Tag: kashmir

  • ಕಾಶ್ಮೀರಿ ಪಂಡಿತನ ಹತ್ಯೆ ಬಳಿಕ ಮತ್ತಷ್ಟು ದಾಳಿಗಳ ಎಚ್ಚರಿಕೆ

    ಕಾಶ್ಮೀರಿ ಪಂಡಿತನ ಹತ್ಯೆ ಬಳಿಕ ಮತ್ತಷ್ಟು ದಾಳಿಗಳ ಎಚ್ಚರಿಕೆ

    ಶ್ರೀನಗರ: ಇಂದು ನಡೆದ ಕಾಶ್ಮೀರಿ ಪಂಡಿತನ ಹತ್ಯೆ ಬಳಿಕ ಮತ್ತಷ್ಟು ದಾಳಿಗಳು ನಡೆಯುವ ಸಾಧ್ಯತೆಯಿದೆ ಎಂದು ಕೇಂದ್ರ ಗೃಹ ಸಚಿವಾಲಯ ಎಚ್ಚರಿಕೆಯನ್ನು ನೀಡಿದೆ.

    ಸ್ವಾತಂತ್ರ್ಯೋತ್ಸವದಂದು ಕಾಶ್ಮೀರದಲ್ಲಿ ರಾಷ್ಟ್ರ ಧ್ವಜಾರೋಹಣ ಹಾಗೂ ವಿವಿಧ ಸ್ಥಳಗಳಲ್ಲಿ ತಿರಂಗಾ ರ‍್ಯಾಲಿಗಳನ್ನು ಮಾಡಿರುವ ಹಿನ್ನೆಲೆಯಲ್ಲಿ ಭಯೋತ್ಪಾದಕ ಸಂಘಟನೆಗಳು ಮತ್ತೆ ದಾಳಿ ನಡೆಸುವ ಸಾಧ್ಯತೆಯಿದೆ. ಅದರಲ್ಲೂ ವಿಶೇಷವಾಗಿ ಕಾಶ್ಮೀರೇತರರ ಮೇಲೆ ದಾಳಿ ಆಗಬಹುದು ಎಂದು ಕೇಂದ್ರ ಸಚಿವಾಲಯದ ಮೂಲಗಳು ತಿಳಿಸಿವೆ.

    ಇಂದು ಶೋಪಿಯಾನ್ ಜಿಲ್ಲೆಯ ಸೇಬಿನ ತೋಟದಲ್ಲಿ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ಕಾಶ್ಮೀರಿ ಪಂಡಿತನೊಬ್ಬನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಆತನ ಸಹೋದರ ದಾಳಿ ವೇಳೆ ಗಾಯಗೊಂಡಿದ್ದರು. ಈ ದಾಳಿಯನ್ನು ಅಲ್ ಬದ್ರ್‍ನ ಶಾಖೆಯಾದ ಕಾಶ್ಮೀರ ಸ್ವಾತಂತ್ರ್ಯ ಹೋರಾಟಗಾರರು ಮಾಡಿದ್ದಾರೆ ಎನ್ನಲಾಗುತ್ತಿದ್ದು, ತಿರಂಗಾ ರ್ಯಾಲಿಗಳಲ್ಲಿ ಭಾಗವಹಿಸಲು ಜನರನ್ನು ಪ್ರೋತ್ಸಾಹಿಸಿದ್ದಕ್ಕಾಗಿ ಈ ಪಂಡಿತ ಸಹೋದರರ ಮೇಲೆ ದಾಳಿ ನಡೆಸಲಾಗಿದೆ ಎನ್ನಲಾಗಿದೆ.

    1990ರ ದಶಕದಲ್ಲಿ ಕಾಶ್ಮೀರದಿಂದ ಎಂದಿಗೂ ವಲಸೆ ಹೋಗದ ಕುಟುಂಬಗಳಲ್ಲಿ ಹತ್ಯೆಯಾದ ಸುನಿಲ್ ಕುಮಾರ್ ಅವರ ಕುಟುಂಬವೂ ಒಂದಾಗಿತ್ತು. ಈ ಹಿನ್ನೆಲೆಯಲ್ಲಿ ಅವರ ಮೇಲೆ ದಾಳಿ ನಡೆಸಲಾಗಿದೆ. ಇದನ್ನೂ ಓದಿ: ಕಾಶ್ಮೀರವನ್ನು ಬಿಟ್ಟು ಬನ್ನಿ: ಕಾಶ್ಮೀರಿ ಪಂಡಿತರ ಸಂಘರ್ಷ ಸಮಿತಿ ಒತ್ತಾಯ

    Kashmiri_Pandits

    ಘಟನೆಗೆ ಸಂಬಂಧಿಸಿ ಗುಪ್ತಚರ ಇಲಾಖೆ ಇನ್ನಷ್ಟು ಮಾಹಿತಿ ನೀಡಿದ್ದು, ಗಡಿಯಿಂದ ಹೆಚ್ಚಿನ ಪ್ರಮಾಣದಲ್ಲಿ ಶಸ್ತ್ರಾಸ್ತ್ರಗಳು ಹಾಗೂ ಮದ್ದು ಗುಂಡುಗಳು ಕಳ್ಳ ಸಾಗಣೆಯಾಗಿವೆ. ಇದರಿಂದಾಗಿ ಮುಂಬರುವ ದಿನಗಳಲ್ಲಿ ಹತ್ಯೆಗಳು ಹೆಚ್ಚಾಗುವ ಸಾಧ್ಯತೆಯಿದೆ. ಈ ರೀತಿಯ ಘಟನೆಗಳನ್ನು ತರಬೇತಿ ಇಲ್ಲದವರೂ ಸೇರಿದಂತೆ ಯಾರು ಬೇಕಾದರೂ ನಡೆಸಬಹುದಾಗಿದೆ. ಈ ಉಗ್ರರು ಜನಪ್ರತಿನಿಧಿಗಳನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಗೃಹ ಸಚಿವಾಲಯ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಕಾಶ್ಮೀರದಲ್ಲಿ ಮತ್ತೆ ಪಂಡಿತರು ಟಾರ್ಗೆಟ್ – ಓರ್ವನ ಹತ್ಯೆ, ಮತ್ತೋರ್ವ ಗಂಭೀರ

    Live Tv
    [brid partner=56869869 player=32851 video=960834 autoplay=true]

  • ಕಾಶ್ಮೀರಿ ಪಂಡಿತರ‍್ಯಾರು ಕಣಿವೆಯನ್ನು ತೊರೆದಿಲ್ಲ: ಕೇಂದ್ರ ಸಚಿವ

    ಕಾಶ್ಮೀರಿ ಪಂಡಿತರ‍್ಯಾರು ಕಣಿವೆಯನ್ನು ತೊರೆದಿಲ್ಲ: ಕೇಂದ್ರ ಸಚಿವ

    ನವದೆಹಲಿ: 2022ರ ಅವಧಿಯಲ್ಲಿ ಕಾಶ್ಮೀರಿ ಪಂಡಿತರು ಯಾರೂ ಕಣಿವೆಯನ್ನು ತೊರೆದಿಲ್ಲ ಎಂದು ಕೇಂದ್ರ ಸಚಿವ ನಿತ್ಯಾನಂದ ರೈ ತಿಳಿಸಿದರು.

    ಸಂಸತ್ತಿನಲ್ಲಿ ಮಾತನಾಡಿದ ಅವರು, 2019ರ ಅಗಸ್ಟ್‌ನಲ್ಲಿ 320ನೇ ವಿಧಿಯನ್ನು ರದ್ದುಪಡಿಸಿದ ನಂತರ ಯಾವುದೇ ಕಾಶ್ಮೀರಿ ಪಂಡಿತರು ವಲಸೆ ಹೋಗಿಲ್ಲ ಎಂದು ಸ್ಪಷ್ಟಪಡಿಸಿದರು.

    ಕಾಶ್ಮೀರಿ ಪಂಡಿತರ ಮೇಲೆ ಭಯೋತ್ಪಾದಕರಿಂದ ನಿರಂತರವಾಗಿ ನಡೆಯುತ್ತಿರುವ ಹತ್ಯೆಗಳ ಹಿನ್ನೆಲೆಯಲ್ಲಿ ಕಾಶ್ಮೀರಿ ಪಂಡಿತರು ಕಣಿವೆ ತೊರೆಯುತ್ತಿದ್ದೇವೆ ಎಂದು ಪಂಡಿತ ಕುಟುಂಬಗಳು ಕಾಶ್ಮೀರವನ್ನು ತೊರೆಯುತ್ತಿರುವ ವೀಡಿಯೋವೊಂದು ವೈರಲ್ ಆಗಿತ್ತು. ಜೊತೆಗೆ ಸರ್ಕಾರವು ಜನರನ್ನು ರಕ್ಷಿಸುವಲ್ಲಿ ವಿಫಲವಾಗಿದೆ ಎಂದು ದೂರಿದ್ದರು. ಅಷ್ಟೇ ಅಲ್ಲದೇ ಅನೇಕರು ಸರ್ಕಾರಿ ಉದ್ಯೋಗಕ್ಕೆ ರಾಜೀನಾಮೆ ನೀಡುವುದಾಗಿಯೂ ತಿಳಿಸಿದ್ದರು. ಇದನ್ನೂ ಓದಿ: ಹತ್ಯೆಯ ದಿನವೇ ಮುಸ್ಲಿಂ ಸ್ನೇಹಿತನ ಗೃಹಪ್ರವೇಶಕ್ಕೆ ಹೋಗಿದ್ದ ಪ್ರವೀಣ್ ನೆಟ್ಟಾರ್!

    ಇದಕ್ಕೆ ಪ್ರತಿಕ್ರಿಯಿಸಿರುವ ಅವರು, ಪ್ರಧಾನಿ ಅಭಿವೃದ್ಧಿ ಪ್ಯಾಕೇಜ್(ಪಿಎಂಡಿಪಿ) ಅಡಿಯಲ್ಲಿ ಕೆಲಸ ಮಾಡುವ ಯಾವುದೇ ಕಾಶ್ಮೀರಿ ಪಂಡಿತರು ರಾಜೀನಾಮೆಯನ್ನು ನೀಡಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಸದನದಲ್ಲಿ ಕಾಗದ ಹಾರಿಸಿದ್ದ ಆಪ್ ಸಂಸದ ಅಮಾನತು

    Live Tv
    [brid partner=56869869 player=32851 video=960834 autoplay=true]

  • ಪಾಕ್ ಆಕ್ರಮಿತ ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿಯೇ ಇರುತ್ತೆ: ರಾಜನಾಥ್ ಸಿಂಗ್

    ಪಾಕ್ ಆಕ್ರಮಿತ ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿಯೇ ಇರುತ್ತೆ: ರಾಜನಾಥ್ ಸಿಂಗ್

    ಶ್ರೀನಗರ: ಪಾಕ್ ಆಕ್ರಮಿತ ಕಾಶ್ಮೀರ(ಪಿಒಕೆ) ಭಾರತದ ಅವಿಭಾಜ್ಯ ಅಂಗವಾಗಿಯೇ ಇರುತ್ತದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದರು.

    ಜಮ್ಮುವಿನಲ್ಲಿ ನಡೆದ ‘ಕಾರ್ಗಿಲ್ ವಿಜಯ್ ದಿವಸ್’ ಕಾರ್ಯಕ್ರಮಕ್ಕೆ ರಾಜನಾಥ್ ಸಿಂಗ್ ಆಗಮಿಸಿದ್ದರು. ಈ ವೇಳೆ ವೇದಿಕೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಿಒಕೆ ಕುರಿತು ಸಂಸತ್ತಿನಲ್ಲಿ ಅಂಗೀಕರಿಸಿದ ನಿರ್ಣಯಕ್ಕೆ ನಾವು ಬದ್ಧರಾಗಿದ್ದೇವೆ. ಪಿಒಕೆ ಭಾರತದ ಅವಿಭಾಜ್ಯ ಅಂಗವಾಗಿದೆ ಮತ್ತು ಅದು ಯಾವಾಗಲೂ ಉಳಿಯುತ್ತದೆ. ಬಾಬಾ ಅಮರನಾಥ(ಶಿವನ ರೂಪ) ಮತ್ತು ಶಾರದಾ ಆರ್ಶಿವಾದ ಭಾರತದ ಮೇಲೆ ಇರಲು ಯಾವ ಶಕ್ತಿ ನಮ್ಮನ್ನು ನಿಯಂತ್ರಣ ಮಾಡಲು ಸಾಧ್ಯ ಎಂದು ಪ್ರಶ್ನೆ ಮಾಡಿದರು. ಇದನ್ನೂ ಓದಿ: ಯಕ್ಷಗಾನದ ಭಾಗವತಿಕೆ ಮೂಲಕ ರಾಷ್ಟ್ರಪತಿಗೆ ಸ್ವಾಗತ ಕೋರಿದ ಬಾಲೆ

    J&K is integral part of India, says Rajnath Singh on 'Kargil Vijay Divas' - The Hindu

    ಸಮರ್ಥ ಮತ್ತು ಆತ್ಮವಿಶ್ವಾಸದ ನವ ಭಾರತದ ಮೇಲೆ ದುಷ್ಟಕಣ್ಣುಗಳನ್ನು ಹಾಕುವ ಯಾರಿಗಾದರೂ ಸೂಕ್ತವಾದ ಪ್ರತ್ಯುತ್ತರವನ್ನು ನೀಡಲು ಸಜ್ಜಾಗುತ್ತಿದೆ. ಭಾರತವನ್ನು ಜಾಗತಿಕ ಮಹಾಶಕ್ತಿಯನ್ನಾಗಿ ಮಾಡುವುದು ಮಡಿದ ನಮ್ಮ ವೀರರಿಗೆ ಸೂಕ್ತವಾದ ಗೌರವವಾಗಿದೆ ಎಂದು ಕರೆ ಕೊಟ್ಟರು.

    ಭಾನುವಾರ ಜಮ್ಮುವಿನಲ್ಲಿ ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ಸ್ಮರಣಾರ್ಥ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ರಾಜನಾಥ್ ಸಿಂಗ್ ಅವರು ಭಾಗಿಯಾಗಿದ್ದು, ಸ್ವಾತಂತ್ರ್ಯದ ನಂತರ ದೇಶ ಸೇವೆಯಲ್ಲಿ ಪ್ರಾಣವನ್ನು ಅರ್ಪಿಸಿದ ಸ್ವಾತಂತ್ರ್ಯ ಹೋರಾಟಗಾರರು ಮತ್ತು ಸಶಸ್ತ್ರ ಪಡೆಗಳ ಸಿಬ್ಬಂದಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಇದನ್ನೂ ಓದಿ:  ಬಿಗಿ ಭದ್ರತೆ ನಡೆದ ಮೊದಲ ಅಗ್ನಿಪಥ್ ಏರ್‌ಫೋರ್ಸ್ ನೇಮಕಾತಿ ಪರೀಕ್ಷೆ

    Live Tv
    [brid partner=56869869 player=32851 video=960834 autoplay=true]

  • ಹಜ್‍ನಿಂದ ಬಂದ ಯಾತ್ರಾರ್ಥಿಗಳನ್ನು ಅದ್ಧೂರಿಯಾಗಿ ಸ್ವಾಗತಿಸಿದ ಕಾಶ್ಮೀರಿ ಹಿಂದೂಗಳು

    ಹಜ್‍ನಿಂದ ಬಂದ ಯಾತ್ರಾರ್ಥಿಗಳನ್ನು ಅದ್ಧೂರಿಯಾಗಿ ಸ್ವಾಗತಿಸಿದ ಕಾಶ್ಮೀರಿ ಹಿಂದೂಗಳು

    ಶ್ರೀನಗರ: ಸೌದಿ ಅರೇಬಿಯಾದ ಮೆಕ್ಕಾದ ಹಜ್ ಯಾತ್ರೆಯಿಂದ ಹಿಂದಿರುಗಿರುವ ಯಾತ್ರಾರ್ಥಿಗಳನ್ನು ಸ್ಥಳೀಯ ಕಾಶ್ಮೀರಿ ಹಿಂದೂಗಳು ಹಾಡನ್ನು ಹಾಡಿ ಆರತಿ ಮಾಡುವ ಮೂಲಕ ಶ್ರೀನಗರದಲ್ಲಿ ಅದ್ಧೂರಿಯಾಗಿ ಬರಮಾಡಿಕೊಂಡರು.

    ಶ್ರೀನಗರ ವಿಮಾನ ನಿಲ್ದಾಣದಲ್ಲಿ ಹಜ್ ಯಾತ್ರೆ ಮುಗಿಸಿ ಬಂದ ಇಸ್ಲಾಮಿಕ್ ಯಾತ್ರಾರ್ಥಿಗಳನ್ನು ಕಾಶ್ಮೀರಿ ಪಂಡಿತರು ಅದ್ಧೂರಿಯಾಗಿ ಬರಮಾಡಿಕೊಂಡಿದ್ದು, ಗುಲಾಬಿ ಹೂವುಗಳನ್ನು ನೀಡಿ ಹಸ್ತಾಲಾಘವ ಮಾಡಿದರು. ಈ ಮೂಲಕ ಧಾರ್ಮಿಕ ಸಾಮರಸ್ಯವನ್ನು ಮೆರೆದಿದ್ದಾರೆ. ಅಷ್ಟೇ ಅಲ್ಲದೇ ಪ್ರವಾದಿಯ ಹಾಡನ್ನು ಹಾಕಿ ಆರತಿ ಎತ್ತಿ ಯಾತ್ರಾರ್ಥಿಗಳನ್ನು ಸ್ವಾಗತಿಸಿದರು. ಇದನ್ನೂ ಓದಿ: ಭಾರತದ ಗಡಿಯಲ್ಲಿ ಪಾಕ್‌ನ ಡ್ರೋನ್‍ ಹಾರಾಟ

    ಈ ವೀಡಿಯೋವನ್ನು ಉತ್ತರಪ್ರದೇಶದ ಶಾಸಕ ಅಬ್ಬಾಸ್ ಬಿನ್ ಮುಖ್ತಾರ್ ಅನ್ಸಾರಿ ಟ್ವೀಟ್‍ನಲ್ಲಿ ಹಂಚಿಕೊಂಡಿದ್ದಾರೆ. ಶ್ರೀನಗರ ವಿಮಾನ ನಿಲ್ದಾಣದಿಂದ ಸಣ್ಣ ವೀಡಿಯೊ ಕ್ಲಿಪ್ ಅನ್ನು ಹಂಚಿಕೊಂಡ ಉತ್ತರ ಪ್ರದೇಶದ ಶಾಸಕ ಅಬ್ಬಾಸ್ ಬಿನ್ ಮುಖ್ತಾರ್ ಅನ್ಸಾರಿ, ಕಾಶ್ಮೀರಿ ಪಂಡಿತರು ವಿಮಾನ ನಿಲ್ದಾಣದ ಹೊರಗೆ ಸಾಲಿನಲ್ಲಿ ನಿಂತಿದ್ದರು. ಪ್ರವಾದಿ ಮೊಹಮ್ಮದ್ ಅವರನ್ನು ಶ್ಲಾಘಿಸುವ ನಾತ್ ಕವನವನ್ನು ಹಾಡಿ, ಯಾತ್ರೆಗೆ ಅಭಿನಂದನೆ ಸಲ್ಲಿಸಿದರು ಎಂದು ಶಾಸಕ ತಿಳಿಸಿದ್ದಾರೆ. ಇದನ್ನೂ ಓದಿ: ಹಿಂದಿ ಪ್ರೇಮದ ಉತ್ತುಂಗದಲ್ಲಿ ಕನ್ನಡದ ಕೊಲೆ ನಿಲ್ಲಿಸಿ – ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿ

    Live Tv
    [brid partner=56869869 player=32851 video=960834 autoplay=true]

  • ಕಾಶ್ಮೀರದಲ್ಲಿ ಸರಣಿ ಸ್ಫೋಟ- ಇಬ್ಬರು ಲಷ್ಕರ್ ಉಗ್ರರು ಅರೆಸ್ಟ್

    ಕಾಶ್ಮೀರದಲ್ಲಿ ಸರಣಿ ಸ್ಫೋಟ- ಇಬ್ಬರು ಲಷ್ಕರ್ ಉಗ್ರರು ಅರೆಸ್ಟ್

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಸರಣಿ ಸ್ಫೋಟಗಳ ಹಿಂದೆ ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾ(ಎಲ್‍ಇಟಿ) ಸಂಘಟನೆಯ ಕೈವಾಡವಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

    ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ನಡೆದ ಸರಣಿ ಸ್ಫೋಟಗಳ ಹಿಂದೆ ಪಾಕಿಸ್ತಾನ ಮೂಲದ ಎಲ್‍ಇಟಿ ಸಂಘಟನೆಯ ಕೈವಾಡವಿರುವುದು ಪೊಲೀಸರಿಗೆ ತಿಳಿದುಬಂದಿದೆ. ಈ ಹಿನ್ನೆಲೆ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿರುವಾಗಲೇ ಇಬ್ಬರನ್ನು ಬಂಧಿಸಿದ್ದು, ಪ್ರಸ್ತುತ ಪ್ರಮುಖ ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ: ಬರ್ತ್‍ಡೇ ಪಾರ್ಟಿ ಹಣಕ್ಕೆ ಕಿತ್ತಾಟ – 3ನೇ ಮಹಡಿಯಿಂದ ಬಿದ್ದ ವಿದ್ಯಾರ್ಥಿಗಳು, ಓರ್ವ ಸಾವು

    Pak-Primarily based Lashkar Behind Current Kashmir Explosions, 2 Arrested:  Police – Latest News, Breaking News Today – Bollywood, Cricket, Business,  Politics | Lokjanta

    ಜಮ್ಮುವಿನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ(ಎಡಿಜಿಪಿ) ಮುಖೇಶ್ ಸಿಂಗ್ ಈ ಕುರಿತು ಮಾತನಾಡಿದ್ದು, ಬಂಧಿತ ಆರೋಪಿಗಳಿಂದ ಐದು ಸುಧಾರಿತ ಸ್ಫೋಟಕ ಸಾಧನಗಳು(ಐಇಡಿ) ಸೇರಿದಂತೆ, ಸ್ಫೋಟಕ ವಸ್ತುಗಳ ಬೃಹತ್ ಸಂಗ್ರಹವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

    ಮಾಹಿತಿ ಆಧಾರದ ಮೇಲೆ ಆರೋಪಿಗಳನ್ನು ಹುಡುಕುತ್ತಿದ್ದೇವೆ. ರಜೌರಿಯ ಲಾರ್ಕೋಟಿ, ಟರ್ಗೈನ್, ಜಗ್ಲಾನೂ ಮತ್ತು ದ್ರಾಸ್ ಪ್ರದೇಶಗಳಲ್ಲಿ ವಿವಿಧ ಸ್ಥಳಗಳಲ್ಲಿ ಅನೇಕ ದಾಳಿಗಳು ನಡೆದಿದೆ. ಇಲ್ಲಿ ದೊರೆತ ಮಾಹಿತಿಗಳ ಆಧಾರದ ಮೇಲೆ ಶೋಧ ಕಾರ್ಯಾಚರಣೆಗಳನ್ನು ನಡೆಸುತ್ತಿದ್ದೇವೆ. ಇಬ್ಬರು ಶಂಕಿತರಾದ ಮೊಹಮ್ಮದ್ ಶಬೀರ್ ಮತ್ತು ದ್ರಾಜ್‍ನ ಮೊಹಮ್ಮದ್ ಸಾದಿಕ್‍ನನ್ನು ಬಂಧಿಸಲಾಗಿದೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ:  ಮಳೆ ಬಂದ್ರೆ ನೆಂದು ಹೋಗ್ತೇವೆ, ಸರಿಯಾದ ಶಾಲಾ ಕೊಠಡಿ ಕಟ್ಟಿಸಿಕೊಡಿ: ವಿದ್ಯಾರ್ಥಿಗಳ ಮನವಿ 

    KILLING CRIME

    ತನಿಖೆಯ ವೇಳೆ, ಮೂವರು ಆರೋಪಿಗಳಾದ ತಾಲಿಬ್ ಶಾ, ಬುಧಾಲ್ ಪ್ರದೇಶದ ದ್ರಾಜ್ ಗ್ರಾಮದ ಶಬೀರ್ ಮತ್ತು ಸಾದಿಕ್ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ ಎಂದು ಹೇಳಿದರು.

    Live Tv

  • ಕಾಶ್ಮೀರ ಬರಾಮುಲ್ಲಾದಲ್ಲಿ ಉಗ್ರನ ಎನ್‍ಕೌಂಟರ್

    ಕಾಶ್ಮೀರ ಬರಾಮುಲ್ಲಾದಲ್ಲಿ ಉಗ್ರನ ಎನ್‍ಕೌಂಟರ್

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಸೋಪೋರ್‌ನ ತುಲಿಬಲ್ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‍ಕೌಂಟರ್‌ನಲ್ಲಿ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ.

    ಬರಾಮುಲ್ಲಾ ಜಿಲ್ಲೆಯ ಸೋಪೋರ್ ಪ್ರದೇಶದ ತುಲಿಬಲ್ ಗ್ರಾಮದಲ್ಲಿ ಉಗ್ರನು ಅಡಗಿಕೊಂಡಿದ್ದಾನೆ ಎಂಬ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿದರು. ಈ ವೇಳೆ ಉಗ್ರ ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದ್ದರಿಂದ, ಯೋಧರು ಉಗ್ರನನ್ನು ಎನ್‍ಕೌಂಟರ್ ಮಾಡಿದ್ದಾರೆ. ಇದನ್ನೂ ಓದಿ: ಸ್ತ್ರಚಿಕಿತ್ಸೆ ವೇಳೆ ಮಗುವಿನ ತಲೆ ಕತ್ತರಿಸಿ ಹೊಟ್ಟೆಯಲ್ಲೇ ಬಿಟ್ಟ ಆಸ್ಪತ್ರೆ ಸಿಬ್ಬಂದಿ

    ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದ ತುಜ್ಜನ್ ಪ್ರದೇಶದಲ್ಲಿ ಮತ್ತೊಂದು ಎನ್‍ಕೌಂಟರ್ ವರದಿಯಾಗಿದೆ. ಅಲ್ಲದೇ ಪುಲ್ವಾಮಾದಲ್ಲಿ ಇಬ್ಬರು ಉಗ್ರರು ಸಿಕ್ಕಿಬಿದ್ದಿದ್ದಾರೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ. ಈ ಮುನ್ನ ಸೋಮವಾರ 24 ಗಂಟೆಗಳಲ್ಲಿ ಮೂವರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಎನ್‍ಕೌಂಟರ್ ಮಾಡಿದ್ದರು.  ಇದನ್ನೂ ಓದಿ: ಸಿಗಂಧೂರು ಚೌಡೇಶ್ವರಿ ದೇವಿಯ ದರ್ಶನ ಪಡೆದ ಸುಪ್ರೀಂಕೋರ್ಟ್ ನ್ಯಾ.ಬಿ.ವಿ.ನಾಗರತ್ನ ದಂಪತಿ

    Live Tv

  • ಜಮ್ಮು- ಕಾಶ್ಮೀರದಲ್ಲಿ ಎನ್‍ಕೌಂಟರ್ – ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಓರ್ವ ಹತ್ಯೆ

    ಜಮ್ಮು- ಕಾಶ್ಮೀರದಲ್ಲಿ ಎನ್‍ಕೌಂಟರ್ – ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಓರ್ವ ಹತ್ಯೆ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನಲ್ಲಿ ಭಾರತೀಯ ಸೇನಾಪಡೆ ಎನ್‍ಕೌಂಟರ್ ನಡೆಸಿ ಹಿಜ್ಬ್-ಉಲ್-ಮುಜಾಹಿದ್ದೀನ್ (ಎಚ್‍ಎಂ) ಉಗ್ರ ಸಂಘಟನೆಗೆ ಸೇರಿದ ಓರ್ವ ಭಯೋತ್ಪಾದಕನನ್ನು ಹತ್ಯೆಗೈದಿದೆ ಎಂದು ಕಾಶ್ಮೀರ ವಲಯ ಪೊಲೀಸರು ಶನಿವಾರ ತಿಳಿಸಿದ್ದಾರೆ.

    ಕುಲ್ಗಾಂನ ಖಾಂಡಿಪೋರಾದಲ್ಲಿ ಉಗ್ರರು ಅಡಗಿ ಕುಳಿತಿರುವ ಬಗ್ಗೆ ಮಾಹಿತಿ ದೊರೆತ ಹಿನ್ನೆಲೆ ಇಂದು ಮುಂಜಾನೆ ಭಾರತೀಯ ಸೇನಾಪಡೆ ಕಾರ್ಯಾಚರಣೆ ನಡೆಸಲು ಆರಂಭಿಸಿದರು.

    ಈ ವೇಳೆ ಅಡಗಿ ಕುಳಿತಿದ್ದ ಉಗ್ರರು ಹಾಗೂ ಸೈನಿಕರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಓರ್ವ ಉಗ್ರನ್ನನು ಸೇನಾಪಡೆ ಎನ್ಕೌಂಟರ್ ಮಾಡಿರುವುದಾಗಿ ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮೂಲಕ ತಿಳಿಸಿದ್ದಾರೆ. ಸದ್ಯ ಈ ಸಂಬಂಧ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

  • ಜಮ್ಮು-ಕಾಶ್ಮೀರದಲ್ಲಿ ಇಬ್ಬರು ಉಗ್ರರು ಅರೆಸ್ಟ್

    ಜಮ್ಮು-ಕಾಶ್ಮೀರದಲ್ಲಿ ಇಬ್ಬರು ಉಗ್ರರು ಅರೆಸ್ಟ್

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯು ಬಾರಾಮುಲ್ಲಾದಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (ಎಲ್‍ಇಟಿ) ಜೊತೆ ಸಂಪರ್ಕ ಹೊಂದಿದ್ದ ಇಬ್ಬರು ಸಕ್ರಿಯ ಭಯೋತ್ಪಾದಕರನ್ನು ಬಂಧಿಸಿದೆ.

    ಉಗ್ರರ ಬಗ್ಗೆ ಮಾಹಿತಿ ದೊರೆತ ಹಿನ್ನೆಲೆ ತಕ್ಷಣ ಕಾರ್ಯಚರಣೆ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ಇಬ್ಬರು ಉಗ್ರರನ್ನು ಬಾರಾಮುಲ್ಲಾದ ನೆಹಲ್ಪೋರಾ ಪಟ್ಟಣ ಪ್ರದೇಶದ ನಿವಾಸಿಗಳಾದ ಅಬ್ದುಲ್ ರೆಹಮಾನ್ ಮೀರ್ ಅವರ ಮಗ ಇರ್ಷಾದ್ ಅಹ್ಮದ್ ಮಿರ್ ಮತ್ತು ಬಶೀರ್ ಅಹ್ಮದ್ ಅವರ ಮಗ ಜಾಹಿದ್ ಬಶೀರ್ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಸರ್ಕಾರಿ ಶಾಲಾ ಶಿಕ್ಷಕರೇ ಖತರ್ನಾಕ್ ಕಳ್ಳನ ಟಾರ್ಗೆಟ್ – ಆನ್‍ಲೈನ್ ಮೂಲಕ ಹಣ ಲೂಟಿ

    ಇದೇ ವೇಳೆ ಬಂಧಿತ ಭಯೋತ್ಪಾದಕರ ಬಳಿ ಇದ್ದ 2 ಚೈನೀಸ್ ಪಿಸ್ತೂಲ್‍ಗಳು, 18 ಲೈವ್ ಸುತ್ತಿನ ಕಾಟ್ರ್ರಿಡ್ಜ್‍ಗಳು ಮತ್ತು 2 ಮ್ಯಾಗಜೀನ್‍ಗಳು ಸೇರಿದಂತೆ ದೋಷಾರೋಪಣೆಯ ಸಾಮಗ್ರಿಗಳು, ಮದ್ದುಗುಂಡುಗಳ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಸಂಬಂಧಿತ ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಈ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.  ಇದನ್ನೂ ಓದಿ: ಹಿಜಬ್ ಸಂಘರ್ಷ ಮಧ್ಯೆ ಸಾವರ್ಕರ್ ಫೋಟೋ ವಿವಾದ – ವಿದ್ಯಾರ್ಥಿಗಳ ಮೇಲೆ ಹಲ್ಲೆ

  • ಕಾಶ್ಮೀರದಲ್ಲಿ ಪಾಕ್ ಭಯೋತ್ಪಾದಕನ ಎನ್‍ಕೌಂಟರ್

    ಕಾಶ್ಮೀರದಲ್ಲಿ ಪಾಕ್ ಭಯೋತ್ಪಾದಕನ ಎನ್‍ಕೌಂಟರ್

    ಶ್ರೀನಗರ: ಲಷ್ಕರ್-ಎ-ತೊಯ್ಬಾದೊಂದಿಗೆ ಸಂಪರ್ಕ ಹೊಂದಿದ್ದ ಪಾಕಿಸ್ತಾನಿ ಭಯೋತ್ಪಾದಕನನ್ನು ಪಶ್ಚಿಮ ಜಮ್ಮು ಮತ್ತು ಕಾಶ್ಮೀರದ ಸೋಪೋರ್‌ನಲ್ಲಿ ಪೊಲೀಸರು ಹಾಗೂ ಭಾರತೀಯ ಸೇನೆ ಎನ್‍ಕೌಂಟರ್ ಮಾಡಿ ಹತ್ಯೆ ಮಾಡಿದೆ.

    ಕುಪ್ವಾರದಲ್ಲಿ ಇಬ್ಬರು ಭಯೋತ್ಪಾದಕರನ್ನು ಕೊಂದ ಕೆಲವೇ ಗಂಟೆಗಳಲ್ಲಿ ಜಲೂರಾ ಪ್ರದೇಶದ ಪಾನಿಪೋರಾ ಅರಣ್ಯದಲ್ಲಿ ಈ ಎನ್‍ಕೌಂಟರ್ ನಡೆದಿದ್ದು, ಸೋಪೋರ್‌ನಲ್ಲಿ ಮೃತಪಟ್ಟ ಭಯೋತ್ಪಾದಕನಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಅಲ್ಲದೇ ಕೇಂದ್ರಾಡಳಿತ ಪ್ರದೇಶದಿಂದ ಪರಾರಿಯಾಗಿರುವ ಇನ್ನೂ ಮೂವರು ಭಯೋತ್ಪಾದಕರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಧರ್ಮ ದಂಗಲ್‌ಗೆ ತೆರೆ ಎಳೆಯಲು ಮುಂದಾದ ಬಿಜೆಪಿ – ರಾಜ್ಯ ಘಟಕಗಳಿಗೆ ಹೈಕಮಾಂಡ್‌ ವಾರ್ನಿಂಗ್‌

    ಹತ್ಯೆಗೀಡಾದ ಪಾಕಿಸ್ತಾನಿ ಭಯೋತ್ಪಾದಕನನ್ನು ಪಾಕಿಸ್ತಾನದ ಲಾಹೋರ್‌ನ ಹಂಝಲ್ಲಾ ಎಂದು ಗುರುತಿಸಲಾಗಿದ್ದು, ಆತನ ಬಳಿ ಅವ್ಟೋಮಟ್ ಕಲಾಶ್ನಿಕೋವಾ (ಎಕೆ) ರೈಫಲ್‍ವೊಂದು, ಐದು ಮ್ಯಾಗಜೀನ್ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಭಾರತ ಮತಾಂಧರನ್ನು ಪ್ರಶಂಸಿಸುವುದಿಲ್ಲ: ಪಾಕ್ ಪ್ರಧಾನಿಗೆ ಭಾರತ ಸರ್ಕಾರ ತೀವ್ರ ತರಾಟೆ

  • ಬಿಜೆಪಿಯಿಂದ ಕಾಶ್ಮೀರದ ಸ್ಥಿತಿಯನ್ನು ನಿಭಾಯಿಸಲು ಆಗುತ್ತಿಲ್ಲ: ಕೇಜ್ರಿವಾಲ್ ವಾಗ್ದಾಳಿ

    ಬಿಜೆಪಿಯಿಂದ ಕಾಶ್ಮೀರದ ಸ್ಥಿತಿಯನ್ನು ನಿಭಾಯಿಸಲು ಆಗುತ್ತಿಲ್ಲ: ಕೇಜ್ರಿವಾಲ್ ವಾಗ್ದಾಳಿ

    ನವದೆಹಲಿ: ಕಾಶ್ಮೀರದಲ್ಲಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಹತ್ಯೆಗಳ ಹಿನ್ನೆಲೆ ಕೇಂದ್ರ ಸರ್ಕಾರ ಬಲವಂತವಾಗಿ ಕಾಶ್ಮೀರಿ ಪಂಡಿತರನ್ನು ಸ್ಥಳಾಂತರಿಸುತ್ತಿದೆ. ಬಿಜೆಪಿಯಿಂದ ಕಾಶ್ಮೀರದ ಸ್ಥಿತಿಯನ್ನು ನಿಭಾಯಿಸಲು ಸಾಧ್ಯವಾಗುತ್ತಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಾಗ್ದಾಳಿ ನಡೆಸಿದರು.

    ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಆಮ್ ಆದ್ಮಿ ಪಕ್ಷದ ಜನ ಆಕ್ರೋಶ ರ‍್ಯಾಲಿಯಲ್ಲಿ ಮಾತನಾಡಿದ ಕೇಜ್ರಿವಾಲ್, 1990ರಲ್ಲಿ ಕಾಶ್ಮೀರಿ ಪಂಡಿತರೊಂದಿಗೆ ಏನಾಗಿತ್ತೋ ಅದು ಮತ್ತೆ ಮರುಕಳಿಸುತ್ತಿದೆ. ಇದನ್ನು ಬಿಜೆಪಿಯಿಂದ ನಿಭಾಯಿಸಲು ಸಾಧ್ಯವಾಗುತ್ತಿಲ್ಲ. ಅವರು ಕೇವಲ ಕೆಟ್ಟ ರಾಜಕಾರಣ ಮಾಡುತ್ತಿದ್ದಾರೆ. ದಯವಿಟ್ಟು ಕಾಶ್ಮೀರದ ವಿಚಾರದಲ್ಲಿ ರಾಜಕೀಯ ಮಾಡಬೇಡಿ ಎಂದು ಕೇಳಿಕೊಂಡರು. ಇದನ್ನೂ ಓದಿ: ಪ್ರವಾದಿ ಮೊಹಮ್ಮದ್‍ ಕುರಿತು ಆಕ್ಷೇಪಾರ್ಹ ಹೇಳಿಕೆ – ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಅಮಾನತು

    ತಮ್ಮ ಮೇಲಾಗುತ್ತಿರುವ ಹಿಂಸಾಚಾರವನ್ನು ಕಾಶ್ಮೀರಿ ಪಂಡಿತರಿಂದ ಪ್ರತಿಭಟಿಸಲೂ ಸಾಧ್ಯವಾಗುತ್ತಿಲ್ಲ. ಬಿಜೆಪಿ ಅವರಿಗೆ ಪ್ರತಿಭಟಿಸಲು ಅವಕಾಶ ನೀಡದೇ ಬಂಧಿಸುತ್ತಿದೆ. ಅವರಿಗೆ ಭದ್ರತೆ ಒದಗಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. 1990ರಲ್ಲಿ ನಡೆದ ಘಟನೆ ಇದೀಗ ಮರುಕಳಿಸುತ್ತಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ಸ್ಥಳಾಂತರವಾಗಲು ಬಯಸುವ ಕಾಶ್ಮೀರಿ ಪಂಡಿತರಿಗೆ ಮಹಾರಾಷ್ಟ್ರದ ಬಾಗಿಲು ಯಾವಾಗ್ಲೂ ತೆರೆದಿರುತ್ತದೆ: ಆದಿತ್ಯ ಠಾಕ್ರೆ

    ಪಾಕಿಸ್ತಾನದ ವಿರುದ್ಧ ವಾಗ್ದಾಳಿ ನಡೆಸಿದ ಕೇಜ್ರಿವಾಲ್, ಕಾಶ್ಮೀರದಲ್ಲಿ ಭಯೋತ್ಪಾದಕರನ್ನು ಬೆಂಬಲಿಸಲಾಗುತ್ತಿದೆ. ಇಂತಹ ಹೀನ ತಂತ್ರಗಳನ್ನು ನಿಲ್ಲಿಸುವಂತೆ ಪಾಕಿಸ್ತಾನಕ್ಕೆ ಹೇಳಲು ಬಯಸುತ್ತೇನೆ. ಕಾಶ್ಮೀರ ಯಾವಾಗಲೂ ಭಾರತದ ಭಾಗವಾಗಿರುತ್ತದೆ. ಕಾಶ್ಮೀರದಲ್ಲಿ ಹಿಂದೂ ಹಾಗೂ ಸ್ಥಳೀಯರಲ್ಲದವರನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ಉದ್ದೇಶಪೂರ್ವಕವಾಗಿ ಹತ್ಯೆ ನಡೆಸುತ್ತಿರುವುದರಿಂದ ತತ್ತರಿಸಿ ಹೋಗಿದ್ದಾರೆ ಎಂದು ಆಕ್ರೋಶ ಹೊರ ಹಾಕಿದರು.