Tag: Kashmiri Pandit

  • ಕಾಶ್ಮೀರಿ ಪಂಡಿತನನ್ನು ಹತ್ಯೆಗೈದ  ಉಗ್ರ ಎನ್‌ಕೌಂಟರ್‌ಗೆ ಬಲಿ

    ಕಾಶ್ಮೀರಿ ಪಂಡಿತನನ್ನು ಹತ್ಯೆಗೈದ ಉಗ್ರ ಎನ್‌ಕೌಂಟರ್‌ಗೆ ಬಲಿ

    ಶ್ರೀನಗರ: ಅವಂತಿಪೋರಾ ಪ್ರದೇಶದಲ್ಲಿ (Awantipora Area) ನಡೆದ ಎನ್‍ಕೌಂಟರ್‌ನಲ್ಲಿ ಭದ್ರತಾ ಪಡೆಗಳು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಕಾಶ್ಮೀರಿ ಪಂಡಿತನ ಹತ್ಯೆಯಲ್ಲಿ ಭಾಗಿಯಾಗಿದ್ದ ಓರ್ವ ಉಗ್ರನನ್ನು (Terrorists) ಹತ್ಯೆಗೈದಿದ್ದಾರೆ.

    ಹತ್ಯೆಗೀಡಾದವನನ್ನು ಅಕಿಬ್ ಮುಷ್ತಾಕ್ ಭಟ್‌ ಎಂದು ಗುರುತಿಸಲಾಗಿದೆ. ಪುಲ್ವಾಮಾದಲ್ಲಿ ಕಾಶ್ಮೀರಿ ಪಂಡಿತನೊಬ್ಬನನ್ನು (Kashmiri Pandit) ಉಗ್ರರು ಹೊಡೆದುರುಳಿಸಿದ ಕೆಲವೇ ದಿನಗಳ ನಂತರ ಈ ಘಟನೆ ನಡೆದಿದೆ. ಅಕಿಬ್ ಮುಷ್ತಾಕ್ ಭಟ್‌ ಆರಂಭದಲ್ಲಿ ಹೆಚ್‌ಎಂ ಉಗ್ರ ಸಂಘಟನೆಯಲ್ಲಿ ಕೆಲಸ ಮಾಡುತ್ತಿದ್ದ. ಈಗ ಟಿಆರ್‌ಎಫ್‌ನೊಂದಿಗೆ ಕೆಲಸ ಮಾಡುತ್ತಿದ್ದ. ಈ ಬಗ್ಗೆ ಕಾಶ್ಮೀರ (Kashmir) ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?: ಪುಲ್ವಾಮಾ ಜಿಲ್ಲೆಯ ಪಡಗಂಪೋರಾ ಅವಂತಿಪೋರಾದಲ್ಲಿ ಎನ್‍ಕೌಂಟರ್ ನಡೆದಿದೆ. ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯದಲ್ಲಿವೆ. ಎನ್‍ಕೌಂಟರ್‌ನಲ್ಲಿ ಒಬ್ಬ ಉಗ್ರನನ್ನು ಕೊಲ್ಲಲಾಗಿದೆ ಎಂದು ತಿಳಿಸಿದೆ. ಇದನ್ನೂ ಓದಿ: ಫಾರ್ಮಾ ಕಂಪನಿಯಲ್ಲಿ ಸ್ಫೋಟ – ಇಬ್ಬರು ಸಾವು

    ಭಾನುವಾರ ಮತ್ತೊಂದು ಉದ್ದೇಶಿತ ಹತ್ಯೆಯಲ್ಲಿ ಕಾಶ್ಮೀರಿ ಪಂಡಿತ್ ಬಲಿಯಾಗಿದ್ದರು. ಸಂಜಯ್ ಶರ್ಮಾ ಅವರು ಪುಲ್ವಾಮಾ ಜಿಲ್ಲೆಯ ಸ್ಥಳೀಯ ಮಾರುಕಟ್ಟೆಗೆ ಹೋಗುತ್ತಿದ್ದರು. ಈ ವೇಳೆ ಉಗ್ರರು ಅವರ ಮೇಲೆ ಗುಂಡಿನ ದಾಳಿ ನಡೆಸಿದರು. ಅವರನ್ನು ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಪಾಕ್, ಚೀನಾದಲ್ಲಿ ತರಬೇತಿ ಪಡೆದ ಡೇಂಜರಸ್ ವ್ಯಕ್ತಿ ಭಾರತಕ್ಕೆ ಎಂಟ್ರಿ – NIA ಅಲರ್ಟ್

  • ಕಾಶ್ಮೀರಿ ಪಂಡಿತರಿಗೆ ಲಕ್ಷಗಳ ರೂಪದಲ್ಲಿ ನೆರವಿನ ಹಸ್ತಚಾಚಿದ ನಟ ಅನುಪಮ್ ಖೇರ್

    ಕಾಶ್ಮೀರಿ ಪಂಡಿತರಿಗೆ ಲಕ್ಷಗಳ ರೂಪದಲ್ಲಿ ನೆರವಿನ ಹಸ್ತಚಾಚಿದ ನಟ ಅನುಪಮ್ ಖೇರ್

    ದಿ ಕಾಶ್ಮೀರ್ ಫೈಲ್ಸ್  (The Kashmiri Files)ಸಿನಿಮಾದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದ ಬಾಲಿವುಡ್ ನಟ ಅನುಪಮ್ ಖೇರ್ (Anupam Kher), ಕಾಶ್ಮೀರಿ ಪಂಡಿತರಿಗೆ (Kashmiri Pandit) ನೆರವಿನ ಹಸ್ತ (Donation)ಚಾಚಿದ್ದಾರೆ. ದೆಹಲಿಯಲ್ಲಿ ನಡೆದ ಗ್ಲೋಬಲ್ ಕಾಶ್ಮೀರಿ ಪಂಡಿತರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಅವರು ‘ನಿಮ್ಮಿಂದ ನಾವು ದುಡ್ಡು ಮಾಡಿದ್ದೇವೆ. ನಿಮಗೆ ಸಹಾಯ ಮಾಡುವುದು ನಮ್ಮ ಕರ್ತವ್ಯ’ ಎಂದಿರುವ ಅವರು ಐದು ಲಕ್ಷ ರೂಪಾಯಿ ದೇಣಿಗೆ ಘೋಷಿಸಿದ್ದಾರೆ.

    ದಿ ಕಾಶ್ಮೀರ್ ಫೈಲ್ಸ್ ಸಿನಿಮಾ 2022 ಮಾರ್ಚ್ 11ರಂದು ಬಿಡುಗಡೆಯಾಗಿ ಸಾಕಷ್ಟು ಸದ್ದು ಮಾಡಿತ್ತು. ಈ ಸಿನಿಮಾವನ್ನು ಎಲ್ಲರಿಗೂ ತೋರಿಸುವ ಉದ್ದೇಶದಿಂದ ನಾನಾ ರಾಜ್ಯಗಳ ಸರಕಾರವು ತೆರಿಗೆ ವಿನಾಯತಿ ಕೂಡ ಘೋಷಣೆ ಮಾಡಿದ್ದವು. ಅಲ್ಲದೇ, ಅನೇಕ ರಾಜ್ಯಗಳಲ್ಲಿ ಸಿನಿಮಾ ಹೌಸ್ ಫುಲ್ ಪ್ರದರ್ಶನ ಕಂಡಿತು. ಫಲವಾಗಿ ಬರೋಬ್ಬರಿ 340 ಕೋಟಿ ರೂಪಾಯಿ ಸಿನಿಮಾ ಸಂಪಾದಿಸಿತು. ಇದನ್ನೂ ಓದಿ: ನಟ ಉಪೇಂದ್ರ ಪಕ್ಷಕ್ಕೆ ಅಧಿಕೃತ ಚಿಹ್ನೆ ನೀಡಿದ ಚುನಾವಣಾ ಆಯೋಗ

    ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಕುರಿತಾಗಿ ಈಗಲೂ ಭಿನ್ನಾಭಿಪ್ರಾಯಗಳು ಇದ್ದರೂ, ಆ ಸಿನಿಮಾ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿತು. ಕೇವಲ ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ್ಲೂ ಸಿನಿಮಾ ಪ್ರದರ್ಶನವಾಯಿತು. ಅನೇಕ ಪ್ರಶಸ್ತಿಗಳು ಸಿನಿಮಾವನ್ನು ಹುಡುಕಿಕೊಂಡು ಬಂದವು. ಈಗಲೂ ಓಟಿಟಿಯಲ್ಲಿ ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿದೆ. ಹಾಗಾಗಿ ಚಿತ್ರ ಸಾಕಷ್ಟು ದುಡ್ಡು ಮಾಡಿದೆ.

    ಈ ಎಲ್ಲ ಕಾರಣದಿಂದಾಗಿ ಕಾಶ್ಮೀರಿ ಪಂಡಿತ್ ಕಾನ್ ಕ್ಲೇವ್ ದಲ್ಲಿ ಮಾತನಾಡಿದ ಅನುಪಮ್ ಖೇರ್, ‘ನಮ್ಮ ಜನರಿಗೆ ನಾನು ನೆರವಿನ ಹಸ್ತ ಚಾಚುವಂತಹ ಸಮಯ ಬಂದಿದೆ. ಈ ಸಮಯದಲ್ಲಿ ನಾವು ಕಾಶ್ಮೀರಿ ಪಂಡಿತರ ಜೊತೆ ನಿಂತುಕೊಳ್ಳಬೇಕು. ಅವರಿಂದ ದುಡ್ಡು ಮಾಡಿದ್ದೇವೆ. ಆ ಎಚ್ಚರಿಕೆ ನಮ್ಮಲ್ಲಿ ಇರಬೇಕು’ ಎಂದು ಅವರು ಭಾವುಕರಾಗಿ ಮಾತನಾಡಿದ್ದಾರೆ.

  • ಪಂಡಿತರಿಗೆ ಕೇಂದ್ರದಿಂದ ಗುಡ್‍ನ್ಯೂಸ್ – ಜಮ್ಮು ಕಾಶ್ಮೀರ ವಿಧಾನಸಭೆಯಲ್ಲಿ ಪ್ರಾತಿನಿಧ್ಯ ನೀಡಲು ಚಿಂತನೆ

    ಪಂಡಿತರಿಗೆ ಕೇಂದ್ರದಿಂದ ಗುಡ್‍ನ್ಯೂಸ್ – ಜಮ್ಮು ಕಾಶ್ಮೀರ ವಿಧಾನಸಭೆಯಲ್ಲಿ ಪ್ರಾತಿನಿಧ್ಯ ನೀಡಲು ಚಿಂತನೆ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರ (Jammu and Kashmir) ವಿಧಾನಸಭೆಯಲ್ಲಿ ಕಾಶ್ಮೀರಿ ಪಂಡಿತರಿಗೆ (Kashmiri Pandit) ಪ್ರಾತಿನಿಧ್ಯ ನೀಡಲು ಕೇಂದ್ರ ಸರ್ಕಾರವು ಕಾನೂನನ್ನು ಬದಲಿಸಲು ಯೋಜಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.

    ಮೂಲಗಳ ಪ್ರಕಾರ, ಕಾಶ್ಮೀರಿ ಪಂಡಿತರನ್ನು ಶೀಘ್ರದಲ್ಲೇ ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆಗೆ (Assembly) ನಾಮನಿರ್ದೇಶನ ಮಾಡಲಾಗುವುದು. ಇದರಿಂದಾಗಿ ಅವರು ರಾಜ್ಯವನ್ನು ಅಭಿವೃದ್ಧಿ ಪಡಿಸಲು ಉತ್ತಮವಾಗಿ ಪ್ರತಿನಿಧಿಸಲ್ಪಡುತ್ತಾರೆ. ಅಷ್ಟೇ ಅಲ್ಲದೇ 3 ದಶಕಗಳಿಂದ ಕಾಶ್ಮೀರಿ ಪಂಡಿತರ ಮೇಲೆ ಆಗುತ್ತಿರುವ ಕಿರುಕುಳ ಹಾಗೂ ಆ ಸಮುದಾಯದ ರಾಜಕೀಯ ಹಕ್ಕಗಳನ್ನು ರಕ್ಷಿಸಲು ಸಹಾಯವಾಗುತ್ತದೆ ಎಂಬ ಕಾರಣದಿಂದಾಗಿ ಕೇಂದ್ರ ಈ ನಿರ್ಧಾರವನ್ನು ತೆಗೆದುಕೊಂಡಿದೆ.

    Kashmiri_Pandits

    ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆಯ ಕಾನೂನಿಗೆ ತಿದ್ದುಪಡಿಗಳನ್ನು ಸಂಸತ್ತಿನಲ್ಲಿ ತರಲಾಗುವುದು ಎಂದು ಮೂಲಗಳು ತಿಳಿಸಿವೆ. ಈ ವರ್ಷದ ಆರಂಭದಲ್ಲಿ ನಡೆದ ಪಂಡಿತರ ಮೇಲಿನ ದಾಳಿಯ ಬಳಿಕ ಈ ನಿರ್ಧಾರವನ್ನು ಕೇಂದ್ರ ತೆಗೆದುಕೊಂಡಿದೆ.

    1990ರ ದಶಕದಲ್ಲಿ ಕಾಶ್ಮೀರಿ ಪಂಡಿತರ ಮೇಲೆ ಕಣಿವೆ ರಾಜ್ಯದಲ್ಲಿ ಕ್ರೂರವಾಗಿ ದೌರ್ಜನ್ಯಗಳ ನಡೆದಿದ್ದವು. ಈ ವೇಳೆ ಅನೇಕ ಕಾಶ್ಮೀರಿ ಪಂಡಿತರು ಮೃತಪಟ್ಟಿದ್ದು, ಇನ್ನೂ ಕೆಲವರು ತಮ್ಮ ಜೀವವನ್ನು ಉಳಿಸಿಕೊಳ್ಳಲು ಕಾಶ್ಮೀರವನ್ನು ತೊರೆಯಬೇಕಾದ ಪರಿಸ್ಥಿತಿಯು ಬಂತು. ಅದಾದ ಬಳಿಕ ಕಾಶ್ಮೀರಿ ಪಂಡಿತರ ಸಮುದಾಯವು ಬಹಳ ಹಿಂದಿನಿಂದಲೂ ತಮ್ಮ ರಾಜಕೀಯ ಹಕ್ಕುಗಳನ್ನು ಸಂರಕ್ಷಿಸಲು ಹಾಗೂ ಖಾತ್ರಿ ಪಡಿಸಿಕೊಳ್ಳುವ ನಿಟ್ಟಿನಿಂದ ರಾಜ್ಯ ವಿಧಾನಸಭೆಯಲ್ಲಿ ಪ್ರಾತಿನಿಧ್ಯವನ್ನು ನೀಡಲು ಒತ್ತಾಯಿಸುತ್ತಿವೆ. ಇದನ್ನೂ ಓದಿ: ಸರ್ಕಾರಿ ವೈದ್ಯರಾಗಿ ಇತಿಹಾಸ ಬರೆದ ತೆಲಂಗಾಣದ ಇಬ್ಬರು ತೃತೀಯಲಿಂಗಿಗಳು

    ಈ ಬೆನ್ನಲ್ಲೇ ಡಿಲಿಮಿಟೇಶನ್ ಆಯೋಗವು ಈ ವರ್ಷದ ಆರಂಭದಲ್ಲಿ ಕಾಶ್ಮೀರಿ ಪಂಡಿತರು ಮತ್ತು ಪಾಕ್ ಆಕ್ರಮಿತ ಕಾಶ್ಮೀರದಿಂದ ಸ್ಥಳಾಂತರಗೊಂಡವರಿಗೆ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿ ಪ್ರಾತಿನಿಧ್ಯವನ್ನು ಶಿಫಾರಸು ಮಾಡಿತ್ತು. ಈ ವೇಳೆ ಕಾಶ್ಮೀರಿ ಪಂಡಿತರ ಸಮುದಾಯವು ತಮ್ಮನ್ನು ಮನೆಗಳಿಂದ ಹೊರದಬ್ಬಲಾಯಿತು. ಅಷ್ಟೇ ಅಲ್ಲದೇ ನಾವು ಹುಟ್ಟಿ ಬೆಳೆದ ದೇಶದಲ್ಲೇ ನಿರಾಶ್ರಿತರಂತೆ ಬದುಕುವ ಪರಿಸ್ಥಿತಿ ಬಂದಿದೆ ಎಂದು ಆಯೋಗಕ್ಕೆ ತಿಳಿಸಿತ್ತು. ಇದನ್ನೂ ಓದಿ: ದೆಹಲಿ ಮದ್ಯ ಹಗರಣದಲ್ಲಿ 100 ಕೋಟಿ ಕಿಕ್‌ಬ್ಯಾಕ್‌ ಆರೋಪ – ಕೆಸಿಆರ್ ಪುತ್ರಿ ಕವಿತಾಗೆ 10ಕ್ಕೂ ಹೆಚ್ಚು ಬಾರಿ ಕರೆ

    Live Tv
    [brid partner=56869869 player=32851 video=960834 autoplay=true]

  • ಜಮ್ಮುವಿನ ಮನೆಯಲ್ಲಿ ಒಂದೇ ಕುಟುಂಬದ 6 ಮಂದಿ ಶವವಾಗಿ ಪತ್ತೆ!

    ಜಮ್ಮುವಿನ ಮನೆಯಲ್ಲಿ ಒಂದೇ ಕುಟುಂಬದ 6 ಮಂದಿ ಶವವಾಗಿ ಪತ್ತೆ!

    ಶ್ರೀನಗರ: ಜಮ್ಮುವಿನ ಸಿದ್ರಾ ಪ್ರದೇಶದ ಮನೆಯಲ್ಲಿ ಒಂದೇ ಕುಟುಂಬದ ಆರು ಮಂದಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಘಟನೆ ಸಂಬಂಧ ಹೆಚ್ಚಿನ ತನಿಖೆ ಕೈಗೊಂಡಿದ್ದು, ಮೃತದೇಹಗಳನ್ನು ಜಮ್ಮುವಿನ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಕಾಶ್ಮೀರದಲ್ಲಿ ಮತ್ತೆ ಪಂಡಿತರು ಟಾರ್ಗೆಟ್ – ಓರ್ವನ ಹತ್ಯೆ, ಮತ್ತೋರ್ವ ಗಂಭೀರ

    ನಿನ್ನೆಯಷ್ಟೇ ಮುಂಜಾನೆ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಚೋಟಿಪೋರಾ ಪ್ರದೇಶದ ಸೇಬಿನ ತೋಟದಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿ ಕಾಶ್ಮೀರಿ ಪಂಡಿತನೊಬ್ಬನನ್ನು ಗುಂಡಿಕ್ಕಿ ಕೊಂದರು. ಈ ವೇಳೆ ಆತನ ಸಹೋದರ ಗಾಯಗೊಂಡಿದ್ದರು.

    ಮೃತ ವ್ಯಕ್ತಿ ಸುನೀಲ್ ಕುಮಾರ್ ಭಟ್ ಎಂದು ಗುರುತಿಸಲಾಗಿದೆ. ಆತನ ಸಹೋದರ ಪಿಂಟು ಅವರಿಗೆ ಗಾಯಗಳಾಗಿವೆ. ಘಟನೆ ಬಳಿಕ ಸ್ಥಳದಲ್ಲಿ ಭದ್ರತಾ ಪಡೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇದನ್ನೂ ಓದಿ: ಕಾಶ್ಮೀರಿ ಪಂಡಿತನ ಹತ್ಯೆ ಬಳಿಕ ಮತ್ತಷ್ಟು ದಾಳಿಗಳ ಎಚ್ಚರಿಕೆ

    ಈ ಘಟನೆಯಾದ ಮಾರನೇ ದಿನವೇ ಒಂದೇ ಕುಟುಂಬದ ಆರು ಮಂದಿ ಶವಗಳು ಪತ್ತೆಯಾಗಿವೆ. ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕಾಶ್ಮೀರಿ ಪಂಡಿತನ ಹತ್ಯೆ ಬಳಿಕ ಮತ್ತಷ್ಟು ದಾಳಿಗಳ ಎಚ್ಚರಿಕೆ

    ಕಾಶ್ಮೀರಿ ಪಂಡಿತನ ಹತ್ಯೆ ಬಳಿಕ ಮತ್ತಷ್ಟು ದಾಳಿಗಳ ಎಚ್ಚರಿಕೆ

    ಶ್ರೀನಗರ: ಇಂದು ನಡೆದ ಕಾಶ್ಮೀರಿ ಪಂಡಿತನ ಹತ್ಯೆ ಬಳಿಕ ಮತ್ತಷ್ಟು ದಾಳಿಗಳು ನಡೆಯುವ ಸಾಧ್ಯತೆಯಿದೆ ಎಂದು ಕೇಂದ್ರ ಗೃಹ ಸಚಿವಾಲಯ ಎಚ್ಚರಿಕೆಯನ್ನು ನೀಡಿದೆ.

    ಸ್ವಾತಂತ್ರ್ಯೋತ್ಸವದಂದು ಕಾಶ್ಮೀರದಲ್ಲಿ ರಾಷ್ಟ್ರ ಧ್ವಜಾರೋಹಣ ಹಾಗೂ ವಿವಿಧ ಸ್ಥಳಗಳಲ್ಲಿ ತಿರಂಗಾ ರ‍್ಯಾಲಿಗಳನ್ನು ಮಾಡಿರುವ ಹಿನ್ನೆಲೆಯಲ್ಲಿ ಭಯೋತ್ಪಾದಕ ಸಂಘಟನೆಗಳು ಮತ್ತೆ ದಾಳಿ ನಡೆಸುವ ಸಾಧ್ಯತೆಯಿದೆ. ಅದರಲ್ಲೂ ವಿಶೇಷವಾಗಿ ಕಾಶ್ಮೀರೇತರರ ಮೇಲೆ ದಾಳಿ ಆಗಬಹುದು ಎಂದು ಕೇಂದ್ರ ಸಚಿವಾಲಯದ ಮೂಲಗಳು ತಿಳಿಸಿವೆ.

    ಇಂದು ಶೋಪಿಯಾನ್ ಜಿಲ್ಲೆಯ ಸೇಬಿನ ತೋಟದಲ್ಲಿ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ಕಾಶ್ಮೀರಿ ಪಂಡಿತನೊಬ್ಬನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಆತನ ಸಹೋದರ ದಾಳಿ ವೇಳೆ ಗಾಯಗೊಂಡಿದ್ದರು. ಈ ದಾಳಿಯನ್ನು ಅಲ್ ಬದ್ರ್‍ನ ಶಾಖೆಯಾದ ಕಾಶ್ಮೀರ ಸ್ವಾತಂತ್ರ್ಯ ಹೋರಾಟಗಾರರು ಮಾಡಿದ್ದಾರೆ ಎನ್ನಲಾಗುತ್ತಿದ್ದು, ತಿರಂಗಾ ರ್ಯಾಲಿಗಳಲ್ಲಿ ಭಾಗವಹಿಸಲು ಜನರನ್ನು ಪ್ರೋತ್ಸಾಹಿಸಿದ್ದಕ್ಕಾಗಿ ಈ ಪಂಡಿತ ಸಹೋದರರ ಮೇಲೆ ದಾಳಿ ನಡೆಸಲಾಗಿದೆ ಎನ್ನಲಾಗಿದೆ.

    1990ರ ದಶಕದಲ್ಲಿ ಕಾಶ್ಮೀರದಿಂದ ಎಂದಿಗೂ ವಲಸೆ ಹೋಗದ ಕುಟುಂಬಗಳಲ್ಲಿ ಹತ್ಯೆಯಾದ ಸುನಿಲ್ ಕುಮಾರ್ ಅವರ ಕುಟುಂಬವೂ ಒಂದಾಗಿತ್ತು. ಈ ಹಿನ್ನೆಲೆಯಲ್ಲಿ ಅವರ ಮೇಲೆ ದಾಳಿ ನಡೆಸಲಾಗಿದೆ. ಇದನ್ನೂ ಓದಿ: ಕಾಶ್ಮೀರವನ್ನು ಬಿಟ್ಟು ಬನ್ನಿ: ಕಾಶ್ಮೀರಿ ಪಂಡಿತರ ಸಂಘರ್ಷ ಸಮಿತಿ ಒತ್ತಾಯ

    Kashmiri_Pandits

    ಘಟನೆಗೆ ಸಂಬಂಧಿಸಿ ಗುಪ್ತಚರ ಇಲಾಖೆ ಇನ್ನಷ್ಟು ಮಾಹಿತಿ ನೀಡಿದ್ದು, ಗಡಿಯಿಂದ ಹೆಚ್ಚಿನ ಪ್ರಮಾಣದಲ್ಲಿ ಶಸ್ತ್ರಾಸ್ತ್ರಗಳು ಹಾಗೂ ಮದ್ದು ಗುಂಡುಗಳು ಕಳ್ಳ ಸಾಗಣೆಯಾಗಿವೆ. ಇದರಿಂದಾಗಿ ಮುಂಬರುವ ದಿನಗಳಲ್ಲಿ ಹತ್ಯೆಗಳು ಹೆಚ್ಚಾಗುವ ಸಾಧ್ಯತೆಯಿದೆ. ಈ ರೀತಿಯ ಘಟನೆಗಳನ್ನು ತರಬೇತಿ ಇಲ್ಲದವರೂ ಸೇರಿದಂತೆ ಯಾರು ಬೇಕಾದರೂ ನಡೆಸಬಹುದಾಗಿದೆ. ಈ ಉಗ್ರರು ಜನಪ್ರತಿನಿಧಿಗಳನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಗೃಹ ಸಚಿವಾಲಯ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಕಾಶ್ಮೀರದಲ್ಲಿ ಮತ್ತೆ ಪಂಡಿತರು ಟಾರ್ಗೆಟ್ – ಓರ್ವನ ಹತ್ಯೆ, ಮತ್ತೋರ್ವ ಗಂಭೀರ

    Live Tv
    [brid partner=56869869 player=32851 video=960834 autoplay=true]

  • ಕಾಶ್ಮೀರಿ ಪಂಡಿತರಿಗೆ ಭದ್ರತೆ ಒದಗಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ: ಓವೈಸಿ

    ಕಾಶ್ಮೀರಿ ಪಂಡಿತರಿಗೆ ಭದ್ರತೆ ಒದಗಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ: ಓವೈಸಿ

    ನವದೆಹಲಿ: ಜಮ್ಮುವಿನ ಶೋಪಿಯಾನ್‌ ಜಿಲ್ಲೆಯಲ್ಲಿ ಭಯೋತ್ಪಾದಕರ ಗುಂಡಿಗೆ ಕಾಶ್ಮೀರಿ ಪಂಡಿತನ ಹತ್ಯೆಗೆ ಎಐಎಂಐಎಂ ಮುಖ್ಯಸ್ಥ ಹಾಗೂ ಸಂಸದ ಅಸಾದುದ್ದೀನ್‌ ಓವೈಸಿ ಬೇಸರ ವ್ಯಕ್ತಪಡಿಸಿದ್ದಾರೆ. ಕಾಶ್ಮೀರಿ ಪಂಡಿತರನ್ನು ರಕ್ಷಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಕಿಡಿಕಾರಿದ್ದಾರೆ.

    ಕೇಂದ್ರ ಮತ್ತು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಓವೈಸಿ, ಕಾಶ್ಮೀರದಲ್ಲಿ ನಡೆದ ಘಟನೆ ನರೇಂದ್ರ ಮೋದಿ ಸರ್ಕಾರದ ವೈಫಲ್ಯಕ್ಕೆ ಮತ್ತೊಂದು ಉದಾಹರಣೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಾಶ್ಮೀರದಲ್ಲಿ ಮತ್ತೆ ಪಂಡಿತರು ಟಾರ್ಗೆಟ್ – ಓರ್ವನ ಹತ್ಯೆ, ಮತ್ತೋರ್ವ ಗಂಭೀರ

    ಕಾಶ್ಮೀರಿ ಪಂಡಿತರಿಗೆ ಭದ್ರತೆ ಒದಗಿಸಲು ಕೇಂದ್ರ ವಿಫಲವಾಗಿದೆ. ಹೀಗಾಗಿ ಅವರು ಹೆಚ್ಚಿನ ಹಿಂಸಾಚಾರಕ್ಕೆ ಹೆದರಿ ಕಣಿವೆಯನ್ನು ತೊರೆಯಲು ಬಯಸುತ್ತಿದ್ದಾರೆ ಎಂದು ಹೇಳಿದ್ದಾರೆ.

    ಬಿಜೆಪಿ, ಜಮ್ಮು ಮತ್ತು ಕಾಶ್ಮೀರದಲ್ಲಿ ಲೆಫ್ಟಿನೆಂಟ್‌ ಗವರ್ನರ್‌ ನೇಮಿಸಿತು. ಈಗ ಅಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370ನೇ ವಿಧಿ ರದ್ದು ಮಾಡಿದ್ದು ಕೂಡ ಸಹಾಯ ಮಾಡಲಿಲ್ಲ. ಇಲ್ಲಿ ಕಾಶ್ಮೀರಿ ಪಂಡಿತರ ಮೇಲೆ ನಡೆದ ಮೊದಲ ದಾಳಿ ಇದಲ್ಲ. ಅವರಿಗೆ ಭದ್ರತೆ ನೀಡುವಲ್ಲಿ ಕೇಂದ್ರ ವಿಫಲವಾಗಿದ್ದು, ಕಾಶ್ಮೀರಿ ಪಂಡಿತರು ಈಗ ಕಾಶ್ಮೀರವನ್ನು ತೊರೆಯಲು ಬಯಸುತ್ತಿದ್ದಾರೆ ಎಂದು ಮಾತನಾಡಿದ್ದಾರೆ. ಇದನ್ನೂ ಓದಿ: ಜಿಯೋ ಬಿಡುಗಡೆ ಮಾಡಲಿದೆ ಕಡಿಮೆ ಬೆಲೆಯ 5G ಫೋನ್‌ – ಬೆಲೆ ಎಷ್ಟು? ಗುಣ ವೈಶಿಷ್ಟ್ಯಗಳು ಏನು?

    Live Tv
    [brid partner=56869869 player=32851 video=960834 autoplay=true]

  • ಕಾಶ್ಮೀರಿ ಪಂಡಿತರ‍್ಯಾರು ಕಣಿವೆಯನ್ನು ತೊರೆದಿಲ್ಲ: ಕೇಂದ್ರ ಸಚಿವ

    ಕಾಶ್ಮೀರಿ ಪಂಡಿತರ‍್ಯಾರು ಕಣಿವೆಯನ್ನು ತೊರೆದಿಲ್ಲ: ಕೇಂದ್ರ ಸಚಿವ

    ನವದೆಹಲಿ: 2022ರ ಅವಧಿಯಲ್ಲಿ ಕಾಶ್ಮೀರಿ ಪಂಡಿತರು ಯಾರೂ ಕಣಿವೆಯನ್ನು ತೊರೆದಿಲ್ಲ ಎಂದು ಕೇಂದ್ರ ಸಚಿವ ನಿತ್ಯಾನಂದ ರೈ ತಿಳಿಸಿದರು.

    ಸಂಸತ್ತಿನಲ್ಲಿ ಮಾತನಾಡಿದ ಅವರು, 2019ರ ಅಗಸ್ಟ್‌ನಲ್ಲಿ 320ನೇ ವಿಧಿಯನ್ನು ರದ್ದುಪಡಿಸಿದ ನಂತರ ಯಾವುದೇ ಕಾಶ್ಮೀರಿ ಪಂಡಿತರು ವಲಸೆ ಹೋಗಿಲ್ಲ ಎಂದು ಸ್ಪಷ್ಟಪಡಿಸಿದರು.

    ಕಾಶ್ಮೀರಿ ಪಂಡಿತರ ಮೇಲೆ ಭಯೋತ್ಪಾದಕರಿಂದ ನಿರಂತರವಾಗಿ ನಡೆಯುತ್ತಿರುವ ಹತ್ಯೆಗಳ ಹಿನ್ನೆಲೆಯಲ್ಲಿ ಕಾಶ್ಮೀರಿ ಪಂಡಿತರು ಕಣಿವೆ ತೊರೆಯುತ್ತಿದ್ದೇವೆ ಎಂದು ಪಂಡಿತ ಕುಟುಂಬಗಳು ಕಾಶ್ಮೀರವನ್ನು ತೊರೆಯುತ್ತಿರುವ ವೀಡಿಯೋವೊಂದು ವೈರಲ್ ಆಗಿತ್ತು. ಜೊತೆಗೆ ಸರ್ಕಾರವು ಜನರನ್ನು ರಕ್ಷಿಸುವಲ್ಲಿ ವಿಫಲವಾಗಿದೆ ಎಂದು ದೂರಿದ್ದರು. ಅಷ್ಟೇ ಅಲ್ಲದೇ ಅನೇಕರು ಸರ್ಕಾರಿ ಉದ್ಯೋಗಕ್ಕೆ ರಾಜೀನಾಮೆ ನೀಡುವುದಾಗಿಯೂ ತಿಳಿಸಿದ್ದರು. ಇದನ್ನೂ ಓದಿ: ಹತ್ಯೆಯ ದಿನವೇ ಮುಸ್ಲಿಂ ಸ್ನೇಹಿತನ ಗೃಹಪ್ರವೇಶಕ್ಕೆ ಹೋಗಿದ್ದ ಪ್ರವೀಣ್ ನೆಟ್ಟಾರ್!

    ಇದಕ್ಕೆ ಪ್ರತಿಕ್ರಿಯಿಸಿರುವ ಅವರು, ಪ್ರಧಾನಿ ಅಭಿವೃದ್ಧಿ ಪ್ಯಾಕೇಜ್(ಪಿಎಂಡಿಪಿ) ಅಡಿಯಲ್ಲಿ ಕೆಲಸ ಮಾಡುವ ಯಾವುದೇ ಕಾಶ್ಮೀರಿ ಪಂಡಿತರು ರಾಜೀನಾಮೆಯನ್ನು ನೀಡಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಸದನದಲ್ಲಿ ಕಾಗದ ಹಾರಿಸಿದ್ದ ಆಪ್ ಸಂಸದ ಅಮಾನತು

    Live Tv
    [brid partner=56869869 player=32851 video=960834 autoplay=true]

  • ಕಾಶ್ಮೀರಿ ಪಂಡಿತರ ಹತ್ಯೆಗಿಂತ ಸಿನಿಮಾ ಬಗ್ಗೆ ಮಾತಾಡೋದು ಪ್ರಧಾನಿಗೆ ಮುಖ್ಯವಾಗಿದೆ: ರಾಹುಲ್ ಗಾಂಧಿ

    ಕಾಶ್ಮೀರಿ ಪಂಡಿತರ ಹತ್ಯೆಗಿಂತ ಸಿನಿಮಾ ಬಗ್ಗೆ ಮಾತಾಡೋದು ಪ್ರಧಾನಿಗೆ ಮುಖ್ಯವಾಗಿದೆ: ರಾಹುಲ್ ಗಾಂಧಿ

    ಶ್ರೀನಗರ: ಕಾಶ್ಮೀರಿ ಪಂಡಿತರ ಹತ್ಯೆಯ ಬಗ್ಗೆ ಮಾತನಾಡುವುದಕ್ಕಿಂತ ಪ್ರಧಾನ ಮಂತ್ರಿಗೆ ಸಿನಿಮಾದ ಬಗ್ಗೆ ಮಾತನಾಡುವುದು ಮುಖ್ಯವಾಗಿದೆ ಎಂದು ಪ್ರಧಾನಿ ನರೆಂದ್ರ ಮೋದಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

    ಗುರುವಾರ ಮಧ್ಯಾಹ್ನ ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಕಂದಾಯ ಇಲಾಖೆಯ ಉದ್ಯೋಗಿ ಕಾಶ್ಮೀರಿ ಪಂಡಿತ್ ರಾಹುಲ್ ಭಟ್ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದರು. ಕೇಂದ್ರ ಕಾಶ್ಮೀರದ ಚದೂರದಲ್ಲಿರುವ ತಹಸೀಲ್ದಾರ್ ಕಚೇರಿಯಲ್ಲಿ ಈ ಘಟನೆ ನಡೆದಿತ್ತು . ತಹಸಿಲ್ದಾರ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ರಾಹುಲ್ ಭಟ್ ಟಾರ್ಗೆಟ್ ಮಾಡಿದ್ದ ಉಗ್ರರು, ನೇರವಾಗಿ ಕಚೇರಿಗ ನುಗ್ಗಿ ರಾಹುಲ್ ಭಟ್ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಕಚೇರಿಯಲ್ಲಿದ್ದ ಸಿಬ್ಬಂದಿ, ನಾಗರೀಕರು ಭಯಭೀತರಾಗಿ ಹೊರಗೆ ಬಂದಿದ್ದರು. ನಂತರ ಸ್ಥಳದಿಂದ ಉಗ್ರರು ತಪ್ಪಿಸಿಕೊಂಡಿದ್ದರು. ಇದನ್ನೂ ಓದಿ: ಹ್ಯಾರೀಸ್ ಅಂಧ ದರ್ಬಾರ್- ಗ್ರಂಥಾಲಯದ ಜಾಗದಲ್ಲಿ ಶಾಸಕರ ಕಚೇರಿ!

    ರಾಹುಲ್‍ಗಾಂಧಿ ಅವರು, ಹತ್ಯೆಗೀಡಾದ ಸರ್ಕಾರಿ ಉದ್ಯೋಗಿಯ ಪತ್ನಿ ಮಾಧ್ಯಮದವರೊಂದಿಗೆ ಮಾತನಾಡುತ್ತಿರುವ ವೀಡಿಯೋವೊಂದನ್ನು ಶೇರ್‌ ಮಾಡಿಕೊಂಡಿದ್ದು, ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಜೊತೆಗೆ ಈ ಕುರಿತಂತೆ ಭದ್ರತೆಯ ಜವಾಬ್ದಾರಿಯನ್ನು ವಹಿಸಿ ಕಾಶ್ಮೀರದಲ್ಲಿ ಶಾಂತಿ ಸ್ಥಾಪಿಸುವಂತೆ ಪ್ರಧಾನಿಯನ್ನು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಪಂಡಿತನ ಮೇಲಿನ ದಾಳಿಯಲ್ಲ, ಅದು ಕಾಶ್ಮೀರದ ಆತ್ಮದ ಮೇಲಿನ ದಾಳಿ: ಫಾರೂಕ್ ಅಬ್ದುಲ್ಲಾ

    ಕಾಶ್ಮೀರಿ ಪಂಡಿತರ ನರಮೇಧಕ್ಕಿಂತ ಪ್ರಧಾನಮಂತ್ರಿಯವರಿಗೆ ಚಿತ್ರದ ಬಗ್ಗೆ ಮಾತನಾಡುವುದು ಮುಖ್ಯವಾಗಿದೆ ಎಂದು ‘ದಿ ಕಾಶ್ಮೀರ್ ಫೈಲ್ಸ್’ ಚಲನಚಿತ್ರವನ್ನು ಉಲ್ಲೇಖಿಸಿದ್ದಾರೆ. ಬಿಜೆಪಿಯ ನೀತಿಗಳಿಂದಾಗಿ ಇಂದು ಕಾಶ್ಮೀರದಲ್ಲಿ ಭಯೋತ್ಪಾದನೆ ಉತ್ತುಂಗದಲ್ಲಿದೆ. ಮೊದಲು ಭದ್ರತೆಯ ಜವಾಬ್ದಾರಿಯನ್ನು ತೆಗೆದುಕೊಂಡು ಶಾಂತಿ ಸ್ಥಾಪಿಸಲು ಪ್ರಯತ್ನಿಸಬೇಕು ಎಂದು ತಿಳಿಸಿದ್ದಾರೆ.

  • ಪಾಕಿಸ್ತಾನದತ್ತ ಬೆರಳು ತೋರಿಸದೆ ಕಾಶ್ಮೀರಿ ಪಂಡಿತರಿಗೆ ಕೇಂದ್ರ ಸಹಾಯ ಮಾಡಿ: ರಾವತ್

    ಪಾಕಿಸ್ತಾನದತ್ತ ಬೆರಳು ತೋರಿಸದೆ ಕಾಶ್ಮೀರಿ ಪಂಡಿತರಿಗೆ ಕೇಂದ್ರ ಸಹಾಯ ಮಾಡಿ: ರಾವತ್

    ಮುಂಬೈ: ಪಾಕಿಸ್ತಾನದತ್ತ ಬೆರಳು ತೋರಿಸದೆ ಕಾಶ್ಮೀರಿ ಪಂಡಿತರಿಗೆ ಏನು ಮಾಡಬಹುದು ಎಂಬುದನ್ನು ಕೇಂದ್ರ ಸರ್ಕಾರ ಯೋಚಿಸಬೇಕು ಎಂದು ಶಿವಸೇನೆ ಸಂಸದ ಸಂಜಯ್ ರಾವತ್ ತಿಳಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಶ್ಮೀರಿ ಪಂಡಿತರೊಬ್ಬರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿ ಹತ್ಯೆಗೈದಿರುವುದನ್ನು ಖಂಡಿಸಿದರು. ಜಮ್ಮು- ಕಾಶ್ಮೀರದಲ್ಲಿ ಇಂತಹ ಘಟನೆಗಳು ನಿರಂತರವಾಗಿ ನಡೆಯುತ್ತಿವೆ. ಆದರೆ ಇಲ್ಲಿಯವರೆಗೆ ಅದನ್ನು ತಡೆಗಟ್ಟಲು ಯಾವುದೇ ಕ್ರಮವನ್ನು ಕೈಗೊಂಡಿಲ್ಲ ಎಂದು ಕಿಡಿಕಾರಿದರು.

    ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು. ಕಾಶ್ಮೀರಿ ಪಂಡಿತರ ಪುನರ್ವಸತಿ ಕುರಿತು ಮಾತುಕತೆ ನಡೆಯುತ್ತಿದೆ. ಆದರೆ ಕಳೆದ 7 ವರ್ಷಗಳಲ್ಲಿ ಏನಾಯಿತು. ಎಷ್ಟು ಕಾಶ್ಮೀರಿ ಪಂಡಿತರು ಕಾಶ್ಮೀರಕ್ಕೆ ಮರಳಿದ್ದಾರೆಂದು ನನಗೆ ತಿಳಿದಿಲ್ಲ.  ಕಳೆದ 7 ವರ್ಷಗಳಲ್ಲಿ ಕಾಶ್ಮೀರಿ ಪಂಡಿತರಿರು ಎಷ್ಟು ಜನರು ವಾಪಸ್ಸಾದರಾದರು ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಭಾರತದೊಂದಿಗೆ ಉತ್ತಮ ಬಾಂಧವ್ಯ ಬೆಳೆಸಲು ಬಯಸುತ್ತೇವೆ : ವಿಕ್ರಮಸಿಂಘೆ

    ಕಾಶ್ಮೀರಿ ಪಂಡಿತರ ಪುನರ್ವಸತಿ ಮತ್ತು ಭದ್ರತೆಯ ವಿಷಯದಲ್ಲಿ ಗಂಭೀರ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ಧ್ವನಿವರ್ಧಕಗಳು ಮತ್ತು ಹನುಮಾನ್ ಚಾಲೀಸಾ ಕುರಿತು ನಡೆಯುತ್ತಿರುವ ಗಲಾಟೆಗೆ ಬಿಜೆಪಿ ಸರ್ಕಾರವೇ ಕಾರಣ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಬಿಜೆಪಿ ವಿರುದ್ಧ ಹೋರಾಡಿ, ರಮ್ಯಾ ವಿರುದ್ಧ ಅಲ್ಲ – ಡಿಕೆಶಿ ಬೆಂಬಲಿಗರಿಗೆ ಮಹದೇವಪ್ಪ ಟಾಂಗ್

  • ಜಮ್ಮು-ಕಾಶ್ಮಿರದಲ್ಲಿ ಕಾಶ್ಮೀರಿ ಪಂಡಿತರ ಹತ್ಯೆ ಮುಂದುವರಿಯುತ್ತಿದೆ: ಒಮರ್ ಅಬ್ದುಲ್ಲಾ

    ಜಮ್ಮು-ಕಾಶ್ಮಿರದಲ್ಲಿ ಕಾಶ್ಮೀರಿ ಪಂಡಿತರ ಹತ್ಯೆ ಮುಂದುವರಿಯುತ್ತಿದೆ: ಒಮರ್ ಅಬ್ದುಲ್ಲಾ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್‍ನಲ್ಲಿ ಭಯೋತ್ಪಾದಕರಿಂದ ಕಾಶ್ಮೀರಿ ಪಂಡಿತ್ ರಾಹುಲ್ ಭಟ್ ಹತ್ಯೆ ನಡೆದಿದೆ. ಈ ಹಿನ್ನೆಲೆ ಜಮ್ಮು-ಕಾಶ್ಮೀರದ ಮಾಜಿ ಸಿಎಂ ಮತ್ತು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಖಂಡಿಸಿದ್ದಾರೆ. ಈ ಹಿನ್ನೆಲೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ವಿರೋಧ ವ್ಯಕ್ತಪಡಿಸಿದ್ದಾರೆ.

    Omar Abdullah

    ಟ್ವೀಟ್‍ನಲ್ಲಿ ಒಮರ್ ಅಬ್ದುಲ್ಲಾ ಅವರು, ರಾಹುಲ್ ಭಟ್ ಮೇಲಿನ ಹಂತಕ ಉಗ್ರಗಾಮಿ ದಾಳಿಯನ್ನು ನಾನು ನಿಸ್ಸಂದಿಗ್ಧವಾಗಿ ಖಂಡಿಸುತ್ತೇನೆ. ತಹಸಿಲ್ ಕಚೇರಿಯಲ್ಲಿ ಸರ್ಕಾರಿ ನೌಕರನಾಗಿದ್ದ ರಾಹುಲ್ ಅವರ ಮೇಲೆ ದಾಳಿ ನಡೆಸಲಾಯಿತು. ಈ ಹತ್ಯೆಯನ್ನು ಉದ್ದೇಶಪೂರ್ವಕವಾಗಿಯೇ ಮಾಡಲಾಗಿದೆ. ಇದು ಮುಂದುವರಿಯುತ್ತೆ. ಇದರಿಂದ ಜಮ್ಮು-ಕಾಶ್ಮೀರದಲ್ಲಿ ಭಯದ ಭಾವನೆ ಬೆಳೆಯುತ್ತ ಹೋಗುತ್ತೆ. ರಾಹುಲ್ ಕುಟುಂಬಕ್ಕೆ ನನ್ನ ಹೃತ್ಪೂರ್ವಕ ಸಂತಾಪ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ನಡು ರಸ್ತೆಯಲ್ಲಿ ಉಪನ್ಯಾಸಕನ ಬರ್ಬರ ಹತ್ಯೆ 

    ಭಟ್ ಅವರ ಜೀವನವು ಇಂದು ಕ್ರೂರವಾಗಿ ನಶಿಸಿರುವುದು ದುರಂತ. ರಾಹುಲ್ ಭಟ್ ವಿಶ್ರಾಂತಿ ಪಡೆಯಿರಿ ಎಂದು ಬರೆದುಕೊಂಡಿದ್ದಾರೆ.

    ಕಾಶ್ಮೀರಿ ಪಂಡಿತ್ ರಾಹುಲ್ ಭಟ್ ಸರ್ಕಾರಿ ನೌಕರಾಗಿದ್ದರು. ಚದೂರ ಪ್ರದೇಶದಲ್ಲಿನ ಅವರ ಕಚೇರಿಯಲ್ಲಿಯೇ ಭಯೋತ್ಪಾದಕರು ನುಗ್ಗಿ ಅವರ ಮೇಲೆ ಗುಂಡು ಹಾರಿಸಿದ್ದಾರೆ. ಈ ಹಿನ್ನೆಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಫಲಕಾರಿಯಾಗದೆ ಪ್ರಾಣ ಬಿಟ್ಟರು.

    ಪೊಲೀಸರು ಈ ಕುರಿತು ಮಾಹಿತಿ ಕೊಟ್ಟಿದ್ದು, ಭಟ್ ಅವರನ್ನು ತಕ್ಷಣವೇ ಚಿಕಿತ್ಸೆಗಾಗಿ ಶ್ರೀನಗರದ ಎಸ್‍ಎಂಎಚ್‍ಎಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದರು. ಪ್ರಾಥಮಿಕ ತನಿಖೆಯಿಂದ ಇಬ್ಬರು ಭಯೋತ್ಪಾದಕರು ಈ ಘೋರ ಅಪರಾಧದಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಕೃತ್ಯಕ್ಕೆ ಪಿಸ್ತೂಲ್ ಬಳಸಿದ್ದಾರೆ ಎಂದು ವಿವರಿಸಿದರು. ಇದನ್ನೂ ಓದಿ:  ಪಾಕ್‍ನಲ್ಲಿ ಹಿಂದೂ ದೇವಾಲಯ ಧ್ವಂಸ ಮಾಡಿದ 22 ಮಂದಿಗೆ 5 ವರ್ಷ ಜೈಲು ಶಿಕ್ಷೆ 

    ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಕೂಡ ರಾಹುಲ್ ಭಟ್ ಅವರ ಬರ್ಬರ ಹತ್ಯೆಯನ್ನು ಖಂಡಿಸಿದ್ದಾರೆ. ಈ ಹೇಯ ಭಯೋತ್ಪಾದನಾ ದಾಳಿಯ ಹಿಂದಿರುವವರನ್ನು ಶಿಕ್ಷಿಸಲೇ ಬೇಕು. ದುಃಖತಪ್ತ ಕುಟುಂಬದೊಂದಿಗೆ ಜಮ್ಮು ಮತ್ತು ಕಾಶ್ಮೀರ ಸರ್ಕಾರವು ಒಗ್ಗಟ್ಟಿನಿಂದ ನಿಂತಿದೆ ಎಂದು ಭರವಸೆ ಕೊಟ್ಟರು.