Tag: kashmir

  • ʻನಿನ್ನನ್ನು ಕೊಲ್ಲುವುದಿಲ್ಲ, ಹೋಗಿ ಮೋದಿಗೆ ಇದನ್ನ ಹೇಳುʼ – ಶಿವಮೊಗ್ಗದ ಉದ್ಯಮಿ ಪತ್ನಿಗೆ ಉಗ್ರ ಹೇಳಿದ ಮಾತು

    ʻನಿನ್ನನ್ನು ಕೊಲ್ಲುವುದಿಲ್ಲ, ಹೋಗಿ ಮೋದಿಗೆ ಇದನ್ನ ಹೇಳುʼ – ಶಿವಮೊಗ್ಗದ ಉದ್ಯಮಿ ಪತ್ನಿಗೆ ಉಗ್ರ ಹೇಳಿದ ಮಾತು

    – ಆ ಉಗ್ರರು ಹಿಂದೂಗಳನ್ನ ಗುರಿಯಾಗಿಸಿಕೊಂಡೇ ಬಂದಂತೆ ತೋರ್ತಿತ್ತು; ಪಲ್ಲವಿ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದಿರುವ ಭಯೋತ್ಪಾದಕ ದಾಳಿಗೆ (Terrorist Attack) ಇಡೀ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಶಾ ಸೇರಿದಂತೆ ಪ್ರಮುಖರು ತಮ್ಮ ಎಕ್ಸ್‌ ಖಾತೆಗಳಲ್ಲಿ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಖಂಡಿಸಿದ್ದಾರೆ. ಈ ನಡುವೆ ದಾಳಿಯಲ್ಲಿ ತನ್ನನ ಗಂಡನನ್ನು ಕಳೆದುಕೊಂಡ ಶಿವಮೊಗ್ಗ (Shivamogga) ಮೂಲದ ರಿಯಲ್‌ ಎಸ್ಟೇಟ್ ಉದ್ಯಮಿಯ‌ ಪತ್ನಿ ಪಲ್ಲವಿ, ತಮ್ಮ ದುಃಖವನ್ನು ಹಂಚಿಕೊಂಡಿದ್ದಾರೆ.

    ಮಗನಿಗೆ ಬೇಸಿಗೆ ರಜೆ ಸಿಕ್ಕ ಹಿನ್ನೆಲೆಯಲ್ಲಿ ಕಾಶ್ಮೀರಕ್ಕೆ ತೆರಳಿದ್ದ ವೇಳೆ ದಾಳಿ ನಡೆದಿದೆ. ದಾಳಿಯಿಂದ ಬದುಕುಳಿದಿರುವ ಪಲ್ಲವಿ, ಮನಕಲುಕುವ ಕ್ಷಣಗಳನ್ನು ವಿವರಿಸಿದ್ದಾರೆ. ನಾನು, ನನ್ನ ಪತ್ನಿ, ಮಗ ಕಾಶ್ಮೀರಕ್ಕೆ ಹೋಗಿದ್ದೆವು. ನಾವು ಪಹಲ್ಗಾಮ್‌ನಲ್ಲಿದ್ದಾಗ ಮಧ್ಯಾಹ್ನ 1:30ರ ವೇಳೆಗೆ ದಾಳಿ ನಡೆಯಿತು. ನನ್ನ ಪತಿಯನ್ನ ಕಣ್ಣಮುಂದೆಯೇ ಕೊಂದುಬಿಟ್ಟರು. ಅದನ್ನ ನೆನೆಸಿಕೊಂಡ್ರೆ ಈಗಲೂ ಕೆಟ್ಟ ಕನಸಿನಂತೆ ಭಾಸವಾಗ್ತಿದೆ ಎಂಧು ಭಾವುಕರಾದರು. ಇದನ್ನೂ ಓದಿ: ಪತಿಯನ್ನು ಕೊಂದಿದ್ದೀರಿ, ನನ್ನನ್ನೂ ಕೊಂದುಬಿಡಿ – ಉಗ್ರರಿಂದ ಹತ್ಯೆಗೀಡಾದ ಉದ್ಯಮಿ ಪತ್ನಿಯ ಕಣ್ಣೀರು

    ಅವರು ದಾಳಿ ಮಾಡಿದ್ದು ನೋಡಿದ್ರೆ, ಹಿಂದೂಗಳನ್ನ ಗುರಿಯಾಗಿಸಿಕೊಂಡೇ ಬಂದಂತೆ ತೋರ್ತಿತ್ತು. ಮೂರರಿಂದ ನಾಲ್ಕು ಜನ ನಮ್ಮ ಮೇಲೆ ದಾಳಿ ಮಾಡಿದ್ರು. ನಾನು ಅವರಿಗೆ ಹೇಈದೆ. ನನ್ನ ಪತಿಯನ್ನ ಕೊಂದಿದ್ದೀರಿ, ನನ್ನನ್ನೂ ಕೊಂದುಬಿಡಿ ಎಂದು ಹೇಳಿದೆ. ಆಗ ಅವರಲ್ಲಿದ್ದ ಒಬ್ಬ ʻನಾನು ನಿನ್ನನ್ನ ಕೊಲ್ಲುವುದಿಲ್ಲ, ಹೋಗಿ ಮೋದಿಗೆ ಇದನ್ನ ಹೇಳುʼ ಅಂತ ಹೇಳಿದ ಎಂದು ಹೇಳಿದರು.  ಇದನ್ನೂ ಓದಿ: ದುಷ್ಟ ಅಜೆಂಡಾ ಎಂದಿಗೂ ಯಶಸ್ವಿಯಾಗಲ್ಲ, ದಾಳಿಕೋರರನ್ನು ಸುಮ್ಮನೆ ಬಿಡಲ್ಲ: ಗುಡುಗಿದ ಮೋದಿ

    ಇನ್ನೂ ʻಪಬ್ಲಿಕ್‌ ಟಿವಿʼ ಜೊತೆ ಮಾತನಾಡಿದ ಪಲ್ಲವಿ ಅವರು, ನಾವು ಒಂದು 500 ಜನ ಇದ್ವಿ. ಮಿನಿ ಸ್ವಿಡ್ಜರ್‌ಲ್ಯಾಂಡ್ ಅಂತಾ ಒಂದು ಪಾಯಿಂಟ್ ಅದು.‌ ಆಗಷ್ಟೇ ಹೋಗಿ ಕುದುರೆ ಇಳಿದಿದ್ವಿ. ನನ್ನ ಮಗ ಬೆಳಗ್ಗೆಯಿಂದ ಏನೂ ತಿಂದಿರಲಿಲ್ಲ. ಅಲ್ಲೇನಾದ್ರೂ ತಗೊಳೋಕೆ ಅಂತಾ ನಮ್ಮ ಮನೆಯವರು, ಅಂಗಡಿಯವರ ಬಳಿ ವಿಚಾರಿಸಲು ಹೋದರು. ನನ್ನ ಮಗನ ಕರೆಯಲು ನಾನು ಹೋದೆ. ಗುಂಡಿನ ತರ ಸೌಂಡ್ ಬಂತು. ನಾವೆಲ್ಲಾ ಆರ್ಮಿಯವರು ಇರಬೇಕು ಅಂನ್ಕೊಂಡ್ವಿ. ನಾನು ಈ ಕಡೆ ತಿರುಗಿ ನೋಡೋ ಅಷ್ಟರಲ್ಲಿ ಬೇರೆಯವರೆಲ್ಲಾ ಓಡುತ್ತಿದ್ದರು. ನನ್ನ ಮಗನ ಕರೆದುಕೊಳ್ಳೋಕೆ ಅಂತಾ ನೋಡ್ತಿನಿ, ಅಷ್ಟರಲ್ಲಿ ನಮ್ಮ ಮನೆಯವರು ರಕ್ತದ ಮಡುವಿನಲ್ಲಿ ಇದ್ದರು. ಅವರು ತಲೆಗೆ ಹೊಡೆದಿದ್ದಾರೆ ಎಂದು ತಿಳಿಸಿದ್ದಾರೆ.  ಇದನ್ನೂ ಓದಿ: Pahalgam Terrorist Attack – ಉಗ್ರರ ದಾಳಿಗೆ ಮತ್ತೊಬ್ಬ ಕನ್ನಡಿಗ ಬಲಿ

    ನಾನು ಅಲ್ಲೇ ಇದ್ದ ಭಯೋತ್ಪಾದಕನ ಬಳಿ ನನ್ನ ಪತಿಯನ್ನು ಸಾಯಿಸಿದ್ದೀರಾ, ನನ್ನನ್ನು ಸಾಯಿಸಿ ಎಂದು ನಾನು ಕೇಳಿದೆ. ನನ್ನ ಮಗ ಏ ನಾಯಿ… ನನ್ನ ತಂದೆಯನ್ನು ಕೊಂದೆಯಲ್ಲಾ, ನಮ್ಮನ್ನು ಕೊಂದುಬಿಡು ಎಂದ.. ಇಲ್ಲ ನಿಮ್ಮನ್ನು ಸಾಯಿಸಲ್ಲ. ಮೋದಿಗೆ ಹೋಗಿ ಹೇಳು ಎಂದು ಹೋದ. ನಮ್ಮ ಎದುರಿಗೆ ಓಡಾಡುತ್ತಿದ್ದರು. ಯಾರೂ ಇರಲಿಲ್ಲ.. ಸೈನಿಕರೂ ಯಾರೂ ಇರಲಿಲ್ಲ. ಮಾಮೂಲಿ ಬಟ್ಟೆಯಲ್ಲಿ ಇದ್ದರು. ನವ ದಂಪತಿ ಒಬ್ಬರು ಬಂದಿದ್ದರು. ಗಂಡಸರಿಗೆ ಮಾತ್ರ ಹೊಡೆದರು. ಹೆಂಗಸರು, ಮಕ್ಕಳಿಗೆ ಏನೂ ಆಗಿಲ್ಲ. ನಮಗೆ ನಮ್ಮ ಮನೆಯವರ ಮೃತದೇಹ ಬೇಗ ಸಿಗಬೇಕು, ಫ್ಲೈಟ್ ಅರೆಂಜ್ ಮಾಡಿ, ಕಳಿಸಿ ಎಂದು ಒತ್ತಾಯಿಸಿದ್ದಾರೆ.

  • ಗುಂಡು ಹಾರಿಸುವ ಮುನ್ನ ಪುರುಷರಿಗೆ ಇಸ್ಲಾಂನ ʻಕಲಿಮಾʼ ಪಠಿಸುವಂತೆ ಬೆದರಿಸಿದ್ದ ಉಗ್ರರು!

    ಗುಂಡು ಹಾರಿಸುವ ಮುನ್ನ ಪುರುಷರಿಗೆ ಇಸ್ಲಾಂನ ʻಕಲಿಮಾʼ ಪಠಿಸುವಂತೆ ಬೆದರಿಸಿದ್ದ ಉಗ್ರರು!

    ಶ್ರೀನಗರ: ಲಷ್ಕರ್‌ ಶಾಖೆಯ ಟಿಆರ್‌ಎಫ್‌ (TRF) ಭಯೋತ್ಪಾದಕ ಗುಂಪು ಪ್ರವಾಸಿಗರ ಮೇಲೆ ನಡೆಸಿದ ಗುಂಡಿನ ದಾಳಿಯಲ್ಲಿ ಕನಿಷ್ಠ 30 ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಸೇನಾ ಸಮವಸ್ತ್ರ ಧರಿಸಿ ಬಂದ ಉಗ್ರರು ಮಾತನಾಡಿರುವ ನೆಪದಲ್ಲಿ ಬಂದು ಗುಂಡು ಹಾರಿಸಿದ್ದಾರೆ.

    ಮೊದಲು ನೀವು ಮುಸಲ್ಮಾನರಾ? (Muslims) ಎಂದು ಕೇಳಿದ ಉಗ್ರರು, ಗುಂಡು ಹಾರಿಸುವುದಕ್ಕೂ ಮುನ್ನ ಪುರುಷರಿಗೆ ಇಸ್ಲಾಂನ ʻಕಲಿಮಾʼ (Kalima) ಪಠಿಸುವಂತೆ ಬೆದರಿಸಿದ್ದಾರೆ ಎಂದು ವರದಿಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಬೇಲ್ಪುರಿ ತಿನ್ನುವಾಗ ನೀನು ಮುಸಲ್ಮಾನನಾ ಅಂತ ಕೇಳಿ ಗುಂಡು ಹಾರಿಸಿದ ಉಗ್ರ – ದಾಳಿ ಭೀಕರತೆ ಬಿಚ್ಚಿಟ್ಟ ಪ್ರತ್ಯಕ್ಷದರ್ಶಿ

    ʻಕಲಿಮಾʼ ಅಥವಾ ಶಹದಾ ಅಂದ್ರೆ ಏನು?
    ಕಲಿಮಾ ಅಥವಾ ಶಹದಾ ಅನ್ನೋದು ನಂಬಿಕೆಯ ಇಸ್ಲಾಮಿಕ್ (Islamic) ಘೋಷಣೆ. ಇದು ಇಸ್ಲಾಂ ನಂಬಿಕೆಯ ಐದು ಸ್ತಂಭಗಳಲ್ಲಿ ಒಂದೆಂದು ನಂಬುತ್ತಾರೆ. ಅರೇಬಿಕ್‌ನಲ್ಲಿ ‘ಅಶ್ಹದು ಆನ್ ಲಾ ಇಲಾಹ ಇಲ್ಲಲ್ಲಾಹ್, ವ ಅಶ್ಹದು ಅನ್ನ ಮುಹಮ್ಮದುರ್ ರಸುಲುಲ್ಲಾಹ್’ ಎಂದು ಬಣ್ಣಿಸುತ್ತಾರೆ. ಇದನ್ನು ಪ್ರಾಮಾಣಿಕವಾಗಿ ಪಠಿಸಿದವರು ಮುಸ್ಲಿಂ ಅನುಯಾಯಿಗಳಾಗುತ್ತಾರೆ, ಅವರು ಇಸ್ಲಾಂ ಧರ್ಮದ ಮಡಿಲಿಗೆ ಬರುತ್ತಾರೆ ಅನ್ನೋದು ನಂಬಿಕೆ. ಆದ್ದರಿಂದಲೇ ಪ್ರವಾಸಿಗರಿಗೆ ಗುಂಡು ಹಾರಿಸುವುದಕ್ಕೂ ಮುನ್ನ ಕಲಿಮಾ ಪಠಿಸುವಂತೆ ಒತ್ತಾಯಿಸಿದ್ದಾರೆ ಎಂದು ಹೇಳಲಾಗಿದೆ.  ಇದನ್ನೂ ಓದಿ: ಕಾಶ್ಮೀರದಲ್ಲಿ ಉಗ್ರರ ಗುಂಡಿಗೆ ಬಲಿಯಾದ ಕನ್ನಡಿಗ ಮಂಜುನಾಥ್‌ ರಾವ್‌ ಯಾರು?

    ಸೂಕ್ತ ಕ್ರಮಕ್ಕೆ ಅಮಿತ್‌ ಶಾಗೆ ಸೂಚಿಸಿದ ಮೋದಿ:
    ಭಯೋತ್ಪಾದಕ ದಾಳಿಯ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಸೌದಿ ಅರೇಬಿಯಾದಿಂದಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಈ ಹಿನ್ನೆಲೆ ಅಮಿತ್ ಶಾ ತುರ್ತು ಸಭೆ ಕರೆದಿದ್ದಾರೆ. ಸಭೆಯಲ್ಲಿ ಐಬಿ ಗೃಹ ಕಾರ್ಯದರ್ಶಿ ಮತ್ತು ಗೃಹ ಸಚಿವಾಲಯದ ಇತರ ಅಧಿಕಾರಿಗಳು ಉಪಸ್ಥಿತರಿದ್ದರು. ಜಮ್ಮು ಮತ್ತು ಕಾಶ್ಮೀರ ಡಿಜಿಪಿ ಈ ಸಭೆಯಲ್ಲಿ ವರ್ಚುವಲ್ ಆಗಿ ಭಾಗವಹಿಸಿದ್ದಾರೆ.  ಇದನ್ನೂ ಓದಿ: ಕಾಶ್ಮೀರದಲ್ಲಿ ಉಗ್ರರ ಪೈಶಾಚಿಕ ಕೃತ್ಯ | ಸೌದಿಯಿಂದಲೇ ಮೋದಿ ಕರೆ, ಸ್ಥಳಕ್ಕೆ ಹೊರಟ ಅಮಿತ್‌ ಶಾ

    ಸದ್ಯ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಸಹ ದಾಳಿಯನ್ನು ಖಂಡಿಸಿದ್ದು, ಪ್ರವಾಸಿಗರ ಮೇಲೆ ದಾಳಿ ನಡೆಸುವುದು ಅತ್ಯಂತ ಹೇಯ ಕೃತ್ಯ ಎಂದು ಎಂದು ಕಿಡಿ ಕಾರಿದ್ದಾರೆ. ಈ ನಡುವೆ ಭಯೋತ್ಪಾದಕರನ್ನು ಹಿಡಿಯಲು ಭದ್ರತಾ ಪಡೆಗಳು ಶೋಧ ಕಾರ್ಯ ಆರಂಭಿಸಿವೆ.  ಇದನ್ನೂ ಓದಿ: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ – ಶಿವಮೊಗ್ಗದ ಉದ್ಯಮಿ ಸಾವು, 12 ಮಂದಿಗೆ ಗಾಯ

  • ಕಾಶ್ಮೀರದಲ್ಲಿ ಉಗ್ರರ ಪೈಶಾಚಿಕ ಕೃತ್ಯ – 27ಕ್ಕೂ ಹೆಚ್ಚು ಪ್ರವಾಸಿಗರು ಬಲಿ?

    ಕಾಶ್ಮೀರದಲ್ಲಿ ಉಗ್ರರ ಪೈಶಾಚಿಕ ಕೃತ್ಯ – 27ಕ್ಕೂ ಹೆಚ್ಚು ಪ್ರವಾಸಿಗರು ಬಲಿ?

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಳಿಯಲ್ಲಿ 27 ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಅಲ್ಲದೇ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.

    ಮಧ್ಯಾಹ್ನದ ವೇಳೇ ಪಹಲ್ಗಾಮ್‌ನ ಬೈಸರನ್ ಹುಲ್ಲುಗಾವಲು ಪ್ರದೇಶದಲ್ಲಿ ಕುದುರೆ ಮೇಲೆ ಕುಳಿತು ಪ್ರವಾಸಿಗರು ಸಮಯ ಕಳೆಯುತ್ತಿದ್ದ ವೇಳೆ ಸೇನಾ ಸಮವಸ್ತ್ರ ಧರಿಸಿ ಬಂದ ಭಯೋತ್ಪಾದಕರು, ಪ್ರವಾಸಿಗರನ್ನು ಮಾತನಾಡಿಸುವ ನೆಪದಲ್ಲಿ ಬಂದು ಗುಂಡು ಹಾರಿಸಿದ್ದಾರೆ. ಗುಂಡಿನ ದಾಳಿಗೆ ಶಿವಮೊಗ್ಗದ ರಿಯಲ್‌ ಎಸ್ಟೇಟ್‌ ಉದ್ಯಮಿ ಮಂಜುನಾಥ್‌ ರಾವ್‌ ಬಲಿಯಾಗಿದ್ದಾರೆ. ಇದನ್ನೂ ಓದಿ: ಬೇಲ್ಪುರಿ ತಿನ್ನುವಾಗ ನೀನು ಮುಸಲ್ಮಾನನಾ ಅಂತ ಕೇಳಿ ಗುಂಡು ಹಾರಿಸಿದ ಉಗ್ರ – ದಾಳಿ ಭೀಕರತೆ ಬಿಚ್ಚಿಟ್ಟ ಪ್ರತ್ಯಕ್ಷದರ್ಶಿ

    ಸೂಕ್ತ ಕ್ರಮಕ್ಕೆ ಅಮಿತ್‌ ಶಾಗೆ ಸೂಚಿಸಿದ ಮೋದಿ:
    ಭಯೋತ್ಪಾದಕ ದಾಳಿಯ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಸೌದಿ ಅರೇಬಿಯಾದಿಂದಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಈ ಹಿನ್ನೆಲೆ ಅಮಿತ್ ಶಾ ತುರ್ತು ಸಭೆ ಕರೆದಿದ್ದಾರೆ. ಸಭೆಯಲ್ಲಿ ಐಬಿ ಗೃಹ ಕಾರ್ಯದರ್ಶಿ ಮತ್ತು ಗೃಹ ಸಚಿವಾಲಯದ ಇತರ ಅಧಿಕಾರಿಗಳು ಉಪಸ್ಥಿತರಿದ್ದರು. ಜಮ್ಮು ಮತ್ತು ಕಾಶ್ಮೀರ ಡಿಜಿಪಿ ಈ ಸಭೆಯಲ್ಲಿ ವರ್ಚುವಲ್ ಆಗಿ ಭಾಗವಹಿಸಿದ್ದಾರೆ.

    ಸದ್ಯ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಸಹ ದಾಳಿಯನ್ನು ಖಂಡಿಸಿದ್ದು, ಪ್ರವಾಸಿಗರ ಮೇಲೆ ದಾಳಿ ನಡೆಸುವುದು ಅತ್ಯಂತ ಹೇಯ ಕೃತ್ಯ ಎಂದು ಎಂದು ಕಿಡಿ ಕಾರಿದ್ದಾರೆ. ಈ ನಡುವೆ ಭಯೋತ್ಪಾದಕರನ್ನು ಹಿಡಿಯಲು ಭದ್ರತಾ ಪಡೆಗಳು ಶೋಧ ಕಾರ್ಯಾ ಪ್ರಾರಂಭಿಸಿವೆ. ಇದನ್ನೂ ಓದಿ: ಕಾಶ್ಮೀರದಲ್ಲಿ ಉಗ್ರರ ಗುಂಡಿಗೆ ಬಲಿಯಾದ ಕನ್ನಡಿಗ ಮಂಜುನಾಥ್‌ ರಾವ್‌ ಯಾರು?

  • ಕಾಶ್ಮೀರದಲ್ಲಿ ಉಗ್ರರ ಗುಂಡಿಗೆ ಬಲಿಯಾದ ಕನ್ನಡಿಗ ಮಂಜುನಾಥ್‌ ರಾವ್‌ ಯಾರು?

    ಕಾಶ್ಮೀರದಲ್ಲಿ ಉಗ್ರರ ಗುಂಡಿಗೆ ಬಲಿಯಾದ ಕನ್ನಡಿಗ ಮಂಜುನಾಥ್‌ ರಾವ್‌ ಯಾರು?

    ಚಿಕ್ಕಮಗಳೂರು/ಶಿವಮೊಗ್ಗ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಪ್ರವಾಸಕ್ಕೆ ತೆರಳಿದ್ದ ಶಿವಮೊಗ್ಗ ಮೂಲದ ರಿಯಲ್‌ ಎಸ್ಟೇಟ್‌ ಉದ್ಯಮಿ ಮಂಜುನಾಥ್‌ ರಾವ್‌ (47) ಮೃತಪಟ್ಟಿದ್ದಾರೆ. ಮಂಜುನಾಥ್‌ ರಾವ್‌ (Manjunath Rao) ಯಾರು ಅಂತ ನೋಡೊದಾದ್ರೆ…

    ಮಂಜುನಾಥ್‌ ರಾವ್‌ ಚಿಕ್ಕಮಗಳೂರಿನ (Chikkamagaluru) ಕೊಪ್ಪ ತಾಲೂಕಿನ ಕುಣಿಮಕ್ಕಿ ಮೂಲದವರು. ಅವರ ತಂದೆ ಶಿವಮೊಗ್ಗದ ಮ್ಯಾಮ್ ಕೋಸ್‌ ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿದ್ದರು. ಹಾಗಾಗಿ 20 ವರ್ಷಗಳ ಹಿಂದೆಯೇ ಕುಟುಂಬಸ್ಥರೊಂದಿಗೆ ಶಿವಮೊಗ್ಗಕ್ಕೆ ತೆರಳಿದ್ದ ಮಂಜುನಾಥ್‌ ತಂದೆ ನಿವೃತ್ತಿ ಬಳಿಕ ಅಲ್ಲೇ ಸೆಟಲ್‌ ಆಗಿದ್ದರು. ರಿಯಲ್‌ ಎಸ್ಟೇಟ್‌ ಉದ್ಯಮದಲ್ಲಿ ತೊಡಗಿದ್ದರು. ಪತ್ನಿ ಕಡೂರು ತಾಲೂಕಿನ ಬೀರೂರು ಮ್ಯಾಮ್ ಕೋಸ್ ನಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು. ಇದನ್ನೂ ಓದಿ: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ – ಶಿವಮೊಗ್ಗದ ಉದ್ಯಮಿ ಸಾವು, 12 ಮಂದಿಗೆ ಗಾಯ

    ಇದೇ ಏಪ್ರಿಲ್‌ 19ರಂದು ಅಂದ್ರೆ ಮೂರು ದಿನಗಳ ಹಿಂದೆ ಮಂಜುನಾಥ್‌ ರಾವ್‌ ಪತ್ನಿ, ಮಗನನ್ನು ಕರೆದುಕೊಂಡು ಕಾಶ್ಮೀರ ಪ್ರವಾಸ ಕೈಗೊಂಡಿದ್ದರು. ಮಗನ ಪಿಯುಸಿ ಪರೀಕ್ಷೆ ಮುಗಿದ ಬೆನ್ನಲ್ಲೇ 6 ದಿನಗಳ ಪ್ಯಾಕೇಜ್‌ ಪ್ರವಾಸ ಕೈಗೊಂಡಿದ್ದರು. ಎರಡು ದಿನಗಳ ಹಿಂದೆ ಸಂಬಂಧಿ ಅಶೋಕ್‌ಗೆ ಕರೆ ಮಾಡಿದ್ದ ಮಂಜುನಾಥ್‌ ಏ.24ರಂದು ವಾಪಸ್‌ ಬರುವುದಾಗಿ ಹೇಳಿದ್ದರು. ಆದ್ರೆ ದುರದೃಷ್ಟವಶಾತ್‌ ಇಂದು ಉಗ್ರರ ಗುಂಡಿಗೆ ಬಲಿಯಾಗಿದ್ದಾರೆ. ಇದನ್ನೂ ಓದಿ: ಬೇಲ್ಪುರಿ ತಿನ್ನುವಾಗ ನೀನು ಮುಸಲ್ಮಾನನಾ ಅಂತ ಕೇಳಿ ಗುಂಡು ಹಾರಿಸಿದ ಉಗ್ರ – ದಾಳಿ ಭೀಕರತೆ ಬಿಚ್ಚಿಟ್ಟ ಪ್ರತ್ಯಕ್ಷದರ್ಶಿ

    ದಾಳಿ ಬಳಿಕ ಏನಾಯ್ತು?
    ಭಯೋತ್ಪಾದಕ ದಾಳಿಯ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಸೌದಿ ಅರೇಬಿಯಾದಿಂದಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಈ ಹಿನ್ನೆಲೆ ಅಮಿತ್‌ ಶಾ ತುರ್ತು ಸಭೆ ಕರೆದಿದ್ದಾರೆ. ಸಭೆಯಲ್ಲಿ ಐಬಿ ಗೃಹ ಕಾರ್ಯದರ್ಶಿ ಮತ್ತು ಗೃಹ ಸಚಿವಾಲಯದ ಇತರ ಅಧಿಕಾರಿಗಳು ಉಪಸ್ಥಿತರಿದ್ದರು. ಜಮ್ಮು ಮತ್ತು ಕಾಶ್ಮೀರ ಡಿಜಿಪಿ ಈ ಸಭೆಯಲ್ಲಿ ವರ್ಚುವಲ್ ಆಗಿ ಭಾಗವಹಿಸಿದರು.

    ಸದ್ಯ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಸಹ ದಾಳಿಯನ್ನು ಖಂಡಿಸಿದ್ದು, ಪ್ರವಾಸಿಗರ ಮೇಲೆ ದಾಳಿ ನಡೆಸುವುದು ಅತ್ಯಂತ ಹೇಯ ಕೃತ್ಯ ಎಂದು ಎಂದು ಕಿಡಿ ಕಾರಿದ್ದಾರೆ. ಈ ನಡುವೆ ಭಯೋತ್ಪಾದಕರನ್ನು ಹಿಡಿಯಲು ಭದ್ರತಾ ಪಡೆಗಳು ಶೋಧ ಕಾರ್ಯಾ ಪ್ರಾರಂಭಿಸಿವೆ. ಇದನ್ನೂ ಓದಿ: ಕಾಶ್ಮೀರದಲ್ಲಿ ಉಗ್ರರ ಪೈಶಾಚಿಕ ಕೃತ್ಯ | ಸೌದಿಯಿಂದಲೇ ಮೋದಿ ಕರೆ, ಸ್ಥಳಕ್ಕೆ ಹೊರಟ ಅಮಿತ್‌ ಶಾ

  • ಬೇಲ್ಪುರಿ ತಿನ್ನುವಾಗ ನೀನು ಮುಸಲ್ಮಾನನಾ ಅಂತ ಕೇಳಿ ಗುಂಡು ಹಾರಿಸಿದ ಉಗ್ರ – ದಾಳಿ ಭೀಕರತೆ ಬಿಚ್ಚಿಟ್ಟ ಪ್ರತ್ಯಕ್ಷದರ್ಶಿ

    ಬೇಲ್ಪುರಿ ತಿನ್ನುವಾಗ ನೀನು ಮುಸಲ್ಮಾನನಾ ಅಂತ ಕೇಳಿ ಗುಂಡು ಹಾರಿಸಿದ ಉಗ್ರ – ದಾಳಿ ಭೀಕರತೆ ಬಿಚ್ಚಿಟ್ಟ ಪ್ರತ್ಯಕ್ಷದರ್ಶಿ

    – ಇದು ಹೇಡಿತನದ ಕೃತ್ಯ; ರಾಜನಾಥ್‌ ಸಿಂಗ್‌ ತೀವ್ರ ಖಂಡನೆ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ (Pahalgam) ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಶಿವಮೊಗ್ಗ ಮೂಲದ ರಿಯಲ್‌ ಎಸ್ಟೇಟ್‌ ಉದ್ಯಮಿ ಸಾವನ್ನಪ್ಪಿದ್ದು, ಸುಮಾರು 12 ಮಂದಿ ಗಾಯಗೊಂಡಿದ್ದಾರೆ. ಈ ದಾಳಿಯ ಹೊಣೆಯನ್ನು ಭಯೋತ್ಪಾದಕ ಸಂಘಟನೆ ಟಿಆರ್‌ಎಫ್ (TRF) ಹೊತ್ತುಕೊಂಡಿದೆ.

    ಅಮರನಾಥ ಯಾತ್ರೆ ಆರಂಭವಾಗುವ ಕೆಲವೇ ದಿನಗಳ ಮೊದಲು ದಾಳಿ ನಡೆದಿದ್ದು. ಭದ್ರತೆಯ ಬಗ್ಗೆ ಕಳವಳ ಹೆಚ್ಚಿಸಿದೆ. ಇನ್ನೂ ದಾಳಿಯನ್ನು ಕಣ್ಣಾರೆ ಕಂಡ ಪ್ರತ್ಯಕ್ಷದರ್ಶಿಗಳು ಭೀಕರತೆಯನ್ನು ವಿವರಿಸಿದ್ದಾರೆ.

    ಭಯೋತ್ಪಾದಕರು (Terrorists) ಗುಂಡಿನ ಮಳೆಗರೆಯುತ್ತಿದ್ದಂತೆ ಪ್ರವಾಸಿಗರು ಹಾಗೂ ಸ್ಥಳೀಯರು ದಿಕ್ಕಾಪಾಲಾಗಿ ಓಡಿದ್ದಾರೆ. ಈ ಕುರಿತ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿವೆ. ದಾಳಿ ಸಂದರ್ಭದಲ್ಲಿ ಭಯೋತ್ಪಾದಕ ಮೊದಲು ನನ್ನ ಪತಿಯ ಬಳಿಗೆ ಬಂದು ನೀನು ಮುಸಲ್ಮಾನನಾ? ಅಂತ ಕೇಳಿದ, ಬಳಿಕ ಗುಂಡು ಹಾರಿಸಿದ. ಅದೇ ರೀತಿ ಪ್ರವಾಸಿಗರ ಮೇಲೆ ಗುಂಡು ಹಾರಿಸಿರುವುದಾಗಿ ಪ್ರತ್ಯಕ್ಷದರ್ಶಿ ಮಹಿಳೆ ಹೇಳಿದ್ದಾರೆ.

    ಉಗ್ರ ಗುಂಡು ಹಾರಿಸುತ್ತಿದ್ದಂತೆ ಮಹಿಳೆ ಚೀರಾಡಿದ್ದಾರೆ. ಅಲ್ಲದೇ ಪತಿಯನ್ನು ಕೊಂದಾಯ್ತು ನನ್ನನ್ನೂ ಕೊಂದುಬಿಡಿ ಅಂತಾ ಗೋಳಾಡಿದ್ದಾರೆ. ಬಳಿಕ ಅಲ್ಲಿನ ಸ್ಥಳೀಯರು ನೆರವಿಗೆ ಧಾವಿಸಿದ್ದಾರೆ.

    ರಾಜನಾಥ್‌ ಸಿಂಗ್‌ ಖಂಡನೆ:
    ಇನ್ನೂ ಭಯೋತ್ಪಾದಕ ದಾಳಿಯನ್ನು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಖಂಡಿಸಿದ್ದಾರೆ. ಪಹಲ್ಗಾಮ್ (ಜಮ್ಮು ಮತ್ತು ಕಾಶ್ಮೀರ) ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಸುದ್ದಿಯಿಂದ ತೀವ್ರ ದುಃಖಿತನಾಗಿದ್ದೇನೆ. ಮುಗ್ಧ ನಾಗರಿಕರ ಮೇಲೆ ನಡೆದ ಈ ಹೇಡಿತನದ ದಾಳಿ ಹೇಡಿತನದ ಕೃತ್ಯ ಮತ್ತು ಅತ್ಯಂತ ಖಂಡನೀಯ. ನನ್ನ ಆಲೋಚನೆಗಳು ಮತ್ತು ಪ್ರಾರ್ಥನೆಗಳು ಮುಗ್ಧ ಬಲಿಪಶುಗಳು ಮತ್ತು ಅವರ ಕುಟುಂಬಗಳೊಂದಿಗೆ ಇವೆ ಎಂದು ಭಾವುಕ ಪೋಸ್ಟ್‌ವೊಂದನ್ನ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

  • ಗುಲ್ಮಾರ್ಗ್‌ನಲ್ಲಿ ಈ ಸೀಸನ್ನಿನ ಮೊದಲ ಹಿಮಪಾತ, ಶ್ರೀನಗರದಲ್ಲಿ ಮಳೆ

    ಗುಲ್ಮಾರ್ಗ್‌ನಲ್ಲಿ ಈ ಸೀಸನ್ನಿನ ಮೊದಲ ಹಿಮಪಾತ, ಶ್ರೀನಗರದಲ್ಲಿ ಮಳೆ

    ಶ್ರೀನಗರ: ಕಾಶ್ಮೀರದ (Kashmir) ಪ್ರವಾಸಿ ತಾಣವಾದ ಗುಲ್ಮಾರ್ಗ್‌ನಲ್ಲಿ ಶನಿವಾರದಂದು ಮೊದಲ ಹಿಮಪಾತವಾಗಿದೆ. ಬಯಲು ಪ್ರದೇಶಗಳಲ್ಲಿ ಮಳೆ ಸುರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಕಣಿವೆಯ ಬಹುತೇಕ ಬಯಲು ಪ್ರದೇಶಗಳಲ್ಲಿ ಮಳೆ ಆರಂಭವಾಗಿದ್ದು, ಇನ್ನು ಕೆಲವೆಡೆ ಹಗುರದಿಂದ ಸಾಧಾರಣ ಹಿಮಪಾತವಾಗುತ್ತಿದೆ. ಕಾಶ್ಮೀರದ ಪ್ರಸಿದ್ಧ ಪ್ರವಾಸಿ ತಾಣ ಮತ್ತು ಗುಲ್ಮಾರ್ಗ್ ಮತ್ತು ಗುರೇಜ್ ಕಣಿವೆಯಲ್ಲಿ ಮುಂಜಾನೆ ಹಿಮಪಾತವಾಗಿದೆ. ಗುಲ್ಮಾರ್ಗ್ನಲ್ಲಿ ಲಘು ಹಿಮಪಾತ ದಾಖಲಾಗಿದ್ದರೆ, ಗುರೇಜ್ ಕಣಿವೆಯಲ್ಲಿ ಭಾರೀ ಪ್ರಮಾಣದಲ್ಲಿ ಹಿಮಪಾತವಾಗಿದೆ. ಮಧ್ಯಾಹ್ನದ ನಂತರ ಹವಾಮಾನದಲ್ಲಿ ಸುಧಾರಣೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇದನ್ನೂ ಓದಿ: ಸಾಲ ಬಾಧೆ – ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಉದ್ಯಮಿ

    ಗುಲ್ಮಾರ್ಗ್‌ನಲ್ಲಿ (Gulmarg) ಶನಿವಾರ ಬೆಳಗ್ಗೆ ಒಂದು ಇಂಚು ಹಿಮಪಾತವಾಗಿದ್ದು, ಬಂಡಿಪೋರಾ ಗುರೇಜ್ ರಸ್ತೆ ಸಂಚಾರವನ್ನು ಸದ್ಯಕ್ಕೆ ಮುಚ್ಚಲಾಗಿದೆ. ನ.17ರಿಂದ 23ರವರೆಗೆ ಸಾಮಾನ್ಯವಾಗಿ ಶುಷ್ಕ ವಾತಾವರಣದಿಂದ ಕೂಡಿರುವ ಸಾಧ್ಯತೆ ಇರುತ್ತದೆ. ನ.24 ರಂದು ಕೆಲವು ಸ್ಥಳಗಳಲ್ಲಿ ಸ್ವಲ್ಪ ಮಳೆ ಮತ್ತು ಹಿಮಪಾತ ಆಗುವ ಸಾಧ್ಯತೆಯಿದೆ. ಪ್ರವಾಸಿಗರು ಮತ್ತು ಪ್ರಯಾಣಿಕರು ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ತಮ್ಮ ಪ್ರಯಾಣ ಮಾಡುವಂತೆ ಹವಾಮಾನ ಇಲಾಖೆಯ ಉಪನಿರ್ದೇಶಕ ಡಾ. ಮುಖ್ತಾರ್ ಅಹ್ಮದ್ ಸೂಚಿಸಿದ್ದಾರೆ. ಇದನ್ನೂ ಓದಿ: ಕಬ್ಬು ಕಟಾವು ಹಿನ್ನೆಲೆ, ಮೆಟ್ರಿಕ್ ಟನ್ ಕಬ್ಬಿಗೆ ದರ ನಿಗದಿ ಮಾಡಿ ರಾಜ್ಯ ಸರ್ಕಾರ ಆದೇಶ- ಬಿ.ಫೌಜಿಯಾ ತರನ್ನುಮ್

    ಶ್ರೀನಗರ ಮತ್ತು ಕಾಶ್ಮೀರ ಕಣಿವೆಯ ಕೆಲವು ಭಾಗಗಳಲ್ಲಿ ಕಳೆದ ಎರಡು ಮೂರು ದಿನಗಳಿಂದ ಹಿಮಪಾತವಾಗುತ್ತಿದೆ. ಹಿಮದ ತೆಳುವಾದ ಪದರವು ಮನೆಗಳ ಮೇಲ್ಛಾವಣಿ, ಕಾರು, ಮೈದಾನ, ಹುಲ್ಲು ಪ್ರದೇಶ, ಮರ-ಗಿಡ, ಹೂವು-ಬಳ್ಳಿಗಳ ಮೇಲೆ ಆವರಿಸಿದೆ. ಕಣಿವೆ ರಾಜ್ಯದ ಕೆಲವು ಭಾಗಗಳಲ್ಲಿ ಎಡಬಿಡದೇ ಮಂಜು ಸುರಿತುತ್ತಿರುವ ಕಾರಣ ನಗರದ ಬೀದಿಗಳು ಕೂಡ ಹಿಮದಿಂದ ಆವೃತವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: 20 ವರ್ಷಗಳ ಬಳಿಕ ರಿಂಗ್‌ನಲ್ಲಿ ಘರ್ಜಿಸಿದ ಮೈಕ್‌ ಟೈಸನ್‌ – ಜೇಕ್ ಪಾಲ್ ವಿರುದ್ಧ ಸೋಲು

  • ಜಮ್ಮು-ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ಎನ್‌ಕೌಂಟರ್: ಇಬ್ಬರು ಯೋಧರಿಗೆ ಗಾಯ

    ಜಮ್ಮು-ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ಎನ್‌ಕೌಂಟರ್: ಇಬ್ಬರು ಯೋಧರಿಗೆ ಗಾಯ

    ಶ್ರೀನಗರ: ಜಮ್ಮು (Jammu) ಮತ್ತು ಕಾಶ್ಮೀರದ (Kashmir) ಕಿಶ್ತ್ವಾರ್‌ನಲ್ಲಿ ಭಯೋತ್ಪಾದಕರೊಂದಿಗೆ ಭಾರೀ ಗುಂಡಿನ ಚಕಮಕಿ ಮುಂದುವರಿದಿದ್ದು, ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಕಳೆದ 24 ಗಂಟೆಗಳಲ್ಲಿ ನಡೆದ ಮೂರನೇ ಎನ್‌ಕೌಂಟರ್ ಇದಾಗಿದೆ. ಗಾಯಗೊಂಡ ಇಬ್ಬರು ಸೈನಿಕರು ಜೂನಿಯರ್ ಕಮಿಷನ್ಡ್ ಆಫೀಸರ್ (JCO) ಆಗಿದ್ದಾರೆ. ಎರಡು ದಿನಗಳ ಹಿಂದೆ ಇಬ್ಬರು ಗ್ರಾಮ ರಕ್ಷಣಾ ಸಿಬ್ಬಂದಿಯ ಹತ್ಯೆಯ ಹಿಂದೆ ಉಗ್ರರನ್ನು ಭದ್ರತಾ ಪಡೆಗಳು ಮೂಲೆಗುಂಪು ಮಾಡಿದ ನಂತರ ಕಿಶ್ತ್ವಾರ್‌ನಲ್ಲಿ ಎನ್‌ಕೌಂಟರ್ ನಡೆಯಿತು. ಇದನ್ನೂ ಓದಿ: ಬಟ್ಟೆ ಅಂಗಡಿಗಳಿಗೆ ಹಣ ನೀಡದೇ ವಂಚನೆ – ಚಾರ್ಟೆರ್ಡ್ ಅಕೌಂಟೆಂಟ್ ಆಗಿದ್ದ ಯುವತಿ ಅರೆಸ್ಟ್

    ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಗುಪ್ತಚರ ಆಧಾರದ ಮೇಲೆ ಶ್ರೀನಗರದ ಜಬರ್ವಾನ್ ಅರಣ್ಯ ಪ್ರದೇಶದಲ್ಲಿ ಜಂಟಿ ಪೊಲೀಸ್ ಮತ್ತು ಭದ್ರತಾ ಪಡೆಗಳ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಕಾರ್ಯಾಚರಣೆ ವೇಳೆ ಗುಂಡಿನ ಚಕಮಕಿ ನಡೆದಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಮೈಸೂರಿನಲ್ಲಿ ಸಚಿವರಿಗೆ ಕಪಾಳಕ್ಕೆ ಹೊಡೆಯಲಾಗಿದೆ ಎಂಬುದು ಸುಳ್ಳು ಆರೋಪ: ಡಿಕೆಶಿ

    ಶನಿವಾರ ಬಾರಾಮುಲ್ಲಾ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭಯೋತ್ಪಾದಕನನ್ನು ಹೊಡೆದುರುಳಿಸಿತು. ಅನುಮಾನಾಸ್ಪದ ಚಟುವಟಿಕೆಯನ್ನು ಗಮನಿಸಿದ ಭದ್ರತಾ ಪಡೆಗಳು ಮತ್ತು ರಾಜ್ಯ ಪೊಲೀಸರು ರಾಜಪುರದಲ್ಲಿ ಜಂಟಿ ಕಾರ್ಯಾಚರಣೆಯನ್ನು ಆರಂಭಿಸಿದ್ದರು. ಉಗ್ರರು ಮೇಲೆ ರಕ್ಷಣಾ ಪಡೆಗಳು ಗುಂಡಿನ ದಾಳಿ ನಡೆಸಿದ ಬಳಿಕ ಎನ್‌ಕೌಂಟರ್ ನಡೆದಿದೆ. ರಾಜಪುರ, ಸೋಪೋರ್, ಬಾರಾಮುಲ್ಲಾ ಸಾಮಾನ್ಯ ಪ್ರದೇಶದಲ್ಲಿ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಒಬ್ಬ ಭಯೋತ್ಪಾದಕನನ್ನು ಭದ್ರತಾ ಪಡೆಗಳು ತಟಸ್ಥಗೊಳಿಸಿದ್ದು, ಕಾರ್ಯಾಚರಣೆ ಮುಂದುವರೆದಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಹಿಂದೂಗಳ ಮೇಲೆ ದಾಳಿ – ಕೆನಡಾ ರಾಯಭಾರ ಕಚೇರಿ ಎದುರು ಹಿಂದೂ ಸಿಖ್ ಗ್ಲೋಬಲ್ ಫೋರಂ ಪ್ರತಿಭಟನೆ

  • ‌ಬಿಸ್ಕೆಟ್‌ ಬಳಸಿ ಉಗ್ರನ ಬೇಟೆ – ಏನಿದು ಯೋಧರ ಹೊಸ ತಂತ್ರ?

    ‌ಬಿಸ್ಕೆಟ್‌ ಬಳಸಿ ಉಗ್ರನ ಬೇಟೆ – ಏನಿದು ಯೋಧರ ಹೊಸ ತಂತ್ರ?

    – ಉಗ್ರನ ಬೇಟೆಯಾಡುವ ಮುನ್ನ ಬೀದಿ ನಾಯಿಗಳ ಬಾಯಿಮುಚ್ಚಿಸಿದ್ದು ಏಕೆ?

    ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ (Jammu-Kashmir) ಶ್ರೀನಗರದಲ್ಲಿ  ಶನಿವಾರ ಪಾಕ್ ಮೂಲದ ಲಷ್ಕರ್ ಉಗ್ರ ಸಂಘಟನೆಯ ಕಮಾಂಡರ್ ಉಸ್ಮಾನ್ ಭಾಯಿಯನ್ನು (Usman Bhai) ಯೋಧರು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದು ಶ್ರೀನಗರ ಸಿಟಿಯಲ್ಲಿ 2 ವರ್ಷದಲ್ಲಿ ನಡೆದ ಮೊದಲ ಉಗ್ರ ನಿಗ್ರಹ ಕಾರ್ಯಾಚರಣೆ ಆಗಿದೆ.

    ಉಸ್ಮಾನ್ ಹತ್ಯೆಯಲ್ಲಿ ಕುರುಕುಲು ತಿಂಡಿಯಾದ ‘ಬಿಸ್ಕೆಟ್’ ಮಹತ್ವದ ಪಾತ್ರ ವಹಿಸಿದೆ. ಆತ ವಾಸವಿದ್ದ ಸ್ಥಳದಲ್ಲಿ ಅಪಾರ ಸಂಖ್ಯೆಯಲ್ಲಿ ಬೀದಿ ನಾಯಿಗಳು ಇದ್ದು, ಅವುಗಳ ಬೊಗಳುವಿಕೆಯಿಂದ ಉಗ್ರ ಎಚ್ಚೆತ್ತುಕೊಂಡು ಪರಾರಿಯಾಗುವ ಸಾಧ್ಯತೆಯಿತ್ತು. ಹೀಗಾಗಿ ಯೋಧರು ʼಬಿಸ್ಕೆಟ್‌ʼ ನೀಡಿ ಬೊಗಳುವ ನಾಯಿಗಳ ಬಾಯಿ ಮುಚ್ಚಿಸಿ ತಮ್ಮ ಗುರಿ ತಲುಪುವಲ್ಲಿ ಯಶಸ್ವಿ ಆಗಿದ್ದಾರೆ. ಇದನ್ನೂ ಓದಿ: ಆನೇಕಲ್‌ನಲ್ಲಿ ಡಬಲ್ ಬ್ಯಾರಲ್ ಗನ್ ಸದ್ದು – ಜಗಳ ಬಿಡಿಸಲು ಹೋದವನಿಗೆ ಗುಂಡೇಟು!

    ಹತ್ಯೆ ಹೇಗೆ?:
    ಇನ್ಸ್ಪೆಕ್ಟರ್ ಮನ್ಸೂರ್ ವಾನಿ ಹತ್ಯೆ ಸೇರಿ ಹಲವು ಪ್ರಕರಣಗಳಲ್ಲಿ ಉಸ್ಮಾನ್ ಭಾಗಿಯಾಗಿದ್ದ, ಹಲವು ವರ್ಷಗಳಿಂದ ರಾಜ್ಯದಲ್ಲಿ ಸಕ್ರಿಯನಾಗಿದ್ದ ಉಸ್ಮಾನ್, ಶ್ರೀನಗರದ ಜನನಿಬಿಡ ಖಾನ್ಯಾರ್ ಎಂಬಲ್ಲಿ ಅವಿತುಕೊಂಡಿದ್ದಾನೆ ಎಂಬ ಖಚಿತ ಮಾಹಿತಿ ಪಡೆದ ಭದ್ರತಾ ಪಡೆಗಳು ಶನಿವಾರ ಕಾರ್ಯಾಚರಣೆ ನಡೆಸಿವೆ. ಈ ವೇಳೆ ನಡೆದ ಕಾರ್ಯಾಚರಣೆಯಲ್ಲಿ ಆತನನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ. ನಾಯಿಗಳು ಬೊಗಳುವುದನ್ನು ತಪ್ಪಿಸಲು ಬಿಸ್ಕೆಟ್ ಬಳಸಿವೆ. ಇದನ್ನೂ ಓದಿ: ಕೇರಳದಲ್ಲೂ ವಕ್ಫ್ ವಿವಾದ – ಒಂದೇ ಗ್ರಾಮದ 610 ಕುಟುಂಬಗಳಿಗೆ ಆಸ್ತಿ ಕಳೆದುಕೊಳ್ಳುವ ಭೀತಿ

    ಇದು ಶ್ರೀನಗರ (Srinagar) ಸಿಟಿಯಲ್ಲಿ 2 ವರ್ಷದಲ್ಲಿ ನಡೆದ ಮೊದಲ ಕಾರ್ಯಾಚರಣೆ ಆಗಿದ್ದು, ಈತನ ಹತ್ಯೆ ನಮಗೆ ಒಂದು ದೊಡ್ಡ ಯಶಸ್ಸು. ಲಷ್ಕರ್‌ನ ಅತಿ ಹಿರಿಯ ಕಮಾಂಡರ್ ಆಗಿದ್ದ ಆತನ ಹತ್ಯೆ ಲಷ್ಕರ್‌ಗೆ ದೊಡ್ಡ ಹೊಡೆತ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಇದೇ ವೇಳೆ, ಅನಂತ್‌ನಾಗ್ ಜಿಲ್ಲೆಯಲ್ಲಿ ನಡೆದ ಮತ್ತೊಂದು ದಾಳಿಯಲ್ಲಿ ಜೈಷ್ ಎ ಮೊಹಮ್ಮದ್ ಸಂಘಟನೆಗೆ ಸೇರಿದ ಇಬ್ಬರು ಉಗ್ರರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ. ಇದನ್ನೂ ಓದಿ: ವಕ್ಫ್‌ ಆಸ್ತಿ ವಿವಾದದ ಕಿಚ್ಚು – ರಾಜ್ಯಾದ್ಯಂತ ಇಂದು ಬಿಜೆಪಿ ಪ್ರತಿಭಟನೆ

  • ಜಮ್ಮು-ಕಾಶ್ಮೀರ| ಕಾರ್ಮಿಕನ ಮೇಲೆ ಭಯೋತ್ಪಾದಕರ ಗುಂಡಿನ ದಾಳಿ

    ಜಮ್ಮು-ಕಾಶ್ಮೀರ| ಕಾರ್ಮಿಕನ ಮೇಲೆ ಭಯೋತ್ಪಾದಕರ ಗುಂಡಿನ ದಾಳಿ

    – ಒಂದೇ ವಾರದಲ್ಲಿ ಮೂರನೇ ದಾಳಿ

    ಶ್ರೀನಗರ: ಜಮ್ಮು (Jammu) ಮತ್ತು ಕಾಶ್ಮೀರದ (Kashmir) ತ್ರಾಲ್‌ನಲ್ಲಿ ವಲಸೆ ಕಾರ್ಮಿಕನ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ಒಂದೇ ವಾರದಲ್ಲಿ ಕಾಶ್ಮೀರದಲ್ಲಿ ವಲಸೆ ಕಾರ್ಮಿಕರ ಮೇಲೆ ನಡೆಯುತ್ತಿರುವ ಮೂರನೇ ದಾಳಿ ಇದಾಗಿದ್ದು, ಕಾರ್ಮಿಕರು ಆತಂಕದಲ್ಲಿದ್ದಾರೆ.

    ಭಯೋತ್ಪಾದಕರು ಉತ್ತರ ಪ್ರದೇಶದ (Uttar Pradesh) ಬಿಜ್ನೋರ್ ಮೂಲದ ಶುಭಂ ಕುಮಾರ್ ಮೇಲೆ ದಾಳಿ ನಡೆಸಿದ್ದಾರೆ. ತ್ರಾಲ್‌ನ ಬಟಗುಂಡ್ ಗ್ರಾಮದಲ್ಲಿ ಭಯೋತ್ಪಾದಕರು ಗುಂಡು ಹಾರಿಸಿದ ಬಳಿಕ ಶುಭಂ ಕುಮಾರ್ ಕೈಗೆ ಗಾಯಗಳಾಗಿವೆ. ಗಾಯಾಳು ಕಾರ್ಮಿಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಇದನ್ನೂ ಓದಿ: ಸಿಜೆಐ ಸೋಗಿನಲ್ಲಿ ವೃದ್ಧನಿಗೆ 1.26 ಕೋಟಿ ವಂಚನೆ – ನಾಲ್ವರು ಆರೋಪಿಗಳ ಬಂಧನ

    ಅ.20ರಂದು ಗಂಡರ್ಬಾಲ್ ಜಿಲ್ಲೆಯ ಸೋನಾಮಾರ್ಗ್ ಪ್ರದೇಶದ ನಿರ್ಮಾಣ ಸ್ಥಳದಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ ನಂತರ ಒಬ್ಬ ವೈದ್ಯ ಮತ್ತು ಆರು ವಲಸೆ ಕಾರ್ಮಿಕರು ಸೇರಿದಂತೆ ಏಳು ಜನರು ಸಾವನ್ನಪ್ಪಿದ್ದರು. ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾದ ಅಂಗಸಂಸ್ಥೆ ದಿ ರೆಸಿಸ್ಟೆನ್ಸ್ ಫ್ರಂಟ್ ಈ ದಾಳಿಯ ಹೊಣೆಯನ್ನು ಹೊತ್ತುಕೊಂಡಿತ್ತು. ಇದನ್ನೂ ಓದಿ: ಪರಿಷತ್‌ ಉಪ ಚುನಾವಣೆ| ಬಿಜೆಪಿಯ ಕಿಶೋರ್ ಕುಮಾರ್‌ಗೆ ಭರ್ಜರಿ ಜಯ

    ಅ.18 ರಂದು ಶೋಪಿಯಾನ್ ಜಿಲ್ಲೆಯಲ್ಲಿ ಭಯೋತ್ಪಾದಕರು ಬಿಹಾರದ ವಲಸೆ ಕಾರ್ಮಿಕನ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಇದನ್ನೂ ಓದಿ: ಪೂಜಾ ಕೈಂಕರ್ಯದೊಂದಿಗೆ ಹಾಸನಾಂಬೆ ಗರ್ಭಗುಡಿ ಓಪನ್ – ನ.3ಕ್ಕೆ ಜಾತ್ರಾ ಮಹೋತ್ಸವ

  • ಜಮ್ಮು-ಕಾಶ್ಮೀರದ ಉಗ್ರದಾಳಿಯ ಹೊಣೆ ಹೊತ್ತ ಪಾಕ್ ಟಿಆರ್‌ಎಫ್ ಸಂಘಟನೆ

    ಜಮ್ಮು-ಕಾಶ್ಮೀರದ ಉಗ್ರದಾಳಿಯ ಹೊಣೆ ಹೊತ್ತ ಪಾಕ್ ಟಿಆರ್‌ಎಫ್ ಸಂಘಟನೆ

    ಶ್ರೀನಗರ: 6 ಮಂದಿ ಕಾರ್ಮಿಕರು ಸೇರಿದಂತೆ ಓರ್ವ ವೈದ್ಯನ ಮೇಲೆ ಭಾನುವಾರ ನಡೆದ ಭಯೋತ್ಪಾದಕ ದಾಳಿಯ ಜವಾಬ್ದಾರಿಯನ್ನು ಪಾಕಿಸ್ತಾನ (Pakistan) ಮೂಲದ ಭಯೋತ್ಪಾದಕ ಸಂಘಟನೆ ರೆಸಿಸ್ಟೆನ್ಸ್ ಫ್ರಂಟ್ (TRF) ವಹಿಸಿಕೊಂಡಿದೆ ಎಂದು ಸೇನಾ ಅಧಿಕೃತ ಮೂಲಗಳು ದೃಢಪಡಿಸಿವೆ.

    ಟಿಆರ್‌ಎಫ್ ಮುಖ್ಯಸ್ಥ ಶೇಖ್ ಸಜ್ಜದ್ ಗುಲ್ ಈ ದಾಳಿಯ ಮಾಸ್ಟರ್ ಮೈಂಡ್ ಆಗಿದ್ದು, ಗುಂಪಿನ ಸ್ಥಳೀಯ ಘಟಕವು ಆತನ ಆದೇಶದಂತೆ ಕಾಶ್ಮೀರಿಗಳು ಮತ್ತು ಕಾಶ್ಮೀರೇತರರನ್ನು ಗುರಿಯಾಗಿಸಿ ಮೊದಲ ಬಾರಿಗೆ ದಾಳಿ ನಡೆಸಿದೆ. ಟಿಆರ್‌ಎಫ್ ಕಾಶ್ಮೀರದಲ್ಲಿ ಸಕ್ರಿಯವಾಗಿದೆ ಮತ್ತು ಕಳೆದ ಒಂದೂವರೆ ವರ್ಷಗಳಲ್ಲಿ ಕಾಶ್ಮೀರಿ ಪಂಡಿತರು, ಸಿಖ್ಖರು ಮತ್ತು ಸ್ಥಳೀಯರಲ್ಲದವರನ್ನು ಗುರಿಯಾಗಿಸಿಕೊಂಡಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಟಿಕೆಟ್ ಸಿಗದಿದ್ದರೆ ಸ್ವತಂತ್ರವಾಗಿ ಸ್ಪರ್ಧಿಸುವ ಯೋಚನೆ: ಸಿಪಿ ಯೋಗೇಶ್ವರ್

    ಕೇಂದ್ರ ಗೃಹ ಸಚಿವಾಲಯದ ಮೂಲಗಳ ಪ್ರಕಾರ, ಭಯೋತ್ಪಾದನಾ ನಿಗ್ರಹ ಘಟಕದ ನಾಲ್ವರು ಸದಸ್ಯರ ತಂಡ, ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಇಂದು ಮಧ್ಯಾಹ್ನ ದಾಳಿ ನಡೆದ ಸ್ಥಳಕ್ಕೆ ಭೇಟಿ ನೀಡಲಿದೆ. ಭಾನುವಾರದ ದಾಳಿಯ ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಡಿಕೆಶಿ ವಿರುದ್ಧದ ಅಕ್ರಮ ಆಸ್ತಿಗಳಿಕೆ ಕೇಸ್‌ – ಲೋಕಾ ತನಿಖೆ ಪ್ರಶ್ನಿಸಿ ಸಿಬಿಐನಿಂದ ಸುಪ್ರೀಂಗೆ ಅರ್ಜಿ ಸಲ್ಲಿಕೆ

    ಭಾನುವಾರ ಸಂಜೆ ಜಮ್ಮು ಮತ್ತು ಕಾಶ್ಮೀರದ (Jammu-Kashmir) ಗಂದರ್‌ಬಾಲ್ ಜಿಲ್ಲೆಯ ಸೋನಾಮಾರ್ಗ್ ಪ್ರದೇಶದಲ್ಲಿ ಆರು ಮಂದಿ ಕಾರ್ಮಿಕರನ್ನು ಮತ್ತು ವೈದ್ಯರೊಬ್ಬರನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಾಥಮಿಕ ಮೂಲಗಳ ಪ್ರಕಾರ, ದಾಳಿಗೊಳಗಾದ ಕಾರ್ಮಿಕರು ಝಡ್ ಮೋರ್ಹ್ ಸುರಂಗದಲ್ಲಿ ಕೆಲಸ ಮಾಡುವ ತಂಡದ ಭಾಗವಾಗಿದ್ದರು. ಈ ಸುರಂಗ ಮಾರ್ಗವು ಗಗನೀರ್‌ನಿಂದ ಮಧ್ಯ ಕಾಶ್ಮೀರದ ಗಂದರ್ಬಾಲ್ ಜಿಲ್ಲೆಯ ಸೋನಾಮಾರ್ಗ್ಗೆ ಸಂಪರ್ಕಿಸುತ್ತದೆ. ಇದನ್ನೂ ಓದಿ: ದಾಂಪತ್ಯ ವಿರಸ- ಮೂವರು ಮಕ್ಕಳಿಗೆ ವಿಷ ಕುಡಿಸಿ, ಆತ್ಮಹತ್ಯೆಗೆ ಯತ್ನಿಸಿದ ತಾಯಿ

    ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ (Rahul Gandhi) ದಾಳಿಯನ್ನು ಖಂಡಿಸಿದ್ದು, ಜಮ್ಮು ಮತ್ತು ಕಾಶ್ಮೀರದ ಗಂದರ್‌ಬಾಲ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ವೈದ್ಯರು ಮತ್ತು ವಲಸೆ ಕಾರ್ಮಿಕರು ಸೇರಿದಂತೆ ಅನೇಕ ಜನರ ಹತ್ಯೆಯು ಅತ್ಯಂತ ಹೇಡಿತನ ಮತ್ತು ಅಕ್ಷಮ್ಯ ಅಪರಾಧವಾಗಿದೆ. ಭಯೋತ್ಪಾದಕರ ಈ ದಿಟ್ಟತನವು ಜಮ್ಮು ಮತ್ತು ಕಾಶ್ಮೀರದ ಜನರ ನಂಬಿಕೆಯನ್ನು ಎಂದಿಗೂ ಮುರಿಯಲು ಸಾಧ್ಯವಿಲ್ಲ. ಭಯೋತ್ಪಾದನೆ ವಿರುದ್ಧದ ಈ ಹೋರಾಟದಲ್ಲಿ ಇಡೀ ದೇಶವು ಒಗ್ಗೂಡಿದೆ ಎಂದು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಲಾರಿ-ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು