Tag: Karthik Sharma

  • ಗೆದ್ದು ಬೀಗಿದ ಲೂಸ್ ಮಾದ ಯೋಗಿಯ ‘ಲಂಕೆ’ ಸಿನಿಮಾ – 25 ದಿನದ ಸಂಭ್ರಮದಲ್ಲಿ ಚಿತ್ರತಂಡ

    ಗೆದ್ದು ಬೀಗಿದ ಲೂಸ್ ಮಾದ ಯೋಗಿಯ ‘ಲಂಕೆ’ ಸಿನಿಮಾ – 25 ದಿನದ ಸಂಭ್ರಮದಲ್ಲಿ ಚಿತ್ರತಂಡ

    ಬೆಂಗಳೂರು: ಲೂಸ್ ಮಾದ ಯೋಗಿ ಅಭಿನಯದ ‘ಲಂಕೆ’ ಸಿನಿಮಾ ಥಿಯೇಟರ್ ಅಂಗಳದಲ್ಲಿ ಸಖತ್ ಸೌಂಡ್ ಮಾಡುತ್ತಿದೆ. ಗಣೇಶ ಚತುರ್ಥಿಗೆ ಬಿಡುಗಡೆಯಾದ ಲಂಕೆ ಸಿನಿಮಾ ಭರ್ಜರಿ ಓಪನಿಂಗ್ ಜೊತೆಗೆ ಪ್ರೇಕ್ಷಕರಿಗೆ ಭರಪೂರ ಮನರಂಜನೆ ನೀಡುತ್ತಿದೆ.

    ಬಿಡುಗಡೆಯಾದ ಎಲ್ಲಾ ಭಾಗದಲ್ಲೂ ಪಾಸಿಟಿವ್ ರೆಸ್ಪಾನ್ಸ್ ಗಿಟ್ಟಿಸಿಕೊಂಡ ಸಿನಿಮಾ ಲೂಸ್ ಮಾದ ಯೋಗಿಗೆ ಭರ್ಜರಿ ಕಂಬ್ಯಾಕ್ ನೀಡಿದೆ. ಬಿಡುಗಡೆಯಾದ ದಿನದಿಂದಲೂ ಹೌಸ್ ಫುಲ್ ಪ್ರದರ್ಶನದೊಂದಿಗೆ ಚಿತ್ರಮಂದಿರಗಳಲ್ಲಿ ‘ಲಂಕೆ’ ಓಟ ಜೋರಾಗಿದ್ದು, ಇದೀಗ 25 ದಿನಗಳನ್ನು ಯಶಸ್ವಿಯಾಗಿ ಪೂರೈಸಿದ ಸಂಭ್ರಮದಲ್ಲಿದೆ ಚಿತ್ರತಂಡ.  ಇದನ್ನೂ ಓದಿ:  ಯಾರೂ ನನ್ನನ್ನು ಕೈಹಿಡಿದಿಲ್ಲ: ರಣವೀರ್ ಸಿಂಗ್

    ದಿ ಗ್ರೇಟ್ ಎಂಟಟೈನರ್ಸ್ ಬ್ಯಾನರ್ ನಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿ ತೆರೆಕಂಡ ಸಿನಿಮಾ ‘ಲಂಕೆ’. ಒಂದು ಬಿಗ್ ಕಂಬ್ಯಾಕ್ ಗಾಗಿ ಕಾಯುತ್ತಿದ್ದ ಯೋಗಿಗೆ ಪರ್ಫೆಕ್ಟ್ ಸಿನಿಮಾ ಎಂಬಂತೆ ‘ಲಂಕೆ’ ಮೂಡಿ ಬಂದಿತ್ತು. ರಾಮ್ ಪ್ರಸಾದ್ ಮಾಡಿಕೊಂಡಿದ್ದ ಪಕ್ಕಾ ಔಟ್ ಅಂಡ್ ಔಟ್ ಕಮರ್ಶಿಯಲ್ ಎಳೆಯ ಸಬ್ಜೆಕ್ಟ್ ಕೂಡ ಅಷ್ಟೇ ಥ್ರಿಲ್ಲಿಂಗ್ ಆಗಿತ್ತು. ಮಾಸ್ ಆಕ್ಷನ್ ಡ್ರಾಮಾ ಸಬ್ಜೆಕ್ಟ್ ಯೋಗಿಗೆ ಹೇಳಿ ಮಾಡಿಸಿದಂತಿತ್ತು. ಜೊತೆಗೆ ಸಿನಿಮಾ ಹಾಡುಗಳು, ಹೈವೋಲ್ಟೇಜ್ ಆಕ್ಷನ್ ಸೀಕ್ವೆನ್ಸ್ ಎಲ್ಲದರ ಜುಗಲ್ಬಂದಿ ಚಿತ್ರರಸಿಕರಿಗೆ ಫುಲ್ ಪ್ಯಾಕೇಜ್ ಮನೋರಂಜನೆ ನೀಡಿದೆ. ಗಲ್ಲಾಪೆಟ್ಟಿಗೆಯಲ್ಲೂ ಸೌಂಡ್ ಮಾಡಿದೆ. ಇದೀಗ ನಿರೀಕ್ಷೆಯಂತೆ ಗೆಲುವಿನ ನಗೆ ಬೀರಿ 25 ದಿನಗಳನ್ನು ಯಶ್ವಸಿಯಾಗಿ ಪೂರೈಸಿದೆ ‘ಲಂಕೆ’ ಚಿತ್ರ.

    ಲೂಸ್ ಮಾದ ಯೋಗಿ, ಕೃಷಿ ತಾಪಂಡ, ಕಾವ್ಯಾ ಶೆಟ್ಟಿ, ಎಸ್ಟರ್ ನರೋನ್ಹಾ, ಸಂಚಾರಿ ವಿಜಯ್ ಮುಖ್ಯ ಭೂಮಿಕೆಯ ಈ ಚಿತ್ರದಲ್ಲಿ ಸ್ಯಾಂಡಲ್ ವುಡ್ ಘಟಾನುಘಟಿ ಸ್ಟಾರ್ ಕಲಾವಿದರಾದ ಸುಚೇಂದ್ರ ಪ್ರಸಾದ್, ಶರತ್ ಲೋಹಿತಾಶ್ವ, ಶೋಭರಾಜ್, ಡ್ಯಾನಿ ಕುಟ್ಟಪ್ಪ ಸೇರಿದಂತೆ ಹಲವು ಕಲಾವಿದರು ಅಮೋಘ ಅಭಿನಯದ ಮೂಲಕ ಗಮನ ಸೆಳೆದಿದ್ದಾರೆ. ಇದನ್ನೂ ಓದಿ:  ಶಾರೂಖ್, ಗೌರಿ ಖಾನ್ ಬೆಂಬಲಕ್ಕೆ ನಿಂತ ಹೃತಿಕ್ ಮಾಜಿ ಪತ್ನಿ, ಮಿಕಾ ಸಿಂಗ್!

    ಕಾರ್ತಿಕ್ ಶರ್ಮಾ ಸಂಗೀತ, ರಮೇಶ್ ಬಾಬು ಕ್ಯಾಮೆರಾ ವರ್ಕ್ ಚಿತ್ರದ ಮತ್ತೊಂದು ಪ್ಲಸ್ ಪಾಯಿಂಟ್. ಒಟ್ನಲ್ಲಿ, ಪ್ರೇಕ್ಷಕರಿಗೆ ಮನರಂಜನೇ ನೀಡೋದ್ರ ಜೊತೆಗೆ ಗಲ್ಲಾಪೆಟ್ಟಿಗೆಯಲ್ಲೂ ಒಳ್ಳೆ ಕಲೆಕ್ಷನ್ ಮಾಡಿದೆ ಲಂಕೆ.

  • ರಾಮ್ ಪ್ರಸಾದ್ ನಿರ್ದೇಶನದ ಲಂಕೆ ಸೆ.10ರಂದು ಚಿತ್ರಮಂದಿರಕ್ಕೆ

    ರಾಮ್ ಪ್ರಸಾದ್ ನಿರ್ದೇಶನದ ಲಂಕೆ ಸೆ.10ರಂದು ಚಿತ್ರಮಂದಿರಕ್ಕೆ

    ಬೆಂಗಳೂರು: ಲೂಸ್ ಮಾದ ಯೋಗಿ ಅಭಿನಯದ ಲಂಕೆ ಸಿನಿಮಾ ಬಿಡುಗಡೆಯ ಬಾಗಿಲಿಗೆ ಬಂದು ನಿಂತಿದೆ. ಟೀಸರ್ ಮೂಲಕ ಸಖತ್ ಸೌಂಡ್ ಮಾಡಿದ್ದ ಲಂಕೆ ಹಾಡುಗಳ ಮೂಲಕವು ಮೋಡಿ ಮಾಡಿದೆ.

    ಸೆಪ್ಟೆಂಬರ್ 10ರಂದು ಸಿನಿಮಾ ಬಿಡುಗಡೆಗೆ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ ಚಿತ್ರತಂಡ. ಲಂಕೆ ನಿರ್ದೇಶಕ ರಾಮ್ ಪ್ರಸಾದ್ ಎರಡನೇ ಸಿನಿಮಾ. ಬಣ್ಣ ಬಣ್ಣದ ಲೋಕ ಸಿನಿಮಾ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದ ಇವರು ಲಂಕೆ ಎನ್ನುವ ಔಟ್ ಅಂಡ್ ಔಟ್ ಕಮರ್ಶಿಯಲ್ ಸಿನಿಮಾ ಮೂಲಕ ಕಮಾಲ್ ಮಾಡಲು ಬಂದಿದ್ದಾರೆ. ಚಿತ್ರಕ್ಕೆ ಕಥೆ ಚಿತ್ರಕಥೆ ಕೂಡ ಇವರದ್ದೆ. ಟೀಸರ್ ನೋಡಿ ಪ್ರೇಕ್ಷಕರು ನೀಡುತ್ತಿರುವ ಪ್ರತಿಕ್ರಿಯೆ ಖುಷಿ ಕೊಟ್ಟಿದೆ, ಸಿನಿಮಾ ಕೂಡ ಇಷ್ಟವಾಗುತ್ತೆ ಎನ್ನುವ ಭರವಸೆಯನ್ನು ನೀಡಿದ್ದಾರೆ.

    ನೈಜ ಘಟನೆ ಆಧಾರಿತ ಈ ಚಿತ್ರ ಮಾಸ್ ಆಕ್ಷನ್ ಡ್ರಾಮಾ ಸಬ್ಜೆಕ್ಟ್ ಒಳಗೊಂಡಿದೆ. ಪ್ರತಿಯೊಬ್ಬ ವ್ಯಕ್ತಿಯಲ್ಲೂ ಒಳ್ಳೆಯ ಹಾಗೂ ಕೆಟ್ಟ ಗುಣಗಳು ಇದ್ದೆ ಇರುತ್ತೆ ಅದು ಸಮಯಕ್ಕೆ ತಕ್ಕ ಹಾಗೆ ಹೊರ ಬರುತ್ತದೆ ಎನ್ನುವುದು ಚಿತ್ರದ ಒನ್ ಲೈನ್ ಕಹಾನಿ. ಕಮರ್ಶಿಯಲ್ ಎಲಿಮೆಂಟ್ ಜೊತೆಗೆ ಎಲ್ಲಾ ರೀತಿಯ ಎಮೋಷನ್ ಗಳನ್ನು ಚಿತ್ರದಲ್ಲಿ ಕಟ್ಟಿಕೊಡಲಾಗಿದ್ದು ಪ್ರೇಕ್ಷಕರಿಗೆ ಭರಪೂರ ಮನರಂಜನೆ ನೀಡಲಿದೆ. ಈ ಸಿನಿಮಾದಿಂದ ಯೋಗಿ ಇನ್ನಷ್ಟು ಪ್ರೇಕ್ಷಕರಿಗೆ ಹತ್ತಿರವಾಗುತ್ತಾರೆ ಎನ್ನುವುದು ಚಿತ್ರದ ಬಗ್ಗೆ ನಿರ್ದೇಶಕ ರಾಮ್ ಪ್ರಸಾದ್ ಮಾತು. ಇದನ್ನೂ ಓದಿ : ಗಂಡನ ಮನೆ ಬಿಟ್ಟು ಹೋದ್ರಾ ಶಿಲ್ಪಾ ಶೆಟ್ಟಿ?

    ಚಿತ್ರದಲ್ಲಿ ದಿವಂಗತ ನಟ ಸಂಚಾರಿ ವಿಜಯ್ ಕೂಡ ಅಭಿನಯಿಸಿದ್ದು, ಶರತ್ ಲೋಹಿತಾಶ್ವ, ಡ್ಯಾನಿ ಕುಟ್ಟಪ್ಪ, ಸುಚೇಂದ್ರ ಪ್ರಸಾದ್, ಶೋಬ್ ರಾಜ್, ವಾಣಿಶ್ರೀ, ಪ್ರಶಾಂತ್ ಸಿದ್ದಿ, ಸಂಗಮೇಶ್ ಉಪಾಸೆ ಸೇರಿದಂತೆ ಹಲವು ಕಲಾವಿದರು ತಾರಾಬಳಗದಲ್ಲಿದ್ದಾರೆ. ಕೃಷಿ ತಾಪಂಡ, ಎಸ್ಟರ್ ನರೋನ, ಕಾವ್ಯಾ ಶೆಟ್ಟಿ, ಗಾಯತ್ರಿ ಜೈರಾಮ್ ಮುಖ್ಯ ಭೂಮಿಕೆಯಲ್ಲಿದ್ದಾರೆ.  ಇದನ್ನೂ ಓದಿ : ಸುದೀಪ್ ಹುಟ್ಟು ಹಬ್ಬಕ್ಕೆ ವಿಶೇಷ ಗಿಫ್ಟ್ – ಬಿಡುಗಡೆಯಾಗಲಿದೆ ಆಡಿಯೋ ಬುಕ್

    ಕಾರ್ತಿಕ್ ಶರ್ಮಾ ಸಂಗೀತ ನಿರ್ದೇಶನ, ರಮೇಶ್ ಬಾಬು ಛಾಯಾಗ್ರಹಣ, ಶಿವರಾಜ್ ಮೆಹು ಸಂಕಲನ ಚಿತ್ರಕ್ಕಿದೆ. ಪಳನಿರಾಜ್, ಅಶೋಕ್, ರವಿವರ್ಮ ಅದ್ಭುತ ಸಾಹಸ ದೃಶ್ಯಗಳನ್ನು ಕಂಪೋಸ್ ಮಾಡಿದ್ದಾರೆ. ದಿ ಗ್ರೇಟ್ ಎಂಟಟೈನರ್ಸ್ ಬ್ಯಾನರ್ ನಡಿ ಸುರೇಖಾ ರಾಮ್ ಪ್ರಸಾದ್, ಪಟೇಲ್ ಶ್ರೀನಿವಾಸ್ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ.