Tag: Karthik Advait

  • ಶಿವರಾಜ್‌ಕುಮಾರ್‌ಗೆ ತೆಲುಗು ನಿರ್ದೇಶಕ ಆ್ಯಕ್ಷನ್ ಕಟ್

    ಶಿವರಾಜ್‌ಕುಮಾರ್‌ಗೆ ತೆಲುಗು ನಿರ್ದೇಶಕ ಆ್ಯಕ್ಷನ್ ಕಟ್

    ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್‌ (Shivarajkumar) ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರಗಳ ಪೈಕಿ ನಿರೀಕ್ಷೆ ಹೆಚ್ಚಿಸಿರುವುದು ಈ ಸಿನಿಮಾ. ಈ ಚಿತ್ರದ ಕುರಿತ ಹೊಸ ಅಪ್‌ಡೇಟ್ ಸಿಕ್ಕಿದೆ. ಇಂದು ಶಿವಣ್ಣನ ಮಡದಿ ಗೀತಾ ಶಿವರಾಜ್ ಕುಮಾರ್ ಹುಟ್ಟುಹಬ್ಬದ ವಿಶೇಷವಾಗಿ ಚಿತ್ರತಂಡ ಹೊಸ ಪೋಸ್ಟರ್ ಬಿಡುಗಡೆ ಮಾಡಿ ಶುಭ ಕೋರಿದೆ. ಇದನ್ನೂ ಓದಿ:ಇಂದಿನಿಂದ ಬಿಗ್ ಬಾಸ್ ಒಟಿಟಿ ಸ್ಟಾರ್ಟ್- ಸ್ಪರ್ಧಿಗಳ ಲಿಸ್ಟ್ ಔಟ್

    ಶಿವರಾಜ್ ಕುಮಾರ್‌ಗೆ ಆ್ಯಕ್ಷನ್ ಕಟ್ ಹೇಳ್ತಿರುವುದು ತೆಲುಗು ನಿರ್ದೇಶಕ ಕಾರ್ತಿಕ್ ಅದ್ವೈತ್. ತಮಿಳಿನಲ್ಲಿ ವಿಕ್ರಂ ಪ್ರಭು ಅಭಿನಯದ ಪಾಯುಮ್ ಒಲಿ ನೀ ಎನಕ್ಕು ಚಿತ್ರ ನಿರ್ದೇಶಿಸಿದ್ದಾರೆ. ಇದೀಗ ಸ್ಯಾಂಡಲ್ವುಡ್ (Sandalwood) ಅಂಗಳಕ್ಕೆ ಎಂಟ್ರಿ ಕೊಡ್ತಿರುವ ಇವರಿಗೆ ನಿರ್ದೇಶಕನಾಗಿ ಎರಡನೇ ಸಿನಿಮಾ.

    ಇದೊಂದು ಆ್ಯಕ್ಷನ್ ಥ್ರಿಲ್ಲರ್ ಸಿನಿಮಾವಾಗಿದ್ದು, ಶಿವಣ್ಣ ಡಿಫೆರೆಂಟ್ ಲುಕ್‌ನಲ್ಲಿ ಕಾಣಸಿಕೊಳ್ಳಲಿದ್ದಾರೆ. ಸ್ಕ್ರಿಪ್ಟ್ ಕೆಲಸ ಮುಗಿದಿದ್ದು, ಸದ್ಯ ಮ್ಯೂಸಿಕ್ ವರ್ಕ್ ಭರದಿಂದ ಸಾಗುತ್ತಿದೆ. ಆಗಸ್ಟ್ ತಿಂಗಳಲ್ಲಿ ಮುಹೂರ್ತ ನಡೆಯಲಿದೆ. ಸದ್ಯಕ್ಕೆ ಬೇರೆ ಕಲಾವಿದರ ಆಯ್ಕೆ ಪ್ರಕ್ರಿಯೆ ಮುಗಿದಿದ್ದು, ಚಿತ್ರೀಕರಣಕ್ಕೆ ತೆರಳಲು ಸಜ್ಜಾಗಿದೆ ಚಿತ್ರತಂಡ. ಸ್ಯಾಮ್ ಸಿ.ಎಸ್ ಸಂಗೀತ, ಎಜೆ ಶೆಟ್ಟಿ ಛಾಯಾಗ್ರಹಣ, ದೀಪು S ಕುಮಾರ್ ಸಂಕಲನ, ರವಿ ಸಂತೆಹಕ್ಲು ಕಲಾ ನಿರ್ದೇಶನ ಚಿತ್ರಕ್ಕಿದೆ.

  • ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟ ‘ವಿಕ್ರಂ ವೇದ’ ಮ್ಯೂಸಿಕ್ ಡೈರೆಕ್ಟರ್

    ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟ ‘ವಿಕ್ರಂ ವೇದ’ ಮ್ಯೂಸಿಕ್ ಡೈರೆಕ್ಟರ್

    ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಹುಟ್ಟುಹಬ್ಬಕ್ಕೆ ಸಾಲು ಸಾಲು ಸಿನಿಮಾಗಳು ಘೋಷಣೆಯಾಗಿವೆ. ಏಕಕಾಲಕ್ಕೆ ಹತ್ತಕ್ಕೂ ಹೆಚ್ಚು ಚಿತ್ರಗಳು ಅನೌನ್ಸ್ ಆಗಿವೆ. ಈ ಪೈಕಿ ಶಿವಣ್ಣ ‘SCFC01’ ಎಂಬ ತಾತ್ಕಾಲಿಕ ಶೀರ್ಷಿಕೆಯಡಿ ಹೊಸ ಸಿನಿಮಾದ ಪೋಸ್ಟರ್ ಬಿಡುಗಡೆ ಮಾಡಲಾಗಿದೆ‌. ಈ ಚಿತ್ರದ ಮೂಲಕ ಖ್ಯಾತ ಸಂಗೀತ ನಿರ್ದೇಶಕರಾದ ಸ್ಯಾಮ್ ಸಿ.ಎಸ್ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ.

    ವಿಕ್ರಂ ವೇದ ಸೇರಿದಂತೆ ಹಲವು ಬ್ಲಾಕ್ ಬಸ್ಟರ್ ಹಿಟ್ ಸಿನಿಮಾಗಳಿಗೆ ಟ್ಯೂನ್ ಹಾಕಿರುವ ಸ್ಯಾಮ್, ಇದೀಗ ಕರುನಾಡ ಚಕ್ರವರ್ತಿ ಶಿವಣ್ಣ ಬಣ್ಣ ಹಚ್ಚಲಿರುವ ಅಪ್ ಕಮ್ಮಿಂಗ್ ಪ್ರಾಜೆಕ್ಟ್ ಗೆ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.  ಸುಧೀರ್ ಚಂದ್ರ ಪದ್ರಿ ನಿರ್ಮಿಸುತ್ತಿರುವ ಈ ಚಿತ್ರವನ್ನು ಕಾರ್ತಿಕ್ ಅದ್ವೈತ್ ನಿರ್ದೇಶನದಲ್ಲಿ ಮಾಡಲಿದ್ದಾರೆ. ಇದನ್ನೂ ಓದಿ:ಕೊನೆಗೂ ಮಗುವಿನ ತಂದೆ ಯಾರೆಂದು ಗುಟ್ಟು ಬಿಟ್ಟು ಕೊಟ್ಟ ಇಲಿಯಾನಾ

    ಇದು ಪ್ಯಾನ್ ಇಂಡಿಯಾ ಸಿನಿಮಾ ಆಗಿದ್ದು, ಕನ್ನಡ, ತೆಲುಗು, ಮಲಯಾಳಂ ಹಾಗೂ ತಮಿಳು ಭಾಷೆಯಲ್ಲಿ ಬಿಡುಗಡೆಯಾಗಲಿದೆ. ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಪ್ರಾಜೆಕ್ಟ್ ಮೂಲಕ ಸ್ಯಾಮ್ ಸಿ ಎಸ್ ಪ್ಯಾನ್ ಇಂಡಿಯಾ ಮ್ಯೂಸಿಕಲ್ ಐಕಾನ್ ಆಗಲಿದ್ದಾರೆ.

     

    ಈ ಸಿನಿಮಾದ ಹೆಚ್ಚಿನ ಮಾಹಿತಿ ಇರದೇ ಇದ್ದರೂ, ಮುಂದಿನ ದಿನಗಳಲ್ಲಿ ತಾರಾಗಣ ಮತ್ತು ಇತರ ವಿಷಯಗಳನ್ನು ಹಂಚಿಕೊಳ್ಳುವುದಾಗಿ ಚಿತ್ರತಂಡ ತಿಳಿಸಿದೆ. ಈ ಮೂಲಕ ಕನ್ನಡಕ್ಕೆ ಮತ್ತೋರ್ವ ಪ್ರತಿಭಾವಂತ ಸಂಗೀತ ನಿರ್ದೇಶಕರನ್ನು ಚಿತ್ರತಂಡ ಪರಿಚಯಿಸುತ್ತಿದೆ. ಅಲ್ಲದೇ, ಮುಂದಿನ ದಿನಗಳಲ್ಲಿ ಮತ್ತಷ್ಟು ಅಪ್ ಡೇಟ್ ನೀಡುವುದಾಗಿಯೂ ತಿಳಿಸಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಶಿವಣ್ಣನ ಹುಟ್ಟುಹಬ್ಬಕ್ಕೆ ಹೊಸ ಚಿತ್ರದ ಕಾನ್ಸೆಪ್ಟ್ ಪೋಸ್ಟರ್ ಬಿಡುಗಡೆ

    ಶಿವಣ್ಣನ ಹುಟ್ಟುಹಬ್ಬಕ್ಕೆ ಹೊಸ ಚಿತ್ರದ ಕಾನ್ಸೆಪ್ಟ್ ಪೋಸ್ಟರ್ ಬಿಡುಗಡೆ

    ರುನಾಡ ಚಕ್ರವರ್ತಿ ಶಿವರಾಜಕುಮಾರ್ (Shivaraj Kumar) ಇಂದು ತಮ್ಮ ಹುಟ್ಟುಹಬ್ಬವನ್ನು (Birthday)  ಆಚರಿಸಿಕೊಳ್ಳುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಹೊಸದೊಂದು ಚಿತ್ರವನ್ನು ಅವರು ಒಪ್ಪಿಕೊಂಡಿದ್ದು, ಹುಟ್ಟುಹಬ್ಬದ ಈ ಸಂದರ್ಭದಲ್ಲಿ ಈ ಚಿತ್ರದಲ್ಲಿನ ಅವರ ಪಾತ್ರದ ಕಾನ್ಸೆಪ್ಟ್ ಪೋಸ್ಟರ್ (Concept Poster) ಬಿಡುಗಡೆ ಮಾಡಲಾಗಿದೆ.

    ಈ ಹಿಂದೆ ತಮಿಳಿನಲ್ಲಿ ವಿಕ್ರಮ್ ಪ್ರಭು ಅಭಿನಯದ ‘ಪಾಯುಮ್ ಒಳಿ ನೀ ಎನಕ್ಕು’ ಎಂಬ ಚಿತ್ರವನ್ನು ನಿರ್ದೇಶಿಸಿದ್ದ ಕಾರ್ತಿಕ್ ಅದ್ವೈತ್ (Karthik Advait) ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಸುಧೀರ್ ಚಂದ್ರ ಫಿಲಂ ಕಂಪನಿ ಮೂಲಕ ಸುಧೀರ್ ಚಂದ್ರ ಪದಿರಿ ನಿರ್ಮಿಸುತ್ತಿದ್ದಾರೆ. ಇದು ಅವರು ಕನ್ನಡದಲ್ಲಿ ನಿರ್ಮಿಸುತ್ತಿರುವ ಮೊದಲ ಚಿತ್ರವಾಗಿದೆ. ‘ವಿಕ್ರಮ್ ವೇದ’ ಮತ್ತು ‘ಕೈದಿ’ ಚಿತ್ರಗಳಿಗೆ ಸಂಗೀತ ಸಂಯೋಜಿಸಿದ್ದ ಸ್ಯಾಮ್ ಸಿ.ಎಸ್ ಈ ಚಿತ್ರಕ್ಕೆ ಸಂಗೀತ ಸಂಯೋಜಿಸುವ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಇದನ್ನೂ ಓದಿ:ಅಮೆರಿಕಾದಲ್ಲಿ ಅವಳಿ ಮಕ್ಕಳಿಗೆ ಕೇಶ ಮುಂಡನ ಮಾಡಿಸಿದ ಪ್ರೀತಿ ಜಿಂಟಾ

    ಇದೊಂದು ಆಕ್ಷನ್ ಚಿತ್ರವಾಗಿದ್ದು, ದಕ್ಷಿಣ ಭಾರತದ ಜನಪ್ರಿಯ ನಟ-ನಟಿಯರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರವು ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂನಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದ್ದು, ಸದ್ಯದಲ್ಲೇ ಈ ಚಿತ್ರದ ಹೆಚ್ಚಿನ ವಿವರಗಳು ಹೊರಬೀಳಲಿವೆ.

    ಶಿವರಾಜ್ ಕುಮಾರ್ ಹುಟ್ಟು ಹಬ್ಬದಂದು ಅವರ ನಟನೆಯ ಸಿನಿಮಾಗಳ ಪೋಸ್ಟರ್, ಟೀಸರ್ ಇಂದು ಬಿಡುಗಡೆ ಆಗುತ್ತಿವೆ. ಬೆಳಗ್ಗೆಯಿಂದಲೇ ಶಿವರಾಜ್ ಕುಮಾರ್ ಮನೆ ಮುಂದೆ ಅಭಿಮಾನಿಗಳು ನೆರೆದಿದ್ದು, ನೆಚ್ಚಿನ ನಟನ ಹುಟ್ಟು ಹಬ್ಬವನ್ನು ಸಡಗರದಿಂದ ಆಚರಿಸುತ್ತಿದ್ದಾರೆ. ನಾನಾ ರೀತಿಯ ಕಾರ್ಯಕ್ರಮಗಳನ್ನೂ ಇಂದು ಹಮ್ಮಿಕೊಂಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]