Tag: karwar

  • ಗೋವಾ-ಮಾಜಾಳಿ ಗಡಿಯಲ್ಲಿ ತಪಾಸಣೆ ವೇಳೆ ಸಿಕ್ಕಿಬಿತ್ತು ಕೋಟಿ ಹಣ; ಇಬ್ಬರು ಪೊಲೀಸರ ವಶಕ್ಕೆ

    ಗೋವಾ-ಮಾಜಾಳಿ ಗಡಿಯಲ್ಲಿ ತಪಾಸಣೆ ವೇಳೆ ಸಿಕ್ಕಿಬಿತ್ತು ಕೋಟಿ ಹಣ; ಇಬ್ಬರು ಪೊಲೀಸರ ವಶಕ್ಕೆ

    ಕಾರವಾರ: ಖಾಸಗಿ ಬಸ್‌ನಲ್ಲಿ ದಾಖಲೆ ಇಲ್ಲದೆ ಗೋವಾದಿಂದ ಬೆಂಗಳೂರಿಗೆ ದಾಖಲೆ ಇಲ್ಲದೇ ಒಂದು ಕೋಟಿ ಹಣ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ-ಗೋವಾ ಗಡಿಯ ಮಾಜಾಳಿ ಚಕ್ ಪೋಸ್ಟ್ ಬಳಿ ನಡೆದಿದೆ.

    ಗೋವಾದಿಂದ(goa) ಬೆಂಗಳೂರಿನ ಹೊಸೂರಿಗೆ 1 ಕೋಟಿ ಹಣವನ್ನು ಸಾಗಾಟ ಮಾಡಲಾಗುತ್ತಿತ್ತು. ಚೆಕ್‌ಪೋಸ್ಟ್ ಬಳಿ ಪೊಲೀಸರು ತಪಾಸಣೆ ನಡೆಸುವ ವೇಳೆ ಚೀಲದಲ್ಲಿ ಹಣ ಪತ್ತೆಯಾಗಿದೆ. ಹಣದ ಸಂಬಂಧ ದಾಖಲೆ ಕೇಳಿದಾಗ ನೀಡದ ಕಾರಣ ಬೆಂಗಳೂರು ಮೂಲದ ಕಲ್ಪೇಶ, ರಾಜಸ್ಥಾನ ಮೂಲದ ಬಮರ ರಾಮ್ ಎಂಬ ಇಬ್ಬರನ್ನು ವಶಕ್ಕೆ ಪಡೆದು ತನಿಖೆ ಕೈಕೊಳ್ಳಲಾಗಿದೆ. ಇದನ್ನೂ ಓದಿ: ಬ್ರಿಟಿಷರ ದಾಖಲೆ ಸುಟ್ಟಿದ್ದ ಸ್ವಾತಂತ್ರ್ಯ ಹೋರಾಟಗಾರ ವಿ.ಎನ್ ರೆಡ್ಡಿ ನಿಧನ

    ಪ್ರಾಥಮಿಕ ಮಾಹಿತಿ ಪ್ರಕಾರ ಬೆಂಗಳೂರಿನ ಕಲ್ಪೇಶ್ ಹಾಗೂ ಬಮರ ರಾಮ್ ಗೋವಾದ ಬೇರೆಯೊಬ್ಬರ ಹಣವನ್ನು ವ್ಯವಹಾರಕ್ಕಾಗಿ ಬೆಂಗಳೂರಿಗೆ ತೆಗೆದುಕೊಂಡು ಹೋಗುತ್ತಿರುವುದಾಗಿ ಹೇಳಿದ್ದಾನೆ. ಆದರೆ ಈ ಹಣದ ಮೂಲ ದಾಖಲೆಗಳನ್ನು ಪೊಲೀಸರು ಕೇಳಿದಾಗ ನೀಡಿಲ್ಲ. ಚಿತ್ತಾಕುಲ ಪೊಲೀಸರು ಹಣವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

    ಕಲ್ಪೇಶ್ ಹಣ ಸಾಗಾಟ ವ್ಯವಹಾರ ಮಾಡುವ ಬಗ್ಗೆ ಮಾಹಿತಿ ಲಭಿಸಿದ್ದು, ಈ ಹಣ ಹವಾಲಾದ್ದೋ ಅಥವಾ ಇನ್ಯಾವುದೋ ಎಂಬ ಬಗ್ಗೆ ತಿಳಿದುಬರಬೇಕಿದೆ. ಇದನ್ನೂ ಓದಿ: ಮಾದನಾಯಕನಹಳ್ಳಿ ಮಹಿಳೆ ಮೇಲೆ ಗ್ಯಾಂಗ್ ರೇಪ್ ಕೇಸ್; ಎ1 ಆರೋಪಿ ಬಂಧನ

  • ಅಂಕೋಲ ಪುರಸಭೆ ಆಡಳಿತಾಧಿಕಾರಿ ಮರು ನಿಯೋಜನೆ ಮಾಡಿದರೆ ಸಾಮೂಹಿಕ ರಾಜೀನಾಮೆ: ಪುರಸಭೆ ಅಧ್ಯಕ್ಷ

    ಅಂಕೋಲ ಪುರಸಭೆ ಆಡಳಿತಾಧಿಕಾರಿ ಮರು ನಿಯೋಜನೆ ಮಾಡಿದರೆ ಸಾಮೂಹಿಕ ರಾಜೀನಾಮೆ: ಪುರಸಭೆ ಅಧ್ಯಕ್ಷ

    ಕಾರವಾರ: ಆಡಳಿತ ದುರುಪಯೋಗ ಹಾಗೂ ಭ್ರಷ್ಟಾಚಾರ ಆರೋಪ ಹೊತ್ತು ಅಮಾನತಾಗಿದ್ದ ಅಂಕೋಲದ ಪುರಸಭೆ ಕಮಿಷಿನರ್ ಹಾಗೂ ಮುಖ್ಯ ಇಂಜಿನಿಯರ್‌ರನ್ನು ಮರು ನೇಮಕ ಮಾಡಿದ್ದಲ್ಲಿ ಸಾಮೂಹಿಕ ರಾಜೀನಾಮೆ ನೀಡುವುದಾಗಿ ಅಧ್ಯಕ್ಷರು ಹಾಗೂ ಸದಸ್ಯರು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

    ಈ ಕುರಿತು ಇಂದು ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿದ ಅಂಕೋಲ ಪುರಸಭೆ ಅಧ್ಯಕ್ಷ ಸೂರಜ್ ಎಂ.ನಾಯ್ಕ, ಪುರಸಭೆಯ ಈ ಹಿಂದಿನ ಮುಖ್ಯಾಧಿಕಾರಿ ಹೆಚ್.ಅಕ್ಷತಾ ಹಾಗೂ ಕಿರಿಯ ಅಭಿಯಂತರರಾದ ಶಲ್ಯಾ ನಾಯ್ಕ ಅವರು ಹಿಂದಿನಿಂದಲೂ ಆಡಳಿತ ಮಂಡಳಿಯ ಗಮನಕ್ಕೆ ತರದೇ ಹಲವು ಕಾನೂನು ಬಾಹಿರವಾಗಿ ಕರ್ತವ್ಯವನ್ನು ನಿರ್ವಹಿಸಿ, ಕರ್ತವ್ಯಲೋಪ ಎಸಗಿದ್ದರಿಂದ ಜಿಲ್ಲಾಧಿಕಾರಿ ಅವರು ಪ್ರಾಥಮಿಕ ತನಿಖೆ ನಡೆಸಿ ಕಾರಣ ಕೇಳಿ ನೋಟಿಸ್ ನೀಡಿ ಸಾಕಷ್ಟು ಕಾಲಾವಕಾಶ ನೀಡಿದ ನಂತರ ಮುಖ್ಯಾಧಿಕಾರಿ ಹಾಗೂ ಕಿರಿಯ ಇಂಜಿನಿಯರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದರು.

    ಆದರೆ ಅಮಾನತು ಆದ ಅಧಿಕಾರಿಗಳು ನ್ಯಾಯಾಲದ ಮೊರೆ ಹೋಗಿ ಆದೇಶಕ್ಕೆ ತಡೆ ತಂದಿದ್ದು ಇರುತ್ತದೆ. ಆದರೆ, ನ್ಯಾಯಾಲಯ ಅಮಾನತು ಆದ ಸ್ಥಳದಲ್ಲಿಯೇ ಮರುನಿಯೋಜನೆ ಮಾಡಬೇಕು ಎನ್ನುವ ಕುರಿತು ಸ್ಪಷ್ಟತೆ ನೀಡಿಲ್ಲ. ಇದು ಕೇವಲ ಮಧ್ಯಂತರ ಆದೇಶವಾಗಿದೆ. ಯಾವುದೇ ಅಧಿಕಾರಿಯೂ ಕರ್ತವ್ಯಲೋಪ ಎಸಗಿ ಅದೇ ಸ್ಥಳದಲ್ಲಿ ಮುಂದುವರಿದರೆ ಸಾಕ್ಷ್ಯನಾಶ ಅಥವಾ ಪ್ರಭಾವ ಬೀರುವ ಹಿನ್ನೆಲೆಯಲ್ಲಿ ಅಮಾನತು ಮಡಲಾಗುತ್ತದೆ.

    ಹೀಗಿರುವಾಗ ಈಗಾಗಲೇ ಅಮಾನತು ಆದೇಶದ ನಂತರ ಅಂಕೋಲಾ ಪುರಸಭೆಗೆ ಪ್ರಭಾರಿ ಮುಖ್ಯಾಧಿಕಾರಿಯನ್ನು ಸಹ ನಿಯೋಜನೆ ಮಾಡಲಾಗಿದ್ದು, ಉತ್ತಮ ಆಡಳಿತಕ್ಕೆ ಕಾರಣವಾಗಿದೆ. ಹೀಗಿದ್ದು ಹಿಂದಿನ ಮುಖ್ಯಾಧಿಕಾರಿ ಹೆಚ್.ಆಕ್ಷತಾ ಅವರನ್ನು ಮರುನಿಯೋಜಿಸಿದರೆ ಅವರ ಮೇಲಿನ ಆರೋಪಗಳು ಕಚೇರಿಯ ದಾಖಲೆಗೆ ಸಂಬಂಧಿಸಿದ್ದು ಆದ್ದರಿಂದ ಸಾಕ್ಷ್ಯನಾಶಕ್ಕೆ ಕಾರಣವಾಗಬಹುದು. ಆದ್ದರಿಂದ ಸರ್ಕಾರ ಮತ್ತು ಸಾರ್ವಜನಿಕರ ಹಣ ದುರೋಪಯೋಗಕ್ಕೆ ಆಡಳಿತವೇ ಅವಕಾಶ ಮಾಡಿಕೊಟ್ಟಂತೆ ಆಗುತ್ತದೆ. ಹಾಗಾಗಿ, ನಮ್ಮ ಪುರಸಭೆಯ ಸಾರ್ವಜನಿಕ ಹಿತಾಸಕ್ತಿಯಿಂದ ಹಿಂದಿನ ಮುಖ್ಯಾಧಿಕಾರಿ ಹೆಚ್.ಅಕ್ಷತಾ ಅವರನ್ನು ಮರುನಿಯೋಜನೆ ಮಾಡಿದಲ್ಲಿ ಪುರಸಭೆಯ 23 ಸದಸ್ಯರ ಪೈಕಿ 19 ಸದಸ್ಯರು ಒಮ್ಮತದ ತೀರ್ಮಾನ ಕೈಗೊಂಡಿದ್ದು, ಸಾಮೂಹಿಕ ರಾಜೀನಾಮೆ ಪತ್ರವನ್ನು ಈಗಾಗಲೇ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಪೌರಾಡಳಿತ ಇಲಾಖೆಯ ಸಚಿವರು, ಆಡಳಿತ ಸುಧಾರಣ ಆಯೋಗದ ಅಧ್ಯಕ್ಷರು ಜಿಲ್ಲಾ ಉಸ್ತುವಾರಿ ಸಚಿವರು, ಅಂಕೋಲಾ-ಕಾರವಾರ ವಿಧಾನಸಭಾ ಕ್ಷೇತ್ರ ಹಾಗೂ ಜಿಲ್ಲಾಧಿಕಾರಿಗಳಿಗೆ ರವಾನೆ ಮಾಡಿದ್ದೇವೆ ಎಂದು ಅವರು ಹೇಳಿದ್ದಾರೆ.

  • ಕರಾವಳಿಯಲ್ಲಿ ಅಬ್ಬರದ ಬಿರುಗಾಳಿ ಸಹಿತ ಮಳೆ – ಮುಳುಗಿದ ರಸ್ತೆ, ಕುಸಿದ ಗುಡ್ಡ

    ಕರಾವಳಿಯಲ್ಲಿ ಅಬ್ಬರದ ಬಿರುಗಾಳಿ ಸಹಿತ ಮಳೆ – ಮುಳುಗಿದ ರಸ್ತೆ, ಕುಸಿದ ಗುಡ್ಡ

    ಕಾರವಾರ: ದೇಶದ ಕರಾವಳಿ (Karavali) ಭಾಗದಲ್ಲಿ ಅಬ್ಬರದ ಮಳೆ ಸುರಿಯುತ್ತಿದೆ. ಗಾಳಿ, ಮಳೆಯ ಆರ್ಭಟಕ್ಕೆ ಕರ್ನಾಟಕ (Karnataka) ಕರಾವಳಿ ಹಾಗೂ ಗೋವಾ (Goa) ಕರಾವಳಿ ಭಾಗದಲ್ಲಿ ಹಲವು ಅನಾಹುತ ತಂದೊಡ್ಡಿದೆ.

    ರಾಜ್ಯದಲ್ಲೇ ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗಿದೆ. ಜಿಲ್ಲೆಯ ಅಂಕೋಲ ತಾಲೂಕಿನ ಹಾರವಾಡದಲ್ಲಿ ಕಳೆದ 24 ಗಂಟೆಯಲ್ಲಿ 80 ಮಿ.ಮೀ, ಬೇಲಿಕೇರಿ 76 ಮಿ.ಮೀ., ಕುಮಟಾ 72.8 ಮಿ.ಮೀ ಮಳೆಯಾಗಿದೆ. ರಾಜ್ಯದಲ್ಲಿ ರಾಯಚೂರು, ದಕ್ಷಿಣ ಕನ್ನಡ, ವಿಜಯಪುರ, ಗದಗದಲ್ಲಿ ಹೆಚ್ಚಿನ ಮಳೆ ವರದಿಯಾಗಿದೆ. ಇದನ್ನೂ ಓದಿ: ಮಧ್ಯಪ್ರದೇಶ | ಆಸ್ಟ್ರೇಲಿಯಾದ ಇಬ್ಬರು ಮಹಿಳಾ ಕ್ರಿಕೆಟಿಗರಿಗೆ ಲೈಂಗಿಕ ಕಿರುಕುಳ – ಆರೋಪಿ ಅರೆಸ್ಟ್‌

    ಉತ್ತರ ಕನ್ನಡ ಜಿಲ್ಲೆಯ ಅಂಕೋಲ, ಕುಮಟಾ, ಕಾರವಾರ ಭಾಗದಲ್ಲಿ ಹೆಚ್ಚು ಮಳೆಯಾಗಿದ್ದು, ಕಾರವಾರದಲ್ಲಿ ಇಂದು ಬೆಳಗ್ಗೆ ಸುರಿದ ಮಳೆಗೆ ನಗರದ ರೈಲ್ವೆ ನಿಲ್ದಾಣಕ್ಕೆ ಹೋಗುವ ಮಾರ್ಗದಲ್ಲಿ ನೀರು ನಿಂತು ಸವಾರರಿಗೆ ಸಮಸ್ಯೆ ತಂದೊಡ್ಡಿತು. ಇದನ್ನೂ ಓದಿ: Kolar | ಶಾಲೆಗೆ ಹೋದ ವಿದ್ಯಾರ್ಥಿನಿಯರು ನಾಪತ್ತೆ

    ಇನ್ನು ಕಾರವಾರದ ನೆರೆಯ ಗೋವಾ ರಾಜ್ಯದಲ್ಲೂ ಅಬ್ಬರದ ಗಾಳಿ-ಮಳೆ ಸುರಿದಿದ್ದು, ಗೋವಾದ ತಲೆಯಗಾವ್‌ನ ಡಾ.ಶಾಮಪ್ರಸಾದ್ ಮುಖರ್ಜಿ ಸ್ಟೇಡಿಯಮ್‌ನ ಮುಖ್ಯ ದ್ವಾರದ ಕಮಾನು ಕುಸಿದು ಬಿದ್ದು ಸಂಪೂರ್ಣ ಹಾನಿಯಾಗಿದೆ. ಇದಲ್ಲದೇ ಪಣಜಿ ನಗರದ ಹೈಕೋರ್ಟ್ ಸಮೀಪ ಇರುವ ಗುಡ್ಡ ಕುಸಿದು ಮನೆಗಳಿಗೆ ಹಾನಿ ಸಂಭವಿಸಿದೆ. ಇದಲ್ಲದೇ ಗಾಳಿಯ ಪ್ರಮಾಣ ಹೆಚ್ಚಾಗಿ ಮಳೆ ಆರ್ಭಟವೂ ಹೆಚ್ಚಾಗಿದ್ದು, ಕೆಲವು ಸಮಯ ಕಾರವಾರ-ಗೋವಾ ಹೆದ್ದಾರಿಯಲ್ಲಿ ನೀರು ನಿಂತು ಪ್ರಯಾಣಿಕರು ಪರದಾಡುವಂತಾಯಿತು. ಇನ್ನು ಕರ್ನಾಟಕ, ಗೋವಾ ಕರಾವಳಿ ಭಾಗದಲ್ಲಿ ಇನ್ನೂ ಎರಡು ದಿನ ಅಬ್ಬರದ ಮಳೆ ಸುರಿಯುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಇದನ್ನೂ ಓದಿ: ಹೈಕಮಾಂಡ್ ಹೇಳಿದ್ರೆ ಸಚಿವ ಸ್ಥಾನ ಬಿಡಲು ರೆಡಿ: ಕೃಷ್ಣ ಬೈರೇಗೌಡ

  • ಐಎನ್‌ಎಸ್‌ ವಿಕ್ರಾಂತ್‌ ಪಾಕ್‌ಗೆ ನಿದ್ರೆಯಿಲ್ಲದಂತೆ ಮಾಡಿತು, ಬ್ರಹ್ಮೋಸ್‌ ತನ್ನ ಸಾಮರ್ಥ್ಯ ತೋರಿತು – ನರೇಂದ್ರ ಮೋದಿ

    ಐಎನ್‌ಎಸ್‌ ವಿಕ್ರಾಂತ್‌ ಪಾಕ್‌ಗೆ ನಿದ್ರೆಯಿಲ್ಲದಂತೆ ಮಾಡಿತು, ಬ್ರಹ್ಮೋಸ್‌ ತನ್ನ ಸಾಮರ್ಥ್ಯ ತೋರಿತು – ನರೇಂದ್ರ ಮೋದಿ

    – ನೌಕಾಪಡೆ ಸೈನಿಕರೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿ

    ಪಣಜಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಂದು ಗೋವಾ ಕರಾವಳಿಯಲ್ಲಿ (Goa Coast) ಭಾರತೀಯ ನೌಕಾಪಡೆಯೊಂದಿಗೆ ದೀಪಾವಳಿ ಆಚರಿಸಿದರು. ಗೋವಾದ ಕಾರವಾರ ಕರಾವಳಿಯಲ್ಲಿರುವ ಐಎನ್ಎಸ್ ವಿಕ್ರಾಂತ್‌ಗೆ ಭೇಟಿ ನೀಡಿದ ಅವರು ನೌಕಾಪಡೆ ಸೇನಾ ಸಿಬ್ಬಂದಿಗೆ ಸಿಹಿ ತಿನ್ನಿಸುವ ಮೂಲಕ ದೀಪಾವಳಿ ಆಚರಿಸಿದ್ರು. ಈ ವೇಳೆ ಆಪರೇಷನ್‌ ಸಿಂಧೂರ ಕಾರ್ಯಾಚರಣೆಯಲ್ಲಿ ಐಎನ್‌ಎಸ್‌ ವಿಕ್ರಾಂತ್‌ ಹಾಗೂ ಬ್ರಹ್ಮೋಸ್‌ (BrahMos), ಆಕಾಶ್‌ ಕ್ಷಿಪಣಿಗಳ ಸಾಮರ್ಥ್ಯವನ್ನು ಕೊಂಡಾಡಿದರು.

    ಇಂದು ಅದ್ಭುತ ದಿನ, ಈ ದೃಶ್ಯ ಅವಿಸ್ಮರಣೀಯ. ಈ ದಿನ ನನ್ನ ಬಳಿ ಒಂದು ಕಡೆ ಸಾಗರವಿದೆ, ಮತ್ತೊಂದೆಡೆ ಭಾರತ ಮಾತೆಯ ವೀರ ಸೈನಿಕರ ಬಲವಿದೆ. ಇನ್ನೊಂದೆಡೆ ಅನಂತ ದಿಗಂತ, ಅನಂತ ಆಕಾಶ ಹಾಗೂ ಅನಂತ ಶಕ್ತಿಯ ಸಂಕೇತವಾದ ಐಎನ್ಎಸ್ ವಿಕ್ರಾಂತ್ (INS Vikrant) ಇದೆ. ಸಾಗರ ನೀರಿನ ಮೇಲೆ ಹೊಳೆಯುವ ಸೂರ್ಯನ ಕಿರಣಗಳು ವೀರ ಸೈನಿಕರು ಬೆಳಗಿದ ದೀಪಾವಳಿ ದೀಪಗಳಂತೆ ಎಂದು ಪ್ರಧಾನಿ ಮೋದಿ ಬಣ್ಣಿಸಿದರು.

    ನೌಕಾಪಡೆಯ ಎಲ್ಲಾ ವೀರ ಸೈನಿಕರೊಂದಿಗೆ ಪವಿತ್ರ ಹಬ್ಬ ದೀಪಾವಳಿ (Deepavali Festival) ಆಚರಿಸುತ್ತಿರುವುದು ನನ್ನ ಅದೃಷ್ಟ. ಐಎನ್ಎಸ್ ವಿಕ್ರಾಂತ್ ಸ್ವಾವಲಂಬಿ ಭಾರತದ ಸಂಕೇತ, ನಾನು ನಮ್ಮ ಸಶಸ್ತ್ರ ಪಡೆಗಳಿಗೆ ವಿಶೇಷವಾಗಿ ವಂದನೆಗಳನ್ನು ಸಲ್ಲಿಸುತ್ತೇನೆ. ಏಕೆಂದ್ರೆ ಈ ಮೂರು ಪಡೆಗಳ ಪ್ರಚಂಡ ಸಮನ್ವಯವು ಪಾಕಿಸ್ತಾನವನ್ನು (Pakistan) ಆಪರೇಷನ್ ಸಿಂಧೂರದಲ್ಲಿ ಶರಣಾಗುವಂತೆ ಮಾಡಿತು. ಬ್ರಹ್ಮೋಸ್‌ ಆಕಾಶ್‌ ನಂತರ ಕ್ಷಿಪಣಿಗಳು ಆಪರೇಷನ್‌ ಸಿಂಧೂರದಲ್ಲಿ ತಮ್ಮ ಸಾಮರ್ಥ್ಯವನ್ನ ಸಾಬೀತುಪಡಿಸಿವೆ. ಹೀಗಿ ಇಂದು ಪ್ರಪಂಚದಾದ್ಯಂತ ಹಲವಾರು ದೇಶಗಳು ಈಗ ಬ್ರಹ್ಮೋಸ್‌ ಕ್ಷಿಪಣಿ ಖರೀದಿಸಲು ಆಸಕ್ತಿ ತೋರಿವೆ ಎಂದು ಮೋದಿ ಹೇಳಿದರು.

    ನಾನು ಮಿಲಿಟರಿ ಉಪಕರಣಗಳ ಶಕ್ತಿಯನ್ನು ನೋಡುತ್ತಿದ್ದೆ, ಈ ಬೃಹತ್ ಹಡಗುಗಳು, ಗಾಳಿಗಿಂತಲೂ ವೇಗವಾಗಿ ಹಾರುವ ವಿಮಾನಗಳು, ಜಲಾಂತರ್ಗಾಮಿ ನೌಕೆಗಳು ಅವು ತಮ್ಮಲ್ಲಿಯೇ ಪ್ರಭಾವಶಾಲಿಯಾಗಿವೆ. ಇದರ ಜೊತೆಗೆ ಅವುಗಳನ್ನು ನಿರ್ವಹಿಸುವವರ ಶೌರ್ಯ ಸಾಹಸ, ಅವುಗಳನ್ನು ಇನ್ನಷ್ಟು ಶಕ್ತಿಶಾಲಿಯಾಗಿ ಮಾಡುತ್ತವೆ. ಉದಾಹರಣೆಗೆ ಈ ಹಡಗುಗಳು ಕಬ್ಬಿಣದಿಂದಲೇ ಮಾಡಿರಬಹುದು ಆದ್ರೆ, ನೀವು ಹತ್ತಿದಾಗ ಅವು ಜೀವಂತ ಹಾಗೂ ಉಸಿರಾಟ ಇರುವ ಶಕ್ತಿಶಾಲಿ ಅಸ್ತ್ರಗಳಾಗಿ ಬದಲಾಗುತ್ತವೆ ಎಂದು ಸೈನಿಕರನ್ನ ಶೌರ್ಯವನ್ನು ಹಾಡಿಹೊಗಳಿದರು.

    2014ರಲ್ಲಿ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಾಗಿನಿಂದ ಪ್ರಧಾನಿ ಮೋದಿ ಅವರು ಸಶಸ್ತ್ರ ಪಡೆಗಳ ಸೈನಿಕರೊಂದಿಗೆ ದೀಪಾವಳಿಯನ್ನು ಆಚರಿಸುತ್ತಿದ್ದಾರೆ. 2014ರಲ್ಲಿ ಲಡಾಖ್‌ನಲ್ಲಿರುವ ಸಿಯಾಚಿನ್ ಹಿಮನದಿಗೆ ಭೇಟಿ ನೀಡಿದ್ದರು. 2015 ರಲ್ಲಿ, ಅವರು 1965ರ ಭಾರತ-ಪಾಕಿಸ್ತಾನ ಯುದ್ಧದ ವೀರರಿಗೆ ಗೌರವ ಸಲ್ಲಿಸಲು ಪಂಜಾಬ್‌ನ ಅಮೃತಸರದಲ್ಲಿರುವ ಡೋಗ್ರೈ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿದರು. 2016 ರಲ್ಲಿ, ದೀಪಾವಳಿಯಂದು ಹಿಮಾಚಲ ಪ್ರದೇಶದ ಭಾರತ-ಚೀನಾ ಗಡಿಯ ಬಳಿ ಗಡಿ ಭದ್ರತಾ ಪಡೆ ಮತ್ತು ಸೇನಾ ಸಿಬ್ಬಂದಿಯನ್ನು ಭೇಟಿ ಮಾಡಿದರು. 2017ರಲ್ಲಿ ಜಮ್ಮು ಮತ್ತು ಕಾಶ್ಮೀರದ ಗುರೆಜ್ ವಲಯದಲ್ಲಿ ಭದ್ರತಾ ಪಡೆಗಳನ್ನು ಭೇಟಿ ಮಾಡಿದರು. 2018 ರಲ್ಲಿ, ಪ್ರಧಾನಿಯವರು ಉತ್ತರಾಖಂಡದ ಹರ್ಷಿಲ್‌ನಲ್ಲಿ ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ ಸಿಬ್ಬಂದಿಯೊಂದಿಗೆ ದೀಪಾವಳಿಯನ್ನು ಕಳೆದರು. 2019 ರಲ್ಲಿ, ಅವರು ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ಸೈನಿಕರನ್ನು ಭೇಟಿ ಮಾಡಿದರು.

    2020ರಲ್ಲಿ, ಪ್ರಧಾನ ಮಂತ್ರಿಗಳು ರಾಜಸ್ಥಾನದ ಜೈಸಲ್ಮೇರ್‌ನ ಲೋಂಗೆವಾಲಾದಲ್ಲಿದ್ದರು. 2021 ರಲ್ಲಿ, ಪ್ರಧಾನ ಮಂತ್ರಿಗಳು ಜಮ್ಮು ಮತ್ತು ಕಾಶ್ಮೀರದ ನೌಶೇರಾದಲ್ಲಿ ಸೈನಿಕರೊಂದಿಗೆ ದೀಪಾವಳಿಯನ್ನು ಆಚರಿಸಿದರು. 2022 ರಲ್ಲಿ, ಪ್ರಧಾನ ಮಂತ್ರಿ ಮೋದಿ ಹುತಾತ್ಮರಿಗೆ ಗೌರವ ಸಲ್ಲಿಸಲು ಕಾರ್ಗಿಲ್‌ಗೆ ಭೇಟಿ ನೀಡಿದರು. 2023 ಮತ್ತು 2024 ರಲ್ಲಿ, ಅವರು ಹಿಮಾಚಲ ಪ್ರದೇಶದ ಲೆಪ್ಚಾ ಮತ್ತು ಗುಜರಾತ್‌ನ ಸರ್ ಕ್ರೀಕ್‌ನಲ್ಲಿ ನಿಯೋಜಿಸಲಾದ ಸೈನಿಕರೊಂದಿಗೆ ದೀಪಾವಳಿಯನ್ನು ಆಚರಿಸಿದ್ದರು.

  • ಹಾರಿ ಬಂದು ಹೊಟ್ಟೆಗೆ ಚುಚ್ಚಿದ ಮೀನು – ಮೀನುಗಾರಿಕೆಗೆ ತೆರಳಿದ್ದ ಯುವಕ ದುರ್ಮರಣ

    ಹಾರಿ ಬಂದು ಹೊಟ್ಟೆಗೆ ಚುಚ್ಚಿದ ಮೀನು – ಮೀನುಗಾರಿಕೆಗೆ ತೆರಳಿದ್ದ ಯುವಕ ದುರ್ಮರಣ

    ಕಾರವಾರ: ಮೀನುಗಾರಿಕೆಗೆ ತೆರಳಿದ್ದ ಯುವಕನ ಹೊಟ್ಟೆಗೆ ಹಾರಿ ಬಂದ ಮೀನೊಂದು ಚುಚ್ಚಿ ಸಾವನ್ನಪ್ಪಿದ ಅಪರೂಪದ ಘಟನೆ ಕಾರವಾರದಲ್ಲಿ ನಡೆದಿದೆ.

    ಕಾರವಾರ ತಾಲೂಕಿನ ಮಾಜಾಳಿ ಗ್ರಾಮದ ದಾಂಡೇಭಾಗ ನಿವಾಸಿ ಅಕ್ಷಯ ಅನಿಲ ಮಾಜಾಳಿಕರ್ (24) ಮೃತ ಯುವಕ. ಅಕ್ಷಯ ಮಂಗಳವಾರ (ಅ.14) ಎಂದಿನಂತೆ ದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ್ದಾಗ ಈ ದುರಂತ ನಡೆದಿದೆ. ಇದನ್ನೂ ಓದಿ: Uttara Kannada | ಬೇಲಿಕೇರಿ ಬಂದರಿನಲ್ಲಿ ಬೋಟ್ ಮುಳುಗಡೆ

    ಮೀನುಗಾರಿಕೆ ನಡೆಸುತ್ತಿದ್ದಾಗ ನೀರಿನಿಂದ ಸುಮಾರು 8 ರಿಂದ 10 ಇಂಚು ಉದ್ದದ ಮೀನೊಂದು ದೋಣಿಯೊಳಗೆ ಹಾರಿ ಬಂದಿದೆ. ಈ ಮೀನು ನೇರವಾಗಿ ಅಕ್ಷಯನ ಹೊಟ್ಟೆಗೆ ಚುಚ್ಚಿದ್ದು, ಆತನಿಗೆ ಗಂಭೀರ ಗಾಯವಾಗಿದೆ. ಕೂಡಲೇ ಆತನನ್ನು ಕಾರವಾರದ ಕ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ವೈದ್ಯರು ಗಾಯದ ಭಾಗಕ್ಕೆ ಹೊಲಿಗೆ ಹಾಕಿ, ಡಿಸ್ಚಾರ್ಜ್ ಮಾಡಿದ್ದರು. ಇದನ್ನೂ ಓದಿ: 

    ನೋವು ಕಡಿಮೆ ಆಗದ ಕಾರಣ ಬುಧವಾರ (ಅ.15) ಅಕ್ಷಯ ಮರಳಿ ಆಸ್ಪತ್ರೆಗೆ ದಾಖಲಾಗಿದ್ದ. ಗುರುವಾರ (ಅ.16) ಆಸ್ಪತ್ರೆಯಲ್ಲೇ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಕಾರವಾರ| ಸ್ನೇಹಿತರೊಂದಿಗೆ ಈಜಲು ಹೋಗಿ ನೀರು ಪಾಲಾಗಿದ್ದ ಯುವಕನ ಶವ ಪತ್ತೆ

  • ಭಟ್ಕಳ| ಮದುವೆ ಮಂಟಪದಲ್ಲಿ ಪಾರ್ಕಿಂಗ್ ವಿಷಯಕ್ಕೆ ನಡುರಸ್ತೆಯಲ್ಲೇ ಮಾರಾಮಾರಿ

    ಭಟ್ಕಳ| ಮದುವೆ ಮಂಟಪದಲ್ಲಿ ಪಾರ್ಕಿಂಗ್ ವಿಷಯಕ್ಕೆ ನಡುರಸ್ತೆಯಲ್ಲೇ ಮಾರಾಮಾರಿ

    ಕಾರವಾರ: ಮದುವೆ ರಿಸಷ್ಷನ್‌ಗಾಗಿ ಬಂದ ಯುವಕರು ಪಾರ್ಕಿಂಗ್ ವಿಷಯದಲ್ಲಿ ಒಬ್ಬರಿಗೊಬ್ಬರು ಬಡಿದಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹೆಬಳೆ ಗ್ರಾಮಪಂಚಾಯ್ತಿ ವ್ಯಾಪ್ತಿಯ ಹನೀಫಾಬಾದ್‌ನ ಕಸ್ನುಮ್ ಮದುವೆ ಹಾಲ್ ಎದುರು ನಡೆದಿದೆ.

    ಘಟನೆಯಲ್ಲಿ ಐದಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಮೊನ್ನೆ ನಡೆದಿದ್ದ ಈ ಘಟನೆ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಂಟು ಜನರ ವಿರುದ್ಧ ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಭಟ್ಕಳದಲ್ಲಿ ನಡೆದ ಘಟನೆ ಏನು?
    ಭಟ್ಕಳ ತಾಲೂಕಿನ ಹೆಬಳೆ ಗ್ರಾಮಪಂಚಾಯ್ತಿ ವ್ಯಾಪ್ತಿಯ ಹನೀಫಾಬಾದ್‌ನ ಕಸ್ನುಮ್ ಮದುವೆ ಹಾಲ್‌ನಲ್ಲಿ ರಿಸಪ್ಷನ್ ಇದ್ದು, ಈ ವೇಳೆ ಎರಡು ಗುಂಪುಗಳು ಅಲ್ಲಿ ಪಾರ್ಕಿಂಗ್ ಮಾಡುವಾಗ ಮಾತಿಗೆ ಮಾತು ನಡೆದಿದೆ.

    ಆರೋಪಿತರು ಗುಂಪಾಗಿ ಸೇರಿ ಪರಸ್ಪರ ಅವಾಚ್ಯ ಶಬ್ದಗಳಿಂದ ಬೈಯ್ದಾಡಿ, ಬಳಿಕ ಕೈ ಕೈ ಮಿಲಾಯಿಸಿ ಹೊಡೆದಾಟ ನಡೆಸಿದರೆಂಬ ಮಾಹಿತಿ ಲಭಿಸಿದೆ. ಘಟನಾ ಸ್ಥಳಕ್ಕೆ ಠಾಣೆಯ ಪೊಲೀಸ್ ನಿರೀಕ್ಷಕ ಮಂಜುನಾಥ ಲಿಂಗಾರೆಡ್ಡಿ ಸಿಬ್ಬಂದಿಯೊಂದಿಗೆ ಧಾವಿಸಿ ಜಗಳ ಶಮನಕ್ಕೆ ಮುಂದಾದರು. ಆರೋಪಿತರು ಅವರ ಮಾತು ಕೇಳದೆ ಹೊಡೆದಾಟ ಮುಂದುವರಿಸಿದ್ದು, ಇದರಿಂದ ಕೆಲವರು ಗಾಯಗೊಂಡಿದ್ದಾರೆ. ಸ್ಥಳದಲ್ಲಿ ಗಲಭೆಯ ವಾತಾವರಣ ನಿರ್ಮಾಣವಾಗಿ ಸಾರ್ವಜನಿಕ ಶಾಂತಿ ಭಂಗವಾಗಿತ್ತು.

    ಇದೀಗ ವಿಡಿಯೋ ವೈರಲ್ ಆದ ಬೆನ್ನಲ್ಲೇ ಈ ಸಂಬಂಧ ಹನೀಫಾಬಾದ್‌ನ ಉಜೇಪ ಸೈದ ಅಬ್ದುಲ್ ಖಾದರ, ಸೈಯ್ಯದ ಉಮೇರ, ಸೈಯ್ಯದ ಅಬ್ದುಲ್ ಖಾದಿರ, ಉಮೇರ ರುಕ್ಕುದ್ದೀನ್ ಉಬೇದುಲ್ಲಾ, ಮುಗೇರ್ ಎಂ.ಜೆ.ಮಂಜೂರ, ಆಹಾದನಗರ ಆನೇ ಕ್ರಾಸ್‌ನ ಇಬಾದುಲ್ಲಾ ಸಾದೀಕಟಾನ, ದೇವಿನಗರ ಜಾಲಿಯ ಅಬ್ದುಲ್ ರಹೀಮ ಮಹಮ್ಮದ್ ಹುಸೇನ್, ಮೂಸಾನಗರದ ಮುಸ್ತಾಕ್ ಮಕ್ಖುಲ್ ಹಾಗೂ ದೇವಿನಗರದ ತಾಹೀರ ಮಹಮ್ಮದ್ ಹುಸೇನ್ ವಿರುದ್ಧ ಭಟ್ಕಳ ಗ್ರಾಮಿಣ ಪೋಲಿಸ್ ಠಾಣೆಯಲ್ಲಿ‌ ಪ್ರಕರಣ ದಾಖಲಿಸಲಾಗಿದೆ.

  • ನಾನು ಸಿಎಂ ಆಗಿದ್ದಿದ್ರೆ ʻಪಂಚ ಗ್ಯಾರಂಟಿʼ ಅನುಷ್ಠಾನ ಮಾಡ್ತಿರಲಿಲ್ಲ, ಗ್ಯಾರಂಟಿ ಹೊರೆಯಾಗಿದೆ: ಆರ್.ವಿ.ದೇಶಪಾಂಡೆ

    ನಾನು ಸಿಎಂ ಆಗಿದ್ದಿದ್ರೆ ʻಪಂಚ ಗ್ಯಾರಂಟಿʼ ಅನುಷ್ಠಾನ ಮಾಡ್ತಿರಲಿಲ್ಲ, ಗ್ಯಾರಂಟಿ ಹೊರೆಯಾಗಿದೆ: ಆರ್.ವಿ.ದೇಶಪಾಂಡೆ

    – ಗ್ಯಾರಂಟಿಗಳಿಂದ ಅಭಿವೃದ್ಧಿಯ ವೇಗ ತಗ್ಗಿದೆ ಎಂದು `ಕೈʼ ಶಾಸಕ ಬೇಸರ

    ಕಾರವಾರ: ನಾನು ಮುಖ್ಯಮಂತ್ರಿ ಆಗಿದ್ದಿದ್ರೆ ಪಂಚ ಗ್ಯಾರಂಟಿ ಯೋಜನೆಗಳನ್ನ (Congress Guarantee Scheme) ಅನುಷ್ಠಾನ ಮಾಡುತ್ತಿರಲಿಲ್ಲ ಎಂದು ಸ್ವಪಕ್ಷದ ಯೋಜನೆ ಬಗ್ಗೆ ಪಕ್ಷದ ಕಾರ್ಯಕ್ರಮದಲ್ಲೇ ಕಾಂಗ್ರೆಸ್ ಹಿರಿಯ ಶಾಸಕ ಆರ್.ವಿ ದೇಶಪಾಂಡೆ (RV Deshpande) ಹೇಳಿದ್ದಾರೆ.

    ಉತ್ತರ ಕನ್ನಡ (Uttara Kannada) ಜಿಲ್ಲೆಯ ದಾಂಡೇಲಿ ತಾಲೂಕಿನ ಅಂಬೇವಾಡಿ ನವಗ್ರಾಮದಲ್ಲಿ ಕಾಂಗ್ರೆಸ್ ಸಮಿತಿಯಿಂದ ಹಮ್ಮಿಕೊಂಡಿದ್ದ ವೋಟ್ ಚೋರಿ ವಿರುದ್ಧ ಸಹಿ ಸಂಗ್ರಹ ಅಭಿಯಾನದಲ್ಲಿ ಅವರು ಪಾಲ್ಗೊಂಡು ಮಾತನಾಡಿದರು. ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಹೊರೆ ಆಗಿದೆ. ಜನರಿಗೆ ಅನುಕೂಲವಾಗಿರುವುದು ಒಂದೆಡೆಯಾದ್ರೆ, ಇನ್ನೊಂದೆಡೆ ಸರ್ಕಾರ ನಡೆಸಲು ಕಷ್ಟವಾಗಿದೆ.

    ಮಹಿಳೆಯರು ಎಲ್ಲ ಸೌಲಭ್ಯಗಳನ್ನ ಪಡೆಯುತ್ತಿದ್ದಾರೆ. ಪುರುಷರಿಗೆ ಯಾವುದೇ ಯೋಜನೆಗಳು ಇಲ್ಲ. ಸರ್ಕಾರದ ಈ ಯೋಜನೆಗಳನ್ನ ಜನರಿಗೆ ತಲುಪಿಸಲು ಅನೇಕ ಸಮಿತಿಗಳನ್ನ ರಚಿಸಲಾಗಿದೆ. ಅವುಗಳನ್ನು ನಿಭಾಯಿಸುವುದೇ ಆಗಿದೆ. ಹೀಗಾಗಿ ರಾಜ್ಯದಲ್ಲಿ ಅಭಿವೃದ್ಧಿಯ ವೇಗ ತಗ್ಗಿದೆ ಎಂದು ಹೇಳಿದ್ದಾರೆ.

    ಇನ್ನೂ 5 ಕೆಜಿ ಅಕ್ಕಿ ಬದಲಿಗೆ ಸರ್ಕಾರದಿಂದ ಇಂದಿರಾ ಕಿಟ್‌ (INDIRA Food Kit) ಕೊಡುವ ನಿರ್ಧಾರ ಕುರಿತು ಮಾತನಾಡ್ತಾ, ಮುಖ್ಯಮಂತ್ರಿಗಳು ಇಂದಿರಾ ಕಿಟ್ ಕೊಡ್ತಾರೋ ತೆಂಗಿನಕಾಯಿ ಕೊಡ್ತಾರೋ ನಮಗೇ ಗೊತ್ತಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

  • ಕಾರವಾರ | ಮೆಡಿಕಲ್‌ ಟೆಸ್ಟ್‌ಗೆ ಕರೆತಂದಿದ್ದ ಆರೋಪಿ ಪರಾರಿ

    ಕಾರವಾರ | ಮೆಡಿಕಲ್‌ ಟೆಸ್ಟ್‌ಗೆ ಕರೆತಂದಿದ್ದ ಆರೋಪಿ ಪರಾರಿ

    ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಕಳ್ಳತನ ಪ್ರಕರಣವೊಂದರ ಆರೋಪಿಯಾಗಿದ್ದ ವ್ಯಕ್ತಿಯು ಕುಮಟಾ ಪೊಲೀಸರು ನ್ಯಾಯಾಲಯಕ್ಕೆ ಹಾಜುರುಪಡಿಸಲು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವೇಳೆ ಪೊಲೀಸರನ್ನು ದೂಡಿ ಪರಾರಿಯಾಗಿದ್ದಾನೆ.

    ಅಂಗಡಿಯೊಂದರ ಎಕ್ಸಿಟ್ ಬ್ಯಾಟರಿ ಕಳ್ಳತನ ಹಾಗೂ ಕಾರುಗಳ ಕಳ್ಳತನದಲ್ಲಿ ಆರೋಪಿಯಾಗಿರುವ ಭಟ್ಕಳದ ಫಾಸಾನ್ ಪರಾರಿಯಾದವನಾಗಿದ್ದು, ಹಲವು ಕಳ್ಳತನ ಪ್ರಕರಣದಲ್ಲಿ ಈತನನ್ನು ಬಂಧಿಸಿ ಕುಮಟಾ ಪೊಲೀಸರು ಭಟ್ಕಳದಿಂದ ಕುಮಟಾಕ್ಕೆ ವಿಚಾರಣೆಗೆ ಕರೆತಂದಿದ್ದರು.

    ನ್ಯಾಯಾಲಯಕ್ಕೆ ಹಾಜುರುಪಡಿಸಿ ದೋಷಾರೋಪಣೆ ಪಟ್ಟಿ ಸಲ್ಲಿಸುವ ಸಲವಾಗಿ ಈತನ ವೈದ್ಯಕೀಯ ಪರೀಕ್ಷೆಗಾಗಿ ಕುಮಟಾ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಈವೇಳೆ ಇದನ್ನ ಅವಕಾಶ ಮಾಡಿಕೊಂಡ ಫಾಸಾನ್ ಪೂಲೀಸರನ್ನು ದೂಡಿ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಈತನ ಹುಡುಕಾಟ ನಡೆಸುತಿದ್ದಾರೆ.

    ಇನ್ನು ಈತ ಮಧ್ಯಮ ಗಾತ್ರದ ಗಡ್ಡದಾರಿ ವ್ಯಕ್ತಿಯಾಗಿದ್ದು 5.4 ಅಡಿ ಎತ್ತರವಿದ್ದು ತಪ್ಪಿಸಿಕೊಳ್ಳುವಾಗ ಕಪ್ಪು ಅಂಗಿ ಹಾಕಿಕೊಂಡಿದ್ದನು.ಸದ್ಯ ಈತನ ಹುಡುಕಾಟ ನಡೆಯುತಿದ್ದಾರೆ.

  • ಕಾರವಾರ| ಸ್ನೇಹಿತರೊಂದಿಗೆ ಈಜಲು ಹೋಗಿ ನೀರು ಪಾಲಾಗಿದ್ದ ಯುವಕನ ಶವ ಪತ್ತೆ

    ಕಾರವಾರ| ಸ್ನೇಹಿತರೊಂದಿಗೆ ಈಜಲು ಹೋಗಿ ನೀರು ಪಾಲಾಗಿದ್ದ ಯುವಕನ ಶವ ಪತ್ತೆ

    ಕಾರವಾರ: ಸ್ನೇಹಿತರೊಂದಿಗೆ ಈಜಲು ಹೋಗಿ ನೀರು ಪಾಲಾಗಿದ್ದ ಯುವಕ ಶವವಾಗಿ ಪತ್ತೆಯಾದ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಅಂಕೋಲ ತಾಲೂಕಿನ ಕೈಗಡಿ ಬ್ರಿಡ್ಜ್ ಬಳಿ ನಡೆದಿದೆ.

    ಬುಧವಾರ ಕೈಗಡಿ ಬ್ರಿಡ್ಜ್‌ ಸಮೀಪ ಪ್ರವಾಸಕ್ಕೆ ಬಂದಿದ್ದ ಆರು ಯುವಕರ ತಂಡ ನೀರಿನಲ್ಲಿ ಇಳಿದಾಗ ಅಂಕೋಲ ತಾಲೂಕಿನ ಸಬಗೇರಿಯ ಸಾಗರ್ ದೇವಾಡಿಗ ನೀರಿನಲ್ಲಿ ಮುಳಗಿ ತೇಲಿಹೋಗಿದ್ದ. ಈತನ ಶೋಧ ಕಾರ್ಯಕ್ಕೆ ಪೊಲೀಸರು, ಅರಣ್ಯ ಇಲಾಖೆ, ಅಗ್ನಿಶಾಮಕ ದಳ ಅವಿರತ ಪ್ರಯತ್ನ ನಡೆಸಿದ್ದರು.

    ಇಂದು ಕಾಣೆಯಾದ ಅಣತಿ ದೂರದಲ್ಲಿಯೇ ಯುವಕನ ಶವವನ್ನು ಕಾರ್ಯಾಚರಣೆಯಲ್ಲಿ ಭಾಗಿಯಾದ ಕೈಗಡಿ ನಿವಾಸಿಗಳಾದ ಗಣಪ ಸಿದ್ದಿ, ರಾಮ ಸಿದ್ದಿ, ವೆಂಕಸಿದ್ದಿ ಹಾಗೂ ನಾರಾಯಣ ಸಿದ್ದಿ ಎಂಬವರು ಪತ್ತೆ ಮಾಡಿ ಹೊರತಂದಿದ್ದಾರೆ. ಘಟನೆ ಸಂಬಂಧ ಅಂಕೋಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಗೆಳೆಯನ ಬರ್ತ್‌ಡೇ ಸಂಭ್ರಮದಲ್ಲಿದ್ದ ಯುವಕ ಹೊಳೆಗೆ ಕಾಲುಜಾರಿ ಬಿದ್ದು ನೀರುಪಾಲು

    ಗೆಳೆಯನ ಬರ್ತ್‌ಡೇ ಸಂಭ್ರಮದಲ್ಲಿದ್ದ ಯುವಕ ಹೊಳೆಗೆ ಕಾಲುಜಾರಿ ಬಿದ್ದು ನೀರುಪಾಲು

    ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಸಮೀಪದ ಕೆಳಾಸೆಯಲ್ಲಿ ಗೆಳೆಯನ ಹುಟ್ಟುಹಬ್ಬದ ಸಂಭ್ರಮಾಚರಣೆಗೆ ತೆರಳಿದ್ದ ಯುವಕನೋರ್ವ ನೀರುಪಾಲಾಗಿದ್ದಾನೆ.

    ಯಲ್ಲಾಪುರದ ಸಬಗೇರಿ ನಿವಾಸಿ ಸಾಗರ್ ದೇವಾಡಿಗ ನೀರುಪಾಲಾದ ಯುವಕ. ನಿನ್ನೆ ಮಧ್ಯಾಹ್ನದ ವೇಳೆಗೆ, ಸಾಗರ್ ತನ್ನ ಮೂರ್ನಾಲ್ಕು ಸ್ನೇಹಿತರೊಂದಿಗೆ ಹುಟ್ಟುಹಬ್ಬದ ಸೆಲಬ್ರೇಷನ್‌ಗಾಗಿ ಬೇಡ್ತಿ ಹಳ್ಳದ ಸಮೀಪವಿರುವ ಕೆಳಾಸೆ ಹೊಳೆಗೆ ಹೋಗಿದ್ದ. ಈ ಸಂದರ್ಭದಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು, ತೇಲಿ ಹೋಗಿರುವುದಾಗಿ ತಿಳಿದು ಬಂದಿದೆ.

    ಮಾಹಿತಿ ಪಡೆದ ಯಲ್ಲಾಪುರ ಪೊಲೀಸರು ಸ್ಥಳಕ್ಕಾಗಮಿಸಿ ನಾಪತ್ತೆಯಾದ ಯುವಕನ ಶೋಧ ಕಾರ್ಯ ನಡೆಸಿದ್ದಾರೆ. ಘಟನೆ ಸಂಬಂಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.