Tag: Katera

  • ‘ಕಾಟೇರ’ ಮೂಲಕ ಸಿನಿಮಾ ವಿತರಣಾ ಕ್ಷೇತ್ರಕ್ಕೆ ಮರಳಿದ ಗುರು ದೇಶಪಾಂಡೆ

    ‘ಕಾಟೇರ’ ಮೂಲಕ ಸಿನಿಮಾ ವಿತರಣಾ ಕ್ಷೇತ್ರಕ್ಕೆ ಮರಳಿದ ಗುರು ದೇಶಪಾಂಡೆ

    ರ್ನಾಟಕದ ತುಂಬೆಲ್ಲ ಇದೀಗ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ `ಕಾಟೇರ’ (Katera) ಕ್ರೇಜ್ ಮೇರೆ ಮೀರಿಕೊಂಡಿದೆ. ಪರಭಾಷಾ ಚಿತ್ರಗಳಿಗೆ ಸೆಡ್ಡು ಹೊಡೆದು ಥೇಟರುಗಳಿಗೆ ಆಗಮಿಸುವ ಸನ್ನಾಹದಲ್ಲಿರೋ ಈ ಚಿತ್ರದ ದಿಕ್ಕಿನಿಂದ ಕ್ಷಣಕ್ಕೊಂದರಂತೆ ಹೊಸಾ ಸುದ್ದಿಗಳು ಹೊರಬೀಳುತ್ತಿವೆ. ಇದೇ ಹೊತ್ತಿನಲ್ಲಿ ಹೈದ್ರಾಬಾದ್ ಕರ್ನಾಟಕ ಭಾಗದ ಕಾಟೇರ ವಿತರಣಾ (Distribution) ಹಕ್ಕನ್ನು ನಿರ್ದೇಶಕ, ನಿರ್ಮಾಪಕ ಗುರು ದೇಶಪಾಂಡೆ (Guru Deshpande) ಪಡೆದುಕೊಂಡಿದ್ದಾರೆ.

    ಈ ಸುದ್ದಿ ಕೇಳಿದಾಕ್ಷಣ ಹಲವರಿಗೆ ಅಚ್ಚರಿಯಾದೀತೇನೋ… ಗುರು ದೇಶಪಾಂಡೆ ನಿರ್ದೇಶಕರಾಗಿ ಪ್ರಸಿದ್ಧಿ ಪಡೆದುಕೊಂಡಿರುವವರು. ಇತ್ತೀಚಿನ ದಿನಗಳಲ್ಲಿ ನಿರ್ಮಾಪಕರಾಗಿಯೂ ಸದ್ದು ಮಾಡುತ್ತಿರುವವರು. ಇಂಥಾ ಗುರು ದೇಶಪಾಂಡೆ ಏಕಾಏಕಿ ಸಿನಿಮಾ ವಿತರಣಾ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿದರೆಂದರೆ, ಅಚ್ಚರಿಯಾಗೋದು ಸಹಜವೇ. ಅಸಲೀ ವಿಚಾರವೆಂದರೆ, ಅವರು ಸಿನಿಮಾ ವಿತರಣಾ ಕ್ಷೇತ್ರಕ್ಕೆ ಸೀನಿಯರ್. ದಶಕಗಳ ಹಿಂದೆ ಹಲವಾರು ಹಿಟ್ ಸಿನಿಮಾಗಳನ್ನು ವಿತರಿಸಿ ಸೈ ಅನ್ನಿಸಿಕೊಂಡಿದ್ದ ಗುರು ದೇಶಪಾಂಡೆ ಕಾಟೇರ ಮೂಲಕ ಆ ಕ್ಷೇತ್ರಕ್ಕೆ ಮತ್ತೆ ಅಡಿಯಿರಿಸಿದ್ದಾರೆ.

    ದರ್ಶನ್ ಸಿನಿಮಾಗಳೆಂದರೆ, ದಶದಿಕ್ಕುಗಳತ್ತಲೂ ಕ್ರೇಜ್ ಹಬ್ಬಿಕೊಳ್ಳೋದು ಮಾಮೂಲು. ಸದ್ಯದ ಮಟ್ಟಿಗೆ ಕಾಟೇರ ವಿಚಾರದಲ್ಲಿ ಈ ಹಿಂದಿಗಿಂತಲೂ ತುಸು ಹೆಚ್ಚೇ ನಿರೀಕ್ಷೆಗಳಿದ್ದಾವೆ. ಅದರಲ್ಲಿಯೂ ವಿಶೇಷವಾಗಿ ಹೈದ್ರಾಬಾದ್ ಕರ್ನಾಟಕ ಮಂದಿಯ ಸಿನಿಮಾ ವ್ಯಾಮೋಹ ಅತೀವವಾದದ್ದು. ಇಂಥಾ ಭಾಗದ ಕಾಟೇರ ವಿತರಣಾ ಹಕ್ಕು ಗುರು ದೇಶಪಾಂಡೆ ತೆಕ್ಕೆಗೆ ಬಿದ್ದಿದೆ. ಇದರೊಂದಿಗೆ ಸಿನಿಮಾ ವಿತರಕರಾಗಿ ಗುರು ದೇಶಪಾಡೆ ಅವರ ಸೆಕೆಂಡ್ ಇನ್ನಿಂಗ್ಸ್ ಕೂಡಾ ಭರ್ಜರಿ ಯಶ ದಕ್ಕಿಸಿಕೊಳ್ಳುವ ನಿಖರ ಸೂಚನೆಗಳೂ ಕಾಣಿಸುತ್ತಿವೆ.

     

    ಗುರು ದೇಶಪಾಂಡೆ ಸಿನಿಮಾ ರಂಗದ ನಾನಾ ವಿಭಾಗಗಳಲ್ಲಿ ಸಕ್ರಿಯರಾಗಿದ್ದರೂ ಕೂಡಾ, ಪ್ರಧಾನವಾಗಿ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದಾರೆ. ಆದರೆ, 2010-11ನೇ ಸಾಲಿನಲ್ಲಿ ಅವರು ಸಿನಿಮಾ ವಿತರಕರಾಗಿ ಸಕ್ರಿಯರಾಗಿದ್ದರು. ಆ ಕಾಲದಲ್ಲಿ ರಜನೀಕಾಂತ್ ಮಾಜೀ ಅಳಿಯ ಧನುಶ್ ನಟಿಸಿದ್ದ ಅಡುಗಳಂ, ದೈವ ತಿರುಮಗಳ್, ದಳಪತಿ ವಿಜಯ್ ನಟಿಸಿದ್ದ ವೇಲಾಯುಧನ್, ಯಶ್ ಅಭಿನಯದ ಕಿರಾತಕ, ಸಂಜು ವೆಡ್ಸ್ ಗೀತಾದಂಥಾ ಹಿಟ್ ಸಿನಿಮಾಗಳನ್ನು ವಿತರಿಸುವ ಮೂಲಕ ಗೆದ್ದಿದ್ದರು. ಆ ನಂತರದಲ್ಲಿ ನಿರ್ದೇಶನದತ್ತ ಹೊರಳಿಕೊಂಡಿದ್ದ ಗುರು ದೇಶಪಾಂಡೆ ವಿತರಣಾ ಕ್ಷೇತ್ರದಿಂದ ಹಿಂದೆ ಸರಿದ್ದರು. ಇದೀಗ ದಶಕದ ನಂತರ, ಕಾಟೇರನ ಪ್ರಭೆಯಲ್ಲವರು ಹಳೇ ಹಾದಿಯಲ್ಲಿ ಹೊಸಾ ಹುರುಪಿನೊಂದಿಗೆ ಹೆಜ್ಜೆಯೂರಿದ್ದಾರೆ

  • Darshan: ನನ್ನ ಮಣ್ಣು, ನನ್ನ ಹಕ್ಕು- ‘ಕಾಟೇರ’ ಸಾಂಗ್ ಔಟ್

    Darshan: ನನ್ನ ಮಣ್ಣು, ನನ್ನ ಹಕ್ಕು- ‘ಕಾಟೇರ’ ಸಾಂಗ್ ಔಟ್

    ಡಿಬಾಸ್ ದರ್ಶನ್ (Darshan) ನಟನೆಯ ‘ಕಾಟೇರ’ (Katera) ಸಿನಿಮಾದ ಸಾಂಗ್ ರಿಲೀಸ್ ಆಗಿದೆ. ಮಂಡ್ಯದ ಜನತೆಯ ಎದುರು ‘ಕಾಟೇರ’ ಥೀಮ್ ಸಾಂಗ್ ಅನ್ನು ಸುಮಲತಾ ಅಂಬರೀಶ್ ರಿಲೀಸ್ ಮಾಡಿದ್ದಾರೆ. ಇದನ್ನೂ ಓದಿ: 11 ವರ್ಷಗಳ ಪ್ರೀತಿಗೆ ಫುಲ್‌ ಸ್ಟಾಪ್- ತಾನಿಯಾ ಜೊತೆ ಅಹಾನ್ ಶೆಟ್ಟಿ ಬ್ರೇಕಪ್

    ನೆತ್ತರಲ್ಲಿ ನೆಂದ ಭೂಮಿ ಎಂದು ಶುರುವಾಗುವ ಸಾಂಗ್ ಸಖತ್ ಥ್ರಿಲ್ಲಿಂಗ್ ಆಗಿ ಮೂಡಿ ಬಂದಿದೆ. ನನ್ನ ಮಣ್ಣು, ನನ್ನ ಹಕ್ಕು ಮೊದಲಾದ ರೈತರ ಭಾವನೆಗಳನ್ನ ಈ ಹಾಡು ಒಳಗೊಂಡಿದೆ. ವಿಶೇಷ ಅಂದರೆ, ರೈತರ ದಿನದಂದೇ ಈ ಹಾಡನ್ನ ರಿಲೀಸ್ ಮಾಡಲಾಗಿದೆ.

    ನನ್ನ ಮಣ್ಣು, ನನ್ನ ಹಕ್ಕು ಹಾಡಿಗೆ ಪುನೀತ್ ಆರ್ಯ ಸಾಹಿತ್ಯ ಬರೆದಿದ್ದಾರೆ. ವಿ ಹರಿಕೃಷ ‘ಕಾಟೇರ’ ಹಾಡುಗಳನ್ನ ಸಂಗೀತ ಸಂಯೋಜನೆ ಮಾಡಿದ್ದಾರೆ. ‘ಕಾಟೇರ’ ಚಿತ್ರದ ಎಲ್ಲಾ ಹಾಡುಗಳು ಸೂಪರ್ ಡೂಪರ್ ಹಿಟ್ ಆಗಿದೆ. ಮಂಡ್ಯದಲ್ಲಿ ಅದ್ದೂರಿಯಾಗಿ ಇಂದು (ಡಿ.23) ಸಾಂಗ್ ರಿಲೀಸ್ ಕಾರ್ಯಕ್ರಮ ನಡೆದಿದೆ. ದರ್ಶನ್ & ಟೀಮ್‌ಗೆ ನಟಿ ಸುಮಲತಾ ಕೂಡ ಸಾಥ್ ನೀಡಿದ್ದಾರೆ.

    ದರ್ಶನ್‌ಗೆ ನಾಯಕಿಯಾಗಿ ಮಾಲಾಶ್ರೀ ಪುತ್ರಿ ಆರಾಧನಾ ರಾಮ್ ನಟಿಸಿದ್ದಾರೆ. ರಾಕ್‌ಲೈನ್ ವೆಂಕಟೇಶ್ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ತರುಣ್ ಸುಧೀರ್ ನಿರ್ದೇಶನ ಮಾಡಿದ್ದಾರೆ. ಇದೇ ಡಿ.29ಕ್ಕೆ ‘ಕಾಟೇರ’ ಸಿನಿಮಾ ರಿಲೀಸ್ ಆಗುತ್ತಿದೆ.

  • ಮಂಡ್ಯದಲ್ಲಿ ಇಂದು ‘ಕಾಟೇರ’ ರೈತಗೀತೆ ಬಿಡುಗಡೆ

    ಮಂಡ್ಯದಲ್ಲಿ ಇಂದು ‘ಕಾಟೇರ’ ರೈತಗೀತೆ ಬಿಡುಗಡೆ

    ರ್ಶನ್ (Darshan) ನಟನೆಯ ಕಾಟೇರ ಸಿನಿಮಾದ ಪ್ರಿ ರಿಲೀಸ್ ಇವೆಂಟ್ (Pre Release Event) ಇಂದು ಮಂಡ್ಯದಲ್ಲಿ (Mandya) ಅದ್ಧೂರಿಯಾಗಿ ನಡೆಯಲಿದೆ. ಇಂದು ರೈತದಿನ ಆಗಿದ್ದರಿಂದ ಈ ಕಾರ್ಯಕ್ರಮದಲ್ಲಿ ರೈತಗೀತೆಯನ್ನು ಬಿಡುಗಡೆ ಮಾಡುವುದಾಗಿ ಚಿತ್ರತಂಡ ಹೇಳಿದೆ. ಸಾವಿರಾರು ಸಂಖ್ಯೆಯಲ್ಲಿ ಇಂದು ದರ್ಶನ್ ಅಭಿಮಾನಿಗಳು ಮಂಡ್ಯದಲ್ಲಿ ಸೇರಲಿದ್ದಾರೆ.

    ಮೊನ್ನೆಯಷ್ಟೇ ಕಾಟೇರ (Katera) ಸಿನಿಮಾದ ಟ್ರೈಲರ್ ರಿಲೀಸ್ ಆಗಿದೆ. ಅದ್ಭುತ ಪ್ರತಿಕ್ರಿಯೆ ಕೂಡ ವ್ಯಕ್ತವಾಗಿದೆ. ಹುಬ್ಬಳ್ಳಿಯಲ್ಲಿ ನಡೆದ ಟ್ರೈಲರ್ ಬಿಡುಗಡೆ ಸಮಾರಂಭದಲ್ಲಿ ದರ್ಶನ್ ಸಿನಿಮಾ ಕುರಿತಾದ ಹಲವು ಸಂಗತಿಗಳನ್ನು ಹಂಚಿಕೊಂಡಿದ್ದಾರೆ. ಈ ಸಿನಿಮಾದ ಕಥೆಯು ನೈಜ ಘಟನೆಯನ್ನು ಆಧರಿಸಿದ್ದು, ಅದು ಇಂದಿರಾ ಗಾಂಧಿ (Indira Gandhi) ಕಾಲದ ಕಥೆಯಾಗಿದೆ ಎಂದು ಗುಟ್ಟು ಬಿಟ್ಟುಕೊಟ್ಟಿದ್ದಾರೆ.

    ಅದು 1974ರ ಕಾಲ. ಉಳುವವನೆ ಭೂಮಿಯ ಒಡೆಯ ಕಾನೂನು ಬಂದಾಗ ನಡೆದಿರುವ ಘಟನೆ. ಆವಾಗ ಬಾವಿಯೊಂದರಲ್ಲಿ ತುಂಬಾ ಜನರ ಮೂಳೆಗಳು ಸಿಕ್ಕಿದ್ದವು. ಆ ಮೂಳೆಗಳು ಯಾರವು ಅಂತ ಯಾರಿಗೂ ಗೊತ್ತಿಲ್ಲ. ಆ ಕಹಿ ಘಟನೆಯನ್ನು ಈ ಸಿನಿಮಾದಲ್ಲಿ ಹೇಳಲು ಹೊರಟಿದ್ದೇವೆ ಎಂದಿದ್ದಾರೆ ದರ್ಶನ್.

     

    ರಾಕ್‌ಲೈನ್‌ ವೆಂಕಟೇಶ್‌ ನಿರ್ಮಾಣದ, ತರುಣ್ ಸುದೀರ್ ನಿರ್ದೇಶನದ ಕಾಟೇರ ಚಿತ್ರ ಇದೇ ತಿಂಗಳು 29ಕ್ಕೆ ತೆರೆಗೆ ಬರಲು ಸಿದ್ಧವಾಗಿದೆ. ನಟ ದರ್ಶನರ ಬಹು ನಿರೀಕ್ಷಿತ ಚಿತ್ರ ಇದಾಗಿದ್ದು, ಈಗಾಗಲೇ ಚಿತ್ರ ಭಾರೀ ಹೈಪ್ ಕ್ರಿಯೆಟ್ ಮಾಡಿದೆ. ಬಹಳ ದಿನಗಳ ಬಳಿಕ ಡಿ ಬಾಸ್ ಮಾಸ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಟೀಸರ್ ಮತ್ತು ಸಾಂಗ್ ಯೂಟ್ಯೂಬ್‌ನಲ್ಲಿ ಸೆನ್ಸೇಷನ್ ಕ್ರಿಯೇಟ್‌ ಮಾಡಿದೆ. ಚಿತ್ರ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಈ ನಡುವೆ ವಾಣಿಜ್ಯ ನಗರಿಯಲ್ಲಿ ಅದ್ಧೂರಿಯಾಗಿ ಟ್ರೈಲರ್ ಬಿಡುಗಡೆಗೊಳಿಸಲಾಗಿದೆ.

  • ‘ಕಾಟೇರ’ ಇಂದಿರಾ ಗಾಂಧಿ ಕಾಲದ ನೈಜ ಕಥೆ : ನಟ ದರ್ಶನ್

    ‘ಕಾಟೇರ’ ಇಂದಿರಾ ಗಾಂಧಿ ಕಾಲದ ನೈಜ ಕಥೆ : ನಟ ದರ್ಶನ್

    ರ್ಶನ್ (Darshan) ನಟನೆಯ ಕಾಟೇರ (Katera) ಸಿನಿಮಾದ ಟ್ರೈಲರ್ ರಿಲೀಸ್ ಆಗಿದೆ. ಅದ್ಭುತ ಪ್ರತಿಕ್ರಿಯೆ ಕೂಡ ವ್ಯಕ್ತವಾಗಿದೆ. ಹುಬ್ಬಳ್ಳಿಯಲ್ಲಿ ನಡೆದ ಟ್ರೈಲರ್ ಬಿಡುಗಡೆ ಸಮಾರಂಭದಲ್ಲಿ ದರ್ಶನ್ ಸಿನಿಮಾ ಕುರಿತಾದ ಹಲವು ಸಂಗತಿಗಳನ್ನು ಹಂಚಿಕೊಂಡಿದ್ದಾರೆ. ಈ ಸಿನಿಮಾದ ಕಥೆಯು ನೈಜ ಘಟನೆಯನ್ನು ಆಧರಿಸಿದ್ದು, ಅದು ಇಂದಿರಾ ಗಾಂಧಿ (Indira Gandhi) ಕಾಲದ ಕಥೆಯಾಗಿದೆ ಎಂದು ಗುಟ್ಟು ಬಿಟ್ಟುಕೊಟ್ಟಿದ್ದಾರೆ.

    ಅದು 1974ರ ಕಾಲ. ಉಳುವವನೆ ಭೂಮಿಯ ಒಡೆಯ ಕಾನೂನು ಬಂದಾಗ ನಡೆದಿರುವ ಘಟನೆ. ಆವಾಗ ಬಾವಿಯೊಂದರಲ್ಲಿ ತುಂಬಾ ಜನರ ಮೂಳೆಗಳು ಸಿಕ್ಕಿದ್ದವು. ಆ ಮೂಳೆಗಳು ಯಾರವು ಅಂತ ಯಾರಿಗೂ ಗೊತ್ತಿಲ್ಲ. ಆ ಕಹಿ ಘಟನೆಯನ್ನು ಈ ಸಿನಿಮಾದಲ್ಲಿ ಹೇಳಲು ಹೊರಟಿದ್ದೇವೆ ಎಂದಿದ್ದಾರೆ ದರ್ಶನ್.

    ಹುಬ್ಬಳ್ಳಿಯಲ್ಲಿ ಟ್ರೈಲರ್ ರಿಲೀಸ್

    ಇದೇ ಡಿಸೆಂಬರ್‌ 29 ರಂದು ತೆರೆಗೆ ಬರಲು ಸಜ್ಜಾಗಿರುವ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌, ಮಾಲಾಶ್ರೀ ಪುತ್ರಿ ಆರಾಧನಾ ಜೊತೆಯಾಗಿ ನಟಿಸಿರುವ ʻಕಾಟೇರʼ ಚಿತ್ರದ ಟ್ರೈಲರ್‌ ಶನಿವಾರ ಹುಬ್ಬಳ್ಳಿಯಲ್ಲಿ ಬಿಡುಗಡೆಯಾಗಿದೆ. ಹುಬ್ಬಳ್ಳಿ ರೈಲ್ವೆ ಮೈದಾನದಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ರೈಲರ್‌ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಶಾಸಕರಾದ ಕೋನರೆಡ್ಡಿ, ಪ್ರಸಾದ್ ಅಬ್ಬಯ್ಯ ಸಾಥ್ ನೀಡಿದರು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹ ಚಿತ್ರ ತಂಡಕ್ಕೆ ಆಲ್ ದ ಬೆಸ್ಟ್ ಹೇಳಿದರು.

    ರಾಕ್‌ಲೈನ್‌ ವೆಂಕಟೇಶ್‌ ನಿರ್ಮಾಣದ, ತರುಣ್ ಸುದೀರ್ ನಿರ್ದೇಶನದ ಕಾಟೇರ ಚಿತ್ರ ಇದೇ ತಿಂಗಳು 29ಕ್ಕೆ ತೆರೆಗೆ ಬರಲು ಸಿದ್ಧವಾಗಿದೆ. ನಟ ದರ್ಶನರ ಬಹು ನಿರೀಕ್ಷಿತ ಚಿತ್ರ ಇದಾಗಿದ್ದು, ಈಗಾಗಲೇ ಚಿತ್ರ ಭಾರೀ ಹೈಪ್ ಕ್ರಿಯೆಟ್ ಮಾಡಿದೆ. ಬಹಳ ದಿನಗಳ ಬಳಿಕ ಡಿ ಬಾಸ್ ಮಾಸ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಟೀಸರ್ ಮತ್ತು ಸಾಂಗ್ ಯೂಟ್ಯೂಬ್‌ನಲ್ಲಿ ಸೆನ್ಸೇಷನ್ ಕ್ರಿಯೇಟ್‌ ಮಾಡಿದೆ. ಚಿತ್ರ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಈ ನಡುವೆ ವಾಣಿಜ್ಯ ನಗರಿಯಲ್ಲಿ ಅದ್ಧೂರಿಯಾಗಿ ಟ್ರೈಲರ್ ಬಿಡುಗಡೆಗೊಳಿಸಲಾಗಿದೆ.

     

    ಅದ್ಧೂರಿ ಸಮಾರಂಭಕ್ಕೆ ಉತ್ತರ ಕರ್ನಾಟಕದ ಮೂಲೆಮೂಲೆಗಳಿಂದ ದರ್ಶನ್‌ ಅಭಿಮಾನಿಗಳ ಜನಸಾಗರವೇ ಹರಿದು ಬಂದಿತ್ತು. ಮೈದಾನದಲ್ಲೆಡೆ ಡಿ ಬಾಸ್ ಘೋಷಣೆ ಮೊಳಗಿತು. ಇನ್ನೂ ನಾಡ ಬಾವುಟದ ಜೊತೆಗೆ ದರ್ಶ ಭಾವಚಿತ್ರದ ಪಟವೂ ರಾರಾಜಿಸಿದವು.

  • ದರ್ಶನ್ ಕುರಿತು ನೆಗೆಟಿವ್ ಟ್ರೋಲ್: ಸಿಡಿದೆದ್ದ ಫ್ಯಾನ್ಸ್

    ದರ್ಶನ್ ಕುರಿತು ನೆಗೆಟಿವ್ ಟ್ರೋಲ್: ಸಿಡಿದೆದ್ದ ಫ್ಯಾನ್ಸ್

    ನ್ನಡದ ಹೆಸರಾಂತ ನಟ ದರ್ಶನ್ (Darshan) ಅವರ ಸಿನಿಮಾರಿಲೀಸ್ ಆಗುವ ವೇಳೆಯಲ್ಲೇ ಬೇಕು ಅಂತಾನೇ ಕೆಲವರು ನೆಗೆಟಿವ್ ಟ್ರೋಲ್ (Troll) ಮಾಡುತ್ತಾರೆ. ಈ ಬಾರಿಯೂ ಕಾಟೇರ  (Katera)ಕುರಿತಾಗಿ ಟ್ರೋಲ್ ಮಾಡಲಾಗುತ್ತಿದೆ. ಈ ಕುರಿತಂತೆ ದರ್ಶನ್ ಫ್ಯಾನ್ಸ್ ಗರಂ ಆಗಿದ್ದಾರೆ. ನೆಗೆಟಿವ್ ಟ್ರೋಲ್ ಮಾಡುವವರನ್ನು ಹುಡುಕುವ ಪ್ರಯತ್ನವನ್ನು ಅವರು ಮಾಡುತ್ತಿದ್ದಾರೆ.

    ಕನ್ನಡ ಸಿನಿಮಾ ಕುರಿತಂತೆ ದರ್ಶನ್ ಮೊನ್ನೆಯಷ್ಟೇ ಗಟ್ಟಿ ಧ್ವನಿಯಲ್ಲಿ ಮಾತನಾಡಿದ್ದಾರೆ. ನಮ್ಮದು ಪ್ಯಾನ್ ಇಂಡಿಯಾ ಸಿನಿಮಾವಲ್ಲ, ಅಪ್ಪಟ ಕನ್ನಡ ಸಿನಿಮಾ. ನಮ್ಮ ನೆಲದಲ್ಲಿ ಬೇರೆ ಸಿನಿಮಾಗಳು ರಿಲೀಸ್ ಆಗೋಕೆ ಭಯ ಪಡಬೇಕು. ನಾವೇಕೆ ಭಯ ಪಡಬೇಕು ಎಂದೆಲ್ಲ ಮಾತನಾಡಿದ್ದಾರೆ. ಈ ಕುರಿತಂತೆಯೂ ಟ್ರೋಲ್ ಮಾಡಲಾಗುತ್ತಿದೆ.

    ನಾನಾ ಕಾರಣಗಳಿಂದಾಗಿ ಕಾಟೇರ ಸಿನಿಮಾ ನಿರೀಕ್ಷೆ ಮೂಡಿಸಿದೆ. ಇವತ್ತು ಸಿನಿಮಾದ ಟ್ರೈಲರ್ ಕೂಡ ಬಿಡುಗಡೆ ಆಗುತ್ತಿದೆ. ಅದಕ್ಕಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ಈ ಸಿನಿಮಾದಲ್ಲಿ ದರ್ಶನ್ ಹೊಸ ಬಗೆಯ ಪಾತ್ರ ಮಾಡಿದ್ದು, ಆ ಪಾತ್ರವನ್ನು ನೋಡಲು ನೋಡುಗರು ಕಾಯುತ್ತಿದ್ದಾರೆ.

     

    ಇದರ ಸೃಷ್ಟಿಕರ್ತರು ತರುಣ್ ಸುಧೀರ್ (Tarun Sudhir). ರಾಕ್ಲೈನ್ ವೆಂಕಟೇಶ್ (Rock Line Venkatesh) ಅದ್ಧೂರಿ ನಿರ್ಮಾಣದಲ್ಲಿ ತಯಾರಾಗುತ್ತಿರುವ ಚಿತ್ರ. ದರ್ಶನ್ (Darshan) ಅಭಿನಯದ 56ನೇ ಸಿನಿಮಾ ಕೂಡ ಇದಾಗಿದೆ. ದರ್ಶನ್ ಕಾಟೇರನಾಗಿ ಬರುತ್ತಿದ್ದಾರೆ. ಒಂದೇ ಒಂದು ಲುಕ್ನಲ್ಲೇ ಮಾಸ್ ಪ್ರೇಕ್ಷಕರ ಗಮನ ಸೆಳೆದಿದ್ದಾರೆ. ಹಿಂದಿನ 55 ಸಿನಿಮಾಗಳಲ್ಲಿ ದರ್ಶನ್ ಕಾಣಿಸ್ಕೊಂಡಿದ್ದೇ ಬೇರೆ. ಇದುವೇ ಬೇರೆ. ಔಟ್ ಆ್ಯಂಡ್ ಔಟ್ ಹಳ್ಳಿ ಬ್ಯಾಕ್ಡ್ರಾಪ್.

  • ಹುಲಿ ಉಗುರು ಪ್ರಕರಣ: ಗುಜರಾತ್ ಗೆ ಹೊರಟ ನಟ ದರ್ಶನ್

    ಹುಲಿ ಉಗುರು ಪ್ರಕರಣ: ಗುಜರಾತ್ ಗೆ ಹೊರಟ ನಟ ದರ್ಶನ್

    ನಿನ್ನೆಯಷ್ಟೇ ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಅರಣ್ಯಾಧಿಕಾರಿಗಳು ದರ್ಶನ್ (Darshan) ಅವರಿಗೆ ನೋಟಿಸ್ ನೀಡಿದ್ದರು. ನೋಟಿಸ್ ಗೆ ಸಂಬಂಧಪಟ್ಟಂತೆ ದರ್ಶನ್ ಇವತ್ತು ಉತ್ತರ ನೀಡುತ್ತಾರೆ ಎಂದು ಹೇಳಲಾಗಿತ್ತು. ಆದರೆ, ಇಂದು ದರ್ಶನ್ ಉತ್ತರ ನೀಡುತ್ತಿಲ್ಲ ಎನ್ನುವುದು ಗೊತ್ತಾಗಿದೆ. ಈ ಹಿಂದೆಯೇ ನಿಗದಿಯಾದಂತೆ ಕಾಟೇರ (Katera) ಸಿನಿಮಾದ ಶೂಟಿಂಗ್ ಗಾಗಿ ದರ್ಶನ್ ಇಂದು ಗುಜರಾತ್ (Gujarat)ಗೆ ಪ್ರಯಾಣ ಬೆಳಸಲಿದ್ದಾರೆ.

    ಬೆಳಗ್ಗೆ ಬೆಂಗಳೂರಿನಿಂದ ಮೈಸೂರಿಗೆ ಹೊರಟಿರುವ ದರ್ಶನ್. ಆನಂತರ ಸಾಯಂಕಾಲ 4 ಗಂಟೆಗೆ ವಿಮಾನದ ಟಿಕೆಟ್ ಬುಕ್ ಆಗಿರುವುದರಿಂದ ಮತ್ತೆ ಬೆಂಗಳೂರಿಗೆ ಆಗಮಿಸಿ, ವಿಮಾನ ಏರಲಿದ್ದಾರೆ. ನಿನ್ನೆ ದರ್ಶನ್ ಮನೆಯಲ್ಲಿ ಹುಲಿ ಉಗುರಿನ ಶೋಧ ಕಾರ್ಯ ನಡೆಸಿದ್ದರು ಅರಣ್ಯ ಅಧಿಕಾರಿಗಳು. ಈ ಪ್ರಕರಣಕ್ಕೆ ದರ್ಶನ್ ಸಂಪೂರ್ಣ ಸಹಕಾರ ನೀಡಿರುವುದಾಗಿಯೂ ಅಧಿಕಾರಿಗಳು ಹೇಳಿಕೊಂಡಿದ್ದರು.

    ಕಾಫಿನಾಡಿನಲ್ಲಿ ಅರ್ಚಕರ ಬಂಧನ

    ಕಾಫಿನಾಡು ಚಿಕ್ಕಮಗಳೂರಿನಲ್ಲಿ (Chikkamagaluru) ಹುಲಿ ಉಗುರು (Tiger Claw) ಕಾರ್ಯಚರಣೆ ಮುಂದುವರೆದಿದ್ದು, ಹುಲಿ ಉಗುರಿನ ಡಾಲರ್ (Dollar) ಹಾಕಿಕೊಂಡಿದ್ದ ಇಬ್ಬರು ಅರ್ಚಕರನ್ನು ಬಂಧಿಸಲಾಗಿದೆ. ಖಾಂಡ್ಯ ಮಾರ್ಕಾಂಡೇಶ್ವರ ದೇವಾಲಯದ ಇಬ್ಬರು ಅರ್ಚಕರನ್ನು (Priest) ಬಾಳೆಹೊನ್ನೂರು ಅರಣ್ಯ ವಲಯದ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಅರ್ಚಕರನ್ನು ಕೃಷ್ಣಾನಂದ ಹೊಳ್ಳ, ನಾಗೇಂದ್ರ ಜೋಯಿಸ ಎಂದು ಗುರುತಿಸಲಾಗಿದೆ. ಬಂಧಿತರಿಂದ ಒಟ್ಟು ಮೂರು ಹುಲಿ ಉಗುರನ್ನು ವಶಕ್ಕೆ ಪಡೆಯಲಾಗಿದೆ.

     

    ಅರಣ್ಯ ಇಲಾಖೆಯ ಸಿಬ್ಬಂದಿ ಇಬ್ಬರು ಅರ್ಚಕರನ್ನು ವಿಚಾರಣೆ ನಡೆಸುತ್ತಿದ್ದಾರೆ. ಇಬ್ಬರು ಅರ್ಚಕರ ವಿರುದ್ಧ ಬಾಳೆಹೊನ್ನೂರು ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಧಿತರು ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ದೇವಸ್ಥಾನದಲ್ಲಿ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾಟೇರ ಬಗ್ಗೆ ದರ್ಶನ್‌ ಮೊದಲ ಮಾತು..!

    ಕಾಟೇರ ಬಗ್ಗೆ ದರ್ಶನ್‌ ಮೊದಲ ಮಾತು..!

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಕಾಟೇರ’ ಚಿತ್ರಕ್ಕೆ 100 ದಿನಗಳ ಶೂಟಿಂಗ್: ದರ್ಶನ್ ಭಾಗವಹಿಸಿದ ದಿನಗಳೆಷ್ಟು?

    ‘ಕಾಟೇರ’ ಚಿತ್ರಕ್ಕೆ 100 ದಿನಗಳ ಶೂಟಿಂಗ್: ದರ್ಶನ್ ಭಾಗವಹಿಸಿದ ದಿನಗಳೆಷ್ಟು?

    ನ್ನಡ ಚಿತ್ರರಂಗಕ್ಕೆ ಸಾಕಷ್ಟು ಜನಪ್ರಿಯ ಚಿತ್ರಗಳನ್ನು ನೀಡಿರುವ ಖ್ಯಾತ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ (Rock Line Venkatesh) ನಿರ್ಮಾಣದ, ತರುಣ್ ಸುಧೀರ್ (Tarun Sudhir) ನಿರ್ದೇಶನದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ನಾಯಕರಾಗಿ ನಟಿಸುತ್ತಿರುವ ‘ಕಾಟೇರ’ (Katera) ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿಯನ್ನು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ನೀಡಿದರು.  ನಮ್ಮ ಸಂಸ್ಥೆಯ ನಿರ್ಮಾಣದ ಕಾಟೇರ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಈ ತನಕ ನೂರು ದಿನಗಳ ಚಿತ್ರೀಕರಣವಾಗಿದೆ. ಮೂರು ಹಾಡುಗಳ ಚಿತ್ರೀಕರಣ ಮಾತ್ರ ಬಾಕಿಯಿದೆ. ಇದು ಎಪ್ಪತ್ತರ ದಶಕದಲ್ಲಿ ನಡೆಯುವ ಕಥೆಯಾಗಿದೆ. ಹಾಗಾಗಿ ಈ ಸ್ಥಳದಲ್ಲಿ ಹಳ್ಳಿಯ ಸೆಟ್ ಹಾಕಿ ಚಿತ್ರೀಕರಣ ಮಾಡಿದ್ದೇವೆ.  ಇನ್ನು ಕೆಲವೇ ದಿನಗಳಲ್ಲಿ ಚಿತ್ರೀಕರಣ ಮುಕ್ತಾಯವಾಗಲಿದೆ. ತರುಣ್ ಅವರು ಹೇಳಿದ ಕಥೆ ಬಹಳ ಇಷ್ಟವಾಯಿತು.

    ದರ್ಶನ್ ಅವರು ಈ ಚಿತ್ರದ ನಾಯಕರಾಗಿ ನಟಿಸುತ್ತಿದ್ದು, ನಾಯಕಿಯಾಗಿ ಮೊದಲ ಬಾರಿಗೆ ಮಾಲಾಶ್ರೀ ಅವರ ಮಗಳು ಆರಾಧನಾ ಅಭಿನಯಿಸುತ್ತಿದ್ದಾರೆ. ಜನಪ್ರಿಯ ಕಲಾವಿದರ ದೊಡ್ಡ ತಾರಾಬಳಗವೇ ಈ ಚಿತ್ರದಲ್ಲಿದೆ. ವಿ.ಹರಿಕೃಷ್ಣ ಸಂಗೀತ ನೀಡುತ್ತಿದ್ದಾರೆ. ಚಿತ್ರ ಉತ್ತಮವಾಗಿ ಮೂಡಿಬರಲು ಸಹಕಾರ ನೀಡುತ್ತಿರುವ ಇಡೀ ತಂಡಕ್ಕೆ  ಧನ್ಯವಾದ ಎಂದರು ನಿರ್ಮಾಪಕ ರಾಕ್ ಲೈನ್ ವೆಂಕಟೇಶ್.

    ಗುರು ಶಿಷ್ಯರು ಚಿತ್ರದ ನಂತರ ನಾನು ಹಾಗೂ ಜಡೇಶ್ ಅವರು ಸೇರಿ ಈ ಚಿತ್ರದ ಕಥೆ ಬರೆದಿದ್ದೆವು. ದರ್ಶನ್ ಅವರಿಗಾಗಿಯೇ ಬರೆದ ಕಥೆಯಿದು ಎಂದು ಮಾತು ಆರಂಭಿಸಿದ ನಿರ್ದೇಶಕ ತರುಣ್ ಸುಧೀರ್,  ಆನಂತರ ದರ್ಶನ್ ಅವರು ರಾಕ್ ಲೈನ್ ವೆಂಕಟೇಶ್ ಅವರಿಗೆ ಈ ಕಥೆ ಹೇಳಿ ಎಂದರು. ರಾಕ್ ಲೈನ್ ಸರ್ ಕಥೆ ಮೆಚ್ಚಿಕೊಂಡು ಚಿತ್ರವನ್ನು ಪ್ರಾರಂಭಿಸಿದರು. ಹಿರಿಯ ನಟಿ ಮಾಲಾಶ್ರೀ ಅವರ ಮಗಳು ಆರಾಧನಾ ಈ ಚಿತ್ರದ ನಾಯಕಿ ಎಂದು ನಿರ್ಮಾಪಕರು, ದರ್ಶನ್ ಅವರು ಹಾಗೂ ನಾನು ಸೇರಿ ಆಯ್ಕೆ ಮಾಡಿದ್ದೆವು. ಆರಾಧನಾ ಅದ್ಭುತ ನಟಿ. ಬಹುತೇಕ ಎಲ್ಲಾ ಸನ್ನಿವೇಶಗಳನ್ನು ಒಂದೇ ಟೇಕ್ ನಲ್ಲಿ ಮುಗಿಸಿದ್ದಾರೆ. ಈ ಚಿತ್ರ 1970ರ ಕಾಲಘಟ್ಟದಲ್ಲಿ ನಡೆಯುವ ಕಥೆಯಾಗಿದ್ದು , ಕನಕಪುರ ರಸ್ತೆಯಲ್ಲಿ ಅದ್ದೂರಿ ಹಳ್ಳಿ ಸೆಟ್ ಹಾಕಲಾಗಿದೆ‌. ನೂರು ದಿನಗಳ ಚಿತ್ರೀಕರಣ ಪೂರ್ಣವಾಗಿದೆ. ಹಾಡುಗಳ ಚಿತ್ರೀಕರಣ ಮಾತ್ರ ಬಾಕಿಯಿದೆ ಎಂದರು.

    ನೂರು ದಿನಗಳ ಚಿತ್ರೀಕರಣದಲ್ಲಿ ನಾನು, ಎಪ್ಪತ್ತೊಂದು ದಿನಗಳ ಕಾಲ ಚಿತ್ರೀಕರಣದಲ್ಲಿ ಭಾಗಿಯಾಗಿದ್ದೇನೆ. ರಾಕ್ ಲೈನ್ ವೆಂಕಟೇಶ್ ಅವರು ಅದ್ದೂರಿಯಾಗಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ‌. ತರುಣ್ ಹಾಗೂ ಜಡೇಶ್ ಒಳ್ಳೆಯ ಕಥೆ ಮಾಡಿಕೊಂಡಿದ್ದಾರೆ.   ಈ ಚಿತ್ರದಲ್ಲಿ ಮಾಲಾಶ್ರೀ ಅವರ ಮಗಳು ಆರಾಧನಾ  ನಾಯಕಿಯಾಗಿ ನಟಿಸಿದ್ದಾರೆ. ಎಂತಹ ಸನ್ನಿವೇಶಗಳನ್ನು ಒಂದೇ ಟೇಕ್ ನಲ್ಲಿ ಅಭಿನಯಿಸುವ ಕಲಾವಿದೆ ಅವರು. ಹಿರಿಯ ನಟರಾದ ಅವಿನಾಶ್, ಜಗಪತಿ ಬಾಬು, ವಿನೋದ್ ಆಳ್ವ, ಕುಮಾರ್ ಗೋವಿಂದ್ ಅವರ ಜೊತೆ ನಟಿಸಿದ್ದು ಖುಷಿಯಾಗಿದೆ. ಸುಧಾಕರ್ ಅವರ ಛಾಯಾಗ್ರಹಣ ಅದ್ಭುತವಾಗಿದ್ದು, ಈ ಚಿತ್ರದ ಛಾಯಾಗ್ರಹಣಕ್ಕಾಗಿ ಅವರಿಗೆ ಪ್ರಶಸ್ತಿ ಬರಬಹುದು ಎಂಬುದು ನನ್ನ ಅನಿಸಿಕೆ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ತಿಳಿಸಿದರು‌.

    ಇದು ನನ್ನ ಮೊದಲ ಚಿತ್ರ. ಪಾತ್ರ ಚೆನ್ನಾಗಿದೆ. ಅವಕಾಶ ನೀಡಿದ ರಾಕ್ ಲೈನ್ ವೆಂಕಟೇಶ್, ತರುಣ್ ಸುಧೀರ್ ಹಾಗೂ ದರ್ಶನ್ ಅವರಿಗೆ ನನ್ನ ಧನ್ಯವಾದ ಎನ್ನುತ್ತಾರೆ ನಾಯಕಿ ಆರಾಧನಾ. ಹಿರಿಯ ನಟರಾದ ಅವಿನಾಶ್, ಕುಮಾರ್ ಗೋವಿಂದ್, ವಿನೋದ್ ಆಳ್ವಾ, ಛಾಯಾಗ್ರಾಹಕ ಸುಧಾಕರ್, ತರುಣ್ ಸುಧೀರ್ ಅವರೊಂದಿಗೆ ಕಥೆ, ಚಿತ್ರಕಥೆ ಬರೆದಿರುವ ಜಡೇಶ್, ಸಂಭಾಷಣೆ ಬರೆದಿರುವ ಮಾಸ್ತಿ ಮುಂತಾದವರು ಚಿತ್ರದ ಕುರಿತು ಮಾತನಾಡಿದರು. ಹಿರಿಯ ನಟಿ ಮಾಲಾಶ್ರೀ ಚಿತ್ರತಂಡಕ್ಕೆ ಶುಭ ಕೋರಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹೆಸರು ಬದಲಿಸಿಕೊಂಡ ನಟಿ ಮಾಲಾಶ್ರೀ ಪುತ್ರಿ

    ಹೆಸರು ಬದಲಿಸಿಕೊಂಡ ನಟಿ ಮಾಲಾಶ್ರೀ ಪುತ್ರಿ

    ನಸಿನ ರಾಣಿ ಮಾಲಾಶ್ರೀ (Malashree), ನಿರ್ಮಾಪಕ ರಾಮು (Ramu)ಪುತ್ರಿ ರಾಧನಾ ರಾಮ್ ಈಗ ತಮ್ಮ ಹೆಸರನ್ನು ಆರಾಧನಾ (Aradhanaa)  ಎಂದು ಬದಲಿಸಿಕೊಂಡಿದ್ದಾರೆ. ಈ ಕುರಿತು ಮಾತನಾಡಿದ ಮಾಲಾಶ್ರೀ ‘ನಾನು, ರಾಕ್ ಲೈನ್ ವೆಂಕಟೇಶ್ ಹಾಗೂ ತರುಣ್ ಸುಧೀರ್ ಮೂರು ಜನ ಚರ್ಚಿಸಿ ಆರಾಧನಾ ಎಂಬ ಹೆಸರನ್ನು (Name) ಆಯ್ಕೆ ಮಾಡಿದ್ದೇವೆ. ಈ ಹೆಸರು ಬರೀ ‘ಕಾಟೇರ’ ಚಿತ್ರಕ್ಕೆ ಮಾತ್ರವಲ್ಲ. ಇನ್ನು ಮುಂದೆ ನನ್ನ ಮಗಳ ಹೆಸರೆ ಆರಾಧನಾ.  ಮುಂದಿನ ಚಿತ್ರಗಳಲ್ಲೂ ಆರಾಧನಾ ಎಂಬ ಹೆಸರಿನಿಂದಲೇ ಅಭಿನಯಿಸಿಲಿದ್ದಾರೆ. ತಾವೆಲ್ಲರೂ ಮುಂದೆ ಆರಾಧನಾ ಹೆಸರನ್ನೇ ಬಳಸಿಕೊಳ್ಳಬೇಕೆಂದು’ ಮಾಲಾಶ್ರೀ ವಿನಂತಿಸಿದ್ದಾರೆ.

    ಈಗಾಗಲೇ ಆರಾಧನಾ ರಾಮ್ ಚಿತ್ರರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ. ಬಹುಭಾಷಾ ನಟಿಯಾಗಿ ಸಾಕಷ್ಟು ಸಿನಿಮಾಗಳಲ್ಲಿ ನಾಯಕಿಯಾಗಿ ಮಿಂಚಿದ್ದ ಲೇಡಿ ಸೂಪರ್ ಸ್ಟಾರ್ ಮಾಲಾಶ್ರೀ ಪುತ್ರಿ ಆರಾಧನಾ ರಾಮ್ ಕೂಡ ಬಣ್ಣದ ಲೋಕಕ್ಕೆ ಎಂಟ್ರಿ ಕೊಡ್ತಿದ್ದಾರೆ. ಇದನ್ನೂ ಓದಿ:ಚಿಕಿತ್ಸೆಗಾಗಿ ಮತ್ತೆ ಅಮೆರಿಕಾಗೆ ಹಾರಿದ್ರಾ ನಟಿ- ಏನಾಯ್ತು ಸಮಂತಾಗೆ?

    ಕನ್ನಡ ಚಿತ್ರರಂಗಕ್ಕೆ ನಿರ್ಮಾಪಕ ರಾಮು ಅವರ ಸಾಧನೆ ಕೊಡುಗೆ ಅಪಾರ. ಮಾಲಾಶ್ರೀ ಮತ್ತು ರಾಮು ದಂಪತಿ ಸಾಕಷ್ಟು ವರ್ಷಗಳಿಂದ ಕಲಾಸೇವೆ ಮಾಡುತ್ತಲ್ಲೇ ಬಂದವರು. ಇದೀಗ ಈ ಕುಟುಂಬದಿಂದ ಜ್ಯೂ.ಮಾಲಾಶ್ರೀ ಆರಾಧನಾ ರಾಮ್ ಕೂಡ ಚಿತ್ರರಂಗದಲ್ಲಿ ಮಿಂಚಲು ಸಕಲ ತಯಾರಿ ಮಾಡಿಕೊಂಡು ಬಂದಿದ್ದಾರೆ.

     

    ರಾಕ್‌ಲೈನ್ ವೆಂಕಟೇಶ್ ನಿರ್ಮಾಣದ ಮತ್ತು ತರುಣ್ ಕಿಶೋರ್ ಸುಧೀರ್ ನಿರ್ದೇಶನದ ಬಿಗ್ ಬಜೆಜ್ ಸಿನಿಮಾದಲ್ಲಿ ರಾಧನಾ ರಾಮ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಸದ್ಯ ಚಿತ್ರದ ರಾಧನಾ ಲುಕ್ ಕೂಡ ರಿವೀಲ್ ಆಗಿದ್ದು, ನಟಿಯ ಲುಕ್ ಅಭಿಮಾನಿಗಳ ಗಮನ ಸೆಳೆಯುತ್ತಿದೆ. ತಮ್ಮ ಮೊದಲ ಚಿತ್ರದಲ್ಲಿಯೇ ಪವರ್‌ಫುಲ್ ಪಾತ್ರದಲ್ಲಿ ಕಾಣಿಸಿಕೊಳ್ತಿದ್ದಾರೆ. ತಾಯಿ ಮಾಲಾಶ್ರೀ ಅಂತೆಯೇ ನಾಯಕಿಯಾಗಿ ಮಿಂಚಲಿ ಎಂಬುದೇ ಅಭಿಮಾನಿಗಳ ಆಶಯ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಣ್ಣಿನ ಕಥೆ ಹೇಳುವ ‘ಕಾಟೇರ’: ಚಿತ್ರತಂಡದಿಂದ ಹೊಸ ಅಪ್ ಡೇಟ್

    ಮಣ್ಣಿನ ಕಥೆ ಹೇಳುವ ‘ಕಾಟೇರ’: ಚಿತ್ರತಂಡದಿಂದ ಹೊಸ ಅಪ್ ಡೇಟ್

    ಹೊಸ ಹೊಸ ಪ್ರಯೋಗಾತ್ಮಕ ಚಿತ್ರಗಳಿಂದ ವಿಶ್ವದಾದ್ಯಂತ ಬೆರಗು ಮೂಡಿಸಿರುವ ಸ್ಯಾಂಡಲ್‌ವುಡ್‌ ನಿಂದ ಮತ್ತೊಂದು ಹೊಸ ಪ್ರಯೋಗವೇ ಕಾಟೇರ (Katera). 70-80 ರ ದಶಕದ ಕಲ್ಪನೆ. 1973ರಲ್ಲಿ ಬಂದ ಅದೊಂದು ಕಾಯಿದೆಯ ಪರಿಣಾಮಗಳು. ಹಿಂದೇನಾಗಿತ್ತು, ಮುಂದೇನಾಯ್ತು ಅನ್ನೋದ್ರ ಸೂಕ್ಷ್ಮ ಕಥೆಯೇ ಕಾಟೇರ.

    ಇದರ ಸೃಷ್ಟಿಕರ್ತರು ತರುಣ್ ಸುಧೀರ್ (Tarun Sudhir). ರಾಕ್‌ಲೈನ್ ವೆಂಕಟೇಶ್ (Rock Line Venkatesh) ಅದ್ಧೂರಿ ನಿರ್ಮಾಣದಲ್ಲಿ ತಯಾರಾಗುತ್ತಿರುವ ಚಿತ್ರ. ದರ್ಶನ್ (Darshan) ಅಭಿನಯದ 56ನೇ ಸಿನಿಮಾ ಕೂಡ ಇದಾಗಿದೆ. ದರ್ಶನ್ ಕಾಟೇರನಾಗಿ ಬರುತ್ತಿದ್ದಾರೆ. ಒಂದೇ ಒಂದು ಲುಕ್‌ನಲ್ಲೇ ಮಾಸ್ ಪ್ರೇಕ್ಷಕರ ಗಮನ ಸೆಳೆದಿದ್ದಾರೆ. ಹಿಂದಿನ 55 ಸಿನಿಮಾಗಳಲ್ಲಿ ದರ್ಶನ್ ಕಾಣಿಸ್ಕೊಂಡಿದ್ದೇ ಬೇರೆ. ಇದುವೇ ಬೇರೆ. ಔಟ್ ಆ್ಯಂಡ್ ಔಟ್ ಹಳ್ಳಿ ಬ್ಯಾಕ್‌ಡ್ರಾಪ್.

    ಕಂಪ್ಲೀಟ್ ಮಾಸ್ ಎಲಿಮೆಂಟ್ಸ್ ಒಳಗೊಂಡಿರೋ ಕಾಟೇರ ಚಿತ್ರ ಶೇಕಡಾ 90ರಷ್ಟು ಶೂಟಿಂಗ್ ಮುಕ್ತಾಯವಾಗಿದೆ. ಹಾಡುಗಳ ಚಿತ್ರೀಕರಣ-ಒಂದಷ್ಟು ಫೈಟ್ ಸೀನ್ ಬಾಕಿ ಇದೆ. ಇದೇ ವರ್ಷ ಸಿನಿಮಾವನ್ನ ತೆರೆಗೆ ತರುವ ಪ್ಲ್ಯಾನ್ ತಂಡದ್ದು. ಇದನ್ನೂ ಓದಿ:Singham 3: ಅಜಯ್ ದೇವಗನ್ ಸಹೋದರಿಯಾಗಿ ನಟಿಸಲಿದ್ದಾರೆ ದೀಪಿಕಾ ಪಡುಕೋಣೆ

    40 ವರ್ಷದ ಹಿಂದಿನ ಕಥೆಯಾಗಿರೋದ್ರಿಂದ ಇಡೀ ಚಿತ್ರವನ್ನ ಕನಕಪುರದ ಬಳಿ ದೊಡ್ಡ ಸೆಟ್ ಹಾಕಿ ಚಿತ್ರೀಕರಿಸಲಾಗಿದೆ. ಮೈಸೂರು ಹಾಗೂ ಹೈದ್ರಾಬಾದ್‌ನಲ್ಲಿ ಸೆಟ್ ಹಾಕಿ ಆ್ಯಕ್ಷನ್ ಹಾಗೂ ಟಾಕಿ ದೃಶ್ಯಗಳನ್ನ ಸೆರೆ ಹಿಡಿಯಲಾಗಿದೆ. `ರಾಬರ್ಟ್’ ಚಿತ್ರದ ಬ್ಲಾಕ್‌ಬಸ್ಟರ್ ಹಿಟ್ ಬಳಿಕ ತರುಣ್ ಸುಧೀರ್-ದರ್ಶನ್ ಕಾಂಬೋ ಸಿನಿಮಾ ಇದಾಗಿರೋದ್ರಿಂದ ನಿರೀಕ್ಷೆಯಂತೂ ದುಪ್ಪಟ್ಟು.

    ದರ್ಶನ್ ಜೊತೆ ನಾಯಕಿಯಾಗಿ ಮಾಲಾಶ್ರೀ ಮಗಳು ರಾಧನಾ ರಾಮ್ (Radhana Ram) ಚೊಚ್ಚಲ ಎಂಟ್ರಿ ಚಿತ್ರ ಇದಾಗಿದೆ. ರಾಕ್‌ಲೈನ್ ವೆಂಕಟೇಶ್ ನಿರ್ಮಾಣದಲ್ಲಿ ತಯಾರಾಗ್ತಿರೋ ಬಿಗ್ ಬಜೆಟ್ ಚಿತ್ರ. ಕನ್ನಡ ಸಿನಿಮಾ ಇಂಡಸ್ಟ್ರಿಗೆ ಹೊಸ ಕಥೆ, ನಯಾ ನೋಟ. ಒಟ್ನಲ್ಲಿ ಸೆಟ್ಟೇರಿದಾಗಿಂದಲೂ ನಿರೀಕ್ಷೆ ಹುಟ್ಟಿಸಿದ `ಕಾಟೇರ’ ಸೈಲೆಂಟ್ ಆಗಿ ಚಿತ್ರೀಕರಣ ಮುಗಿಸುವ ಹಂತದಲ್ಲಿದೆ. ಸಮಯ ಕೂಡಿ ಬಂದರೆ ಶೀಘ್ರದಲ್ಲೇ ರಿಲೀಸ್ ಡೇಟ್ ಅನೌನ್ಸ್ ಆಗಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]