Tag: Karur Stampede

  • ಕರೂರು ಕಾಲ್ತುಳಿತ ನಡೆದ ಸ್ಥಳಕ್ಕೆ ಭೇಟಿ ನೀಡಲಿದೆ ಸುಪ್ರೀಂ ಕೋರ್ಟ್ ಸಮಿತಿ

    ಕರೂರು ಕಾಲ್ತುಳಿತ ನಡೆದ ಸ್ಥಳಕ್ಕೆ ಭೇಟಿ ನೀಡಲಿದೆ ಸುಪ್ರೀಂ ಕೋರ್ಟ್ ಸಮಿತಿ

    ನವದೆಹಲಿ/ಚೆನ್ನೈ: ಕರೂರು ಕಾಲ್ತುಳಿತ (Karur Stampede) ಪ್ರಕರಣ ಸಂಬಂಧ ಸುಪ್ರೀಂಕೋರ್ಟ್ (Supreme Court) ನೇಮಿಸಿದ ಸಮಿತಿಯು ಅಗತ್ಯವಿದ್ದರೆ ಘಟನಾ ಸ್ಥಳಕ್ಕೆ ಭೇಟಿ ನೀಡಲಿದೆ ಎಂದು ತಿಳಿದುಬಂದಿದೆ.

    ತಮಿಳುನಾಡಿನ (Tamilnadu) ಕರೂರಿನಲ್ಲಿ ಟಿವಿಕೆ ನಾಯಕ (TVK Vijay) ವಿಜಯ್ ಅವರ ರ‍್ಯಾಲಿ ಸಂದರ್ಭದಲ್ಲಿ 41 ಜನರು ಸಾವನ್ನಪ್ಪಿದ್ದರು. ನಟ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷ ಸ್ವತಂತ್ರ ತನಿಖೆಗೆ ಕೋರಿ ಅರ್ಜಿ ಸಲ್ಲಿಸಿತ್ತು. ಎಸ್‌ಐಟಿಯಲ್ಲಿ ತಮಿಳುನಾಡಿನ ಪೊಲೀಸರೇ ಇರುವುದರಿಂದ ನಿಷ್ಪಕ್ಷಪಾತ ತನಿಖೆ ಸಾಧ್ಯವಿಲ್ಲ ಎಂದು ಹೇಳಿತ್ತು. ಅರ್ಜಿ ವಿಚಾರಣೆ ಬಳಿಕ ಕರೂರು ಕಾಲ್ತುಳಿತ ತನಿಖೆಯನ್ನು ಸಿಬಿಐಗೆ ವಹಿಸಿ ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಅಲ್ಲದೇ ಈ ತನಿಖೆಯನ್ನು ಮೇಲ್ವಿಚಾರಣೆ ಮಾಡಲು ನಿವೃತ್ತ ನ್ಯಾಯಾಧೀಶರಾದ ಅಜಯ್ ರಸ್ತೋಗಿ ಅವರ ಅಧ್ಯಕ್ಷತೆಯಲ್ಲಿ ಮೂರು ಸದಸ್ಯರ ಸಮಿತಿಯನ್ನ ಕೂಡ ಸುಪ್ರೀಂ ಕೋರ್ಟ್ ರಚಿಸಿತ್ತು.ಇದನ್ನೂ ಓದಿ: ಕರೂರು ಕಾಲ್ತುಳಿತ ದುರಂತದ ತನಿಖೆ ಆರಂಭಿಸಿದ ಸಿಬಿಐ

    ಸದ್ಯ ಸುಪ್ರೀಂಕೋರ್ಟ್ ರಚಿಸಿದ ಸಮಿತಿಯು ಸಿಬಿಐ ನಿರ್ದೇಶಕರ ಬಳಿ ಕೆಲವು ದಾಖಲೆಗಳನ್ನು ಕೋರಿದ್ದು, ತನಿಖೆಯ ಭಾಗವಾಗಿ ಘಟನಾ ಸ್ಥಳಕ್ಕೆ ಸುಪ್ರೀಂಕೋರ್ಟ್ ನೇಮಿಸಿದ ಸಮಿತಿಯು ಭೇಟಿ ನೀಡಲಿದೆ ಎನ್ನಲಾಗಿದೆ. ಸುಪ್ರೀಂ ಕೋರ್ಟ್ ರಚಿಸಿರುವ ಈ ಸಮಿತಿಯಲ್ಲಿ ತಮಿಳುನಾಡು ಕೇಡರ್‌ನ ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳಾದ ಸುಮಿತ್ ಸರನ್ ಮತ್ತು ಸೋನಲ್ ವಿ ಮಿಶ್ರಾ ಕೂಡ ಇದ್ದಾರೆ.

    ಸೆಪ್ಟೆಂಬರ್ 27ರಂದು ನಟ, ಟಿವಿಕೆ ಮುಖ್ಯಸ್ಥ ವಿಜಯ್ ತಮಿಳುನಾಡಿನ ಕರೂರಿನಲ್ಲಿ ರ‍್ಯಾಲಿ ಹಮ್ಮಿಕೊಂಡಿದ್ದರು. ಈ ವೇಳೆ ವಿಜಯ್ ಅನ್ನು ನೋಡಲು ಲಕ್ಷಾಂತರ ಜನರು ಆಗಮಿಸಿದ್ದರು. ಜೊತೆಗೆ ಆ ದಿನ ವಿಜಯ್ ಕರೂರಿಗೆ 7 ಗಂಟೆ ತಡವಾಗಿ ಆಗಮಿಸಿದ್ದರು. ಇದರಿಂದ ಜನಸಂದಣಿ ಹೆಚ್ಚಾಗಿ, ಕಾಲ್ತುಳಿತ ಸಂಭವಿಸಿತ್ತು. ಪರಿಣಾಮ 41 ಜನರು ಸಾವನ್ನಪ್ಪಿದ್ದರು.ಇದನ್ನೂ ಓದಿ: ಕರೂರು ಕಾಲ್ತುಳಿತ ದುರಂತ – ಸಿಬಿಐ ತನಿಖೆಗೆ ಸುಪ್ರೀಂ ಆದೇಶ

  • ಕರೂರಿನಲ್ಲಿ ಭೇಟಿಯಾಗದ್ದಕ್ಕೆ ಕ್ಷಮಿಸಿ – ಮೃತರ ಕುಟುಂಬಸ್ಥರನ್ನ ಭೇಟಿಯಾಗಿ 7.8 ಕೋಟಿ ಪರಿಹಾರ ವಿತರಿಸಿದ ವಿಜಯ್

    ಕರೂರಿನಲ್ಲಿ ಭೇಟಿಯಾಗದ್ದಕ್ಕೆ ಕ್ಷಮಿಸಿ – ಮೃತರ ಕುಟುಂಬಸ್ಥರನ್ನ ಭೇಟಿಯಾಗಿ 7.8 ಕೋಟಿ ಪರಿಹಾರ ವಿತರಿಸಿದ ವಿಜಯ್

    – ಘಟನೆ ನಡೆದ ಬರೋಬ್ಬರಿ ಒಂದು ತಿಂಗಳಿಗೆ ಭೇಟಿ

    ಚೆನ್ನೈ: ಕರೂರಿನಲ್ಲಿ (Karur) ಭೇಟಿಯಾಗದಿರೋದಕ್ಕೆ ಕ್ಷಮಿಸಿ ಎಂದು ನಟ, ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್‌ (TVK Vijay) ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿಯಾಗಿ, 7.8 ಕೋಟಿ ರೂ. ಪರಿಹಾರ ನೀಡಿ, ಸಾಂತ್ವನ ಹೇಳಿದ್ದಾರೆ.

    ತಮಿಳುನಾಡಿನಲ್ಲಿ (Tamilnadu) ಕರೂರು ಭೀಕರ ಕಾಲ್ತುಳಿತ ದುರಂತ ಸಂಭವಿಸಿ ಇಂದಿಗೆ 1 ತಿಂಗಳು. ಸೆ.27ರಂದು ಟಿವಿಕೆ ವಿಜಯ್ ಅವರ ರ‍್ಯಾಲಿಯಲ್ಲಿ 41 ಜನ ಪ್ರಾಣ ಕಳೆದುಕೊಂಡಿದ್ದರು. ಘಟನೆ ನಡೆದು ಬರೋಬ್ಬರಿ ಒಂದು ತಿಂಗಳಿಗೆ ವಿಜಯ್ ಮೃತರ ಕುಟುಂಬಸ್ಥರನ್ನ ಭೇಟಿ ಮಾಡಿ, ಕರೂರಿನಲ್ಲಿ ಭೇಟಿಯಾಗದಿರೋದಕ್ಕೆ ಕ್ಷಮೆಯಾಚಿಸಿದ್ದಾರೆ.ಇದನ್ನೂ ಓದಿ: ಕಾಲ್ತುಳಿತಕ್ಕೆ 41 ಜನ ಸಾವು ಕೇಸ್‌ – ಅ.27ಕ್ಕೆ ಮೃತರ ಕುಟುಂಬಸ್ಥರ ಭೇಟಿಯಾಗಲಿರೋ ವಿಜಯ್‌

    ಮೃತಪಟ್ಟವರ ಕುಟುಂಬಸ್ಥರನ್ನು ಚೆನ್ನೈ ಬಳಿಯ ಮಹಾಬಲಿಪುರಂನಲ್ಲಿರುವ ರೆಸಾರ್ಟ್‌ನಲ್ಲಿ ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ. ಕರೂರಿನಿಂದ ಒಟ್ಟು 37 ಕುಟುಂಬಗಳನ್ನು ರೆಸಾರ್ಟ್‌ಗೆ ಕರೆತರಲಾಗಿತ್ತು. ಅವರಿಗಾಗಿ ಟಿವಿಕೆ ಪಕ್ಷ, ರೆಸಾರ್ಟ್‌ನ ಸುಮಾರು 50 ಕೊಠಡಿಗಳನ್ನು ಕಾಯ್ದಿರಿಸಿತ್ತು. ಟಿವಿಕೆ ನಾಯಕ ಸಂತ್ರಸ್ತ ಕುಟುಂಬಸ್ಥರನ್ನು ಪ್ರತ್ಯೇಕವಾಗಿ ಭೇಟಿಯಾಗಿ ಮಾತುಕತೆ ನಡೆಸಿ, ಮೃತರ ಕುಟುಂಬಗಳಿಗೆ ತಲಾ 20 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 2 ಲಕ್ಷ ರೂ.ಯಂತೆ ಒಟ್ಟು 7.8 ಕೋಟಿ ರೂ. ಪರಿಹಾರ ವಿತರಣೆ ಮಾಡಿದ್ದಾರೆ.

    ಇನ್ನೂ ಇದೇ ವೇಳೆ ಸಂತ್ರಸ್ತ ಕುಟುಂಬಗಳಿಗೆ ಶಿಕ್ಷಣದ ಜೊತೆಗೆ ಆರ್ಥಿಕ ಸಹಾಯ, ಉದ್ಯೋಗದ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಈ ಮಧ್ಯೆ, ರಾಜಕೀಯ ಸಮಾವೇಶ, ರೋಡ್‌ಶೋ ಸೇರಿದಂತೆ ಸಾರ್ವಜನಿಕ ಕಾರ್ಯಕ್ರಮ ಆಯೋಜನೆಗೆ 10 ದಿನಗಳ ಒಳಗೆ ಎಸ್‌ಓಪಿ ರಚಿಸುವಂತೆ ತಮಿಳುನಾಡು ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ನಿರ್ದೇಶನ ನೀಡಿದೆ.ಇದನ್ನೂ ಓದಿ:

  • ಕರೂರು ಕಾಲ್ತುಳಿತ ದುರಂತದ ತನಿಖೆ ಆರಂಭಿಸಿದ ಸಿಬಿಐ

    ಕರೂರು ಕಾಲ್ತುಳಿತ ದುರಂತದ ತನಿಖೆ ಆರಂಭಿಸಿದ ಸಿಬಿಐ

    ನವದೆಹಲಿ: ನಟ, ರಾಜಕಾರಣಿ ವಿಜಯ್ (Vijay) ಅವರ ಚುನಾವಣಾ ರ‍್ಯಾಲಿಯ ವೇಳೆ ಸಂಭವಿಸಿದ ಕರೂರು ಕಾಲ್ತುಳಿತ (Karur Stampede) ದುರಂತದ ತನಿಖೆಯನ್ನು ಕೇಂದ್ರ ತನಿಖಾ ದಳ (CBI) ವಹಿಸಿಕೊಂಡಿದ್ದು, ತನಿಖೆ ಆರಂಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಕಾಲ್ತುಳಿತ ಸಂಭವಿಸಿದ ಸ್ಥಳಕ್ಕೆ ಸಿಬಿಐ ತಂಡ ಈಗಾಗಲೇ ಭೇಟಿ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೆಪ್ಟೆಂಬರ್ 27 ರಂದು ತಮಿಳುನಾಡಿನ ಕರೂರಿನಲ್ಲಿ ನಟ ವಿಜಯ್ ನೇತೃತ್ವದಲ್ಲಿ ನಡೆದ ರಾಜಕೀಯ ರ‍್ಯಾಲಿ ವೇಳೆ ಕಾಲ್ತುಳಿತ ಸಂಭವಿಸಿ 41 ಮಂದಿ ಸಾವನ್ನಪ್ಪಿದ್ದರು. ಹಲವರು ಗಾಯಗೊಂಡಿದ್ದರು. ಇದನ್ನೂ ಓದಿ: ಕರ್ನೂಲ್‌ ದುರಂತದ ಬಳಿಕ ಎಚ್ಚೆತ್ತ ಸಾರಿಗೆ ಇಲಾಖೆ – ಬಸ್‌ಗಳಲ್ಲಿ ಈ ವಸ್ತುಗಳನ್ನ ಕೊಂಡೊಯ್ಯುವಂತಿಲ್ಲ!

    ನಟ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷ ಸ್ವತಂತ್ರ ತನಿಖೆಗೆ ಕೋರಿ ಅರ್ಜಿ ಸಲ್ಲಿಸಿತ್ತು. ಎಸ್‌ಐಟಿಯಲ್ಲಿ (SIT) ತಮಿಳುನಾಡಿನ ಪೊಲೀಸರೇ ಇರುವುದರಿಂದ ನಿಷ್ಪಕ್ಷಪಾತ ತನಿಖೆ ಸಾಧ್ಯವಿಲ್ಲ ಎಂದು ಹೇಳಿತ್ತು. ಅರ್ಜಿ ವಿಚಾರಣೆ ಬಳಿಕ ಕರೂರು ಕಾಲ್ತುಳಿತ ತನಿಖೆಯನ್ನು ಸಿಬಿಐಗೆ ವಹಿಸಿ ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಇದನ್ನೂ ಓದಿ: ಜನವರಿಯಲ್ಲಿ ನನಗೆ ಶುಕ್ರದೆಸೆ ಬರುವುದು ಪಕ್ಕಾ – ಸಚಿವನಾಗುವ ಇಂಗಿತ ವ್ಯಕ್ತಪಡಿಸಿದ ಲಕ್ಷ್ಮಣ ಸವದಿ

    ಈ ತನಿಖೆಯನ್ನು ಮೇಲ್ವಿಚಾರಣೆ ಮಾಡಲು ನಿವೃತ್ತ ನ್ಯಾಯಾಧೀಶರಾದ ಅಜಯ್ ರಸ್ತೋಗಿ ಅವರ ಅಧ್ಯಕ್ಷತೆಯಲ್ಲಿ ಮೂರು ಸದಸ್ಯರ ಸಮಿತಿಯನ್ನ ಕೂಡ ಸುಪ್ರೀಂ ಕೋರ್ಟ್ ರಚಿಸಿತ್ತು. ಇದನ್ನೂ ಓದಿ: ಶಬರಿಮಲೆ ಚಿನ್ನ ಕಳ್ಳತನ ಪ್ರಕರಣ – ಅಸಲಿ ಚಿನ್ನದ ಬಾಗಿಲು ತಾನೇ ಇಟ್ಟುಕೊಂಡು ತಾಮ್ರದ ಬಾಗಿಲನ್ನು ದೇಗುಲಕ್ಕೆ ಕೊಟ್ಟಿದ್ದ ಉನ್ನಿಕೃಷ್ಣನ್

  • ಕಾಲ್ತುಳಿತಕ್ಕೆ 41 ಜನ ಸಾವು ಕೇಸ್‌ – ಅ.27ಕ್ಕೆ ಮೃತರ ಕುಟುಂಬಸ್ಥರ ಭೇಟಿಯಾಗಲಿರೋ ವಿಜಯ್‌

    ಕಾಲ್ತುಳಿತಕ್ಕೆ 41 ಜನ ಸಾವು ಕೇಸ್‌ – ಅ.27ಕ್ಕೆ ಮೃತರ ಕುಟುಂಬಸ್ಥರ ಭೇಟಿಯಾಗಲಿರೋ ವಿಜಯ್‌

    ಚೆನ್ನೈ: ಕರೂರ್‌ನಲ್ಲಿ (Karur Stampede) ರ‍್ಯಾಲಿ ವೇಳೆ ರ‍್ಯಾಲಿಯಲ್ಲಿ 41 ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಸ್ಥರನ್ನು ನಟ, ಟಿಎಂಕೆ ಮುಖ್ಯಸ್ಥ ವಿಜಯ್‌ (Vijay) ಭೇಟಿಯಾಗಲಿದ್ದಾರೆ.

    ಅಕ್ಟೋಬರ್‌ 27 ರಂದು ಚೆನ್ನೈ ಸಮೀಪದ ಮಹಾಬಲಿಂಪುರದಲ್ಲಿ ಖಾಸಗಿ ರೆಸಾರ್ಟ್‌ನಲ್ಲಿ ಮೃತರ ಕುಟುಂಬಸ್ಥರನ್ನು ನಟ ಭೇಟಿ ಮಾಡಲಿದ್ದಾರೆ. ಈ ಹಿನ್ನೆಲೆ ಖಾಸಗಿ ರೆಸಾರ್ಟ್‌ನಲ್ಲಿ 50 ರೂಮ್‌ಗಳನ್ನು ಕಾಯ್ದಿರಿಸಲಾಗಿದೆ ಎಂದು ಟಿಎಂಕೆ ತಿಳಿಸಿದೆ.

    ಪ್ರತಿಯೊಂದು ಕುಟುಂಬವನ್ನು ಖಾಸಗಿಯಾಗಿ ಭೇಟಿಯಾಗಿ ನಟ ಸಾಂತ್ವನ ಹೇಳಲಿದ್ದಾರೆ. ಸ್ಥಳಕ್ಕೆ ಬರಲು ಮೃತರ ಕುಟುಂಬಸ್ಥರಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ.

    ಸೆ.27 ರಂದು ಕರೂರ್‌ನಲ್ಲಿ ನಟ ವಿಜಯ್‌ ಚುನಾವಣಾ ರ‍್ಯಾಲಿ ನಡೆಸಿದ್ದರು. ಲಕ್ಷಾಂತರ ಸಂಖ್ಯೆಯಲ್ಲಿ ಜನರು ಪಾಲ್ಗೊಂಡಿದ್ದರು. ಈ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 41 ಮಂದಿ ಪ್ರಾಣ ಕಳೆದುಕೊಂಡಿದ್ದರು.

  • ಕರೂರು ಕಾಲ್ತುಳಿತ ದುರಂತ – ಸಿಬಿಐ ತನಿಖೆಗೆ ಸುಪ್ರೀಂ ಆದೇಶ

    ಕರೂರು ಕಾಲ್ತುಳಿತ ದುರಂತ – ಸಿಬಿಐ ತನಿಖೆಗೆ ಸುಪ್ರೀಂ ಆದೇಶ

    – ದೇಶವನ್ನೇ ಬೆಚ್ಚಿಬೀಳಿಸಿದ ಘಟನೆ, ನಿಷ್ಪಕ್ಷಪಾತ ತನಿಖೆ ಅಗತ್ಯ; ಕೋರ್ಟ್‌

    ನವದೆಹಲಿ: ಸೆಪ್ಟೆಂಬರ್ 27 ರಂದು ತಮಿಳುನಾಡಿನ ಕರೂರಿನಲ್ಲಿ ನಡೆದ ಕಾಲ್ತುಳಿತ (Karur Stampede) ದುರಂತ ಪ್ರಕರಣದ ತನಿಖೆಯನ್ನ ಸಿಬಿಐಗೆ ವಹಿಸಿ ಸುಪ್ರೀಂ ಕೊರ್ಟ್‌ (Supreme Court) ಇಂದು ಆದೇಶಿಸಿದೆ.

    ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಎನ್.ವಿ ಅಂಜಾರಿಯಾ ಅವರಿದ್ದ ದ್ವಿ ಸದಸ್ಯ ಪೀಠ ಈ ಮಹತ್ವದ ಆದೇಶ ನೀಡಿದೆ. ಇದನ್ನೂ ಓದಿ: TVK Vijay Rally Stampede | ಮದ್ರಾಸ್‌ ಹೈಕೋರ್ಟ್‌ನಲ್ಲಿಂದು ವಿಚಾರಣೆ – ಸಾವಿನ ಸಂಖ್ಯೆ 41ಕ್ಕೆ ಏರಿಕೆ

    TVK Vijay

    ಹೌದು. ಸೆಪ್ಟೆಂಬರ್ 27 ರಂದು ತಮಿಳುನಾಡಿನ ಕರೂರಿನಲ್ಲಿ ನಟ ವಿಜಯ್‌ ನೇತೃತ್ವದಲ್ಲಿ ನಡೆದ ರಾಜಕೀಯ ರ‍್ಯಾಲಿವೇಳೆ ಕಾಲ್ತುಳಿತ ಸಂಭವಿಸಿ 41 ಮಂದಿ ಸಾವನ್ನಪ್ಪಿದ್ದರು. ಹಲವರು ಗಾಯಗೊಂಡಿದ್ದರು. ಈ ತನಿಖೆಯನ್ನು ಮೇಲ್ವಿಚಾರಣೆ ಮಾಡಲು ನಿವೃತ್ತ ನ್ಯಾಯಾಧೀಶರಾದ ಅಜಯ್ ರಸ್ತೋಗಿ (Ajay Rastogi) ಅವರ ಅಧ್ಯಕ್ಷತೆಯಲ್ಲಿ ಮೂರು ಸದಸ್ಯರ ಸಮಿತಿಯನ್ನ ಕೂಡ ಸುಪ್ರೀಂ ಕೋರ್ಟ್‌ ರಚಿಸಿದೆ.

    ಇದು ರಾಷ್ಟ್ರವನ್ನೇ ಬೆಚ್ಚಿಬೀಳಿಸಿದ ಘಟನೆ ಎಂದಿರುವ ಕೋರ್ಟ್‌, ನ್ಯಾಯಯುತ ಮತ್ತು ನಿಷ್ಪಕ್ಷಪಾತ ತನಿಖೆಯ ಅಗತ್ಯವಿದೆ ಎಂದು ಹೇಳಿದೆ. ಸುಪ್ರೀಂ ಕೋರ್ಟ್‌ನ ಆದೇಶದಿಂದ ಸಿಎಂ ಎಂ.ಕೆ ಸ್ಟಾಲಿನ್‌ ನೇತೃತ್ವದ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಇದನ್ನೂ ಓದಿ: Vijay Rally Stampede | ದುರಂತದ ಬೆನ್ನಲ್ಲೇ ನಟ ವಿಜಯ್‌ ನಿವಾಸಕ್ಕೆ ಬಾಂಬ್‌ ಬೆದರಿಕೆ – ಬಿಗಿ ಭದ್ರತೆ

    ನಟ ದಳಪತಿ ವಿಜಯ್‌ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷದಿಂದ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ಬಳಿಕ ಸುಪ್ರೀಂ ಕೋರ್ಟ್‌ ಸಿಬಿಐ ತನಿಖೆಗೆ ಆದೇಶಿಸಿದೆ. ಈ ಅರ್ಜಿಗಳು ಮದ್ರಾಸ್ ಹೈಕೋರ್ಟ್‌ನ ಏಕ ನ್ಯಾಯಾಧೀಶರು ನೀಡಿದ್ದ ವಿಶೇಷ ತನಿಖಾ ದಳ ತನಿಖೆಯ ಆದೇಶವನ್ನು ಪ್ರಶ್ನಿಸಿದ್ದವು. ಅಲ್ಲದೇ, ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠದ ವಿಭಾಗೀಯ ಪೀಠವು ಸಿಬಿಐ ತನಿಖೆಯನ್ನು (CBI Investigation) ತಿರಸ್ಕರಿಸಿದ್ದ ಆದೇಶವನ್ನೂ ಪ್ರಶ್ನಿಸಲಾಗಿತ್ತು. ಇದನ್ನೂ ಓದಿ: TVK Vijay Rally Stampede | ದುರಂತದಲ್ಲಿ 2 ವರ್ಷದ ಕಂದಮ್ಮ ಬಲಿ – ಕುಟುಂಬದಲ್ಲಿ ಮುಗಿಲು ಮುಟ್ಟಿದ ಆಕ್ರಂದನ

    ಕೋರ್ಟ್‌ ಹೇಳಿದೇನು?
    ವಾಸ್ತವಾಂಶ ಪರಿಶೀಲಿಸಿದಾಗ ಈ ವಿಷಯವು ನಾಗರಿಕರ ಮೂಲಭೂತ ಹಕ್ಕುಗಳ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಸಿಬಿಐಗೆ ಹಸ್ತಾಂತರಿಸಲು ನಿರ್ದೇಶಿಸಿದ್ದೇವೆ. ನ್ಯಾಯಯುತ ಮತ್ತು ನಿಷ್ಪಕ್ಷಪಾತ ತನಿಖೆ ಪ್ರತಿಯೊಬ್ಬ ನಾಗರಿಕರ ಹಕ್ಕು ಎಂಬುದರಲ್ಲಿ ಯಾವುದೇ ಸಂಶಯ ಇಲ್ಲ ಎಂದು ಕೋರ್ಟ್‌ ಹೇಳಿದೆ. ಇದನ್ನೂ ಓದಿ: Vijay Rally Stampede | 10 ವರ್ಷದ ಬಾಲಕಿ ಸಾವನ್ನ ಕಣ್ಣಾರೆ ಕಂಡೆ – ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಬೆಂಗ್ಳೂರಿನ ಪ್ರತ್ಯಕ್ಷದರ್ಶಿ

    ಎಲ್ಲಾ ರೀತಿಯ ಗೊಂದಲಗಳನ್ನ ನಿವಾರಿಸಲು ನಾವು ಮೂವರು ಸದಸ್ಯರ ಸಮಿತಿಯನ್ನು ರಚಿಸಿದ್ದೇವೆ. ನ್ಯಾಯಮೂರ್ತಿ ಅಜಯ್ ರಸ್ತೋಗಿ ಅವರು ಸಮಿತಿಯ ನೇತೃತ್ವ ವಹಿಸಲಿದ್ದಾರೆ. ಅಲ್ಲದೇ ರಾಜ್ಯದ ಸ್ಥಳೀಯರಲ್ಲದ ಇಬ್ಬರು ಐಪಿಎಸ್ ಅಧಿಕಾರಿಗಳು ಸಮಿತಿಯ ಭಾಗವಾಗಿರಲಿದ್ದಾರೆ. ನಿವೃತ್ತ ನ್ಯಾಯಾಧೀಶರ ನಿರ್ದೇಶನಗಳ ಪ್ರಕಾರ ಸಮಿತಿಯು ತನ್ನದೇ ಆದ ಕಾರ್ಯವಿಧಾನಗಳನ್ನ ರೂಪಿಸಬೇಕು. ಇದರೊಂದಿಗೆ ತನಿಖೆಯ ಮಾಸಿಕ ವರದಿಯನ್ನು ಸಿಬಿಐ ಸಮಿತಿ ಮುಂದಿಡಬೇಕು ಎಂದು ಸಹ ಕೋರ್ಟ್‌ ಹೇಳಿದೆ.

  • Karur Stampede | ಸ್ವತಂತ್ರ ತನಿಖೆಗೆ ಕೋರಿ ಸುಪ್ರೀಂಗೆ ಟಿವಿಕೆ ಅರ್ಜಿ – ಅ.10ಕ್ಕೆ ವಿಚಾರಣೆ

    Karur Stampede | ಸ್ವತಂತ್ರ ತನಿಖೆಗೆ ಕೋರಿ ಸುಪ್ರೀಂಗೆ ಟಿವಿಕೆ ಅರ್ಜಿ – ಅ.10ಕ್ಕೆ ವಿಚಾರಣೆ

    ಚೆನ್ನೈ: ಕರೂರು ಕಾಲ್ತುಳಿತ (Karur Stampede) ಪ್ರಕರಣದ ತನಿಖೆ ನಡೆಸಲು ಪೊಲೀಸ್ ಮಹಾನಿರ್ದೇಶಕರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸುವಂತೆ ನಿರ್ದೇಶಿಸಿದ ಮದ್ರಾಸ್ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ತಮಿಳಗ ವೆಟ್ರಿ ಕಳಗಂ (TVK) ಪಕ್ಷ ಸುಪ್ರೀಂ ಕೋರ್ಟ್‌ಗೆ (Supreme Court) ಅರ್ಜಿ ಸಲ್ಲಿಸಿದೆ.

    ವಕೀಲರಾದ ದೀಕ್ಷಿತಾ ಗೋಹಿಲ್, ಪ್ರಾಂಜಲ್ ಅಗರ್ವಾಲ್ ಮತ್ತು ಯಶ್ ಎಸ್ ವಿಜಯ್ ಅವರು ಅರ್ಜಿ ಸಲ್ಲಿಸಿದ್ದಾರೆ. ಪೊಲೀಸ್ ನೇತೃತ್ವದ ಎಸ್‌ಐಟಿ ತನಿಖೆಯ ಬದಲು ಉನ್ನತ ನ್ಯಾಯಲಯದ ನಿವೃತ ನ್ಯಾಯಮೂರ್ತಿ ನೇತೃತ್ವದಲ್ಲಿ ಘಟನೆಯ ಸ್ವತಂತ್ರ ತನಿಖೆ ನಡೆಸಲು ಮನವಿ ಮಾಡಿದ್ದಾರೆ. ಸುಪ್ರೀಂಕೋರ್ಟ್ ಈ ಅರ್ಜಿ ವಿಚಾರಣೆಗೆ ಸಮ್ಮತಿ ಸೂಚಿಸಿದ್ದು, ಅ.10ರಂದು ವಿಚಾರಣೆ ನಡೆಸುವುದಾಗಿ ದಿನಾಂಕ ನಿಗದಿಪಡಿಸಿದೆ.ಇದನ್ನೂ ಓದಿ: ಬಿಜೆಪಿ ನಾಯಕರು ರಾಜ್ಯದಲ್ಲಿ ಬೊಗಳೋದು ಬಿಟ್ಟು ದೆಹಲಿಗೆ ಹೋಗಿ ಬೊಗಳಲಿ: ಬೋಸರಾಜು

    ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ಜಿ.ಎಸ್.ಮಣಿ ಅವರು ಸುಪ್ರೀಂಕೋರ್ಟ್‌ನಲ್ಲಿ ಮತ್ತೊಂದು ಅರ್ಜಿಯನ್ನು ಸಲ್ಲಿಸಿದ್ದು, ಈ ಪ್ರಕರಣದ ಬಗ್ಗೆ ಕೇಂದ್ರ ತನಿಖಾ ದಳ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ. ಈ ಪೈಕಿ ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಸುಪ್ರೀಂಕೋರ್ಟ್ನಲ್ಲಿ ಮೂರು ಅರ್ಜಿಗಳು ದಾಖಲಾಗಿವೆ.

    ಈ ನಡುವೆ ಕಾಲ್ತುಳಿತದಲ್ಲಿ ಮೃತಪಟ್ಟ ಕುಟುಂಬಸ್ಥರ ಭೇಟಿಯಾಗಿ ಸಾಂತ್ವನ ಹೇಳಲು ಹಾಗೂ ಕರೂರಿಗೆ ಭೇಟಿ ನೀಡಲು ನಟ ವಿಜಯ್ ಅನುಮತಿ ಕೇಳಿದ್ದಾರೆ. ತಮಿಳುನಾಡು ಪೊಲೀಸ್ ಮಹಾ ನಿರ್ದೇಶಕರಿಗೆ ಇಮೇಲ್ ಮೂಲಕ ಅನುಮತಿ ಕೇಳಿದ್ದು, ಮಂಗಳವಾರ (ಅ.7) ವಿಡಿಯೋ ಕಾಲ್ ಮೂಲಕ ಮೃತರ ಕುಟುಂಬಸ್ಥರಿಗೆ ವಿಜಯ್ ಸಾಂತ್ವಾನ ಹೇಳಿದ್ದರು.ಇದನ್ನೂ ಓದಿ: ರಾಜ್ಯದ 15 ಜಿಲ್ಲೆಗಳ 252 ಗ್ರಾ.ಪಂ.ಗಳಲ್ಲಿ ʻನೀರಿದ್ದರೆ ನಾಳೆʼ ಯೋಜನೆ ಅನುಷ್ಠಾನ; ನಟ ವಸಿಷ್ಠ ಸಿಂಹ ರಾಯಭಾರಿ

  • ನನ್ನ ವಿರುದ್ಧ ಬೇಕಾದ್ರೆ ಸೇಡು ತೀರಿಸಿಕೊಳ್ಳಿ, ಬೆಂಬಲಿಗರಿಗೆ ಏನು ಮಾಡ್ಬೇಡಿ: ಸ್ಟಾಲಿನ್ ವಿರುದ್ಧ ವಿಜಯ್ ಕಿಡಿ

    ನನ್ನ ವಿರುದ್ಧ ಬೇಕಾದ್ರೆ ಸೇಡು ತೀರಿಸಿಕೊಳ್ಳಿ, ಬೆಂಬಲಿಗರಿಗೆ ಏನು ಮಾಡ್ಬೇಡಿ: ಸ್ಟಾಲಿನ್ ವಿರುದ್ಧ ವಿಜಯ್ ಕಿಡಿ

    – ಬೇರೆ ಎಲ್ಲೂ ನಡೆಯದ ದುರಂತ ಕರೂರಿನಲ್ಲಿ ಮಾತ್ರ ಯಾಕಾಯ್ತು?
    – ಕಾಲ್ತುಳಿತದ ಹಿಂದಿನ ಸತ್ಯ ಶೀಘ್ರ ಬಹಿರಂಗಗೊಳ್ಳುತ್ತೆ

    ಚೆನ್ನೈ: ಕರೂರು ಕಾಲ್ತುಳಿತ (Karur Stampede) ದುರಂತ ಸಂಭವಿಸಿದ ಮೂರು ದಿನಗಳ ಬಳಿಕ ನಟ, ಟಿವಿಕೆ ಮುಖ್ಯಸ್ಥ ವಿಜಯ್ (Actor Vijay) ವಿಡಿಯೋವೊಂದನ್ನು ಹಂಚಿಕೊಂಡಿದ್ದು, ದುರಂತದ ಹಿಂದಿನ ಸತ್ಯ ಶೀಘ್ರದಲ್ಲೇ ಬಹಿರಂಗಗೊಳ್ಳುತ್ತದೆ ಎಂದಿದ್ದಾರೆ.

    ತಮ್ಮ ಎಕ್ಸ್ ಖಾತೆಯಲ್ಲಿ ವಿಡಿಯೋ ಮೂಲಕ ಸಂದೇಶವನ್ನು ಹಂಚಿಕೊಂಡಿರುವ ಅವರು, ನನ್ನ ಜೀವನದಲ್ಲೇ ಇಂತಹ ನೋವಿನ ದಿನಗಳನ್ನು ನಾನು ಅನುಭವಿಸಿಲ್ಲ. ನಿಜಕ್ಕೂ ಈ ಸಂಗತಿಯಿಂದ ನನ್ನ ಮನಸ್ಸಿಗೆ ತುಂಬಾ ನೋವಾಗಿದೆ, ಬರೀ ನೋವೇ ತುಂಬಿಕೊಂಡಂತಾಗಿದೆ. ಜನರು ನನ್ನ ಮೇಲಿನ ಪ್ರೀತಿಯಿಂದಾಗಿ ನನ್ನನ್ನು ನೋಡಲು ಬರುತ್ತಾರೆ. ಅವರ ಪ್ರೀತಿ, ವಿಶ್ವಾಸಕ್ಕೆ ನಾನು ಯಾವಾಗಲೂ ಚಿರಋಣಿ. ಆದರೆ ಆ ಎಲ್ಲದಕ್ಕೂ ಮಿಗಿಲಾಗಿ ಜನರ ರಕ್ಷಣೆಯೇ ನನ್ನ ಮೊದಲ ಆದ್ಯತೆ. ನಾನು ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ಕೊಡುತ್ತೇನೆ. ಶೀಘ್ರದಲ್ಲಿಯೇ ಈ ಘಟನೆ ಹಿಂದಿನ ಸತ್ಯ ಬಹಿರಂಗವಾಗುತ್ತದೆ ಎಂದು ಪ್ರತಿಜ್ಞೆ ಮಾಡಿದ್ದಾರೆ.ಇದನ್ನೂ ಓದಿ: ವಿಜಯ್‌ ರ‍್ಯಾಲಿಯಲ್ಲಿ ಕಾಲ್ತುಳಿತಕ್ಕೆ 41 ಸಾವು ಕೇಸ್‌ – ಟಿವಿಕೆ ನಾಯಕ ಅರೆಸ್ಟ್‌

    ಈ ಘಟನೆಗೂ ಮುನ್ನ ನಾನು ರಾಜಕೀಯವನ್ನು ಬದಿಗಿಟ್ಟು ಜನರ ಸುರಕ್ಷತೆಗಾಗಿ ಸೂಕ್ತವಾದ ಸ್ಥಳವನ್ನು ಆರಿಸಿ, ಪೊಲೀಸ್ ಇಲಾಖೆಗೆ ಮನವಿ ಮಾಡಿಕೊಂಡಿದ್ದೆ. ಆದರೆ ಏನಾಗಬಾರದು ಎಂದುಕೊಂಡಿದ್ದೆ, ಅದೇ ನಡೆದು ಹೋಗಿದೆ. ನಾನು ಒಬ್ಬ ಮನುಷ್ಯ. ಘಟನೆಯಲ್ಲಿ ಇಷ್ಟೊಂದು ಜನರಿಗೆ ತೊಂದರೆಯಾದಾಗ ನಾನು ಅಲ್ಲಿಯೇ ಇರಬಹುದಿತ್ತು. ಆದರೆ ನಾನಿದ್ದರೆ ಸಮಸ್ಯೆ ಇನ್ನೂ ಹೆಚ್ಚಾಗಬಹುದು ಎಂದು ತಿಳಿದು ಅಲ್ಲಿಂದ ಹೊರಟು ಹೋದೆ ಎಂದಿದ್ದಾರೆ.

    ಇದಕ್ಕೂ ಮುನ್ನ ನಾವು ಐದು ಜಿಲ್ಲೆಗಳಲ್ಲಿ ಪ್ರಚಾರ ಮಾಡಿದ್ದೇವೆ, ಆದರೆ ಕರೂರಿನಲ್ಲಿ ಯಾಕೆ ಹೀಗಾಯ್ತು? ಹೇಗಾಯ್ತು? ಜನರಿಗೆ ಎಲ್ಲ ಗೊತ್ತಿದೆ. ಅವರೆಲ್ಲವನ್ನೂ ನೋಡುತ್ತಿದ್ದಾರೆ. ಶೀಘ್ರವೇ ಎಲ್ಲ ಸತ್ಯ ಬಹಿರಂಗಗೊಳ್ಳುತ್ತದೆ ಎಂದು ತಿಳಿಸಿದ್ದಾರೆ.

    ಇದೇ ವೇಳೆ ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಅವರಿಗೆ ಮನವಿ ಮಾಡಿಕೊಂಡಿದ್ದು, ನನ್ನ ವಿರುದ್ಧ ಬೇಕಾದ್ರೆ ಸೇಡು ತೀರಿಸಿಕೊಳ್ಳಿ. ಆದರೆ ನನ್ನ ಬೆಂಬಲಿಗರಿಗೆ ಏನು ಮಾಡಬೇಡಿ. ನಾನು ಮನೆಯಲ್ಲಿ ಅಥವಾ ಕಚೇರಿಯಲ್ಲಿ ಇರುತ್ತೇನೆ. ನೀವು ನನ್ನ ಮೇಲೆ ಯಾವ ರೀತಿ ಬೇಕಾದರೂ ಕ್ರಮ ಕೈಗೊಳ್ಳಬಹುದು ಎಂದು ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.

    ಏನಿದು ಘಟನೆ?
    ಸೆ.27ರಂದು ತಮಿಳುನಾಡಿನ ಕರೂರಿನಲ್ಲಿ ನಟ, ರಾಜಕಾರಣಿ ವಿಜಯ್ ರ‍್ಯಾಲಿ ಹಮ್ಮಿಕೊಂಡಿದ್ದರು. ಅಂದು ಕರೂರಿಗೆ ಮಧ್ಯಾಹ್ನ ತಲುಪಬೇಕಿದ್ದ ವಿಜಯ್ ಏಳು ಗಂಟೆ ತಡವಾಗಿ ಆಗಮಿಸಿದ್ದರು. ಹೀಗಾಗಿ ಜನಸಂದಣಿ ಹೆಚ್ಚಾಗಿ, ಕಾಲ್ತುಳಿತ ಸಂಭವಿಸಿತ್ತು. ಪರಿಣಾಮ 41 ಜನರು ಸಾವನ್ನಪ್ಪಿದ್ದರು.ಇದನ್ನೂ ಓದಿ: ಕಾಲ್ತುಳಿತಕ್ಕೆ ಪೊಲೀಸರು ಹೊಣೆ – ಪತ್ರ ಬರೆದು ವಿಜಯ್‌ ಅಭಿಮಾನಿ, ಟಿವಿಕೆ ಕಾರ್ಯಕರ್ತ ಆತ್ಮಹತ್ಯೆ

  • ವಿಜಯ್‌ ರ‍್ಯಾಲಿಯಲ್ಲಿ ಕಾಲ್ತುಳಿತಕ್ಕೆ 41 ಸಾವು ಕೇಸ್‌ – ಟಿವಿಕೆ ನಾಯಕ ಅರೆಸ್ಟ್‌

    ವಿಜಯ್‌ ರ‍್ಯಾಲಿಯಲ್ಲಿ ಕಾಲ್ತುಳಿತಕ್ಕೆ 41 ಸಾವು ಕೇಸ್‌ – ಟಿವಿಕೆ ನಾಯಕ ಅರೆಸ್ಟ್‌

    ಚೆನ್ನೈ: ತಮಿಳುನಾಡಿನ ಕರೂರಿನಲ್ಲಿ ನಟ-ರಾಜಕಾರಣಿ ವಿಜಯ್ (Vijay) ಅವರ ರ‍್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿ 41 ಜನರು ಸಾವನ್ನಪ್ಪಿದ ಪ್ರಕರಣ ಸಂಬಂಧ ಟಿವಿಕೆ (TVK) ನಾಯಕನನ್ನು ಪೊಲೀಸರು ಬಂಧಿಸಿದ್ದಾರೆ.

    ತಮಿಳಗ ವೆಟ್ರಿ ಕಳಗಂ (ಟಿವಿಕೆ) ಕರೂರ್ ಪಶ್ಚಿಮ ಜಿಲ್ಲಾ ಕಾರ್ಯದರ್ಶಿ ಮತಿಯಜಗನ್‌ನನ್ನು ಪೊಲೀಸರು ಬಂಧಿಸಿದ್ದು, ದುರಂತಕ್ಕೆ ಕಾರಣವಾದ ಲೋಪಗಳಿಗೆ ಅವರನ್ನೇ ಹೊಣೆಗಾರರನ್ನಾಗಿ ಮಾಡಿದ್ದಾರೆ. ಇದನ್ನೂ ಓದಿ: ಕಾಲ್ತುಳಿತಕ್ಕೆ ಪೊಲೀಸರು ಹೊಣೆ – ಪತ್ರ ಬರೆದು ವಿಜಯ್‌ ಅಭಿಮಾನಿ, ಟಿವಿಕೆ ಕಾರ್ಯಕರ್ತ ಆತ್ಮಹತ್ಯೆ

    ಈ ಹಿಂದೆ ಆತನ ವಿರುದ್ಧ ಕೊಲೆ ಯತ್ನ, ಕೊಲೆಗೆ ಸಮನಾಗದ ಅಪರಾಧಿಕ ನರಹತ್ಯೆ ಮತ್ತು ಸಾರ್ವಜನಿಕ ಸುರಕ್ಷತೆಗೆ ಅಪಾಯವನ್ನುಂಟುಮಾಡುವ ನಿಬಂಧನೆಗಳ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದರು. ಟಿವಿಕೆ ಪ್ರಧಾನ ಕಾರ್ಯದರ್ಶಿ ಬಸ್ಸಿ ಆನಂದ್ ಮತ್ತು ಜಂಟಿ ಪ್ರಧಾನ ಕಾರ್ಯದರ್ಶಿ ನಿರ್ಮಲ್ ಶೇಖರ್ ವಿರುದ್ಧವೂ ಪ್ರಕರಣಗಳು ದಾಖಲಾಗಿವೆ.

    ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ದೂರಿನ ಮೇರೆಗೆ ಸಲ್ಲಿಸಲಾದ ಎಫ್‌ಐಆರ್ ಪ್ರಕಾರ, ಗೊಂದಲದ ಸಮಯದಲ್ಲಿ ಒಂದು ಹಂತದಲ್ಲಿ 11 ಜನರ ಸಾವಿಗೆ ಕಾರಣವಾದ ಉದ್ದೇಶಪೂರ್ವಕ ಕೃತ್ಯಗಳಿಗೆ ವಿಜಯ್ ಅವರನ್ನೇ ಹೆಸರಿಸಲಾಗಿದೆ. ರಾಜಕೀಯ ಶಕ್ತಿಯನ್ನು ಪ್ರದರ್ಶಿಸಲು ಜಿಲ್ಲೆಗೆ ಬಂದ ನಂತರ ವಿಜಯ್ ಉದ್ದೇಶಪೂರ್ವಕವಾಗಿ ನಾಲ್ಕು ಗಂಟೆ ತಡವಾಗಿ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದಾರೆ. ಇದರಿಂದಾಗಿ ಜನಸಂದಣಿಯಲ್ಲಿ ಅಶಾಂತಿ ಮತ್ತು ಅನಿಯಂತ್ರಿತ ಪರಿಸ್ಥಿತಿ ಉಂಟಾಯಿತು ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಇದನ್ನೂ ಓದಿ: TVK Vijay Rally Stampede | ಮದ್ರಾಸ್‌ ಹೈಕೋರ್ಟ್‌ನಲ್ಲಿಂದು ವಿಚಾರಣೆ – ಸಾವಿನ ಸಂಖ್ಯೆ 41ಕ್ಕೆ ಏರಿಕೆ

    ಅಧಿಕಾರಿಗಳು ವಿಧಿಸಿದ ಷರತ್ತುಗಳನ್ನು ಉಲ್ಲಂಘಿಸಿ ವಿಜಯ್ ಅನುಮತಿಯಿಲ್ಲದೆ ರೋಡ್ ಶೋ ನಡೆಸಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ. ಟಿವಿಕೆಯ ಇತರ ಹಿರಿಯ ನಾಯಕರು ಪದೇ ಪದೇ ಎಚ್ಚರಿಕೆಗಳನ್ನು ನಿರ್ಲಕ್ಷಿಸಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ.

  • ಕಾಲ್ತುಳಿತಕ್ಕೆ ಪೊಲೀಸರು ಹೊಣೆ – ಪತ್ರ ಬರೆದು ವಿಜಯ್‌ ಅಭಿಮಾನಿ, ಟಿವಿಕೆ ಕಾರ್ಯಕರ್ತ ಆತ್ಮಹತ್ಯೆ

    ಕಾಲ್ತುಳಿತಕ್ಕೆ ಪೊಲೀಸರು ಹೊಣೆ – ಪತ್ರ ಬರೆದು ವಿಜಯ್‌ ಅಭಿಮಾನಿ, ಟಿವಿಕೆ ಕಾರ್ಯಕರ್ತ ಆತ್ಮಹತ್ಯೆ

    ಚೆನ್ನೈ: ವಿಜಯ್ (Vijay) ಅವರ ಕರೂರ್‌ ರಾಜಕೀಯ ರ‍್ಯಾಲಿಯಲ್ಲಿ ನಡೆದ ಭೀಕರ ಕಾಲ್ತುಳಿತ (Karur Stampede) ದುರಂತ ಸಂಭವಿಸಿದ ಎರಡು ದಿನಗಳ ನಂತರ ಪಕ್ಷದ ಕಾರ್ಯಕರ್ತ ಆತ್ಮಹತ್ಯೆಗೆ (Suicide) ಶರಣಾಗಿದ್ದಾನೆ.

    ತಮಿಳಗ ವೆಟ್ರಿ ಕಳಗಂ (TVK) ವಿರ್ಪಟ್ಟು ಗ್ರಾಮ ಶಾಖೆಯ ಕಾರ್ಯದರ್ಶಿ ಅಯ್ಯಪ್ಪನ್ (52) ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: TVK Vijay Rally Stampede | ಮದ್ರಾಸ್‌ ಹೈಕೋರ್ಟ್‌ನಲ್ಲಿಂದು ವಿಚಾರಣೆ – ಸಾವಿನ ಸಂಖ್ಯೆ 41ಕ್ಕೆ ಏರಿಕೆ

     

    ಈ ಭೀಕರ ಘಟನೆಯಿಂದ ತನಗೆ ನೋವಾಗಿದೆ ಎಂದು ಭಾವನಾತ್ಮಕವಾಗಿ ಪತ್ರ ಬರೆದಿರುವ ಅವರು, ದುರಂತಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರುವುದರ ಜೊತೆಗೆ ಪೊಲೀಸರು ಸೂಕ್ತ ವ್ಯವಸ್ಥೆಗಳನ್ನು ಒದಗಿಸಿಲ್ಲ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ:  TVK Vijay Rally Stampede | ದುರಂತದಲ್ಲಿ 2 ವರ್ಷದ ಕಂದಮ್ಮ ಬಲಿ – ಕುಟುಂಬದಲ್ಲಿ ಮುಗಿಲು ಮುಟ್ಟಿದ ಆಕ್ರಂದನ

    ಮಾಹಿತಿಯ ಮೇರೆಗೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಪತ್ರವನ್ನು ವಶಪಡಿಸಿಕೊಂಡು, ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಲ್ಲುಪುರಂನ ಮುಂಡಿಯಂಬಕ್ಕಂ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ.

  • ವಿಜಯ್‌ ಅವರದ್ದು ಏನೂ ತಪ್ಪಿಲ್ಲ, ಪೊಲೀಸ್‌ ಇಂಟೆಲಿಜೆನ್ಸ್‌ ವಿಫಲವಾಗಿದೆ: ಅಣ್ಣಾಮಲೈ ಆರೋಪ

    ವಿಜಯ್‌ ಅವರದ್ದು ಏನೂ ತಪ್ಪಿಲ್ಲ, ಪೊಲೀಸ್‌ ಇಂಟೆಲಿಜೆನ್ಸ್‌ ವಿಫಲವಾಗಿದೆ: ಅಣ್ಣಾಮಲೈ ಆರೋಪ

    – ಕರೂರು ಕಾಲ್ತುಳಿತದಲ್ಲಿ ಮೃತರ ಕುಟುಂಬಸ್ಥರಿಗೆ ತಲಾ 1 ಲಕ್ಷ ಪರಿಹಾರ ಘೋಷಿಸಿದ ಬಿಜೆಪಿ ನಾಯಕ

    ಚೆನ್ನೈ: ನಟ, ರಾಜಕಾರಣಿ ವಿಜಯ್‌ (Vijay Thalapathy) ಚುನಾವಣಾ ರ‍್ಯಾಲಿಯಲ್ಲಿ ಭೀಕರ ಕಾಲ್ತುಳಿತದಿಂದ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 1 ಲಕ್ಷ ರೂ. ಪರಿಹಾರವನ್ನು ತಮಿಳುನಾಡು ಬಿಜೆಪಿ ನಾಯಕ ಅಣ್ಣಾಮಲೈ (Annamalai) ಘೋಷಿಸಿದ್ದಾರೆ.

    ಕಾರೂರು (Karur Stampede) ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಅಣ್ಣಾಮಲೈ ಅವರು ಗಾಯಾಳುಗಳ ಆರೋಗ್ಯ ವಿಚಾರಿಸಿದರು. ತಮ್ಮವರನ್ನು ಕಳೆದುಕೊಂಡು ದುಃಖದಲ್ಲಿದ್ದ ಜನರಿಗೆ ಸಾಂತ್ವನ ಹೇಳಿದರು.

    ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಈ ಘಟನೆ ಬಗ್ಗೆ ತೀವ್ರ ನೋವಾಗಿದೆ. ಈವರೆಗೆ ತಮಿಳುನಾಡಿನಲ್ಲಿ ಈ ರೀತಿ ಘಟನೆ ನಡೆದಿರಲಿಲ್ಲ. ಈ ದುರಂತಕ್ಕೆ ನೇರ ಹೊಣೆ ಸ್ಥಳೀಯ ಪೊಲೀಸರು ಮತ್ತು ರಾಜ್ಯ ಸರ್ಕಾರ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: TVK Vijay Rally Stampede | ದುರಂತದಲ್ಲಿ 2 ವರ್ಷದ ಕಂದಮ್ಮ ಬಲಿ – ಕುಟುಂಬದಲ್ಲಿ ಮುಗಿಲು ಮುಟ್ಟಿದ ಆಕ್ರಂದನ

    ಇದರಲ್ಲಿ ನಟ, ರಾಜಕಾರಣಿ ವಿಜಯ್ ಅವರದ್ದು ಏನು ತಪ್ಪು ಇಲ್ಲ. ಸಮಾರಂಭಕ್ಕೆ ಅನುಮತಿ ನೀಡಿದ್ದು ಸ್ಥಳೀಯ ಆಡಳಿತ ಮಂಡಳಿ. 10 ಸಾವಿರ ಜನ ಸೇರುತ್ತಾರೆ, ಅನುಮತಿ ಕೊಡಿ ಅಂತ ಕೇಳಿದ್ರು ಕೊಟ್ಟಿದ್ದೇವೆ ಅಂತ ಈಗ ಅಧಿಕಾರಿಗಳು ಹೇಳುತ್ತಿದ್ದಾರೆ. ಹಾಗಾದರೆ ಪೊಲೀಸರ ಇಂಟಲಿಜೆನ್ಸ್ ವಿಫಲ ಆಗಿದೆಯಾ? ಪೊಲೀಸರಿಗೆ ಗೊತ್ತಿಲ್ಲವಾ ಅವರು ಒಬ್ಬ ಐಕಾನ್ ಸ್ಟಾರ್ ಅಂತ? ಇಲ್ಲಿನ ಡಿಸಿ ಮತ್ತು ಎಸ್‌ಪಿಯನ್ನು ಅಮಾನತು ಮಾಡಬೇಕು. ಅದರೆ, ಅದನ್ನು ರಾಜ್ಯ ಸರ್ಕಾರ ಮಾಡಿಲ್ಲ ಎಂದು ಕಿಡಿಕಾರಿದರು.

    ಕರ್ನಾಟಕದಲ್ಲಿ ಆರ್‌ಸಿಬಿ ವಿಚಾರವಾಗಿ ಒಂದು ಘಟನೆ ನಡೆದಿತ್ತು. ಅಲ್ಲಿಯೂ ಕೂಡ ರಾಜ್ಯ ಸರ್ಕಾರದ ವಿಫಲತೆ ಇತ್ತು. ಅಲ್ಲಿ ಒನ್‌ ಮ್ಯಾನ್ ತನಿಖೆಗೆ ಆದೇಶ ನೀಡಲಾಗಿತ್ತು. ಅವರು ರಾಜ್ಯ ಸರ್ಕಾರದ ವಿರುದ್ಧ ರಿಪೋರ್ಟ್ ನೀಡಲು ಸಾಧ್ಯವಿಲ್ಲ. ಅದೇ ರೀತಿ ಇಲ್ಲಿ ಕೂಡ ಆಗುತ್ತಿದೆ. ಈ ಪ್ರಕರಣವನ್ನು ಸಿಬಿಐಗೆ ಕೊಡಬೇಕು. ಸಿಬಿಐ ತನಿಖೆಯಲ್ಲಿ ಗೊತ್ತಾಗುತ್ತೆ, ಇದು ಯಾರಾದ್ರು ಹೇಳಿ ಮಾಡಿಸಿದ್ದ ಅಂತ. ಜನಸಂದಣಿಯಲ್ಲಿ ಯಾರದ್ರು ಕುಮ್ಮಕ್ಕು ಕೊಟ್ರ ಎಂಬ ಎಲ್ಲಾ ಮಾಹಿತಿ ಹೊರ ಬರುತ್ತೆ ಎಂದು ತಿಳಿಸಿದರು. ಇದನ್ನೂ ಓದಿ: ಕರೂರು ಕಾಲ್ತುಳಿತ – 39 ಮೃತದೇಹ ಕುಟುಂಬಸ್ಥರಿಗೆ ಹಸ್ತಾಂತರ

    ನಮ್ಮ ಪಕ್ಷದಿಂದ ಗ್ರೌಂಡ್ ಲೆವೆಲ್‌ನಲ್ಲಿ ಕೆಲಸ ಮಾಡುತ್ತಿದ್ದೇವೆ. ಮೃತ 40 ಜನರಿಗೂ ತಲಾ ಒಂದು ಲಕ್ಷ ಪರಿಹಾರ ನೀಡಲು ಬಿಜೆಪಿಯಿಂದ ತೀರ್ಮಾನ ಮಾಡಲಾಗಿದೆ. ಒಂದು ವಾರದಲ್ಲಿ ಮೃತರ ಎಲ್ಲರ ಮನೆಗೆ ತೆರಳಿ ನಾವು ಚೆಕ್‌ ತಲುಪಿಸುತ್ತೇವೆ ಎಂದರು.