Tag: Karur Stampede

  • ಕರೂರು ಕಾಲ್ತುಳಿತ – 39 ಮೃತದೇಹ ಕುಟುಂಬಸ್ಥರಿಗೆ ಹಸ್ತಾಂತರ

    ಕರೂರು ಕಾಲ್ತುಳಿತ – 39 ಮೃತದೇಹ ಕುಟುಂಬಸ್ಥರಿಗೆ ಹಸ್ತಾಂತರ

    ಚೆನ್ನೈ: ಕರೂರು ಕಾಲ್ತುಳಿತ ದುರಂತದಲ್ಲಿ (Karur Stampede) ಮೃತಪಟ್ಟ 39 ಮಂದಿಯ ಮೃತದೇಹವನ್ನು ಆಸ್ಪತ್ರೆಯ ಶವಾಗಾರದಿಂದ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.

    ಸರ್ಕಾರದ ವತಿಯಿಂದ ಅಂಬುಲೆನ್ಸ್ ವ್ಯವಸ್ಥೆ ಮಾಡಿ ಮೃತದೇಹಗಳನ್ನು ರವಾನಿಸಲಾಗಿದೆ. ಕುಟುಂಬಸ್ಥರು ಮೃತದೇಹಗಳನ್ನು ಅವರವರ ಮನೆಗೆ ತೆಗೆದುಕೊಂಡು ಹೋಗಿದ್ದಾರೆ. ಸದ್ಯ ಗಾಯಾಳುಗಳು ಸರ್ಕಾರಿ ಮೆಡಿಕಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಮಿಳುನಾಡಿನ ಹಲವು ರಾಜಕೀಯ ಪಕ್ಷದ ಮುಖಂಡರುಗಳು ಆಸ್ಪತ್ರೆಗೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಇನ್ನು ಆಸ್ಪತ್ರೆಗೆ ಡಿಸಿಎಂ ಉದಯನಿಧಿ ಭೇಟಿ ನೀಡಿ ಗಾಯಾಳುಗಳನ್ನು ಮಾತನಾಡಿಸಿ ಸಾಂತ್ವನ ಹೇಳಿದ್ದಾರೆ. ಇದನ್ನೂ ಓದಿ: ಗಮನಿಸಿ – ದಸರಾ ಪ್ರಯುಕ್ತ ಮೈಸೂರು KSRTC ಬಸ್‌ ಟಿಕೆಟ್‌ ದರ ಏರಿಕೆ

    ತಮಿಳುನಾಡು ಕರೂರಿನಲ್ಲಿ ನಟ ಹಾಗೂ ರಾಜಕಾರಣಿ ವಿಜಯ್ ದಳಪತಿ (Vijay Thalapathy) ಆಯೋಜಿಸಿದ್ದ ಚುನಾವಣಾ ಪ್ರಚಾರದ ರ‍್ಯಾಲಿ ವೇಳೆ ಕಾಲ್ತುಳಿತ ದುರಂತ ನಡೆದಿದೆ. ಘಟನೆಯಲ್ಲಿ 39 ಮಂದಿ ಸಾವನ್ನಪ್ಪಿದ್ದು, 48 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಕಾಲ್ತುಳಿತಕ್ಕೆ ಪೊಲೀಸರ ಲಾಠಿಚಾರ್ಜ್‌ ಕಾರಣ: ಟಿವಿಕೆ ಆರೋಪ

    ಮಧ್ಯಾಹ್ನದ ಸುಡು ಬಿಸಿಲಿನಲ್ಲಿ ವಿಜಯ್ ಅವರಿಗಾಗಿ ಕಾಯುತ್ತಿದ್ದ ಅಭಿಮಾನಿಗಳು ಸುಸ್ತಿನಿಂದ ಬಳಲುತ್ತಿದ್ದರು. ಇನ್ನು ಇದೇ ವೇಳೆ 9 ವರ್ಷದ ಬಾಲಕಿ ಕಳೆದು ಹೋಗಿರ್ತಾಳೆ. ಆಗ ವಿಜಯ್ ಮೈಕ್ ಮೂಲಕ ಪೊಲೀಸರಿಗೆ ಮನವಿ ಮಾಡ್ತಾರೆ. ಮೈಕ್‌ನಲ್ಲಿ ಅನೌನ್ಸ್ ಮಾಡುತ್ತಲೇ ನೂಕುನುಗ್ಗಲು ಉಂಟಾಗಿದೆ. ಈ ವೇಳೆ ಉಸಿರಾಟದ ತೊಂದರೆ ಅನುಭವಿಸಿದ ಜನರು ಮೂರ್ಛೆ ತಪ್ಪಿ ಬಿದ್ದಿದ್ದಾರೆ. ಅಂದ್ಹಾಗೆ ರ‍್ಯಾಲಿ ತಡವಾಗಿ ಸಂಜೆ ಆರಂಭವಾಗಿತ್ತು. ಹೀಗಾಗಿ ವಿಜಯ್ ನೋಡಲು ಫ್ಯಾನ್ಸ್ ಮುಗಿ ಬಿದ್ದಿದ್ರು. ಅಲ್ಲದೇ ರ‍್ಯಾಲಿ ವೇಳೆ ಕರೆಂಟ್ ತೆಗೆದಿದ್ದರಿಂದ ದುರಂತ ಸಂಭವಿಸಿದೆ. ಇದನ್ನೂ ಓದಿ: RSS ಸ್ವಯಂಸೇವಕರ ಪ್ರತಿಯೊಂದು ಕೆಲಸವೂ ದೇಶ ಮೊದಲು ಅನ್ನೋದನ್ನ ಕಲಿಸುತ್ತೆ – ಮೋದಿ ಮನದ ಮಾತು

    ಇನ್ನು ಮೃತರ ಕುಟುಂಬಸ್ಥರಿಗೆ ವಿಜಯ್ ದಳಪತಿ ತಲಾ 20 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಅಲ್ಲದೇ ಗಾಯಾಳುಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಇನ್ನೂ ಘಟನೆ ಸಂಬಂಧ ಟಿವಿಕೆ ಸ್ಥಳೀಯ ಕಾರ್ಯದರ್ಶಿ ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಲಾಗುತ್ತಿದೆ.  ಇದನ್ನೂ ಓದಿ: Bannerghatta | ಸಫಾರಿಗೆ ತೆರಳಿದ್ದ ಪ್ರವಾಸಿಗ ಹೃದಯಾಘಾತಕ್ಕೆ ಬಲಿ

  • ಕರೂರು ಕಾಲ್ತುಳಿತ ದುರಂತ – ಮೃತರ ಕುಟುಂಬಕ್ಕೆ ತಲಾ 20 ಲಕ್ಷ ಪರಿಹಾರ ಘೋಷಿಸಿದ ವಿಜಯ್

    ಕರೂರು ಕಾಲ್ತುಳಿತ ದುರಂತ – ಮೃತರ ಕುಟುಂಬಕ್ಕೆ ತಲಾ 20 ಲಕ್ಷ ಪರಿಹಾರ ಘೋಷಿಸಿದ ವಿಜಯ್

    – ಗಾಯಾಳುಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ

    ಚೆನ್ನೈ: ತಮಿಳುನಾಡಿನ (Tamil Nadu) ಕರೂರಿನಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ (Karur Stampede) ಮೃತಪಟ್ಟವರ ಕುಟುಂಬಕ್ಕೆ ನಟ, ರಾಜಕಾರಣಿ ವಿಜಯ್ ದಳಪತಿ (Thalapathy Vijay) ತಲಾ 20 ಲಕ್ಷ ರೂ. ಪರಿಹಾರ (Compensation) ಘೋಷಿಸಿದ್ದು, ಗಾಯಾಳುಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.

    ತಮಿಳುನಾಡು ಕರೂರಿನಲ್ಲಿ ವಿಜಯ್ ದಳಪತಿ ಆಯೋಜಿಸಿದ್ದ ಚುನಾವಣಾ ಪ್ರಚಾರದ ರ‍್ಯಾಲಿ ವೇಳೆ ಭೀಕರ ಕಾಲ್ತುಳಿತ ಸಂಭವಿಸಿ 39 ಮಂದಿ ಸಾವನ್ನಪ್ಪಿದ್ದು, 48 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ವಿಜಯ್ ದಳಪತಿ ಎಕ್ಸ್‌ನಲ್ಲಿ ಟ್ವೀಟ್ ಮಾಡಿದ್ದು, ಘಟನೆಗೆ ಸಂತಾಪ ಸೂಚಿಸಿದ್ದಾರೆ. ಅಲ್ಲದೇ ಮೃತರ ಕುಟುಂಬಕ್ಕೆ ಹಾಗೂ ಗಾಯಾಳುಗಳಿಗೆ ಪರಿಹಾರ ಘೋಷಿಸಿದ್ದಾರೆ.

    ಎಕ್ಸ್‌ನಲ್ಲಿ ಏನಿದೆ?
    ನನ್ನ ಹೃದಯದಲ್ಲಿ ನೆಲೆಸಿರುವ ಎಲ್ಲರಿಗೂ ನಮಸ್ಕಾರಗಳು. ಶನಿವಾರ ಕರೂರಿನಲ್ಲಿ ನಡೆದ ದುರಂತದಿಂದ ನನ್ನ ಹೃದಯ ಮತ್ತು ಮನಸ್ಸು ಭಾರವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡು ದುಃಖಿಸುತ್ತಿರುವ ಕುಟುಂಬಗಳಿಗೆ ನನ್ನ ಸಂತಾಪವನ್ನು ಸೂಚಿಸುತ್ತಾ, ಈ ದುಃಖವನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತೇನೆ. ಇದು ನಿಜಕ್ಕೂ ನಮಗೆ ತುಂಬಲಾರದ ನಷ್ಟ. ಘಟನೆಯಿಂದ ನನ್ನ ಹೃದಯ ಅನುಭವಿಸುತ್ತಿರುವ ನೋವನ್ನು ವ್ಯಕ್ತಪಡಿಸಲು ಪದಗಳೇ ಸಿಗುತ್ತಿಲ್ಲ. ಯಾರೇ ಸಾಂತ್ವನದ ಮಾತುಗಳನ್ನು ಹೇಳಿದರೂ, ಪ್ರೀತಿಪಾತ್ರರನ್ನು ಕಳೆದುಕೊಂಡ ನೋವನ್ನು ಭರಿಸಲು ಸಾಧ್ಯವಿಲ್ಲ. ಆದರೂ, ನಿಮ್ಮ ಕುಟುಂಬದ ಸದಸ್ಯನಾಗಿ, ಪ್ರೀತಿಪಾತ್ರರನ್ನು ಕಳೆದುಕೊಂಡ ಪ್ರತಿ ಕುಟುಂಬಕ್ಕೆ 20 ಲಕ್ಷ ರೂ. ಮತ್ತು ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರಿಗೆ 2 ಲಕ್ಷ ರೂ. ನೀಡಲು ನಾನು ಉದ್ದೇಶಿಸಿದ್ದೇನೆ. ಪ್ರೀತಿಪಾತ್ರರನ್ನು ಕಳೆದುಕೊಂಡಿರುವ ಸಂದರ್ಭದಲ್ಲಿ ಈ ಮೊತ್ತವು ಗಮನಾರ್ಹವಾಗಿಲ್ಲ. ಆದರೂ, ಈ ಕ್ಷಣದಲ್ಲಿ, ನಿಮ್ಮ ಕುಟುಂಬಕ್ಕೆ ಸೇರಿದವನಾಗಿ, ನಿಮ್ಮೊಂದಿಗೆ ನಿಲ್ಲುವುದು ನನ್ನ ಕರ್ತವ್ಯ.

    ಅದೇ ರೀತಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ನಮ್ಮೆಲ್ಲರ ಪ್ರೀತಿಪಾತ್ರರು ಬೇಗನೆ ಚೇತರಿಸಿಕೊಂಡು ಮನೆಗೆ ಮರಳಲಿ ಎಂದು ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ. ಅಲ್ಲದೇ ಘಟನೆಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ನಮ್ಮ ಪ್ರೀತಿಪಾತ್ರರಿಗೆ ಅಗತ್ಯವಿರುವ ಎಲ್ಲಾ ಬೆಂಬಲವನ್ನು ನಮ್ಮ ತಮಿಳಗ ವೆಟ್ರಿ ಕಳಗಂ ಪಕ್ಷ ನೀಡುತ್ತದೆ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ ಎಂದಿದ್ದಾರೆ.

    ಘಟನೆ ಏನು?
    ಕಾಲಿವುಡ್ ಸೂಪರ್ ಸ್ಟಾರ್ ಕಮ್ ರಾಜಕಾರಣಿ ದಳಪತಿ ವಿಜಯ್ ತಮಿಳುನಾಡಿನ ರಾಜಕೀಯದಲ್ಲಿ ಭವಿಷ್ಯ ಕಂಡುಕೊಳ್ಳಲು ಮುಂದಾಗಿದ್ದಾರೆ. ಅದಕ್ಕಾಗಿ 2026ರ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ತಯಾರಿ ಆರಂಭಿಸಿದ್ದಾರೆ. ಅದರ ಮುಂದುವರಿದ ಭಾಗವಾಗಿ ಕರೂರಿನಲ್ಲಿ ತಮ್ಮ ತಮಿಳಿಗ ವೆಟ್ರಿ ಕಳಗಂ ಪಕ್ಷದ ರ‍್ಯಾಲಿ ಹಮ್ಮಿಕೊಂಡಿದ್ದರು. ವಿಜಯ್ ನೋಡಲು ಸಾವಿರಾರು ಸಂಖ್ಯೆಯಲ್ಲಿ ಅಭಿನಮಾನಿಗಳು, ಬೆಂಬಲಿಗರು ಸೇರಿದ್ದರು. ತಮ್ಮ ನಾಯಕನಿಗಾಗಿ ಸುಮಾರು ಆರು ಗಂಟೆಗಳಿಗೂ ಹೆಚ್ಚು ಕಾಲ ಕಾದು ಕುಳಿತಿದ್ದರು. ಆದ್ರೆ, ದಳಪತಿ ವಿಜಯ್ ಕಾರ್ಯಕ್ರಮದ ಸ್ಥಳಕ್ಕೆ ತಡವಾಗಿ ಆಗಮಿಸಿದ್ದರು.

    ಮಧ್ಯಾಹ್ನದ ಸುಡು ಬಿಸಿಲಿನಲ್ಲಿ ವಿಜಯ್ ಅವರಿಗಾಗಿ ಕಾಯುತ್ತಿದ್ದ ಅಭಿಮಾನಿಗಳು ಸುಸ್ತಿನಿಂದ ಬಳಲುತ್ತಿದ್ದರು. ಇನ್ನು ಇದೇ ವೇಳೆ 9 ವರ್ಷದ ಬಾಲಕಿ ಕಳೆದು ಹೋಗಿರ್ತಾಳೆ. ಆಗ ವಿಜಯ್ ಮೈಕ್ ಮೂಲಕ ಪೊಲೀಸರಿಗೆ ಮನವಿ ಮಾಡ್ತಾರೆ. ಮೈಕ್‌ನಲ್ಲಿ ಅನೌನ್ಸ್ ಮಾಡುತ್ತಲೇ ನೂಕುನುಗ್ಗಲು ಉಂಟಾಗಿದೆ. ಈ ವೇಳೆ ಉಸಿರಾಟದ ತೊಂದರೆ ಅನುಭವಿಸಿದ ಜನರು ಮೂರ್ಛೆ ತಪ್ಪಿ ಬಿದ್ದಿದ್ದಾರೆ. ಅಂದ್ಹಾಗೆ ರ‍್ಯಾಲಿ ತಡವಾಗಿ ಸಂಜೆ ಆರಂಭವಾಗಿತ್ತು. ಹೀಗಾಗಿ ವಿಜಯ್ ನೋಡಲು ಫ್ಯಾನ್ಸ್ ಮುಗಿ ಬಿದ್ದಿದ್ರು. ಅಲ್ದೆ ರ‍್ಯಾಲಿ ವೇಳೆ ಕರೆಂಟ್ ತೆಗೆದಿದ್ದರಿಂದ ದುರಂತ ಸಂಭವಿಸಿದೆ.

    39 ಮಂದಿ ಸಾವು, 48 ಮಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ
    ಸ್ಥಳಪರಿಶೀಲನೆ ನಡೆಸಿದ ಎಡಿಜಿಪಿ ಡೇವಿಡ್ ಸನ್ ಆಶಿರ್ವಾದ್ ಮಾತನಾಡಿ, 10,000 ಜನ ಸೇರುತ್ತಾರೆ ಅಂತ ಅನುಮತಿ ಪಡೆದಿದ್ದರು. ಹೀಗಾಗಿ 116 ಸ್ಥಳೀಯ ಪೊಲೀಸರು ಹೊರತುಪಡಿಸಿ ಹೆಚ್ಚುವರಿ 500 ಪೊಲೀಸರನ್ನ ನಿಯೋಜನೆ ಮಾಡಲಾಗಿತ್ತು. ಈ ಹಿಂದೆಯೂ 15,000 ಜನಕ್ಕೆ 600 ಪೊಲೀಸರನ್ನ ನಿಯೋಜನೆ ಮಾಡಲಾಗಿತ್ತು. ಆದ್ರೆ ಇಲ್ಲಿ 2 ಲಕ್ಷಕ್ಕೂ ಹೆಚ್ಚು ಜನ ಸೇರಿದ್ದರು. ಹೀಗಾಗಿ ಕಾಲ್ತುಳಿತ ಸಂಭವಿಸಿದೆ. ಘಟನೆಯಲ್ಲಿ 39 ಮಂದಿ ಸಾವನ್ನಪ್ಪಿದ್ದಾರೆ. 48 ಮಂದಿ ಆಸ್ಪತ್ರೆಯಲ್ಲಿ ಸಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಯಾವುದೇ ಲಾಠಿ ಚಾರ್ಜ್ ಮಾಡಿಲ್ಲ, ದುರಂತಕ್ಕೆ ಕಾರಣಗಳನ್ನ ಪಟ್ಟಿ ಮಾಡಿದ್ದೇವೆಂದು ತಿಳಿಸಿದ್ದಾರೆ.

  • ನನ್ನ ಹೃದಯ ಚೂರಾಗಿದೆ.. ನೋವು, ದುಃಖದಲ್ಲಿ ನರಳುತ್ತಿದ್ದೇನೆ: ಕಾಲ್ತುಳಿತ ದುರಂತಕ್ಕೆ ವಿಜಯ್‌ ಮೊದಲ ಪ್ರತಿಕ್ರಿಯೆ

    ನನ್ನ ಹೃದಯ ಚೂರಾಗಿದೆ.. ನೋವು, ದುಃಖದಲ್ಲಿ ನರಳುತ್ತಿದ್ದೇನೆ: ಕಾಲ್ತುಳಿತ ದುರಂತಕ್ಕೆ ವಿಜಯ್‌ ಮೊದಲ ಪ್ರತಿಕ್ರಿಯೆ

    ಚೆನ್ನೈ: ಕರೂರಿನಲ್ಲಿ ರ‍್ಯಾಲಿ ವೇಳೆ ಭೀಕರ ಕಾಲ್ತುಳಿತ (Karur Stampede) ದುರಂತಕ್ಕೆ ಸಂಬಂಧಿಸಿದಂತೆ ನಟ, ರಾಜಕಾರಣಿ ದಳಪತಿ ವಿಜಯ್‌ (Vijay) ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

    ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ವಿಜಯ್‌, ನನ್ನ ಹೃದಯ ಚೂರಾಗಿದೆ. ನಾನು ಅಸಹನೀಯ ನೋವು ಮತ್ತು ದುಃಖದಲ್ಲಿದ್ದೇನೆ. ಹೇಳಿಕೊಳ್ಳಲಾಗದಷ್ಟು ನೋವು ಎಂದು ದುರಂತಕ್ಕೆ ವಿಷಾದ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಅಮಾಯಕರ ಜೀವಹಾನಿ ಹೃದಯವನ್ನು ಕಲಕಿದೆ: ಕಾಲ್ತುಳಿತ ದುರಂತಕ್ಕೆ ರಜನಿಕಾಂತ್‌ ಕಂಬನಿ

    ಕರೂರಿನಲ್ಲಿ ಪ್ರಾಣ ಕಳೆದುಕೊಂಡ ನನ್ನ ಪ್ರೀತಿಯ ಸಹೋದರ, ಸಹೋದರಿಯರ ಕುಟುಂಬಗಳಿಗೆ ನನ್ನ ಆಳವಾದ ಸಂತಾಪ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಶೀಘ್ರವೇ ಗುಣಮುಖರಾಗಲೆಂದು ನಾನು ಪ್ರಾರ್ಥಿಸುತ್ತೇನೆ ಎಂದು ವಿಜಯ್‌ ತಿಳಿಸಿದ್ದಾರೆ.

    ತಮಿಳುನಾಡು ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕರೂರಿನಲ್ಲಿ ಟಿವಿಕೆ ಮುಖ್ಯಸ್ಥ ವಿಜಯ್‌ ಬೃಹತ್‌ ರ‍್ಯಾಲಿ ನಡೆಸಿದ್ದರು. ವಿಜಯ್‌ ನೋಡಲೆಂದು ಲಕ್ಷಾಂತರ ಸಂಖ್ಯೆಯಲ್ಲಿ ಜನ ನೆರೆದಿದ್ದರು. ಈ ವೇಳೆ ಭೀಕರ ಕಾಲ್ತುಳಿತ ಸಂಭವಿಸಿದೆ. 35ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಕ್ಷಣಕ್ಷಣಕ್ಕೂ ಸಾವಿನ ಸಂಖ್ಯೆ ಏರುತ್ತಿದೆ. 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ವಿಜಯ್‌ಗಾಗಿ ಸತತ 7 ಗಂಟೆ ಕಾದಿದ್ದ ಜನ; ಬರೋಬ್ಬರಿ 1 ಲಕ್ಷ ಮಂದಿ ಜಮಾವಣೆ – ಭೀಕರ ಕಾಲ್ತುಳಿತ ಹೇಗಾಯ್ತು?

  • ಕರೂರು ಕಾಲ್ತುಳಿತ – ಮೃತರ ಕುಟುಂಬಸ್ಥರಿಗೆ 10 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸ್ಟಾಲಿನ್‌

    ಕರೂರು ಕಾಲ್ತುಳಿತ – ಮೃತರ ಕುಟುಂಬಸ್ಥರಿಗೆ 10 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸ್ಟಾಲಿನ್‌

    -ಗಾಯಾಳುಗಳಿಗೆ ತಲಾ 1 ಲಕ್ಷ ರೂ. ಪರಿಹಾರ
    -ಕಾಲ್ತುಳಿತ ತನಿಖೆಗೆ ಸರ್ಕಾರದಿಂದ ಆಯೋಗ ರಚನೆ

    ಚೆನ್ನೈ: ತಮಿಳುನಾಡಿನ (Tamilnadu) ಕರೂರಿನಲ್ಲಿ (Karur) ಸಂಭವಿಸಿದ ಕಾಲ್ತುಳಿತದಲ್ಲಿ (Stampede) ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 10 ಲಕ್ಷ ರೂ. ಪರಿಹಾರ ನೀಡುವುದಾಗಿ ಸಿಎಂ ಎಂಕೆ ಸ್ಟಾಲಿನ್‌  (MK Stalin) ಘೋಷಿಸಿದ್ದಾರೆ.

    ಈ ಕುರಿತು ಎಕ್ಸ್‌ (X) ಖಾತೆಯಲ್ಲಿ ಹಂಚಿಕೊಂಡಿರುವ ಅವರು, ಕಾಲ್ತುಳಿತದಲ್ಲಿ ಮೃತಪಟ್ಟ ಪ್ರತಿಯೊಬ್ಬರ ಕುಟುಂಬಕ್ಕೂ 10 ಲಕ್ಷ ರೂ. ಪರಿಹಾರ ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪ್ರತಿಯೊಬ್ಬರಿಗೂ 1 ಲಕ್ಷ ರೂ. ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. ಜೊತೆಗೆ ಕಾಲ್ತುಳಿತದ ತನಿಖೆ ನಡೆಸಲು ನಿವೃತ್ತ ನ್ಯಾಯಾಧೀಶೆ ಅರುಣಾ ಜಗದೀಶನ್ ಅವರ ನೇತೃತ್ವದಲ್ಲಿ ಆಯೋಗ ರಚಿಸಲಾಗುವುದು ಎಂದಿದ್ದಾರೆ.ಇದನ್ನೂ ಓದಿ: ಕರೂರು ಕಾಲ್ತುಳಿತ ತೀವ್ರ ದು:ಖವನ್ನುಂಟು ಮಾಡಿದೆ – ಪ್ರಧಾನಿ ಮೋದಿ ಸಂತಾಪ

    ಶನಿವಾರ (ಸೆ.27) ರಾತ್ರಿ ಕರೂರಿಗೆ ಭೇಟಿ ನೀಡಿ, ಸಂತ್ರಸ್ತರ ಕುಟುಂಬಗಳನ್ನು ಹಾಗೂ ಗಾಯಾಳುಗಳನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸುತ್ತೇನೆ. ತಮಿಳಿಗ ವೆಟ್ರಿ ಕಳಗಂ ಪಕ್ಷದ ರ್ಯಾಲಿ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 8 ಮಕ್ಕಳು ಮತ್ತು 16 ಮಹಿಳೆಯರು ಸೇರಿದಂತೆ 36 ಜನರು ಸಾವನ್ನಪ್ಪಿದ್ದಾರೆ. ಸದ್ಯ ತಿರುಚಿ, ಸೇಲಂ ಮತ್ತು ದಿಂಡಿಗಲ್ ಜಿಲ್ಲಾಧಿಕಾರಿಗಳು ಕರೂರಿಗೆ ಹೋಗಿ ಪರಿಹಾರ ಕಾರ್ಯಗಳ ಬಗ್ಗೆ ಕ್ರಮವಹಿಸಿ ಎಂದು ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ.

    ಕಾಲ್ತುಳಿತ ಸಂಭವಿಸಿದ್ದು ಹೇಗೆ?
    ನಟ ವಿಜಯ ಶನಿವಾರ (ಸೆ.27) ಮಧ್ಯಾಹ್ನದ ಹೊತ್ತಿಗೆ ಕರೂರಿಗೆ ತಲುಪಬೇಕಿತ್ತು. ಆದರೆ ಏಳು ಗಂಟೆಗಳ ಕಾಲ ತಡವಾಗಿ ಬಂದ ಕಾರಣ ಜನಸಂದಣಿ ಹೆಚ್ಚಾಗಿ ಕಾಲ್ತುಳಿತ ಸಂಭವಿಸಿತು ಎನ್ನಲಾಗಿದೆ. ನಟ ಸ್ಥಳಕ್ಕೆ ಬರುತ್ತಿದ್ದಂತೆ ಜನರ ನೂಕಾಟ, ತಳ್ಳಾಟ ಹೆಚ್ಚಾಗಿ ಉಸಿರುಗಟ್ಟಲು ಶುರುವಾಗಿದ್ದು, ಇದರಿಂದ ಜನರು ಸ್ಥಳದಲ್ಲೇ ಮೂರ್ಛೆ ಹೋಗಲಾರಂಭಿಸಿದರು. ಇದನ್ನು ಗಮನಸಿದ ನಟ ಕೂಡಲೇ ತಮ್ಮ ಭಾಷಣ ನಿಲ್ಲಿಸಿ, ನೀರಿನ ಬಾಟಲಿಗಳನ್ನು ಎಸೆದಿದ್ದಾರೆ ಎಂದು ತಿಳಿದು ಬಂದಿದೆ.

    ಈ ವೇಳೆ ಬಾಟಲಿ ಎಸೆಯುತ್ತಿದ್ದ ನಟ ವಿಜಯ್ ಹತ್ತಿರಕ್ಕೆ ಜನರು ಹೋಗಲು ಪ್ರಾರಂಭಿಸಿದ್ದು, ಈ ವೇಳೆ ಒಂದು ಭಾಗದ ಜನರ ನಡುವೆ ಕಾಲ್ತುಳಿತ ಸಂಭವಿಸಿದೆ. ಪರಿಣಾಮ 40 ಮಂದಿ ಸಾವನ್ನಪ್ಪಿದ್ದಾರೆ. ಈ ಪೈಕಿ ಮೂವರು ಮಕ್ಕಳು ಮತ್ತು ವಯಸ್ಕರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.ಇದನ್ನೂ ಓದಿ: ʼ9 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ.. ಪೋಷಕರಿಗೆ ಹುಡುಕಿಕೊಡಿ ಪ್ಲೀಸ್‌ʼ: ರ‍್ಯಾಲಿ ವೇಳೆ ಮೈಕ್‌ನಲ್ಲಿ ಹೇಳಿದ್ದ ವಿಜಯ್‌