Tag: kaveri River

  • ಸೆ.26ರಿಂದ 5 ದಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ – ಚಲುವರಾಯಸ್ವಾಮಿ

    ಸೆ.26ರಿಂದ 5 ದಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ – ಚಲುವರಾಯಸ್ವಾಮಿ

    – ದಸರಾ ಅಂಗವಾಗಿ ಸಾಂಕೇತಿಕವಾಗಿ ವಿಶೇಷ ಪೂಜಾ ಕಾರ್ಯಕ್ರಮ

    ಬೆಂಗಳೂರು/ಮಂಡ್ಯ: ಸೆ.26ರಿಂದ ಕೆಆರ್‌ಎಸ್‌ನಲ್ಲಿ (KRS) ಕನ್ನಡ ನಾಡಿನ ಜೀವನದಿ “ಕಾವೇರಿ ಆರತಿ” ಎಂಬ ಐದು ದಿನಗಳ ಭವ್ಯ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ (N. Chaluvaraya Swamy) ಮಾಹಿತಿ ನೀಡಿದ್ದಾರೆ.

    ಸೆ.26ರ ಸಾಯಂಕಾಲ 5 ಗಂಟೆಗೆ ಮಾನ್ಯ ಉಪಮುಖ್ಯಮಂತ್ರಿಗಳು ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ (DK Shivakumar) ಅವರು ಕಾವೇರಿ ನದಿಗೆ (Kaveri River) ಪುಷ್ಪಾರ್ಚನೆ ಮಾಡುವ ಮೂಲಕ “ಕಾವೇರಿ ಆರತಿ” ಕಾರ್ಯಕ್ರಮಕ್ಕೆ ಶಾಸ್ತ್ರೋಕ್ತವಾಗಿ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: GST ಕಡಿತ; ನವರಾತ್ರಿ ಮೊದಲ ದಿನವೇ ಮಾರುತಿ ಸುಜುಕಿಯ 30,000 & ಹ್ಯುಂಡೈನ 11,000 ಕಾರುಗಳು ಭರ್ಜರಿ ಸೇಲ್‌

    ಮಾಧ್ಯಮ ಹೇಳಿಕೆ ನೀಡಿರುವ ಅವರು, ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು ವೀರ ಸಿಂಹಾಸನ ಮಹಾ ಸಂಸ್ಥಾನ ಮಠಾಧ್ಯಕ್ಷರಾದ ಶ್ರೀ ಡಾ. ಶಿವರಾತ್ರಿ ದೇಶಿಕೇಂದ್ರ ಮಹಾ ಸ್ವಾಮೀಜಿ, ಸಿದ್ಧಗಂಗಾ ಮಠದ ಅಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ, ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿಗಳು ಭಾಗವಹಿಸಲಿದ್ದಾರೆ ಎಂದಿದ್ದಾರೆ.

    ಈ ಬಾರಿಯ ದಸರಾದಲ್ಲಿ ಸಾಂಕೇತಿಕವಾಗಿ 5 ದಿನಗಳ ಕಾಲ ಕೆಆರ್‌ಎಸ್‌ನಲ್ಲಿ ಕಾವೇರಿ ತಾಯಿಗೆ ಆರತಿ ಮಾಡಲು ನಿರ್ಧರಿಸಲಾಗಿದೆ. ರಾಜ್ಯದಲ್ಲಿ ಮಳೆ, ಬೆಳೆ ಒಳ್ಳೆಯದಾಗಲಿ, ರಾಜ್ಯಕ್ಕೆ ಸನ್ಮಂಗಳವಾಗಲಿ ಎಂದು ತಾಯಿ ಕಾವೇರಿಯಲ್ಲಿ ಪೂಜೆ ಮಾಡಿ ಪ್ರಾರ್ಥಿಸಲಾಗುವುದು ಎಂದು ವಿವರಿಸಿದ್ದಾರೆ.

    ಕಾವೇರಿ ಆರತಿಯ ವಿಧಿ ವಿಧಾನಗಳು:
    * 13 ಜನರಿಂದ ಆರತಿ. ಅವರಿಗೆ ತಲಾ ಇಬ್ಬರು ಸಹಾಯಕರು ಸೇರಿ ಒಟ್ಟು 40 ಜನರ ತಂಡ ಪೂಜೆಯಲ್ಲಿ ಭಾಗಿ.
    * ಮೊದಲು “ವಾತಾಪಿ ಗಣಪತಿಂ ಭಜೆ” ಮಂಗಳವಾದ್ಯದಿಂದ ಪೂಜೆ ಪ್ರಾರಂಭ.
    * ಕಾವೇರಿ ಪ್ರಾರ್ಥನೆ, ಗಣಪತಿ ಪ್ರಾರ್ಥನೆ, ಗುರು ಪ್ರಾರ್ಥನೆ, ಸಂಕಲ್ಪ.
    * ಕಾವೇರಿ ಸ್ತ್ರೋತ್ರದ ಮೂಲಕ ತೀರ್ಥಕ್ಕೆ ಪೂಜೆ, ಬಾಗಿನ ಅರ್ಪಣೆ.
    * ಬ್ರಹ್ಮ, ವಿಷ್ಣು, ಮಹೇಶ್ವರರ ಪ್ರಾರ್ಥನೆ, ಚಾಮರ ಸೇವೆ.
    * ಮೂರು ದಿಕ್ಕಿಗೂ ಶಂಖನಾದ, ದೂಪದ ಆರತಿ ಹಾಗೂ ಮಂತ್ರ ಪುಷ್ಪ ಪಠಣ
    * ಕೊನೆಯಲ್ಲಿ ಕುಂಭಾರತಿ, ನಾಗಾರತಿ, ಕಾವೇರಿ ಆರತಿಯೊಂದಿಗೆ ಪೂಜಾ ಕೈಂಕರ್ಯ ಸಂಪನ್ನ.ಇದನ್ನೂ ಓದಿ: ಅಕ್ರಮ ಬೆಟ್ಟಿಂಗ್ ಆ್ಯಪ್ ಕೇಸ್ – ಇಡಿ ವಿಚಾರಣೆಗೆ ಹಾಜರಾದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್

     

     

  • ರಂಗನತಿಟ್ಟು ಪಕ್ಷಿಧಾಮದಲ್ಲಿ ಬೋಟಿಂಗ್ ರದ್ದು

    ರಂಗನತಿಟ್ಟು ಪಕ್ಷಿಧಾಮದಲ್ಲಿ ಬೋಟಿಂಗ್ ರದ್ದು

    ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರೆದ ಹಿನ್ನೆಲೆ ರಂಗನತಿಟ್ಟು ಪಕ್ಷಿಧಾಮದಲ್ಲಿ ಬೋಟಿಂಗ್ ವ್ಯವಸ್ಥೆಯನ್ನು ರದ್ದುಗೊಳಿಸಲಾಗಿದೆ.

    ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ರಂಗನತಿಟ್ಟು ಪಕ್ಷಿಧಾಮದಲ್ಲಿ ಬೋಟಿಂಗ್‌ಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಹೋಗುತ್ತಿರುತ್ತಾರೆ. ಆದರೆ ಸದ್ಯ ಕೆಆರ್‌ಎಸ್ ಡ್ಯಾಂನಲ್ಲಿ ಒಳಹರಿವು ಹಾಗೂ ಹೊರಹರಿವು ಹೆಚ್ಚಾಗಿದ್ದು, ಕಾವೇರಿ ನದಿ ಪಾತ್ರದಲ್ಲಿ ಪ್ರವಾಹದ ಭೀತಿ ಉಂಟಾಗಿದೆ. ಇದರಿಂದಾಗಿ ಬೋಟಿಂಗ್ ರದ್ದು ಮಾಡಲಾಗಿದೆ.

    ಕಾವೇರಿ ನದಿ ರಭಸವಾಗಿ ಹರಿಯುತ್ತಿದ್ದು, ಬೋಟ್ ಮೂಲಕ ನಡುಗಡ್ಡೆ ಬಳಿ ಹೋಗುವುದಕ್ಕೆ ನಿರ್ಬಂಧ ಹೇರಲಾಗಿದೆ. ಹೀಗಾಗಿ ದೂರದಲ್ಲೇ ನಿಂತು ಪಕ್ಷಿ ನೋಡಿ ಪ್ರವಾಸಿಗರು ವಾಪಸ್ ಹೋಗುತ್ತಿದ್ದಾರೆ. ಒಳಹರಿವು 10 ಸಾವಿರ ಕ್ಯೂಸೆಕ್‌ಗೆ ಇಳಿಯುವ ತನಕ ಬೋಟಿಂಗ್‌ಗೆ ಬ್ರೇಕ್ ಹಾಕಲಾಗಿದೆ. ಹೊರಹರಿವು ಮತ್ತಷ್ಟು ಹೆಚ್ಚಾದ್ರೆ ಪಕ್ಷಿ ಸಂಕುಲಕ್ಕೂ ಎಫೆಕ್ಟ್ ಆಗುವ ಸಾಧ್ಯತೆಯಿದೆ.

    ಈಗಾಗಲೇ ನದಿ ಮಧ್ಯೆ ಇರುವ ನಡುಗಡ್ಡೆಗಳು ಅರ್ಧದಷ್ಟು ಮುಳುಗಡೆಯಾಗಿವೆ. ಒಂದು ಲಕ್ಷ ಕ್ಯೂಸೆಕ್‌ಗೆ ಹೊರಹರಿವು ಏರಿಕೆಯಾದರೆ ಭಾಗಶಃ ನಡುಗಡ್ಡೆಗಳು ಮುಳುಗುವ ಭೀತಿ ಶುರುವಾಗಿದೆ. ಆ ಸಮಯದಲ್ಲಿ ಪಕ್ಷಿಗಳ ಗೂಡು, ಮೊಟ್ಟೆಗಳು ಕೊಚ್ಚಿ ಹೋಗುವ ಆತಂಕ ಎದುರಾಗಿದೆ.

  • ಪ್ರವಾಹ ಭೀತಿ – ಕಾವೇರಿ ನದಿ ಪಾತ್ರದ ಪ್ರವಾಸಿ ತಾಣಗಳಿಗೆ ನಿರ್ಬಂಧ

    ಪ್ರವಾಹ ಭೀತಿ – ಕಾವೇರಿ ನದಿ ಪಾತ್ರದ ಪ್ರವಾಸಿ ತಾಣಗಳಿಗೆ ನಿರ್ಬಂಧ

    ಮಂಡ್ಯ: ಕೆಆರ್‌ಎಸ್ ಡ್ಯಾಂ (KRS Dam) ಕೆಳಗಿನ ಕಾವೇರಿ ನದಿ (Kaveri River) ಪಾತ್ರದಲ್ಲಿ ಪ್ರವಾಹದ ಹಿನ್ನೆಲೆ, ನದಿ ಪಾತ್ರದ ಬಳಿ ತೆರಳದಂತೆ ಜನರಿಗೆ ಎಚ್ಚರಿಕೆ ನೀಡಲಾಗಿದೆ.

    ಶ್ರೀರಂಗಪಟ್ಟಣ ತಾಲೂಕಿನ ಪ್ರವಾಸಿ ತಾಣಗಳಾದ ಬಲಮುರಿ, ಎಡಮುರಿ, ಸ್ನಾನಘಟ್ಟ, ಸಂಗಮ, ನಿಮಿಷಾಂಭ ದೇಗುಲ ಹಾಗೂ ಘೋಸಾಯ್ ಘಾಟ್‍ಗೆ ಪ್ರವೇಶಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಶ್ರೀರಂಗಪಟ್ಟಣ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ. ಕಾವೇರಿ ನದಿ ಪಾತ್ರದಲ್ಲಿ ನಡೆಯುವ ಧಾರ್ಮಿಕ ಪಿಂಡ ಪ್ರಧಾನ ಪೂಜೆಗೂ ನಿರ್ಬಂಧ ವಿಧಿಸಲಾಗಿದೆ. ಇದನ್ನೂ ಓದಿ: ಕೈದಿಗಳು 6 ಸಾವಿರ ಕೊಟ್ರೆ ಕೀ ಪ್ಯಾಡ್ ಫೋನ್, 15,000ಕ್ಕೆ ಆ್ಯಂಡ್ರಾಯ್ಡ್‌ ಫೋನ್ – ಮೈಸೂರು ಕೇಂದ್ರ ಕಾರಾಗೃಹದ ಸ್ಥಿತಿ ಬಿಚ್ಚಿಟ್ಟ ಸರ್ಕಾರಿ ಸದಸ್ಯ

    ನದಿ ಪಾತ್ರದ ಪ್ರಮುಖ ಆಯಕಟ್ಟಿನ ಸ್ಥಳದಲ್ಲಿ ಪೊಲೀಸರ ನಿಯೋಜನೆ ಮಾಡಲಾಗಿದೆ. ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮ ಜರುಗಿಸುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಪ್ರಪಾತದ ಬಳಿ ಬಸ್ ಪಲ್ಟಿ – ಪ್ರಾಣಾಪಾಯದಿಂದ 25 ಪ್ರಯಾಣಿಕರು ಪಾರು

  • ಮೈಸೂರು | ಫೆ.10ರಿಂದ ಮೂರು ದಿನ ತ್ರಿವೇಣಿ ಸಂಗಮದಲ್ಲಿ ಕುಂಭಮೇಳ

    ಮೈಸೂರು | ಫೆ.10ರಿಂದ ಮೂರು ದಿನ ತ್ರಿವೇಣಿ ಸಂಗಮದಲ್ಲಿ ಕುಂಭಮೇಳ

    ಮೈಸೂರು: ನಾಳೆಯಿಂದ (ಫೆ.10) ಮೂರು ದಿನಗಳಕಾಲ ಮೈಸೂರು (Mysuru) ಜಿಲ್ಲೆಯ ಟಿ.ನರಸೀಪುರದ (T.Nnaraseepur) ತ್ರಿವೇಣಿ ಸಂಗಮದಲ್ಲಿ (Triveni Sangam) 13 ನೇ ಕುಂಭಮೇಳ (Kumbh Mela) ನಡೆಯಲಿದೆ.

    ತ್ರಿವೇಣಿ ಸಂಗಮ ಸ್ಥಳಕ್ಕೆ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ ಇಂದು ಭೇಟಿ ನೀಡಿ ಕುಂಭಮೇಳದ ಸಿದ್ಧತಾ ಕಾರ್ಯ ಪರಿಶೀಲಿಸಿದರು. ಪುಣ್ಯಸ್ನಾನ ಸ್ಥಳ ಹಾಗೂ ಮೂಲಭೂತ ಸೌಕರ್ಯದ ಬಗ್ಗೆ ಪರಿಶೀಲನೆ ನಡೆಸಿದರು. ಕುಂಭಮೇಳದಲ್ಲಿ ಯಾವುದೇ ಅಹಿತಕರ ಘಟನೆ ಜರುಗದಂತೆ ಮುಂಜಾಗ್ರತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಅವರು ಸೂಚಿಸಿದರು.

    ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ಮಹಾ ಕುಂಭಮೇಳ ನಡೆಯುತ್ತಿದ್ದದೆ. ಇದೇ ವೇಳೆ ಕರ್ನಾಟಕದ ಪವಿತ್ರ ಕ್ಷೇತ್ರವೆಂದೇ ಹೆಸರಾದ ಟಿ.ನರಸಿಪುರದ ತ್ರಿವೇಣಿ ಸಂಗಮದಲ್ಲಿ ಸೋಮವಾರದಿಂದ ಕುಂಭಮೇಳ ನಡೆಯಲಿದೆ. ಬೆ. 9ರಿಂದ 9:30ರೊಳಗೆ ಶುಭ ಮೀನ ಲಗ್ನ ಮತ್ತು ಮಧ್ಯಾಹ್ನ 12ರಿಂದ 1 ಗಂಟೆವರೆಗೆ ವೃಷಭ ಲಗ್ನದಲ್ಲಿ ಕುಂಭಮೇಳದ ಪುಣ್ಯಸ್ನಾನ ಮಾಡಲು ಮುಹೂರ್ತ ನಿಗದಿ ಮಾಡಲಾಗಿದೆ.

    ಧಾರ್ಮಿಕ ಕಾರ್ಯಕ್ರಮಗಳು: ಫೆ.10ರಂದು ತ್ರಯೋದಶಿ, ಪುಷ್ಯ ಪ್ರಾತಃಕಾಲ 9 ಗಂಟೆಗೆ ಶ್ರೀ ಅಗಸ್ತೇಶ್ವರ ಸನ್ನಿಧಿಯಲ್ಲಿ, ಅನುಜ್ಞೆ, ಪುಣ್ಯಾಹ, ಗಣಹೋಮ, ಪೂರ್ಣಾಹುತಿ, ಅಭಿಷೇಕ, ಮಹಾಮಂಗಳಾರತಿ ನೆರವೇರಿಸಲಾಗುತ್ತದೆ. ಸಂಜೆ 5 ಗಂಟೆಗೆ ಧರ್ಮಸಭೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಅಥಿತಿ ಗಣ್ಯರಿಂದ ಉದ್ಘಾಟನೆ ಮತ್ತು ಧ್ವಜಾರೋಹಣ ನೆರವೇರಲಿದೆ.

  • ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ – ವರ್ಷದಲ್ಲಿ 3ನೇ ಬಾರಿಗೆ ಭರ್ತಿಯಾದ ಕೆಆರ್‌ಎಸ್‌ 

    ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ – ವರ್ಷದಲ್ಲಿ 3ನೇ ಬಾರಿಗೆ ಭರ್ತಿಯಾದ ಕೆಆರ್‌ಎಸ್‌ 

    ಮಂಡ್ಯ: ಕಾವೇರಿ (Kaveri River) ಜಲಾನಯನ ಪ್ರದೇಶದಲ್ಲಿ ಉತ್ತಮ (Rain) ಹಿಂಗಾರುಮಳೆಯಾಗುತ್ತಿದೆ. ಇದರಿಂದ ಕೆಆರ್‌ಎಸ್‌ ಡ್ಯಾಮ್‍ಗೆ (KRS Dam) ಒಳಹರಿವು ಮತ್ತೆ ಹೆಚ್ಚಾಗಿದೆ.

    ಡ್ಯಾಮ್‍ಗೆ 8,547 ಕ್ಯುಸೆಕ್ ಒಳಹರಿವು ಬರುತ್ತಿದೆ. ಒಳಹರಿವಿನ ಪ್ರಮಾಣ ಹೆಚ್ಚಾದ ಬೆನ್ನಲ್ಲೇ ಕೆಆರ್‌ಎಸ್ ಡ್ಯಾಮ್ ಸಂಪೂರ್ಣ ಭರ್ತಿಯಾಗಿದೆ. ಈ ಮೂಲಕ ವರ್ಷದಲ್ಲಿ 3ನೇ ಬಾರಿಗೆ ಡ್ಯಾಮ್ ಸಂಪೂರ್ಣ ಭರ್ತಿಯಾದಂತಾಗಿದೆ. ನೀರಿನ ಮಟ್ಟ 124.80 ಅಡಿ ತಲುಪಿದೆ.

    ಕಳೆದ ಜು.27ರಂದು ಡ್ಯಾಮ್ ಸಂಪೂರ್ಣ ಭರ್ತಿಯಾಗಿತ್ತು. ಇದೀಗ ಮತ್ತೆ ಸಂಪೂರ್ಣ ಭರ್ತಿಯಾಗಿ ಕಣ್ಮನ ಸೆಳೆಯುತ್ತಿದೆ. ಸಂಪೂರ್ಣ ಭರ್ತಿಯಾಗಿರುವುದರಿಂದ 8,287 ಕ್ಯುಸೆಕ್ ನೀರನ್ನು ಡ್ಯಾಮ್‍ನಿಂದ ಬಿಡುಗಡೆ ಮಾಡಲಾಗಿದೆ.

    ನೀರಿನ ಮಟ್ಟ ಮತ್ತೆ ಏರಿಕೆಯಾಗಿದ್ದರಿಂದ, ಬೇಸಿಗೆ ಬೆಳೆಗೂ ನೀರಿನ ಸಮಸ್ಯೆ ಆಗುವುದಿಲ್ಲ ಎಂದು ಮಂಡ್ಯ ರೈತರು ಸಂಭ್ರಮಿಸಿದ್ದಾರೆ. ಅಲ್ಲದೇ ಈ ಬಾರಿ ಬೇಸಿಗೆಯಲ್ಲಿ ಬೆಂಗಳೂರು ಜನರಿಗೂ ಕುಡಿಯುವ ನೀರಿನ ಸಮಸ್ಯೆ ಇರುವುದಿಲ್ಲ.

  • KRS ಡ್ಯಾಂನಿಂದ ಮತ್ತೆ ತಮಿಳುನಾಡಿಗೆ ನೀರು

    KRS ಡ್ಯಾಂನಿಂದ ಮತ್ತೆ ತಮಿಳುನಾಡಿಗೆ ನೀರು

    ಮಂಡ್ಯ: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದ ಬೆನ್ನಲ್ಲೇ ಕೆಆರ್‌ಎಸ್ ಅಣೆಕಟ್ಟೆಯಿಂದ (KRS Dam) ಕಾವೇರಿ ನದಿ (Kaveri River) ಮೂಲಕ ತಮಿಳುನಾಡಿಗೆ (Tamil Nadu) ಮಂಗಳವಾರ ರಾತ್ರಿಯಿಂದಲೇ 5000 ಕ್ಯೂಸೆಕ್‌ಗೂ ಅಧಿಕ ಪ್ರಮಾಣದಲ್ಲಿ ನೀರು ಬಿಡಲಾಗುತ್ತಿದೆ.

    ಕೆಆರ್‌ಎಸ್ ಡ್ಯಾಂನ +80ರ ಗೇಟ್ ಮೂಲಕ ನೀರನ್ನು ಹರಿಸಲಾಗುತ್ತಿದೆ. ರೈತರ ಆಕ್ರೋಶದ ನಡುವೆ ರಾತ್ರಿಯಿಂದಲೇ 7,380 ಕ್ಯೂಸೆಕ್ ನೀರನ್ನು ಬಿಡಲಾಗುತ್ತಿದೆ. ನೀರು ಬಿಡುಗಡೆಯಿಂದ ಕೆಆರ್‌ಎಸ್ ಡ್ಯಾಂನ ನೀರಿನ ಮಟ್ಟ ಕುಸಿಯಲಿದೆ. ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನು ವಿರೋಧಿಸಿ ಮಂಡ್ಯದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯ ಕಾವು ಹೆಚ್ಚಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಇಂದು ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

    ಕೆಆರ್‌ಎಸ್ ಡ್ಯಾಂನ ಇಂದಿನ ನೀರಿನ ಮಟ್ಟ:
    ಗರಿಷ್ಠ ಮಟ್ಟ – 124.80 ಅಡಿಗಳು
    ಇಂದಿನ ಮಟ್ಟ – 101.58 ಅಡಿಗಳು
    ಗರಿಷ್ಠ ಸಾಮರ್ಥ್ಯ – 49.452 ಟಿಎಂಸಿ
    ಇಂದಿನ ಸಾಮರ್ಥ್ಯ – 24.075 ಟಿಎಂಸಿ
    ಒಳ ಹರಿವು – 2,300 ಕ್ಯೂಸೆಕ್
    ಹೊರ ಹರಿವು – 7,380 ಕ್ಯೂಸೆಕ್ ಇದನ್ನೂ ಓದಿ: ಸರ್ಕಾರಿ ಭೂಮಿ ಒತ್ತುವರಿ – ಪ್ರಕಾಶ್ ರಾಜ್‌ಗೆ ನೋಟಿಸ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • CWRC ಶಿಫಾರಸ್ಸು ಎತ್ತಿ ಹಿಡಿದ CWMA – ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಕುಡಿಯುವ ನೀರಿಗೆ ಸಂಕಷ್ಟ ಸಾಧ್ಯತೆ

    CWRC ಶಿಫಾರಸ್ಸು ಎತ್ತಿ ಹಿಡಿದ CWMA – ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಕುಡಿಯುವ ನೀರಿಗೆ ಸಂಕಷ್ಟ ಸಾಧ್ಯತೆ

    ನವದೆಹಲಿ: ನಿತ್ಯ 5 ಸಾವಿರ ಕ್ಯೂಸೆಕ್ ನಂತೆ 15 ದಿನಗಳ ಕಾಲ ನೀರು ಹರಿಸಲು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಮಾಡಿದ ಶಿಫಾರಸ್ಸನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಎತ್ತಿ ಹಿಡಿದಿದ್ದು ಭವಿಷ್ಯದಲ್ಲಿ ರಾಜ್ಯದ ಕಾವೇರಿ (Kaveri River) ಅಚ್ಚುಕಟ್ಟು ಪ್ರದೇಶದಲ್ಲಿ ಕುಡಿಯುವ ನೀರಿನ ಸಂಕಷ್ಟ ಎದುರಿಸುವ ಸನ್ನಿವೇಶ ನಿರ್ಮಾಣವಾಗಿದೆ.

    ತಮಿಳುನಾಡಿಗೆ (Tamil Nadu) ನೀರು ಹರಿಸುವ ಸಂಬಂಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮಂಗಳವಾರ ದೆಹಲಿಯಲ್ಲಿ ಸಭೆ ನಡೆಸಿತು. ಸಭೆಯಲ್ಲಿ ತಮಿಳುನಾಡು ಪರ ಹಾಜರಾಗಿದ್ದ ಎಸಿಎಸ್ ಸಂದೀಪ್ ಸಕ್ಸೇನಾ ಕರ್ನಾಟಕ ಕೂಡಲೇ 50.10 ಟಿಎಂಸಿ ನೀರು ಹರಿಸಬೇಕು ಎಂದು ಹೇಳಿದರು. 80.37 ಟಿಎಂಸಿ ನೀರು ಕರ್ನಾಟಕ (Karnataka) ಹರಿಸಬೇಕಿತ್ತು. ಆದರೆ ಜೂನ್ 1 ರಿಂದ ಅಗಸ್ಟ್ 27 ವರೆಗೂ 30.17 ಟಿಎಂಸಿ ನೀರು ಹರಿಸಿದ್ದು ಕೂಡಲೇ ಬಾಕಿ ನೀರು ಬಿಡಬೇಕು ಎಂದು ಒತ್ತಡ ಹೇರಿತು.

    ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕರ್ನಾಟಕ ಪರ ಭಾಗಿಯಾಗಿದ್ದ ಎಸಿಎಸ್ ರಾಕೇಶ್ ಸಿಂಗ್, 47% ಮಳೆಯ ಕೊರತೆ ಇದೆ, ಜಲಾಶಯಗಳಲ್ಲಿ ನೀರಿನ ಸಂಗ್ರಹ ಇಲ್ಲ, ಕರ್ನಾಟಕದ ಗೇಟುಗಳನ್ನು ತೆರೆಯಲು ಸಾಧ್ಯವೇ ಇಲ್ಲ. ಒಂದು ವೇಳೆ ಕರ್ನಾಟಕ ನೀರು ನೀಡಿದರೆ ಕುಡಿಯುವ ನೀರಿಗೂ ಕ್ಷಾಮ ಎದುರಾಗಲಿದೆ. ಕರ್ನಾಟಕ ನಿತ್ಯ 3,000 ಕ್ಯೂಸೆಕ್ ನೀರು ಹರಿಸಲು ಮಾತ್ರ ಸಮರ್ಥವಾಗಿದೆ ಎಂದು ಹೇಳಿದರು. ಇದನ್ನೂ ಓದಿ: ದ್ರವರೂಪದ ಚಿನ್ನ, ಬಾಹ್ಯಾಕಾಶದಲ್ಲಿ ವಾಸ್ತವ್ಯ, ಮಾನವ ಸಾಹಸಗಳಿಗೆ ಹಾದಿ ಮಾಡಿಕೊಡಲಿದೆ ಚಂದ್ರಯಾನ-3ರ ಯಶಸ್ಸು

    ಕರ್ನಾಟಕದ ವಾದಕ್ಕೆ ತಮಿಳುನಾಡು ತೀವ್ರ ಆಕ್ಷೇಪ ವ್ಯಕ್ತಪಡಿಸಿತು. ನಿತ್ಯ 24,000 ಕ್ಯೂಸೆಕ್‌ನಂತೆ 10 ದಿನಗಳ ಕಾಲ ಬಿಡಬೇಕು ಎಂದು ಒತ್ತಾಯಿಸಿತು. ಇದಕ್ಕೆ ಮಧ್ಯಪ್ರವೇಶ ಮಾಡಿದ ಪ್ರಾಧಿಕಾರದ ಅಧಿಕಾರಿಗಳು ನೀರು ಬಿಡಲು ಸಾಧ್ಯವಿಲ್ಲ ಎನ್ನಲಾಗದು ಈ ಹಿನ್ನೆಲೆ ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿದ ಆದೇಶದನ್ವಯ ನೀರು ಹರಿಸಿ ಎಂದು ಆದೇಶಿಸಿತು.

    ಪ್ರಾಧಿಕಾರ ಈ ಆದೇಶಕ್ಕೆ ಕರ್ನಾಟಕ, ತಮಿಳುನಾಡು ಎರಡು ರಾಜ್ಯಗಳು ಆಕ್ಷೇಪ ವ್ಯಕ್ತಪಡಿಸಿವೆ. ಈ ಬಗ್ಗೆ ಸುಪ್ರೀಂಕೋರ್ಟ್‌ನಲ್ಲಿ ಶುಕ್ರವಾರ ನಡೆಯಲಿರುವ ವಿಚಾರಣೆ ವೇಳೆ ತಮ್ಮ ವಾದವನ್ನು ಮತ್ತೊಮ್ಮೆ ಪ್ರತಿಪಾದಿಸುವ ನಿರೀಕ್ಷೆಗಳಿದೆ. ಈ ನಡುವೆ ಪ್ರಾಧಿಕಾರ ಇದೇ ಆದೇಶವನ್ನು ಅಂಕಿ ಅಂಶಗಳ ಸಮೇತ ಸುಪ್ರೀಂಕೋರ್ಟ್‌ಗೆ ವರದಿ ನೀಡಲಿದೆ. ಇದನ್ನೂ ಓದಿ: ನವೆಂಬರ್ 5 ಕೆ-ಸೆಟ್ ಪರೀಕ್ಷೆ: ಕೆಇಎ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮೇಕೆನೂ ಇಲ್ಲ, ದಾಟು ಇಲ್ಲ: ಡಿಕೆಶಿ ವಿರುದ್ಧ ಅಶೋಕ್ ಲೇವಡಿ

    ಮೇಕೆನೂ ಇಲ್ಲ, ದಾಟು ಇಲ್ಲ: ಡಿಕೆಶಿ ವಿರುದ್ಧ ಅಶೋಕ್ ಲೇವಡಿ

    ಬೆಂಗಳೂರು: ಮೇಕೆದಾಟು (Makedatu) ಅಂದ್ರು, ಈಗ ಮೇಕೆನೂ ಇಲ್ಲ, ದಾಟು ಇಲ್ಲ. ಅಧಿಕಾರ ಬಂದ ಮೇಲೆ ಕಾವೇರಿನೂ (Kaveri) ಇಲ್ಲ, ಮೇಕೆದಾಟು ಇಲ್ಲ ಎಂದು ಮಾಜಿ ಸಚಿವ ಆರ್. ಅಶೋಕ್ (R Ashok) ಲೇವಡಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಮಾತನಾಡಿದ ಅವರು, ನೀರು ಬಿಟ್ಟು ಕರ್ನಾಟಕದ ರೈತರಿಗೆ ಸರ್ಕಾರ ಅನ್ಯಾಯ ಮಾಡಿದೆ. ಈಗ ನೀರು ಬಿಟ್ಟ ಮೇಲೆ ಕೊನೆಗೂ ಸರ್ವಪಕ್ಷ ಸಭೆ ಕರೆದಿದ್ದಾರೆ. ಸ್ಟಾಲಿನ್ ಜೊತೆಗೆ ಒಳ ಒಪ್ಪಂದ ಇದು ಎಂದು ಆರೋಪಿಸಿದರು. ಇದನ್ನೂ ಓದಿ: ನಟ ಪ್ರಕಾಶ್ ರೈ ವಿರುದ್ಧ ಸಚಿವ ಪರಮೇಶ್ವರ್, ಮಾಜಿ ಸಚಿವ ಅಶೋಕ್ ಗರಂ

    ಇದೇ ವೇಳೆ ಎಸ್‌ಟಿ ಸೋಮಶೇಖರ್ ಜೊತೆ ಸಭೆ ಕರೆದಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಆರ್ ಅಶೋಕ್, ಸೋಮಶೇಖರ್ ಜೊತೆಗೆ ಮೊನ್ನೆಯಿಂದ ಮಾತನಾಡುತ್ತಿದ್ದೇನೆ. ಮಂತ್ರಿಯಾಗಿ ಅಧಿಕಾರ ಅನುಭವಿಸಿದ್ದಾರೆ. ಹೆಬ್ಬಾರ್ ಹಾಗೂ ಸೋಮಶೇಖರ್ ಹೋಗಲ್ಲ ಎಂದು ಹೇಳಿದ್ದಾರೆ. ಯಾರು ಸಹ ಕಾಂಗ್ರೆಸ್‌ಗೆ ಹೋಗಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಡಿಕೆ ಶಿವಕುಮಾರ್ ಲೂಟಿ ಹೊಡೆಯೋದು ಬಿಟ್ಟರೆ ತಮ್ಮನಾಗಿ ಸ್ವೀಕಾರ ಮಾಡ್ತೀನಿ: ಕುಮಾರಸ್ವಾಮಿ ಷರತ್ತು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸ್ಟಾಲಿನ್ ಸ್ನೇಹಕ್ಕೆ ಕರ್ನಾಟಕ ಬಲಿ, ಮಂಡ್ಯ ಜನತೆಗೆ ಕಾಂಗ್ರೆಸ್ ಶಾಪ: ಸಿಟಿ ರವಿ ಕಿಡಿ

    ಸ್ಟಾಲಿನ್ ಸ್ನೇಹಕ್ಕೆ ಕರ್ನಾಟಕ ಬಲಿ, ಮಂಡ್ಯ ಜನತೆಗೆ ಕಾಂಗ್ರೆಸ್ ಶಾಪ: ಸಿಟಿ ರವಿ ಕಿಡಿ

    – ಚುನಾವಣೆಗೂ ಮುನ್ನ ನೀರಿಗಾಗಿ ಪಾದಯಾತ್ರೆ ಮಾಡಿದ್ದರು
    – ಮಗು ಅಳುವುದಕ್ಕೂ ಮೊದಲೇ ಹಾಲು ಕೊಡ್ತಿದ್ದಾರೆ

    ಮಂಡ್ಯ: ಕರ್ನಾಟಕ ಕಾಂಗ್ರೆಸ್ (Karnataka Congress) ಐಎನ್‌ಡಿಐಎ (INDIA) ಮೈತ್ರಿಗಾಗಿ ನೀರು ಬಿಟ್ಟಿದೆ. ಸ್ಟಾಲಿನ್ ಸ್ನೇಹಕ್ಕೆ (MK Stalin) ಕರ್ನಾಟಕ ಬಲಿಯಾಗುತ್ತಿದೆ. ಕಾಂಗ್ರೆಸ್ ಮಂಡ್ಯ (Mandya) ಜನರಿಗೆ ಶಾಪವಾಗುತ್ತಿದ್ದು, ತಮಿಳುನಾಡಿಗೆ (Tamil Nadu) ವರವಾಗುತ್ತಿದೆ. ನಿಮ್ಮ ಲಾಭಕ್ಕೆ ರಾಜ್ಯದ ಜನತೆಗೆ ನೀವು ಶಾಪ ಆಗಿದ್ದೀರಿ ಎಂದು ಮಾಜಿ ಸಚಿವ ಸಿಟಿ ರವಿ (CT Rvai) ಕಿಡಿಕಾರಿದ್ದಾರೆ.

    ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಕೆಆರ್‌ಎಸ್ ಡ್ಯಾಂನಿಂದ (KRS Dam) ತಮಿಳುನಾಡಿಗೆ ನೀರು ಹರಿಸುತ್ತಿರುವ ವಿಚಾರವಾಗಿ ಮಾತನಾಡಿದ ಅವರು, ಕಾವೇರಿ (Kaveri River) ಕರ್ನಾಟಕದ ಸ್ವಾಭಿಮಾನದ ಪ್ರತೀಕ ಮಾತ್ರವಲ್ಲ ಜೀವನಾಡಿ. ಮಂಡ್ಯ, ಮೈಸೂರು ಭಾಗದ ರೈತರ ಬದುಕನ್ನು ಹಸನು ಮಾಡಿದೆ. ಕಾವೇರಿ ಇಲ್ಲದೇ ಬೆಂಗಳೂರು ಉಳಿಯೋಕು ಆಗಲ್ಲ ಎಂದಿದ್ದಾರೆ.

    ಕಾವೇರಿ ವಿವಾದ ಇವತ್ತು ನಿನ್ನೆಯದಲ್ಲ. ಅದಕ್ಕೆ ಶತಮಾನದ ಇತಿಹಾಸ ಇದೆ. ಚುನಾವಣೆಗೂ ಮುನ್ನ ಕಾಂಗ್ರೆಸ್ ಮುಖಂಡರು, ಡಿಕೆಶಿ ಸೇರಿ ಎಲ್ಲರೂ ಪಾದಯಾತ್ರೆ ಮಾಡಿದ್ರು. ನಮ್ಮ ನೀರು, ನಮ್ಮ ಹಕ್ಕು ಅಂತ ಪಾದಯಾತ್ರೆ ಮಾಡಿದ್ರು. ರೈತರು ಎಂದರೆ ಎಲ್ಲರೂ ಒಂದೇ. ಕರ್ನಾಟಕ-ತಮಿಳುನಾಡು ಎನ್ನುವ ಬೇಧಭಾವ ಇಲ್ಲ. ಆದರೆ ಸಂಕಷ್ಟ ಇದ್ದಾಗ ಸೂತ್ರದ ಅನುಗುಣವಾಗಿ ನೀರಿನ ವಿಚಾರದಲ್ಲಿ ವ್ಯವಹಾರ ಮಾಡಬೇಕು. ಈಗ ಮಳೆ ಇಲ್ಲ, ಸಂಕಷ್ಟ ಇದೆ. ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡು ಅಳುವುದಕ್ಕೂ ಮೊದಲೇ ನೀರು ಕೊಟ್ಟಿದ್ದೀರಿ. ಮಕ್ಕಳು ಅತ್ತಾಗ ಮಾತ್ರ ತಾಯಿ ಹಾಲು ಕೊಡೋದು. ಆದರೆ ತಮಿಳುನಾಡು ಕೇಳೋದಕ್ಕೂ ಮೊದಲೇ ನೀರು ಬಿಟ್ಟಿದ್ದೀರಿ ಎಂದು ವಾಗ್ದಾಳಿ ನಡೆಸಿದರು.

    ಸರ್ಕಾರ ಐಎನ್‌ಡಿಐಎ ಮೈತ್ರಿಗೋಸ್ಕರ ನೀರು ಬಿಡುತ್ತಿದೆ. ಸ್ಟಾಲಿನ್ ಸ್ನೇಹಕ್ಕೆ ಕರ್ನಾಟಕ ಬಲಿಯಾಗುತ್ತಿದೆ. ಕಾಂಗ್ರೆಸ್ ಮಂಡ್ಯ ಜನರಿಗೆ ಶಾಪವಾಗಿದ್ದು ತಮಿಳುನಾಡಿಗೆ ವರವಾಗುತ್ತಿದೆ. ನಿಮ್ಮ ಲಾಭಕ್ಕೆ ರಾಜ್ಯದ ಜನತೆಗೆ ನೀವು ಶಾಪ ಆಗಿದ್ದೀರಿ. ಸಂಕಷ್ಟದ ಸೂತ್ರ ಮರೆತು ನೀರು ಬಿಟ್ಟಿದ್ದೀರಿ. ಸಂಕಷ್ಟದ ಸೂತ್ರ ಬದಿಗೊತ್ತಿ ರಾಜಕೀಯ ಮಾಡುತ್ತಿದ್ದೀರಿ. ನಾಳೆ ಸರ್ವಪಕ್ಷಗಳ ಸಭೆ ಮಾಡುತ್ತಿದ್ದೀರಿ. ನಿಮ್ಮ ಪಾಪಕ್ಕೆ ಸೀಲ್ ಹಾಕಿಸಿಕೊಳ್ಳಲು. ಹೇಗೂ ಒಂದಷ್ಟು ಜನ ಹೊಗಳು ಭಟ್ಟರನ್ನು ಇಟ್ಟುಕೊಂಡಿದ್ದೀರಿ. ಅವರ ಬಳಿ ಸೀಲ್ ಹಾಕೊಸಿಕೊಳ್ಳೊಕೆ ಸಭೆ ಮಾಡುತ್ತಿದ್ದೀರಿ. ತಮಿಳುನಾಡಿಗೆ ಮೊದಲೇ ನೀರು ಬಿಟ್ಟು ಈಗ ಸಭೆ ಮಾಡಿದರೆ ಏನು ಪ್ರಯೋಜನ? ನೀರು ಬಿಡುವ ಮೊದಲೇ ಸಭೆ ಮಾಡಬೇಕಿತ್ತು. ಇದು ಕಾಂಗ್ರೆಸ್ ಕರ್ನಾಟಕಕ್ಕೆ ಮಾಡಿರುವ ಅನ್ಯಾಯ ಎಂದರು. ಇದನ್ನೂ ಓದಿ: ಆಪರೇಷನ್ ಹಸ್ತ ಬೆನ್ನಲ್ಲೇ ಯಶವಂತಪುರ ಕ್ಷೇತ್ರಕ್ಕೆ ಬಂಪರ್

    ರಾಜ್ಯದಲ್ಲಿ ಉತ್ತಮ ಮಳೆ ಆಗಿದ್ದರೆ ನೀರು ಬಿಡಿ. ಆದರೆ ಬರಗಾಲದಲ್ಲೂ ನೀರು ಬಿಡುವ ಅವಶ್ಯಕತೆ ಏನಿತ್ತು? ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೀರಿ. ಶಕ್ತಿ ಯೋಜನೆ, ಗೃಹಜ್ಯೋತಿಗಳನ್ನು ತಂದಿದ್ದೀರಿ. ವಾಸ್ತವವಾಗಿ ರಾಜ್ಯದಲ್ಲಿ ವಿದ್ಯುತ್ ಪೂರೈಕೆ ಆಗುತ್ತಿಲ್ಲ. ಕಾಂಗ್ರೆಸ್ ಸರ್ಕಾರ ಬಂದಮೇಲೆ ರಾಜ್ಯ ಕತ್ತಲಲ್ಲಿ ಮುಳುಗಿದೆ. ರಾಜ್ಯಕ್ಕೆ 15-16 ಸಾವಿರ ಮೆಗಾ ವ್ಯಾಟ್ ಪವರ್ ಬೇಕು. ಆದರೆ ಇಲ್ಲಿ ಉತ್ಪಾದನೆಯೇ ಆಗುತ್ತಿಲ್ಲ. ಕೇವಲ 8-9 ಸಾವಿರ ಮೆಗಾವ್ಯಾಟ್ ಉತ್ಪಾದನೆ ಆಗುತ್ತಿದೆ. ರಾಜ್ಯ ಕತ್ತಲಲ್ಲಿ ಮುಳುಗಿದೆ. ಆದರೆ ಉಚಿತ ಕರೆಂಟ್ ಹಾಸ್ಯಾಸ್ಪದ. ಮೊದಲು ಉತ್ಪಾದನೆ ಮಾಡಿ, ಬಳಿಕ ಉಚಿತ ವಿದ್ಯುತ್ ಕೊಡಿ ಎಂದು ಹೇಳಿದರು.

    ಕಾಂಗ್ರೆಸ್ ಕಾಲ್ಗುಣ ರಾಜ್ಯದಲ್ಲಿ ಮಳೆ ಆಗುತ್ತಿಲ್ಲ. ಅದು ಕಾಕತಾಳೀಯವೋ ಅಥವಾ ಪ್ರಕೃತಿಯೋ ಗೊತ್ತಿಲ್ಲ. ಮೊದಲೇ ಇವಕ್ಕೆ ದೇವರ ಮೇಲೆ ನಂಬಿಕೆ ಇಲ್ಲ. ಮತ್ತೆ ದೇವರು ಹೇಗೆ ಮಳೆಬೆಳೆ ಕೊಡ್ತಾನೆ? ಅದು ನಂಬಿಕೆಯೋ ಅಥವಾ ಮೂಢನಂಬಿಕೆಯೋ ಗೊತ್ತಿಲ್ಲ. ದೇವರ ಮೇಲೆ ಭಯಭಕ್ತಿ ಇಲ್ಲದ ಇವರ ಕಾಲ್ಗುಣ ಇದು. ಕಾಂಗ್ರೆಸ್ ಸರ್ಕಾರಕ್ಕೆ ಶ್ವೇತ ಪತ್ರದ ಅವ್ಯಶ್ಯಕತೆ ಇಲ್ಲ. ಜಿಲ್ಲಾಧಿಕಾರಿ ಕಾರಿಗೆ ಡೀಸೆಲ್ ಇಲ್ಲ, ಮಕ್ಕಳಿಗೆ ಮೊಟ್ಟೆ ಇಲ್ಲ. ಕೆಎಸ್‌ಆರ್‌ಟಿಸಿ ಸಿಬ್ಬಂದಿಗೆ ಸಂಬಳವೇ ಇಲ್ಲ. ಇನ್ನೂ ಎಣ್ಣೆ ರೇಟ್ ಹೇಗಿದೆ ಅಂತ ಕುಡಿಯುವವರಿಗೆ ಗೊತ್ತು, ನನಗೆ ಗೊತ್ತಿಲ್ಲ. ಮಧ್ಯಮವರ್ಗದವರಿಗೆ ಈ ಸರ್ಕಾರ ಬರೆ ಮೇಲೆ ಬರೆ ಹಾಕ್ತಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ:  ಮಹಿಳಾ ಪ್ರಯಾಣಿಕರಿಂದ ಕೆಕೆಆರ್‌ಟಿಸಿ ಆದಾಯ ಭಾರೀ ಏರಿಕೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತಮಿಳುನಾಡಿಗೆ ಮತ್ತಷ್ಟು ನೀರು – 105 ಅಡಿಗೆ ಕುಸಿದ ಕೆಆರ್‌ಎಸ್ ಡ್ಯಾಂ ನೀರಿನ ಮಟ್ಟ

    ತಮಿಳುನಾಡಿಗೆ ಮತ್ತಷ್ಟು ನೀರು – 105 ಅಡಿಗೆ ಕುಸಿದ ಕೆಆರ್‌ಎಸ್ ಡ್ಯಾಂ ನೀರಿನ ಮಟ್ಟ

    ಮಂಡ್ಯ: ಕೆಆರ್‌ಎಸ್ ಡ್ಯಾಂನಿಂದ (KRS Dam) ತಮಿಳುನಾಡಿಗೆ (Tamil Nadu) ನೀರನ್ನು ಕಳೆದ ಹಲವು ದಿನಗಳಿಂದ ನಿರಂತರವಾಗಿ ಹೆಚ್ಚು ಹೆಚ್ಚು ಪ್ರಮಾಣದಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಇದೀಗ ಕೆಆರ್‌ಎಸ್ ಡ್ಯಾಂನ ನೀರಿನ ಮಟ್ಟ 105 ಅಡಿಗೆ ಕುಸಿತ ಕಂಡಿದೆ. ನೀರಿನ ಮಟ್ಟ ದಿನೇ ದಿನೇ ಕುಸಿಯುತ್ತಿದ್ದರೂ ರಾಜ್ಯ ಸರ್ಕಾರ ಮಾತ್ರ ಕೈಕಟ್ಟಿ ಕುಳಿತಿದೆ.

    ಕೆಆರ್‌ಎಸ್ ಡ್ಯಾಂನಲ್ಲಿ ನೀರಿನ ಪ್ರಮಾಣ ಕುಸಿಯುತ್ತಿರುವುದರಿಂದ ಕಾವೇರಿ ಕೊಳ್ಳದ ರೈತರಲ್ಲಿ ಕಾವೇರಿ ಒಡಲು ಬರಿದಾಗುವ ಆತಂಕ ಮೂಡಿದೆ. ರಾಜ್ಯ ಸರ್ಕಾರ ಅನ್ನದಾತರ ಮಾತಿಗೂ ಕ್ಯಾರೆ ಎನ್ನದ ಹಿನ್ನೆಲೆ ಮಂಡ್ಯ, ಮೈಸೂರು, ಚಾಮರಾಜನಗರ ಸೇರಿ ಹಲವೆಡೆ ಪ್ರತಿಭಟನೆ ಮುಂದುವರಿದಿದೆ. ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸುವಂತೆ ಆಗ್ರಹಿಸಿದ್ದಾರೆ.

    ಈ ಹೋರಾಟದ ನಡುವೆಯೂ ಇಂದು ಕೂಡಾ ತಮಿಳುನಾಡಿಗೆ 12,631 ಕ್ಯೂಸೆಕ್ ನೀರು ಬಿಡುಗಡೆಯಾಗುತ್ತಿದೆ. ಡ್ಯಾಂನಿಂದ ಒಟ್ಟಾರೆ 15,247 ಕ್ಯೂಸೆಕ್ ಹೊರಹರಿವಿದೆ. ಅಷ್ಟಾಗಿ ಒಳಹರಿವು ಪ್ರಮಾಣ ಏರಿಕೆ ಕಾಣಿಸುತ್ತಿಲ್ಲ. ಕೆಆರ್‌ಎಸ್ ಡ್ಯಾಂಗೆ ಕೇವಲ 4,983 ಕ್ಯೂಸೆಕ್ ನೀರು ಮಾತ್ರವೇ ಹರಿದು ಬರುತ್ತಿದೆ.

    ಡ್ಯಾಂನಲ್ಲಿ ನೀರು ಸಂಗ್ರಹಣೆಗೆ ಗರಿಷ್ಠ ಮಟ್ಟ 124.80 ಅಡಿ ಇದೆ. ಸದ್ಯ 105.70 ಅಡಿ ನೀರು ಸಂಗ್ರಹ ಇದೆ. 47.542 ಟಿಎಂಸಿ ಸಾಮರ್ಥ್ಯದ ಡ್ಯಾಂನಲ್ಲಿ ಕೇವಲ 27.617 ಟಿಎಂಸಿ ನೀರು ಮಾತ್ರ ಶೇಖರಣೆಯಾಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಮೆಣಸಿನಕಾಯಿ ಖರೀದಿಸಿದ ಜರ್ಮನಿ ಸಚಿವ – ಡಿಜಿಟಲ್‌ ಇಂಡಿಯಾಗೆ ಪ್ರಶಂಸೆ

    ಕೆಆರ್‌ಎಸ್ ಡ್ಯಾಂನ ಇಂದಿನ ನೀರಿನ ಮಟ್ಟ:
    ಗರಿಷ್ಠ ಮಟ್ಟ – 124.80 ಅಡಿಗಳು
    ಇಂದಿನ ಮಟ್ಟ – 105.70 ಅಡಿಗಳು
    ಗರಿಷ್ಠ ಸಾಂದ್ರತೆ – 49.452 ಟಿಎಂಸಿ
    ಇಂದಿನ ಸಾಂದ್ರತೆ – 27.617 ಟಿಎಂಸಿ
    ಒಳ ಹರಿವು – 4983 ಕ್ಯೂಸೆಕ್
    ಹೊರ ಹರಿವು – 15,247 ಕ್ಯೂಸೆಕ್ ಇದನ್ನೂ ಓದಿ: ನಾಗರ ಪಂಚಮಿ – ಹಬ್ಬದ ಸಂಭ್ರಮದ ನಡುವೆ ಹೂ, ಹಣ್ಣು ಬೆಲೆ ಏರಿಕೆ ಬಿಸಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]