Tag: Karni Sena

  • ಲಾರೆನ್ಸ್ ಬಿಷ್ಣೋಯ್‌ನನ್ನು ಎನ್‌ಕೌಂಟರ್‌ ಮಾಡಿದ್ರೆ 1,11,11,111 ರೂ. ಬಹುಮಾನ – ಕರ್ಣಿ ಸೇನೆಯಿಂದ ಘೋಷಣೆ

    ಲಾರೆನ್ಸ್ ಬಿಷ್ಣೋಯ್‌ನನ್ನು ಎನ್‌ಕೌಂಟರ್‌ ಮಾಡಿದ್ರೆ 1,11,11,111 ರೂ. ಬಹುಮಾನ – ಕರ್ಣಿ ಸೇನೆಯಿಂದ ಘೋಷಣೆ

    ನವದೆಹಲಿ: ಜೈಲಿನಲ್ಲಿರುವ ದರೋಡೆಕೋರ ಲಾರೆನ್ಸ್ ಬಿಷ್ಣೋಯ್‌ನನ್ನು (Lawrence Bishnoi) ಹತ್ಯೆ ಮಾಡಿದ್ರೆ 1,11,11,111 ನಗದು ಬಹುಮಾನವನ್ನು ನೀಡುವುದಾಗಿ ಕ್ಷತ್ರಿಯ ಕರ್ಣಿ ಸೇನೆ (Karni Sena) ಘೋಷಣೆ ಮಾಡಿದೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಸದಸ್ಯರಿಂದ ಹತ್ಯೆಗೀಡಾದ ಪ್ರಮುಖ ರಜಪೂತ್ ನಾಯಕ ಸುಖದೇವ್ ಸಿಂಗ್ ಗೊಗಮೆಡಿ ಅವರ ಹತ್ಯೆಗೆ ಸೇಡು ತೀರಿಸಿಕೊಳ್ಳಲು ಕ್ಷತ್ರಿಯ ಕರ್ಣಿ ಸೇನೆಯ ನಾಯಕ ರಾಜ್ ಶೇಖಾವತ್ ಈ ಬಹುಮಾನವನ್ನು ಘೋಷಿಸಿದ್ದಾರೆ.

    ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ ಹಂಚಿಕೊಂಡಿರುವ ರಾಜ್ ಶೇಖಾವತ್ (Raj Shekhawat), ಜೈಲಿನಲ್ಲಿರುವ ದರೋಡೆಕೋರನನ್ನು ಕೊಂದ ಯಾವುದೇ ಪೊಲೀಸ್ ಅಧಿಕಾರಿಗೆ ಬಹುಮಾನವನ್ನು ನೀಡುತ್ತೇನೆ ಎಂದು ಹೇಳಿಕೊಂಡಿದ್ದಾರೆ.

    ಗಡಿಯಾಚೆಗಿನ ಮಾದಕವಸ್ತು ಕಳ್ಳಸಾಗಣೆ ಆರೋಪದಡಿ ಬಿಷ್ಣೋಯಿ ಪ್ರಸ್ತುತ ಗುಜರಾತ್‌ನ ಸಬರಮತಿ ಜೈಲಿನಲ್ಲಿದ್ದಾನೆ. ಇತ್ತೀಚೆಗೆ, ಬಿಷ್ಣೋಯ್ ಗ್ಯಾಂಗ್ ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಅವರ ಹತ್ಯೆಯ ಹೊಣೆಯನ್ನು ಹೊತ್ತುಕೊಂಡಿದೆ. ಅಲ್ಲದೇ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ನಿವಾಸದ ಹೊರಗೆ ನಡೆದ ಗುಂಡಿನ ದಾಳಿಗೆ ಬಿಷ್ಣೋಯ್‌ ಗ್ಯಾಂಗ್‌ಗೂ ಸಂಬಂಧ ಇರುವುದು ತನಿಖೆ ವೇಳೆ ಬೆಳಕಿಗೆ ಬಂದಿತ್ತು.

    ಕಳೆದ ವರ್ಷ ಡಿಸೆಂಬರ್‌ನಲ್ಲಿ ಗೊಗಮೆಡಿ ಅವರ ಜೈಪುರದ ನಿವಾಸದಲ್ಲಿ ಚಹಾ ಕುಡಿಯುತ್ತಿದ್ದ ವೇಳೆ ಗುಂಡಿಕ್ಕಿ ಹತ್ಯೆಗೈಯ್ಯಲಾಗಿತ್ತು. ಭದ್ರತಾ ಸಿಬ್ಬಂದಿ ಸಹ ಈ ವೇಳೆ ತೀವ್ರವಾಗಿ ಗಾಯಗೊಂಡಿದ್ದರು. ಗುಂಡಿನ ಚಕಮಕಿಯಲ್ಲಿ ಶೂಟರ್‌ಗಳಲ್ಲಿ ಒಬ್ಬನಾದ ನವೀನ್ ಸಿಂಗ್ ಶೇಖಾವತ್ ಕೂಡ ಸಾವನ್ನಪ್ಪಿದ್ದ.

    ದಾಳಿಯ ಸ್ವಲ್ಪ ಸಮಯದ ನಂತರ, ಲಾರೆನ್ಸ್ ಬಿಷ್ಣೋಯ್ ಮತ್ತು ಗೋಲ್ಡಿ ಬ್ರಾರ್ ಗ್ಯಾಂಗ್‌ಗಳ ಸಹವರ್ತಿ ರೋಹಿತ್ ಗೋಡಾರಾ, ಗೊಗಮೆಡಿ ಅವರ ಹತ್ಯೆಯ ಹೊಣೆಗಾರಿಕೆಯನ್ನು ಹೊತ್ತುಕೊಂಡಿದ್ದ. ಸಾಮಾಜಿಕ ಜಾಲತಾಣದಲ್ಲಿ ನಮ್ಮ ಶತೃಗಳನ್ನು ಬೆಂಬಲಿಸಿದ್ದಕ್ಕಾಗಿ ಹತ್ಯೆ ಮಾಡಿದ್ದಾರೆ ರೋಹಿತ್‌ ಹೇಳಿಕೊಂಡಿದ್ದ.

    ಗೊಗಮೇಡಿ ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ರೋಹಿತ್ ಗೋಡಾರಾ ಇನ್ನೂ ಪತ್ತೆಯಾಗಿಲ್ಲ. ಗುಪ್ತಚರ ವರದಿಗಳ ಪ್ರಕಾರ, ಗೋದಾರಾ ಪವನ್ ಕುಮಾರ್ ಎಂಬ ಹೆಸರಿನಲ್ಲಿ ನಕಲಿ ಪಾಸ್‌ಪೋರ್ಟ್ ಬಳಸಿ ಭಾರತದಿಂದ ಪಲಾಯನ ಮಾಡಿದ್ದಾನೆ. ಕೆನಡಾದಲ್ಲಿ ಎಲ್ಲೋ ಅಡಗಿಕೊಂಡಿದ್ದಾನೆ ಎನ್ನಲಾಗಿದೆ. ಗೋದಾರಾಗೆ ಇಂಟರ್‌ಪೋಲ್ ರೆಡ್ ನೋಟಿಸ್ ಜಾರಿ ಮಾಡಿದೆ. ಸುಲಿಗೆ ಮತ್ತು ಕೊಲೆ ಸೇರಿದಂತೆ ಅವನ ವಿರುದ್ಧ 32 ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಲಾಗಿವೆ. ಗೋದಾರಾ ಭಾರತದ ಮೋಸ್ಟ್ ವಾಂಟೆಡ್ ಕ್ರಿಮಿನಲ್‌ಗಳಲ್ಲಿ ಒಬ್ಬ.

  • ಕರ್ಣಿ ಸೇನೆ ಅಧ್ಯಕ್ಷನ ಮೇಲೆ ಗುಂಡು ಹಾರಿಸಿದ ಸಂಘಟನೆಯ ಮಾಜಿ ಸದಸ್ಯ

    ಕರ್ಣಿ ಸೇನೆ ಅಧ್ಯಕ್ಷನ ಮೇಲೆ ಗುಂಡು ಹಾರಿಸಿದ ಸಂಘಟನೆಯ ಮಾಜಿ ಸದಸ್ಯ

    ಜೈಪುರ್: ಬಲಪಂಥೀಯ ರಜಪೂತ ಸಂಘಟನೆ ಕರ್ಣಿ ಸೇನೆಯ (Karni Sena) ರಾಜಸ್ಥಾನದ (Rajasthan) ಅಧ್ಯಕ್ಷ ಭನ್ವರ್ ಸಿಂಗ್ ಮೇಲೆ ಗುಂಡಿನ ದಾಳಿ ನಡೆದಿದೆ. ಉದಯಪುರದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಅವರ ಮೇಲೆ ವೇದಿಕೆಯಿಂದ ಕೆಳಗೆ ಬರುತ್ತಿದ್ದಂತೆ ಗುಂಡು ಹಾರಿಸಲಾಗಿದೆ.

    ಗುಂಡು ಹಾರಿಸಿದ ಆರೋಪಿಯನ್ನು ಸಂಘಟನೆಯ ಮಾಜಿ ಸದಸ್ಯ ಎಂದು ಗುರುತಿಸಲಾಗಿದೆ. ಆತನನ್ನು ಸ್ಥಳದಲ್ಲೇ ಬಂಧಿಸಲಾಗಿದೆ. ಕೃತ್ಯಕ್ಕೆ ಬಳಸಿದ ದೇಶಿ ನಿರ್ಮಿತ ಪಿಸ್ತೂಲನ್ನು ಪೊಲೀಸರು (Police) ವಶಕ್ಕೆ ಪಡೆದಿದ್ದಾರೆ. ಗುಂಡಿನ ದಾಳಿಯಿಂದ ಗಾಯಗೊಂಡಿರುವ ಭನ್ವರ್ ಸಿಂಗ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಉಡುಪಿ ಮಾದರಿ ಮತ್ತೊಂದು ಕೇಸ್‌; ಹಾಸ್ಟೆಲ್‌ ಹುಡ್ಗೀರ ಬೆತ್ತಲೆ ವೀಡಿಯೋ ಸೆರೆ ಹಿಡಿದು ಸೀನಿಯರ್‌ಗೆ ಕಳಿಸ್ತಿದ್ದ ವಿದ್ಯಾರ್ಥಿನಿ

    ಈ ಬಗ್ಗೆ ಮಾತನಾಡಿದ ಕರ್ಣಿ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಮಹಿಪಾಲ್ ಮಕ್ರಾನಾ, ರಾಜಕೀಯ ಪ್ರೇರಿತ ದಾಳಿಯಾಗಿದೆ ಎಂದು ಆರೋಪಿಸಿದ್ದಾರೆ. ಸಿಂಗ್ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿ ಹಾರಿಸಿದ ಗುಂಡು ಅವರ ಬೆನ್ನಿಗೆ ತೂರಿದೆ. ವೈದ್ಯರು ಅವರ ಆರೋಗ್ಯದ ಬಗ್ಗೆ ಯಾವುದೇ ಮಾಹಿತಿಯನ್ನು ನೀಡಿಲ್ಲ ಎಂದಿದ್ದಾರೆ.

    ಮುಂದಿನ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ಣಿ ಸೇನೆಯು ರಜಪೂತ ಮತಗಳನ್ನು ಗುರಿಯಾಗಿಸಿಕೊಂಡು ಸರಣಿ ಕಾರ್ಯಕ್ರಮಗಳು ಮತ್ತು ಸಭೆಗಳನ್ನು ಆಯೋಜಿಸುತ್ತಿದೆ. ಈ ಹಿನ್ನೆಲೆಯಲ್ಲಿ ದಾಳಿ ನಡೆದಿರುವ ಶಂಕೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಕೌಟುಂಬಿಕ ದ್ವೇಷ – ಚಾಕುವಿನಿಂದ ಇರಿದು ನರ್ಸ್ ಹತ್ಯೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಣಿಕರ್ಣಿಕಾ ವಿರುದ್ಧ ಪ್ರತಿಭಟನೆಗಿಳಿದ ಕರ್ಣಿ ಸೇನಾ!

    ಮಣಿಕರ್ಣಿಕಾ ವಿರುದ್ಧ ಪ್ರತಿಭಟನೆಗಿಳಿದ ಕರ್ಣಿ ಸೇನಾ!

    ಮುಂಬೈ: ಬಾಲಿವುಡ್ ಕ್ವೀನ್ ಕಂಗನಾ ರಣಾವತ್ ಅಭಿನಯದ ಐತಿಹಾಸಿಕ ಕಥನಾಕವುಳ್ಳ ‘ಮಣಿಕರ್ಣಿಕಾ’ ಸಿನಿಮಾ ಜನವರಿ 25ರಂದು ಬಿಡುಗಡೆಯಾಗಲು ಸಿದ್ಧಗೊಂಡಿದೆ. ಝಾನ್ಸಿ ರಾಣಿ ಲಕ್ಷ್ಮಿಬಾಯಿ ಅವರ ಕಥೆಯನ್ನು ಸಿನಿಮಾ ಒಳಗೊಂಡಿದೆ. ಸದ್ಯ ಚಿತ್ರದ ಬಿಡುಗಡೆಯನ್ನು ವಿರೋಧಿಸಿ ಕರ್ಣಿ ಸೇನಾ ಪ್ರತಿಭಟನೆಗೆ ಇಳಿದಿದೆ. ಈ ಹಿಂದೆ ಕರ್ಣಿ ಸೇನಾ ದೀಪಿಕಾ ಪಡುಕೋಣೆ ಅಭಿನಯದ ‘ಪದ್ಮಾವತ್’ ಸಿನಿಮಾ ವಿರೋಧಿಸಿ ದೇಶಾದ್ಯಂತ ದೊಡ್ಡ ಪ್ರತಿಭಟನೆ ನಡೆಸಿತ್ತು.

    ವಿರೋಧ ಯಾಕೆ?
    ಚಿತ್ರದಲ್ಲಿ ರಾಣಿ ಲಕ್ಷ್ಮಿಬಾಯಿ ಮತ್ತು ಬ್ರಿಟಿಷ್ ಅಧಿಕಾರಿ ನಡುವೆ ಪ್ರೇಮ ಕಥೆಯನ್ನು ತೋರಿಸಲಾಗಿದೆ. ಚಿತ್ರದ ಕೆಲವು ಹಾಡುಗಳಲ್ಲಿ ಕಂಗಾನರನ್ನು ಸೆಕ್ಸಿಯಾಗಿ ತೋರಿಸಲಾಗಿದೆ. ಚಿತ್ರದಲ್ಲಿ ಇತಿಹಾಸವನ್ನು ತಿರುಚಲಾಗಿದ್ದರಿಂದ ಮುಂದಿನ ದಿನಗಳಲ್ಲಿ ಸೇನೆಯ ಸದಸ್ಯರು ಪ್ರತಿಭಟನೆ ನಡೆಸಲಿದ್ದಾರೆ ಎಂದು ಪತ್ರಿಕೆಯೊಂದು ವರದಿ ಮಾಡಿದೆ.

    ಸಂದರ್ಶನವೊಂದರಲ್ಲಿ ಮಾತನಾಡಿದ ಕರ್ಣಿ ಸೇನಾದ ರಾಷ್ಟ್ರೀಯ ನಾಯಕ ಸುಖದೇವ್ ಸಿಂಗ್ ಶೇಖಾವತ್, ಮಣಿಕರ್ಣಿಕಾ ಚಿತ್ರದಲ್ಲಿ ಇತಿಹಾಸವನ್ನು ತಿರುಚಿ ತಮಗೆ ಅಗತ್ಯ ಇರುವಂತೆ ಬದಲಾಯಿಸಿಕೊಂಡಿದ್ದಾರೆ. ಚಿತ್ರತಂಡ ಭಾರತದ ಇತಿಹಾಸವನ್ನು ಬದಲಾವಣೆ ಮಾಡಲು ಪ್ರಯತ್ನ ಮಾಡುತ್ತಿದೆ. ಆದ್ರೆ ಚಿತ್ರತಂಡದ ಪ್ಲಾನ್ ಯಶಸ್ವಿಯಾಗಲು ನಾವು ಅವಕಾಶ ನೀಡಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

    2018ರಲ್ಲಿ ನಾವು ಪದ್ಮಾವತ್ ಸಿನಿಮಾಗೆ ವಿರೋಧ ಮಾಡಿದ್ದು ಸುಪ್ರೀಂ ಕೋರ್ಟ್ ತಡೆ ನೀಡಿತ್ತು. ಮಣಿಕರ್ಣಿಕಾ ಸಿನಿಮಾ ವಿಷಯ ತಿಳಿದು ಕಳೆದ ಫೆಬ್ರವರಿಯಲ್ಲಿ ಚಿತ್ರತಂಡದ ಜೊತೆ ನಾವು ಮಾತನಾಡಿದ್ದರೂ ನೈಜ ಇತಿಹಾಸವನ್ನು ತೋರಿಸದೆ ಇಷ್ಟ ಬಂದಂತೆ ಬದಲಾವಣೆ ಮಾಡಲು ಮುಂದಾಗುತ್ತಿದ್ದಾರೆ. ಸಿನಿಮ ಬಿಡುಗಡೆ ಮುನ್ನ ಚಿತ್ರವನ್ನು ನಮಗೆ ತೋರಿಸಬೇಕು, ಇಲ್ಲವಾದಲ್ಲಿ ಪದ್ಮಾವತ್ ಸಿನಿಮಾ ವಿರುದ್ಧ ನಡೆಸಿದ ಹೋರಾಟವನ್ನು ಇಂದು ಮಾಡಬೇಕಾಗುತ್ತದೆ ಎಂದು ಸುಖದೇವ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ.

    ಸೆನ್ಸಾರ್ ಕ್ಲೀನ್ ಚಿಟ್: ಈಗಾಗಲೇ ಸೆನ್ಸಾರ್ ಬೋರ್ಡ್ ಮಣಿಕರ್ಣಿಕಾ ಚಿತ್ರ ಬಿಡುಗಡೆ ಅನುಮತಿ ನೀಡಿದೆ. ಸೆನ್ಸಾರ್ ಬೋರ್ಡ್ ನೀಡಿರುವ ಅನುಮತಿ ಇಲ್ಲಿ ಅನ್ವಯವಾಗಲ್ಲ. ಚಿತ್ರದಲ್ಲಿ ರಾಣಿ ಮತ್ತು ಬ್ರಿಟಿಷ್ ಅಧಿಕಾರಿ ನಡುವೆ ಪ್ರೇಮ ಕಹಾನಿ ತೋರಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಚಿತ್ರವನ್ನ ನಮಗೆ ತೋರಿಸಬೇಕಿದೆ. ಇಲ್ಲವಾದಲ್ಲಿ ಸಿನಿಮಾ ಬಿಡುಗಡೆಯಾಗುವ ಚಿತ್ರಮಂದಿರಗಳ ಮೇಲೆ ದಾಳಿ ಮಾಡಲಾಗುವುದು ಎಂದು ಗುಡುಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪದ್ಮಾವತ್ ವಿರುದ್ಧದ ಪ್ರತಿಭಟನೆಯನ್ನು ಹಿಂಪಡೆದ ಕರ್ಣಿ ಸೇನಾ

    ಪದ್ಮಾವತ್ ವಿರುದ್ಧದ ಪ್ರತಿಭಟನೆಯನ್ನು ಹಿಂಪಡೆದ ಕರ್ಣಿ ಸೇನಾ

    ಮುಂಬೈ: ಪದ್ಮಾವತ್ ಸಿನಿಮಾದ ವಿರುದ್ಧದ ನಮ್ಮ ಪ್ರತಿಭಟನೆಯನ್ನು ಹಿಂಪಡೆಯಲಾಗುತ್ತಿದೆ ಎಂದು ಶ್ರೀ ರಜಪೂತ ಕರ್ಣಿ ಸೇನಾ ತನ್ನ ನಿರ್ಧಾರವನ್ನು ಶುಕ್ರವಾರ ತಿಳಿಸಿದೆ.

    ಮುಂಬೈನ ಶ್ರೀ ರಾಷ್ಟ್ರೀಯ ರಜಪೂತ ಕರ್ಣಿ ಸೇನಾದ ನಾಯಕ ಯೋಗೇಂದ್ರ ಸಿಂಗ್ ಖಟರ್ ಈ ಬಗ್ಗ ನಿರ್ಣಯ ತೆಗೆದುಕೊಂಡಿದ್ದಾರೆ. ಯೋಗೇಂದ್ರ ಸಿಂಗ್ ತಮ್ಮ ನಿರ್ಧಾರವನ್ನು ಶ್ರೀ ರಾಷ್ಟ್ರೀಯ ರಜಪೂತ ಕರ್ಣಿ ಸೇನಾದ ಅಧ್ಯಕ್ಷ ಸುಖ್ ದೇವ್ ಸಿಂಗ್ ಗೋಮಾಡಿ ಅವರಿಗೆ ರವಾನಿಸಿದ್ದಾರೆ. ಶುಕ್ರವಾರದಂದು ಮುಂಬೈನಲ್ಲಿ ಕರ್ಣಿ ಸೇನಾದ ಕೆಲವು ಸದಸ್ಯರು ಪದ್ಮಾವತ್ ಸಿನಿಮಾ ವೀಕ್ಷಣೆ ಮಾಡಿದ್ದು, ಚಿತ್ರದ ವಿವಾದಗಳಿಂದ ಮುಕ್ತವಾಗಿದೆ. ಸಿನಿಮಾ ನೋಡಿದ ಪ್ರತಿಯೊಬ್ಬ ರಜಪೂತ ವ್ಯಕ್ತಿ ಹೆಮ್ಮೆ ಪಡುತ್ತಾರೆ ಎಂದು ಹೇಳಿದ್ದಾರೆ.

    ಚಿತ್ರ ಯಾವುದೇ ಆಕ್ಷೇಪಾರ್ಹ ದೃಶ್ಯಗಳನ್ನು ಹೊಂದಿಲ್ಲ. ದೆಹಲಿ ಸುಲ್ತಾನ್ ಅಲ್ಲಾವುದ್ದೀನ್ ಖಿಲ್ಜಿ ಮತ್ತು ರಾಣಿ ಪದ್ಮಿನಿ ದೃಶ್ಯಗಳು ಎಲ್ಲಿಯೂ ರಜಪೂತ ಸಮುದಾಯದ ಜನರ ಭಾವನೆಗಳಿಗೆ ನೋವುಂಟು ಮಾಡುವುದಿಲ್ಲ. ಪ್ರತಿಭಟನೆಯನ್ನು ಹಿಂಪಡೆದುಕೊಳ್ಳುವ ಪತ್ರವನ್ನು ಈಗಾಗಲೇ ಪ್ರಕಟಿಸಲಾಗಿದೆ. ಈ ಪತ್ರ ರಾಜಸ್ಥಾನ, ಮಧ್ಯ ಪ್ರದೇಶ, ಗುಜರಾತ್, ಹರಿಯಾಣ ಮತ್ತು ದೇಶದ ಚಿತ್ರಮಂದಿರಗಳ ಮಾಲೀಕರಿಗೆ ಸಿನಿಮಾ ರಿಲೀಸ್ ಮಾಡಲು ಒಪ್ಪಿಗೆ ನೀಡಿದಂತಾಗುತ್ತದೆ ಎಂದು ಯೋಗೇಂದ್ರ ಸಿಂಗ್ ತಿಳಿಸಿದ್ದಾರೆ.

    ಕರ್ಣಿ ಸೇನಾ ಈ ಹಿಂದೆ ಸುಪ್ರೀಂ ಕೋರ್ಟ್ ಗೆ ಸಿನಿಮಾವನ್ನು ಬ್ಯಾನ್ ಮಾಡುವಂತೆ ಅರ್ಜಿ ಸಲ್ಲಿಸಿತ್ತು. ಆದ್ರೆ ಸುಪ್ರೀಂ ಕೋರ್ಟ್ ಕರ್ಣಿ ಸೇನಾದ ಅರ್ಜಿಯನ್ನ ರದ್ದುಗೊಳಿಸಿ, ಪದ್ಮಾವತ್ ಬಿಡುಗಡೆಗೆ ಗ್ರೀನ್ ಸಿಗ್ನಲ್ ನೀಡಿತ್ತು. ಕರ್ಣಿ ಸೇನಾ ಮಾತ್ರ ಚಿತ್ರ ಪ್ರದರ್ಶನಗೊಳ್ಳುವ ಥಿಯೇಟರ್ ಗೆ ಬೆಂಕಿ ಹಾಕಲಾಗುವುದು ಎಂದು ಬೆದರಿಕೆ ಹಾಕಿದ್ದರು. ಕರ್ಣಿ ಸೇನಾದ ಬೆದರಿಕೆ ಹೆದರಿದ ಕೆಲವು ಚಿತ್ರಮಂದಿರಗಳ ಮಾಲೀಕರು ‘ಪದ್ಮಾವತ್’ ಪ್ರದರ್ಶನಕ್ಕೆ ಹಿಂದೇಟು ಹಾಕಿದ್ದರು. ಕರ್ಣಿ ಸೇನಾ ಪ್ರತಿಭಟನೆಯನ್ನು ಹಿಂದೆ ಪಡೆದಿರುವದರಿಂದ ಚಿತ್ರಮಂದಿರಗಳ ಮಾಲೀಕರು ನಿರ್ಭಯವಾಗಿ `ಪದ್ಮಾವತ್’ ಸಿನಿಮಾ ರಿಲೀಸ್ ಮಾಡಬಹುದಾಗಿದೆ.

    ಪದ್ಮಾವತ್ ಸಿನಿಮಾ ಜನವರಿ 25ರಂದು ಬಿಡುಗೊಡೆ ಆಗಿದ್ದು, ಈಗಾಗಲೇ 200 ಕೋಟಿ ಅಧಿಕ ಹಣವನ್ನು ತನ್ನ ಗಲ್ಲಾಪೆಟ್ಟಿಗೆಯಲ್ಲಿ ತುಂಬಿಸಿಕೊಂಡಿದೆ. ದೇಶದ ಕೆಲವು ರಾಜ್ಯಗಳಲ್ಲಿ ಚಿತ್ರ ಪ್ರದರ್ಶನಕ್ಕೆ ಭದ್ರತೆ ನೀಡಲಾಗಿತ್ತು. 2017 ಡಿಸೆಂಬರ್ 01 ರಂದು ಪದ್ಮಾವತ್ ಸಿನಿಮಾ ಬಿಡುಗೊಡೆ ಆಗಲಿದೆ ಎಂದು ಈ ಹಿಂದೆ ಚಿತ್ರತಂಡ ಹೇಳಿಕೊಂಡಿತ್ತು. ಚಿತ್ರ ಸೆಟ್ಟೇರಿದಾಗಿನಿಂದಲೂ ತನ್ನ ವಿರೋಧ ಮಾಡುತ್ತಿದ್ದ ಕರ್ಣಿ ಸೇನಾ ದೇಶಾದ್ಯಂತ ಪ್ರತಿಭಟನೆಯನ್ನು ತೀವ್ರಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಸೆನ್ಸಾರ್ ಬೋರ್ಡ್ ಚಿತ್ರವನ್ನು ಕೂಲಂಕುಷವಾಗಿ ಪರಿಶೀಲಿಸಿ ಸಿನಿಮಾದ ಟೈಟಲ್ ಸೇರಿದಂತೆ ಕೆಲವು ಬದಲಾವಣೆ ಮಾಡುವಂತೆ ಚಿತ್ರತಂಡಕ್ಕೆ ಸೂಚಿಸಿತ್ತು. ಸೆನ್ಸಾರ್ ಮಂಡಳಿಯ ನಿರ್ದೇಶನದಂತೆ ಚಿತ್ರತಂಡ ಸಿನಿಮಾದಲ್ಲಿ ಮಾರ್ಪಡು ಮಾಡಿಕೊಂಡು ಬಿಡುಗೊಡೆ ಮಾಡಿದೆ.

  • ವಿವಾದಗಳ ನಡುವೆ ಪದ್ಮಾವತಿ ರಿಲೀಸ್ ದಿನಾಂಕ ಬದಲಾಯ್ತು-ಸೆನ್ಸಾರ್ ಮಂಡಳಿಯಲ್ಲಿ ಅರ್ಜಿ ರಿಜೆಕ್ಟ್

    ವಿವಾದಗಳ ನಡುವೆ ಪದ್ಮಾವತಿ ರಿಲೀಸ್ ದಿನಾಂಕ ಬದಲಾಯ್ತು-ಸೆನ್ಸಾರ್ ಮಂಡಳಿಯಲ್ಲಿ ಅರ್ಜಿ ರಿಜೆಕ್ಟ್

    ಮುಂಬೈ: ವಿವಾದಗಳಿಂದ ಸುದ್ದಿಯಾಗಿದ್ದ ಬಾಲಿವುಡ್‍ನ ಪದ್ಮಾವತಿ ಸಿನಿಮಾದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಸೆನ್ಸಾರ್ ಬೋರ್ಡ್ ನಲ್ಲಿ ಪದ್ಮಾವತಿ ಸಿನಿಮಾದ ಅರ್ಜಿ ತಿರಸ್ಕೃತವಾಗಿದ್ದು, ಚಿತ್ರತಂಡ ಅನಿವಾರ್ಯ ಕಾರಣಗಳಿಂದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದ್ದು, ಆದರೆ ಯಾವ ದಿನದಂದು ಸಿನಿಮಾ ತೆರೆಕಾಣಲಿದೆ ಎಂಬುದನ್ನು ಚಿತ್ರತಂಡ ಸ್ಪಷ್ಟಪಡಿಸಿಲ್ಲ.

    ಕಳೆದ ಮೂರು ದಿನಗಳಿಂದ ಸಿನಿಮಾದ ರಿಲೀಸ್ ದಿನವನ್ನು ಮುಂದೂಡಲಾಗಿದೆ ಎಂದು ಹೇಳಲಾಗಿತ್ತಿತ್ತು. ಆದರೆ ಅಧಿಕೃತವಾಗಿ ದೃಢಪಟ್ಟಿರಲಿಲ್ಲ. ಇಂದು ಬಾಲಿವುಡ್ ಸಿನಿ ಮಾರುಕಟ್ಟೆ ವಿಶ್ಲೇಷಕ ತರಣ್ ಆದರ್ಶ್ ಟ್ವೀಟ್ ಮೂಲಕ ವಿಷಯವನ್ನು ಖಚಿತಪಡಿಸಿದ್ದಾರೆ.

    ಸೆನ್ಸಾರ್ ಬೋರ್ಡ್ ಹೇಳಿದ್ದೇನು?:
    ಸೆನ್ಸಾರ್ ಬೋರ್ಡ್ ಸಿನಿಮಾಗೆ ಅನುಮತಿ ಕೋರಿ ಚಿತ್ರತಂಡ ಅರ್ಜಿಯನ್ನು ಸಲ್ಲಿಸಿತ್ತು. ಆದರೆ ಚಿತ್ರತಂಡ ಅವಶ್ಯಕ ಮಾಹಿತಿಯನ್ನು ಅರ್ಜಿಯಲ್ಲಿ ದಾಖಲಿಸದೇ ಅಪೂರ್ಣವಾದ ಮಾಹಿತಿಯನ್ನು ಸಲ್ಲಿಸಿದೆ. ಇನ್ನೂ ಸಿನಿಮಾ ರಜಪೂತ ನಾಡಿದ ಧೀರ ಮಹಿಳೆ ರಾಣಿ ಪದ್ಮಾವತಿ ಐತಿಹಾಸಿಕ ಕಥೆಯನ್ನು ಒಳಗೊಂಡಿದೆ. ಸಿನಿಮಾದಲ್ಲಿ ಬಳಸಲಾಗಿರುವ ದೃಶ್ಯಗಳಿಗೆ ಸೂಕ್ತ ಸಾಕ್ಷ್ಯಗಳನ್ನು ನೀಡಿಲ್ಲ ಎಂದು ಸೆನ್ಸಾರ್ ಬೋರ್ಡ್ (ಸಿಬಿಎಫ್‍ಸಿ) ತಿಳಿಸಿ ಅರ್ಜಿಯನ್ನು ತಿರಸ್ಕರಿಸಿದೆ.

    ಪದ್ಮಾವತಿ ಸಿನಿಮಾ ನಿರ್ಮಾಣ ಸಂಸ್ಥೆ ವೈಕಾಮ್ 18ಮೋಷನ್ ದಿನಾಂಕ ಮೂಂದೂಡಿರುವ ಬಗ್ಗೆ ಅಧಿಕೃತವಾಗಿ ಸ್ಪಷ್ಟನೆ ನೀಡಿದೆ. ಹಾಗಾದರೆ ನಿರ್ಮಾಣ ಸಂಸ್ಥೆ ಮಾಧ್ಯಮಗಳಿಗೆ ತಿಳಿಸಿದ್ದು ಹೀಗೆ

    “ಪದ್ಮಾವತಿ ಸಿನಿಮಾವನ್ನು ಡಿಸೆಂಬರ್ 1ರಂದು ತೆರೆಕಾಣಲು ಸಕಲ ತಯಾರಿಗಳನ್ನು ಮಾಡಿಕೊಂಡಿತ್ತು. ರಜಪೂತ ಸಂಸ್ಥಾನದ ಶೌರ್ಯ, ಘನತೆ ಮತ್ತು ಸಂಪ್ರದಾಯಿಕ ಎಲ್ಲ ವೈಭವವನ್ನು ಚಿತ್ರಕಥೆಯನ್ನು ಸಿನಿಮಾ ಒಳಗೊಂಡಿದೆ. ಚಿತ್ರಕಥೆ ನೋಡುಗರಿಗೆ ಹೆಮ್ಮೆಯನ್ನುಂಟು ಮಾಡಲಿದ್ದು, ಭಾರತೀಯರ ಸಾಹಸ ಪರಾಕ್ರಮವನ್ನು ಚಿತ್ರ ಒಳಗೊಂಡಿದೆ. ನಾವು ದೇಶದ ನಾಗರಿಕರಾಗಿದ್ದು, ದೇಶದ ಶಾಸನಬದ್ಧ ಕಾನೂನುಗಳನ್ನು ಪಾಲನೆ ಮಾಡುವುದರ ಜೊತೆಗೆ ಗೌರವ ನೀಡಬೇಕು. ಸೆನ್ಸಾರ್ ಬೋರ್ಡ್ ಸಿನಿಮಾಗೆ ಸಂಬಂಧಿಸಿದಂತೆ ಕೆಲವು ದಾಖಲೆಗಳನ್ನು ಒದಗಿಸುವಂತೆ ತಿಳಿಸಿದೆ. ಹಾಗಾಗಿ ಬೋರ್ಡ್ ಕೇಳಿರುವ ದಾಖಲಾತಿಗಳನ್ನು ಒದಗಿಸಲು ಕಾಲಾವಕಾಶ ಬೇಕಾಗುತ್ತದೆ. ಹಾಗಾಗಿ ಸಿನಿಮಾ ತೆರೆಕಾಣುವ ದಿನಾಂಕವನ್ನು ಮುಂದೂಡಲಾಗಿದೆ. ಆದಷ್ಟು ಬೇಗ ಸಿನಿಮಾ ರಿಲೀಸ್ ದಿನಾಂಕವನ್ನು ಅಭಿಮಾನಿಗಳಿಗೆ ತಿಳಿಸಲಾಗುತ್ತದೆ. ನಮ್ಮ ಬ್ಯಾನರ್ ಅಡಿಯಲ್ಲಿ `ಟಾಯ್ಲೆಟ್ ಏಕ್ ಪ್ರೇಮ್ ಕಥಾ’, ಭಾಗ್ ಮಿಲ್ಕಾ ಭಾಗ್, ಕ್ವೀನ್ ಸೇರಿದಂತೆ ಯಶಸ್ವಿ ಸಿನಿಮಾಗಳು ತೆರೆಕಂಡಿವೆ.” ಎಂದು ತಿಳಿಸಿದೆ.


    ಏನಿದು ವಿವಾದ?: ಪದ್ಮಾವತಿ ಸಿನಿಮಾ ಸೆಟ್ಟೇರಿದಾಗಿನಿಂದಲೂ ವಿವಾದವು ಹುಟ್ಟಿಕೊಂಡಿದೆ. ಸಿನಿಮಾದಲ್ಲಿ ಅಲ್ಲಾವುದ್ದೀನ್ ಖಿಲ್ಜಿ ಮಾತ್ರ ಪದ್ಮಾವತಿ ನಡುವೆ ರೊಮ್ಯಾಂಟಿಕ್ ಸೀನ್ ಗಳಿವೆ. ಇನ್ನೂ ಸಿನಿಮಾದಲ್ಲಿ ಇತಿಹಾಸವನ್ನು ತಿರುಚಲಾಗಿದೆ ಎಂದು ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸುತ್ತಿವೆ. ರಾಣಿ ಪದ್ಮಾವತಿ ಕುರಿತಾಗಿ ಸಿನಿಮಾ ಮಾಡಲಿದ್ದೇನೆಂದು ಬನ್ಸಾಲಿ ಹೇಳಿಕೊಂಡಾಗ ಹಲವು ಟೀಕೆಗಳು ವ್ಯಕ್ತವಾಗಿದ್ದವು. ಆರಂಭದಲ್ಲಿ ಚಿತ್ರೀಕರಣದ ವೇಳೆ ರಜಪೂತ್ ಕರ್ಣಿ ಸೇನಾದ ಸದಸ್ಯನೋರ್ವ ಬನ್ಸಾಲಿ ಅವರ ಕಪಾಳಕ್ಕೆ ಹೊಡೆದಿದ್ದನು. ಇನ್ನೂ ಮಹಾರಾಷ್ಟ್ರದ ಕೋಲಾಪುರದಲ್ಲಿ ಚಿತ್ರೀಕರಣದ ಸೆಟ್ ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಈ ಘಟನೆ ವೇಳೆ ಯಾರಿಗೂ ಯಾವುದೇ ಅಪಾಯವಾಗಿರಲಿಲ್ಲ.

    ಬಿಜೆಪಿ, ಕಾಂಗ್ರೆಸ್ಸಿನಿಂದ ವಿರೋಧ: ಪದ್ಮಾವತಿ ಸಿನಿಮಾವನ್ನು ಗುಜರಾತಿನಲ್ಲಿ ಚುನಾವಣೆ ಬಳಿಕ ರಿಲೀಸ್ ಮಾಡಬೇಕು ಇಲ್ಲವೇ ಸಿನಿಮಾವನ್ನು ರಾಜ್ಯದಲ್ಲಿ ಬ್ಯಾನ್ ಮಾಡೋದು ಒಳ್ಳೆಯದು. ಸದ್ಯ ರಾಜ್ಯದಲ್ಲಿ ಚುನಾವಣೆಯ ಕಾವು ಹೆಚ್ಚಾಗಿರುವುದರಿಂದ ಸಿನಿಮಾದಿಂದಾಗಿ ಗಲಾಟೆಗಳು ಉಂಟಾಗಬಹುದು. ಒಂದು ವೇಳೆ ಸಿನಿಮಾದಲ್ಲಿ ಇತಿಹಾಸವನ್ನು ತಿರುಚಲಾಗಿದ್ದರೆ ರಜಪೂತ ಮತ್ತು ಕ್ಷತ್ರೀಯ ಸಮುದಾಯದ ಜನತೆಯ ಭಾವನೆಗೆ ಧಕ್ಕೆ ಉಂಟಾಗುತ್ತದೆ ಎಂದು ಬಿಜೆಪಿ ವಕ್ತಾರ ಜಡೇಜಾ ತಿಳಿಸಿದ್ದಾರೆ. ಸಿನಿಮಾದಲ್ಲಿ ಇತಿಹಾಸವನ್ನು ತಿರುಚಲಾಗಿದೆ. ಹೀಗಾಗಿ ಜನರ ಭಾವನೆಗೆ ಧಕ್ಕೆ ಬಂದಿರುವ ವಿಚಾರವನ್ನು ತೆಗೆದು ಹಾಕಬೇಕೆಂದು ರಾಜಸ್ಥಾನದ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದಾರೆ.

    ಉತ್ತರ ಪ್ರದೇಶ ಮತ್ತು ರಾಜಸ್ಥಾನ ರಾಜ್ಯ ಸರ್ಕಾರಗಳು ಈಗಾಗಲೇ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವೆ ಸ್ಮೃತಿ ಇರಾನಿ ಅವರಿಗೆ ಸಿನಿಮಾ ಬಿಡುಗಡೆ ಕುರಿತು ಸ್ಪಷ್ಟಣೆ ಕೇಳಿ ಪತ್ರವನ್ನು ಬರೆದಿವೆ. ಸಿನಿಮಾ ಬಿಡುಗಡೆ ಆಗುವುದರಿಂದ ಯಾವುದೇ ಸಮುದಾಯದ ಜನರಿಗೆ ನೋವುಂಟು ಆಗಬಾರದು. ಈ ಹಿನ್ನೆಲೆಯಲ್ಲಿ ಪದ್ಮಾವತಿ ಸಿನಿಮಾ ಒಳಗೊಂಡಿರುವ ಕಥಾ ಹಂದರವನ್ನು ಪರಿಶೀಲಿಸಲು ಹಿರಿಯ ಇತಹಾಸ ತಜ್ಞರು, ಸಿನಿಮಾ ನಿರ್ಮಾಪಕರು ಒಳಗೊಂಡಿರುವ ಸಮಿತಿ ರಚಿಸಲಾಗುತ್ತಿದೆ ಎಂದು ಮಾಧ್ಯಮಗಳು ಪ್ರಕಟಿಸಿವೆ.

    ಸಿನಿಮಾದಲ್ಲಿ ಅಲ್ಲಾವುದ್ದೀನ್ ಖಿಲ್ಜಿ ಮತ್ತು ಪದ್ಮಾವತಿ ನಡುವೆ ಯಾವುದೇ ರೊಮ್ಯಾಂಟಿಕ್ ಸೀನ್ ಗಳಿಲ್ಲ ಎಂದು ಚಿತ್ರದ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಸ್ಪಷ್ಟನೆ ನೀಡಿದ್ದಾರೆ. ಸಿನಿಮಾದಲ್ಲಿ ಪದ್ಮಾವತಿಯಾಗಿ ದೀಪಿಕಾ ಪಡುಕೋಣೆ. ಅಲ್ಲಾವುದ್ದೀನ್ ಖಿಲ್ಜಿ ಪಾತ್ರದಲ್ಲಿ ರಣ್‍ವೀರ್ ಸಿಂಗ್ ಮತ್ತು ರಾವಲ್ ರತನ್ ಸಿಂಗ್ ಪಾತ್ರದಲ್ಲಿ ಶಾಹಿದ್ ಕಪೂರ್ ನಟಿಸಿದ್ದಾರೆ.

     

     

    https://twitter.com/deepikapadukone/status/917215585942904832

    https://twitter.com/deepikapadukone/status/910668862336544768

    https://twitter.com/deepikapadukone/status/910673498376364033