Tag: #KarnatakaStateBudget2024

  • ಐದು ಗ್ಯಾರಂಟಿ ಯೋಜನೆ ಪೂರೈಸಲು ಸರ್ಕಾರದ ಖಜಾನೆಯಲ್ಲಿ ಹಣವಿಲ್ಲ: ನಿಖಿಲ್

    ಐದು ಗ್ಯಾರಂಟಿ ಯೋಜನೆ ಪೂರೈಸಲು ಸರ್ಕಾರದ ಖಜಾನೆಯಲ್ಲಿ ಹಣವಿಲ್ಲ: ನಿಖಿಲ್

    ರಾಮನಗರ: ಐದು ಗ್ಯಾರಂಟಿ  (Gurantee) ಯೋಜನೆಯನ್ನು ಪೂರೈಸಲು ಸರ್ಕಾರದ ಖಜಾನೆಯಲ್ಲಿ ಹಣ ಇಲ್ಲ ಎಂದು ಜಿಡಿಎಸ್ (JDS) ಯುವನಾಯಕ ನಿಖಿಲ್ ಕುಮಾರಸ್ವಾಮಿ (Nikhil Kumaraswamy)  ಟೀಕಿಸಿದ್ದಾರೆ.

    ಸಿದ್ದರಾಮಯ್ಯ (Siddaramaiah)  ಬಜೆಟ್‌ನಲ್ಲಿ ರಾಮನಗರ (Ramanagara)  ಜಿಲ್ಲೆ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡದ ವಿಚಾರದ ಬಗ್ಗೆ ಮಾತನಾಡಿ, ಐದು ಗ್ಯಾರಂಟಿ ಯೋಜನೆ ಪೂರೈಸಲು ಸರ್ಕಾರ ಖಜಾನೆಯಲ್ಲಿ ಹಣ ಇಲ್ಲ. ಇಂತಹ ಪರಿಸ್ಥಿತಿಗೆ ಕಾಂಗ್ರೆಸ್ ಪಕ್ಷ ಸಿಲುಕಿದೆ. ಹಾಗಾಗಿ ಬಜೆಟ್ (Budget)  ಬಗ್ಗೆ ಆಶ್ಚರ್ಯ ಪಡುವಂತದ್ದು ಏನು ಇಲ್ಲ. ರಾಮನಗರದಲ್ಲಿ ಹಿಂದಿನ ಶಾಸಕರು ನೀಡಿದ ಅನುದಾನವನ್ನೆ ಇಟ್ಟುಕೊಂಡು ಈಗಿನ ಶಾಸಕರು ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ಹೋರಾಟ ಮಾಡಿ ಯಾವುದೇ ಅನುದಾನ ತಂದಿಲ್ಲ. ರಾಮನಗರ ಜಿಲ್ಲೆ ಹಾಗೂ ತಾಲೂಕು ಅಭಿವೃದ್ಧಿಗೆ ಸ್ಥಳೀಯ ಶಾಸಕರು ಮತ್ತು ಕಾಂಗ್ರೆಸ್ ಪಕ್ಷ ಗಮನಹರಿಸಿಲ್ಲ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ:  ಶಾಲಾ-ಕಾಲೇಜುಗಳ ಅಭಿವೃದ್ಧಿಗೆ 850 ಕೋಟಿ ರೂ. ಅನುದಾನ; ಸಿಎಂಗೆ ಮಧು ಬಂಗಾರಪ್ಪ ಅಭಿನಂದನೆ

    ಲೋಕಸಭಾ ಚುನಾವಣೆ ಸಿದ್ಧತೆ ಬಗ್ಗೆ ಮಾತನಾಡಿ, ರಾಜ್ಯದ 28 ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿ ಶೀಘ್ರದಲ್ಲೇ ಬಿಡುಗಡೆ ಆಗಲಿದೆ. ಪಟ್ಟಿ ಬಿಡುಗಡೆ ಸಂಬಂಧ ಬಿಜೆಪಿ ವರಿಷ್ಠರು ದೆಹಲಿಗೆ ಕರೆದಿದ್ದಾರೆ. ನಾನೂ ಕೂಡಾ ದೆಹಲಿಗೆ ಹೋಗುತ್ತಿದ್ದೀನಿ. ಬಿಜೆಪಿ ವರಿಷ್ಠರ ಜೊತೆ ಮಾತುಕತೆ ನಡೆಸಿ ತೀರ್ಮಾನ ಮಾಡ್ತೀವಿ. ಹಳೇ ಮೈಸೂರು ಭಾಗದ ಎಲ್ಲಾ ಮುಖಂಡರನ್ನ ಕರೆದು ಸಭೆ ಮಾಡಿದ್ದೇನೆ. ಶೀಘ್ರದಲ್ಲೇ ಹಳೇ ಮೈಸೂರು ಭಾಗದ ಎಲ್ಲಾ ತಾಲೂಕುಗಳಿಗೂ ಪ್ರವಾಸ ಮಾಡುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರತಿಭಟನಾ ನಿರತರ ಮೇಲೆ ಮತ್ತೆ ಅಶ್ರುವಾಯು ದಾಳಿ – ಹೃದಯಾಘಾತದಿಂದ ರೈತ ಸಾವು!

    ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಗೆಲುವಿಗೆ ತಂತ್ರಗಾರಿಕೆ ಮಾಡ್ತೀವಿ. ನಾನು ಮಂಡ್ಯದಿಂದ ಸ್ಪರ್ಧೆ ಮಾಡಬೇಕು ಎನ್ನುವ ಭಾವನೆಯನ್ನ ಕಾರ್ಯಕರ್ತರು ವ್ಯಕ್ತಪಡಿಸಿದ್ದಾರೆ. ಕಳೆದ ಚುನಾವಣೆಯಲ್ಲಿ 5 ಲಕ್ಷಕ್ಕಿಂತ ಅಧಿಕ ಮತಗಳನ್ನ ಕೊಟ್ಟಿದ್ದರು. ಹಾಗಾಗಿ ಮಂಡ್ಯದ ಜನತೆಗೆ ನಾನು ಚಿರಋಣಿ ಆಗಿ ಇರ್ತೀನಿ. ಅದರೆ ಮೋದಿಯವರನ್ನ ಮತ್ತೊಮ್ಮೆ ಪ್ರಧಾನಿ ಮಾಡಲು ಹೋರಾಟ ಮಾಡಬೇಕಿದೆ. ರಾಜ್ಯದ 28 ಕ್ಷೇತ್ರದಲ್ಲೂ ಮೈತ್ರಿ ಅಭ್ಯರ್ಥಿಗಳನ್ನ ಗೆಲ್ಲಿಸಿ ಮೋದಿಗೆ ಉಡುಗೊರೆ ನೀಡುತ್ತೀವಿ. ನನ್ನ ಸ್ಪರ್ಧೆ ಬಗ್ಗೆ ಮುಂದೆ ಚರ್ಚೆ ಮಾಡೋಣ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಇದನ್ನೂ ಓದಿ:  ಬಜೆಟ್ ಮೊತ್ತ ನೋಡಿ ಬಿಜೆಪಿಗರಿಗೆ ಕುಳಿತುಕೊಳ್ಳಲು ಆಗದೆ ಕೈ ಹಿಸುಕಿಕೊಂಡಿದ್ದಾರೆ: ಡಿಕೆಶಿ

  • ರಾಜ್ಯದ 7 ಕೋಟಿ ಜನರ ಕಿವಿ ಮೇಲೆ ಹೂ ಮುಡಿಸಿದ್ದಾರೆ: ಹೆಚ್‌ಡಿಕೆ ಕಿಡಿ

    ರಾಜ್ಯದ 7 ಕೋಟಿ ಜನರ ಕಿವಿ ಮೇಲೆ ಹೂ ಮುಡಿಸಿದ್ದಾರೆ: ಹೆಚ್‌ಡಿಕೆ ಕಿಡಿ

    ಬೆಂಗಳೂರು: ಸಿದ್ದರಾಮಯ್ಯ (Siddaramaiah) ಮಂಡಿಸಿದ ದಾಖಲೆಯ 15ನೇ ಬಜೆಟ್ ರಾಜ್ಯದ 7 ಕೋಟಿ ಜನರ ಕಿವಿ ಮೇಲೆ ಹೂವು ಮುಡಿಸಿದ ಬಜೆಟ್ (Budget) ಅಂತ ಮಾಜಿ ಸಿಎಂ ಕುಮಾರಸ್ವಾಮಿ (KumaraSwamy) ಲೇವಡಿ ಮಾಡಿದ್ದಾರೆ.

    ಬಜೆಟ್ ಬಗ್ಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಕಳೆದ ಬಿಜೆಪಿ ಅವಧಿಯಲ್ಲಿ ಬೊಮ್ಮಾಯಿ ಬಜೆಟ್ ಮಂಡಿಸುವಾಗಿ ಹೂವು ಕಿವಿಗೆ ಇಟ್ಟುಕೊಂಡು ಸಿದ್ದರಾಮಯ್ಯ ಬಂದಿದ್ದರು. ಅ ಹೂವನ್ನ 7 ಕೋಟಿ ಜನರ ಕಿವಿಗೆ ಈಗ ಮುಡಿಸಿದ್ದಾರೆ ಸಿದ್ದರಾಮಯ್ಯ. ಈ ಬಜೆಟ್ ನೋಡಿದರೆ ಇದು ನಾಳೆ ಬಾ ಸರ್ಕಾರ ಎಂದು ಟಾಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ: ಕಿಕ್‍ ಪ್ರಿಯರಿಗೆ ಶಾಕ್- ಅಬಕಾರಿಗೆ ಬಿಗ್‌ ಟಾರ್ಗೆಟ್‌: ಹಿಂದಿನ ಬಜೆಟ್‌ನಲ್ಲಿ ಗುರಿ ಎಷ್ಟಿತ್ತು?

    ಸಿದ್ದರಾಮಯ್ಯ ಅವರ 15ನೇ ಬಜೆಟ್ ಇದು. ರಾಜ್ಯದ ಇತಿಹಾಸದಲ್ಲಿ 15 ಬಜೆಟ್ ಮಂಡಿಸೋರು ಮುಂದೆ ಬರುತ್ತಾರೋ ಗೊತ್ತಿಲ್ಲ. ಸಿದ್ದರಾಮಯ್ಯಗೆ ಅನುಭವ, ಆಡಳಿತದ ಅನುಭವ ಇದೆ. ಆದರೆ ಅವರು ಬಜೆಟ್ ಓದುವಾಗಲೇ ನನಗೆ ಅನಿಸಿದ್ದು ಅವರಲ್ಲಿ ವಿಶ್ವಾಸದ ಕೊರತೆ ಎದ್ದು ಕಾಣುತ್ತಿದೆ ಅಂತ. ಗ್ಯಾರಂಟಿಯ ಗುಂಗಿನಿಂದ ಈ ಸರ್ಕಾರ ಹೊರಗೆ ಬಂದಿಲ್ಲ. 10 ತಿಂಗಳು ಕಳೆದರೂ ಗ್ಯಾರಂಟಿ ಬಗ್ಗೆ ಕನವರಿಗೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: State Budget 2024- ರಾಜ್ಯ ಬಜೆಟ್ ನಲ್ಲಿ ಕನ್ನಡ ಮತ್ತು ಸಂಸ್ಕೃತಿ

    ಸರ್ಕಾರ ಖಜಾನೆ ಖಾಲಿ ಆಗಿದೆ ಅಂತ ನಾವು ಹೇಳಿಲ್ಲ. ರಾಜ್ಯದ ಜನರು ಸಮೃದ್ಧಿಯಾಗಿ ಖಜಾನೆ ತುಂಬಿಸಿದ್ದಾರೆ. ಈ ಬಜೆಟ್ ನೋಡಿದರೆ ಜನರು ನಾವು ಎಷ್ಟು ತಪ್ಪು ಮಾಡಿದ್ದೇವೆ. ಇವರನ್ನ ಗೆಲ್ಲಿಸಿ ಅಂತ ಜನ ಅಂದುಕೊಂಡಿದ್ದಾರೆ. ಕೇಂದ್ರ ಸರ್ಕಾರ ತಮ್ಮ ಬಜೆಟ್‌ನಲ್ಲಿ ಅಮೃತಕಾಲ ಅಂದರೆ ಇದು ವಿನಾಶಕಾಲ ಅಂತ ಸಿದ್ದರಾಮಯ್ಯ ಹೇಳಿದ್ದರು. ಆದರೆ ಇವತ್ತಿನ ಸಿಎಂ ಬಜೆಟ್ ರಾಜ್ಯದ ವಿನಾಶಕಾಲಕ್ಕೆ ಬುನಾದಿ ಹಾಕಿದ್ದಾರೆ ಎಂದು ಹೆಚ್‌ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವನ್ನು ಆಯುಕ್ತಾಲಯವನ್ನಾಗಿ ಉನ್ನತೀಕರಣ – ಸಿಎಂಗೆ ಅಭಿನಂದನೆ ಸಲ್ಲಿಸಿದ ಡಾ.ಶರಣಪ್ರಕಾಶ್ ಪಾಟೀಲ್

    ಕೇಂದ್ರ ಸರ್ಕಾರಕ್ಕೆ ನಿತ್ಯ ಬೈತಾರೆ. ಆದರೆ ಕೇಂದ್ರಕ್ಕೆ ಮನವಿ ಮಾಡ್ತೀವಿ ಅಂತ ಹೇಳಿದ್ದಾರೆ. ಪ್ರತಿ ಪುಟದಲ್ಲಿ ಕೇಂದ್ರವನ್ನು ಬೈದಿದ್ದಾರೆ. ಸತ್ಯ ನಿರೂಪಿಸಬೇಕಾದ್ರು ನೂರು ಬಾರಿ ಸುಳ್ಳು ಹೇಳು ಅಂತ ಗಾದೆ ಇದೆ. ಈಗ ಸಿದ್ದರಾಮಯ್ಯ ಇದನ್ನೇ ಮಾಡ್ತಿದ್ದಾರೆ. ಇಂತಹ ಸರ್ಕಾರ ಈ ದೇಶದಲ್ಲಿ ಯಾವತ್ತು ಬಂದಿರಲಿಲ್ಲ. ಸಿದ್ದರಾಮಯ್ಯಗೆ ಜೆಡಿಎಸ್, ಬಿಜೆಪಿ, ಕೇಂದ್ರದ ಮೇಲೆ ಇಷ್ಟು ದಿನ ಆಕ್ರೋಶ ಇತ್ತು ಅಂತ ಅಂದುಕೊಂಡಿದ್ದೆ. ಆದರೆ ಈ ಬಜೆಟ್ ನೋಡಿದ್ರೆ ಸಿದ್ದರಾಮಯ್ಯಗೆ 7 ಕೋಟಿ ಕನ್ನಡಿಗರ ಮೇಲೆ ಆಕ್ರೋಶ ಇದೆ ಅಂತ ಈ ಬಜೆಟ್‌ನಿಂದ ಗೊತ್ತಾಗುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲೇ ಪ್ರಥಮ- ಮೀನುಗಾರರ ರಕ್ಷಣೆಗೆ ಸಮುದ್ರ ಅಂಬುಲೆನ್ಸ್ ಖರೀದಿ: ಸಿಎಂ ಘೋಷಣೆ

  • ಬೆಂಗಳೂರು BIECಯಿಂದ ತುಮಕೂರಿಗೆ, ಏರ್‌ಪೋರ್ಟಿಂದ  ದೇವನಹಳ್ಳಿಗೆ ಮೆಟ್ರೋ ರೈಲು!

    ಬೆಂಗಳೂರು BIECಯಿಂದ ತುಮಕೂರಿಗೆ, ಏರ್‌ಪೋರ್ಟಿಂದ  ದೇವನಹಳ್ಳಿಗೆ ಮೆಟ್ರೋ ರೈಲು!

    ಬೆಂಗಳೂರು: ನಮ್ಮ ಮೆಟ್ರೋ ರೈಲಿನ ಜನಪ್ರಿಯತೆಯಿಂದಾಗಿ ರಾಜಧಾನಿ ಬೆಂಗಳೂರಿನ ಹೊರಗೂ ಮೆಟ್ರೋ (Metro)  ರೈಲು ಸಂಪರ್ಕ ಸಾಧ್ಯತೆ ಮುನ್ನೆಲೆಗೆ ಬಂದಿದೆ.

    ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah)  ಅವರು ಹೊಸ ಮೆಟ್ರೋ ಮಾರ್ಗಗಳನ್ನು ಆರಂಭಿಸಲು ಕರ‍್ಯಸಾಧ್ಯತಾ ವರದಿ ತಯಾರಿಗೆ ಮುಂದಾಗಿದ್ದಾರೆ. ಒಂದು ವೇಳೆ ಓಕೆ ಆದರೆ ಬೆಂಗಳೂರಿನ  (Benagluru) ಬಿಐಇಸಿಯಿಂದ ತುಮಕೂರಿಗೆ (Tumkuru)  ಹಾಗೂ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೇವನಹಳ್ಳಿಗೆ (Devanahaali) ಮೆಟ್ರೋ ಸಂಚಾರ ಶುರುವಾಗಬಹುದು. ಸರ‍್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಮೆಟ್ರೋ ರೈಲು ಯೋಜನೆಗಳನ್ನು ಪ್ರಾರಂಭಿಸಲು ಕರ‍್ಯಸಾಧ್ಯತಾವರದಿ ತಯಾರಿಸುವುದಾಗಿ ಸಿಎಂ ಘೋಷಿಸಿದ್ದಾರೆ. ಇದನ್ನೂ ಓದಿ:  ಗ್ಯಾರಂಟಿ ಭಾರದ ನಡುವೆ ಸರ್ಕಾರಿ ಇಲಾಖೆಗಳಿಗೆ ಬಂಪರ್‌ – ಯಾವ ಇಲಾಖೆಗೆ ಎಷ್ಟು ಅನುದಾನ?

    ಪ್ರಸಕ್ತ ಸಾಲಿನಲ್ಲಿ ಮೆಟ್ರೋ ಸೇವೆಯ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಮೆಟ್ರೋ ರೈಲು ಕರ‍್ಯಾಚರಣೆಯು ಲಾಭದಾಯಕವಾಗಿದ್ದು, ಹೆಮ್ಮೆಯ ಸಂಕೇತ ಎಂದು ಸಿಎಂ ಹೇಳಿಕೊಂಡಿದ್ದಾರೆ. ಇದನ್ನೂ ಓದಿ:  ಬೆಂಗಳೂರು ಸೇರಿ ಈ 11 ನಗರಗಳಲ್ಲಿ ರಾತ್ರಿ 1 ಗಂಟೆವರೆಗೆ ವ್ಯಾಪಾರ ವಹಿವಾಟು

    ಪ್ರಸ್ತುತ ಕರ‍್ಯಾಚರಣೆಯಲ್ಲಿರುವ 74 ಕಿಲೋ ಮೀಟರ್‌ ಮಾರ್ಗದೊಂದಿಗೆ 2025ರ ಮಾರ್ಚ್‌  ವೇಳೆಗೆ ಹೆಚ್ಚುವರಿಯಾಗಿ 44 ಕಿಲೋ ಮೀಟರ್‌ ಮೆಟ್ರೋ ಮಾರ್ಗ  ಸರ‍್ಪಡೆಯಾಗಲಿದೆ ಎಂದರು. ಇದನ್ನೂ ಓದಿ:  Karnataka Budget 2024: ಪುತ್ತೂರಿನಲ್ಲಿ ಪಶುವೈದ್ಯಕೀಯ ಕಾಲೇಜು ಕಾರ್ಯಾರಂಭಕ್ಕೆ ಕ್ರಮ

  • ನಾವು ಮನುಜರು ಹೆಸರಿನಲ್ಲಿ ವಾರಕ್ಕೆ ಎರಡು ಗಂಟೆ ಶಾಲಾ ಕಾಲೇಜುಗಳಲ್ಲಿ ವಿಮರ್ಶೆ, ಸಂವಾದ – ಶಿಕ್ಷಣಕ್ಕೆ ಸಿಕ್ಕಿದ್ದೇನು?

    ನಾವು ಮನುಜರು ಹೆಸರಿನಲ್ಲಿ ವಾರಕ್ಕೆ ಎರಡು ಗಂಟೆ ಶಾಲಾ ಕಾಲೇಜುಗಳಲ್ಲಿ ವಿಮರ್ಶೆ, ಸಂವಾದ – ಶಿಕ್ಷಣಕ್ಕೆ ಸಿಕ್ಕಿದ್ದೇನು?

    ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳು (Governmnet School) ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ (College)  ಮೂಲಭೂತ ಸೌಕರ್ಯಗಳನ್ನು ನೀಡಲು ನಮ್ಮ ಸರ್ಕಾರ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದು, 2023-24ನೇ ಸಾಲಿನಲ್ಲಿ 600 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿರುತ್ತದೆ. 2024-25ನೇ ಸಾಲಿನಲ್ಲಿ ಶಾಲಾ/ಕಾಲೇಜುಗಳ ಕೊಠಡಿ ನಿರ್ಮಾಣ, ದುರಸ್ತಿ, ಶೌಚಾಲಯ ನಿರ್ಮಾಣದಂತಹ ಕಾಮಗಾರಿಗಳನ್ನು 850 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ (Siddramaiah) ತಮ್ಮ ಬಜೆಟ್ (Budget)  ಭಾಷಣದಲ್ಲಿ ಹೇಳಿದ್ದಾರೆ.

    ಬಜೆಟ್‌ನಲ್ಲಿ ಏನಿದೆ?
    ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ ಮತ್ತು ಅಗತ್ಯ ಮೂಲಸೌಕರ್ಯ ಒದಗಿಸಲು ನಮ್ಮ ಸರ್ಕಾರ ವಿಶೇಷ ಆಸಕ್ತಿ ವಹಿಸಿದೆ. ಸರ್ಕಾರಿ ಶಾಲೆಯ ಮಕ್ಕಳೂ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ವಿಯಾಗಬೇಕೆಂಬ ಆಶಯದೊಂದಿಗೆ ನಮ್ಮ ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಈ ನಿಟ್ಟಿನಲ್ಲಿ ಕೆಳಕಂಡ ಉಪಕ್ರಮಗಳನ್ನು ಕೈಗೊಳ್ಳಲಾಗುವುದು. ಪ್ರಾಥಮಿಕ ಪೂರ್ವ ಪದವಿ ಹಂತದಿಂದ ಪೂರ್ವ ತರಗತಿಗಳವರೆಗಿನ ಶಿಕ್ಷಣವನ್ನು ಒಂದೇ ಸೂರಿನಡಿ ನೀಡುವ ಉದ್ದೇಶದಿಂದ ಆಯ್ದ ಶಾಲೆಗಳನ್ನು ಸಿ.ಎಸ್.ಆರ್. ಅನುದಾನದಡಿ ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಅಭಿವೃದ್ಧಿ ಪಡಿಸಲಾಗುವುದು. ಇದನ್ನೂ ಓದಿ:  GST ಸಂಗ್ರಹಣೆ 18% ಹೆಚ್ಚಳ – 2.8 ಶತಕೋಟಿ ಡಾಲರ್‌ FDI ಹೂಡಿಕೆ

    3 ರಿಂದ 5 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಗಣಿತ ವಿಷಯದಲ್ಲಿ ಆಸಕ್ತಿ ಮೂಡಿಸಿ ಸಾಮರ್ಥ್ಯ ಹೆಚ್ಚಿಸಲು ಜೆ-ಪಾಲ್ ಸಂಸ್ಥೆಯ ಸಹಯೋಗದಲ್ಲಿ ಗಣಿತ-ಗಣಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಕಲಿಕೆಯಲ್ಲಿ ಹಿಂದುಳಿದ 6 ಮತ್ತು 7 ನೇ ತರಗತಿ ವಿದ್ಯಾರ್ಥಿಗಳಿಗೆ ಕಲಿಕಾ ಸಾಮರ್ಥ್ಯ ಸುಧಾರಿಸಲು 10 ಕೋಟಿ ರೂ. ಅನುದಾನದಲ್ಲಿ ಮರು ಸಿಂಚನ ಕಾರ್ಯಕ್ರಮ ಜಾರಿಗೊಳಿಸಲಾಗುವುದು. ಇದನ್ನೂ ಓದಿ: Karnataka State Budget 2024- ರಾಜ್ಯ ಬಜೆಟ್ ನಲ್ಲಿ ಬಸವಣ್ಣ: ಸಾಂಸ್ಕೃತಿಕ ನಾಯಕನಿಗೆ ಜೈಕಾರ

    ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿರುವ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ವಿಜ್ಞಾನ ಪ್ರಯೋಗಾಲಯ, ಕಂಪ್ಯೂಟರ್ ಲ್ಯಾಬ್, ಇಂಟರ್‌ನೆಟ್ ಸೌಲಭ್ಯಗಳನ್ನು ಎರಡು ವರ್ಷಗಳ ಪ್ಯಾಕೇಜ್ ಅಡಿಯಲ್ಲಿ ಒದಗಿಸಲು 50 ಕೋಟಿ ರೂ. ಮೀಸಲಿಡಲಾಗುವುದು. 2,000 ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ದ್ವಿಭಾಷಾ ಮಾಧ್ಯಮ (ಕನ್ನಡ ಮತ್ತು ಇಂಗ್ಲೀಷ್) ಶಾಲೆಗಳಾಗಿ ಪರಿವರ್ತಿಸಲಾಗುವುದು. ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಸಾಮಾಜಿಕ ಸಾಮರಸ್ಯ, ವೈಜ್ಞಾನಿಕ ಮನೋಭಾವ ಮತ್ತು ಸಹಬಾಳ್ವೆಯ ವಿದ್ಯಾ-ಕೇಂದ್ರಗಳನ್ನಾಗಿ ರೂಪಿಸಲು “ನಾವು ಮನುಜರು” ಹೆಸರಿನಲ್ಲಿ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ವಾರಕ್ಕೆ ಎರಡು ಗಂಟೆಗಳ ವಿಚಾರ-ವಿಮರ್ಶೆ ಮತ್ತು ಸಂವಾದ ಚಟುವಟಿಕೆಗಳನ್ನು ಒಳಗೊಂಡ ತರಗತಿಗಳನ್ನು ನಡೆಸಲಾಗುವುದು. ಇದನ್ನೂ ಓದಿ: ಮಂಗಳೂರಿಗೆ ವಾಟರ್‌ ಮೆಟ್ರೋ?

    ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಸಹಯೋಗದೊಂದಿಗೆ ಸರ್ಕಾರಿ ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲಾಗುವುದು. ರಾಜ್ಯದಲ್ಲಿರುವ 74 ಆದರ್ಶ ವಿದ್ಯಾಲಯಗಳನ್ನು ವಾಣಿಜ್ಯ ಮತ್ತು ವಿಜ್ಞಾನ ವಿಷಯಗಳಲ್ಲಿ ಪದವಿ ಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಿಸಲಾಗುವುದು. ವಿದ್ಯಾರ್ಥಿಗಳ ಸಂಖ್ಯಾಬಲ ಹೆಚ್ಚಿರುವ ಆಯ್ದ 100 ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಗಣಕ ವಿಜ್ಞಾನ ಸಂಯೋಜನೆಯನ್ನು ಪ್ರಾರಂಭಿಸಲಾಗುವುದು. ಇದನ್ನೂ ಓದಿ: Karnataka Budget 2024: ಅಲ್ಪಸಂಖ್ಯಾತರಿಗೆ ಬಂಪರ್‌ ಕೊಡುಗೆ – ವಕ್ಫ್ ಆಸ್ತಿ ಸಂರಕ್ಷಣೆಗೆ 100 ಕೋಟಿ ರೂ. ಘೋಷಣೆ

    ವಿಜ್ಞಾನ ವಿಷಯಗಳಲ್ಲಿ 400 ಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿನ ವಿಜ್ಞಾನ ಪ್ರಯೋಗಾಲಯಗಳನ್ನು ಉನ್ನತೀಕರಿಸಲು ತಲಾ 10 ಲಕ್ಷ ರೂ. ನಂತೆ ಅನುದಾನ ಒದಗಿಸಲಾಗುವುದು. ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಅಂದಾಜು 20,000 ವಿದ್ಯಾರ್ಥಿಗಳಿಗೆ ನೀಟ್/ಜೆಇಇ/ಸಿಇಟಿ ತರಬೇತಿ ಕಾರ್ಯಕ್ರಮಗಳನ್ನು 10 ಕೋಟಿ ರೂ.ಗಳ ವೆಚ್ಚದಲ್ಲಿ ಹಮ್ಮಿಕೊಳ್ಳಲಾಗುವುದು. ಇದನ್ನೂ ಓದಿ: ಗ್ಯಾರಂಟಿ ಯೋಜನೆಯಿಂದ ಪ್ರತಿ ಕುಟುಂಬಕ್ಕೆ 50 ಸಾವಿರ ಸಿಗುತ್ತಿದೆ : ಸಿದ್ದರಾಮಯ್ಯ

    ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಉಚಿತ ವಿದ್ಯುತ್ ಮತ್ತು ನೀರಿನ ಸೌಲಭ್ಯವನ್ನು ಒದಗಿಸಲು ನಮ್ಮ ಸರ್ಕಾರವು ನಿರ್ಧರಿಸಿದೆ. ಇದರಿಂದ ರಾಜ್ಯದ 46,829 ಸರ್ಕಾರಿ ಶಾಲೆಗಳು ಮತ್ತು 1,234 ಪದವಿ ಪೂರ್ವ ಕಾಲೇಜುಗಳಿಗೆ ಅನುಕೂಲವಾಗಲಿದೆ. ಈ ಉದ್ದೇಶಕ್ಕಾಗಿ ಒಟ್ಟು 25 ಕೋಟಿ ರೂ. ವೆಚ್ಚವಾಗಲಿದೆ. ಇದನ್ನೂ ಓದಿ: ಇಸ್ಲಾಂ ಇರೋವರೆಗೂ ಜಗತ್ತಿಗೆ ನೆಮ್ಮದಿಯಿಲ್ಲ: ಅನಂತಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ