Tag: kashinath

  • ಹಿರಿಯ ನಟ, ನಿರ್ದೇಶಕ ಕಾಶಿನಾಥ್ ಇನ್ನಿಲ್ಲ

    ಹಿರಿಯ ನಟ, ನಿರ್ದೇಶಕ ಕಾಶಿನಾಥ್ ಇನ್ನಿಲ್ಲ

    ಬೆಂಗಳೂರು: ಹಿರಿಯ ನಟ, ನಿರ್ದೇಶಕ ಕಾಶಿನಾಥ್ ವಿಧಿವಶರಾಗಿದ್ದಾರೆ.

    ಬೆಂಗಳೂರಿನ ಶ್ರೀಶಂಕರ್ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಕಾಶಿನಾಥ್ ನಿಧನರಾಗಿದ್ದಾರೆ. 2 ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ ಚಿಕಿತ್ಸೆ ಫಲಿಸದೇ ಇಂದು ಕೊನೆಯುಸಿರೆಳೆದಿದ್ದಾರೆ. ಪತ್ನಿ, ಇಬ್ಬರು ಗಂಡು ಮಕ್ಕಳನ್ನ ಕಾಶಿನಾಥ್ ಅಗಲಿದ್ದಾರೆ.

    43 ಸಿನಿಮಾಗಳಲ್ಲಿ ಕಾಶಿನಾಥ್ ನಟಿಸಿದ್ದರು. ಅಮರ ಮಧುರು ಪ್ರೇಮ, ಅನುಭವ, ಅನಾಮಿಕ, ಅಜಗಜಾಂತರ, ಶ್, ಅನಂತನ ಅವಾಂತರ, ಅವನೇ ನನ್ನ ಗಂಡ ಮುಂತಾದ ಸಿನಿಮಾಗಳಲ್ಲಿ ಕಾಶಿನಾಥ್ ನಟನೆ ಮಾಡಿದ್ದರು. ಉಪೇಂದ್ರರಂತಹ ಕಲಾವಿದರನ್ನ ಪರಿಚಯಿಸಿದ ಹೆಗ್ಗಳಿಕೆ ಕಾಶಿನಾಥ್ ಅವರದ್ದು.

    11 ಕನ್ನಡ, 1 ಹಿಂದಿ ಹಾಗೂ 1 ತೆಲುಗು ಚಿತ್ರ ನಿರ್ಮಾಣ ಮಾಡಿದ್ದರು. 80ರ ದಶಕದ ಸ್ಯಾಂಡಲ್‍ವುಡ್‍ನ ಜನಪ್ರಿಯ ನಟ ಹಾಗೂ ನಿರ್ದೇಶಕರಾಗಿದ್ದರು. ಇತ್ತೀಚಿನ ಚೌಕ ಸಿನಿಮಾ ಕಾಶಿನಾಥ್ ಅವರ ಕೊನೆಯ ಸಿನಿಮಾ.