Tag: Karnataka State Contractors Association

  • 60% ಕಮಿಷನ್ ಆರೋಪ ಹೊತ್ತಲ್ಲೇ ಸರ್ಕಾರದ ಆರು ಸಚಿವರಿಗೆ ಪತ್ರ

    60% ಕಮಿಷನ್ ಆರೋಪ ಹೊತ್ತಲ್ಲೇ ಸರ್ಕಾರದ ಆರು ಸಚಿವರಿಗೆ ಪತ್ರ

    – 30 ಸಾವಿರ ಕೋಟಿ ಹಣ ಪಾವತಿಯಾಗ್ಬೇಕು: ಗುತ್ತಿಗೆದಾರರ ಸಂಘದಿಂದ ಪತ್ರ

    ಬೆಂಗಳೂರು: 60% ಕಮಿಷನ್ ಆರೋಪ ಹೊತ್ತಲ್ಲೇ ಸರ್ಕಾರದ ಆರು ಸಚಿವರಿಗೆ ರಾಜ್ಯ ಗುತ್ತಿಗೆದಾರರ ಸಂಘ (Karnataka State Contractors Association) ಪತ್ರ ಬರೆದಿದೆ.

    ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ದಿನೇಶ್ ಗುಂಡೂರಾವ್, ಹೆಚ್‌ಸಿ ಮಹಾದೇವಪ್ಪ, ಜಮೀರ್ ಅಹ್ಮದ್, ಪ್ರಿಯಾಂಕ್ ಖರ್ಗೆ, ಬೋಸರಾಜ್‌ಗೆ ಪತ್ರ ಬರೆಯಲಾಗಿದೆ.

    ಬಾಕಿ ಹಣ ಬಿಡುಗಡೆ ಆಗದಿದ್ದರೆ ದೊಡ್ಡ ಹೋರಾಟ ಮಾಡುವುದಾಗಿ ಗುತ್ತಿಗೆದಾರರು ಸರ್ಕಾರದ ಸಚಿವರುಗೆ ಪತ್ರ ಮೂಲಕ ಎಚ್ಚರಿಸಿದ್ದಾರೆ. ಹಣ ಪಾವತಿ ವಿಚಾರದಲ್ಲಿ ಆಗುತ್ತಿರುವ ಅನ್ಯಾಯದ ಬಗ್ಗೆ ಉಲ್ಲೇಖಿಸಲಾಗಿದೆ.

    ಹಣ ಪಾವತಿ ವಿಚಾರದಲ್ಲಿ ಇಲಾಖೆಯ ಅಧಿಕಾರಿಗಳು ಕೊಡುತ್ತಿರುವ ಉತ್ತರಕ್ಕೆ ಗುತ್ತಿಗೆದಾರರ ಸಂಘ ಗರಂ ಆಗಿದೆ. ಹಣ ಪಾವತಿ ವಿಚಾರ ಆದ್ರೆ ಮಂತ್ರಿಗಳನ್ನೇ ಭೇಟಿ ಮಾಡಿ ಅಂತ ಅಧಿಕಾರಿಗಳು ಹೇಳುತ್ತಿದ್ದಾರೆಂದು ಪತ್ರದಲ್ಲಿ ತಿಳಿಸಲಾಗಿದೆ.

    ಸಚಿವರು ಕೊಟ್ಟ ಪಟ್ಟಿಯ ಪ್ರಕಾರ ಹಣ ಬಿಡುಗಡೆ ಆಗುತ್ತದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಜೇಷ್ಠತೆ ಕಡೆಗಣಿಸಿ ಹಣ ಬಿಡುಗಡೆ ಮಾಡಲು ಸಚಿವರು ಸೂಚಿಸಿದ್ದಾರೆ. ಜೇಷ್ಠತೆ ಆಧರಿಸಿ ಹಣ ಪಾವತಿ ಆದರೆ ಎಲ್ಲರಿಗೂ ಅನ್ಯಾಯ ಆಗುತ್ತೆ ಅಂತಾ ಪತ್ರದಲ್ಲಿ ಹೇಳಿದ್ದಾರೆ.

    ಸುಮಾರು 30 ಸಾವಿರ ಕೋಟಿಯಷ್ಟು ಹಣ ಪಾವತಿಯಾಗಬೇಕಿದೆ. ಬಾಕಿ ಹಣ ಬಿಡುಗಡೆ ಆಗದಿದ್ದರೆ ದೊಡ್ಡ ಹೋರಾಟ ಮಾಡುತ್ತೇವೆ. 7 ದಿನಗಳ ಒಳಗೆ ಗುತ್ತಿಗೆದಾರರ ಸಂಘದ ಸಭೆ ಕರೆದು ಸಮಸ್ಯೆ ಬಗೆಹರಿಸದಿದ್ದರೆ ಮುಖ್ಯಮಂತ್ರಿಗಳ ಗಮನಕ್ಕೆ ತರಲು ತಯಾರಿ ಮಾಡಿದ್ದೇವೆಂದು ಗುತ್ತಿಗೆದಾರರ ಸಂಘ ಎಚ್ಚರಿಸಿದೆ.

  • ಸರ್ಕಾರಿ ಇಲಾಖೆಯಲ್ಲಿ ಲಂಚ ಇಲ್ಲದೇ ಕೆಲಸ ನಡೆಯಲ್ಲ; ಭ್ರಷ್ಟಾಚಾರಕ್ಕೆ ಮೋದಿ ಬೆಂಬಲ – ಸಿದ್ದು ಆರೋಪ

    ಸರ್ಕಾರಿ ಇಲಾಖೆಯಲ್ಲಿ ಲಂಚ ಇಲ್ಲದೇ ಕೆಲಸ ನಡೆಯಲ್ಲ; ಭ್ರಷ್ಟಾಚಾರಕ್ಕೆ ಮೋದಿ ಬೆಂಬಲ – ಸಿದ್ದು ಆರೋಪ

    ಹಾಸನ: ಇಂದು ಯಾವುದೇ ಸರ್ಕಾರಿ ಇಲಾಖೆಯ ಕಚೇರಿಗಳಿಗೆ ಹೋದರೂ ಲಂಚವಿಲ್ಲದೇ ಕೆಲಸ ನಡೆಯೋದಿಲ್ಲ. ಹೀಗಿದ್ದೂ ಪ್ರಧಾನಿ ನರೇಂದ್ರ ಮೋದಿ ಅವರೇ ಭ್ರಷ್ಟಾಚಾರ ಬೆಂಬಲಿಸುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

    ಅರಸೀಕೆರೆ ತಾಲ್ಲೂಕಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿಯವರೇ ಭ್ರಷ್ಟಾಚಾರ ಬೆಂಬಲಿಸುತ್ತಿದ್ದಾರೆ. ಕೆಂಪಣ್ಣ ಅವರು ಪತ್ರ ಬರೆದು ಒಂದು ವರ್ಷ ಆಯ್ತು. ಇವತ್ತಿನವರೆಗೂ ಪ್ರಧಾನಿ ಕ್ರಮ ತೆಗೆದುಕೊಂಡಿಲ್ಲ. ಈ ಹಿಂದೆಯೂ ನಾ ಕಾವೂಂಗ್, ನಾ ಕಾನೇದೊಂಗಾ ಅಂತ ಪ್ರಧಾನಮಂತ್ರಿ ಹೇಳಿದ್ರು. ಅವರ ಹೇಳಿಕೆಯಂತೆ ಏನೂ ಕ್ರಮ ತೆಗೆದುಕೊಂಡಿಲ್ಲ. ಕರ್ನಾಟಕದಲ್ಲಿ ಭ್ರಷ್ಟಾಚಾರ ಅವ್ಯಾಹತವಾಗಿ ನಡೆಯುತ್ತಿದೆ. ತಹಸೀಲ್ದಾರ್ ಕಚೇರಿ, ಪೊಲೀಸ್ ಠಾಣೆ, ಪಿಡಬ್ಲ್ಯೂಡಿ ಇಲಾಖೆ, ನೀರಾವರಿ ಇಲಾಖೆ ಯಾವ ಸರ್ಕಾರಿ ಕಚೇರಿಗಳಿಗೆ ಹೋದರೂ ಭ್ರಷ್ಟಾಚಾರವಿಲ್ಲದೇ ಏನೂ ಕೆಲಸ ನಡೆಯುವುದಿಲ್ಲ ಎಂದು ಆರೋಪಿಸಿದ್ದಾರೆ.

    ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಆರೋಪಕ್ಕೆ ಸಂಧಿಸಿದಂತೆ `ಭ್ರಷ್ಟಾಚಾರ ನಡೆದಿದ್ದರೆ ಸಾಕ್ಷಿ ನೀಡಲಿ’ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಗುತ್ತಿಗೆದಾರರ ಸಂಘ, ಕೆಂಪಣ್ಣ ವಿರುದ್ಧ 50 ಕೋಟಿ ಮಾನನಷ್ಟ ಮೊಕದ್ದಮೆ: ಮುನಿರತ್ನ

    ಭ್ರಷ್ಟಾಚಾರ ಮಾಡಿರೋರು ಲಂಚ ಕೊಟ್ಟಿದ್ದಕ್ಕೆಲ್ಲಾ ರಶೀದಿ ಕೊಡ್ತಾರಾ? ತನಿಖೆ ಮಾಡಿಸಿದರೆ ಗೊತ್ತಾಗುತ್ತದೆ. ಕೆಂಪಣ್ಣ ನ್ಯಾಯಾಂಗ ತನಿಖೆ ಮಾಡಿದರೆ ದಾಖಲೆ ಕೊಡ್ತೀವಿ ಅಂದಿದ್ದಾರೆ. ನಮ್ಮ ಆರೋಪ ಸಾಬೀತಾಗದೇ ಇದ್ದರೆ ನಮಗೆ ಏನು ಬೇಕಾದರೂ ಶಿಕ್ಷೆ ಕೊಡಿ ಎಂದು ಹೇಳಿದ್ದಾರೆ. ಇದಕ್ಕಿಂತ ಇನ್ನೇನು ಬೇಕು. ನೀವು ಪ್ರಾಮಾಣಿಕರಾಗಿದ್ದರೆ ತನಿಖೆ ಮಾಡಿಸೋಕೆ ಭಯ ಯಾಕೆ ಎಂದು ಪ್ರಶ್ನಿಸಿದ್ದಾರೆ.

    ಕೆಂಪಣ್ಣ ಕಾಂಗ್ರೆಸ್ಸೋ, ಬಿಜೆಪಿಯೊ ನಂಗೆ ಗೊತ್ತಿಲ್ಲ. ಪ್ರಧಾನಿಗೆ ಪತ್ರ ಬರೆದ ಒಂದು ವರ್ಷದ ನಂತರ ಅವರು ನನ್ನನ್ನು ಭೇಟಿಯಾಗಿದ್ದಾರೆ. ಸಂಘದ 25 ಪದಾಧಿಕಾರಿಗಳು ಪಕ್ಷಾತೀತವಾಗಿ ಬಂದು ನನ್ನ ಭೇಟಿಯಾಗಿದ್ದಾರೆ. ಅವರ ಭೇಟಿ ಬಳಿಕ ಈ ವಿಚಾರವನ್ನು ಸದನದಲ್ಲಿ ಪ್ರಸ್ತಾಪ ಮಾಡೋಕೆ ಹೇಳಿದ್ದರು ಅಷ್ಟೇ ಹೊರತಾಗಿ ಬೇರೇನೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    ಬಿಜೆಪಿಯಿಂದ ಜನೋತ್ಸವ ಕಾರ್ಯಕ್ರಮ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಅದು ಜನೋತ್ಸವ ಅಲ್ಲ, ಭ್ರಷ್ಟ ಪ್ಲಸ್ ಉತ್ಸವ ಭ್ರಷ್ಟೋತ್ಸವ. ರೂಪ್ಸಾದವರು ಲಂಚ ತೆಗೆದುಕೊಳ್ಳುತ್ತಾರೆ ಎಂದು ಆರೋಪಿಸಿದ್ದಾರೆ. ಕೆಂಪಣ್ಣ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದಾರೆ. ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ನಡೆದು ಸೆಲೆಕ್ಷನ್ ಕಮಿಟಿ ಅಧ್ಯಕ್ಷ ಎಡಿಜಿಪಿ ಜೈಲಿಗೆ ಹೋಗಿದ್ದಾರೆ. ಕೆಪಿಟಿಸಿಎಲ್ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಕೆಲವರು ಅರೆಸ್ಟ್ ಆಗಿದ್ದಾರೆ. ಬೆಂಕಿಯಿಲ್ಲದೆ ಹೊಗೆ ಬರುತ್ತಾ? `ದಿಸ್ ಗವರ್ನಮೆಂಟ್ ಈಸ್ ಎ ಮೋಸ್ಟ್ ಕರಪ್ಟ್ ಗೌರ್ನಮೆಂಟ್’. ಈಗ ವರ್ಗಾವಣೆಗೂ ದುಡ್ಡು ತೆಗೆದುಕೊಳ್ಳೋಕೆ ಶುರು ಮಾಡಿದ್ದಾರೆ ಎಂದು ಸಾಲು-ಸಾಲು ಹಗರಣಗಳನ್ನು ಉದಾಹರಣೆ ನೀಡಿದ್ದಾರೆ.

    ಅರವಿಂದ ಲಿಂಬಾವಳಿ ಜನಪ್ರತಿನಿಧಿಯಾಗಲು ನಾಲಾಯಕ್:
    ಅಹವಾಲು ಹೇಳಲು ಬಂದ ಮಹಿಳೆ ಜೊತೆ ದುರ್ವರ್ತನೆ ತೋರಿದ ಅರವಿಂದ ಲಿಂಬಾವಳಿ ವಿರುದ್ಧ ವಾಗ್ದಾಳಿ ನಡೆಸಿದ ಸಿದ್ದು, ಲಿಂಬಾವಳಿ ಜನಪ್ರತಿನಿಧಿಯಾಗಲು ನಾಲಾಯಕ್. ಆಯಮ್ಮ ಏನು ಹೇಳ್ತಾರೆ ಕೇಳಬೇಕಿತ್ತು. ಅವರು ರಾಜಕಾಲುವೆ ಒತ್ತುವರಿ ಮಾಡಿದ್ದರೆ ಕ್ರಮ ತಗೊಳ್ಳಿ. ನೀವೊಬ್ಬ ಜನಪ್ರತಿನಿಧಿಯಾಗಿ ಸಮಸ್ಯೆ ಕೇಳೋದು ನಿಮ್ಮ ಕರ್ತವ್ಯ ಅಲ್ಲವೇ? ಯಾರೇ ಆಗಲಿ ಕಷ್ಟ-ಸುಖ ಹೇಳಿಕೊಳ್ಳಲು ಬಂದಾಗ ಕೆಟ್ಟದಾಗಿ ಬೈಯ್ದು ಬಿಡೋದಾ? ನಾವೇನು ಆಯಮ್ಮನಿಗೆ ರೇಪ್ ಮಾಡಿದಿವಾ ಅಂದರೆ ಏನರ್ಥ ಹೇಳಿ ನೋಡೋಣ ಎಂದು ಪ್ರಶ್ನಿಸಿದ್ದಾರೆ.

    ಆಯಮ್ಮ ಸುಳ್ಳು ಹೇಳುತ್ತಿದ್ದಾರೆ, ಅಕ್ರಮವಾಗಿ ರಾಜಕಾಲುವೆ ಒತ್ತುವರಿ ಮಾಡಿದ್ದಾರೆ ಅಂತಲೇ ಅಂದುಕೊಳ್ಳೋಣ. ಅವರು ಹೇಳೋದನ್ನು ಕೇಳೋಕೆ ಏನು ಕಷ್ಟ. ತಾಳ್ಮೆಯಿಂದ ಅವರ ಕಷ್ಟ-ಸುಖ ಕೇಳಬೇಕು ಅಲ್ಲವಾ? ಅದು ಬಿಟ್ಟು ಮೈ ಮೇಲೆ ಬಿದ್ದರೆ ಹೇಗೆ? ಅವರು ಎಂಎಲ್‌ಎ ಆಗಲು ಲಾಯಕ್ಕಾ, ನಾಲಾಯಕ್ಕ ನೀವೆ ಹೇಳಿ ವಾಗ್ದಾಳಿ ನಡೆಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮೋದಿ, ಬಿಜೆಪಿಯವರು ಸೇರಿ ದೇಶವನ್ನ ಬರ್ಬಾದು ಮಾಡಿಬಿಟ್ರು – ಸಿದ್ದು ಗುದ್ದು

    ಮೋದಿ, ಬಿಜೆಪಿಯವರು ಸೇರಿ ದೇಶವನ್ನ ಬರ್ಬಾದು ಮಾಡಿಬಿಟ್ರು – ಸಿದ್ದು ಗುದ್ದು

    ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಹಾಗೂ ಬಿಜೆಪಿಯವರು ಸೇರಿ ಇಡೀ ದೇಶವನ್ನ ಬರ್ಬಾದು ಮಾಡಿಬಿಟ್ಟರು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

    ತಮ್ಮ ಪತ್ರಿಕಾ ಹೇಳಿಕೆಯಲ್ಲಿಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಸಿಎಂ, ಈ ಬಾರಿ ರಾಜ್ಯದ ಜನರು ಕೇಂದ್ರ ಮತ್ತು ರಾಜ್ಯ ಎರಡರಲ್ಲೂ ಬಿಜೆಪಿಯನ್ನು ಕಿತ್ತೆಸೆದು ನೆಮ್ಮದಿಯ ನಾಳೆಗಳ ಕುರಿತು ಯೋಚಿಸಬೇಕು ಎಂದು ಕರೆ ನೀಡಿದ್ದಾರೆ. ಇದನ್ನೂ ಓದಿ: ಅಪಘಾತದಲ್ಲಿ ಗಾಯಗೊಂಡಿದ್ದಾತ ಅಂಬುಲೆನ್ಸ್ ಬಾಗಿಲು ತೆಗೆಯೋಕಾಗದೆ ಸಾವನ್ನಪ್ಪಿದ!

    ಪ್ರಕಟಣೆಯಲ್ಲಿ ಏನಿದೆ?
    ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣನವರ ಹಿಂದೆ ವಿರೋಧ ಪಕ್ಷದವರಿದ್ದಾರೆ ಎಂದು ಹೇಳಿ ಜನರನ್ನು ಬಿಜೆಪಿಯವರು ದಾರಿ ತಪ್ಪಿಸಲು ನೋಡುತ್ತಿದ್ದಾರೆ. ಸರ್ಕಾರ ನಡೆಸುವವರಿಗೆ ಸಣ್ಣ ಲಜ್ಜೆ ಮತ್ತು ಕಾನೂನಿನ ತಿಳುವಳಿಕೆ ಇದ್ದರೆ ಹೀಗೆಲ್ಲ ಮಾತನಾಡುತ್ತಿರಲಿಲ್ಲ.

    ಕೆಂಪಣ್ಣ ಒಬ್ಬರೇ ನನ್ನನ್ನ ಭೇಟಿ ಮಾಡಿರಲಿಲ್ಲ. ಗುತ್ತಿಗೆದಾರರ ಸಂಘದ 50ಕ್ಕೂ ಹೆಚ್ಚು ಜನ ಭೇಟಿ ಮಾಡಿದ್ದರು. ಸಿದ್ದರಾಮಯ್ಯನವರನ್ನು ಯಾಕೆ ಭೇಟಿ ಮಾಡಿದರು ಎಂದು ಬೊಮ್ಮಾಯಿಯವರಾದಿಯಾಗಿ, ಅನೇಕ ಸಚಿವರು ಮಾತನಾಡಿದ್ದಾರೆ. ಗುತ್ತಿಗೆದಾರರ ಸಂಘದವರು ಮುಖ್ಯಮಂತ್ರಿಗಳನ್ನೂ ಭೇಟಿ ಮಾಡಿದ್ದರು. ಆದರೆ ಸಮಸ್ಯೆ ಬಗೆಹರಿಯುವ ಬದಲು, ಗುತ್ತಿಗೆದಾರರ ಸಂಘವನ್ನೆ ಒಡೆಯಲು ಪ್ರಯತ್ನಗಳು ನಡೆಯುತ್ತಿವೆ ಎಂಬ ಗಂಭೀರ ಆರೋಪವನ್ನು ಅವರು ಮಾಡುತ್ತಿದ್ದಾರೆ. ಜೊತೆಗೆ ಬಿಬಿಎಂಪಿಯಲ್ಲಿ ಶೇ.40 ರಷ್ಟಿದ್ದ ಕಮಿಷನ್ ದಂಧೆ, ಈಗ 50 ಪರ್ಸೆಂಟ್‌ಗೆ ತಲುಪಿದೆ ಎಂದು ಪತ್ರ ಬರೆದಿದ್ದಾರೆ. ಇದನ್ನೂ ಓದಿ: ಸರ್ಕಾರ ಕೊಟ್ಟ ಮಾತಿಗೆ ತಪ್ಪಿ ಜನರ ನಂಬಿಕೆಗೆ ದ್ರೋಹ ಎಸಗಿದೆ, ಇದು ವಚನ ವಂಚನೆ: ಸಿದ್ದರಾಮಯ್ಯ

    ಗುತ್ತಿಗೆದಾರರ ಸಂಘದವರು ಕಳೆದ ಒಂದು ವರ್ಷದಿಂದ ನಿರಂತರವಾಗಿ ಹೋರಾಟ ಮಾಡುತ್ತಿದ್ದಾರೆ. ಚೌಕಿದಾರ್ ಎಂದು ತನ್ನನ್ನು ಹೊಗಳಿಕೊಂಡ ಮೋದಿಯವರಾಗಲಿ, ರಾಜ್ಯ ಬಿಜೆಪಿ ಸರ್ಕಾರವಾಗಲಿ ಅವರ ಮನವಿಗಳನ್ನು ಗಂಭೀರವಾಗಿ ಪರಿಗಣಿಸಿದ್ದರೆ ಇವತ್ತು ಈ ಸಮಸ್ಯೆ ಬರುತ್ತಿರಲಿಲ್ಲ. ಬೆಳಗಾವಿಯ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಳ್ಳುತ್ತಿರಲಿಲ್ಲ.

    ರಾಜ್ಯ ಸರ್ಕಾರದ ಕಮಿಷನ್ ದಂಧೆಯಿಂದಾಗಿ ರಾಜ್ಯದಲ್ಲಿ ನಡೆಯುತ್ತಿರುವ ಕಾಮಗಾರಿಗಳ ಗುಣಮಟ್ಟ ಹೇಗಿದೆ ಎಂದು ಜನರು ನೋಡ್ತಿದ್ದಾರೆ. ಪ್ರಧಾನಿ ಬಂದು ಹೋದ ಮಾರನೇ ದಿನವೇ ಹಾಕಿದ್ದ ಟಾರು ಕಿತ್ತು ಬರುತ್ತದೆ. ಮಡಿಕೇರಿಯಲ್ಲಿ ಕಳಪೆ ಕಾಮಗಾರಿ ಮಾಡಿ ಅದನ್ನು ನೋಡಲು ಹೋದರೆ ಟಾರ್ಪಾಲಿನಿಂದ ಮರೆ ಮಾಡಿ ಕಳ್ಳತನವನ್ನು ಮುಚ್ಚಿಹಾಕಲು ನೋಡುತ್ತೀರಿ. ನಿಮ್ಮ ಗೂಂಡಾಗಳನ್ನು ಬಿಟ್ಟು ದಾಂಧಲೆ ಎಬ್ಬಿಸಲು ನೋಡಿ ಜನರ ಗಮನ ಬೇರೆಡೆ ಸೆಳೆಯಲು ನೋಡುತ್ತೀರಿ. ಇದನ್ನೂ ಓದಿ: ಅಮೆರಿಕದ ವಿರುದ್ಧ ಬೆಂಗಳೂರಿನಲ್ಲಿ ಚೀನಾ ಕಾರ್ಯಕ್ರಮ – ಸಿದ್ದರಾಮಯ್ಯ, ಮಹಾದೇವಪ್ಪ ಮುಖ್ಯ ಅತಿಥಿ

    ಬೆಂಗಳೂರಿನಲ್ಲಿ ಗುಂಡಿಬಿದ್ದ ರಸ್ತೆಗಳಿಂದ ಎಷ್ಟು ಜನರನ್ನ ಕೊಂದಿದ್ದೀರಿ ಎಂಬ ಲೆಕ್ಕವನ್ನು ಜನರಿಗೆ ಕೊಡಿ. ಹೆಚ್ಚೂ ಕಡಿಮೆ ರಾಜ್ಯದ ಹೈಕೋರ್ಟ್ ವಾರದಲ್ಲಿ ಎರಡು ದಿನ ಗುಂಡಿ ಮುಚ್ಚಿ ಎಂದು ತಾಕೀತು ಮಾಡುತ್ತಿದೆ. ಗುಂಡಿ ಮುಚ್ಚಿದ ಮಾರನೇ ದಿನವೇ ಮತ್ತೆ ಗುಂಡಿ ಬೀಳುತ್ತಿವೆ. ಆ ಗುಂಡಿಗೆ ಬಿದ್ದು ಯಾರದೋ ಮನೆಯ ಮಗ ಮರಣ ಹೊಂದುತ್ತಾನೆ. ಯಾರದೋ ಮನೆಯ ದೀಪ ಆರಿ ಹೋಗುತ್ತದೆ. ನಿಮಗೆ ಏನಾದರೂ ಮನುಷ್ಯತ್ವ ಇದ್ದರೆ ಇಂಥವೆಲ್ಲ ಕಣ್ಣಿಗೆ ಕಾಣುತ್ತದೆ. ಇದನ್ನೂ ಓದಿ: ಮತ್ತೊಮ್ಮೆ ಸಿಎಂ ಸಿದ್ದರಾಮಯ್ಯ – ಬಾಳೆಹಣ್ಣಿನ ಮೇಲೆ ಬರೆದು ರಥದ ಮೇಲೆ ಎಸೆದ ಅಭಿಮಾನಿ

    bjp - congress

    ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ನೀರಾವರಿ ಪಿಡಬ್ಲ್ಯೂಡಿ, ಸಾರಿಗೆ, ಸಬ್ ರಿಜಿಸ್ಟಾರ್, ಅರಣ್ಯ ಇಲಾಖೆ, ಹೀಗೆ ಎಲ್ಲ ಕಡೆಯೂ ಲಂಚ ರಾಕ್ಷಸ ಕುಣಿಯುತ್ತಿದ್ದಾನೆ. ಹೀಗಿದ್ದಾಗ ಸಾಮಾನ್ಯ ಜನರು ಯಾರ ಬಳಿಗೆ ಹೋಗಬೇಕು? ವಿರೋಧ ಪಕ್ಷದ ನಾಯಕರ ಬಳಿಯೂ ಬರಲು ಸಾಧ್ಯವಾಗದಿದ್ದರೆ ಜನ ಹತಾಶರಾಗಿ ಕೈಗೆ ಕಲ್ಲು, ದೊಣ್ಣೆಗಳನ್ನು ತೆಗೆದುಕೊಂಡು ಸರ್ಕಾರದ ವಿರುದ್ಧ ತಿರುಗಿ ಬೀಳುತ್ತಾರೆ ಎಂಬುದು ನೆನಪಿರಲಿ.

    ನಮ್ಮ ಸರ್ಕಾರದ ಅವಧಿಯಲ್ಲಿ ನೀವು ಒತ್ತಾಯ ಮಾಡಿದ ಪ್ರಕರಣಗಳನ್ನೆಲ್ಲ ನಾವು ಸಿಬಿಐಗೆ ವಹಿಸಿದ್ದೆವು. ಯಾಕೆಂದರೆ ನಮಗೆ ನಮ್ಮ ಮೇಲೆ ನಂಬುಗೆ ಇತ್ತು. ಆದರೆ ನಾವು ಕಳೆದ 3 ವರ್ಷಗಳಲ್ಲಿ ಎಷ್ಟು ಪ್ರಕರಣಗಳನ್ನು ನ್ಯಾಯಾಂಗ ತನಿಖೆಗೆ ಒತ್ತಾಯಿಸಿದ್ದೇವೆ. ನೀವು ಒಂದಾದರೂ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಕೊಟ್ಟಿದ್ದೀರಾ?

    40 ಪರ್ಸೆಂಟ್ ಕೇಸನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಿ. ಅವರು ತನಿಖೆ ಮಾಡಲಿ. ಗುತ್ತಿಗೆದಾರರ ಸಂಘದವರ ಬೇಡಿಕೆ ಸಂವಿಧಾನಕ್ಕೆ ವಿರುದ್ಧವಾಗಿದೆಯೆ? ಅವರು ತ್ವರಿತಗತಿಯಲ್ಲಿ ವಿಚಾರಣೆ ನಡೆಯಲಿ ಎಂದಿದ್ದಾರೆ. ನ್ಯಾಯಾಂಗ ತನಿಖೆ ಎಂಬುದು ಅಸಾಂವಿಧಾನಿಕ ಪ್ರಕ್ರಿಯೆ ಏನಲ್ಲವಲ್ಲ? ನಿಮಗೆ ಭಯ ಇಲ್ಲದಿದ್ದರೆ ಕೊಡಿ ನ್ಯಾಯಾಂಗ ತನಿಖೆಗೆ, ಅವರೂ ಸಿದ್ಧರಿದ್ದಾರೆ. ತನಿಖೆಯ ಸಂದರ್ಭದಲ್ಲಿ ಗುತ್ತಿಗೆದಾರರ ಸಂಘದವರು ಏನಾದರೂ ಸುಳ್ಳು ಹೇಳಿದ್ದರಾದರೆ ಅವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ.

    ಅದು ಬಿಟ್ಟು ನೀವು ನಮ್ಮನ್ನು ಬಿಟ್ಟು ವಿರೋಧ ಪಕ್ಷದವರ ಬಳಿಗೆ ಏಕೆ ಹೋದಿರಿ ಎಂದು ನಿರ್ಬಂಧಿಸುವುದಕ್ಕೆ, ನೀವು ಪ್ರಜಾತಂತ್ರ ವ್ಯವಸ್ಥೆಯಲ್ಲಿದ್ದೀರೊ ಅಥವಾ ಸರ್ವಾಧಿಕಾರಿ ಆಡಳಿತದಲ್ಲಿದ್ದೀರೊ? ನಿಮಗೆ ಇರುವಷ್ಟೇ ಹಕ್ಕು, ಕರ್ತವ್ಯಗಳು ನನಗೂ ಇವೆ.

    ಇನ್ನೂ ಮೋದಿಯವರ ಕನಸಿನ ಸ್ಮಾರ್ಟ್ಸಿಟಿಗಳ ಭ್ರಷ್ಟಾಚಾರ ಕೂಡ ಮುಗಿಲು ಮುಟ್ಟಿದೆ. ಸ್ಮಾರ್ಟ್ ಸಿಟಿ ಎಂದ ಮಂಗಳೂರು ಯಾಕೆ ಒಂದೇ ಮಳೆಗೆ ಮುಳುಗಿ ಹೋಗುತ್ತಿದೆ? ಬೆಂಗಳೂರಿನ ರಸ್ತೆಗಳು, ಕಾಲುವೆಗಳು ಏನಾಗಿವೆ ಎಂದು ಜನರು ನೋಡುತ್ತಿದ್ದಾರೆ.

    ವಿರೋಧ ಪಕ್ಷಗಳನ್ನು ಆಪರೇಷನ್ ಮಾಡುವ ಉದ್ದೇಶದಿಂದ ಪೆಗಾಸಸ್ ಗೂಢಾಚಾರಿಕೆ ಮಾಡಲಾಯಿತು. ಆದರೆ ಈಗ ಕೇಂದ್ರ ಸರ್ಕಾರ ಸಮಿತಿಗೆ ಸಹಕರಿಸಿಲ್ಲ ಎಂದು ವರದಿ ನೀಡಿದೆ. ಇದನ್ನು ನೋಡಿದರೆ ಕೇಂದ್ರ ದೇಶದಲ್ಲಿ ಹಿಟ್ಲರ್ ಗಿರಿ ನಡೆಸುತ್ತಿದೆ ಎಂದು ಅರ್ಥವಾಗುತ್ತದೆ. ಈ ಎಲ್ಲವನ್ನೂ ನೋಡಿದರೆ ಕಾರ್ಪೊರೇಟ್ ಪರವಾಗಿ ಕೆಲಸ ಮಾಡಲು ಹಣ ಕೊಟ್ಟು ಖರೀದಿಸಿ ರಚಿಸುತ್ತಿರುವ ಬಿಜೆಪಿ ಸರ್ಕಾರಗಳಿಂದ ಈ ದೇಶದ ಜನರಿಗೆ ಯಾವ ನ್ಯಾಯವೂ ಸಿಗುವುದಿಲ್ಲ. ದೇಶದ ಯುವಜನರು ಉದ್ಯೋಗವಿಲ್ಲದೆ, ದುಡಿಯುವ ಅವಕಾಶಗಳಿಲ್ಲದೆ ಅನಾಥರಾಗುತ್ತಾರೆ.

    ಈಗಾಗಲೇ ಅಭಿವೃದ್ಧಿಯಲ್ಲಿ ಭಾರತವು ಬಾಂಗ್ಲಾದೇಶಕ್ಕಿಂತ ಹಿಂದೆ ಬಿದ್ದಿದೆ. ತಲಾದಾಯದಲ್ಲಿ ಭಾರತಕ್ಕಿಂತ ಹಿಂದೆ ಇದ್ದ ಚೀನಾ ಇಂದು ಭಾರತಕ್ಕಿಂತ ಬಹಳ ಮುಂದೆ ಇದೆ. ಕಳೆದ ವರ್ಷದ ದಾಖಲೆಗಳಂತೆ ಭಾರತೀಯರ ತಲಾದಾಯ ಸುಮಾರು 1.5 ಲಕ್ಷ ರೂಪಾಯಿಗಳಿದ್ದರೆ. ಚೀನಾದವರ ತಲಾದಾಯವನ್ನು ರೂಪಾಯಿಗಳಿಗೆ ಪರಿವರ್ತಿಸಿದರೆ ಸುಮಾರು 10.5 ಲಕ್ಷ ರೂಪಾಯಿಗಳಷ್ಟಾಗುತ್ತದೆ. ಈಗ ಬಾಂಗ್ಲಾದ ಜನರ ತಲಾದಾಯ ಭಾರತೀಯರ ತಲಾದಾಯವನ್ನೂ ಮೀರಿ ಮುಂದಕ್ಕೆ ಹೋಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಪ್ರಧಾನಿಗೆ ಕ್ಷಮಾಪಣೆ ಪತ್ರ ನೀಡಿದ್ರೆ ಗುತ್ತಿಗೆದಾರರ ವಿರುದ್ಧದ ಮಾನನಷ್ಟ ಮೊಕದ್ದಮೆ ವಾಪಸ್ – ಮುನಿರತ್ನ

    ಪ್ರಧಾನಿಗೆ ಕ್ಷಮಾಪಣೆ ಪತ್ರ ನೀಡಿದ್ರೆ ಗುತ್ತಿಗೆದಾರರ ವಿರುದ್ಧದ ಮಾನನಷ್ಟ ಮೊಕದ್ದಮೆ ವಾಪಸ್ – ಮುನಿರತ್ನ

    ಕೋಲಾರ: 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೇರವಾಗಿ ಕ್ಷಮಾಪಣೆ ಪತ್ರ ತಲುಪಿಸಿದರೆ ಮಾತ್ರ ಮಾನನಷ್ಟ ಮೊಕದ್ದಮೆ ವಾಪಸ್ ಪಡೆಯಲಾಗುವುದು ಎಂದು ಸಚಿವ ಮುನಿರತ್ನ ಹೇಳಿದ್ದಾರೆ.

    ಕೋಲಾರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ನಾನು ಹೇಳಿದಂತೆ ಗುತ್ತಿಗೆದಾರರ ವಿರುದ್ಧ ಮಾನನಷ್ಟ ಮೊಕದ್ದಮ್ಮೆ ಹೂಡುತ್ತಿದ್ದೇನೆ. ಇಂದು ಭಾನುವಾರ ರಜೆಯ ದಿನವಾದ್ದರಿಂದ ನಾಳೆ ಬೆಳಗ್ಗೆ 11 ಗಂಟೆಗೆ ಮಾನನಷ್ಟ ಮೊಕದ್ದಮ್ಮೆ ಹೂಡಲಿದ್ದು, ಸಂಘದವರಿಗೆ ನೋಟಿಸ್ ನೀಡಲಾಗುವುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಗುತ್ತಿಗೆದಾರರ ಸಂಘ, ಕೆಂಪಣ್ಣ ವಿರುದ್ಧ 50 ಕೋಟಿ ಮಾನನಷ್ಟ ಮೊಕದ್ದಮೆ: ಮುನಿರತ್ನ

    ಒಂದು ವೇಳೆ ಗುತ್ತಿಗೆದಾರರು ರಾಜಿಗೆ ಬಂದ್ರೆ ಪತ್ರದ ಮೂಲಕ ಕ್ಷಮಾಪಣೆ ಪತ್ರ ನೀಡಬೇಕು. ಆರೋಪ ಮಾಡಿದವರು ಪ್ರಧಾನಿಗಳಿಗೆ ನೇರವಾಗಿ ಕ್ಷಮಾಪಣೆ ಪತ್ರ ತಲುಪಿಸಬೇಕು. ಅಲ್ಲದೇ ಲೋಕಾಯುಕ್ತ ಹಾಗೂ ಗವರ್ನರ್‌ಗೆ ತಮ್ಮ ಬಳಿಯಿರುವ ದಾಖಲೆಗಳನ್ನ ನೀಡಿದ್ರೆ ಕೇಸ್ ವಾಪಸ್ ಪಡೆಯಲಾಗುವುದು ಎಂದಿದ್ದಾರೆ. ಇದನ್ನೂ ಓದಿ: ಇಂಡಿಯಾ- ಪಾಕಿಸ್ತಾನ ಹೈವೋಲ್ಟೇಜ್ ಮ್ಯಾಚ್‌- ಭಾರತದ ಗೆಲುವಿಗೆ ದರ್ಗಾದಲ್ಲಿ ಪ್ರಾರ್ಥನೆ 

    ನೋಟಿಸ್ ಸರ್ವ್ ಮಾಡಿದ 8 ದಿನಗಳಲ್ಲಿ ದಾಖಲೆ ನೀಡಿದ್ರೆ ಗುತ್ತಿಗೆದಾರರ ಹೇಳಿಕೆ ಆಧರಿಸಿ ಕ್ರಮ ಕೈಗೊಳ್ಳುವ ಕುರಿತು ತೀರ್ಮಾನ ಮಾಡಲಾಗುವುದು. ಒಂದು ವೇಳೆ ದಾಖಲೆ ಒದಗಿಸದಿದ್ದರೆ ಮಾನನಷ್ಟ ಮೊಕದ್ದೊಮ್ಮೆ ಜೊತೆಗೆ ಕ್ರಿಮಿನಲ್ ಮೊಕದ್ದಮೆಯನ್ನೂ ಹೂಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

    ಕೋಲಾರದಲ್ಲಿ ನಾನು ಹೇಳಿದಂತೆ ಕಾಮಗಾರಿಗಳನ್ನ ಪರಿಶೀಲನೆ ಮಾಡಲಾಗುವುದು. ಆಯಾ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲೇ ಮುಂದಿನ ವಾರದಲ್ಲಿ ಕಾಮಗಾರಿ ಪರಿಶೀಲನೆ ನಡೆಸಲಾಗುತ್ತದೆ. ಅಲ್ಲದೇ ಡಿಸಿಸಿ ಬ್ಯಾಂಕ್ ಅಕ್ರಮ ಹಾಗೂ ಕಳಪೆ ರಸ್ತೆಗಳ ವಿರುದ್ಧವೂ ತನಿಖೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.

    ವಿರೋಧ ಪಕ್ಷದ ಮುಖಂಡರಿಂದ ರಾಜೀನಾಮೆಗೆ ಒತ್ತಾಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ವಿರೋಧ ಪಕ್ಷಗಳ ಬಳಿ ಏನಾದ್ರು ದಾಖಲೆಗಳಿದ್ದರೆ ಕೊಡಲಿ. ಅದು ಬಿಟ್ಟು ರಾಜೀನಾಮೆ ಕೇಳುವ ಹಕ್ಕು ಅವರಿಗಿಲ್ಲ ಎಂದು ತಿರುಗೇಟು ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಗುತ್ತಿಗೆದಾರರ ಸಂಘ, ಕೆಂಪಣ್ಣ ವಿರುದ್ಧ 50 ಕೋಟಿ ಮಾನನಷ್ಟ ಮೊಕದ್ದಮೆ: ಮುನಿರತ್ನ

    ಗುತ್ತಿಗೆದಾರರ ಸಂಘ, ಕೆಂಪಣ್ಣ ವಿರುದ್ಧ 50 ಕೋಟಿ ಮಾನನಷ್ಟ ಮೊಕದ್ದಮೆ: ಮುನಿರತ್ನ

    ಬೆಂಗಳೂರು: ಗುತ್ತಿಗೆದಾರರ ಸಂಘದವರು ಸುಖಾಸುಮ್ಮನೆ 40 ಪರ್ಸೆಂಟ್‌ ಕಮಿಷನ್‌ ಆರೋಪ ಹೊರಿಸುತ್ತಿದ್ದಾರೆ. ಈ ಕೂಡಲೇ ಅವರು ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಮಾನನಷ್ಟ ಮೊಕದ್ದಮೆ ಹೂಡಲಾಗುವುದು ಎಂದು ಸಚಿವ ಮುನಿರತ್ನ ಅವರು ಎಚ್ಚರಿಸಿದರು.

    ಈ ಸಂಬಂಧ ಸುದ್ದಿಗೋಷ್ಠಿ ನಡೆಸಿದ ಅವರು, ಕಳೆದ 14 ತಿಂಗಳಿನಿಂದ ಗುತ್ತಿಗೆದಾರರ ಸಂಘದವರು ಸರ್ಕಾರದ ವಿರುದ್ಧ 40% ಕಮಿಷನ್‌ ಆರೋಪ ಮಾಡಿಕೊಂಡು ಬರುತ್ತಿದ್ದಾರೆ. ಈ ಆರೋಪದಲ್ಲಿ ನನ್ನ ಹೆಸರನ್ನು ಕೂಡ ಉಲ್ಲೇಖಿಸಿದ್ದಾರೆ. ಯಾವುದೇ ದಾಖಲೆ ಬಿಡುಗಡೆ ಮಾಡದೆಯೇ ಪ್ರಧಾನ ಮಂತ್ರಿಗೆ ಪತ್ರ ಬರೆದಿರುವುದಾಗಿ ಹೇಳಿಕೊಂಡು ಬರುತ್ತಿದ್ದಾರೆ. ನಿನ್ನೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, ಚರ್ಚಿಸಿ ನಂತರ ಪತ್ರಿಕಾ ಹೇಳಿಕೆ ನೀಡಿದ್ದಾರೆ. ಎಲ್ಲವನ್ನೂ ನಾನು ಗಮನಿಸಿದ್ದೇನೆ. ಇವರ ಆರೋಪಗಳೆಲ್ಲ ಸತ್ಯಕ್ಕೆ ದೂರವಾದದ್ದು ಎಂದು ತಿಳಿಸಿದರು. ಇದನ್ನೂ ಓದಿ: ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕಿಲ್ಲ ಅವಕಾಶ – ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಹೈಕೋರ್ಟ್ ಆದೇಶ

    ಸಿದ್ದರಾಮಯ್ಯ ಅವರ ಮಾರ್ಗದರ್ಶನದಲ್ಲಿ ಇದೆಲ್ಲ ನಡೆದಿದೆ. ಇದು ಹೀಗೆಯೇ ಮುಂದುವರಿದರೆ ಮುಂದೆ ಕಾನೂನು ರೀತಿಯಲ್ಲಿ ಕ್ರಮ ಆಗುತ್ತದೆ. ಕಮಿಷನ್‌ ಆರೋಪಕ್ಕೆ ಸಂಬಂಧಿಸಿದಂತೆ ಅವರಲ್ಲಿ ದಾಖಲೆ ಇದ್ದರೆ ಬಿಡುಗಡೆ ಮಾಡಲಿ. ತಪ್ಪಿತಸ್ಥರಿಗೆ ಶಿಕ್ಷೆ ಆಗುವ ನಿಟ್ಟಿನಲ್ಲಿ ಹೋರಾಟ ಮಾಡಲಿ ಎಂದು ಗುತ್ತಿಗೆದಾರರ ಸಂಘದ ವಿರುದ್ಧ ಕಿಡಿಕಾರಿದರು.

    ಸುಮ್ಮನೆ ನಮ್ಮ ಮೇಲೆ ಇಲ್ಲದ ಆರೋಪ ಹೊರಿಸುತ್ತಿದ್ದಾರೆ. ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿ ಅವರು ಕ್ಷಮೆ ಕೋರಬೇಕು. ಕ್ಷಮೆ ಕೇಳಿಲಿಲ್ಲ ಅಂದರೆ 7 ದಿನಗಳಲ್ಲಿ ಕೋರ್ಟ್‌ನಲ್ಲಿ ಎರಡು ದೂರು ನೀಡುತ್ತಿದ್ದೇನೆ. ಕೆಂಪಣ್ಣ ಅವರ ಮೇಲಷ್ಟೇ ಅಲ್ಲ. ಇಡೀ ಗುತ್ತಿಗೆದಾರರ ಸಂಘದ ಮೇಲೆ ಕೇಸ್‌ ಹಾಕುತ್ತಿದ್ದೇನೆ. 50 ಕೋಟಿ ಮಾನನಷ್ಟ ಮೊಕದ್ದಮೆ ಹಾಗೂ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: BJPಯವರ ಭ್ರಷ್ಟಾಚಾರ ನೋಡಿದ್ರೆ ರಾಜ್ಯಕ್ಕೆ 10-15 ಪರಪ್ಪನ ಅಗ್ರಹಾರ ಜೈಲು ಬೇಕು: HDK

    ಕೋರ್ಟ್‌ನಲ್ಲಿ ಬಂದು ತಮ್ಮ ಆರೋಪವನ್ನು ಸಾಬೀತು ಮಾಡಲಿ. ನಾವು ತಪ್ಪು ಮಾಡಿದ್ದರೆ ಶಿಕ್ಷೆ ಅನುಭವಿಸಲು ಸಿದ್ಧ. ಅವರ ಆರೋಪ ಸುಳ್ಳಾಗಿದ್ದರೆ ಖಂಡಿತಾ ಅವರು ಶಿಕ್ಷೆ ಅನುಭವಿಸಬೇಕಾಗುತ್ತದೆ. ಅವರಿಗೆ ಎಲ್ಲಿ ಅನುಕೂಲ ಆಗುತ್ತದೆಯೋ ಅಲ್ಲೇ ದೂರು ನೀಡಿ, ದಾಖಲೆಗಳನ್ನು ಒದಗಿಸಲಿ ಎಂದರು.

    Live Tv
    [brid partner=56869869 player=32851 video=960834 autoplay=true]

  • ಪರ್ಸೆಂಟೇಜ್ ಕೊಡದಿದ್ದರೆ ಗುದ್ದಲಿ ಪೂಜೆನೂ ಮಾಡಲ್ಲ: ಸಿದ್ದಣ್ಣ ಶೇಗಜಿ

    ಪರ್ಸೆಂಟೇಜ್ ಕೊಡದಿದ್ದರೆ ಗುದ್ದಲಿ ಪೂಜೆನೂ ಮಾಡಲ್ಲ: ಸಿದ್ದಣ್ಣ ಶೇಗಜಿ

    ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಸೇರಿದಂತೆ ಎಲ್ಲ ಪಕ್ಷದ ಶಾಸಕರೂ ಪರ್ಸೆಂಟೇಜ್‌ಗೆ ಇಳಿದಿದ್ದಾರೆ. ಅವರಿಗೆ ಪರ್ಸೆಂಟೇಜ್ ಕೊಡದೇ ಇದ್ದರೆ ಗುದ್ದಲಿ ಪೂಜೆನೂ ಮಾಡೋದಿಲ್ಲ ಎಂದು ಗುತ್ತಿಗೆದಾರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಸಿದ್ದಣ್ಣ ಶೇಗಜಿ ದೂರಿದ್ದಾರೆ.

    ಕಲಬುರಗಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಅವರು, ಬಿಜೆಪಿ ಶಾಸಕರು ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿಗೆ ಕಳಂಕ ತರುತ್ತಿದ್ದಾರೆ. ರಾಜ್ಯದಲ್ಲಿ 22 ಸಾವಿರ ಕೋಟಿ ರೂ. ಗುತ್ತಿಗೆದಾರರ ಬಿಲ್ ಬಾಕಿಯಿತ್ತು. ಬಜೆಟ್ ಅನುದಾನದಲ್ಲಿ 6 ಸಾವಿರ ಕೋಟಿ ರೂ. ಮಾತ್ರ ನೀಡಿದ್ದಾರೆ. ಇನ್ನೂ 18 ಸಾವಿರ ಕೋಟಿ ರೂ. ಬಿಲ್ ಬಾಕಿಯಿದೆ. ಆದರೂ ಟೆಂಡರ್ ಕರೆಯುತ್ತಲೇ ಇರುವುದೇಕೆ? ಮೊದಲು ಅನುದಾನ ಕೊಡಲಿ ಎಂದು ನಾವು ಎಷ್ಟೇ ಮನವಿ ಮಾಡಿದರೂ ಮುಖ್ಯಮಂತ್ರಿಗಳೂ ಮಾನ್ಯತೆ ಕೊಡುತ್ತಿಲ್ಲ. ಆದ್ದರಿಂದ ಗುತ್ತಿಗೆದಾರರು ಹೋರಾಟ ಕೈಗೊಳ್ಳುವುದು ಅನಿವಾರ್ಯವಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪಕ್ಷಕ್ಕೆ ಮುಜುಗರ ತರಿಸಲ್ಲ, ರಾಜೀನಾಮೆ ಕೊಡ್ತೀನಿ: ಈಶ್ವರಪ್ಪ

    PRESSMEET (1)

    ಯಾವುದೇ ಗುತ್ತಿಗೆ ಪಡೆದರೂ ಶಾಸಕರಿಗೆ 10 ಪರ್ಸೆಂಟ್ ಕಮಿಷನ್ ಕೊಡಬೇಕಾಗಿದೆ. ಮುಖ್ಯ ಎಂಜಿನಿಯರ್, ಶಾಸಕರು, ಸಚಿವರು, ಕಡತಕ್ಕೆ ಅನುಮೋದನೆ ಕೊಡಿಸುವ ಅಧಿಕಾರಿಗಳು ಹೀಗೆ ಎಲ್ಲ ಹಂತದ ಅಧಿಕಾರಿಗಳವರೆಗೆ 30 ರಿಂದ 40 ಪರ್ಸೆಂಟ್ ಕಮಿಷನ್ ಕೊಡಬೇಕಾಗಿದೆ. ಡಾಂಬರು, ಸೀಮೆಂಟ್ ಸೇರಿದಂತೆ ಇತರ ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗಿರುವಾಗ ಕಮಿಷನ್ ಕೊಟ್ಟು ಗುಣಮಟ್ಟದ ಕಾಮಗಾರಿ ಮಾಡುವುದಾದರೂ ಹೇಗೆ ಎಂದು ಅವರು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಮುಖಾಮುಖಿ ಭೇಟಿಯಾದ ನಂತರವಷ್ಟೇ ಈಶ್ವರಪ್ಪ ರಾಜೀನಾಮೆ ನಿರ್ಧಾರ: ಬೊಮ್ಮಾಯಿ

    Eshwarappa

    ಖಜಾನೆ ಕಳ್ಳರನ್ನು ಹಿಡಿದ್ದೇವೆ: ಕಲ್ಯಾಣ ಕರ್ನಾಟಕದ ಶೇ.80ರಷ್ಟು ಶಾಸಕರು 10 ಪರ್ಸೆಂಟ್ ಕಮಿಷನ್ ಇಲ್ಲದೆ, ಗುದ್ದಲಿ ಪೂಜೆನೂ ಮಾಡಲ್ಲ. ಹೀಗಾಗಿ ಅನೇಕ ಕಾಮಗಾರಿಗಳು ಸುಮಾರು 8 ತಿಂಗಳಿನಿಂದ ಬಾಕಿ ಉಳಿದಿವೆ. ಇವರೊಂದಿಗೆ ಕರ್ನಾಟಕದ ಖಜಾನೆ ನುಂಗುವ ಕಳ್ಳ ಅಧಿಕಾರಿಗಳನ್ನು ನಾವು ಹಿಡಿದಿದ್ದೇವೆ. ಹಿಡಿದುಕೊಟ್ಟರೂ ಮುಖ್ಯಮಂತ್ರಿಗಳು ಏಕೆ ಶಿಕ್ಷೆ ವೀಧಿಸುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಈಶ್ವರಪ್ಪನನ್ನು ಸಮರ್ಥಿಸಿಕೊಂಡ ಸಿ.ಟಿ ರವಿ, ಗೋಪಾಲಯ್ಯ

    ಗೆಟೌಟ್ ಎನ್ನುತ್ತಿದ್ದ ಈಶ್ವರಪ್ಪ: ನಮ್ಮದು ಯಾವಾಗಲೂ ಬಿಲ್ ಬಂದಿಲ್ಲ ಎನ್ನುವುದೊಂದೇ ಬೇಡಿಕೆ. ಈಶ್ವರಪ್ಪ ಅವರ ಬಳಿ ಬಿಲ್ ಕೊಡಿಸುವಂತೆ ಮನವಿ ಮಾಡಲು ಹೊರಟರೆ ಮರ್ಯಾದೆನೇ ಕೊಡ್ತಿರಲಿಲ್ಲ. ಗೆಟೌಟ್ ಎಂದು ಗದರುತ್ತಿದ್ದರು. ಬಿಲ್‌ಗಾಗಿ ಅಲೆದು ನಾವೂ ಸುಸ್ತಾಗುತ್ತಿದ್ದೆವು ಎಂದು ಹೇಳಿಕೊಂಡ ಅವರು, ಸಂತೋಷ್ ಸಾವಿನ ಬಗ್ಗೆ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.