Tag: Karnatakada Aliya

  • ಪ್ರಥಮ್ ನಟನೆಯ ‘ಕರ್ನಾಟಕದ ಅಳಿಯ’ನ ಹಾಟ್ ಸಾಂಗ್ ರಿಲೀಸ್

    ಪ್ರಥಮ್ ನಟನೆಯ ‘ಕರ್ನಾಟಕದ ಅಳಿಯ’ನ ಹಾಟ್ ಸಾಂಗ್ ರಿಲೀಸ್

    ಮುದ್ದಿನ ಅಳಿಯ ಚಿತ್ರದ ನಾಯಕ ಶಶಿಕುಮಾರ್ ಅವರು ಬಿಗ ಬಾಸ್ ಖ್ಯಾತಿಯ ಪ್ರಥಮ್ (Pratham) ನಿರ್ದೇಶಿಸಿ, ನಾಯಕನಾಗಿ ನಟಿಸಿರುವ ‘ಕರ್ನಾಟಕದ ಅಳಿಯ’ (Karnatakada Aliya) ಚಿತ್ರದ ‘ಮನಸಿಗೆ ಹಿಡಿಸಿದನು ಇವನು’ ಹಾಡನ್ನು (Song)  ಬಿಡುಗಡೆ ಮಾಡಿದರು. ಕೆ.ರಾಮನಾರಾಯಣ್ ಈ ಹಾಡನ್ನು ಬರೆದಿದ್ದು, ಪ್ರದ್ಯೋತನ್ ಸಂಗೀತ ನೀಡಿದ್ದಾರೆ‌. ಅದಿತಿ ಸಾಗರ್ ಹಾಡಿದ್ದಾರೆ.

    ನಮ್ಮಲ್ಲಿ ಮುದ್ದಿನ ಅಳಿಯ, ಗಡಿಬಿಡಿ ಅಳಿಯ ಹೀಗೆ ಸಾಕಷ್ಟು ಜನ ಅಳಿಯಂದರಿದ್ದೀವಿ. ಈಗ ಪ್ರಥಮ್ ‘ಕರ್ನಾಟಕದ ಅಳಿಯ’ ಆಗಿದ್ದಾರೆ. ಹಿರಿಯ ನಟ ದ್ವಾರಕೀಶ್ ಅವರು ಹಾಡು ಬಿಡುಗಡೆಗೆ ಬರುತ್ತಾರೆ ಅಂದಿದ್ದರು. ಆದರೆ ಅನಾರೋಗ್ಯದ ಕಾರಣದಿಂದಾಗಿ ಅವರು ಬಂದಿಲ್ಲ. ಆದರೆ ವಿಡಿಯೋ ಮೂಲಕ ಹಾರೈಸಿದ್ದಾರೆ. ಅವರು ಹೇಳಿರುವ ಪ್ರೀತಿಯ ಮಾತುಗಳಿಗೆ ನಾನು ಆಭಾರಿ. ಸದ್ಯದಲ್ಲೇ ಅವರನ್ನು ಭೇಟಿಯಾಗುತ್ತೇನೆ. ಇಂದು ಬಿಡುಗಡೆಯಾಗಿರುವ ಈ ಹಾಡು ಬಹಳ ಇಂಪಾಗಿದೆ. ಚಿತ್ರ ಕೂಡ ಎಲ್ಲರ ಮನ ಗೆಲ್ಲಲಿ ಎಂದು ನಟ ಶಶಿಕುಮಾರ್ ಹಾರೈಸಿದರು. ಇದನ್ನೂ ಓದಿ:ದೊಡ್ಮನೆ ಹೀರೋಗೆ ಮೇಘಾ ಶೆಟ್ಟಿ ಹೀರೋಯಿನ್

    ಕರ್ನಾಟಕದ ಅಳಿಯ ಚಿತ್ರ ತೆರೆಗೆ ಬರಲು ಸಿದ್ದವಾಗಿದೆ ಎಂದು ಮಾತು ಆರಂಭಿಸಿದ ಪ್ರಥಮ್,  ಇಂದು ಹಾಡು ಬಿಡುಗಡೆಯಾಗಿದೆ. ವಿದೇಶದಲ್ಲಿ ಈ ಹಾಡಿನ ಚಿತ್ರೀಕರಣ ನಡೆದಿದೆ. ಅಣಜಿ ನಾಗರಾಜ್ ಅವರ ಛಾಯಾಗ್ರಹಣ ಹಾಡಿನ ಅಂದವನ್ನು ಮತ್ತಷ್ಟು ಹೆಚ್ಚಿಸಿದೆ. ಪ್ರದ್ಯೋತನ್ ಸಂಗೀತ ನಿರ್ದೇಶನದಲ್ಲಿ ರಾಮನಾರಾಯಣ್ ಬರೆದಿರುವ ಈ ಹಾಡನ್ನು ಅರುಣ್ ಸಾಗರ್ ಪುತ್ರಿ ಅದಿತಿ ಸಾಗರ್ ಸುಶ್ರಾವ್ಯವಾಗಿ ಹಾಡಿದ್ದಾರೆ. ಇದೊಂದು ವಾಮಾಚಾರದ ಕುರಿತಾದ ಸಿನಿಮಾವಾಗಿದ್ದು, ಮೂವತ್ತು ವರ್ಷಗಳ ಹಿಂದೆ “ತುಳಸಿದಳ” ಎಂಬ ಸಿನಿಮಾ ಬಂದಿತ್ತು. ಆನಂತರ ದೀರ್ಘವಾಗಿ ವಾಮಾಚಾರದ ಕುರಿತು ಬಂದಿರುವ ಸಿನಿಮಾ ಇದೇ ಇರಬಹುದು.  ನಾನು ನಿರ್ದೇಶನದೊಂದಿಗೆ ನಾಯಕನಾಗೂ ನಟಿಸಿದ್ದೇನೆ. ರಾಘವೇಂದ್ರ ರಾಜಕುಮಾರ್ ಅವರು ನನ್ನ ತಂದೆ ಪಾತ್ರದಲ್ಲಿ ಅಭಿನಯಿಸಿದ್ದಾರೆ‌. ಅಕ್ಷಿತ ಬೋಪಯ್ಯ, ಜ್ಯೋತಿ,  ಸ್ಪರ್ಶ ರೇಖಾ, ಓಂಪ್ರಕಾಶ್ ರಾವ್, ರಾಮಕೃಷ್ಣ, ಕೋಟೆ ಪ್ರಭಾಕರ್, ಶ್ರೀಧರ್, ವಿ.ಮನೋಹರ್, ರಮೇಶ್ ಭಟ್ ಮುಂತಾದವರು ತಾರಾಬಳಗದಲ್ಲಿದ್ದಾರೆ ಎಂದು ತಿಳಿಸಿದರು.

    ನಾಯಕಿ ಜ್ಯೋತಿ,  ನಟ ಕೋಟೆ ಪ್ರಭಾಕರ್, ಹಾಡು ಬರೆದಿರುವ ರಾಮನಾರಾಯಣ್ ಹಾಗೂ ಛಾಯಾಗ್ರಾಹಕ ಅಣಜಿ ನಾಗರಾಜ್ ಮುಂತಾದವರು ಚಿತ್ರದ ಕುರಿತು ಮಾಹಿತಿ ನೀಡಿದರು. ಅರುಣ್ ಸಾಗರ್ ಚಿತ್ರಕ್ಕೆ ಶುಭ ಹಾರೈಸಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪ್ರಥಮ್ ಜೊತೆ ರಾಘಣ್ಣನ ಗಲ್ಲಿ ಕ್ರಿಕೆಟ್- `ಕರ್ನಾಟಕದ ಅಳಿಯ’ ಸಿನಿಮಾ ಶೂಟಿಂಗ್ ನೋಟ

    ಪ್ರಥಮ್ ಜೊತೆ ರಾಘಣ್ಣನ ಗಲ್ಲಿ ಕ್ರಿಕೆಟ್- `ಕರ್ನಾಟಕದ ಅಳಿಯ’ ಸಿನಿಮಾ ಶೂಟಿಂಗ್ ನೋಟ

    ಸ್ಯಾಂಡಲ್ ವುಡ್ ನ ದೊಡ್ಮನೆ ಮಗ ನಟ, ನಿರ್ಮಾಪಕ ರಾಘವೇಂದ್ರ ರಾಜ್‍ಕುಮಾರ್ ಇತ್ತೀಚೆಗಷ್ಟೇ ಸಿನಿಮಾ ಶೂಟಿಂಗ್ ವೇಳೆ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೆಲ ದಿನ ಚಿಕಿತ್ಸೆ ಪಡೆದು ಚೇತರಿಸಿಕೊಂಡ ಅವರು, ಬಳಿಕ ಡಿಸ್ಚಾರ್ಜ್ ಆಗಿ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಇದೀಗ ಆರೋಗ್ಯವಾಗಿರುವ ರಾಘಣ್ಣ ಮೊದಲಿನಂತೆ ಶೂಟಿಂಗ್ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದಾರೆ.

    ಯುವ ನಿರ್ದೇಶಕ ಜೈ ಶೇಖರ್ ಆ್ಯಕ್ಷನ್ ಕಟ್ ಹೇಳಿರುವ ಪ್ರಥಮ್ ಹೀರೋ ಆಗಿ ನಟಿಸುತ್ತಿರುವ ಕರ್ನಾಟಕದ ಅಳಿಯ ಸಿನಿಮಾದ ಶೂಟಿಂಗ್ ನಲ್ಲಿ ರಾಘವೇಂದ್ರ ರಾಜ್‍ಕುಮಾರ್ ಭಾಗಿಯಾಗಿದ್ದಾರೆ. ಶೂಟಿಂಗ್ ಮಾತ್ರವಲ್ಲದೇ ಸಖತ್ ಆಗಿ ಕ್ರಿಕೆಟ್ ಆಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

    ಸತತ ಮೂರು ದಿನಗಳಿಂದ ಶೂಟಿಂಗ್ ಸೆಟ್ ನಲ್ಲಿ ಕ್ರಿಕೆಟ್ ಆಡುತ್ತಿರುವ ರಾಘವೇಂದ್ರ ರಾಜ್‍ಕುಮಾರ್ ಅವರಿಗೆ ಒಳ್ಳೆ ಹುಡ್ಗ ಪ್ರಥಮ್ ಸಾಥ್ ಕೊಟ್ಟಿದ್ದಾರೆ. ಸೂಪರ್ ಬ್ಯಾಟಿಂಗ್ ಮಾಡುತ್ತಿರುವ ರಾಘಣ್ಣನ ಎನರ್ಜಿ ಕಂಡು ಪ್ರಥಮ್ ಫುಲ್ ಖುಷಿಯಾಗಿದ್ದಾರೆ. ಶೂಟಿಂಗ್ ನಲ್ಲಿ ಪಾಲ್ಗೊಂಡಿರುವ ರಾಘಣ್ಣ ಆರೋಗ್ಯ ವಿಚಾರಿಸಲು ಪುನೀತ್ ರಾಜ್‍ಕುಮಾರ್ ದಿನಕ್ಕೆ 20 ಬಾರಿ ಕಾಲ್ ಮಾಡುತ್ತಾರಂತೆ.

    ಅಂದ ಹಾಗೇ ಕರ್ನಾಟಕದ ಅಳಿಯ ಸಿನಿಮಾದಲ್ಲಿ ರಾಘಣ್ಣ ವಿಶೇಷ ಪಾತ್ರವೊಂದರಲ್ಲಿ ನಟಿಸುತ್ತಿದ್ದಾರೆ. ಈಗಾಗಲೇ ಈ ಸಿನಿಮಾದ ಟೀಸರ್ ರಿಲೀಸ್ ಆಗಿದ್ದು, ಸಾಕಷ್ಟು ಮೆಚ್ಚುಗೆಗೂ ಪಾತ್ರವಾಗಿದೆ. ನಟ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಕೂಡ ಟೀಸರ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು.