Tag: Kaustav Bagchi

  • ಪಶ್ಚಿಮ ಬಂಗಾಳ ಉಳಿಸಿ- ಪ್ರಧಾನಿಗೆ ರಕ್ತದಲ್ಲಿ ಪತ್ರ ಬರೆದ ಕೌಸ್ತವ್ ಬಾಗ್ಚಿ

    ಪಶ್ಚಿಮ ಬಂಗಾಳ ಉಳಿಸಿ- ಪ್ರಧಾನಿಗೆ ರಕ್ತದಲ್ಲಿ ಪತ್ರ ಬರೆದ ಕೌಸ್ತವ್ ಬಾಗ್ಚಿ

    ಕೋಲ್ಕತ್ತಾ: ಇತ್ತೀಚೆಗೆ ಬಿಜೆಪಿ ಸೇರಿದ ಮಾಜಿ ಕಾಂಗ್ರೆಸ್ ನಾಯಕ ಕೌಸ್ತವ್ ಬಾಗ್ಚಿಯವರು (Kaustav Bagchi)  ಪ್ರಧಾನಿ ನರೇಂದ್ರ ಮೋದಿಯವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ

    ಕೌಸ್ತವ್ ಬಾಗ್ಚಿ ಅವರು ಶನಿವಾರ ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ತಮ್ಮ ರಕ್ತದಿಂದ ಬರೆದ ಪತ್ರವನ್ನು ಪ್ರಧಾನಿ ಅವರಿಗೆ ಹಸ್ತಾಂತರಿಸಿದರು. ಪತ್ರದಲ್ಲಿ, ಪ್ರಧಾನಿ ಮೋದಿಯವರೇ (Narendra Modi) ದಯವಿಟ್ಟು ಪಶ್ಚಿಮ ಬಂಗಾಳವನ್ನು ಕಳ್ಳರಿಂದ ರಕ್ಷಿಸಿ ಎಂದು ಬರೆಯಲಾಗಿದೆ. ಈ ಪತ್ರವನ್ನು ಸ್ವೀಕರಿಸಿದ ಮೋದಿಯವರು ಮತ್ತೆ ಇಂತಹ ಕೆಲಸಗಳನ್ನು ಮಾಡಬೇಡಿ ಎಂದು ಬಾಗ್ಚಿಗೆ ಬುದ್ಧಿ ಹೇಳಿದರು.

    ಇತ್ತೀಚೆಗಷ್ಟೇ ಕಾಂಗ್ರೆಸ್ (Congress) ತೊರೆದು ಬಿಜೆಪಿಗೆ (BJP) ಸೇರಿದ್ದ ಬಾಗ್ಚಿ, 2023ರಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಮಾತನಾಡಿದ್ದಕ್ಕೆ ಬಾಗ್ಚಿ ಕೋಲ್ಕತ್ತಾ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದರು. ನಂತರ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ (Mamata Banerjee) ಸರ್ಕಾರ ಉರುಳಿಸುವವರೆಗೂ ತಲೆ ಕೂದಲು ಬೆಳೆಸುವುದಿಲ್ಲ ಎಂದು ಶಪಥ ಮಾಡಿ ತಲೆ ಬೋಳಿಸಿಕೊಂಡಿದ್ದರು. ಇದನ್ನೂ ಓದಿ: ದೀದಿ ಸರ್ಕಾರ ಉರುಳಿಸೋ ವರೆಗೂ ತಲೆ ಕೂದಲು ಬೆಳೆಸಲ್ಲ: ಶಪಥ ಮಾಡಿದ್ದ ‘ಕೈ’ ನಾಯಕ ಬಿಜೆಪಿ ಸೇರ್ಪಡೆ

    ಪಕ್ಷದೊಳಗಿನ ಗೌರವದ ಕೊರತೆಯನ್ನು ಉಲ್ಲೇಖಿಸಿ ಬಾಗ್ಚಿ, ಫೆಬ್ರವರಿ 28 ರಂದು ಕಾಂಗ್ರೆಸ್ ತೊರೆದಿದ್ದರು. ಕಾಂಗ್ರೆಸ್ ಉನ್ನತ ನಾಯಕತ್ವವು ಪಶ್ಚಿಮ ಬಂಗಾಳ ಘಟಕಕ್ಕೆ ಯಾವುದೇ ಪ್ರಾಮುಖ್ಯತೆಯನ್ನು ನೀಡುವುದಿಲ್ಲ. ಹಾಗಾಗಿ ನನ್ನ ಸ್ವಾಭಿಮಾನವನ್ನು ರಾಜಿ ಮಾಡಿಕೊಳ್ಳಲು ಮತ್ತು ಅದರಲ್ಲಿ ಉಳಿಯಲು ನಾನು ಬಯಸುವುದಿಲ್ಲ ಎಂದು ಅವರು ಪಕ್ಷವನ್ನು ತೊರೆದ ನಂತರ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದರು. 2024ರ ಫೆಬ್ರವರಿ 29 ರಂದು ಬಿಜೆಪಿ ಸೇರಿದ್ದರು.

    ಪ್ರಧಾನಿ ಮೋದಿ ಅವರು ಶನಿವಾರ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದ್ದು, ಈ ವೇಳೆ 4,500 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಮೂಲಸೌಕರ್ಯ ಯೋಜನೆಗಳನ್ನು ಅನಾವರಣಗೊಳಿಸಿದರು.

  • ದೀದಿ ಸರ್ಕಾರ ಉರುಳಿಸೋ ವರೆಗೂ ತಲೆ ಕೂದಲು ಬೆಳೆಸಲ್ಲ: ಶಪಥ ಮಾಡಿದ್ದ ‘ಕೈ’ ನಾಯಕ ಬಿಜೆಪಿ ಸೇರ್ಪಡೆ

    ದೀದಿ ಸರ್ಕಾರ ಉರುಳಿಸೋ ವರೆಗೂ ತಲೆ ಕೂದಲು ಬೆಳೆಸಲ್ಲ: ಶಪಥ ಮಾಡಿದ್ದ ‘ಕೈ’ ನಾಯಕ ಬಿಜೆಪಿ ಸೇರ್ಪಡೆ

    ಕೋಲ್ಕತ್ತಾ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ (Mamata Banerjee) ಸರ್ಕಾರ ಉರುಳಿಸುವವರೆಗೂ ತಲೆ ಕೂದಲು ಬೆಳೆಸುವುದಿಲ್ಲ ಎಂದು ಶಪಥ ಮಾಡಿದ್ದ ಕಾಂಗ್ರೆಸ್‌ ನಾಯಕ ಕೌಸ್ತವ್ ಬಾಗ್ಚಿ (Kaustav Bagchi) ಈಗ ಬಿಜೆಪಿ ಸೇರ್ಪಡೆಯಾಗಿದ್ದಾರೆ.

    ಒಂದು ದಿನದ ಹಿಂದೆ ಪಕ್ಷಕ್ಕೆ ರಾಜೀನಾಮೆ ನೀಡಿದ ಮಾಜಿ ಕಾಂಗ್ರೆಸ್ ನಾಯಕ ಕೌಸ್ತವ್ ಬಾಗ್ಚಿ ಗುರುವಾರ ಬಿಜೆಪಿಗೆ ಸೇರ್ಪಡೆಗೊಂಡರು. ರಾಜ್ಯದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಆಡಳಿತದ ವಿರುದ್ಧ ಹೋರಾಡುವುದಾಗಿ ಪ್ರತಿಜ್ಞೆ ಮಾಡಿದ್ದರು. ಇದನ್ನೂ ಓದಿ: ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಶೀಘ್ರ ಬಿಡುಗಡೆ – ಆಯ್ಕೆಗೆ ಮೋದಿ, ಅಮಿತ್‌ ಶಾ ತಂತ್ರವೇನು?

    ಬಿಜೆಪಿಗೆ ಕೌಸ್ತವ್ ಬಾಗ್ಚಿ ಅವರನ್ನು ಸ್ವಾಗತಿಸಲು ನಮಗೆ ಸಂತೋಷವಾಗಿದೆ ಎಂದು ಪಕ್ಷದ ಮುಖಂಡ ಸುವೆಂದು ಅಧಿಕಾರಿ ಇಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಪಶ್ಚಿಮ ಬಂಗಾಳದ ಬಿಜೆಪಿ ಅಧ್ಯಕ್ಷ ಸುಕಾಂತ ಮಜುಂದಾರ್ ಕೂಡ ಉಪಸ್ಥಿತರಿದ್ದರು.

    ಪಕ್ಷದ ಇತರರೊಂದಿಗೆ ಭಿನ್ನಾಭಿಪ್ರಾಯದ ಕಾರಣ ಬಾಗ್ಚಿ ಬುಧವಾರ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದರು. ಇದನ್ನೂ ಓದಿ: ಪಾಕಿಸ್ತಾನ ಮತ್ತು ಕಾಂಗ್ರೆಸ್ ಸ್ಥಿತಿ ಒಂದೇ ರೀತಿಯಾಗಿದೆ: ಜೋಶಿ

    ಕಳೆದ ವರ್ಷ (2023) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಮಾತನಾಡಿದ್ದಕ್ಕೆ ಬಾಗ್ಚಿ ಬಂಧನಕ್ಕೆ ಒಳಗಾಗಿದ್ದರು. ಜಾಮೀನಿನ ಮೇಲೆ ಬಿಡುಗಡೆಯಾದ ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜೀನಾಮೆ ಪತ್ರ ನೀಡಿದ್ದಾರೆ.

  • ಮಮತಾ ವಿರುದ್ಧ ಹೇಳಿಕೆ – ಬಂಗಾಳದ ಕಾಂಗ್ರೆಸ್ ವಕ್ತಾರ ಅರೆಸ್ಟ್

    ಮಮತಾ ವಿರುದ್ಧ ಹೇಳಿಕೆ – ಬಂಗಾಳದ ಕಾಂಗ್ರೆಸ್ ವಕ್ತಾರ ಅರೆಸ್ಟ್

    ಕೋಲ್ಕತ್ತಾ: ಪಶ್ಚಿಮ ಬಂಗಾಳದ (West Bengal) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ವಿರುದ್ಧ ಹೇಳಿಕೆ ನೀಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಕಾಂಗ್ರೆಸ್ ವಕ್ತಾರ (Congress Spokesperson) ಕೌಸ್ತವ್ ಬಾಗ್ಚಿ (Kaustav Bagchi) ಅವರನ್ನು ಬಂಧಿಸಲಾಗಿದೆ.

    ಪಶ್ಚಿಮ ಬಂಗಾಳದ ರ‍್ರಾಕ್‌ಪೋರ್‌ನಲ್ಲಿರುವ ಬಾಗ್ಚಿ ಅವರ ನಿವಾಸಕ್ಕೆ ಬುರ್ಟೊಲ್ಲಾ ಪೊಲೀಸ್ ಠಾಣೆಯ ಬೃಹತ್ ತಂಡ ಶನಿವಾರ ಮುಂಜಾನೆ 3:30ರ ವೇಳೆಗೆ ದಾಳಿ ನಡೆಸಿ ಅವರನ್ನು ಬಂಧಿಸಿದೆ. ಇದನ್ನೂ ಓದಿ: ಬಿಜೆಪಿ ಪಕ್ಷ ಸಂಘಟನೆ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ ಎಂಪಿ ಸುಮಲತಾ

    ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಹೇಳಿಕೆ ನೀಡಿರುವ ಹಿನ್ನೆಲೆ ಶುಕ್ರವಾರ ಕೌಸ್ತವ್ ಬಾಗ್ಚಿ ವಿರುದ್ಧ ಬುರ್ಟೊಲ್ಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಹಿನ್ನೆಲೆ ಅವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಇತ್ತೀಚೆಗೆ ನಡೆದ ಸಾಗರ್ದಿಗಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಕಂಡಿದ್ದು, ಪಶ್ಚಿಮ ಬಂಗಾಳ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಅವರ ಮೇಲೆ ವೈಯಕ್ತಿಕ ದಾಳಿ ನಡೆಸಲಾಗಿತ್ತು. ಇದಾದ ಬಳಿಕ ತೃಣಮೂಲ ಕಾಂಗ್ರೆಸ್‌ನ ಮುಖ್ಯಸ್ಥೆ ಹಾಗೂ ಸಿಎಂ ಮಮತಾ ಬ್ಯಾನರ್ಜಿ ಅವರನ್ನು ಬಾಗ್ಚಿ ಟೀಕಿಸಿದ್ದರು. ಇದನ್ನೂ ಓದಿ: ಆಸ್ಟ್ರೇಲಿಯಾದ ಹಿಂದೂ ದೇವಾಲಯದಲ್ಲಿ ಮತ್ತೆ ಮೋದಿ ವಿರೋಧಿ ಬರಹ – 2 ತಿಂಗಳಲ್ಲಿ 4ನೇ ಘಟನೆ