಗೆ ಸೀಮಿತಗೊಳಿಸಲಾಗುವುದು ಎಂದು ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

  • ಅಲ್ಪಸಂಖ್ಯಾತರಿಗೆ ಬಂಪರ್‌: ಸಾಮೂಹಿಕ ವಿವಾಹದಲ್ಲಿ ಮದ್ವೆಯಾದ ಜೋಡಿಗಳಿಗೆ 50 ಸಾವಿರ – ಬಜೆಟ್‌ ಘೋಷಣೆಗಳೇನು?

    ಅಲ್ಪಸಂಖ್ಯಾತರಿಗೆ ಬಂಪರ್‌: ಸಾಮೂಹಿಕ ವಿವಾಹದಲ್ಲಿ ಮದ್ವೆಯಾದ ಜೋಡಿಗಳಿಗೆ 50 ಸಾವಿರ – ಬಜೆಟ್‌ ಘೋಷಣೆಗಳೇನು?

    ಬೆಂಗಳೂರು: ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿವೇತನವನ್ನು 20 ಲಕ್ಷ ರೂ.ಗಳಿಂದ 30 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಘೋಷಿಸಿದ್ದಾರೆ.

    ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ, ಅಲ್ಪಸಂಖ್ಯಾತರ 169 ವಸತಿ ಶಾಲೆ/ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 25,000 ವಿದ್ಯಾರ್ಥಿನಿಯರಿಗೆ ಸ್ವಯಂ ರಕ್ಷಣಾ ಕೌಶಲ್ಯ, ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ವತಿಯಿಂದ ಯುವಕ/ಯುವತಿಯರಿಗೆ ನವೋದ್ಯಮಗಳನ್ನು ಪ್ರಾರಂಭಿಸಲು ಉತ್ತೇಜನ ನೀಡಲಾಗುವುದು. ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿವೇತನವನ್ನು 20 ಲಕ್ಷ ರೂ.ಗಳಿಂದ 30 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು. ಜೈನ ಅರ್ಚಕರು, ಸಿಖ್ ಮುಖ್ಯಗ್ರಂಥಿಗಳು, ಮಸೀದಿಗಳ ಪೇಷ್ ಇಮಾಮ್‌ಗಳಿಗೆ ನೀಡುತ್ತಿರುವ ಮಾಸಿಕ ಗೌರವಧನವನ್ನು 6,000ರೂ. ಗಳಿಗೆ ಹೆಚ್ಚಿಸಲಾಗುವುದು. ಸಿಖ್ ಸಹಾಯಕ ಗ್ರಂಥಿಗಳು ಹಾಗೂ ಮೋಝಿನ್‌ಗಳಿಗೆ ನೀಡುವ ಮಾಸಿಕ ಗೌರವಧನವನ್ನು 5,000 ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ತಿಳಿಸಿದರು.ಇದನ್ನೂ ಓದಿ: ಎಷ್ಟು ಜನರಿಗೆ ಯುವನಿಧಿ ಸಿಕ್ಕಿದೆ? ಬಜೆಟ್‌ನಲ್ಲಿ ಲೆಕ್ಕ ನೀಡಿದ ಸಿಎಂ

    • ಬಜೆಟ್ ಘೋಷಣೆಗಳೇನು?
    • ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ 250 ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಮಾದರಿ ಶಾಲೆಗಳಲ್ಲಿ ಹಂತ ಹಂತವಾಗಿ ಕರ್ನಾಟಕ ಪಬ್ಲಿಕ್ ಶಾಲೆಗಳ ಮಾದರಿಯಲ್ಲಿ ಪೂರ್ವ ಪ್ರಾಥಮಿಕ ಹಂತದಿಂದ ಪಿ.ಯು ವರೆಗೂ ತರಗತಿಗಳನ್ನು ಪ್ರಾರಂಭಿಸಲಾಗುವುದು. ಇದಕ್ಕಾಗಿ ಒಟ್ಟಾರೆ 500 ಕೋಟಿ ರೂ. ವೆಚ್ಚದಲ್ಲಿ ಯೋಜನೆ ರೂಪಿಸಲಾಗುವುದು. ಪ್ರಸಕ್ತ ವರ್ಷದಲ್ಲಿ 100 ಕೋಟಿ ರೂ. ಅನುದಾನವನ್ನು ಒದಗಿಸಲಾಗಿದೆ. ಶಾಲಾ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಸದರಿ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುವುದು.
    • ಶಿಕ್ಷಣ ಇಲಾಖೆಯಲ್ಲಿ ಅತೀ ಹೆಚ್ಚು ದಾಖಲಾತಿಯಿರುವ ಆಯ್ದ 100 ಉರ್ದು ಮಾಧ್ಯಮದ ಶಾಲೆಗಳಿಗೆ ಕರ್ನಾಟಕ ಪಬ್ಲಿಕ್ ಶಾಲೆ ಮಾದರಿಯಲ್ಲಿ ಮೂಲಸೌಕರ್ಯಗಳನ್ನು ಒದಗಿಸಿ ಕಲಿಕಾ ಗುಣಮಟ್ಟವನ್ನು ಹೆಚ್ಚಿಸಲು ಕ್ರಮವಹಿಸಿ ಮೌಲಾನಾ ಆಜಾದ್ ಪಬ್ಲಿಕ್ ಶಾಲೆಗಳನ್ನಾಗಿ ಉನ್ನತೀಕರಿಸಲಾಗುವುದು. ಒಟ್ಟಾರೆ 400 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನವಾಗಲಿರುವ ಈ ಯೋಜನೆಗೆ ಈ ವರ್ಷದಲ್ಲಿ 100 ಕೋಟಿ ರೂ. ಒದಗಿಸಲಾಗಿದೆ
    • 2023-24ನೇ ಸಾಲಿನಲ್ಲಿ ಪದವಿ ಪೂರ್ವ ತರಗತಿಗಳನ್ನು ಪ್ರಾರಂಭಿಸಲಾಗಿರುವ 62 ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ವಾಣಿಜ್ಯ ವಿಭಾಗವನ್ನು ಪ್ರಾರಂಭಿಸಲಾಗುವುದು.
    • ಮುಖ್ಯಮಂತ್ರಿಗಳ ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿ ಯೋಜನೆಯಡಿ 1,000 ಕೋಟಿ ರೂ. ಕ್ರಿಯಾ ಯೋಜನೆಯನ್ನು ತಯಾರಿಸಲಾಗಿದ್ದು, ಕಾಮಗಾರಿಗಳನ್ನು 2025-26ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುವುದು.
    • ಮದರಸಾಗಳಲ್ಲಿ ಧಾರ್ಮಿಕ ಶಿಕ್ಷಣದೊಂದಿಗೆ ಔಪಚಾರಿಕ ಶಿಕ್ಷಣವನ್ನು ನೀಡಲು ಕಂಪ್ಯೂಟರ್, ಸ್ಮಾರ್ಟ್ ಬೋರ್ಡ್ ಇತ್ಯಾದಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿ, ಈ ವಿದ್ಯಾರ್ಥಿಗಳು ಎನ್‌ಐಓಎಸ್ ಮೂಲಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಅವಕಾಶವಾಗುವಂತೆ ಸಜ್ಜುಗೊಳಿಸಲಾಗುವುದು.
    • ವಕ್ಪ್ ಸಂಸ್ಥೆಗಳ ದುರಸ್ತಿ, ಜೀರ್ಣೋದ್ಧಾರ ಮತ್ತು ಖಬರಸ್ತಾನಗಳಲ್ಲಿ ಮೂಲಸೌಕರ್ಯಕ್ಕಾಗಿ ಹಾಗೂ ಆಸ್ತಿಗಳ ಸಂರಕ್ಷಣೆಗಾಗಿ 150 ಕೋಟಿ ರೂ. ಒದಗಿಸಲಾಗಿದೆ.
    • ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮತ್ತು ವೃತ್ತಿ ಮಾರ್ಗದರ್ಶನಕ್ಕೆ ತರಬೇತಿ ನೀಡಲಾಗುವುದು.
    • ಪದವಿ ಶಿಕ್ಷಣದಿಂದ ವಂಚಿತರಾಗುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬೆಂಗಳೂರಿನ ಹಜ್ ಭವನದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರ ತೆರೆದು, ವಿವಿಧ ಪದವಿ/ಸ್ನಾತಕೋತ್ತರ ಪದವಿ ಶಿಕ್ಷಣ ನೀಡಲಾಗುವುದು.
    • ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಸ್ವಯಂಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಮೂಹ ವಿವಾಹಗಳ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ 50,000 ರೂ. ನೀಡಲಾಗುವುದು.
    • ಹಜ್ ಯಾತ್ರಿಕರು ಹಾಗೂ ಅವರ ಸಂಬಂಧಿಕರಿಗೆ ಅಗತ್ಯ ಸೌಲಭ್ಯ ಮತ್ತು ಸೌಕರ್ಯಗಳನ್ನು ಒದಗಿಸಲು ಬೆಂಗಳೂರಿನ ಹಜ್ ಭವನದಲ್ಲಿ ಹೆಚ್ಚುವರಿ ಕಟ್ಟಡವನ್ನು ನಿರ್ಮಿಸಲಾಗುವುದು.
    • ಅಲ್ಪಸಂಖ್ಯಾತ ಮಹಿಳೆಯರ ಉನ್ನತ ಶಿಕ್ಷಣಕ್ಕೆ ಪೂರಕವಾಗಿ 2024-25ನೇ ಸಾಲಿನಲ್ಲಿ ವಕ್ಫ್ ಸಂಸ್ಥೆಗಳ ಖಾಲಿ ನಿವೇಶನಗಳಲ್ಲಿ 15 ಮಹಿಳಾ ಕಾಲೇಜುಗಳ ನಿರ್ಮಾಣಕ್ಕೆ ಕ್ರಮಕೈಗೊಳ್ಳಲಾಗಿದೆ. ಮುಂದುವರೆದು, 2025-26ನೇ ಸಾಲಿನಲ್ಲಿ 16 ಹೊಸ ಮಹಿಳಾ ಕಾಲೇಜುಗಳನ್ನು ಸ್ಥಾಪಿಸಲಾಗುವುದು.
    • ರಾಜ್ಯದಲ್ಲಿರುವ ಗುರುದ್ವಾರಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು 2 ಕೋಟಿ ರೂ. ಅನುದಾನ. ಬೆಂಗಳೂರಿನಲ್ಲಿ ಬೌದ್ಧ ಅಧ್ಯಯನ ಅಕಾಡೆಮಿಯನ್ನು ಸ್ಥಾಪಿಸಲಾಗುವುದು ಹಾಗೂ ಮಹಾಭೋಧಿ ಅಧ್ಯಯನ ಕೇಂದ್ರದ 100 ವರ್ಷಗಳ ಹಳೆಯ ಗ್ರಂಥಾಲಯವನ್ನು 1 ಕೋಟಿ ರೂ. ವೆಚ್ಚದಲ್ಲಿ ಡಿಜಿಟಲೀಕರಣಗೊಳಿಸಿ ಉನ್ನತೀಕರಿಸಲಾಗುವುದು.
    • ಜೈನ, ಬೌದ್ಧ ಹಾಗೂ ಸಿಖ್ಖ್ ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನ. ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿಗಾಗಿ 250 ಕೋಟಿ ರೂ. ಒದಗಿಸಲಾಗುವುದು.
    • ಪ್ರಾಚೀನ ಬೌದ್ಧ ಕೇಂದ್ರವಾಗಿರುವ ಕಲುಬುರಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನಲ್ಲಿ ಸನ್ನತಿ ಅಭಿವೃದ್ಧಿ ಪ್ರಾಧಿಕಾರ.ಅಲ್ಪಸಂಖ್ಯಾತರ ಸಮುದಾಯದವರಿಗೆ ಸಾಂಸ್ಕೃತಿಕ ಮತ್ತು ಸಾಮಾಜಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಹೋಬಳಿ ಮತ್ತು ತಾಲ್ಲೂಕು ಮಟ್ಟದಲ್ಲಿ 50 ಲಕ್ಷ ರೂ. ಹಾಗೂ ಜಿಲ್ಲಾ ಮತ್ತು ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಒಂದು ಕೋಟಿ ರೂ. ವೆಚ್ಚದಲ್ಲಿ ಬಹುಪಯೋಗಿ ಭವನಗಳನ್ನು ನಿರ್ಮಿಸಲಾಗುವುದು.
    • ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿರುವ ಪ್ರದೇಶಗಳಲ್ಲಿರುವ ಐ.ಟಿ.ಐ ಗಳಲ್ಲಿ ಹೊಸ ಕೋರ್ಸ್‌ಗಳನ್ನು ಹಾಗೂ ಹೆಚ್ಚುವರಿ ತರಗತಿ ಪ್ರಾರಂಭಿಸಲಾಗುವುದು.
    • KEA ಮುಖಾಂತರ ವೃತ್ತಿಪರ ಕೋರ್ಸ್‌ಗಳಲ್ಲಿ ಪ್ರವೇಶ ಪಡೆಯುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಐದು ಲಕ್ಷ ರೂ.ಗಳಿಗೆ ಸೀಮಿತಗೊಳಿಸಿ ಶುಲ್ಕದಲ್ಲಿ ಶೇ.50 ರಷ್ಟನ್ನು ಮರುಪಾವತಿ ಮಾಡಲಾಗುವುದು.
    • ಉಳ್ಳಾಲದಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿನಿಯರಿಗಾಗಿ ವಸತಿ ಸಹಿತ ಪಿ.ಯು. ಕಾಲೇಜನ್ನು ಸ್ಥಾಪಿಸಲಾಗುವುದು.ಇದನ್ನೂ ಓದಿ:ಹನಿ, ತುಂತುರು ನೀರಾವರಿ ಘಟಕ ಅಳವಡಿಕೆ ಯೋಜನೆ – 1.81 ಲಕ್ಷ ರೈತರಿಗೆ 440 ಕೋಟಿ ಸಹಾಯಧನ

  • ಮಲ್ಟಿಪ್ಲೆಕ್ಸ್ ಟಿಕೆಟ್ ದರ 200 ರೂ ಫಿಕ್ಸ್‌  – ಕನ್ನಡ ಸಿನಿಮಾಗಳಿಗೆ OTT

    ಮಲ್ಟಿಪ್ಲೆಕ್ಸ್ ಟಿಕೆಟ್ ದರ 200 ರೂ ಫಿಕ್ಸ್‌ – ಕನ್ನಡ ಸಿನಿಮಾಗಳಿಗೆ OTT

    ಬೆಂಗಳೂರು: ಮಲ್ಟಿಪ್ಲೆಕ್ಸ್‌ಗಳ ಬೇಕಾಬಿಟ್ಟಿ ಟಿಕೆಟ್‌ ದರ ಏರಿಕೆಗೆ ಮೂಗುದಾರ ಹಾಕಲು ರಾಜ್ಯ ಸರ್ಕಾರ ಕೊನೆಗೂ ಮುಂದಾಗಿದೆ. ರಾಜ್ಯ ಸರ್ಕಾರ ನುಡಿದಂತೆ ನಡೆದರೆ ಇನ್ನು ಮುಂದೆ ಮಲ್ಟಿಪ್ಲೆಕ್ಸ್‌ನಲ್ಲಿ ನೀವು 200 ರೂಪಾಯಿಗೆ ಸಿನೆಮಾ ನೋಡಬಹುದು. ರಾಜ್ಯದಲ್ಲಿರುವ ಎಲ್ಲಾ ಮಲ್ಟಿಪ್ಲೆಕ್ಸ್ (Multiplex) ಹಾಗೂ ಚಿತ್ರಮಂದಿರಗಳಲ್ಲಿ ಪ್ರದರ್ಶಿಸಲಾಗುವ ಪ್ರತಿ ಪ್ರದರ್ಶನಕ್ಕೆ ಟಿಕೆಟ್ ದರ 200 ರೂ.ಗಳಿಗೆ ಸೀಮಿತಗೊಳಿಸಲಾಗುವುದು ಎಂದು 2025-26ನೇ ಸಾಲಿನ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

    ಈ ಹಿಂದಿನಿಂದಲೂ ಟಿಕೆಟ್ ದರ ನಿಗದಿ ಪಡಿಸಬೇಕೆಂಬ ಕೂಗು ಕೇಳಿ ಬರುತ್ತಿತ್ತು. ಅನ್ಯ ಭಾಷೆಗಳ ಚಿತ್ರ ರಿಲೀಸ್‌ ಆದಾಗಂತೂ ಬೇಕಾಬಿಟ್ಟಿಯಾಗಿ ಟಿಕೆಟ್‌ ದರ ಏರಿಕೆ ಮಾಡುತ್ತಿದ್ದರು. ಈಗ ಕರ್ನಾಟಕ ಸರ್ಕಾರ 200 ರೂ. ದರ ನಿಗದಿ ಮಾಡಲು ಮುಂದಾಗಿದೆ.   ಇದನ್ನೂ ಓದಿ: Karnataka Budget 2025 LIVE: ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ

    ಚಲನಚಿತ್ರ ಭಂಡಾರ: ದಾಖಲೆಯ 16ನೇ ಬಜೆಟ್ ಮಂಡಿಸುತ್ತಿರುವ ಸಿಎಂ, ಸಿನಿಮಾ ಕ್ಷೇತ್ರವನ್ನು ಉದ್ಯಮವೆಂದು ಪರಿಗಣಿಸಿ, ಕೈಗಾರಿಕಾ ನೀತಿಯಡಿ ಒದಗಿಸಲಾಗುವ ಸೌಲಭ್ಯಗಳನ್ನು ಸಿನಿಮಾ ಕ್ಷೇತ್ರಕ್ಕೆ ಸರ್ಕಾರ ಒದಗಿಸಲಿದೆ. ಸಾಮಾಜಿಕ, ಚಾರಿತ್ರಿಕ ಹಾಗೂ ಸಾಂಸ್ಕೃತಿಕ ಮೌಲ್ಯಗಳನ್ನು ಬಿಂಬಿಸುವ ಕನ್ನಡ ಚಲನಚಿತ್ರಗಳನ್ನು ಡಿಜಿಟಲ್ ಹಾಗೂ ನಾನ್-ಡಿಜಿಟಲ್ ಮಾದರಿಯಲ್ಲಿ ಸಂರಕ್ಷಿಸಲು 3 ಕೋಟಿ ರೂ. ವೆಚ್ಚದಲ್ಲಿ ಚಲನಚಿತ್ರ ಭಂಡಾರವನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದ್ದಾರೆ.

    ಇನ್ನೂ ಕನ್ನಡ ಚಲನಚಿತ್ರಗಳ ಪ್ರೋತ್ಸಾಹಕ್ಕಾಗಿ OTT ವೇದಿಕೆಯನ್ನು ಸೃಷ್ಟಿಸಲು ಕ್ರಮಕೈಗೊಳ್ಳಲಾಗುವುದು. ಮೈಸೂರಿನಲ್ಲಿ ಅಂತಾರಾಷ್ಟ್ರೀಯ ದರ್ಜೆಯ ಚಿತ್ರನಗರಿಯನ್ನು ಪಿಪಿಪಿ ಮಾದರಿಯಲ್ಲಿ ಅಂದಾಜು 500 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲು 150 ಎಕರೆ ಜಮೀನನ್ನು ಕಾಯ್ದಿರಿಸಲಾಗಿದೆ. ಮುಂದಿನ ವರ್ಷಗಳಲ್ಲಿ ಚಿತ್ರನಗರಿಯನ್ನು ಸ್ಥಾಪಿಸಲು ಸರ್ಕಾರ ಬದ್ಧವಾಗಿದೆ. ಜೊತೆಗೆ ಬೆಂಗಳೂರಿನ ನಂದಿನಿ ಲೇಔಟ್‌ನಲ್ಲಿ ಚಲನಚಿತ್ರ ಅಕಾಡೆಮಿಯು ಹೊಂದಿರುವ 2.5 ಎಕರೆ ನಿವೇಶನದಲ್ಲಿ ಬಹುಪರದೆಗಳಿರುವ ಚಿತ್ರಮಂದಿರ ಸಮುಚ್ಛಯವನ್ನು ಸಾರ್ವಜನಿಕ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ವಿವರಿಸಿದರು.

    ಪತ್ರಕರ್ತರಿಗೆ ಸಿಎಂ ಮಾಧ್ಯಮ ಸಂಜೀವಿನಿ: ಸಂಷ್ಟದಲ್ಲಿರುವ ಪತ್ರಕರ್ತರಿಗೆ ಪ್ರಸ್ತುತ ನೀಡುತ್ತಿರುವ 12,000 ರೂ. ಸಂಬಳವನ್ನು 15,000 ರೂ.ಗಳಿಗೆ ಹಾಗೂ ಕುಟುಂಬಕ್ಕೆ ನೀಡುವ ಸಂಬಳವನ್ನು 6,000 ರೂ.ಗಳಿಂದ 7,500 ಹೆಚ್ಚಿಸಲಾಗುವುದು. ಮಾಧ್ಯಮ ಮಾನ್ಯತೆ ಹೊಂದಿರುವ ರಾಜ್ಯದ ಒಟ್ಟು 2,500 ಪತ್ರಕರ್ತರು ಹಾಗೂ ಅವರ ಅವಲಂಬಿತ ಕುಟುಂಬ ಸದಸ್ಯರಿಗೆ 5 ಲಕ್ಷ ರೂ.ವರೆಗೆ ನಗದುರಹಿತ ಚಿಕಿತ್ಸೆಗಾಗಿ ‘ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ’ ಅನುಷ್ಠಾನಗೊಳಿಸಲಾಗುವುದು ಎಂದು ಹೇಳಿದರು.ಇದನ್ನೂ ಓದಿ: ಅನುದಾನ ಘೋಷಣೆಯಾಗಿದ್ದರೂ ಬಿಡುಗಡೆಯಾಗಿಲ್ಲ: ಬಜೆಟ್ ಭಾಷಣದಲ್ಲಿ ಕೇಂದ್ರಕ್ಕೆ ಸಿದ್ದು ಗುದ್ದು

  • ಅನುದಾನ ಘೋಷಣೆಯಾಗಿದ್ದರೂ ಬಿಡುಗಡೆಯಾಗಿಲ್ಲ: ಬಜೆಟ್ ಭಾಷಣದಲ್ಲಿ ಕೇಂದ್ರಕ್ಕೆ ಸಿದ್ದು ಗುದ್ದು

    ಅನುದಾನ ಘೋಷಣೆಯಾಗಿದ್ದರೂ ಬಿಡುಗಡೆಯಾಗಿಲ್ಲ: ಬಜೆಟ್ ಭಾಷಣದಲ್ಲಿ ಕೇಂದ್ರಕ್ಕೆ ಸಿದ್ದು ಗುದ್ದು

    ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು (Siddaramaiah) ಬಜೆಟ್ ತಮ್ಮ ಭಾಷಣದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

    ಸಿಎಂ ಹೇಳಿದ್ದೇನು?
    15ನೇ ಹಣಕಾಸು ಆಯೋಗದ ಶಿಫಾರಸ್ಸಿನ ಅನ್ವಯ ತೆರಿಗೆ ಹಂಚಿಕೆಯಲ್ಲಿ ಅತಿ ಹೆಚ್ಚು ನಷ್ಟವನ್ನು ಅನುಭವಿಸಿದ ರಾಜ್ಯ ಕರ್ನಾಟಕ. 14ನೇ ಹಣಕಾಸು ಆಯೋಗವು ಕರ್ನಾಟಕಕ್ಕೆ ಶಿಫಾರಸ್ಸು ಮಾಡಿದ್ದ ತೆರಿಗೆ ಪಾಲು ಶೇ. 4.713 ರಿಂದ, 15ನೇ ಹಣಕಾಸು ಆಯೋಗದ ಅವಧಿಯಲ್ಲಿ ಶೇ.3.647ಕ್ಕೆ ಇಳಿಕೆಯಾಯಿತು. ಇದರಿಂದಾಗಿ ರಾಜ್ಯದ ತೆರಿಗೆ ಹಂಚಿಕೆಯು ಶೇ.23ರಷ್ಟು ಕುಸಿತವಾಗಿ, ರಾಜ್ಯವು ವಾರ್ಷಿಕ ಅಂದಾಜು 12 ಸಾವಿರ ಕೋಟಿ ರೂ. ನಷ್ಟ ಅನುಭವಿಸಬೇಕಾಯಿತು. ಅಲ್ಲದೇ, 15ನೇ ಹಣಕಾಸು ಆಯೋಗವು ರಾಜ್ಯದ ತೆರಿಗೆ ಪಾಲು ಕಡಿಮೆಯಾದ ಕಾರಣ 5,495 ಕೋಟಿ ರೂ.ಗಳ ವಿಶೇಷ ಅನುದಾನ, ಬೆಂಗಳೂರಿನಲ್ಲಿ ಕೆರೆಗಳ ಸಂರಕ್ಷಣೆಗಾಗಿ 3,000 ಕೋಟಿ ರೂ. ಮತ್ತು ಪೆರಿಫೆರಲ್ ರಿಂಗ್ ರಸ್ತೆ ಅಭಿವೃದ್ಧಿಗೆ 3,000 ಕೋಟಿ ರೂ. ಸೇರಿ ಒಟ್ಟು 11,495 ಕೋಟಿ ರೂ.ಗಳನ್ನು ತನ್ನ ವರದಿಯಲ್ಲಿ ಶಿಫಾರಸ್ಸು ಮಾಡಿತು. ಆದರೆ ಕೇಂದ್ರ ಸರ್ಕಾರ ಈ ಅನುದಾನವನ್ನು ಬಿಡುಗಡೆ ಮಾಡಿರುವುದಿಲ್ಲ. 2023-24ನೇ ಸಾಲಿನ ಕೇಂದ್ರ ಸರ್ಕಾರದ ಆಯವ್ಯಯ ಭಾಷಣದಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ.ಗಳನ್ನು ಘೋಷಿಸಿತ್ತು. ಆದರೆ, ಕೇಂದ್ರ ಸರ್ಕಾರವು ಈವರೆಗೂ ಯಾವುದೇ ಅನುದಾನ ಬಿಡುಗಡೆ ಮಾಡಿರುವುದಿಲ್ಲ. ಇದನ್ನೂ ಓದಿ: ಅಬಕಾರಿ ಇಲಾಖೆಗೆ 40,000 ಕೋಟಿ ತೆರಿಗೆ ಸಂಗ್ರಹ ಟಾರ್ಗೆಟ್‌

    ರಾಜ್ಯಗಳಿಗೆ ತೆರಿಗೆ ಹಂಚಿಕೆಯನ್ನು ಹೆಚ್ಚಿಸುವ ಬಗ್ಗೆ 16ನೇ ಹಣಕಾಸು ಆಯೋಗದ ಮುಂದೆ ರಾಜ್ಯವು ಪ್ರಬಲವಾಗಿ ತನ್ನ ವಾದವನ್ನು ಪ್ರತಿಪಾದಿಸಿದೆ. ಆರೋಗ್ಯಕರ ಮತ್ತು ಸಾಮರಸ್ಯದ ಆರ್ಥಿಕ ಒಕ್ಕೂಟ ರೂಪಿಸಲು ರಾಜ್ಯಗಳಿಗೆ ನೀಡುವ ತೆರಿಗೆ ಪಾಲನ್ನು ಸಮಾನತೆ ಮತ್ತು ದಕ್ಷತೆಯನ್ನು ಆಧರಿಸಿ ಹಂಚಿಕೆ ಮಾಡುವಂತೆ ಹಣಕಾಸು ಆಯೋಗಕ್ಕೆ ಮನವರಿಕೆ ಮಾಡಿದೆ. ಬಲಿಷ್ಠ ಆರ್ಥಿಕತೆ ಹೊಂದಿರುವ ರಾಜ್ಯಗಳು ಬಡ ರಾಜ್ಯಗಳಿಗೆ ನೆರವಾಗಲು ಬದ್ಧರಾಗಿದ್ದರೂ, ಅದು ತನ್ನ ನಾಗರೀಕರ ಹಿತ ಕಾಯುವಲ್ಲಿ ಅಥವಾ ಆರ್ಥಿಕ ಪ್ರಗತಿಗೆ ಕುಂದುಂಟು ಮಾಡುವಂತಿರಬಾರದು. ಆದಾಯ-ಅಂತರ ಮತ್ತು ತಲಾ ಆದಾಯ ನಿರ್ಧರಿಸುವ ಮಾನದಂಡಗಳಲ್ಲಿಯೂ ಲೋಪಗಳಿರುವ ಹಿನ್ನೆಲೆಯಲ್ಲಿ, ಈ ಮಾನದಂಡಗಳಿಗೆ ಕಡಿಮೆ ಅಂಕ ನೀಡುವಂತೆ ಮನವಿ ಮಾಡಿದ್ದೇವೆ. ಇದನ್ನೂ ಓದಿ: ಬೆಂಗಳೂರು ನಗರ ವಿವಿ ಇನ್ಮುಂದೆ ಪ್ರಧಾನಿ ಮನಮೋಹನ್ ಸಿಂಗ್ ವಿವಿ

    ಕರ್ನಾಟಕ ರಾಜ್ಯವು, ಸುಸ್ಥಿರ ಋಣ ನಿರ್ವಹಣೆ ಮತ್ತು ವಿತ್ತೀಯ ಶಿಸ್ತು ಪಾಲಿಸುವ ಮೂಲಕ ವಿತ್ತೀಯ ಹೊಣೆಗಾರಿಕೆಯನ್ನು ಉತ್ತಮವಾಗಿ ನಿಭಾಯಿಸಿದೆ. ನಮ್ಮ ರಾಜ್ಯದಲ್ಲಿ ವಿತ್ತೀಯ ಹೊಣೆಗಾರಿಕೆ ಅಧಿನಿಯಮವನ್ನು ಕೇಂದ್ರ ಸರ್ಕಾರವು ಅನುಷ್ಠಾನಕ್ಕೆ ತರುವ ಮುನ್ನವೇ ಜಾರಿಗೆ ತರಲಾಯಿತು. ಅಲ್ಲದೆ, ರಾಜ್ಯದ ಒಟ್ಟು ಹೊಣೆಗಾರಿಕೆಗಳಲ್ಲಿ ಆಯವ್ಯಯದ ಹೊರಗಿನ ಸಾಲಗಳನ್ನು ಪರಿಗಣಿಸಿದ ಮೊದಲ ರಾಜ್ಯ ಕರ್ನಾಟಕ. ಆದಾಗ್ಯೂ, ಜಿ.ಎಸ್.ಟಿ ಜಾರಿಯಿಂದ ರಾಜ್ಯಕ್ಕೆ ಆದ ರಾಜಸ್ವ ನಷ್ಟವನ್ನು ಸಂಪೂರ್ಣವಾಗಿ ಸರಿದೂಗಿಸಲು ಕೇಂದ್ರ ಸರ್ಕಾರ ವಿಫಲವಾದ ಕಾರಣ ಮತ್ತು ಕೇಂದ್ರ ಸರ್ಕಾರ ವಿಧಿಸುವ ಸೆಸ್‌ಗಳು ಮತ್ತು ಸರ್‌ಚಾರ್ಜ್ಗಳನ್ನು ರಾಜ್ಯಗಳಿಗೆ ಹಂಚಿಕೆಯಾಗುವ ತೆರಿಗೆ ಪಾಲಿನಲ್ಲಿ ಪರಿಗಣಿಸದಿರುವುದರಿಂದ ಹಾಗೂ 15ನೇ ಹಣಕಾಸು ಆಯೋಗದ ಶಿಫಾರಸ್ಸಿನನ್ವಯ ರಾಜ್ಯದ ತೆರಿಗೆ ಪಾಲು ಕಡಿಮೆಯಾದ ಕಾರಣ ರಾಜ್ಯವು ವಿತ್ತೀಯ ಸವಾಲುಗಳನ್ನು ಎದುರಿಸುವಂತಾಯಿತು. ಇದನ್ನೂ ಓದಿ: ರಾಜ್ಯದಲ್ಲಿ ನಕ್ಸಲ್ ನಿಗ್ರಹ ಪಡೆ ವಿಸರ್ಜನೆ: ಸಿಎಂ ಘೋಷಣೆ

    ಕರ್ನಾಟಕದ ಆರ್ಥಿಕತೆಯಲ್ಲಿ ಸೇವಾ ವಲಯದ ಕೊಡುಗೆಯೂ ಪ್ರಮುಖವಾಗಿದ್ದು, ಒಟ್ಟು ಮೌಲ್ಯವರ್ಧನೆಯಲ್ಲಿ ಸೇವಾ ವಲಯಗಳ ಪಾಲು ಶೇ.66 ರಷ್ಟಿದೆ. 2024-25ನೇ ಸಾಲಿಗೆ ರಾಜ್ಯದಲ್ಲಿ ಸೇವಾ ವಲಯವು ಗಣನೀಯವಾಗಿ ಬೆಳವಣಿಗೆಯಾಗಿದ್ದು, ಶೇ.8.9ರಷ್ಟು ಬೆಳವಣಿಗೆ ದಾಖಲಿಸುವ ಮೂಲಕ ದೇಶದ ಆರ್ಥಿಕತೆಯಲ್ಲಿನ ಸೇವಾ ವಲಯದ ಬೆಳವಣಿಗೆ ಶೇ.7.2ಕ್ಕಿಂತ ಹೆಚ್ಚಾಗಿದೆ.

    ಆರ್ಥಿಕ ಬೆಳವಣಿಗೆ ಮತ್ತು ಹೆಚ್ಚಿನ ಉದ್ಯೋಗಾವಕಾಶಗಳನ್ನು ಸೃಜಿಸಲು ಸರ್ಕಾರವು ಮಾಹಿತಿ ತಂತ್ರಜ್ಞಾನ, ಪ್ರವಾಸೋದ್ಯಮ, ಜೈವಿಕ ತಂತ್ರಜ್ಞಾನ ಸೇರಿದಂತೆ ಕೈಗಾರಿಕೆ ಮತ್ತು ಸೇವಾ ವಲಯದಲ್ಲಿ ಹಲವು ನೀತಿಗಳನ್ನು ಜಾರಿಗೆ ತಂದಿದೆ. ಈ ನೀತಿಗಳು ಮಾನವ ಸಂಪನ್ಮೂಲವನ್ನು ಸಮರ್ಥವಾಗಿ ಬಳಸುವುದರ ಜೊತೆಗೆ ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಹೆಚ್ಚಿನ ಹೂಡಿಕೆಗಳನ್ನು ಉತ್ತೇಜಿಸಲಿವೆ. ಸರ್ಕಾರವು ಜಾರಿಗೆ ತಂದಿರುವ ಈ ನೀತಿಗಳಿಂದ ರಾಜ್ಯದಲ್ಲಿ ಅಂದಾಜು 1 ಲಕ್ಷ ಕೋಟಿ ರೂ. ಹೂಡಿಕೆಯನ್ನು ನಿರೀಕ್ಷಿಸಲಾಗಿದೆ. ಈ ಉದ್ದೇಶಕ್ಕೆ ಸರ್ಕಾರವು 13,500 ಕೋಟಿ ರೂ. ಸಹಾಯಧನ ಮತ್ತು ಆರ್ಥಿಕ ನೆರವು ನೀಡಲು ಸಹಮತಿಸಿದೆ. ಇದನ್ನೂ ಓದಿ: ಪ್ರಾಜೆಕ್ಟ್‌ ಮೆಜೆಸ್ಟಿಕ್‌ – ಹೈಟೆಕ್‌ ಆಗಲಿದೆ ಬಸ್‌ ನಿಲ್ದಾಣ

    ನಮ್ಮ ಸರ್ಕಾರವು ಆರ್ಥಿಕತೆಯ ಬೆಳವಣಿಗೆಗೆ ಹೆಚ್ಚಿನ ಪ್ರಾಶಸ್ತ್ಯ ನೀಡಿದ್ದು, 2024-25ರ ಡಿಸೆಂಬರ್ ಅಂತ್ಯದವರೆಗೆ 4.4 ಬಿಲಿಯನ್ ಡಾಲರ್ ಮೌಲ್ಯದ ವಿದೇಶಿ ಹೂಡಿಕೆಗಳನ್ನು ಆಕರ್ಷಿಸುವ ಮೂಲಕ ದೇಶದಲ್ಲಿಯೇ ಮೂರನೇ ಸ್ಥಾನದಲ್ಲಿದೆ.

  • ಬೆಂಗಳೂರು ನಗರ ವಿವಿ ಇನ್ಮುಂದೆ ಪ್ರಧಾನಿ ಮನಮೋಹನ್ ಸಿಂಗ್ ವಿವಿ

    ಬೆಂಗಳೂರು ನಗರ ವಿವಿ ಇನ್ಮುಂದೆ ಪ್ರಧಾನಿ ಮನಮೋಹನ್ ಸಿಂಗ್ ವಿವಿ

    ಬೆಂಗಳೂರು: ಬೆಂಗಳೂರು ನಗರ ವಿಶ್ವವಿದ್ಯಾಯಲವನ್ನು ಡಾ.ಮನಮೋಹನ್ ಸಿಂಗ್ (Manmohan Singh) ಬೆಂಗಳೂರು ನಗರ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲಾಗುವುದು ಸಿಎಂ ಸಿದ್ದರಾಮಯ್ಯ (CM Siddaramaiah) 2025-26ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಘೋಷಿಸಿದ್ದಾರೆ.

    ಈ ಬಾರಿ ದಾಖಲೆಯ 16ನೇ ಬಜೆಟ್ ಮಂಡಿಸುತ್ತಿರುವ ಸಿಎಂ, ಬೆಂಗಳೂರು ನಗರ ವಿಶ್ವವಿದ್ಯಾಲಯವನ್ನು ಡಾ| ಮನಮೋಹನ್ ಬೆಂಗಳೂರು ನಗರ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲಾಗುವುದು. ಈ ವಿಶ್ವವಿದ್ಯಾಲಯವನ್ನು ದೇಶದಲ್ಲಿ ಮಾದರಿಯನ್ನಾಗಿಸುವ ಉದ್ದೇಶದಿಂದ, ಸರ್ಕಾರಿ ಕಲಾ ಕಾಲೇಜು ಹಾಗೂ ಸರ್ಕಾರಿ ಆರ್.ಸಿ.ಕಾಲೇಜುಗಳನ್ನು ವಿಶ್ವವಿದ್ಯಾಲಯದ ಘಟಕ ಕಾಲೇಜುಗಳನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಪ್ರಕಟಿಸಿದರು. ಇದನ್ನೂ ಓದಿ: Karnataka Budget 2025 LIVE: ಆಯುಷ್ಮಾನ್‌ ಭಾರತದಡಿ 5 ಲಕ್ಷ ಚಿಕಿತ್ಸಾ ವೆಚ್ಚ

    ಮಹಿಳಾ ಉನ್ನತ ಶಿಕ್ಷಣದ ಬಲವರ್ಧನೆಗಾಗಿ 31 ಮಹಿಳಾ ಕಾಲೇಜುಗಳನ್ನು ಹಿಂದಿನ ವರ್ಷದಲ್ಲಿ ಉನ್ನತೀಕರಿಸಲು ಕ್ರಮ ಕೈಗೊಂಡಿದ್ದು, ಉಳಿದ 26 ಕಾಲೇಜುಗಳ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು 26 ಕೋಟಿ ರೂ. ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.

    ಗುಣಮಟ್ಟದ ಉನ್ನತ ಶಿಕ್ಷಣವನ್ನು ಒದಗಿಸಲು ರಾಜ್ಯದ ಪ್ರಥಮ ದರ್ಜೆ ಕಾಲೇಜುಗಳ ಬಲವರ್ಧನೆ, ಶಿಕ್ಷಣ ಸಂಸ್ಥೆಗಳಲ್ಲಿ ಉತ್ಕೃಷ್ಟತಾ ಕೇಂದ್ರಗಳ ಸ್ಥಾಪನೆ ಹಾಗೂ ಸಂಶೋಧನಾ ಸಾಮರ್ಥ್ಯ ಹೆಚ್ಚಿಸುವ ಉದ್ದೇಶಕ್ಕಾಗಿ ಮುಂದಿನ ನಾಲ್ಕು ವರ್ಷಗಳಲ್ಲಿ ವಿಶ್ವಬ್ಯಾಂಕ್ ನೆರವಿನೊಂದಿಗೆ 2,500 ಕೋಟಿ ರೂ. ಯೋಜನೆಯನ್ನು ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ ಎಂದರು.ಇದನ್ನೂ ಓದಿ: ಅಭಿವೃದ್ಧಿಯ ಬಜೆಟ್ ಇದು, ಗ್ಯಾರಂಟಿ ಮೀರಿ ಅಭಿವೃದ್ಧಿಗೆ ಒತ್ತು ಕೊಟ್ಟಿದ್ದೇನೆ: ಸಿಎಂ