Tag: Kashmiri students

  • BJP ಸರ್ಕಾರದಿಂದ ಹಿಂದುತ್ವ ಅಜೆಂಡಾ ಪ್ರಚಾರ- ಮೆಹಬೂಬಾ ಮುಫ್ತಿ ಆಕ್ಷೇಪ

    BJP ಸರ್ಕಾರದಿಂದ ಹಿಂದುತ್ವ ಅಜೆಂಡಾ ಪ್ರಚಾರ- ಮೆಹಬೂಬಾ ಮುಫ್ತಿ ಆಕ್ಷೇಪ

    ಶ್ರೀನಗರ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು (Central Government) ಕಾಶ್ಮೀರದಲ್ಲಿ ಹಿಂದುತ್ವ ಅಜೆಂಡಾ ಪ್ರಚಾರ ಮಾಡುತ್ತಿದೆ ಎಂದು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (PDP) ಮುಖ್ಯಸ್ಥೆ ಮೆಹಬೂಬಾ ಮುಫ್ತಿ (Mehbooba Mufti) ಆಕ್ಷೇಪ ವ್ಯಕ್ತಪಡಿಸಿದ್ದಾರೆ.

    ದಕ್ಷಿಣ ಕಾಶ್ಮೀರದ ಕುಲ್ಗಾಮ್‌ನಲ್ಲಿರುವ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು (Students) `ರಘುಪತಿ ರಾಘವ ರಾಜಾ ರಾಂ’ ಹಾಡುತ್ತಿರುವ ವೀಡಿಯೋವನ್ನು (Viral Video) ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದ ಮುಫ್ತಿ, ಇದು ಕೇಂದ್ರ ಸರ್ಕಾರದ ಹಿಂದುತ್ವ (Hindutva) ಅಜೆಂಡಾವನ್ನು ಸೂಚಿಸುತ್ತದೆ ಎಂದು ಆಕ್ಷೇಪಿಸಿದ್ದಾರೆ. ಇದನ್ನೂ ಓದಿ: ತೆರವು ಪ್ರಹಸನಕ್ಕೆ ಬಿತ್ತಾ ಬ್ರೇಕ್..?- ವಿಲ್ಲಾಗಳ ಕಡೆ ಮುಖಮಾಡದ ಜೆಸಿಬಿ!

    `ಧಾರ್ಮಿಕ ವಿದ್ವಾಂಸರನ್ನು ಜೈಲಿಗಟ್ಟುವುದು, ಜಮ್ಮಾ ಮಸೀದಿಯನ್ನು (Jama Masjid) ಮುಚ್ಚುವುದು ಮತ್ತು ಶಾಲಾ ಮಕ್ಕಳಿಗೆ ಹಿಂದೂ ಸ್ತೋತ್ರ ಹಾಡಲು ನಿರ್ದೇಶಿಸುವುದು ಕಾಶ್ಮೀರದಲ್ಲಿ ಭಾರತ ಸರ್ಕಾರದ ನಿಜವಾದ ಹಿಂದುತ್ವವನ್ನು ಬಿಂಬಿಸಿದೆ ಎಂದು ಮುಫ್ತಿ ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

    1 ನಿಮಿಷ 45 ಸೆಕೆಂಡುಗಳಿರುವ ಈ ವೀಡಿಯೋನಲ್ಲಿ ವಿದ್ಯಾರ್ಥಿಗಳು ಶಾಲಾ ಸಮವಸ್ತ್ರ ಧರಿಸಿಯೇ `ರಘುಪತಿ ರಾಘವ ರಾಜಾ ರಾಂ’ (Raghupati Raghav Raja Ram) ಭಜನೆಯನ್ನು ಪಠಿಸುತ್ತಿದ್ದಾರೆ. ಇದನ್ನೂ ಓದಿ: ವಿದ್ಯಾರ್ಥಿನಿಯರ ಸ್ನಾನದ ವೀಡಿಯೋ ಲೀಕ್ ಪ್ರಕರಣ – ಬಾಯ್‌ಫ್ರೆಂಡ್‌ಗೆ ಹೆದರಿ ವೀಡಿಯೋ ಮಾಡಿದ್ಲು ಸಹಪಾಠಿ

    bjP

    ಇದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕ (BJP Leader) ಕವೀಂದರ್ ಗುಪ್ತಾ, ಮುಫ್ತಿಯವರು ಎಲ್ಲವನ್ನೂ ವಿವಾದಾತ್ಮಕವಾಗಿ ಪ್ರಯತ್ನಿಸುತ್ತಿದ್ದಾರೆ. ಕಾಶ್ಮೀರದ ಶಾಲೆಯೊಂದರಲ್ಲಿ ಹಾಡಿದ ಭಜನೆಯನ್ನು ತಪ್ಪುದಾರಿಗೆ ಎಳೆಯುತ್ತಿದ್ದಾರೆ. ಈ ಭಜನಾ ಗೀತೆಯಲ್ಲಿ `ಈಶ್ವರ ಅಲ್ಲಾ ತೇರೋ ನಾಮ್, ಸಬ್ಕೋ ಸನ್ಮತಿ ದೇ ಭಗವಾನ್’ ಕೂಡ ಇದೆ. ಮೆಹಬೂಬಾ ಮುಫ್ತಿಗೆ ಈ ಸನ್ಮತಿ ಸಿಗಲಿ ಎಂದು ಕುಟುಕಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಪಾಕ್‌ ಪರ ಘೋಷಣೆ ಕೂಗಿದ್ದ ಕಾಶ್ಮೀರ ವಿದ್ಯಾರ್ಥಿಗಳಿಗೆ ಅಲಹಾಬಾದ್‌ ಹೈಕೋರ್ಟ್‌ ಜಾಮೀನು

    ಪಾಕ್‌ ಪರ ಘೋಷಣೆ ಕೂಗಿದ್ದ ಕಾಶ್ಮೀರ ವಿದ್ಯಾರ್ಥಿಗಳಿಗೆ ಅಲಹಾಬಾದ್‌ ಹೈಕೋರ್ಟ್‌ ಜಾಮೀನು

    ಅಲಹಾಬಾದ್: ಟಿ20 ಕ್ರಿಕೆಟ್‌ ವಿಶ್ವಕಪ್‌ ಪಂದ್ಯದಲ್ಲಿ ಭಾರತದ ವಿರುದ್ಧ ಜಯಗಳಿಸಿದ್ದ ಪಾಕಿಸ್ತಾನದ ಪರ ಘೋಷಣೆ ಕೂಗಿದ ಆರೋಪ ಎದುರಿಸುತ್ತಿದ್ದ ಕಾಶ್ಮೀರದ ಮೂವರು ವಿದ್ಯಾರ್ಥಿಗಳಿಗೆ ಅಲಹಾಬಾದ್‌ ಹೈಕೋರ್ಟ್‌ ಜಾಮೀನು ನೀಡಿದೆ ಎಂದು ವರದಿಯಾಗಿದೆ.

    ಆಗ್ರಾ ಜಿಲ್ಲಾ ವಕೀಲರ ಸಂಘವು ವಿದ್ಯಾರ್ಥಿಗಳ ಪರವಾಗಿ ವಾದ ಮಂಡಿಸುವುದರ ವಿರುದ್ಧ ನಿರ್ಣಯ ಅಂಗೀಕರಿಸಿದ ಬಳಿಕ ಆರೋಪಿತ ವಿದ್ಯಾರ್ಥಿಗಳು 2021ರ ಡಿಸೆಂಬರ್‌ನಲ್ಲಿ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಇದನ್ನೂ ಓದಿ: ಇಂಧನ ಬೆಲೆ ಏರಿಕೆ ಖಂಡಿಸಿ ರಾಹುಲ್ ಗಾಂಧಿ ಪ್ರತಿಭಟನೆ

    PAK

    ಆಗ್ರಾದಲ್ಲಿ ಇಂಜಿನಿಯರಿಂಗ್ ಓದುತ್ತಿದ್ದ ಅರ್ಷೀದ್ ಯೂಸುಫ್, ಇನಾಯತ್ ಅಲ್ತಾಫ್ ಶೇಖ್ ಮತ್ತು ಶೋಕತ್ ಅಹ್ಮದ್ ಗನೈ ಎಂಬ ಮೂವರು ವಿದ್ಯಾರ್ಥಿಗಳನ್ನು ಉತ್ತರ ಪ್ರದೇಶ ಪೊಲೀಸರು ಅಕ್ಟೋಬರ್ 27 ರಂದು ಬಂಧಿಸಿದ್ದರು.

    ಇವರ ವಿರುದ್ಧ ಸೆಕ್ಷನ್‌ 124ಎ (ದೇಶದ್ರೋಹ), 153-ಎ (ಭಿನ್ನ ಗುಂಪುಗಳ ನಡುವೆ ವೈರತ್ವಕ್ಕೆ ಪ್ರಚಾರ), 505 (1) (B) (ಸಾರ್ವಜನಿಕ ಕಿಡಿಗೇಡಿತನ) ಹಾಗೂ ಭಾರತೀಯ ದಂಡ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್‌ 66-ಎಫ್‌ ಅಡಿ ಪ್ರಕರಣ ದಾಖಲಿಸಲಾಗಿತ್ತು. ಇದನ್ನೂ ಓದಿ: ನೀರಿನ ಬಾಟಲ್‌ ವಿಚಾರಕ್ಕೆ ಆಂಧ್ರ ವ್ಯಾಪಾರಸ್ಥರಿಂದ ಗಲಾಟೆ- ಕರ್ನಾಟಕದ ಯುವಕ ಸಾವು

    ನಮ್ಮ ವಿರುದ್ಧ ಯಾವುದೇ ಪುರಾವೆಗಳಿಲ್ಲ. ದೇಶದ್ರೋಹ ಅಥವಾ ಸಮುದಾಯಗಳ ನಡುವೆ ದ್ವೇಷವನ್ನು ಉತ್ತೇಜಿಸಲು ನಾವು ಯಾವುದೇ ಅಪರಾಧ ಮಾಡಿಲ್ಲ ಎಂದು ವಾದಿಸಿ ಮೂವರು ಆರೋಪಿಗಳು ನ್ಯಾಯಾಲಯದ ಮೆಟ್ಟಿಲೇರಿದ್ದರು.

    ಅರ್ಜಿದಾರರು, ಕೇದಾರ್ ನಾಥ್ ಸಿಂಗ್ ವರ್ಸಸ್ ಸ್ಟೇಟ್ ಆಫ್ ಬಿಹಾರದಲ್ಲಿನ ತೀರ್ಪಿನ ಬಗ್ಗೆ ಉಲ್ಲೇಖಿಸಿದ್ದರು. ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕು ಸಂವಿಧಾನವು ಆರ್ಟಿಕಲ್ 19(1)(ಎ) ಅಡಿಯಲ್ಲಿ ಖಾತರಿಪಡಿಸಿದ ಮೂಲಭೂತ ಹಕ್ಕು ಎಂದು ವಾದಿಸಿದ್ದರು. ಇದನ್ನೂ ಓದಿ: ಕೇಜ್ರಿವಾಲ್ ಮನೆ ಮೇಲೆ ದಾಳಿ- 8 ಮಂದಿ ಬಂಧನ

  • ಪಾಕ್ ಪರ ಘೋಷಣೆ ಕೂಗಿದ್ದ ವಿದ್ಯಾರ್ಥಿಗಳ ಬಿಡುಗಡೆ- ವಕೀಲರ ಆಕ್ರೋಶ

    ಪಾಕ್ ಪರ ಘೋಷಣೆ ಕೂಗಿದ್ದ ವಿದ್ಯಾರ್ಥಿಗಳ ಬಿಡುಗಡೆ- ವಕೀಲರ ಆಕ್ರೋಶ

    ಹುಬ್ಬಳ್ಳಿ: ದೇಶದ್ರೋಹಿ ಘೋಷಣೆ ಕೂಗಿದ್ದ ಮೂವರು ಕಾಶ್ಮೀರಿ ವಿದ್ಯಾರ್ಥಿಗಳಿಗೆ ಜಾಮೀನು ಮಂಜೂರಾಗಿದೆ. ಹುಬ್ಬಳ್ಳಿಯ ಜೆಎಂಎಫ್‍ಸಿ-2 ನ್ಯಾಯಾಲಯ ಜಾಮೀನಿನ ಮೇಲೆ ಆರೋಪಿಗಳನ್ನು ಬಿಡುಗಡೆ ಮಾಡಿದೆ.

    ಪೊಲೀಸರ ನಿರ್ಲಕ್ಷ್ಯ ಹಾಗೂ ಸೋಮಾರಿತನದಿಂದ ದೇಶದ್ರೋಹಿ ಘೋಷಣೆ ಕೂಗಿದ ಕಾಶ್ಮೀರಿ ವಿದ್ಯಾರ್ಥಿಗಳನ್ನು ನ್ಯಾಯಾಲಯ ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ ಎಂದು ಯುವ ವಕೀಲರ ಸಂಘದ ಅಧ್ಯಕ್ಷ ಅಶೋಕ್ ಅಣವೇಕರ ಆರೋಪಿಸಿದ್ದಾರೆ.

    ಹುಬ್ಬಳ್ಳಿ ಗ್ರಾಮೀಣ ಪೊಲೀಸರು ನಿಗದಿತ ಸಮಯದಲ್ಲಿ ಚಾರ್ಜ್ ಶೀಟ್ ಸಲ್ಲಿಸದೇ ಇರುವುದರಿಂದ ಮಾನ್ಯ ನ್ಯಾಯಾಲಯ ಆರೋಪಿಗಳಿಗೆ ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ. 90 ದಿನದಲ್ಲಿ ಚಾರ್ಜ್ ಶೀಟ್ ದಾಖಲಿಸಬೇಕಾದ ಗ್ರಾಮೀಣ ಪೊಲೀಸರು 109 ದಿನಗಳ ನಂತರ ಚಾರ್ಜ್ ಶೀಟ್ ಸಲ್ಲಿಸಿರುವುದರಿಂದ ಆರೋಪಿಗಳು ಜಾಮೀನಿನ ಮೇಲೆ ಹೊರ ಬರುವಂತಾಯಿತು ಎಂದು ದೂರಿದ್ದಾರೆ.

    ಈ ಪ್ರಕರಣದಲ್ಲಿ ಎಫ್‍ಐಆರ್ ದಾಖಲಿಸುವುದರಿಂದ ಹಿಡಿದು ಚಾರ್ಜ್ ಶೀಟ್ ಸಲ್ಲಿಸುವವರೆಗೂ ಪೊಲೀಸರು ವೈಫಲ್ಯ ಹಾಗೂ ನಿರ್ಲಕ್ಷ್ಯದಿಂದ ವರ್ತಿಸಿದ್ದು ಉದ್ದೇಶಪೂರ್ವಕವಾಗಿ ಒಂದು ಕಡೆ ಕಾಶ್ಮೀರಿ ವಿದ್ಯಾರ್ಥಿಗಳನ್ನು ರಕ್ಷಿಸುವ ಷಡ್ಯಂತ್ರ ನಡೆಯುತ್ತಿದೆ. ಗೃಹ ಸಚಿವರು ಕರ್ತವ್ಯ ಲೋಪ ಎಸಗಿದ ಪೊಲೀಸರನ್ನು ಅಮಾನತು ಮಾಡಬೇಕು ಎಂದು ಯುವ ವಕೀಲರ ಸಂಘ ಒತ್ತಾಯಿಸಿದೆ.

  • ಪಾಕ್ ಪರ ಘೋಷಣೆ ಪ್ರಕರಣ – ಜಾಮೀನು ಅರ್ಜಿ ಸಲ್ಲಿಸಲು ಆಗಮಿಸಿದ ನ್ಯಾಯವಾದಿಗಳ ತಂಡ

    ಪಾಕ್ ಪರ ಘೋಷಣೆ ಪ್ರಕರಣ – ಜಾಮೀನು ಅರ್ಜಿ ಸಲ್ಲಿಸಲು ಆಗಮಿಸಿದ ನ್ಯಾಯವಾದಿಗಳ ತಂಡ

    ಹುಬ್ಬಳ್ಳಿ: ಜಿಲ್ಲೆಯ ಪ್ರತಿಷ್ಠಿತ ಕೆಎಲ್‍ಇ ಕಾಲೇಜಿನಲ್ಲಿ ಪಾಕ್ ಪರ ಘೋಷಣೆ ಕೂಗಿದ ಹಿನ್ನೆಲೆಯಲ್ಲಿ ಮೂವರು ಕಾಶ್ಮೀರಿ ವಿದ್ಯಾರ್ಥಿಗಳ ಪರ ಜಾಮೀನು ಅರ್ಜಿ ಸಲ್ಲಿಸಲು ಇಂದು ಬೆಂಗಳೂರಿನ ವಕೀಲರ ತಂಡ ಹುಬ್ಬಳ್ಳಿಗೆ ಆಗಮಿಸಿದೆ.

    ಜಾಮೀನು ಅರ್ಜಿ ಸಲ್ಲಿಸಲು 7 ಜನ ವಕೀಲರ ತಂಡ ಆಗಮಿಸಿದ್ದು, ಹುಬ್ಬಳ್ಳಿಯ 2ನೇ ಜೆಎಂಎಫ್‍ಸಿ ನ್ಯಾಯಾಲಯದಲ್ಲಿ ಬೆಂಗಳೂರಿನ ವಕೀಲರು ಜಾಮೀನು ಅರ್ಜಿ ಸಲ್ಲಿಸಲಿದ್ದಾರೆ. ಮಾರ್ಚ್ 5ರೊಳಗೆ ಜಾಮೀನು ಅರ್ಜಿ ಸಲ್ಲಿಕೆ ಕುರಿತು ತಕರಾರು ಅರ್ಜಿ ಸಲ್ಲಿಸಲು ಸಹಾಯಕ ಸರ್ಕಾರಿ ಅಭಿಯೋಜಕರಿಗೆ 5ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಸೂಚಿಸಿತ್ತು. ಈ ಹಿನ್ನೆಲೆ ಇಂದು ಜಾಮೀನು ಅರ್ಜಿ ಸಲ್ಲಿಸಲು ನ್ಯಾಯಾವಾದಿಗಳು ಆಗಮಿಸಿದ್ದಾರೆ. ಇಂದು ಜಾಮೀನು ಅರ್ಜಿ ಸಲ್ಲಿಕೆಯಾದರೆ ಇಂದೇ ವಿಚಾರಣೆ ನಡೆಯುವ ಸಾಧ್ಯತೆ ದಟ್ಟವಾಗಿದೆ.

    ಬೆಂಗಳೂರಿನಿಂದ ಆಗಮಿಸಿದ ವಕೀಲರು ಬಿಗಿ ಪೊಲೀಸ್ ಬಂದೋಬಸ್ತ್ ಮಧ್ಯೆ ಖಾಸಗಿ ಹೊಟೇಲ್‍ನಲ್ಲಿ ಉಳಿದುಕೊಂಡಿದ್ದು, ಇಂದು ಕೋರ್ಟಿಗೆ ಭೇಟಿ ನೀಡಿ ಜಾಮೀನು ಅರ್ಜಿ ಸಲ್ಲಿಕೆ ಮಾಡಲಿದ್ದಾರೆ. ಆರೋಪಿಗಳ ನ್ಯಾಯಾಂಗ ಬಂಧನ ಮಾರ್ಚ್ 7ರಂದು ಮುಕ್ತಾಯಗೊಳ್ಳಲಿದ್ದು, ಇಂದು ಜಾಮೀನು ಅರ್ಜಿ ಸಲ್ಲಿಕೆ ಮಾಡುತ್ತಿದ್ದಾರೆ.

    ಬೆಂಗಳೂರಿನ ವಕೀಲರ ತಂಡ ಇಂದು ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಕೆ ಮಾಡುತ್ತಿರುವುದರಿಂದ ಬುಧವಾರದಿಂದಲೇ ಹುಬ್ಬಳ್ಳಿ ನ್ಯಾಯಾಲಯದ ಸುತ್ತಮುತ್ತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸ್ ಕಮೀಷನರೇಟ್‍ನ ಶ್ವಾನದಳದಿಂದ ಬುಧವಾರ ಸಂಜೆಯಿಂದಲೇ ಪರಿಶೀಲನೆ ನಡೆಸಲಾಗುತ್ತಿದೆ.

  • ನಮ್ಮ ಅಧಿಕಾರಿಗಳ ಹೇಳಿಕೆ ಮೇಲೆ ನನಗೆ ನಂಬಿಕೆ ಇಲ್ಲ: ಬಸವರಾಜ್ ಬೊಮ್ಮಾಯಿ

    ನಮ್ಮ ಅಧಿಕಾರಿಗಳ ಹೇಳಿಕೆ ಮೇಲೆ ನನಗೆ ನಂಬಿಕೆ ಇಲ್ಲ: ಬಸವರಾಜ್ ಬೊಮ್ಮಾಯಿ

    ಬೆಂಗಳೂರು: ನಮ್ಮ ಅಧಿಕಾರಿಗಳ ಹೇಳಿಕೆ ಮೇಲೆ ನನಗೆ ನಂಬಿಕೆ ಇಲ್ಲ. ಅದಕ್ಕೆ ಸ್ವತಃ ನಾನೇ ಪ್ರಕರಣದ ಫೈಲ್‍ಗಳನ್ನು ತರಿಸಿ ಪರಿಶೀಲಿಸುತ್ತಿದ್ದೇನೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದ ಕಾಶ್ಮೀರಿ ವಿದ್ಯಾರ್ಥಿಗಳ ಪ್ರಕರಣದ ಕುರಿತು ಪ್ರತಿಕ್ರಿಯಿಸಿದರು. ಪೊಲೀಸರಿಗೆ ಯಾರು ಸೆಲ್ಫ್ ಬಾಂಡ್ ಕೊಟ್ಟಿದ್ದಾರೆ ಎನ್ನುವ ಬಗ್ಗೆ ಸ್ಪಷ್ಟ ಮಾಡಿತಿ ಇಲ್ಲ. ಆದರೆ ಈ ಬಗ್ಗೆ ತನಿಖೆ ನಡೆಯುತ್ತಿದೆ. ಈ ಪ್ರಕರಣ ಸಂಬಂಧ ಎಲ್ಲಾ ವರದಿಯನ್ನು ನನಗೆ ನೀಡಲು ಅಧಿಕಾರಿಗಳ ಬಳಿ ಸೂಚಿಸಿದ್ದೇನೆ. ನಾಳೆ ನನಗೆ ಆ ವರದಿ ಸಿಗುತ್ತದೆ ಎಂದು ತಿಳಿಸಿದರು.

    ಈ ಬಗ್ಗೆ ಪೊಲೀಸರಿಗೂ ಸ್ಪಷ್ಟ ಮಾಹಿತಿ ಇಲ್ಲ. ಹೀಗಾಗಿ ಒರಿಜಿನಲ್ ಫೈಲ್ ಕಾಪಿ ತರಿಸಿಕೊಳ್ಳುತ್ತಿದ್ದೇನೆ. ಅದನ್ನ ನಾನೇ ವಿಚಾರಣೆ ಮಾಡಿ ಸ್ಪಷ್ಟೀಕರಣ ಕೊಡುತ್ತಿದ್ದೇನೆ. ದೇಶದ್ರೋಹಿ ವಿಚಾರದಲ್ಲಿ ಯಾರನ್ನು ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ. ಅವರು ಯಾರೇ ಇದ್ದರೂ ಕೂಡ. ಯಾರೇ ಸಹಾಯ ಮಾಡಿದರು ಕೂಡ ಅವರನ್ನು ಬಗ್ಗು ಬಡಿಯುತ್ತೇವೆ. ಈ ವಿಚಾರದಲ್ಲಿ ಹೆಚ್ಚಿನ ಮಾಹಿತಿ ಸಿಕ್ಕ ಮೇಲೆ ಎಲ್ಲರಿಗೂ ಸ್ಪಷ್ಟೀಕರಣ ನೀಡುತ್ತೇನೆ. ಅದರಲ್ಲಿ ಮುಚ್ಚುಮರೆ ಮಾಡುವ ಪ್ರಶ್ನೆಯೇ ಇಲ್ಲ ಎಂದರು.

    ನಮ್ಮ ಅಧಿಕಾರಿಗಳ ಹೇಳಿಕೆ ಮೇಲೆ ನಂಬಿಕೆಯಿಲ್ಲ. ನನಗೆ ಆಫೀಶಿಯಲ್ ಮಾಹಿತಿ ಇಲ್ಲ. ಹೀಗಾಗಿ ನಾಳೆ ಒರಿಜಿನಲ್ ಕೇಸ್ ಫೈಲ್‍ನ್ನ ತರಿಸ್ತಿದ್ದೇನೆ. ನಾಳೆ ನನ್ನ ಮುಂದೆ ವರದಿ ಬರುತ್ತೆ ಎಂದು ಹೇಳಿದರು.

    ಅಷ್ಟೇ ಅಲ್ಲದೇ ಅಮುಲ್ಯ ಲಿಯೋನಾ ಮತ್ತು ಆರುದ್ರಾ ನಾರಾಯನ್ ಹೇಳಿಕೆ ಬಗ್ಗೆ ಮಾತನಾಡಿ, ದೇಶದ್ರೋಹ ಪ್ರಕರಣದಲ್ಲಿ ಭಾಗಿಯಾದವರನ್ನು ಬಗ್ಗು ಬಡಿತೀವಿ. ರಾಷ್ಟ್ರದ್ರೋಹ ಬೆಳೆಸುವ ಕೆಲಸ, ಕೆಲ ಸಂಘಟನೆಗಳು ಮಾಡುತ್ತಿವೆ. ಹೆಣ್ಣುಮಕ್ಕಳು, ವಿದ್ಯಾರ್ಥಿಗಳು, ಯುವಕರಿಂದ ದೇಶದ್ರೋಹಿ ಹೇಳಿಕೆಗಳನ್ನು ಹೇಳಿಸುತ್ತಿದ್ದಾರೆ. ಇದರ ಹಿಂದೆ ಹಲವಾರು ಶಕ್ತಿಗಳ ಕೈವಾಡ ಇದೆ ಎಂದು ತಿಳಿಸಿದರು.

    ಇಲ್ಲಿ ಪಾಕಿಸ್ತಾನಕ್ಕೆ ಜಿಂದಾಬಾದ್ ಎನ್ನುವವರು ಪಾಕಿಗೆ ಹೋಗಿ ಹಿಂದುಸ್ತಾನ್ ಜಿಂದಾಬಾದ್ ಎಂದು ಹೇಳಿ ಜೀವಂತವಾಗಿ ವಾಪಸ್ಸು ಬರಲಿ ನೋಡೋಣ. ತಾಕತ್ತಿದೆಯಾ ಅವರಿಗೆ ಕೆಲವು ರಾಜಕೀಯ ಪಕ್ಷಗಳು ದೇಶದ್ರೋಹಿ ಹೇಳಿಕೆಗಳು ಕೊಟ್ಟವರ ಪರ ನಿಲ್ಲುತ್ತಿವೆ. ದೇಶದ್ರೋಹ ಕೆಲಸದಲ್ಲಿ ಭಾಗಿಯಾಗದಂತೆ ವಿದ್ಯಾಸಂಸ್ಥೆ, ಯೂನಿವರ್ಸಿಟಿಗಳಿಗೆ ಸೂಚನೆ ನೀಡಲಾಗಿದೆ. ಯುನಿವರ್ಸಿಟಿ, ವಿದ್ಯಾಸಂಸ್ಥೆಗಳು ವಿದ್ಯೆಯನ್ನ ಪ್ರಸಾರ ಮಾಡಲಿ, ದೇಶದ್ರೋಹ ತಾಣಗಳಾಗದಿರಲಿ. ಕಾರ್ಯಕ್ರಮಗಳಲ್ಲಿ ಈ ರೀತಿಯ ಹೇಳಿಕೆಗಳು ಕಂಡು ಬಂದರೆ ಕಾರ್ಯಕ್ರಮದ ಆಯೋಜಕರೇ ನೇರ ಹೊಣೆಗಾರರಾಗುತ್ತಾರೆ ಎಂದು ಖಡಕ್ ಆಗಿ ಪ್ರತಿಕ್ರಿಯಿಸಿದರು.

  • ಪಾಕ್ ಪರ ಘೋಷಣೆ- ಕಾಶ್ಮೀರಿ ವಿದ್ಯಾರ್ಥಿಗಳು ಜೈಲು ಪಾಲು

    ಪಾಕ್ ಪರ ಘೋಷಣೆ- ಕಾಶ್ಮೀರಿ ವಿದ್ಯಾರ್ಥಿಗಳು ಜೈಲು ಪಾಲು

    – ಮಾರ್ಚ್ 2ರವರೆಗೆ ನ್ಯಾಯಾಂಗ ಬಂಧನ

    ಹುಬ್ಬಳ್ಳಿ: ಪಾಕಿಸ್ತಾನ್ ಜಿಂದಾಬಾದ್ ಎಂದು ಪಾಕಿಸ್ತಾನದ ಸೇನೆಯ ಹಾಡಿಗೆ ಪಾಕ್ ಪರ ಘೋಷಣೆ ಕೂಗಿದ ಮೂವರು ಆರೋಪಿಗಳನ್ನು ಹುಬ್ಬಳ್ಳಿ ಪೊಲೀಸರು ಕೊನೆಗೂ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಮೂರನೇ ಜೆಎಂಎಫ್‍ಸಿ ನ್ಯಾಯಾಧೀಶರ ಮುಂದೆ ಹಾಜರಾದ ಮೂವರು ಆರೋಪಿಗಳಿಗೆ ಮಾರ್ಚ್ 2ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

    ಪಾಕ್ ಪರ ಘೋಷಣೆ ಕೂಗಿದ ವಿದ್ಯಾರ್ಥಿಗಳನ್ನು ಭಾನುವಾರ ಪೊಲೀಸರು ಸಿಆರ್ ಪಿ 169 ಬಾಂಡ್ ಮೇಲೆ ಬಿಡುಗಡೆ ಮಾಡಿದರು. ತದನಂತರ ಹಿಂದೂಪರ ಸಂಘಟನೆಗಳು ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಪೊಲೀಸರ ಕಾರ್ಯವೈಖರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ನಂತರ ಪೊಲೀಸರು ಮತ್ತೊಮ್ಮೆ ಆರೋಪಿಗಳನ್ನು ಬಂಧಿಸಿ ದು 2ನೇ ಜೆಎಂಎಫ್‍ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಇದನ್ನೂ ಓದಿ: ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ವಿದ್ಯಾರ್ಥಿಗಳು ಅಮಾನತು

    ನ್ಯಾಯಾಂಗ ಬಂಧನಕ್ಕೆ ಕರೆದೊಯ್ಯುವ ವೇಳೆ ನ್ಯಾಯಾಲಯದ ಆವರಣದಲ್ಲಿ ಭಾರೀ ಹೈಡ್ರಾಮಾವೇ ನಡೆದಿದ್ದು, ಕಾಶ್ಮೀರ ವಿದ್ಯಾರ್ಥಿಗಳಿಗೆ ಹಿಂದೂಪರ ಸಂಘಟನೆಗಳು ಹಿಗ್ಗಾಮುಗ್ಗ ಥಳಿಸಿದ್ದಾರೆ. ಅಲ್ಲದೆ ಪ್ರತಿಭಟನಾಕಾರರು ಪೊಲೀಸ್ ಜೀಪ್ ಗೆ ಬೂಟು ಎಸೆದ ಪ್ರಸಂಗವೂ ನಡೆಯಿತು.

    ಒಟ್ಟನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಧ್ಯೆ ಮೂವರು ಕಾಶ್ಮೀರ ವಿದ್ಯಾರ್ಥಿಗಳನ್ನು ಪೊಲೀಸರು ನ್ಯಾಯಾಲಯವರೆಗೂ ಕರೆ ತಂದು ವಿಶೇಷ ಕೊಠಡಿಯಲ್ಲಿ ಕೂರಿಸಿದರು. ಪೊಲೀಸರ ವರ್ತನೆಗೆ ಆಕ್ರೋಶಗೊಂಡ ನ್ಯಾಯವಾದಿಗಳು, ಪೊಲೀಸರ ಜೊತೆ ಮಾತಿನ ಚಕಮಕಿ ನಡೆಸಿದರು. ಆರೋಪಿಗಳನ್ನು ಲಾಕಪ್ ರೂಂನಲ್ಲಿ ಕೂರಿಸಿ ವಿಶೇಷ ಕೊಠಡಿಯಲ್ಲಿ ಯಾಕೆ ಎಂದು ಪೊಲೀಸರ ಜೊತೆ ವಾಗ್ವಾದ ನಡೆಸಿದರು.

    ವಕೀಲರ ವಿರೋಧದ ನಂತರ ಲಾಕಪ್ ರೂಂನಲ್ಲಿ ಆರೋಪಿಗಳನ್ನು ಕೂರಿಸಿದ ಪೊಲೀಸರು ನಂತರ ನ್ಯಾಯಾಧೀಶೆ ಪುಷ್ಪಾರ ಮುಂದೆ ಹಾಜರುಪಡಿಸಿದರು. ಈ ವೇಳೆ ಹುಬ್ಬಳ್ಳಿಯ ಯಾವ ನ್ಯಾಯಾಧೀಶರು ಆರೋಪಿಗಳ ಪರ ವಕಾಲತ್ತು ಹಾಕಲಿಲ್ಲ. ಪ್ರಕರಣದ ಬಗ್ಗೆ ಮಾಹಿತಿ ಪಡೆದ ನ್ಯಾಯಾಧೀಶರು ಆರೋಪಿಗಳನ್ನು ಮಾರ್ಚ್ 2ರವರೆಗೆ ನ್ಯಾಯಾಂಗ ಬಂಧನಕ್ಕೆ ವಿಧಿಸಿದ್ದಾರೆ. ಸಾಕಷ್ಟು ಡ್ರಾಮಾ ನಂತರ ಕೊನೆಗೂ ದೇಶದ್ರೋಹಿಗಳು ಇದೀಗ ಕಂಬಿ ಪಾಲಾಗಿದ್ದಾರೆ.

  • ಪಾಕ್ ಪರ ಘೋಷಣೆ – ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ಐದು ಪ್ರಕರಣ ದಾಖಲು

    ಪಾಕ್ ಪರ ಘೋಷಣೆ – ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ಐದು ಪ್ರಕರಣ ದಾಖಲು

    ಹುಬ್ಬಳ್ಳಿ: ಪಾಕಿಸ್ತಾನಕ್ಕೆ ಜಿಂದಾಬಾದ್ ಎಂದು ಜೈಕಾರ ಹಾಕಿದ್ದ ಕಾಶ್ಮೀರ ಮೂಲದ ಮೂವರು ವಿದ್ಯಾರ್ಥಿಗಳ ಮೇಲೆ ದೇಶದ್ರೋಹಿ ಚಟುವಟಿಕೆ ಹಿನ್ನೆಲೆ ಐದು ಪ್ರಕರಣ ದಾಖಲಿಸಲಾಗಿದೆ.

    ಕೆಎಲ್‍ಇ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಬಸವರಾಜ್ ಅನಾಮಿಯವರು ನೀಡಿದ ದೂರಿನ ಆಧಾರದ ಮೇಲೆ ಗೋಕುಲ್ ರೋಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿವೆ. ಇದನ್ನೂ ಓದಿ: ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ವಿದ್ಯಾರ್ಥಿಗಳು ಅಮಾನತು

    ಐಪಿಸಿ ಸಿಕ್ಷನ್ ಸಿಆರ್ ನಂ. 10/202ಯು/ಎಸ್124ಎ, 153ಎ(ಬಿ), 153ಬಿ(ಸಿ), 505(2), ಆರ್/ಡಬ್ಲು34ರ ಅಡಿಯಲ್ಲಿ ದೇಶದ್ರೋಹ, ಪ್ರಾದೇಶಿಕ ಗುಂಪುಗಳ ನಡುವೇ ದ್ವೇಷ ಭಾವನೆ ಹೆಚ್ಚಿಸುವುದು ಸೇರಿದಂತೆ ಐದು ಪ್ರಕರಣವನ್ನು ಯುವಕರ ವಿರುದ್ಧ ದಾಖಲಿಸಲಾಗಿದೆ. ಇದನ್ನೂ ಓದಿ: ಕೆಎಲ್‍ಇ ಕಾಲೇಜು ವಿದ್ಯಾರ್ಥಿಗಳಿಂದ ಪಾಕಿಸ್ತಾನ ಜಿಂದಾಬಾದ್ ಘೋಷಣೆ

    ಏನಿದು ಘಟನೆ?
    ಪುಲ್ವಾಮಾ ದಾಳಿಯಾಗಿ ಶುಕ್ರವಾರಕ್ಕೆ ಒಂದು ವರ್ಷವಾದ ಬೆನ್ನಲ್ಲೇ ಕಾಶ್ಮೀರ ಮೂಲದ ಅಮೀರ್, ತಾಲೀಬ್ ಮತ್ತು ಬಸೀತ್ ಪಾಕಿಸ್ತಾನ ಸೇನೆಯ ಹಾಡಿಗೆ ಧ್ವನಿಗೂಡಿಸಿ ಪಾಕಿಸ್ತಾನ ಜಿಂದಾಬಾದ್ ಎನ್ನುವ ವಿಡಿಯೋ ಮಾಡಿ ಮೊಬೈಲ್ ಸ್ಟೇಟಸ್ ಹಾಕಿಕೊಂಡಿದ್ದರು. ಈ ಮೂವರು ಕೆಎಲ್‍ಇ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ಶನಿವಾರ ವಿಡಿಯೋ ವೈರಲ್ ಆಗುತ್ತಿದ್ದಂತೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಕಾಲೇಜಿಗೆ ಮುತ್ತಿಗೆ ಹಾಕಿ, ವಿದ್ಯಾರ್ಥಿಗಳನ್ನು ಬಂಧಿಸಿ ದೇಶದ್ರೋಹದ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನೆ ಮಾಡಿದಲ್ಲದೇ ವಿದ್ಯಾರ್ಥಿಗಳನ್ನ ಥಳಿಸಿದ್ದರು.

    ಬಂಧಿತ ಅಮೀರ್ ಸಿವಿಲ್ ಇಂಜಿನಿಯರಿಂಗ್‍ನ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದು, ದಕ್ಷಿಣ ಕಾಶ್ಮೀರದ ಅನಂತನಾಗ್ ಭಾಗದವನು ಎಂದು ತಿಳಿದು ಬಂದಿದೆ. ಅಲ್ಲದೇ ತಾಲೀಬ್ ಹಾಗೂ ಬಸೀತ್ ಇಬ್ಬರು ಸಿವಿಲ್ ಇಂಜಿನಿಯರಿಂಗ್ ಮೊದಲ ವರ್ಷದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು. ತಾಲೀಬ್ ದಕ್ಷಿಣ ಕಾಶ್ಮೀರದ ಅನಂತನಾಗ್ ಭಾಗದ ವಿದ್ಯಾರ್ಥಿಯಾದರೆ, ಬಸೀತ್ ಉತ್ತರ ಕಾಶ್ಮೀರದ ಸಂಪೂರೆಯವನು ಎಂದು ತಿಳಿದು ಬಂದಿದೆ.

    ಅತ್ತ ಮೂವರು ವಿದ್ಯಾರ್ಥಿಗಳನ್ನು ಹುಬ್ಬಳ್ಳಿಯ ಗೋಕುಲ್ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿ ತನಿಖೆ ಕೈಗೊಳ್ಳುತ್ತಿದ್ದಂತೆ, ಇತ್ತ ಕಾಲೇಜು ಆಡಳಿತ ಮಂಡಳಿ ಮೂವರು ಕಾಶ್ಮೀರ ಮೂಲದ ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಅಮಾನತು ಮಾಡಿ ಆದೇಶ ಹೊರಡಿಸಿತ್ತು.