Tag: karwar uttara kannada

  • ಶ್ರೀಗಂಧ ಕಳ್ಳತನ – 41 ಕೆಜಿ ಶ್ರೀಗಂಧ ತುಂಡು ಸಮೇತ ಮೂವರ ಬಂಧನ

    ಶ್ರೀಗಂಧ ಕಳ್ಳತನ – 41 ಕೆಜಿ ಶ್ರೀಗಂಧ ತುಂಡು ಸಮೇತ ಮೂವರ ಬಂಧನ

    ಕಾರವಾರ: ಉತ್ತರ ಕನ್ನಡ (Uttar Kannada) ಜಿಲ್ಲೆಯ ಶಿರಸಿಯ (Sirsi) ಶಿಂಗನಳ್ಳಿ ಗ್ರಾಮದಲ್ಲಿನ ಅರಣ್ಯಕ್ಕೆ ಅಕ್ರಮವಾಗಿ ಪ್ರವೇಶಿಸಿ ಶ್ರೀಗಂಧ ಮರವನ್ನು ಕಡಿದು ಕಳ್ಳತನ ಮಾಡುತ್ತಿದ್ದ ಮೂವರು ಮರಗಳ್ಳರನ್ನ ಅರಣ್ಯ ಇಲಾಖೆ ಅಧಿಕಾರಿಗಳು ಮಾಲು ಸಮೇತ ವಶಕ್ಕೆ ಪಡೆದಿದ್ದಾರೆ.

    ಶಿಂಗನಳ್ಳಿಯ ಸುಬ್ರಾಯ ನಾರಾಯಣ ನಾಯ್ಕ(66), ರಾಮ ಅಣ್ಣಪ್ಪ ನಾಯ್ಕ(60), ಬಿಗಿರಿಕೊಪ್ಪದ ಅಬ್ದುಲ್ ರಹೀಮ್ ಅಬ್ದುಲ್ ಗಫರ್ ಸಾಬ್(63) ಬಂಧಿತ ಆರೋಪಿಗಳು. ಇದನ್ನೂ ಓದಿ: ಬೆಂಗಳೂರಿನಲ್ಲೇ ಪ್ರಭಾವಿ ಸಚಿವರ ಹನಿ ಟ್ರ್ಯಾಪ್‌ಗೆ ಮತ್ತೊಬ್ಬ ನಾಯಕನಿಂದ ಯತ್ನ!

    ಬಂಧಿತರಿAದ ಒಟ್ಟು 41.890ಕೆ.ಜಿಯ 11 ಶ್ರೀಗಂಧದ ಹಸಿತುಂಡುಗಳನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೇ ಕೃತ್ಯಕ್ಕೆ ಬಳಸಿದ ಕತ್ತಿ, ಕೈಗರಗಸ, ನೀರಿನ ಬಾಟಲಿ, ಮೊಬೈಲ್ ಫೋನ್‌ಗಳನ್ನು ಅರಣ್ಯಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ಮುಸ್ಲಿಂ ಗುತ್ತಿಗೆದಾರರಿಗೆ ಶೇ.4 ಮೀಸಲಾತಿಗೆ ಒಪ್ಪಿಗೆ ನೀಡದಂತೆ ರಾಜ್ಯಪಾಲರಿಗೆ ಯತ್ನಾಳ್ ಪತ್ರ

    ಉಪ ಅರಣ್ಯ ಸಂರಕ್ಷಣಾಧಿಕಾರಿ ಅಜ್ಜಯ್ಯ.ಜಿ.ಆರ್.ಜಾನ್ಮನೆ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹರೀಶ್.ಸಿ.ಎನ್. ಅವರ ಮಾರ್ಗದರ್ಶನದಲ್ಲಿ ವಲಯ ಅರಣ್ಯಾಧಿಕಾರಿ ಶಿವಾನಂದ ನಿಂಗಾಣಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ. ಇದನ್ನೂ ಓದಿ: ಪೊಲೀಸ್ ಠಾಣೆಯಲ್ಲೇ ಜೂಜಾಟ ಪ್ರಕರಣ – ಐವರು ಪೊಲೀಸರು ಅಮಾನತು

    ಕರ್ನಾಟಕ ಅರಣ್ಯ ಕಾಯ್ದೆ 1963ರ 00 24(3), 84, 85, 87 ಆರ್/ಡಬ್ಲ್ಯೂ 86 ಮತ್ತು 1969 ಡಿ ನಿಯಮ 144, 145ರಂತೆ ಪ್ರಕರಣ ದಾಖಲಿಸಿ ಆರೋಪಿಗಳನ್ನು ಬಂಧಿಸಿದ್ದಾರೆ.

  • ಭಟ್ಕಳದಲ್ಲಿ ಹೆಲ್ತ್ ಎಮರ್ಜೆನ್ಸಿ- ಜಿಲ್ಲೆಯ ಮತ್ತೋರ್ವನಿಗೆ ಕೊರೊನಾ ಪಾಸಿಟಿವ್

    ಭಟ್ಕಳದಲ್ಲಿ ಹೆಲ್ತ್ ಎಮರ್ಜೆನ್ಸಿ- ಜಿಲ್ಲೆಯ ಮತ್ತೋರ್ವನಿಗೆ ಕೊರೊನಾ ಪಾಸಿಟಿವ್

    ಕಾರವಾರ: ಕೊರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮವಾಗಿ ಭಟ್ಕಳದಲ್ಲಿ ಹೆಲ್ತ್ ಎಮರ್ಜೆನ್ಸಿ ಘೋಷಣೆ ಮಾಡಲಾಗಿದೆ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಡಾ ಕೆ. ಹರೀಶ್ ಕುಮಾರ್ ಹೇಳಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಲ್ಲೆಯಾದ್ಯಂತ ಕೊರೊನಾ ವೈರಸ್ ತಡೆಯಲು ಈಗಾಗಲೇ ಸಾಕಷ್ಟು ಮುಂಜಾಗೃತಾ ಕ್ರಮ ಕೈಗೊಳ್ಳಲಾಗಿದೆ.

    ವಿದೇಶದಿಂದ ಹೆಚ್ಚಾಗಿ ಆಗಮಿಸಿದ ಭಟ್ಕಳದಲ್ಲಿಯೂ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು ಈಗಾಗಲೇ ಮೂರು ಪ್ರಕರಣಗಳಲ್ಲಿ ದೃಢಪಟ್ಟಿದೆ. ಆದರೆ ಈ ಸೋಂಕಿತರ ಸಂಪರ್ಕಕ್ಕೆ ಬಂದಂತಹ ಸುಮಾರು 40 ಜನರ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದೆ.

    ಭಟ್ಕಳದಲ್ಲಿ ವಿದೇಶದಿಂದ ಬಂದಂತವರ ಸಂಖ್ಯೆ ಹೆಚ್ಚಾಗಿ ಇರುವ ಕಾರಣ ಭಟ್ಕಳ ಪಟ್ಟಣ ಜಾಲಿ ಹೆಬಳೆ, ಮಾವಿನಕುರ್ವ ಮುಂಡಳ್ಳಿ ಯಲವಡಿಕವೂರು ಹಾಗೂ ಮುಠಳ್ಳಿ ಪಂಚಾಯ್ತಿ ವ್ಯಾಪ್ತಿಯಲ್ಲಿ ತುರ್ತಾಗಿ ಹೆಲ್ತ್ ಎಮರ್ಜೆನ್ಸಿ ಘೋಷಿಸಲಾಗಿದೆ ಎಂದು ಹೇಳಿದರು.

    ಈಗಿರುವ ಲಾಕ್ ಡೌನ್ ಅನ್ನು ಕೆಲವರು ಪಾಲಿಸದ ಕಾರಣ ಅಂತವರಿಂದ ಸಮುದಾಯಕ್ಕೆ ಹರಡುವ ಆತಂಕದಿಂದಾಗಿ ಹೆಲ್ತ್ ಎಮರ್ಜೆನ್ಸಿ ಘೋಷಿಸಲಾಗಿದೆ. ಈ ಅವಧಿಯಲ್ಲಿ ಯಾರೂ ಕೂಡ ಹೊರಗಡೆ ಓಡಾಡುವಂತಿಲ್ಲ. ಜನರಿಗೆ ಅವಶ್ಯವಿರುವ ವಸ್ತುಗಳನ್ನು ಮನೆ ಬಾಗಿಲಿಗೆ ತಲುಪಿಸಲಾಗುವುದು. ಪೊಲೀಸರು ಭಟ್ಕಳದಲ್ಲಿ ತೀವ್ರ ನಿಗಾ ಇಡಲಿದ್ದಾರೆ. ಕೊರೊನಾ ಪೀಡಿತರನ್ನು ಕಾರವಾರದ ನೇವೆಲ್ ಬೇಸ್ ನ ಪತಂಜಲಿ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗುವುದು ಎಂದರು.

    ಭಟ್ಕಳ ಯುವಕನಿಗೆ ಫಾಸಿಟಿವ್:
    ದುಬೈನಿಂದ ಬಂದ 22 ವರ್ಷದ ಯುವಕನ ರಕ್ತ ಮಾದರಿಯನ್ನು ಶಿವಮೊಗ್ಗ ಜಿಲ್ಲೆಯಲ್ಲಿರುವ ಲ್ಯಾಬ್ ಗೆ ಕಳುಹಿಸಲಾಗಿದ್ದು ಅಲ್ಲಿ ಫಾಸಿಟಿವ್ ಬಂದಿದ್ದು, ದೃಢಪಡಿಸಿಕೊಳ್ಳಲು ಪುಣೆಯ ಲ್ಯಾಬ್ ಗೆ ಕಳುಹಿಸಲಾಗಿತ್ತು. ಅಲ್ಲಿಯೂ ದೃಢಪಟ್ಟಿದ್ದು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಭಟ್ಕಳ ಮೂಲದವರೂ ಸೇರಿ ಒಟ್ಟು ನಾಲ್ಕು ಜನರಲ್ಲಿ ಸೋಂಕು ದೃಢಪಟ್ಟಿದೆ. ಈ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ಮೂಲಗಳು ತಿಳಿಸಿದೆ.