Tag: Kashima

  • ‘ಸೌತ್ ಇಂಡಿಯನ್ ಹೀರೋ’ಗೆ ಡೈರೆಕ್ಟ್ ಮಾಡಿದ ನಿರ್ದೇಶಕ ನರೇಶ್ ಕುಮಾರ್

    ‘ಸೌತ್ ಇಂಡಿಯನ್ ಹೀರೋ’ಗೆ ಡೈರೆಕ್ಟ್ ಮಾಡಿದ ನಿರ್ದೇಶಕ ನರೇಶ್ ಕುಮಾರ್

    ಸ್ಟ್ ರಾಂಕ್ ರಾಜು, ರಾಜು ಕನ್ನಡ ಮೀಡಿಯಂನಂಥ ಯಶಸ್ವೀ ಚಿತ್ರಗಳ ಮೂಲಕ ಗುರುತಿಸಿಕೊಂಡಿದ್ದ ನಿರ್ದೇಶಕ ನರೇಶ್‌ಕುಮಾರ್ ಹೆಚ್.ಎನ್. ಹೊಸಳ್ಳಿ ಅವರು ಈಗ ಸದ್ದಿಲ್ಲದೆ ಮತ್ತೊಂದು ಚಿತ್ರವನ್ನು ತೆರೆಗೆ ತರಲು ಅಣಿಯಾಗಿದ್ದಾರೆ. ಆ ಚಿತ್ರದ ಹೆಸರು ಸೌತ್ ಇಂಡಿಯನ್ ಹೀರೋ (South Indian Hero). ವಿಶೇಷ ಕಥಾಹಂದರ ಇಟ್ಟುಕೊಂಡು ಈ ಚಿತ್ರವನ್ನು ನಿದೇಶಿಸುವ ಜೊತೆಗೆ ಪತ್ನಿ ಶಿಲ್ಪಾ ಅವರ ಜೊತೆಗೂಡಿ ಬಂಡವಾಳವನ್ನೂ ಸಹ ಹಾಕಿದ್ದಾರೆ.

    ಈ ಚಿತ್ರದಲ್ಲಿ ಸಾರ್ಥಕ್ (Sarthak) ನಾಯಕನಾಗಿದ್ದು, ನಾಯಕಿಯರಾಗಿ ಕಾಶಿಮಾ (Kashima) ಹಾಗೂ ಬಾಂಬೆ ಮೂಲದ ಊರ್ವಶಿ (Urvashi) ನಟಿಸಿದ್ದಾರೆ. ಈಗಾಗಲೇ ಚಿತ್ರೀಕರಣ ಹಾಗೂ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಮುಗಿಸಿರುವ ನರೇಶ್‌ಕುಮಾರ್ ಇತ್ತೀಚೆಗೆ ಈ ಚಿತ್ರದ ವಿಶೇಷ ಕಾನ್ಸೆಪ್ಟ್ ಟೀಸರ್ ಬಿಡುಗಡೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಇದನ್ನೂ ಓದಿ:ದುಬಾರಿ ಕಾರು ಖರೀದಿಸಿದ ನಟಿ ಕೀರ್ತಿ ಸುರೇಶ್

    ತಮ್ಮ ನಿರ್ಮಾಣ ಹಾಗೂ ನಿರ್ದೇಶನದ ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡ ನರೇಶ್‌ಕುಮಾರ್ (Naresh Kumar), ದಕ್ಷಿಣಭಾರತ ಚಿತ್ರರಂಗದ ಎಲ್ಲಾ ಹೀರೋಗಳನ್ನು ಸ್ಪೂರ್ತಿಯಾಗಿಟ್ಟುಕೊಂಡು ಹೆಣೆದಿರುವ ಕಥೆಯಿದು, ನಾಯಕನ ಪಾತ್ರದಲ್ಲಿ  ಈ ಎಲ್ಲಾ ಸ್ಟಾರ್ ಹೀರೋಗಳನ್ನು ಕಾಣಬಹುದಾಗಿದೆ. ಭೌತಶಾಸ್ತ್ರದ ಶಿಕ್ಷಕ ಲಾಜಿಕ್ ಲಕ್ಷ್ಮಣ್‌ರಾವ್, ಚಿತ್ರರಂಗದ ಯಾವುದೇ ಸಂಪರ್ಕವಿಲ್ಲದ ಆತ ಹೇಗೆ ಚಿತ್ರರಂಗಕ್ಕೆ ಬರುತ್ತಾನೆ, ಬಂದಮೇಲೆ ಏನೆಲ್ಲ ಸಂಕಷ್ಟ ಎದುರಿಸುತ್ತಾನೆ ಎನ್ನುವುದೇ ಚಿತ್ರದ ಕಂಟೆಂಟ್. ನಾಯಕನ ಪಾತ್ರಕ್ಕೆ ಮೂರು ಶೇಡ್‌ಗಳಿವೆ. ಒಂದರಲ್ಲಿ ಹಳ್ಳಿಯ ಬ್ಯಾಕ್‌ಡ್ರಾಪ್ ಇದ್ದರೆ, ಮತ್ತೊಂದು ಸಿಟಿಯ ಹಿನ್ನೆಲೆಯಲ್ಲಿರುತ್ತದೆ. ಇನ್ನೊಂದು ಸ್ಪೆಷಲ್‌ ಗೆಟಪ್ ಕೂಡ ಚಿತ್ರದಲ್ಲಿದೆ. ಹಿರೋಯಿಸಂ ಆಧರಿಸಿ ಫನ್ನಿ ಘಟನೆಗಳನ್ನು ಇಟ್ಟುಕೊಂಡು ಮಾಡಿರುವ ಚಿತ್ರವಿದು. ಇಮೇಜ್ ಇಲ್ಲದ ಒಬ್ಬ ನಾಯಕ ಮುಂದೆ ದೊಡ್ಡ ನಾಯಕನಾಗಿ ಏನೆಲ್ಲಾ  ಸಮಸ್ಯೆಗಳನ್ನು ಎದುರಿಸುತ್ತಾನೆಂದು ಚಿತ್ರದ ಮೂಲಕ ಹೇಳಿದ್ದೇನೆ. ನವಂಬರ್ ಅಥವಾ ಡಿಸೆಂಬರ್ ವೇಳೆಗೆ ಚಿತ್ರವನ್ನು ಬಿಡುಗಡೆ ಮಾಡುವ ಯೋಚನೆಯಿದೆ ಎಂದು ಹೇಳಿದರು.

    ನಾಯಕನಟ ಸಾರ್ಥಕ್ ಮಾತನಾಡುತ್ತ ಅವನು ಮತ್ತು ಶ್ರಾವಣಿ ಸೇರಿದಂತೆ ಕೆಲ ಧಾರಾವಾಹಿಗಳಲ್ಲಿ ಅಭಿನಯಿಸಿದ್ದೆ, ಇದೊಂದು ವಿಭಿನ್ನವಾದ ಪಾತ್ರ, ಪಂಚಿಂಗ್ ಡೈಲಾಗ್‌ಗಳನ್ನು ನಿರ್ದೇಶಕ ನರೇಶ್‌ಕುಮಾರ್ ಅವರು ನನಗೆ ಕೊಟ್ಟಿದ್ದಾರೆ. ಲಾಜಿಕ್ ಲಕ್ಷ್ಮಣ್‌ರಾವ್ ಎಲ್ಲಾ  ವಿಷಯಗಳನ್ನು ಲಾಜಿಕ್‌ನಲ್ಲಿ ನೋಡುವಾತ, ಅವನು ಸಿನಿಮಾಗೆ ಬಂದನಂತರ ಮುಂದೇನಾಗುತ್ತದೆ ಎನ್ನುವುದು ಕಥೆಯ ತಿರುಳು ಎಂದರು.

    ನಾಯಕಿ ಕಾಶಿಮಾ ಮಾತನಾಡುತ್ತ ಈ ಚಿತ್ರದಲ್ಲಿ ನಾನು ಹಳ್ಳಿಯ ಶಿಕ್ಷಕಿ ಮಾನಸಿ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದು,  ಉತ್ತರ ಕರ್ನಾಟಕ ಭಾಷೆಯನ್ನು ಮಾತನಾಡಿದ್ದೇನೆ ಎಂದು ಹೇಳಿದರು. ನಿರ್ಮಾಪಕಿ ಶಿಲ್ಪಾ ಮಾತನಾಡುತ್ತ ಈ ಕಥೆ ಕೇಳಿದಾಗ ತುಂಬಾ ಇಷ್ಟವಾಯಿತು, ನನ್ನ ಫೆಂಡ್ಸ್ ಎಲ್ಲರೂ ಸೇರಿ ಬಂಡವಾಳಹಾಕಿ ಚಿತ್ರವನ್ನು ನಿರ್ಮಾಣ ಮಾಡಿದ್ದೇವೆ ಎಂದರು. ತನಿಖಾಧಿಕಾರಿಯಾಗಿರುವ ಗುರು, ನಿರ್ದೇಶಕನಾಗಿ ನಟಿಸಿರುವ ವಿಜಯ್ ಚೆಂಡೂರು, ಅಮಿತ್, ಅಶ್ವಿನ್‌ರಾವ್ ಪಲ್ಲಕ್ಕಿ ಎಲ್ಲರೂ ತಂತಮ್ಮ ಪಾತ್ರಗಳ ಬಗ್ಗೆ ಹೇಳಿಕೊಂಡರು. ಸಂಗೀತ ನಿರ್ದೇಶಕ ಹರ್ಷವರ್ಧನ್ ಮಾತನಾಡಿ ಚಿತ್ರದಲ್ಲಿ 5 ಹಾಡುಗಳಿದ್ದು, ತುಂಬಾ ಚೆನ್ನಾಗಿ ಬಂದಿವೆ ಎಂದರು. ರಾಜಶೇಖರ್ ಹಾಗೂ ಪ್ರವೀಣ್ ಎಸ್. ಅವರ ಛಾಯಾಗ್ರಹಣ, ನರೇಶ್‌ಕುಮಾರ್ ಅವರ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯಿದೆ

    Live Tv
    [brid partner=56869869 player=32851 video=960834 autoplay=true]

  • ಮಂಜುಕವಿಯ ‘ಟೆಂಪರ್’ ಚಿತ್ರಕ್ಕೆ ಚಾಲನೆ

    ಮಂಜುಕವಿಯ ‘ಟೆಂಪರ್’ ಚಿತ್ರಕ್ಕೆ ಚಾಲನೆ

    ನ್ನಡ ಚಿತ್ರರಂಗದಲ್ಲಿ ಕಳೆದ ಐದಾರು ವರ್ಷಗಳಿಂದ ಸಾಹಿತಿಯಾಗಿ, ಸಂಗೀತ ಸಂಯೋಜಕನಾಗಿ ಕೆಲಸ ಮಾಡಿರುವ ಮಂಜುಕವಿ ಈಗ ಚಲನಚಿತ್ರ ನಿರ್ದೇಶನಕ್ಕಿಳಿದಿದ್ದಾರೆ. ಹಳ್ಳಿ ಸೊಗಡಿನಲ್ಲಿ ನಡೆಯುವ ಮಾಸ್ ಲವ್‍ಸ್ಟೋರಿ ಹೊಂದಿರುವ ‘ಟೆಂಪರ್’ ಎಂಬ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಚಿತ್ರದ ಮುಹೂರ್ತ ಸಮಾರಂಭ ಸೋಮವಾರ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿತು. ಚಿತ್ರದ ಮುಹೂರ್ತ ದೃಶ್ಯಕ್ಕೆ ನಿರ್ದೇಶಕ ನಂದಕಿಶೋರ್ ಕ್ಲ್ಯಾಪ್ ಮಾಡಿದರೆ ನಟ ತಬಲಾನಾಣಿ ಕ್ಯಾಮರಾ ಚಾಲನೆ ಮಾಡಿದರು. ಇದೇ ಮೊದಲ ಬಾರಿಗೆ ಬಣ್ಣ ಹಚ್ಚುತ್ತಿರುವ ಆರ್ಯನ್ ಸೂರ್ಯ ಹಾಗೂ ಕಾಶಿಮಾ ಈ ಚಿತ್ರದ ನಾಯಕ-ನಾಯಕಿ. ತಬಲಾ ನಾಣಿ ನಾಯಕನ ತಂದೆಯಾಗಿ ಕಾಣಿಸಿಕೊಂಡಿದ್ದಾರೆ. ಪತ್ರಕರ್ತ ಧನು ಯಲಗಚ್ ನಾಯಕನ ಮತ್ತೊಬ್ಬ ಸ್ನೇಹಿತನಾಗಿಯೂ ಬಣ್ಣ ಹಚ್ಚುತ್ತಿದ್ದಾರೆ. ಪವನ್ ಈ ಚಿತ್ರದಲ್ಲಿ ಒಬ್ಬ ಮೂಗ ಹಾಗೂ ನಾಯಕನ ಮತ್ತೊಬ್ಬ ಸ್ನೇಹಿತನಾಗಿ ಕಾಣಿಸಿಕೊಂಡಿದ್ದಾರೆ. ಎಂ.ಪಿ. ಸಿನಿ ಕ್ರಿಯೇಷನ್ಸ್ ಮೂಲಕ ಡಾ.ಹೆಚ್.ಎಂ.ರಾಮಚಂದ್ರ ಹಾಗೂ ವಿ.ವಿನೋದ್‍ಕುಮಾರ್ ಈ ಚಿತ್ರಕ್ಕೆ ಬಂಡವಾಳ ಹಾಕಿ ನಿರ್ಮಿಸುತ್ತಿದ್ದಾರೆ.

    ಮುಹೂರ್ತದ ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಿರ್ದೇಶಕ ಮಂಜುಕವಿ, ಈ ಚಿತ್ರದ ನಾಯಕನಿಗೆ ಚಿಕ್ಕವನಾದಾಗಿನಿಂದ ಯಾವುದೇ ವಿಷಯಕ್ಕಾದರೂ ಶೀಘ್ರವೇ ಕೋಪಗೊಳ್ಳುವಂತಹ ಗುಣವಿರುತ್ತದೆ. ಒಂಥರಾ ಶಾರ್ಟ್ ಟೆಂಪರ್. ಹಾಗಾಗಿ ಅದನ್ನೇ ಚಿತ್ರದ ಶೀರ್ಷಿಕೆಯನ್ನಾಗಿ ಸೆಲೆಕ್ಟ್ ಮಾಡಿಕೊಂಡಿದ್ದೇವೆ. ಮಜಾ ಟಾಕೀಸ್ ಖ್ಯಾತಿಯ ಪವನ್ ನಾಯಕನ ಸ್ನೇಹಿತನಾಗಿ ಕಾಣಿಸಿಕೊಂಡಿದ್ದಾರೆ. ನಂಜನಗೂಡು, ಮೈಸೂರು, ಮಡಿಕೇರಿ, ಮಂಡ್ಯ ಸುತ್ತಮುತ್ತ 45 ದಿನಗಳ ಶೂಟಿಂಗ್ ಪ್ಲಾನ್ ಹಾಕಿಕೊಂಡಿದ್ದೇವೆ ಎಂದು ಹೇಳಿದರು.

    ಖಳನಟ ಬಲ ರಾಜವಾಡಿ ಮಾತನಾಡಿ, ನಾನು ಹಳ್ಳಿಯ ಪ್ರಮುಖ. ಇಬ್ಬರು ತಮ್ಮಂದಿರೂ ದುಷ್ಟರು. ಆರಂಭದಲ್ಲಿ ಸಾಧ್ವಿಕನಾಗಿ ತೋರಿಸಿಕೊಂಡರೂ ಕೊನೆಯಲ್ಲಿ ತಮ್ಮಂದಿರು ಕೆಟ್ಟವರಾಗಲು ನಾನೇ ಕಾರಣ ಅಂತ ಗೊತ್ತಾಗುತ್ತೆ ಎಂದು ಹೇಳಿದರು.

    ನಟ ತಬಲಾನಾಣಿ ಮಾತನಾಡಿ, ನಾನು ನಾಯಕನ ತಂದೆ. ಮಕ್ಕಳಿಗೆ ಜನ್ಮ ಕೊಡಬಹುದು. ಆದರೆ ಹಣೆಬರಹ ಬರೆಯಲಿಕ್ಕಾಗುತ್ತಾ ಎಂಬ ಮನೋಭಾವನೆಯುಳ್ಳವನು. ಮಕ್ಕಳನ್ನು ಚಿಕ್ಕವರಿದ್ದಾಗಿನಿಂದಲೇ ಸುಸಂಸ್ಕೃತರಾಗಿ ಬೆಳೆಸದಿದ್ದರೆ ಅವರು ದೊಡ್ಡವರಾದ ಮೇಲೆ ಅದರ ಪರಿಣಾಮ ಏನಾಗುತ್ತದೆ ಎಂದು ನನ್ನ ಪಾತ್ರದ ಮೂಲಕ ತೋರಿಸಿದ್ದಾರೆ ಎಂದು ಹೇಳಿದರು.

    ನಾಯಕಿ ಕಾಶಿಮಾ ಮಾತನಾಡಿ, ಚಿತ್ರದಲ್ಲಿ ನಾನು ಊರಗೌಡನ ಮಗಳು. ಮೆಡಿಕಲ್ ವಿದ್ಯಾರ್ಥಿನಿಯಾಗಿ ಕಾಣಿಸಿಕೊಂಡಿದ್ದೇನೆ. ಗ್ಯಾರೇಜ್‍ನಲ್ಲಿ ಕೆಲಸ ಮಾಡುವ ನಾಯಕನನ್ನು ಲವ್ ಮಾಡಿದ ನಂತರ ಏನಾಗುತ್ತೆ ಅನ್ನೋದು ಈ ಚಿತ್ರದಲ್ಲಿದೆ ಎಂದು ಹೇಳಿದರು.

    ಈ ಚಿತ್ರದಲ್ಲಿ 4 ಹಾಡುಗಳಿದ್ದು ಆರ್. ಹರಿಬಾಬು ಸಂಗೀತ ಸಂಯೋಜನೆ ಮಾಡಿದ್ದಾರೆ. ತಬಲಾನಾಣಿ ಸಂಭಾಷಣೆ, ಆರ್.ಕೆ.ಶಿವಕುಮಾರ್ ಅವರ ಕ್ಯಾಮರಾ ವರ್ಕ್ ಈ ಚಿತ್ರಕ್ಕಿದೆ. ಯತಿರಾಜ್ ಹಾಗೂ ದಿನೇಶ್ ಊರಗೌಡನ ಇಬ್ಬರು ದುಷ್ಟ ಸಹೋದರರಾಗಿ ನಟಿಸುತ್ತಿದ್ದಾರೆ. ಬಿ.ಎಸ್. ಕೆಂಪರಾಜ್ ಈ ಚಿತ್ರದ ಸಂಕಲನಕಾರರು.