Tag: Kathua

  • ಜಮ್ಮು ಕಾಶ್ಮೀರ | ಕಥುವಾದಲ್ಲಿ ಮೇಘಸ್ಫೋಟದಿಂದ ಹಠಾತ್‌ ಪ್ರವಾಹ – ನಾಲ್ವರು ಸಾವು

    ಜಮ್ಮು ಕಾಶ್ಮೀರ | ಕಥುವಾದಲ್ಲಿ ಮೇಘಸ್ಫೋಟದಿಂದ ಹಠಾತ್‌ ಪ್ರವಾಹ – ನಾಲ್ವರು ಸಾವು

    – ರೈಲು ಹಳಿ, ಹೆದ್ದಾರಿಗಳಿಗೆ ಭಾರೀ ಹಾನಿ
    – 4 ದಿನಗಳ ಅಂತರದಲ್ಲಿ 2 ಬಾರಿ ಮೇಘಸ್ಫೋಟ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಕಥುವಾ ಜಿಲ್ಲೆಯ ಜಂಗ್ಲೋಟ್‌ ಹಳ್ಳಿಯಲ್ಲಿ ಮೇಘಸ್ಫೋಟದಿಂದ (Kathua Cloudburst) ಉಂಟಾದ ಹಠಾತ್‌ ಪ್ರವಾಹದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಜಮ್ಮು ಕಾಶ್ಮೀರದ (Jammu Kashmir) ಕಿಶ್ತ್ವಾರ ಜಿಲ್ಲೆಯ ಚಶೋತಿಯಲ್ಲಿ ಉಂಟಾದ ಮೇಘಸ್ಫೋಟದಿಂದ ಜನ ಈಗಷ್ಟೇ ಚೇತರಿಸಿಕೊಳ್ಳುತ್ತಿದ್ದಾರೆ. ಚಶೋತಿ ಗ್ರಾಮದಲ್ಲಿ ನಾಲ್ಕು ದಿನಗಳ ಹಿಂದೆ ಉಂಟಾದ ಮೇಘಸ್ಫೋಟದಿಂದ 60 ಮಂದಿ ಸಾವನ್ನಪ್ಪಿದ್ದು 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸದ್ಯ ನಾಪತ್ತೆಯಾದವರಿಗಾಗಿ ಕಳೆದ ನಾಲ್ಕು ದಿನಗಳಿಂದಲೂ ಇಲ್ಲಿ ಶೋಧಕಾರ್ಯ ನಡೆಯುತ್ತಿದೆ. ಈ ಹೊತ್ತಿನಲ್ಲೇ ಕಥುವಾದಲ್ಲೂ ಪ್ರವಾಹ (Kathua Flood) ಸಂಭವಿಸಿದೆ. ಇದನ್ನೂ ಓದಿ: ಮಂಗಳೂರು-ಬೆಂಗಳೂರು ರೈಲು ಸಂಚಾರ ಮಾರ್ಗದಲ್ಲಿ ಗುಡ್ಡ ಕುಸಿತ – ರಾತ್ರಿಯಿಡೀ ತೆರವು ಕಾರ್ಯ

    ಈ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರದ ಸಂಸದ ಹಾಗೂ ಕೇಂದ್ರ ಸಚಿವ ಜಿತೇಂದ್ರ ಸಿಂಗ್ (Jitendra Singh) ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಬಳಿಕ ಮೇಘಸ್ಫೋಟದಿಂದ ರೈಲ್ವೆ ಹಳಿ, ರಾಷ್ಟ್ರೀಯ ಹೆದ್ದಾರಿ -44 ಮತ್ತು ಪೊಲೀಸ್ ಠಾಣೆಗೆ ಹಾನಿಯಾಗಿದೆ. ನಾಗರಿಕ ಆಡಳಿತ, ಮಿಲಿಟರಿ ಮತ್ತು ಅರೆಸೇನಾ ಪಡೆಗಳು ಕಾರ್ಯಪ್ರವೃತ್ತವಾಗಿವೆ. ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ಎಕ್ಸ್‌ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ರಷ್ಯಾ-ಉಕ್ರೇನ್‌ ಯುದ್ಧ ನಿಲ್ಲಿಸಲು ಮುಂದಾದ ಟ್ರಂಪ್‌ಗೆ ಯುರೋಪಿಯನ್ ಒಕ್ಕೂಟ ಬೆಂಬಲ – ನಾಳೆಯ ಸಭೆ ಮೇಲೆ ನಿಗಾ

    ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಸಹ ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. ಈ ಬೆನ್ನಲ್ಲೇ ಭಾರತೀಯ ಹವಾಮಾನ ಇಲಾಖೆ ಮೇಘಸ್ಫೋಟ ಸಂಭವಿಸಿದ ಪ್ರದೇಶದಲ್ಲಿ ಇನ್ನೂ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: ದರ್ಶನ ಪರ ಅಖಾಡಕ್ಕಿಳಿದ ಪತ್ನಿ ವಿಜಯಲಕ್ಷ್ಮಿ – ಅಭಿಮಾನಿಗಳಿಗೆ ಕೊಟ್ಟ ಸಂದೇಶ ಏನು?

  • ಜಮ್ಮು ಕಾಶ್ಮೀರದ ಕಥುವಾದಲ್ಲಿ ಮನೆಗೆ ಬೆಂಕಿ – ಮಾಜಿ ಡಿಎಸ್‌ಪಿ ಸೇರಿ 6 ಮಂದಿ ಸಾವು

    ಜಮ್ಮು ಕಾಶ್ಮೀರದ ಕಥುವಾದಲ್ಲಿ ಮನೆಗೆ ಬೆಂಕಿ – ಮಾಜಿ ಡಿಎಸ್‌ಪಿ ಸೇರಿ 6 ಮಂದಿ ಸಾವು

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಕಥುವಾದಲ್ಲಿ (Kathua) ಮನೆಗೆ ಬೆಂಕಿ ತಗುಲಿದ ಪರಿಣಾಮ ಮಾಜಿ ಡಿಎಸ್ಪಿ ಸೇರಿದಂತೆ ಒಟ್ಟು 6 ಮಂದಿ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ.

    ಮೃತರನ್ನು ಡಿಎಸ್‌ಪಿ ಅವತಾರ್ ಕೃಷ್ಣ ರೈನಾ (81), ಮಗಳು ಬರ್ಖಾ ರೈನಾ (25), ಮಗ ತಕಾಶ್ (3), ಗಂಗಾ ಭಗತ್ (17), ಡ್ಯಾನಿಶ್ ಭಗತ್ (15) ಮತ್ತು ಅದ್ವಿಕ್ (6) ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಹಾಲಿನ ಪ್ರೊತ್ಸಾಹ ಧನ ಸದ್ಯಕ್ಕೆ ಹೆಚ್ಚಳ ಇಲ್ಲ: ವೆಂಕಟೇಶ್‌

    ಬುಧವಾರ ನಸುಕಿನ ಜಾವ 2:30ರ ಸುಮಾರಿಗೆ ಘಟನೆ ಸಂಭವಿಸಿದ್ದು, ಬೆಂಕಿ ಹೊತ್ತಿಕೊಂಡಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮನೆಯೊಳಗೆ ದಟ್ಟ ಹೊಗೆ ಆವರಿಸಿದ ಪರಿಣಾಮ ಮಲಗಿದ್ದವರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಈ ವೇಳೆ ಇಬ್ಬರು ಅಪ್ರಾಪ್ತರು ಸೇರಿದಂತೆ ಒಟ್ಟು ಆರು ಜನ ಸಾವನ್ನಪ್ಪಿದ್ದಾರೆ. ಸದ್ಯ 4 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಪ್ರಾಥಾಮಿಕ ತನಿಖೆಯ ಪ್ರಕಾರ, ಉಸಿರಾಟದ ಸಮಸ್ಯೆಯಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಬೆಂಕಿ ಹೊತ್ತಿಕೊಳ್ಳಲು ನಿಖರವಾದ ಕಾರಣವನ್ನು ಕಂಡುಹಿಡಿಯಲು ತನಿಖೆ ನಡೆಸುತ್ತಿದ್ದಾರೆ.ಇದನ್ನೂ ಓದಿ:ವಕ್ಫ್ ವಿಚಾರದಲ್ಲಿ ರಕ್ಷಿಸಲು ಕಾಂಗ್ರೆಸ್ ನಾಯಕರು ವಿಜಯೇಂದ್ರ ಸಂಬಂಧಿಗಳೇ?: ಎಂಪಿ ರೇಣುಕಾಚಾರ್ಯ

  • ಭಾಷಣ ಮಾಡುತ್ತಲೇ ಮಲ್ಲಿಕಾರ್ಜುನ ಖರ್ಗೆ ಅಸ್ವಸ್ಥ – ಕರೆ ಮಾಡಿ ಆರೋಗ್ಯ ವಿಚಾರಿಸಿದ ಮೋದಿ!

    ಭಾಷಣ ಮಾಡುತ್ತಲೇ ಮಲ್ಲಿಕಾರ್ಜುನ ಖರ್ಗೆ ಅಸ್ವಸ್ಥ – ಕರೆ ಮಾಡಿ ಆರೋಗ್ಯ ವಿಚಾರಿಸಿದ ಮೋದಿ!

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಕಥುವಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇದ್ದಕ್ಕಿದ್ದಂತೆ ಅಸ್ವಸ್ಥರಾಗಿದ್ದರು. ವಿಷಯ ತಿಳಿಯುತ್ತಿದ್ದಂತೆ ಪ್ರಧಾನಿ ಮೋದಿ, ಖರ್ಗೆ ಅವರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ದೂರ ವಾಣಿ ಕರೆ ಮಾಡಿ ಮೋದಿ (PM Modi) ಆರೋಗ್ಯ ವಿಚಾರಿಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

    ಮೋದಿ ವಿರುದ್ಧ ಗುಡುಗಿದ್ದ ಕೈನಾಯಕ:
    ಜಮ್ಮು ಮತ್ತು ಕಾಶ್ಮೀರದ ಅಂತಿಮ ಹಂತದ ಚುನಾವಣಾ ಪ್ರಚಾರ (Jammu and Kashmir public rally ಸಭೆಯಲ್ಲಿ ಭಾನುವಾರ ಮಾತನಾಡುವ ಖರ್ಗೆ ಅವರು ಅಸ್ವಸ್ಥರಾದರು. ತಕ್ಷಣ ಸುತ್ತುವರಿದ ಪಕ್ಷದ ಮುಖಂಡರು ಅವರನ್ನು ಕುರ್ಚಯಲ್ಲಿ ಕೂರಿಸಿದರು. ಕೆಲ ನಿಮಿಷಗಳ ನಂತರ, ಮತ್ತೆ ವೇದಿಕೆಗೆ ಬಂದ ಖರ್ಗೆ (Mallikarjun Kharge) ಅವರು ಮೋದಿ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ್ದರು.

    ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕ ರಾಜ್ಯ ಸ್ಥಾನಮಾನ ಮರುಸ್ಥಾಪಿಸಲು ಹೋರಾಟ ಮಾಡುತ್ತೇವೆ. ನನಗೆ ಈಗ 83 ವರ್ಷ, ನಾನು ಅಷ್ಟು ಬೇಗ ಸಾಯುವುದಿಲ್ಲ. ಪ್ರಧಾನಿ ಮೋದಿ ಅವರನ್ನ ಅಧಿಕಾರದಿಂದ ಕೆಳಗಿಳಿಸುವವರೆಗೂ ನಾನು ಜೀವಂತವಾಗಿರುತ್ತೇನೆ ಎಂದು ಗುಡುಗಿದ್ದರು.

    ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಮನಸ್ಸು ಮಾಡಿದ್ದರೆ ಒಂದೆರಡು ವರ್ಷಗಳ ಹಿಂದೆಯೇ ಚುನಾವಣೆ ಮಾಡಬಹುದಿತ್ತು. ಆದ್ರೆ ಬಿಜೆಪಿಗರು ಎಂದಿಗೂ ಚುನಾವಣೆ ನಡೆಸಲು ಬಯಸುವುದಿಲ್ಲ. ಸುಪ್ರೀಂ ಕೋರ್ಟ್ ಆದೇಶದ ನಂತರ ಅವರು ಚುನಾವಣೆಗೆ ತಯಾರಿ ಆರಂಭಿಸಿದರು. ಬಿಜೆಪಿಗರು ರಾಜ್ಯಪಾಲರದ ಮೂಲಕ ರಿಮೋಟ್-ನಿಯಂತ್ರಿತ ಸರ್ಕಾರವನ್ನು ನಡೆಸಲು ಬಯಸಿದ್ದರು. ಪ್ರಧಾನಿ ಮೋದಿ ಕಳೆದ 10 ವರ್ಷಗಳಲ್ಲಿ ಭಾರತದ ಯುವಕರಿಗೆ ಏನನ್ನೂ ನೀಡಿಲ್ಲ. 10 ವರ್ಷಗಳಲ್ಲಿ ನಿಮ್ಮ ಸಮೃದ್ಧಿಯನ್ನು ಮರಳಿ ತರಲು ಸಾಧ್ಯವಾಗದ ವ್ಯಕ್ತಿಯನ್ನು ನೀವು ನಂಬಬಹುದೇ? ಯಾವುದೇ ಬಿಜೆಪಿ ನಾಯಕರು ನಿಮ್ಮ ಮುಂದೆ ಬಂದರೆ, ಅವರು ಪ್ರಗತಿ ತಂದಿದ್ದಾರೋ ಇಲ್ಲವೋ ಕೇಳಿ ಎಂದು ಕರೆ ನೀಡಿದ್ದರು.

  • ಭಾಷಣ ಮಾಡುತ್ತಲೇ ಮಲ್ಲಿಕಾರ್ಜುನ ಖರ್ಗೆ ಅಸ್ವಸ್ಥ – ಮೋದಿಯನ್ನ ಅಧಿಕಾರದಿಂದ ಕೆಳಗಿಳಿಸುವವರೆಗೆ ಸಾಯಲ್ಲ ಎಂದ ʻಕೈʼನಾಯಕ

    ಭಾಷಣ ಮಾಡುತ್ತಲೇ ಮಲ್ಲಿಕಾರ್ಜುನ ಖರ್ಗೆ ಅಸ್ವಸ್ಥ – ಮೋದಿಯನ್ನ ಅಧಿಕಾರದಿಂದ ಕೆಳಗಿಳಿಸುವವರೆಗೆ ಸಾಯಲ್ಲ ಎಂದ ʻಕೈʼನಾಯಕ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಇದ್ದಕ್ಕಿದ್ದಂತೆ ಮಾತನಾಡುವಾಗ ಅಸ್ವಸ್ಥರಾಗಿದ್ದಾರೆ. ಕೆಲ ಸಮಯದ ಬಳಿಕ ಮತ್ತೆ ವೇದಿಕೆಗೆ ಬಂದ ಅವರು ಮೋದಿ ವಿರುದ್ಧ ಗುಡುಗಿದ್ದಾರೆ. ಜೊತೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ (Jammu and Kashmi) ಪ್ರತ್ಯೇಕ ರಾಜ್ಯ ಸ್ಥಾನಮಾನ ಮರುಸ್ಥಾಪಿಸುತ್ತೇವೆ ಎಂಬುದಾಗಿಯೂ ಭರವಸೆ ನೀಡಿದ್ದಾರೆ.

    ಜಮ್ಮು ಮತ್ತು ಕಾಶ್ಮೀರದ ಅಂತಿಮ ಹಂತದ ಚುನಾವಣಾ ಪ್ರಚಾರ (Assembly Elections Campain) ಸಭೆಯಲ್ಲಿ ಭಾನುವಾರ ಮಾತನಾಡುವ ಖರ್ಗೆ ಅವರು ಅಸ್ವಸ್ಥರಾದರು. ತಕ್ಷಣ ಸುತ್ತುವರಿದ ಪಕ್ಷದ ಮುಖಂಡರು ಅವರನ್ನು ಕುರ್ಚಯಲ್ಲಿ ಕೂರಿಸಿದರು. ಕೆಲ ನಿಮಿಷಗಳ ನಂತರ, ಮತ್ತೆ ವೇದಿಕೆಗೆ ಬಂದ ಖರ್ಗೆ ಅವರು ಮೋದಿ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಜಮ್ಮು-ಕಾಶ್ಮೀರ: ಕಥುವಾ ಎನ್‌ಕೌಂಟರ್‌ನಲ್ಲಿ ಓರ್ವ ಭಯೋತ್ಪಾದಕನ ಹತ್ಯೆ – ಉಗ್ರರಿಗಾಗಿ ಮುಂದುವರಿದ ಶೋಧ

    ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕ ರಾಜ್ಯ ಸ್ಥಾನಮಾನ ಮರುಸ್ಥಾಪಿಸಲು ಹೋರಾಟ ಮಾಡುತ್ತೇವೆ. ನನಗೆ ಈಗ 83 ವರ್ಷ, ನಾನು ಅಷ್ಟು ಬೇಗ ಸಾಯುವುದಿಲ್ಲ. ಪ್ರಧಾನಿ ಮೋದಿ ಅವರನ್ನ ಅಧಿಕಾರದಿಂದ ಕೆಳಗಿಳಿಸುವವರೆಗೂ ನಾನು ಜೀವಂತವಾಗಿರುತ್ತೇನೆ ಎಂದು ಗುಡುಗಿದ್ದಾರೆ.

    ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಮನಸ್ಸು ಮಾಡಿದ್ದರೆ ಒಂದೆರಡು ವರ್ಷಗಳ ಹಿಂದೆಯೇ ಚುನಾವಣೆ ಮಾಡಬಹುದಿತ್ತು. ಆದ್ರೆ ಬಿಜೆಪಿಗರು ಎಂದಿಗೂ ಚುನಾವಣೆ ನಡೆಸಲು ಬಯಸುವುದಿಲ್ಲ. ಸುಪ್ರೀಂ ಕೋರ್ಟ್ ಆದೇಶದ ನಂತರ ಅವರು ಚುನಾವಣೆಗೆ ತಯಾರಿ ಆರಂಭಿಸಿದರು ಎಂದಿದ್ದಾರೆ. ಇದನ್ನೂ ಓದಿ: BBK 11:ಹೊಸ ಸೀಸನ್, ಹೊಸ ಮನೆಗೆ 17 ಹೊಸ ಕಂಟೆಸ್ಟೆಂಟ್ಸ್- ಯಾರಿಗೆ ಸ್ವರ್ಗ, ನರಕ?

    ಬಿಜೆಪಿಗರು ರಾಜ್ಯಪಾಲರದ ಮೂಲಕ ರಿಮೋಟ್-ನಿಯಂತ್ರಿತ ಸರ್ಕಾರವನ್ನು ನಡೆಸಲು ಬಯಸಿದ್ದರು. ಪ್ರಧಾನಿ ಮೋದಿ ಕಳೆದ 10 ವರ್ಷಗಳಲ್ಲಿ ಭಾರತದ ಯುವಕರಿಗೆ ಏನನ್ನೂ ನೀಡಿಲ್ಲ. 10 ವರ್ಷಗಳಲ್ಲಿ ನಿಮ್ಮ ಸಮೃದ್ಧಿಯನ್ನು ಮರಳಿ ತರಲು ಸಾಧ್ಯವಾಗದ ವ್ಯಕ್ತಿಯನ್ನು ನೀವು ನಂಬಬಹುದೇ? ಯಾವುದೇ ಬಿಜೆಪಿ ನಾಯಕರು ನಿಮ್ಮ ಮುಂದೆ ಬಂದರೆ, ಅವರು ಪ್ರಗತಿ ತಂದಿದ್ದಾರೋ ಇಲ್ಲವೋ ಕೇಳಿ ಎಂದು ಕರೆ ನೀಡಿದ್ದಾರೆ. ಇದನ್ನೂ ಓದಿ: IPL Mega Auction | ಹಿಟ್‌ಮ್ಯಾನ್ ರೋಹಿತ್‌ ಇನ್‌ – ಡುಪ್ಲೆಸಿ ಔಟ್‌ – ಆರ್‌ಸಿಬಿಗೆ ಆನೆ ಬಲ

  • ಜಮ್ಮು-ಕಾಶ್ಮೀರದಲ್ಲಿ ಎನ್‌ಕೌಂಟರ್‌; ಸೇನಾ ದಾಳಿಗೆ ಇಬ್ಬರು ಉಗ್ರರು ಬಲಿ

    ಜಮ್ಮು-ಕಾಶ್ಮೀರದಲ್ಲಿ ಎನ್‌ಕೌಂಟರ್‌; ಸೇನಾ ದಾಳಿಗೆ ಇಬ್ಬರು ಉಗ್ರರು ಬಲಿ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu Kashmir) ಕಥುವಾ ಗ್ರಾಮವೊಂದರಲ್ಲಿ ನಿನ್ನೆ ತಡರಾತ್ರಿ ಗುಂಡಿನ ದಾಳಿ ನಡೆಸಿದ್ದ ಇಬ್ಬರು ಉಗ್ರರನ್ನು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಲಾಗಿದೆ. ಗುಂಡಿನ ಚಕಮಕಿಯಲ್ಲಿ ಅರೆಸೇನಾಪಡೆಯ ಯೋಧನೊಬ್ಬ ಕೂಡ ಸಾವನ್ನಪ್ಪಿದ್ದಾನೆ.

    ಜಮ್ಮುವಿನಲ್ಲಿ ರಾತ್ರೋರಾತ್ರಿ ಆರಂಭವಾದ ಎರಡು ಎನ್‌ಕೌಂಟರ್‌ಗಳು ಬೆಳಗಿನ ವರೆಗೂ ನಡೆದಿತ್ತು. ಸೇನಾ ಪೋಸ್ಟ್‌ನ ಮೇಲಿನ ದಾಳಿಯಿಂದಾಗಿ ಐವರು ಸೈನಿಕರು ಮತ್ತು ವಿಶೇಷ ಪೊಲೀಸ್ ಅಧಿಕಾರಿ (SPO) ಗಾಯಗೊಂಡಿದ್ದಾರೆ. ಇದನ್ನೂ ಓದಿ: ಜಮ್ಮು ಕಾಶ್ಮೀರದ ದೋಡಾದ ಸೇನಾ ಪೋಸ್ಟ್‌ ಮೇಲೆ ಉಗ್ರರ ದಾಳಿ

    ಜಮ್ಮುವಿನಲ್ಲಿ ಈ ಭಯೋತ್ಪಾದಕ ದಾಳಿಗೂ ಎರಡು ದಿನ ಮೊದಲು, ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್‌ವೊಂದು ರಿಯಾಸಿಯಲ್ಲಿ ದಾಳಿಗೆ ತುತ್ತಾಗಿತ್ತು. ಬಸ್‌ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ ಪರಿಣಾಮ ಬಸ್‌ ಕಮರಿಗೆ ಉರುಳಿ ಬಿದ್ದ ಪರಿಣಾಮ 9 ಪ್ರಯಾಣಿಕರು ಹತರಾಗಿದ್ದರು.

    ಕಥುವಾದಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸುತ್ತಿರುವ ಜಮ್ಮು ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆನಂದ್ ಜೈನ್ ಅವರು ಇಂದು ಬೆಳಗ್ಗೆ ಎನ್‌ಕೌಂಟರ್‌ಗಳ ಬಗ್ಗೆ ವಿವರ ಪಡೆದಿದ್ದಾರೆ. ಇದನ್ನೂ ಓದಿ: ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು, ಸಚಿವರಾಗಿ ಪವನ್‌ ಕಲ್ಯಾಣ್‌ ಪ್ರಮಾಣವಚನ ಸ್ವೀಕಾರ

    ಚಟರ್ಗಾಲಾ ಪ್ರದೇಶದ ಸೇನಾ ನೆಲೆಯಲ್ಲಿ ಪೊಲೀಸರು ಮತ್ತು ರಾಷ್ಟ್ರೀಯ ರೈಫಲ್ಸ್‌ ಜಂಟಿ ಕಾರ್ಯಾಚರಣೆ ನಡೆಸಿದ ವೇಳೆ ಭಯೋತ್ಪಾದಕರು ಗುಂಡು ಹಾರಿಸಿದ್ದರು. ಉನ್ನತ ಮಟ್ಟದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್‌ಕೌಂಟರ್‌ ನಡೆಯುತ್ತಿದೆ ಎಂದರು.

  • ಗಡಿ ನುಸುಳಲು ಉಗ್ರರ ಸ್ಕೆಚ್ – ಸೈನಿಕರ ಗುಂಡಿಗೆ ಓರ್ವ ಬಲಿ

    ಗಡಿ ನುಸುಳಲು ಉಗ್ರರ ಸ್ಕೆಚ್ – ಸೈನಿಕರ ಗುಂಡಿಗೆ ಓರ್ವ ಬಲಿ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಪೂಂಚ್ ಸೆಕ್ಟರ್‌ನ (Poonch sector) ಗಡಿ ನಿಯಂತ್ರಣ ರೇಖೆಯಲ್ಲಿ ಸೇನೆಯು ಭಾನುವಾರ ಮುಂಜಾನೆ ಭಯೋತ್ಪಾದಕನನ್ನು (Terrorist) ಹೊಡೆದುರುಳಿಸಿ ದೇಶದ ಒಳಗೆ ನುಸುಳುವ ಪ್ರಯತ್ನವನ್ನು ವಿಫಲಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಪೂಂಚ್ ಸೆಕ್ಟರ್‌ನ ಎಲ್‍ಒಸಿಯಲ್ಲಿ (LoC) ಗಸ್ತಿನಲ್ಲಿದ್ದ ಭಾರತೀಯ ಸೇನಾ ಪಡೆಗಳು ಅನುಮಾನಾಸ್ಪದ ವ್ಯಕ್ತಿಗಳ ಗುಂಪಿನ ಚಲನೆಯನ್ನು ಪತ್ತೆ ಹಚ್ಚಿದ್ದವು. ಗಡಿಯ ಸಮೀಪದಲ್ಲಿ ಸೇನಾ ಪಡೆಗಳು ಉಗ್ರರನ್ನು ತಡೆಹಿಡಿದ ನಂತರ ಪರಸ್ಪರ ಗುಂಡಿನ ದಾಳಿ ನಡೆದಿದೆ. ಕಾರ್ಯಾಚರಣೆಯಲ್ಲಿ ಒಬ್ಬ ಮೃತಪಟ್ಟು, ಉಳಿದ ಕೆಲವು ಉಗ್ರರು ಸಮೀಪದ ಅರಣ್ಯಕ್ಕೆ ಓಡಿಹೋಗಿದ್ದಾರೆ. ಈ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಶೋಧ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಜಮ್ಮು ಮೂಲದ ರಕ್ಷಣಾ ವಕ್ತಾರ ಲೆಫ್ಟಿನೆಂಟ್ ಕರ್ನಲ್ ದೇವೇಂದ್ರ ಆನಂದ್ ಹೇಳಿದ್ದಾರೆ. ಇದನ್ನೂ ಓದಿ: ಮೋದಿ ಕಾಡು ಪ್ರಾಣಿಗಳನ್ನು ನೋಡಿದರೆ ಜನ ವೋಟು ಒತ್ತುತ್ತಾರಾ: ಹೆಚ್ಡಿಕೆ ವ್ಯಂಗ್ಯ

    ಪಾಕಿಸ್ತಾನವು (Pakistan) ಜಮ್ಮು ಕಾಶ್ಮೀರ ಗಡಿಯಲ್ಲಿ ತನ್ನ ಭಯೋತ್ಪಾದಕ ಚಟುವಟಿಕೆಗಳನ್ನು ಪುನರಾರಂಭಿಸಿದೆ. ಏ.3 ರಂದು ಗಡಿ ಜಿಲ್ಲೆ ಸಾಂಬಾದ ವಿಜಯಪುರ್‌ನ ರಾಖ್ ಬರುತಿಯಾ (Rakh Barutia) ಗ್ರಾಮದಲ್ಲಿ ಪಾಕಿಸ್ತಾನದ ಡ್ರೋನ್‍ನಿಂದ ಬೀಳಿಸಲಾಗಿದೆ ಎಂದು ಶಂಕಿಸಲಾದ ಶಸ್ತ್ರಾಸ್ತ್ರ ಮತ್ತು ಮದ್ದು ಗುಂಡುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದರು.

    ವಶಕ್ಕೆ ಪಡೆದ ಪ್ಯಾಕೆಟ್‍ನಿಂದ ಚೀನಾ ನಿರ್ಮಿತ ಮೂರು ಪಿಸ್ತೂಲ್‍ಗಳು, ಆರು ಮ್ಯಾಗ್‍ಜೀನ್‍ಗಳು, 48 ಬುಲೆಟ್‍ಗಳು ಮತ್ತು ನಾಲ್ಕು ಚೈನ ನಿರ್ಮಿತ ಹ್ಯಾಂಡ್ ಗ್ರೆನೇಡ್‍ಗಳಿದ್ದವು. ಮಾ.31 ಮತ್ತು ಏ.1 ರ ಮಧ್ಯರಾತ್ರಿಯ ಸಮಯದಲ್ಲಿ, ಸಾಂಬಾ (Samba) ಜಿಲ್ಲೆಯ ರಾಮ್‍ಗಢ ಸೆಕ್ಟರ್‍ನ ಅಂತರಾಷ್ಟ್ರೀಯ ಗಡಿಯಲ್ಲಿ ಭದ್ರತಾ ಪಡೆ ಪಾಕಿಸ್ತಾನದ ಡ್ರೋನ್‍ನ ಮೇಲೆ ಗುಂಡು ಹಾರಿಸಿತ್ತು.

    ಮಾ.29 ರಂದು ರಾತ್ರಿ 9:30 ರ ಸುಮಾರಿಗೆ ಕಥುವಾ (Kathua) ಜಿಲ್ಲೆಯ ಹೀರಾನಗರ (Hiranagar) ಸೆಕ್ಟರ್‌ನ ಸನ್ಯಾಲ್‍ನ ಗಡಿಯ ಪೊಲೀಸ್ ಪೋಸ್ಟ್ ಬಳಿ ಪ್ರಬಲ ಸ್ಫೋಟ ಸಂಭವಿಸಿತ್ತು. ಹೀರಾನಗರ ಸೆಕ್ಟರ್‌ನಲ್ಲಿ ಗಡಿ ರೇಖೆಯಿಂದ ಕೇವಲ 4 ಕಿಮೀ ದೂರದಲ್ಲಿ ಸಂಭವಿಸಿದ ಸ್ಫೋಟವು ಗಡಿಯ ನಾಲ್ಕೈದು ಹಳ್ಳಿಗಳಿಗೆ ಕೇಳಿಸಿತ್ತು.

    ಕಣಿವೆಯ ಹಾದಿಗಳಲ್ಲಿ ಹಿಮ ಕರಗಲು ಪ್ರಾರಂಭಿಸಿದಾಗ, ರಜೌರಿ (Rajouri) ಮತ್ತು ಪೂಂಚ್‍ನಲ್ಲಿನ ಮಾರ್ಗಗಳಿಂದ ಭಯೋತ್ಪಾದಕರನ್ನು ಭಾರತಕ್ಕೆ ಪಾಕಿಸ್ತಾನ ಕಳುಹಿಸುತ್ತದೆ. ಪಾಕಿಸ್ತಾನದ ಕುತಂತ್ರವನ್ನು ಅರಿತಿರುವ ಸೈನಿಕರು ಈಗ ಗಡಿಯಲ್ಲಿ ಕಟ್ಟೆಚ್ಚರ ವಹಿಸಿದ್ದಾರೆ. ಇದನ್ನೂ ಓದಿ: ರಾಹುಲ್‌ಗೆ ಶಿಕ್ಷೆ ವಿಧಿಸಿದ ನ್ಯಾಯಾಧೀಶರ ನಾಲಿಗೆ ಕತ್ತರಿಸ್ತೀನಿ – ಬೆದರಿಕೆ ಹಾಕಿದ ಕಾಂಗ್ರೆಸ್ ನಾಯಕನ ವಿರುದ್ಧ ಪ್ರಕರಣ ದಾಖಲು

  • ಜಮ್ಮು ಕಾಶ್ಮೀರದಲ್ಲಿ ಭಾರೀ ಸ್ಫೋಟ- ಪೊಲೀಸರಿಂದ ಶೋಧ

    ಜಮ್ಮು ಕಾಶ್ಮೀರದಲ್ಲಿ ಭಾರೀ ಸ್ಫೋಟ- ಪೊಲೀಸರಿಂದ ಶೋಧ

    ಕಥುವಾ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಹೀರಾನಗರದಲ್ಲಿರುವ (Hiranagar) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ ಭಾರೀ ಸ್ಫೋಟ (Blast) ಸಂಭವಿಸಿದ್ದು, ಪೊಲೀಸರು ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ.

    ಕಥುವಾ (Kathua) ಜಿಲ್ಲೆಯ ಹೀರಾನಗರದಲ್ಲಿರುವ ಅಂತರಾಷ್ಟ್ರೀಯ ಗಡಿಯಲ್ಲಿ (IB) ಸಂಜೆಯ ವೇಳೆಗೆ ಬಿಪಿಪಿ ಸಾನ್ಯಾಲ್ ಬಳಿ ಸ್ಫೋಟದ ರೀತಿಯ ಭಯಾನಕ ಶಬ್ದ ಕೇಳಿಸಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ADGP) ಜಮ್ಮು ಮುಖೇಶ್ ಸಿಂಗ್ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ರಾಮ ಮಂದಿರದ ಹೊರಗೆ ಗಲಾಟೆ- ಉದ್ರಿಕ್ತರಿಂದ ಪೊಲೀಸ್ ವಾಹನಕ್ಕೆ ಬೆಂಕಿ

    ಸ್ಫೋಟದ ಬಗ್ಗೆ ಮಾಹಿತಿ ಪಡೆದ ನಂತರ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (SSP) ಕಥುವಾ ಶಿವದೀಪ್ ಸಿಂಗ್ ನೇತೃತ್ವದ ಪೊಲೀಸ್ ತಂಡವು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ಪ್ರಾರಂಭಿಸಿದೆ. ಇದನ್ನೂ ಓದಿ: ಕಳ್ಳನೆಂದು ಶಂಕಿಸಿ ಹತ್ಯೆ- ಇಬ್ಬರ ಬಂಧನ 

    ಈ ಸ್ಫೋಟದಿಂದ ಯಾವುದೇ ಗಾಯದ ವರದಿಯಾಗಿಲ್ಲ. ಪ್ರಾಥಮಿಕ ಶೋಧದ ವೇಳೆ ಯಾವುದೇ ಅನುಮಾನಾಸ್ಪದ ಒಳನುಗ್ಗುವಿಕೆ ಅಥವಾ ಚಲನವಲನಗಳು ಕಂಡುಬಂದಿಲ್ಲ. ವಿಧಿವಿಜ್ಞಾನ ತಂಡವು (Forensic team) ಸ್ಫೋಟವಾದ ಸ್ಥಳದಿಂದ ಮಾದರಿಗಳನ್ನು ಸಂಗ್ರಹಿಸಿರುವುದರಿಂದ ಗುರುವಾರ ಬೆಳಗ್ಗೆ ಹೆಚ್ಚಿನ ತನಿಖೆಯನ್ನು ಪ್ರಾರಂಭಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ನಿಮ್ಮ 60 ರೂ. ಸೀರೆ ಉಟ್ಟುಕೊಳ್ಳುವಷ್ಟು ನಿರ್ಗತಿಕರಲ್ಲ – ಶಾಮನೂರು ನೀಡಿದ ಸೀರೆಗಳಿಗೆ ಬೆಂಕಿಯಿಟ್ಟ ಮಹಿಳೆಯರು

    ಈ ಪ್ರಕರಣ ಸಾನ್ಯಾಲ್ ಗ್ರಾಮದಲ್ಲಿ ವಾಸಿಸುತ್ತಿರುವ ಜನರ ಮನದಲ್ಲಿ ಭಯದ ವಾತಾವರಣ ನಿರ್ಮಿಸಿದೆ. ಇದನ್ನೂ ಓದಿ: ಸ್ವಿಫ್ಟ್ ಕಾರು-ಸ್ಕೂಟಿ ಮುಖಾಮುಖಿ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು

  • ಭಾರತ ಸೇನೆಯ ಹೆಲಿಕಾಪ್ಟರ್ ಪತನ- ಓರ್ವ ಯೋಧ ಹುತಾತ್ಮ

    ಭಾರತ ಸೇನೆಯ ಹೆಲಿಕಾಪ್ಟರ್ ಪತನ- ಓರ್ವ ಯೋಧ ಹುತಾತ್ಮ

    ಶ್ರೀನಗರ: ಭಾರತೀಯ ಸೇನೆಗೆ ಸೇರಿದ ಹೆಲಿಕಾಪ್ಟರ್ ಒಂದು ಜಮ್ಮು, ಕಾಶ್ಮೀರದ ಕಥುವಾ ಜಿಲ್ಲೆಯ ಲಖನಪುರ ಎಂಬಲ್ಲಿ ಪತನಗೊಂಡು ಓರ್ವ ಯೋಧ ಹುತಾತ್ಮರಾಗಿದ್ದಾರೆ.

    ಎಚ್‍ರೆಲ್ ಧ್ರುವ್ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಕಂಡು ಬಂದ ತಾಂತ್ರಿಕ ದೋಷದಿಂದ ಪತನಗೊಂಡಿದೆ. ಹೆಲಿಕಾಪ್ಟರ್‍ ನಲ್ಲಿ ಇಬ್ಬರು ಪೈಲೆಟ್‍ಗಳಿದ್ದರು ಅದರಲ್ಲಿ ಓರ್ವ ಯೋಧ ಮೃತಪಟ್ಟು. ಇನ್ನೊಬ್ಬರಿಗೆ ಗಂಭೀರ ಗಾಯಗಳಾಗಿವೆ ಎಂದು ಹಿರಿಯ ಅಧಿಕಾರಿಯೊಬ್ಬರು ಸ್ಥಳೀಯ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಕಾಫಿ ವ್ಯಾಪಾರದಲ್ಲಿ ನಷ್ಟ – ಚಿಕ್ಕಮಗಳೂರು ಮೂಲದ ಉದ್ಯಮಿ ಆತ್ಮಹತ್ಯೆ

    ಪಠಾಣ್‍ಕೋಟ್‍ನಿಂದ ಬರುತ್ತಿದ್ದ ಹೆಲಿಕಾಪ್ಟರ್‍ ನ್ನು ಲಖನಪುರದಲ್ಲಿ ಲ್ಯಾಂಡಿಂಗ್ ವೇಳೆ ಈ ಘಟನೆ ಸಂಭವಿಸಿದೆ. ಕೂಡಲೇ ಇಬ್ಬರು ಪೈಲೆಟ್‍ಗಳನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರು. ಯೋಧರೊಬ್ಬರು ಮೃತಪಟ್ಟು, ಇನ್ನೊಬ್ಬರು ತೀವ್ರ ಗಾಯಗಳಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಕೆಲ ದಿನಗಳ ಹಿಂದೆ ಮಿಗ್ -21 ಬೈಸನ್ ಹೆಸರಿನ ಯುದ್ಧ ವಿಮಾನ ಶ್ರೀ ಗಂಗಾನಗರದ ಸುರತ್‍ಗ್ರಹ ವಾಯುನೆಲೆಯಲ್ಲಿ ಪತನಗೊಂಡಿತ್ತು. ಆದರೆ ಯಾವುದೇ ಪ್ರಾಣಹಾನಿ ಸಂಭವಿಸಿರಲಿಲ್ಲ.

  • ಕಥುವಾದಲ್ಲಿ 13ರ ಬಾಲೆಯನ್ನ ಅತ್ಯಾಚಾರಗೈದ 50 ವರ್ಷದ ವ್ಯಕ್ತಿ

    ಕಥುವಾದಲ್ಲಿ 13ರ ಬಾಲೆಯನ್ನ ಅತ್ಯಾಚಾರಗೈದ 50 ವರ್ಷದ ವ್ಯಕ್ತಿ

    ಶ್ರೀನಗರ: 50 ವರ್ಷದ ವ್ಯಕ್ತಿ 13 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಗೈದಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ನಡೆದಿದೆ.

    ಬಾಲಕಿಯ ಜಾನುವಾರಗಳನ್ನು ಮೇಯಿಸಲು ಅರಣ್ಯ ಪ್ರದೇಶಕ್ಕೆ ತೆರಳಿದಾಗ ಘಟನೆ ನಡೆದಿದೆ. 50 ವರ್ಷದ ಕಾಮುಕ ಸ್ಥಳೀಯ ರೈತ ಎಂದು ವರದಿಯಾಗಿದೆ. ಈ ಸಂಬಂಧ ರಾಜಭಾಗ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ವಶಕ್ಕೆ ಪಡೆದಿರೋ ಪೊಲೀಸರು ಆತನನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

    2018ರಲ್ಲಿ ಜಾನುವಾರುಗಳನ್ನು ಮೇಯಿಸಲು ಅರಣ್ಯ ಪ್ರದೇಶಕ್ಕೆ ತೆರಳಿದ್ದ ಬಾಲಕಿಯನ್ನು ಅತ್ಯಾಚಾರಗೈದು ಕೊಲೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಪರಾಧಿಗಳಿಹೆ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತೆ ಮೂವರಿಗೆ ಐದು ವರ್ಷ ಜೈಲು ಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ.

  • ಕಥುವಾ ಪ್ರಕರಣ: ಮೂವರಿಗೆ ಜೀವಾವಧಿ ಶಿಕ್ಷೆ

    ಕಥುವಾ ಪ್ರಕರಣ: ಮೂವರಿಗೆ ಜೀವಾವಧಿ ಶಿಕ್ಷೆ

    – ಆರೋಪಿಗೆ ಸಹಕರಿಸಿದ್ದ ಮೂವರಿಗೆ 5 ವರ್ಷ ಜೈಲು

    ನವದೆಹಲಿ: ಜಮ್ಮು-ಕಾಶ್ಮೀರದ ಕುಥುವಾ ಪ್ರದೇಶದ ಬಾಲಕಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮೂವರು ಆರೋಪಿಗಳಿಗೆ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿ, ತೀರ್ಪು ನೀಡಿದೆ. ಜೊತೆಗೆ ಆರೋಪಿಗಳಿಗೆ ಸಹಕರಿಸಿದ್ದ ಮೂವರಿಗೆ 5 ವರ್ಷ ಜೈಲು ಶಿಕ್ಷೆಗೆ ಗುರಿಪಡಿಸಿದೆ.

    ಈ ಪ್ರಕರಣದ ಕುರಿತು ಪಂಜಾಬ್‍ನ ಪಠಾಣ್‍ಕೋಟ್ ನ್ಯಾಯಾಲಯವು ಇಂದು ವಿಚಾರಣೆ ನಡೆಸಿತ್ತು. 8 ಜನ ಆರೋಪಿಗಳ ಪೈಕಿ 6 ಜನರ ವಿರುದ್ಧ ಆರೋಪ ಸಾಬೀತಾಗಿತ್ತು. ಹೀಗಾಗಿ ಆರು ಜನರು ದೋಷಿಗಳು ಎಂದು ತೀರ್ಪು ನೀಡಿದ್ದ ಕೋರ್ಟ್, ಶಿಕ್ಷೆಯನ್ನು ಕಾಯ್ದಿರಿಸಿತ್ತು. ಈಗ ಕೋರ್ಟ್ ತೀರ್ಪು ಪ್ರಕಟಿಸಿದೆ.

    ಕಥುವಾ ಜಿಲ್ಲೆಯ ಸಂಜಿ ರಾಮ್, ಪರ್ವೇಶ್ ಕುಮಾರ್ ಮತ್ತು ದೀಪಕ್ ಖಜುರಿಯಾ ಜೀವಾವಧಿ ಶಿಕ್ಷೆಗೆ ಗುರಿಯಾದ ಆರೋಪಿಗಳು. ಉಳಿದಂತೆ ಆರೋಪಿಗಳಿಗೆ ಸಹಕರಿಸಿದ್ದ ತಿಲಕ್ ರಾಜ್, ಆನಂದ್ ದತ್ತ ಮತ್ತು ಸುರೀಂದರ್ ಕುಮಾರ್ 5 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ಏಳು ಆರೋಪಿಗಳ ಪೈಕಿ ವಿಶಾಲ್‍ನನ್ನು ಪ್ರಕರಣದಿಂದ ಕೈ ಬಿಡಲಾಗಿದೆ.

    ಏನಿದು ಪ್ರಕರಣ?:
    ಸಂಜೀ ರಾಮ್ ಹಾಗೂ ಆತನ ಗುಂಪು ಜಮ್ಮು-ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ನೆಲೆಸಿದ್ದ ಅಲ್ಪಸಂಖ್ಯಾತ ಅಲೆಮಾರಿಗಳನ್ನು ತೆರುವುಗೊಳಿಸಲು ಷಡ್ಯಂತ್ರ ರೂಪಿಸಿತ್ತು. ಹೀಗಾಗಿ ಜಿಲ್ಲೆಯ 8 ವರ್ಷದ ಬಾಲಕಿ ಕುದುರೆಗೆ ಮೇವು ತಿನ್ನಿಸಲು ಮನೆಯಿಂದ ಹೊರ ಹೋಗಿದ್ದಾಗ ಆಕೆಯನ್ನು ಅಪಹರಿಸಿದ್ದರು. ಬಾಲಕಿಯನ್ನು ದೇವಾಲಯದಲ್ಲಿ ಇರಿಸಿ ಮೂರು ದಿನಗಳ ಕಾಲ ಅತ್ಯಾಚಾರ ಎಸಗಿ, ಕೊಲೆ ಮಾಡಿದ್ದರು ಎನ್ನುವ ಆರೋಪ ಕೇಳಿ ಬಂದಿತ್ತು.

    ಬಾಲಕಿ ಅಪಹರಣವಾದ ಮೂರು ದಿನಗಳ ನಂತರ ಆಕೆಯ ಮೃತ ದೇಹ ದೇವಾಲಯದ ಬಳಿ ಪತ್ತೆಯಾಗಿತ್ತು. ಈ ಪ್ರಕರಣ ದೇಶಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ದೇಶದಲ್ಲಿ ವಿವಿಧೆಡೆ ಪ್ರತಿಭಟನೆ ನಡೆಸಿ, ಬಾಲಕಿ ಸಾವಿಗೆ ನ್ಯಾಯ ಸಿಗಬೇಕು ಎಂಬ ಒತ್ತಾಯ ಕೇಳಿ ಬಂದಿತ್ತು. ಮಗಳನ್ನು ಕಳೆದುಕೊಂಡ ಪೋಷಕರು, ನಾವು ಜೀವ ಬೆದರಿಕೆ ಎದುರಿಸುತ್ತಿದ್ದೇವೆ. ಇಲ್ಲಿ ನ್ಯಾಯ ಸಿಗುವ ವಿಶ್ವಾಸವಿಲ್ಲ ಎಂದು ಸುಪ್ರೀಂ ಕೋರ್ಟ್ ಗೆ ದೂರು ನೀಡಿದ್ದರು.

    ಮೃತ ಬಾಲಕಿಯ ಪೋಷಕರ ಮನವಿಗೆ ಸ್ಪಂದಿಸಿದ ಸುಪ್ರೀಂ ಕೋರ್ಟ್ ಪ್ರಕರಣವನ್ನು ಜಮ್ಮು-ಕಾಶ್ಮೀರದಿಂದ 30 ಕಿ.ಮೀ ದೂರ ವಿರುವ ಪಂಜಾಬ್ ಪ್ರಾಂತ್ಯದ ಪಠಾಣ್‍ಕೋಟ್‍ಗೆ ಹಸ್ತಾಂತರಿಸಿತ್ತು. ಅಷ್ಟೇ ಅಲ್ಲದೆ ಪ್ರತಿದಿನ ವಿಡಿಯೋ ಕ್ಯಾಮೆರಾ ಮೂಲಕ ವಿಚಾರಣೆ ನಡೆಸಿ ಶೀಘ್ರದಲ್ಲಿ ತೀರ್ಪು ನೀಡಬೇಕು ಎಂದು ಸೂಚಿಸಿತ್ತು.