Tag: kashmir

  • ಸ್ಥಳಾಂತರವಾಗಲು ಬಯಸುವ ಕಾಶ್ಮೀರಿ ಪಂಡಿತರಿಗೆ ಮಹಾರಾಷ್ಟ್ರದ ಬಾಗಿಲು ಯಾವಾಗ್ಲೂ ತೆರೆದಿರುತ್ತದೆ: ಆದಿತ್ಯ ಠಾಕ್ರೆ

    ಸ್ಥಳಾಂತರವಾಗಲು ಬಯಸುವ ಕಾಶ್ಮೀರಿ ಪಂಡಿತರಿಗೆ ಮಹಾರಾಷ್ಟ್ರದ ಬಾಗಿಲು ಯಾವಾಗ್ಲೂ ತೆರೆದಿರುತ್ತದೆ: ಆದಿತ್ಯ ಠಾಕ್ರೆ

    ಮುಂಬೈ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂಸಾಚಾರಗಳಿಂದ ಕಾಶ್ಮೀರಿ ಪಂಡಿತರು ಆ ಸ್ಥಳವನ್ನೇ ತೊರೆಯುವ ಸ್ಥಿತಿ ಎದುರಾಗಿದೆ. ಈ ಕುರಿತು ಮಾತನಾಡಿದ ಮಹಾರಾಷ್ಟ್ರದ ಸಚಿವ ಆದಿತ್ಯ ಠಾಕ್ರೆ, ಅಲ್ಲಿಂದ ಸ್ಥಳಾಂತರಗೊಳ್ಳಲು ಬಯಸುವ ಕಾಶ್ಮೀರಿ ಪಂಡಿತರಿಗೆ ಮಹಾರಾಷ್ಟ್ರದ ಬಾಗಿಲು ತೆರೆದಿದೆ ಎಂದು ಹೇಳಿದರು.

    ನಾವು ಕಾಶ್ಮೀರಿ ಪಂಡಿತರನ್ನು ಬೆಂಬಲಿಸುತ್ತೇವೆ. ಅಲ್ಲಿನ ಪರಿಸ್ಥಿತಿ ಚಿಂತಾಜನಕವಾಗಿದೆ. ಇಂತಹ ಸಮಯದಲ್ಲಿ ಮತ್ತೆ ಪರಿಸ್ಥಿತಿ ಮರುಕಳಿಸುತ್ತಿರುವುದು ವಿಷಾದನೀಯ. ಅವರ ಸುರಕ್ಷತೆಗಾಗಿ ಭಾರತ ಸರ್ಕಾರ ಬಲವಾದ ಕ್ರಮವನ್ನು ತೆಗೆದುಕೊಳ್ಳುತ್ತದೆ ಎಂಬುದನ್ನು ನಿರೀಕ್ಷಿಸುತ್ತೇವೆ. ಅವರಿಗಾಗಿ ನಮ್ಮ ಬಾಗಿಲು ಸದಾ ತೆರೆದಿರುತ್ತದೆ ಎಂದು ಹೇಳಿದರು. ಇದನ್ನೂ ಓದಿ: 20 ಮಂದಿಯ ರಾಜೀನಾಮೆಯ ಬೆನ್ನಲ್ಲೇ ನೂತನ ಸಚಿವ ಸಂಪುಟ ರಚನೆ- 13 ಮಂದಿ ಪ್ರಮಾಣವಚನ

    ಇತ್ತೀಚೆಗೆ ಕಾಶ್ಮೀರಿ ಪಂಡಿತರು ಹಾಗೂ ವಲಸೆ ಕಾರ್ಮಿಕರನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ಸರಣಿ ಹತ್ಯೆ ನಡೆಸುತ್ತಿದ್ದಾರೆ. ಶನಿವಾರ 177 ಕಾಶ್ಮೀರಿ ಪಂಡಿತ ಶಿಕ್ಷಕರನ್ನು ಶ್ರೀನಗರದಿಂದ ಇತರ ಪ್ರದೇಶಗಳಿಗೆ ವರ್ಗಾವಣೆ ಮಾಡುವಂತೆ ಸರ್ಕಾರ ಆದೇಶ ಹೊರಡಿಸಿತ್ತು. ಇದನ್ನೂ ಓದಿ: ಬೆಂಗಳೂರಿನಲ್ಲಿ ಈದ್ಗಾ ಮೈದಾನ ವಿವಾದ- ಗ್ರೌಂಡ್‍ನಲ್ಲಿ ಹಿಂದೂ ಸಂಘಟನೆಯ ಮುಖಂಡರ ಹೈಡ್ರಾಮಾ

    ಗುರುವಾರ ಬ್ಯಾಂಕ್ ಮ್ಯಾನೇಜರ್ ಹಾಗೂ ಓರ್ವ ಇಟ್ಟಿಗೆ ಗೂಡು ಕಾರ್ಮಿಕನನ್ನು ಎರಡು ಪ್ರತ್ಯೇಕ ಘಟನೆಗಳಲ್ಲಿ ಹತ್ಯೆ ಮಾಡಲಾಗಿತ್ತು. ಮಂಗಳವಾರ ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಶಾಲೆಯೊಂದರಲ್ಲಿ ಭಯೋತ್ಪಾದಕರ ಗುಂಡಿನ ದಾಳಿಗೆ ಶಿಕ್ಷಕಿ ಬಲಿಯಾಗಿದ್ದರು. ಮೇ 1 ರಿಂದ ಇಲ್ಲಿಯವರೆಗೆ ಕಾಶ್ಮೀರದಲ್ಲಿ ಉದ್ದೇಶಿತ ಹತ್ಯೆಗಳಿಂದ 9 ಜನ ಬಲಿಪಶುಗಳಾಗಿದ್ದಾರೆ.

  • ಕಾಶ್ಮೀರದ ಹತ್ಯೆಗಳಿಗೆ ಪಾಕಿಸ್ತಾನವನ್ನು ದೂರಿದ ಕೇಂದ್ರ

    ಕಾಶ್ಮೀರದ ಹತ್ಯೆಗಳಿಗೆ ಪಾಕಿಸ್ತಾನವನ್ನು ದೂರಿದ ಕೇಂದ್ರ

    ನವದೆಹಲಿ: ಕಾಶ್ಮೀರದ ಕಣಿವೆಯಲ್ಲಿ ಹೆಚ್ಚುತ್ತಿರುವ ಹಿಂಸಾಚಾರ ಹಾಗೂ ಹತ್ಯೆಗೆ ಕೇಂದ್ರ ಪಾಕಿಸ್ತಾನದ ಮೇಲೆ ಆರೋಪ ಹೊರಿಸುತ್ತಿದೆ.

    ಶುಕ್ರವಾರ ನಾರ್ತ್ ಬ್ಲಾಕ್‌ನಲ್ಲಿ ನಡೆದ ಸರಣಿ ಸಭೆಗಳ ಸಂದರ್ಭ ಕೇಂದ್ರ ಗುಪ್ತಚರ ಸಂಸ್ಥೆಗಳು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮಾಹಿತಿ ನೀಡುವ ಸಂದರ್ಭ ಕಾಶ್ಮೀರ ಕಣಿವೆಯಲ್ಲಿ ಹೆಚ್ಚುತ್ತಿರುವ ಹಿಂಸಾಚಾರಕ್ಕೆ ಪಾಕಿಸ್ತಾನವೇ ಕಾರಣ ಎಂದು ದೂಷಿಸಿದೆ.

    Kashmiri_Pandits

    ಕಾಶ್ಮೀರದಲ್ಲಿ ಹಿಂಸಾಚಾರದ ಮಟ್ಟಗಳು ಹೆಚ್ಚಿರಬಹುದು ಆದರೆ ಅದು ಜಿಹಾದ್ ಅಲ್ಲ. ಕೆಲವು ಹತಾಶ ಶಕ್ತಿಗಳು ಇದನ್ನು ಮಾಡುತ್ತಿದೆ. ಹಿಂಸಾಚಾರಕ್ಕೆ ಸಂಬಂಧಪಟ್ಟವರು ಕಾಶ್ಮೀರದ ಗಡಿಯುದ್ದಕ್ಕೂ ಕುಳಿತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ:  JNU ಕ್ಯಾಂಪಸ್‍ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

    ಕಾಶ್ಮೀರದ ಕಣಿವೆಯಲ್ಲಿ ತಾಲಿಬಾನ್ ಇರುವಿಕೆಗೆ ಪುರಾವೆಗಳಿಲ್ಲ. ಪಾಕಿಸ್ತಾನಿಗಳು ಇದಕ್ಕಾಗಿಯೇ ಭಾರತದ ಗಡಿ ಪ್ರವೇಶಿಸಲು ಸಂಚು ರೂಪಿಸುತ್ತಿದ್ದಾರೆ. ಕಾಶ್ಮೀರದಲ್ಲಿ ಹೆಚ್ಚಾಗಿ ಅಲ್ಪಸಂಖ್ಯಾತ ಸಮುದಾಯ ಹಾಗೂ ಸ್ಥಳೀಯರಲ್ಲದವರನ್ನು ಗುರಿಯಾಗಿಸಿಕೊಂಡು ಹೆಚ್ಚಿನ ಹತ್ಯೆಗಳು ನಡೆದಿವೆ. ಕಾಶ್ಮೀರಿ ಪಂಡಿತರ ಬೇಡಿಕೆಯ ನಡುವೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಲ್ಲಿಂದ ಹೊರಗೆ ಸ್ಥಳಾಂತರಿಸುವ ಬದಲು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ನಿರ್ಧರಿಸಿದೆ. ಅವರ ಗುರಿ ಕಾಶ್ಮೀರದಿಂದ ಜನಾಂಗೀಯ ನಿರ್ಮೂಲನೆ ಮಾಡುವುದು ಅಲ್ಲ ಎಂಬುದನ್ನು ಸ್ಪಷ್ಟಪಡಿಸಿದೆ ಎಂದರು.

    ಕಾಶ್ಮೀರಿ ಪಂಡಿತರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುವುದು ಆದರೆ ಕಾಶ್ಮೀರದಿಂದ ಹೊರಗಲ್ಲ ಎಂದು ಸರ್ವಾನುಮತದಿಂದ ನಿರ್ಧರಿಸಲಾಗಿದೆ. ಕೇಂದ್ರ ಯಾವುದೇ ಜನಾಂಗೀಯ ಶುದ್ಧೀಕರಣಕ್ಕೆ ಮುಂದಾಗುವುದಿಲ್ಲ. ಈ ಸರ್ಕಾರದಲ್ಲಿ ನಾವು ಬಹು ಸಾಂಸ್ಕೃತಿಕ ಸಮಾಜವನ್ನು ನಂಬುತ್ತೇವೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಇದನ್ನೂ ಓದಿ: ರಷ್ಯಾ, ಉಕ್ರೇನ್ ಯುದ್ಧಕ್ಕೆ 100 ದಿನ ಪೂರ್ಣ- ಮತ್ತೆ ನಗರವನ್ನು ವಶಪಡಿಸಿಕೊಂಡ ಉಕ್ರೇನ್

  • ಕಾಶ್ಮೀರದಲ್ಲಿ ಮತ್ತೆ ಕಾಶ್ಮೀರಿ ಪಂಡಿತರು, ಅಲ್ಪಸಂಖ್ಯಾತರು ಟಾರ್ಗೆಟ್ – ಕಳೆದ 5 ತಿಂಗಳಲ್ಲಿ ಒಟ್ಟು 16 ಮಂದಿಯ ಹತ್ಯೆ

    ಕಾಶ್ಮೀರದಲ್ಲಿ ಮತ್ತೆ ಕಾಶ್ಮೀರಿ ಪಂಡಿತರು, ಅಲ್ಪಸಂಖ್ಯಾತರು ಟಾರ್ಗೆಟ್ – ಕಳೆದ 5 ತಿಂಗಳಲ್ಲಿ ಒಟ್ಟು 16 ಮಂದಿಯ ಹತ್ಯೆ

    ಶ್ರೀನಗರ: ಕಾಶ್ಮೀರದಲಿನ ಈಗಿನ ಪರಿಸ್ಥಿತಿ 1990ರ ದಿನಗಳಿಗಿಂತಲೂ ಅಪಾಯಕಾರಿಯಾಗಿದೆ. ಜನಸಾಮಾನ್ಯರ ಪಾಡು ಘನಘೋರವಾಗಿದೆ. ಮತ್ತೆ ಹಿಂದೂಗಳನ್ನು ಹುಡುಕಿ, ಹುಡುಕಿ ಕೊಲ್ಲಲಾಗುತ್ತಿದೆ. ಸರಣಿ ಹತ್ಯೆಗಳಿಗೆ ಭಯಬಿದ್ದು ಈಗ ಮತ್ತೆ ಅನೇಕ ಕುಟುಂಬಗಳು ಕಣಿವೆನಾಡಿನಿಂದ ವಲಸೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.

    ಕಳೆದ ಮೂರು ದಿನಗಳಲ್ಲಿ ಮೂವರು ಹಿಂದೂಗಳ ಕೊಲೆಯಾಗಿದೆ. ಬುದ್ಗಾಂನಲ್ಲಿ ಬ್ಯಾಂಕ್ ಉದ್ಯೋಗಿಯೊಬ್ಬರಿಗೆ ಗುಂಡಿಟ್ಟ ಕೆಲವೇ ಗಂಟೆಗಳ ಅಂತರದಲ್ಲಿ ಕುಲ್ಗಾಂ ಜಿಲ್ಲೆಯಲ್ಲಿ ಬಿಹಾರ ಮೂಲದ ಇಬ್ಬರು ಕಾರ್ಮಿಕರ ಮೇಲೆ ಗುಂಡು ಹಾರಿಸಲಾಗಿದೆ. ಓರ್ವ ಸಾವನ್ನಪ್ಪಿದ್ರೆ, ಇನ್ನೊಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಈ ಸರಣಿ ಹತ್ಯೆಗಳನ್ನು ಖಂಡಿಸಿ ಜಾತಿ ಧರ್ಮ ಮರೆತು ಕಣಿವೆ ನಾಡಿನ ಮಂದಿ ಭಾರೀ ಪ್ರತಿಭಟನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಮದ್ವೆಯಾಗಿ 6 ವರ್ಷ ಕಳೆದ್ರೂ ಫಸ್ಟ್ ನೈಟ್ ಆಗಿಲ್ಲ – ಪತಿಯ ಮನೆ ತೊರೆಯುವಂತೆ ಪತ್ನಿಗೆ ಕೋರ್ಟ್ ಆರ್ಡರ್

    1990ರ ಜನವರಿ-ಮಾರ್ಚ್ ತಿಂಗಳಲ್ಲಿ ಕಾಶ್ಮೀರಿ ಪಂಡಿತರು, ಅಲ್ಪಸಂಖ್ಯಾತರ ಮೇಲೆ ದಾಳಿನಡೆಸಿ 32 ಮಂದಿಯನ್ನು ದಾರುಣವಾಗಿ ಹತ್ಯೆ ಮಾಡಲಾಗಿತ್ತು. ಇದೀಗ ಮತ್ತೆ ಅಂತಹದ್ದೆ ಪರಿಸ್ಥಿತಿ ನಿರ್ಮಾಣವಾದಂತೆ ಭಾಸವಾಗುತ್ತಿದೆ ಇದಕ್ಕೆ ಕಾರಣ 2022ರ ಮೊದಲ ಐದು ತಿಂಗಳಲ್ಲಿ ಒಟ್ಟು 16 ಮಂದಿಯ ಹತ್ಯೆ ನಡೆದಿರುವುದು. ಕಾಶ್ಮೀರಿ ಪಂಡಿತರು, ಅಲ್ಪಸಂಖ್ಯಾತರನ್ನು ಟಾರ್ಗೆಟ್ ಮಾಡಿರುವ ಕಿಡಿಗೇಡಿಗಳು ಕಳೆದ ಮೂರು ದಿನಗಳಲ್ಲಿ ಮೂವರು ಹಿಂದೂಗಳನ್ನು ಹತ್ಯೆ ಮಾಡಿದ್ದಾರೆ. ಕಳೆದ 22 ದಿನಗಳಲ್ಲಿ 9 ಜನರ ಕೊಲೆ ನಡೆದಿದ್ದು, ಜನವರಿಯಿಂದ ಈವರೆಗೂ 16 ಮಂದಿಯ ಹತ್ಯೆ ನಡೆದಿರುವುದು ಆತಂಕ ಮೂಡಿಸಿದೆ. ಇದರಿಂದಾಗಿ ಕೇವಲ 2 ದಿನಗಳಲ್ಲಿ 150ಕ್ಕೂ ಹೆಚ್ಚು ಕುಟುಂಬ ವಲಸೆ ಆರಂಭಿಸಿದೆ, ಈವರೆಗೂ 1,800ಕ್ಕೂ ಹೆಚ್ಚು ಹಿಂದೂಗಳ ಮಹಾವಲಸೆಯತ್ತ ಮುಖಮಾಡಿದ್ದಾರೆ. ಇದನ್ನೂ ಓದಿ: ಅಪ್ರಾಪ್ತೆಯ ಮೇಲೆ ಗ್ಯಾಂಗ್ ರೇಪ್ ಪ್ರಕರಣ – ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಬಿಜೆಪಿ ಆಗ್ರಹ

  • ಕಾಶ್ಮೀರದಲ್ಲಿ ಬ್ಯಾಂಕ್ ಮ್ಯಾನೇಜರ್ ಗುಂಡಿಕ್ಕಿ ಹತ್ಯೆ

    ಕಾಶ್ಮೀರದಲ್ಲಿ ಬ್ಯಾಂಕ್ ಮ್ಯಾನೇಜರ್ ಗುಂಡಿಕ್ಕಿ ಹತ್ಯೆ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ಇನ್ನೊಂದು ಹತ್ಯೆ ನಡೆದಿದೆ. ಗುರುವಾರ ಭಯೋತ್ಪಾದಕರು ಕುಲ್ಗಾಮ್‌ನಲ್ಲಿ ರಾಜಸ್ಥಾನ ಮೂಲದ ಬ್ಯಾಂಕ್ ಮ್ಯಾನೇಜರ್‌ನನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

    ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆ, ಮೋಹನ್ ಪೋರಾದಲ್ಲಿರುವ ಎಲ್ಲಕಿ ದೇಹತಿ ಬ್ಯಾಂಕ್‌ನ ಮ್ಯಾನೇಜರ್ ವಿಜಯ್ ಕುಮಾರ್‌ನನ್ನು ಭಯೋತ್ಪಾದಕರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ರಾಜಸ್ಥಾನದ ಹನುಮಾನ್‌ಗಢ ಮೂಲದ ಕುಮಾರ್‌ನನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಲ್ಲಿ ಅವರು ಸಾವನ್ನಪ್ಪಿದ್ದಾರೆ.

    ಉಗ್ರರ ದಾಳಿಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಹೆಚ್ಚಿನ ವಿವರಗಳನ್ನು ಸಂಗ್ರಹಿಸಲಾಗುತ್ತಿದೆ. ಶೀಘ್ರದಲ್ಲಿ ಆರೋಪಿಗಳ ಪತ್ತೆ ಮಾಡಲಾಗುವುದು ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಘಟನೆಯ ಬಳಿಕ ಸೇನಾ, ಅರೆಸೇನಾ ಪಡೆಗಳು ಪ್ರದೇಶವನ್ನು ಸುತ್ತುವರಿದು, ಶೋಧ ಕಾರ್ಯ ಆರಂಭಿಸಿದ್ದಾರೆ. ಇದನ್ನೂ ಓದಿ: ಯೋಧರು ಪ್ರಯಾಣಿಸುತ್ತಿದ್ದ ವಾಹನ ಸ್ಫೋಟ: 3 ಸೈನಿಕರ ಸ್ಥಿತಿ ಗಂಭೀರ

    ಕುಲ್ಗಾಮ್‌ನಲ್ಲಿ ಕೆಲಸ ಮಾಡುತ್ತಿದ್ದ ರಾಜಸ್ಥಾನದ ಹನುಮಾನ್‌ಗಢ ನಿವಾಸಿ ಬ್ಯಾಂಕ್ ಮ್ಯಾನೇಜರ್ ವಿಜಯ್ ಕುಮಾರ್ ಅವರ ಹತ್ಯೆ ಅತ್ಯಂತ ಖಂಡನೀಯ. ಕಾಶ್ಮೀರದಲ್ಲಿ ಶಾಂತಿ ನೆಲೆಸುವಲ್ಲಿ ಎನ್‌ಡಿಎ ಸರ್ಕಾರ ವಿಫಲವಾಗಿದೆ. ಕೇಂದ್ರ ಸರ್ಕಾರವು ಕಾಶ್ಮೀರದಲ್ಲಿ ನಾಗರಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಟ್ವೀಟ್ ಮಾಡಿದ್ದಾರೆ.

    ಇಂದು ಬೆಳಗ್ಗೆ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಸೈನಿಕರು ಪ್ರಯಾಣಿಸುತ್ತಿದ್ದ ಖಾಸಗಿ ವಾಹನ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಮೂವರು ಸೈನಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಶೋಪಿಯಾನ್ ಘಟನೆ ನಡೆದ ಪ್ರದೇಶದಿಂದ ಕೇವಲ 12 ಕಿಮೀ ಅಂತರದಲ್ಲೇ ಬ್ಯಾಂಕ್ ಮ್ಯಾನೇಜರ್‌ನ ಹತ್ಯೆ ನಡೆದಿದೆ. ಇದನ್ನೂ ಓದಿ: 100 ಅಡಿ ಆಳದ ಹಳ್ಳಕ್ಕೆ ಬಿದ್ದ ಸ್ಕೂಲ್ ಬಸ್ – ಚಾಲಕನಿಗೆ ಗಂಭೀರ ಗಾಯ

    ಕಾಶ್ಮೀರದ ಹೊರಗಿನ ಮತ್ತು ಅಲ್ಲಿಯ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಉದ್ಯೋಗಿಗಳ ರಕ್ಷಣೆಗಾಗಿ ಕಣಿವೆಯಲ್ಲಿ ಹೆಚ್ಚಿನ ಭದ್ರತೆಯ ನಡುವೆಯೂ ಈ ಘಟನೆಗಳು ಆತಂಕಕಾರಿಯಾಗಿವೆ. 2 ದಿನಗಳ ಹಿಂದೆ ಕುಲ್ಗಾಮ್ ಜಿಲ್ಲೆಯ ಗೋಪಾಲ್ಪೊರಾ ಪ್ರದೇಶದಲ್ಲಿ ಶಾಲಾ ಶಿಕ್ಷಕಿ ರಜನಿ ಬಾಲಾಳನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದರು. ಕಳೆದ ವಾರ ಬುದ್ಗಾಮ್‌ನ ಚದೂರ ಪ್ರದೇಶದಲ್ಲಿ ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರು ನಟಿ ಅಮ್ರೀನ್ ಭಟ್‌ನನ್ನು ಗುಂಡಿಕ್ಕಿ ಕೊಂದಿದ್ದರು. ಮೇ 12ರಂದು ಬುದ್ಗಾಮ್ ಜಿಲ್ಲೆಯಲ್ಲಿ ಕಂದಾಯ ಇಲಾಖೆ ನೌಕರ ರಾಹುಲ್ ಭಟ್ ಅವರನ್ನು ಉಗ್ರರು ಹತ್ಯೆ ಮಾಡಿದ್ದರು.

    ಸರಣಿ ಹತ್ಯೆಗಳ ಬೆನ್ನಲೆ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಕಾಶ್ಮೀರೇತರ ಸರ್ಕಾರಿ ಸಿಬ್ಬಂದಿ ಜೂನ್ 6 ರೊಳಗೆ ಜಿಲ್ಲಾ ಪ್ರದೇಶಗಳಿಗೆ ವಾಪಸ್ ಆಗುವಂತೆ ಸೂಚನೆ ನೀಡಿದ್ದಾರೆ. ಈ ಸಂಬಂಧ ಗೃಹ ಸಚಿವ ಅಮಿತ್ ಶಾ ಶೀಘ್ರದಲ್ಲಿ ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ.

  • ನಾಗರಿಕರನ್ನು ಕೊಂದಿದ್ದ ಇಬ್ಬರು ಉಗ್ರರ ಹತ್ಯೆ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅವಂತಿಪೋರಾದ ರಾಜ್‍ಪೋರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದ ಎನ್‍ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ.

    ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಇಂದು ಭದ್ರತಾ ಪಡೆಗಳು ನಡೆಸಿದ ಎನ್‍ಕೌಂಟರ್‌ನಲ್ಲಿ ಟ್ರಾಲ್‍ನ ಶಾಹಿದ್ ರಾಥರ್ ಮತ್ತು ಶೋಪಿಯಾನ್‍ನ ಉಮರ್ ಯೂಸುಫ್ ಹತ್ಯೆಯಾದ ಉಗ್ರರು. ಹತನಾದ ಉಗ್ರರು ಇತರ ಭಯೋತ್ಪಾದಕ ಅಪರಾಧದ ಜೊತೆಗೆ, ಇಬ್ಬರು ನಾಗರಿಕರನ್ನು ಹತ್ಯೆಗೈದಿದ್ದಾರೆ.

    ಎನ್‍ಕೌಂಟರ್‌ನಲ್ಲಿ ಇಬ್ಬರು ಸ್ಥಳೀಯ ಉಗ್ರರು ಹತರಾಗಿದ್ದಾರೆ. ಎನ್‍ಕೌಂಟರ್ ನಡೆದ ಸ್ಥಳದಿಂದ ಎರಡು ಎಕೆ-47 ರೈಫಲ್‍ಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಇತ್ತೀಚಿನ ಎನ್‍ಕೌಂಟರ್‌ಗಳಲ್ಲಿ, ಭದ್ರತಾ ಪಡೆಗಳು ಕಳೆದ ಐದು ತಿಂಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಗುಂಪುಗಳಾದ ಲಷ್ಕರ್-ಎ-ತೊಯ್ಬಾ (ಎಲ್‍ಇಟಿ) ಮತ್ತು ಜೈಶ್-ಎ-ಮೊಹಮ್ಮದ್‍ಗೆ ಸೇರಿದ 26 ಉಗ್ರರನ್ನು ಹತ್ಯೆ ಮಾಡಿದೆ. ಇದನ್ನೂ ಓದಿ: ಸೆ.15ವರೆಗೆ ಪದ್ಮ ಪ್ರಶಸ್ತಿ ನಾಮನಿರ್ದೇಶನ ಮಾಡಿ

    14 ಉಗ್ರರು ಮಸೂದ್ ಅಜರ್ ಸ್ಥಾಪಿಸಿದ ಭಯೋತ್ಪಾದಕ ಗುಂಪು ಜೈಶ್‍ಗೆ ಸೇರಿದವರಾಗಿದ್ದರೆ, 12 ಮಂದಿ ಹಫೀಜ್ ಸಯೀದ್ ಸ್ಥಾಪಿಸಿದ ಲಷ್ಕರ್-ಎ-ತೊಯ್ಬಾದಿಂದ ಬಂದವರಾಗಿದ್ದಾರೆ. ಇದನ್ನೂ ಓದಿ: ಶೀಘ್ರವೇ ಕೇಂದ್ರ ಸಚಿವ ಸಂಪುಟ ಪುನಾರಚನೆ?

  • ಅಮ್ರಿನ್ ಭಟ್‌ ಹತ್ಯೆಗೈದಿದ್ದ ಇಬ್ಬರು ಸೇರಿ ನಾಲ್ವರು ಲಷ್ಕರ್ ಉಗ್ರರ ಹತ್ಯೆ

    ಅಮ್ರಿನ್ ಭಟ್‌ ಹತ್ಯೆಗೈದಿದ್ದ ಇಬ್ಬರು ಸೇರಿ ನಾಲ್ವರು ಲಷ್ಕರ್ ಉಗ್ರರ ಹತ್ಯೆ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಮತ್ತು ಶ್ರೀನಗರ ಜಿಲ್ಲೆಗಳ ಸೌರಾ ಪ್ರದೇಶದಲ್ಲಿ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ನಡೆದ ಎನ್‍ಕೌಂಟರ್‌ ದಾಳಿ ವೇಳೆ ಕಾಶ್ಮೀರ ಪೊಲೀಸರು ನಾಲ್ವರು ಎಲ್‍ಇಟಿ ಉಗ್ರರನ್ನು ಹತ್ಯಗೈದ ಘಟನೆ ನಡೆದಿದೆ.

    ಹತ್ಯೆಯಾದ ಎಲ್‍ಇಟಿ ಉಗ್ರರನ್ನು ಶಾಕಿರ್ ಅಹ್ಮದ್ ವಾಜಾ ಮತ್ತು ಅಫ್ರೀನ್ ಅಫ್ತಾಬ್ ಮಲಿಕ್ ಎಂದು ಗುರುತಿಸಲಾಗಿದ್ದು, ಇಬ್ಬರೂ ಟ್ರೆಂಜ್ ಶೋಪಿಯಾನ್ ಗ್ರಾಮದ ನಿವಾಸಿಗಳಾಗಿದ್ದರು. 4 ಉಗ್ರರ ಹತ್ಯೆಯಲ್ಲಿ, ಇಬ್ಬರು ಕಿರುತೆರೆ ನಟಿಯ ಹತ್ಯೆಯಲ್ಲಿ ಭಾಗಿಯಾಗಿರುವ ಬಗ್ಗೆ ಪೊಲೀಸರು ತಿಳಿಸಿದ್ದಾರೆ.

    ಪೊಲೀಸರು ಅವರಿಂದ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಇದರ ಜೊತೆಗೆ ಒಂದು ಎಕೆ-47 ಮತ್ತು ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದೆ. ಇದನ್ನೂ ಓದಿ: ನಾಯಿ ವಾಕಿಂಗ್‍ಗೆ ಸ್ಟೇಡಿಯಂ ಖಾಲಿ ಮಾಡಿಸಿದ್ದ ಐಎಎಸ್ ಅಧಿಕಾರಿ ವರ್ಗಾವಣೆ

    ಈ ಬಗ್ಗೆ ಕಾಶ್ಮೀರದ ಪೊಲೀಸ್ ಮಹಾನಿರೀಕ್ಷಕ ವಿಜಯ್ ಕುಮಾರ್ ಮಾತನಾಡಿ, ಕಳೆದ ಮೂರು ದಿನಗಳಲ್ಲಿ ನಡೆದ ಎನ್‍ಕೌಂಟರ್‌ಗಳಲ್ಲಿ ಒಟ್ಟು 10 ಉಗ್ರರನ್ನು ಹತ್ಯೆ ಮಾಡಲಾಗಿದೆ. ಅವರಲ್ಲಿ ಏಳು ಮಂದಿ ಲೆಟ್‍ಗೆ ಸೇರಿದವರಾಗಿದ್ದರೆ, ಮೂವರು ಜೈಶ್-ಎ-ಮೊಹಮ್ಮದ್‍ಗೆ ಸೇರಿದವರು ಎಂದು ತಿಳಿಸಿದರು. ಇದನ್ನೂ ಓದಿ: ವೇಶ್ಯಾವಾಟಿಕೆ ಅಕ್ರಮವಲ್ಲ – ಸುಪ್ರೀಂಕೋರ್ಟ್ ಮಹತ್ವದ ತೀರ್ಪು

  • ಆಸ್ಪತ್ರೆಯಲ್ಲಿ ದಾಖಲಾಗಿಲ್ಲ ವಿಜಯ್ ದೇವರಕೊಂಡ, ಸಮಂತಾ?

    ಆಸ್ಪತ್ರೆಯಲ್ಲಿ ದಾಖಲಾಗಿಲ್ಲ ವಿಜಯ್ ದೇವರಕೊಂಡ, ಸಮಂತಾ?

    ಮಿಳಿನ ಸ್ಟಾರ್ ನಟ ವಿಜಯ್ ದೇವರಕೊಂಡ ಮತ್ತು ನಟಿ ಸಮಂತಾ ಇದೀಗ ‘ಖುಷಿ’ ಸಿನಿಮಾದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಕಳೆದ ಎರಡು ವಾರಗಳಿಂದ ಅವರು ಶೂಟಿಂಗ್‌ಗಾಗಿ ಕಾಶ್ಮೀರದಲ್ಲಿ ಬೀಡು ಬಿಟ್ಟಿದ್ದರು. ಚಿತ್ರೀಕರಣದ ಸಂದರ್ಭದಲ್ಲಿ ಅಪಘಾತವಾಗಿದ್ದು, ಇಬ್ಬರೂ ಗಾಯಗೊಂಡಿದ್ದಾರೆ ಎನ್ನುವ ಸುದ್ದಿ ಇತ್ತು. ಚಿಕಿತ್ಸೆಗಾಗಿ ಆಸ್ಪತ್ರೆ ಸೇರಿಕೊಂಡಿದ್ದಾರೆ ಎಂದು ಹೇಳಲಾಗಿತ್ತು. ಇದನ್ನೂ ಓದಿ : ತೆರೆಯ ಮೇಲೂ ನಿರ್ದೇಶಕನಾಗಿ ನಟಿಸಿದ ಯೋಗರಾಜ್ ಭಟ್

    ವಿಜಯ್ ದೇವರಕೊಂಡ ಮತ್ತು ಸಮಂತಾ ಅವರಿದ್ದ ಜೀಪ್ ನದಿಗೆ ಉರುಳಿ, ಭಾರೀ ಅಪಘಾತವಾಗಿದೆ ಎನ್ನುವ ಸುದ್ದಿ ಎರಡ್ಮೂರು ದಿನಗಳಿಂದ ಭಾರೀ ಸದ್ದು ಮಾಡಿತ್ತು. ಇಬ್ಬರೂ ಅಭಿಮಾನಿಗಳು ಇದರಿಂದಾಗಿ ಸಹಜವಾಗಿಯೇ ಆತಂಕಕ್ಕೀಡಾಗಿದ್ದರು. ಆದರೆ ಈ ಸುದ್ದಿಯ ಅಸಲಿ ಕಥೆಯೇ ಬೇರೆ ಇದೆ ಎನ್ನುತ್ತಾರೆ ಇವರ ಆಪ್ತರು. ಇದನ್ನೂ ಓದಿ : ಪೊಲೀಸ್ ಪೇದೆ ನನ್ನನ್ನು ಸೆಕ್ಸ್ ವರ್ಕರ್ ರೀತಿ ನೋಡಿದ : ಮಲಯಾಳಿ ನಟಿ ಅರ್ಚನಾ ಆರೋಪ

    ಅಷ್ಟಕ್ಕೂ ಸಮಂತಾ ಮತ್ತು ದೇವರಕೊಂಡ ಶೂಟಿಂಗ್‌ಗಾಗಿ ಕಾಶ್ಮೀರಕ್ಕೆ ಹೋಗಿದ್ದು ನಿಜ. ಎರಡು ವಾರಗಳ ಕಾಲ ಕಾಶ್ಮೀರದಲ್ಲೇ ಚಿತ್ರೀಕರಣ ನಡೆದಿದೆ. ಆದರೆ ಯಾವುದೇ ಅವಘಡ ಸಂಭವಿಸಿಲ್ಲವಂತೆ. ಈ ಸುದ್ದಿ ಹಬ್ಬಿದ ದಿನ ಇಬ್ಬರೂ ತಮ್ಮ ತಮ್ಮ ಮನೆಯಲ್ಲೇ ಇದ್ದರಂತೆ. ಶೂಟಿಂಗ್ ಮುಗಿಸಿಕೊಂಡು ಈಗಾಗಲೇ ಅವರು ತಮ್ಮ ಮನೆ ಸೇರಿಕೊಂಡಿದ್ದಾರೆ. ಅಲ್ಲದೇ ಇಬ್ಬರೂ ಕರಣ್ ಜೋಹಾರ್ ಹುಟ್ಟುಹಬ್ಬದ ಪಾರ್ಟಿಯಲ್ಲೂ ಪಾಲ್ಗೊಂಡಿದ್ದಾರೆ. ಇದನ್ನೂ ಓದಿ : ಕಾಶ್ಮೀರ ಟಿವಿ ಸ್ಟಾರ್ ನಟಿ ಹತ್ಯೆ ಮಾಡಿದ ಭಯೋತ್ಪಾದಕರು

    ಕಾಶ್ಮೀರದ ಶೂಟಿಂಗ್ ಮುಗಿದು ಮೂರ್ನಾಲ್ಕು ದಿನಗಳೇ ಆಗಿವೆ. ಇಬ್ಬರೂ ತಮ್ಮ ತಮ್ಮ ಮನೆಯಲ್ಲಿ ನೆಮ್ಮದಿಯಾಗಿ ಇದ್ದಾರೆ. ಈ ನಡುವೆ ಅಪಘಾತದ ಸುದ್ದಿ ಬಂದಿದೆ. ಈ ಸುದ್ದಿಯನ್ನು ಯಾರು, ಯಾಕೆ ಹಬ್ಬಿಸಿದರೋ ಗೊತ್ತಿಲ್ಲ. ಆದರೆ ಈ ಸುದ್ದಿಯು ಅವರ ಅಭಿಮಾನಿಗಳಲ್ಲಿ ಆತಂಕ ಸೃಷ್ಟಿಸಿದ್ದು ಸುಳ್ಳಲ್ಲ.

  • ಕಾಶ್ಮೀರ ಟಿವಿ ಸ್ಟಾರ್ ನಟಿ ಹತ್ಯೆ ಮಾಡಿದ ಭಯೋತ್ಪಾದಕರು

    ಕಾಶ್ಮೀರ ಟಿವಿ ಸ್ಟಾರ್ ನಟಿ ಹತ್ಯೆ ಮಾಡಿದ ಭಯೋತ್ಪಾದಕರು

    ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಗುಂಡಿನ ಶಬ್ದ ಕೇಳಿದೆ. ಟಿಕ್ ಟಾಕ್ ಮತ್ತು ಟಿವಿ ಕಾರ್ಯಕ್ರಮಗಳ ಮೂಲಕ ಅಪಾರ ಅಭಿಮಾನಿಗಳನ್ನು ಹೊಂದಿದ್ದ ಅಮ್ರೀನ್ ಭಟ್ ಎಂಬ ತಾರೆಯರನ್ನು ಕಾಶ್ಮೀರದಲ್ಲಿ ಭಯೋತ್ಪಾದಕರು ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ಕಾಶ್ಮೀರ ವಲಯದ ಪೊಲೀಸರು ನೀಡಿದ ಮಾಹಿತಿಯ ಪ್ರಕಾರ ಈ ಹತ್ಯೆ ಸಾಯಂಕಾಲ 7.55ಕ್ಕೆ ನಡೆದಿದೆ ಎನ್ನಲಾಗುತ್ತಿದೆ. ಇದನ್ನೂ ಓದಿ : ತಮಿಳು ಖ್ಯಾತ ನಟ ಸಿಂಬು ಮನೆಮುಂದೆ ಹೈಡ್ರಾಮಾ, ಸೀರಿಯಲ್ ನಟಿ ಧರಣಿ

    ಅಮ್ರೀನ್ ಭಟ್ ಟಿಕ್ ಟಾಕ್ ವಿಡಿಯೋ ಮಾಡುವುದರಲ್ಲಿ ಫೇಮಸ್ ಆಗಿದ್ದರು. ಅಲ್ಲದೇ, ಟಿವಿಗಳಲ್ಲೂ ಅವರು ಜನಪ್ರಿಯ ಕಾರ್ಯಕ್ರಮಗಳನ್ನು ನೀಡುತ್ತಿದ್ದರು. ಹೀಗಾಗಿಯೇ ಅವರನ್ನು ಟಾರ್ಗೆಟ್ ಮಾಡಲಾಗಿದೆ ಎನ್ನಲಾಗುತ್ತಿದೆ. ಅವರ ಮನೆಗೆ ನುಗ್ಗಿರುವ ಭಯೋತ್ಪಾದಕರು ನಟಿಯ ಮೇಲೆ ಗುಂಡಿನ ದಾಳಿ ಮಾಡಿದ್ದಾರೆ. ಈ ದಾಳಿಯಲ್ಲಿ ಅಮ್ರೀನ್ ಅವರ ಸಂಬಂಧಿ ಮಗುವಿಗೂ ತೀವ್ರ ಗಾಯವಾಗಿವೆ ಎನ್ನುವ ಸುದ್ದಿ ಇದೆ. ಇದನ್ನೂ ಓದಿ : 17 ವರ್ಷ ಲವ್, 2 ಮಕ್ಕಳಾದ ನಂತರ ಮದುವೆಯಾದ ನಿರ್ದೇಶಕ ಹನ್ಸಲ್ ಮೆಹ್ತಾ, ಸಫೀನಾ ಹುಸೇನ್

    35ರ ವಯಸ್ಸಿನ ಅಮ್ರೀನ್ ಭಟ್, ಕಾಶ್ಮೀರದ ಬುದ್ಗಾಮ್ ಜಿಲ್ಲೆಯವರು ಎಂದು ಹೇಳಲಾಗುತ್ತಿದ್ದು, ಕಾಶ್ಮೀರ ಕಿರುತೆರೆ ವಲಯದಲ್ಲಿ ಸಾಕಷ್ಟು ಹೆಸರು ಮಾಡಿದ್ದರು. ಅಲ್ಲದೇ, ಕೂಡುಕುಟುಂಬದೊಂದಿಗೆ ಅವರು ವಾಸವಾಗಿದ್ದರು. ಸಂಜೆ ಭಯೋತ್ಪಾದಕರು ಅಮ್ರೀನ್ ಮನೆಗೆ ನುಗ್ಗಿದ್ದು, ಮನಸೋ ಇಚ್ಛೆ ಗುಂಡು ಹಾರಿಸಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಿದರೂ, ಅವರು ಬದುಕುಳಿದಿಲ್ಲ. ಜೊತೆಗೆ ಹತ್ತು ವರ್ಷದ ಫರ್ಹಾನ್ ಜಬೇರ್ ಎನ್ನುವ ಹುಡುಗ ಕೂಡ ಈ ದಾಳಿಯಲ್ಲಿ ಗಾಯಗೊಂಡಿದ್ದಾನೆ.

  • ಬರಾಮುಲ್ಲಾದಲ್ಲಿ ಎನ್‌ಕೌಂಟರ್ – 3 ಭಯೋತ್ಪಾದಕರ ಹತ್ಯೆ, ಪೊಲೀಸ್ ಹುತಾತ್ಮ,

    ಶ್ರೀನಗರ: ಕಾಶ್ಮೀರದ ಬರಾಮುಲ್ಲಾದಲ್ಲಿ ಬುಧವಾರ ನಡೆದ ಗುಂಡಿನ ದಾಳಿಯಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದನಾ ಸಂಘಟನೆ ಜೈಶ್-ಎ-ಮೊಹಮ್ಮದ್(ಜೆಇಎಂ)ನ ಮೂವರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಸಂಘರ್ಷದಲ್ಲಿ ಜಮ್ಮು ಹಾಗೂ ಕಾಶ್ಮೀರದ ಒಬ್ಬ ಪೊಲೀಸ್ ಸಿಬ್ಬಂದಿಯೂ ಪ್ರಾಣ ಕಳೆದುಕೊಂಡಿದ್ದಾರೆ.

    ಬರಾಮುಲ್ಲಾದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಪಾಕಿಸ್ತಾನಿ ಭಯೋತ್ಪಾದಕರನ್ನು ಕೊಲ್ಲಾಗಿದ್ದು, ಒಬ್ಬ ಪೊಲೀಸ್ ಸಿಬ್ಬಂದಿಯೂ ಸಾವನ್ನಪ್ಪಿದ್ದಾರೆ. ಹತರಾದ ಭಯೋತ್ಪಾದಕರಿಂದ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಾಶ್ಮೀರ ವಲಯ ಪೊಲೀಸ್ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ವರದಕ್ಷಿಣೆ ಕಿರುಕುಳ – ಮಗುವನ್ನು ಕೊಲೆಗೈದು ತಾಯಿ ಆತ್ಮಹತ್ಯೆ

    ಈ ವರ್ಷ ಇಲ್ಲಿಯವರೆಗೆ 22 ಪಾಕಿಸ್ತಾನಿ ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿದ್ದೇವೆ ಎಂದು ಕಾಶ್ಮೀರ ಪೊಲೀಸ್ ಮಹಾನಿರೀಕ್ಷಕ(ಐಜಿಪಿ) ವಿಜಯ್ ಕುಮಾರ್ ಹೇಳಿದ್ದಾರೆ. ಇದನ್ನೂ ಓದಿ: ಉದ್ಯಮಿ ಆದಿಕೇಶವಲು ಮಗ ಶ್ರೀನಿವಾಸ್‍ಗೆ ನ್ಯಾಯಾಂಗ ಬಂಧನ

    ಕಳೆದ 3-4 ತಿಂಗಳುಗಳಿಂದ ಬರಾಮುಲ್ಲಾ ಪ್ರದೇಶದಲ್ಲಿ ಸಕ್ರಿಯರಾಗಿದ್ದ ಮೂವರು ಜೆಇಎಂನ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿತ್ತು.

  • ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಯೋಧ ಹುತಾತ್ಮ

    ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಯೋಧ ಹುತಾತ್ಮ

    ಹಾಸನ: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯೋಧರೊಬ್ಬರು ಚಿಕಿತ್ಸೆ ಫಲಿಸದೆ ಹುತಾತ್ಮರಾದ ಘಟನೆ ಹಾಸನ ನಗರದಲ್ಲಿ ನಡೆದಿದೆ.

    ಸಂಜಯ್ (22) ಮೃತ ಯೋಧ. ಸಂಜಯ್‌  ಕಾಶ್ಮೀರದಲ್ಲಿ ರಾಷ್ಟ್ರೀಯ ರೈಫಲ್ಸ್‍ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆದರೆ ರಜೆಯ ಮೇರೆಗೆ ಊರಿಗೆ ಬಂದಿದ್ದರು. ಹೊನ್ನೇನಹಳ್ಳಿ ಗ್ರಾಮದ ಸಂಜಯ್, ಹಾಸನದ ದಾಸರಕೊಪ್ಪಲಿನಲ್ಲಿ ನೆಲೆಸಿದ್ದರು. ಇದನ್ನೂ ಓದಿ: ಗಾಂಧಿನಗರ ಕಾಂಗ್ರೆಸ್ ಪಕ್ಷದ ವಕ್ತಾರರಾಗಿ ಲಕ್ಷ್ಮೀಕಾಂತ್ ನೇಮಕ

    crime

    ಮೂರು ದಿನಗಳ ಹಿಂದೆ ಹಾಸನದ ಎಂ.ಜಿ. ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಯೋಧ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಹುತಾತ್ಮರಾಗಿದ್ದಾರೆ. ಘಟನೆಯಿಂದ ಪೋಷಕರು, ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ. ಹಾಸನ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಬಿಎಸ್‍ಪಿಯನ್ನು ಮಾಯಾವತಿ ಬಿಜೆಪಿಗೆ ಮಾರಾಟ ಮಾಡಿದ್ದಾರೆ: ಭೀಮ್ ಆರ್ಮಿ ಮುಖ್ಯಸ್ಥ