Tag: Karthik Reddy

  • ಸಿಪಿ ಯೋಗೇಶ್ವರ್ ಬಾವ ಮಹದೇವಯ್ಯ ಪತ್ತೆಗೆ ನಾಲ್ಕು ತಂಡ ರಚನೆ: ಎಸ್ಪಿ

    ಸಿಪಿ ಯೋಗೇಶ್ವರ್ ಬಾವ ಮಹದೇವಯ್ಯ ಪತ್ತೆಗೆ ನಾಲ್ಕು ತಂಡ ರಚನೆ: ಎಸ್ಪಿ

    ರಾಮನಗರ: ಮಾಜಿ ಸಚಿವ ಸಿಪಿ ಯೋಗೇಶ್ವರ್ (CP Yogeshwar) ಅವರ ಬಾವ ಮಹದೇವಯ್ಯ (Mahadevaiah) ಅನುಮಾನಾಸ್ಪದ ನಾಪತ್ತೆ ಪ್ರಕರಣ ಹಿನ್ನೆಲೆ ಮಹದೇವಯ್ಯ ಪತ್ತೆಗೆ ಚನ್ನಪಟ್ಟಣ (Channapatna) ಡಿವೈಎಸ್ಪಿ ನೇತೃತ್ವದಲ್ಲಿ 4 ತಂಡ ರಚನೆ ಮಾಡಲಾಗಿದೆ ಎಂದು ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿ (Karthik Reddy) ಮಾಹಿತಿ ನೀಡಿದ್ದಾರೆ.

    ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದೇವಯ್ಯ ಪುತ್ರ ಪ್ರಶಾಂತ್ ದೂರಿನ ಅನ್ವಯ ನಾಪತ್ತೆ ಪ್ರಕರಣ ದಾಖಲಾಗಿದೆ. ನಿರಂತರವಾಗಿ ಮೊಬೈಲ್ ಲೊಕೇಷನ್ ಪರಿಶೀಲನೆ ಮಾಡಲಾಗುತ್ತಿದೆ. ಒಂದು ಬಾರಿ ಯಾರೋ ಕರೆ ರಿಸೀವ್ ಮಾಡಿ ಮಾತನಾಡಿದರು. ಬಳಿಕ ಮೊಬೈಲ್ ಮತ್ತೆ ಸ್ವಿಚ್‌ಆಫ್ ಆಗಿದೆ. ಅವರು ಬಳಸುತ್ತಿದ್ದ ಕಾರು ಕೂಡಾ ಕಾಣೆಯಾಗಿದೆ ಎಂದರು. ಇದನ್ನೂ ಓದಿ: ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಬಾವ ನಾಪತ್ತೆ – ಕಿಡ್ನ್ಯಾಪ್ ಶಂಕೆ

    ತೋಟದ ಮನೆಯ ಸಿಸಿಟಿವಿ ಈ ಹಿಂದೆಯೇ ಕೆಟ್ಟುಹೋಗಿದೆ. ಅಕ್ಕಪಕ್ಕದ ಮನೆಗಳ ಸಿಸಿಟಿವಿಗಳನ್ನು ಪರಿಶೀಲನೆ ಮಾಡುತ್ತಿದ್ದೇವೆ. ಎಲ್ಲಾ ಆಯಾಮದಲ್ಲೂ ತನಿಖೆ ನಡೆಯುತ್ತಿದೆ ಎಂದು ಕಾರ್ತಿಕ್ ರೆಡ್ಡಿ ತಿಳಿಸಿದ್ದಾರೆ. ಇದನ್ನೂ ಓದಿ: ದೇಶಾದ್ಯಂತ ಜಾತಿ ಗಣತಿಗೆ ಮುಂದಾಗಿದ್ದ ಕಾಂಗ್ರೆಸ್‌ಗೆ ಬಿಗ್‌ ಶಾಕ್‌

    ವಿಧಾನಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಅವರ ಬಾವ ಮಹದೇವಯ್ಯ ಅನುಮಾನಾಸ್ಪದವಾಗಿ ನಾಪತ್ತೆಯಾಗಿದ್ದು ಅಪಹರಣದ ಶಂಕೆ ವ್ಯಕ್ತವಾಗಿದೆ. ಯೋಗೇಶ್ವರ್ ಅವರ ಸಹೋದರಿ ಪುಷ್ಪ ಅವರ ಪತಿ ಮಹದೇವಯ್ಯ (58) ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದು, ಕುಟುಂಬದ ಜೊತೆ ಬೆಂಗಳೂರಿನಲ್ಲಿ ವಾಸವಾಗಿದ್ದರು. ಚನ್ನಪಟ್ಟಣದ ವಡ್ಡರದೊಡ್ಡಿ ಹೊರವಲಯದಲ್ಲಿದ್ದ ಅವರ ತೋಟದ ಮನೆಗೆ ಶುಕ್ರವಾರ ಬಂದು ಅಲ್ಲಿಯೇ ತಂಗಿದ್ದರು. ಶನಿವಾರ ಬೆಳಗ್ಗೆಯಿಂದ ಮೊಬೈಲ್ ಸ್ವಿಚ್‌ಆಫ್ ಆಗಿದ್ದು, ನಾಪತ್ತೆಯಾಗಿರುವುದು ಕುಟುಂಬಸ್ಥರ ಆತಂಕಕ್ಕೆ ಕಾರಣವಾಗಿದೆ. ಇದನ್ನೂ ಓದಿ: UPಗೆ ಯೋಗಿ ಆದಿತ್ಯನಾಥ್‌, ರಾಜಸ್ಥಾನಕ್ಕೆ ಬಾಲಕನಾಥ್‌ – ಸಿಎಂ ರೇಸ್‌ನಲ್ಲಿ ಮತ್ತೊಬ್ಬರು ಯೋಗಿ

    ತೋಟದ ಮನೆಯಲ್ಲಿನ ಬಾಗಿಲು ಒಡೆದಿದ್ದು, ರೂಂನಲ್ಲಿದ್ದ ಬೀರು, ಬಟ್ಟೆಗಳು ಹಾಗೂ ಮನೆಯಲ್ಲಿರುವ ವಸ್ತುಗಳು ಚಲ್ಲಾಪಿಲ್ಲಿಯಾಗಿ ಬಿದ್ದಿವೆ. ಜೊತೆಗೆ ಅವರ ಕಾರು ಸಹ ಕಾಣೆಯಾಗಿದೆ. ಇದನ್ನೂ ಓದಿ: ಕೆಸಿಆರ್‌, ಕೆಟಿಆರ್‌ಗೆ ತೆಲಂಗಾಣ ಜನರೇ ಉತ್ತರ ಕೊಟ್ಟಿದ್ದಾರೆ: ‘ಕೈ’ ಮುನ್ನಡೆಗೆ ಡಿಕೆಶಿ ಪ್ರತಿಕ್ರಿಯೆ

  • ಪುನೀತ್ ಕೆರೆಹಳ್ಳಿ ಬಂಧನಕ್ಕೆ ನಾಲ್ಕು ತಂಡ ರಚನೆ, ಪ್ರಕರಣದಲ್ಲಿ 3 ಎಫ್‌ಐಆರ್ – ಎಸ್ಪಿ ಕಾರ್ತಿಕ್ ರೆಡ್ಡಿ

    ಪುನೀತ್ ಕೆರೆಹಳ್ಳಿ ಬಂಧನಕ್ಕೆ ನಾಲ್ಕು ತಂಡ ರಚನೆ, ಪ್ರಕರಣದಲ್ಲಿ 3 ಎಫ್‌ಐಆರ್ – ಎಸ್ಪಿ ಕಾರ್ತಿಕ್ ರೆಡ್ಡಿ

    ರಾಮನಗರ: ಕನಕಪುರ (Kanakapura) ತಾಲೂಕಿನ ಸಾತನೂರು ಬಳಿ ಜಾನುವಾರು ರಕ್ಷಣೆ ವೇಳೆ ವ್ಯಕ್ತಿ ಅನುಮಾನಸ್ಪದವಾಗಿ ಸಾವನ್ನಪ್ಪಿದ ಪ್ರಕರಣ ಹಿನ್ನೆಲೆ ಮೃತ ವ್ಯಕ್ತಿ ಇದ್ರೀಷ್ ಪಾಷ ಸಾವಿಗೆ ನಿಖರ ಕಾರಣ ಏನೆಂಬುದು ಪರೀಕ್ಷೆ ಹಾಗೂ ಎಫ್‌ಎಸ್‌ಎಲ್ (FSL) ವರದಿ ಬಂದ ಬಳಿಕವಷ್ಟೇ ತಿಳಿಯಲಿದೆ ಎಂದು ರಾಮನಗರ (Ramanagara) ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಕಾರ್ತಿಕ್ ರೆಡ್ಡಿ (Karthik Reddy) ಮಾಹಿತಿ ನೀಡಿದ್ದಾರೆ.

    ಪ್ರಕರಣ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಕನಕಪುರ ವೈದ್ಯರ ತಂಡವು ಇದ್ರೀಷ್ ಅವರ ಮರಣೋತ್ತರ ಪರೀಕ್ಷೆ ನಡೆಸಿದೆ. ಅವರಿಂದ ಎಫ್‌ಎಸ್‌ಎಲ್ ವರದಿಯನ್ನು ಪಡೆಯಲಾಗುತ್ತದೆ. ಸದ್ಯ ತನಿಖೆ ಪ್ರಗತಿಯಲ್ಲಿದ್ದು, ನಿಷ್ಪಕ್ಷಪಾತವಾಗಿ ತನಿಖೆ ನಡೆಸುತ್ತೇವೆ. ಪ್ರಕರಣದ ಪ್ರಮುಖ ಆರೋಪಿ ಪುನೀತ್ ಕೆರೆಹಳ್ಳಿ ಹಾಗೂ ಸಹಚರರ ಬಂಧನಕ್ಕೆ ಈಗಾಗಲೇ ನಾಲ್ಕು ತಂಡಗಳನ್ನು ರಚಿಸಲಾಗಿದೆ. ಆರೋಪಿ ಇನ್ನೂ ಪತ್ತೆಯಾಗಿಲ್ಲ. ಇಡೀ ಪ್ರಕರಣ ಕುರಿತು ಸಾತನೂರು ಠಾಣೆಯಲ್ಲಿ ಮೂರು ಎಫ್‌ಐಆರ್‌ಗಳು (FIR) ದಾಖಲಾಗಿವೆ ಎಂದರು. ಇದನ್ನೂ ಓದಿ: ಜನಾರ್ದನ ರೆಡ್ಡಿ ಸಮ್ಮುಖದಲ್ಲೇ ಅಭ್ಯರ್ಥಿಗೆ 1 ಲಕ್ಷ ಹಣ ನೀಡಿದ ಸ್ವಾಮೀಜಿ 

    ಮೊದಲಿಗೆ ಅಕ್ರಮ ಗೋವು ಸಾಗಣೆಗೆ ಸಂಬಂಧಿಸಿದಂತೆ ಪುನೀತ್ ಕೆರೆಹಳ್ಳಿ ದೂರು ನೀಡಿದ್ದರು. ಬಳಿಕ ಗೋವು ಸಂರಕ್ಷಣೆ ನೆಪದಲ್ಲಿ ನಮ್ಮ ಮೇಲೆ ದಾಳಿ ಮಾಡಿದ್ದಾರೆ ಎಂದು ಕ್ಯಾಂಟರ್ ಚಾಲಕ ಪ್ರತಿ ದೂರು ನೀಡಿದ್ದು, ಮರು ದಿನ ಬೆಳಗ್ಗೆ 8 ಗಂಟೆಯ ಸುಮಾರಿಗೆ ಘಟನೆ ನಡೆದ ಸ್ಥಳದ 100 ಮೀಟರ್ ದೂರದಲ್ಲಿ ಇದ್ರೀಷ್ ಪಾಷಾ ಅವರ ಶವ ಪತ್ತೆ ಆಗಿದೆ. ಈ ಕುರಿತು ಅವರ ಸಹೋದರ ಯೂನುಸ್ ಪಾಷಾ ನೀಡಿದ ದೂರಿನ ಅನ್ವಯ ಮತ್ತೊಂದು ಎಫ್‌ಐಆರ್ ದಾಖಲಿಸಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 70 ಸೀಟ್ ಬಂದ್ರೆ ಲಿಂಗಾಯತರು ಸಿಎಂ ಆಗ್ತಾರೆ: ಶಾಮನೂರು ಸ್ಫೋಟಕ ಹೇಳಿಕೆ