Tag: Katera

  • ಸೈಮಾಗೆ ದಿನಗಣನೆ: ಕಾಟೇರ, ಸಪ್ತಸಾಗರದಾಚೆ ಮಧ್ಯ ಬಿಗ್ ಫೈಟ್

    ಸೈಮಾಗೆ ದಿನಗಣನೆ: ಕಾಟೇರ, ಸಪ್ತಸಾಗರದಾಚೆ ಮಧ್ಯ ಬಿಗ್ ಫೈಟ್

    2024ನೇ ಸಾಲಿನ ದಕ್ಷಿಣ ಭಾರತದ ಪ್ರತಿಷ್ಠಿತ ಪ್ರಶಸ್ತಿ ಸೈಮಾ ಸಮಾರಂಭ ದುಬೈನಲ್ಲಿ ಸೆಪ್ಟಂಬರ್ 14 ಮತ್ತು 15ರಂದು ನಡೆಯಲಿದೆ. ಇದರ ಭಾಗವಾಗಿ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಿನ್ನೆ ಸುದ್ದಿಗೋಷ್ಠಿ ಆಯೋಜಿಸಲಾಗಿದೆ. ಸೈಮಾ ಅಧ್ಯಕ್ಷರಾದ ಬೃಂದಾ ಪ್ರಸಾದ್, ನಟರಾದ ಡಾಲಿ ಧನಂಜಯ್, ರಿಷಿ, ನಟಿಯರಾದ ನೇಹಾ ಶೆಟ್ಟಿ, ನಿಧಿ ಅಗರ್ವಾಲ್, ಅವಿಕಾ ಗೋರ್, ಶಾನ್ವಿ ಶ್ರೀವಾಸ್ತವ್, ಶುಭ್ರ ಅಯ್ಯಪ್ಪ, ಮಾರುತಿ ಸುಜುಕಿ ಇಂಡಿಯಾಲಿಮಿಟೆಡ್ ಸೀನಿಯರ್ ಎಕ್ಸಿಕ್ಯೂಟಿವ್ ಆಫೀಸರ್ ನೊಬುಟಾಕಾ ಸುಜುಕಿ, ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ರಾಯ್ ಸಿಜೆ ಸೇರಿದಂತೆ ಹಲವರು ಭಾಗಿಯಾಗಿದ್ದರು. ಬೃಂದಾ ಪ್ರಸಾದ್ ಮಾತನಾಡಿ, ಈ ಬಾರಿ ನಡೆಯುತ್ತಿರುವುದು 12ನೇ ಆವೃತ್ತಿ ಸೈಮಾ. 12 ಬರೀ ನಂಬರ್ ಅಲ್ಲ. ಅದೊಂದು ಸುಂದರ ಪಯಣ. ದಕ್ಷಿಣ ಭಾರತದಲ್ಲಿ ಪ್ರತಿ ವರ್ಷ ನಡೆಯುವ ಪ್ರತಿಷ್ಠಿತ ಪ್ರಶಸ್ತಿ ಎಂಬ ಹೆಗ್ಗಳಿಕೆಗೆ ಸೈಮಾ ಭಾಜನವಾಗಿದೆ. ದಕ್ಷಿಣ ಸಿನಿರಂಗದ ಪ್ರತಿಭೆಗಳನ್ನು ಗುರುತಿಸಿ ಅಂತರಾಷ್ಟ್ರೀಯ ಮಟ್ಟದಲ್ಲಿ ಸಂಭ್ರಮಿಸುವ ಸೈಮಾದಲ್ಲಿ ನಾಲ್ಕು ಇಂಡಸ್ಟ್ರೀಗಳು ಒಂದೇ ಕುಟುಂಬದಂತೆ ಭಾಗಿಯಾಗುತ್ತಾರೆ ಎಂದು ತಿಳಿಸಿದರು.

    ನಟ ಡಾಲಿ ಧನಂಜಯ್  (Dolly Dhananjay) ಮಾತನಾಡಿ, ಸೈಮಾ ಎಂದರೆ ನಮಗೆ ಖುಷಿ. ಈ ಬಾರಿ ದುಬೈನಲ್ಲಿ ಮತ್ತೆ ಸೈಮಾ ಆಗುತ್ತಿದೆ. ಸೈಮಾ ನನಗೆ ಅದ್ಭುತ ಮೆಮೋರಿ ಕ್ರಿಯೇಟ್ ಮಾಡುವ ಜಾಗ. ಲಾಸ್ಟ್ ಇಯರ್ ನನ್ನ ಹುಟ್ಟುಹಬ್ಬಕ್ಕೆ ಇಂಡಸ್ಟ್ರೀಗೆಲ್ಲಾ ನಾನು ಪಾರ್ಟಿ ಕೊಟ್ಟಿದೆ. ಈ ಬಾರಿ ನನಗೆ ಸೈಮಾದಿಂದ ಪಾರ್ಟಿ ಕೊಡುತ್ತಿದ್ದಾರೆ. ಎಲ್ಲಾ ಇಂಡಸ್ಟ್ರೀಯ ಕಲಾವಿದರು, ನಿರ್ದೇಶಕರನ್ನು ನೋಡುವ ಒಳ್ಳೆ ವೇದಿಕೆ. ಈ ರೀತಿಯ ಇವೆಂಟ್ ಚೆನ್ನಾಗಿರುತ್ತವೆ, ಸೈಮಾ ಎಂದಾಗ ನಮ್ಮ ಪ್ರೆಸೆಂಟ್ ಇರುತ್ತದೆ. ಲಿರಿಕ್ಸ್ ಕೆಟಗರಿಯಲ್ಲಿ ನಾನು ನಾಮಿನೇಟ್ ಮಾಡಲಾಗಿದೆ. ಸೈಮಾ ಅನ್ನುವುದು ಸೆಲೆಬ್ರೆಷನ್ ಎಂದು ಸಂತಸ ಹಂಚಿಕೊಂಡರು.

    ನಿಧಿ ಅಗರ್ವಾಲ್ ಮಾತನಾಡಿ, ನಾನು ಇಲ್ಲಿ ಭಾಗಿಯಾಗಿರುವುದಕ್ಕೆ ಬಹಳಷ್ಟು ಖುಷಿಯಾಗಿದೆ. ಪ್ರತಿ ವರ್ಷ ನಡೆಯುವ ಸೈಮಾ ಸಂಭ್ರಮದಲ್ಲಿ ನಾನು ಭಾಗಿಯಾಗುತ್ತಿದ್ದೇನೆ. ಸೈಮಾ ಎನ್ನುವುದು ಅಮೇಜಿಂಗ್ ಶೋ. ಸೈಮಾದಲ್ಲಿ ಎಲ್ಲರನ್ನೂ ನೋಡುವುದು ಖುಷಿ ಎಂದರು. ಶಾನ್ವಿ ಶ್ರೀವಾಸ್ತವ್ ಮಾತನಾಡಿ, ಸೈಮಾ ಎನ್ನುವುದು ಹೋಳಿ, ದೀಪಾವಳಿ ರೀತಿ ಹಬ್ಬ. ಪ್ರತಿ ವರ್ಷದಂತೆ ಈ ವರ್ಷ ಸೈಮಾ ಮತ್ತೆ ಬಂದಿದೆ. ನಾನು ಸೆಲೆಬ್ರೆಟ್ ಮಾಡಲು ಕಾಯುತ್ತಿದ್ದೇವೆ. ಎಲ್ಲಾ ಇಂಡಸ್ಟ್ರೀಯ ಕಲಾವಿದರು ಒಂದು ಜಾಗದಲ್ಲಿ ಒಂದು ಸಮಾರಂಭದಲ್ಲಿ ಭಾಗಿಯಾಗಿ ಸಿನಿಮಾವನ್ನು ಸಂಭ್ರಮಿಸುತ್ತೇವೆ ಎಂದರು.

    ಈಗಾಗಲೇ ಸೈಮಾ ಪ್ರಶಸ್ತಿಗೆ ನಾಮಿನೇಷನ್ಸ್ ಆರಂಭವಾಗಿದೆ. ‘ಕಾಟೇರ’ (Katera) ಹಾಗೂ ಸಪ್ತಸಾಗರದಾಚೆ ಎಲ್ಲೋ ಸೈಡ್-ಎ (Saptasagaradache Yello)  ಸಿನಿಮಾಗಳು ಸೈಮಾ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿವೆ. ತರುಣ್ ಸುಧೀರ್ ನಿರ್ದೇಶನದ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಕಾಟೇರ ಚಿತ್ರ 8 ವಿಭಾಗಗಳಲ್ಲಿ ನಾಮಿನೇಟ್ ಆಗಿದೆ. ಅತ್ತ ರಕ್ಷಿತ್ ಶೆಟ್ಟಿ ನಟನೆಯ, ಹೇಮಂತ್ ರಾವ್ ನಿರ್ದೇಶನದ ಸಪ್ತಸಾಗರದಾಚೆ ಎಲ್ಲೋ ಸೈಡ್-ಎ ಚಿತ್ರ 7 ವಿಭಾಗಗಳಲ್ಲಿ ನಾಮನಿರ್ದೇಶನಗೊಂಡಿದೆ.

    ತೆಲುಗಿನಲ್ಲಿ, ನಾನಿ ಮತ್ತು ಕೀರ್ತಿ ಸುರೇಶ್ ಅಭಿನಯದ ಶ್ರೀಕಾಂತ್ ಒಡೆಲಾ ನಿರ್ದೇಶನದ ‘ದಸರಾ’ ಚಿತ್ರ 11 ವಿಭಾಗಗಳಲ್ಲಿ ನಾಮನಿರ್ದೇಶನಗೊಂಡಿದ್ದು, ನಾನಿ ಮತ್ತು ಮೃಣಾಲ್ ಠಾಕೂರ್ ಅಭಿನಯದ ‘ಹಾಯ್ ನನ್ನಾ’ 10 ವಿಭಾಗಗಳಲ್ಲಿ ನಾಮಿನೇಷನ್ ಗೊಂಡಿದೆ. ತಮಿಳಿನಲ್ಲಿ, ರಜನಿಕಾಂತ್ ಅಭಿನಯದ ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನದ ‘ಜೈಲರ್’ 11 ವಿಭಾಗದಲ್ಲಿ ನಾಮನಿರ್ದೇಶನಗಳೊಂದಿಗೆ ಮುಂಚೂಣಿಯಲ್ಲಿದ್ದರೆ, ಉದಯನಿಧಿ ಸ್ಟಾಲಿನ್ ಮತ್ತು ಕೀರ್ತಿ ಸುರೇಶ್ ಅಭಿನಯದ ‘ಮಾಮಣ್ಣನ್‌’ ಸಿನಿಮಾ 9 ವಿಭಾಗಗಳಲ್ಲಿ ನಾಮನಿರ್ದೇಶನಗೊಂಡಿದೆ. ಮಲಯಾಳಂನಲ್ಲಿ, ಟೊವಿನೋ ಥಾಮಸ್ ಮತ್ತು ಆಸಿಫ್ ಅಲಿ ಅಭಿನಯದ ಜೂಡ್ ಆಂಥನಿ ಜೋಸೆಫ್ ನಿರ್ದೇಶನದ ‘2018’ ಸಿನಿಮಾ 8 ವಿಭಾಗಗಳಲ್ಲಿ ನಾಮನಿರ್ದೇಶನಗೊಂಡಿದೆ, ಮಮ್ಮುಟ್ಟಿ ಮತ್ತು ಜ್ಯೋತಿಕಾ ಅಭಿನಯದ ‘ಕಾತಲ್ – ದಿ ಕೋರ್’ 7 ವಿಭಾಗಗಳಲ್ಲಿ ನಾಮಿನೇಷನ್ ಆಗಿದೆ.

  • ‘ಕಾಟೇರ’ 100 ದಿನ: ನಾಳೆ ಟಿವಿಯಲ್ಲಿ ಪ್ರಸಾರ

    ‘ಕಾಟೇರ’ 100 ದಿನ: ನಾಳೆ ಟಿವಿಯಲ್ಲಿ ಪ್ರಸಾರ

    ರ್ಶನ್ (Darshan) ನಟನೆಯ ‘ಕಾಟೇರ’ ಸಿನಿಮಾ ಇಂದು ನೂರು ದಿನಗಳನ್ನು ಪೂರೈಸಿದೆ. ನೂರು ದಿನದ ಪೋಸ್ಟರ್ ಅನ್ನು ದರ್ಶನ್ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ನೂರು ದಿನಗಳನ್ನು (Hundred Days) ಪೂರೈಸುವ ಬೆನ್ನಲ್ಲೇ ನಾಳೆ ಕಾಟೇರ ಸಿನಿಮಾ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ. ಯುಗಾದಿಗೂ ಎರಡು ದಿನ ಮುನ್ನ ಏಪ್ರಿಲ್ 7ಕ್ಕೆ ಸಂಜೆ 7ಕ್ಕೆ ಚಿತ್ರ ಪ್ರಸಾರವಾಗಲಿದೆ.

    ಕಾಟೇರ (Kaatera) ಸಿನಿಮಾ ಥಿಯೇಟರ್ ನಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದ್ದರೂ, ಒಟಿಟಿಯಲ್ಲೂ (OTT) ಸ್ಟ್ರೀಮಿಂಗ್ ಆಗುತ್ತಿತ್ತು. ಒಟಿಟಿಯಲ್ಲಿ ಕಾಟೇರ ಪ್ರದರ್ಶನ ಕಾಣುತ್ತಿರುವುದಕ್ಕೆ ಹುಬ್ಬಳ್ಳಿಯ ಅಭಿಮಾನಿಗಳು ವಿಶೇಷ ರೀತಿಯಲ್ಲಿ ಬರಮಾಡಿಕೊಂಡಿದ್ದರು. ಆಳೆತ್ತರದ ಕಟೌಟ್ ಹಾಕಿ ಕಾಟೇರನನ್ನು ಸ್ವಾಗತಿಸಿದ್ದರು.

    ದರ್ಶನ್ ಸಿನಿಕರಿಯರ್ ನಲ್ಲಿ ಹೊಸ ಮೈಲುಗಲ್ಲು ಸೃಷ್ಟಿಸಿದ್ದ ಕಾಟೇರ ಬಾಕ್ಸಾಫೀಸ್ ನಲ್ಲಿ ಕೋಟಿ ಕೋಟಿ ಲೂಟಿ ಮಾಡಿತ್ತು. ಪ್ಯಾನ್ ಇಂಡಿಯಾ ಚಿತ್ರಗಳ ಅಬ್ಬರದ ನಡುವೆಯೂ  ನಮ್ಮ ನೆಲದ ಕಥೆಗೆ ಪ್ರೇಕ್ಷಕ ಜೈಕಾರ ಹಾಕಿದ್ದರು. ರಾಕ್ಲೈನ್ ವೆಂಕಟೇಶ್ ನಿರ್ಮಿಸಿರುವ ಈ ಸಿನಿಮಾವನ್ನು ಒಟಿಟಿಗೆ Zee5 ವಹಿವಾಟು ಮುಗಿಸಿತ್ತು.

    Zee5 ತಾನು ಖರೀದಿಸಿದ ಹೊಸ ಸಿನಿಮಾಗಳನ್ನು ಪ್ರತಿ ಶುಕ್ರವಾರ ಬಿಡುಗಡೆ ಮಾಡುತ್ತೆ. ಅಲ್ಲದೆ ನಿರ್ಮಾಪಕರು ಹಾಗೂ ಓಟಿಟಿ ಸಂಸ್ಥೆಯೊಂದಿಗೆ ಸಿನಿಮಾ ಬಿಡುಗಡೆಯಾದ 30 ರಿಂದ 40 ದಿನಗಳ ಅಂತರದಲ್ಲಿ ಓಟಿಟಿಯಲ್ಲಿ ಪ್ರೀಮಿಯರ್ ಮಾಡುವ ಬಗ್ಗೆ ಸಹಜವಾಗಿ ಒಪ್ಪಂದ ಆಗುತ್ತೆ. ‘ಕಾಟೇರ’ ಬಿಡುಗಡೆಯಾದ 40 ದಿನಗಳ ಬಳಿಕ ಓಟಿಟಿಯಲ್ಲಿ ರಿಲೀಸ್ ಮಾಡುವ ಮಾತುಕತೆ ನಡೆದಿದ್ದು, ಅದರಂತೆಯೇ ಫೆಬ್ರವರಿ 9ರಂದು  ಸಿನಿಮಾ ಪ್ರೀಮಿಯರ್ ಆಗಿದೆ.

     

    ಕಾಟೇರ ಸಿನಿಮಾ ಕನ್ನಡದ ನೆಲದ ಸಿನಿಮಾ. 1970ರ ಕಾಲಘಟ್ಟದ ಕಥೆಯನ್ನು ಚೆಂದವಾಗಿ ತೆರೆಮೇಲೆ ತಂದಿದ್ದರು ನಿರ್ದೇಶಕ ತರುಣ್ ಸುಧೀರ್. ಮಾಲಾಶ್ರೀ ಪುತ್ರಿ ಆರಾಧನಾ ರಾಮ್ಗೂ ಕಾಟೇರ ದೊಡ್ಡ ಹಿಟ್ ನೀಡಿದೆ. ಕಥೆ ಬರೆದ ಜಡೇಶ್ ಕುಮಾರ್ ಹಂಪಿ, ಡೈಲಾಗ್ ಬರೆದ ಮಾಸ್ತಿಗೂ ಕಾಟೇರ ಸಿನಿಮಾ ಮರೆಯಲಾಗದ ಯಶಸ್ಸು ನೀಡಿದೆ.

  • ಫೋಟೋ ಶೂಟ್ ನಲ್ಲಿ ಆರಾಧನಾ ರಾಮ್: ಹೊಸ ಸಿನಿಮಾ ಸುಳಿವು

    ಫೋಟೋ ಶೂಟ್ ನಲ್ಲಿ ಆರಾಧನಾ ರಾಮ್: ಹೊಸ ಸಿನಿಮಾ ಸುಳಿವು

    ಕಾಟೇರ (Katera) ಸಿನಿಮಾದ ನಂತರ ಮಾಲಾಶ್ರೀ (Malashree) ಪುತ್ರಿ ಆರಾಧನಾ ರಾಮ್ (Aradhana) ಯಾವುದೇ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ. ಕಾಟೇರ ಅದ್ಭುತ ಯಶಸ್ಸು ಕಂಡರೂ, ನಾಯಕಿಯ ಮತ್ತೊಂದು ಸಿನಿಮಾ ಘೋಷಣೆ ಆಗದೇ ಇರುವುದಕ್ಕೆ ಹಲವಾರು ಚರ್ಚೆಗಳು ಕೂಡ ನಡೆದಿವೆ. ಕಾಟೇರ ಗೆಲುವಿನ ನಂತರವೂ ಅವರಿಗೆ ಅವಕಾಶ ಸಿಕ್ಕಿಲ್ಲ ಎನ್ನುವ ಮಾತು ಕೇಳಿ ಬಂದಿವೆ.

    ಆರಾಧನಾ ಆಪ್ತರ ಮಾಹಿತಿಯ ಪ್ರಕಾರ ಕಾಟೇರ ನಂತರ ಸಾಕಷ್ಟು ಅವಕಾಶಗಳು ಬಂದಿವೆ ಅಂತೆ. ಆದರೆ, ಅಳೆದು ತೂಗಿ ಪಾತ್ರಗಳನ್ನು ಮತ್ತು ಕಥೆಯನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರಂತೆ ಆರಾಧನಾ ರಾಮ್. ಹೊಸ ಸಿನಿಮಾದ ಪಾತ್ರಕ್ಕಾಗಿಯೂ ಅವರು ಸಿದ್ದತೆ ಮಾಡಿಕೊಳ್ಳುತ್ತಿದ್ದಾರಂತೆ.

    ಕಾಟೇರ ಸಿನಿಮಾ ರಿಲೀಸ್ ಆಗುತ್ತಿದ್ದಂತೆಯೇ ಟೆಂಪಲ್ ರನ್ ಮಾಡಿದ್ದ ಆರಾಧನಾ, ಆನಂತರ ಸೀರಿಯಸ್ ಆಗಿ ಹಲವು ಕಥೆಗಳನ್ನು ಕೇಳಿದ್ದಾರಂತೆ. ಜೊತೆಗೆ ಮತ್ತಷ್ಟು ಸಿದ್ಧತೆ ಕೂಡ ಮಾಡಿಕೊಳ್ಳುತ್ತಿದ್ದಾರಂತೆ.

     

    ಸದ್ಯ ಆರಾಧನಾ ಫೋಟೋ ಶೂಟ್ ನಲ್ಲಿ ಭಾಗಿ ಆಗಿದ್ದು, ಆ ಫೋಟೋಗಳು ಸಿನಿಮಾಗಳ ಒಂದೊಂದು ಲುಕ್ ಟೆಸ್ಟ್ ಎನ್ನುವ ಮಾಹಿತಿಯೂ ಹರಿದಾಡುತ್ತಿದೆ.

  • ದುಬಾರಿ ಕಾರು ಖರೀದಿಸಿದ ‘ಕಾಟೇರ’ ನಿರ್ದೇಶಕ ತರುಣ್ ಸುಧೀರ್

    ದುಬಾರಿ ಕಾರು ಖರೀದಿಸಿದ ‘ಕಾಟೇರ’ ನಿರ್ದೇಶಕ ತರುಣ್ ಸುಧೀರ್

    ಕಾಟೇರ ಸಿನಿಮಾದ ಯಶಸ್ಸಿನ ನಂತರ ನಿರ್ದೇಶಕ ತರುಣ್ ಸುಧೀರ್ ಭಾರೀ ಮೊತ್ತ ನೀಡಿ ದುಬಾರಿ ಕಾರು ಖರೀದಿ ಮಾಡಿದ್ದಾರೆ. ಬಿಎಂಡಬ್ಲು ಎಕ್ಸ್ 1 ಕಾರು (Car) ಖರೀದಿಸಿದ್ದು, ತಾಯಿಯೊಂದಿಗೆ ಮೊದಲ ಪ್ರಯಾಣ ಮಾಡಿದ್ದಾರೆ. ಈ ಕುರಿತಂತೆ ಅವರು ಫೋಟೋವನ್ನು ಹಂಚಿಕೊಂಡಿದ್ದಾರೆ.

    ಇತ್ತೀಚೆಗಷ್ಟೇ ತರುಣ್, ಕಿರುತೆರೆಗೆ ಹಾರಿದ್ದಾರೆ. ಕಾಟೇರ ಸಕ್ಸಸ್ ನಂತರ ತರುಣ್ (Tharun Sudhir) ಮತ್ತ್ಯಾವ ಚಿತ್ರವನ್ನು ಕೈಗೆತ್ತಿಕೊಳ್ಳಲಿದ್ದಾರೆ ಎನ್ನುವ ಕುತೂಹಲ ಎಲ್ಲರಲ್ಲಿ ಇತ್ತು. ಆದರೆ ದಿಢೀರ್ ಅಂತ ಕಿರುತೆರೆಗೆ ಹಾರಿದ್ದಾರೆ.

    ಹಾಗಂತ ಅವರು ಯಾವುದೇ ಧಾರಾವಾಹಿ ನಿರ್ದೇಶನವಾಗಲಿ, ನಟಿಸುವುದಕ್ಕಾಗಿ ಹೋಗಿಲ್ಲ. ಜೀ ಕನ್ನಡ ವಾಹಿನಿಯಲ್ಲಿ ಮೂಡಿ ಬರಲಿರುವ ಹೊಸ ರಿಯಾಲಿಟಿ ಶೋ ಮಹಾನಟಿಗೆ (Mahanati) ತೀರ್ಪುಗಾರರಾಗಿ ಭಾಗಿಯಾಗಲಿದ್ದಾರೆ. ಈಗಾಗಲೇ ರಿಯಾಲಿಟಿ ಶೋ ಶುರುವಾಗಿದೆ.

     

    ಮಹಾನಟಿ ರಿಯಾಲಿಟಿ ಶೋಗೂ ಮತ್ತು ಸಿನಿಮಾ ರಂಗಕ್ಕೂ ನೇರ ಸಂಬಂಧವಿದೆ. ಆ ಕಾರಣಕ್ಕಾಗಿಯೇ ಕಾಟೇರ್ ಸೂಪರ್ ಹಿಟ್ ಸಿನಿಮಾದ ನಿರ್ದೇಶಕನನ್ನು ಜೀ ಕನ್ನಡ ವಾಹಿನಿಯು ಆಯ್ಕೆ ಮಾಡಿದೆ. ಈ ಹಿಂದೆಯೂ ಅನೇಕ ಸಿನಿಮಾ ನಟರನ್ನು ವಾಹಿನಿಯು ನಾನಾ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದೆ.

  • ಕಿರುತೆರೆಗೆ ಎಂಟ್ರಿ ಕೊಟ್ಟ ‘ಕಾಟೇರ’ ನಿರ್ದೇಶಕ ತರುಣ್ ಸುಧೀರ್

    ಕಿರುತೆರೆಗೆ ಎಂಟ್ರಿ ಕೊಟ್ಟ ‘ಕಾಟೇರ’ ನಿರ್ದೇಶಕ ತರುಣ್ ಸುಧೀರ್

    ರ್ಶನ್ ಸೇರಿದಂತೆ ಹಲವು ಸ್ಟಾರ್ ನಟರಿಗೆ ಚಿತ್ರ ಮಾಡಿರುವ ತರುಣ್ ಸುಧೀರ್, ಇದೀಗ ಕಿರುತೆರೆಗೆ ಹಾರಿದ್ದಾರೆ. ಕಾಟೇರ ಸಕ್ಸಸ್ ನಂತರ ತರುಣ್ (Tharun Sudhir) ಮತ್ತ್ಯಾವ ಚಿತ್ರವನ್ನು ಕೈಗೆತ್ತಿಕೊಳ್ಳಲಿದ್ದಾರೆ ಎನ್ನುವ ಕುತೂಹಲ ಎಲ್ಲರಲ್ಲಿ ಇತ್ತು. ಆದರೆ ದಿಢೀರ್ ಅಂತ ಕಿರುತೆರೆಗೆ ಹಾರಿದ್ದಾರೆ.

    ಹಾಗಂತ ಅವರು ಯಾವುದೇ ಧಾರಾವಾಹಿ ನಿರ್ದೇಶನವಾಗಲಿ, ನಟಿಸುವುದಕ್ಕಾಗಿ ಹೋಗಿಲ್ಲ. ಜೀ ಕನ್ನಡ ವಾಹಿನಿಯಲ್ಲಿ ಮೂಡಿ ಬರಲಿರುವ ಹೊಸ ರಿಯಾಲಿಟಿ ಶೋ ಮಹಾನಟಿಗೆ (Mahanati) ತೀರ್ಪುಗಾರರಾಗಿ ಭಾಗಿಯಾಗಲಿದ್ದಾರೆ. ಈಗಾಗಲೇ ರಿಯಾಲಿಟಿ ಶೋ ಆಡಿಷನ್ ಕೂಡ ಮುಗಿದಿದೆ. ಇನ್ನಷ್ಟೇ ಶುರುವಾಗಬೇಕಿದೆ.

     

    ಮಹಾನಟಿ ರಿಯಾಲಿಟಿ ಶೋಗೂ ಮತ್ತು ಸಿನಿಮಾ ರಂಗಕ್ಕೂ ನೇರ ಸಂಬಂಧವಿದೆ. ಆ ಕಾರಣಕ್ಕಾಗಿಯೇ ಕಾಟೇರ್ ಸೂಪರ್ ಹಿಟ್ ಸಿನಿಮಾದ ನಿರ್ದೇಶಕನನ್ನು ಜೀ ಕನ್ನಡ ವಾಹಿನಿಯು ಆಯ್ಕೆ ಮಾಡಿದೆ. ಈ ಹಿಂದೆಯೂ ಅನೇಕ ಸಿನಿಮಾ ನಟರನ್ನು ವಾಹಿನಿಯು ನಾನಾ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದೆ.

  • Darshan: ‘ಡೆವಿಲ್’ ಶೂಟಿಂಗ್ ಶುರುವಾಗೋದು ಯಾವಾಗ?

    Darshan: ‘ಡೆವಿಲ್’ ಶೂಟಿಂಗ್ ಶುರುವಾಗೋದು ಯಾವಾಗ?

    ರ್ಶನ್ (Darshan) ಅಭಿನಯಿಸುತ್ತಿರೋ ಮುಂದಿನ ಚಿತ್ರ ‘ಡೆವಿಲ್’ ಫಸ್ಟ್ ಲುಕ್ ರಿಲೀಸ್ ಆಗಿ ಭರ್ಜರಿ ಸೌಂಡ್ ಮಾಡ್ತಿದೆ. ದಚ್ಚು ಹುಟ್ಟುಹಬ್ಬದ ದಿನ ಫ್ಯಾನ್ಸ್‌ಗೆ ಇದೊಂದು ಸರ್ಪ್ರೈಸ್ ಗಿಫ್ಟ್ ಕೊಟ್ಟಿದ್ದಾರೆ. ದರ್ಶನ್ ‘ಡೆವಿಲ್’ನಲ್ಲಿ (Devil Film) ವಿಭಿನ್ನ ಲುಕ್‌ನಲ್ಲಿ ಕಾಣಿಸ್ಕೊಂಡಿದ್ದಾರೆ. ಹಾಗಾದ್ರೆ ಈ ಸಿನಿಮಾದ ಬ್ಲಾಕ್‌ಬಸ್ಟರ್ ಅಪ್‌ಡೇಟ್ ಏನು? ಶೂಟಿಂಗ್ ಶುರುವಾಗೋದು ಯಾವಾಗ? ಆ ಬಗ್ಗೆ ಖುದ್ದು ದರ್ಶನ್ ಬಿಚ್ಚಿಟ್ಟ ಮಾಹಿತಿ ಇಲ್ಲಿದೆ.

    ದರ್ಶನ್ ಹುಟ್ಟುಹಬ್ಬದ ದಿನವೇ ‘ಡೆವಿಲ್’ ಚಿತ್ರದ ಫಸ್ಟ್ ಲುಕ್ ರಿವೀಲ್ ಆಯ್ತು. ಅಬ್ಬರಿಸುವ ಡೈಲಾಗ್ ಮೂಲಕ ದಚ್ಚು ಎಂಟ್ರಿ ಬಹಳ ಕುತೂಹಲಕಾರಿಯಾಗಿತ್ತು. ‘ನಮ್ಮ ಮನೆಯಲೊಂದು ಪುಟ್ಟ ಪಾಪು ಇರುವುದು’ ಎಂಬ ವಿಭಿನ್ನ ಡೈಲಾಗ್ ಹೇಳುವ ಮೂಲಕ ದರ್ಶನ್ ಉಗ್ರವಾಗಿ ಕಾಣಿಸಿಕೊಂಡಿದ್ದಾರೆ. ಹೀಗಾಗಿ ನಿರೀಕ್ಷೆ ದುಪ್ಪಟ್ಟಾಗಿದೆ. ಮಾರ್ಚ್‌ನಿಂದ ಚಿತ್ರೀಕರಣ ಪ್ರಾರಂಭವಾಗುವ ವದಂತಿ ಇತ್ತು. ಆದರೆ ಆಗಸ್ಟ್‌ನಿಂದ ಚಿತ್ರೀಕರಣ ಪ್ರಾರಂಭ ಎಂದಿದ್ದಾರೆ ದರ್ಶನ್.

    ಆಗಸ್ಟ್ ತಿಂಗಳು ಚಿತ್ರೀಕರಣ ಅಂದರೆ ಇನ್ನೂ 5 ತಿಂಗಳು ಉಳಿಯುತ್ತೆ. ಅಷ್ಟು ತಡವಾಗಿ ಚಿತ್ರೀಕರಣ ಶುರುವಾಗ್ತಿರೋದು ಯಾಕೆ ಅನ್ನೋದೇ ಕುತೂಹಲ. ಮೂಲಗಳ ಪ್ರಕಾರ, ‘ಡೆವಿಲ್’ ಈಗ ಪ್ರೀ ಪ್ರೊಡಕ್ಷನ್ ಹಂತದಲ್ಲಿದೆ ಎನ್ನಲಾಗ್ತಿದೆ. ಹಿಂದೆ ಡೆವಿಲ್ ನಿರ್ದೇಶಕ ಮಿಲನ ಪ್ರಕಾಶ್ ಜೊತೆ ‘ತಾರಕ್’ ಮಾಡುವಾಗ ಪ್ರಕಾಶ್‌ರ ಶೂಟಿಂಗ್ ಪರಿಪೂರ್ಣತೆ ಬಗ್ಗೆ ದರ್ಶನ್ ಹಾಡಿ ಹೊಗಳಿದ್ದರು.

    ಹೀಗಾಗಿ ಪ್ರಕಾಶ್ ಚಿತ್ರೀಕರಣದ ವಿಚಾರದಲ್ಲಿ ಪಕ್ಕಾ ಇರುತ್ತಾರೆ ಅನ್ನೋದಂತೂ ಸಾಬೀತಾಗಿದೆ. ಹೀಗಾಗಿ ಆಗಸ್ಟ್‌ನಲ್ಲಿ ಅಷ್ಟು ತಡವಾಗಿ ಚಿತ್ರೀಕರಣ ಶುರುವಾಗ್ತಿರೋದು ಯಾಕೆ ಅನ್ನೋದೇ ಸದ್ಯದ ಕುತೂಹಲ. ಹಾಗಾದ್ರೆ ವರ್ಷಕ್ಕೆ 2 ಸಿನಿಮಾ ನಿರೀಕ್ಷೆಯಲ್ಲಿರೋ ಫ್ಯಾನ್ಸ್ ಕಥೆಯೇನು ಹಾಗಾದ್ರೆ? ‘ಡೆವಿಲ್’ ಅಪ್‌ಡೇಟ್‌ಗಾಗಿ ಅಭಿಮಾನಿಗಳು ಕಾಯಬೇಕು. ಇದನ್ನೂ ಓದಿ:21 ವರ್ಷದ ಹುಡುಗಿ ಜೊತೆ 50ರ ವಯಸ್ಸಿನ ನಟನ ಮದುವೆ

    ಮಿಲನ ಪ್ರಕಾಶ್ ಈ ಸಿನಿಮಾವನ್ನು ನಿರ್ದೇಶನ ಮಾಡಲಿದ್ದು, ಅಜನೀಶ್ ಲೋಕನಾಥ್ ಅವರ ಸಂಗೀತ ಸಂಯೋಜನೆ ಚಿತ್ರಕ್ಕೆ ಇರಲಿದೆ, ವೈಷ್ಣೋ ಬ್ಯಾನರ್ ಅಡಿಯಲ್ಲಿ ಈ ಸಿನಿಮಾ ನಿರ್ಮಾಣವಾಗಲಿದೆ.

    ಡಿಬಾಸ್ ಕೈಯಲ್ಲಿ ಈಗ 9ಕ್ಕೂ ಹೆಚ್ಚು ಚಿತ್ರಗಳಿವೆ. ರಮೇಶ್ ಪಿಳ್ಳೈ, ಶೈಲಜಾ ನಾಗ್ ಮತ್ತು ಬಿ.ಸುರೇಶ, ಮೋಹನ್ ನಟರಾಜನ್, ಸೂರಪ್ಪ ಬಾಬು, ಸಚ್ಚಿದಾನಂದ ಇಂಡುವಾಳ, ಕೆ.ಮಂಜುನಾಥ್, ರಘುನಾಥ್ ಸೋಗಿ, ಮಹೇಶ್ ಸುಖಧರೆ, ರಾಘವೇಂದ್ರ ಹೆಗ್ಡೆ ಹೀಗೆ ಸಾಲು ಸಾಲು ನಿರ್ಮಾಪಕರು ದರ್ಶನ್‌ಗಾಗಿ ಸಿನಿಮಾ ಮಾಡಲು ಮುಂದೆ ಬಂದಿದ್ದಾರೆ. ದರ್ಶನ್ ಹುಟ್ಟುಹಬ್ಬದಂದು (ಫೆ.16) ಸಿನಿಮಾಗಳನ್ನು ಘೋಷಣೆ ಕೂಡ ಮಾಡಿದ್ದಾರೆ.

  • ಡಿಬಾಸ್ ಹುಟ್ಟುಹಬ್ಬಕ್ಕೆ ‘ಬಿಗ್ ಬಾಸ್’ ಇಶಾನಿ ಸ್ಪೆಷಲ್ ಸಾಂಗ್ ರಿಲೀಸ್

    ಡಿಬಾಸ್ ಹುಟ್ಟುಹಬ್ಬಕ್ಕೆ ‘ಬಿಗ್ ಬಾಸ್’ ಇಶಾನಿ ಸ್ಪೆಷಲ್ ಸಾಂಗ್ ರಿಲೀಸ್

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಹುಟ್ಟುಹಬ್ಬದಂದು (ಫೆ.16) ‘ಬಿಗ್ ಬಾಸ್’ (Bigg Boss Kannada 10) ಖ್ಯಾತಿಯ ಇಶಾನಿ (Eshani) ವಿಶೇಷ ಗೀತೆಯನ್ನು ರಿಲೀಸ್ ಮಾಡಲಿದ್ದಾರೆ. ದರ್ಶನ್ (Darshan) ಕುರಿತಾದ ಗೀತೆ ಇದಾಗಿದ್ದು, ಹಾಡು ಅದ್ಭುತವಾಗಿ ಮೂಡಿ ಬಂದಿದೆ. ‘ಬಾಸ್’ (Boss) ಹಾಡು ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ.

    ದರ್ಶನ್ ನಟಿಸಿದ ಅಷ್ಟು ಸಿನಿಮಾಗಳ ಹೆಸರು ಒಳಗೊಂಡಿರುವ ‘ಬಾಸ್’ ಎಂಬ ಸಾಂಗ್ ರಿಲೀಸ್ ಮಾಡಿದ್ದಾರೆ. ದರ್ಶನ್ ಕುರಿತು ಲಿರಿಕ್ಸ್ ಬರೆದು ಇಶಾನಿ ಹಾಡಿಗೆ ಧ್ವನಿಯಾಗಿದ್ದಾರೆ. ಎಎಸ್ ಪ್ರೊಡಕ್ಷನ್ ಅಡಿಯಲ್ಲಿ ಗಿರಿ ಗೌಡ ನಿರ್ದೇಶಿಸಿದ್ದಾರೆ. ಒಟ್ನಲ್ಲಿ ಇಶಾನಿ ಹಾಡಿಗೆ ಡಿಬಾಸ್ ಫ್ಯಾನ್ಸ್ ಫಿದಾ ಆಗಿದ್ದಾರೆ. ಈ ಮೂಲಕ ಡಿಬಾಸ್ ಮೇಲಿನ ಅಭಿಮಾನವನ್ನು ಇಶಾನಿ ವ್ಯಕ್ತಪಡಿಸಿದ್ದಾರೆ.

     

    View this post on Instagram

     

    A post shared by Eshani (@eshanimusic)

    ಫೆ.16ರಂದು ದರ್ಶನ್ ಅವರು ಆರ್‌ಆರ್ ನಗರದ ನಿವಾಸದಲ್ಲಿ ತಮ್ಮ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ. ತಮ್ಮ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲು ದವಸ ಧಾನ್ಯಗಳನ್ನು ಉಡುಗೊರೆಯಾಗಿ ನೀಡಿದ್ದಾರೆ. ಅಭಿಮಾನಿಗಳಿಗೆ ಈ ದಿನ ದರ್ಶನ್ ಸಮಯ ಮೀಸಲಿಟ್ಟಿದ್ದಾರೆ. ಇದನ್ನೂ ಓದಿ:ದಚ್ಚುಗೆ ಪ್ರೇಮ್ ಆ್ಯಕ್ಷನ್ ಕಟ್- ‘ಜೈ ಶ್ರೀರಾಮ್’ ಎಂದು ಗದೆ ಎತ್ತಿದ ಡಿಬಾಸ್

    ‘ಕಾಟೇರ’ (Katera) ಸಕ್ಸಸ್ ನಂತರ ದರ್ಶನ್ ಮತ್ತಷ್ಟು ಡಿಮ್ಯಾಂಡ್ ಜಾಸ್ತಿಯಾಗಿದೆ. ಎಂದೂ ಮಾಡಿರದ ಹೊಸ ಬಗೆಯ ಕಥೆಯನ್ನು ದರ್ಶನ್ ಆಯ್ಕೆ ಮಾಡ್ತಿದ್ದಾರೆ. ಕರಿಯ ನಿರ್ದೇಶಕ ಪ್ರೇಮ್, ಮಿಲನ ಖ್ಯಾತಿಯ ಪ್ರಕಾಶ್, ಕಾಟೇರ ನಿರ್ದೇಶಕನ ಜೊತೆ 2 ಸಿನಿಮಾ, ರಮೇಶ್ ಪಿಳ್ಳೈ, ಶೈಲಜಾ ನಾಗ್ ಮತ್ತು ಬಿ.ಸುರೇಶ, ಮೋಹನ್ ನಟರಾಜನ್, ಸೂರಪ್ಪ ಬಾಬು, ಸಚ್ಚಿದಾನಂದ ಇಂಡುವಾಳ, ಕೆ.ಮಂಜುನಾಥ್, ರಘುನಾಥ್ ಸೋಗಿ, ಮಹೇಶ್ ಸುಖಧರೆ, ರಾಘವೇಂದ್ರ ಹೆಗ್ಡೆ ಹೀಗೆ ಸಾಲು ಸಾಲು ನಿರ್ಮಾಪಕರು ದರ್ಶನ್‌ಗಾಗಿ ಸಿನಿಮಾ ಮಾಡಲು ಮುಂದೆ ಬಂದಿದ್ದಾರೆ. ದರ್ಶನ್ ಹುಟ್ಟುಹಬ್ಬದಂದು ಸಿನಿಮಾಗಳನ್ನು ಘೋಷಣೆ ಕೂಡ ಮಾಡಿದ್ದಾರೆ.

    ದರ್ಶನ್ ಸಿನಿಮಾಗಳಿಗೆ ಬಂಡವಾಳ ಹಾಕಿದರೆ ಹಣಕ್ಕೆ ಮೋಸವಿಲ್ಲ ಎನ್ನುವ ಮಾತು ಮೊದಲಿನಿಂದಲೂ ಇದೆ. ಕಾಟೇರ ಗೆದ್ದ ನಂತರ ಈ ನಂಬಿಕೆ ಮತ್ತಷ್ಟು ಹೆಚ್ಚಾಗಿದೆ. ಹಾಗಾಗಿ ಸಾಲು ಸಾಲು ಸಿನಿಮಾಗಳು ಘೋಷಣೆ ಆಗಿವೆ. ಯಾವೆಲ್ಲ ಸಿನಿಮಾಗಳು, ಯಾವಾಗೆಲ್ಲ ಬರುತ್ತವೆ ಎನ್ನುವುದು ಕಾದು ನೋಡಬೇಕಿದೆ.

  • ಕಾಟೇರ ನಿರ್ದೇಶಕನಿಗೆ ಎರಡು ಸಿನಿಮಾಗಳ ಕಾಲ್ ಶೀಟ್ ಕೊಟ್ಟ ದರ್ಶನ್

    ಕಾಟೇರ ನಿರ್ದೇಶಕನಿಗೆ ಎರಡು ಸಿನಿಮಾಗಳ ಕಾಲ್ ಶೀಟ್ ಕೊಟ್ಟ ದರ್ಶನ್

    ಕಾಟೇರ (Katera) ಯಶಸ್ಸಿನ ಬೆನ್ನಲ್ಲೇ ನಟ ದರ್ಶನ್ (Darshan) ಆ ಸಿನಿಮಾದ ನಿರ್ದೇಶಕ ತರುಣ್ ಸುಧೀರ್ (Tarun Sudhir)  ಅವರಿಗೆ ಎರಡು ಚಿತ್ರಗಳಿಗೆ ಕಾಲ್ ಶೀಟ್ ನೀಡಿದ್ದಾರೆ. ಎರಡೂ ಸಿನಿಮಾಗಳನ್ನೂ ಪ್ರತಿಷ್ಠಿತ ನಿರ್ಮಾಣ ಸಂಸ‍್ಥೆಗಳೇ ಮಾಡುತ್ತಿವೆ ಎನ್ನುವುದು ವಿಶೇಷ. ದರ್ಶನ್ ಅವರ ಹುಟ್ಟು ಹಬ್ಬದ ಸಂದರ್ಭದಲ್ಲಿ ಎರಡೂ ನಿರ್ಮಾಣ ಸಂಸ್ಥೆಗಳು ಆ ಚಿತ್ರಗಳನ್ನು ಘೋಷಣೆ ಮಾಡಿವೆ.

    ಈಗಾಗಲೇ ದರ್ಶನ್ ಗಾಗಿ ಯಜಮಾನ ಮತ್ತು ಕ್ರಾಂತಿ ಚಿತ್ರವನ್ನು ನಿರ್ಮಾಣ ಮಾಡಿರುವ ಮೀಡಿಯಾ ಹೌಸ್ ಸಂಸ್ಥೆ ಅಂದರೆ, ಶೈಲಜಾ ನಾಗ್ (Shailaja Nag) ಮತ್ತು ಬಿ.ಸುರೇಶ್ ಜಂಟಿಯಾಗಿ ಒಂದು ಸಿನಿಮಾ ಮಾಡುತ್ತಿದ್ದು, ಆ ಚಿತ್ರಕ್ಕೆ ತರುಣ್ ಸುಧೀರ್ ನಿರ್ದೇಶಕ. ವಿ.ಹರಿಕೃಷ್ಣ ಸಂಗೀತ ಸಂಯೋಜನೆಯಲ್ಲಿ ಈ ಸಿನಿಮಾ ಮೂಡಿ ಬರಲಿದೆ.

    ಮತ್ತೊಂದು ಸಿನಿಮಾ ರಾಜಕಾರಣಿ ಹಾಗೂ ದರ್ಶನ್ ಆಪ್ತ ಸಚ್ಚಿದಾನಂದ (Satchidananda) ನಿರ್ಮಾಣ ಮಾಡುತ್ತಿದ್ದಾರೆ. ಈ ಸಿನಿಮಾವನ್ನು ತರುಣ್ ಸುಧೀರ್ ಅವರೇ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದ ಘೋಷಣೆ ಕೂಡ ಇಂದು ಆಗಿದೆ. ಈ ಎರಡೂ ಚಿತ್ರಗಳು ಯಾವಾಗ ಬರುತ್ತವೆ ಎನ್ನುವುದು ಇನ್ನೂ ಖಾತರಿ ಆಗಿಲ್ಲ. ಆದರೂ, ಘೋಷಣೆ ಮಾಡಲಾಗಿದೆ.

     

    ಕಾಟೇರ್ ಸಕ್ಸಸ್ ನಂತರ ತರುಣ್ ಸುಧೀರ್ ಮೇಲೆ ನಿರ್ಮಾಪಕರು ಅಪಾರ ನಂಬಿಕೆ ಬಂದಿದೆ. ಕನ್ನಡದಲ್ಲೇ ಕೋಟಿ ಕೋಟಿ ಹಣವನ್ನು ಈ ಸಿನಿಮಾ ಬಾಚಿದೆ. ಹಾಗಾಗಿ ತರುಣ್ ಮೇಲೆ ಹಣ ಹೂಡಲು ನಿರ್ಮಾಪಕರಿಗೆ ಮುಂದೆ ಬಂದಿದ್ದಾರೆ.

  • ಡಿಬಾಸ್‌ ಹುಟ್ಟುಹಬ್ಬಕ್ಕೆ ಭರ್ಜರಿ ತಯಾರಿ- ನೆಚ್ಚಿನ ನಟನನ್ನು ನೋಡಲು ಕಿಕ್ಕಿರಿದ ಅಭಿಮಾನಿಗಳು

    ಡಿಬಾಸ್‌ ಹುಟ್ಟುಹಬ್ಬಕ್ಕೆ ಭರ್ಜರಿ ತಯಾರಿ- ನೆಚ್ಚಿನ ನಟನನ್ನು ನೋಡಲು ಕಿಕ್ಕಿರಿದ ಅಭಿಮಾನಿಗಳು

    ಚಾಲೆಂಜಿಂಗ್ ಸ್ಟಾರ್ ದರ್ಶನ್‌ಗೆ (Darshan) 47ನೇ ವರ್ಷದ ಹುಟ್ಟುಹಬ್ಬದ ಸಂಭ್ರಮಕ್ಕೆ ಅಭಿಮಾನಿಗಳಿಂದ ಆರ್‌ಆರ್ ನಗರ ನಿವಾಸದ ಬಳಿ ಭರ್ಜರಿ ತಯಾರಿ ನಡೆಯುತ್ತಿದೆ. ಈಗಾಗಲೇ ಡಿಬಾಸ್‌ರನ್ನು ನೋಡಲು ಮನೆಯ ಬಳಿ ಅಪಾರ ಅಭಿಮಾನಿಗಳು ಜಮಾಯಿಸಿದ್ದಾರೆ.

    ಡಿಬಾಸ್ ಹುಟ್ಟುಹಬ್ಬಕ್ಕಾಗಿ ಪ್ರತಿ ವರ್ಷ ಅಪಾರ ಅಭಿಮಾನಿಗಳು ಅವರ ಮನೆಯ ಬಳಿ ಬರುತ್ತಾರೆ. ತಮ್ಮ ನೆಚ್ಚಿನ ನಟನಿಗೆ ಹುಟ್ಟುಹಬ್ಬದ ಶುಭಕೋರಲು ರಾಜ್ಯದ ವಿವಿಧೆಡೆಯಿಂದ ಅಭಿಮಾನಿಗಳು ಆಗಮಿಸಲಿದ್ದಾರೆ. ಹಾಗಾಗಿ ಆರ್‌ಆರ್ ನಗರ ದರ್ಶನ ನಿವಾಸದ ಬಳಿ ಪೊಲೀಸ್ ಬಂದೂಬಸ್ತ್ ಮಾಡಲಾಗಿದೆ.

    ಮಧ್ಯರಾತ್ರಿ 12 ಗಂಟೆಗೆ ಹುಟ್ಟುಹಬ್ಬ ಆಚರಣೆಗೆ ತಯಾರಿ ಭರ್ಜರಿಯಾಗಿ ನಡೆಯುತ್ತಿದೆ. ಇದೇ ವೇಳೆ ದರ್ಶನರ ನಟನೆಯ ಬಹುನೀರಿಕ್ಷಿತ ಚಿತ್ರ ‘ಡೆವಿಲ್’ ಫಸ್ಟ್ ಲುಕ್ ರಿವೀಲ್ ಆಗಲಿದೆ. ಹುಟ್ಟುಹಬ್ಬ ಪ್ರಯುಕ್ತ 11.59ಕ್ಕೆ ‘ಡೆವಿಲ್’ (Devil) ಫಸ್ಟ್ ಲುಕ್ ರಿವೀಲ್ ಆಗಲಿದೆ. ಇದನ್ನೂ ಓದಿ:ಭಟ್ಕಳಕ್ಕೆ ಧಿಡೀರ್ ಭೇಟಿ ನೀಡಿದ ರಾಕಿಂಗ್ ಸ್ಟಾರ್ ಯಶ್ ದಂಪತಿ

    ಹುಟ್ಟು ಹಬ್ಬದ ಜೊತೆ ಜೊತೆಗೆ ದರ್ಶನ್ ಚಂದನವನಕ್ಕೆ ಪದಾರ್ಪಣೆ ಮಾಡಿ ಭರ್ತಿ 25 ವರ್ಷಗಳಾಗಿವೆ. ಇದೇ ಶುಭ ಸಂದರ್ಭದಲ್ಲಿ ದರ್ಶನ್ ಅವರ ನೆಚ್ಚಿನ ಸೆಲೆಬ್ರಿಟಿಗಳು, ಸ್ನೇಹಿತರು ಹಾಗೂ ಹಿತೈಷಿಗಳು ಅರ್ಥಪೂರ್ಣವಾದ ಸಮಾರಂಭವೊಂದನ್ನು ಏರ್ಪಡಿಸಿದ್ದಾರೆ. ಶ್ರೀ ಆದಿಚುಂಚನಗಿರಿ ಶ್ರೀಗಳು, ಶ್ರೀ ಸುತ್ತೂರು ಶ್ರೀಗಳು, ಬೇಬಿ ಮಠ ಶ್ರೀಗಳ ಸಾನಿಧ್ಯದಲ್ಲಿ ಹಾಗೂ ಸಂಸದೆ, ಚಿತ್ರನಟಿ ಸುಮಲತಾ ಅಂಬರೀಶ್ ಅವರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನೆರವೇರಲಿದೆ.

    ಫೆಬ್ರವರಿ 17ರ ಶನಿವಾರ ಸಂಜೆ 5 ಗಂಟೆಗೆ ಬೆಳ್ಳಿ ಪರ್ವ ಡಿ-25 ಎಂಬ ಕಾರ್ಯಕ್ರಮ ನಡೆಯಲಿದೆ. ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ಈ ಸಮಾರಂಭ ನಡೆಯಲಿದ್ದು, ಕನ್ನಡ ಚಿತ್ರರಂಗದಲ್ಲಿ 25 ವರ್ಷ ಪೂರೈಸಿರುವ ದರ್ಶನ್ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಜತೆಗೆ ವಿ.ಹರಿಕೃಷ್ಣ ಸಂಗೀತ ಸಂಜೆ ಸೇರಿದಂತೆ ಹಲವು ಮನರಂಜನಾ ಕಾರ್ಯಕ್ರಮಗಳು ಇರಲಿವೆ.

    ವಿನೋದ್ ರಾಜ್ ಕುಮಾರ್, ವಿನೋದ್ ಪ್ರಭಾಕರ್, ಸತೀಶ್ ನೀನಾಸಂ, ಡಾಲಿ ಧನಂಜಯ್, ಅಭಿಷೇಕ್ ಅಂಬರೀಶ್, ಧನ್ವೀರ್, ಚಿಕ್ಕಣ್ಣ, ಝೈದ್ ಖಾನ್, ಶಿವರಾಜ್ ಕೆ.ಆರ್ ಪೇಟೆ ಹಾಗೂ ಸೂರಜ್ ಸೇರಿದಂತೆ ಸಾಕಷ್ಟು ನಟ, ನಟಿಯರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ನಿಮಿಕಾ ರತ್ನಾಕರ್, ಸಾನ್ಯ ಅಯ್ಯರ್ ನಿಶ್ವಿಕಾ ನಾಯ್ಡು, ಬೃಂದಾ ಆಚಾರ್ಯ, ಶರಣ್ಯ ಶೆಟ್ಟಿ, ನಮ್ರತಾ ಗೌಡ, ತನ್ವಿಯ ಬಾಲರಾಜ್, ಪ್ರಿಯಾಂಕ ಗೌಡ ನೃತ್ಯ ಮಾಡಲಿದ್ದಾರೆ.

    ಹಲವು ಸಾಮಾಜಿಕ ಕಾರ್ಯಕ್ರಮಗಳು ಇದೇ ವೇಳೆ ಜರುಗಲಿದೆ. ಇವೆಲ್ಲ ಕಾರ್ಯಗಳ ಉಸ್ತುವಾರಿಯನ್ನು ದರ್ಶನ್ ಅವರ ಆತ್ಮೀಯರಾದ ಎಸ್.ಸಚ್ಚಿದಾನಂದ ಇಂಡುವಾಳು ವಹಿಸಿಕೊಂಡಿದ್ದಾರೆ. ಶ್ರೀರಂಗಪಟ್ಟಣದ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನ ಮೈದಾನದಲ್ಲಿ ಬೆಳ್ಳಿ ಪರ್ವ ಕಾರ್ಯಕ್ರಮ ನಡೆಯಲಿದೆ.

  • ನಾಳೆ ದರ್ಶನ್ ಹುಟ್ಟುಹಬ್ಬ: ನಿಮ್ ಅಪ್ಪನ್ ಹೆಸ್ರು ಉಳುಸ್ಬುಟ್ಟೆ ಕಣಯ್ಯ  ಟ್ರೆಂಡಿಂಗ್

    ನಾಳೆ ದರ್ಶನ್ ಹುಟ್ಟುಹಬ್ಬ: ನಿಮ್ ಅಪ್ಪನ್ ಹೆಸ್ರು ಉಳುಸ್ಬುಟ್ಟೆ ಕಣಯ್ಯ ಟ್ರೆಂಡಿಂಗ್

    ನ್ನಡದ ಹೆಸರಾಂತ ನಟ ದರ್ಶನ್ ಅವರ ಹುಟ್ಟು ಹಬ್ಬವನ್ನು ಸಂಭ್ರಮದಿಂದ ಆಚರಿಸಲು ಅಭಿಮಾನಿಗಳು ಸರ್ವ ರೀತಿಯಲ್ಲೂ ಸಿದ್ಧತೆ ಮಾಡಿಕೊಂಡಿದ್ದಾರೆ. ನಿನ್ನಯಷ್ಟೇ ಹುಟ್ಟು ಹಬ್ಬಕ್ಕಾಗಿ (Birthday) ಸಿಡಿಪಿ ರಿಲೀಸ್ ಆಗಿದ್ದು, ಕಾಮನ್ ಡಿಪಿಯಲ್ಲಿ(CDP)  ‘ನಿಮ್‍ ಅಪ್ಪನ್ ಹೆಸ್ರು ಉಳುಸ್ಬುಟ್ಟೆ ಕಣಯ್ಯ’ ಮಾತು ಟ್ರೆಂಡ್ ಆಗಿದೆ.

    ಹುಟ್ಟು ಹಬ್ಬದ ಜೊತೆ ಜೊತೆಗೆ ದರ್ಶನ್ (Darshan) ಚಂದನವನಕ್ಕೆ (sandalwood) ಪದಾರ್ಪಣೆ ಮಾಡಿ ಭರ್ತಿ 25 ವರ್ಷಗಳಾಗಿವೆ. ಇದೇ ಶುಭ ಸಂದರ್ಭದಲ್ಲಿ ದರ್ಶನ್ ಅವರ ನೆಚ್ಚಿನ ಸೆಲೆಬ್ರಿಟಿಗಳು, ಸ್ನೇಹಿತರು ಹಾಗೂ ಹಿತೈಷಿಗಳು ಅರ್ಥಪೂರ್ಣವಾದ ಸಮಾರಂಭವೊಂದನ್ನು ಏರ್ಪಡಿಸಿದ್ದಾರೆ. ಶ್ರೀ ಆದಿಚುಂಚನಗಿರಿ ಶ್ರೀಗಳು, ಶ್ರೀ ಸುತ್ತೂರು ಶ್ರೀಗಳು, ಬೇಬಿ ಮಠ  ಶ್ರೀಗಳ ಸಾನಿಧ್ಯದಲ್ಲಿ ಹಾಗೂ ಸಂಸದೆ, ಚಿತ್ರನಟಿ ಸುಮಲತಾ ಅಂಬರೀಶ್ ಅವರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನೆರವೇರಲಿದೆ.

    ಫೆಬ್ರವರಿ 17ರ ಶನಿವಾರ ಸಂಜೆ 5 ಗಂಟೆಗೆ ಬೆಳ್ಳಿ ಪರ್ವ ಡಿ-25 ಎಂಬ ಕಾರ್ಯಕ್ರಮ ನಡೆಯಲಿದೆ. ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ಈ ಸಮಾರಂಭ ನಡೆಯಲಿದ್ದು, ಕನ್ನಡ ಚಿತ್ರರಂಗದಲ್ಲಿ 25 ವರ್ಷ ಪೂರೈಸಿರುವ ದರ್ಶನ್ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಜತೆಗೆ ವಿ.ಹರಿಕೃಷ್ಣ ಸಂಗೀತ ಸಂಜೆ ಸೇರಿದಂತೆ ಹಲವು ಮನರಂಜನಾ ಕಾರ್ಯಕ್ರಮಗಳು ಇರಲಿವೆ.

    ವಿನೋದ್ ರಾಜ್ ಕುಮಾರ್, ವಿನೋದ್ ಪ್ರಭಾಕರ್, ಸತೀಶ್ ನೀನಾಸಂ, ಡಾಲಿ ಧನಂಜಯ್, ಅಭಿಷೇಕ್ ಅಂಬರೀಶ್, ಧನ್ವೀರ್, ಚಿಕ್ಕಣ್ಣ, ಝೈದ್ ಖಾನ್, ಶಿವರಾಜ್ ಕೆ.ಆರ್ ಪೇಟೆ ಹಾಗೂ ಸೂರಜ್ ಸೇರಿದಂತೆ ಸಾಕಷ್ಟು ನಟ, ನಟಿಯರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ನಿಮಿಕಾ ರತ್ನಾಕರ್, ನಿಶ್ವಿಕಾ ನಾಯ್ಡು, ಬೃಂದಾ ಆಚಾರ್ಯ, ಶರಣ್ಯ ಶೆಟ್ಟಿ, ನಮ್ರತಾ ಗೌಡ, ತನ್ವಿಯ ಬಾಲರಾಜ್, ಪ್ರಿಯಾಂಕ ಗೌಡ ನೃತ್ಯ ಮಾಡಲಿದ್ದಾರೆ.

     

    ಹಲವು ಸಾಮಾಜಿಕ ಕಾರ್ಯಕ್ರಮಗಳು ಇದೇ ವೇಳೆ ಜರುಗಲಿದೆ. ಇವೆಲ್ಲ ಕಾರ್ಯಗಳ ಉಸ್ತುವಾರಿಯನ್ನು ದರ್ಶನ್ ಅವರ ಆತ್ಮೀಯರಾದ ಎಸ್.ಸಚ್ಚಿದಾನಂದ ಇಂಡುವಾಳು ವಹಿಸಿಕೊಂಡಿದ್ದಾರೆ. ಶ್ರೀರಂಗಪಟ್ಟಣದ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನ ಮೈದಾನದಲ್ಲಿ ಬೆಳ್ಳಿ ಪರ್ವ ಕಾರ್ಯಕ್ರಮ ನಡೆಯಲಿದೆ.