Tag: Kashmiri

  • ಪಾಕ್ ವಿರುದ್ಧ ಭಾರತ ಸೋತಿದ್ದಕ್ಕೆ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ಹಲ್ಲೆ!

    ಪಾಕ್ ವಿರುದ್ಧ ಭಾರತ ಸೋತಿದ್ದಕ್ಕೆ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ಹಲ್ಲೆ!

    ಶ್ರೀನಗರ: ಟಿ20 ವಿಶ್ವಕಪ್‍ನಲ್ಲಿ ಪಾಕಿಸ್ತಾನ ವಿರುದ್ಧ ಭಾನುವಾರ (ಅ.24) ನಡೆದ ಪಂದ್ಯದಲ್ಲಿ ಭಾರತ ಸೋತಿದ್ದಕ್ಕೆ ಗುಂಪೊಂದು ನಮ್ಮ ಮೇಲೆ ಹಲ್ಲೆ ನಡೆಸಿದೆ ಎಂದು ಕೆಲವರು ಕಾಶ್ಮೀರಿ ವಿದ್ಯಾರ್ಥಿಗಳು ಗಂಭೀರ ಆರೋಪ ಮಾಡಿದ್ದಾರೆ.

    ಪಂಜಾಬ್‍ನ ಸಂಗ್ರೂರ್ ಜಿಲ್ಲೆಯ ಭಾಯ್ ಗುರ್ದಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ ಹಾಗೂ ಮೊಹಲಿ ಜಿಲ್ಲೆಯ ಖಾರರ್‍ನ ರಾಯತ್ ಬಹರ ವಿವಿಯಲ್ಲಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆದಿದೆ ಎನ್ನಲಾಗಿದೆ.

    ಘಟನೆಯಲ್ಲಿ ರಾಯತ್ ಬಹರ ವಿವಿಯ ನಾಲ್ವರು ಸೇರಿದಂತೆ 10 ಕಾಶ್ಮೀರಿ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆಂದು ಐಎಎನ್‍ಎಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ. ಹಾಸ್ಟೆಲ್‍ನಲ್ಲಿ ಹಲ್ಲೆ ನಡೆದ ವೇಳೆ ಮುರಿದ ಕುರ್ಚಿಗಳು, ಬೆಡ್‍ಗಳು ಹಾಗೂ ಗಾಯಗೊಂಡ ವಿದ್ಯಾರ್ಥಿಗಳಿರುವ ದೃಶ್ಯದ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಶೇರ್ ಮಾಡಲಾಗಿದೆ.

    ಟಿ20 ವಿಶ್ವಕಪ್ ಪಂದ್ಯಾವಳಿ ನಡೆಯುತ್ತಿದ್ದು, ಭಾನುವಾರ ಭಾರತ-ಪಾಕಿಸ್ತಾನ ನಡುವೆ ಮ್ಯಾಚ್ ನಡೆಯಿತು. ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಹೀನಾಯ ಸೋಲನುಭವಿಸಿತು. ಇದನ್ನೂ ಓದಿ: ಭಾರತಕ್ಕೆ ಹೀನಾಯ ಸೋಲು – ಪಾಕಿಸ್ತಾನಕ್ಕೆ 10 ವಿಕೆಟ್ ಜಯ

  • ಯುವ ಟೆಕ್ಕಿ ಪಾಲಿಗೆ ಆಪತ್ಬಾಂಧವನಾದ ಪೊಲೀಸ್ ಪೇದೆ

    ಯುವ ಟೆಕ್ಕಿ ಪಾಲಿಗೆ ಆಪತ್ಬಾಂಧವನಾದ ಪೊಲೀಸ್ ಪೇದೆ

    ಬೆಂಗಳೂರು: ಕಾಶ್ಮೀರಿ ಯುವತಿ ಟೆಕ್ಕಿ ಪಾಲಿಗೆ ಪೊಲೀಸ್ ಪೇದೆಯೊಬ್ಬರು ಆಪತ್ಬಾಂಧವನಾಗಿದ್ದಾರೆ. ಪೇದೆಯ ಜವಾಬ್ದಾರಿಯುತ ಸಹಾಯದಿಂದ ಯುವತಿಗೆ ಬೆಂಗಳೂರಲ್ಲಿ ಕೆಲಸ ಸಿಕ್ಕಿದೆ.

    ಹೌದು. ಕೆಲ ದಿನಗಳ ಹಿಂದೆ ಕೆಲಸ ಅರಸಿ ಸಂದರ್ಶನಕ್ಕೆಂದು ಕಾಶ್ಮೀರದಿಂದ ಮರಿಯಾ ಎಂಬವರು ರಾಜಧಾನಿಗೆ ಬಂದಿದ್ದರು. ಇಲ್ಲಿನ ಮಾನ್ಯತಾ ಟೆಕ್ ಪಾರ್ಕಿನ ಖಾಸಗಿ ಕಂಪನಿಗೆ ಇಂಟರ್ ವ್ಯೂಗೆ ಬಂದಿದ್ದರು. ಈ ವೇಳೆ ಇಂಟರ್ ವ್ಯೂಗೆ ಹೋಗುವ ತರಾತುರಿಯಲ್ಲಿ ಮಾರ್ಕ್ಸ್ ಕಾರ್ಡ್, ಆಧಾರ್ ಕಾರ್ಡ್, ಪಾಸ್ ಪೋರ್ಟ್ ಸಮೇತವಿದ್ದ ಬ್ಯಾಗ್ ಕಳೆದುಕೊಂಡಿದ್ದರು.

    ಇದೇ ವೇಳೆ ಮಾನ್ಯತಾ ಟೆಕ್ ಪಾರ್ಕ್ ಬಳಿ ಗಸ್ತಿನಲ್ಲಿದ್ದ ಸಂಪಿಗೆಹಳ್ಳಿ ಠಾಣೆಯ ಪೊಲೀಸ್ ಪೇದೆ ಸದಾಶಿವ ಬೆಳಗಲಿ, ಯುವತಿ ಕಳೆದುಕೊಂಡಿದ್ದ ಬ್ಯಾಗನ್ನ ಸ್ಥಳೀಯ ಕಾನ್ ಸ್ಟೇಬಲ್‍ಗೆ ನೀಡಿದ್ದರು. ಯುವತಿಯ ಫೊನ್ ನಂಬರ್ ಸಿಗದೇ ಪೇದೆ ಅಕ್ಕಪಕ್ಕದ ಠಾಣೆಗಳಿಗೆ ಮಾಹಿತಿ ನೀಡಿದ್ದರು.

    ಮರುದಿನ ಯುವತಿ ಇ-ಲಾಸ್ಟ್ ನಲ್ಲಿ ದೂರು ದಾಖಲಿದ್ದರು. ಈ ಮಾಹಿತಿ ಪಡೆದುಕೊಂಡ ಕೂಡಲೇ ಪೊಲೀಸ್ ಪೇದೆ, ಯುವತಿಗೆ ಕರೆ ಮಾಡಿ ಕಳೆದುಕೊಂಡಿದ್ದ ದಾಖಲಾತಿಗಳನ್ನ ಹಿಂದಿರುಗಿಸುವ ಮೂಲಕ ಮಾನವೀಯತೆ ಮೆರೆದರು. ಈ ಮೂಲಕ ಯುವತಿ ತನ್ನ ಅಧಿಕೃತ ದಾಖಲೆಗಳನ್ನು ಸಬ್ಮಿಟ್ ಮಾಡಿ ಸಂದರ್ಶನದಲ್ಲಿ ಆಯ್ಕೆಯಾಗಿದ್ದಾರೆ.

    ಸಂಪಿಗೆಹಳ್ಳಿ ಠಾಣಾ ಪೊಲೀಸರ ಸಹಾಯಕ್ಕೆ ಕಾಶ್ಮೀರಿ ಯುವತಿ ಧನ್ಯವಾದ ಅರ್ಪಿಸಿದ್ದಾರೆ.

  • ರೈಲ್ವೆ ಹಳಿ ಮೇಲೆ ಮಲಗಿ ಸ್ಟಂಟ್ ಮಾಡಿದ ವ್ಯಕ್ತಿಯ ವಿಡಿಯೋ ವೈರಲ್

    ರೈಲ್ವೆ ಹಳಿ ಮೇಲೆ ಮಲಗಿ ಸ್ಟಂಟ್ ಮಾಡಿದ ವ್ಯಕ್ತಿಯ ವಿಡಿಯೋ ವೈರಲ್

    ಶ್ರೀನಗರ: ಕಾಶ್ಮೀರಿ ವ್ಯಕ್ತಿಯೊಬ್ಬ ರೈಲ್ವೇ ಹಳಿ ಮೇಲೆ ಮಲಗಿ ಸ್ಟಂಟ್ ಮಾಡಿದ್ದು, ಈಗ ಆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

    ಈ ವಿಡಿಯೋ ಮಂಗಳವಾರ ಸಂಜೆಯಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವಿಡಿಯೋದಲ್ಲಿ ಫಿರನ್ ಹೊದಿಕೆಯ (ಸಾಂಪ್ರದಾಯಿಕ ಕಾಶ್ಮೀರಿ ಉಡುಗೆ) ವ್ಯಕ್ತಿಯೊಬ್ಬ ರೈಲ್ವೇ ಟ್ರ್ಯಾಕ್‍ನ ಮಧ್ಯದಲ್ಲಿ ರೈಲಿಗೆ ಮುಖವನ್ನು ಕೆಳಗೆ ಮಾಡಿ ಮಲಗಿರುವುದನ್ನು ನೋಡಬಹುದು.

    ರೈಲು ವೇಗವಾಗಿ ಬಂದು ಆತನ ಮೇಲೆ ಹೋಗುತ್ತದೆ. ನಂತರ ವ್ಯಕ್ತಿ ಎದ್ದು ಬಂದು ತಾನು ಮಾಡಿದ ಸ್ಟಂಟ್ ಗೆದ್ದೆ ಎಂದು ಸಂಭ್ರಮಿಸುತ್ತಿದ್ದು, ಈ ಎಲ್ಲಾ ದೃಶ್ಯವನ್ನು ಆತನ ಸ್ನೇಹಿತ ರೆಕಾರ್ಡ್ ಮಾಡಿದ್ದಾನೆ. ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾನೆ.

    ಈ ವಿಡಿಯೋ ಅಪ್ಲೋಡ್ ಮಾಡಿದ ಬಳಿಕ ಹಲವಾರು ಸಾಮಾಜಿಕ ಜಾಲತಾಣದ ಬಳಕೆದಾರರು ಆ ವ್ಯಕ್ತಿ ವಿರುದ್ಧ ಕಿಡಿಕಾರಿದ್ದಾರೆ. ಅಷ್ಟೇ ಅಲ್ಲದೇ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಈ ವ್ಯಕ್ತಿಯ ಮಾಡಿರುವ ಕೆಲಸವನ್ನು ಮೂರ್ಖತನ ಎಂದು ಹೇಳಿದ್ದಾರೆ.

    ಇಂತಹ ಸಾಹಸ ಮಾಡುವುದು ತುಂಬಾ ತಪ್ಪಾಗಿದೆ. ಈ ಮೂರ್ಖತನವನ್ನು ನಾನು ನಂಬಲು ಸಾಧ್ಯವಾಗುತ್ತಿಲ್ಲ ಎಂದು ವಿಡಿಯೋ ಹಾಕಿ ಟ್ವೀಟ್ ಮಾಡಿದ್ದಾರೆ. ಮೂರ್ಖತನ ಸಾಹಸ ಮಾಡಿದ ವ್ಯಕ್ತಿಯ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಫೇಸ್‍ಬುಕ್ ಬಳಕೆದಾರರು ಬರೆದು ಪೋಸ್ಟ್ ಮಾಡಿದ್ದಾರೆ.

    ಹಲವು ವಾಟ್ಸಪ್ ಗುಂಪಿನ ಸದಸ್ಯರು ಈ ವಿಡಿಯೋವನ್ನು ಹಂಚಿಕೆ ಮಾಡಬೇಡಿ. ಇದರಿಂದ ಕೆಲವು ಮನಸ್ಸುಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿದ್ದಾರೆ.