Tag: katipalla

  • ಮಂಗಳೂರಿನ ಕಾಟಿಪಳ್ಳದ ಬದ್ರಿಯಾ ಮಸೀದಿ ಮೇಲೆ ಕಲ್ಲು ತೂರಾಟ!

    ಮಂಗಳೂರಿನ ಕಾಟಿಪಳ್ಳದ ಬದ್ರಿಯಾ ಮಸೀದಿ ಮೇಲೆ ಕಲ್ಲು ತೂರಾಟ!

    ಮಂಗಳೂರು: ನಗರದ ಹೊರವಲಯದಲ್ಲಿರುವ ಮಸೀದಿ ಮೇಲಿರುವ ಕಲ್ಲು ತೂರಾಟ ನಡೆಸಿರುವ ಘಟನೆ ಜಿಲ್ಲೆಯ ಸುರತ್ಕಲ್ (Suratkal) ಬಳಿಯ ಕಾಟಿಪಳ್ಳ (Katipalla) 3ನೇ ಬ್ಲಾಕಿನ ಬದ್ರಿಯಾ ಮಸೀದಿಯಲ್ಲಿ ನಡೆದಿದೆ.

    ಮಂಗಳೂರು (Mangaluru) ಹೊರವಲಯದ ಕಾಟಿಪಳ್ಳ 3ನೇ ಬ್ಲಾಕಿನ ಬದ್ರಿಯಾ ಮಸೀದಿ ಮೇಲೆ ದುಷ್ಕರ್ಮಿಗಳ ತಂಡವೊಂದು ಕಲ್ಲು ತೂರಾಟ ನಡೆಸಿದೆ. ಬೈಕ್‌ನಲ್ಲಿ ಆಗಮಿಸಿ ಕಲ್ಲು ತೂರಾಟ ಮಾಡಿದ್ದಾರೆ. ಕಲ್ಲಿನ ಹೊಡೆತಕ್ಕೆ ಮಸೀದಿಯ ಗಾಜು ಒಡೆದು ಚೂರಾಗಿದೆ. ತಡರಾತ್ರಿ 2 ಬೈಕ್‌ಗಳಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ.ಇದನ್ನೂ ಓದಿ: ಕಲಬುರಗಿಯಲ್ಲಿ ದಶಕದ ಬಳಿಕ ಸಚಿವ ಸಂಪುಟ ಸಭೆ – ಮಿನಿವಿಧಾನಸೌಧದಲ್ಲಿ ಸರ್ಕಾರದಿಂದ ಭರ್ಜರಿ ಸಿದ್ಧತೆ!

    ಸದ್ಯ ಸ್ಥಳದಲ್ಲಿ ಸುರತ್ಕಲ್ ಠಾಣಾ ಪೊಲೀಸರು ಬಂದುಬಸ್ತ್ ಮಾಡಿದ್ದಾರೆ.

    ಭಜರಂಗದಳ-ವಿಹೆಚ್‌ಪಿಯಿಂದ ಬಿ.ಸಿ.ರೋಡ್ ಚಲೋ ಕರೆ:
    ಮತ್ತೊಂದೆಡೆ ಭಜರಂಗದಳ ಹಾಗೂ ವಿಹೆಚ್‌ಪಿಯಿಂದ ಬಿ.ಸಿ.ರೋಡ್ (BC Road) ಚಲೋ ಕರೆ ಹಿನ್ನಲೆಯಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ಬಿ.ಸಿ.ರೋಡ್‌ನಲ್ಲಿ ಜಮಾಯಿಸಿದ್ದಾರೆ. ಬಿ.ಸಿ.ರೋಡ್‌ನ ರಕ್ತೇಶ್ವರಿ ದೇವಸ್ಥಾನದ ಎದುರು ಸೇರಿದ ಕಾರ್ಯಕರ್ತರು ನಾವು ಸವಾಲು ಸ್ವೀಕರಿಸಿ ಬಂದಿದ್ದೇವೆ. ನಮ್ಮ ಮುಖಂಡ ಶರಣ್ ಪಂಪ್ವೆಲ್ ಬರುತ್ತಾರೆ ಅವರಿಗೆ ಸ್ವಾಗತ ಕೋರಲು ಬಂದಿರೋದಾಗಿ ವಿಹೆಚ್‌ಪಿ ಬಂಟ್ವಾಳ ಪ್ರಖಂಡ ಅಧ್ಯಕ್ಷ ಪ್ರಸಾದ್ ಕುಮಾರ್ ತಿಳಿಸಿದ್ದಾರೆ.ಇದನ್ನೂ ಓದಿ: ಟ್ರಂಪ್‌ ಮೇಲೆ ಮತ್ತೆ ಗುಂಡಿನ ದಾಳಿ – ಆತಂಕ ಹೆಚ್ಚಿಸಿದ ಆ ಒಂದು ರೈಫಲ್‌, ದಾಳಿಕೋರ ಸಿಕ್ಕಿದ್ದು ಹೇಗೆ?

  • ಕಾಟಿಪಳ್ಳದಲ್ಲಿ ಜಲೀಲ್ ಕೊಲೆ ಪ್ರಕರಣ- ಓರ್ವ ಪರಾರಿ, ಮೂವರು ಆರೋಪಿಗಳ ಬಂಧನ

    ಕಾಟಿಪಳ್ಳದಲ್ಲಿ ಜಲೀಲ್ ಕೊಲೆ ಪ್ರಕರಣ- ಓರ್ವ ಪರಾರಿ, ಮೂವರು ಆರೋಪಿಗಳ ಬಂಧನ

    ಮಂಗಳೂರು: ಇಲ್ಲಿನ ಸುರತ್ಕಲ್‍ (Surathkal) ನ ಕಾಟಿಪಳ್ಳದಲ್ಲಿ ನಡೆದ ಜಲೀಲ್ ಕೊಲೆ ಪ್ರಕರಣದ ಆರೋಪಿಗಳು ಅಂದರ್ ಆಗಿದ್ದಾರೆ. ಕೊಲೆ ಮಾಡಿದ ಇಬ್ಬರು ಸಹಕರಿಸಿದ ಓರ್ವ ಬಂಧನವಾದರೆ, ಮತ್ತೋರ್ವ ಪರಾರಿಯಾಗಿದ್ದಾನೆ.

    ಮಂಗಳೂರು (Mangaluru) ಹೊರವಲಯದ ಸುರತ್ಕಲ್ ಬಳಿಯ ಕಾಟಿಪಳ್ಳ ಎಂಬಲ್ಲಿ ಮೊನ್ನೆ ರಾತ್ರಿ ಭೀಕರ ಹತ್ಯೆ ನಡೆದಿತ್ತು. ಕೃಷ್ಣಾಪುರ ನಿವಾಸಿ ಕಾಟಿಪಳ್ಳ ಬಳಿ ಅಂಗಡಿ ಇಟ್ಟುಕೊಂಡಿದ್ದ ಅಬ್ದುಲ್ ಜಲೀಲ್ ಎಂಬಾತನನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿತ್ತು. ಹತ್ಯೆ ಪ್ರಕಣ ಸಂಬಂಧ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ.

    ಕೃಷ್ಣಾಪುರ ನೈತಂಗಡಿ ನಿವಾಸಿ ಶೈಲೇಶ್ ಅಲಿಯಾಸ್ ಶೈಲೇಶ್ ಪೂಜಾರಿ, ಉಡುಪಿ (Udupi) ಜಿಲ್ಲೆ, ಹೆಜಮಾಡಿ ನಿವಾಸಿ ಸವಿನ್ ಕಾಂಚನ್, ಕಾಟಿಪಳ್ಳ ನಿವಾಸಿ ಪವನ್ ಅಲಿಯಾಸ್ ಪಚ್ಚು ಬಂಧಿತರು. ಶೈಲೇಶ್ ಮತ್ತು ಸವಿನ್ ಕೊಲೆ ಮಾಡಿದರೆ ಪವನ್ ಕೊಲೆ ಮಾಡಿದವರಿಗೆ ಬೈಕ್ನಲ್ಲಿ ಡ್ರಾಪ್ ಕೊಟ್ಟಿದ್ದಾನೆ. ಮತ್ತೋರ್ವ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಇದನ್ನೂ ಓದಿ: ಜಲೀಲ್‌ ಹತ್ಯೆ ಕೇಸ್‌ – ಇಬ್ಬರು ಮಹಿಳೆಯರ ವಿಚಾರಣೆ, ಗಾಂಜಾ ಮಾಫಿಯಾದ ವಾಸನೆ

    ಶೈಲೇಶ್ ಮತ್ತು ಸವಿನ್ ಇಬ್ಬರೂ ಕೂಡ ರೌಡಿಶೀಟರ್‍ಗಳಾಗಿದ್ದು 2021ರಲ್ಲಿ ನಟೋರಿಯಸ್ ರೌಡಿಶೀಟರ್ ಪಿಂಕಿ ನವಾಜ್ ಕೊಲೆ ಯತ್ನದ ಆರೋಪಿಗಳಾಗಿದ್ದರು. ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದು, ಕೊಲೆಗೆ ಕಾರಣ ಏನು ಅಂತ ತನಿಖೆ ನಡೆಸುತ್ತಿದ್ದಾರೆ.

    ಬಂಧಿತ ಮೂವರು ಆರೋಪಿಗಳನ್ನು ಮಂಗಳೂರಿನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಮುಂದಿನ ಹತ್ತು ದಿನಗಳ ಕಾಲ ಪೊಲೀಸರ ಕಷ್ಟಡಿಗೆ ಆರೋಪಿಗಳನ್ನು ನೀಡಲಾಗಿದೆ. ಇನ್ನು ಸುರತ್ಕಲ್ ಭಾಗದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಡಿಸೆಂಬರ್ 29 ಬೆಳಗ್ಗೆ 6 ಗಂಟೆವರೆಗೂ ನಿಷೇಧಾಜ್ಞೆ ಮುಂದುವರಿಸಲಾಗಿದೆ. ಮತ್ತು ಮದ್ಯ ಮಾರಾಟವನ್ನೂ ಬಂದ್ ಮಾಡಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • 20 ವರ್ಷಗಳಿಂದ ವಿದ್ಯುತ್ ಕಾಣದ ಬಡ ಕುಟುಂಬಕ್ಕೆ ಬೆಳಕಾದ ಸೇವಾ ಚಾರಿಟೇಬಲ್ ಟ್ರಸ್ಟ್

    20 ವರ್ಷಗಳಿಂದ ವಿದ್ಯುತ್ ಕಾಣದ ಬಡ ಕುಟುಂಬಕ್ಕೆ ಬೆಳಕಾದ ಸೇವಾ ಚಾರಿಟೇಬಲ್ ಟ್ರಸ್ಟ್

    ಮಂಗಳೂರು: ಸುಮಾರು 20 ವರ್ಷಗಳಿಂದ ಕಾಟಿಪಳ್ಳ 4ನೇ ಬ್ಲಾಕ್ ನಲ್ಲಿ ನಿವಾಸಿ ಮೀನಾಕ್ಷಿ ಮತ್ತು ಮನೆಯವರು ತೀರಾ ಬಡತನದಿಂದಾಗಿ ವಿದ್ಯುತ್ ಸಂಪರ್ಕವಿಲ್ಲದೆ ವಾಸವಿದ್ದರು.

    ಕಳೆದ ಇಪ್ಪತ್ತು ವರ್ಷಗಳಿಂದಲೂ ವಿದ್ಯುತ್ ಕಾಣದ ಈ ಕುಟುಂಬದ ಸ್ಥಿತಿ ಕಂಡು ಮಂಗಳೂರಿನ ಸುರತ್ಕಲ್ ಸಮೀಪದ ಗಣೇಶಪುರ ಕಾಟಿಪಳ್ಳ ‘ಸೇವಾ ಚಾರಿಟೇಬಲ್ ಟ್ರಸ್ಟ್’ ಸದರಿ ಮನೆಗೆ ಉಚಿತವಾಗಿ ವಿದ್ಯುತ್ ಸಂಪರ್ಕದ ವ್ಯವಸ್ಥೆ ಕಲ್ಪಿಸಿಕೊಟ್ಟಿದೆ. ವಿದ್ಯುತ್ ದೀಪವನ್ನು ಕಾಣದ ಬಡಕುಟುಂಬದ ಮನೆಗೆ ವಿದ್ಯುತ್ ಸಂಪರ್ಕ ವ್ಯವಸ್ಥೆಯನ್ನು ಉಚಿತವಾಗಿ ಕಲ್ಪಿಸಿ ಕೊಟ್ಟು ಮಾದರಿಯಾಗಿದೆ.

    ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸೇವಾ ಕಾರ್ಯಗಳನ್ನು ನಡೆಸಲು ಶ್ರೀ ದೇವರು ಶಕ್ತಿ ನೀಡಲಿ ಎಂದು ವಿದ್ಯುತ್ ಸಂಪರ್ಕಕ್ಕೆ ಚಾಲನೆ ನೀಡಿದ ಟ್ರಸ್ಟ್‍ನ ಗೌರವ ಕಾನೂನು ಸಲಹೆಗಾರ ಮಯೂರ ಕೀರ್ತಿಯವರು ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸುರತ್ಕಲ್ ಶ್ರೀ ಕಾಂತೇರಿ ಧೂಮಾವತಿ ದೈವಸ್ಥಾನದ ಆಡಳಿತ ಮೊಕ್ತೇಸರ ಮಂಜು ಕಾವು ಹಾಗೂ 5ನೇ ಬ್ಲಾಕ್ ಕೃಷ್ಣಾಪುರ ಪಣಂಬೂರು ಶ್ರೀ ಕೊಡ್ಡು ದೈವಸ್ಥಾನದ ಗುರಿಕಾರ ಲೋಕೇಶ್‍ರವರು ದೀಪ ಪ್ರಜ್ವಲಿಸಿ, ಪ್ರಶಂಸೆಗೈದು ಶುಭ ಹಾರೈಸಿದರು.

    ಕಳೆದ ಡಾಕ್‍ಡೌನ್ ಸಂದರ್ಭದಲ್ಲಿ ತರಕಾರಿ-ಪಡಿತರ ಕಿಟ್‍ಗಳನ್ನು ವಿತರಿಸಿದ ಸಂದರ್ಭ ಮೀನಾಕ್ಷಿಯವರ ಮನೆಯ ಪರಿಸ್ಥಿತಿ ನಮ್ಮ ಗಮನಕ್ಕೆ ಬಂದು ಅಂದೇ ಟ್ರಸ್ಟ್ ವತಿಯಿಂದ ಮನೆಗೆ ವಿದ್ಯುತ್ ಸಂಪರ್ಕವನ್ನು ನೀಡುವ ಬಗ್ಗೆ ತೀರ್ಮಾನಿಸಿದ್ದು, ಈ ಮನೆಯ ಪರಿಸ್ಥಿತಿ ತಿಳಿದು ಈ ಬಗ್ಗೆ ವಾಗ್ದಾನ ಮಾಡಿ, ಈ ಸತ್ಕಾರ್ಯ ಸರ್ವರ ಸಹಕಾರದಿಂದ ಸಾಕಾರಗೊಂಡಿದೆ ಎಂದು ಟ್ರಸ್ಟ್‍ನ ಅಧ್ಯಕ್ಷ ಎ.ಪಿ. ಮೋಹನ್ ಗಣೇಶಪುರ ಮಾತನಾಡಿ ಹೇಳಿದರು.

    ಟ್ರಸ್ಟ್‍ನ ಕಾರ್ಯದರ್ಶಿ ದಿನೇಶ್ ಸುವರ್ಣ, ಕೋಶಾಧಿಕಾರಿ ಸಂದೀಪ್ ಕಾಟಿಪಳ್ಳ, ಟ್ರಸ್ಟಿಗಳಾದ ಗಿರೀಶ್ ನಾಯಕ, ಸುಧಾಕರ ಬೊಳ್ಳಾಜೆ, ರವೀಂದ್ರ ಆಚಾರ್ಯ, ಲೋಕನಾಥ್ ಶೆಟ್ಟಿ, ಗಣೇಶ್ ದೇವಾಡಿಗ, ಕಿಶನ್ ಅಮೀನ್ ನಾಗರಾಜ ಸುವರ್ಣ, ಪ್ರಮುಖರಾದ ಗಂಗಾಧರ ಶೆಟ್ಟಿಗಾರ್, ತಾರಾನಾಥ ಶೆಟ್ಟಿಗಾರ್, ಮಂಜುನಾಥ ಪೂಜಾರಿ, ತಾರಾನಾಥ್ ಶೆಟ್ಟಿ, ವಿದ್ಯುತ್ ಗುತ್ತಿಗೆದಾರರು ಬಾಲಕೃಷ್ಣ ಶೆಟ್ಟಿಗಾರ್, ಮಹಿಳಾ ಸಮಿತಿಯ ಇಂದ್ರಾಕ್ಷಿ ಹರೀಶ್, ಮಮತಾ ರಾವ್, ಜಯಂತಿ ಪಿ.ಟಿ.ರೈ, ಅಕ್ಷಿತಾ ಸಂದೀಪ್, ಲತಾ ಮಹೇಶ್, ಜಯಂತಿ ಗಣೇಶ್ ಮುಂತಾದವರು ಭಾಗವಹಿಸಿದರು.

  • ದೀಪಕ್ ರಾವ್ ಹತ್ಯೆಗೆ ಫಾರಿನ್ ಫಂಡಿಂಗ್- ಟಾರ್ಗೆಟ್ ಗ್ರೂಪ್ ಮೂಲಕ ಸುಪಾರಿ

    ದೀಪಕ್ ರಾವ್ ಹತ್ಯೆಗೆ ಫಾರಿನ್ ಫಂಡಿಂಗ್- ಟಾರ್ಗೆಟ್ ಗ್ರೂಪ್ ಮೂಲಕ ಸುಪಾರಿ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಸಮೀಪದ ಕಾಟಿಪಳ್ಳದಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ ದೀಪಕ್ ರಾವ್ ಹತ್ಯೆಗೆ ಸ್ಫೋಟಕ ತಿರುವೊಂದು ದೊರೆತಿದೆ.

    ದೀಪಕ್ ರಾವ್ ಹತ್ಯೆಗೆ ಫಾರಿನ್ ಫಂಡಿಂಗ್ ಬಂದಿದ್ದು, ಉಳ್ಳಾಲದ ಟಾರ್ಗೆಟ್ ಗ್ರೂಪ್ ಮೂಲಕ ಹತ್ಯೆಗೆ ಸುಪಾರಿ ಕೊಡಲಾಗಿತ್ತು. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರೋ ನಾಲ್ವರು ಈ ಟಾರ್ಗೆಟ್ ಗ್ರೂಪ್ ಪ್ರಮುಖನ ಸಹಚರರಾಗಿದ್ದಾರೆ ಅನ್ನೋ ಮಾಹಿತಿ ಸಿಕ್ಕಿದೆ. ಇದನ್ನೂ ಓದಿ: ಯುಟಿ ಖಾದರ್ ಜೊತೆ ದೀಪಕ್ ಹತ್ಯೆಯ ಆರೋಪಿ ಕುಳಿತಿರುವ ಫೋಟೋ ವೈರಲ್

    ಟಾರ್ಗೆಟ್ ಗ್ರೂಪಿನಲ್ಲಿದ್ದ ಕಾಟಿಪಳ್ಳದ ಸಫ್ವಾನ್ ಸುರತ್ಕಲ್ ಪ್ರದೇಶದಲ್ಲಿ ಗ್ಯಾಂಗ್ ಕಟ್ಟಿಕೊಂಡಿದ್ದ. ಹೀಗಾಗಿ ಪೊಲೀಸರು ರೌಡಿ ಸಫ್ವಾನ್ ಬಂಧನಕ್ಕೆ ಬಲೆ ಬೀಸಿದ್ದರು. ಆದ್ರೆ ರಾಜಕಾರಣಿಗಳಿಂದ ಇದಕ್ಕೆ ತಡೆಹಿಡಿಯಲಾಗುತ್ತಿತ್ತು. ಎರಡು ತಿಂಗಳ ಹಿಂದೆಯಷ್ಟೇ ರೌಡಿ ತಂಡವೊಂದು ಸಫ್ವಾನ್ ನನ್ನು ಕೊಲೆ ಮಾಡಿತ್ತು. ಇತ್ತೀಚೆಗೆ ಚಾರ್ಮಡಿಯಲ್ಲಿ ಸಫ್ವಾನ್ ಎಂಬಾತನ ಶವ ಪತ್ತೆಯಾಗಿತ್ತು. ಆತನ ಕೊಲೆಯನ್ನು ಉಳ್ಳಾಲದ ಟಾರ್ಗೆಟ್ ಗುಂಪಿನ ಇನ್ನೊಬ್ಬ ಸಫ್ವಾನ್ ಎಂಬಾತ ನಡೆಸಿದ್ದ. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿತ್ತು. ಸದ್ಯ ಆರೋಪಿ ಸಫ್ವಾನ್ ಜೈಲಿನಲ್ಲಿದ್ದಾನೆ ಅಂತ ಪಬ್ಲಿಕ್ ಟಿವಿಗೆ ಉನ್ನತ ಮೂಲಗಳಿಂದ ಮಾಹಿತಿ ಲಭಿಸಿದೆ. ಇದನ್ನೂ ಓದಿ: ನಾನು ನಂಬಿದ ದೇವರು ಆರೋಪಿಗಳಿಗೆ ಶಿಕ್ಷೆ ನೀಡ್ತಾನೆ: ದೀಪಕ್ ತಾಯಿ ಕಣ್ಣೀರು

    ಟ್ರಾವೆಲ್ ಏಜೆನ್ಸಿ ಮೂಲಕ ತೆರೆದುಕೊಂಡಿದ್ದ ಟಾರ್ಗೆಟ್ ಗ್ರೂಪ್, ಉಳ್ಳಾಲದ ಮಾಸ್ತಿಕಟ್ಟೆಯಲ್ಲಿ ಎಂಟು ವರ್ಷಗಳ ಹಿಂದೆ ಆರಂಭಗೊಂಡಿತ್ತು. ಸುರತ್ಕಲ್, ಮಂಗಳೂರು, ಉಳ್ಳಾಲದಲ್ಲಿ ಸಕ್ರಿಯವಾಗಿರುವ ಈ ತಂಡದಿಂದ ಮೂರು ತಿಂಗಳ ಹಿಂದೆ ಉಳ್ಳಾಲದಲ್ಲಿ ಬಿಜೆಪಿ ಕಾರ್ಯಕರ್ತ ಝುಬೈರ್ ಎಂಬವರನ್ನು ಕೊಲೆ ಮಾಡಲಾಗಿದೆ. ಇನ್ನು ಈ ಟಾರ್ಗೆಟ್ ಗ್ರೂಪ್ ಗೆ ಸೌದಿ, ದುಬೈನಿಂದ ಹಣಕಾಸಿನ ನೆರವು ಹರಿದುಬರುತ್ತಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: 7 ವರ್ಷಗಳ ಕಾಲ ನನ್ನ ಜೊತೆಯಿದ್ದ ದೀಪಕ್ ಸಾವು ಊಹಿಸಲು ಸಾಧ್ಯವಿಲ್ಲ: ಮಾಲೀಕ ಮಜೀದ್

    ಬುಧವಾರ ಮಧ್ಯಾಹ್ನ ಸುಮಾರು 1.30ರ ಸಮಯಕ್ಕೆ ಸುರತ್ಕಲ್ ಸಮೀಪದ ಕಾಟಿಪಳ್ಳದಲ್ಲಿ ದೀಪಕ್ ರಾವ್ ಅವರನ್ನು ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ರು. ಕೂಡಲೇ ಎಚ್ಚೆತ್ತ ಪೊಲೀಸರು ಸಿನಿಮೀಯ ರೀತಿಯಲ್ಲಿ ಆರೋಪಿಗಳನ್ನು ಬೆನ್ನಟ್ಟಿ ಬಂಧಿಸಿದ್ದಾರೆ. ಸದ್ಯ ಆರೋಪಿಗಳನ್ನು ಅಜ್ಞಾತ ಸ್ಥಳದಲ್ಲಿರಿಸಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ದೀಪಕ್ ಹತ್ಯೆ ಕೇಸ್: ಪೊಲೀಸರ 27 ಕಿ.ಮೀ ಥ್ರಿಲ್ಲಿಂಗ್ ಚೇಸಿಂಗ್ ಸ್ಟೋರಿ ಓದಿ

    https://www.youtube.com/watch?v=h2ySxt7VrtE

    https://www.youtube.com/watch?v=0iJpHrCbDbc

    ಝುಬೈರ್ ಕೊಲೆ ಆರೋಪಿಗಳು

                                                                                    

  • ಮಂಗ್ಳೂರು: ಸುರತ್ಕಲ್ ಬಳಿ ಮಾರಕಾಸ್ತ್ರದಿಂದ ಕಡಿದು ಯುವಕನ ಬರ್ಬರ ಕೊಲೆ

    ಮಂಗ್ಳೂರು: ಸುರತ್ಕಲ್ ಬಳಿ ಮಾರಕಾಸ್ತ್ರದಿಂದ ಕಡಿದು ಯುವಕನ ಬರ್ಬರ ಕೊಲೆ

    ಮಂಗಳೂರು: ನಗರದಲ್ಲಿ ಮತ್ತೆ ದುಷ್ಕರ್ಮಿಗಳು ತಮ್ಮ ಅಟ್ಟಹಾಸ ಮೆರೆದಿದ್ದಾರೆ. ನಗರದ ಹೊರವಲಯದಲ್ಲಿ ದುಷ್ಕರ್ಮಿಗಳು ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

    ಈ ಘಟನೆ ಸುರತ್ಕಲ್ ಬಳಿಯ ಕಾಟಿಪಳ್ಳದಲ್ಲಿ ನಡೆದಿದೆ. ಮೃತ ದುರ್ದೈವಿ ಯುವಕನನ್ನು ಕೃಷ್ಣಾಪುರದ ಗಣೇಶ್ ಪುರ ನಿವಾಸಿ ದೀಪಕ್ (32) ಎಂದು ಗುರುತಿಸಲಾಗಿದೆ. ಮೃತ ದೀಪಕ್ ಮೊಬೈಲ್ ಕಂಪನಿಯೊಂದರಲ್ಲಿ ಕರೆನ್ಸಿ ಡಿಸ್ಟ್ರಿಬ್ಯೂಟರ್ ಆಗಿ ಕೆಲಸ ಮಾಡುತ್ತಿದ್ದರು. ಅಲ್ಲದೇ ಸ್ಥಳೀಯ ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದನು ಎನ್ನಲಾಗಿದೆ.

    ದೀಪಕ್ ಕಾಟಿಪಳ್ಳದಲ್ಲಿ ಬೈಕಿನಲ್ಲಿ ಹೋಗುತ್ತಿದ್ದಾಗ ನಾಲ್ವರ ತಂಡವೊಂದು ಕಾರಿನಲ್ಲಿ ಬಂದು ಅಡ್ಡಗಟ್ಟಿದ್ದಾರೆ. ಬಳಿಕ ದುಷ್ಕರ್ಮಿಗಳು ಕಾರಿನಿಂದ ಇಳಿದು ನೇರವಾಗಿ ದೀಪಕ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಈ ವೇಳೆ ಸ್ಥಳೀಯ ಮುಸ್ಲಿಮರು ಕಲ್ಲೆಸೆದು ದುಷ್ಕರ್ಮಿಗಳನ್ನು ಓಡಿಸಿದ್ದಾರೆ. ಅಷ್ಟರಲ್ಲಿ ತೀವ್ರ ಗಾಯಗೊಂಡ ದೀಪಕ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

    ಸುರತ್ಕಲ್ ಮತ್ತು ಮಂಗಳೂರಿನ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ.