ಕಾರವಾರ: ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಯ ಬಳಿಕ ರಾಜ್ಯದ ಕರಾವಳಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ರಾಜ್ಯದ ಕರಾವಳಿ ಭಾಗಗಳಲ್ಲಿ ಹದ್ದಿನ ಕಣ್ಣಿರಿಸಿರುವ ಇಂಡಿಯನ್ ನೇವಿ, ಇಂಡಿಯನ್ ಕೋಸ್ಟ್ ಗಾರ್ಡ್ ಹಾಗೂ ಕೋಸ್ಟಲ್ ಪೊಲೀಸರು ಕೂಮಿಂಗ್ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ.
ʻOP TRIGGERʼ ಹೆಸರಿನಲ್ಲಿ ಆಪರೇಷನ್ ನಡೆಸ್ತಿರುವ ಇಂಡಿಯನ್ ನೇವಿ, ಇಂಡಿಯನ್ ಕೋಸ್ಟ್ ಗಾರ್ಡ್ ಹಾಗೂ ಕೋಸ್ಟಲ್ ಪೊಲೀಸರು ಅರಬ್ಬಿ ಸಮುದ್ರ ಭಾಗದಲ್ಲಿ ತಪಾಸಣೆ ನಡೆಸುತಿದ್ದಾರೆ.
ಅತಿ ಸೂಕ್ಷ್ಮ ಪ್ರದೇಶವಾಗಿರುವ ಕಾರವಾರದ ನೌಕಾನೆಲೆ ಹಾಗೂ ಕೈಗಾ ಅಣುವಿದ್ಯುತ್ ಸ್ಥಾವರದ ಸುತ್ತಮುತ್ತಲೂ ಭಿಗಿ ಭದ್ರತೆ ನೀಡಲಾಗಿದೆ. ಜೊತೆಗೆ ತೀರ ಪ್ರದೇಶಗಳಲ್ಲಿ ಡ್ರೋನ್‌ಗಳನ್ನು ಕೂಡ ಬಳಸಿ ಪರಿಶೀಲನೆ ನಡೆಸಲಾಗುತ್ತಿದೆ. ಇನ್ನು ಕರಾವಳಿ ಕಾವಲು ಪಡೆ ಸಿಬ್ಬಂದಿ ಪ್ರತಿದಿನ ಕೂಮಿಂಗ್ ಕಾರ್ಯಾಚರಣೆಯನ್ನು ಹೆಚ್ಚಿಸಿದ್ದು ಮೀನುಗಾರರಿಗೆ ಯಾರೇ ಅನುಮಾನಸ್ಪದ ಬೋಟುಗಳು ಅರಬ್ಬಿ ಸಮುದ್ರದಲ್ಲಿ ಕಂಡಲ್ಲಿ ತಕ್ಷಣ ಮಾಹಿತಿ ನೀಡಲು ತಿಳಿಸಾಗಿದೆ. ಇದನ್ನೂ ಓದಿ: ಪಾಕ್ ಯುವತಿಯನ್ನು ಮದ್ವೆಯಾಗಿ ಕೆಲಸ ಕಳೆದುಕೊಂಡ ಸಿಆರ್‌ಪಿಎಫ್ ಯೋಧ!
ಕಾರವಾರ: ಐಎನ್ಎಸ್ ಕದಂಬ ನೌಕಾ ನೆಲೆಯ (Karwar Naval Base) ಮಾಹಿತಿಗಳನ್ನು ಪಾಕಿಸ್ತಾನದ (Pakistan) ಏಜೆಂಟ್ ಜೊತೆ ಹಂಚಿಕೊಂಡ ಆರೋಪದ ಮೇಲೆ ಹೈದರಾಬಾದ್‌ನ ರಾಷ್ಟ್ರೀಯ ತನಿಖಾ ದಳ (NIA) ತಂಡ ಇಬ್ಬರು ಆರೋಪಿಗಳನ್ನು ಕಾರವಾರದಲ್ಲಿ ಬಂಧಿಸಿದೆ.
ಬಂಧಿತ ಆರೋಪಿಗಳನ್ನು ಕಾರವಾರ ತಾಲೂಕಿನ ಮುದುಗಾದ ವೇತನ್ ತಾಂಡೇಲ್, ಹಳವಳ್ಳಿಯ ಅಕ್ಷಯ್ ನಾಯ್ಕ್ ಎಂದು ಗುರುತಿಸಲಾಗಿದೆ. ಆರೋಪಿಗಳು 2023ರಲ್ಲಿ ಫೇಸ್‌ಬುಕ್‌ನಲ್ಲಿ ಪರಿಚಯವಾಗಿದ್ದ ಪಾಕ್‌ನ ಏಜೆಂಟ್ ಮಹಿಳೆ ಜೊತೆ ಮಾಹಿತಿ ಹಂಚಿಕೊಂಡಿದ್ದರು. ಆಕೆ ತಾನು ನೌಕಾದಳದ ಅಧಿಕಾರಿ ಎಂದು ಪರಿಚಯ ಮಾಡಿಕೊಂಡು ನೌಕಾದಳದ ನೌಕೆಗಳು, ಅದರ ಚಲನವಲನ, ನೌಕೆಗಳ ಚಿತ್ರಗಳು, ಕದಂಬ ನೌಕಾದಳದ ಸ್ಥಳಗಳ ಮಾಹಿತಿ ಪಡೆದಿದ್ದಳು ಎಂದು ತಿಳಿದು ಬಂದಿದೆ.
ಇದಕ್ಕಾಗಿ ಪ್ರತಿ ತಿಂಗಳು 5,000 ರೂ. ನಂತೆ ಎಂಟು ತಿಂಗಳ ಕಾಲ ಮೂವರ ಖಾತೆಗೆ ದೀಪಕ್ ಎನ್ನುವ ಹೆಸರಿನ ಖಾತೆಯಿಂದ ಹಣ ಕಳುಹಿಸಲಾಗುತ್ತಿತ್ತು. 2023 ರಲ್ಲಿ ಎನ್ಐಎ ತಂಡ ದೀಪಕ್ ಹಾಗೂ ಆತನ ತಂಡವನ್ನು ಬಂಧಿಸಿದಾಗ ಕಾರವಾರದ ಮೂವರು ಮಾಹಿತಿ ನೀಡುತ್ತಿದ್ದ ಹಾಗೂ ನೌಕಾದಳದ ಅಧಿಕಾರಿಗಳು ಹನಿಟ್ರ್ಯಾಪ್‌ಗೆ ಒಳಗಾದ ಕುರಿತು ಮಾಹಿತಿ ದೊರೆತಿತ್ತು.
ತಕ್ಷಣ 2023ರ ಆಗಷ್ಟ್ 28 ರಂದು ಕಾರವಾರದಲ್ಲಿ ಮುದುಗಾದ ವೇತನ್ ತಾಂಡೇಲ್, ತೋಡೂರಿನ ಸುನೀಲ್ ಹಾಗೂ ಹಳವಳ್ಳಿಯ ಅಕ್ಷಯ್ ನಾಯ್ಕ್ ಈ ಮೂವರನ್ನು ವಶಕ್ಕೆ ಪಡೆದು, ಇವರ ಬಳಿ ಇದ್ದ ಎಲೆಕ್ಟ್ರಾನಿಕ್ ಉಪಕರಣ, ಮೊಬೈಲ್ ವಶಕ್ಕೆ ಪಡೆದು ತನಿಖೆಗೆ ಹಾಜರಾಗುವಂತೆ ಎನ್‌ಐಎ ನೋಟಿಸ್ ಜಾರಿ ಮಾಡಿತ್ತು.
ಇದರ ನಂತರ ಇದೇ ಪ್ರಕರಣದಲ್ಲಿ ತನಿಖೆ ಮುಂದುವರೆಸಿದ್ದ ಹೈದರಾಬಾದ್ ಹಾಗೂ ಬೆಂಗಳೂರು ಎನ್ಐಎ ತಂಡ ಇದೀಗ ಇಬ್ಬರನ್ನು ಬಂಧಿಸಿದೆ. ಆರೋಪಿಗಳನ್ನು ಕಾರವಾರದ ಕ್ರಿಮ್ಸ್ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ ನ್ಯಾಯಾಲಯಕ್ಕೆ ಹಾಜುರು ಪಡಿಸಿ ಹೆಚ್ಚಿನ ತನಿಖೆಗಾಗಿ ಹೈದರಾಬಾದ್ ಅಥವಾ ದೆಹಲಿಗೆ ಕರೆದೊಯ್ಯುವ ಸಾಧ್ಯತೆಗಳಿವೆ.
ಮೂರು ಜನರ ಮೇಲೆ ಇರುವ ಆರೋಪ ಏನು?: ಕಾರವಾರದ ಚೆಂಡಿಯಾದಲ್ಲಿ ಇರುವ ಮರ್ಕ್ಯುರಿ ಹಾಗೂ ಅಲ್ಟ್ರಾ ಮರೈನ್ ಕಂಪನಿಯಲ್ಲಿ ವೇತನ್ ಹಾಗೂ ಅಕ್ಷಯ್ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಈ ಕಂಪನಿ ಕದಂಬ ನೌಕಾನೆಲೆಯಲ್ಲಿ ಯುದ್ದ ನೌಕೆಗಳ ರಿಪೇರಿ ಕಾರ್ಯವನ್ನು ನಡೆಸುತ್ತದೆ. ತೋಡೂರಿನ ಸುನಿಲ್, ಕದಂಬ ನೌಕಾನೆಲೆಯ ನೇವಿ ಕ್ಯಾಂಟೀನ್‌ನಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತಿದ್ದು, ನಂತರ ಚಾಲಕ ವೃತ್ತಿ ಮಾಡುತಿದ್ದ.
2023 ರಲ್ಲಿ ಪಾಕಿಸ್ತಾನದ ಮಹಿಳಾ ಏಜೆಂಟ್ ಫೇಸ್‌ಬುಕ್‌ನಲ್ಲಿ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿದ ನಂತರ, ಮುದುಗಾದ ವೇತನ್ ತಾಂಡೇಲ್, ತೋಡೂರಿನ ಸುನೀಲ್ ಹಾಗೂ ಹಳವಳ್ಳಿಯ ಅಕ್ಷಯ್ ನಾಯ್ಕ್ ಈ ಮಹಿಳೆಗೆ ಹತ್ತಿರವಾಗಿದ್ದರು.
ಈ ಮಹಿಳೆ ದೀಪಕ್ ಎಂಬುವವನನ್ನು ಮಧ್ಯವರ್ತಿಯಾಗಿ ಬಳಸಿಕೊಂಡು ಇವರಿಗೆ ಮಾಹಿತಿ ನೀಡುವುದಕ್ಕಾಗಿ ತಲಾ 5 ಸಾವಿರ ರೂ. ಹಣ ಸಂದಾಯ ಮಾಡುತಿದ್ದಳು. ದೀಪಕ್ ಬಂಧನವಾಗುತಿದ್ದಂತೆ ಸುನಿಲ್ ಮೂರು ವರ್ಷಗಳ ಹಿಂದೆ ನೌಕಾ ನೆಲೆಯಲ್ಲಿ ತನ್ನ ಕೆಲಸವನ್ನು ಬಿಟ್ಟು ಗೋವಾದ ರೆಸ್ಟೋರೆಂಟ್‌ಗೆ ಸೇರಿಕೊಂಡಿದ್ದ. ಇನ್ನೂ ವೇತನ್ ತಾಂಡೇಲ್ ಕೆಲಸ ಬಿಟ್ಟರೂ ನೌಕಾ ನೆಲೆಯಲ್ಲಿ ಕೆಲಸ ಮಾಡುವ ತನ್ನ ಸ್ನೇಹಿತರು ಮತ್ತು ಸಂಬಂಧಿಕರಿಂದ ನೌಕಾನೆಲೆಯ ಮಾಹಿತಿ ಪಡೆದು ಪಾಕಿಸ್ತಾನದ ಏಜೆಂಟ್‌ಗೆ ಕಳುಹಿಸುತಿದ್ದ.
ಮೊಬೈಲ್, ಎಲಕ್ಟಾನಿಕ್ ಗ್ಯಾಜೆಟ್‌ನಲ್ಲಿತ್ತು ಮಾಹಿತಿ: ವಶಪಡಿಸಿಕೊಂಡ ಮೊಬೈಲ್, ಎಲೆಕ್ಟ್ರಾನಿಕ್ ಉಪಕರಣಗಳ ಶೋಧ ನಡೆಸಿದ ಎನ್ಐಎ ತಂಡಕ್ಕೆ ನೌಕಾದಳದ ಅಧಿಕಾರಿಗಳು, ನೌಕಾನೆಲೆಯ ನೌಕೆಯಲ್ಲಿ ತಾಂತ್ರಿಕ ತಜ್ಞರಾಗಿ ಕಾರ್ಯನಿರ್ವಹಿಸುವ ಗುತ್ತಿಗೆ ನೌಕರರ ಸಂಪರ್ಕ ಹೊಂದಿದ್ದ ಮಾಹಿತಿ ಹೊರಬಿದ್ದಿದೆ. ಇದಲ್ಲದೇ ನೌಕಾದಳದ ಅಧಿಕಾರಿಗಳು ಹನಿಟ್ರ್ಯಾಪ್ ಆಗಿರುವ ಸಾಧ್ಯತೆಗಳಿದ್ದು ಈ ಬಗ್ಗೆ ಸಹ ತನಿಖೆ ಕೈಗೊಳ್ಳಲಾಗಿದೆ.
ಕಾರವಾರ: ಉತ್ತರಕನ್ನಡ ಜಿಲ್ಲೆಯ ಕಾರವಾರದ ಕದಂಬ ನೌಕಾನೆಲೆಗೆ ಇಂದು ಕೇಂದ್ರ ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್ ಭೇಟಿ ನೀಡಿದರು. ನೌಕಾಪಡೆಯ ಮುಖ್ಯಸ್ಥ, ಅಡ್ಮಿರಲ್ ಕರಂಬೀರ್ ಸಿಂಗ್‍ರೊಂದಿಗೆ ಗೋವಾದಿಂದ ಹೆಲಿಕಾಪ್ಟರ್ ಮೂಲಕ ಐಎನ್‍ಎಸ್ ಕದಂಬ ನೌಕಾನೆಲೆಯ ಹೆಲಿಪ್ಯಾಡ್‍ಗೆ ಆಗಮಿಸುವ ವೇಳೆ ಕದಂಬ ನೌಕಾನೆಲೆಯ ಎರಡನೇಯ ಹಂತದ ವಿಸ್ತರಣಾ ಕಾಮಗಾರಿಗಳ ವೈಮಾನಿಕ ಸಮೀಕ್ಷೆಯನ್ನು ನಡೆಸಿದರು.
ನೌಕಾನೆಲೆಗೆ ಆಗಮಿಸಿದ ರಕ್ಷಣಾ ಸಚಿವರನ್ನ ವೆಸ್ಟರ್ನ್ ನೇವಲ್ ಕಮಾಂಡ್, ಫ್ಲ್ಯಾಗ್ ಆಫೀಸರ್ ಕಮಾಂಡಿಂಗ್ ಇನ್ ಚೀಫ್, ವೈಸ್ ಅಡ್ಮಿರಲ್ ಆರ್.ಹರಿ ಕುಮಾರ್ ಮತ್ತು ಕರ್ನಾಟಕ ನೌಕಾ ಪ್ರದೇಶದ ಧ್ವಜ ಅಧಿಕಾರಿ, ರಿಯರ್ ಅಡ್ಮಿರಲ್ ಮಹೇಶ್ ಸಿಂಗ್ ಸ್ವಾಗತಿಸಿದರು. ಬಳಿಕ ನೌಕಾಪ್ರದೇಶದ ಸರ್ವೇಕ್ಷಣೆ ನಡೆಸಿದ ಸಚಿವ ರಾಜನಾಥ ಸಿಂಗ್ ರಿಗೆ ಅಧಿಕಾರಿಗಳು ಎರಡನೇಯ ಹಂತದ ಕಾಮಗಾರಿ ಕುರಿತು ಮಾಹಿತಿ ನೀಡಿದರು. ಇದೇ ವೇಳೆ ಹಡಗುಗಳ ರಿಪೇರಿ ಕಾರ್ಯ ಕೈಗೊಳ್ಳುವ ಲಿಫ್ಟಿಂಗ್ ಯಂತ್ರಗಳ ಸಾಮರ್ಥ್ಯವನ್ನು ಪ್ರದರ್ಶಿಸಲಾಯಿತು. ಇದನ್ನೂ ಓದಿ: ಕೋವಿಡ್ ವಾರ್ಡ್‍ನಲ್ಲಿ ಆಮ್ಲಜನಕ ಸೋರಿಕೆ ತಡೆಗೆ ನೌಕಾದಳದ ತಾಂತ್ರಿಕ ತಂಡ ನಿಯೋಜನೆ
ಜೊತೆಗೆ ನೌಕಾ ಜಟ್ಟಿಯಲ್ಲಿನ ಅಭಿವೃದ್ಧಿ ಕಾರ್ಯಗಳನ್ನ ಪರಿಶೀಲಿಸಿದರು. ಬಳಿಕ ನೌಕಾನೆಲೆ ಸಿಬ್ಬಂದಿಗಾಗಿ ನೂತನವಾಗಿ ನಿರ್ಮಿಸಲಾದ ವಸತಿಗೃಹಕ್ಕೆ ಸಚಿವ ರಾಜನಾಥ್ ಸಿಂಗ್ ಭೇಟಿ ನೀಡಿದ್ದು ಅಲ್ಲಿನ ಮೂಲಭೂತ ಸೌಕರ್ಯಗಳು, ಇಂಧನ ದಕ್ಷತೆ, ತ್ಯಾಜ್ಯ ನಿರ್ವಹಣೆ ಹಾಗೂ ಪರಿಸರ ಸ್ನೇಹಿ ವ್ಯವಸ್ಥೆಗಳನ್ನು ವೀಕ್ಷಿಸಿದರು. ಈ ವೇಳೆ ನೌಕಾನೆಲೆಯ ಎರಡನೇಯ ಹಂತದ ಕಾಮಗಾರಿಯ ಕಾಂಟ್ರ್ಯಾಕ್ಟರ್, ಎಂಜಿನಿಯರ್, ಅಧಿಕಾರಿಗಳು ಹಾಗೂ ನೌಕಾನೆಲೆ ಸಿಬ್ಬಂದಿಯೊಂದಿಗೂ ರಾಜನಾಥ್ ಸಿಂಗ್ ಮಾತುಕತೆ ನಡೆಸಿದರು. ಇದನ್ನೂ ಓದಿ: ಕದಂಬ ನೌಕಾನೆಲೆಗೆ ಸಂಸದೀಯ ಸಮಿತಿ ಸದಸ್ಯರ ಭೇಟಿ
Visited Karwar Naval Base today to review the progress of ongoing infrastructure development under ‘Project Seabird’. I am confident that after the completion of this project, the Karwar Naval Base would become Asia's largest and most efficient Naval base. pic.twitter.com/8z6QcST4QM